Tag: women

  • ಥೈರಾಯ್ಡ್ ಸಮಸ್ಯೆ ಅಂದ್ರೆ ಏನು? – ಸಾಮಾನ್ಯ ಲಕ್ಷಣಗಳು ಯಾವುವು?

    ಥೈರಾಯ್ಡ್ ಸಮಸ್ಯೆ ಅಂದ್ರೆ ಏನು? – ಸಾಮಾನ್ಯ ಲಕ್ಷಣಗಳು ಯಾವುವು?

    ಥೈರಾಯ್ಡ್ (Thyroid) ಸಮಸ್ಯೆಗಳು ಪ್ರಪಂಚದಾದ್ಯಂತ ಸಾಮಾನ್ಯವಾಗಿದೆ. ಇದು ಹೆಚ್ಚಿನ ಮಹಿಳೆಯರಲ್ಲಿ ಕಾಣಿಸಿಕೊಳ್ಳುತ್ತಿದೆ. ಥೈರಾಯ್ಡ್ ಇದ್ದರೆ ಕೆಲವರು ದಪ್ಪವಾಗುತ್ತಾರೆ, ಇನ್ನೂ ಕೆಲವರು ಸಣ್ಣ ಆಗುತ್ತಾ ಹೋಗುತ್ತಾರೆ. ಹಾಗಾದ್ರೆ ಈ ಥೈರಾಯ್ಡ್ ಅಂದ್ರೆ ಏನು? ಹೇಗೆ ಬರುತ್ತೆ? ಲಕ್ಷಣಗಳೇನು? ಚಿಕಿತ್ಸೆ ಹೇಗೆ ಎಂಬುದರ ಬಗ್ಗೆ ಇಲ್ಲಿ ವಿವರ ನೀಡಲಾಗಿದೆ.

    ಇಂದಿನ ಜೀವನ ಶೈಲಿ ಹಾಗೂ ಆಹಾರ ಕ್ರಮದಲ್ಲಿನ ಬದಲಾವಣೆಗಳು ಮನುಷ್ಯನಲ್ಲಿ ಕೆಲವೊಂದು ರೋಗಗಳಿಗೆ ಕಾರಣವಾಗುತ್ತದೆ. ಅಂತೆಯೇ ಮನುಷ್ಯನಲ್ಲಿ ಕಾಣಿಸಿಕೊಳ್ಳುವ ಸಮಸ್ಯೆಗಳಲ್ಲಿ ಥೈರಾಯ್ಡ್ ಕೂಡ ಒಂದಾಗಿರುತ್ತದೆ. ಇದು ಅಧಿಕ ಮಾನಸಿಕ ಒತ್ತಡ, ವ್ಯಾಯಾಮ ಇಲ್ಲದಿರುವುದು, ಅಯೋಡಿನ್ ಅಂಶ ಇಲ್ಲದಿರುವುದು ಹಾಗೂ ಪೌಷ್ಟಿಕ ಆಹಾರ ಸೇವಿಸದೇ ಇರುವುದು ಕೂಡ ಥೈರಾಯ್ಡ್ ಸಮಸ್ಯೆ ಬರಲು ಕಾರಣವಾಗುತ್ತದೆ.

    ಥೈರಾಯ್ಡ್ ಅಂದ್ರೆ ಏನು, ದೇಹದ ಯಾವ ಭಾಗದಲ್ಲಿದೆ? ಥೈರಾಯ್ಡ್ ಕತ್ತಿನ ಮುಂಭಾಗದಲ್ಲಿರುವ ಚಿಟ್ಟೆಯಾಕಾರದ ಒಂದು ಗೃಂಥಿ. ಈ ಗೃಂಥಿಯು ನಿಮ್ಮ ಶರೀರದ ಅನೇಕ ಕಾರ್ಯ ಚಟುವಟಿಕೆಗಳಿಗೆ ಅತ್ಯವಶ್ಯಕವಾದ ಥೈರಾಯ್ಡ್ ಹಾರ್ಮೋನ್‍ಗಳನ್ನು ಉತ್ಪಾದಿಸುತ್ತದೆ.

    ಥೈರಾಯಿಡ್ ಗ್ರಂಥಿಯು ಕುತ್ತಿಗೆಯಲ್ಲಿ ಶ್ವಾಸನಾಳದ ಮುಂದೆ ಗಂಟಲಿನ ಕೆಳಗೆ ಇದೆ. ಈ ಗ್ರಂಥಿಯು ಥ್‍ಐರಾಕ್ಸಿನ್ ಎಂಬ ಹಾರ್ಮೋನನ್ನು ಸ್ರವಿಸುತ್ತದೆ. ಇದು ಅಯೋಡಿನ್ ಇಂದ ಕೂಡಿದ ಅಮೈನೋ ಆಮ್ಲವಾಗಿದೆ. ಥೈರಾಕ್ಸಿನ್ ದೇಹದಲ್ಲಿ ನಡೆಯುವ ಚಯಾಪಚನೆಯ ಕ್ರಿಯೆಯ ವೇಗವನ್ನು ಹೆಚ್ಚಿಸುತ್ತದೆ ಮತ್ತು ಆಹಾರ ಉತ್ಕರ್ಷೆಯ ಪ್ರಮಾಣವನ್ನು ನಿಯಂತ್ರಿಸುತ್ತದೆ.

    ಥೈರಾಯ್ಡ್ ತೂಂದರೆಯಿಂದ ಯಾವ ಯಾವ ಕಾಯಿಲೆಗಳು ಉಂಟಾಗಬಹುದು?
    * ಗಾಯ್ಟರ್ (ಗಳಗಂಡ ರೋಗ): ಥೈರಾಯ್ಡ್ ಗೃಂಥಿಯು ದೊಡ್ಡದಾಗಿ ಬೆಳೆದರೆ ಅದನ್ನು ಗಾಯ್ಟರ್ ಎಂದು ಕರೆಯುತ್ತಾರೆ.
    * ಹೈಪೋಥೈರಾಯ್ಡಿಸಮ್: ಥೈರಾಯ್ಡ್ ಗೃಂಥಿ ಅಗತ್ಯಕ್ಕಿಂತ ಕಡಿಮೆ ಹಾರ್ಮೋನ್ ಉತ್ಪಾದನೆ ಮಾಡಿದರೆ ಉಂಟಾಗಬಹುದಾದ ಸಮಸ್ಯೆ.
    * ಹೈಪರ್‍ಥೈರಾಯ್ಡಿಸಮ್: ಥೈರಾಯ್ಡ್ ಗೃಂಥಿ ಅಗತ್ಯಕ್ಕಿಂತ ಹೆಚ್ಚು ಹಾರ್ಮೋನ್ ಉತ್ಪಾದನೆ ಮಾಡಿದರೆ ಉಂಟಾಗಬಹುದಾದ ಸಮಸ್ಯೆ.
    * ಥೈರಾಯ್ಡೈಟಿಸ್: ಥೈರಾಯ್ಡ್ ಗೃಂಥಿಯಲ್ಲಿ ಉರಿ-ಊತ ಉಂಟಾಗಿ ಅದರಲ್ಲಿರುವ ಹಾರ್ಮೋನಿನ ಸಂಗ್ರಹವು ರಕ್ತಕ್ಕೆ ಸೋರಿಕೆಯಾಗುವ ಸಾಧ್ಯತೆಗಳಿವೆ. ಈ ರೀತಿ ಆದಾಗ ರಕ್ತದಲ್ಲಿನ ಹಾರ್ಮೋನ್ ಮಟ್ಟದ ಹೆಚ್ಚಳ ಉಂಟಾಗಬಹುದು.
    * ಥೈರಾಯ್ಡ್ ಗೃಂಥಿಯ ಗೆಡ್ಡೆಗಳು: ಕೆಲವೊಮ್ಮೆ ಸಾಮಾನ್ಯ ಗೆಡ್ಡೆಗಳಾಗಿರುತ್ತವೆ. ಅಪರೂಪವಾಗಿ ಕ್ಯಾನ್ಸರ್ ಕೂಡ ಆಗಿರಬಹುದು.

    ಲಕ್ಷಣಗಳೇನು?: ಪದೇ ಪದೇ ಆಯಾಸವಾಗುವುದು, ಕೂದಲು ಉದುರುವುದು, ಅನಿಯಮಿತ ಮುಟ್ಟು ಸಮಸ್ಯೆ, ಆಗಾಗ ನಡುಕ ಉಂಟಾಗುವುದು, ಬೆವರುವಿಕೆ ಜಾಸ್ತಿ ಇರುವುದು, ಅನಿರೀಕ್ಷಿತವಾಗಿ ತೂಕ ಏರಿಕೆ ಆಗುವುದು, ಸಣ್ಣಸಣ್ಣ ವಿಷಯಕ್ಕೂ ಕೋಪ ಬರುವುದು ಇವೆಲ್ಲಾ ಥೈರಾಯ್ಡ್ ಗ್ರಂಥಿಯ ಸಾಮಾನ್ಯ ಲಕ್ಷಣಗಳು.

    ಪರೀಕ್ಷೆ ಹಾಗೂ ಚಿಕಿತ್ಸೆ ಹೇಗೆ?: ಥೈರಾಯ್ಡ್ ಗ್ರಂಥಿ, ಕುತ್ತಿಗೆಯ ಭಾಗದ ಸಿಟಿ ಸ್ಕ್ಯಾನ್ ಮೂಲಕ ಥೈರಾಯ್ಡ್ ಸಮಸ್ಯೆಗಳನ್ನು ತಿಳಿದುಕೊಳ್ಳಬಹುದು. ಥೈರಾಯ್ಡ್‍ಗೆ ಸಂಬಂಧಿಸಿದ ಸಮಸ್ಯೆಗಳಿಗೆ ಹಲವು ರೀತಿಯ ಚಿಕಿತ್ಸೆ ಮತ್ತು ಔಷಧಗಳು ಲಭ್ಯವಿವೆ. ಆದಾಗ್ಯೂ ಇದನ್ನು ಕೆಲವು ಆಯುರ್ವೇದ ಪರಿಹಾರಗಳ ಮೂಲಕ ಚಿಕಿತ್ಸೆ ಮಾಡಬಹುದು.

    ಯಾವ ಆಹಾರ ಸೇವಿಸಬೇಕು?: ಬ್ರೆಜಿಲ್ ನಟ್ಸ್ ಸೆಲೆನಿಯಮ್ ಮತ್ತು ಸತುವುಗಳ ಅತ್ಯುತ್ತಮ ಮೂಲವಾಗಿದ್ದು ಥೈರಾಯ್ಡ್ ಗ್ರಂಥಿಯ ಉತ್ತಮ ಕಾರ್ಯನಿರ್ವಹಣೆಗೆ ಸಹಾಯ ಮಾಡುತ್ತದೆ. ಹೆಚ್ಚುವರಿಯಾಗಿ, ಚಿಯಾ ಮತ್ತು ಕುಂಬಳಕಾಯಿ ಬೀಜಗಳು ಸತುವಿನ ಸಮೃದ್ಧ ಮೂಲಗಳಾಗಿವೆ. ಇವುಗಳಿಂದ ರೋಗಿಯು ಅತಿಯಾಗಿ ಸೇವನೆ ಮಾಡುವುದನ್ನು ಕಡಿಮೆ ಮಾಡಬಹುದು. ಇನ್ನು ಪ್ರೋಟೀನ್‍ನ ಈ ಸಮೃದ್ಧ ಮೂಲಗಳು ನಿಮ್ಮ ಚಯಾಪಚಯವನ್ನು ಸುಧಾರಿಸುತ್ತದೆ. ಹೆಚ್ಚು ಊಟ ತಿನ್ನಬೇಕು ಎನ್ನಿಸಲ್ಲ. ಇದರಿಂದ ನಿಮ್ಮ ತೂಕವನ್ನು ನಿಯಂತ್ರಿಸಬಹುದು.

    ಥೈರಾಯ್ಡ್ ರೋಗಿಗಳು ಮೊಟ್ಟೆಯನ್ನು ಸೇವಿಸಬೇಕು. ಇದು ಅವರ ದೇಹವನ್ನು ಸತು, ಸೆಲೆನಿಯಮ್ ಮತ್ತು ಪ್ರೋಟೀನ್‍ಗಳಿಂದ ಸಮೃದ್ಧಗೊಳಿಸುತ್ತದೆ. ಅಲ್ಲದೆ ತೂಕ ನಷ್ಟಕ್ಕೆ ಮತ್ತು ಮೂಳೆಗಳು ಬಲವಾಗಲು ಸಹಕಾರಿಯಾಗುತ್ತದೆ. ಇಷ್ಟು ಮಾತ್ರವಲ್ಲದೆ ಟೊಮೆಟೋ ಮತ್ತು ಬೆಲ್ ಪೆಪರ್‍ಗಳಂತಹ ತರಕಾರಿಗಳನ್ನು ಸೇವಿಸುವುದರಿಂದ ಥೈರಾಯ್ಡ್ ರೋಗಿಗಳಿಗೆ ತೂಕ ನಷ್ಟಕ್ಕೆ ಸಹಾಯ ಮಾಡುತ್ತದೆ. ಏಕೆಂದರೆ ಅವುಗಳು ವಿಟಮಿನ್ ಸಿ, ಫೈಬರ್ ಮತ್ತು ಆಂಟಿ ಆಕ್ಸಿಡೆಂಟ್‍ಗಳಲ್ಲಿ ಸಮೃದ್ಧವಾಗಿವೆ.

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ಕೆಲಸ ಕೊಡಿಸುವ ನೆಪದಲ್ಲಿ ಮಹಿಳೆಯ ಮೇಲೆ ಅತ್ಯಾಚಾರ – ಬಸ್ ಕಂಡಕ್ಟರ್ ಅರೆಸ್ಟ್

    ನವದೆಹಲಿ: ಕೆಲಸ ಕೊಡಿಸುವ ನೆಪದಲ್ಲಿ ಮಹಿಳೆಯ ಮೇಲೆ ಅತ್ಯಾಚಾರ ಎಸಗಿದ ಆರೋಪದ ಮೇಲೆ ದೆಹಲಿ ಸಾರಿಗೆ ನಿಗಮದ ಕಂಡಕ್ಟರ್ ಅನ್ನು ದೆಹಲಿ ಪೊಲೀಸರು ಬಂಧಿಸಿರುವ ಘಟನೆ ಉತ್ತರ ದೆಹಲಿಯ (New Delhi) ತಿಮಾರ್‌ಪುರ ಪ್ರದೇಶದಲ್ಲಿ ನಡೆದಿದೆ‌. ಮಹಿಳೆಯ ದೂರು ಆಧರಿಸಿ ಪ್ರಕರಣ ದಾಖಲಿಸಿದ್ದ ಪೊಲೀಸರು ಆರೋಪಿಯನ್ನು ವಶಕ್ಕೆ ಪಡೆದಿದ್ದಾರೆ.

    2010 ರಿಂದ 2017 ರವರೆಗೆ ಡಿಟಿಸಿಯಲ್ಲಿ ಟೈಪಿಸ್ಟ್ ಆಗಿ ಕೆಲಸ ಮಾಡಿದ್ದ ಸಂತ್ರಸ್ತ ಮಹಿಳೆ ಮಗುವಾದ ನಂತರ ಕೆಲಸ ಮಾಡುವುದನ್ನು ನಿಲ್ಲಿಸಿದ್ದಳು. ಎರಡು ವರ್ಷಗಳ ಹಿಂದೆ ಆರೋಪಿಯನ್ನು ಭೇಟಿಯಾಗಿ ಮತ್ತೆ ಕೆಲಸ ಕೊಡಿಸಲು ಮನವಿ ಮಾಡಿದ್ದಳು. ಮನೆಗೆ ಬಂದ ಆಕೆಗೆ ಜ್ಯೂಸ್‌ನಲ್ಲಿ ಮತ್ತು ಬರುವ ಮಾತ್ರೆ ಹಾಕಿ, ಪ್ರಜ್ಞೆ ತಪ್ಪಿಸಿ ಅತ್ಯಾಚಾರ ಮಾಡಲಾಗಿದೆ ಎನ್ನಲಾಗಿದೆ. ಇದನ್ನೂ ಓದಿ: ಹಿಮಾಚಲದಲ್ಲಿ ಭೂಕುಸಿತಕ್ಕೆ ಭಾರೀ ಕಟ್ಟಡಗಳು ನೆಲಸಮ

    ಅತ್ಯಚಾರದ ಬಳಿಕ ಆರೋಪಿ ಸ್ನೇಹಿತರ ಜೊತೆಗೆ ಸೇರಿಕೊಂಡು ಆಕೆಯ ಖಾಸಗಿ ವೀಡಿಯೋ ಮತ್ತು ಪೋಟೋಗಳನ್ನು ತೆಗೆದು ಬ್ಲ್ಯಾಕ್‌ಮೇಲ್ ಮಾಡಿದ್ದಾರೆ. ಮತ್ತೆ ಸಂಪರ್ಕ ಹೊಂದಲು ಒತ್ತಾಯಿಸಿದ್ದಾರೆ. ಘಟನೆಯ ಬಗ್ಗೆ ಮಹಿಳೆ ಆರೋಪಿಯ ಸ್ನೇಹಿತನೊಬ್ಬರಿಗೆ ತಿಳಿಸಿದಾಗ, ಅವನು ಫೋಟೋಗಳನ್ನು ಡಿಲಿಟ್ ಮಾಡುವ ನೆಪದಲ್ಲಿ ಆಕೆಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ. ನಿರಂತರ ಶೋಷಣೆ ಹಿನ್ನೆಲೆ ಮಹಿಳೆ ದೂರು ನೀಡಿದ್ದಾಳೆ‌.

    ಈ ಪ್ರಕರಣದಲ್ಲಿ ನಾಲ್ಕೈದು ಮಂದಿ ಭಾಗಿಯಾಗಿದ್ದಾರೆ ಎಂದು ಪ್ರಾಥಮಿಕ ತನಿಖೆಯಿಂದ ತಿಳಿದು ಬಂದಿದೆ. ಪ್ರಮುಖ ಆರೋಪಿ ಬಂಧಿತನಾಗಿದ್ದು, ಇತರ ಆರೋಪಿಗಳ ಪತ್ತೆಗೆ ಪ್ರಯತ್ನ ನಡೆಯುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ. ದೆಹಲಿ ಮಹಿಳಾ ಆಯೋಗದ (ಡಿಸಿಡಬ್ಲ್ಯು) ಮುಖ್ಯಸ್ಥೆ ಸ್ವಾತಿ ಮಲಿವಾಲ್ ದೆಹಲಿ ಪೊಲೀಸರಿಗೆ ನೋಟಿಸ್ ಜಾರಿಗೊಳಿಸಿದ್ದು, ಪ್ರಕರಣದಲ್ಲಿ ಕಠಿಣ ಕ್ರಮಕ್ಕೆ ಒತ್ತಾಯಿಸಿದ್ದಾರೆ. ಇದನ್ನೂ ಓದಿ: ಬೆಂಗಳೂರಿಗೂ ಕಾಲಿಟ್ಟಿತು ಗಾಂಜಾ ಚಾಕ್ಲೆಟ್ – 50 ರೂ.ಗೆ 3 ಚಾಕ್ಲೆಟ್

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ಪತಿಯನ್ನ ಸ್ನಾನ ಮಾಡುವಂತೆ ಬಾತ್‌ರೂಮ್‌ಗೆ ಕಳುಹಿಸಿ, ಸ್ನೇಹಿತನೊಂದಿಗೆ ಪತ್ನಿ ಎಸ್ಕೇಪ್

    ಪತಿಯನ್ನ ಸ್ನಾನ ಮಾಡುವಂತೆ ಬಾತ್‌ರೂಮ್‌ಗೆ ಕಳುಹಿಸಿ, ಸ್ನೇಹಿತನೊಂದಿಗೆ ಪತ್ನಿ ಎಸ್ಕೇಪ್

    ಬೆಂಗಳೂರು: ಎರಡು ತಿಂಗಳ ಹಿಂದೆಯಷ್ಟೇ ಮದುವೆಯಾಗಿದ್ದ (Marriage) ಪತ್ನಿ ಗಂಡನಿಗೆ ಕೈಕೊಟ್ಟು ಎಸ್ಕೇಪ್ ಆಗಿದ್ದಾಳೆ ಅಂತಾ ಪತಿ ಪೊಲೀಸ್ ಠಾಣೆಗೆ (RR Nagar Police Station) ದೂರು ನೀಡಿದ್ಧಾನೆ.

    ಬೆಂಗಳೂರಿನ (Bengaluru) ರಾಜರಾಜೇಶ್ವರಿನಗರದ ನಿವಾಸಿ ರಮೇಶ್ ಕಳೆದ ಎರಡು ತಿಂಗಳ ಹಿಂದೆ ಮದುವೆಯಾಗಿದ್ದರು. ಸಂಸಾರದಲ್ಲಿ ಎಲ್ಲವೂ ಚೆನ್ನಾಗಿಯೇ ಇತ್ತು. ಇದನ್ನೂ ಓದಿ: ಘರ್‌ ವಾಪ್ಸಿ ಅಂತ ಮಾಡುವುದಕ್ಕೆ ಹೋದರೆ ಅರ್ಧ ಬಿಜೆಪಿ, ಅರ್ಧ ಜೆಡಿಎಸ್‌ ಖಾಲಿಯಾಗುತ್ತೆ: ಪ್ರಿಯಾಂಕ್‌ ಖರ್ಗೆ

    ಪತಿ ರಮೇಶ್ ಜೊತೆಗೆ ಚೆನ್ನಾಗಿಯೇ ಇದ್ದ ಪತ್ನಿ, ಇದೇ ಆಗಸ್ಟ್ 12ರಂದು ಬೆಳಗ್ಗೆ ಪತಿ ರಮೇಶ್‌ನನ್ನ ಸ್ನಾನ ಮಾಡುವಂತೆ ಬಾತ್ ರೂಮ್‌ಗೆ ಕಳುಹಿಸಿದ್ದಾಳೆ. ಪತಿ ಒಳಗೆ ಹೋದ ತಕ್ಷಣ ಪತ್ನಿ ಹೊರಗಿನಿಂದ ಬಾತ್‌ರೂಮ್ ಬಾಗಿಲು ಹಾಕಿಕೊಂಡು ಮನೆಯ ಬಾಗಿಲನ್ನೂ ಲಾಕ್ ಮಾಡ್ಕೊಂಡು ಎಸ್ಕೇಪ್ ಆಗಿದ್ದಾಳೆ.

    ನಂತರ ಪತಿ ರಮೇಶ್ ಆರ್.ಆರ್ ನಗರ ಪೊಲೀಸ್ ಠಾಣೆಗೆ ದೂರು ನೀಡಿದ್ದು, ಪತ್ನಿ ತನ್ನ ಸ್ನೇಹಿತ ಕಾರ್ತಿಕ್ ಜೊತೆಗೆ ಹೋಗಿದ್ದಾಳೆ ಅಂತಾ ದೂರಿನಲ್ಲಿ ತಿಳಿಸಿದ್ದಾರೆ. ಸದ್ಯ ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ನಾಪತ್ತೆಯಾಗಿರುವ ರಮೇಶ್ ಪತ್ನಿಗಾಗಿ ಹುಡುಕಾಟ ನಡೆಸಿದ್ದಾರೆ. ಇದನ್ನೂ ಓದಿ: 7 ಶಿಶುಗಳನ್ನ ಹತ್ಯೆ ಮಾಡಿದ್ದ ಬ್ರಿಟಿಷ್‌ ನರ್ಸ್‌ – ಭಾರತೀಯ ಮೂಲದ ವೈದ್ಯನಿಂದ ಸಿಕ್ಕಿಬಿದ್ದಳು ಹಂತಕಿ

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ಮತ್ತೊಂದು ಬಸ್ ಡೋರ್ ಮುರಿದ ನಾರಿಶಕ್ತಿ

    ಮತ್ತೊಂದು ಬಸ್ ಡೋರ್ ಮುರಿದ ನಾರಿಶಕ್ತಿ

    ಚಾಮರಾಜನಗರ: ಶಕ್ತಿ ಯೋಜನೆಯ (Shakti Scheme) ಪರಿಣಾಮ ಬಸ್ ಹತ್ತಲು ನೂಕುನುಗ್ಗಲು ಮಾಡಿ ನಾರಿಮಣಿಗಳು ಮತ್ತೊಂದು ಬಸ್ಸಿನ (Bus) ಬಾಗಿಲನ್ನು (Door) ಮುರಿದ ಘಟನೆ ಚಾಮರಾಜನಗರದಲ್ಲಿ (Chamarajanagara) ನಡೆದಿದೆ.

    ಬಸ್ ಯಳಂದೂರಿನಿಂದ ಬಿಳಿಗಿರಿರಂಗನ ಬೆಟ್ಟಕ್ಕೆ ತೆರಳುತ್ತಿದ್ದು, ಬಿಳಿಗಿರಿರಂಗನ ಬೆಟ್ಟಕ್ಕೆ ಹೋಗುವ ಸಾರಿಗೆ ಬಸ್ ಹತ್ತಲು ಮಹಿಳೆಯರು (Women) ಮುಗಿಬಿದ್ದಿದ್ದಾರೆ. ಚಾಮರಾಜನಗರ ಜಿಲ್ಲೆಯ ಯಳಂದೂರು ನಿಲ್ದಾಣದಲ್ಲಿ ಬಸ್ ಹತ್ತಲು ಮಹಿಳೆಯರು ನೂಕು ನುಗ್ಗಲು ಮಾಡಿದ್ದು, ಈ ಹಿನ್ನೆಲೆ ಬಸ್‌ನ ಬಾಗಿಲು ಮುರಿದು ಬಿದ್ದಿದೆ. ಭಾನುವಾರ ಈ ಘಟನೆ ನಡೆದಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಫೋಟೋಗಳು ಸಖತ್ ವೈರಲ್ ಆಗುತ್ತಿವೆ. ಇದನ್ನೂ ಓದಿ: ಬುಧವಾರದಿಂದ ರಾಜ್ಯಾದ್ಯಂತ ಡಯಾಲಿಸಿಸ್ ಸೇವೆ ಬಂದ್

    ಕೆಲ ದಿನಗಳ ಹಿಂದೆ ಇದೇ ರೀತಿ ಕೊಳ್ಳೆಗಾಲದಲ್ಲಿ ಮಹದೇಶ್ವರ ಬೆಟ್ಟಕ್ಕೆ ಹೋಗುವ ಸಾರಿಗೆ ಬಸ್ ಬಾಗಿಲು ಮುರಿದು ಹೋಗಿತ್ತು. ಇಷ್ಟು ಮಾತ್ರವಲ್ಲದೇ ಮಹಿಳೆಯರ ತಳ್ಳಾಟ ನೂಕಾಟದಲ್ಲಿ ಬಸ್‌ಗೆ ಅಳವಡಿಸಿದ್ದ ಕಬ್ಬಿಣದ ರಾಡ್ ಕೂಡಾ ಕಿತ್ತು ಹಾಕಿದ್ದರು. ಇದನ್ನೂ ಓದಿ: ಉಡುಪಿ ಪ್ರತಿಭಟನೆಯಲ್ಲಿ ಭಾಗಿಯಾದ ವಿದ್ಯಾರ್ಥಿನಿಗೆ ಅಶ್ಲೀಲ ಮೆಸೇಜ್‌, ಬೆದರಿಕೆ

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ಪತಿಯನ್ನ ಮಂಚಕ್ಕೆ ಕಟ್ಟಿಹಾಕಿ ಕೊಂದು, ಐದು ತುಂಡುಗಳಾಗಿ ಕತ್ತರಿಸಿ ಎಸೆದ ಪತ್ನಿ!

    ಪತಿಯನ್ನ ಮಂಚಕ್ಕೆ ಕಟ್ಟಿಹಾಕಿ ಕೊಂದು, ಐದು ತುಂಡುಗಳಾಗಿ ಕತ್ತರಿಸಿ ಎಸೆದ ಪತ್ನಿ!

    ಲಕ್ನೋ: ಉತ್ತರ ಪ್ರದೇಶದ (Uttar Pradesh) ಮಹಿಳೆಯೊಬ್ಬಳು ತನ್ನ ಪತಿಯನ್ನ ಮಂಚಕ್ಕೆ ಕಟ್ಟಿಹಾಕಿ ಕೊಂದು, 5 ತುಂಡುಗಳಾಗಿ ಕತ್ತರಿಸಿ ಬಿಸಾಡಿರುವ ಘಟನೆ ಉತ್ತರ ಪ್ರದೇಶದ ಪಿಲಿಭಿತ್‌ನಲ್ಲಿ ನಡೆದಿದೆ. ಬಳಿಕ ತನಿಖೆಯಲ್ಲಿ (Investigation) ತಾನೇ ಕೊಂದಿರುವುದಾಗಿ ತಪ್ಪೊಪ್ಪಿಕೊಂಡ ನಂತರ ಪೊಲೀಸರು ಬಂಧಿಸಿದ್ದಾರೆ.

    ಮೃತರನ್ನ ಗಜ್ರೌಲಾ ಪ್ರದೇಶದ ಶಿವನಗರ ನಿವಾಸಿ ರಾಮ್ ಪಾಲ್ (55) ಎಂದು ಗುರುತಿಸಲಾಗಿದೆ. ದುಲಾರೊ ದೇವಿ ಆರೋಪಿಯಾಗಿದ್ದಾಳೆ. ಇದನ್ನೂ ಓದಿ: ವಂದೇ ಭಾರತ್‌ ಎಕ್ಸ್‌ಪ್ರೆಸ್‌ನಲ್ಲಿ ನೀಡಿದ ಚಪಾತಿ ಊಟದಲ್ಲಿ ಜಿರಳೆ ಪತ್ತೆ – ಪ್ರಯಾಣಿಕ ಶಾಕ್‌!

    ರಾಮ್‌ಪಾಲ್‌ ಪತ್ನಿ ದುಲಾರೊ ದೇವಿ ಕೆಲ ದಿನಗಳಿಂದ ಪತಿಯ ಸ್ನೇಹಿತನೊಂದಿಗೆ ವಾಸವಿದ್ದಳು. ಕಳೆದ ಒಂದು ತಿಂಗಳ ಹಿಂದೆಯಷ್ಟೇ ಗ್ರಾಮಕ್ಕೆ ಹಿಂದಿರುಗಿದಾಗ ಪತಿ ಕಾಣೆಯಾಗಿರುವ ಬಗ್ಗೆ ಮಗನಿಗೆ ತಿಳಿಸಿದ್ದಾಳೆ. ನಂತರ ಮಗ ಪೊಲೀಸ್‌ ಠಾಣೆಗೆ (UP Police) ದೂರು ನೀಡಿದ್ದಾನೆ. ಕೇಸ್‌ ದಾಖಲಿಸಿಕೊಂಡ ಪೊಲೀಸರು ತನಿಖೆ ನಡೆಸುವ ವೇಳೆ ಪತ್ನಿ ಮೇಲೆ ಅನುಮಾನಗೊಂಡು ವಿಚಾರಣೆಗೆ ಒಳಪಡಿಸಿದಾಗ ಸತ್ಯ ಬಾಯ್ಬಿಟ್ಟಿದ್ದಾಳೆ. ಇದನ್ನೂ ಓದಿ: ಸಾಲ ಮಾಡಿ ಲಾಟರಿ ಟಿಕೆಟ್ ಖರೀದಿಸಿದ ಪೌರಕಾರ್ಮಿಕ ಮಹಿಳೆಯರಿಗೆ 10 ಕೋಟಿ ರೂ. ಬಂಪರ್

    ಪತಿ ರಾತ್ರಿ ಮಲಗಿದ್ದಾಗ ಮಂಚಕ್ಕೆ ಕಟ್ಟಿಹಾಕಿ ಕೊಂದು, ಕೊಡಲಿಯಿಂದ ದೇಹದ ಭಾಗಗಳನ್ನ ಕತ್ತರಿಸಿ ಹತ್ತಿರದ ಕಾಲುವೆಯಲ್ಲಿ (Canal) ಬಿಸಾಡಿರುವುದಾಗಿ ಒಪ್ಪಿಕೊಂಡಿದ್ದಾಳೆ. ನಂತರ ಪತ್ನಿಯನ್ನ ಬಂಧಿಸಿದ ಪೊಲೀಸರು ರಾಮ್‌ಪಾಲ್‌ ದೇಹದ ಭಾಗಗಳನ್ನ ಕಾಲುವೆಯಿಂದ ಹೊರತೆಗೆಯಲು ಕಾರ್ಯಚರಣೆ ನಡೆಸುತ್ತಿದ್ದಾರೆ. ಮೃತರ ರಕ್ತಸಿಕ್ತ ಬಟ್ಟೆ ಹಾಗೂ ಹಾಸಿಗೆ ಪತ್ತೆಯಾಗಿದ್ದು, ತನಿಖೆ ಮುಂದುವರಿದಿದೆ.

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ಸಾಲ ಮಾಡಿ ಲಾಟರಿ ಟಿಕೆಟ್ ಖರೀದಿಸಿದ ಪೌರಕಾರ್ಮಿಕ ಮಹಿಳೆಯರಿಗೆ 10 ಕೋಟಿ ರೂ. ಬಂಪರ್

    ಸಾಲ ಮಾಡಿ ಲಾಟರಿ ಟಿಕೆಟ್ ಖರೀದಿಸಿದ ಪೌರಕಾರ್ಮಿಕ ಮಹಿಳೆಯರಿಗೆ 10 ಕೋಟಿ ರೂ. ಬಂಪರ್

    ತಿರುವನಂತಪುರಂ: 250 ರೂ. ಸಾಲ ಪಡೆದು ಲಾಟರಿ ಟಿಕೆಟ್ ಖರೀದಿಸಿದ ಕೇರಳದ (Kerala) 11 ಪೌರಕಾರ್ಮಿಕ ಮಹಿಳೆಯರ ಅದೃಷ್ಟ ಖುಲಾಯಿಸಿದೆ. ಕೇರಳ ಲಾಟರಿ ಇಲಾಖೆ  (Kerala Lottery) ನಡೆಸುವ ಡ್ರಾನಲ್ಲಿ 10 ಕೋಟಿ ರೂ. ಬಹುಮಾನ ಈ ಮಹಿಳೆಯರ ಪಾಲಾಗಿದೆ.

    ಈ ಬಗ್ಗೆ ಪ್ರತಿಕ್ರಿಯಿಸಿರುವ ಮಹಿಳೆಯರು (Women), ನಾವೆಲ್ಲರೂ ಮೊದಲು ಹಣವನ್ನು ಒಟ್ಟುಗೂಡಿಸಿ ಲಾಟರಿ ಟಿಕೆಟ್‍ಗಳನ್ನು ಖರೀದಿಸಿದ್ದೆವು. ಇದೇ ಮೊದಲ ಬಾರಿಗೆ ನಾವು ಗೆದ್ದಿದ್ದೇವೆ. ಬಹುಮಾನ ಗೆಲ್ಲುತ್ತೇವೆ ಎಂದು ಕನಸಲ್ಲೂ ಊಹಿಸಿರಲಿಲ್ಲ ಎಂದಿದ್ದಾರೆ. ಇದನ್ನೂ ಓದಿ: ಮನೆ ಬಾಗಿಲು ಮುರಿದು ಬಂದೂಕು ಕದ್ದ ಕಳ್ಳರು

    ನಮ್ಮ ಟಿಕೆಟ್‍ಗೆ ಬಹುಮಾನ ಬಂದಿರುವುದು ತಿಳಿದಾಗ ಖುಷಿಯಾಯಿತು. ನಮಗೆ ವೇತನ ಹೊರತುಪಡಿಸಿ ಯಾವುದೇ ಆದಾಯ ಮೂಲಗಳಿಲ್ಲ. ನಾವೆಲ್ಲರೂ ಜೀವನದಲ್ಲಿ ಕಷ್ಟಗಳನ್ನು ಎದುರಿಸುತ್ತಿದ್ದೇವೆ. ನಮ್ಮ ಸಮಸ್ಯೆಗಳನ್ನು ಪರಿಹರಿಸಲು ಈ ಹಣ ಸಹಕಾರವಾಗಲಿದೆ ಎಂದು ಮತ್ತೋರ್ವ ಮಹಿಳೆ ತಿಳಿಸಿದ್ದಾರೆ.

    ನಗರಸಭೆಯ ಹರಿತ ಕರ್ಮ ಸೇನೆ (Haritha Karma Sena) ಒಕ್ಕೂಟದ ಅಧ್ಯಕ್ಷೆ ಶೀಜಾ ಮಾತನಾಡಿ, ಈ ಬಾರಿ ಅತ್ಯಂತ ಅರ್ಹರಿಗೆ ಅದೃಷ್ಟ ಒಲಿದು ಬಂದಿದೆ. ಎಲ್ಲಾ ವಿಜೇತರು ಶ್ರಮಜೀವಿಗಳಾಗಿದ್ದಾರೆ. ಅವರೆಲ್ಲ ಹೆಚ್ಚಾಗಿ ಸಾಲದಲ್ಲಿದ್ದಾರೆ. ಅಲ್ಲದೇ ಮದುವೆಗೆ ಬಂದಿರುವ ಹೆಣ್ಣುಮಕ್ಕಳಿದ್ದಾರೆ. ಕೆಲವರು ಅವರ ಕುಟುಂಬಸ್ಥರ ಚಿಕಿತ್ಸಾ ವೆಚ್ಚಕ್ಕೆ ಹಣ ಹೊಂದಿಸಬೇಕಿದೆ. ಅವರ ಮನೆಗಳು ಭದ್ರವಾಗಿಲ್ಲ. ಅಂಥವರಿಗೆ ಈ ಲಾಟರಿ ಒಲಿದಿರುವುದು ಖುಷಿ ನೀಡಿದೆ ಎಂದಿದ್ದಾರೆ.

    ಲಾಟರಿ ವಿಜೇತ ಮಹಿಳೆಯರನ್ನು ಭೇಟಿ ಮಾಡಿ ಹಲವಾರು ಜನ ಅಭಿನಂದಿಸಿದ್ದಾರೆ. ಶ್ರಮಜೀವಿಗಳಿಗೆ ಒಲಿದ ಅದೃಷ್ಟಕ್ಕೆ ಖುಷಿಪಟ್ಟಿದ್ದಾರೆ. ಇದನ್ನೂ ಓದಿ: ಬಸವಸಾಗರ ಜಲಾಶಯ ಭರ್ತಿ – ಕೃಷ್ಣಾ ನದಿಗೆ 1.80 ಲಕ್ಷ ಕ್ಯೂಸೆಕ್ ನೀರು ರಿಲೀಸ್

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • 2 ತಿಂಗಳ ಹಿಂದೆಯಷ್ಟೇ ಮದ್ವೆಯಾಗಿದ್ದ ಗೃಹಿಣಿ ನೇಣು ಬಿಗಿದುಕೊಂಡು ಆತ್ಮಹತ್ಯೆ

    2 ತಿಂಗಳ ಹಿಂದೆಯಷ್ಟೇ ಮದ್ವೆಯಾಗಿದ್ದ ಗೃಹಿಣಿ ನೇಣು ಬಿಗಿದುಕೊಂಡು ಆತ್ಮಹತ್ಯೆ

    ಹಾಸನ: ಎರಡು ತಿಂಗಳ ಹಿಂದೆಯಷ್ಟೇ ಮದುವೆಯಾಗಿದ್ದ (Marriage) ಗೃಹಿಣಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಹಾಸನ (Hassan) ಜಿಲ್ಲೆಯ ಸಕಲೇಶಪುರ ತಾಲೂಕಿನ ಬಂದಿಹಳ್ಳಿ ಗ್ರಾಮದಲ್ಲಿ ನಡೆದಿದೆ.

    ನಂದಿತಾ (23) ಮೃತಪಟ್ಟ ಗೃಹಿಣಿ. ತಾಲ್ಲೂಕಿನ ಬೆಳಗೋಡು ಹೋಬಳಿಯ ಕೂಡನಹಳ್ಳಿ ಗ್ರಾಮದ ಸೋಮಶೇಖರ್ ಜೊತೆ ಎರಡು ತಿಂಗಳ ಹಿಂದೆಯಷ್ಟೇ ನಂದಿತಾಳನ್ನ ಅದ್ಧೂರಿಯಾಗಿ ಮದುವೆ ಮಾಡಿಕೊಡಲಾಗಿತ್ತು. ಆದ್ರೆ ನಂದಿತಾ ಶನಿವಾರ ತನ್ನ ತವರು ಮನೆಯಲ್ಲೇ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾಳೆ. ಇದನ್ನೂ ಓದಿ: ನಿಮ್ಮ ಧ್ವನಿ, ನೋಟ ನನಗಿಷ್ಟ: ಟೈಗರ್ ಶ್ರಾಫ್ ಎಂಬ ಮನ್ಮಥನಿಗೆ ಹೂಬಾಣ ಬಿಟ್ಟ ದಿಶಾ

    ಸುದ್ದಿ ತಿಳಿದ ಕೂಡಲೇ ಗ್ರಾಮಾಂತರ ಠಾಣೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಪ್ರಕರಣ ದಾಖಲಿಸಿ ತನಿಖೆ ಕೈಗೊಂಡಿದ್ದಾರೆ. ಮೃತ ದೇಹವನ್ನ ಪಟ್ಟಣದ ಸರ್ಕಾರಿ ಕ್ರಾಫರ್ಡ್ ಆಸ್ಪತ್ರೆಯಲ್ಲಿ ಮರಣೋತ್ತರ ಪರೀಕ್ಷೆ ನಡೆಸಿ ವಾರಸುದಾರರಿಗೆ ಹಸ್ತಾಂತರಿಸಲಾಗಿದೆ. ಆತ್ಮಹತ್ಯೆಗೆ ಕಾರಣ ತಿಳಿದು ಬಂದಿಲ್ಲ. ಇದನ್ನೂ ಓದಿ: ಪಿಎಸ್‍ಐ ಹಗರಣ ನ್ಯಾಯಾಂಗ ತನಿಖೆ ಕಾಂಗ್ರೆಸ್‍ನ ದ್ವೇಷದ ರಾಜಕಾರಣ: ಬೊಮ್ಮಾಯಿ

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ಪ.ಬಂಗಾಳದಲ್ಲಿಯೂ ನಡೆದಿತ್ತು ಮಹಿಳೆಯರಿಬ್ಬರ ಅರೆಬೆತ್ತಲೆ ಮೆರವಣಿಗೆ- ವೀಡಿಯೋ ವೈರಲ್

    ಪ.ಬಂಗಾಳದಲ್ಲಿಯೂ ನಡೆದಿತ್ತು ಮಹಿಳೆಯರಿಬ್ಬರ ಅರೆಬೆತ್ತಲೆ ಮೆರವಣಿಗೆ- ವೀಡಿಯೋ ವೈರಲ್

    ಕೋಲ್ಕತ್ತಾ: ಮಣಿಪುರದ (Manipura) ಬಳಿಕ ಇದೀಗ ಪಶ್ಚಿಮ ಬಂಗಾಳದಲ್ಲಿಯೂ (West Bengal) ಇಬ್ಬರು ಮಹಿಳೆಯರನ್ನು ಅರೆಬೆತ್ತಲೆಗೊಳಿಸಿ ಥಳಿಸಿರುವ ವೀಡಿಯೋವೊಂದು ಸಾಮಾಜಿಕ ಜಾಲತಾಣಗಳಲ್ಲಿ (Social Media) ಸಖತ್ ವೈರಲ್ ಆಗುತ್ತಿದೆ.

    ಪ್ರಾಥಮಿಕ ವರದಿಗಳ ಪ್ರಕಾರ, ಈ ಘಟನೆ ಮೂರ್ನಾಲ್ಕು ದಿನಗಳ ಹಿಂದೆ ನಡೆದಿದೆ. ಮಾಲ್ಡಾದ ಪಕುವಾಹತ್‍ನಲ್ಲಿ ಸ್ಥಳೀಯರು ಕಳ್ಳತನದ ಶಂಕೆಯ ಮೇಲೆ ಇಬ್ಬರು ಮಹಿಳೆಯರನ್ನು ಹಿಡಿದು ಥಳಿಸಿದ್ದಾರೆ. ಆರೋಪಿತ ಮಹಿಳೆಯರಿಬ್ಬರ ಮೇಲೆ ಹಲವಾರು ಮಹಿಳೆಯರು ಹಲ್ಲೆ ನಡೆಸುತ್ತಿದ್ದಾರೆ. ಇಬ್ಬರು ಮಹಿಳೆಯರನ್ನು ಅರೆಬೆತ್ತಲೆಗೊಳಿಸಿ ಕೂದಲು ಹಿಡಿದು ಎಳೆದಾಡಿ, ಚಪ್ಪಲಿಯಲ್ಲಿ ಹೊಡೆಯುತ್ತಿರುವುದನ್ನು ವೀಡಿಯೋದಲ್ಲಿ ಕಾಣಬಹುದಾಗಿದೆ. ಇದನ್ನೂ ಓದಿ: ಮಣಿಪುರದಲ್ಲಿ ಮಹಿಳೆಯರ ಬೆತ್ತಲೆ ಮೆರವಣಿಗೆ ಕೇಸ್‌ – ಪ್ರಮುಖ ಆರೋಪಿ ಮನೆಗೆ ಬೆಂಕಿ ಹಾಕಿ ಆಕ್ರೋಶ

    ಈ ವೀಡಿಯೋ ವೈರಲ್ ಆದ ಬಳಿಕವೇ ತಮ್ಮ ಗಮನಕ್ಕೆ ಬಂದಿರುವುದಾಗಿ ಪೊಲೀಸರು ಹೇಳಿದ್ದಾರೆ. ಈ ಬಗ್ಗೆ ಪ್ರಾಥಮಿಕ ತನಿಖೆ ನಡೆಸಿದಾಗ ಇಬ್ಬರು ಮಹಿಳೆಯರು ಕಳ್ಳತನ ಮಾಡುತ್ತಿದ್ದಾಗ ರೆಡ್ ಹ್ಯಾಂಡ್ ಆಗಿ ಸಿಕ್ಕಿಬಿದ್ದಿದ್ದಾರೆ. ಈ ಹಿನ್ನೆಲೆಯಲ್ಲಿ ಸ್ಥಳೀಯ ಅಂಗಡಿಯ ಮಹಿಳೆಯರೆಲ್ಲಾ ಸೇರಿ ಥಳಿಸಿದ್ದಾರೆ. ಘಟನೆಯ ನಂತರ ಹಲ್ಲೆಗೈದ ಮಹಿಳೆಯರೂ ಪರಾರಿಯಾಗಿದ್ದು, ಥಳಿತಕ್ಕೆ ಒಳಗಾದವರು ಭಯದಿಂದ ದೂರು ದಾಖಲಿಸಲು ಹಿಂದೇಟು ಹಾಕಿದ್ದಾರೆ. ಇದನ್ನೂ ಓದಿ: ಪಣಂಬೂರು ಬೀಚ್‍ಗೆ ತೆರಳಿದ್ದ ವಿದ್ಯಾರ್ಥಿಗಳ ಮೇಲೆ ನೈತಿಕ ಪೊಲೀಸ್‍ಗಿರಿ

    ಘಟನೆಯ ಬಗ್ಗೆ ಪಶ್ಚಿಮ ಬಂಗಾಳ ಪೊಲೀಸರು ಪ್ರತಿಕ್ರಿಯಿಸಿ, ಈ ಘಟನೆಯು 3 ರಿಂದ 4 ದಿನಗಳ ಹಿಂದೆ ಮಾಲ್ಡಾದ ಪಕುಹತ್ ಪ್ರದೇಶದಲ್ಲಿ ನಡೆದಿದೆ. ಕಳ್ಳತನದ ಶಂಕೆಯಲ್ಲಿ ಇಬ್ಬರು ಮಹಿಳೆಯರು ಸ್ಥಳೀಯ ವ್ಯಾಪಾರಿಗಳಿಗೆ ಸಿಕ್ಕಿಬಿದ್ದಿದ್ದಾರೆ. ಹೀಗಾಗಿ ಇಬ್ಬರನ್ನು ಹಿಡಿದು ಥಳಿಸಿದ್ದಾರೆ. ಬಳಿಕ ಥಳಿತಕ್ಕೊಳಗಾದ ಮಹಿಳೆಯರು ಸ್ಥಳದಿಂದ ಪರಾರಿಯಾಗಿದ್ದಾರೆ. ಈ ಸಂಬಂಧ ಇದುವರೆಗೂ ಯಾವುದೇ ದೂರು ದಾಖಲಾಗಿಲ್ಲ. ಇದೀಗ ಈ ಬಗ್ಗೆ ತನಿಖೆ ಆರಂಭಿಸಿದ್ದು, ಸೂಕ್ತ ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದ್ದಾರೆ.

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ಗೃಹಲಕ್ಷ್ಮಿ ನೋಂದಣಿಗೂ ಆರಂಭದಲ್ಲೇ ವಿಘ್ನ- ಅರ್ಜಿ ಸಲ್ಲಿಕೆಗೆ ಸರ್ವರ್ ಪ್ರಾಬ್ಲಂ

    ಗೃಹಲಕ್ಷ್ಮಿ ನೋಂದಣಿಗೂ ಆರಂಭದಲ್ಲೇ ವಿಘ್ನ- ಅರ್ಜಿ ಸಲ್ಲಿಕೆಗೆ ಸರ್ವರ್ ಪ್ರಾಬ್ಲಂ

    ಬೆಂಗಳೂರು: ಕಾಂಗ್ರೆಸ್ ಸರ್ಕಾರದ (Congress Govt) ಬಹುನಿರೀಕ್ಷಿತ ಗೃಹಲಕ್ಷ್ಮಿ ಯೋಜನೆ ನೋಂದಣಿಗೆ ಆರಂಭದಲ್ಲೇ ಸರ್ವರ್ ಸಮಸ್ಯೆ (Server Problem) ವಿಘ್ನ ತಂದೊಡ್ಡಿದೆ. ಬೆಂಗಳೂರು ಸೇರಿದಂತೆ ರಾಜ್ಯದ ಹಲವೆಡೆ ತಾಂತ್ರಿಕ ಸಮಸ್ಯೆ ಕಾಡಿದೆ. ಗೃಹಲಕ್ಷ್ಮಿಗೆ ನೋಂದಣಿ ಮಾಡಿಕೊಳ್ಳಲು ಮುಂದಾದ ಮಹಿಳೆಯರು ಸರ್ವರ್ ಸಮಸ್ಯೆಯಿಂದ ಪರದಾಡಿದ್ದಾರೆ.

    ಹೌದು, ಮೊನ್ನೆ ಗೃಹಲಕ್ಷ್ಮಿ ಯೋಜನೆಗೆ (Gruhalakshmi Scheme) ಸಿಎಂ ಸಿದ್ದರಾಮಯ್ಯ ಚಾಲನೆ ನೀಡಿದರು. ಗುರುವಾರ ಅರ್ಜಿ ಸಲ್ಲಿಕೆ ಆರಂಭ ಆಗಿದ್ದು, ಆರಂಭದಲ್ಲೇ ಸರ್ವರ್ ಸಮಸ್ಯೆ ಎದುರಾಗಿದೆ. ಜೊತೆಗೆ ಪಡಿತರ ಚೀಟಿಗೆ ನೀಡಿರುವ ಮೊಬೈಲ್ ಸಂಖ್ಯೆಗೆ (Mobile nUmber) ನೋಂದಣಿಯ ದಿನಾಂಕ ಸ್ಥಳದ ಸಂದೇಶ ಬರುತ್ತೆ. ಸಂದೇಶ ಬರದಿದ್ದರು, ಜನ ಬೆಂಗಳೂರು ಒನ್ ಕೇಂದ್ರಗಳಿಗೆ ಬಂದು ಪರದಾಡಿದ ಸ್ಥಿತಿ ಕಂಡುಬಂತು.

    ಬೆಂಗಳೂರು (Bengaluru) ಅಷ್ಟೇ ಅಲ್ಲ, ದಾವಣಗೆರೆ, ಚಿಕ್ಕೋಡಿ, ಮಡಿಕೇರಿ, ರಾಮನಗರ, ಚಿಕ್ಕಬಳ್ಳಾಪುರ ಸೇರಿ ಹಲವು ಜಿಲ್ಲೆಗಳಲ್ಲಿ ನೋಂದಣಿ ಮಾಡಿಸಲು ಮಹಿಳೆಯರು ಪರದಾಡಿದ್ದಾರೆ. ಗ್ರಾಮ ಒನ್, ಕರ್ನಾಟಕ ಒನ್, ಸ್ಥಳೀಯ ಸಂಸ್ಥೆಗಳ ಬಳಿ ಬೆಳಗ್ಗೆಯಿಂದ ಸರತಿ ಸಾಲಲ್ಲಿ ನಿಂತಿದ್ದವರು ಸರ್ವರ್ ಪ್ರಾಬ್ಲಂನಿಂದ ನಿರಾಸೆಗೊಂಡ್ರು. ಬಳಿಕ ಮನೆಗೆ ವಾಪಸ್ ಆದರು. ಇದನ್ನೂ ಓದಿ: ವಿಪಕ್ಷ ನಾಯಕರಿಲ್ಲದೆ ಬಜೆಟ್ ಅಧಿವೇಶನ ನಡೀತಿರೋದು ಇದೇ ಮೊದಲು: ಬಿಜೆಪಿ ವಿರುದ್ಧ ಸಿಎಂ ಗುಡುಗು


    ಗೃಹಲಕ್ಷಿ ನೋಂದಣಿಗೆ ಇಲಾಖೆಯಿಂದ ಮೆಸೇಜ್ ಬರಬೇಕು. ಆದರೆ ಯಾವಾಗ ಬರುತ್ತೆ ಅನ್ನೋದು ಗೊತ್ತಾಗದೇ ಬಹುತೇಕರು ಮಹಿಳೆಯರು ತಲೆಕೆಡಿಸಿಕೊಂಡಿದ್ದಾರೆ. ನಾಳೆಯಾದ್ರೂ ಈ ಎಲ್ಲಾ ಸಮಸ್ಯೆ ಕ್ಲಿಯರ್ ಆಗುತ್ತಾ ಅಥವಾ ಇದೇ ಥರ ಪರದಾಡಬೇಕಾಗುತ್ತಾ ಕಾದು ನೋಡಬೇಕಿದೆ.

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ಮಣಿಪುರದಲ್ಲಿ ಮಹಿಳೆಯರ ಬೆತ್ತಲೆ ಮೆರವಣಿಗೆ – ಸುಪ್ರೀಂಕೋರ್ಟ್ ಅಸಮಾಧಾನ, ಸ್ವಯಂ ದೂರು ದಾಖಲು

    ನವದೆಹಲಿ: ಮಣಿಪುರದಲ್ಲಿ (Manipur) ಇಬ್ಬರು ಮಹಿಳೆಯರ (Women) ಬೆತ್ತಲೆ ಮೆರವಣಿಗೆ ಮಾಡಿದ ವಿಚಾರಕ್ಕೆ ಸಂಬಂಧಿಸಿದಂತೆ ಸ್ವಯಂ ದೂರು ದಾಖಲಿಸಿಕೊಂಡಿರುವ ಸುಪ್ರೀಂಕೋರ್ಟ್ (Supreme Court) ಆರೋಪಿಗಳ ವಿರುದ್ಧ ತೆಗೆದುಕೊಂಡ ಕ್ರಮಗಳ ಬಗ್ಗೆ ಮಾಹಿತಿ ನೀಡುವಂತೆ ಕೇಂದ್ರ ಮತ್ತು ರಾಜ್ಯ ಸರ್ಕಾರಕ್ಕೆ ನೋಟಿಸ್ ಜಾರಿ ಮಾಡಿದೆ.

    ಸ್ವಯಂ ದೂರು ದಾಖಲಿಸಿದ ಬಳಿಕ ಅಟಾರ್ನಿ ಜನರಲ್ ಆರ್ ವೆಂಕಟರಮಣಿ ಮತ್ತು ಸಾಲಿಸಿಟರ್ ಜನರಲ್ ತುಷಾರ್ ಮೆಹ್ತಾ ವಿಚಾರಣೆ ವೇಳೆ ಉಪಸ್ಥಿತರಿರುವಂತೆ ಮುಖ್ಯ ನ್ಯಾಯಾಧೀಶ ಡಿ.ವೈ ಚಂದ್ರಚೂಡ್ (D.Y.Chandrachud) ಸೂಚನೆ ನೀಡಿದ್ದರು. ಬಳಿಕ ವಿಚಾರಣೆ ಆರಂಭಿಸಿದ ಸಿಜೆಐ ನಾವು ವಿಡಿಯೋ ನೋಡಿ ವಿಚಲಿತರಾಗಿದ್ದೇವೆ, ಹಿಂಸಾಚಾರ ಪ್ರದೇಶದಲ್ಲಿ ಮಹಿಳೆಯನ್ನು ಸಾಧನವಾಗಿ ಬಳಸಿಕೊಂಡಿರುವುದು ತೀವ್ರ ಕಳವಳಕಾರಿ ಸಂಗತಿ ಎಂದರು. ಇದನ್ನೂ ಓದಿ: 2002 ರ ಗುಜರಾತ್‌ ಗಲಭೆ ಪ್ರಕರಣ – ತೀಸ್ತಾ ಸೆಟಲ್ವಾಡ್‌ಗೆ ಸುಪ್ರೀಂ ಜಾಮೀನು

    ಇದು ಮಾನವ ಹಕ್ಕುಗಳ ಉಲ್ಲಂಘನೆ. ಪ್ರಜಾಪುಭುತ್ವ ವ್ಯವಸ್ಥೆಯಲ್ಲಿ ಇದು ಸ್ವೀಕಾರವಲ್ಲ. ಸರ್ಕಾರಕ್ಕೆ ಕ್ರಮ ತೆಗೆದುಕೊಳ್ಳಲು ಸ್ವಲ್ಪ ಸಮಯ ನೀಡುತ್ತೇವೆ. ಅಪರಾಧಿಗಳನ್ನು ಬಂಧಿಸಲು ಅಧಿಕಾರಿಗಳು ಮೇ ತಿಂಗಳಿನಿಂದ ಕೈಗೊಂಡ ಕ್ರಮಗಳು ಏನು? ಘಟನೆಗಳು ಪುನಾರವರ್ತನೆಯಾಗದಿರಲು ತೆಗೆದುಕೊಂಡ ನಿರ್ಧಾರಗಳೇನು ಎಂಬ ವಿವರಗಳನ್ನು ನ್ಯಾಯಾಲಯಕ್ಕೆ ಸಲ್ಲಿಸಬೇಕು ಎಂದು ಸೂಚನೆ ನೀಡಿದರು. ಇದನ್ನೂ ಓದಿ: ಮಾನಹಾನಿ ಪ್ರಕರಣದಲ್ಲಿ ರಾಹುಲ್ ಗಾಂಧಿಗೆ ಶಿಕ್ಷೆ – ಶುಕ್ರವಾರ ಅರ್ಜಿ ವಿಚಾರಣೆ ನಡೆಸಲಿರುವ ಸುಪ್ರೀಂಕೋರ್ಟ್

    ಮುಂದಿನ ಶುಕ್ರವಾರ ಮಣಿಪುರ ಹಿಂಸಾಚಾರಕ್ಕೆ ಸಂಬಂಧಿಸಿದಂತೆ ನಡೆಯುತ್ತಿರುವ ಪ್ರಕರಣಗಳಲ್ಲಿ ನ್ಯಾಯಾಲಯವು ಈ ವಿಷಯವನ್ನು ಪರಿಗಣನೆಗೆ ತೆಗೆದುಕೊಳ್ಳುತ್ತಿದೆ. ಅಂದು ನ್ಯಾಯಾಲಯಕ್ಕೆ ಸರ್ಕಾರ ಉತ್ತರವನ್ನು ನೀಡಬೇಕು ಎಂದು ನಿರ್ದೇಶಿಸಿದರು. ಇದನ್ನೂ ಓದಿ: ಕುಸ್ತಿ ಫೆಡರೇಷನ್‌ ಚುನಾವಣೆ – ಹೈಕೋರ್ಟ್‌ ಆದೇಶಕ್ಕೆ ಸುಪ್ರೀಂ ತಡೆ

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]