Tag: Woman Death

  • ಪ್ರೀತಿಸಿ ಮದುವೆಯಾಗಿದ್ದ ಮಹಿಳೆ ಅನುಮಾನಾಸ್ಪದವಾಗಿ ಸಾವು

    ಪ್ರೀತಿಸಿ ಮದುವೆಯಾಗಿದ್ದ ಮಹಿಳೆ ಅನುಮಾನಾಸ್ಪದವಾಗಿ ಸಾವು

    ಆನೇಕಲ್: ಕಳೆದ ಆರು ತಿಂಗಳ ಹಿಂದೆ ಪರಸ್ಪರ ಪ್ರೀತಿಸಿ ಮದುವೆಯಾಗಿದ್ದ ಮಹಿಳೆಯನ್ನು ಆಕೆಯ ಪತಿ ಹಾಗೂ ಅವನ ಮನೆಯವರು ಕೊಲೆ ಮಾಡಿದ್ದಾರೆ ಎಂದು ಮಹಿಳೆಯ ಕುಟುಂಬಸ್ಥರು ಗಂಭೀರ ಆರೋಪ ಮಾಡಿದ್ದಾರೆ. ಮಹಿಳೆಯ ಶವ ಅನುಮಾನಸ್ಪದ ರೀತಿಯಲ್ಲಿ ನೇಣು ಬಿಗಿದುಕೊಂಡ ಸ್ಥಿತಿಯಲ್ಲಿ ಪತ್ತೆಯಾದ ಘಟನೆ ಆನೇಕಲ್‌ನಲ್ಲಿ ನಡೆದಿದೆ.

    ಆನೇಕಲ್ ತಾಲೂಕಿನ ಜಗಣಿ ಸಮೀಪದ ರಾಜಾಪುರ ನಿವಾಸಿಯಾಗಿರುವ ಯಶವಂತ್ ಹಾಗೂ ಬೆಂಗಳೂರಿನ ಟೀಚರ್ಸ್ ಕಾಲೋನಿಯ ರಾಣಿ ಕಳೆದ ಆರು ತಿಂಗಳ ಹಿಂದೆ ಪ್ರೀತಿಸಿ ಮದುವೆಯಾಗಿದ್ದರು. ಯಶವಂತ್ ಸರ್ಕಾರಿ ಕೆಲಸ ಮಾಡಿಕೊಂಡಿದ್ದ. ಯಶವಂತ್‌ಗೆ ಇದು ಎರಡನೇ ಮದುವೆಯಾಗಿದೆ.

    ಮದುವೆಯಾದ ಬಳಿಕ ರಾಣಿಗೆ ಯಶವಂತ ಹಾಗೂ ಆತನ ಕುಟುಂಬಸ್ಥರು ಚಿತ್ರಹಿಂಸೆ ನೀಡುತ್ತಿದ್ದರು. ಯಶವಂತ ಕೂಡ ಅಂತರ್ಜಾತಿ ವಿವಾಹ ಆಗಿದ್ದರಿಂದ ಹಿಂಸೆ ನೀಡುತ್ತಿದ್ದ. ಆದರೆ ಇಂದು ರಾಣಿ, ರಾಜಪುರದ ತನ್ನ ಮನೆಯಲ್ಲಿ ಅನುಮಾನಸ್ಪದವಾಗಿ ನೇಣು ಬಿಗಿದುಕೊಂಡ ಸ್ಥಿತಿಯಲ್ಲಿ ಶವವಾಗಿ ಪತ್ತೆಯಾಗಿದ್ದಾಳೆ. ಈ ಹಿನ್ನೆಲೆಯಲ್ಲಿ ಮನೆಯವರು ಕೊಲೆ ಮಾಡಿದ್ದಾರೆ ಶಂಕಿಸಲಾಗಿದೆ. ಇದನ್ನೂ ಓದಿ: ಮಣ್ಣಿಗೆ ಬಿದ್ದರೂ ಜೋಡಿಯ ಪ್ರಿ-ವೆಡ್ಡಿಂಗ್ ಫೋಟೋಶೂಟ್ ಮಾತ್ರ ಸೂಪರ್!

    ಮನೆಯ ಮೇಲ್ ಮಹಡಿಯಲ್ಲಿ ನೇಣು ಹಾಕಿಕೊಂಡ ಸ್ಥಿತಿಯಲ್ಲಿ ಶವ ಇದ್ದರೂ ಸಹ ಪತಿ ಹಾಗೂ ಮನೆಯವರು ನೋಡಲು ಕೂಡ ಬಂದಿಲ್ಲ. ಅಂತರ್ಜಾತಿ ವಿವಾಹ ಆಗಿದ್ದರಿಂದ ಇವರೇ ಕೊಲೆ ಮಾಡಿದ್ದಾರೆ ಎಂದು ರಾಣಿಯ ಪೋಷಕರು ಆರೋಪಿಸಿದ್ದಾರೆ. ಇದನ್ನೂ ಓದಿ: ಮೀನುಗಾರರ 2 ಗುಂಪುಗಳ ನಡುವೆ ಕಿತ್ತಾಟ- 7 ಮಂದಿಗೆ ಗಾಯ

    ಈ ಸಂಬಂಧ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಈ ಕುರಿತು ಜಿಗಣಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಘಟನೆ ಕುರಿತು ತನಿಖೆ ಕೈಗೊಂಡ ಪೊಲೀಸರು ಮೃತದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ಕಳಿಸಿಕೊಟ್ಟಿದ್ದಾರೆ. ವರದಿ ಬಂದ ನಂತರ ಮುಂದಿನ ತನಿಖೆಯನ್ನು ಕೈಗೊಳ್ಳಲಾಗುತ್ತದೆ ಎಂದು ತಿಳಿಸಿದ್ದಾರೆ.

  • ಟಯರ್ ಸ್ಪೋಟಗೊಂಡು ಪಲ್ಟಿಯಾದ ಕಾರು – ಅಪಘಾತದಲ್ಲಿ ಮಹಿಳೆ ಸಾವು

    ಟಯರ್ ಸ್ಪೋಟಗೊಂಡು ಪಲ್ಟಿಯಾದ ಕಾರು – ಅಪಘಾತದಲ್ಲಿ ಮಹಿಳೆ ಸಾವು

    ವಿಜಯನಗರ: ವೇಗವಾಗಿ ಚಲಿಸುತ್ತಿದ್ದಾಗ ಟಯರ್ ಸ್ಪೋಟಗೊಂಡಿದ್ದರಿಂದ ಕಾರು ಪಲ್ಟಿಯಾಗಿ ಮಹಿಳೆಯೊಬ್ಬರು ಸಾವಿಗೀಡಾದ ಘಟನೆ ವಿಜಯನಗರ ಜಿಲ್ಲೆಯಲ್ಲಿ ನಡೆದಿದೆ.

    ಕೂಡ್ಲಿಗಿ ತಾಲೂಕಿನ ಬಣಕಲ್ಲು ಗ್ರಾಮದ ರಾಷ್ಟ್ರೀಯ ಹೆದ್ದಾರಿ 50ರಲ್ಲಿ, ಒಂದೇ ಕುಟುಂಬದ ನಾಲ್ವರು ಕಾರಿನಲ್ಲಿ ಹೊಸಪೇಟೆಯಿಂದ ಬೆಂಗಳೂರಿನ ಕಡೆ ತೆರಳುತ್ತಿದ್ದರು. ಈ ವೇಳೆ ಚಲಿಸುತ್ತಿದ್ದ ಕಾರಿನ ಮುಂದಿನ ಟಯರ್ ಸ್ಫೋಟವಾಗಿ ಕಾರು ಪಲ್ಟಿಯಾಗಿದೆ. ಏಕಾಏಕಿ ಕಾರು ಪಲ್ಟಿಯಾದ ಹಿನ್ನೆಲೆಯಲ್ಲಿ ಕಾರು ಸಂಪೂರ್ಣ ನಜ್ಜುಗುಜ್ಜಾಗಿದೆ. ಕಾರಿನಲ್ಲಿ ಇದ್ದ ಮಹಿಳೆ ಸ್ಥಳದಲ್ಲಿ ಸಾವಿಗೀಡಾಗಿದ್ದಾರೆ.

    ಕಾರಿನಲ್ಲಿದ್ದ ಮೂವರ ಸ್ಥಿತಿ ಗಂಭೀರವಾಗಿದ್ದು, ಗಾಯಗೊಂಡಿದ್ದಾರೆ. ಗಾಯಾಳುಗಳನ್ನು ಕೂಡ್ಲಿಗಿ ತಾಲೂಕು ಆಸ್ಪತ್ರೆಗೆ ರವಾನೆ ಮಾಡಲಾಗಿದೆ. ಮೃತ ಮಹಿಳೆಯನ್ನು ಪದ್ಮಾವತಿ(43) ಎಂದು ಗುರುತಿಸಲಾಗಿದೆ. ಅಪಘಾತದ ಸ್ಥಳಕ್ಕೆ ಪೊಲೀಸ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಇದನ್ನೂ ಓದಿ: ಜವಳಿ ಇಲಾಖೆಯಲ್ಲಿ 12 ಲಕ್ಷ ಉದ್ಯೋಗ ಸೃಷ್ಟಿ: ಶಂಕರ್ ಪಾಟೀಲ್ ಮುನೇನಕೊಪ್ಪ

    ಈ ಸಂಬಂಧ ಕೂಡ್ಲಿಗಿ ತಾಲೂಕಿನ ಖಾನಾಹೊಸಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಅಪಘಾತಕ್ಕೊಳಗಾದ ಈ ಶಿಫ್ಟ್ ಕಾರು ಬೆಂಗಳೂರು ಮೂಲದ್ದು ಎಂದು ತಿಳಿದುಬಂದಿದೆ.

  • ಜೀವ ಹೋದ ಮೇಲೆ ಬಂದು ಏನ್ ಮಾಡ್ತೀರಿ?: ಬೆಸ್ಕಾಂ ಅಧಿಕಾರಿಗಳ ವಿರುದ್ಧ ರೈತರ ಆಕ್ರೋಶ

    ಜೀವ ಹೋದ ಮೇಲೆ ಬಂದು ಏನ್ ಮಾಡ್ತೀರಿ?: ಬೆಸ್ಕಾಂ ಅಧಿಕಾರಿಗಳ ವಿರುದ್ಧ ರೈತರ ಆಕ್ರೋಶ

    ಚಿಕ್ಕಬಳ್ಳಾಪುರ: ಬೆಸ್ಕಾಂ ಅಧಿಕಾರಿಗಳ ನಿರ್ಲಕ್ಷ್ಯಕ್ಕೆ ರೈತ ಮಹಿಳೆ ಸಾವನ್ನಪ್ಪಿರುವ ಘಟನೆ ಚಿಕ್ಕಬಳ್ಳಾಪುರ ಜಿಲ್ಲೆಯ ಶಿಡ್ಲಘಟ್ಟ ಪಟ್ಟಣದ ಮಾರುತಿ ನಗರದಲ್ಲಿ ನಡೆದಿದೆ.

    ಮಾರುತಿ ನಗರದ ನಿವಾಸಿ ದೇವಿರಮ್ಮ (48) ಮೃತ ರೈತ ಮಹಿಳೆ. ಕೃಷ್ಣಪ್ಪ ಎಂಬುವವರ ಜಮೀನು ಪಕ್ಕದಲ್ಲಿ ಹುಲ್ಲು ಕಟಾವು ಮಾಡುವಾಗ ಕಂಬದಿಂದ ತುಂಡಾಗಿ ಬಿದ್ದಿದ್ದ ವಿದ್ಯುತ್ ತಂತಿ ಸ್ಪರ್ಶಿಸಿ ರೈತ ಮಹಿಳೆ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಇದನ್ನೂ ಓದಿ: ವಿಚ್ಛೇದನ ಜೀವನಾಂಶ ಹಣ ಹೊಂದಿಸಲಾಗಿಲ್ಲ ಅಂತ ಪತಿ ಆತ್ಮಹತ್ಯೆ

    ಇನ್ನೂ ವಿದ್ಯುತ್ ತಂತಿ ತುಂಡಾಗಿ ಬಿದ್ದಿರುವ ಮಾಹಿತಿಯನ್ನ ಜಮೀನು ಮಾಲೀಕ ನಿನ್ನೆ ಸಂಜೆಯೇ ಲೈನ್ ಮ್ಯಾನ್‍ಗೆ ತಿಳಿಸಿದ್ದರು ಎನ್ನಲಾಗಿದೆ. ಆದರೂ ಕೂಡ ಬೆಸ್ಕಾಂ ಅಧಿಕಾರಿಗಳು ವಿದ್ಯುತ್ ಸಂಪರ್ಕ ಕಡಿತಗೊಳಿಸುವುದಾಗಲೀ ಅಥವಾ ವಿದ್ಯುತ್ ತಂತಿ ದುರಸ್ಥಿ ಮಾಡುವಾದಗಲೀ ಮಾಡಿಲ್ಲ.

    ರೈತ ಮಹಿಳೆಯ ಜೀವ ಬಲಿಯಾಗಲು ಬೆಸ್ಕಾಂ ಅಧಿಕಾರಿಗಳೇ ಕಾರಣ ಅಂತ ಸ್ಥಳಕ್ಕೆ ಬಂದ ಬೆಸ್ಕಾಂ ಅಧಿಕಾರಿಗಳನ್ನ ಮೃತಳ ಕುಟುಂಬಸ್ಥರು ಹಾಗೂ ರೈತ ಮುಖಂಡರು ತೀವ್ರವಾಗಿ ತರಾಟೆಗೆ ತೆಗೆದುಕೊಂಡಿದ್ದಾರೆ. ತಂತಿ ತುಂಡಾಗಿ ಬಿದ್ದಿರೋ ಮಾಹಿತಿ ನೀಡಿದರು ಯಾಕೆ ಕ್ರಮ ಕೈಗೊಂಡಿಲ್ಲ, ನಿಮಗೆ ಜವಾಬ್ದಾರಿ ಇಲ್ಲವೇ? ಈಗ ಜೀವ ಹೋದ ಮೇಲೆ ಬಂದು ಏನ್ ಮಾಡ್ತೀರಿ ಅಂತ ಖಾರವಾಗಿ ಬೆಸ್ಕಾಂ ಎಇಇ ಹಾಗೂ ಅಧಿಕಾರಿಗಳ ವಿರುದ್ಧ ರೈತರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಇದನ್ನೂ ಓದಿ: ಪಟಾಕಿ ಅಂಗಡಿಯಲ್ಲಿ ಸ್ಫೋಟದಿಂದ ಇಬ್ಬರು ಸಾವು- ತಲಾ 2 ಲಕ್ಷ ಪರಿಹಾರ ಘೋಷಿಸಿದ ಜಮೀರ್

     

  • ರಾಯಚೂರಿನಲ್ಲಿ ಗುಡುಗು ಸಹಿತ ಭಾರೀ ಮಳೆ- ಸಿಡಿಲಿಗೆ ಓರ್ವ ಮಹಿಳೆ ಸಾವು

    ರಾಯಚೂರಿನಲ್ಲಿ ಗುಡುಗು ಸಹಿತ ಭಾರೀ ಮಳೆ- ಸಿಡಿಲಿಗೆ ಓರ್ವ ಮಹಿಳೆ ಸಾವು

    ರಾಯಚೂರು: ಜಿಲ್ಲೆಯಾದ್ಯಂತ ಗುಡುಗು, ಮಿಂಚು ಸಹಿತ ಭಾರಿ ಮಳೆಯಾಗುತ್ತಿದ್ದು, ಕೃಷಿ ಕೆಲಸಕ್ಕೆ ಹೋಗಿದ್ದ ಮಹಿಳೆ ಸಿಡಿಲು ಬಡಿದು ಸಾವನ್ನಪ್ಪಿರುವ ಘಟನೆ ರಾಯಚೂರು ತಾಲೂಕಿನ ಪುಚ್ಚಲದಿನ್ನಿಯಲ್ಲಿ ನಡೆದಿದೆ.

    30 ವರ್ಷದ ಚಂದ್ರಮ್ಮ ಸಿಡಿಲ ಹೊಡೆತಕ್ಕೆ ಮೃತಪಟ್ಟ ದುರ್ದೈವಿ. ಕೃಷಿ ಕೆಲಸಕ್ಕಾಗಿ ಹೊಲಕ್ಕೆ ತೆರಳಿದ್ದ ವೇಳೆ ಮಳೆ ಬರಲು ಶುರುವಾಗಿದೆ. ಮಳೆಯಿಂದಾಗಿ ಚಂದ್ರಮ್ಮ ಮರದ ಕೆಳಗೆ ನಿಂತಿದ್ದಾರೆ. ಈ ವೇಳೆ ಮರಕ್ಕೆ ಸಿಡಿಲು ಬಡಿದಿದ್ದು, ಮರದ ಕೆಳಗೆ ಇದ್ದ ಚಂದ್ರಮ್ಮಗೂ ಸಿಡಿಲು ಹೊಡೆದ ಪರಿಣಾಮ ಸ್ಥಳದಲ್ಲೇ ಮೃತಪಟ್ಟಿದ್ದಾರೆ.

    ಇನ್ನು ರಾಯಚೂರಿನಲ್ಲಿ ಭಾರೀ ಮಳೆಯಾಗುತ್ತಿರುವುದರಿಂದ ಕೆಲವೆಡೆ ಕೃಷಿ ಚಟುವಟಿಕೆಗಳು ಗರಿಗೆದರಿದ್ದು, ಇನ್ನೂ ಕೆಲವೆಡೆ ಹಳ್ಳ ಕೊಳ್ಳಗಳು ತುಂಬಿವೆ. ಇದರಿಂದ ಹಳ್ಳದಲ್ಲಿ ಎಮ್ಮೆ ಕೊಚ್ಚಿ ಹೋಗಿರುವ ಘಟನೆಗಳು ನಡೆದಿದ್ದು, ಮಳೆಯ ಅಬ್ಬರದಿಂದ ಹಲವು ಜಾನುವಾರಗಳು ಸಾವನ್ನಪ್ಪಿವೆ.

    ನಗರದಲ್ಲೂ ಎಡಬಿಡದೆ ಸುರಿಯುತ್ತಿರುವ ಮಳೆಯಿಂದಾಗಿ ತಗ್ಗು ಪ್ರದೇಶಗಳಲ್ಲಿನ ಮನೆಗಳಿಗೆ ನೀರು ನುಗ್ಗಿ ಅವಾಂತರ ಸೃಷ್ಟಿ ಮಾಡಿದೆ. ಅಲ್ಲದೇ ರಸ್ತೆಗಳು ನೀರಿನಿಂದ ಆವೃತಗೊಂಡಿದ್ದು ಕೆಲ ಸಮಯ ಸಂಚಾರ ವ್ಯವಸ್ಥೆ ಸ್ಥಗಿತಗೊಂಡಿತ್ತು. ಜೊತೆಗೆ ವಿದ್ಯುತ್ ವ್ಯವಸ್ಥೆಯೂ ಕೂಡ ಸ್ಥಗಿತಗೊಂಡಿತ್ತು.