Tag: women

  • ನಾಯಿ ವಿಚಾರಕ್ಕೆ ಠಾಣೆ ಮೆಟ್ಟಿಲೇರಿದ ಮಹಿಳೆಯರು

    ನಾಯಿ ವಿಚಾರಕ್ಕೆ ಠಾಣೆ ಮೆಟ್ಟಿಲೇರಿದ ಮಹಿಳೆಯರು

    ಬೆಂಗಳೂರು: ನಾಯಿ ವಿಚಾರಕ್ಕೆ ಮಹಿಳೆಯರಿಬ್ಬರು ಪರಸ್ಪರ ಕಿತ್ತಾಡಿಕೊಂಡು ಪೊಲೀಸ್ (Police) ಠಾಣೆಗೆ ಹೋಗಿರುವ ಘಟನೆ ಬೆಂಗಳೂರಿನ (Bengaluru) ಜೀವನ್ ಭೀಮಾ ನಗರದಲ್ಲಿ ನಡೆದಿದೆ.

    ಪಂಜಾಬ್ ಮೂಲದ ಪೂಜಾ ಕಪೂರ್ ಕಳೆದ ಒಂದೂವರೆ ವರ್ಷದಿಂದ ಪ್ರಮೀಳಾ ಎಂಬವರ ಮನೆಯಲ್ಲಿ ಭೋಗ್ಯಕ್ಕೆ (Lease) ಇದ್ದಾರೆ. ಪೂಜಾ ಒಂದು ನಾಯಿಯನ್ನು ಸಾಕಿಕೊಂಡಿದ್ದಾರೆ. ನಾಯಿ ಕೊಳಕು ಮಾಡುತ್ತದೆ ಮತ್ತು ಸರಿಯಾಗಿ ಸ್ವಚ್ಚಗೊಳಿಸುವುದಿಲ್ಲ ಎಂಬ ಕಾರಣಕ್ಕೆ ಮನೆ ಮಾಲೀಕರಾದ ಪ್ರಮೀಳಾ ಹಾಗೂ ಪೂಜಾ ನಡುವೆ ಆಗಾಗ ಜಗಳ ನಡೆಯುತಿತ್ತು. ಇದನ್ನೂ ಓದಿ: ಶಾಲೆ ಕಾಂಪೌಂಡ್, ಮನೆಗೆ ಬಸ್ ಡಿಕ್ಕಿ – 1ಂಕ್ಕೂ ಹೆಚ್ಚು ಮಂದಿಗೆ ಗಾಯ, ಓರ್ವ ಪ್ರಯಾಣಿಕ ಸ್ಥಳದಲ್ಲೇ ಸಾವು

    ಎರಡು ದಿನಗಳ ಹಿಂದೆ ನಾಯಿ ವಿಚಾರಕ್ಕೆ ಇಬ್ಬರ ನಡುವೆ ಗಲಾಟೆಯಾಗಿದೆ. ಆಗ ಇಬ್ಬರ ನಡುವೆ ಮಾತಿಗೆ ಬೆಳೆದು ಕೊನೆಗೆ ಪರಸ್ಪರ ಹೊಡೆದಾಡಿಕೊಂಡಿದ್ದಾರೆ. ಗಲಾಟೆ ಬಳಿಕ ಪೂಜಾ ಬೆಂಗಳೂರಿನಲ್ಲಿ ಮಹಿಳೆಯರಿಗೆ ರಕ್ಷಣೆ ಇಲ್ಲ ಎಂದು ಎಕ್ಸ್ ಖತೆಯಲ್ಲಿ ಬರೆದುಕೊಂಡಿದ್ದಾರೆ. ಪೂಜಾ ಎಕ್ಸ್ನಲ್ಲಿ ಗಲಾಟೆ ಕುರಿತು ವೀಡಿಯೋ ಹಾಕಿದ್ದು, ಅದನ್ನು ಪೊಲೀಸ್ ಕಮಿಷನರ್‌ಗೆ ಶೇರ್ ಮಾಡಿದ್ದಾರೆ. ಇದನ್ನೂ ಓದಿ: ರಾಜ್ಯಾದ್ಯಂತ ಟ್ಯಾಕ್ಸಿಗಳಿಗೆ ಏಕರೂಪದ ದರ ನಿಗದಿ – ಪ್ರತಿ ಕಿಮೀಗೆ 24 ರಿಂದ 28 ರೂ.ವರೆಗೆ ಏರಿಕೆಗೆ ಅವಕಾಶ

    ಜೀವನ್ ಭೀಮಾನಗರದ ಪೊಲೀಸರು ಪ್ರಕರಣಕ್ಕೆ ಸಂಬಂಧಿಸಿದಂತೆ ದೂರು, ಪ್ರತಿದೂರು ದಾಖಲಿಸಿಕೊಂಡು ಇಬ್ಬರಿಗೂ ನೋಟಿಸ್ ನೀಡಿ ವಿಚಾರಣೆ ನಡೆಸುತ್ತಿದ್ದಾರೆ. ಇದನ್ನೂ ಓದಿ: 1 ಕಿ.ಮಿಗೆ 1.59 ಲಕ್ಷ, ದಿನಕ್ಕೆ 50 ಲಕ್ಷ – ಭಾರತ್‌ ಜೋಡೋ ಯಾತ್ರೆಗೆ ಬರೋಬ್ಬರಿ 71 ಕೋಟಿ ಖರ್ಚು

  • ಮಹಿಳೆ ಸ್ನಾನ ಮಾಡುವಾಗ ಕಿಟಕಿಯಿಂದ ಫೋಟೋ ಕ್ಲಿಕ್ಕಿಸಿ ಬ್ಲ್ಯಾಕ್‌ಮೇಲ್‌ – ಕಾಮುಕನ ವಿರುದ್ಧ ದೂರು

    ಮಹಿಳೆ ಸ್ನಾನ ಮಾಡುವಾಗ ಕಿಟಕಿಯಿಂದ ಫೋಟೋ ಕ್ಲಿಕ್ಕಿಸಿ ಬ್ಲ್ಯಾಕ್‌ಮೇಲ್‌ – ಕಾಮುಕನ ವಿರುದ್ಧ ದೂರು

    ಹಾಸನ: ಸ್ನಾನ ಮಾಡುತ್ತಿದ್ದಾಗ ಮಹಿಳೆಯೊಬ್ಬರ (Women) ಫೋಟೋ ತೆಗೆದು, ನನ್ನೊಂದಿಗೆ ಲೈಂಗಿಕವಾಗಿ ಸಹಕರಿಸದಿದ್ದರೇ ನಿನ್ನ ಫೋಟೋ ವೈರಲ್ ಮಾಡ್ತೀನಿ ಅಂತ ಬ್ಲಾಕ್ ಮೇಲ್ ಮಾಡುತ್ತಿದ್ದ ವಿಕೃತ ಕಾಮುಕನ ವಿರುದ್ಧ ಕ್ರಮಕ್ಕೆ ಆಗ್ರಹಿಸಿ ಮಹಿಳೆಯೊಬ್ಬರು ಪೊಲೀಸ್ ಠಾಣೆ (Hassan Police Station) ಮೆಟ್ಟಿಲೇರಿದ್ದಾರೆ.

    ನಡೆದಿದ್ದೇನು?
    ಹಾಸನ (Hassan) ಜಿಲ್ಲೆ ಅರಕಲಗೂಡು ತಾಲ್ಲೂಕಿನ ಗ್ರಾಮವೊಂದರಲ್ಲಿ ಘಟನೆ ನಡೆದಿದೆ. ತಾಲ್ಲೂಕಿನ ಗ್ರಾಮವೊಂದರ ನಿವಾಸಿ ಲಕ್ಷ್ಮೀಶ ಎಂಬಾತ, ಮಹಿಳೆಯೊಬ್ಬರು ಸ್ನಾನ ಮಾಡುವಾಗ ಕಿಟಕಿಯಿಂದ ನಗ್ನ ಫೋಟೋಗಳನ್ನ ಕ್ಲಿಕ್ಕಿಸಿದ್ದ. ನಂತರ ಆ ಮಹಿಳೆಗೆ ಫೋಟೋ ಕಳುಹಿಸಿ ಇಂತಿಷ್ಟು ಹಣ ನೀಡುವಂತೆ ಡಿಮ್ಯಾಂಡ್ ಮಾಡುತ್ತಿದ್ದ. ಅಲ್ಲದೇ ನನ್ನೊಂದಿನ ಲೈಂಗಿಕವಾಗಿ ಸಹಕರಿಸಬೇಕು. ಇಲ್ಲದಿದ್ದರೆ ನಿನ್ನ ಫೋಟೋಗಳನ್ನು ವೈರಲ್ ಮಾಡುತ್ತೀನಿ ಎಂದು ಬೆದರಿಕೆ ಹಾಕುತ್ತಿದ್ದ. ಇದರಿಂದ ಮಹಿಳೆ ಸಂಪೂರ್ಣ ಹೆದರಿದ್ದಳು ಎಂದು ಮೂಲಗಳು ತಿಳಿಸಿವೆ.

    ಇದೇ ವಿಚಾರಕ್ಕೆ ಕೆಲ ದಿನಗಳ ಹಿಂದೆ ಲಕ್ಷ್ಮೀಶನಿಗೆ ಗ್ರಾಮದ ಹಿರಿಯರು ಬುದ್ಧಿ ಹೇಳಿದ್ದರು. ಆದರೂ ಬದಲಾಗದ ಕಾಮುಕ, ಮಹಿಳೆಗೆ ಬ್ಲಾಕ್‌ಮೇಲ್‌ ಮಾಡೋದನ್ನ ಮುಂದುವರಿಸಿದ್ದಾನೆ. ಇದನ್ನೂ ಓದಿ: ಉತ್ತರ ಪ್ರದೇಶದ 16 ಲೋಕಸಭಾ ಕ್ಷೇತ್ರಗಳಿಗೆ SP ಅಭ್ಯರ್ಥಿಗಳ ಪಟ್ಟಿ ರಿಲೀಸ್‌ – ಅಖಿಲೇಶ್‌ ಯಾದವ್‌ ಪತ್ನಿಯೂ ಕಣಕ್ಕೆ

    ಇದರಿಂದ ಬೇಸತ್ತ ಮಹಿಳೆ ಪೊಲೀಸ್‌ ಠಾಣೆ ಮೆಟ್ಟಿಲೇರಿದ್ದಾಳೆ. ತನಗೆ ತೊಂದರೆಯಾಗುತ್ತಿದೆ, ಆತನ ವಿರುದ್ಧ ಕಾನೂನು ಕ್ರಮ ಕೈಗೊಳ್ಳುವಂತೆ ಪೊಲೀಸ್‌ ಠಾಣೆಗೆ ದೂರು ನೀಡಿದ್ದಾಳೆ. ಇದನ್ನೂ ಓದಿ: ಜೈಲು ಶಿಕ್ಷೆ ವಿಧಿಸಿದ ಕೆಲವೇ ಗಂಟೆಗಳಲ್ಲಿ ಬಾಂಬ್‌ ಬ್ಲಾಸ್ಟ್‌ – ಇಮ್ರಾನ್‌ ಖಾನ್‌ ಪಕ್ಷದ ಮೂವರ ದುರ್ಮರಣ

  • ಇಂದು ಕೋಲಾರದ ಇಬ್ಬರು ಮಹಿಳೆಯರಿಗೆ ಪ್ರಧಾನಿ ಮೋದಿ ಸನ್ಮಾನ

    ಇಂದು ಕೋಲಾರದ ಇಬ್ಬರು ಮಹಿಳೆಯರಿಗೆ ಪ್ರಧಾನಿ ಮೋದಿ ಸನ್ಮಾನ

    ಕೋಲಾರ: 75ನೇ ಗಣರಾಜ್ಯೋತ್ಸವ (75th Republic Day) ಆಚರಣೆಯ ಈ ಸಂದರ್ಭದಲ್ಲಿ ಇಂದು ದೆಹಲಿಯಲ್ಲಿ ಕೋಲಾರದ ಇಬ್ಬರು ಮಹಿಳೆಯರಿಗೆ ಸನ್ಮಾನ ನಡೆಯಲಿದೆ.

    ಪ್ರಧಾನಿ ನರೇಂದ್ರ ಮೋದಿಯವರು (Narendra Modi) ಗಣರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಈ ಇಬ್ಬರಿಗೆ ಸನ್ಮಾನ ಮಾಡಲಿದ್ದಾರೆ ಎಂಬುದಾಗಿ ತಿಳಿದುಬಂದಿದೆ. ಇದನ್ನೂ ಓದಿ: 75th Republic Day: ದೆಹಲಿಯಲ್ಲಿ ನಡೆಯುವ ಪಥಸಂಚಲನಕ್ಕೆ ಬೆಳಗಾವಿ ಮೂಲದ ಯೋಧ ಆಯ್ಕೆ

    ಕೋಲಾರ ತಾಲೂಕು ಬೆಗ್ಲಿ ಹೊಸಹಳ್ಳಿ ಗ್ರಾಮ ಪಂಚಾಯ್ತಿಯಲ್ಲಿ ಮಂಜುಳಾ ಹಾಗೂ ಶಶಿಕಲಾ ಕೆಲಸ ಮಾಡುತ್ತಿದ್ದಾರೆ. ಸ್ವಚ್ಚ ವಾಹಿನಿ ಚಾಲಕಿಯಾಗಿ ಮಂಜುಳಾ ಹಾಗೂ ಶಶಿಕಲಾ ಅವರು ನಿತ್ಯ ಕಸವನ್ನು ವೈಜ್ಞಾನಿಕವಾಗಿ ವಿಂಗಡನೆ ಮಾಡುವ ಕೆಲಸ ಮಾಡುತ್ತಿದ್ದಾರೆ. ಇವರ ಈ ಕಾರ್ಯವನ್ನು ಮೆಚ್ಚಿ ಇಂದು ಸನ್ಮಾನ ಮಾಡಲಾಗುತ್ತಿದೆ.

    ಗಣರಾಜ್ಯೋತ್ಸವದ ಹಿನ್ನೆಲೆಯಲ್ಲಿ ಈಗಾಗಲೇ ಈ ಇಬ್ಬರು ಮಹಿಳೆಯರು ದೆಹಲಿ ತಲುಪಿದ್ದಾರೆ.

  • ರೀಲ್ಸ್ ಮಾಡ್ತಾ ಸೋಶಿಯಲ್ ಮೀಡಿಯಾದಲ್ಲಿ ಫುಲ್‌ ಆಕ್ಟೀವ್ ಆಗಿದ್ದ ಶಿಕ್ಷಕಿ – ಸಾವಿನ ಸುತ್ತ ಅನುಮಾನಗಳ ಹುತ್ತ!

    ರೀಲ್ಸ್ ಮಾಡ್ತಾ ಸೋಶಿಯಲ್ ಮೀಡಿಯಾದಲ್ಲಿ ಫುಲ್‌ ಆಕ್ಟೀವ್ ಆಗಿದ್ದ ಶಿಕ್ಷಕಿ – ಸಾವಿನ ಸುತ್ತ ಅನುಮಾನಗಳ ಹುತ್ತ!

    ಮಂಡ್ಯ: ಪಾಂಡವಪುರ ತಾಲ್ಲೂಕಿನ ಮಾಣಿಕ್ಯಹಳ್ಳಿ ಗ್ರಾಮದ ನಿವಾಸಿಯಾಗಿದ್ದ ಶಿಕ್ಷಕಿ (Teacher) ದೀಪಿಕಾ ಸಾವಿನ ಸುತ್ತ ಹಲವು ಅನುಮಾನಗಳು ಹುಟ್ಟಿಕೊಂಡಿವೆ.

    ರೀಲ್ಸ್‌ ಮಾಡಿಕೊಂಡು ಸೋಶಿಯಲ್‌ ಮೀಡಿಯಾದಲ್ಲಿ (Social Media) ಫುಲ್‌ ಆಕ್ಟೀವ್‌ ಆಗಿದ್ದ ಶಿಕ್ಷಕಿ ಇದ್ದಕ್ಕಿದ್ದಂತೆ ಶವವಾಗಿ ಪತ್ತೆಯಾಗಿದ್ದು, ಅನುಮಾನಗಳಿಗೆ ದಾರಿ ಮಾಡಿಕೊಟ್ಟಿದೆ. ಅಲ್ಲದೇ ಶಿಕ್ಷಕಿ ಆತ್ಮಹತ್ಯೆ ಮಾಡಿಕೊಂಡಿಲ್ಲ, ಯಾರೋ ದುಷ್ಕರ್ಮಿಗಳು ಕೊಲೆಗೈದು ಮೃತದೇಹ ಹೂತಿಟ್ಟಿದ್ದಾರೆ ಎಂಬುದು ಮೇಲ್ನೋಟಕ್ಕೆ ಕಂಡುಬಂದಿದೆ.

    ಏನಿದು ಘಟನೆ?
    ಶಾಲೆಗೆ ಹೋಗಿಬರುತ್ತೇನೆ ಎಂದು ಹೇಳಿಹೋಗಿದ್ದ ಮಹಿಳೆಯೊಬ್ಬರು (Women) (ಶಿಕ್ಷಕಿಯೂ ಹೌದು) ಮೂರೇ ದಿನಗಳಲ್ಲಿ ಶವವಾಗಿ ಪತ್ತೆಯಾಗಿರುವ ಘಟನೆ ಮಂಡ್ಯ (Mandya) ಜಿಲ್ಲೆ ಶ್ರೀರಂಗಪಟ್ಟಣ ತಾಲ್ಲೂಕಿನ ಮೇಲುಕೋಟೆಯಲ್ಲಿ ನಡೆದಿದೆ. ಮೃತ ಮಹಿಳೆಯನ್ನು ದೀಪಿಕಾ (28) ಎಂದು ಗುರುತಿಸಲಾಗಿದೆ. ಇದನ್ನೂ ಓದಿ: ನಾಪತ್ತೆಯಾಗಿದ್ದ ಶಿಕ್ಷಕಿ ಅನುಮಾನಾಸ್ಪದ ಸಾವು – ಮಣ್ಣಿನಲ್ಲಿ ಹೂತಿಟ್ಟ ಸ್ಥಿತಿಯಲ್ಲಿ ಶವ ಪತ್ತೆ

    ಪಾಂಡವಪುರ ತಾಲ್ಲೂಕಿನ ಮಾಣಿಕ್ಯಹಳ್ಳಿ ಗ್ರಾಮದ ನಿವಾಸಿಯಗಿರುವ ದೀಪಿಕಾ ಮೇಲುಕೋಟೆಯ ಖಾಸಗಿ ಶಾಲೆಯಲ್ಲಿ ಶಿಕ್ಷಕಿಯಾಗಿ ಕೆಲಸ ಮಾಡುತ್ತಿದ್ದರು. ಜನವರಿ 20 ರಂದು ದೀಪಿಕಾ ಶಾಲೆಗೆ ಹೋಗಿ ಬರುತ್ತೇನೆ ಎಂದು ಕೆಲಸಕ್ಕೆ ತೆರಳಿದ್ದರು. ಸಂಜೆಯಾದರೂ ಮಗಳು ಮನೆಗೆ ಬಾರದೇ ಇದ್ದಾಗ ಆತಂಕಗೊಂಡ ತಂದೆ ವೆಂಕಟೇಷ್‌ ಮೇಲುಕೋಟೆ ಪೊಲೀಸ್‌ ಠಾಣೆಯಲ್ಲಿ ನಾಪತ್ತೆ ದೂರು ದಾಖಲಿಸಿದ್ದಾರೆ. ಇದನ್ನೂ ಓದಿ: ಚೀನಾದಲ್ಲಿ 7.2 ತೀವ್ರತೆಯ ಪ್ರಬಲ ಭೂಕಂಪನ – ದೆಹಲಿಯಲ್ಲೂ ಕಂಪಿಸಿದ ಭೂಮಿ, ಬೆಚ್ಚಿಬಿದ್ದ ಜನ

    ಈ ಸಂಬಂಧ ಪೊಲೀಸರು ಸಹ ದೂರು ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದರು. ಸೋಮವಾರ ಸಂಜೆ ಮೇಲುಕೋಟೆಯ ಬೆಟ್ಟದ ತಪ್ಪಲಿನಲ್ಲಿ ಹದ್ದು, ಕಾಗೆ ಹಾರಾಡುತ್ತಿರುವುದು, ದುರ್ವಾಸನೆ ಬೀರುತ್ತಿರುವುದನ್ನು ಕಂಡು ಸ್ಥಳೀಯರು ಸಂಶಯಗೊಂಡಿದ್ದಾರೆ. ಬಳಿಕ ಪೊಲೀಸರಿಗೆ ಮಾಹಿತಿ ತಿಳಿಸಿದ್ದಾರೆ. ಕೂಡಲೇ ಸ್ಥಳಕ್ಕೆ ಭೇಟಿ ನೀಡಿದ ಪೊಲೀಸರು ಹೂತಿಟ್ಟಿದ್ದ ಶವವನ್ನು ತಹಶೀಲ್ದಾರ್ ಸಮ್ಮುಖದಲ್ಲಿ ಹೊರತೆಗೆದಿದ್ದಾರೆ. ಬಳಿಕ ಮಂಡ್ಯದ ಎಸ್ಪಿ ಯತೀಶ್‌ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದ್ದಾರೆ. ಈ ಸಂಬಂಧ ತನಿಖೆ ಮುಂದುವರಿದಿದೆ.

  • ನಾಪತ್ತೆಯಾಗಿದ್ದ ಶಿಕ್ಷಕಿ ಅನುಮಾನಾಸ್ಪದ ಸಾವು – ಮಣ್ಣಿನಲ್ಲಿ ಹೂತಿಟ್ಟ ಸ್ಥಿತಿಯಲ್ಲಿ ಶವ ಪತ್ತೆ

    ನಾಪತ್ತೆಯಾಗಿದ್ದ ಶಿಕ್ಷಕಿ ಅನುಮಾನಾಸ್ಪದ ಸಾವು – ಮಣ್ಣಿನಲ್ಲಿ ಹೂತಿಟ್ಟ ಸ್ಥಿತಿಯಲ್ಲಿ ಶವ ಪತ್ತೆ

    ಮಂಡ್ಯ: ಶಾಲೆಗೆ ಹೋಗಿಬರುತ್ತೇನೆ ಎಂದು ಹೇಳಿಹೋಗಿದ್ದ ಮಹಿಳೆಯೊಬ್ಬರು (ಶಿಕ್ಷಕಿಯೂ ಹೌದು) ಕೆಲ ದಿನಗಳಲ್ಲೇ ಅನುಮಾನಾಸ್ಪದ ಸಾವಿಗೀಡಾಗಿರುವ ಘಟನೆ ಮಂಡ್ಯ (Mandya) ಜಿಲ್ಲೆ ಶ್ರೀರಂಗಪಟ್ಟಣ ತಾಲ್ಲೂಕಿನ ಮೇಲುಕೋಟೆಯಲ್ಲಿ (Melukote) ನಡೆದಿದೆ.

    ನಾಪತ್ತೆಯಾದ ಮಹಿಳೆಯ (Women) ಶವ ಪತ್ತೆಯಾಗಿದೆ. ದುಷ್ಕರ್ಮಿಗಳು ಕೊಲೆಗೈದು ಮಣ್ಣಿನಲ್ಲಿ ಹೂತು ಹಾಕಿದ ಸ್ಥಿತಿಯಲ್ಲಿ ಶವ ಪತ್ತೆಯಾಗಿದೆ. ಇದನ್ನೂ ಓದಿ: ಲವ್ ಜಿಹಾದ್ ಆರೋಪ – ಮಂಡ್ಯದ ಹಿಂದೂ ಬಾಲಕಿ ಜೊತೆ ಯುವಕ ಪರಾರಿ!

    ಮೃತ ಮಹಿಳೆಯನ್ನು ದೀಪಿಕಾ (28) ಎಂದು ಗುರುತಿಸಲಾಗಿದೆ. ಪಾಂಡವಪುರ ತಾಲ್ಲೂಕಿನ ಮಾಣಿಕ್ಯಹಳ್ಳಿ ಗ್ರಾಮದ ನಿವಾಸಿಯಗಿರುವ ದೀಪಿಕಾ ಮೇಲುಕೋಟೆಯ ಖಾಸಗಿ ಶಾಲೆಯಲ್ಲಿ ಶಿಕ್ಷಕಿಯಾಗಿ ಕೆಲಸ ಮಾಡುತ್ತಿದ್ದರು.

    ಜನವರಿ 20 ರಂದು ದೀಪಿಕಾ ಶಾಲೆಗೆ ಹೋಗಿ ಬರುತ್ತೇನೆ ಎಂದು ಕೆಲಸಕ್ಕೆ ತೆರಳಿದ್ದರು. ಅದೇ ದಿನ ಮಧ್ಯಾಹ್ನದ ವೇಳೆಗೆ ನಾಪತ್ತೆಯಾಗಿದ್ದಾರೆ. ಈ ಸಂಬಂಧ ಅಂದು ಸಂಜೆ ಕುಟುಂಬಸ್ಥರು ಮೇಲುಕೋಟೆ ಪೊಲೀಸ್ ಠಾಣೆಗೆ ದೂರು ನೀಡಿದ್ದರು.

    ದೂರು ದಾಖಲಿಸಿಕೊಂಡು ತನಿಖೆ ನಡೆಸಿದ್ದ ಪೊಲೀಸರು ಸೋಮವಾರ ಸಂಜೆ ಮೇಲುಕೋಟೆ ಬೆಟ್ಟದ ತಪ್ಪಲಿನಲ್ಲಿ ಶವ ಪತ್ತೆಹಚ್ಚಿದ್ದಾರೆ. ಸ್ಥಳಕ್ಕೆ ಮಂಡ್ಯ ಎಸ್‌ಪಿ ಯತೀಶ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಶಿಕ್ಷಕಿ ಸಾಮಾಜಿಕ ಜಾಲತಾಣದಲ್ಲಿ ಸಾಕಷ್ಟು ಕ್ರಿಯಾಶೀಲರಾಗಿದ್ದರು ಎಂಬುದು ತಿಳಿದುಬಂದಿದೆ. ಇದನ್ನೂ ಓದಿ: ಅಯೋಧ್ಯೆಯಲ್ಲಿ ಬಾಲರಾಮನ ಪ್ರಾಣಪ್ರತಿಷ್ಠೆ ದಿನವೇ ಮಂಡ್ಯದಲ್ಲೂ ರಾಮಮಂದಿರ ಲೋಕಾರ್ಪಣೆ

  • ಮಂತ್ರಾಕ್ಷತೆ ಬಳಿಕ ಮನೆ ಮನೆಗೂ ಭಗವಾಧ್ವಜ – ಬೀದರ್‌ನ ಮಹಿಳೆಯರ ಅಳಿಲು ಸೇವೆ!

    ಮಂತ್ರಾಕ್ಷತೆ ಬಳಿಕ ಮನೆ ಮನೆಗೂ ಭಗವಾಧ್ವಜ – ಬೀದರ್‌ನ ಮಹಿಳೆಯರ ಅಳಿಲು ಸೇವೆ!

    – ಖುದ್ದು ಮಹಿಳೆಯರೇ ಧ್ವಜ ಹೊಲಿದು ಹಂಚಿಕೆ

    ಬೀದರ್: ಮಂತ್ರಾಕ್ಷತೆ ಬಳಿಕ ಮನೆ ಮನೆಗೆ ಭಗವಾಧ್ವಜ (Bhagwa Dhwaja) ವಿತರಣೆ ಮಾಡಲಾಗುತ್ತಿದೆ. ಬೀದರ್‌ನ ರಾಮಭಕ್ತರು ಈ ಕೆಲಸ ಮಾಡುತ್ತಿದ್ದಾರೆ. ಜನವರಿ 22ರಂದು ಪ್ರತಿ ಮನೆ ಮನೆಯ ಮೇಲೂ ಭಗವಾಧ್ವಜ ಹಾರಾಡುವಂತೆ ಮಾಡುತ್ತಿದ್ದಾರೆ.

    ಬೀದರ್‌ನ (Bidar) ಈ ಮಹಿಳಾ ಭಕ್ತರು ಶ್ರೀರಾಮನಿಗಾಗಿ (Sri Ram) ಬರೋಬ್ಬರಿ ಒಂದು ಸಾವಿರ ಭಗವಾಧ್ವಜ ಹಾರಿಸಲು ಸಕಲ ಸಿದ್ಧತೆ ಮಾಡಿಕೊಂಡಿದ್ದಾರೆ. ಇದನ್ನೂ ಓದಿ: ಸಾಮಾಜಿಕ ಮಾಧ್ಯಮದಲ್ಲಿ ರಾಮಲಲ್ಲಾ ‘ದಿವ್ಯ ದರ್ಶನ’; ವಿಗ್ರಹದ ಫೋಟೋಗಳು ವೈರಲ್‌ – ಜೈ ಶ್ರೀರಾಮ್‌ ಘೋಷಣೆ

    ಬೀದರ್ ತಾಲೂಕಿನ ಕಾಡವಾದ ಗ್ರಾಮದ ರಾಮನ ಪರಮ ಭಕ್ತೆಯರು ಅಯೋಧ್ಯೆಯಲ್ಲಿ ಪೂಜಿಸಲ್ಪಟ್ಟ ಮಂತ್ರಾಕ್ಷತೆ ವಿತರಣೆಯಿಂದ ಪ್ರೇರಣೆಗೊಂಡಿದ್ದಾರೆ. ಈ ಪ್ರೇರಣೆಯಿಂದ ಒಂದು ಸಾವಿರ ಭಗವಾ ಧ್ವಜಗಳನ್ನ ಸ್ವತಃ ತಾವೇ ಹೊಲಿದು ಹಂಚಿಕೆ ಮಾಡುತ್ತಿದ್ದಾರೆ. ಬಾಲ ರಾಮನ ಪ್ರತಿಷ್ಠಾಪನೆಯ ದಿನ ಗ್ರಾಮದ ಎಲ್ಲಾ ಮನೆಗಳ ಮೇಲೂ ಭಗವಾಧ್ವಜ ಹಾರಾಡಬೇಕೆಂದು ಪಣ ತೊಟ್ಟು ಈ ಸಾಹಸಕ್ಕೆ ಕೈ ಹಾಕಿದ್ದಾರೆ. ಇದನ್ನೂ ಓದಿ: ಬಾಲರಾಮನ ಪ್ರಾಣಪ್ರತಿಷ್ಠೆಗೆ ಆಗಮಿಸುವ ಗಣ್ಯರಿಗೆ ಕ್ಯೂಆರ್ ಕೋಡ್ ಪಾಸ್ ಕಡ್ಡಾಯ- ಸ್ಕ್ಯಾನ್ ಆದ ಬಳಿಕವಷ್ಟೇ ಪ್ರವೇಶ

    ವಿಶ್ವ ಹಿಂದೂ ಪರಿಷತ್ ಹಾಗೂ ಬಜರಂಗದಳ ಕಾರ್ಯಕರ್ತರು ಈಗಾಗಲೇ ಧ್ವಜದ ಬಟ್ಟೆ ವಿತರಿಸಿದ್ದಾರೆ. 500 ಧ್ವಜ ತಯಾರಿಸಿದ್ದು 1 ಸಾವಿರಕ್ಕೂ ಹೆಚ್ಚು ಭಗವಾಧ್ವಜ ತಯಾರಿಸುವ ಪಣ ತೊಟ್ಟಿದ್ದಾರೆ. ರಾಮನ ಪರಮ ಭಕ್ತೆಯರಾಗಿರುವ ಇಂದುಮತಿ ಮರಕಂದಾ, ಸವಿತಾ ನಿನ್ನಿ, ಶ್ರೀದೇವಿ ಮೀನಕೇರಿ, ಸವಿತಾ ಶೀಲವಂತ, ಪದ್ಮಾವತಿ ಕಾರ್ಕನಳ್ಳಿ, ಅಂಬಿಕಾ ಹೂಗಾರ ಎಂಬುವರು ಧ್ವಜ ತಯಾರಿಕೆಯಲ್ಲಿ ನಿರಂತರವಾಗಿ ತಮ್ಮನ್ನು ತೊಡಗಿಸಿಕೊಂಡಿದ್ದಾರೆ.

    ಅಯೋಧ್ಯೆಯಲ್ಲಿ ಬಾಲರಾಮ ಪ್ರಾಣ ಪ್ರತಿಷ್ಠಾಪನೆಯ ದಿನ ಬೀದರ್‌ನ ಈ ಗ್ರಾಮದ ಪ್ರತಿ ಮನೆಗಳ ಮೇಲೆ ಭಗವಾಧ್ವಜ ಹಾರಿಸುವ ಮೂಲಕ ಮಹಿಳೆಯರು ರಾಮನಿಗೆ ತಮ್ಮ ಅಳಿಲು ಸೇವೆ ಸಲ್ಲಿಸುತ್ತಿದ್ದಾರೆ. ಇದನ್ನೂ ಓದಿ: Ram Mandir: ಮೈಸೂರಿನ ಶಿಲ್ಪಿ ಕೆತ್ತಿರುವ ರಾಮಲಲ್ಲಾ ವಿಗ್ರಹ ಹೇಗಿದೆ ನೋಡಿ – Photos 

  • ಬೆಳಗಾವಿಯಲ್ಲಿ ಮತ್ತೊಂದು ಅಮಾನವೀಯ ಘಟನೆ; ಮಹಿಳೆ ಅರೆಬೆತ್ತಲೆಗೊಳಿಸಿ ಹಲ್ಲೆ ಆರೋಪ – 20 ಜನರ ವಿರುದ್ಧ ದೂರು

    ಬೆಳಗಾವಿಯಲ್ಲಿ ಮತ್ತೊಂದು ಅಮಾನವೀಯ ಘಟನೆ; ಮಹಿಳೆ ಅರೆಬೆತ್ತಲೆಗೊಳಿಸಿ ಹಲ್ಲೆ ಆರೋಪ – 20 ಜನರ ವಿರುದ್ಧ ದೂರು

    ಬೆಳಗಾವಿ: ಈಚೆಗೆ ನಡೆದಿದ್ದ ಮಹಿಳೆಯನ್ನು ಅರೆಬೆತ್ತಲಾಗಿಸಿ ಹಲ್ಲೆ ಮಾಡಿದ ಘಟನೆ ದೇಶಾದ್ಯಂತ ಸದ್ದು ಮಾಡಿತ್ತು. ಇಂಥ ಅಮಾನವೀಯ ಘಟನೆ ಮಾಸುವ ಮುನ್ನವೇ ಮತ್ತೊಂದು ಪ್ರಕರಣ ಬೆಳಗಾವಿಯಲ್ಲಿ (Belagavi) ಬೆಳಕಿಗೆ ಬಂದಿದೆ.

    ಮಹಿಳೆಯನ್ನು ಎರಡೆರಡು ಬಾರಿ ಅರೆಬೆತ್ತಲೆಗೊಳಿಸಿ ಹಲ್ಲೆ ನಡೆಸಿರುವ ಆರೋಪ ಕೇಳಿಬಂದಿದೆ. ಸಂತ್ರಸ್ತ ಮಹಿಳೆಯು 20 ಮಂದಿ ವಿರುದ್ಧ ಬೆಳಗಾವಿ ಬೈಲಹೊಂಗಲ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ಇದನ್ನೂ ಓದಿ: ಸಿನಿಮಾ ಸ್ಟೈಲ್‍ನಲ್ಲಿ ಬ್ರ್ಯಾಂಡೆಡ್ ಶೂಗಳ ಕಳ್ಳತನ

    ಪ್ರಕರಣ ಏನು?
    ಜಮೀನು ಒತ್ತುವರಿ ಮಾಡಿದ್ದನ್ನು ಪ್ರಶ್ನಿಸಿ ಮಹಿಳೆ ಕೋರ್ಟ್ ಮೆಟ್ಟಿಲೇರಿದ್ದರು. ಮಹಿಳೆಯ ಮಾವ ಜಮೀನಿನಲ್ಲಿ ಮೇವಿನ ಬಣವಿ ಒಟ್ಟಲು ನೀಡಿದ್ದರು. 6 ಎಕರೆ ಭೂಮಿ ಆಕೆಯ ಮಾವನ ಹೆಸರಿನಲ್ಲಿತ್ತು. ಬೆಳಗಾವಿ ಜಿಲ್ಲೆಯ ಬೈಲಹೊಂಗಲ ತಾಲೂಕಿನ ತಿಗಡಿ ಗ್ರಾಮದಲ್ಲಿ ಈ ಜಮೀನು ಹೊಂದಿದ್ದರು. ಮಹಿಳೆಯನ್ನು ಆರೋಪಿಗಳೆಲ್ಲ ಸೇರಿ ಹೊಡೆದು ಜೀವ ಬೆದರಿಕೆ ಹಾಕಿರುವ ಆರೋಪ ಕೇಳಿಬಂದಿದೆ.

    ತಿಗಡಿ ಗ್ರಾಮದ ಗ್ರಾಪಂ ಅಧ್ಯಕ್ಷೆ ಪತಿ ಸೇರಿ ಒಟ್ಟು 20 ಜನರ ವಿರುದ್ಧ ಪ್ರಕರಣ ದಾಖಲಾಗಿದೆ. ಮೊದಲು ಬೈಲಹೊಂಗಲ ಠಾಣೆಯಲ್ಲಿ ದೂರು ದಾಖಲಾಗಿತ್ತು. ದೂರು ದಾಖಲಾಗಿದ್ದರೂ ಪ್ರಕರಣದಲ್ಲಿ ಆರೋಪಿಗಳ ಬಂಧನ ಆಗಿಲ್ಲ. ಸದ್ಯ ಬೆಳಗಾವಿ ಮಹಿಳಾ ಪೊಲೀಸ್ ಠಾಣೆಗೆ ಪ್ರಕರಣ ವರ್ಗಾವಣೆಯಾಗಿದೆ. ಇದನ್ನೂ ಓದಿ: ದ್ವೇಷದ ರಾಜಕಾರಣ ಮಾಡೋ ಕಾಂಗ್ರೆಸ್ಸಿನ ಅಂತ್ಯಕಾಲ ಆರಂಭವಾಗಿದೆ: ರಾಮುಲು

    ನೊಂದ ಮಹಿಳೆ ಹೇಳೋದೇನು?
    ಏಕಾಎಕಿ ನನ್ನ ಮೇಲೆ 25 ರಿಂದ 30 ಜನ ಹಲ್ಲೆ ಮಾಡಿದ್ದಾರೆ. ನನ್ನ ಕೂದಲು ಹಿಡಿದು ಎಳೆದಾಡಿ ಹಲ್ಲೆ ನಡೆಸಿದ್ದಾರೆ. ನನ್ನ ಖಾಸಗಿ ಅಂಗಾಂಗಗಳನ್ನು ಮುಟ್ಟಿ ಹಿಂಸೆ ಕೊಟ್ಟಿದ್ದಾರೆ. ದೂರು ಕೊಡಬೇಕೆಂದು ಪೊಲೀಸ್ ಠಾಣೆಗೆ ಹೋಗಲು ಬಸ್ ನಿಲ್ದಾಣಕ್ಕೆ ಬಂದೆ. ಅಲ್ಲಿಂದ ನನ್ನ ಎಳೆದುಕೊಂಡು ಬಂದು ಪಂಚಾಯ್ತಿಯಲ್ಲಿ ಕೂಡಿ ಹಾಕಿದರು. ಕೂಡಿ ಹಾಕಿ ನನ್ನ ಬಳಿ ಇದ್ದ ಫೋನ್ ಹಾಗೂ ಹಣವನ್ನು ಕಸಿದುಕೊಂಡರು. ನಂತರ ನನ್ನ ಕಡೆಯಿಂದ ಬಲವಂತವಾಗಿ ಕೆಲ ದಾಖಲಾತಿಗೆ ಸಹಿ ಮಾಡಿಸಿದರು. ಸಂಜೆಯ ವೇಳೆ ನನ್ನನ್ನು ಅಲ್ಲಿಂದ ಬಿಟ್ಟರು. ಮಾರನೇ ದಿನ ನಾನು ಬಂದು ಬೈಲಹೊಂಗಲ ಠಾಣೆಗೆ ದೂರು ನೀಡಿದ್ದೇನೆ ಎಂದು ಸಂತ್ರಸ್ತೆ ಅಳಲು ತೋಡಿಕೊಂಡಿದ್ದಾರೆ.

    ಕಲ್ಲಪ್ಪ ಡೊಂಕನ್ನವರ್, ಅಡಿವೆಪ್ಪ ದಳವಾಯಿ, ಕಲ್ಪನಾ ಡೊಂಕನ್ನವರ್, ಸಾಧಿಕ್ ಬಾಳೇಶಿ, ಶಿವಬಸಪ್ಪ ಕರಡಿಗುದ್ದಿ, ಬಸವರಾಜ್ ಕರಡಿಗುದ್ದಿ, ಮಾರುತಿ ಮುದ್ದೆನ್ನವರ್, ಸೋಮಲಿಂಗ್ ರಾವಜಿ, ಸೋಮಲಿಂಗ ಹಾದಿಮನಿ, ಮಲ್ಲವ್ವ ಕರಡಿಗುದ್ದಿ, ಬಾಬು ಕಾಜಗಾರ, ಮಾಲತಿ ರಾವಜಿ, ಗಂಗವ್ವ ಕಾಜಗಾರ, ಶಾಂತವ್ವ ಸಂಗೊಳ್ಳಿ, ಈರವ್ವ ಕರಕನ್ನವರ್, ಹರುನ್ ಕಂಡುಗೋಳ, ತಿಗಡಿ ಗ್ರಾಪಂ ಉಪಾಧ್ಯಕ್ಷೆಯ ಪತಿ ಸೇರಿ ಒಟ್ಟು 18 ಜನರ ವಿರುದ್ಧ ಸಂತ್ರಸ್ತೆ ದೂರು ದಾಖಲಿಸಿದ್ದಾರೆ. ಇದನ್ನೂ ಓದಿ: ರೋಗಿ, ಕುಟುಂಬಸ್ಥರು ಒಪ್ಪದಿದ್ದರೆ ICUಗೆ ದಾಖಲಿಸುವಂತಿಲ್ಲ- ಕೇಂದ್ರದಿಂದ ಆಸ್ಪತ್ರೆಗಳಿಗೆ ಹೊಸ ರೂಲ್ಸ್‌

  • ಬೆಳಗ್ಗೆ ಹೆರಿಗೆಯಾಗಿದ್ದ ಬಾಣಂತಿ ರಾತ್ರಿ ಹೊಟ್ಟೆನೋವಿನಿಂದ ನರಳಿ ಸಾವು; ವೈದ್ಯರ ನಿರ್ಲಕ್ಷ್ಯ ಆರೋಪ

    ಬೆಳಗ್ಗೆ ಹೆರಿಗೆಯಾಗಿದ್ದ ಬಾಣಂತಿ ರಾತ್ರಿ ಹೊಟ್ಟೆನೋವಿನಿಂದ ನರಳಿ ಸಾವು; ವೈದ್ಯರ ನಿರ್ಲಕ್ಷ್ಯ ಆರೋಪ

    ಚಿಕ್ಕಮಗಳೂರು: ಹೆರಿಗೆಯಾಗಿದ್ದ ಬಾಣಂತಿ ವೈದ್ಯರ ನಿರ್ಲಕ್ಷ್ಯದಿಂದ ಸಾವನ್ನಪ್ಪಿರುವ ಘಟನೆ ಚಿಕ್ಕಮಗಳೂರು (Chikkamagaluru) ಮಲ್ಲೇಗೌಡ ಜಿಲ್ಲಾಸ್ಪತ್ರೆಯಲ್ಲಿ ನಡೆದಿದೆ.

    ರಂಜಿತಾ ಬಾಯಿ (21) ಮೃತ ದುರ್ದೈವಿ. ಶನಿವಾರ ಮಧ್ಯಾಹ್ನ ಗಂಡು ಮಗುವಿಗೆ ಜನ್ಮ ನೀಡಿದ್ದ ಈಕೆ ರಾತ್ರಿ ವೇಳೆಗೆ ತೀವ್ರ ಹೊಟ್ಟೆನೋವಿನಿಂದ ನರಳಿ ಸಾವನ್ನಪ್ಪಿದ್ದಾರೆ. ವೈದ್ಯರ ನಿರ್ಲಕ್ಷ್ಯವೇ ಇದಕ್ಕೆ ಕಾರಣ ಎಂದು ಬಾಣಂತಿ ಕುಟುಂಬಸ್ಥರು ಆರೋಪಿಸಿದ್ದಾರೆ. ಇದನ್ನೂ ಓದಿ: ನಿಮ್ಮ ಮಗನ ಎಂಪಿ ಮಾಡಲು ನನ್ನ ಮೇಲೆ ಆರೋಪ ಮಾಡ್ತಿದ್ದೀರಿ: ಸಿದ್ದು ವಿರುದ್ಧ ಪ್ರತಾಪ್‌ ಸಿಂಹ ವಾಗ್ದಾಳಿ

    ರಂಜಿತಾ ಮೂಲತಃ ಚಿಕ್ಕಮಗಳೂರು ತಾಲೂಕಿನ ಸಖರಾಯಪಟ್ಟಣ ಸಮೀಪದ ವಡೇರಹಳ್ಳಿ ತಾಂಡ್ಯದ ನಿವಾಸಿ, ಒಂದು ವರ್ಷದ ಹಿಂದೆಯಷ್ಟೇ ಶಶಿಧರ್ ನಾಯಕ್ ಎಂಬವರೊಂದಿಗೆ ವಿವಾಹವಾಗಿದ್ದರು.

    ಚಲಿಸುತ್ತಿದ್ದ ಅಂಬುಲೆನ್ಸ್‌ನಲ್ಲೇ ಗಂಡು ಮಗುವಿಗೆ ಜನ್ಮ: 

    ಮತ್ತೊಂದು ಘಟನೆಯಲ್ಲಿ ತುಂಬುಗರ್ಭಿಣಿಯನ್ನ ಹೆರಿಗೆಗೆಂದು ಆಸ್ಪತ್ರೆಗೆ ಕರೆದೊಯ್ಯುವ ವೇಳೆ ಮಾರ್ಗಮಧ್ಯೆ ಅಂಬುಲೆನ್ಸ್‌ನಲ್ಲೇ ಗಂಡು ಮಗುವಿಗೆ ಜನ್ಮ ನೀಡಿರುವ ಘಟನೆ ಜಿಲ್ಲೆಯ ಮೂಡಿಗೆರೆ ತಾಲೂಕಿನ ಬೆಳಗೋಡು ಗ್ರಾಮದಲ್ಲಿ ನಡೆದಿದೆ. ಇದನ್ನೂ ಓದಿ: ಕುಡಿದು ನೃತ್ಯ ಮಾಡುವ ವೇದಿಕೆಯಲ್ಲಿ ಭಗವಂತ ಶಿವನ ಚಿತ್ರ ಬಳಸಿ ಅಪಮಾನ – ಕಾಂಗ್ರೆಸ್‌ನಿಂದ ದೂರು

    ತೀವ್ರ ಹೆರಿಗೆ ನೋವಿನಿಂದ ಬಳಲುತ್ತಿದ್ದ ಬೆಳಗೋಡು ಗ್ರಾಮದ ಮಹಿಳೆಯನ್ನ 108 ಅಂಬುಲೆನ್ಸ್‌ನಲ್ಲಿ ಪಟ್ಟಣದ ಸರ್ಕಾರಿ ಆಸ್ಪತ್ರೆಗೆ ಕರೆದೊಯ್ಯಲಾಗುತ್ತಿತ್ತು. ಈ ವೇಳೆ ಮಹಿಳೆಗೆ ವಿಪರೀತ ಹೆರಿಗೆ ನೋವು ಕಾಣಿಸಿಕೊಂಡಿತ್ತು. ಆಸ್ಪತ್ರೆ ತಲುಪಲು ಇನ್ನೂ 15 ಕಿ.ಮೀ. ದೂರವಿರುವಾಗಲೇ ಹೊಟ್ಟೆ ನೋವು ಹೆಚ್ಚಾಗಿದ್ದರಿಂದ ಚಾಲಕ ಗಂಗಾಧರನಾಯ್ಕ ವಾಹನವನ್ನು ವೇಗವಾಗಿ ಚಲಾಯಿಸಿದ್ದಾರೆ. ಆದಾಗ್ಯೂ ಮಹಿಳೆ ಚೀರಾಡಿದ್ದಾಳೆ, ಕೊನೆಗೆ ಶುಶ್ರೂಷಕಿ ಮಂಜುಳಾ ಅಂಬುಲೆನ್ಸ್‌ನಲ್ಲೇ ಮಹಿಳೆ ಹೆರಿಗೆ ಮಾಡಿಸುವಲ್ಲಿ ಯಶಸ್ವಿಯಾಗಿದ್ದಾರೆ.

    ಮಹಿಳೆ ಮಗುವಿಗೆ ಜನ್ಮ ನೀಡಿದ ಬಳಿಕ ಅಂಬುಲೆನ್ಸ್‌ನಲ್ಲೇ ಪ್ರಥಮ ಚಿಕಿತ್ಸೆ ನೀಡಿ, ನಂತರ ಆಸ್ಪತ್ರೆಗೆ ಕರೆದೊಯ್ದಿದ್ದಾರೆ. ಸದ್ಯ ತಾಯಿ-ಮಗು ಆರೋಗ್ಯವಾಗಿದ್ದಾರೆಂದು ಮಹಿಳೆಯ ಪತಿ ತಿಳಿಸಿದ್ದಾರೆ. ಇದರಿಂದ ಶುಶ್ರೂಷಕಿ ಮಂಜುಳಾ ಹಾಗೂ ಚಾಲಕ ಗಂಗಾಧರ್ ಕರ್ತವ್ಯಪ್ರಜ್ಞೆಗೆ ಸಾರ್ವಜನಿಕರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

  • ಹೊಸವರ್ಷ ಆಚರಣೆ – ಮಹಿಳೆಯರ ರಕ್ಷಣೆಗೆ ಮುಂದಿನ ವಾರದಲ್ಲಿ ಗೈಡ್‌ಲೈನ್ಸ್‌: ಬೆಂಗ್ಳೂರು ಪೊಲೀಸ್‌

    ಹೊಸವರ್ಷ ಆಚರಣೆ – ಮಹಿಳೆಯರ ರಕ್ಷಣೆಗೆ ಮುಂದಿನ ವಾರದಲ್ಲಿ ಗೈಡ್‌ಲೈನ್ಸ್‌: ಬೆಂಗ್ಳೂರು ಪೊಲೀಸ್‌

    ಬೆಂಗಳೂರು: ಹೊಸ ವರ್ಷ ಸಂಭ್ರಮಾಚರಣೆಯಲ್ಲಿ (New Year 2024) ಭಾಗವಹಿಸುವ ಮಹಿಳೆಯರಿಗೆ ಯಾವುದೇ ತೊಂದರೆ ಮತ್ತು ಕಿರುಕುಳ ಆಗದಂತೆ ನೋಡಿಕೊಳ್ಳಲು ವಿಶೇಷ ಗೈಡ್‌ಲೈನ್ಸ್‌ ಬಿಡುಗಡೆ ಮಾಡುವುದಾಗಿ ಬೆಂಗಳೂರು ನಗರ ಪೊಲೀಸ್‌ ಆಯುಕ್ತ  (Bengaluru Police Commissioner) ಬಿ. ದಯಾನಂದ್‌ ತಿಳಿಸಿದ್ದಾರೆ.

    ನಗರದಲ್ಲಿ ನಡೆದ ಸಭೆಯೊಂದರಲ್ಲಿ ಮಾತನಾಡಿದ ಅವರು, ವರ್ಷಾಚರಣೆ ವೇಳೆ ಮಹಿಳೆಯರಿಗೆ (Women) ತೊಂದರೆಯಾಗದಂತೆ ಸೂಕ್ತ ಕ್ರಮ ಕೈಗೊಳ್ಳಲಾಗುವುದು. ಮುಂದಿನ ವಾರದಲ್ಲೇ ಅದಕ್ಕೆ ಸಂಬಂಧಿಸಿದಂತೆ ಸೂಕ್ತ ಮಾರ್ಗಸೂಚಿ (New Year Guidelines) ಬಿಡುಗಡೆ ಮಾಡಲಾಗುವುದು ಎಂದು ಮಾಹಿತಿ ನೀಡಿದ್ದಾರೆ.

    ಹೊಸ ವರ್ಷ ಸಂಭ್ರಮಾಚರಣೆ ಬಗ್ಗೆ ಬಿಬಿಎಂಪಿ, ಬೆಸ್ಕಾಂ, ಬಿಎಂಟಿಸಿ, ಮೆಟ್ರೋ ಹಾಗೂ ಅಬಕಾರಿ ಇಲಾಖೆಗಳ ಜೊತೆ ಎರಡು ಸುತ್ತಿನ ಸಭೆ ನಡೆಸಿ ಚರ್ಚಿಸಲಾಗಿದೆ. ಎಂ.ಜಿ ರಸ್ತೆ, ಬ್ರಿಗೆಡ್‌ ರೋಡ್‌ ಸೇರಿದಂತೆ ವಿವಿಧ ಸ್ಥಳಗಳಲ್ಲಿ ಸಂಭ್ರಮಾಚರಣೆ ನಡೆಯಲಿದೆ. ಇದರಲ್ಲಿ ಪಾಲ್ಗೊಳ್ಳುವ ಸಾರ್ವಜನಿಕರಿಗೆ ತೊಂದರೆ ಆಗದಂತೆ, ಕುಡಿದು ಅತಿರೇಕವಾಗಿ ವರ್ತಿಸಿದ್ರೆ ಹಾಗೂ ಇತರೆ ದುರ್ಘಟನೆಗಳನ್ನ ತಡೆಗಟ್ಟಲು ಈ ಹಿಂದಿನ ಪ್ರಕರಣಗಳನ್ನು ಅವಲೋಕಿಸಿ ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದ್ದಾರೆ. ಇದನ್ನೂ ಓದಿ: ಜಮ್ಮು ಕಾಶ್ಮೀರದಲ್ಲಿ ದಾಳಿ; ಮೂವರು ನಾಗರಿಕರ ಹತ್ಯೆ – 2 ಜಿಲ್ಲೆಗಳಲ್ಲಿ ಇಂಟರ್‌ನೆಟ್‌ ಸ್ಥಗಿತ

    ಠಾಣೆ ವಿವರ ಪಡೆಯಲು QR ಕೋಡ್‌:
    ಪೊಲೀಸ್‌ ಇಲಾಖೆಯನ್ನು ಮತ್ತಷ್ಟು ಜನಸ್ನೇಹಿಯನ್ನಾಗಿ ಮಾಡಲು ಸಾರ್ವಜನಿಕ ಸ್ಥಳಗಳಲ್ಲಿ ಕ್ಯೂಆರ್‌ಕೋಡ್‌ ಅಳವಡಿಸುವ ವ್ಯವಸ್ಥೆಗೆ ಸಿದ್ಧತೆ ನಡೆಸಲಾಗುತ್ತಿದೆ. ಹೊಸ ವರ್ಷದ ಹೊರತಾಗಿಯೂ ಸಾರ್ವಜನಿಕ ಸ್ಥಳಗಳಲ್ಲಿ ದುರ್ಘಟನೆಗಳು ಸಂಭವಿಸಿದಾಗ ಸ್ಥಳ ಯಾವ ಠಾಣೆ ವ್ಯಾಪ್ತಿಗೆ ಬರಲಿದೆ? ಯಾರನ್ನು ಸಂಪರ್ಕಿಸಬೇಕು? ಇನ್ನೂ ಮುಂತಾದ ಗೊಂದಲಗಳಿದ್ದರೇ ಕ್ಯೂಆರ್‌ ಕೋಡ್‌ ಸ್ಕ್ಯಾನ್‌ ಮಾಡಿ ಮಾಹಿತಿ ಪಡೆಯಬಹುದು ಎಂದು ವಿವರಿಸಿದ್ದಾರೆ.

    ಕ್ಯೂಆರ್‌ ಕೋಡ್‌ ಸ್ಕ್ಯಾನ್‌ ಮಾಡಿದ್ರೆ ಸಂಬಂಧಪಟ್ಟ ಪೊಲೀಸ್‌ ಠಾಣೆಯ ಸಂಪೂರ್ಣ ವಿವರ ಸಿಗಲಿದೆ. ಇದರಿಂದ ಸಾರ್ವಜನಿಕರು ನೀಡುವ ಮಾಹಿತಿ ಆಧರಿಸಿ ಪೊಲೀಸರು ಘಟನಾ ಸ್ಥಳಕ್ಕೆ ಬರಲು ಅನುಕೂಲವಾಗುತ್ತದೆ ಎಂದು ಆಯುಕ್ತರು ತಿಳಿಸಿದ್ದಾರೆ. ಇದನ್ನೂ ಓದಿ: ಪ್ರಾಣಪ್ರತಿಷ್ಠೆಗೂ ಮುನ್ನ ಸಿಂಗಾರಗೊಳ್ಳಲಿದೆ ರಾಮನ ಮೆಟ್ಟಿಲು! – ಏನಿದರ ಮಹತ್ವ? ಈ ಹೆಸರು ಯಾಕೆ ಬಂತು?

  • ಬಾಗಲಕೋಟೆಯಲ್ಲಿ 50 ಸಾವಿರ ಮಂದಿಗೆ ಸಿಕ್ಕಿಲ್ಲ ಗೃಹಲಕ್ಷ್ಮಿಯ 2 ಸಾವಿರ ರೂ.!

    ಬಾಗಲಕೋಟೆಯಲ್ಲಿ 50 ಸಾವಿರ ಮಂದಿಗೆ ಸಿಕ್ಕಿಲ್ಲ ಗೃಹಲಕ್ಷ್ಮಿಯ 2 ಸಾವಿರ ರೂ.!

    ಬಾಗಲಕೋಟೆ: ಕಾಂಗ್ರೆಸ್‍ನ (Congress) ಐದು ಗ್ಯಾರಂಟಿಗಳಲ್ಲಿ ಗೃಹಲಕ್ಷ್ಮಿ ಯೋಜನೆಯು ಪ್ರಮುಖವಾದದ್ದಾಗಿದೆ. ಮನೆಯೊಡತಿಗೆ ಎರಡು ಸಾವಿರ ನೀಡುವ ಯೋಜನೆ ಇದಾಗಿದ್ದು, ಇದರಿಂದ ಮಹಿಳಾಮಣಿಗಳು ಫುಲ್ ಖುಷ್ ಆಗಿದ್ದಾರೆ. ಆದರೆ ಇನ್ನೊಂದು ಕಡೆ ಅದೆಷ್ಟೋ ಮಹಿಳೆಯರು ಹಣ ಬಾರದೇ ಇಂದಿಗೂ ಅಲೆದಾಡುತ್ತಿದ್ದಾರೆ. ಅದೊಂದು ಜಿಲ್ಲೆಯಲ್ಲಿ ಗೃಹಲಕ್ಷ್ಮಿ ಯೋಜನೆ ಇಂದಿಗೂ 50 ಸಾವಿರಕ್ಕೂ ಅಧಿಕ ಮಹಿಳೆಯರಿಗೆ ಸಿಕ್ಕಿಲ್ಲ.

    ರಾಜ್ಯ ಕಾಂಗ್ರೆಸ್ ಸರ್ಕಾರದ ಗ್ಯಾರಂಟಿಗಳಲ್ಲಿ ಒಂದಾದ ಗೃಹಲಕ್ಷ್ಮಿ ಯೋಜನೆಯ ಹಣ ಕೆಲವರಿಗೆ ಸಿಕ್ಕಿದ್ದರೆ, ಇನ್ನೂ ಕೆಲವರಿಗೆ ಸಿಕ್ಕಿಲ್ಲ. ಬಾಗಲಕೋಟೆ ಜಿಲ್ಲೆಯಲ್ಲಿ 50 ಸಾವಿರಕ್ಕೂ ಅಧಿಕ ಮಂದಿಗೆ 2000 ರೂಪಾಯಿ ಹಣ ಇನ್ನೂ ದಕ್ಕಿಲ್ಲ. ಆಧಾರ್ ಸರಿಯಿಲ್ಲ, ಕೆವೈಸಿ, ರೇಷನ್ ಕಾರ್ಡ್ ತಿದ್ದುಪಡಿಗಾಗಿ ಮಕ್ಕಳ ಕಲ್ಯಾಣ ಇಲಾಖೆ, ಕರ್ನಾಟಕ ಒನ್ ಕೇಂದ್ರಗಳಿಗೆ ಯಜಮಾನಿಯರು ನಿತ್ಯ ಅಲೆದಾಡುವಂತಾಗಿದೆ. ಅಧಿಕಾರಿಗಳಿಗೆ ಕೇಳಿದ್ರೆ ತಾಂತ್ರಿಕ ಸಮಸ್ಯೆ ಅಂತಿದ್ದಾರೆ ಅಂತ ಮಹಿಳೆಯರು ಬೇಸರ ವ್ಯಕ್ತಪಡಿಸಿದ್ದಾರೆ.

    ಬಾಗಲಕೋಟೆ (Bagalkote) ಜಿಲ್ಲೆಯಲ್ಲಿ ಒಟ್ಟು 4 ಲಕ್ಷದ 34 ಸಾವಿರ 852 ಫಲಾನುಭವಿಗಳ ಗುರಿ ಹೊಂದಲಾಗಿದೆ. ಇದರಲ್ಲಿ 3 ಲಕ್ಷದ 80 ಸಾವಿರದ 312 ಮಂದಿ ನೊಂದಣಿ ಮಾಡಿಕೊಂಡಿದ್ದಾರೆ. ಆಗಸ್ಟ್ ತಿಂಗಳಲ್ಲಿ 3 ಲಕ್ಷದ 18 ಸಾವಿರದ 270 ಜನರಿಗೆ ತಲಾ 2 ಸಾವಿರ ರೂಪಾಯಿ ಬಂದರೆ 43 ಸಾವಿರದ 438 ಮಂದಿಗೆ ಹಣ (Gruhalakshmi Money) ಬಂದಿಲ್ಲ. ಸೆಪ್ಟಂಬರ್ ನಲ್ಲಿ 3 ಲಕ್ಷದ 17 ಸಾವಿರದ 606 ಜನರಿಗೆ ಹಣ ಬಂದರೆ ಅಗಸ್ಟ್ ನಲ್ಲಿ ಬಂದ ಫಲಾನುಭವಿಗಳ ಪೈಕಿ ಸೆಪ್ಟಂಬರ್ ನಲ್ಲಿ 664 ಮಂದಿಗೆ ಹಣ ಸಿಕ್ಕಿಲ್ಲ.

    ಜಿಲ್ಲೆಯಲ್ಲಿ 46,408 ಮಹಿಳೆಯರ ಹೆಸರು ನೊಂದಣಿ ಆಗಿಯೇ ಇಲ್ಲ. ಈ ಬಗ್ಗೆ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಅಧಿಕಾರಿಗಳನ್ನು ಕೇಳಿದರೆ ಕೆವೈಸಿ, ರೇಷನ್ ಕಾರ್ಡ್ ತಿದ್ದುಪಡಿ ಸೇರಿದಂತೆ ತಾಂತ್ರಿಕ ಕಾರಣದಿಂದ ಇಷ್ಟೆಲ್ಲ ಸಮಸ್ಯೆಯಾಗಿದೆ. ಇದನ್ನು ಆದಷ್ಟು ಸರಿ ಮಾಡುವ ಪ್ರಯತ್ನ ಮಾಡುತ್ತಿದ್ದೇವೆ ಎಂದು ಹೇಳುತ್ತಾರೆ.  ಇದನ್ನೂ ಓದಿ: ಕರಾವಳಿಯಲ್ಲಿ ಮತ್ತೆ ಧರ್ಮ ದಂಗಲ್ – ಕುಡುಪು ಜಾತ್ರೆಯಲ್ಲಿ ಮುಸ್ಲಿಂ ವ್ಯಾಪಾರಿಗಳಿಗೆ ನಿರ್ಬಂಧ?

    ಒಟ್ಟಿನಲ್ಲಿ ಗೃಹಲಕ್ಷ್ಮಿ ಯೋಜನೆ‌ (Gruhalakshmi Scheme) ಕೆಲವರಿಗೆ ಪ್ರಸಾದವಾದರೆ ಕೆಲವರಿಗೆ ಕೈಗೆಟುಕದೆ ನಿರಾಸೆಯಾಗಿದೆ. ಆದಷ್ಟು ಬೇಗ ತಾಂತ್ರಿಕ ಸಮಸ್ಯೆಗಳನ್ನು ಸರಿದೂಗಿಸಿ ಗೃಹಲಕ್ಷ್ಮಿ ಹಣ ಫಲಾನುಭವಿಗಳಿಗೆ ಸಿಗುವಂತೆ ಮಾಡಬೇಕಿದೆ.