Tag: Womens Asia Cup

  • Women’s Asia Cup: ಸ್ಮೃತಿ, ರೇಣುಕಾ ಶೈನ್‌ – ಬಾಂಗ್ಲಾ ವಿರುದ್ಧ 10 ವಿಕೆಟ್‌ಗಳ ಭರ್ಜರಿ ಜಯ; ಫೈನಲ್‌ ಪ್ರವೇಶಿಸಿದ ಭಾರತ!

    Women’s Asia Cup: ಸ್ಮೃತಿ, ರೇಣುಕಾ ಶೈನ್‌ – ಬಾಂಗ್ಲಾ ವಿರುದ್ಧ 10 ವಿಕೆಟ್‌ಗಳ ಭರ್ಜರಿ ಜಯ; ಫೈನಲ್‌ ಪ್ರವೇಶಿಸಿದ ಭಾರತ!

    ಡಂಬುಲ್ಲಾ: ಮಹಿಳಾ ಏಷ್ಯಾಕಪ್‌ (Women’s Asia Cup) ಟೂರ್ನಿಯ ಸೆಮಿಫೈನಲ್‌ ಪಂದ್ಯದಲ್ಲಿ ಬಾಂಗ್ಲಾದೇಶ ಮಹಿಳಾ ತಂಡದ ವಿರುದ್ಧ 10 ವಿಕೆಟ್‌ಗಳ ಭರ್ಜರಿ ಗೆಲುವು ಸಾಧಿಸಿದ ಭಾರತೀಯ ಮಹಿಳಾ ಕ್ರಿಕೆಟ್‌ ತಂಡ (India Womens Team) ಸತತ 5ನೇ ಬಾರಿಗೆ ಫೈನಲ್‌ ತಲುಪಿತು.

    2012, 2016, 2018, 2022ರಲ್ಲಿ ಫೈನಲ್‌ ಪ್ರವೇಶಿಸಿದ್ದ ಭಾರತ 2018 ಹೊರತುಪಡಿಸಿ ಮೂರು ಬಾರಿ ಚಾಂಪಿಯನ್‌ ಆಗಿ ಹೊರಹೊಮ್ಮಿತ್ತು. 2018ರಲ್ಲಿ ಬಾಂಗ್ಲಾ (Bangladesh Womens) ವಿರುದ್ಧವೇ ಸೋತು ರನ್ನರ್‌ ಅಪ್‌ ಪ್ರಶಸ್ತಿಗೆ ತೃಪ್ತಿಪಟ್ಟುಕೊಂಡಿತ್ತು. ಇದೀಗ ಸತತ 5ನೇ ಬಾರಿಗೆ ಫೈನಲ್‌ ಪ್ರವೇಶಿಸಿರುವ ಭಾರತ ಮತ್ತೊಮ್ಮೆ ಚಾಂಪಿಯನ್‌ ಆಗಿ ಹೊರಹೊಮ್ಮುವ ಭರವಸೆ ಮೂಡಿಸಿದೆ.

    ಶುಕ್ರವಾರ ಡಂಬುಲ್ಲಾ ಅಂತಾರಾಷ್ಟ್ರೀಯ ಕ್ರೀಡಾಂಗಣದಲ್ಲಿ ನಡೆದ ಸೆಮಿಫೈನಲ್‌ ಪಂದ್ಯದಲ್ಲಿ ಟಾಸ್​ ಗೆದ್ದು ಮೊದಲು ಬ್ಯಾಟಿಂಗ್​ ನಡೆಸಿದ ಬಾಂಗ್ಲಾದೇಶ ನಿಗದಿತ 20 ಓವರ್​ಗಳಲ್ಲಿ 8 ವಿಕೆಟ್​ಗೆ 80 ರನ್​ ಬಾರಿಸಿತು. ಅಲ್ಪ ಮೊತ್ತದ ಗುರಿ ಬೆನ್ನಟ್ಟಿದ ಭಾರತ 11 ಓವರ್​ಗಳಲ್ಲಿ ಯಾವುದೇ ವಿಕೆಟ್​ ನಷ್ಟವಿಲ್ಲದೇ 83 ರನ್​ ಬಾರಿಸಿ ಗೆಲುವಿನ ನಗೆ ಬೀರಿತು.

    ಚೇಸಿಂಗ್‌ ಆರಂಭಿಸಿದ ಭಾರತದ ಪರ ಆರಂಭಿಕ ಆಟಗಾರ್ತಿಯರಾದ ಶಫಾಲಿ ವರ್ಮಾ (Shafali Verma) 26 ರನ್‌ (28 ಎಸೆತ, 2 ಬೌಂಡರಿ), ಸ್ಮೃತಿ ಮಂಧಾನ (Smriti Mandhana) 55 ರನ್‌ (39 ಎಸೆತ, 9 ಬೌಂಡರಿ, 1 ಸಿಕ್ಸರ್‌) ಬಾರಿಸಿ ಅಜೇಯರಾಗುಳಿದರು.

    ಇದಕ್ಕೂ ಮುನ್ನ ಬ್ಯಾಟಿಂಗ್‌ ಮಾಡಿದ ಬಾಂಗ್ಲಾ ದೇಶದ ವಿರುದ್ಧ ಭಾರತದ ಬೌಲರ್‌ಗಳು ಘಾತುಕ ದಾಳಿ ನಡೆಸಿದರು. ಮಧ್ಯಮವೇಗಿ ರೇಣುಕಾ ಸಿಂಗ್‌ 4 ಓವರ್‌ಗಳಲ್ಲಿ 1 ಮೇಡಿನ್‌ ಸಹಿತ ಕೇವಲ 10 ರನ್‌ ಬಿಟ್ಟುಕೊಟ್ಟು 3 ವಿಕೆಟ್‌ ಕಿತ್ತರು. ಇದೇ ವೇಳೆ ಅಂತಾರಾಷ್ಟ್ರೀಯ ಟಿ20 ಕ್ರಿಕೆಟ್​ನಲ್ಲಿ 50 ವಿಕೆಟ್​ಗಳ ಮೈಲುಗಲ್ಲು ತಲುಪಿದರು. ಇದರೊಂದಿಗೆ ರಾಧಾ ಯಾದವ್‌ 4 ಓವರ್‌ಗಳಲ್ಲಿ 3 ವಿಕೆಟ್‌ ಕಿತ್ತರೆ, ಪೂಜಾ ವಸ್ತ್ರಕಾರ್‌ ಹಾಗೂ ದೀಪ್ತಿ ಶರ್ಮಾ ತಲಾ ಒಂದೊಂದು ವಿಕೆಟ್‌ ಕಿತ್ತರು.

    ಬಾಂಗ್ಲಾ ಪರ ನಾಯಕಿ ನಿಗರ್ ಸುಲ್ತಾನಾ 51 ಎಸೆತ ಎದುರಿಸಿ 32 ರನ್​, ಶೋರ್ನಾ ಅಖ್ತರ್​ 19 ರನ್ ಗಳಿಸಿದ್ರೆ, ಉಳಿದ ಆಟಗಾರರು ಭಾರತದ ಬೌಲರ್‌ಗಳ ದಾಳಿಗೆ ತತ್ತರಿಸಿದರು.

    ಶುಕ್ರವಾರ (ಇಂದು) ರಾತ್ರಿ ನಡೆಯುವ ಮತ್ತೊಂದು ಸೆಮಿಫೈನಲ್​ ಪಂದ್ಯದಲ್ಲಿ ಪಾಕಿಸ್ತಾನ ಮತ್ತು ಆತಿಥೇಯ ಶ್ರೀಲಂಕಾ ಮುಖಾಮುಖಿಯಾಗಲಿವೆ. ಗೆದ್ದ ತಂಡ ಫೈನಲ್‌ನಲ್ಲಿ ಭಾರತ ತಂಡದೊಂದಿಗೆ ಫೈನಲ್‌ನಲ್ಲಿ ಸೆಣಸಲಿದೆ.

  • Women’s Asia Cup: ನೇಪಾಳ ವಿರುದ್ಧ 82 ರನ್‌ಗಳ ಭರ್ಜರಿ ಗೆಲುವು – ಸೆಮಿಸ್‌ಗೆ ಲಗ್ಗೆಯಿಟ್ಟ ಭಾರತ

    Women’s Asia Cup: ನೇಪಾಳ ವಿರುದ್ಧ 82 ರನ್‌ಗಳ ಭರ್ಜರಿ ಗೆಲುವು – ಸೆಮಿಸ್‌ಗೆ ಲಗ್ಗೆಯಿಟ್ಟ ಭಾರತ

    ಡಂಬುಲ್ಲಾ: ಶಫಾಲಿ ವರ್ಮಾ (Shafali Verma) ಸ್ಫೋಟಕ ಬ್ಯಾಟಿಂಗ್‌, ಸಂಘಟಿತ ಬೌಲಿಂಗ್‌ ಪ್ರದರ್ಶನದಿಂದ ಭಾರತ ಮಹಿಳಾ ಕ್ರಿಕೆಟ್‌ ತಂಡವು ನೇಪಾಳ ತಂಡದ ವಿರುದ್ಧ 82 ರನ್‌ಗಳ ಭರ್ಜರಿ ಗೆಲುವು ಸಾಧಿಸಿದೆ. ಈ ಮೂಲಕ 2024ರ ಮಹಿಳಾ ಟಿ20 ಏಷ್ಯಾಕಪ್‌ (Women’s Asia Cup 2024) ಟೂರ್ನಿಯ ಸೆಮಿಫೈನಲ್‌ ಪ್ರವೇಶಿಸಿದೆ. ಹಾಲಿ ಚಾಂಪಿಯನ್ಸ್‌ ಸಹ ಆಗಿರುವ ಭಾರತ 2024ರಲ್ಲಿ ಮಹಿಳಾ ಏಷ್ಯಾಕಪ್‌ ಟೂರ್ನಿಯ ಸೆಮಿಸ್‌ಗೆ ಎಂಟ್ರಿ ಕೊಟ್ಟ ಮೊದಲ ತಂಡವೂ ಆಗಿದೆ.

    ಇಲ್ಲಿನ ರಣಗಿರಿ ದಂಬುಲ್ಲಾ ಅಂತಾರಾಷ್ಟ್ರೀಯ ಕ್ರೀಡಾಂಗಣದಲ್ಲಿ ನಡೆದ ಪಂದ್ಯದಲ್ಲಿ ಟಾಸ್‌ ಗೆದ್ದು ಮೊದಲು ಬ್ಯಾಟಿಂಗ್‌ ಮಾಡಿದ ಟೀಂ ಇಂಡಿಯಾ 20 ಓವರ್‌ಗಳಲ್ಲಿ 3 ವಿಕೆಟ್‌ ನಷ್ಟಕ್ಕೆ 178 ರನ್‌ ಬಾರಿಸಿತ್ತು. 179 ರನ್‌ಗಳ ಗುರಿ ಬೆನ್ನಟ್ಟಿದ ನೇಪಾಳ ತಂಡ (Nepal Womens Team) ನಿಗದಿತ ಓವರ್‌ಗಳಲ್ಲಿ 9 ವಿಕೆಟ್‌ ನಷ್ಟಕ್ಕೆ ಕೇವಲ 96 ರನ್‌ಗಳಿಸಿ ಹೀನಾಯ ಸೋಲು ಕಂಡಿತು. ಇದನ್ನೂ ಓದಿ: ಭದ್ರತಾ ಕಾರಣಕ್ಕಾಗಿ ಭಾರತ ಸರ್ಕಾರ ಅನುಮತಿ ನಿರಾಕರಿಸಿದ್ರೆ ಬಿಸಿಸಿಐ ಬರೆದುಕೊಡಲಿ – ಪಾಕ್‌ ಪಟ್ಟು!

    ಸ್ಮೃತಿ ಮಂಧಾನ (Smriti Mandhana) ನಾಯಕತ್ವದಲ್ಲಿ ಕಣಕ್ಕಿಳಿದ ಟೀಂ ಇಂಡಿಯಾ ಪರ ಶಫಾಲಿ ವರ್ಮಾ ಎದುರಾಳಿ ಬೌಲರ್‌ಗಳನ್ನು ಹಿಗ್ಗಾಮುಗ್ಗಾ ದಂಡಿಸಿದರು. 48 ಎಸೆತಗಳಲ್ಲಿ ಸ್ಫೋಟಕ 81 ರನ್‌ (12 ಬೌಂಡರಿ, 1 ಸಿಕ್ಸರ್)‌ ಚಚ್ಚಿದರು. ಇದರೊಂದಿಗೆ ದಯಾಳನ್‌ ಹೇಮಲತಾ 47 ರನ್‌ (42 ಎಸೆತ, 5 ಬೌಂಡರಿ, 1 ಸಿಕ್ಸರ್)‌, ಸಜೀವನ್‌ ಸಜನ 10 ರನ್‌, ಜೆಮಿಮಾ ರೊಡ್ರಿಗ್ಸ್‌ 28 ರನ್‌ ಹಾಗೂ ರಿಚಾ ಘೋಷ್‌ 6 ರನ್‌ ಗಳಿಸಿ ಮಿಂಚಿದರು. ಇದನ್ನೂ ಓದಿ: Paris Olympic 2024: ಭಾರತೀಯ ಕ್ರೀಡಾಪಟುಗಳಿಗೆ 8.5 ಕೋಟಿ ನೆರವು ಘೋಷಿಸಿದ ಬಿಸಿಸಿಐ

    ಸ್ಫರ್ಧಾತ್ಮಕ ಗುರಿ ಬೆನ್ನಟ್ಟಿದ ನೇಪಾಳ ಟೀಂ ಇಂಡಿಯಾ ಬೌಲರ್‌ಗಳ ದಾಳಿಗೆ ತತ್ತರಿಸಿ, ಆರಂಭದಿಂದಲೇ ವಿಕೆಟ್‌ ಕಳೆದುಕೊಂಡಿತು. ನೇಪಾಳ ಪರ ನಾಯಕಿ ಇಂದು ಬರ್ಮಾ 14 ರನ್‌, ಸೀತಾ ರಾಣಾ ಮಗರ್ 18 ರನ್‌, ರುಬಿನಾ 15 ರನ್‌ ಹಾಗೂ ಬಿಂದು 17 ರನ್‌ ಗಳಿಸಿದ್ದು ಬಿಟ್ಟರೆ, ಉಳಿದ ಆಟಗಾರ್ತಿಯರು ಅಲ್ಪಮೊತ್ತಕ್ಕೆ ಪೆವಿಲಿಯನ್‌ನತ್ತ ಮುಖ ಮಾಡಿದರು. ಇದರಿಂದ ಗೆಲುವು ಸುಲಭವಾಗಿ ಭಾರತದ ವನಿತೆಯರ ಪಾಲಾಯಿತು.

    ಟೀಂ ಇಂಡಿಯಾ ಪರ ದೀಪ್ತಿ ಶರ್ಮಾ 3 ವಿಕೆಟ್‌ ಕಿತ್ತರೆ, ಅರುಂಧತಿ ರೆಡ್ಡಿ, ರಾಧಾ ಯಾದವ್‌ ತಲಾ 2 ವಿಕೆಟ್‌ ಹಾಗೂ ರೇಣಿಕಾ ಸಿಂಗ್‌ 1 ವಿಕೆಟ್‌ ಪಡೆದು ಮಿಂಚಿದರು. ಇದನ್ನೂ ಓದಿ: ಮುಂಬೈಗೆ ಗುಡ್‌ಬೈ ಹೇಳ್ತಾರಾ ರೋಹಿತ್‌, ಬುಮ್ರಾ, ಸೂರ್ಯ? – 2025ರ ಐಪಿಎಲ್‌ನ ಮಹತ್ವದ 5 ಬೆಳವಣಿಗೆಗಳು ಹೀಗಿವೆ

  • Women’s Asia Cup: ರಿಚಾ ಸ್ಫೋಟಕ ಅರ್ಧಶಕ – ಭಾರತಕ್ಕೆ 78 ರನ್‌ಗಳ ಭರ್ಜರಿ ಜಯ; ಸೆಮಿಸ್‌ಗೆ ಇನ್ನೊಂದೇ ಹೆಜ್ಜೆ!

    Women’s Asia Cup: ರಿಚಾ ಸ್ಫೋಟಕ ಅರ್ಧಶಕ – ಭಾರತಕ್ಕೆ 78 ರನ್‌ಗಳ ಭರ್ಜರಿ ಜಯ; ಸೆಮಿಸ್‌ಗೆ ಇನ್ನೊಂದೇ ಹೆಜ್ಜೆ!

    ಡಂಬುಲ್ಲಾ: ರಿಚಾ ಘೋಷ್‌ (Richa Ghosh) ಹಾಗೂ ನಾಯಕಿ ಹರ್ಮನ್‌ ಪ್ರೀತ್‌ ಕೌರ್‌ ಅವರ ಭರ್ಜರಿ ಅರ್ಧಶತಕಗಳ ಬ್ಯಾಟಿಂಗ್‌ ನೆರವಿನಿಂದ ಭಾರತ ಮಹಿಳಾ ಕ್ರಿಕೆಟ್‌ ತಂಡವು (India Womens Team) ಯುಎಇ ವಿರುದ್ಧ 78 ರನ್‌ಗಳ ಭರ್ಜರಿ ಗೆಲುವು ಸಾಧಿಸಿದೆ. ಈ ಮೂಲಕ ಸೆಮಿಫೈನಲ್‌ಗೆ ಇನ್ನಷ್ಟು ಹತ್ತಿರವಾಗಿದೆ.

    ಇಲ್ಲಿನ ರಣಗಿರಿ ಕ್ರಿಕೆಟ್ ಸ್ಟೇಡಿಯಂನಲ್ಲಿ ನಡೆದ ಪಂದ್ಯದಲ್ಲಿ ಟಾಸ್ ಸೋತು ಮೊದಲು ಬ್ಯಾಟಿಂಗ್‌ ಮಾಡಿದ ಭಾರತ ವನಿತೆಯರ ತಂಡ 20 ಓವರ್‌ಗಳಲ್ಲಿ 5 ವಿಕೆಟ್​ ನಷ್ಟಕ್ಕೆ ಭರ್ಜರಿ 201 ರನ್ ಗಳಿಸಿತ್ತು. ಇದು ಭಾರತ ಮಹಿಳೆಯರ ಕ್ರಿಕೆಟ್ ತಂಡದ ಇದುವರೆಗಿನ ಗರಿಷ್ಠ ಸ್ಕೋರ್ ಸಹ ಆಗಿದೆ. 202 ರನ್‌ಗಳ ಬೃಹತ್‌ ಮೊತ್ತದ ಗುರಿ ಪಡೆದ ಯುಎಇ (United Arab Emirates Women) ನಿಗದಿತ ಓವರ್‌ಗಳಲ್ಲಿ 7 ವಿಕೆಟ್‌ ನಷ್ಟಕ್ಕೆ 123 ರನ್‌ ಗಳಿಸಿ ಸೋಲೊಪ್ಪಿಕೊಂಡಿತು.

    ಮೊದಲು ಬ್ಯಾಟಿಂಗ್‌ ಮಾಡಿದ್ದ ಟೀಂ ಇಂಡಿಯಾ ಆರಂಭದಲ್ಲಿ ವಿಕೆಟ್‌ ಕಳೆದುಕೊಂಡರೂ, ಮತ್ತೊಂದೆಡೆ ಬ್ಯಾಟರ್‌ಗಳ ಬಲದಿಂದ ರನ್‌ ಪೇರಿಸುತ್ತಾ ಸಾಗಿತ್ತು. ಕೊನೇ 2 ಓವರ್‌ಗಳಲ್ಲಿ ರಿಚಾ ಘೋಷ್‌ ಹಾಗೂ ಹರ್ಮನ್‌ ಪ್ರೀತ್‌ ( Harmanpreet Kaur) ತಮ್ಮ ಸ್ಫೋಟಕ ಪ್ರದರ್ಶನದಿಂದ 37 ರನ್‌ ಕಲೆಹಾಕುವ ಮೂಲಕ 200 ರನ್‌ಗಳ ಗಡಿ ದಾಟಿಸುವಲ್ಲಿ ಯಶಸ್ವಿಯಾದರು. ಭಾರತದ ಪರ ರಿಷಾ ಘೋಷ್‌ 64 ರನ್‌ (29 ಎಸೆತ, 1 ಸಿಕ್ಸರ್‌, 12 ಬೌಂಡರಿ), ಹರ್ಮನ್‌ ಪ್ರೀತ್‌ ಕೌರ್‌ 66 ರನ್‌ (47 ಎಸೆತ, 1 ಸಿಕ್ಸರ್, 7 ಬೌಂಡರಿ), ಶಫಾಲಿ ವರ್ಮಾ 37 ರನ್‌, ಸ್ಮೃತಿ ಮಂಧಾನ 13 ರನ್‌, ದಯಾಳನ್‌ ಹೇಮಲತಾ 2 ರನ್‌, ಜೆಮಿಮಾ ರೊಡ್ರಿಗ್ಸ್‌ 14 ರನ್‌ ಗಳಿಸಿ ಮಿಂಚಿದರು.

    ಬೃಹತ್‌ ಮೊತ್ತದ ಚೇಸಿಂಗ್‌ ಆರಂಭಿಸಿದ ಯುಎಇ ಪರ ಇಶಾ ಓಜಾ 38 ರನ್‌, ಕವಿಶ ಈಗೋಡಗೆ 40 ಗಳಿಸಿದರೆ, ಉಳಿದ ಆಟಗಾರರು ಅಲ್ಪಮೊತ್ತಕ್ಕೆ ಔಟಾದರು.

    ಬೌಲರ್‌ಗಳ ಕಮಾಲ್‌:
    ದೊಡ್ಡ ಮೊತ್ತ ಬೆನ್ನಟ್ಟಲು ಮುಂದಾದ ಯುಎಇ ತಂಡವೂ ಆರಂಭದಿಂದಲೇ ಸ್ಫೋಟಕ ಪ್ರದರ್ಶನಕ್ಕೆ ಮುಂದಾಯಿತು. ಆದರೆ, ಭಾರತೀಯ ಬೌಲರ್​ಗಳು ಅದಕ್ಕೆ ಸೊಪ್ಪು ಹಾಕಲಿಲ್ಲ. ಪವರ್‌ ಪ್ಲೇನಲ್ಲೇ ಎದುರಾಳಿ ಬೌಲರ್‌ಗಳನ್ನು ಯಶಸ್ವಿಯಾಗಿ ಕಟ್ಟಿಹಾಕಿದರು. ದೀಪ್ರಿ ಶರ್ಮಾ 2 ವಿಕೆಟ್‌ ಕಿತ್ತರೆ, ರೇಣುಕಾ ಸಿಂಗ್‌, ತನುಜಾ ಕನ್ವರ್‌, ಪೂಜಾ ವಸ್ತ್ರಕಾರ್‌, ರಾಧಾ ಯಾದವ್‌ ತಲಾ ಒಂದೊಂದು ವಿಕೆಟ್‌ ಪಡೆದು ಮಿಂಚಿದರು.

    ಎ ಗುಂಪಿನಲ್ಲಿರುವ ಭಾರತ ತಂಡ ತನ್ನ ಮುಂದಿನ ಪಂದ್ಯದಲ್ಲಿ ನೇಪಾಳ ತಂಡವನ್ನು ಎದುರಿಸಲಿದೆ. ಈಗಾಗಲೇ ಎರಡು ಪಂದ್ಯ ಗೆದ್ದಿರುವ ಕಾರಣ ಭಾರತ ಬಹುತೇಕ ಸೆಮಿಫೈನಲ್ ತಲುಪಿದೆ. ಮುಂದಿನ ಪಂದ್ಯ ಗೆದ್ದರೆ ಅಧಿಕೃತವಾಗಿ ಸೆಮಿಫೈನಲ್‌ಗೆ ಪ್ರವೇಶಿಸಲಿದೆ.

  • ಲಂಕನ್ನರಿಗೆ ಲಗಾಮು ಹಾಕಿ 7ನೇ ಬಾರಿ ಏಷ್ಯಾಕಪ್ ಗೆದ್ದ ಭಾರತ

    ಲಂಕನ್ನರಿಗೆ ಲಗಾಮು ಹಾಕಿ 7ನೇ ಬಾರಿ ಏಷ್ಯಾಕಪ್ ಗೆದ್ದ ಭಾರತ

    ಢಾಕಾ: ಏಷ್ಯಾಕಪ್ ಫೈನಲ್ (Asia Cup)  ಪಂದ್ಯದಲ್ಲಿ ಭಾರತದ (India) ಮಹಿಳಾ ಆಟಗಾರ್ತಿಯರ ಸೂಪರ್ ಡೂಪರ್ ಆಟಕ್ಕೆ ಶ್ರೀಲಂಕಾ (Sri Lanka)  ಮಂಕಾಗಿ ಸೋಲುಂಡಿದೆ. ಭಾರತ 8 ವಿಕೆಟ್‍ಗಳ ಭರ್ಜರಿ ಜಯದೊಂದಿಗೆ 7ನೇ ಬಾರಿ ಏಷ್ಯಾಕಪ್ ಮುಡಿಗೇರಿಸಿಕೊಂಡಿದೆ.

    ಶ್ರೀಲಂಕಾ ನೀಡಿದ 66 ರನ್‍ಗಳ ಅಲ್ಪ ಮೊತ್ತದ ಗುರಿಪಡೆದ ಭಾರತ ಈ ಮೊತ್ತವನ್ನು 8.3 ಓವರ್‌ಗಳಲ್ಲಿ 2 ವಿಕೆಟ್ ನಷ್ಟಕ್ಕೆ 71 ರನ್ ಚಚ್ಚಿ ಗೆದ್ದು ಬೀಗಿದೆ. ಇತ್ತ 7ನೇ ಬಾರಿ ಭಾರತ ಪ್ರಶಸ್ತಿ ಗೆದ್ದು ಸಂಭ್ರಮಿಸಿದರೆ, ಶ್ರೀಲಂಕಾ ಚೊಚ್ಚಲ ಪ್ರಶಸ್ತಿಯನ್ನು ಮುಡಿಗೇರಿಸಿಕೊಳ್ಳುವ ಅವಕಾಶ ಕಳೆದುಕೊಂಡಿತು. ಇದನ್ನೂ ಓದಿ: ಬಿಸಿಸಿಐಗೆ ಜಿಎಸ್‍ಟಿ ಬರೆ – 2023ರ ವಿಶ್ವಕಪ್‍ಗೂ ಮುನ್ನ 955 ಕೋಟಿ ರೂ. ನಷ್ಟದ ಭೀತಿ

    ಲಂಕಾ ನೀಡಿದ ಅಲ್ಪಮೊತ್ತವನ್ನು ಬೆನ್ನಟ್ಟಿದ ಭಾರತ ತಂಡಕ್ಕೆ ಸ್ಮೃತಿ ಮಂಧಾನ ಬ್ಯಾಟಿಂಗ್‍ನಲ್ಲಿ ನೆರವಾದರು. ಆರಂಭಿಕರಾಗಿ ಮಂಧಾನ ಜೊತೆ ಕಣಕ್ಕಿಳಿದ ಶಿಫಾಲಿ ವರ್ಮಾ 5 ರನ್‍ಗಳಿಗೆ ವಿಕೆಟ್ ಕೈಚೆಲ್ಲಿಕೊಂಡರು. ಆದರೆ ಇತ್ತ ಮಂಧಾನ ಬಿರುಸಿನ ಬ್ಯಾಟಿಂಗ್ ಮೂಲಕ ಲಂಕಾದ ಅಲ್ಪಮೊತ್ತವನ್ನು ಪುಟಿಗಟ್ಟಿದರು. ಅಂತಿಮವಾಗಿ ಮಂಧಾನ ಅಜೇಯ 51 ರನ್ 25 ಎಸೆತ, 6 ಬೌಂಡರಿ, 3 ಸಿಕ್ಸ್) ಚಚ್ಚಿ ಗೆಲುವಿನ ರೂವಾರಿಯಾದರು.

    ಮಂಧಾನಗೆ ಉತ್ತಮ ಸಾಥ್ ನೀಡಿದ ಹರ್ಮನ್‍ಪ್ರೀತ್ ಕೌರ್ ಅಜೇಯ 11 ರನ್ (14 ಎಸೆತ, 1 ಬೌಂಡರಿ) ಸಿಡಿಸಿ 8.3 ಓವರ್‌ಗಳ ಅಂತ್ಯಕ್ಕೆ 2 ವಿಕೆಟ್ ನಷ್ಟಕ್ಕೆ 71 ರನ್ ಬಾರಿಸಿ ಗೆಲ್ಲಿಸಿದರು. ಇದನ್ನೂ ಓದಿ: ಸೂಪರ್ ಟೆನ್ ಲೀಗ್‍ನಲ್ಲಿ ಗೇಲ್ ಜೊತೆ ಬ್ಯಾಟ್‍ ಬೀಸಲಿದ್ದಾರೆ ಕಿಚ್ಚ ಸುದೀಪ್

    ಈ ಮೊದಲು ಬ್ಯಾಟಿಂಗ್ ಮಾಡಿದ ಲಂಕಾ ತಂಡ ಭಾರತದ ಬೌಲಿಂಗ್ ಪಡೆಯನ್ನು ಎದುರಿಸಲಾಗದೆ ನಾ ಮುಂದು ತಾ ಮುಂದು ಎಂದು ವಿಕೆಟ್ ಕಳೆದುಕೊಂಡು ಪರದಾಡಿತು. ರೇಣುಕಾ ಸಿಂಗ್, ರಾಜೇಶ್ವರಿ ಗಾಯಕ್ವಾಡ್, ಸ್ನೇಹ ರಾಣಾ ಸೇರಿಕೊಂಡು ಲಂಕಾವನ್ನು ಕಟ್ಟಿಹಾಕಿದರು. ಭಾರತದ ಬೌಲರ್‌ಗಳ ದಾಳಿ ಪತರುಗುಟ್ಟಿದ ಶ್ರೀಲಂಕಾ ಬ್ಯಾಟರ್‌ಗಳು 8 ಮಂದಿ ಒಂದಂಕಿಗೆ ವಿಕೆಟ್ ಒಪ್ಪಿಸಿ ಹೊರನಡೆದರು.

    ಲಂಕಾ ಪರ ಇನೋಕಾ ರಣವೀರ 18 ರನ್ (22 ಎಸೆತ, 2 ಬೌಂಡರಿ) ಸಿಡಿಸಿದ್ದು ಹೆಚ್ಚಿನ ಗಳಿಕೆಯಾಗಿದೆ. ಅಂತಿಮವಾಗಿ 20 ಓವರ್‌ಗಳ ಅಂತ್ಯಕ್ಕೆ 9 ವಿಕೆಟ್ ನಷ್ಟಕ್ಕೆ 65 ರನ್ ಪೇರಿಸಲಷ್ಟೇ ಶಕ್ತವಾಯಿತು. ರೇಣುಕಾ ಸಿಂಗ್ 3 ವಿಕೆಟ್, ರಾಜೇಶ್ವರ ಗಾಯಕ್ವಾಡ್ ಮತ್ತು ಸ್ನೇಹ ರಾಣಾ ತಲಾ 2 ವಿಕೆಟ್ ಕಿತ್ತು ಮಿಂಚುಹರಿಸಿದರು.

    Live Tv
    [brid partner=56869869 player=32851 video=960834 autoplay=true]