Tag: woman Police constable

  • ದಿನಸಿ ಸಾಮಗ್ರಿ ತರುವುದಕ್ಕೆ ಜಗಳ – ಅತ್ತೆ, ಪತಿಯನ್ನೇ ಹಿಗ್ಗಾಮುಗ್ಗ ಥಳಿಸಿದ ಮಹಿಳಾ ಪೇದೆ

    ದಿನಸಿ ಸಾಮಗ್ರಿ ತರುವುದಕ್ಕೆ ಜಗಳ – ಅತ್ತೆ, ಪತಿಯನ್ನೇ ಹಿಗ್ಗಾಮುಗ್ಗ ಥಳಿಸಿದ ಮಹಿಳಾ ಪೇದೆ

    ಹುಬ್ಬಳ್ಳಿ: ದೇಶಾದ್ಯಂತ ಕೊರೊನಾ ವೈರಸ್ ಭೀತಿಯಿಂದ ಲಾಕ್‍ಡೌನ್ ಘೋಷಣೆಯಾಗಿದ್ದು, ಪೊಲೀಸ್ ಸಿಬ್ಬಂದಿ ಸಾರ್ವಜನಿಕರ ಸೇವೆಗಾಗಿ ಹಗಲಿರುಳು ಶ್ರಮಿಸುತ್ತಿದ್ದಾರೆ. ಆದರೆ ಹುಬ್ಬಳ್ಳಿಯಲ್ಲಿ ಮಹಿಳಾ ಪೊಲೀಸ್ ಪೇದೆಯೊಬ್ಬರು ತನ್ನ ಪತಿ ಮನೆಯವರಿಗೆ ಮಾನಸಿಕ ಹಾಗೂ ದೈಹಿಕ ಕಿರುಕುಳ ನೀಡುತ್ತಿರುವ ಘಟನೆಯೊಂದು ಬೆಳಕಿಗೆ ಬಂದಿದೆ.

    ಹುಬ್ಬಳ್ಳಿಯ ಅಶೋಕನಗರ ಪೊಲೀಸ್ ಠಾಣೆಯಲ್ಲಿ ಕಾರ್ಯನಿರ್ವಹಿಸುತ್ತಿರುವ ಮಹಿಳಾ ಪೊಲೀಸ್ ಸಿಬ್ಬಂದಿ ಕಸ್ತೂರಿ ಛಲವಾದಿ ಕ್ಷುಲ್ಲಕ ಕಾರಣಕ್ಕೆ ಪತಿಗೆ ಮಾನಸಿಕ ಕಿರುಕುಳ ನೀಡಿ ಹಲ್ಲೆ ಮಾಡಿದ್ದಾರೆ. ಅಲ್ಲದೇ ಅತ್ತೆಗೂ ಕೂಡ ಮಾನಸಿಕ ಕಿರುಕುಳ ನೀಡುತ್ತಿದ್ದಾರೆ ಎಂದು ಪತಿ ಬಸವರಾಜ್ ಗೋಕಾವಿ ಮಾಧ್ಯಮದ ಮುಂದೆ ತಮ್ಮ ಅಳಲನ್ನು ತೋಡಿಕೊಂಡಿದ್ದಾರೆ.

    ಮನೆಗೆ ಕಿರಾಣಿ ಸಾಮಗ್ರಿಗಳನ್ನು ತರುವ ಕ್ಷುಲ್ಲಕ ಕಾರಣಕ್ಕೆ ಜಗಳವಾಗಿ ಜಗಳ ತಾರಕಕ್ಕೇರಿದ್ದು, ಪೊಲೀಸ್ ಸಿಬ್ಬಂದಿಯೇ ಪತಿ ಹಾಗೂ ಅತ್ತೆ ಮೇಲೆ ಹಲ್ಲೆ ಮಾಡಿರುವುದಾಗಿ ಕುಟುಂಬಸ್ಥರು ತಿಳಿಸಿದ್ದಾರೆ. ಅಲ್ಲದೇ ಪತಿ, ಪತ್ನಿ ನಡುವೆ ಮಗುವನ್ನು ಪಾಲನೆ ಪೋಷಣೆ ಮಾಡುವ ಹಾಗೂ ಇನ್ನಿತರ ಕೌಟುಂಬಿಕ ವಿಚಾರಕ್ಕೆ ಜಗಳವಾಗುತ್ತಿತ್ತು. ಪತಿ ಮೇಲೆ ಹಲ್ಲೆ ಮಾಡಿ, ಪತಿ ಹಾಗೂ ಅತ್ತೆಗೆ ಅಶ್ಲೀಲ ಪದಗಳನ್ನು ಬಳಸುವ ಮೂಲಕ ಮಹಿಳಾ ಪೇದೆ ತೊಂದರೆ ನೀಡುತ್ತಿದ್ದಾರೆ ಎಂದು ಕುಟುಂಬಸ್ಥರು ಆರೋಪಿಸಿದ್ದಾರೆ.

    ಹಾಗೆಯೇ ಪೊಲೀಸ್ ಅಧಿಕಾರವನ್ನು ದುರ್ಬಳಕೆ ಮಾಡಿಕೊಂಡು ಜೀವ ಬೆದರಿಕೆ ಹಾಕುತ್ತಿದ್ದಾರೆ ಎಂದು ಬಸವರಾಜ್ ಮಾಧ್ಯಮದ ಮುಂದೆ ಬಿಚ್ಚಿಟ್ಟಿದ್ದಾರೆ. ಪತ್ನಿ ಕಿರುಕುಳ ತಾಳಲಾರದೆ ಎಪಿಎಂಸಿ ನವನಗರ ಪೊಲೀಸ್ ಠಾಣೆಗೆ ದೂರು ನೀಡಲು ಹೋದರು ಕೂಡ ಪೊಲೀಸ್ ಅಧಿಕಾರಿಗಳು ದೂರನ್ನು ಸ್ವೀಕರಿಸಿಲ್ಲ ಎಂದು ಬಸವರಾಜ್ ಆರೋಪಿಸಿದ್ದಾರೆ.

    ಕೊರೊನಾ ವೈರಸ್ ಭೀತಿಯಲ್ಲಿಯೂ ಕೂಡ ಪೊಲೀಸ್ ಸಿಬ್ಬಂದಿ ಕಾರ್ಯವನ್ನು ಸಾರ್ವಜನಿಕರು ಪ್ರಶಂಸಿಸುತ್ತಿದ್ದಾರೆ. ಆದರೇ ಈ ಪೊಲೀಸ್ ಸಿಬ್ಬಂದಿ ವರ್ತನೆಯಿಂದ ಕುಟುಂಬಸ್ಥರು ಮಾಧ್ಯಮದ ಮುಂದೆ ಬಂದು ಕಣ್ಣೀರು ಹಾಕುವಂತಾಗಿದೆ.

  • ಮುಸ್ಲಿಂ ಯುವಕನ ಜೊತೆಯಲ್ಲಿದ್ದ ಹಿಂದೂ ಯುವತಿಗೆ ಥಳಿಸಿದ ಯುಪಿ ಮಹಿಳಾ ಪೊಲೀಸ್!

    ಮುಸ್ಲಿಂ ಯುವಕನ ಜೊತೆಯಲ್ಲಿದ್ದ ಹಿಂದೂ ಯುವತಿಗೆ ಥಳಿಸಿದ ಯುಪಿ ಮಹಿಳಾ ಪೊಲೀಸ್!

    ಲಕ್ನೋ: ಹಿಂದೂ ಯುವತಿಯೊಬ್ಬಳು ಮುಸ್ಲಿಂ ಯುವಕನೊಂದಿಗೆ ಇದ್ದಳು ಎಂಬ ಕಾರಣಕ್ಕೆ ಉತ್ತರ ಪ್ರದೇಶದ ಮಹಿಳಾ ಪೊಲೀಸ್ ಆಕೆಗೆ ಹಿಗ್ಗಾಮುಗ್ಗಾ ಥಳಿಸಿದ ಘಟನೆ ನಡೆದಿದೆ.

    ಈ ಘಟನೆ ಉತ್ತರಪ್ರದೇಶದ ಮೀರತ್ ನಲ್ಲಿ ನಡೆದಿದೆ. ಮಹಿಳಾ ಪೊಲೀಸ್ ಯುವತಿಗೆ ಥಳಿಸುತ್ತಿರೋ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿತ್ತು. ಈ ಬೆನ್ನಲ್ಲೇ ಇದೀಗ ಮಹಿಳಾ ಪೊಲೀಸನ್ನ ಕೆಲಸದಿಂದ ವಜಾ ಮಾಡಲಾಗಿದೆ.

    ವಿಡಿಯೋದಲ್ಲೇನಿದೆ?:
    ಯುವತಿಯನ್ನು ಪೊಲೀಸ್ ವಾಹನದಲ್ಲಿ ಕರೆದುಕೊಂಡು ಹೋಗಲಾಗುತ್ತಿದೆ. ಯುವತಿ ಮಹಿಳಾ ಪೊಲೀಸ್ ಪಕ್ಕದಲ್ಲೇ ಕುಳಿತಿದ್ದಾಳೆ. ಈ ವೇಳೆ ಪೊಲೀಸ್ ಕಾನ್ಸ್ ಸ್ಟೇಬಲ್, ಯುವತಿಗೆ ಅಸಭ್ಯ ಶಬ್ಧಗಳಿಂದ ಬೈದು, ದೈಹಿಕ ಹಿಂಸೆ ನೀಡಿದ್ದಾಳೆ. ಅಲ್ಲದೇ ನೀನ್ಯಾಕೆ ಮುಸ್ಲಿಂ ಯುವಕನನ್ನು ಫ್ರೆಂಡ್ ಮಾಡಿಕೊಂಡಿದ್ದೀಯಾ ಅಂತ ಪ್ರಶ್ನಿಸಿದ್ದಾಳೆ. ಈ ಎಲ್ಲಾ ಘಟನೆಗಳನ್ನು ವಾಹನದಲ್ಲಿ ಅವರಿಬ್ಬರ ಎದುರು ಕುಳಿತಿದ್ದ ಪೊಲೀಸ್ ವಿಡಿಯೋ ಮಾಡಿದ್ದು, ಆ ಬಳಿಕ ದೃಶ್ಯ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿತ್ತು.

    ಅಲ್ಲದೇ ವಿಡಿಯೋ ಕುರಿತು ಸಾಮಾಜಿಕ ಜಾಲತಾಣ ಟ್ವಿಟ್ಟರ್ ನಲ್ಲಿ ಭಾರೀ ಆಕ್ರೋಶವ್ಯಕ್ತವಾಗಿತ್ತು. ಯುವತಿಯ ಮೇಲೆ ಕೈ ಮಾಡಿದ್ದ ಮಹಿಳಾ ಪೊಲೀಸ್ ಕಾನ್ಸ್ ಸ್ಟೇಬಲ್ ವಿರುದ್ಧ ಟ್ವಿಟ್ಟಿಗರು ಕಿಡಿಕಾರಿದ್ದರು.

    `ಈವರೆಗೆ ಕೋಮುವಾದದ ಬೀಜ ಬಿತ್ತುತ್ತವೆ ಅಂತ ರಾಜಕೀಯ ಪಕ್ಷಗಳ ವಿರುದ್ಧ ಮಾತನಾಡುತ್ತಿದ್ದೆವು. ಆದ್ರೆ ಇದೀಗ ಪಕ್ಷಗಳಿಗಿಂತ ಪೊಲೀಸರೇ ಕೋಮವಾದದ ಬೀಜ ಬಿತ್ತುತ್ತಿದ್ದಾರೆ. ಹೀಗಾಗಿ ಯುವತಿ ಮೇಲೆ ಕೈ ಮಾಡಿದ್ದ ಮಹಿಳಾ ಪೊಲೀಸ್ ಕಾನ್ಸ್ ಸ್ಟೇಬಲ್ ವಿರುದ್ಧ ಕ್ರಮಕೈಗೊಳ್ಳಬೇಕು. ಹಾಗೆಯೇ ಈ ಪ್ರಕರಣಕ್ಕೆ ಮುಖ್ಯಮಂತ್ರಿ ಯೋಗಿ ಆದಿನಾಥ್ ಅವರು ಮಧ್ಯಪ್ರವೇಶಿಸಬೇಕು’ ಅಂತ ಟ್ವಿಟ್ಟಗನೊಬ್ಬ ಬೇಡಿಕೆ ಇಟ್ಟಿದ್ದಾನೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv

  • ಹೆಲ್ಮೆಟ್ ಧರಿಸಿಲ್ಲ ಯಾಕೆ ಎಂದು ಪ್ರಶ್ನಿಸಿದ್ದಕ್ಕೆ ಮಹಿಳಾ ಪೇದೆಯನ್ನೇ ಥಳಿಸಿದ ಬೈಕ್ ಸವಾರರು- ವಿಡಿಯೋ

    ಹೆಲ್ಮೆಟ್ ಧರಿಸಿಲ್ಲ ಯಾಕೆ ಎಂದು ಪ್ರಶ್ನಿಸಿದ್ದಕ್ಕೆ ಮಹಿಳಾ ಪೇದೆಯನ್ನೇ ಥಳಿಸಿದ ಬೈಕ್ ಸವಾರರು- ವಿಡಿಯೋ

    ಜೈಪುರ: ಮಹಿಳಾ ಸಂಚಾರಿ ಪೊಲೀಸ್ ಪೇದೆಯನ್ನು ಇಬ್ಬರು ಬೈಕ್ ಸವಾರರು ರಾಜಸ್ಥಾನದ ನಡು ರಸ್ತೆಯಲ್ಲೇ ಥಳಿಸಿದ್ದಾರೆ.

    ಹೆಲ್ಮೆಟ್ ಧರಿಸದ ಕಾರಣ ಸವಾರರನ್ನು ಮಹಿಳಾ ಪೇದೆ ತಡೆದು ನಿಲ್ಲಿಸಿದ್ದಾರೆ. ಇದರಿಂದ ಕೆರಳಿದ ಬೈಕ್ ಸವಾರರು ನಡು ರಸ್ತೆಯಲ್ಲೇ ಸಾರ್ವಜನಿಕರ ಎದುರೇ ಪೇದೆಯನ್ನು ಥಳಿಸಿದ್ದಾರೆ.

    ರಾಜಸ್ಥಾನದ ಜುಂಜುನು ಜಿಲ್ಲೆಯಲ್ಲಿ ನಡೆದಿರುವ ಕೃತ್ಯ ಸಿಸಿಟಿವಿಯಲ್ಲಿ ರೆಕಾರ್ಡ್ ಆಗಿದೆ. ಯುವಕರು ಮಹಿಳಾ ಪೇದೆಗೆ ಥಳಿಸುತ್ತಿರುವುದನ್ನು ಅಲ್ಲಿದ್ದ ಮಂದಿ ನೋಡುತ್ತಿದ್ದರೆ ವಿನಾಃ ಯಾರೂ ಕೂಡ ಪೇದೆಯ ರಕ್ಷಣೆಗೆ ಬರಲಿಲ್ಲ.

    ಜುಂಜುನು ನಗರದ ಜನನಿಬಿಡ ರಸ್ತೆಯಲ್ಲಿ ಈ ಘಟನೆ ನಡೆದಿದ್ದು, ಪೊಲೀಸರು ಮಹಿಳಾ ಪೇದೆಯ ಹೆಸರನ್ನು ಬಹಿರಂಗ ಪಡಿಸಿಲ್ಲ. ದೂರು ದಾಖಲಾಗಿದ್ದು ಆರೋಪಿಗಳ ಪತ್ತೆಗೆ ಶೋಧ ಕಾರ್ಯ ಆರಂಭಗೊಂಡಿದ್ದು, ಥಳಿಸುತ್ತಿರುವ ದೃಶ್ಯ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.

    ಗಸ್ತಿನಲ್ಲಿರುವ ಮಹಿಳಾ ತಂಡಗಳ ಗಳ ಜೊತೆ ಬೈಕ್, ಜಿಪ್ಸಿ ವ್ಯಾನ್ ಇರುತ್ತದೆ. ತಂಡವನ್ನು ನಡೆಸಲಿಕ್ಕೆ ಮಹಿಳಾ ಪೊಲೀಸ್ ಅಧಿಕಾರಿಯನ್ನು ನಿಯೋಜಿಸಲಾಗಿರುತ್ತದೆ. ನಗರದ ಎಲ್ಲಾ ಭಾಗಗಳಲ್ಲೂ ಎಲ್ಲಾ ಸಮಯದಲ್ಲೂ ಸಂಚರಿಸುವ ಮಹಿಳೆಯರ ಸುರಕ್ಷತೆಗೆ ಹೆಚ್ಚು ಮಹಿಳಾ ಅಧಿಕಾರಿಗಳನ್ನು ಗಸ್ತಿನಲ್ಲಿ ನಿಯೋಜಿಸಬೇಕು. ಇದರಿಂದಾಗಿ ಮಹಿಳೆಯರಲ್ಲಿ ಭರವಸೆ ಮೂಡುತ್ತದೆ ಎಂದು ಪೊಲೀಸ್ ಉಪ ಆಯುಕ್ತರು ತಿಳಿಸಿದ್ದಾರೆ.