Tag: women empowerment

  • Women’s Day | ಈ ಬಾರಿಯ ಥೀಮ್‌ – ಆಕ್ಸಲರೇಟ್‌ ಆಕ್ಷನ್‌ ಎಂದರೇನು?

    Women’s Day | ಈ ಬಾರಿಯ ಥೀಮ್‌ – ಆಕ್ಸಲರೇಟ್‌ ಆಕ್ಷನ್‌ ಎಂದರೇನು?

    ಹಿಂದಿನಕಾಲದಲ್ಲಿ ಹೆಣ್ಣು ಎಂದರೆ ಆಕೆ ಮನೆಗೆಲಸಕ್ಕೆ ಮಾತ್ರ ಸೀಮಿತ ಎಂದು ಹೇಳುತ್ತಿದ್ದವರಿಗೆ ಇಂದು ಮಹಿಳೆಯರು ಯಾರಿಗೂ, ಯಾವುದಕ್ಕೂ ಕಮ್ಮಿ ಇಲ್ಲ ಎಂದು ತೋರಿಸಿಕೊಡುತ್ತಿದ್ದಾರೆ. ಹೆಣ್ಣು ಅಬಲೆಯಲ್ಲ ಆಕೆ ಸಬಲೆ ಎಂಬ ಮಾತಿಗೆ ಉದಾಹರಣೆಯಂತೆ ಜಗತ್ತಿನ ಪ್ರತಿಯೊಂದು ಕ್ಷೇತ್ರದಲ್ಲೂ ತಮ್ಮನ್ನು ತೊಡಗಿಸಿಕೊಂಡು ಮುಂದುವರೆಯುತ್ತಿದ್ದಾರೆ. ರಾಜಕೀಯವಾಗಲಿ, ಕ್ರೀಡೆಯಾಗಲಿ, ಶಿಕ್ಷಣವಾಗಲಿ ಪ್ರತಿಯೊಂದರಲ್ಲೂ ಮಹಿಳೆಯರು ತಮ್ಮ ಚಾಪನ್ನು ಮೂಡಿಸಿದ್ದಾರೆ.

    ಪತ್ರಿವರ್ಷ ಮಾರ್ಚ್‌ 8ನ್ನು ಮಹಿಳಾ ದಿನವಾಗಿ ಆಚರಿಸಲಾಗುತ್ತದೆ. ಅಂದು ಹೆಣ್ಣುಮಕ್ಕಳ ಸಾಧನೆಯನ್ನು ನೆನೆಯುವ ದಿನ. ಹಲವಾರು ಸಮಸ್ಯೆಗಳನ್ನು ಮೆಟ್ಟಿ ನಿಂತು ಮಹಿಳೆಯರು ಬಹುತೇಕ ರಂಗದಲ್ಲಿ ತಮ್ಮನ್ನು ತಾನು ಗುರುತಿಸಿಕೊಂಡಿದ್ದಾರೆ. ದೌರ್ಜನ್ಯ, ದಬ್ಬಾಳಿಕೆ, ಹಿಂಸೆಯಂತಹ ಸಮಸ್ಯೆಗಳನ್ನು ಧೈರ್ಯವಾಗಿ ಎದುರಿಸಿ ಹಲವಾರು ಕ್ಷೇತ್ರಗಳಲ್ಲಿ ಪುರುಷರಷ್ಟೇ ಸರಿಸಮಾನವಾಗಿ ಮುಂದುವರಿದಿದ್ದಾರೆ. ಕ್ರೀಡೆಯಲ್ಲಿ, ಸೈನ್ಯದಲ್ಲಿ, ಬಾಹ್ಯಾಕಾಶದಲ್ಲಿ, ಯುದ್ಧ ವಿಮಾನಗಳಲ್ಲಿ ಮಹಿಳೆಯರು ಮಹತ್ತರ ಸಾಧನೆ ಮಾಡಿ, ಯಾವ ಪುರುಷರಿಗೂ ತಾವು ಕಡಿಮೆ ಇಲ್ಲ ಎಂದು ತೋರಿಸಿಕೊಟ್ಟಿದ್ದಾರೆ.

    ಆಕ್ಸಲರೇಟ್‌ ಆಕ್ಷನ್‌ (Accelerate Action)
    ಈ ಬಾರಿಯ ಮಹಿಳೆಯರ ದಿನವನ್ನು ʻಆಕ್ಸಲರೇಟ್‌ ಆಕ್ಷನ್‌ʼಥೀಮ್‌ನಲ್ಲಿ ಆಚರಿಸಲಾಗುತ್ತದೆ. ಮನ್ನುಗ್ಗು, ಧೈರ್ಯದಿಂದ ಮಾತನಾಡು, ಸಮಾನತೆಗಾಗಿ ಹೋರಾಡು ಎಂದು ಮಹಿಳೆಯರಿಗೆ ಅವರ ನಿಲುವುಗಳನ್ನು ತೆಗೆದುಕೊಳ್ಳಲು ಹುರಿದುಂಬಿಸಲಾಗುತ್ತದೆ.

    ಮಹಿಳಾ ದಿನಾಚರಣೆಯನ್ನು ಕಳೆದ ಒಂದು ಶತಕದಿಂದಲೂ ಆಚರಿಸಲಾಗುತ್ತಿದೆ. 1911ರಲ್ಲಿ ಡೆನ್ಮಾರ್ಕ್‌, ಆಸ್ಷ್ರೇಲಿಯಾ, ಜಮರ್ನಿ, ಸ್ವಿಜರ್‌ಲ್ಯಾಂಡ್ ದೇಶಗಳಲ್ಲಿ ಜನರು ಒಂದು ಕಡೆ ಸೇರುವ ಮೂಲಕ ಮಹಿಳಾ ದಿನಾಚರಣೆಯನ್ನು ಆಚರಿಸಲು ಆರಂಭಿಸಿದರು. ನಂತರ ಅಮೆರಿಕ, ಬ್ರಿಟನ್‌ಗಳು ಸೇರಿದಂತೆ ಹಲವು ದೇಶಗಳಲ್ಲಿನ ಮಹಿಳೆಯರನ್ನು ಗೌರವಿಸುವ ಮೂಲಕ ಕಾರ್ಯಕ್ರಮಗಳನ್ನು ಆಚರಿಸಲಾಗುತ್ತಿತ್ತು.

    ಅಂತರಾಷ್ಟ್ರೀಯ ಮಹಿಳೆಯರ ದಿನವನ್ನು ಪ್ರಥಮ ಬಾರಿಗೆ ಕಾರ್ಮಿಕ ಚಳುವಳಿಯ ಮೂಲಕ ಉತ್ತರ ಅಮೆರಿಕ ಮತ್ತು ಯೂರೋಪ್ ದೇಶಗಳಲ್ಲಿ ಪ್ರಾರಂಭಿಸಲಾಯಿತು. ಮಹಿಳಾ ದಿನಾಚರಣೆ ಮೂಲಕ ಲಿಂಗ ಸಮಾನತೆ ರೂಪಿಸುವಲ್ಲಿ ಪ್ರತಿಯೊಬ್ಬರ ಪಾತ್ರವಿದೆ ಎಂಬ ಅಂಶವನ್ನು ಸಾರಲು ಈ ದಿನವನ್ನು ಆಚರಿಸಲಾಯಿತು. ಅಲ್ಲದೇ ದೇಶಕ್ಕೆ, ಪ್ರಪಂಚಕ್ಕೆ ಮಹಿಳಾ ಸಾಧಕರ ಕೊಡುಗೆಗಳನ್ನು ನೆನೆದು ಸಾರುವ ದಿನವಾಗಿದೆ. 18 ಮತ್ತು 19 ನೇ ಶತಮಾನದಲ್ಲಿ ಹಲವು ಮಹಿಳೆಯರು ಲಿಂಗ ಸಮಾನತೆಗಾಗಿ ಹೋರಾಟ ನಡೆಸಿದ್ದಾರೆ. ಮತದಾನ, ಸಮಾನ ಕೆಲಸ, ಸಮಾನ ವೇತನಕ್ಕಾಗಿ ಹೋರಾಟವನ್ನು ನಡೆಸಿದ್ದರು.

    ಭಾರತದಲ್ಲೇ ಕಲ್ಪನಾ ಚಾವ್ಲಾ, ಕಿರಣ್‌ ಬೇಡಿ, ಮೇರಿ ಕೋಮ್‌, ಸಾಲುಮರದ ತಿಮ್ಮಕ್ಕ, ಇಂದಿರಾಗಾಂಧಿ, ಸೈನಾ ನೆಹ್ವಾಲ್‌, ಸುಧಾಮೂರ್ತಿ ಹಲವಾರು ಮಹಿಳೆಯರು ಬೇರೆ ಬೇರೆ ಕ್ಷೇತ್ರದಲ್ಲಿ ಸಾಧನೆಯನ್ನು ಮಾಡಿದ್ದಾರೆ ಹಾಗೂ ಮಾಡುತ್ತಿದ್ದಾರೆ. ಈ ಸಾಧಕರ ಸಾಲಿಗೆ ಇನ್ನಷ್ಟು ಮಹಿಳೆಯರು ಸೇರಬೇಕು. ಹೆಣ್ಣು ಯಾವುದಕ್ಕೂ ಕಡಿಮೆಯಿಲ್ಲ ಎಂದು ಇಡೀ ಜಗತ್ತಿಗೆ ಒತ್ತಿ ಒತ್ತಿ ಹೇಳಬೇಕು.

    ಹೆಣ್ಣುಮಕ್ಕಳು ಯಾರಿಗೂ ಕಮ್ಮಿ ಇಲ್ಲ ಎಂದೆಲ್ಲಾ ಹೇಳಿದರೂ ಸಹ ಆಕೆಯ ಮೇಲೆ ದೌರ್ಜನ್ಯ, ಅತ್ಯಾಚಾರ, ಹೀಯಾಳಿಸುವುದು, ಕಿರುಕುಳ ಪ್ರಕರಣಗಳಂತೂ ದೇಶದಲ್ಲಿ ಕೇಳಿ ಬರುತ್ತಲೇ ಇದೆ. ಹೆಣ್ಣನ್ನೂ ದೇವತೆಯೆಂದು ಪೂಜಿಸುವ ನಮ್ಮ ದೇಶದಲ್ಲೇ ಆಕೆಯನ್ನು ಅಮಾನುಷವಾಗಿ ನಡೆಸಿಕೊಂಡಿರುವ ಹಲವಾರು ಘಟನೆಗಳಿವೆ. ಮಹಿಳಾ ದಿನಾಚರಣೆ ಕೇವಲ ಆಚರಣೆ ಮಾತ್ರ ಆಗಬಾರದು ಆಕೆಗೆ ಸಮಾಜದಲ್ಲಿ ಒಳ್ಳೆಯ ಸ್ಥಾನಮಾನ, ಗೌರವ, ಸಮಾನತೆ, ಸ್ವಾತಂತ್ರ್ಯ ಎಲ್ಲವು ಸಿಗುವಂತಾಗಬೇಕು.

    ಅಂತರರಾಷ್ಟ್ರೀಯ ಮಹಿಳಾ ದಿನದ ಹಿನ್ನಲೆ ಗುಜರಾತ್‌ನ ನವಸಾರಿ ಜಿಲ್ಲೆಯಲ್ಲಿ ಪ್ರಧಾನಿ ನರೇಂದ್ರ ಮೋದಿಯವರ ಕಾರ್ಯಕ್ರಮವೊಂದರಲ್ಲಿ ಭಾಗಿಯಾಗುತ್ತಿದ್ದು ಈ ಕಾರ್ಯಕ್ರಮದ ಭದ್ರತಾ ವ್ಯವಸ್ಥೆಯನ್ನು ಸಂಪೂರ್ಣ ಮಹಿಳಾ ಪೊಲೀಸ್ ಸಿಬ್ಬಂದಿಯೇ ನಿರ್ವಹಿಸುತ್ತಿರುವುದು ಈ ಬಾರಿಯ ಮಹಿಳಾ ದಿನಾಚರಣೆಯ ವಿಶೇಷವಾಗಿದೆ.

  • ಅಂತರಾಷ್ಟ್ರೀಯ ಮಹಿಳಾ ದಿನದಿಂದ ಮಹಿಳಾ ಗ್ರಾಮಸಭೆಗಳಿಗೆ ಚಾಲನೆ: ಪ್ರಿಯಾಂಕ್ ಖರ್ಗೆ

    ಅಂತರಾಷ್ಟ್ರೀಯ ಮಹಿಳಾ ದಿನದಿಂದ ಮಹಿಳಾ ಗ್ರಾಮಸಭೆಗಳಿಗೆ ಚಾಲನೆ: ಪ್ರಿಯಾಂಕ್ ಖರ್ಗೆ

    ಬೆಂಗಳೂರು: ಮಹಿಳಾ ಸಶಕ್ತೀಕರಣ ಹಾಗೂ ಸ್ಥಳೀಯ ಆಡಳಿತದಲ್ಲಿ ಮಹಿಳೆಯರ ಸಕ್ರಿಯ ಭಾಗವಹಿಸುವಿಕೆಗಾಗಿ ಅಂತರರಾಷ್ಟ್ರೀಯ ಮಹಿಳಾ ದಿನವಾದ ಮಾ. 08ರಿಂದ ಜೂ. 30ರವರೆಗೆ ಮಹಿಳಾ ಸ್ನೇಹಿ ಗ್ರಾಮ ಪಂಚಾಯತಿ ಅಭಿಯಾನ ಮತ್ತು ಮಹಿಳಾ ಗ್ರಾಮ ಸಭೆಗಳನ್ನು ನಡೆಸಲು ಸೂಚಿಸಲಾಗಿದೆ ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಹಾಗೂ ಮಾಹಿತಿ ತಂತ್ರಜ್ಞಾನ ಪ್ರಿಯಾಂಕ್ ಖರ್ಗೆ (Priyank Kharge) ತಿಳಿಸಿದರು.

    ಈ ಬಗ್ಗೆ ಮಾತನಾಡಿದ ಅವರು, ಗ್ರಾಮಗಳ ಅರ್ಧದಷ್ಟು ಜನಸಂಖ್ಯೆಯನ್ನು ಪ್ರತಿನಿಧಿಸುವ ಮಹಿಳೆಯರು ವಾರ್ಡ್ ಮತ್ತು ಗ್ರಾಮ ಸಭೆಗಳಲ್ಲಿ ಭಾಗವಹಿಸಿ ತಮ್ಮ ಸಮಸ್ಯೆಗಳು ಮತ್ತು ಬೇಡಿಕೆಗಳನ್ನು ಮಂಡಿಸುವುದು ಬಹಳ ಮುಖ್ಯವಾಗಿದೆ. ಈ ಹಿನ್ನೆಲೆಯಲ್ಲಿ ಕರ್ನಾಟಕ ಗ್ರಾಮ ಸ್ವರಾಜ್ ಮತ್ತು ಪಂಚಾಯತ್ ರಾಜ್ ಅಧಿನಿಯಮ 1993ರ ಪ್ರಕರಣ 3-ಹೆಚ್ ಅನ್ವಯ ಮಹಿಳೆಯರಿಗಾಗಿ ಗ್ರಾಮ ಸಭೆಗಳನ್ನು ಆಯೋಜಿಸಲು ಅವಕಾಶ ಕಲ್ಪಿಸಲಾಗಿದೆ ಎಂದರು. ಇದನ್ನೂ ಓದಿ: ಅಪಾಯವಿದೆ ಎಚ್ಚರಿಕೆ ಅಖಾಡದಲ್ಲೋರ್ವ ರಂಗಭೂಮಿ ಪ್ರತಿಭೆ! 

    ಗ್ರಾಮ ಪಂಚಾಯತಿಗಳಲ್ಲಿ ಸ್ಥಳೀಯ ಮಹಿಳಾ ಸ್ವಸಹಾಯ ಹಾಗೂ ಸ್ತ್ರೀ ಶಕ್ತಿ ಸಂಘಗಳ ಸಹಭಾಗಿತ್ವದಲ್ಲಿ ಪೂರ್ವ ಸಿದ್ಧತೆಯೊಂದಿಗೆ ಮಹಿಳೆಯರಿಗಾಗಿ ವಿಶೇಷ ಕಾರ್ಯಕ್ರಮ, ಚಟುವಟಿಕೆಗಳನ್ನು ಆಯೋಜಿಸಿ ಅರ್ಥಪೂರ್ಣವಾಗಿ ಮಹಿಳಾ ಗ್ರಾಮ ಸಭೆಗಳನ್ನು ನಡೆಸಬೇಕು. ಮಹಿಳೆಯರಿಂದ ಬರುವ ಬೇಡಿಕೆ, ಸಮಸ್ಯೆ ಹಾಗೂ ಪ್ರಶ್ನೆಗಳಿಗೆ ಸಂಬಂಧಿಸಿದ ಇಲಾಖೆಗಳು ಸ್ಪಂದಿಸುವ ಮೂಲಕ ಮಹಿಳಾ ಸ್ನೇಹಿ ಗ್ರಾಮ ಪಂಚಾಯತಿ ಅಭಿಯಾನವನ್ನು ಪರಿಣಾಮಕಾರಿಯಾಗಿ ಅನುಷ್ಟಾನಗೊಳಿಸಬೇಕೆಂದು ಹೇಳಿದರು. ಇದನ್ನೂ ಓದಿ: ಹೈಕಮಾಂಡ್, ಶಾಸಕರ ಬೆಂಬಲ ಇರೋವರೆಗೂ ಸಿದ್ದರಾಮಯ್ಯರೇ ಸಿಎಂ: ಸಂಸದ ಸುನೀಲ್ ಬೋಸ್

    ಮಹಿಳಾ ಸ್ನೇಹಿ ಗ್ರಾಮ ಪಂಚಾಯತಿ ಅಭಿಯಾನ ನಡೆಸುವ ಹಿನ್ನಲೆಯಲ್ಲಿ ಪೂರ್ವಭಾವಿಯಾಗಿ ಮಹಿಳೆಯರು ಮತ್ತು ಮಕ್ಕಳಿಗೆ ಸಂಬAಧಿಸಿದ ಉಪಸಮಿತಿಗಳ ಸಭೆಗಳನ್ನು ನಡೆಸಲು ಸೂಚಿಸಲಾಗಿದೆ. ಪ್ರತಿ ಗ್ರಾಮದ ಮಹಿಳೆಯರ ಅಂಕಿ-ಸಂಖ್ಯೆಯ ವಿವರಗಳನ್ನು ಸಂಗ್ರಹಿಸಿ ಮಹಿಳಾ ಗ್ರಾಮಸಭೆಯಲ್ಲಿ ಮಂಡಿಸಬೇಕು. ಗ್ರಾಮಗಳಲ್ಲಿನ ಎಲ್ಲಾ ಸ್ವಸಹಾಯ ಸ್ತ್ರೀ ಶಕ್ತಿ ಸಂಘಗಳ ಸದಸ್ಯರು, ಸ್ವ-ಸಹಾಯ ಸಂಘಗಳ ಎಲ್ಲಾ ಸದಸ್ಯರು ಮಹಿಳಾ ಗ್ರಾಮ ಸಭೆಗಳಲ್ಲಿ ಸಕ್ರಿಯವಾಗಿ ಭಾಗವಹಿಸುವಂತೆ ಖಾತರಿ ಪಡಿಸಿಕೊಳ್ಳಬೇಕು ಎಂದು ನಿರ್ದೇಶಿಸಿದರು. ಇದನ್ನೂ ಓದಿ: ಬಂಧಿತ ಖಲಿಸ್ತಾನಿ ಉಗ್ರ ಮಹಾಕುಂಭ ಮೇಳದಲ್ಲಿ ದುಷ್ಕೃತ್ಯಕ್ಕೆ ಸಂಚು ರೂಪಿಸಿದ್ದ

    ಮಹಿಳಾ ಸ್ನೇಹಿ ಗ್ರಾಮ ಪಂಚಾಯತಿ ಅಭಿಯಾನದ 16 ವಾರಗಳ ಅವಧಿಯಲ್ಲಿ ವಾರಕ್ಕೆ ಒಂದರಂತೆ ಸಾಂಸ್ಕೃತಿಕ, ಮನರಂಜನೆ, ಕ್ರೀಡೆ, ಆರೋಗ್ಯ, ಪೌಷ್ಟಿಕಾಂಶ, ನೈರ್ಮಲ್ಯ, ಮಹಿಳಾ ಕಾನೂನುಗಳು ಮುಂತಾದ ವಿಷಯಗಳನ್ನು ಕಾರ್ಯಕ್ರಮಗಳನ್ನು ಆಯೋಜಿಸಬೇಕು. ಗ್ರಾಮಸಭೆ ನಡೆಸುವ ಸಮಯದಲ್ಲಿ ಆರೋಗ್ಯ ಶಿಬಿರ, ವಸ್ತು ಪ್ರದರ್ಶನ, ಸಸಿ ನೆಡುವ ಕಾರ್ಯಕ್ರಮ ಏರ್ಪಾಡುವಂತೆ ಸಲಹೆ ನೀಡಿದರು.

  • ಸ್ತ್ರೀಶಕ್ತಿ ಗುಂಪುಗಳಿಗೆ ಶೂನ್ಯ ಬಡ್ಡಿದರದಲ್ಲಿ ಸಾಲ – ಭೂರಹಿತ ಮಹಿಳಾ ಕೃಷಿ ಕಾರ್ಮಿಕರಿಗೆ ಪ್ರತಿ ತಿಂಗಳು ತಲಾ 500 ರೂ.

    ಸ್ತ್ರೀಶಕ್ತಿ ಗುಂಪುಗಳಿಗೆ ಶೂನ್ಯ ಬಡ್ಡಿದರದಲ್ಲಿ ಸಾಲ – ಭೂರಹಿತ ಮಹಿಳಾ ಕೃಷಿ ಕಾರ್ಮಿಕರಿಗೆ ಪ್ರತಿ ತಿಂಗಳು ತಲಾ 500 ರೂ.

    ಬೆಂಗಳೂರು: ಮಹಿಳೆಯರು ಹೆಚ್ಚಿನ ಸಂಖ್ಯೆಯಲ್ಲಿ ಆರ್ಥಿಕ ಚಟುವಟಿಕೆಗಳಲ್ಲಿ ತೊಡಗಿಸುವುದನ್ನು ಪ್ರೋತ್ಸಾಹಿಸುವುದು ನಮ್ಮ ಸರ್ಕಾರದ ಪ್ರಮುಖ ಆದ್ಯತೆಯಾಗಿದೆ. ಈ ಉದ್ದೇಶಕ್ಕೆ ಹಿಂದಿನ ವರ್ಷದಲ್ಲಿ ಸ್ತ್ರೀ ಸಾಮರ್ಥ್ಯ ಯೋಜನೆಯನ್ನು ಜಾರಿಗೊಳಿಸಿದೆ. ಈ ಯೋಜನೆಯಡಿಯಲ್ಲಿ ಸ್ವಸಹಾಯ ಗುಂಪುಗಳಿಗೆ ಬಂಡವಾಳ ನಿಧಿ ನೀಡಲು ಅವಕಾಶ ಮಾಡಲಾಗಿತ್ತು ಹಾಗೂ ಸಹಕಾರ ವಲಯದಲ್ಲಿ ಶೂನ್ಯ ಬಡ್ಡಿ ದರದಲ್ಲಿ ಸಾಲ ಒದಗಿಸಲು ಅವಕಾಶ ನೀಡಲಾಗಿದೆ. ಧ್ಯೇಯೋದ್ದೇಶ ಮುಂದುವರೆಸುತ್ತಾ ನಮ್ಮ ಸರ್ಕಾರವು `ಗೃಹಿಣಿ ಶಕ್ತಿ’ ಯೋಜನೆಯನ್ನು ಜಾರಿಗೊಳಿಸಲು ನಿರ್ಧರಿಸಿದೆ ಎಂದು ಸಿಎಂ ಬೊಮ್ಮಾಯಿ ಹೇಳಿದ್ದಾರೆ.

    ಬಜೆಟ್ ಮುಖ್ಯಾಂಶಗಳು
    ಕುಟುಂಬ ನಿರ್ವಹಣೆಯೊಂದಿಗೆ ಮನೆಯ ಆರ್ಥಿಕ ಸುಧಾರಣೆಗಾಗಿ ಶ್ರಮಿಸುವ ಮಹಿಳಾ ಕೃಷಿ ಕಾರ್ಮಿಕರ ಕುರಿತು ನಮ್ಮ ಸರ್ಕಾರ ಹೊಂದಿರುವ ಕಾಳಜಿಯ ಪ್ರತೀಕವಾಗಿ, ಶ್ರಮ ಶಕ್ತಿ ಎಂಬ ಹೊಸ ಯೋಜನೆಯನ್ನು ಜಾರಿಗೆ ತರಲಾಗುವುದು. ಈ ಯೋಜನೆಯಡಿ ರಾಜ್ಯ ಸರ್ಕಾರವು ಭೂರಹಿತ ಮಹಿಳಾ ಕೃಷಿ ಕಾರ್ಮಿಕರಿಗೆ ಪ್ರತಿ ತಿಂಗಳು ತಲಾ 500 ರೂ. ಗಳ ಸಹಾಯ ಧನವನ್ನು ಡಿ.ಬಿ.ಟಿ. ಮೂಲಕ ನೀಡಲಿದೆ. ಇದನ್ನೂ ಓದಿ: ಬಿಜೆಪಿ ಸರ್ಕಾರದ ಕಡೇ ಬಜೆಟ್- ಬೊಮ್ಮಾಯಿ ಬಜೆಟ್‌ನಲ್ಲಿ ಏನಿರಬಹುದು?

    ಗೃಹಿಣಿಯರಿಗೆ ಮನೆಯಲ್ಲಿಯೇ ಲಾಭದಾಯಕ ಉದ್ಯಮ (Home based Industry) ಪ್ರಾರಂಭಿಸಲು ಅನುವಾಗುವಂತೆ ಪ್ರಸಕ್ತ ವರ್ಷದಲ್ಲಿ ಒಂದು ಲಕ್ಷ ಮಹಿಳೆಯರಿಗೆ ಉಚಿತವಾಗಿ ಕೌಶಲ್ಯಾಭಿವೃದ್ಧಿ ತರಬೇತಿಯನ್ನು ನೀಡಲಾಗುವುದು.

    ಬಾಲಕಿಯರು ಮತ್ತು ಮಹಿಳೆಯರ ಸಬಲೀಕರಣದ (Women empowerment) ಕುರಿತು life cycle approach ಹೊಂದಲು ನಿರ್ಧರಿಸಲಾಗಿದೆ. ಅಪೌಷ್ಟಿಕತೆ ಮತ್ತು ರಕ್ತಹೀನತೆ ತಡೆಯಲು ‘ಆರೋಗ್ಯ ಪುಷ್ಟಿ’ ಯೋಜನೆಯಡಿ ಮಾತೃಪೂರ್ಣ ಯೋಜನೆಯಂತೆ ಅರ್ಹ ವಿವಾಹಿತ ಮಹಿಳೆಯರಿಗೆ ಅಂಗನವಾಡಿಗಳಲ್ಲಿ ಬಿಸಿಯೂಟ ಮತ್ತು Prophylactic IFA ಮಾತ್ರೆಗಳನ್ನು ಜೀವಿತಾವಧಿಯಲ್ಲಿ ಒಂದು ಬಾರಿ ಗರಿಷ್ಠ 6 ತಿಂಗಳ ಅವಧಿಗೆ ಆರೋಗ್ಯ ಇಲಾಖೆಯ ಸಹಯೋಗದೊಂದಿಗೆ ಒದಗಿಸಲಾಗುವುದು. ಈ ಯೋಜನೆಯಡಿ ಅಭಿವೃದ್ಧಿ ಆಕಾಂಕ್ಷಿ ತಾಲ್ಲೂಕುಗಳಿಗೆ ಒತ್ತು ನೀಡಲಾಗುವುದು.

    ರಾಜ್ಯದ ಸಂಘಟಿತ ವಲಯದಲ್ಲಿ ದುಡಿಯುವ ಮಹಿಳೆಯರಿಗೆ ಉಚಿತ ಬಸ್ ಪಾಸ್ ಸೌಲಭ್ಯವನ್ನು ಒದಗಿಸಲು ಉದ್ದೇಶಿಸಲಾಗಿದೆ. ರಾಜ್ಯದ ಒಟ್ಟು 30 ಲಕ್ಷ ಮಹಿಳೆಯರಿಗೆ ಸಹಾಯವಾಗುವ ಈ ಯೋಜನೆಗೆ 1,000 ಕೋಟಿ ರೂ. ಗಳನ್ನು ಒದಗಿಸಲಾಗುವುದು.

    ರಾಜ್ಯದಲ್ಲಿನ ಎಲ್ಲಾ ಶಾಲಾ-ಕಾಲೇಜುಗಳ ವಿದ್ಯಾರ್ಥಿನಿಯರಿಗೆ `ವಿದ್ಯಾವಾಹಿನಿ’ ಎಂಬ ಯೋಜನೆಯಡಿಯಲ್ಲಿ 350 ಕೋಟಿ ರೂ. ವೆಚ್ಚದಲ್ಲಿ ಉಚಿತ ಬಸ್ ಪಾಸ್ ಸೌಲಭ್ಯವನ್ನು ಒದಗಿಸಲು ನಿರ್ಧರಿಸಲಾಗಿದೆ. ಇದರಿಂದ ರಾಜ್ಯದಲ್ಲಿನ ಒಟ್ಟು 8 ಲಕ್ಷ ಹೆಣ್ಣು ಮಕ್ಕಳ ಶಿಕ್ಷಣಕ್ಕೆ (Education)  ಅನುಕೂಲವಾಗಲಿದೆ. ಇದನ್ನೂ ಓದಿ: ಬಜೆಟ್‌ನಲ್ಲಿ ಬ್ರಾಹ್ಮಣ ಅಭಿವೃದ್ಧಿ ನಿಗಮಕ್ಕೆ 10 ಕೋಟಿ ಅನುದಾನ: ಬೊಮ್ಮಾಯಿ ಭರವಸೆ

    Live Tv
    [brid partner=56869869 player=32851 video=960834 autoplay=true]

    Join our Whatsapp group by clicking the below link
    https://chat.whatsapp.com/E6YVEDajTzH06LOh77r25k

  • LPG ಗ್ಯಾಸ್, ಟಾಯ್ಲೆಟ್‌ ಕಟ್ಟೋದು ಮಹಿಳಾ ಸಬಲೀಕರಣ ಅಲ್ಲ: ಪ್ರಿಯಾಂಕಾ ಗಾಂಧಿ

    LPG ಗ್ಯಾಸ್, ಟಾಯ್ಲೆಟ್‌ ಕಟ್ಟೋದು ಮಹಿಳಾ ಸಬಲೀಕರಣ ಅಲ್ಲ: ಪ್ರಿಯಾಂಕಾ ಗಾಂಧಿ

    ನವದೆಹಲಿ: ಎಲ್‍ಪಿಜಿ ಸಿಲಿಂಡರ್ ಕೊಡೋದು, ಟಾಯ್ಲೆಟ್ ಕಟ್ಟಿಸಿಕೊಡುವುದು ಮಹಿಳಾ ಸಬಲೀಕರಣ ಅಲ್ಲ ಎಂದು ಕಾಂಗ್ರೆಸ್‍ನ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ಹೇಳಿದ್ದಾರೆ.

    ಮುಂದಿನ ಉತ್ತರಪ್ರದೇಶ ಚುನಾವಣೆಗಾಗಿ ರಾಯ್ ಬರೇಲಿಯಲ್ಲಿ ನಡೆದ ಶಕ್ತಿ ಸಂವಾದ ಕಾರ್ಯಕ್ರಮದಲ್ಲಿ ಮಾತನಾಡಿದ ಪ್ರಿಯಾಂಕಾ ಗಾಂಧಿ, ಮಹಿಳೆಯರ ಸ್ವಾಭಿಮಾನದಿಂದ ಬದುಕುವುದು ಹಾಗೂ ಎಲ್ಲಾ ತಾರತಮ್ಯಗಳ ವಿರುದ್ಧ ಹೋರಾಡೋದು ಮಹಿಳಾ ಸಬಲೀಕರಣವೇ ಹೊರತು, ಎಲ್‍ಪಿ ಮತ್ತು ಟಾಯ್ಲೆಟ್ ಕಟ್ಟೋದು ಅಲ್ಲ ಎಂದು ಆಡಳಿಯ ಪಕ್ಷದ ವಿರುದ್ಧವಾಗಿ ಕಿಡಿಕಾರಿದ್ದಾರೆ. ದನ್ನೂ ಓದಿ: ನಕಲಿ ದಾಖಲೆಯಿಂದ ರೈಲು ಇಂಜಿನ್ ಮಾರಾಟ ಮಾಡಿದ ಎಂಜಿನಿಯರ್

    ಧರ್ಮದ ಹೆಸರಿನಲ್ಲಿ ಕೇಂದ್ರ ಸರ್ಕಾರ ರಾಜಕೀಯ ಮಾಡುತ್ತಿದೆ. ರಾಹುಲ್ ಗಾಂಧಿ ಹಿಂದು ಮತ್ತು ಹಿಂದುತ್ವದ ಕುರಿತಾಗಿ ಹೇಳಿರುವುದು ಸರಿ ಇದೆ. 2 ಪದಗಳ ನಡುವೆ ಇರುವ ವ್ಯತ್ಯಾಸದ ಕುರಿತಾಗಿ ರಾಹುಲ್ ಮಾತನಾಡಿದ್ದನು. ಹಿಂದುತ್ವ ಪ್ರೀತಿ ಮತ್ತು ಏಕತೆಯನ್ನು ಕಲಿಸುತ್ತದೆ. RSS ಮತ್ತು ಬಿಜೆಪಿ ಅವರು ಬಲಪಂಥೀಯರು ಆಗಿದ್ದಾರೆ ಎಂದು ಹೇಳಿದ್ದಾರೆ. ದನ್ನೂ ಓದಿ: ಮಾಜಿ ಪತ್ನಿಗೆ 5516 ಕೋಟಿ ಜೀವನಾಂಶ ನೀಡುವಂತೆ ದುಬೈ ದೊರೆಗೆ ಹೈಕೋರ್ಟ್ ಆದೇಶ

    BJP - CONGRESS

    ಮಹಿಳೆಯರ ಬಲವರ್ಧನೆಗೆ ಮೋದಿವ ಅವರ ನೇತೃತ್ವದ ಸರ್ಕಾರ ಯಾವುದೇ ಕೊಡುಗೆ ಕೊಟ್ಟಿಲ್ಲ. ಮುಂದಿನ ಚುನಾವಣೆಯಲ್ಲಿ ವೋಟ್ ನೀಡಬೇಕಾದ ಸಮಯದಲ್ಲಿ ಸರಿಯಾಗಿ ಯೋಚಿಸಿ ಎಂದು ಪ್ರಿಯಾಂಕಾ ಗಾಂಧಿ ಎಚ್ಚರಿಕೆಯ ಸೂಚನೆ ನೀಡಿದ್ದಾರೆ.