Tag: Women PSI

  • DSP‌ ಮಾದರಿಯಲ್ಲೇ ಮಹಿಳಾ PSI ಹತ್ಯೆ?- ತಪಾಸಣೆಗೆ ಮುಂದಾದ ಅಧಿಕಾರಿಗೆ ವಾಹನ ಡಿಕ್ಕಿ ಹೊಡೆದು ಸಾವು

    DSP‌ ಮಾದರಿಯಲ್ಲೇ ಮಹಿಳಾ PSI ಹತ್ಯೆ?- ತಪಾಸಣೆಗೆ ಮುಂದಾದ ಅಧಿಕಾರಿಗೆ ವಾಹನ ಡಿಕ್ಕಿ ಹೊಡೆದು ಸಾವು

    ರಾಂಚಿ: ಅಕ್ರಮ ಕಲ್ಲು ಗಣಿಗಾರಿಕೆ ತಡೆಯಲು ಮುಂದಾದ ಡಿಎಸ್‌ಪಿ ಮೇಲೆ ಟ್ರಕ್‌ ಹರಿಸಿ ಬರ್ಬರವಾಗಿ ಹತ್ಯೆ ಮಾಡಿದ ಘಟನೆ ನಡೆದ ಬೆನ್ನಲ್ಲೇ, ಜಾರ್ಖಂಡ್‌ನಲ್ಲಿ ತಪಾಸಣೆಗೆ ಮುಂದಾದ ಮಹಿಳಾ ಪೊಲೀಸ್ ಸಬ್‌ ಇನ್‌ಸ್ಪೆಕ್ಟರ್‌ಗೆ ವಾಹನದಿಂದ ಡಿಕ್ಕಿ ಹೊಡೆದು ಹತ್ಯೆ ಮಾಡಿರುವ ಘಟನೆ ಬೆಳಕಿಗೆ ಬಂದಿದೆ.

    ಕಳೆದ ರಾತ್ರಿ ವಾಹನ ತಪಾಸಣೆ ವೇಳೆ ಸಂಧ್ಯಾ ಟೋಪ್ನೋ ಹೆಸರಿನ ಮಹಿಳಾ‌ ಪೊಲೀಸ್ ಸಬ್ ಇನ್ಸ್‌ಪೆಕ್ಟರ್ ಅವರನ್ನು ಹತ್ಯೆ ಮಾಡಲಾಗಿದ್ದು, ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ. ಸಂಧ್ಯಾ ಅವರನ್ನು ತೂಪುದಾನ ಪೊಲೀಸ್ ಠಾಣೆಯ ಉಸ್ತುವಾರಿಯಾಗಿ ನಿಯೋಜಿಸಲಾಗಿತ್ತು. ಇದನ್ನೂ ಓದಿ: ಅಕ್ರಮ ಗಣಿಗಾರಿಕೆ- ತಡೆಯಲು ಹೋದ DSP ಮೇಲೆ ಟ್ರಕ್ ಹರಿಸಿ ಬರ್ಬರ ಹತ್ಯೆ

    ವಾಹನವೊಂದರಲ್ಲಿ ಜಾನುವಾರುಗಳನ್ನು ಸಾಗಿಸಲಾಗುತ್ತಿತ್ತು. ಖಚಿತ ಮಾಹಿತಿ ಮೇರೆಗೆ ವಾಹನ ತಪಾಸಣೆಗೆ ಎಸ್‌ಐ ಸಂಧ್ಯಾ ಅವರು ಮುಂದಾಗಿದ್ದಾರೆ. ಈ ವೇಳೆ ವಾಹನ ನಿಲ್ಲಿಸದೆ ಚಾಲಕ, ಅಧಿಕಾರಿಗೆ ಡಿಕ್ಕಿ ಹೊಡೆದು ಪರಾರಿಯಾಗಿದ್ದ. ಅಧಿಕಾರಿಯನ್ನು ಆಸ್ಪತ್ರೆಗೆ ದಾಖಲಿಸುವಷ್ಟರಲ್ಲಿ ಮೃತಪಟ್ಟಿದ್ದರು ಎಂದು ರಾಂಚಿ ಹಿರಿಯ ಸೂಪರಿಂಟೆಂಡೆಂಟ್‌ ಪೊಲೀಸ್‌ ತಿಳಿಸಿದ್ದಾರೆ.

    ಆರೋಪಿಯನ್ನು ಬಂಧಿಸಲಾಗಿದ್ದು, ವಾಹನವನ್ನು ವಶಕ್ಕೆ ಪಡೆಯಲಾಗಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಹೆಚ್ಚಿನ ತನಿಖೆ ನಡೆಸಲಾಗುತ್ತಿದೆ ಎಂದು ಅಧಿಕಾರಿ ಮಾಹಿತಿ ನೀಡಿದ್ದಾರೆ. ಇದನ್ನೂ ಓದಿ: ವಾಣಿಜ್ಯ ಕ್ಷೇತ್ರದ ಉದ್ಯೋಗಿಗಳಿಗೆ ಗುಡ್‌ನ್ಯೂಸ್: ವರ್ಕ್ ಫ್ರಂ ಹೋಮ್ – ಹೊಸ ನಿಯಮ ಹೇಳೋದೇನು ಗಮನಿಸಿ

    ಅಕ್ರಮವಾಗಿ ನಡೆಯುತ್ತಿದ್ದ ಕಲ್ಲು ಗಣಿಗಾರಿಕೆಯನ್ನು ತಡೆಯಲು ಹೋದ ಹಿರಿಯ ಪೊಲೀಸ್ ಅಧಿಕಾರಿಯೊಬ್ಬರ ಮೇಲೆ ಕಲ್ಲು ತುಂಬಿದ ಟ್ರಕ್ ಹರಿಸಿ ಬರ್ಬರ ಹತ್ಯೆ ಮಾಡಿದ ಘಟನೆ ಹರಿಯಾಣದಲ್ಲಿ ನಡೆದಿತ್ತು. ಈ ಘಟನೆ ಬೆನ್ನಲ್ಲೇ ಮತ್ತೊಬ್ಬರು ಅಧಿಕಾರಿಯನ್ನು ಹತ್ಯೆ ಮಾಡಿರುವ ಘಟನೆ ನಡೆದಿದೆ.

    Live Tv
    [brid partner=56869869 player=32851 video=960834 autoplay=true]

  • ಅತ್ಯಾಚಾರಿ ಆರೋಪಿ ಬಳಿ 35 ಲಕ್ಷ ಲಂಚ ಕೇಳಿ ಸಿಕ್ಕಿಬಿದ್ದ ಲೇಡಿ ಪಿಎಸ್‍ಐ

    ಅತ್ಯಾಚಾರಿ ಆರೋಪಿ ಬಳಿ 35 ಲಕ್ಷ ಲಂಚ ಕೇಳಿ ಸಿಕ್ಕಿಬಿದ್ದ ಲೇಡಿ ಪಿಎಸ್‍ಐ

    ಅಹಮದಾಬಾದ್: ಅತ್ಯಾಚಾರಿ ಆರೋಪಿಯ ಬಳಿ ಲಂಚ ಕೇಳಿ ಮಹಿಳಾ ಪಿಎಸ್‍ಐ ಸಿಕ್ಕಿ ಬಿದ್ದಿರುವ ಘಟನೆ ಗುಜರಾತ್‍ನ ಅಹಮದಾಬಾದ್‍ನಲ್ಲಿ ನಡೆದಿದೆ.

    ಪಶ್ಚಿಮ ಅಹಮದಾಬಾದ್‍ನ ಮಹಿಳಾ ಪೊಲೀಸ್ ಠಾಣೆಯಲ್ಲಿ ಪೊಲೀಸ್ ಸಬ್ ಇನ್ಸ್‍ಪೆಕ್ಟರ್ ಆಗಿ ಕಾರ್ಯನಿರ್ವಹಿಸುತ್ತಿರುವ ಶ್ವೇತಾ ಜಡೇಜಾ ಲಂಚ ಕೇಳಿ ಸಿಕ್ಕಿಬಿದ್ದ ಪೊಲೀಸ್ ಅಧಿಕಾರಿ. ಆರೋಪಿಯ ವಿರುದ್ಧ ಸಾಮಾಜಿಕ ವಿರೋಧಿ ಚಟುವಟಿಕೆಗಳ ತಡೆ (ಪಿಎಎಸ್‍ಎ) ಕಾಯ್ದೆ ಆಡಿ ಪ್ರಕರಣ ದಾಖಲು ಮಾಡದೇ ಇರಲು ಶ್ವೇತಾ 35 ಲಕ್ಷ ಲಂಚಕ್ಕೆ ಬೇಡಿಕೆ ಇಟ್ಟಿದ್ದಾರೆ.

    ಆರೋಪಿ ಕೆನಾಲ್ ಶಾ 2019ರಲ್ಲಿ ಅತ್ಯಾಚಾರ ಮಾಡಿದ್ದ, ಈ ಪ್ರಕರಣವನ್ನು ಶ್ವೇತಾ ಜಡೇಜಾ ಅವರು ವಿಚಾರಣೆ ಮಾಡುತ್ತಿದ್ದರು. ಈ ವೇಳೆ ಪಿಎಎಸ್‍ಎ ಕಾಯ್ದೆ ಅಡಿಯಲ್ಲಿ ಪ್ರಕರಣ ದಾಖಲಿಸದೇ ಇರಲು ಆರೋಪಿ ಕೆನಾಲ್ ಶಾನ ಸಹೋದರನ ಬಳಿ 35 ಲಕ್ಷ ಹಣಕ್ಕೆ ಬೇಡಿಕೆ ಇಟ್ಟಿದ್ದಾರೆ. ಪಿಎಎಸ್‍ಎ ಕಾಯ್ದೆ ಅಡಿ ಪ್ರಕರಣ ದಾಖಲಿಸದೇ ಆರೋಪಿಯನ್ನು ಪೊಲೀಸರು ಜಿಲ್ಲಾ ಕಾರಾಗೃಹದಿಂದ ಬೇರೆ ಜೈಲಿಗೆ ಸ್ಥಳಾಂತರಿಸುವುದನ್ನು ತಡೆಯಲು ಶ್ವೇತಾ ಮುಂದಾಗಿದ್ದರು ಎನ್ನಲಾಗಿದೆ.

    ಪೊಲೀಸರು ನ್ಯಾಯಾಲಯಕ್ಕೆ ಸಲ್ಲಿಸಿರುವ ದಾಖಲೆಯ ಪ್ರಕಾರ, ಪೊಲೀಸ್ ಅಧಿಕಾರಿ ಶ್ವೇತಾ ಜಡೇಜಾ ಅವರು, ಆರೋಪಿ ಕಡೆಯ ಮಧ್ಯವರ್ತಿಯ ಬಳಿ ಈಗಾಗಲೇ 20 ಲಕ್ಷ ಹಣವನ್ನು ಪಡೆದುಕೊಂಡಿದ್ದಾರೆ. ಆದರೆ ಇದಾದ ನಂತರ ಹೆಚ್ಚುವರಿಯಾಗಿ ಇನ್ನೂ 15 ಲಕ್ಷ ಹಣವನ್ನು ನೀಡುವಂತೆ ಬೇಡಿಕೆ ಇಟ್ಟಿದ್ದಾರೆ. ಈಗಾಗಲೇ 20 ಲಕ್ಷ ಪಡೆದು ಮತ್ತೆ 15 ಲಕ್ಷಕ್ಕೆ ಪೀಡಿಸುತ್ತಿದ್ದ ಕಾರಣ, ಆರೋಪಿ ಮಹಿಳಾ ಅಧಿಕಾರಿ ವಿರುದ್ಧ ದೂರು ನೀಡಿದ್ದಾನೆ.

    ಆರೋಪಿ ನೀಡಿದ ದೂರಿನ ಆಧಾರದ ಮೇಲೆ ಶ್ವೇತಾ ಜಡೇಜಾರನ್ನು ಪೊಲೀಸರು ಬಂಧಿಸಿದ್ದು, ಸೆಷನ್ಸ್ ನ್ಯಾಯಾಲಯದ ಮುಂದೆ ನಿಲ್ಲಿಸಿದ್ದಾರೆ. ಈ ವೇಳೆ ವಿಚಾರಣೆ ಮಾಡಿದ ನ್ಯಾಯಾಲಯ ಪೊಲೀಸ್ ಅಧಿಕಾರಿನ್ನು ಏಳು ದಿನಗಳ ಕಾಲ ಪೊಲೀಸ್ ಕಸ್ಟಡಿಗೆ ಒಪ್ಪಿಸಿದೆ.