Tag: women murder

  • ಮನೆಯವರಿಂದ ನನ್ನನ್ನು ಕಾಪಾಡು – ಬಾಯ್‌ಫ್ರೆಂಡ್‌ಗೆ ಮೆಸೇಜ್‌ ಕಳಿಸಿದವಳು ಶವವಾಗಿ ಪತ್ತೆ

    ಮನೆಯವರಿಂದ ನನ್ನನ್ನು ಕಾಪಾಡು – ಬಾಯ್‌ಫ್ರೆಂಡ್‌ಗೆ ಮೆಸೇಜ್‌ ಕಳಿಸಿದವಳು ಶವವಾಗಿ ಪತ್ತೆ

    ಗಾಂಧೀನಗರ: ಗುಜರಾತ್‌ನಲ್ಲಿ 18ರ ಹುಡುಗಿಯ ಸಾವು ಪ್ರಕರಣವೊಂದು ಹಲವಾರು ಅನುಮಾನಗಳಿಗೆ ಎಡೆಮಾಡಿಕೊಟ್ಟಿದೆ. ಸಾವಿಗೂ ಮುನ್ನ ತನ್ನ ಬಾಯ್‌ಫ್ರೆಂಡ್‌ಗೆ ‘ನನ್ನನ್ನು ಉಳಿಸು’ (Save Me) ಎಂದು ಮೊಬೈಲ್‌ನಲ್ಲಿ ಸಂದೇಶ ಕಳುಹಿಸಿರುವುದು, ಇದು ಕೊಲೆಯೇ ಎಂಬ ಪ್ರಶ್ನೆ ಹುಟ್ಟುಹಾಕಿದೆ.

    ಚಂದ್ರಿಕಾ ಚೌಧರಿ (18)ಯನ್ನು ಆಕೆಯ ತಂದೆ ಸೆಡ್ಹೈ ಪಟೇಲ್ ಮತ್ತು ಚಿಕ್ಕಪ್ಪ ಶಿವಭಾಯ್ ಪಟೇಲ್ ಥರಾಡ್‌ನ ಡಾಂಟಿಯಾದ ತಮ್ಮ ಮನೆಯಲ್ಲಿ ಕೊಲೆ ಮಾಡಿದ್ದಾರೆ. ಆಕೆಯ ತಂದೆ ಕಾಣೆಯಾಗಿದ್ದು, ಇಬ್ಬರನ್ನು ಬಂಧಿಸಲಾಗಿದೆ ಎಂದು ಸಹಾಯಕ ಪೊಲೀಸ್ ಅಧೀಕ್ಷಕ ಸುಮನ್ ನಲಾ ತಿಳಿಸಿದ್ದಾರೆ. ಇದನ್ನೂ ಓದಿ: ನಟ ದರ್ಶನ್‌ ಜಾಮೀನು ರದ್ದು – ಸುಪ್ರೀಂ ಕೋರ್ಟ್‌ ತೀರ್ಪಿನಲ್ಲೇನಿದೆ?

    ಚಂದ್ರಿಕಾ, ಹರೀಶ್ ಚೌಧರಿ ಜೊತೆ ಪ್ರೀತಿಯಲ್ಲಿದ್ದಳು. ಆದರೆ, ಆಕೆಯ ಕುಟುಂಬವು ಇದಕ್ಕೆ ವಿರುದ್ಧವಾಗಿತ್ತು. ಅವಳು ಬೇರೊಬ್ಬರನ್ನು ಮದುವೆಯಾಗಬೇಕೆಂದು ಕುಟುಂಬದವರು ಬಯಸಿದ್ದರು. ಮನೆಯವರ ಮನಸ್ಥಿತಿಯ ಬಗ್ಗೆ ಹರೀಶ್‌ಗೆ ಮಾಹಿತಿ ನೀಡಿದ್ದಳು. ‘ನನ್ನ ಜೀವಕ್ಕೆ ಅಪಾಯವಿದೆ. ನೀನು ನನ್ನ ಕರೆದುಕೊಂಡು ಹೋಗು’ ಎಂದು ಬಾಯ್‌ಫ್ರೆಂಡ್‌ಗೆ ಕೊನೆಯದಾಗಿ ಸಂದೇಶ ಕಳುಹಿಸಿದ್ದಳು.

    ‘ಬಂದು ನನ್ನನ್ನು ಕರೆದುಕೊಂಡು ಹೋಗು. ಇಲ್ಲದಿದ್ದರೆ, ಇಷ್ಟವಿಲ್ಲದವನ ಜೊತೆ ನನಗೆ ಮದುವೆ ಮಾಡ್ತಾರೆ. ನಾನು ಮದುವೆಗೆ ಒಪ್ಪದಿದ್ದರೆ, ಅವರು ನನ್ನನ್ನು ಕೊಲ್ಲುತ್ತಾರೆ. ನನ್ನನ್ನು ಕಾಪಾಡು ಎಂದು ಹರೀಶ್‌ಗೆ ಸಂದೇಶ ಕಳುಹಿಸಿದ್ದಳು. ಇದನ್ನೂ ಓದಿ: ಜಮ್ಮು ಕಾಶ್ಮೀರದ ಚಶೋತಿಯಲ್ಲಿ ಮೇಘಸ್ಫೋಟ – ದಿಢೀರ್‌ ಪ್ರವಾಹಕ್ಕೆ 10 ಸಾವು

    ಸಂದೇಶ ಕಳುಹಿಸಿದ ಕೆಲವೇ ಗಂಟೆಗಳಲ್ಲಿ ಆಕೆ ಮೃತದೇಹ ಪತ್ತೆಯಾಗಿದೆ. ಆರಂಭದಲ್ಲಿ ಇದು ಆತ್ಮಹತ್ಯೆ ಎಂದು ಬಿಂಬಿಸಲಾಗಿತ್ತು. ಆದರೆ, ಪೊಲೀಸ್‌ ಠಾಣೆಯಲ್ಲಿ ದಾಖಲಾದ ದೂರು, ತನಿಖೆಗೆ ದಾರಿ ಮಾಡಿಕೊಟ್ಟಿತು. ‘ನನ್ನ ಪ್ರೇಯಸಿ ಆತ್ಮಹತ್ಯೆ ಮಾಡಿಕೊಂಡಿಲ್ಲ, ಆಕೆಯನ್ನು ಕೊಲೆ ಮಾಡಿದ್ದಾರೆ’ ಎಂದು ಹರೀಶ್ ಪೊಲೀಸ್‌ ಠಾಣೆಗೆ ದೂರು ಕೊಟ್ಟಿದ್ದ.

  • ಬೆಂಗಳೂರು | ಮಹಿಳೆಯ ಭಯಾನಕ ಹತ್ಯೆ ಕೇಸ್‌ – ಅಸ್ಸಾಂ ಮೂಲದ ಲಿವ್‌ ಇನ್‌ ಗೆಳೆಯ ತಮ್ಸುದ್ದಿನ್ ಅರೆಸ್ಟ್‌

    ಬೆಂಗಳೂರು | ಮಹಿಳೆಯ ಭಯಾನಕ ಹತ್ಯೆ ಕೇಸ್‌ – ಅಸ್ಸಾಂ ಮೂಲದ ಲಿವ್‌ ಇನ್‌ ಗೆಳೆಯ ತಮ್ಸುದ್ದಿನ್ ಅರೆಸ್ಟ್‌

    – ಕೇಸ್‌ ದಾಖಲಾದ 20 ಗಂಟೆಯಲ್ಲೇ ಹಂತಕನ ಬಂಧನ

    ಬೆಂಗಳೂರು: ಮಹಿಳೆಯೊಬ್ಬರನ್ನ ಬರ್ಬರವಾಗಿ ಹತ್ಯೆಗೈದಿದ್ದ ಆರೋಪಿಯನ್ನ ಸಿ.ಕೆ ಅಚ್ಚುಕಟ್ಟು ಠಾಣೆ ಪೊಲೀಸರು (Chennamanakere Police Station) ಬಂಧಿಸಿದ್ದಾರೆ.

    ಅಸ್ಸಾಂ (Assam) ಮೂಲದ ತಮ್ಸುದ್ದಿನ್ ಬಂಧಿತ ಆರೋಪಿ. ಕೊಲೆಯಾದ ಮಹಿಳೆ ನಿವಾಸಿ ಪುಷ್ಪಾ @ ಆಶಾ ಮತ್ತು ತಮ್ಸುದ್ದೀನ್‌ ಲಿವ್‌ ಇನ್‌ ರಿಲೇಷನ್‌ನಲ್ಲಿದ್ದರು. ಇಬ್ಬರ ಭಿನ್ನಾಭಿಪ್ರಾಯ ಉಂಟಾಗಿತ್ತು, ಇದೇ ಕೊಲೆಗೆ ಕಾರಣ ಅನ್ನೋದು ಎಂದು ಪ್ರಾಥಮಿಕ ತನಿಖೆಯಲ್ಲಿ ತಿಳಿದುಬಂದಿದೆ.

    ಪ್ರಕರಣ ದಾಖಲಾದ 20 ಗಂಟೆ ಒಳಗಾಗಿಯೇ ಹಂತಕನನ್ನು ಇನ್ಸ್‌ಪೆಕ್ಟರ್‌ ಗಿರೀಶ್ ನಾಯ್ಕ್ ನೇತೃತ್ವದ ತಂಡ ಬಂಧಿಸಿದೆ. ಸಿಸಿಟಿವಿ ದೃಶ್ಯಾವಳಿಗಳನ್ನು ಪರಿಶೀಲಿಸಿ ಹಂತಕನನ್ನ ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

    ಏನಿದು ಘಟನೆ?
    ಚೆನ್ನಮ್ಮನಕೆರೆ ಅಚ್ಚುಕಟ್ಟು ಪೊಲೀಸ್ ಠಾಣಾ ವಾಪ್ತಿಯಲ್ಲಿ ಮಹಿಳೆಯೋಬ್ಬರನ್ನ ಬರ್ಬರವಾಗಿ ಹತ್ಯೆ ಮಾಡಿ, ಮೃತದೇಹವನ್ನ ಮೂಟೆ ಕಟ್ಟಿ ಕಸದ ಲಾರಿಯಲ್ಲಿಡಲಾಗಿತ್ತು. ತಡರಾತ್ರಿ ಆಟೋದಲ್ಲಿ ಬಂದ ಹಂತಕ ಬಿಬಿಎಂಪಿ ಲಾರಿಯಲ್ಲಿ ಶವದ ಮೂಟೆ ಎಸೆದು ಎಸ್ಕೇಪ್ ಆಗಿದ್ದ.

    ರಾತ್ರಿ 1.40ಕ್ಕೆ ಕಸ ಹಾಕಲು ಬಂದಿದ್ದ ಸ್ಥಳೀಯ ವ್ಯಕ್ತಿ ಚೀಲ ಬಿಚ್ಚಿದಾಗ ಮೊದಲಿಗೆ ಕೂದಲು ಕಂಡಿತ್ತು. ಬಳಿಕ ಮೃತದೇಹ ಇರೋದು ಗೊತ್ತಾಗಿ ತಕ್ಷಣ ಆ ವ್ಯಕ್ತಿ ಪೊಲೀಸರಿಗೆ ಮಾಹಿತಿ ನೀಡಿದ್ದ. ಪೊಲೀಸರು ಬಂದಾಗ ಮಹಿಳೆ ಕೊಲೆ ವಿಚಾರ ಬಯಲಾಗಿತ್ತು.

    ಇನ್ನು ಸ್ಥಳಕ್ಕೆ ಆಗಮಿಸಿದ ಸಿಕೆ ಅಚ್ಚುಕಟ್ಟು ಪೊಲೀಸರು ಸ್ಥಳೀಯ ನೀಡಿದ ದೂರಿನ ಆಧಾರದಲ್ಲಿ ಎಫ್‌ಐಆರ್ ದಾಖಲಿಸಿಕೊಂಡಿದ್ದರು. ಸಿಸಿಟಿವಿ ಆಧಾರದ ಮೇಲೆ ಕೊಲೆ ಹಂತಕರಿಗಾಗಿ 2 ತಂಡಗಳ ರಚಿಸಿ ಶೋಧ ನಡೆಸುತ್ತಿದ್ದರು. ಬಳಿಕ ಮಹಿಳೆಯ ಗುರುತು ಪತ್ತೆ ಮಾಡಿದ್ದರು. ಕೊಲೆಯಾದ ಮಹಿಳೆ ಹುಳಿಮಾವು ನಿವಾಸಿ ಪುಷ್ಪಾ @ ಆಶಾ ಎಂದು ಗುರುತಿಸಲಾಗಿತ್ತು. ಅಲ್ಲದೇ, ಶವ ಸಾಗಾಟಕ್ಕೆ ದ್ವಿಚಕ್ರ ವಾಹನ ಬಳಕೆ ಮಾಡಿರೋದು ಗೊತ್ತಾಗಿತ್ತು. ಈ ಹಿನ್ನೆಲೆಯಲ್ಲಿ ಆರೋಪಿಗೆ ಪತ್ತೆಗೆ ಪೊಲೀಸರು ಬಲೆ ಬೀಸಿದ್ದರು.

  • ಅನ್ಯಕೋಮಿನ ವ್ಯಕ್ತಿಯನ್ನ ಪ್ರೀತಿಸಿ ಮದ್ವೆಯಾಗಿದ್ದ ಮಹಿಳೆ – ಗಂಡನೇ ಕೊಲೆ ಮಾಡಿ ಹೆಣ ತಂದು ಬಿಸಾಡಿರುವ ಶಂಕೆ

    ಅನ್ಯಕೋಮಿನ ವ್ಯಕ್ತಿಯನ್ನ ಪ್ರೀತಿಸಿ ಮದ್ವೆಯಾಗಿದ್ದ ಮಹಿಳೆ – ಗಂಡನೇ ಕೊಲೆ ಮಾಡಿ ಹೆಣ ತಂದು ಬಿಸಾಡಿರುವ ಶಂಕೆ

    – ಬೆಂಗಳೂರಿನಲ್ಲಿ ಮಹಿಳೆಯ ಬರ್ಬರ ಹತ್ಯೆ ಕೇಸ್‌ಗೆ ಟ್ವಿಸ್ಟ್‌

    ಬೆಂಗಳೂರು: ಸಿಲಿಕಾನ್ ಸಿಟಿ ಮಂದಿ ಮತ್ತೆ ಬೆಚ್ಚಿ ಬಿದ್ದಿದ್ದಾರೆ. ಚೆನ್ನಮ್ಮನಕೆರೆ ಅಚ್ಚುಕಟ್ಟು ಪೊಲೀಸ್‌ ಠಾಣಾ (Chennamanakere Police Station) ವಾಪ್ತಿಯಲ್ಲಿ ಮಹಿಳೆಯೋಬ್ಬರನ್ನ ಬರ್ಬರವಾಗಿ ಹತ್ಯೆ ಮಾಡಲಾಗಿದ್ದು, ಮಹಿಳೆಯನ್ನು ಕೊಲೆ ಮಾಡಿದ ಮೂಟೆ ಕಟ್ಟಿ ಕಸದ ಲಾರಿಯಲ್ಲಿಡಲಾಗಿದೆ. ತಡರಾತ್ರಿ ಆಟೋದಲ್ಲಿ ಬಂದ ಹಂತಕರು ಬಿಬಿಎಂಪಿ ಲಾರಿಯಲ್ಲಿ (BBMP garbage truck) ಶವದ ಮೂಟೆ ಎಸೆದು ಎಸ್ಕೇಪ್ ಆಗಿದ್ದಾರೆ. ಸುಮಾರು 30-40 ವಯಸ್ಸಿನ ಮಹಿಳೆಯ ಮೃತದೇಹ ಇದಾಗಿದ್ದು. ಅತ್ಯಾಚಾರ ಎಸಗಿ ಕೊಲೆ ಮಾಡಿರುವ ಶಂಕೆ ವ್ಯಕ್ತವಾಗಿದೆ.

    ಈ ಸಂಬಂಧ ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ತನಿಖೆ ನಡೆಸುತ್ತಿದ್ದು, ಮಹಿಳೆಯ ಗುರುತು ಪತ್ತೆ ಮಾಡಿದ್ದಾರೆ. ಕೊಲೆಯಾದ ಮಹಿಳೆ ಹುಳಿಮಾವು ನಿವಾಸಿ ಪುಷ್ಪಾ @ ಆಶಾ ಎಂದು ಗುರುತಿಸಲಾಗಿದೆ. ಈಕೆ ಅನ್ಯಕೋಮಿನ ವ್ಯಕ್ತಿಯನ್ನ ಪ್ರೀತಿಸಿ ಮದ್ವೆಯಾಗಿದ್ದರು. ಇದೀಗ ಗಂಡನೇ ಕೊಲೆ ಮಾಡಿ, ಬಳಿಕ ಸಿ.ಕೆ ಅಚ್ಚುಕಟ್ಟು ಪ್ರದೇಶದಲ್ಲಿ ಮೃತದೇಹವನ್ನ ತಂದು ಬಿಸಾಡಿರುವ ಶಂಕೆ ವ್ಯಕ್ತವಾಗಿದೆ. ಅಲ್ಲದೇ, ಶವ ಸಾಗಾಟಕ್ಕೆ ದ್ವಿಚಕ್ರ ವಾಹನ ಬಳಕೆ ಮಾಡಿರೋದು ಗೊತ್ತಾಗಿದೆ. ಈ ಹಿನ್ನೆಲೆಯಲ್ಲಿ ಆರೋಪಿಗೆ ಪತ್ತೆಗೆ ಪೊಲೀಸರು ಬಲೆ ಬೀಸಿದ್ದಾರೆ. ಇದನ್ನೂ ಓದಿ: ಬೆಂಗಳೂರಲ್ಲಿ ಭಯಾನಕ ಹತ್ಯೆ – ಮಹಿಳೆಯ ಕೊಲೆ ಮಾಡಿ ಮೂಟೆಕಟ್ಟಿ ಕಸದ ಲಾರಿಯಲ್ಲಿಟ್ಟು ಎಸ್ಕೇಪ್!

    ಬಿಬಿಎಂಪಿ ಕಸದ ಲಾರಿಯಲ್ಲಿತ್ತು ಮೃತದೇಹ
    ರಾತ್ರಿ 1.40ಕ್ಕೆ ಕಸ ಹಾಕಲು ಬಂದಿದ್ದ ಸ್ಥಳೀಯ ವ್ಯಕ್ತಿ ಚೀಲ ಬಿಚ್ಚಿದಾಗ ಮೊದಲಿಗೆ ಕೂದಲು ಕಂಡಿದೆ. ಬಳಿಕ ಮೃತದೇಹ ಇರೋದು ಗೊತ್ತಾಗಿದೆ. ತಕ್ಷಣ ಆ ವ್ಯಕ್ತಿ ಪೊಲೀಸರಿಗೆ ಮಾಹಿತಿ ನೀಡಿದ್ದಾನೆ. ಪೊಲೀಸರು ಬಂದಾಗ ಮಹಿಳೆ ಕೊಲೆ ವಿಚಾರ ಬಯಲಾಗಿದೆ. ಇದನ್ನೂ ಓದಿ: ಆಸ್ತಿ ಇದ್ರೂ ಮದುವೆಯಾಗಿಲ್ಲ ಎಂದ ವಿಡಿಯೋ ವೈರಲ್‌ – 18 ಎಕರೆ ಆಸ್ತಿಗಾಗಿ ಎಂಟ್ರಿ ಕೊಟ್ಟ ಕಿಲ್ಲರ್‌ ಬ್ಯೂಟಿ!

    ಇನ್ನು ಸ್ಥಳಕ್ಕೆ ಆಗಮಿಸಿದ ಸಿಕೆ ಅಚ್ಚುಕಟ್ಟು ಪೊಲೀಸರು ಸ್ಥಳೀಯ ನೀಡಿದ ದೂರಿನ ಆಧಾರದಲ್ಲಿ ಎಫ್‌ಐಆರ್ ದಾಖಲಿಸಿಕೊಂಡಿದ್ದಾರೆ. ಸಿಸಿಟಿವಿ ಆಧಾರದ ಮೇಲೆ ಕೊಲೆ ಹಂತಕರಿಗಾಗಿ 2 ತಂಡಗಳ ರಚಿಸಿ ಶೋಧ ನಡೆಸುತ್ತಿದ್ದಾರೆ. ಸದ್ಯ ಮೃತದೇಹವನ್ನ ಮರಣೋತ್ತರ ಪರೀಕ್ಷೆಗೆ ರವಾನಿಸಲಾಗಿದೆ.

    ಒಟ್ಟಾರೆ.. ಮಹಿಳೆಯನ್ನು ಬೇರೆಡೆ ಹತ್ಯೆ ಮಾಡಿ ಇಲ್ಲಿಗೆ ಮೃತದೇಹ ಎಸೆಯಲಾಯ್ತಾ ಅಥವಾ ಅತ್ಯಾಚಾರ ಎಸಗಿ ಹತ್ಯೆ ಮಾಡಲಾಯ್ತಾ ಎಂಬ ಬಗ್ಗೆ ಪೊಲೀಸರು ತನಿಖೆ ಚುರುಕುಗೊಳಿಸಿದ್ದಾರೆ. ಇದನ್ನೂ ಓದಿ: Chikkamagaluru | ವಸತಿ ಶಾಲೆಯ ಹಾಸ್ಟೆಲ್‌ನಲ್ಲಿ ವಿದ್ಯಾರ್ಥಿನಿ ನೇಣಿಗೆ ಶರಣು

  • ಬೆಂಗಳೂರಲ್ಲಿ ಭಯಾನಕ ಹತ್ಯೆ – ಮಹಿಳೆಯ ಕೊಲೆ ಮಾಡಿ ಮೂಟೆಕಟ್ಟಿ ಕಸದ ಲಾರಿಯಲ್ಲಿಟ್ಟು ಎಸ್ಕೇಪ್!

    ಬೆಂಗಳೂರಲ್ಲಿ ಭಯಾನಕ ಹತ್ಯೆ – ಮಹಿಳೆಯ ಕೊಲೆ ಮಾಡಿ ಮೂಟೆಕಟ್ಟಿ ಕಸದ ಲಾರಿಯಲ್ಲಿಟ್ಟು ಎಸ್ಕೇಪ್!

    – ಅತ್ಯಾಚಾರ ಶಂಕೆ, ಹಂತಕರಿಗಾಗಿ ಹುಡುಕಾಟ

    ಬೆಂಗಳೂರು: ನಗರದಲ್ಲಿ ಮಹಿಳೆಯ (woman) ಭಯಾನಕ ಹತ್ಯೆ ನಡೆದಿದ್ದು, ಜನರನ್ನು ಬೆಚ್ಚಿ ಬೀಳುವಂತೆ ಮಾಡಿದೆ. ಮಹಿಳೆಯನ್ನ ಕೊಲೆಗೈದು ಮೂಟೆಕಟ್ಟಿ ಕಸದ ಲಾರಿಯಲ್ಲಿಟ್ಟು ದುಷ್ಕರ್ಮಿಗಳು ಎಸ್ಕೇಪ್​ ಆಗಿರುವಂತಹ ಘಟನೆ ಚನ್ನಮ್ಮನಕೆರೆ ಠಾಣಾ (Chennamanakere Police Station) ವ್ಯಾಪ್ತಿಯ ಸ್ಕೇಟಿಂಗ್ ಗ್ರೌಂಡ್ ಬಳಿ ನಡೆದಿದೆ. ಮಹಿಳೆಯ ಮೇಲೆ ಅತ್ಯಾಚಾರವೆಸಗಿ ಕೊಲೆ ಮಾಡಿರುವ ಶಂಕೆಯೂ ವ್ಯಕ್ತವಾಗಿದ್ದು, ಪ್ರಕರಣ ದಾಖಲಾಗಿದೆ.

    ನಿನ್ನೆ‌ ತಡರಾತ್ರಿ ಆಟೋದಲ್ಲಿ ಮಹಿಳೆ ಶವ ತಂದಿದ್ದ ದುಷ್ಕರ್ಮಿ, ಮೈದಾನದ ಬಳಿ ನಿಲ್ಲಿಸಿದ್ದ ಕಸದ ಲಾರಿಯಲ್ಲಿಟ್ಟು ಪರಾರಿ ಆಗಿದ್ದಾನೆ. ಆಟೋದಲ್ಲಿ ಒಬ್ಬನೇ ವ್ಯಕ್ತಿ ಬಂದಿದ್ದ ಎಂದು ಹೇಳಲಾಗುತ್ತಿದೆ. 30 ರಿಂದ 35 ವರ್ಷದ ಮಹಿಳೆ ಗುರುತು ಪತ್ತೆಗಾಗಿ ಪೊಲೀಸರಿಂದ ತನಿಖೆ ನಡೆದಿದ್ದು, ಅಪರಿಚಿತ ಮಹಿಳೆ ಶವ (Women Dead Body) ಮರಣೋತ್ತರ ಪರೀಕ್ಷೆಗಾಗಿ ಆಸ್ಪತ್ರೆಗೆ ಸ್ಥಳಾಂತರಿಸಲಾಗಿದೆ. ಇದನ್ನೂ ಓದಿ: ನಕಲಿ ಬ್ರಾಂಡೆಡ್ ಜೀನ್ಸ್ ತಯಾರಿಕಾ ಅಡ್ಡೆ ಮೇಲೆ ಪೊಲೀಸ್ ದಾಳಿ – 30 ಲಕ್ಷಕ್ಕೂ ಅಧಿಕ ಮೌಲ್ಯದ ಜೀನ್ಸ್ ಸೀಜ್

    ಈ ಸಂಬಂಧ ಪ್ರಕರಣ ದಾಖಲಿಸಿಕೊಂಡಿರುವ ಚನ್ನಮ್ಮನಕರೆ ಅಚ್ಚುಕಟ್ಟು ಠಾಣೆಯ ಪೊಲೀಸರು (Chennamanakere Achukattu Police Station) ಕೊಲೆ ಹಂತಕರಿಗಾಗಿ ಹುಡುಕಾಟ ನಡೆಸುತ್ತಿದ್ದು, ಸಿಸಿಟಿವಿ ದೃಶ್ಯಾವಳಿಗಳನ್ನು ಪರಿಶೀಲಿಸಲಾಗುತ್ತಿದೆ. ಇದನ್ನೂ ಓದಿ: Tumakuru | ಟೈಯರ್ ಬ್ಲಾಸ್ಟ್ ಆಗಿ ಮನೆಗೆ ನುಗ್ಗಿದ KSRTC ಬಸ್

    ಪ್ರಕರಣ ಬೆಳಕಿಗೆ ಬಂದಿದ್ದು ಹೇಗೆ?
    ನಿನ್ನೆ (ಶನಿವಾರ) ತಡರಾತ್ರಿ 1:40ರ ವೇಳೆಗೆ ವ್ಯಕ್ತಿಯೊಬ್ಬರು ಕಸ ಹಾಕಲು ಸ್ಕೇಟಿಂಗ್ ಗ್ರೌಂಡ್ (Skating Ground) ಬಳಿ ಬಂದಿದ್ದರು. ಈ ವೇಳೆ ಕಸದ ಗುಡ್ಡೆಯಲ್ಲಿದ್ದ ಚೀಲವೊಂದರಲ್ಲಿ ತಲೆಕೂದಲು ಕಾಣಿಸಿದೆ. ಚೀಲ ಬಿಚ್ಚಿ ನೋಡಿದಾಗ ಯುವತಿಯ ದೇಹ ಚೀಲದಲ್ಲಿರುವುದು ಗೊತ್ತಾಗಿದೆ. ತಕ್ಷಣವೇ ಮಾಹಿತಿ ನೀಡಿದ್ದು, ಪೊಲೀಸರು ಘಟನಾ ಸ್ಥಳಕ್ಕೆ ಬಂದು ಪರಿಶೀಲಿಸಿದ್ದಾರೆ. ರಸ್ತೆಯ ಇಕ್ಕೆಲಗಳಲ್ಲಿದ್ದ ಸಿಸಿಟಿವಿ ದೃಶ್ಯಗಳನ್ನ ಪರಿಶೀಲಿಸಿದ್ದಾರೆ. ಈ ವೇಳೆ ಒಬ್ಬನೇ ವ್ಯಕ್ತಿ ಆಟೋದಲ್ಲಿ ಮೂಟೆ ಸಮೇತ ತಂದು ಬಿಸಾಡಿ ಹೋಗಿರುವುದು ಗೊತ್ತಾಗಿದೆ. ಸದ್ಯ ಪೊಲೀಸರು ಮೃತಪಟ್ಟಿರೋದು 25-30ನೇ ವಯಸ್ಸಿನ ಯುವತಿ ಅಂತ ಅಂದಾಜಿಸಿದ್ದಾರೆ.

    ಮೃತ ಯುವತಿ ಅರ್ಬನ್ ಕಂಪನಿ ಟಿ ಶರ್ಟ್ ಪ್ಯಾಂಟ್ ಧರಿಸಿರುವುದು ಕಂಡುಬಂದಿದೆ. ಯುವತಿ ದೇಹದ ಮೇಲೆ ಒಳ ಉಡುಪುಗಳು ಇರಲಿಲ್ಲವಾದ್ದರಿಂದ ಅತ್ಯಾಚಾರ ಎಸಗಿ ಕೊಲೆ ಮಾಡಿರುವ ಶಂಕೆ ವ್ಯಕ್ತವಾಗಿದೆ. ಹಂತಕನಿಗಾಗಿ ಪೊಲೀಸರು ಹುಡುಕಾಟ ನಡೆಸಿದ್ದಾರೆ. ಇದನ್ನೂ ಓದಿ: 5 ಹುಲಿಕೊಂದ ಹಂತಕರು ಲಾಕ್ – ಕೊನೆಗೂ ಹೊರಬಂತು ರಹಸ್ಯ, 3 ಆರೋಪಿಗಳಿಗೆ ನ್ಯಾಯಾಂಗ ಬಂಧನ

  • ಬೆಂಗಳೂರಲ್ಲಿ ಮಹಿಳೆ ಭೀಕರ ಹತ್ಯೆ; ಅಶ್ರಫ್‌ ಸೇರಿ ನಾಲ್ವರ ಮೇಲೆ ಕುಟುಂಬಸ್ಥರ ಅನುಮಾನ

    ಬೆಂಗಳೂರಲ್ಲಿ ಮಹಿಳೆ ಭೀಕರ ಹತ್ಯೆ; ಅಶ್ರಫ್‌ ಸೇರಿ ನಾಲ್ವರ ಮೇಲೆ ಕುಟುಂಬಸ್ಥರ ಅನುಮಾನ

    – ಅಶ್ರಫ್‌ ಬಗ್ಗೆ ಮಹಾಲಕ್ಷ್ಮಿ ಪತಿ ಹೇಳಿದ್ದೇನು?

    ಬೆಂಗಳೂರು: ಮಲ್ಲೇಶ್ವರದ ವೈಯಾಲಿಕಾವಲ್‌ನಲ್ಲಿ ಮಹಿಳೆಯ ಭೀಕರ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಅಶ್ರಫ್‌ ಸೇರಿದಂತೆ ನಾಲ್ವರ ಮೇಲೆ ಕೊಲೆಯಾದ ಮಹಿಳೆ ಕುಟುಂಬಸ್ಥರು ಅನುಮಾನ ವ್ಯಕ್ತಪಡಿಸಿದ್ದಾರೆ.

    ಅಶ್ರಫ್‌, ಮುಕ್ತ, ಶಶಿಧರ್, ಸುನೀಲ್ ನಾಲ್ವರ ಹೆಸರನ್ನು ಕೊಲೆಯಾದ ಮಹಿಳೆ ಕುಟುಂಬಸ್ಥರು ಹೇಳಿದ್ದಾರೆ. ಮುಕ್ತ, ಶಶಿಧರ್‌, ಸುನೀಲ್ ಮೂವರು ಮೃತ ಮಹಾಲಕ್ಷ್ಮಿ ಸಹೋದ್ಯೋಗಿಗಳು.‌ ಕೆಲಸ ಮಾಡುವ ಕಡೆಯಲ್ಲಿ ಮಹಾಲಕ್ಷ್ಮಿ ಜಗಳ ಮಾಡಿಕೊಂಡಿದ್ದಳು. ಇದನ್ನೂ ಓದಿ: ದೇಹವನ್ನ ಪೀಸ್‌ ಪೀಸ್‌ ಮಾಡಿ ತರಕಾರಿ ಜೋಡಿಸಿದಂತೆ ಫ್ರಿಡ್ಜ್‌ನಲ್ಲಿ ತುಂಬಿಟ್ಟಿದ್ದ ಹಂತಕ; ಕ್ರೂರತೆಗೆ ಕೊನೆ ಇಲ್ವಾ?

    ಮಹಾಲಕ್ಷ್ಮಿ ಜೊತೆ ಅಶ್ರಫ್‌ ಸಲುಗೆಯಿಂದ ಇದ್ದ. ಈತ ಉತ್ತರಾಖಂಡ ಮೂಲದವ. ಸಲೂನ್ ಒಂದರಲ್ಲಿ ಕೆಲಸ ಮಾಡಿಕೊಂಡಿದ್ದ. ಈಗ ಮಹಾಲಕ್ಷ್ಮಿ ಕುಟುಂಬಸ್ಥರು ನಾಲ್ವರ ಮೇಲೆ ಅನುಮಾನ ಇದೆ ಎಂದಿದ್ದಾರೆ.

    ಮೃತ ಮಹಾಲಕ್ಷ್ಮಿ ಪತಿ ಹೇಳಿದ್ದೇನು?
    ಮಹಾಲಕ್ಷ್ಮಿ ಮತ್ತು ನಾನು ಮದುವೆಯಾಗಿ 6 ವರ್ಷ ಆಗಿತ್ತು. ನಾನು ಮೊಬೈಲ್‌ ಶಾಪ್‌ ಇಟ್ಟುಕೊಂಡಿದ್ದೇನೆ. 9 ತಿಂಗಳ ಹಿಂದಷ್ಟೇ ಇಬ್ಬರೂ ಬೇರೆ ಬೇರೆಯಾಗಿದ್ದೆವು. ಮೊನ್ನೆ ಮಹಾಲಕ್ಷ್ಮಿ ಇದ್ದ ಮನೆ ಮಾಲೀಕರು ಕರೆ ಮಾಡಿ, ಮನೆಯಲ್ಲಿ ವಾಸನೆ ಬರುತ್ತಿದೆ ಎಂದು ಹೇಳಿದ್ದರು. ಬಂದು ನೋಡಿದಾಗ ದೇಹವನ್ನು ಪೀಸ್‌ ಪೀಸ್‌ ಮಾಡಿ ಫ್ರಿಡ್ಜ್‌ನಲ್ಲಿಟ್ಟಿರುವುದು ಗೊತ್ತಾಗಿದೆ. ಇದನ್ನೂ ಓದಿ: Bengaluru | ಹೇಗೆ ನಡೆಯುತ್ತೆ ಭೀಕರ ಕೊಲೆಯ ಮರಣೋತ್ತರ ಪರೀಕ್ಷೆ?

    ಅಶ್ರಫ್‌ ಎಂಬಾತನ ಮೇಲೆ ಅನುಮಾನ ಇದೆ. ಅವನ ವಿರುದ್ಧ ನಾನು ನೆಲಮಂಗಲದಲ್ಲಿ ದೂರು ಕೊಟ್ಟಿದ್ದೇನೆ. ಆತನೊಂದಿಗೆ ಮಹಾಲಕ್ಷ್ಮಿ ಸ್ನೇಹ ಹೊಂದಿದ್ದಳು. ನಾನು ಎಲ್ಲವನ್ನೂ ಪತ್ತೆಹಚ್ಚಿದ್ದೆ. ಅಶ್ರಫ್‌ ವಿಚಾರವಾಗಿ ಈಗ ನನಗೆ ಹೆಚ್ಚಿನ ಮಾಹಿತಿ ಗೊತ್ತಿಲ್ಲ.

    ಮಹಾಲಕ್ಷ್ಮಿ ಮತ್ತು ನನಗೆ ಒಬ್ಬಳು ಹೆಣ್ಣುಮಗಳಿದ್ದಾಳೆ. ಮಗಳು ಈಗ ನನ್ನ ಜೊತೆಯಲ್ಲೇ ಇದ್ದಾಳೆ. ತಿಂಗಳಿಗೊಮ್ಮೆ ಮಗಳನ್ನು ನೋಡಲು ಮಹಾಲಕ್ಷ್ಮಿ ನನ್ನ ಮೊಬೈಲ್‌ ಶಾಪ್‌ಗೆ ಬರುತ್ತಿದ್ದಳು. ಹತ್ಯೆಗೂ ಮುನ್ನ ಕೊನೆಯದಾಗಿ 25 ದಿನಗಳ ಹಿಂದೆ ಬಂದಿದ್ದಳು ಎಂದು ಮಹಾಲಕ್ಷ್ಮಿ ಪತಿ ಮಾಹಿತಿ ನೀಡಿದ್ದಾರೆ. ಇದನ್ನೂ ಓದಿ: ಬೆಂಗಳೂರಿನಲ್ಲಿ ಮಹಿಳೆ ಕಗ್ಗೊಲೆ; ದೇಹವನ್ನು ಪೀಸ್ ಪೀಸ್ ಮಾಡಿ ಫ್ರಿಡ್ಜ್‌ನಲ್ಲಿ ಇಟ್ಟಿದ್ಯಾಕೆ ಹಂತಕ?

  • ಮಹಿಳೆಗೆ ಗುಂಡಿಕ್ಕಿ ಕೊಲೆ ಮಾಡಿದ್ದ ಬಿಜೆಪಿ ಪುರಸಭೆ ಸದಸ್ಯ ಅರೆಸ್ಟ್

    ಮಹಿಳೆಗೆ ಗುಂಡಿಕ್ಕಿ ಕೊಲೆ ಮಾಡಿದ್ದ ಬಿಜೆಪಿ ಪುರಸಭೆ ಸದಸ್ಯ ಅರೆಸ್ಟ್

    ಚಿಕ್ಕೋಡಿ: ಬೆಳಗಾವಿ ಜಿಲ್ಲೆಯ ಹುಕ್ಕೇರಿ ತಾಲೂಕಿನ ಸಂಕೇಶ್ವರ ಪಟ್ಟಣದಲ್ಲಿ ನಡೆದಿದ್ದ ಮಹಿಳೆಯ ಶೂಟೌಟ್ ಪ್ರಕರಣವನ್ನು ಸಂಕೇಶ್ವರ ಪೊಲೀಸರು ಭೇದಿಸಿದ್ದು, ಶೂಟೌಟ್ ನಡೆಸಿ ಮಹಿಳೆಯನ್ನು ಕೊಲೆ ಮಾಡಿದ್ದ ಬಿಜೆಪಿ ಪುರಸಭೆ ಸದಸ್ಯನನ್ನು ಪೊಲೀಸರು ಬಂಧಿಸಿದ್ದಾರೆ.

    ಸಂಕೇಶ್ವರ ವಾರ್ಡ್ ನಂಬರ್ 14ರ ಬಿಜೆಪಿ ಪುರಸಭೆ ಸದಸ್ಯ ಉಮೇಶ್ ಕಾಂಬಳೆ ಎಂಬಾತನನ್ನು ಸಂಕೇಶ್ವರ ಪೊಲೀಸರು ಬಂಧಿಸಿದ್ದಾರೆ. ಕಳೆದ ಜ.16ರಂದು ನಾಡ ಪಿಸ್ತೂಲ್‍ನಿಂದ ಶೈಲಾ ನಿರಂಜನ್ ಸುಭೇದಾರ್(56) ಮಹಿಳೆಯ ಎದೆಗೆ ಹಾಗೂ ಕೈಗೆ ಗುಂಡಿಕ್ಕಿ ಕೊಲೆ ಮಾಡಲಾಗಿತ್ತು.

    POLICE JEEP

    ಪ್ರಕರಣದ ಬೆನ್ನತ್ತಿದ್ದ ಸಂಕೇಶ್ವರ ಪಿಎಸ್‍ಐ ಗಣಪತಿ ಕೊಂಗನೊಳ್ಳಿ ಹಾಗೂ ಸಿಪಿಐ ರಮೇಶ್ ಛಾಯಾಗೋಳ, ಹವಾಲ್ದಾರ್ ಭೀಮಪ್ಪ ನಾಗನೂರೆ, ಬಸವರಾಜ ಕಪರಟ್ಟಿ ಅವರ ತಂಡ ಎಲ್ಲಾ ಆಯಾಮಗಳಲ್ಲಿ ತನಿಖೆ ನಡೆಸಿ ಆರೋಪಿಯನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಇದನ್ನೂ ಓದಿ: ಜನರಿಗೆ ತೊಂದ್ರೆ ಕೊಡೋದ್ರಿಂದ ಸರ್ಕಾರಕ್ಕೆ ಲಾಭವೂ, ಇಲ್ಲ ನಷ್ಟವೂ ಇಲ್ಲ: ಸುಧಾಕರ್

    ಲೇವಾದೇವಿ ವ್ಯವಹಾರ ಮಾಡುತ್ತಿದ್ದ ಮಹಿಳೆಯಿಂದ 25 ಲಕ್ಷ ರೂ. ಹಣವನ್ನು ಉಮೇಶ ಕಾಂಬಳೆ ಪಡೆದಿದ್ದ. ಬಡ್ಡಿ ಸಮೇತ ಹಣ ಹಿಂದಿರಿಗಿಸಲು ಮಹಿಳೆ ಪೀಡಿಸುತ್ತಿದ್ದ ಕಾರಣ ಮಹಾರಾಷ್ಟ್ರದ ಸಾಂಗ್ಲಿಯಿಂದ ಪಿಸ್ತೂಲ್‍ನ್ನು ತಂದು ಕೊಲೆ ಮಾಡಿದ್ದಾರೆ. ಇದನ್ನೂ ಓದಿ: ಮಂಡ್ಯದಲ್ಲಿ ಜ.31ರ ವರೆಗೆ ಟಫ್ ರೂಲ್ಸ್ ಜಾರಿ

    ಇನ್ನೂ ಇಬ್ಬರು ಆರೋಪಿಗಳು ತಲೆ ಮರೆಸಿಕೊಂಡಿದ್ದು, ಪೊಲೀಸರಿಂದ ಶೋಧ ಕಾರ್ಯ ಮುಂದುವರಿದಿದೆ. ಸಂಕೇಶ್ವರ ಪೊಲೀಸರ ಕಾರ್ಯಾಚರಣೆಗೆ ಬೆಳಗಾವಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಲಕ್ಷ್ಮಣ್ ನಿಂಬರಗಿ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ಸಂಕೇಶ್ವರ ಪೊಲೀಸ್ ಠಾಣೆಯಲ್ಲಿ ಈ ಕುರಿತು ಪ್ರಕರಣ ದಾಖಲಾಗಿದೆ.

  • ಮಗನ ಬರ್ತ್‌ಡೇ ಪಾರ್ಟಿ ವೇಳೆ ಹಾರಿಸಿದ ಗುಂಡು ತಗುಲಿ ತಾಯಿ ಸಾವು

    ಮಗನ ಬರ್ತ್‌ಡೇ ಪಾರ್ಟಿ ವೇಳೆ ಹಾರಿಸಿದ ಗುಂಡು ತಗುಲಿ ತಾಯಿ ಸಾವು

    ಲಕ್ನೋ: ಪುತ್ರನ ಬರ್ತ್‌ಡೇ ಸಂಭ್ರಮಾಚರಣೆ ವೇಳೆ ಹಾರಿಸಿದ ಗುಂಡು ತಗುಲಿ ತಾಯಿ ಮೃತಪಟ್ಟಿರುವ ಘಟನೆ ಉತ್ತರ ಪ್ರದೇಶದ ಲಖಿಂಪುರ ಖೇರಿಯಲ್ಲಿ ನಡೆದಿದೆ.

    ಅನಿತಾ ವರ್ಮಾ ಮೃತಪಟ್ಟ ಮಹಿಳೆ. ಬುಧವಾರ ರಾತ್ರಿ ಮೂರು ವರ್ಷದ ತಮ್ಮ ಪುತ್ರನ ಹುಟ್ಟುಹಬ್ಬವನ್ನು ಸಂಭ್ರಮದಿಂದ ಆಚರಿಸುತ್ತಿದ್ದರು. ಈ ವೇಳೆ ಸಂಭ್ರಮಕ್ಕಾಗಿ ಹಾರಿಸಿದ ಗುಂಡು ಮಹಿಳೆಗೆ ತಗುಲಿದೆ. ಗಂಭೀರವಾಗಿ ಗಾಯಗೊಂಡಿದ್ದ ಅವರನ್ನು ಆಸ್ಪತ್ರೆಗೆ ದಾಖಲಿಸುವಷ್ಟರಲ್ಲಿ ಕೊನೆಯುಸಿರೆಳೆದಿದ್ದಾರೆ. ಇದನ್ನೂ ಓದಿ: ಪಂಜಾಬ್‍ನ ಲೂಧಿಯಾನ ನ್ಯಾಯಾಲಯದಲ್ಲಿ ಸ್ಫೋಟ – 2 ಸಾವು, 4 ಮಂದಿಗೆ ಗಾಯ

    ಅನಿತಾ ಅವರು ಪ್ರದೀಪ್‌ ವರ್ಮಾ ಎಂಬವರನ್ನು ವಿವಾಹವಾಗಿದ್ದರು. ಅವರಿಗೆ ಇಬ್ಬರು ಮಕ್ಕಳಿದ್ದಾರೆ. ಮಗನ ಹುಟ್ಟುಹಬ್ಬ ಸಂಭ್ರಮಕ್ಕೆ 100 ಕ್ಕೂ ಹೆಚ್ಚು ಅತಿಥಿಗಳನ್ನು ಆಹ್ವಾನಿಸಿದ್ದರು. ಅನಿತಾ ಕುಟುಂಬಕ್ಕೆ ಹತ್ತಿರದವರೇ ಆಗಿದ್ದ ಜೈರಾಮ್‌ ವರ್ಮಾ ಪಾರ್ಟಿ ವೇಳೆ ಕುಡಿದ ಮತ್ತಿನಲ್ಲಿದ್ದರು. ಸಂಭ್ರಮಕ್ಕೆ ಜೈರಾಮ್‌ ಹಾರಿಸಿದ ಗುಂಡು ಅನಿತಾಗೆ ತಗುಲಿ ಮೃತಪಟ್ಟಿದ್ದಾರೆ.

    ಪ್ರಕರಣಕ್ಕೆ ಸಂಬಂಧಿಸಿದಂತೆ ಜೈರಾಮ್‌ ವರ್ಮಾನನ್ನು ಪೊಲೀಸರು ಬಂಧಿಸಿದ್ದಾರೆ. ಇದನ್ನೂ ಓದಿ: ಅತ್ಯಾಚಾರ ಆರೋಪಿಯನ್ನು ಬಚಾವ್ ಮಾಡಲು ಖತರ್ನಾಕ್ ಪ್ಲಾನ್ ಮಾಡಿದ್ದ ತಂದೆ ಅರೆಸ್ಟ್!