Tag: women

  • ಕ್ರಿಕೆಟ್‍ನಲ್ಲಿ ಲಿಂಗ ಸಮಾನತೆಗಾಗಿ ಬ್ಯಾಟ್ಸ್‌ಮ್ಯಾನ್‌ ಬದಲಾಗಿ ‘ಬ್ಯಾಟರ್’ ಪದ ಬಳಕೆ

    ಕ್ರಿಕೆಟ್‍ನಲ್ಲಿ ಲಿಂಗ ಸಮಾನತೆಗಾಗಿ ಬ್ಯಾಟ್ಸ್‌ಮ್ಯಾನ್‌ ಬದಲಾಗಿ ‘ಬ್ಯಾಟರ್’ ಪದ ಬಳಕೆ

    ಲಂಡನ್: ಕ್ರಿಕೆಟ್‍ನಲ್ಲಿ ಮಹಿಳಾ ಮತ್ತು ಪುರುಷರ ಲಿಂಗ ಸಮಾನತೆ ಸಲುವಾಗಿ ಪ್ರಸ್ತುತ ಬಳಕೆಯಲ್ಲಿರುವ ಬ್ಯಾಟ್ಸ್‌ಮ್ಯಾನ್‌ ಪದದ ಬದಲಾಗಿ ಬ್ಯಾಟರ್ ಪದ ಬಳಸುವಂತೆ ಮಾರ್ಲೆಬೋನ್  ಕ್ರಿಕೆಟ್ ಸಂಸ್ಥೆ(ಎಂಸಿಸಿ) ತೀರ್ಮಾನಿಸಿದೆ.

    ಎಂಸಿಸಿ ಜಾರಿಗೊಳಿಸುವ ಕ್ರಿಕೆಟ್ ನಿಯಮಗಳನ್ನು ಪಾಲಿಸುವ ಐಸಿಸಿ ಇದೀಗ ಈ ಮಹತ್ವದ ಬದಲಾವಣೆಯನ್ನು ಮಾಡಿಕೊಳ್ಳುವ ಸಾಧ್ಯತೆ ಇದೆ. ಎಂಸಿಸಿ ಕ್ರಿಕೆಟ್‍ನಲ್ಲಿ ಮಹತ್ವದ ಬದಲಾವಣೆ ತರುವ ನಿಟ್ಟಿನಲ್ಲಿ ಕಾನೂನು ಉಪ ಸಮಿತಿಯ ಜೊತೆ ಚರ್ಚಿಸಿ ಕ್ರಿಕೆಟ್‍ನಲ್ಲಿ ನಿಯಮಗಳನ್ನು ಜಾರಿಗೊಳಿಸುತ್ತದೆ. ಇದೀಗ ಮಹಿಳಾ ಕ್ರಿಕೆಟ್ ಕೂಡ ಪುರುಷ ಕ್ರಿಕೆಟ್ ನಂತೆ ಜನಪ್ರಿಯತೆ ಗಳಿಸುತ್ತಿದೆ. ಆದರೆ ಕ್ರಿಕೆಟ್‍ನಲ್ಲಿ ಬ್ಯಾಟ್ಸ್‌ಮ್ಯಾನ್‌ ಎಂಬ ಪದ ಮಹಿಳಾ ಕ್ರಿಕೆಟ್‍ನಲ್ಲಿ ಸರಿಹೊಂದುತ್ತಿರಲಿಲ್ಲ. ಹಾಗಾಗಿ ಈ ಬದಲಾವಣೆಗೆ ಮುಂದಾಗಿದೆ. ಇದನ್ನೂ ಓದಿ: ಐಪಿಎಲ್‍ಗೂ ತಟ್ಟಿದ ಕೊರೊನಾ – ನಟರಾಜನ್‍ಗೆ ಸೋಂಕು, 6 ಮಂದಿ ಕ್ವಾರಂಟೈನ್

    ಈಗಾಗಲೇ ಕ್ರಿಕೆಟ್‍ನಲ್ಲಿ ಪುರುಷ ಮತ್ತು ಮಹಿಳೆಯರಿಗೆ ಸಮನಾಗಿ ಬೌಲರ್ ಮತ್ತು ಫೀಲ್ಡರ್ ಎಂಬ ಪದ ಬಳಕೆಯಾಗುತ್ತಿದೆ. ಇದೀಗ ಬ್ಯಾಟ್ಸ್‌ಮ್ಯಾನ್‌ ಬದಲಾಗಿ ಬ್ಯಾಟರ್ ಅಥವಾ ಬ್ಯಾಟರ್ಸ್ ಪದ ಬಳಕೆಗೆ ಎಂಸಿಸಿ ಮುಂದಾಗಿದ್ದು, ಈ ಮೂಲಕ ಕ್ರಿಕೆಟ್‍ನಲ್ಲಿ ಲಿಂಗ ಸಮಾನತೆಗಾಗಿ ಶ್ರಮಿಸಿದೆ. ಇದನ್ನೂ ಓದಿ: ಸ್ಟೇಡಿಯಂನಲ್ಲಿ ಮಹಿಳಾ ಪ್ರೇಕ್ಷಕರು ಇದ್ದಾರೆ, ಪ್ರಸಾರ ಮಾಡಬೇಡಿ – ಅಫ್ಘಾನಿಸ್ಥಾನದಲ್ಲಿ ಐಪಿಎಲ್ ಬ್ಯಾನ್

  • NDA ಪರೀಕ್ಷೆಯಲ್ಲಿ ಮಹಿಳೆಯರ ಪ್ರವೇಶ ಮುಂದೂಡಲು ಸಾಧ್ಯವಿಲ್ಲ- ಸುಪ್ರೀಂಕೋರ್ಟ್

    NDA ಪರೀಕ್ಷೆಯಲ್ಲಿ ಮಹಿಳೆಯರ ಪ್ರವೇಶ ಮುಂದೂಡಲು ಸಾಧ್ಯವಿಲ್ಲ- ಸುಪ್ರೀಂಕೋರ್ಟ್

    ನವದೆಹಲಿ: ನ್ಯಾಷನಲ್ ಡಿಫೆನ್ಸ್ ಅಕಾಡೆಮಿಯ(NDA) ಪರೀಕ್ಷೆಯಲ್ಲಿ ಮಹಿಳೆಯರಿಗೆ ಅವಕಾಶ ನೀಡಬೇಕು ಎಂದು ಸುಪ್ರೀಂಕೋರ್ಟ್ ಪುನರ್ ಉಚ್ಚರಿಸಿದೆ. ಮುಂದಿನ ವರ್ಷದವರೆಗೂ ವಿನಾಯಿತಿ ಕೋರಿ ಕೇಂದ್ರ ಸರ್ಕಾರ ಮಾಡಿದ ಮನವಿಯನ್ನು ಸುಪ್ರೀಂಕೋರ್ಟ್ ತಿರಸ್ಕರಿಸಿದೆ.

    ಕೇಂದ್ರ ಸರ್ಕಾರ ಸಲ್ಲಿಸಿದ ಮೇಲ್ಮನವಿ ಅರ್ಜಿಯನ್ನು ವಿಚಾರಣೆ ನಡೆಸಿದ ನ್ಯಾ.ಸಂಜಯ್ ಕಿಶನ್ ಕೌಲ್ ನೇತೃತ್ವದ ದ್ವಿ ಸದಸ್ಯ ಪೀಠ, ಎನ್‍ಡಿಎ ಪರೀಕ್ಷೆಯಲ್ಲಿ ಮಹಿಳೆಯರ ಪ್ರವೇಶ ತಡೆಯಲು ಸಾಧ್ಯವಿಲ್ಲ ಎಂದು ಹೇಳಿತು. ತುರ್ತು ಪರಿಸ್ಥಿತಿಯನ್ನು ಎದುರಿಸಲು ಸಶಸ್ತ್ರ ಪಡೆಗಳು ಉತ್ತಮ ತರಬೇತಿ ಪಡೆದಿವೆ, ಅದನ್ನು ಈಗ ಬಳಕೆ ಮಾಡಬಹುದು ಆದ್ದರಿಂದ ಶೀಘ್ರದಲ್ಲೇ ಮಹಿಳೆಯರ ಪ್ರವೇಶವನ್ನು ಸುಲಭಗೊಳಿಸಲು ಶೀಘ್ರ ಪರಿಹಾರವನ್ನು ಕಂಡುಕೊಳ್ಳಬೇಕು ಎಂದು ಸೂಚಿಸಿತು. ಇದನ್ನೂ ಓದಿ: ಪಂಚೆ ಕಳಚಿದೆ ಅಂತ ಸಿದ್ದರಾಮಯ್ಯನವರ ಕಿವಿಯಲ್ಲಿ ಹೇಳಿದ್ರು ಡಿಕೆಶಿ!

    ಪರೀಕ್ಷಾರ್ಥಿಗಳ ಆಕಾಂಕ್ಷೆಗಳನ್ನು ಗಮನದಲ್ಲಿಟ್ಟುಕೊಂಡರೇ ಕೇಂದ್ರ ಸರ್ಕಾರದ ಮನವಿ ಒಪ್ಪಲು ಸಾಧ್ಯವಿಲ್ಲ, ಹೀಗಾಗಿ ಸುಪ್ರೀಂಕೋರ್ಟ್ ತನ್ನ ಆದೇಶವನ್ನು ಹಿಂದೆ ಪಡೆಯಲು ಸಾಧ್ಯವಿಲ್ಲ. ಎನ್‍ಡಿಎ ತನ್ನ ಪ್ರಯತ್ನಗಳನ್ನು ಆರಂಭಿಸಲು ಎಷ್ಟು ಮಹಿಳೆಯರು ಪ್ರವೇಶ ಪಡೆದುಕೊಳ್ಳುತ್ತಾರೆ ಎಂದು ನೋಡೋಣ, ಅವಶ್ಯಕತೆ ಬಿದ್ದರೇ ಮತ್ತೊಮ್ಮೆ ವಿಚಾರಣೆ ನಡೆಸಿ ಸೂಕ್ತ ದಾರಿ ಕಂಡುಕೊಳ್ಳೊಣ ಎಂದು ಪೀಠ ನಿರ್ದೇಶನ ನೀಡಿದೆ. ಇದನ್ನೂ ಓದಿ: ಗುಜರಾತ್ ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿ ಸ್ಥಾನಕ್ಕೆ ಕನ್ನಡಿಗ ನ್ಯಾ.ಅರವಿಂದ್ ಕುಮಾರ್ ಹೆಸರು ಶಿಫಾರಸು

    ಎನ್‍ಡಿಎ ಪರೀಕ್ಷೆಗಳಲ್ಲಿ ಮಹಿಳೆಯರಿಗೆ ಅವಕಾಶ ನೀಡಲು ಸುಪ್ರೀಂಕೋರ್ಟ್ ಈ ಹಿಂದೆ ಆದೇಶ ನೀಡಿತ್ತು. ಆದರೆ ಮಹಿಳೆಯರಿಗೆ ಅವಕಾಶ ನೀಡುವ ಕಾರಣ ಪಠ್ಯವೂ ಸೇರಿ ಪರೀಕ್ಷೆ ಮತ್ತು ತರಬೇತಿ ಮಾದರಿಯಲ್ಲಿ ಹಲವು ಬದಲಾವಣೆ ಮಾಡಿಕೊಳ್ಳಬೇಕಿದ್ದು ಇದಕ್ಕೆ ಕಾಲಾವಕಾಶ ಬೇಕಿದ್ದು ಮಹಿಳಾ ಅಭ್ಯರ್ಥಿಗಳು ಮುಂದಿನ ವರ್ಷದ ಮೇ ನಿಂದ ಪರೀಕ್ಷೆ ಬರೆಯಲು ಸರ್ಕಾರ ಸೂಚಿಸಿತ್ತು. ಇದನ್ನು ಪ್ರಶ್ನೆ ಮಾಡಿ ಹಲವು ಮಂದಿ ಸುಪ್ರೀಂಕೋರ್ಟ್‍ಗೆ ಅರ್ಜಿ ಸಲ್ಲಿಸಿದ್ದರು.

  • ಸ್ಟೇಡಿಯಂನಲ್ಲಿ ಮಹಿಳಾ ಪ್ರೇಕ್ಷಕರು ಇದ್ದಾರೆ, ಪ್ರಸಾರ ಮಾಡಬೇಡಿ – ಅಫ್ಘಾನಿಸ್ಥಾನದಲ್ಲಿ ಐಪಿಎಲ್ ಬ್ಯಾನ್

    ಸ್ಟೇಡಿಯಂನಲ್ಲಿ ಮಹಿಳಾ ಪ್ರೇಕ್ಷಕರು ಇದ್ದಾರೆ, ಪ್ರಸಾರ ಮಾಡಬೇಡಿ – ಅಫ್ಘಾನಿಸ್ಥಾನದಲ್ಲಿ ಐಪಿಎಲ್ ಬ್ಯಾನ್

    ಕಾಬೂಲ್: ತನ್ನ ವಿಚಿತ್ರ ನಿರ್ಧಾರಗಳಿಂದಲೇ ವಿಶ್ವದ ಕೆಂಗಣ್ಣಿಗೆ ಗುರಿಯಾಗಿರುವ ತಾಲಿಬಾನ್ ಆಡಳಿತ ಈಗ ಅಫ್ಘಾನಿಸ್ಥಾನದಲ್ಲಿ ಮತ್ತೊಂದು ಹಾಸ್ಯಾಸ್ಪದ ನಿರ್ಧಾರವನ್ನು ಕೈಗೊಂಡಿದೆ. ಕ್ರಿಕೆಟ್ ಸ್ಟೇಡಿಯಂನಲ್ಲಿ ಮಹಿಳಾ ಪ್ರೇಕ್ಷಕರು ಇದ್ದಾರೆ ಎಂಬ ಕಾರಣಕ್ಕೆ ಐಪಿಎಲ್ ಪ್ರಸಾರವನ್ನೇ ದೇಶದಲ್ಲಿ ನಿಷೇಧಿಸಿದೆ.

    ಅಫ್ಘಾನಿಸ್ಥಾನದಲ್ಲಿ ಹೊಸದಾಗಿ ಅಸ್ತಿತ್ವಕ್ಕೆ ಬಂದಿರುವ ತಾಲಿಬಾನ್ ಸರ್ಕಾರ ತನ್ನ ದೇಶದಲ್ಲಿ ಈ ಪ್ರತಿಷ್ಠಿತ ಕ್ರಿಕೆಟ್ ಟೂರ್ನಿಯ ಪ್ರಸಾರಕ್ಕೆ ನಿಷೇಧ ಹೇರಿದೆ. ಎಲ್ಲಾ ಮಾಧ್ಯಮಗಳಿಗೂ ಎಚ್ಚರಿಕೆ ರವಾನಿಸಿರುವ ತಾಲಿಬಾನ್ ಐಪಿಎಲ್‍ನ ಯುಎಇನಲ್ಲಿ ನಡೆಯುವ ಪಂದ್ಯಗಳನ್ನು ಪ್ರಸಾರ ಮಾಡದಂತೆ ಸೂಚಿಸಿದೆ. ಸ್ಟೇಡಿಯಂನಲ್ಲಿ ಮಹಿಳಾ ಪ್ರೇಕ್ಷಕರು ಇರುತ್ತಾರೆ ಎನ್ನುವ ಕಾರಣದಿಂದಾಗಿ ಈ ನಿರ್ಧಾರವನ್ನು ತಾಲಿಬಾನ್ ಸರ್ಕಾರ ತೆಗೆದುಕೊಂಡಿದೆ. ಇದನ್ನೂ ಓದಿ: ನನ್ನ ಹೆತ್ತ ತಾಯಿಯನ್ನ ಮತಾಂತರ ಮಾಡಿದ್ದಾರೆ: ಗೂಳಿಹಟ್ಟಿ ಶೇಖರ್

    ಹಾಸ್ಯಾಸ್ಪದ, ಅಫ್ಘಾನಿಸ್ಥಾನದಲ್ಲಿ ಇಂಡಿಯನ್ ಪ್ರೀಮಿಯರ್ ಲೀಗ್‍ನ ಪ್ರಸಾರವನ್ನು ತಾಲಿಬಾನ್ ನಿಷೇಧಿಸಿದೆ. ಕ್ರೀಡಾಂಗಣಗಳಲ್ಲಿ ಮಹಿಳಾ ಪ್ರೇಕ್ಷಕರ ಉಪಸ್ಥಿತಿ ಹಾಗೂ ಯುವತಿಯರು ನೃತ್ಯಗಳನ್ನು ಮಾಡುವ ಕಾರಣದಿಂದಾಗಿ ಅಫ್ಘಾನ್ ಮಾಧ್ಯಮಗಳು ಐಪಿಎಲ್ ಲೀಗ್‍ನ ಪ್ರಸಾರವನ್ನು ಮಾಡಬಾರದು ಎಂದು ತಾಲಿಬಾನ್ ಎಚ್ಚರಿಸಿದೆ ಎಂದು ಅಫ್ಘಾನಿಸ್ತಾನದ ಪತ್ರಕರ್ತ ಫಾವದ್ ಅಮನ್ ಟ್ವೀಟ್ ಮಾಡಿದ್ದಾರೆ. ಇದನ್ನೂ ಓದಿ: ಮಕ್ಕಳ ಮೇಲೆ ಕೋವ್ಯಾಕ್ಸಿನ್ ಲಸಿಕೆ ಪ್ರಯೋಗ ಅಂತ್ಯ – ಶೀಘ್ರದಲ್ಲಿ ಡಿಸಿಜಿಐಗೆ ವರದಿ ಸಲ್ಲಿಕೆ

    ಇಸ್ಲಾಂನ ಚೌಕಟ್ಟಿನೊಳಗೆ ಮಹಿಳಾ ಹಕ್ಕುಗಳನ್ನು ಗೌರವಿಸಲಾಗುವುದು ಎಂದು ಭಯೋತ್ಪಾದಕ ಗುಂಪು ಹೇಳುತ್ತಿದೆ. ಮನೋರಂಜನಾ ಕಾರ್ಯಕ್ರಮಗಳನ್ನು ನಿಷೇಧಿಸಿದ್ದು, ಮಾತ್ರವಲ್ಲದೇ ಮಹಿಳೆಯರನ್ನು ಕ್ರೀಡೆಗಳಲ್ಲಿ ಸಂಪೂರ್ಣವಾಗಿ ನಿಷೇಧಿಸಲಾಗಿದೆ.

     

    400 ಕ್ರೀಡೆಗಳಿಗೆ ಅವಕಾಶ ನೀಡುವುದಾಗಿ ತಾಲಿಬಾನ್ ಹೇಳಿತ್ತು. ಆದರೆ ಮಹಿಳೆಯರು ಆಡಬಹುದೇ ಎಂಬ ಪ್ರಶ್ನೆಗೆ ಖಚಿತ ಉತ್ತರ ನೀಡಲು ನಿರಾಕರಿಸಿದ್ದರು. ದಯವಿಟ್ಟು ಮಹಿಳೆಯರ ಬಗ್ಗೆ ಹೆಚ್ಚಿನ ಪ್ರಶ್ನೆಗಳನ್ನು ಕೇಳಬೇಡಿ ಎಂದು ಅಫ್ಘಾನಿಸ್ಥಾನದ ಹೊಸ ಕ್ರೀಡಾ ಮುಖ್ಯಸ್ಥ ಬಶೀರ್ ಅಹ್ಮದ್ ರುಸ್ತಮಜಾ ಕಳೆದ ವಾರವಷ್ಟೇ ಹೇಳಿದ್ದರು.

  • MSc ಓದಿ ಕಸ ಗುಡಿಸುತ್ತಿದ್ದ ಮಹಿಳೆಗೆ ಸರ್ಕಾರಿ ಕೆಲಸ ಕೊಟ್ಟ ಸಚಿವರು

    MSc ಓದಿ ಕಸ ಗುಡಿಸುತ್ತಿದ್ದ ಮಹಿಳೆಗೆ ಸರ್ಕಾರಿ ಕೆಲಸ ಕೊಟ್ಟ ಸಚಿವರು

    ಹೈದರಾಬಾದ್: ವಿಜ್ಞಾನದಲ್ಲಿ ಸ್ನಾತಕೋತ್ತರ ಪದವಿ ಪಡೆದಿದ್ದರೂ ಕಸ ಗುಡಿಸುವ ಕೆಲಸ ಮಾಡುತ್ತಿದ್ದ ಮಹಿಳೆಗೆ ತೆಲಂಗಾಣದ ಪೌರಾಡಳಿತ ಸಚಿವ ಕೆ.ಟಿ. ರಾಮರಾವ್ ಗ್ರೇಟರ್ ಹೈದರಾಬಾದ್ ಮುನ್ಸಿಪಲ್ ಕಾರ್ಪೋರೇಷನ್(ಜೆಎಚ್‍ಎಂಸಿ)ನಲ್ಲಿ ಹೊರಗುತ್ತಿಗೆ ಆಧಾರದ ಮೇಲೆ ಸಹಾಯಕ ಕೀಟಶಾಸ್ತ್ರಜ್ಞರ ಕೆಲಸ ನೀಡಿದ್ದಾರೆ.

    ಎಂಎಸ್‍ಸಿ(ಸಾವಯವ ರಸಾಯನ ಶಾಸ್ತ್ರ) ಮಾಡಿದ ಎ.ರಜನಿ, ಜಿಎಚ್‍ಎಂಸಿಯಲ್ಲಿ ಗುತ್ತಿಗೆ ಆಧಾರದಲ್ಲಿ ಕಸ ಗುಡಿಸುವ ಕೆಲಸ ಮಾಡುತ್ತಿದ್ದರು. ತೆಲುಗಿನ ದಿನಪತ್ರಿಕೆಯೊಂದರಲ್ಲಿ ಮಹಿಳೆ ಬಗ್ಗೆ ಪ್ರಕಟವಾದ ವರದಿಗೆ ಪ್ರತಿಕ್ರಿಯಿಸಿದ ಸಚಿವರು, ಆಕೆಯ ವಿದ್ಯಾರ್ಹತೆಗೆ ಅನುಗುಣವಾಗಿ ಕೆಲಸ ನೀಡಿದ್ದಾರೆ.

    hydrabad women

    ರಜನಿ ಅವರನ್ನು ಸಚಿವರ ಬಳಿ ನಗರಾಭಿವೃದ್ಧಿಯ ವಿಶೇಷ ಮುಖ್ಯ ಕಾರ್ಯದರ್ಶಿಯಾಗಿರುವ ಅರವಿಂದ್ ಕುಮಾರ್‌‌ರವರು ಕರೆದುಕೊಂಡು ಹೋಗಿ ಕೆಲಸ ಕೊಡಿಸಿರುವುದಾಗಿ ತಿಳಿಸಿದ್ದಾರೆ.  ರುಜುವಾತುಗಳನ್ನು ಪರಿಶೀಲಿಸಿದ ಬಳಿಕ ರಜನಿಗೆ ಕೆಲಸ ನೀಡಲು ಆದೇಶಿಸಲಾಯಿತು ಎಂದು ಅರವಿಂದ್ ಕುಮಾರ್‍ ತಮ್ಮ ಟ್ವಿಟ್ಟರ್ ಖಾತೆಯಲ್ಲಿ ತಿಳಿಸಿದ್ದಾರೆ. ಇಬ್ಬರು ಹೆಣ್ಣು ಮಕ್ಕಳಿರುವ ರಜನಿಗೆ ಸಚಿವರು ಕರೆದು ಕೀಟಶಾಸ್ತ್ರ ವಿಭಾಗದಲ್ಲಿ ಸಹಾಯಕ ಕೀಟಶಾಸ್ತ್ರಜ್ಞರಾಗಿ ಕೆಲಸ ಕೊಟ್ಟು, ಸಂಪೂರ್ಣ ಬೆಂಬಲ ನೀಡುವುದಾಗಿ ಭರವಸೆ ನೀಡಿದಾಗಭಾವುಕರಾಗಿರುವುದಾಗಿ ತಿಳಿಸಿದ್ದಾರೆ. ಇದನ್ನೂ ಓದಿ: ಹೆಮ್ಮೆಯಿಂದ ಬದುಕಿದ್ದು, ಅವಮಾನದಿಂದ ಬದುಕಲು ಸಾಧ್ಯವಾಗ್ತಿಲ್ಲ: ಗಿರಿ ಡೆತ್‍ನೋಟ್

    ವಾರಂಗಲ್ ಜಿಲ್ಲೆಯವರಾಗಿದ್ದು, ಕೃಷಿ ಕಾರ್ಮಿಕರ ಕುಟುಂಬದಲ್ಲಿ ಜನಿಸಿದ್ದಾರೆ. ಹಣಕಾಸಿ ಸಮಸ್ಯೆ ಇದ್ದರೂ ಕೂಡ ಅವರ ಪೋಷಕರ ಬೆಂಬಲದಿಂದಾಗಿ ತಮ್ಮ ವಿದ್ಯಾಭ್ಯಾಸವನು ಮುಂದುವರಿಸಿದರು ಮತ್ತು 2013ರಲ್ಲಿ ಪ್ರಥಮ ದರ್ಜೆ ಜೊತೆಗೆ ಎಂಎಸ್‍ಸಿ(ಸಾವಯವ ರಸಾಯನ ಶಾಸ್ತ್ರ)ಯಲ್ಲಿ ಉತ್ತೀರ್ಣರಾದರು. ಅಲ್ಲದೇ ಹೈದರಾಬಾದ್ ವಿಶ್ವವಿದ್ಯಾಲಯದಲ್ಲಿ ಪಿಎಚ್‍ಡಿ ಅರ್ಹತೆ ಪಡೆದರು. ಆದರೆ ಈ ಮಧ್ಯೆ ವಕೀಲರೊಬ್ಬರು ವಿವಾಹವಾಗಿ ಹೈದರಾಬಾದ್‍ಗೆ ಸ್ಥಳಾಂತರಗೊಂಡಿದ್ದಾಗಿ ತಿಳಿಸಿದ್ದಾರೆ.

    ರಜನಿಗೆ ಎರಡು ಮಕ್ಕಳ ತಾಯೊಯಾದ ನಂತರ ಕೂಡ ಉದ್ಯೋಗಕ್ಕಾಗಿ ಹಲವಾರು ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಹಾಜರಾಗುವುದನ್ನು ಮುಂದುವರಿಸಿದ್ದರು. ಆದರೆ ಅವರ ಪತಿ ಹೃದಯ ಸಮಸ್ಯೆಯಿಂದ ಹಾಸಿಗೆ ಹಿಡಿದಿದ್ದರಿಂದ ಕುಟುಂಬ ಇಕ್ಕಟ್ಟಿನ ಸ್ಥಿತಿಗೆ ಸಿಲುಕಿತು. ನಂತರ ಕುಟುಂಬವನ್ನು ನಡೆಸಲು ಆಕೆಯ ಅತ್ತೆ ಸೇರಿದಂತೆ ಐವರು ತರಕಾರಿ ಮಾರಾಟ ಮಾಡಲು ಆರಂಭಿಸಿದರು. ಇದರಿಂದ ಗಳಿಸಿದ ಹಣದಿಂದಾಗಿ ರಜನಿ ಜಿಎಚ್‍ಎಂಸಿಯಲ್ಲಿ ಗುತ್ತಿಗೆ ಆಧಾರದ ಮೇಲೆ ಕಸ ಗುಡಿಸುವ ಕೆಲಸ ಪಡೆದು ತಿಂಗಳಿಗೆ 10,000ರೂ, ಸಂಬಳ ತೆಗೆದುಕೊಳ್ಳುತ್ತಿರುವುದಾಗಿ ಹೇಳಿಕೊಂಡಿದ್ದಾರೆ. ಇದನ್ನೂ ಓದಿ:ಪಾಕ್ ಗೂಢಾಚಾರಿ ಜಿತೇಂದರ್ ಸಿಂಗ್ ಕಾಟನ್ ಪೇಟೆಯನ್ನೇ ಆಯ್ಕೆ ಮಾಡ್ಕೊಂಡಿದ್ದೇಕೆ..?

  • ಅಫ್ಘಾನ್‍ನಲ್ಲಿ ನಿಲ್ಲದ ತಾಲಿಬಾನ್ ಅಟ್ಟಹಾಸ- ಮಹಿಳೆಯರ ಹಕ್ಕುಗಳನ್ನು ಹತ್ತಿಕ್ಕಲು ಪ್ರಯತ್ನ

    ಅಫ್ಘಾನ್‍ನಲ್ಲಿ ನಿಲ್ಲದ ತಾಲಿಬಾನ್ ಅಟ್ಟಹಾಸ- ಮಹಿಳೆಯರ ಹಕ್ಕುಗಳನ್ನು ಹತ್ತಿಕ್ಕಲು ಪ್ರಯತ್ನ

    ಕಾಬೂಲ್: ಅಘ್ಘಾನಿಸ್ತಾನದಲ್ಲಿ ಮಹಿಳೆಯರ ಮೇಲಿನ ತಾಲಿಬಾನ್ ದಮನಕಾಂಡ ನಿಲ್ಲುತ್ತಿಲ್ಲ. ಈಗಾಗಲೇ ಮಹಿಳೆಯರ ಹಕ್ಕುಗಳನ್ನು ಹತ್ತಿಕ್ಕಿರುವ ತಾಲಿಬಾನ್ ಉಗ್ರರು, ಕಳೆದ ಸರ್ಕಾರದಲ್ಲಿದ್ದ ಮಹಿಳಾ ಸಚಿವಾಲಯದ ಕಟ್ಟಡಕ್ಕೆ ನುಗ್ಗಿ ಕೈಗೆ ಸಿಕ್ಕಿದ್ದನ್ನು ಧ್ವಂಸ ಮಾಡಿದ್ದಾರೆ.

    ತಾಲಿಬಾನಿಗಳು ಮಹಿಳಾ ಸಚಿವಾಲಯಕ್ಕೆ ನುಗ್ಗಿ ಅಲ್ಲಿ ಕೆಲಸ ಮಾಡುತ್ತಿದ್ದ ಸಿಬ್ಬಂದಿಯನ್ನು ಹೊರಹಾಕಿದ್ದಾರೆ. ತಾಲಿಬಾನ್ ಸರ್ಕಾರ ಹೊಸದಾಗಿ ರಚಿಸಿದ್ದ ಧರ್ಮಪ್ರಚಾರ ಇಲಾಖೆಯ ಕೆಲಸವನ್ನು ಅಲ್ಲಿ ಶುರು ಮಾಡಿದ್ದಾರೆ. ಷರಿಯಾ ಜಾರಿ ಈ ಇಲಾಖೆಯ ಜವಾಬ್ದಾರಿಯಾಗಿದೆ ಎಂಬುದು ಗಮನಿಸಬೇಕಾದ ವಿಚಾರವಾಗಿದೆ. ದೇಶದ ಮಹಿಳಾ ಸಚಿವಾಲಯವನ್ನು ತಾಲಿಬಾನ್‍ನ ನೈತಿಕ ಪೊಲೀಸ್‍  ಗಿರಿಗೆ  ಬದಲಿಸುವುದಕ್ಕೆ ಸಹಿ ಹಾಕಿದೆ ಎಂದು ವರದಿಯಾಗಿದೆ. ಅಲ್ಲದೆ ಇಲಾಖೆಯ ಮಹಿಳಾ ಉದ್ಯೋಗಿಗಳನ್ನು ಕಟ್ಟಡದಿಂದ ಹೊರಗೆ ಹಾಕಲಾಗಿದೆ. ಮಹಿಳಾ ಸಚಿವಾಲಯವನ್ನು ಪ್ರಾರ್ಥನೆ, ಮಾರ್ಗದರ್ಶನ ಹಾಗೂ ಸದ್ಗುಣಗಳ ಪ್ರಚಾರ, ದುರಾಚಾರ ತಡೆ ಸಚಿವಾಲಯ ಎಂದು ಬದಲಿಸಲಾಗಿದೆ. ಇದನ್ನೂ ಓದಿ: ಮಹಿಳಾ ಸಚಿವಾಲಯವನ್ನೇ ತೆಗೆದ ತಾಲಿಬಾನ್ ಸರ್ಕಾರ

    ಈ ಮಧ್ಯೆ, ಕಾಬೂಲ್ ಏರ್ ಪೋರ್ಟ್ ಮೇಲೆ ಆತ್ಮಾಹುತಿ ದಾಳಿ ನಡೆಸಿದ ಲೋಗ್ರಿಯನ್ನು ದೆಹಲಿಯಲ್ಲಿ ಐದು ವರ್ಷಗಳ ಹಿಂದೆ ಬಂಧಿಸಿ, ಅಫ್ಘನ್ ವಶಕ್ಕೆ ಒಪ್ಪಿಸಿತ್ತು ಎಂಬ ವಿಚಾರ ಬಯಲಾಗಿದೆ. ಶ್ರೀಮಂತ ವರ್ತಕನ ಮಗನಾಗಿದ್ದ ಲೋಗ್ರಿ, ದೆಹಲಿಯಲ್ಲಿ ಸ್ಫೋಟಕ್ಕೆ ಸಂಚು ರೂಪಿಸಿದ್ದ ಎನ್ನಲಾಗಿದೆ. ಇದನ್ನೂ ಓದಿ: ತಾಲಿಬಾನ್ ಸರ್ಕಾರ ವಿರುದ್ಧ ಸಿಡಿದ ಅಫ್ಘಾನ್ ಮಹಿಳೆಯರು

     

  • ವಾರಕ್ಕೊಮ್ಮೆ ಕುಡಿತಿದ್ದೋರು ಇನ್ಮೇಲೆ ದಿನಾ ಕುಡಿಯಲು ಆರಂಭಿಸ್ತಾರೆ – ಮಹಿಳೆಯರ ಪ್ರತಿಭಟನೆ

    ವಾರಕ್ಕೊಮ್ಮೆ ಕುಡಿತಿದ್ದೋರು ಇನ್ಮೇಲೆ ದಿನಾ ಕುಡಿಯಲು ಆರಂಭಿಸ್ತಾರೆ – ಮಹಿಳೆಯರ ಪ್ರತಿಭಟನೆ

    ಚಿಕ್ಕಮಗಳೂರು: ಗಂಡಂದಿರು ವಾರಕ್ಕೆ ಒಮ್ಮೆ ಕುಡಿಯುತ್ತಿದ್ದರು, ಈಗ ದಿನ ಕುಡಿಯಲು ಆರಂಭಿಸುತ್ತಾರೆ. ಹಾಗಾಗಿ ನಮ್ಮ ಹಳ್ಳಿಗೆ ಬಾರ್ ಬೇಡವೇ ಬೇಡ ಎಂದು ಮಹಿಳೆಯರು ಬಾರ್ ಮುಂದೆ ಪ್ರತಿಭಟನೆ ನಡೆಸಿರೋ ಘಟನೆ ಜಿಲ್ಲೆಯ ಕಡೂರು ತಾಲೂಕಿನ ಎಮ್ಮೆದೊಡ್ಡಿ ಸಮೀಪದ ಮುಸ್ಲಾಪುರ ಗ್ರಾಮದಲ್ಲಿ ನಡೆದಿದೆ.

    ಈ ಬಾರ್ ಶುಕ್ರವಾರ ತಾನೇ ಓಪನ್ ಆಗಿತ್ತು. ಬಾರಿನಿಂದ ಮುಂದಾಗೋ ಅನಾಹುತ, ತೊಂದರೆಯನ್ನ ಮನಗಂಡ ಹಳ್ಳಿ ಮಹಿಳೆಯರು ಒಂದೇ ದಿನಕ್ಕೆ ಬಾರ್ ಮುಂದೆ ಧರಣಿ ನಡೆಸಿ ನಮ್ಮ ಹಳ್ಳಿಗೆ ಬಾರ್ ಬೇಡವೇ ಬೇಡ ಎಂದು ಆಗ್ರಹಿಸಿದ್ದಾರೆ.

    ಎಮ್ಮೆದೊಡ್ಡಿಯ ಮುಸ್ಲಾಪುರ ಸುತ್ತಮುತ್ತ ಯಾವುದೇ ಬಾರ್ ಇರಲಿಲ್ಲ. ಹಾಗಾಗಿ ನಿನ್ನೆ ತಾನೇ ನೂತನ ಬಾರ್ ಓಪನ್ ಆಗಿತ್ತು. ಸಾಲದ್ದಕ್ಕೆ ಅದೇ ಮಾರ್ಗದಲ್ಲಿ ಶಾಲೆ ಬೇರೆ ಇದೆ. ಕುಡಿದು ದಾರಿಯಲ್ಲಿ ಹೋಗೋ-ಬರೋ ಹೆಣ್ಮಕ್ಕಳು, ಹೆಂಗಸರಿಗೆ ಕಿಟಲೆ ಮಾಡುವವರ ಸಂಖ್ಯೆಯೂ ಹೆಚ್ಚಾಗುತ್ತೆ. ಅಷ್ಟೆ ಅಲ್ಲದೆ ಈ ಭಾಗದಲ್ಲಿ ಇರುವವರೆಲ್ಲಾ ಕೂಲಿ ಕಾರ್ಮಿಕರು. ಅವರು ಇಷ್ಟು ದಿನ ದುಡಿದು ಜೀವನ ಮಾಡುತ್ತಿದ್ದರು ಎಂದಿದ್ದಾರೆ. ಇದನ್ನೂ ಓದಿ: ದೇಶದಲ್ಲಿ ನೀಡಿದ ಲಸಿಕೆಗಳ ಪೈಕಿ ಶೇ.11 ರಷ್ಟು ಪಾಲು ರಾಜ್ಯದ್ದು: ಡಾ.ಕೆ.ಸುಧಾಕರ್

    ಸುತ್ತಮುತ್ತ ಬಾರ್ ಇಲ್ಲದ ಕಾರಣ ವಾರಕ್ಕೊಮ್ಮೆ ಸಂತೆಗೆ ಹೋದಾಗ ಕುಡಿದು ಬರುತ್ತಿದ್ದರು. ಈಗ ಇಲ್ಲೇ ಬಾರ್ ಮಾಡಿದ್ದಾರೆ. ಇನ್ನು ಮುಂದೆ ದಿನಾ ಕುಡಿಯಲು ಆರಂಭಿಸುತ್ತಾರೆ. ದುಡಿದದ್ದನ್ನೆಲ್ಲಾ ಬಾರಿಗೆ ಹಾಕುತ್ತಾರೆ. ಆಗ ಹೆಂಡತಿ-ಮಕ್ಕಳ ಕಥೆ ಏನೆಂದು ಪ್ರಶ್ನಿಸಿರೋ ಈ ಬಾರಿನಿಂದ ಸುತ್ತಮುತ್ತಲಿನ 28 ಹಳ್ಳಿಗೆ ತೊಂದರೆಯಾಗಲಿದೆ. ಹಾಗಾಗಿ ನಮ್ಮ ಹಳ್ಳಿಗೆ ಬಾರ್ ಬೇಡವೇ ಬೇಡ ಎಂದು ಮಹಿಳೆಯರು-ಪುರುಷರು ಬಾರ್ ಮುಂದೆ ಪ್ರತಿಭಟನೆ ನಡೆಸಿದ್ದಾರೆ. ಇದನ್ನೂ ಓದಿ: ಲಸಿಕೆಯಲ್ಲಿ ಭಾರತದ ವಿಶ್ವ ದಾಖಲೆ ನೋಡಿ ರಾಜಕೀಯ ಪಕ್ಷವೊಂದಕ್ಕೆ ಜ್ವರ ಬಂದಿದೆ: ಮೋದಿ

  • ತಾಲಿಬಾನ್ ಸರ್ಕಾರ ವಿರುದ್ಧ ಸಿಡಿದ ಅಫ್ಘಾನ್ ಮಹಿಳೆಯರು

    ತಾಲಿಬಾನ್ ಸರ್ಕಾರ ವಿರುದ್ಧ ಸಿಡಿದ ಅಫ್ಘಾನ್ ಮಹಿಳೆಯರು

    ಕಾಬೂಲ್: ತಾಲಿಬಾನ್ ಅಫ್ಘಾನಿಸ್ತಾನವನ್ನು ವಶಪಡಿಸಿಕೊಂಡ ನಂತರ ಮಹಿಳೆಯರಿಗೆ ಅಪಾಯಕಾರಿ ದೇಶವಾಗಿದೆ. ತಾಲಿಬಾನ್ ಆಡಳಿತದಲ್ಲಿ ಮಹಿಳೆಯರು ಅನೇಕ ಕ್ರೂರ ನಿರ್ಬಂಧಗಳನ್ನು ಎದುರಿಸುತ್ತಿದ್ದಾರೆ.

    ತಾಲಿಬಾನ್ ಸರ್ಕಾರ ಅಫ್ಘಾನಿಸ್ತಾನದಲ್ಲಿರುವ ಮಹಿಳೆಯರಿಗೆ ಬುರ್ಕಾ ಧರಿಸುವಂತೆ ಆದೇಶ ಹೊರಡಿಸಿದೆ. ಅಲ್ಲದೇ ಖಾಸಗಿ ವಿಶ್ವವಿದ್ಯಾನಿಲಯದಲ್ಲಿ ವ್ಯಾಸಂಗ ಮಾಡುವವರು ಮುಖ ಕಾಣದಂತೆ ವಸ್ತ್ರ ಧರಿಸುವುದನ್ನು ಕಡ್ಡಾಯಗೊಳಿಸಿದೆ. ಇದನ್ನೂ ಓದಿ:  ಇಎಸ್‍ಐಯಿಂದ ಹೃದ್ರೋಗ ವಿಭಾಗದ ಸ್ಥಳಾಂತರ ನಿರ್ಧಾರವನ್ನು ತಕ್ಷಣವೇ ಕೈಬಿಡಬೇಕು: ಬಿ.ಟಿ.ನಾಗಣ್ಣ

    ಈ ನಿಯಮವನ್ನು ವಿರೋಧಿಸಿ ಮಹಿಳೆಯರು ಅಫ್ಘಾನಿಸ್ತಾನದ ಸಾಂಪ್ರದಾಯಿಕ ಉಡುಪು ಧರಿಸಿ ಫೋಟೋ ಕ್ಲಿಕ್ಕಿಸಿಕೊಂಡು ಪೋಸ್ಟ್ ಮಾಡುವ ಮೂಲಕ ಆನ್‍ಲೈನ್‍ನಲ್ಲಿ ಅಭಿಯಾನ ಆರಂಭಿಸಿದ್ದಾರೆ. #DoNotTouchMyClothes #AfghanistanCulture ಎಂಬ ಹ್ಯಾಶ್ ಟ್ಯಾಗ್ ಮೂಲಕ ತಮ್ಮ ಸಂಸ್ಕೃತಿಯ ಶ್ರೀಮಂತಿಕೆಯನ್ನು ಮರೆಸುತ್ತಿದ್ದಾರೆ. ಇದನ್ನೂ ಓದಿ:  ಕೊಯ್ನಾ ಜಲಾಶಯದಿಂದ 40 ಸಾವಿರ ಕ್ಯೂಸೆಕ್ ನೀರು ಬಿಡುಗಡೆ – ಕೃಷ್ಣಾ ನದಿ ತೀರದಲ್ಲಿ ಪ್ರವಾಹದ ಆತಂಕ

    ಸದ್ಯ ಈ ನಿಯಮಗಳನ್ನು ವಿರೋಧಿಸಿ, ಈ ಅಭಿಯಾನಕ್ಕೆ ದಿನೇ ದಿನೇ ಹಲವಾರು ಮಹಿಳೆಯರು ಕೈ ಜೋಡಿಸುತ್ತಿದ್ದಾರೆ ಮತ್ತು ಸಂಪ್ರದಾಯಿಕ ಕಪ್ಪು ಬುರ್ಖಾಕ್ಕೆ ಅಫ್ಘಾನಿಸ್ತಾನದಲ್ಲಿ ವ್ಯಾಪಕ ಖಂಡನೆ ವ್ಯಕ್ತವಾಗುತ್ತಿದೆ.

  • ಯಾದಗರಿಯಲ್ಲಿ ಮಹಿಳೆಯನ್ನು ನಗ್ನಗೊಳಿಸಿ ಥಳಿಸಿದ ನಾಲ್ವರು ಅರೆಸ್ಟ್

    ಯಾದಗರಿಯಲ್ಲಿ ಮಹಿಳೆಯನ್ನು ನಗ್ನಗೊಳಿಸಿ ಥಳಿಸಿದ ನಾಲ್ವರು ಅರೆಸ್ಟ್

    ಯಾದಗಿರಿ: ಜಿಲ್ಲೆಯಲ್ಲಿ ನಡೆದ ಮಹಿಳೆಯನ್ನು ನಗ್ನಗೊಳಿಸಿ ಥಳಿಸಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಶಹಾಪುರ ಪೊಲೀಸರು ನಾಲ್ಕು ಮಂದಿಯನ್ನು ಬಂಧಿಸಿದ್ದಾರೆ.

    ಪ್ರಕರಣದ ಬಗ್ಗೆ ಮಾಧ್ಯಮಗಳೊಂದಿಗೆ ಮಾತನಾಡಿದ ಯಾದಗಿರಿ ಜಿಲ್ಲೆಯ ಎಸ್‍ಪಿ ವೇದಮೂರ್ತಿ, ಇದು 8 ರಿಂದ 9 ತಿಂಗಳ ಹಿಂದೆ ನಡೆದಿರುವ ಘಟನೆಯಾಗಿದ್ದು, ಈಗಾಗಲೇ ನಾಲ್ವರನ್ನು ಬಂಧಿಸಲಾಗಿದೆ. ಪ್ರಕರಣ ಸಂಬಂಧ 3 ತಂಡಗಳಿಂದ ತನಿಖೆ ನಡೆಯುತ್ತಿದೆ. ಇದು ಹಳೆಯ ವಿಡಿಯೋ. ಇದು ಶಹಾಪೂರದ ಹೊರ ವಲಯದಲ್ಲಿ ಈ ಘಟನೆ ನಡೆದಿದೆ. ಈ ವಿಷಯವನ್ನು ಗಂಭೀರವಾಗಿ ತೆಗೆದುಕೊಂಡಿದ್ದೇವೆ. ಈ ಪ್ರಕರಣದಲ್ಲಿ ಭಾಗಿಯಾದವರನ್ನು ಈಗಾಗಲೇ ವಶಕ್ಕೆ ಪಡೆದು ವಿಚಾರಣೆ ನಡೆಸಲಾಗುತ್ತಿದೆ ಎಂದು ಮಾಹಿತಿ ನೀಡಿದರು. ಇದನ್ನೂ ಓದಿ: ಮಹಿಳೆಯನ್ನು ನಗ್ನ ಮಾಡಿ ಪೈಶಾಚಿಕ ಹಲ್ಲೆ ನಡೆಸಿದ ಕಿರಾತಕರು


    ಪ್ರಕರಣಕ್ಕೆ ಬಿಗ್ ಟ್ವಿಸ್ಟ್:

    ಘಟನೆ ನಡೆದಾಗ ಇದ್ದಂತಹ ಓರ್ವ ಆರೋಪಿ ಪಿಎಸ್‍ಐ ವಾಹನ ಚಾಲಕನಾಗಿ ಕರ್ತವ್ಯ ನಿರ್ವಹಿಸಿದ್ದ, ಕಳೆದ ಒಂದು ವರ್ಷದ ಹಿಂದೆ ಪೊಲೀಸ್ ಜೀಪ್ ಡ್ರೈವರ್ ಆಗಿದ್ದ ಆರೋಪಿ ಪ್ರಸ್ತುತ ಕೆಲಸ ಬಿಟ್ಟಿದ್ದಾನೆ. ಈತನನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿದ ಬಳಿಕ ಉಳಿದವರನ್ನು ಪತ್ತೆ ಮಾಡಿದ್ದಾರೆ. ಅದಲ್ಲದೆ ಶಹಾಪುರ ನಗರದಲ್ಲೇ ವಾಸವಿದ್ದ ಹಲ್ಲೆಗೊಳಗಾದ ಮಹಿಳೆಯನ್ನು ಕೂಡ ಪೊಲೀಸರು ಪತ್ತೆ ಮಾಡಿದ್ದು, ವಿಚಾರಣೆ ಬಳಿಕ ಪ್ರಕರಣದ ಅಸಲಿಯತ್ತು ಗೊತ್ತಾಗಲಿದೆ. ಇದನ್ನೂ ಓದಿ: ವೈಟ್ ಬೋರ್ಡ್ ವಾಹನದಲ್ಲಿ ಪ್ರಯಾಣಿಕರನ್ನು ಸಾಗಿಸೋದು ಅಕ್ಷಮ್ಯ ಅಪರಾಧ: ಸುಧಾಕರ್

  • ಮಹಿಳೆಯನ್ನು ನಗ್ನ ಮಾಡಿ ಪೈಶಾಚಿಕ ಹಲ್ಲೆ ನಡೆಸಿದ ಕಿರಾತಕರು

    ಮಹಿಳೆಯನ್ನು ನಗ್ನ ಮಾಡಿ ಪೈಶಾಚಿಕ ಹಲ್ಲೆ ನಡೆಸಿದ ಕಿರಾತಕರು

    ಯಾದಗಿರಿ: ಮಹಿಳೆಯನ್ನು ನಗ್ನ ಗೊಳಿಸಿ ಪೈಶಾಚಿಕ ಹಲ್ಲೆ ಮಾಡಿ ಕಬ್ಬಿನ ಜಲ್ಲೆಯಿಂದ ಥಳಿಸಿ ಅಂಗಾಂಗ ಮುಟ್ಟಿ ವಿಕೃತ ವರ್ತನೆ ಮಾಡಿರುವ ಅಮಾನವೀಯ ಘಟನೆಯೊಂದು ಜಿಲ್ಲೆಯಲ್ಲಿ ವರದಿಯಾಗಿದೆ.

    ಯಾದಗಿರಿ-ಶಹಾಪುರ ರಾಜ್ಯ ಹೆದ್ದಾರಿಯಲ್ಲಿ ನಡೆದಿದೆ ಎನ್ನಲಾಗುತ್ತಿರುವ ಈ ಘನೆಯಲ್ಲಿ ಐದಾರು ಮಂದಿಯ ಕಿರಾತಕರ ಗುಂಪು ಮಹಿಳೆಯನ್ನು ನಗ್ನ ಮಾಡಿ ಅಂಗಾಂಗಗಳನ್ನು ಮುಟ್ಟಿ ಚಿತ್ರಹಿಂಸೆ ಕೊಟ್ಟು ವೀಡಿಯೋ ರೆಕಾರ್ಡ್ ಮಾಡಲಾಗಿದೆ ಎಂದು ಎನ್ನಲಾಗುತ್ತಿದೆ. ಇದನ್ನೂ ಓದಿ: ಗಣೇಶ ಹಬ್ಬದಲ್ಲಿ ನಿರಾಶ್ರಿತರೊಂದಿಗೆ ಕುಣಿದು ಕುಪ್ಪಳಿಸಿದ ತಹಶೀಲ್ದಾರ್

    ವೀಡಿಯೋವನ್ನು ಗಮನಿಸುತ್ತಿದ್ದಂತೆ ಹನಿಟ್ರ್ಯಾಪ್ ಪ್ರಕರಣದಲ್ಲಿ ಮಹಿಳೆ ಸಿಲುಕಿರುವ ಶಂಕೆ ವ್ಯಕ್ತವಾಗುತ್ತಿದ್ದು, ಯುವಕನೋರ್ವ ನನ್ನಿಂದ 10-15 ಸಾವಿರ ಹಣ ಪಡೆದಿದ್ದಾಳೆ ಎಂದು ಸಿಟ್ಟಿನಿಂದ ಹೊಡೆಯುತ್ತಿದ್ದಾನೆ. ಮಹಿಳೆ ಕೈಮುಗಿದು ಕಣ್ಣೀರು ಹಾಕಿದ್ರು ಬಿಡದೆ ನಗ್ನಗೊಳಿಸಿ ಪಾಪಿಗಳು ಆಕೆಯನ್ನು ಹೊಡೆಯುವ ನೆಪದಲ್ಲಿ ಅಂಗಾಂಗಗಳನ್ನ ಮುಟ್ಟಿ ಚಿತ್ರಹಿಂಸೆ ನೀಡಿದ್ದಾರೆ. ವಾಹನ ಒಂದರ ಹೆಡ್ ಲೈಟ್ ಹಾಗೂ ಮೊಬೈಲ್ ಟಾರ್ಚ್ ಹಾಕಿ ಹಲ್ಲೆ ಮಾಡಿದ್ದು, ಘಟನೆ ಹೊರ ಹಾಕಿದರೆ ಸುಟ್ಟು ಹಾಕುವುದಾಗಿ ಬೆದರಿಕೆ ಹಾಕಿದ್ದಾರೆ. ಘಟನೆ ಬಗ್ಗೆ ಜಿಲ್ಲೆಯ ಯಾವುದೇ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿಲ್ಲ ಎಂದು ವರದಿಯಾಗಿದೆ.

  • ಮುಂಬೈ ಅತ್ಯಾಚಾರ ಪ್ರಕರಣ- ಚಿಕಿತ್ಸೆ ಫಲಿಸದೆ ಮೃತಪಟ್ಟ ಸಂತ್ರಸ್ತೆ

    ಮುಂಬೈ ಅತ್ಯಾಚಾರ ಪ್ರಕರಣ- ಚಿಕಿತ್ಸೆ ಫಲಿಸದೆ ಮೃತಪಟ್ಟ ಸಂತ್ರಸ್ತೆ

    ಮುಂಬೈ: ರಸ್ತೆ ಬದಿಯಲ್ಲಿ ನಿಲ್ಲಿಸಿದ್ದ ಟೆಂಪೋದಲ್ಲಿ ಮಹಿಳೆಯನ್ನು ಅತ್ಯಾಚಾರ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಅತ್ಯಾಚಾರಕ್ಕೊಳಗಾದ ಸಂತ್ರಸ್ತೆ ಚಿಕಿತ್ಸೆ ಫಲಿಸದೆ ಮೃತಪಟ್ಟಿದ್ದಾರೆ.

    ನಿರ್ಭಯಾ ಮಾದರಿಯ ಪ್ರಕರಣವೊಂದು ಮತ್ತೆ ವಾಣಿಜ್ಯ ನಗರಿ ಮುಂಬೈನಲ್ಲಿ ನಡೆದು ಹೋಗಿದೆ. ಮುಂಬೈನ ಸಾಕಿನಾಕಾ ಪ್ರದೇಶದ ಕೈರಾನಿ ರಸ್ತೆಯಲ್ಲಿ ವ್ಯಕ್ತಿಯೊಬ್ಬ ಮಹಿಳೆಗೆ ಚಿತ್ರ ಹಿಂಸೆ ನೀಡಿ, ಬಳಿಕ ಆಕೆಯನ್ನು ಅತ್ಯಾಚಾರ ಎಸಗಿದ್ದಾನೆ. ಕೈರಾನಿ ರಸ್ತೆಯಲ್ಲಿ ಮಹಿಳೆಯೊಬ್ಬರ ಮೇಲೆ ವ್ಯಕ್ತಿಯೊಬ್ಬ ಹಲ್ಲೆ ನಡೆಸುತ್ತಿದ್ದಾನೆ ಎಂದು ಸ್ಥಳೀಯರು ಪೊಲೀಸರಿಗೆ ಫೋನ್ ಮಾಡಿದ್ದಾರೆ. ಕೂಡಲೇ ಪೊಲೀಸರು ಸ್ಥಳಕ್ಕೆ ದೌಡಾಯಿಸುವಷ್ಟರಲ್ಲಿ ಕೃತ್ಯ ನಡೆದಿದೆ. ಆರೋಪಿಯು ಮಹಿಳೆಗೆ ಥಳಿಸಿ, ಹಲ್ಲೆ ಮಾಡಿದ್ದ. ರಕ್ತದ ಮಡುವಿನಲ್ಲಿ ಬಿದ್ದಿದ್ದ ಮಹಿಳೆಯನ್ನು ಪೊಲೀಸರು ರಾಜವಾಡಿ ಸರ್ಕಾರಿ ಆಸ್ಪತ್ರೆಗೆ ದಾಖಲಿಸಿದ್ದರು. ಆದರೆ ಇದೀಗ 33 ಗಂಟೆಗಳ ನರಳಾಟದ ಬಳಿಕ ಸಂತ್ರಸ್ತೆ ಕೊನೆಯುಸಿರೆಳೆದಿದ್ದಾರೆ. ಇದನ್ನೂ ಓದಿ: ಟೆಂಪೋದಲ್ಲೇ ಮಹಿಳೆಯ ಅತ್ಯಾಚಾರವೆಸಗಿದ ಕಾಮುಕ!

    ಘಟನೆ ನಡೆದ ಕೆಲವೇ ಗಂಟೆಗಳಲ್ಲಿ ಮುಂಬೈ ಪೊಲೀಸರು ಮೋಹನ್ ಚೌಹಾಟ್ ಎಂಬ ಆರೋಪಿಯನ್ನು ಬಂಧಿಸಿದ್ದು, ಆತನನನ್ನು ಹೆಚ್ಚಿನ ವಿಚಾರಣೆಗೆ ಒಳಪಡಿಸಿದ್ದಾರೆ. ಇದನ್ನೂ ಓದಿ: ಹಿಂದೂ ಹುಡುಗಿಯರ ತಂಟೆಗೆ ಬಂದ್ರೆ ಸುಮ್ನಿರಲ್ಲ: ಗುಜರಾತ್ ಸಿಎಂ