Tag: women

  • ಬೆಂಗಳೂರು ನಡೆಯುತ್ತಿರುವುದೇ ನಮ್ಮಿಂದ: ಹೊರ ರಾಜ್ಯದ ಯುವತಿ ಹೇಳಿಕೆ ವೀಡಿಯೋ ವೈರಲ್‌

    ಬೆಂಗಳೂರು ನಡೆಯುತ್ತಿರುವುದೇ ನಮ್ಮಿಂದ: ಹೊರ ರಾಜ್ಯದ ಯುವತಿ ಹೇಳಿಕೆ ವೀಡಿಯೋ ವೈರಲ್‌

    – ಯುವತಿ ಹೇಳಿಕೆಗೆ ಕನ್ನಡಿಗರ ಆಕ್ರೋಶ

    ಬೆಂಗಳೂರು: ಬೆಂಗಳೂರು (Bengaluru) ನಡೆಯುತ್ತಿರುವುದೇ ನಮ್ಮಿಂದ ಹೊರ ರಾಜ್ಯದ ಯುವತಿಯೊಬ್ಬಳು ನಾಲಿಗೆ ಹರಿಬಿಟ್ಟಿರುವ ವೀಡಿಯೋ ವೈರಲ್‌ ಆಗಿದ್ದು, ಕನ್ನಡಿಗರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

    ಕನ್ನಡಿಗರನ್ನ ಕೆರಳುವಂತೆ ಉತ್ತರ ಭಾರತೀಯ ಮೂಲದ ಯುವತಿಯ ಹೇಳಿಕೆ ನೀಡಿದ್ದಾಳೆ. ನಿನ್ನೆಯಷ್ಟೇ ಓಲಾ ಆಟೋ ಬುಕ್ಕಿಂಗ್ ಸಂಬಂಧ ಆಟೋ ಚಾಲಕ ಮತ್ತು ಯುವತಿಯ ನಡುವೆ ವಾಗ್ವಾದ ಆಗಿತ್ತು. ಬಳಿಕ ಆಟೋ ಚಾಲಕನ ವಿರುದ್ಧ ಕ್ರಮಕ್ಕೆ ಸಾಮಾಜಿಕ ಜಾಲತಾಣದಲ್ಲಿ ಒತ್ತಾಯ ಕೂಡ ಮಾಡಲಾಗಿತ್ತು. ಅದರಂತೆ ಚಾಲಕನ ವಿರುದ್ಧ ಪೊಲೀಸರ ಕ್ರಮ ಕೂಡ ಆಗಿತ್ತು. ಇದನ್ನೂ ಓದಿ: ರಸ್ತೆ ದಾಟುತ್ತಿದ ಮಹಿಳೆಗೆ ಆಟೋ ಡಿಕ್ಕಿ – ಸ್ಥಿತಿ ಗಂಭೀರ

    ಈ ಘಟನೆಯನ್ನ ಖಂಡಿಸುವ ಭರದಲ್ಲಿ ಬೆಂಗಳೂರನ ಸ್ಥಳೀಯರ ವಿರುದ್ಧ ಅವಾಚ್ಯ ಶಬ್ದ ಬಳಸಿ ಯುವತಿ ಮಾತನಾಡಿದ್ದಾಳೆ. ‘ಬೇರೆ ಕಡೆಯಿಂದ ಬಂದು ಇಲ್ಲಿ ಕೆಲಸ ಮಾಡುತ್ತಿರುವ ನಮ್ಮಂಥವರಿಂದಲೇ ಇಡೀ ಬೆಂಗಳೂರು ಅಭಿವೃದ್ಧಿಯಾಗುತ್ತಿದೆ. ನಾವೆಲ್ಲಾ ತೆರಿಗೆ ಕಟ್ಟುತ್ತಿದ್ದೇವೆ. ಇವರಿಗೆ ನಾವು ಬಾಡಿಗೆ ಕಟ್ಟುತ್ತಿದ್ದೇವೆ. ಇಡೀ ಬೆಂಗಳೂರಿನ ಆರ್ಥಿಕತೆ ನಡೆಯುತ್ತಿರುವುದೇ ನಮ್ಮಿಂದ ಎಂದು ಯುವತಿ ವೀಡಿಯೋದಲ್ಲಿ ಹೇಳಿಕೊಂಡಿದ್ದಾಳೆ.

    ಕರ್ಮ ಇವರನ್ನು ಸುಮ್ಮನೆ ಬಿಡುವುದಿಲ್ಲ ಎಂದು ಅವಾಚ್ಯ ಶಬ್ದಗಳಿಂದ ಯುವತಿ ನಿಂದಿಸಿದ್ದಾಳೆ. ಸದ್ಯ ಯುವತಿಯ ಈ ವೀಡಿಯೋ ವೈರಲ್ ಆಗಿದೆ. ಆಕ್ರೋಶ ವ್ಯಕ್ತವಾದ ಕಾರಣ ವೀಡಿಯೋ ಡಿಲೀಟ್ ಮಾಡಿ ಕ್ಷಮೆ ಕೇಳಿದ್ದಾಳೆ. ಇದನ್ನೂ ಓದಿ: ಹರಿಯಾಣ ಚುನಾವಣೆ ಸ್ಪರ್ಧೆಗೆ ವಿನೇಶ್‌ ಫೋಗಟ್‌ಗೆ ಕಾಂಗ್ರೆಸ್‌ ಟಿಕೆಟ್‌

  • ರಾಜಸ್ಥಾನ ಪೊಲೀಸ್‌ ಅಧೀನ ಸೇವೆಗಳಲ್ಲಿ ಮಹಿಳೆಯರಿಗೆ 33% ಮೀಸಲಾತಿ

    ರಾಜಸ್ಥಾನ ಪೊಲೀಸ್‌ ಅಧೀನ ಸೇವೆಗಳಲ್ಲಿ ಮಹಿಳೆಯರಿಗೆ 33% ಮೀಸಲಾತಿ

    ಜೈಪುರ: ರಾಜಸ್ಥಾನ ಪೊಲೀಸ್ ಅಧೀನ ಸೇವೆಗಳಲ್ಲಿ (Rajasthan Police Subordinate Services) ಮಹಿಳೆಯರಿಗೆ 33% ರಷ್ಟು ಮೀಸಲಾತಿ (33% Quota Announced for Women) ನೀಡಲು ರಾಜಸ್ಥಾನ ಕ್ಯಾಬಿನೆಟ್ ( Rajasthan Cabinet) ಬುಧವಾರ ನಿರ್ಧರಿಸಿದೆ.

    ಮೀಸಲಾತಿ ಸಂಬಂಧ ರಾಜಸ್ಥಾನ ಪೊಲೀಸ್ ಅಧೀನ ಸೇವಾ ನಿಯಮಗಳು 1989ಕ್ಕೆ ತಿದ್ದುಪಡಿ ಮಾಡಲಾಗುತ್ತದೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಇದನ್ನೂ ಓದಿ: ಪಿಎಸ್‌ಐ ಪರೀಕ್ಷೆ ದಿನಾಂಕ ಮುಂದೂಡಿಕೆ ಇಲ್ಲ: ಕೆಇಎ

    ರಾಜಸ್ಥಾನ ಸಿಎಂ ಭಜನ್‌ ಲಾಲ್‌ ಶರ್ಮಾ
    ರಾಜಸ್ಥಾನ ಸಿಎಂ ಭಜನ್‌ ಲಾಲ್‌ ಶರ್ಮಾ

    ಅತ್ಯುತ್ತಮ ಅಭ್ಯರ್ಥಿಗಳು ರಾಜಸ್ಥಾನ ಭಾಷೆ ಮತ್ತು ಗ್ರಂಥಾಲಯ ಮತ್ತು ರಾಜಸ್ಥಾನ ಅಬಕಾರಿ ಪ್ರಯೋಗಾಲಯ ಇಲಾಖೆಗಳು ನಡೆಸುವ ನೇಮಕಾತಿಯಲ್ಲಿ 2% ಮೀಸಲಾತಿಯನ್ನು ಸಹ ಪಡೆಯಲಿದ್ದಾರೆ.

    ಈ ಹಿಂದೆ, ರಾಜಸ್ಥಾನ ಸರ್ಕಾರ ಗ್ರೇಡ್ 3 ಶಿಕ್ಷಕರ ನೇಮಕಾತಿಯಲ್ಲಿ ಮಹಿಳೆಯರಿಗೆ ಮೀಸಲಾತಿಯನ್ನು 30% ರಿಂದ 50% ಕ್ಕೆ ಹೆಚ್ಚಿಸಿತ್ತು. ಚುನಾವಣಾ ಸಮಯದಲ್ಲಿ ಬಿಜೆಪಿ ಮಹಿಳಾ ಮೀಸಲಾತಿ ನೀಡುವುದಾಗಿ ಘೋಷಿಸಿತ್ತು.

     

  • ಹಾವೇರಿಯಲ್ಲಿ ಆಟೋಗೆ ಕ್ಯಾಂಟರ್ ಡಿಕ್ಕಿ – ಇಬ್ಬರು ಮಹಿಳೆಯರು ಸಾವು, ನಾಲ್ವರು ಗಂಭೀರ

    ಹಾವೇರಿಯಲ್ಲಿ ಆಟೋಗೆ ಕ್ಯಾಂಟರ್ ಡಿಕ್ಕಿ – ಇಬ್ಬರು ಮಹಿಳೆಯರು ಸಾವು, ನಾಲ್ವರು ಗಂಭೀರ

    -ಸಂಬಂಧಿಕರ ಅಂತ್ಯಕ್ರಿಯೆ ಮುಗಿಸಿ ವಾಪಸ್ಸಾಗುತ್ತಿದ್ದಾಗ ದುರ್ಘಟನೆ

    ಹಾವೇರಿ: ಆಟೋಗೆ (Auto) ಕ್ಯಾಂಟರ್ (Canter) ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ಮಹಿಳೆಯರು ಸ್ಥಳದಲ್ಲೇ ಮೃತಪಟ್ಟಿದ್ದು, ನಾಲ್ವರು ಗಂಭೀರವಾಗಿ ಗಾಯಗೊಂಡ ಘಟನೆ ಹಾವೇರಿ (Haveri) ಜಿಲ್ಲೆಯ ರಾಣೆಬೆನ್ನೂರು (Ranebennur) ತಾಲೂಕಿನ ಚಳಗೇರಿ ಗ್ರಾಮದಲ್ಲಿ ನಡೆದಿದೆ.

    ಮೃತರನ್ನು ಯಶೋಧ ಮತ್ತು ಬಸಮ್ಮ ಎಂದು ಗುರುತಿಸಲಾಗಿದೆ. ಯಶೋಧ ಮತ್ತು ಬಸಮ್ಮ ಸೇರಿದಂತೆ ಒಟ್ಟು ಎಂಟು ಜನರು ದಾವಣಗೆರೆಯಿಂದ ಚಳಗೇರಿ ಗ್ರಾಮಕ್ಕೆ ಸಂಬಂಧಿಕರೊಬ್ಬರ ಅಂತ್ಯಕ್ರಿಯೆಗೆ ಬಂದಿದ್ದರು. ಅಂತ್ಯಕ್ರಿಯೆ ಮುಗಿಸಿ ವಾಪಸ್ ಆಗುತ್ತಿದ್ದ ವೇಳೆ ಜವರಾಯನಾಗಿ ಬಂದ ಕ್ಯಾಂಟರ್ ಆಟೋಗೆ ಡಿಕ್ಕಿ ಹೊಡೆದಿದೆ. ಇದನ್ನೂ ಓದಿ: ದರ್ಶನ್‌ಗಾಗಿ ಬಟ್ಟೆ, ಡ್ರೈಪ್ರೂಟ್ಸ್ ತಂದ ವಿಜಯಲಕ್ಷ್ಮಿ – ನಿಮ್ಮೊಂದಿಗೆ ನಾನಿದ್ದೇನೆ ಎಂದು ದರ್ಶನ್‌ಗೆ ಅಭಯ

    ಗಾಯಾಳುಗಳನ್ನು ರಾಣೆಬೆನ್ನೂರು ತಾಲೂಕು ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಚಿಕಿತ್ಸೆ ಕೊಡಿಸಲಾಗುತ್ತಿದೆ. ಸ್ಥಳಕ್ಕೆ ರಾಣೆಬೆನ್ನೂರು ಗ್ರಾಮೀಣ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಈ ಕುರಿತು ರಾಣೇಬೆನ್ನೂರು ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಇದನ್ನೂ ಓದಿ: ಬೆಂಗಳೂರಿಗೆ ಬರುತ್ತಿದ್ದ ವಿಮಾನದ ಇಂಜಿನ್ ಆಗಸದಲ್ಲೇ ವೈಫಲ್ಯ – ಕೋಲ್ಕತ್ತಾ ಏರ್‌ಪೋರ್ಟಲ್ಲಿ ಎಮರ್ಜೆನ್ಸಿ, ಸೇಫ್ ಲ್ಯಾಂಡಿಂಗ್

  • ಮದುವೆ ಮಾಡಿಕೊಳ್ಳುವುದಾಗಿ ಹೇಳಿ ಪುರುಷರಿಗೆ ವಂಚಿಸುತ್ತಿದ್ದ ಮಹಿಳೆ ಅರೆಸ್ಟ್

    ಮದುವೆ ಮಾಡಿಕೊಳ್ಳುವುದಾಗಿ ಹೇಳಿ ಪುರುಷರಿಗೆ ವಂಚಿಸುತ್ತಿದ್ದ ಮಹಿಳೆ ಅರೆಸ್ಟ್

    – ಲಕ್ಷಾಂತರ ರೂಪಾಯಿ ಹಣ ಪಡೆದು ಮೋಸ ಮಾಡ್ತಿದ್ದ ವಂಚಕಿ ಖಾಕಿ ಬಲೆಗೆ

    ಚಿಕ್ಕಬಳ್ಳಾಪುರ: ಮದುವೆ ಮಾಡಿಕೊಳ್ಳುವುದಾಗಿ ಹೇಳಿ ಪುರುಷರಿಂದ ಲಕ್ಷಾಂತರ ಹಣ ಪಡೆದು ವಂಚಿಸುತ್ತಿದ್ದ ಮಹಿಳೆಯನ್ನು ಪೊಲೀಸರು ಬಂಧಿಸಿದ್ದಾರೆ.

    ಬೆಂಗಳೂರು ಮೂಲದ ಕೋಮಲಾ ಬಂಧಿತ ಮಹಿಳೆ. ಆಕೆಯ ಗಂಡ ಸತ್ತು 7 ವರ್ಷಗಳು ಕಳೆದಿವೆ. ವಿಲಾಸಿ ಮೋಜು‌-ಮಸ್ತಿಯ ಜೀವನಕ್ಕಾಗಿ‌ ವಿವಾಹವಾಗುವುದಾಗಿ ನಂಬಿಸಿ ಹಲವು ಪುರುಷರ ಬಳಿ ಹಣ ಪಡೆದು ವಂಚನೆ ಮಾಡುತ್ತಿದ್ದ ಕಿಲಾಡಿ ಮಹಿಳೆಯನ್ನು ಚಿಕ್ಕಬಳ್ಳಾಪುರ ಸಿಇಎನ್ (ಸೆನ್) ಪೊಲೀಸರು ಬಂಧಿಸಿದ್ದಾರೆ. ಇದನ್ನೂ ಓದಿ: ಮದುವೆಯಾಗುವುದಾಗಿ ನಂಬಿಸಿ ನರ್ಸ್‌ ಮೇಲೆ ಅತ್ಯಾಚಾರ – 59ರ ವ್ಯಕ್ತಿ ಬಂಧನ

    ಕೋಮಲಾ ಚಿಕ್ಕಬಳ್ಳಾಪುರ ಜಿಲ್ಲೆಯ ಗೌರಿಬಿದನೂರು ನಗರದ ರಾಘವೇಂದ್ರ ಎಂಬವರನ್ನ ಮ್ಯಾಟ್ರಿಮೋನಿಯಲ್ ವೆಬ್‌ಸೈಟ್ ಮೂಲಕ ಪರಿಚಯ ಮಾಡಿಕೊಂಡು ಆತನಿಂದ 7.40 ಲಕ್ಷ ಪೀಕಿದ್ದಳು. ಹೀಗಾಗಿ ರಾಘವೇಂದ್ರ ದೂರಿನ ಮೇರೆಗೆ ಕೋಮಲಾಳನ್ನ ಬಂಧಿಸಿ ವಿಚಾರಣೆ ನಡೆಸಲಾಗಿದೆ.

    ವಿಚಾರಣೆ ವೇಳೆ ಈಕೆ ಇದೇ ರೀತಿ ಗುಜರಾತ್‌‌ನಲ್ಲಿ ನೆಲೆಸಿರುವ ಕುಂದಾಪುರ ನಿವಾಸಿ ರಾಘವೇಂದ್ರ ಎಂಬವರಿಗೆ ಮೋಸ ಮಾಡಿರೋದು ಬೆಳಕಿಗೆ ಬಂದಿದೆ. ಜೊತೆಗೆ ಬೆಂಗಳೂರಿನ‌ ನಾಗರಾಜು ಎಂಬವರ ಬಳಿ ಯೂ 1.50 ಲಕ್ಷ ಪಡೆದು ಮೋಸ ಮಾಡಿರುವುದು ಗೊತ್ತಾಗಿದೆ. ಇದನ್ನೂ ಓದಿ: ದರೋಡೆಗೆ ಹೋಗಿ ನೇಪಾಳಿ ವಿದ್ಯಾರ್ಥಿನಿಗೆ ಗುಂಡಿಕ್ಕಿ ಕೊಂದ ಭಾರತೀಯ ಮೂಲದ ವ್ಯಕ್ತಿ

    ಮೂರು ಪ್ರಕರಣಗಳಲ್ಲೂ ಆಯಾ ಪೊಲೀಸ್ ಠಾಣೆಗಳಲ್ಲಿ ದೂರು ದಾಖಲಾಗಿದೆ. ಈಕೆ ಗಂಡ ಕೆಪಿಟಿಸಿಲ್ ನೌಕರನಾಗಿದ್ದ. 2017 ರಲ್ಲಿ ಮರಣ ಹೊಂದಿದ್ದಾರೆ. ಗಂಡ ಮೃತಪಟ್ಟಿರುವ ಕಾರಣ 6 ಕೋಟಿ ಪರಿಹಾರದ ಹಣಕ್ಕೆ ಟ್ಯಾಕ್ಸ್ ಕಟ್ಟಬೇಕು ಅಂತಾ ಹೇಳಿ ಹಣ ವಸೂಲಿ ಮಾಡುತ್ತಿದ್ದಳು. ಸದ್ಯ ಚಿಕ್ಕಬಳ್ಳಾಪುರ ಸೆನ್ ಪೊಲೀಸರು ಈಕೆಯನ್ನ ಬಂಧಿಸಿ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದಾರೆ.

  • ಮಹಿಳೆಯರ ಮೇಲಿನ ದೌರ್ಜನ್ಯ ತಡೆಯಲು ರಾಜ್ಯಗಳು ಪ್ರಾಮಾಣಿಕ ಪ್ರಯತ್ನ ಮಾಡ್ತಿಲ್ಲ: ರಾಜನಾಥ್ ಸಿಂಗ್ ಆರೋಪ

    ಮಹಿಳೆಯರ ಮೇಲಿನ ದೌರ್ಜನ್ಯ ತಡೆಯಲು ರಾಜ್ಯಗಳು ಪ್ರಾಮಾಣಿಕ ಪ್ರಯತ್ನ ಮಾಡ್ತಿಲ್ಲ: ರಾಜನಾಥ್ ಸಿಂಗ್ ಆರೋಪ

    – ಸೈನಿಕ್ ಶಾಲೆಗಳಿಗೆ ಮಹಿಳೆಯರಿಗೂ ಪ್ರವೇಶ

    ನವದೆಹಲಿ: ಮಹಿಳೆಯರ ಮೇಲಿನ ಅಪರಾಧಗಳ ಬಗ್ಗೆ ಕೇಂದ್ರ ಸರ್ಕಾರವು ಕಟ್ಟುನಿಟ್ಟಾದ ಧೋರಣೆ ಅನುಸರಿಸಿದರೂ ಹಲವು ರಾಜ್ಯಗಳು ಇದರಲ್ಲಿ ಪ್ರಾಮಾಣಿಕ ಪ್ರಯತ್ನಗಳನ್ನು ಮಾಡುತ್ತಿಲ್ಲ ಎಂದು ರಕ್ಷಣಾ ಸಚಿವ ರಾಜನಾಥ್ ಸಿಂಗ್ (Rajnath Singh) ಆರೋಪಿಸಿದ್ದಾರೆ.

    ತಿರುವನಂತಪುರಂನಲ್ಲಿ ನಡೆದ ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡಿದ ರಾಜನಾಥ್ ಸಿಂಗ್, ಕೋಲ್ಕತ್ತಾದ ಆರ್‌.ಜಿ ಕರ್ ವೈದ್ಯಕೀಯ ಕಾಲೇಜು ಆಸ್ಪತ್ರೆಯಲ್ಲಿ 31 ವರ್ಷದ ಟ್ರೈನಿ ವೈದ್ಯೆಯ ಮೇಲೆ ನಡೆದ ಭೀಕರ ಅತ್ಯಾಚಾರ ಮತ್ತು ಹತ್ಯೆ ಪ್ರಕರಣದ (Kolkata rape-murder case) ಹಿನ್ನೆಲೆಯಲ್ಲಿ ಮಹಿಳಾ ಆರೋಗ್ಯ ಮತ್ತು ಮಹಿಳೆಯರ ಸುರಕ್ಷತೆ ಸಂಬಂಧ ಸರ್ಕಾರದ ಪ್ರಯತ್ನಗಳ ಬಗ್ಗೆ ಸುದೀರ್ಘವಾಗಿ ಮಾತನಾಡಿದರು. ಇದನ್ನೂ ಓದಿ: ಮಳೆಯ ನಡುವೆ ಶ್ರೀ ಶಂಕರಾಚಾರ್ಯ ಬೆಟ್ಟದ ಮೆಟ್ಟಿಲು ಹತ್ತಿ ಶಿವನ ದರ್ಶನ ಪಡೆದ ಮಾಜಿ ಪ್ರಧಾನಿ

    ತಮ್ಮ ಭಾಷಣದಲ್ಲಿ ಕೋಲ್ಕತ್ತಾದ ಅತ್ಯಾಚಾರ-ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾತನಾಡಿದ ಅವರು, ಮಮತಾ ಬ್ಯಾನರ್ಜಿ (Mamata Banerjee) ನೇತೃತ್ವದ ಬಂಗಾಳ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡರು. ಈ ಘಟನೆ ಹೃದಯ ವಿದ್ರಾವಕ ಮತ್ತು ನಾಚಿಕೆಗೇಡಿನ ಸಂಗತಿ ಎಂದು ಹೇಳಿದರು. ಇದನ್ನೂ ಓದಿ: ನಿವೇಶನ ಲೂಟಿ ಮಾಡುತ್ತಿರುವುದು ನಾನಾ ನೀವಾ? – ಎಂ.ಬಿ.ಪಾಟೀಲರ ಸೈಟ್ ಅಕ್ರಮ ಸದ್ಯದಲ್ಲೇ ಬಯಲು: ಛಲವಾದಿ ನಾರಾಯಣಸ್ವಾಮಿ

    ದೇಶದಲ್ಲಿ ಮಹಿಳೆಯರ ಮೇಲಿನ ದೌರ್ಜನ್ಯಗಳು ಮತ್ತು ಅಪರಾಧಗಳನ್ನು ಪರಿಗಣಿಸಿದರೆ, ಎಲ್ಲಾ ಬದಲಾವಣೆಗಳ ಹೊರತಾಗಿಯೂ, ಬಹಳಷ್ಟು ಮಾಡಬೇಕಾಗಿದೆ ಎಂದು ತೋರುತ್ತದೆ. ನಮ್ಮ ಸರ್ಕಾರವು ಮಹಿಳೆಯರ (Womens) ಮೇಲಿನ ಅಪರಾಧಗಳ ಬಗ್ಗೆ ಕಟ್ಟುನಿಟ್ಟಾದ ಧೋರಣೆ ಅನುಸರಿಸಿದೆ, ಆದರೆ ಅನೇಕ ರಾಜ್ಯಗಳು ಈ ದಿಕ್ಕಿನಲ್ಲಿ ಪ್ರಾಮಾಣಿಕ ಪ್ರಯತ್ನಗಳನ್ನು ಮಾಡುತ್ತಿಲ್ಲ ಎಂದು ಆರೋಪಿಸಿದರು. ಇದನ್ನೂ ಓದಿ: ವಾಧ್ವಾನ್ ಪೋರ್ಟ್ ಪ್ರಾಜೆಕ್ಟ್ ಉದ್ಘಾಟನೆ, ಗ್ಲೋಬಲ್ ಫಿನ್‌ಟೆಕ್ ಫೆಸ್ಟ್‌ನಲ್ಲಿ ಭಾಗಿಯಾದ ಪ್ರಧಾನಿ ಮೋದಿ

    ಅತ್ಯಾಚಾರದಂತಹ ಘೋರ ಅಪರಾಧಗಳಿಗೆ ಮರಣದಂಡನೆ ವಿಧಿಸಲು ನರೇಂದ್ರ ಮೋದಿ ಸರ್ಕಾರ (Modi Government) ಕಾನೂನನ್ನು ತಿದ್ದುಪಡಿ ಮಾಡಿದೆ. ಐಪಿಸಿಯನ್ನು ಬದಲಿಸಿ ಭಾರತೀಯ ನ್ಯಾಯ ಸಂಹಿತಾ ಕಾನೂನಿನಲ್ಲಿ ಅತ್ಯಾಚಾರದಲ್ಲಿ ಬಲಿಪಶುವಿನ ಸಾವಿಗೆ ಕಾರಣವಾದ ಪ್ರಕರಣಗಳಲ್ಲಿ ಮರಣದಂಡನೆಗೆ ಅವಕಾಶ ನೀಡಿದೆ. ಹರಿಯಾಣದಂತಹ ರಾಜ್ಯಗಳಲ್ಲಿ ಲಿಂಗ ಅನುಪಾತದಲ್ಲಿ ಸುಧಾರಣೆಗಾಗಿ ಪ್ರಧಾನಿ ಮೋದಿಯವರ ‘ಬೇಟಿ ಬಚಾವೋ, ಬೇಟಿ ಪಢಾವೋ ‘ ಅಭಿಯಾನ ಆರಂಭಿಸಿದೆ. ತ್ರಿವಳಿ ತಲಾಖ್ ರದ್ದತಿ ಮುಸ್ಲಿಂ ಮಹಿಳೆಯರಿಗೆ ದೊಡ್ಡ ಪರಿಹಾರವಾಗಿದೆ ಎಂದು ಸರ್ಕಾರದ ಸಾಧನೆಗಳನ್ನು ಬಣ್ಣಿಸಿದರು.

    2014-2019ರ ನಡುವೆ ಕೇಂದ್ರ ಗೃಹ ಸಚಿವರಾಗಿದ್ದ ಅವಧಿಯನ್ನು ನೆನಪಿಸಿಕೊಂಡ ರಾಜನಾಥ್ ಸಿಂಗ್, ಭದ್ರತಾ ಪಡೆಗಳಲ್ಲಿ ಮಹಿಳೆಯರೊಂದಿಗೆ ಮೂರನೇ ಒಂದು ಭಾಗದಷ್ಟು ಖಾಲಿ ಹುದ್ದೆಗಳನ್ನು ಭರ್ತಿ ಮಾಡಲು ಎಲ್ಲಾ ರಾಜ್ಯಗಳಿಗೆ ಸಲಹೆಯನ್ನು ನೀಡಿದ್ದೇನೆ ಎಂದು ಹೇಳಿದರು. ಇಂದು ಎಲ್ಲಾ ಪೊಲೀಸ್ ಪಡೆಗಳು ಮತ್ತು ಅರೆಸೇನಾ ಪಡೆಗಳಲ್ಲಿ ಮಹಿಳೆಯರ ಭಾಗವಹಿಸುವಿಕೆ ಹೆಚ್ಚಾಗಿದೆ. ಸಶಸ್ತ್ರ ಪಡೆಗಳಿಗೆ ಮಹಿಳೆಯರ ಪ್ರವೇಶಕ್ಕೆ ಇದ್ದ ಹಲವು ಅಡೆತಡೆಗಳನ್ನು ತೆಗೆದುಹಾಕಲಾಗಿದೆ. ಸಶಸ್ತ್ರ ಪಡೆಗಳ ಎಲ್ಲಾ ಮೂರು ವಿಭಾಗಗಳಲ್ಲಿ ನಾವು ಮಹಿಳೆಯರ ಭಾಗವಹಿಸುವಿಕೆಯನ್ನು ಹೆಚ್ಚಿಸಿದ್ದೇವೆ. ಸೈನಿಕ್ ಶಾಲೆಗಳಿಗೆ ಮಹಿಳೆಯರಿಗೂ ಪ್ರವೇಶ ನೀಡಲಾಗುತ್ತಿದೆ ಎಂದು ವಿವರಿಸಿದರು. ಇದನ್ನೂ ಓದಿ: ಅಸ್ಸಾಂ ವಿಧಾನಸಭೆಯ ಶುಕ್ರವಾರದ 2 ಗಂಟೆ ಅವಧಿಯ ನಮಾಜ್ ಬ್ರೇಕ್‌ಗೆ ತಡೆಯೊಡ್ಡಿದ ಸಿಎಂ ಶರ್ಮಾ

  • ಮಹಿಳೆಯರ ಮೇಲಿನ ಅಪರಾಧಕ್ಕೆ ಕ್ಷಮೆಯಿಲ್ಲ: ಮೋದಿ

    ಮಹಿಳೆಯರ ಮೇಲಿನ ಅಪರಾಧಕ್ಕೆ ಕ್ಷಮೆಯಿಲ್ಲ: ಮೋದಿ

    – ಕೋಲ್ಕತ್ತಾ ವೈದ್ಯೆ ಅತ್ಯಾಚಾರ, ಹತ್ಯೆಗೆ ಪ್ರಧಾನಿ ಗರಂ; ಆರೋಪಿಗಳ ವಿರುದ್ಧ ಕಠಿಣ ಕ್ರಮದ ಎಚ್ಚರಿಕೆ

    ಮುಂಬೈ: ಮಹಿಳೆಯರ (Women) ಮೇಲಿನ ಅಪರಾಧವನ್ನು ಕ್ಷಮಿಸಲು ಸಾಧ್ಯವಿಲ್ಲ. ಮಹಿಳೆಯರ ಮೇಲೆ ದೌರ್ಜನ್ಯ ನಡೆಸುವವರ ವಿರುದ್ಧ ಕಠಿಣ ಕ್ರಮಕೈಗೊಳ್ಳಲಾಗುವುದು ಎಂದು ಪ್ರಧಾನಿ ನರೇಂದ್ರ ಮೋದಿ  (Narendra Modi) ಎಚ್ಚರಿಕೆ ನೀಡಿದ್ದಾರೆ.

    ಕೋಲ್ಕತ್ತಾದ ಆಸ್ಪತ್ರೆಯಲ್ಲಿ ವೈದ್ಯೆಯ ಅತ್ಯಾಚಾರ-ಕೊಲೆಗೆ (RG Kar hospital horror) ದೇಶಾದ್ಯಂತ ಆಕ್ರೋಶ ವ್ಯಕ್ತವಾಗಿದೆ. ವೈದ್ಯರು ಬೀದಿಗಿಳಿದು ಪ್ರತಿಭಟನೆ ನಡೆಸುತ್ತಿದ್ದಾರೆ. ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಪ್ರಧಾನಿ, ಮಹಿಳೆಯರ ವಿರುದ್ಧದ ಅಪರಾಧಗಳಿಗೆ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಭರವಸೆ ನೀಡಿದರು.

    ಮಹಾರಾಷ್ಟ್ರದ ಜಲಗಾಂವ್‍ನಲ್ಲಿ `ಲಕ್‍ಪತಿ ದೀದಿ’ ಸಮ್ಮೇಳನದಲ್ಲಿ ಮಾತನಾಡಿ, ಮಹಿಳೆಯರ ರಕ್ಷಣೆ ತುಂಬಾ ಮುಖ್ಯವಾದದ್ದು. ಯಾವುದೇ ರಾಜ್ಯ ಸರ್ಕಾರಗಳು ಮಹಿಳೆಯರ ವಿರುದ್ಧ ನಡೆಯುವ ಅಪರಾಧವನ್ನು ಕ್ಷಮಿಸಬಾರದು. ಅಪರಾಧಿ ಯಾರೇ ಇರಲಿ ರಕ್ಷಿಸುವ ಕೆಲಸ ಮಾಡಬಾರದು. ಮಹಿಳೆಯರ ಮೇಲೆ ಅಪರಾಧ ಎಸಗಿದರೆ ಕಟ್ಟುನಿಟ್ಟಿನ ಕಾನೂನಿನ ಮೂಲಕ ಶಿಕ್ಷೆ ನೀಡಲಾಗುತ್ತದೆ ಎಂದು ಹೇಳಿದರು.

    ಕೇಂದ್ರ ಸರ್ಕಾರದ ಲಕ್‍ಪತಿ ದೀದಿ ಯೋಜನೆಯ ಬಗ್ಗೆ ವಿವರಿಸಿದ ಅವರು, ಮಹಿಳೆಯರು ಸ್ವಂತವಾಗಿ 1 ಲಕ್ಷ ರೂ. ವಾರ್ಷಿಕ ಆದಾಯ ಗಳಿಸಬಹುದು. ಮಹಿಳೆಯರು ಕೃಷಿ ಮತ್ತು ಇನ್ನಿತರ ವ್ಯವಹಾರ ಮಾಡುವುದರ ಮೂಲಕ ತಿಂಗಳಿಗೆ ಸುಮಾರು 10,000 ರೂ. ಆದಾಯ ಮಾಡಬಹುದು ಎಂದು ತಿಳಿಸಿದರು.

  • ನೇಣು ಬಿಗಿದ ಸ್ಥಿತಿಯಲ್ಲಿ ಮಹಿಳೆಯ ಶವ ಪತ್ತೆ – ಪತಿ, ಮಕ್ಕಳ ವಿರುದ್ಧ ಕೊಲೆ ಆರೋಪ

    ನೇಣು ಬಿಗಿದ ಸ್ಥಿತಿಯಲ್ಲಿ ಮಹಿಳೆಯ ಶವ ಪತ್ತೆ – ಪತಿ, ಮಕ್ಕಳ ವಿರುದ್ಧ ಕೊಲೆ ಆರೋಪ

    ದಾವಣಗೆರೆ: ನಗರದ (Davanagere) ವಿವೇಕಾನಂದ ಬಡಾವಣೆಯ ಮನೆಯೊಂದರಲ್ಲಿ ನೇಣುಬಿಗಿದ ಸ್ಥಿತಿಯಲ್ಲಿ ಮಹಿಳೆಯ (Women) ಶವ ಪತ್ತೆಯಾಗಿದ್ದು, ತಂದೆಯೊಂದಿಗೆ ಸೇರಿ ಕೈ ತುತ್ತು ತಿಂದ ಮಕ್ಕಳೇ ಮಹಿಳೆಯನ್ನು ಕೊಲೆಗೈದಿದ್ದಾರೆ ಎಂಬ ಆರೋಪ ಕೇಳಿ ಬಂದಿದೆ.

    ಮೃತ ಮಹಿಳೆಯನ್ನು ಸುಮಲತಾ ಎಂದು ಗುರುತಿಸಲಾಗಿದೆ. ಶಿವಮೂರ್ತಿ 12 ವರ್ಷಗಳ ಹಿಂದೆ ಮೊದಲನೇ ಪತ್ನಿ ಸಾವನ್ನಪ್ಪಿದ ಬಳಿಕ ಸುಮಲತಾಳನ್ನು ಮದುವೆಯಾಗಿದ್ದ. ಆಕೆಗೆ ಮಕ್ಕಳಿರಲಿಲ್ಲ, ಪತಿಯ ಮೊದಲ ಹೆಂಡತಿಯ ಮೂರು ಮಕ್ಕಳನ್ನ ಪಾಲನೆ ಮಾಡುವುದನ್ನೇ ಕಾಯಕ ಮಾಡಿಕೊಂಡಿದ್ದಳು. ಇದೀಗ ಪತಿ ಹಾಗೂ ಮಕ್ಕಳ ವಿರುದ್ಧ ಸುಮಲತಾ ಕುಟುಂಬಸ್ಥರು ಕೊಲೆ ಆರೋಪ ಮಾಡಿದ್ದಾರೆ.

    ಸುಮಾಲತಾ ತನ್ನ ಮಕ್ಕಳಂತೆ ಮೂವರನ್ನೂ ನೋಡಿಕೊಂಡಿದ್ದಳು. ಆದರೆ ಮಕ್ಕಳು ದೊಡ್ಡವರಾದ ಮೇಲೆ ಜಗಳ ಶುರುವಾಗಿದೆ. ಓರ್ವ ಸುಮಲತಾ ಜೊತೆ ಆರು ತಿಂಗಳು ಮಾತು ನಿಲ್ಲಿಸಿದ್ದ. ಅಲ್ಲದೇ ಮಕ್ಕಳು ದೊಡ್ಡವರಾದ ಬಳಿಕ ಶಿವಮೂರ್ತಿ ಪತ್ನಿಗೆ ಕಿರುಕುಳ ನೀಡಲು ಶುರು ಮಾಡಿದ್ದ ಎಂದು ಕುಟುಂಬಸ್ಥರು ಆರೋಪಿಸಿದ್ದಾರೆ.

    ಈ ಸಂಬಂಧ ವಿದ್ಯಾನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು ಮಾಡಿದ್ದಾರೆ.

  • Udupi: ಕುಡಿದ ಮತ್ತಿನಲ್ಲಿ ಪತ್ನಿ ಕತ್ತು ಕೊಯ್ದ ಪತಿ – ಕತ್ತಿ ಹಿಡಿದು ನರ್ತಿಸುತ್ತಾ ವಿಕೃತಿ

    Udupi: ಕುಡಿದ ಮತ್ತಿನಲ್ಲಿ ಪತ್ನಿ ಕತ್ತು ಕೊಯ್ದ ಪತಿ – ಕತ್ತಿ ಹಿಡಿದು ನರ್ತಿಸುತ್ತಾ ವಿಕೃತಿ

    ಉಡುಪಿ: ಕುಡಿತ ಮತ್ತಿನಲ್ಲಿ ತನ್ನ ಪತ್ನಿಯ ಕತ್ತು ಕೊಯ್ದು, ಬಳಿಕ ಕೈಯಲ್ಲಿ ಕತ್ತಿ ಹಿಡಿದು ನರ್ತಿಸುತ್ತಿದ್ದ ಪತಿಯನ್ನು ಬಂಧಿಸಿರುವ ಘಟನೆ ಉಡುಪಿ (Udupi) ಜಿಲ್ಲೆಯ ಕುಂದಾಪುರ ತಾಲೂಕಿನ ಬಸ್ರೂರಿನಲ್ಲಿ ನಡೆದಿದೆ.

    ಬಸ್ರೂರು ಕಾಶಿಮಠದ ರೆಸಿಡೆನ್ಶಿಯಲ್ ಬ್ಲಾಕ್‌ನ ಬಾಡಿಗೆ ಮನೆಯಲ್ಲಿ ಘಟನೆ ನಡೆದಿದೆ. ಅನಿತಾ (38) ಗಂಡನಿಂದ ಮಾರಣಾಂತಿಕ ಹಲ್ಲೆಗೊಳಗಾದ ಮಹಿಳೆ. ಸೊರಬ ತಾಲೂಕು ಮೂಲದ ಲಕ್ಷ್ಮಣ (ರಮೇಶ್) ಹಲ್ಲೆಗೈದ ಪತಿ. ಇದನ್ನೂ ಓದಿ: Belagavi: ನಿಯಂತ್ರಣ ತಪ್ಪಿ ಮಾರ್ಕಂಡೇಯ ನದಿಗೆ ಬಿದ್ದ ಬೈಕ್ – ಓರ್ವನ ರಕ್ಷಣೆ ಮತ್ತೋರ್ವ ನಾಪತ್ತೆ

    ಸೊರಬ ತಾಲೂಕು ಮೂಲದ ಲಕ್ಷ್ಮಣ (ರಮೇಶ್) ಮತ್ತು ಅನಿತಾ ದಂಪತಿ ಕಾಶಿಮಠದ ತೋಟ ನೋಡಿಕೊಳ್ಳುತ್ತಿದ್ದರು. 4 ತಿಂಗಳ ಹಿಂದೆಯಷ್ಟೆ ತೋಟದ ಕೆಲಸಕ್ಕೆ ಬಂದು ಉಡುಪಿಯಲ್ಲಿ ನೆಲೆಸಿದ್ದರು. ಶನಿವಾರ (ಆ.3) ರಾತ್ರಿ ಕುಡಿದ ಮತ್ತಿನಲ್ಲಿದ್ದ ಪತಿ ಲಕ್ಷ್ಮಣ (ರಮೇಶ್) ಪತ್ನಿಯ ಕುತ್ತಿಗೆ ಕೊಯ್ದು ಮಾರಣಾಂತಿಕ ಗಾಸಿಗೊಳಿಸಿದ್ದಾನೆ. ನಂತರ ಅಡುಗೆ ಮನೆಯಲ್ಲಿ ರಕ್ತದ ಮಡುವಿನಲ್ಲಿ ಬಿದ್ದಿದ್ದ ಆಕೆಯನ್ನ ಕಂಡು ಮನೆ ಬಾಗಿಲು ಹಾಕಿಕೊಂಡು, ಕೈಯಲ್ಲಿ ಕತ್ತಿ ಹಿಡಿದು, ಮನೆಯೊಳಗೆ ನರ್ತಿಸುತ್ತಾ ಪತಿ ವಿಕೃತಿ ಮೆರೆದಿದ್ದಾನೆ.

    ಇದು ಅರಿವಿಗೆ ಬರುತ್ತಲೇ ಸ್ಥಳೀಯರು ಕಿಟಕಿ ಒಡೆದು ಅಡುಗೆ ಕೋಣೆಗೆ ತೆರಳಿ ರಕ್ತದ ಮಡುವಿನಲ್ಲಿ ಬಿದ್ದಿದ್ದ ಆಕೆಯನ್ನ ಹೊರತಂದಿದ್ದಾರೆ. ಚಿಂತಾಜನಕ ಸ್ಥಿತಿಯಲ್ಲಿದ್ದಾಕೆಯನ್ನ ಮಣಿಪಾಲ ಖಾಸಗಿ ಆಸ್ಪತ್ರೆಗೆ ದಾಖಲಿಸಿದ್ದಾರೆ. ಇಷ್ಟಾದರೂ ಪತಿ ತನ್ನ ಮೈಮೇಲೆ ದೆವ್ವ ಬಂದವರಂತೆ ಕೈಯಲ್ಲಿ ಕತ್ತಿ ಹಿಡಿದು ನರ್ತಿಸುತ್ತಿದ್ದ ಎಂದು ಗ್ರಾಮಸ್ಥರು ತಿಳಿಸಿದ್ದಾರೆ. ಇದನ್ನೂ ಓದಿ: ಪರಶುರಾಮ ಥೀಮ್ ಪಾರ್ಕ್ ಹಗರಣ – ಬೆಂಗಳೂರಿನ ಗೋಡೌನ್‌ನಲ್ಲಿ ಕಾರ್ಕಳ ಪೊಲೀಸರಿಂದ ಮಹಜರು

    ಕೂಡಲೇ ಸ್ಥಳಕ್ಕೆ ಬಂದ ಪೊಲೀಸರು ಮತ್ತು ಅಗ್ನಿಶಾಮಕ ಸಿಬ್ಬಂದಿ ಪರಿಸ್ಥಿತಿ ಹತೋಟಿ ತರಲು ಹರಸಾಹಸ ಪಟ್ಟಿದ್ದಾರೆ. ಮನೆಯೊಳಗೆ ಅಶ್ರುವಾಯು ಪ್ರಯೋಗಿಸಿ ಸುಮಾರು ಒಂದೂವರೆ ಗಂಟೆಯ ಬಳಿಕ ಆರೋಪಿಯನ್ನ ಸೆರೆಹಿಡಿದಿದ್ದಾರೆ. ಕಂಡ್ಲೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಘಟನೆಗೆ ನಿಖರ ಕಾರಣ ತಿಳಿದುಬಂದಿಲ್ಲ. ಇದನ್ನೂ ಓದಿ: 104 ಸಂಭವನೀಯ ಭೂಕುಸಿತ, ಪ್ರವಾಹ ಪ್ರದೇಶಗಳ ಗುರುತು – 2,995 ಕುಟುಂಬಗಳ ಸ್ಥಳಾಂತರಕ್ಕೆ ಪ್ಲ್ಯಾನ್‌

  • ಅನಧಿಕೃತ ಗರ್ಭಕೋಶ ಶಸ್ತ್ರಚಿಕಿತ್ಸೆಯಿಂದ ನರಳಾಟ – ಸಂತ್ರಸ್ತ ಮಹಿಳೆಯರಿಂದ ಡಿಸಿ ಕಚೇರಿ ಮತ್ತಿಗೆಗೆ ಯತ್ನ!

    ಅನಧಿಕೃತ ಗರ್ಭಕೋಶ ಶಸ್ತ್ರಚಿಕಿತ್ಸೆಯಿಂದ ನರಳಾಟ – ಸಂತ್ರಸ್ತ ಮಹಿಳೆಯರಿಂದ ಡಿಸಿ ಕಚೇರಿ ಮತ್ತಿಗೆಗೆ ಯತ್ನ!

    – ಸರ್ಕಾರದಿಂದ ವಿಶೇಷ ಪ್ಯಾಕೇಜ್‌ಗೆ ಆಗ್ರಹ

    ಹಾವೇರಿ: ಅನಧಿಕೃತ ಗರ್ಭಕೋಶ ಶಸ್ತ್ರಚಿಕಿತ್ಸೆಗೆ ಒಳಗಾದ ನೂರಾರು ಮಹಿಳೆಯರು ವಿಶೇಷ ಪ್ಯಾಕೇಜ್‌ಗೆ ಆಗ್ರಹಿಸಿ ಹಾವೇರಿ ಡಿಸಿ ಕಚೇರಿ ಮುಂದೆ ಅರೆಬೆತ್ತಲಾಗಿ ಪ್ರತಿಭಟನೆ ನಡೆಸಿದ್ದಾರೆ. ವಿಶೇಷ ಪ್ಯಾಕೇಜ್ ನೀಡುವಂತೆ ಆಗ್ರಹಿಸಿ ಜಿಲ್ಲಾಧಿಕಾರಿ ಕಚೇರಿ ಮುಂದೆ ಪ್ರತಿಭಟನೆ ನಡೆಸಿದ್ದಾರೆ.

    ಜಿಲ್ಲಾಧಿಕಾರಿ ಕಚೇರಿಗೆ ಮುತ್ತಿಗೆ ಹಾಕಲು ಯತ್ನಿಸಿದ ಗರ್ಭಕೋಶ ಶಸ್ತ್ರಚಿಕಿತ್ಸೆಗೆ ಒಳಗಾದ ಮಹಿಳೆಯರನ್ನ ಪೊಲೀಸರು ತಡೆಹಿಡಿದ್ದಾರೆ. ಪೊಲೀಸರು ಮುತ್ತಿಗೆ ಹಾಕಲು ಬಂದ ಮಹಿಳೆಯರನ್ನು ಗೇಟ್ ಬಳಿ ತಡೆದ ನಂತರ ಮಾತಿನ ಚಕಮಕಿ ಏರ್ಪಟ್ಟಿದೆ. ಅರೆಬೆತ್ತಲೆ ಪ್ರತಿಭಟನೆಯಲ್ಲಿ ನೊಂದ ಮಹಿಳೆಯರು ಕಣ್ಣೀರು ಹಾಕಿ, ಸರ್ಕಾರದ ವಿರುದ್ಧ ಧಿಕ್ಕಾರ ಕೂಗಿ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಇದನ್ನೂ ಓದಿ: 6,187 ಡೆಂಗ್ಯೂ ಪ್ರಕರಣ ಪತ್ತೆ – ಬೆಂಗ್ಳೂರಲ್ಲಿ ಮನೆ ಮನೆ ಸಮೀಕ್ಷೆ ನಡೆಸುವಂತೆ ಪಾಲಿಕೆಗೆ ಸೂಚನೆ!

    ಅಲ್ಲದೇ ಪ್ರತಿಭಟನಾ ನಿರತರ ಮಹಿಳೆಯರು ಕೆಲಕಾಲ ಕೈಯಲ್ಲಿ ಕಲ್ಲು ಹಿಡಿದು ಸಾರ್ವಜನಿಕರನ್ನು ಡಿಸಿ ಕಚೇರಿ ಒಳಗೆ ಬಿಡದಂತೆ ತಡೆದಿದ್ದಾರೆ. ನಮ್ಮನ್ನೂ ಬಂಧಿಸಿ, ಇಲ್ಲವೇ ಉಸ್ತುವಾರಿ ಸಚಿವರ ಭೇಟಿಗೆ ಅನುಮತಿ ನೀಡಿ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಇದನ್ನೂ ಓದಿ: ಬೇಬಿ ಬೆಟ್ಟದಲ್ಲಿ ಟ್ರಯಲ್ ಬ್ಲಾಸ್ಟ್‌ಗೆ ಸಿದ್ಧತೆ – ರೈತರಿಂದ ಭಾರೀ ಆಕ್ರೋಶ!

    800ಕ್ಕೂ ಹೆಚ್ಚು ಮಹಿಳೆಯರು ಅಧಿಕೃತ ಶಸ್ತ್ರಚಿಕಿತ್ಸೆಗೆ ಒಳಗಾಗಿ ಗರ್ಭಕೋಶ ಕಳೆದುಕೊಂಡಿದ್ದಾರೆ. ಅವರಿಗೆಲ್ಲಾ ದುಡಿದು ತಿನ್ನಲು ಆಗುತ್ತಿಲ್ಲ. ಸರ್ಕಾರ ಪರಿಹಾರ ನೀಡಬೇಕು, 9 ವರ್ಷದಿಂದ ಹೋರಾಟ ಮಾಡಿದರೂ ಸರ್ಕಾರದಿಂದ ಪರಿಹಾರ ಸಿಕ್ಕಿಲ್ಲ ಎಂದು ಆಕ್ರೋಶ ಹೊರಹಾಕಿದ್ದಾರೆ. ಬಳಿಕ ಸಚಿವ ಶಿವಾನಂದ ಪಾಟೀಲ ಅವರು ಸ್ಥಳಕ್ಕೆ ಭೇಟಿ ನೀಡಿ, ಪರಿಶೀಲಿಸಿ ಕ್ರಮ ಕೈಗೊಳ್ಳುವುದಾಗಿ ಭರವಸೆ ನೀಡಿದ್ದಾರೆ. ಇದನ್ನೂ ಓದಿ: IPL 2025: ಮೆಗಾ ಹರಾಜು ಪ್ರಕ್ರಿಯೆ ಶುರು; ರಿಟೇನ್‌ ಆಟಗಾರರ ವಿಚಾರದಲ್ಲಿ ಫ್ರಾಂಚೈಸಿಗಳ ನಡುವೆ ಭಿನ್ನಾಭಿಪ್ರಾಯ!

  • ಪೊದೆಯೊಂದರಲ್ಲಿ ಬೆತ್ತಲೆ ಸ್ಥಿತಿಯಲ್ಲಿ ಮಹಿಳೆಯ ಮೃತದೇಹ ಪತ್ತೆ – ಅತ್ಯಾಚಾರ ಶಂಕೆ

    ಪೊದೆಯೊಂದರಲ್ಲಿ ಬೆತ್ತಲೆ ಸ್ಥಿತಿಯಲ್ಲಿ ಮಹಿಳೆಯ ಮೃತದೇಹ ಪತ್ತೆ – ಅತ್ಯಾಚಾರ ಶಂಕೆ

    – ತನಿಖೆಗೆ 5 ವಿಶೇಷ ತಂಡ ರಚನೆ

    ಅಮರಾವತಿ: ಆಂಧ್ರಪ್ರದೇಶದ (Andhra Pradesh) ಎಪುರುಪಾಲೆಂ ಕುಗ್ರಾಮವೊಂದರಲ್ಲಿ ಸಾರ್ವಜನಿಕರನ್ನು ಬೆಚ್ಚಿಬೀಳಿಸುವ ಘಟನೆ ನಡೆದಿದೆ. ಇಲ್ಲಿನ ಬಾಲಕಿಯರ ಪ್ರೌಢಶಾಲೆ ಬಳಿಯ ಪೊದೆಗಳಲ್ಲಿ 21 ವರ್ಷದ ಮಹಿಳೆಯೊಬ್ಬರ (Women) ಶವ ಬೆತ್ತಲೆ ಸ್ಥಿತಿಯಲ್ಲಿ ಪತ್ತೆಯಾಗಿದ್ದು, ಸಾರ್ವಜನಿಕರ ಆತಂಕಕ್ಕೆ ಕಾರಣವಾಗಿದೆ.

    ಬಾಪಟ್ಲಾ ಜಿಲ್ಲೆಯ ಎಪುರುಪಾಲೆಂ ಗ್ರಾಮದಲ್ಲಿ ಘಟನೆ ನಡೆದಿದ್ದು, ಮಹಿಳೆಯನ್ನು ಹತ್ಯೆಗೈಯುವ ಮುನ್ನ ಅತ್ಯಾಚಾರ ಎಸಗಿರುವುದಾಗಿ ಪೊಲೀಸರು ತಿಳಿಸಿದ್ದಾರೆ. ಇದನ್ನೂ ಓದಿ: ಸೂರಜ್ ರೇವಣ್ಣ ವಿರುದ್ಧ ಅಸಹಜ ಲೈಂಗಿಕ ದೌರ್ಜನ್ಯ ಆರೋಪ – ಸಂತ್ರಸ್ತನ ವಿರುದ್ಧವೇ ಕೇಸ್‌ ದಾಖಲು

    ಏನಿದು ಘಟನೆ?
    ಬಾಪಟ್ಲಾ ಜಿಲ್ಲೆಯ ಎಪುರುಪಾಲೆಂ ಗ್ರಾಮದ ಮಹಿಳೆ ಮುಂಜಾನೆ 5:30ರ ಸುಮಾರಿಗೆ ನಿತ್ಯಕರ್ಮಗಳನ್ನು ಮುಗಿಸಿ, ರೈಲ್ವೇ ಟ್ರ್ಯಾಕ್‌ಗೆ (Railway Track) ಸಮೀಪವಿರುವ ಶಾಲೆಯ ಬಳಿ ಸ್ನಾನಕ್ಕೆ ಹೋಗಿದ್ದಾರೆ. ಮತ್ತೆ ಅವರು ಮನೆಗೆ ಹಿಂದಿರುಗಲಿಲ್ಲ. ಇದರಿಂದ ಆತಂಕಗೊಂಡಿದ್ದ ಆಕೆಯ ಕುಟುಂಬದ ಸದಸ್ಯರು ತುಂಬ ಹೊತ್ತು ಹುಡುಕಾಟ ನಡೆಸಿದ್ದಾರೆ. ನಂತರ ಪೊದೆಯಲ್ಲಿ ಬೆತ್ತಲೆ ಸ್ಥಿತಿಯಲ್ಲಿ ಮಹಿಳೆ ಸಾವನ್ನಪ್ಪಿರುವುದು ಕಂಡುಬಂದಿದೆ ಎಂದು ಬಪಟ್ಲಾ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ವಕುಲ್ ಜಿಂದಾಲ್ ತಿಳಿಸಿದ್ದಾರೆ.

    10 ಲಕ್ಷ ರೂ. ಪರಿಹಾರ ಘೋಷಣೆ:
    ಮಹಿಳೆಯನ್ನು ಹತ್ಯೆ ಮಾಡುವುದಕ್ಕೂ ಮುನ್ನ ಕಾಮುಕರು, ಅತ್ಯಾಚಾರ ಎಸಗಿದ್ದಾರೆ. ಸದ್ಯ ಪ್ರಕರಣದ ತನಿಖೆಗಾಗಿ 5 ವಿಶೇಷ ತಂಡಗಳನ್ನ ರಚಿಸಲಾಗಿದೆ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಈ ನಡುವೆ ಮುಖ್ಯಮಂತ್ರಿ ಚಂದ್ರಬಾಬು ನಾಯ್ಡು ಅವರು ಮೃತರ ಕುಟುಂಬಕ್ಕೆ 10 ಲಕ್ಷ ರೂ. ಪರಿಹಾರ ಘೋಷಣೆ ಮಾಡಿರುವುದಾಗಿ ಗೃಹ ಸಚಿವರಾದ ವಂಗಲಪುಡಿ ಅನಿತಾ ತಿಳಿಸಿದ್ದಾರೆ. ಇದನ್ನೂ ಓದಿ: ಚಿಕ್ಕಮಗಳೂರಿನ ಸುಪ್ರಸಿದ್ಧ ಪ್ರವಾಸಿ ತಾಣ ಎತ್ತಿನಭುಜಕ್ಕೆ ಪ್ರವಾಸಿಗರಿಗೆ ನಿರ್ಬಂಧ 

    48 ಗಂಟೆಗಳಲ್ಲಿ ಆರೋಪಿಗಳನ್ನು ಬಂಧಿಸಿ:
    ಸದ್ಯ ಈ ಘಟನೆ ಆಂಧ್ರ ಪ್ರದೇಶದಲ್ಲಿ ಸರ್ಕಾರದ ಮಟ್ಟದಲ್ಲಿ ಸದ್ದು ಮಾಡುತ್ತಿದ್ದು, ಯಾವುದೇ ಲೋಪಕ್ಕೆ ಅವಕಾಶ ನೀಡದಂತೆ 48 ಗಂಟೆಗಳ ಒಳಗೆ ಆರೋಪಿಗಳನ್ನು ಬಂಧಿಸುವಂತೆ ಸರ್ಕಾರ ಅಧಿಕಾರಿಗಳಿಗೆ ಸೂಚನೆ ನೀಡಿದೆ. ಅಲ್ಲದೇ ಹೆಚ್ಚಿದ ಮಾದಕ ದ್ರವ್ಯ ಸೇವನೆಯಿಂದ ಇಂತಹ ಅಪರಾಧಗಳು ಹೆಚ್ಚಾಗುತ್ತಿವೆ ಎಂದು ಶಂಕಿಸಿದೆ.