Tag: Women Reservation

  • ಬಿಹಾರ ಚುನಾವಣೆಗೆ ನಿತೀಶ್ ಸಜ್ಜು – ಬಿಹಾರದ ಮಹಿಳೆಯರಿಗೆ ಉದ್ಯೋಗದಲ್ಲಿ 35% ಮೀಸಲಾತಿ ಘೋಷಣೆ

    ಬಿಹಾರ ಚುನಾವಣೆಗೆ ನಿತೀಶ್ ಸಜ್ಜು – ಬಿಹಾರದ ಮಹಿಳೆಯರಿಗೆ ಉದ್ಯೋಗದಲ್ಲಿ 35% ಮೀಸಲಾತಿ ಘೋಷಣೆ

    ಪಾಟ್ನಾ: ಬಿಹಾರ ಚುನಾವಣೆಗೆ ಸಿಎಂ ನಿತೀಶ್‌ ಕುಮಾರ್‌ (Nitish Kumar) ಸಜ್ಜಾಗಿದ್ದಾರೆ. ಬಿಹಾರ ಮಹಿಳೆಯರಿಗೆ ಉದ್ಯೋಗದಲ್ಲಿ 35% ಮೀಸಲಾತಿ ಘೋಷಣೆ ಮಾಡಿದ್ದಾರೆ.

    ರಾಜ್ಯ ಸರ್ಕಾರಿ ಉದ್ಯೋಗಗಳಲ್ಲಿ ಈ ಮೀಸಲಾತಿ ಕಲ್ಪಿಸಲಾಗುವುದು. ಎಲ್ಲಾ ವರ್ಗದ ಮಹಿಳೆಯರಿಗೂ ಸೌಲಭ್ಯ ಸಿಗಲಿದೆ. ಆದರೆ, ಅವರು ಬಿಹಾರದ (Bihar) ಖಾಯಂ ನಿವಾಸಿಗಳಾಗಿರಬೇಕು ಎಂದು ಎಕ್ಸ್‌ ಖಾತೆಯಲ್ಲಿ ಸಿಎಂ ಸ್ಪಷ್ಟಪಡಿಸಿದ್ದಾರೆ. ಇದನ್ನೂ ಓದಿ: ಬಿಜೆಪಿ ನಾಯಕ ಗೋಪಾಲ್ ಖೇಮ್ಕಾ ಹತ್ಯೆ – ಪ್ರಮುಖ ಆರೋಪಿ ಎನ್‌ಕೌಂಟರ್‌ಗೆ ಬಲಿ

    ಆಡಳಿತದಲ್ಲಿ ಮಹಿಳೆಯರ ಪ್ರಾತಿನಿಧ್ಯ ಹೆಚ್ಚಾಗಬೇಕು ಎಂಬ ಉದ್ದೇಶದಿಂದ ಈ ನಿರ್ಧಾರ ಕೈಗೊಳ್ಳಲಾಗಿದೆ ಎಂದು ಸಿಎಂ ತಿಳಿಸಿದ್ದಾರೆ. ಪಾಟ್ನಾದಲ್ಲಿ ಮುಖ್ಯಮಂತ್ರಿ ಅಧ್ಯಕ್ಷತೆಯಲ್ಲಿ ನಡೆದ ಸಚಿವ ಸಂಪುಟ ಸಭೆಯ ನಂತರ ಈ ಘೋಷಣೆ ಹೊರಬಿದ್ದಿದೆ.

    ಮೀಸಲಾತಿಯ ಜೊತೆಗೆ, ಬಿಹಾರ ಸರ್ಕಾರವು ರಾಜ್ಯದ ಯುವಜನರ ಅಗತ್ಯತೆಗಳು ಮತ್ತು ಆಕಾಂಕ್ಷೆಗಳನ್ನು ಪೂರೈಸುವ ಗುರಿಯನ್ನು ಹೊಂದಿರುವ ಬಿಹಾರ ಯುವ ಆಯೋಗ ಎಂಬ ಹೊಸ ಶಾಸನಬದ್ಧ ಸಂಸ್ಥೆಯ ರಚನೆಗೆ ಅನುಮೋದನೆ ನೀಡಿತು. ಇದನ್ನೂ ಓದಿ: ಬಿಹಾರ ಮತದಾರರ ಪಟ್ಟಿ ನವೀಕರಣ: ಜುಲೈ 10 ರಂದು ವಿಚಾರಣೆಗೆ ಸುಪ್ರೀಂ ಕೋರ್ಟ್ ಸಮ್ಮತಿ

    ಬಿಹಾರದ ಯುವಕರಿಗೆ ಹೆಚ್ಚಿನ ಉದ್ಯೋಗಾವಕಾಶಗಳನ್ನು ಒದಗಿಸಲು, ಅವರಿಗೆ ತರಬೇತಿ ನೀಡಲು ಮತ್ತು ಅವರನ್ನು ಸಬಲೀಕರಣಗೊಳಿಸಲು, ಸಮರ್ಥರನ್ನಾಗಿ ಮಾಡಲು, ಸರ್ಕಾರ ಬಿಹಾರ ಯುವ ಆಯೋಗವನ್ನು ರಚಿಸಲು ನಿರ್ಧರಿಸಿದೆ. ಇಂದು ಇದಕ್ಕೆ ಸಂಪುಟ ಅನುಮೋದನೆ ನೀಡಿದೆ ಎಂದು ನಿತೀಶ್ ಕುಮಾರ್ ತಿಳಿಸಿದ್ದಾರೆ.

    ಆಯೋಗವು ಯುವ ಕಲ್ಯಾಣ, ಶಿಕ್ಷಣ, ಉದ್ಯೋಗ ಮತ್ತು ನೀತಿ ಸುಧಾರಣೆಗಳ ಕುರಿತು ಸರ್ಕಾರಕ್ಕೆ ಸಲಹೆ ನೀಡುತ್ತದೆ. ಕೌಶಲ್ಯ ಅಭಿವೃದ್ಧಿಯನ್ನು ಖಚಿತಪಡಿಸಿಕೊಳ್ಳಲು ಮತ್ತು ಬಿಹಾರದೊಳಗೆ ಖಾಸಗಿ ವಲಯದ ಉದ್ಯೋಗಗಳಲ್ಲಿ ಸ್ಥಳೀಯ ಯುವಕರಿಗೆ ಆದ್ಯತೆ ಸಿಗುವಂತೆ ಮೇಲ್ವಿಚಾರಣೆ ಮಾಡಲು ಇದು ಇಲಾಖೆಗಳೊಂದಿಗೆ ಕೆಲಸ ಮಾಡುತ್ತದೆ. ಇದು ಹೊರಗೆ ಅಧ್ಯಯನ ಮಾಡುತ್ತಿರುವ ಅಥವಾ ಉದ್ಯೋಗದಲ್ಲಿರುವ ರಾಜ್ಯದ ವಿದ್ಯಾರ್ಥಿಗಳು ಮತ್ತು ಕಾರ್ಮಿಕರ ಹಿತಾಸಕ್ತಿಯನ್ನು ಕಾಪಾಡುತ್ತದೆ.

  • ಲೋಕಸಭೆಯಲ್ಲಿ ಮಹಿಳಾ ಮೀಸಲಾತಿ ಮಸೂದೆ ಪಾಸ್‌ – ಇಬ್ಬರಿಂದ ಮಾತ್ರ ವಿರೋಧ

    ಲೋಕಸಭೆಯಲ್ಲಿ ಮಹಿಳಾ ಮೀಸಲಾತಿ ಮಸೂದೆ ಪಾಸ್‌ – ಇಬ್ಬರಿಂದ ಮಾತ್ರ ವಿರೋಧ

    ನವದೆಹಲಿ: ಕೇಂದ್ರ ಸರ್ಕಾರ ಮಂಡಿಸಿದ್ದ ನಾರಿಶಕ್ತಿ ವಂದನ್‌ ಅಧಿನಿಯಮಕ್ಕೆ (Nari Shakti Vandan Adhiniyam) ಲೋಕಸಭೆ (Lok Sabaha) ಅನುಮೋದನೆ ನೀಡಿದೆ. ದಿನವಿಡಿ ಈ ಬಗ್ಗೆ ಸುದೀರ್ಘ ಚರ್ಚೆ ನಡೆದ ಬಳಿಕ ಲೋಕಸಭೆ ಮತ್ತು ವಿಧಾನಸಭಾ ಚುನಾವಣೆಯಲ್ಲಿ ಮಹಿಳೆಯರಿಗೆ 33% ಮೀಸಲಾತಿ (33% women reservation) ನೀಡುವ ಮಸೂದೆ ಪರ 454 ಮಂದಿ ಪರ ಮತದಾನ ಮಾಡಿದರೆ ಇಬ್ಬರು ವಿರೋಧಿಸಿದರು.

    ಅಸಾದುದ್ದೀನ್ ಒವೈಸಿ ನೇತೃತ್ವದ ಆಲ್ ಇಂಡಿಯಾ ಮಜ್ಲಿಸ್-ಇ-ಇಥೇಹಾದುಲ್ ಮುಸಲ್ಮಿನ್ (AIMIM) ಪಕ್ಷದ ಇಬ್ಬರು ಸಂಸದರು ವಿರೋಧ ವ್ಯಕ್ತಪಡಿಸಿದರು. 454 ಸಂಸದರು ಮಹಿಳಾ ಮೀಸಲಾತಿ ಪರ ಮತ ಚಲಾಯಿಸಿದ ಕಾರಣ ಈ ಐತಿಹಾಸಿಕ ಮಸೂದೆ ಲೋಕಸಭೆಯಲ್ಲಿ ಧ್ವನಿಮತದ ಮೂಲಕ ಸುಲಭವಾಗಿ ಅನುಮೋದನೆ ಸಿಕ್ಕಿತು.

    ಬೆಳಗ್ಗೆ ಎಐಸಿಸಿ ನಾಯಕಿ ಸೋನಿಯಾ ಗಾಂಧಿ (Sonia Gandhi) ಚರ್ಚೆ ಶುರು ಮಾಡಿದರು. ಇದು ರಾಜೀವ್‌ಗಾಂಧಿ ಕನಸು. ಈಗ ನನಸಾಗುತ್ತಿದೆ ಎನ್ನುವ ಮೂಲಕ ಕ್ರೆಡಿಟ್ ತೆಗೆದುಕೊಳ್ಳಲು ನೋಡಿದರು. ಈ ವಿಧೇಯಕದಲ್ಲಿ ಒಬಿಸಿ ಮಹಿಳೆಯರಿಗೂ ಒಳಮೀಸಲಾತಿ ನೀಡಬೇಕು. ಅಲ್ಲದೇ ಈ ಮೀಸಲಾತಿಯನ್ನು ಜಾರಿಗೆ ತರಲು ತಕ್ಷಣ ಜಾತಿಗಣತಿ ನಡೆಸಬೇಕು ಎಂದು ಕೇಂದ್ರವನ್ನು ಸೋನಿಯಾ ಗಾಂಧಿ ಆಗ್ರಹಿಸಿದರು. ಇದನ್ನೂ ಓದಿ: ಸಂವಿಧಾನ ಪೀಠಿಕೆಯಲ್ಲಿ ಸಮಾಜವಾದಿ, ಜಾತ್ಯಾತೀತ ಪದಗಳೇ ಮಾಯ – ಕೇಂದ್ರ ಹಂಚಿದ ಪ್ರತಿಗಳು ಸೃಷ್ಟಿಸಿವೆ ಸಂಚಲನ

    ಇದು ರಾಜೀವ್ ಕನಸು ಎಂಬ ಸೋನಿಯಾ ಮಾತಿಗೆ ಅಮಿತ್ ಶಾ ಸೇರಿ ಬಿಜೆಪಿಗರು ಆಕ್ಷೇಪಿಸಿದರು. ಒಬಿಸಿ ಕೋಟಾಗೆ ರಾಹುಲ್ ಗಾಂಧಿ ಕೂಡ ಪಟ್ಟು ಹಿಡಿದರು. ಮಸೂದೆಗೆ ನಮ್ಮ ಬೆಂಬಲವಿದೆ. ಆದರೆ ಓಬಿಸಿ ಮಹಿಳೆಯರಿಗೆ ಮೀಸಲಾತಿ ಕಲ್ಪಿಸದಿದ್ದರೆ ಈ ಬಿಲ್ ಅಪೂರ್ಣ ಎಂದು ವ್ಯಾಖ್ಯಾನಿಸಿದರು. ಕೇಂದ್ರ ಸರ್ಕಾರದ 90 ಕಾರ್ಯದರ್ಶಿಗಳಲ್ಲಿ ಮೂವರು ಮಾತ್ರ ಒಬಿಸಿಗಳಿದ್ದಾರೆ ಎಂಬುದನ್ನು ರಾಹುಲ್ ನೆನಪಿಸಿದ್ರು.

    ಮಹಿಳಾ ಮೀಸಲಾತಿ ಜಾರಿಯನ್ನು ಡಿಲಿಮಿಟೇಷನ್ ಜೊತೆ ಏಕೆ ತಳಕು ಹಾಕ್ತಿದ್ದೀರಿ ಎಂದು ಡಿಎಂಕೆಯ ಕನಿಮೋಳಿ ಪ್ರಶ್ನಿಸಿದ್ರು. ಈ ವಿಧೇಯಕವನ್ನು ಜೆಡಿಯು ಬೆಂಬಲಿಸುತ್ತಲೇ, ಇದು ಸಾರ್ವತ್ರಿಕ ಚುನಾವಣೆ ಸಲುವಾಗಿ ಕೇಂದ್ರ ಮಾಡ್ತಿರುವ ಗಿಮಿಕ್ ಎಂದು ಟೀಕಿಸಿತು.

    ಮಹಿಳಾ ಮೀಸಲಾತಿಯಲ್ಲಿ ಒಬಿಸಿಗಳಿಗೆ ಕೋಟಾ ಇರಬೇಕು ಎಂದು ಎನ್‌ಸಿಪಿಯ ಸುಪ್ರಿಯಾ ಸುಳೆ ಒತ್ತಾಯಿಸಿದರು. ರಾಜ್ಯಸಭೆಗೂ ಈ ಮೀಸಲಾತಿ ಅನ್ವಯಿಸಬೇಕು ಎಂಬ ಬೇಡಿಕೆಯನ್ನು ಸಮಾಜವಾದಿ ಪಕ್ಷದ ಡಿಂಪಲ್ ಯಾದವ್ ಇಟ್ಟರು.

    2024ರ ಚುನಾವಣೆಯಲ್ಲೇ ಮೀಸಲಾತಿ ಜಾರಿ ಮಾಡಿ ಮೋದಿ ತಾಕತ್ ತೋರಿಸಬೇಕು ಎಂದು ಟಿಎಂಸಿ ಮಹುವಾ ಮೋಯಿತ್ರಾ ಸವಾಲ್ ಹಾಕಿದರು. ಅಕಾಲಿದಳ ಇದನ್ನು ಜುಮ್ಲಾ ಎಂದು ಕರೆಯಿತು. ಇದು ಮುಸ್ಲಿಮ್ ಮಹಿಳಾ ವಿರೋಧಿ ಬಿಲ್ ಎಂದು ಓವೈಸಿ ವ್ಯಾಖ್ಯಾನಿಸಿದರು.

    2029ಕ್ಕೆ ಮಹಿಳಾ ಮೀಸಲಾತಿ ಜಾರಿ ಆಗುತ್ತೆ ಅನ್ನೋದಾದ್ರೆ, ಇದಕ್ಕೆ ಇಷ್ಟು ತರಾತುರಿಯಲ್ಲಿ ವಿಶೇಷ ಅಧಿವೇಶನ ಏಕೆ ಕರೆಯಬೇಕಿತ್ತು ಎಂದು ಕೇಂದ್ರವನ್ನು ಆರ್‌ಎಸ್‌ಪಿಯ ಪ್ರೇಮಚಂದ್ರನ್ ತರಾಟೆಗೆ ತಗೊಂಡರು.

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ಮಹಿಳಾ ಮೀಸಲಾತಿಯನ್ನ ಕಾಂಗ್ರೆಸ್ ಸ್ವಾಗತ ಮಾಡುತ್ತದೆ: ದಿನೇಶ್ ಗುಂಡೂರಾವ್

    ಮಹಿಳಾ ಮೀಸಲಾತಿಯನ್ನ ಕಾಂಗ್ರೆಸ್ ಸ್ವಾಗತ ಮಾಡುತ್ತದೆ: ದಿನೇಶ್ ಗುಂಡೂರಾವ್

    ಬೆಂಗಳೂರು: ಶಾಸನ ಸಭೆಗಳಲ್ಲಿ ಮಹಿಳೆಯರಿಗೆ 33% ಮೀಸಲಾತಿ ಕೊಡುವ ಬಿಲ್ ಮಂಡನೆ ಮಾಡಿರೋ ಕೇಂದ್ರ ಸರ್ಕಾರದ ನಿಲುವನ್ನ ಸ್ವಾಗತ ಮಾಡೋದಾಗಿ ಸಚಿವ ದಿನೇಶ್ ಗುಂಡೂರಾವ್ ತಿಳಿಸಿದ್ದಾರೆ.

    ಮಹಿಳಾ ಮೀಸಲಾತಿ ಬಗ್ಗೆ ವಿಕಾಸಸೌಧದಲ್ಲಿ ಮಾತನಾಡಿದ ಅವರು, ಮಹಿಳಾ ಮೀಸಲಾತಿಯನ್ನ ಕಾಂಗ್ರೆಸ್ ಸ್ವಾಗತ ಮಾಡುತ್ತದೆ. ಮಹಿಳಾ ಮೀಸಲಾತಿ ತರಲು ಕಾಂಗ್ರೆಸ್ ಬಹಳ ಪ್ರಯತ್ನ ಮಾಡಿತ್ತು. ಹೀಗಾಗಿ ನಮ್ಮ ಸಂಪೂರ್ಣ ಬೆಂಬಲ ಬಿಲ್‍ಗೆ ಇದೆ ಎಂದರು.

    ಪಂಚಾಯ್ತಿ ಲೆವೆಲ್ ನಲ್ಲಿ ನಾವು ಮಹಿಳೆಯರಿಗೆ 50% ಮೀಸಲಾತಿ ಜಾರಿ ಮಾಡಿದ್ವಿ. ಅಂದು ರಾಜ್ಯಸಭೆಯಲ್ಲಿ ಮಹಿಳಾ ಮೀಸಲಾತಿ ಬಿಲ್ ಪಾಸ್ ಆಗಿತ್ತು. ರಾಜಕೀಯ ಒತ್ತಡದಿಂದ ಲೋಕಸಭೆಯಲ್ಲಿ ಪಾಸ್ ಆಗಿರಲಿಲ್ಲ. ಈಗ ಮಂಡನೆ ಆಗಿರೋದು ಸ್ವಾಗತ ಅಂದರು. ಇದನ್ನೂ ಓದಿ: ಮಹಿಳಾ ಮೀಸಲಾತಿ ಮಸೂದೆ ನಮ್ಮದು: ಸೋನಿಯಾ ಗಾಂಧಿ

    9 ವರ್ಷ ಆದ ಮೇಲೆ ಮೋದಿ ಅವರು ಮಸೂದೆ ಜಾರಿ ಮಾಡ್ತಿದ್ದಾರೆ. ಮೊದಲ ಅವಧಿಯಲ್ಲೆ ಮೋದಿ ಅವರು ಬಿಲ್ ಜಾರಿ ಮಾಡಬಹುದಿತ್ತು. ಪೂರ್ಣ ಬಹುಮತ ಇದ್ದರು ಇದನ್ನ ಮಾಡಿರಲಿಲ್ಲ.ಈಗ ರಾಜಕೀಯ ಲಾಭ ತೆಗೆದುಕೊಳ್ಳಲು ಮಾಡ್ತಿದ್ದಾರೆ ಅನ್ನಿಸುತ್ತದೆ.ಆದರು ನಾವು ಮಹಿಳಾ ಮೀಸಲಾತಿಯನ್ನ ಸ್ವಾಗತ ಮಾಡ್ತೀವಿ.ಕಾಂಗ್ರೆಸ್ ಕೂಡಾ ಇದಕ್ಕೆ ಬೆಂಬಲ ಕೊಡುತ್ತದೆ.ಕೇಂದ್ರದ ನಿರ್ಧಾರವನ್ನ ಸ್ವಾಗತ ಮಾಡ್ತೀವಿ ಎಂದರು.

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ಪ್ರಧಾನಿ ಮೋದಿಗೆ ಪತ್ರ ಬರೆದ ಮಾಜಿ ಪಿಎಂ ದೇವೇಗೌಡ

    ಪ್ರಧಾನಿ ಮೋದಿಗೆ ಪತ್ರ ಬರೆದ ಮಾಜಿ ಪಿಎಂ ದೇವೇಗೌಡ

    ಬೆಂಗಳೂರು: ಮಹಿಳಾ ಮೀಸಲು ಮಸೂದೆಯನ್ನು ಜಾರಿಗೆ ತರಬೇಕು ಎಂದು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಮಾಜಿ ಪ್ರಧಾನಿ ಹೆಚ್‌.ಡಿ.ದೇವೇಗೌಡ ಅವರು ಪತ್ರ ಬರೆದು ಒತ್ತಾಯಿಸಿದ್ದಾರೆ.

    ಪ್ರಧಾನಿ ಪತ್ರ ಬರೆದಿರುವ ಬಗ್ಗೆ ಟ್ವೀಟ್‌ ಮಾಡಿರುವ ದೇವೇಗೌಡರು, ಮಹಿಳಾ ಮೀಸಲಾತಿ ವಿಧೇಯಕವನ್ನು ಸಂಸತ್‌ನಲ್ಲಿ ಮತ್ತೆ ಮಂಡಿಸಲು ಪರಿಗಣಿಸುವಂತೆ ನಾನು ಇತ್ತೀಚೆಗೆ ಪ್ರಧಾನಿಗೆ ಪತ್ರ ಬರೆದಿದ್ದೆ. ನಾನು 1996 ರಲ್ಲಿ ಇದನ್ನು ಮೊದಲು ಕೈಗೆತ್ತಿಕೊಂಡಿದ್ದೆ. ನಾವು ಶೀಘ್ರದಲ್ಲೇ ಹೊಸ ಸಂಸತ್ತಿನ ಕಟ್ಟಡಕ್ಕೆ ತೆರಳಿದಾಗ ಇದು ಮೊದಲ ಉತ್ತಮ ಕೆಲಸವಾಗಬೇಕಿದೆ ಎಂದು ಆಶಯ ವ್ಯಕ್ತಪಡಿಸಿದ್ದಾರೆ.

    ಪತ್ರದಲ್ಲೇನಿದೆ?
    ಈಚೆಗೆ ಕರ್ನಾಟಕ ವಿಧಾನಸಭಾ ಚುನಾವಣೆ ಘೋಷಣೆಯಾಗಿದ್ದು, ರಾಜ್ಯದಲ್ಲಿ ಮಹಿಳಾ ಮತದಾರರ ಸಂಖ್ಯೆಯನ್ನು ಚುನಾವಣಾ ಆಯೋಗ ಬಿಡುಗಡೆ ಮಾಡಿದೆ. ಒಟ್ಟು ಮತದಾರರ ಪೈಕಿ ಮಹಿಳಾ ಮತದಾರರ ಸಂಖ್ಯೆ ಶೇ.50ಕ್ಕೆ ಹತ್ತಿರದಲ್ಲಿದೆ. ದೇಶದ ಇತರ ರಾಜ್ಯಗಳಲ್ಲೂ ಮಹಿಳಾ ಮತದಾರರ ಸಂಖ್ಯೆ ಪುರುಷರಿಗೆ ಸಮಾನವಾಗಿಯೇ ಇದೆ. ಈ ಬೆಳವಣಿಗೆಯು ಲೋಕಸಭೆ ಮತ್ತು ವಿಧಾನಸಭೆಯಲ್ಲಿ ಮಹಿಳೆಯರಿಗೆ ಮೀಸಲಾತಿ ಕಲ್ಪಿಸಬೇಕು ಎಂಬುದನ್ನು ಮತ್ತೆ ಪ್ರತಿಪಾದಿಸುವಂತೆ ಮಾಡಿದೆ.

    ಲೋಕಸಭೆ ಹಾಗೂ ವಿಧಾನಸಭೆಯಲ್ಲಿ ಮಹಿಳೆಯರಿಗೆ ಮೀಸಲಾತಿ ಕಲ್ಪಿಸಲು ನಾನು 1996ರಲ್ಲಿ ಪ್ರಧಾನಿಯಾದ ಸಂದರ್ಭದಲ್ಲಿ ಮಸೂದೆಯನ್ನು ಮಂಡನೆ ಮಾಡಿದ್ದೆ. ಈ ಮಹಿಳಾ ಮೀಸಲಾತಿ ಮಸೂದೆಯನ್ನು ಜಾರಿ ಮಾಡಲು ಪ್ರಧಾನಿ ಅವರು ಪ್ರಮಾಣಿಕವಾಗಿ ಪ್ರಯತ್ನ ಮಾಡಬೇಕು ಎಂದು ಮನವಿ ಮಾಡಿದ್ದಾರೆ.

    2024ರ ಲೋಕಸಭಾ ಚುನಾವಣೆಗೂ ಮುನ್ನ ಮಹಿಳಾ ಮೀಸಲಾತಿ ಮಸೂದೆಯನ್ನು ಜಾರಿಗೊಳಿಸಬೇಕು ಎಂದು ನಾನು ನಿಮ್ಮಲ್ಲಿ ಒತ್ತಾಯಿಸುತ್ತೇನೆ ಎಂದು ಪತ್ರದಲ್ಲಿ ತಿಳಿಸಿದ್ದಾರೆ.