https://www.youtube.com/watch?v=SJPugEv41_4
Tag: women entry
-

ಮಹಿಳೆಯರ ಪ್ರವೇಶದಿಂದ ಮುಚ್ಚಲಾಗಿದ್ದ ಶಬರಿಮಲೆ ದೇವಾಲಯ ಮತ್ತೆ ಓಪನ್
ತಿರುವನಂತಪುರಂ: ಇಬ್ಬರು ಮಹಿಳೆಯರು ಪ್ರವೇಶಿಸಿದ ಬಳಿಕ ಮುಚ್ಚಲಾಗಿದ್ದ ಶಬರಿಮಲೆ ದೇವಾಲಯವನ್ನು ಭಕ್ತರಿಗಾಗಿ ಮತ್ತೆ ತೆರೆಯಲಾಗಿದೆ.
ಮಹಿಳೆಯರಾದ ಬಿಂದು ಮತ್ತು ಕನಕ ಮಧ್ಯರಾತ್ರಿ ಬೆಟ್ಟವನ್ನು ಹತ್ತಿ, ವಿಐಪಿ ಮತ್ತು ಮಾಧ್ಯಮಗಳ ಪ್ರವೇಶಕ್ಕೆ ಇರುವ ದ್ವಾರದ ಮೂಲಕ ಬುಧವಾರ ಬೆಳಗ್ಗೆ 3.45ಕ್ಕೆ ದೇವಾಲಯವನ್ನು ಪ್ರವೇಶಿಸಿದ್ದರು. ಈ ಸಮಯದಲ್ಲಿ ಭಕ್ತರ ಸಂಖ್ಯೆ ಕಡಿಮೆ ಇತ್ತು ಮತ್ತು ಯಾವುದೇ ಮಾಧ್ಯಮಗಳು ಸಹ ಇರಲಿಲ್ಲ.

ಬೆಳಗ್ಗೆ 9 ಗಂಟೆಯ ವೇಳೆಗೆ ಮಹಿಳೆಯರಿಬ್ಬರು ದೇವಾಲಯವನ್ನು ಪ್ರವೇಶಿಸಿದ್ದಾರೆ ಎಂದು ಪೊಲೀಸ್ ಮೂಲಗಳನ್ನು ಆಧಾರಿಸಿ ಮಾಧ್ಯಮಗಳು ಸುದ್ದಿ ಪ್ರಕಟಿಸಿದವು. ಇದರ ಬೆನ್ನಲ್ಲೇ ಮಹಿಳೆಯರ ಪ್ರವೇಶವನ್ನು ಖಚಿತಪಡಿಸಿದ ಕೇರಳ ಸಿಎಂ ಪಿಣರಯ್ ವಿಜಯನ್, ಇಬ್ಬರು ಮಹಿಳೆಯರು ಪೊಲೀಸ್ ಭದ್ರತೆಯಲ್ಲಿ ಶಬರಿಮಲೆ ಪ್ರವೇಶಿಸಿದ್ದಾರೆ. ಅವರಿಗೆ ರಕ್ಷಣೆ ನೀಡಿದ್ದಕ್ಕೆ ನಮಗೆ ಹೆಮ್ಮೆಯಿದೆ ಎಂದು ಪ್ರತಿಕ್ರಿಯಿಸಿದ್ದರು.
ಸಿಎಂ ಅಧಿಕೃತವಾಗಿ ಪ್ರಕಟಿಸುತ್ತಿದ್ದಂತೆ ಶಬರಿಮಲೆಯ ದೇವಾಲಯದ ಪ್ರಧಾನ ಅರ್ಚಕರು ತಾತ್ಕಾಲಿಕವಾಗಿ ಮುಚ್ಚುವ ತೀರ್ಮಾನವನ್ನು ತೆಗೆದುಕೊಂಡರು. ಅದರಂತೆ ಬೆಳಗ್ಗೆ 10.30ರ ವೇಳೆಗೆ ವೇಳೆಗೆ ದೇವಾಲಯದ ಬಾಗಿಲನ್ನು ಮುಚ್ಚಲಾಯಿತು. ಒಂದು ಗಂಟೆಯ ಕಲಶ ಶುದ್ಧಿಯ ಬಳಿಕ ದೇವಾಲಯದ ಬಾಗಿಲನ್ನು ಭಕ್ತರಿಗಾಗಿ ಮತ್ತೆ ತೆರೆಯಲಾಯಿತು.

ಮಹಿಳೆಯರ ಪ್ರವೇಶದಿಂದ ದೇವಾಲಯ ಅಪವಿತ್ರಗೊಂಡಿದೆ. ಹೀಗಾಗಿ ಕಲಶ ಶುದ್ಧಿಗಾಗಿ ಬಂದ್ ಮಾಡಿದ್ದೇವೆ ಎಂದು ಪ್ರಧಾನ ಅರ್ಚಕರು ತಿಳಿಸಿದ್ದರು.
44 ವರ್ಷ ಬಿಂದು ತಲಶೇರಿಯಲ್ಲಿ ಕಾಲೇಜು ಉಪನ್ಯಾಸಕಿ ಮತ್ತು ಸಿಪಿಐ(ಎಂ) ಕಾರ್ಯಕರ್ತೆಯಾಗಿದ್ದು, 42 ವರ್ಷದ ಕನಕದುರ್ಗ ನಾಗರಿಕ ಸರಬರಾಜು ಇಲಾಖೆಯಲ್ಲಿ ಉದ್ಯೋಗದಲ್ಲಿದ್ದಾರೆ. ಸದ್ಯ ಇಬ್ಬರು ಈಗ ಎಲ್ಲಿದ್ದಾರೆ ಎನ್ನುವುದು ತಿಳಿದು ಬಂದಿಲ್ಲ. ಈಗ ಅವರನ್ನು ಸುರಕ್ಷಿತ ಸ್ಥಳದಲ್ಲಿ ಇದ್ದಾರೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ.

ಮಹಿಳೆಯರ ದೇವಾಲಯ ಪ್ರವೇಶಕ್ಕೆ ಅನುಮತಿ ನೀಡಿದ್ದನ್ನು ಕೇರಳ ಬಿಜೆಪಿ ಖಂಡಿಸಿದೆ. ಸಿಎಂ ವಿಜಯನ್ ಆಧುನಿಕ ಔರಂಗಜೇಬ್. ಹಿಂದೂಗಳ ಧಾರ್ಮಿಕ ನಂಬಿಕೆಯನ್ನು ಸರ್ಕಾರ ಘಾಸಿಗೊಳಿಸಿದೆ ಎಂದು ಕೇರಳ ಬಿಜೆಪಿ ರಾಜ್ಯಾಧ್ಯಕ್ಷ ಪಿಎಸ್ ಶ್ರೀಧರನ್ ಪಿಳ್ಳೈ ಕಿಡಿಕಾರಿದ್ದಾರೆ.
ಅಯ್ಯಪ್ಪ ದೇವಾಲಯ ಪ್ರವೇಶಕ್ಕೆ 10 ವರ್ಷದಿಂದ ಮೇಲ್ಪಟ್ಟು 50 ವರ್ಷದ ಒಳಗಿನ ಮಹಿಳೆಯರಿಗೆ ನಿರ್ಬಂಧ ವಿಧಿಸಲಾಗಿತ್ತು. ಆದರೆ ಸುಪ್ರೀಂ ಕೋರ್ಟ್ ಈ ನಿರ್ಬಂಧವನ್ನು ತೆರವುಗೊಳಿಸಿ ಎಲ್ಲ ವಯಸ್ಸಿನ ಮಹಿಳೆಯರು ದೇವಾಲಯವನ್ನು ಪ್ರವೇಶಿಸಬಹುದು ಎನ್ನುವ ಐತಿಹಾಸಿಕ ತೀರ್ಪನ್ನು ಪ್ರಕಟಿಸಿತ್ತು.
ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv, ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv
-

ಇಬ್ಬರು ಮಹಿಳೆಯರ ಪ್ರವೇಶ: ಶಬರಿಮಲೆ ಅಯ್ಯಪ್ಪ ದೇವಾಲಯ ಬಂದ್
ತಿರುವಂತಪುರಂ: 50 ವರ್ಷ ಮೀರದ ಮಹಿಳೆಯರು ಪ್ರವೇಶಿಸಿದ ಹಿನ್ನೆಲೆಯಲ್ಲಿ ಶಬರಿಮಲೆಯ ಅಯ್ಯಪ್ಪ ದೇವಾಲಯವನ್ನು ಬಂದ್ ಮಾಡಲಾಗಿದೆ. ಸಂಪ್ರದಾಯಕ್ಕೆ ಅಡ್ಡಿಯಾಗಿದೆ ಎಂದು ಹೇಳಿ ಅರ್ಚಕರು ದೇವಾಲಯವನ್ನು ಬಂದ್ ಮಾಡಿ ಕಲಶ ಶುದ್ಧಿ ಮಾಡಿ ತೆರಿದಿದ್ದಾರೆ.
ಮಹಿಳೆಯರ ಪ್ರವೇಶದಿಂದ ದೇವಾಲಯ ಅಪವಿತ್ರಗೊಂಡಿದೆ. ಹೀಗಾಗಿ ಕಲಶ ಶುದ್ಧಿಗಾಗಿ ಬಂದ್ ಮಾಡಿದ್ದೇವೆ ಎಂದು ಪ್ರಧಾನ ಅರ್ಚಕರು ತಿಳಿಸಿದ್ದಾರೆ. ಕಲಶ ಶುದ್ಧಿಯ ಬಳಿಕ ಬೆಳಗ್ಗೆ 11 ಗಂಟೆಯ ವೇಳೆಗೆ ದೇವಾಲಯವನ್ನು ಭಕ್ತರಿಗೆ ತೆರೆಯಲಾಗಿದೆ.
ಬಿಂದು ಮತ್ತು ಕನಕ ಮಧ್ಯರಾತ್ರಿ ಬೆಟ್ಟವನ್ನು ಹತ್ತಿ ಬುಧವಾರ ಬೆಳಗ್ಗೆ 3.45ಕ್ಕೆ ದೇವಾಲಯವನ್ನು ಪ್ರವೇಶಿಸಿದ್ದರು. ಈ ಸಮಯದಲ್ಲಿ ಭಕ್ತರ ಸಂಖ್ಯೆ ಕಡಿಮೆ ಇತ್ತು ಮತ್ತು ಯಾವುದೇ ಮಾಧ್ಯಮಗಳು ಸಹ ಇರಲಿಲ್ಲ. ವಿಐಪಿ ಮತ್ತು ಮಾಧ್ಯಮಗಳ ಪ್ರವೇಶಕ್ಕೆ ಇರುವ ದ್ವಾರದಿಂದ ಇವರಿಬ್ಬರು ದೇವಾಲಯವನ್ನು ಪ್ರವೇಶಿಸಿದ್ದರು.

ಮಹಿಳೆಯರ ಪ್ರವೇಶವನ್ನು ಖಚಿತಪಡಿಸಿದ ಕೇರಳ ಸಿಎಂ ಪಿಣಾರಯ್ ವಿಜಯನ್, ಇಬ್ಬರು ಮಹಿಳೆಯರು ಪೊಲೀಸ್ ಭದ್ರತೆಯಲ್ಲಿ ಶಬರಿಮಲೆ ಪ್ರವೇಶಿಸಿದ್ದಾರೆ. ಅವರಿಗೆ ರಕ್ಷಣೆ ನೀಡಿದ್ದಕ್ಕೆ ನಮಗೆ ಹೆಮ್ಮೆಯಿದೆ ಎಂದು ಅವರು ತಿಳಿಸಿದ್ದಾರೆ.
44 ವರ್ಷ ಬಿಂದು ಕಾಲೇಜು ಉಪನ್ಯಾಸಕಿ ಮತ್ತು ಸಿಪಿಐ(ಎಂ) ಕಾರ್ಯಕರ್ತೆಯಾಗಿದ್ದು, 42 ವರ್ಷದ ಕನಕದುರ್ಗ ನಾಗರಿಕ ಸರಬರಾಜು ಇಲಾಖೆಯಲ್ಲಿ ಉದ್ಯೋಗದಲ್ಲಿದ್ದಾರೆ.
ಅಯ್ಯಪ್ಪ ದೇವಾಲಯ ಪ್ರವೇಶಕ್ಕೆ 10 ವರ್ಷದಿಂದ ಮೇಲ್ಪಟ್ಟು 50 ವರ್ಷದ ಒಳಗಿನ ಮಹಿಳೆಯರಿಗೆ ನಿರ್ಬಂಧ ವಿಧಿಸಲಾಗಿತ್ತು. ಆದರೆ ಸುಪ್ರೀಂ ಕೋರ್ಟ್ ಈ ನಿರ್ಬಂಧವನ್ನು ತೆರವುಗೊಳಿಸಿ ಎಲ್ಲ ವಯಸ್ಸಿನ ಮಹಿಳೆಯರು ದೇವಾಲಯವನ್ನು ಪ್ರವೇಶಿಸಬಹುದು ಎನ್ನುವ ಐತಿಹಾಸಿಕ ತೀರ್ಪನ್ನು ಪ್ರಕಟಿಸಿತ್ತು.
#WATCH Two women devotees Bindu and Kanakdurga entered & offered prayers at Kerala's #SabarimalaTemple at 3.45am today pic.twitter.com/hXDWcUTVXA
— ANI (@ANI) January 2, 2019
ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv, ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv
