Tag: women techiee

  • ಪತಿಯ ಅನೈತಿಕ ಸಂಬಂಧದಿಂದ ಬೇಸತ್ತು ಮಹಿಳಾ ಟೆಕ್ಕಿ ಆತ್ಮಹತ್ಯೆ

    ಪತಿಯ ಅನೈತಿಕ ಸಂಬಂಧದಿಂದ ಬೇಸತ್ತು ಮಹಿಳಾ ಟೆಕ್ಕಿ ಆತ್ಮಹತ್ಯೆ

    ಹೈದರಾಬಾದ್: ಪತಿಯ ಅನೈತಿಕ ಸಂಬಂಧದಿಂದ ಬೇಸತ್ತು ಮಹಿಳಾ ಟೆಕ್ಕಿ ಆತ್ಮಹತ್ಯೆ ಮಾಡಿಕೊಂಡ ಘಟನೆ ತೆಲಂಗಾಣದ ಹೈದರಾಬಾದ್‌ನಲ್ಲಿ ನಡೆದಿದೆ.

    ಪಾವನಿ ಆತ್ಮಹತ್ಯೆ ಮಾಡಿಕೊಂಡ ಮಹಿಳೆ. ಪಾವನಿ ನಗರದ ಐಟಿ ಕಂಪೆನಿಯೊಂದರಲ್ಲಿ ಕೆಲಸ ಮಾಡುತ್ತಿದ್ದಳು. ಪಾವನಿ ಕಳೆದ ಐದು ವರ್ಷಗಳ ಹಿಂದೆ ಸುಕೀತ್ ಎಂಬಾತನನ್ನು ಮದುವೆ ಆಗಿದ್ದಳು. ಮದುವೆಯಾದ ನಂತರ ಸುಕೀತ್ ಹಾಗೂ ಪಾವನಿ ಅಂಬರ್‌ಪೇಟ್‌ನಲ್ಲಿ ವಾಸಿಸುತ್ತಿದ್ದರು.

    ಅಂಬರ್‌ಪೇಟ್ ಪೊಲೀಸರ ಪ್ರಕಾರ, ಸುಕೀತ್ ತನ್ನ ಪತ್ನಿ ಪಾವನಿಗೆ ಯಾವಾಗಲೂ ವರದಕ್ಷಿಣೆ ತರುವಂತೆ ಕಿರುಕುಳ ನೀಡುತ್ತಿದ್ದನು. ಅಲ್ಲದೆ ಆಕೆಯ ಮೇಲೆ ಹಲ್ಲೆ ಕೂಡ ಮಾಡುತ್ತಿದ್ದನು. ಕೆಲವು ತಿಂಗಳಿನಿಂದ ಸುಕೀತ್ ಬೇರೆ ಮಹಿಳೆ ಜೊತೆ ಅನೈತಿಕ ಸಂಬಂಧ ಹೊಂದಿದ್ದನು.

    ಪತಿ ಅನೈತಿಕ ಸಂಬಂಧ ವಿಷಯ ತಿಳಿದ ಪಾವನಿ ಖಿನ್ನತೆಕ್ಕೊಳಗಾಗಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ಈ ವಿಷಯ ತಿಳಿಯುತ್ತಿದ್ದಂತೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಅಲ್ಲದೆ ಮರಣೋತ್ತರ ಪರೀಕ್ಷೆಗಾಗಿ ಮೃತದೇಹವನ್ನು ಉಸ್ಮಾನಿಯಾ ಆಸ್ಪತ್ರೆಗೆ ರವಾನಿಸಲಾಗಿದೆ.

    ಸದ್ಯ ಪೊಲೀಸರು ಪತಿ ಸುಕೀತ್ ವಿರುದ್ಧ ಪ್ರಕರಣ ದಾಖಲಿಸಿಕೊಂಡಿದ್ದಾರೆ. ಅಲ್ಲದೆ ಆರೋಪಿ ಪತಿಗಾಗಿ ಹುಡುಕಾಟ ನಡೆಸುತ್ತಿದ್ದಾರೆ.