ಹೈದರಾಬಾದ್: ತಮ್ಮ ಒಳ ಉಡುಪುಗಳಲ್ಲಿ ಸುಮಾರು 1.72 ಕೋಟಿ ಮೌಲ್ಯದ ಚಿನ್ನ (Gold) ಸಾಗಿಸುತ್ತಿದ್ದ ಮೂವರು ಮಹಿಳೆಯರು (Womens) ಹಾಗೂ ಇಬ್ಬರು ಪುರುಷರನ್ನು ಹೈದರಾಬಾದ್ ಕಸ್ಟಮ್ಸ್ ಅಧಿಕಾರಿಗಳು (Customs Officers) ಬಂಧಿಸಿದ್ದಾರೆ.
ದುಬೈನಿಂದ ಬಂದ ಮಹಿಳೆಯರಿಬ್ಬರು ತಮ್ಮ ಒಳಉಡುಪು ಹಾಗೂ ಹೇರ್‌ಬ್ಯಾಂಡ್‌ಗಳಲ್ಲಿ ಬಚ್ಚಿಟ್ಟು ಸಾಗಿಸುತ್ತಿದ್ದ 3.283 ಕೆಜಿ ಚಿನ್ನವನ್ನು ಹೈದರಾಬಾದ್ (Hyderabad) ಕಸ್ಟಮ್ಸ್ ಅಧಿಕಾರಿಗಳು ವಶಕ್ಕೆ ಪಡೆದಿದ್ದಾರೆ. ಇದರ ಒಟ್ಟು ಮೌಲ್ಯ 1.75 ಕೋಟಿ ಮೌಲ್ಯ ಎಂದು ಅಂದಾಜಿಸಲಾಗಿದೆ. ಮತ್ತೊಂದು ಪ್ರಕರಣದಲ್ಲಿ J9-403 ವಿಮಾನದಲ್ಲಿ ಕುವೈತ್‌ನಿಂದ ಚಿನ್ನ ಸಾಗಿಸುತ್ತಿದ್ದ ಇಬ್ಬರು ಪುರುಷರನ್ನು ಬಂಧಿಸಿದ್ದು, ಅವರಿಂದ 855 ಗ್ರಾಂ ಚಿನ್ನವನ್ನು ವಶಪಡಿಸಿಕೊಳ್ಳಲಾಗಿದೆ. ಖಚಿತ ಮಾಹಿತಿ ಮೇರೆಗೆ ತೀವ್ರ ತಪಾಸಣೆ ನಡೆಸಿದ ಕಸ್ಟಮ್ಸ್ ಅಧಿಕಾರಿಗಳು ಐವರನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಇದನ್ನೂ ಓದಿ: ರಸ್ತೆ ಅಪಘಾತದಲ್ಲಿ ಗಂಭೀರ ಗಾಯಗೊಂಡಿದ್ದ ಗೃಹಿಣಿ ಸಾವು
ಮಾಹಿತಿ ಪ್ರಕಾರ, ದುಬೈನಿಂದ ಬಂದ ಮಹಿಳಾ ಪ್ರಯಾಣಿಕರು ತಮ್ಮ ಹೇರ್‌ಬ್ಯಾಂಡ್ ನಲ್ಲಿ 234 ಗ್ರಾಂ ಚಿನ್ನ ಬಚ್ಚಿಟ್ಟಿದ್ದರು. ಅವರ ಲಗೇಜ್ ತಪಾಸಣೆಗೆ ಒಳಪಡಿಸಿದಾಗ ತಮ್ಮ ಒಳಉಡುಪಿನಲ್ಲೂ ಚಿನ್ನವನ್ನು ಬಚ್ಚಿಟ್ಟಿರುವುದು ಬೆಳಕಿಗೆ ಬಂದಿದೆ. ಇದನ್ನೂ ಓದಿ: `ಗಂಧದಗುಡಿ’ ಪ್ರೀ ರಿಲೀಸ್ ಇವೆಂಟ್‌ಗೆ ಭರ್ಜರಿ ತಯಾರಿ
ಹೈದರಾಬಾದ್‌ನ ರಾಜೀವ್ ಗಾಂಧಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ (International Airport) ಕಸ್ಟಮ್ಸ್ ಅಧಿಕಾರಿಗಳು ನಾಲ್ಕು ದಿನಗಳ ಹಿಂದೆಯಷ್ಟೇ 24 ಕ್ಯಾರೆಟ್ ಗುಣಮಟ್ಟದ 2.57 ಕೋಟಿ ಮೌಲ್ಯದ ಚಿನ್ನವನ್ನು ವಶಪಡಿಸಿಕೊಂಡಿದ್ದರು ಎಂದು ವರದಿಯಾಗಿದೆ.
Live Tv
[brid partner=56869869 player=32851 video=960834 autoplay=true]
ಚಿಕ್ಕೋಡಿ: ಬೆಳಗಾವಿ (Belgavi) ಜಿಲ್ಲೆಯ ನಿಪ್ಪಾಣ (Nippani) ಪಟ್ಟಣದ ಹಾಲಸಿದ್ದನಾಥ ಸಹಕಾರಿ ಸಕ್ಕರೆ ಕಾರ್ಖಾನೆಯ ಕಬ್ಬು ನುರಿಸುವ ಹಂಗಾಮು ಪ್ರಾರಂಭೋತ್ಸವ ಕಾರ್ಯಕ್ರಮಕ್ಕೆ ಮುಜರಾಯಿ, ಹಜ್ ಮತ್ತು ವಕ್ಫ್ ಇಲಾಖೆಯ ಸಚಿವೆ ಶಶಿಕಲಾ ಜೊಲ್ಲೆ (Shashikala Jolle) ಹಾಗೂ ಚಿಕ್ಕೋಡಿ (Chikkodi) ಲೋಕಸಭೆ ಸಂಸದ ಅಣ್ಣಾಸಾಹೇಬ ಜೊಲ್ಲೆ ಚಾಲನೆ ನೀಡಿದರು.
ಕುಂಭ ಮೆರವಣಿಗೆಗೆ ಚಾಲನೆ ನೀಡಿ ಸಾವಿರಾರು ಮಹಿಳೆಯರೊಂದಿಗೆ ಕುಂಭ ಮೆರವಣಿಗೆಯಲ್ಲಿ ಭಾಗವಹಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಶಶಿಕಲಾ ಜೊಲ್ಲೆ ಉತ್ತಮ ಮಳೆಯಿಂದ ಕಬ್ಬಿನ ಇಳುವರಿ ಹೆಚ್ಚಾಗಿದ್ದು ಈ ಬಾರಿ ರೈತರಿಗೆಲ್ಲ ಒಳ್ಳೆಯದಾಗಲಿ ಎಂದು ಶುಭ ಹಾರೈಸಿದರು. ಇದನ್ನೂ ಓದಿ: ರಾಮನನ್ನು ಆದರ್ಶ ಪುರುಷ ಎಂದು ತೋರಿಸಿದ್ದು ವಾಲ್ಮೀಕಿ: ಜಗದೀಶ್ ಶೆಟ್ಟರ್
Live Tv
[brid partner=56869869 player=32851 video=960834 autoplay=true]
ಲಕ್ನೋ: ಕುಡಿದ ಮತ್ತಿನಲ್ಲಿ ಮೂವರು ಮಹಿಳೆಯರು ಸೇರಿಕೊಂಡು ಸೆಕ್ಯೂರಿಟಿ ಗಾರ್ಡ್ ಮೇಲೆ ದೌರ್ಜನ್ಯ ಎಸಗಿರುವ ಘಟನೆ ನೋಯ್ಡಾದ ಸೆಕ್ಟರ್-121ರಲ್ಲಿ (Noida’s Sector-121) ನಡೆದಿದೆ. ಇದೀಗ ಈ ವೀಡಿಯೋ ಸೋಶಿಯಲ್ ಮೀಡಿಯಾದಲ್ಲಿ ಹರಿದಾಡುತ್ತಿದೆ.
ವೀಡಿಯೋದಲ್ಲಿ ಮಹಿಳೆಯೊಬ್ಬರು ಸೆಕ್ಯೂರಿಟಿ ಗಾರ್ಡ್ ಕೊರಳಪಟ್ಟಿ ಹಿಡಿದುಕೊಂಡಿರುವುದನ್ನು ಕಾಣಬಹುದಾಗಿದೆ. ಈ ಸಂಬಂಧ ಪೊಲೀಸರು ಇದೀಗ ಇಬ್ಬರು ಮಹಿಳೆಯರನ್ನು ವಶಕ್ಕೆ ಪಡೆದುಕೊಂಡಿದ್ದಾರೆ. ಇದನ್ನೂ ಓದಿ: ಬಿಗ್‍ಬಾಸ್ ಮನೆಯಿಂದ ನವಾಜ್ ಔಟ್- ಇಷ್ಟವಾಗಲಿಲ್ಲ ಹುಡುಗನ ನಡೆ
Looks like Noida finally has an identity ???????? Fresh in from Sector 121, Ajnara Homes Society ???????? pic.twitter.com/OpO1k1ozQf
ಸೆಕ್ಯೂರಿಟಿ ಗಾರ್ಡ್ ಅನ್ನು ಪಂಕಜ್ ಎಂದು ಗುರುತಿಸಲಾಗಿದ್ದು, ನೋಯ್ಡಾ ಸೊಸೈಟಿಗೆ ಮಹಿಳೆಯರು ಬಂದು ಕರ್ತವ್ಯನಿರತರಾಗಿದ್ದ ಪಂಕಜ್ ಮೇಲೆ ದಬ್ಬಾಳಿಕೆ ನಡೆಸಿದ್ದಾರೆ. ಮಹಿಳೆಯರು ಬಂದ ವಾಹನದಲ್ಲಿ ಸೊಸೈಟಿ ಸ್ಟಿಕ್ಕರ್ ಇಲ್ಲದೇ ಇರುವುದಕ್ಕೆ ಅವರನ್ನು ಸೆಕ್ಯೂರಿಟಿ ಗಾರ್ಡ್ ಅಡ್ಡ ಹಾಕಿದ್ದಾನೆ. ಇದರಿಂದ ರೊಚ್ಚಿಗೆದ್ದ ಮಹಿಳೆಯರು ಆತನ ವಿರುದ್ಧ ನಿಂದಿಸಲು ಆರಂಭಿಸಿದರು. ಈ ವೇಳೆ ಜಗಳ ಬಿಡಿಸಲು ಇತರ ಸೆಕ್ಯೂರಿಟ ಗಾರ್ಡ್‍ಗಳು ಮಧ್ಯೆ ಪ್ರವೇಶಿಸಿದಾಗ, ಕುಡಿದ ಮತ್ತಿನಲ್ಲಿದ್ದ ಮಹಿಳೆಯರು ಅವರೊಂದಿಗೆ ಅನುಚಿತವಾಗಿ ವರ್ತಿಸಲು ಪ್ರಾರಂಭಿಸಿದರು.
ಸಿಆರ್‌ಪಿಸಿ ಸೆಕ್ಷನ್ 151ರ ಅಡಿಯಲ್ಲಿ ಇಬ್ಬರು ಆರೋಪಿಗಳನ್ನು ಕಸ್ಟಡಿಗೆ ತೆಗೆದುಕೊಳ್ಳಲಾಗಿದ್ದು, ಅವರನ್ನು ಸ್ಥಳೀಯ ಮ್ಯಾಜಿಸ್ಟ್ರೇಟ್ ಮುಂದೆ ಹಾಜರುಪಡಿಸಲಾಗಿದೆ ಮತ್ತು ಅವರ ವಿರುದ್ಧ ಭಾರತೀಯ ದಂಡ ಸಂಹಿತೆ ಸೆಕ್ಷನ್ 323 (ಸ್ವಯಿಚ್ಛೆಯಿಂದ ಗಾಯವನ್ನುಂಟು ಮಾಡಿದ್ದಕ್ಕೆ ದಂಡನೆ) ಮತ್ತು 504 (ಉದ್ದೇಶಪೂರ್ವಕ ಅವಮಾನ) ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
Live Tv
[brid partner=56869869 player=32851 video=960834 autoplay=true]
ಮುಂಬೈ: ಸಂವಿಧಾನದ (Constitution) 21ನೇ ವಿಧಿಯ ಅನ್ವಯ ಪ್ರತಿಯೊಬ್ಬ ಮಹಿಳೆಯು (Women) ಸಂತಾನೋತ್ಪತ್ತಿ ಆಯ್ಕೆಯ ಹಕ್ಕು ಹೊಂದಿರುವುದರಿಂದ, ಆಕೆಗೆ ಮಗು ಹೇರಲು ಬಲವಂತ ಮಾಡುವಂತಿಲ್ಲ ಎಂದು ಬಾಂಬೆ ಹೈಕೋರ್ಟ್ (Bombay HighCourt) ಹೇಳಿದೆ.
ಪತಿಯ ಒಪ್ಪಿಗೆಯಿಲ್ಲದೇ ಗರ್ಭಪಾತ ಮಾಡಿಸಿರುವುದು ಕ್ರೌರ್ಯ ಎಂಬ ಆಧಾರದಲ್ಲಿ ವಿಚ್ಛೇದನ ಕೋರಿದ್ದ ಅರ್ಜಿಯ ವಿಚಾರಣೆ ನ್ಯಾಯಮೂರ್ತಿ ಅತುಲ್ ಚಂದೂರ್ಕರ್ ಹಾಗೂ ಊರ್ಮಿಳಾ ಜೋಶಿ ಫಾಲ್ಕೆ ನೇತೃತ್ವದ ವಿಭಾಗೀಯ ಪೀಠ ನಡೆಸಿತು. ಇದನ್ನೂ ಓದಿ: ಕೇರಳ ದುರಂತಕ್ಕೆ ಮೋದಿ ಸಂತಾಪ – ಮೃತರ ಕುಟುಂಬಕ್ಕೆ 2 ಲಕ್ಷ ಪರಿಹಾರ
ಸಂವಿಧಾನದ 21ನೇ ವಿಧಿಯ ಅನ್ವಯ ಮಹಿಳೆಯ ಸಂತಾನೋತ್ಪತ್ತಿಯ ಆಯ್ಕೆಯು ವೈಯಕ್ತಿಯ ಸ್ವಾತಂತ್ರ‍್ಯದ ಅಂಗವಾಗಿದೆ. ಆದ್ದರಿಂದ ಆಕೆಗೆ ಮುಗುವಿಗೆ ಜನ್ಮ ನೀಡುವಂತೆ ಒತ್ತಾಯ ಮಾಡಲಾಗದು. ಏಕೆಂದರೆ ಮಹಿಳೆ ವಿವಾಹದ ನಂತರ ಕೆಲಸ ಮಾಡಲು ಬಯಸಿದರೆ ಅದು ಮಾನಸಿಕ ಕ್ರೌರ್ಯವಾಗುವುದಿಲ್ಲ ಎಂದು ಹೇಳಿರುವ ನ್ಯಾಯಾಲಯವು (Court) ಅರ್ಜಿಯನ್ನು ವಜಾಗೊಳಿಸಿದೆ. ಇದನ್ನೂ ಓದಿ: ಆಸ್ಪತ್ರೆಯಿಂದ ಡಿಸ್ಚಾರ್ಜ್: ಪತಿ ಜೊತೆ ದಿವ್ಯಾ ಶ್ರೀಧರ್ ಡಿಶುಂ ಡಿಶುಂ ವಿಡಿಯೋ
2001ರಲ್ಲಿ ಮದುವೆಯಾದಾಗಿನಿಂದ ಪತ್ನಿಯು ಉದ್ಯೋಗ ಮಾಡಲು ಬಯಸಿದ್ದು, ಗರ್ಭಪಾತ (Miscarriage) ಮಾಡಿಸಿಕೊಳ್ಳುವ ಮೂಲಕ ತಮ್ಮನ್ನು ಕ್ರೌರ್ಯಕ್ಕೆ ಗುರಿಪಡಿಸಲಾಗಿದೆ ಎಂದು ಅರ್ಜಿದಾರ ಪತಿ ಆರೋಪಿಸಿದ್ದರು. 2004ರಲ್ಲಿ ಪುತ್ರನೊಂದಿಗೆ ತಮ್ಮನ್ನು ತೊರೆದು ಹೋಗಿದ್ದಾರೆ. ಹಾಗಾಗಿ ವಿಚ್ಚೇದನ ಕೊಡಿಸಬೇಕು ಎಂದು ಮನವಿ ಸಲ್ಲಿಸಿದ್ದರು.
ವಿಚಾರಣೆ ವೇಳೆ ಪತ್ನಿ ತಾನು ಮೊದಲ ಮಗುವಿಗೆ ಜನ್ಮ ನೀಡಿ ಅದನ್ನು ಸಲಹುತ್ತಿರುವುದಾಗಿ ಒಪ್ಪಿಕೊಂಡಿದ್ದಾರೆ. ತಾನು 2ನೇ ಬಾರಿಗೆ ಗರ್ಭಿಣಿಯಾದಾಗ ಅನಾರೋಗ್ಯದ ಕಾರಣದಿಂದ ಗರ್ಭಪಾತವಾಗಿದೆ. ಆದರೆ ತನ್ನನ್ನು ಮರಳಿ ಗಂಡನ ಮನೆಗೆ ಕರೆತರಲು ಯಾವುದೇ ಪ್ರಯತ್ನ ಮಾಡಲಾಗಿಲ್ಲ. ತಾನು ಮನೆ ಬಿಡಲು ತನ್ನ ಶೀಲವನ್ನು ಶಂಕಿಸಿದ್ದು ಕಾರಣ ಎಂದು ವಾದಿಸಿದ್ದರು.
ಈ ಕಾರಣದಿಂದಾಗಿ ನ್ಯಾಯಾಲಯ ಸಣ್ಣಪುಟ್ಟ ವಿಷಯಗಳನ್ನೆಲ್ಲಾ ಕ್ರೌರ್ಯ ಎಂದು ಪರಿಗಣಿಸಲಾಗದು ಎಂದು ಹೇಳಿ ವಿಚ್ಛೇದನ ಅರ್ಜಿಯನ್ನು ವಜಾಗೊಳಿಸಿದೆ.
Live Tv
[brid partner=56869869 player=32851 video=960834 autoplay=true]
ಮುಂಬೈ: ಕೇಂದ್ರ ರೈಲ್ವೆ (Central Railway) ವ್ಯಾಪ್ತಿಯ ಥಾಣೆ (Thane) ಮತ್ತು ಪನ್ವೇಲ್ (Panvel) ನಡುವಿನ ಲೋಕಲ್ ಟ್ರೈನ್‍ನಲ್ಲಿ ಕೆಲ ಮಹಿಳೆಯರ ನಡುವೆ ಮಾರಾಮಾರಿ ನಡೆದಿದೆ.
ಮುಂಬೈ ಲೋಕಲ್ ಟ್ರೈನ್‍ಗಳಲ್ಲಿ (Local train) ಸಂಜೆ ಹೊತ್ತು ಒಂದು ಕೆಡೆಯಿಂದ ಮತ್ತೊಂದು ಕಡೆಗೆ ಹೋಗಲು ರೈಲಿನಲ್ಲಿ ವಿಪರೀತ ನೂಕುನುಗ್ಗಲು ಇರುತ್ತದೆ. ಈ ವೇಳೆ ಸೀಟ್ ಹಿಡಿದುಕೊಳ್ಳಲು ಜನ ಸಾಕಷ್ಟು ಪ್ರಯತ್ನಿಸುತ್ತಾರೆ. ಕೆಲವೊಮ್ಮೆ ಈ ವಿಚಾರವಾಗಿ ಅನೇಕ ಜನ ಜಗಳ ಆಡಿರುವುದು ಕೂಡ ಇದೆ. ಸದ್ಯ ಗುರುವಾರ ಸಂಜೆ 7:45ಕ್ಕೆ ಇದೇ ವಿಚಾರವಾಗಿ ಗಲಾಟೆ ನಡೆದಿದೆ. ಇದನ್ನೂ ಓದಿ: ಎಸ್.ಎಂ ಕೃಷ್ಣ ಸರ್ಕಾರದ ಸಂಪುಟದಲ್ಲಿ ಸಚಿವರಾಗಿದ್ದ ಜಬ್ಬಾರ್ ಖಾನ್ ಹೊನ್ನಳ್ಳಿ ನಿಧನ
ಹೌದು, ಸೆಂಟ್ರಲ್ ರೈಲ್ವೇ ವ್ಯಾಪ್ತಿಯ ಥಾಣೆ ಮತ್ತು ಪನ್ವೇಲ್ ನಡುವಿನ ಲೋಕಲ್ ರೈಲಿನಲ್ಲಿ ಕೆಲ ಮಹಿಳೆಯರ ನಡುವೆ ತೀವ್ರ ಜಗಳ ನಡೆದಿದೆ. ಮಹಿಳಾ ಕಂಪಾರ್ಟ್‍ಮೆಂಟ್‍ನಲ್ಲಿ ಸೀಟ್ ವಿಚಾರವಾಗಿ ಮೂವರು ಮಹಿಳೆಯರ ನಡುವೆ ವಾಗ್ವಾದ ನಡೆದಿದೆ. ಇದೇ ವೇಳೆ ಮಹಿಳೆಯರು ಪರಸ್ಪರ ಜುಟ್ಟು ಹಿಡಿದುಕೊಂಡು ಹೊಡೆದಾಡಿದ್ದಾರೆ. ವಿಷಯ ದೊಡ್ಡದಾಗುತ್ತಿದ್ದಂತೆ ಉಳಿದ ಇತರ ಕೆಲವು ಮಹಿಳೆಯರು ಕೂಡಲೇ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಇದನ್ನೂ ಓದಿ: ಗಂಡನನ್ನು ಕೊಲೆ ಮಾಡುವುದಾಗಿ ಹೆದರಿಸಿ ವೃದ್ಧೆ ಮೇಲೆ 1 ವರ್ಷ ನಿರಂತರ ಅತ್ಯಾಚಾರ
ನಂತರ ನೆರೂಲ್‍ನಿಂದ ಜಗಳ ಬಿಡಿಸಲು ಬಂದ ಮಹಿಳಾ ಪೊಲೀಸ್ ಪೇದೆಯೊಬ್ಬರ ಮೇಲೆ ಆರೋಪಿ ಮಹಿಳೆಯರು ಹಲ್ಲೆ ನಡೆಸಿದ್ದಾರೆ. ಇದರಿಂದ ಗಾಯಗೊಂಡ ಮಹಿಳಾ ಪೊಲೀಸ್ ಪೇದೆ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಇದೀಗ ಈ ಸಂಬಂಧ ವಾಶಿಯ ಗ್ರಾ.ಪಂ ಪೊಲೀಸರು ಇಬ್ಬರು ಮಹಿಳೆಯರ ವಿರುದ್ಧ ಐಪಿಸಿ 353, 332, 504 ಅಡಿಯಲ್ಲಿ ಪ್ರಕರಣ ದಾಖಲಿಸಿಕೊಂಡು ಮುಂದಿನ ತನಿಖೆ ಕೈಗೊಂಡಿದ್ದಾರೆ.
Live Tv
[brid partner=56869869 player=32851 video=960834 autoplay=true]
ಕೊಪ್ಪಳ: ಯಲಬುರ್ಗಾ ತಾಲೂಕಿನ ಸಂಕನೂರು ಹಳ್ಳದಲ್ಲಿ ಕೊಚ್ಚಿಹೋಗಿದ್ದ ನಾಲ್ವರಲ್ಲಿ ಇಬ್ಬರು ಮಹಿಳೆಯರು ಶವವಾಗಿ ಪತ್ತೆಯಾಗಿದ್ದಾರೆ.
ಭುವನೇಶ್ವರಿ ಪೊಲೀಸ್ ಪಾಟೀಲ್ (40), ಗಿರಿಜಾ ಮಾಲಿಪಾಟೀಲ್ (40) ಮೃತದೇಹ ಪತ್ತೆಯಾಗಿದೆ. ಇನ್ನಿಬ್ಬರು ಮಹಿಳೆಯರ ಸುಳಿವು ಪತ್ತೆಯಾಗಿಲ್ಲ. ಅಗ್ನಿಶಾಮಕ ದಳದ ಸಿಬ್ಬಂದಿ ರಕ್ಷಣಾ ಕಾರ್ಯಾಚರಣೆ ಮುಂದುವರಿಸಿದ್ದಾರೆ. ಇದನ್ನೂ ಓದಿ: ಕೊಪ್ಪಳ: ಹಳ್ಳದಲ್ಲಿ ಕೊಚ್ಚಿಹೋದ ನಾಲ್ವರು ಮಹಿಳೆಯರು
ನಿನ್ನೆ ರಾತ್ರಿ ಹಳ್ಳದಲ್ಲಿ ನಾಲ್ವರು ಮಹಿಳೆಯರು ಕೊಚ್ಚಿಕೊಂಡು ಹೋಗಿದ್ದರು. ಗಿರಿಜಾ ಮಾಲಿಪಾಟೀಲ್ (32), ಭುವನೇಶ್ವರಿ ಪೊಲೀಸ್ ಪಾಟೀಲ್ (40), ಪವಿತ್ರಾ ಪೊಲೀಸ್ ಪಾಟೀಲ್ (45), ವೀಣಾ ಮಾಲಿಪಾಟೀಲ್ (19) ಹಳ್ಳದಲ್ಲಿ ಕೊಚ್ಚಿಕೊಂಡು ಹೋಗಿದ್ದರು.
ಮಹಿಳೆಯರು ಕೆಲಸಕ್ಕೆ ಹೋಗಿದ್ದರು. ಕೆಲಸ ಮುಗಿಸಿಕೊಂಡು ಮರಳಿ ಗ್ರಾಮಕ್ಕೆ ವಾಪಸ್ ಆಗುವಾಗ ಈ ದುರ್ಘಟನೆ ನಡೆದಿದೆ. ಇನ್ನಿಬ್ಬರು ಮಹಿಳೆಯರಿಗಾಗಿ ಹುಡುಕಾಟ ನಡೆಯುತ್ತಿದೆ. ಪೊಲೀಸರು ರಕ್ಷಣಾ ಕಾರ್ಯಾಚರಣೆ ಸ್ಥಳದಲ್ಲೇ ಬೀಡುಬಿಟ್ಟಿದ್ದಾರೆ. ಇದನ್ನೂ ಓದಿ: ರಾಜ್ಯ ಸರ್ಕಾರಕ್ಕೆ 40% ಕಳ್ಳರು ಎಂದ ರಾಹುಲ್ ಗಾಂಧಿ
Live Tv
[brid partner=56869869 player=32851 video=960834 autoplay=true]
ಮಡಿಕೇರಿ: ತಾಯಿ ಮಡಿಲಿನಲ್ಲಿ ಆಡಿ ನಲಿಯಬೇಕಾದ ಪುಟ್ಟ ಕಂದಮ್ಮ ಪ್ರಪಂಚವನ್ನೇ ನೋಡುವ ಮುನ್ನ ಅನಾಥವಾಗಿದೆ. ಒಂಭತ್ತು ತಿಂಗಳು ಪೋಷಣೆ ಮಾಡಿ, ಹೆತ್ತು, ಹೊತ್ತ ತಾಯಿ ಕಂದನನ್ನು ನೋಡಿದ ಕೆಲವೇ ಗಂಟೆಗಳಲ್ಲಿ ಇಹಲೋಕ ತ್ಯಜಿಸಿದ್ದು, ವೈದ್ಯರ ನಿರ್ಲಕ್ಷ್ಯವೇ ಬಾಣಂತಿ ಸಾವಿಗೆ ಕಾರಣ ಎಂದು ಮೃತ ಬಾಣಂತಿಯ ಸಂಬಂಧಿಕರು ಆರೋಪಿಸಿದ್ದಾರೆ.
ಹೌದು, ಒಂಬತ್ತು ತಿಂಗಳು ತುಂಬಿದ ಹಿನ್ನೆಲೆ ಹೆರಿಗೆ ನೋವಿನಿಂದ ಬಳಲುತ್ತಿದ್ದ 22 ವರ್ಷ ಪ್ರಾಯದ ಹರ್ಷಿತರನ್ನು ಮನೆಯವರು ಮಡಿಕೇರಿಯ ಜಿಲ್ಲಾಸ್ಪತ್ರೆಗೆ ಕಳೆದ 20 ರಂದು ದಾಖಲಿಸಿದ್ದರು. ಸೋಮವಾರ ಸಂಜೆ ಗಂಡು ಮಗುವಿಗೆ ಹರ್ಷಿತ ಜನ್ಮ ನೀಡಿದ್ದರು. ಮಗು ಹುಟ್ಟಿದ್ದರಿಂದ ಕುಟುಂಬಸ್ಥರಲ್ಲಿ ಸಂತೋಷ ಮನೆ ಮಾಡಿತ್ತು. ಆದರೆ ಬಾಣಂತಿ ಸಾವು ಕುಟುಂಬದವರ ಆಕ್ರೋಶಕ್ಕೆ ಕಾರಣವಾಗಿದೆ. ಬಾಣಂತಿ ಮೃತಪಟ್ಟ ಬಳಿಕ ಮೈಸೂರಿಗೆ (Mysuru) ವೈದ್ಯರ ರೆಫರ್ ಮಾಡಿದ್ದಾರೆ. ಮೈಸೂರಿಗೆ ಚಿಕಿತ್ಸೆಗೆ ಕೊಂಡೊಯ್ಯುವಂತೆ ಸೂಚಿಸಿದ ವೈದ್ಯೆ ರೇಷ್ಮ ಅವರ ವಿರುದ್ಧ ಬಾಣಂತಿ ಪತಿ ಪ್ರದೀಪ್ ಆರೋಪ ಮಾಡಿದ್ದಾರೆ. ಇದನ್ನೂ ಓದಿ: ಆರ್ಡರ್ ಮಾಡಿದ್ದು ಡ್ರೋನ್ ಕ್ಯಾಮೆರಾ, ಬಂದಿದ್ದು ಆಲೂಗಡ್ಡೆ- ಗ್ರಾಹಕ ಕಕ್ಕಾಬಿಕ್ಕಿ!
ಮೂಲತಃ ಕೊಡಗು (Kodagu) ಜಿಲ್ಲೆಯ ಕುಶಾಲನಗರ (Kushala nagar) ತಾಲೂಕಿನ ಸುಂಟಿಕೊಪ್ಪದ ನಿವಾಸಿಯಾದ ಹರ್ಷಿತ ಅವರನ್ನು ಪತಿ ಪ್ರದೀಪ್ ಅವರು ಹೆರಿಗೆ ನೋವು ಬಂದ ಸಮಯದಲ್ಲಿ ಮಾದಪುರ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ತಪಾಸಣೆ ನಡೆಸಿದ್ದಾರೆ. ಆದರೆ ಹರ್ಷಿತ ಅವರಿಗೆ ವಿಪರೀತವಾಗಿ ರಕ್ತಸ್ರಾವ ಆಗುತ್ತಿದ್ದ ಹಿನ್ನೆಲೆ ಮಡಿಕೇರಿಯ ಜಿಲ್ಲಾ ಆಸ್ಪತ್ರೆಗೆ ರವಾನಿಸಲಾಗಿತ್ತು. ಆದರೆ ಆಸ್ಪತ್ರೆಗೆ ಬಂದ ಸಂದರ್ಭದಲ್ಲಿ ಹರ್ಷಿತ ಅವರು ಸಹಜ ಸ್ಥಿತಿಯಲ್ಲಿ ಇರುತ್ತಾರೆ. ಮಗು ಜನಿಸಿದ ಕೆಲವೇ ಗಂಟೆಗಳಲ್ಲಿ ಆರೋಗ್ಯ ಹದಗೆಟ್ಟ ಪರಿಣಾಮ ಮತ್ತು ಜಾಂಡೀಸ್ (Jaundice) ಇರುವುದನ್ನು ಕಂಡು ಹೆಚ್ಚಿನ ಚಿಕಿತ್ಸೆಗಾಗಿ ಮೈಸೂರು ಆಸ್ಪತ್ರೆಗೆ ಕರೆದೊಯ್ಯುವಂತೆ ವೈದ್ಯೆ ರೇಷ್ಮ ತಿಳಿಸಿದ್ದಾರೆ. ಆದರೆ ಮೈಸೂರು ಆಸ್ಪತ್ರೆಗೆ ಕರೆದುಕೊಂಡು ಹೋಗುವ ಸಂದರ್ಭ ಬಾಣಂತಿ ಮೃತಪಟ್ಟಿದ್ದು, ಮಡಿಕೇರಿ ಆಸ್ಪತ್ರೆಯ ವೈದ್ಯರ ನಿರ್ಲಕ್ಷ್ಯವೇ ಮಹಿಳೆ ಸಾವನ್ನಪ್ಪಲು ಕಾರಣ ಎಂದು ಕುಟುಂಬಸ್ಥರು ಆರೋಪಿಸಿದ್ದಾರೆ.
ಈ ಪ್ರಕರಣಕ್ಕೆ ಸಂಬಂಧಿಸಿದಂತೆ ವೈದ್ಯರು ಇದನ್ನು ಅಲ್ಲಗೆಳೆದಿದ್ದಾರೆ. ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಜಿಲ್ಲಾ ವೈದ್ಯಧಿಕಾರಿ ಡಾಕ್ಟರ್ ವೆಂಕಟೇಶ್, ಮೃತಪಟ್ಟ ಮಹಿಳೆಯ ಪರೀಕ್ಷೆಗಳನ್ನು ಸರಿಯಾಗಿ ಮಾಡಿಲ್ಲ. ಗರ್ಭಿಣಿಯಾಗಿರುವಾಗ ಪರೀಕ್ಷೆಗಳು ಸರಿಯಾಗಿ ನಡೆಸಿಲ್ಲ. ಅವರಿಗೆ ಜಾಂಡೀಸ್ ಇರುವುದು ಹೆರಿಗೆ ಸಂದರ್ಭ ತಿಳಿದುಬಂದಿದೆ. ಹೆರಿಗೆ ಬಳಿಕ ರಕ್ತಸ್ರಾವ ಹೆಚ್ಚಾಗಿದ್ದನ್ನು ಅವರಿಗೆ ಹೇಳಿದ್ವಿ. ಆ ಬಳಿಕ ಮೈಸೂರು ಆಸ್ಪತ್ರೆಗೆ ಅವರನ್ನು ಕಳುಹಿಸಲಾಯಿತು. ಆ ವೇಳೆ ಕೂಡ ನಮ್ಮ ಆಸ್ಪತ್ರೆ ವೈದ್ಯರು ಜೊತೆಗಿದ್ದರು. ಆದರೆ ಆಸ್ಪತ್ರೆ ಸೇರುವಷ್ಟರಲ್ಲಿ ಅವರು ಮೃತಪಟ್ಟಿದ್ದಾರೆ. ಈ ಬಗ್ಗೆ ಚಿಕಿತ್ಸೆ ನೀಡಿದ ವೈದ್ಯರ ಬಳಿ ವರದಿ ಕೇಳಲಾಗಿದೆ. ಅಲ್ಲದೇ ಈ ಪ್ರಕರಣವನ್ನು ತನಿಖೆ ನಡೆಸಲಾಗುತ್ತದೆ ಎಂದು ಹೇಳಿದ್ದಾರೆ. ಇದನ್ನೂ ಓದಿ: ಭಾರತ-ದ.ಆಫ್ರಿಕಾ ಟಿ-20 ಸರಣಿಗೆ ಪರಿವೀಕ್ಷಕರಾಗಿ ಬೆಳಗಾವಿ ಮೂಲದ ಅವಿನಾಶ್ ನೇಮಕ
ಒಟ್ಟಾರೆ ವೈದ್ಯರ ನಿರ್ಲಕ್ಷ್ಯವೋ ಅಥವಾ ಮನೆಯವರು ನಿರ್ಲಕ್ಷ್ಯವೋ ಎಂದು ತನಿಖೆ ನಂತರ ಅಷ್ಟೇ ಗೊತ್ತಾಗಬೇಕಿದೆ. ಆದರೆ ವೈದ್ಯರು ಹಾಗೂ ಕುಟುಂಬಸ್ಥರ ಪರಸ್ಪರ ಆರೋಪಗಳಿಂದ ಅಮ್ಮನನ್ನು ಕಳೆದುಕೊಂಡ ಮಗು ಮಾತ್ರ ಅನಾಥವಾಗಿದೆ.
Live Tv
[brid partner=56869869 player=32851 video=960834 autoplay=true]
ಹೈದರಾಬಾದ್: ದುರ್ಗಾ ದೇವಿಯ ವಿಗ್ರಹವನ್ನು (Goddess Durga Idol) ವಿರೂಪಗೊಳಿಸಿದ ಇಬ್ಬರು ಮಹಿಳೆಯರನ್ನು ಬಂಧಿಸಿರುವ ಘಟನೆ ಹೈದರಾಬಾದ್‍ನಲ್ಲಿ (Hyderabad) ನಡೆದಿದೆ.
ಇಬ್ಬರು ಮಹಿಳೆಯರು (Women) ನಗರದ ಖೈರತಾಬಾದ್ ಪ್ರದೇಶದ ದುರ್ಗಾ ಮಂಟಪಕ್ಕೆ ನುಗ್ಗಿದ್ದಾರೆ. ಆ ಮಹಿಳೆಯರಲ್ಲಿ ಒಬ್ಬಾಕೆ ಸ್ಪ್ಯಾನರ್‌ನಿಂದ ವಿಗ್ರಹದ ಮೇಲೆ ದಾಳಿ ಮಾಡಿದ್ದಾಳೆ. ಅಷ್ಟೇ ಅಲ್ಲದೇ ಆಕೆಯನ್ನು ತಡೆಯಲು ಮುಂದಾದ ಸ್ಥಳೀಯರ ಮೇಲೂ ಇಬ್ಬರು ಮಹಿಳೆಯರು ಸೇರಿ ಹಲ್ಲೆ ನಡೆಸಿದ್ದಾರೆ.
ಘಟನೆಗೆ ಸಂಬಂಧಿಸಿ ಕೇಂದ್ರ ವಲಯದ ಡಿಸಿಪಿ ರಾಜೇಶ್ ಚಂದ್ರ ಮಾತನಾಡಿ, ಇಂದು ಬೆಳಗ್ಗೆ 10 ಗಂಟೆ ಸುಮಾರಿಗೆ ಇಬ್ಬರು ಮಹಿಳೆಯರು ನವರಾತ್ರಿ ಪ್ರಯುಕ್ತ ಪ್ರತಿಷ್ಠಾಪಿಸಲಾಗಿದ್ದ ದುರ್ಗಾ ದೇವಿಯ ಮಂಟಪಕ್ಕೆ ನುಗ್ಗಿ ವಿಗ್ರಹವನ್ನು ವಿರೂಪಗೊಳಿಸಿದ್ದಾರೆ. ಈ ಕುರಿತು ಸ್ಥಳೀಯರಿಂದ ಕರೆ ಬಂದಿತ್ತು. ಈ ಹಿನ್ನೆಲೆಯಲ್ಲಿ ಆ ಇಬ್ಬರು ಮಹಿಳೆಯರನ್ನು ಬಂಧಿಸಲಾಗಿದೆ.
ವಿಚಾರಣೆಯ ನಂತರ ಇಬ್ಬರು ಮಹಿಳೆಯರು ಮಾನಸಿಕ ಅಸ್ವಸ್ಥರಾಗಿದ್ದು, ಅವರಿಬ್ಬರಿಗೆ ನಮ್ಮ ಪ್ರಶ್ನೆಗಳನ್ನು ಅರ್ಥಮಾಡಿಕೊಳ್ಳಲು ಸಾಧ್ಯವಾಗುತ್ತಿಲ್ಲ ಎಂದು ತಿಳಿದುಬಂದಿದೆ. ಈ ಹಿನ್ನೆಲೆಯಲ್ಲಿ ನಾವು ವೈದ್ಯರ ಸಹಾಯ ತೆಗೆದುಕೊಳ್ಳುತ್ತಿದ್ದೇವೆ ಎಂದು ತಿಳಿಸಿದ್ದಾರೆ. ಇದನ್ನೂ ಓದಿ: ಕರಗಿತು ಭಾರೀ ಸಂಪತ್ತು – ವಿಶ್ವದ ಶ್ರೀಮಂತರ ಪಟ್ಟಿಯಲ್ಲಿ 3ನೇ ಸ್ಥಾನಕ್ಕೆ ಕುಸಿದ ಅದಾನಿ
Live Tv
[brid partner=56869869 player=32851 video=960834 autoplay=true]
ಅಮರಾವತಿ: ಪತ್ನಿ (Wife) ಹಾಗೂ ತನ್ನ ಬಣ್ಣ ಬಿಳಿಯದ್ದಾಗಿದ್ದರೂ ಮಗುವಿನ ಬಣ್ಣ ಮಾತ್ರ ಏಕೆ ಕಪ್ಪಾಗಿದೆ ಎಂದು ಪತ್ನಿಯ ಶೀಲ ಶಂಕಿಸಿ ಪತಿ ಆಕೆಯನ್ನು ಬರ್ಬರವಾಗಿ ಕೊಲೆ ಮಾಡಿರುವ ಘಟನೆ ಆಂಧ್ರಪ್ರದೇಶದ (Andhra Pradesh) ಕಾಕಿನಾಡ ಜಿಲ್ಲೆಯಲ್ಲಿ ನಡೆದಿದೆ.
ಒಡಿಶಾದ ಉಮ್ಮರ್‌ಕೋಟ್‌ನ ಸಿಲಾಟಿಗಾಂವ್ ಗ್ರಾಮದ ಮಾಣಿಕ್ ಘೋಷ್ ಇಂತಹದ್ದೊಂದು ಕೃತ್ಯ ಎಸಗಿದ್ದಾನೆ. ಈತನ ಕೃತ್ಯಕ್ಕೆ ಬಲಿಯಾದವರು ಕರಗಾಂವ್ ಗ್ರಾಮದ ಲಿಪಿಕಾ ಮಂಡಲ್. ಮೊದಲು ಸಹಜ ಸಾವು ಎಂದೇ ಬಿಂಬಿತವಾಗಿದ್ದ ಈ ಸಾವಿನ ಪ್ರಕರಣ ನಂತರದಲ್ಲಿ ಕೊಲೆ ಎಂಬುದು ತಿಳಿದುಬಂದಿದೆ. ಇದನ್ನೂ ಓದಿ: ಕತಾರ್ ವಿಶ್ವದ ಬೆಸ್ಟ್ ಏರ್‌ಲೈನ್ – ಟಾಪ್ 20 ಸಂಸ್ಥೆಗಳಲ್ಲಿ ಕತಾರ್‌ಗೆ No-1 ಸ್ಥಾನ
ಏನಿದು ಮರ್ಡರ್ ಮಿಸ್ಟ್ರಿ?: ಕಳೆದ 7 ವರ್ಷಗಳ ಹಿಂದೆ ಮಾಣಿಕ್ ಘೋಷ್ ಹಾಗೂ ಲಿಪಿಕಾ ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದಾರೆ. ಮದುವೆಯ (Marriage) ನಂತರ ಇಬ್ಬರೂ ಉದ್ಯೋಗಕ್ಕಾಗಿ ಆಂಧ್ರಪ್ರದೇಶದ ಕಾಕಿನಾಡಕ್ಕೆ ವಲಸೆ ಬಂದಿದ್ದರು. ಎರಡೂವರೆ ವರ್ಷಗಳ ಹಿಂದೆ ಈ ದಂಪತಿಗೆ ಹೆಣ್ಣು ಮಗು (Daughter) ಹುಟ್ಟಿತ್ತು. ಆದರೆ ಇಬ್ಬರೂ ಬೆಳ್ಳಗಿದ್ದರೂ ಮಗು ಮಾತ್ರ ಏಕೆ ಕಪ್ಪಗೆ ಇದೆ ಎಂದು ಘೋಷ್ ಸದಾ ಪತ್ನಿಯ ಬಗ್ಗೆ ಸಂದೇಹಪಡುತ್ತಿದ್ದ. ಇದೇ ವಿಚಾರಕ್ಕೆ ಇಬ್ಬರ ನಡುವೆ ಗಲಾಟೆ ನಡೆದಿತ್ತು. ಪತಿಯ ದೌರ್ಜನ್ಯದಿಂದ ಬೇಸತ್ತ ಲಿಪಿಕಾ ತನ್ನ ತವರು ಮನೆಗೆ ಬಂದಿದ್ದಳು. ನಂತರ ಕುಟುಂಬಸ್ಥರು ಇಬ್ಬರನ್ನೂ ಸಮಾಧಾನಪಡಿಸಿ ವಾಪಸ್ ಕಳುಹಿಸಿದ್ದರು. ಇದನ್ನೂ ಓದಿ: ಡಿಸೆಂಬರ್‌ನಲ್ಲಿ ಮೋದಿಯವರಿಂದ್ಲೇ ಧಾರವಾಡ IIT ಕ್ಯಾಂಪಸ್ ಉದ್ಘಾಟನೆ – ಜೋಶಿ
ಆದರೆ ಇದೇ ತಿಂಗಳ 18ರಂದು ರಾತ್ರಿ ಲಿಪಿಕಾಗೆ ಮೂರ್ಛೆ ಹೋಗಿರುವುದಾಗಿ ಹೇಳಿದ್ದ ಪತಿ, ಅವರನ್ನು ಆಸ್ಪತ್ರೆಗೆ (Hospital) ಕರೆದೊಯ್ದಿದ್ದ. ಅಷ್ಟರಲ್ಲಿಯೇ ಅವರು ಮೃತಪಟ್ಟಿದ್ದರು. ಮೊದಲು ಇದು ಸಹಜ ಸಾವು ಎನ್ನಲಾಗಿತ್ತು. ನಂತರ ಕುತ್ತಿಗೆಯಲ್ಲಿ ಗಾಯದ ಗುರುತು ಕಂಡುಬಂದಿದ್ದು ಸಂದೇಹಕ್ಕೆ ಎಡೆ ಮಾಡಿಕೊಟ್ಟಿತ್ತು. ಆದರೆ ಪತಿಯೇ ಈ ಕೊಲೆ ಮಾಡಿದ್ದಾನೆ ಎಂಬ ಬಗ್ಗೆ ಪುರಾವೆಗಳು ಇರಲಿಲ್ಲ. ನಂತರ ಸಾಕ್ಷಿ ಹೇಳಿದ್ದೆ ಪುಟ್ಟ ಕಂದಮ್ಮ. ಅಮ್ಮನ ಸಾವಿನ ಬಳಿಕ ಅಜ್ಜಿ ಮನೆಗೆ ಬಂದಿದ್ದ ಎರಡೂವರೆ ವರ್ಷದ ಮಗು, ಅಜ್ಜ-ಅಜ್ಜಿಗೆ ಅಂದು ತಾನು ಕಂಡಿರುವ ದೃಶ್ಯ ವಿವರಿಸಿದೆ. ಅಮ್ಮನ ಗಂಟಲನ್ನು ಎರಡೂ ಕೈಗಳಿಂದ ಅಪ್ಪ ಹಿಡಿದುಕೊಂಡಿದ್ದು, ಅಮ್ಮ ಒದ್ದಾಡಿದ್ದು, ನಂತರ ಅಮ್ಮ ಏನೂ ಮಾತನಾಡದೇ ಇದ್ದುದನ್ನು ಮಗು ವಿವರಿಸಿದೆ.
ಅಲ್ಲಿಯವರೆಗೂ ಮಗಳು ಪ್ರಜ್ಞೆ ತಪ್ಪಿ ಸತ್ತಿದ್ದಾಳೆ ಎಂದುಕೊಂಡಿದ್ದ ಅವರಿಗೆ ಅಳಿಯನೇ ಮಗಳನ್ನು ಕೊಂದಿದ್ದಾನೆ ಎಂಬುದು ಮೊಮ್ಮಗಳ ಮಾತಿನ ಮೂಲಕ ಅರ್ಥವಾಗಿ ಪೊಲೀಸರಿಗೆ ದೂರು ದಾಖಲು ಮಾಡಿದ್ದಾರೆ. ಪೊಲೀಸರ (Police) ಬಳಿ ಕೂಡ ಮಗು ಅಂದು ನಡೆದ ಘಟನೆ ವಿವರಿಸಿದೆ. ಪತಿಯನ್ನು ಪೊಲೀಸರು ಬಂಧಿಸಿದಾಗ ಸತ್ಯ ಒಪ್ಪಿಕೊಂಡಿದ್ದಾನೆ. ಪೊಲೀಸರು ತನಿಖೆ ಮುಂದುವರಿಸಿದ್ದಾರೆ.
Live Tv
[brid partner=56869869 player=32851 video=960834 autoplay=true]
ನವದೆಹಲಿ: ದೆಹಲಿಯ (NewDelhi) ಸೌತ್ ಎಕ್ಸ್‍ಟೆನ್ಶನ್ ಪಾರ್ಟ್-1 (South Extension Part-1) ಏರಿಯಾದಲ್ಲಿರುವ ಕ್ಲಬ್‍ಗೆ (Club) ಪ್ರವೇಶ ನೀಡಲು ನಿರಾಕರಿಸಿ ಖ್ಯಾತೆ ತೆಗೆದ ಬೌನ್ಸರ್‌ಗಳು (Bouncers) ನನ್ನ ಬಟ್ಟೆಯನ್ನು ಹರಿದು ನನ್ನೊಂದಿಗೆ ಅಸಭ್ಯವಾಗಿ ವರ್ತಿಸಿದ್ದಾರೆ ಎಂದು ಮಹಿಳೆಯೊಬ್ಬರು ಆರೋಪಿಸಿದ್ದಾರೆ.
ಸೆಪ್ಟೆಂಬರ್ 18 ರಂದು ಬೆಳಗಿನ ಜಾವ 2:14ರ ಸುಮಾರಿಗೆ ಡಾ ಕೋಡ್ ಕ್ಲಬ್‍ನಲ್ಲಿ (Da Code club )ಈ ಘಟನೆ ನಡೆದಿದ್ದು, ಈ ಸಂಬಂಧ ಮಹಿಳೆ ಪೊಲೀಸರಿಗೆ (Police) ಕರೆ ಮಾಡಿ ಮಾಹಿತಿ ನೀಡಿದ್ದಾರೆ. ನಂತರ ಸ್ಥಳಕ್ಕೆ ಭೇಟಿ ನೀಡಿದ ಪೊಲೀಸರಿಗೆ, ಮಹಿಳೆಯ ಬಟ್ಟೆ ಕಿತ್ತು ಹೋಗಿರುವುದು ಕಂಡು ಬಂದಿದೆ. ನಂತರ ಈ ಬಗ್ಗೆ ವಿಚಾರಣೆ ನಡೆಸಿದಾಗ, ಇಬ್ಬರು ಬೌನ್ಸರ್‌ಗಳು ಹಾಗೂ ಕ್ಲಬ್ ಮ್ಯಾನೇಜರ್ ಬಟ್ಟೆಯನ್ನು ಹರಿದಿದ್ದಾರೆ. ನನ್ನ ಮೇಲೆ ಹಲ್ಲೆ ನಡೆಸಿದ್ದಾರೆ ಮತ್ತು ನನ್ನನ್ನು ಅನುಚಿತವಾಗಿ ಸ್ಪರ್ಶಿಸಿದ್ದಾರೆ ಎಂದು ಮಹಿಳೆ ಆರೋಪಿಸಿರುವುದಾಗಿ ಪೊಲೀಸರು ತಿಳಿಸಿದ್ದಾರೆ. ಇದನ್ನೂ ಓದಿ: ಪಹಣಿ ಬದಲಾವಣೆಗೆ 50 ಲಕ್ಷ ಲಂಚಕ್ಕೆ ಬೇಡಿಕೆ ಇಟ್ಟ ಗ್ರಾಮ ಲೆಕ್ಕಿಗ!
ನಂತರ ಪೊಲೀಸರು ಮಹಿಳೆಯನ್ನು ಚಿಕಿತ್ಸೆಗಾಗಿ ಏಮ್ಸ್ ಟ್ರಾಮಾ ಸೆಂಟರ್‌ಗೆ ಕರೆದೊಯ್ದಿದ್ದು, ಆರೋಪಿಗಳನ್ನು ಪತ್ತೆ ಹಚ್ಚಲಾರಂಭಿಸಿದ್ದಾರೆ. ಈ ಘಟನೆ ಸಂಬಂಧ ದೂರು ದಾಖಲಿಸಿರುವ ಮಹಿಳೆ, ತನ್ನ ಸ್ನೇಹಿತರೊಂದಿಗೆ ಪಾರ್ಟಿ ಮಾಡಲು ಕ್ಲಬ್‍ಗೆ ಬಂದಿದ್ದು, ಈ ವೇಳೆ ಪ್ರವೇಶ್ ನೀಡಲು ನಿರಾಕರಿಸಿ ಬೌನ್ಸರ್‌ಗಳು ಆಕೆಯ ಮೇಲೆ ಹಾಗೂ ಆಕೆಯ ಸ್ನೇಹಿತರ ಮೇಲೆ ಹಲ್ಲೆ ನಡೆಸಿದ್ದಾರೆ ಎಂದು ಹೇಳಿದ್ದಾರೆ.
ಇದೀಗ ಘಟನೆಗೆ ಸಂಬಂಧಿಸಿದ ಸೆಕ್ಷನ್‍ಗಳಡಿ ಪ್ರಕರಣ ದಾಖಲಿಸಿಕೊಂಡು ತನಿಖೆ ಆರಂಭಿಸಿದ್ದು, ಕ್ಲಬ್ ಮತ್ತು ಇತರ ಅಕ್ಕಪಕ್ಕದ ಶೋರೂಂಗಳಲ್ಲಿ ಅಳವಡಿಸಲಾಗಿದ್ದ ಸಿಸಿಟಿವಿ ದೃಶ್ಯಗಳನ್ನು ಪರಿಶೀಲಿನೆ ನಡೆಸುತ್ತಿರುವುದಾಗಿ ಪೊಲೀಸರು ತಿಳಿಸಿದ್ದಾರೆ. ಇದನ್ನೂ ಓದಿ: ಪಾಲಿಕೆಯ ಹೊಸ ಪಾರ್ಕಿಂಗ್ ರೂಲ್ಸ್ – ಲೂಟಿ ಯೋಜನೆಯೆಂದು ಜನಾಕ್ರೋಶ
Live Tv
[brid partner=56869869 player=32851 video=960834 autoplay=true]