Tag: Women’s commission

  • ಮದ್ವೆಯಾಗ್ತೀನಿ ಅಂತ ನಂಬಿಸಿ ಲೈಂಗಿಕವಾಗಿ ಬಳಸಿಕೊಂಡ ಆರೋಪ – ಮಾಜಿ ಸಚಿವ ಪ್ರಭು ಚೌಹಾಣ್ ಪುತ್ರನ ವಿರುದ್ಧ ದೂರು

    ಮದ್ವೆಯಾಗ್ತೀನಿ ಅಂತ ನಂಬಿಸಿ ಲೈಂಗಿಕವಾಗಿ ಬಳಸಿಕೊಂಡ ಆರೋಪ – ಮಾಜಿ ಸಚಿವ ಪ್ರಭು ಚೌಹಾಣ್ ಪುತ್ರನ ವಿರುದ್ಧ ದೂರು

    ಬೆಂಗಳೂರು: ಮಾಜಿ ಸಚಿವರೂ, ಬೀದರ್‌ನ ಔರಾದ್‌ ಕ್ಷೇತ್ರದ ಬಿಜೆಪಿ ಶಾಸಕರೂ ಆಗಿರುವ ಪ್ರಭು ಚೌಹಾಣ್‌ (Prabhu Chauhan) ಪುತ್ರನ ವಿರುದ್ಧ ಯುವತಿಯೊಬ್ಬರು ಮಹಿಳಾ ಆಯೋಗಕ್ಕೆ (Womenʼs Commission) ದೂರು ನೀಡಿದ್ದಾರೆ.

    ಪ್ರಭು ಚೌಹಾಣ್‌ ಅವರ ಪುತ್ರ ಪ್ರತೀಕ್‌ ಚೌಹಾಣ್‌ (Prateek Chauhan) ತನ್ನನ್ನ ಮದುವೆಯಾಗೋದಾಗಿ ನಂಬಿಸಿ, ಲೈಂಗಿಕವಾಗಿ ಬಳಸಿಕೊಂಡಿದ್ದಾರೆ ಎಂದು ಯುವತಿಯೊಬ್ಬರು ಮಹಿಳಾ ಆಯೋಗಕ್ಕೆ ದೂರು ನೀಡಿದ್ದಾರೆ. ಈ ಬಗ್ಗೆ ಔರಾದ್‌ನ ಹೋಕ್ರಾಣಾ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ರೆ, ಪೊಲೀಸರು ದೂರು ಸ್ವೀಕರಿಸಿಲ್ಲ. ಹೀಗಾಗಿ ಆಯೋಗಕ್ಕೆ ದೂರು ನೀಡಿದ್ದಾಗಿ ತಿಳಿಸಿದ್ದಾರೆ. ಇದನ್ನೂ ಓದಿ: ಪ್ರಿಯಾಂಕ್‌ ಖರ್ಗೆ, ವಿಶ್ವವಿಖ್ಯಾತ ಆರ್ಥಿಕ ತಜ್ಞ ಸಂತೋಷ್ ಲಾಡ್‌ಗೆ ಬಡ್ಡಿ ಸಮೇತ ಚುಕ್ತಾ ಮಾಡ್ತಿನಿ: ಪ್ರತಾಪ್‌ ಸಿಂಹ

    ಲೈಂಗಿಕವಾಗಿ ಬಳಕೆ – ದೂರಿನಲ್ಲಿ ಏನಿದೆ?
    ಮಹಿಳಾ ಆಯೋಗಕ್ಕೆ ಪ್ರತೀಕ್ ಚೌಹಾಣ್ ವಿರುದ್ಧ ದೂರು ಸಲ್ಲಿಕೆಯಾಗಿದೆ. ಮದುವೆ ಯಾಗೋದಾಗಿ ನಂಬಿಸಿ ಮೋಸ ಮಾಡಿದ್ದು, ಲೈಂಗಿಕವಾಗಿಯೂ ಬಳಸಿಕೊಂಡಿದ್ದಾಗಿ ಯುವತಿ ಆರೋಪಿಸಿದ್ದಾರೆ. ಮನೆಯವರೆಲ್ಲ ಸೇರಿ 2023ರ ಡಿಸೆಂಬರ್‌ 25ರಂದು ನಿಶ್ಚಿತಾರ್ಥ ಮಾಡಿದ್ದರು. ಎರಡೂ ಕುಟುಂಬಸ್ಥರು ಒಪ್ಪಿ ಪ್ರತೀಕ್‌ ನಿವಾಸದಲ್ಲೇ ನಿಶ್ಚಿತಾರ್ಥ ಮಾಡಿದ್ದರು. ಬಳಿಕ ಪ್ರತಿಕ್ ಜೊತೆ ಬೇರೆ ಬೇರೆ ಸ್ಥಳಗಳಿಗೆ ಕಳುಹಿಸಿಕೊಟ್ಟಿದ್ದರು. ಅದರಂತೆ ಪ್ರತೀಕ್‌ 2025ರ ಮಾರ್ಚ್‌ 7, 24, 27, ಏಪ್ರಿಲ್‌ 8 ರಂದು ಮಹಾರಾಷ್ಟ್ರದ ಲಾತೂರ್‌ಗೆ ನನ್ನನ್ನ ಕರೆದುಕೊಂಡು ಹೋಗಿದ್ದರು. ಆ ಸಂದರ್ಭದಲ್ಲೇ ಲೈಂಗಿಕ ಕ್ರಿಯೆ ನಡೆಸಿದ್ರೆ ತಪ್ಪಿಲ್ಲ ಅಂತ ಪ್ರತೀಕ್‌ ಒತ್ತಾಯಿಸಿದ್ರೂ, ಅದಾದ್ಮೇಲೆ ನಾನೂ ಸಹಕರಿಸಿದೆ. ಇದನ್ನೂ ಓದಿ: ನಟ ವಿಷ್ಣುವರ್ಧನ್‌ಗೆ ಮರಣೋತ್ತರ ಕರ್ನಾಟಕ ರತ್ನ ಪ್ರಶಸ್ತಿ ಪ್ರದಾನಕ್ಕೆ ಮನವಿ

    ಅಲ್ಲದೇ 2024ರ ಮೇ 13ರಂದು ವಿಮಾನದಲ್ಲಿ ಶಿರಡಿಗೆ ಹೋಗಿದ್ದೆವು. ನಾಲ್ವರು ಜೊತೆಗೆ ಹೋಗಿದ್ದೆವು, ಅಲ್ಲಿ ಖಾಸಗಿ ಹೋಟೆಲ್‌ನಲ್ಲಿ ನಾನು ಪ್ರತೀಕ್‌ ಒಂದೇ ರೂಮಿನಲ್ಲಿ ತಂಗಿದ್ದೆವು. ಆಗಲೂ ಪ್ರತೀಕ್ ಲೈಂಗಿಕ ಸಂಪರ್ಕ ಮಾಡಿದ್ದಾನೆ. ನಂತರ ಮದುವೆಗೆ ಒತ್ತಾಯ ಮಾಡಿದ್ರೆ ಮುಂದೂಡುತ್ತಲೇ ಬಂದಿದ್ದ. ನನ್ನ ಕನ್ಯತ್ವದ ಬಗ್ಗೆಯೂ ಪ್ರಶ್ನೆ ಮಾಡಿದ್ದಾನೆ. ಈ ಬಗ್ಗೆ ಪ್ರಸಕ್ತ ಜುಲೈ 5ರಂದು ನನ್ನ ಪೋಷಕರು ಪ್ರತೀಕ್‌ ಮನೆಗೆ ಭೇಟಿ ಕೊಟ್ಟು ಪ್ರಶ್ನೆ ಮಾಡಿದ್ದಾರೆ. ಇಬ್ಬರ ನಡುವೆ ವಾಗ್ವಾದ ನಡೆದಿದೆ. ಕೊನೆಗೆ ನಮ್ಮನ್ನ ಬಡವರು ಅಂತ ಹೀಯಾಳಿದ್ದಾರೆ. ಈ ಬಗ್ಗೆ ಇದೇ ಜುಲೈ 6ರಂದು ಔರಾದ್‌ನ ಹೋಕ್ರಾನ್‌ ಠಾಣೆಗೆ ದೂರು ಕೊಡಲು ಹೋಗಿದ್ದೆವು. ಆದ್ರೆ ಅವರು ಸ್ವೀಕರಿಸಲಿಲ್ಲ. ಅವರು ಪೊಲೀಸರ ಮೇಲೆ ಪ್ರಭಾವ ಬೀರುತ್ತಿದ್ದಾರೆ. ಹೀಗಾಗಿ, ಮಹಿಳಾ ಆಯೋಗಕ್ಕೆ ದೂರು ನೀಡಿದ್ದೇವೆ. ಮಹಿಳಾ ಆಯೋಗ ಏನೋ ಕ್ರಮ ಕೈಗೊಳ್ಳುತ್ತಾರೆ ನೋಡುತ್ತೇವೆ, ನಮಗೆ ನ್ಯಾಯ ಬೇಕು ಅಂತ ದೂರಿನಲ್ಲಿ ತಿಳಿಸಿದ್ದಾರೆ. ಇದನ್ನೂ ಓದಿ: ದಿಢೀರ್‌ ಆಸ್ಪತ್ರೆಗೆ ದಾಖಲಾದ ನಟ ವಿಜಯ್‌ ದೇವರಕೊಂಡ

  • ನಟಿ ಶ್ರುತಿಗೆ ಮಹಿಳಾ ಆಯೋಗದಿಂದ ನೋಟಿಸ್

    ನಟಿ ಶ್ರುತಿಗೆ ಮಹಿಳಾ ಆಯೋಗದಿಂದ ನೋಟಿಸ್

    ಕಾಂಗ್ರೆಸ್ ಸರ್ಕಾರ ಕೊಟ್ಟಿರುವ ಗ್ಯಾರಂಟಿ ಯೋಜನೆಯಿಂದ ಹಾಗೂ ಫ್ರೀ ಬಸ್ ಯೋಜನೆಯಿಂದ ತೀರ್ಥಯಾತ್ರೆಗೆಂದು ಹೋಗುತ್ತೇವೆ ಎಂದು ಹೇಳಿ ಹೆಣ್ಣು ಮಕ್ಕಳು ಎಲ್ಲೆಲ್ಲೂ ಹೋಗುತ್ತಿರುತ್ತಾರೆ ಅಂತಾ ನಟಿ ಶ್ರುತಿ (Shruti)  ಮಾತನಾಡಿರೋದು ಮಾಧ್ಯಮದಲ್ಲಿ ವರದಿಯಾಗಿದೆ. ಈ ವಿಷಯಕ್ಕೆ ಸಂಬಂಧಿಸಿದಂತೆ ಕಾರಣ ಕೇಳಿ ರಾಜ್ಯ ಮಹಿಳಾ ಆಯೋಗ ಅವರಿಗೆ ನೋಟಿಸ್ ಜಾರಿ ಮಾಡಿದೆ.

    ಶ್ರುತಿಗೆ ಕೊಟ್ಟಿ ನೋಟಿಸ್ (Notice) ನಲ್ಲಿ ಈ ರೀತಿ ಬಹಿರಂಗವಾಗಿ ಹೆಣ್ಣು ಮಕ್ಕಳನ್ನು ಅವಮಾನಿಸಿರೋದು ಖಂಡನೀಯ. ರಾಜ್ಯ ಮಹಿಳಾ ಆಯೋಗದ (Commission for Women) ಅಧಿನಿಯಮ 1995 ಪರಿಚಯ 10(ಎ)ಮೇರೆಗೆ ನೋಟಿಸ್ ಜಾರಿ ಮಾಡಿದೆ. ಏಳು‌ ದಿನದಲ್ಲಿ ಸ್ಪಷ್ಟೀಕರಣ ನೀಡುವಂತೆ ಸೂಚನೆ ನೀಡಲಾಗಿದೆ.

    ಉಡುಪಿ ಜಿಲ್ಲೆಯ ಬಂದೂರಿನಲ್ಲಿ ನಡೆದ ಚುನಾವಣಾ ಭಾಷಣದ ಅಬ್ಬರದಲ್ಲಿ ಮಹಿಳೆಯರನ್ನು ಶ್ರುತಿ ಟೀಕಿಸಿದ್ದಾರೆ ಎಂದು ಸೋಷಿಯಲ್ ಮೀಡಿಯಾದಲ್ಲಿ ಪರ ವಿರೋಧ ಚರ್ಚೆ ನಡೆದಿತ್ತು. ಅವರು ಮಾಡಿದ ಭಾಷಣದ ತುಣುಕು ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್ ಕೂಡ ಆಗಿತ್ತು. ನಂತರ ಮಹಿಳಾ ಆಯೋಗ ನೋಟಿಸ್ ನೀಡಿ, ಸ್ಪಷ್ಟೀಕರಣ ಕೇಳಿದೆ.

  • ಹೆಚ್‍ಡಿಕೆ ವಿರುದ್ಧ ಚುನಾವಣಾ ಆಯೋಗಕ್ಕೆ ಕಾಂಗ್ರೆಸ್ ದೂರು

    ಹೆಚ್‍ಡಿಕೆ ವಿರುದ್ಧ ಚುನಾವಣಾ ಆಯೋಗಕ್ಕೆ ಕಾಂಗ್ರೆಸ್ ದೂರು

    – ಮಹಿಳಾ ಆಯೋಗದಿಂದ ಮಾಜಿ ಸಿಎಂಗೆ ನೋಟಿಸ್

    ಬೆಂಗಳೂರು: ಹೆಣ್ಣು ಮಕ್ಕಳ ಬಗ್ಗೆ ನೀಡಿರುವ ಹೇಳಿಕೆ ಸಂಬಂಧ ಮಾಜಿ ಮುಖ್ಯಮಂತ್ರಿ ಹೆಚ್.ಡಿ ಕುಮಾರಸ್ವಾಮಿ (HD Kumaraswamy) ವಿರುದ್ಧ ಚುನಾವಣಾ ಆಯೋಗಕ್ಕೆ ಕಾಂಗ್ರೆಸ್ ದೂರು ನೀಡಿದರೆ, ಇತ್ತ ಮಹಿಳಾ ಆಯೋಗವು ನೋಟಿಸ್ ಜಾರಿಗೊಳಿಸಿದೆ.

    ಮಹಿಳೆಯರ ಬಗ್ಗೆ ಲಘುವಾಗಿ ಮಾತಾಡಿದ್ದಾರೆ. ಮಹಿಳೆಯರು ದಾರಿ ತಪ್ಪಿದ್ದಾರೆ ಅಂತಾ ಮಾತಾಡಿದ್ದಾರೆ. ಮನುವಾದಿ ರೀತಿಯಲ್ಲಿ ಮನಸ್ಸು ಬಂದಂತೆ ಮಾತಾಡಿದ್ದಾರೆ. ಹೀಗಾಗಿ ಕ್ರಮ ಕೈಗೊಳ್ಳುವಂತೆ ಕಾಂಗ್ರೆಸ್ (Congress) ನಿಯೋಗ ದೂರಿನಲ್ಲಿ ಒತ್ತಾಯಿಸಿದೆ.

    ನೋಟಿಸ್ ಜಾರಿ: 15 ದಿನದ ಒಳಗಡೆ ಉತ್ತರಿಸುವಂತೆ ಮಹಿಳಾ ಆಯೋಗ ಜಾರಿಗೊಳಿಸಿದ ನೋಟಿಸ್‍ನಲ್ಲಿ ತಿಳಿಸಲಾಗಿದೆ. ರಾಜಕಾರಣಿಗಳು ಮತದ ಸಲುವಾಗಿ ಆಕ್ಷೇಪಾರ್ಹ ಮಾತಾಡೋದು ಸರಿಯಲ್ಲ. ಹೆಣ್ಣಿನ ಬಗ್ಗೆ ಕೀಳು ಮಟ್ಟದಲ್ಲಿ ಮಾತಾಡುವವರು ಎಚ್ಚರಿಕೆ ವಹಿಸಬೇಕು ಎಂದು ಮಹಿಳಾ ಆಯೋಗದ ಅಧ್ಯಕ್ಷೆ ನಾಗಲಕ್ಷ್ಮೀ ಚೌಧರಿ ಹೇಳಿದ್ದಾರೆ. ಇದನ್ನೂ ಓದಿ: ಮಹಿಳೆಯರನ್ನ ಅವಮಾನಿಸಿಲ್ಲ – ಹೆಣ್ಣುಮಕ್ಕಳ ಹೇಳಿಕೆ ಬಗ್ಗೆ ವಿಷಾದ ವ್ಯಕ್ತಪಡಿಸಿದ ಕುಮಾರಸ್ವಾಮಿ

    ಹೆಚ್‍ಡಿಕೆ ವಿಷಾದ: ತಮ್ಮ ಹೇಳಿಕೆ ಕುರಿತು ವಿಷಾದ ವ್ಯಕ್ತಪಡಿಸಿದ ಹೆಚ್‍ಡಿಕೆ, ಇತ್ತೀಚೆಗೆ ನಾನು ತುಮಕೂರಿನಲ್ಲಿ ಚುನಾವಣೆ ಪ್ರಚಾರದಲ್ಲಿ ಭಾಗವಹಿಸಿದ್ದೆ. ಆ ಸಭೆಯಲ್ಲಿ ಹಲವಾರು ವಿಷಯಗಳನ್ನ ಪ್ರಸ್ತಾಪ ಮಾಡಿದ್ದೆ. ಆದರೆ ನಾನು ಹೆಣ್ಣುಮಕ್ಕಳನ್ನು ಅವಮಾನಿಸಿಲ್ಲ. ಮಹಿಳೆಯರ ಬದುಕು ಸರಿಪಡಿಸಬೇಕು ಅಂತ ಹೇಳಿದ್ದೇನೆ. ಗ್ಯಾರಂಟಿ ಕೊಟ್ಟು ಮಹಿಳೆಯರಿಗೆ ಅನ್ಯಾಯ ಮಾಡಿದ್ದಾರೆ ಅನ್ನೋದನ್ನ ಹೇಳಿದ್ದೇನೆ. ಆದರೆ ಕಾಂಗ್ರೆಸ್ ನಾಯಕರು ಅವರಿಗೆ ಬೇಕಾದಂತೆ ನನ್ನ ಹೇಳಿಕೆಯನ್ನ ಬಳಸಿಕೊಂಡಿದ್ದಾರೆ. ನನ್ನ ಹೇಳಿಕೆಯಿಂದ ಮಹಿಳೆಯರಿಗೆ ದುಃಖ ಆಗಿದ್ದರೆ ಈಗಲೂ ವಿಷಾದ ವ್ಯಕ್ತಪಡಿಸುತ್ತೇನೆ ಎಂದಿದ್ದರು.

  • ಮಹಿಳಾ ಆಯೋಗದಿಂದ ನಟ ದರ್ಶನ್ ಗೆ ನೋಟಿಸ್

    ಮಹಿಳಾ ಆಯೋಗದಿಂದ ನಟ ದರ್ಶನ್ ಗೆ ನೋಟಿಸ್

    ಹೆಣ್ಣು ಮಕ್ಕಳ ಬಗ್ಗೆ ವಿವಾದಾತ್ಮಕ ಹೇಳಿಕೆ ನೀಡಿದ್ದ ನಟ ದರ್ಶನ್ (Darshan) ಗೆ ರಾಜ್ಯ ಮಹಿಳಾ (Women’s Commission)ಆಯೋಗದಿಂದ ನೋಟಿಸ್ ಜಾರಿಯಾಗಿದೆ. ಶ್ರೀರಂಗಪಟ್ಟಣದಲ್ಲಿ ನಡೆದ ಬೆಳ್ಳಿ ಪರ್ವದಲ್ಲಿ ಹೆಣ್ಣಿನ ಬಗ್ಗೆ ಕೇವಲವಾಗಿ ಮಾತನಾಡಿದ್ದಾರೆ ಎನ್ನುವ ಕಾರಣಕ್ಕಾಗಿ ದೂರು ನೀಡಲಾಗಿತ್ತು.

    ದರ್ಶನ್ ಅವರಿಗೆ ನೀಡಿರುವ ನೋಟಿಸ್ (Notice) ನಲ್ಲಿ ನೋಟಿಸ್  ತಲುಪಿದ 10 ದಿನದಲ್ಲಿ ಬಂದು ವಿವರಣೆ ನೀಡಲು ಸೂಚನೆ ನೀಡಲಾಗಿದೆ. ಹೆಣ್ಣುಮಕ್ಕಳ ಬಗ್ಗೆ ಅವಹೇಳನಕಾರಿ ಮಾತುಗಳನ್ನು ಆಡಿದ್ದಾರೆ ಎಂದು ಮಹಿಳಾ ಆಯೋಗಕ್ಕೆ ದರ್ಶನ್ ವಿರುದ್ಧ ಜಯಶ್ರೀ (Jayashree) ಎನ್ನುವವರು ಲಿಖಿತ ರೂಪದಲ್ಲಿ ದೂರು ನೀಡಿದ್ದರು.

     

    ಹೆಣ್ಣಿನ ಬಗ್ಗೆ ಅವಹೇಳನಕಾರಿಯಾಗಿ ದರ್ಶನ್ ಮಾತನಾಡಿದ್ದಾರೆ. ಇವತ್ತು ಇವಳು ಇರುತ್ತಾಳೆ, ನಾಳೆ ಅವಳು ಬರ್ತಾಳೆ ಎಂದು ವೇದಿಕೆಯ ಮೇಲೆಯೇ ಹೇಳಿದ್ದಾರೆ. ಈ ಹೇಳಿಕೆಗೆ ವಿರೋಧಿಸಿ ಒಕ್ಕಲಿಗ ಗೌಡತಿಯರು ಆಕ್ಷೇಪ ವ್ಯಕ್ತ ಪಡಿಸಿದ್ದರು. ಹೆಣ್ಣು ಮಕ್ಕಳಿಗೆ ಇದು ಅವಮಾನ ಮಾಡುವಂಥದ್ದು ಎಂದು ಮಹಿಳಾ ಆಗೋಕ್ಕೆ ನೀಡಿದ ದೂರಿ (Complaint)ನಲ್ಲಿ ಉಲ್ಲೇಖ ಮಾಡಿದ್ದರು.

  • ಒಂದೇ ದಿನದಲ್ಲಿ ಮಹಿಳಾ ಆಯೋಗದ ದೂರುಗಳ ತನಿಖೆ ಪ್ರಾರಂಭಿಸಲು ಸೂಚನೆ: ಸಿಎಂ

    ಒಂದೇ ದಿನದಲ್ಲಿ ಮಹಿಳಾ ಆಯೋಗದ ದೂರುಗಳ ತನಿಖೆ ಪ್ರಾರಂಭಿಸಲು ಸೂಚನೆ: ಸಿಎಂ

    ಬೆಂಗಳೂರು: ಮಹಿಳಾ ಆಯೋಗದಿಂದ (Women’s Commission) ಸ್ವೀಕಾರವಾದ ದೂರುಗಳನ್ನು 7-8 ಗಂಟೆಗಳೊಳಗೆ ನೋಂದಣಿಯಾಗಿ ತನಿಖೆ (Investigation) ಪ್ರಾರಂಭಿಸಬೇಕೆಂದು ಡಿಜಿ ಅವರಿಗೆ ಸೂಚಿಸಲಾಗಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ (Basavaraj Bommai) ತಿಳಿಸಿದರು.

    ಸಿಎಂ ಶುಕ್ರವಾರ ಕರ್ನಾಟಕ ರಾಜ್ಯ ಮಹಿಳಾ ಆಯೋಗದ ರಜತ ಮಹೋತ್ಸವ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು. ಮಹಿಳಾ ಆಯೋಗಕ್ಕೆ ಸಮರ್ಥ ವಕೀಲರ ನೇಮಕ ಮಾಡಲಾಗುವುದು. ನಿರ್ಭಯ ಯೋಜನೆಯಡಿ ಜಾರಿ ಮಾಡಿರುವ ಕಾನೂನಿನ ಬಗ್ಗೆ ಪುರುಷರಿಗೆ ಜಾಗೃತಿ ಮೂಡಿಸುವುದು ಅಗತ್ಯ. ಅನ್ಯಾಯ ಆಗುವ ಮೂಲದಿಂದಲೇ ಅರಿವು ಮೂಡಿಸಬೇಕು ಎಂದರು.

    ಮಹಿಳಾ ಆಯೋಗಕ್ಕೆ ಇನ್ನಷ್ಟು ಅಧಿಕಾರದ ಜೊತೆಗೆ ಪರಿಣಾಮಕಾರಿಯಾಗಿ ಕೆಲಸ ಮಾಡಲು ಅಗತ್ಯ ಮೂಲಭೂತ ಸೌಕರ್ಯಗಳನ್ನು ಸರ್ಕಾರ ಒದಗಿಸಲು ಸಿದ್ಧವಿದೆ. ಇದಲ್ಲದೆ ಕಲ್ಯಾಣ ಕೆಲಸಗಳನ್ನು ಸರ್ಕಾರ ಕೈಗೊಂಡಿದೆ. ಮಹಿಳೆಯರ ಪೌಷ್ಟಿಕತೆ ಹೆಚ್ಚಿಸಲು ಕ್ರಮ ವಹಿಸಿದೆ. ಕೆಲಸ ಮಾಡುವ ಗರ್ಭಿಣಿಯರಿಗೆ ವಿಶೇಷ ಸ್ಥಳ ನಿಗದಿ, 5 ಪ್ರಮುಖ ನಗರಗಳಲ್ಲಿ ದೊಡ್ಡ ಪ್ರಮಾಣದಲ್ಲಿ ಮಹಿಳೆಯರಿಗೆ ಹಾಸ್ಟೆಲ್, ಐಐಎಂ ತರಬೇತಿ, ಎಲಿವೆಟ್ ಯೋಜನೆಯಡಿ ಸ್ಟಾರ್ಟ್ಅಪ್‌ಗೆ ಅವಕಾಶ, ಸ್ತ್ರೀಶಕ್ತಿ ಸಂಘಗಳಿಗೆ ಸ್ತ್ರೀ ಸಾಮಾರ್ಥ್ಯ ಯೋಜನೆ ಜಾರಿಗೆ ತಂದಿದ್ದೇವೆ ಎಂದು ತಿಳಿಸಿದರು.

    5 ಲಕ್ಷ ಮಹಿಳೆಯರಿಗೆ ಸ್ವಯಂ ಉದ್ಯೋಗ ನೀಡುವ ಕೆಲಸ ಮಾಡಲಾಗುತ್ತಿದೆ. 7,500 ಸ್ತ್ರೀಶಕ್ತಿ ಸಂಘಗಳಿವೆ. ಅಮೃತ ಯೋಜನೆಯಡಿ 1 ಲಕ್ಷ ರೂ. ನೀಡಿ ಸ್ವಯಂ ಉದ್ಯೋಗ ನೀಡಲಾಗಿದೆ. ಮಹಿಳೆಯರಿಗೆ ವಿಶೇಷ ಕ್ಲಾಸ್ ರೂಮ್ ನಿರ್ಮಾಣ, ಆಶಾ ಕಾರ್ಯಕರ್ತೆಯರು ಹಾಗೂ ಅಡುಗೆ ಮಾಡುವವರ ಗೌರವಧನ ಹೆಚ್ಚಳ ಮಾಡಿದ್ದೇವೆ. ಎನ್.ಪಿ.ಎಸ್ ಯೋಜನೆ ಮರುಪ್ರಾರಂಭವಾಗಿದೆ. ಈ ವರ್ಷ 4,000 ಹೊಸ ಅಂಗನವಾಡಿ ನಿರ್ಮಾಣವಾಗುತ್ತಿದೆ. ಮಹಿಳೆಯರಿಗೆ ಎಲ್ಲಾ ಹಂತದ ನೆರವು ಒದಗಿಸಲಾಗುತ್ತಿದೆ. ಮಹಿಳೆಯರು ಸಬಲರಾದರೆ ದೇಶ ಸಬಲವಾಗುತ್ತದೆ ಎಂದರು.

     

    ನಿರ್ಭಯ ಅಡಿ ಬೆಂಗಳೂರಿನಲ್ಲಿ 7,500 ಕೃತಕ ಬುದ್ಧಿಮತ್ತೆಯ ಸಿಸಿ ಟಿವಿ ಕ್ಯಾಮೆರಾ ಅಳವಡಿಸಲಾಗುತ್ತಿದೆ. ರಾತ್ರಿ ವೇಳೆ ಕೆಲಸ ಮುಗಿಸಿ ಬರುವ ಮಹಿಳೆಯರಿಗೆ ಇದು ಸುರಕ್ಷತೆ ಒದಗಿಸುತ್ತದೆ. ಮಹಿಳಾ ಪೊಲೀಸ್ ಒಳಗೊಂಡ ಪಿಂಕ್ ಹೊಯ್ಸಳ ವಾಹನಗಳು ಮಹಿಳೆಯರನ್ನು ರಕ್ಷಿಸಲು ಸಂಚರಿಸುತ್ತವೆ. ಅಲ್ಪಾವಧಿ ಸ್ವಯಂ ರಕ್ಷಣಾ ತರಬೇತಿಯನ್ನು ಶಾಲಾ ಕಾಲೇಜುಗಳ ಹಾಸ್ಟೆಲ್‌ಗಳಲ್ಲಿ ನೀಡಲಾಗುತ್ತಿದೆ ಎಂದರು.

    ಉಳಿತಾಯ ಸಂಸ್ಕೃತಿ:
    ವಿಶ್ವದಲ್ಲಿ ಎಲ್ಲಾ ರಾಷ್ಟ್ರಗಳು ಆರ್ಥಿಕ ಸಂಕಷ್ಟ ಎದುರಿಸುತ್ತಿವೆ. ಆದರೆ ಭಾರತದಲ್ಲಿ ಮಹಿಳೆಯರ ಉಳಿತಾಯ ಸಂಸ್ಕೃತಿಯಿಂದಾಗಿ, ಅಡುಗೆ ಮನೆಯಲ್ಲಿ ಜೀರಿಗೆ ಡಬ್ಬದಲ್ಲಿ ಇಡುವ ಹಣವೇ ದೇಶದ ಆರ್ಥಿಕತೆ ರಕ್ಷಣೆ ಮಾಡಿದೆ. ತಾಯಿ ಗರ್ಭದಿಂದ ಭೂತಾಯಿ ಗರ್ಭದವರೆಗೆ ಇರುವ ನಮ್ಮ ಬದುಕಿನಲ್ಲಿ ಮಹಿಳೆಯರಿಗೆ ಗೌರವ, ಸಮಾನತೆ ನೀಡಬೇಕು. ದೇಶ ಕಟ್ಟಲು ತಾಯಂದಿರನ್ನು ಸಶಕ್ತ ಮಾಡುವುದು ಬಹಳ ಮುಖ್ಯ. ಈ ಅರಿವಿನಿಂದ ನಮ್ಮ ಸರ್ಕಾರ ಕೆಲಸ ಮಾಡುತ್ತಿದೆ ಎಂದರು.

    ಮಹಿಳೆಯರ ಗೌರವ ಪುನಃ ಸ್ಥಾಪನೆಯಾಗಬೇಕು:
    ಒಂದೆಡೆ ಕಾನೂನು ರಚನೆ, ಶಿಸ್ತಿನ ಕ್ರಮ ತೆಗೆದುಕೊಳ್ಳುವುದು, ಆಯೋಗ ಕೆಲಸ ಮಾಡುವುದು ಇಂದಿನ ದಿನಗಳಲ್ಲಿ ಅತ್ಯಂತ ಅವಶ್ಯಕ. ಅದರ ಜೊತೆಗೆ ಸಮಾಜದಲ್ಲಿ ಮೌಲ್ಯಗಳ ಪರಿವರ್ತನೆ ಆಗುವುದು ಅಗತ್ಯವಿದೆ. ಸಮಾಜದಲ್ಲಿ ಮೊದಲು ಮಹಿಳೆಯರಿಗೆ ಸಿಗುತ್ತಿದ್ದ ಗೌರವ ಪುನಃ ಸ್ಥಾಪನೆಯಾಗಬೇಕು. ಇದಾದರೆ ಸಮಾನತೆ ಅವಕಾಶಗಳು ತೆರೆದುಕೊಳ್ಳುತ್ತವೆ. ಈ ಕೆಲಸವನ್ನು ಆಯೋಗ ಮಾಡಬೇಕು ಎಂದರು.

    ಕಠಿಣ ಕಾನೂನು ಕ್ರಮ:
    ಎಲ್ಲಾ ಸಮಾಜದಲ್ಲಿ ವ್ಯಾಗ್ರ ಚಿಂತನೆಗಳಿರುವ ವ್ಯಕ್ತಿಗಳಿದ್ದಾರೆ. ಅವರಿಗೆ ಉಗ್ರ ಶಿಕ್ಷೆ ವಿಧಿಸಬೇಕು. ಅಮಾನವೀಯವಾಗಿ ಮಹಿಳೆಯರ ಮೇಲೆ ಹಲ್ಲೆ, ಕೊಲೆ, ದೌರ್ಜನ್ಯ ಅತ್ಯಾಚಾರ ಆಗುತ್ತಿರುವುದನ್ನು ನಾವು ನೋಡುತ್ತಿದ್ದೇವೆ. ಇದು ರಾಕ್ಷಸ ಕೃತ್ಯ. ಉಗ್ರ ಕಾನೂನು ಇದ್ದರೂ, ಶಿಕ್ಷೆಗೆ ಒಳಪಟ್ಟಿದ್ದರೂ, ಆದರೆ ಆ ಕಾನೂನು ಅಪರಾಧಗಳನ್ನು ತಡೆಹಿಡಿಯಲು ಸಫಲವಾಗಿಲ್ಲ. ಸಾಮಾಜಿಕ ಚಿಂತನೆ ಬದಲಾವಣೆಯ ಜೊತೆಗೆ ಕಠಿಣ ಕಾನೂನು ಕ್ರಮ ಕೂಡ ಅವಶ್ಯಕ. ಮಹಿಳಾ ಆಯೋಗಕ್ಕೆ ಶಕ್ತಿ ತುಂಬುವ ಕೆಲಸ ಆಗಬೇಕು ಎಂದರು. ಇದನ್ನೂ ಓದಿ: ಹಿರಿಯ ನಟ ದ್ವಾರಕೀಶ್‌ಗೆ ಗೌರವ ಡಾಕ್ಟರೇಟ್

    ಜನ್ಮಪೂರ್ವದ ಸಂಬಂಧ:
    ಈ ಭೂಮಿ ಮೇಲೆ ಜನ್ಮ ಪೂರ್ವದ ಸಂಬಂಧ ತಾಯಿಯೊಂದಿಗೆ ಇರುತ್ತದೆ. ತಾಯಿತನ ಎಲ್ಲಕ್ಕಿಂತ ಶ್ರೇಷ್ಠ. ತಾಯಿಯ ಪ್ರೀತಿ ಮಿತಿ ಇಲ್ಲದ್ದು, ನೂರಕ್ಕೆ ನೂರು ಶುದ್ಧವಾಗಿರುತ್ತದೆ. ಹೀಗಾಗಿ ಹೆಣ್ಣು ಮಕ್ಕಳು ಶ್ರೇಷ್ಠ ಎಂದರು.

    ಸಮಾನತೆ:
    ಹೆಣ್ಣಿಗೆ ನಿಸರ್ಗ, ಪುರಾಣ, ಇತಿಹಾಸ ದೊಡ್ಡ ಸ್ಥಾನ ಕೊಟ್ಟಿದ್ದರೂ ಸಮಾಜ ಕೊಡುತ್ತಿಲ್ಲ. ಸಮಾಜ ಯಾವಾಗ ಮಹಿಳೆಯರಿಗೆ ಗೌರವ, ಸಮಾನತೆ ಕೊಡುತ್ತದೆಯೋ ಅಂದು ಮಹಿಳೆಗೆ ಸಮಾನ ಅವಕಾಶಗಳು ದೊರೆಯುತ್ತವೆ ಎಂದರು.

    ಈ ಸಂದರ್ಭದಲ್ಲಿ ಕೇಂದ್ರ ಕೃಷಿ ಖಾತೆ ರಾಜ್ಯ ಸಚಿವೆ ಶೋಭಾ ಕರಂದ್ಲಾಜೆ, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವ ಹಾಲಪ್ಪ ಆಚಾರ್, ಶಾಸಕಿ ರೂಪಾಲಿ ನಾಯಕ್, ರಾಷ್ಟ್ರೀಯ ಮಹಿಳಾ ಆಯೋಗದ ಅಧ್ಯಕ್ಷೆ ರೇಖಾ ಶರ್ಮಾ, ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷೆ ಪ್ರಮೀಳಾ ನಾಯ್ಡು, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಕಾರ್ಯದರ್ಶಿ ಮಂಜುಳಾ ಹಾಗೂ ಮತ್ತಿತರರು ಹಾಜರಿದ್ದರು. ಇದನ್ನೂ ಓದಿ: ಗುತ್ತಿಗೆದಾರರ ಸಂಘದಲ್ಲಿ ಒಳ ರಾಜಕೀಯ – ಇಕ್ಕಟ್ಟಿನಲ್ಲಿ ಇಂಧನ ಇಲಾಖೆ

    Live Tv
    [brid partner=56869869 player=32851 video=960834 autoplay=true]

  • ಡೇಟಿಂಗ್ ಆ್ಯಪ್, ಲೀವ್ ಇನ್ ಟುಗೆದರ್ ಹಾವಳಿ- ಕಾಲೇಜುಗಳಲ್ಲಿ ಮಹಿಳಾ ಆಯೋಗದಿಂದ ಸ್ಪೆಷಲ್ ಕ್ಲಾಸ್

    ಡೇಟಿಂಗ್ ಆ್ಯಪ್, ಲೀವ್ ಇನ್ ಟುಗೆದರ್ ಹಾವಳಿ- ಕಾಲೇಜುಗಳಲ್ಲಿ ಮಹಿಳಾ ಆಯೋಗದಿಂದ ಸ್ಪೆಷಲ್ ಕ್ಲಾಸ್

    ಬೆಂಗಳೂರು: ದೆಹಲಿಯಲ್ಲಿ ಶ್ರದ್ಧಾ ಬೀಭತ್ಸ ಹತ್ಯೆಯ ಬಳಿಕ ಡೇಟಿಂಗ್ ಆಪ್ ಹಾವಳಿ ಹಾಗೂ ಲೀವ್‍ಇನ್ ರಿಲೇಷನ್‍ಶಿಪ್ (Live In Relationship) ವಿಚಾರದಲ್ಲಿ ಯುವ ಜನ ಹಾದಿ ತಪ್ತಾ ಇರೋದು ಗೊತ್ತಾಗುತ್ತಿದೆ. ಕರ್ನಾಟಕದ ಪರಿಸ್ಥಿತಿಯೂ ಇದಕ್ಕೆ ಭಿನ್ನವಾಗಿಲ್ಲ. ಹೀಗಾಗಿ ಮಹಿಳಾ ಆಯೋಗ (Commission for Women) ಫೀಲ್ಡ್ ಗಿಳಿದಿದೆ.

    ದೆಹಲಿಯ ಶ್ರದ್ದಾ ವಿಕಾಸ್ ವಾಲ್ಕರ್ ಹತ್ಯೆ ಪ್ರಕರಣ ದೇಶವನ್ನೇ ಬೆಚ್ಚಿಬೀಳಿಸಿದೆ. ಕಿರಾತಕನ ಜೊತೆ ಡೇಟಿಂಗ್ ಆಪ್ ಚಾಟಿಂಗ್, ಲೀವ್ ಇನ್ ರಿಲೇಷನ್‍ನಲ್ಲಿ ಇಲ್ಲದೇ ಇದ್ದಿದ್ದರೆ ಶ್ರದ್ಧಾಳಿಗೆ ಈ ಪರಿಸ್ಥಿತಿ ಬರುತ್ತಾ ಇರಲಿಲ್ವೋನೋ. ಡೇಟಿಂಗ್ ಆಪ್‍ಗಳ ಮೂಲಕ ಮುಖವಾಡ ಧರಿಸಿಕೊಂಡಿರುವ ಇಂತಹ ಕ್ರಿಮಿಗಳ ಕಾಟದಿಂದ, ನರರಾಕ್ಷಸರ ಜೊತೆ ಲೀವ್ ಇನ್ ರಿಲೇಷನ್‍ನಲ್ಲಿರೋದ್ರಿಂದ ಅದೆಷ್ಟೋ ಹುಡ್ಗೀರ ಬದುಕು ಬರ್ಬಾದ್ ಆಗಿದೆ. ಕರ್ನಾಟಕದಲ್ಲಿ ಅದರಲ್ಲೂ ನಗರ ಪ್ರದೇಶದಲ್ಲಿ ಈ ಆಪ್‍ಗಳ ರಿಲೇಷನ್‍ಶಿಪ್‍ನ ವಿಷವರ್ತುಲದಲ್ಲಿ ಹೆಣ್ಣುಮಕ್ಕಳು ಸಿಕ್ಕಿಹಾಕಿಕೊಂಡಿದ್ದಾರೆ. ಹೀಗಾಗಿ ಜಾಗೃತಿಗಾಗಿ ಕರ್ನಾಟಕ ಮಹಿಳಾ ಆಯೋಗ ಈಗ ಫೀಲ್ಡ್ ಗಿಳಿದಿದೆ. ಇದನ್ನೂ ಓದಿ: ಇಸ್ಲಾಂಗೆ ಮತಾಂತರವಾಗಲು ನಿರಾಕರಿಸಿದ್ದಕ್ಕೆ ಗೆಳತಿಯನ್ನು 4ನೇ ಮಹಡಿಯಿಂದ ಎಸೆದು ಹತ್ಯೆಗೈದ

    ಕಾಲೇಜುಗಳಲ್ಲಿ `ಜಾಗೃತಿ’ ಕ್ಲಾಸ್: ರಾಜ್ಯಾದ್ಯಂತ ಕಾಲೇಜುಗಳಲ್ಲಿ ಮಹಿಳಾ ಆಯೋಗದ ಟೀಂಗಳಿಂದ ಸ್ಪೆಷಲ್ ಕ್ಲಾಸ್ ನಡೆಸಲಾಗುತ್ತೆ. ಸೋಷಿಯಲ್ ಮೀಡಿಯಾದ ಬಳಕೆಯ ಬಗ್ಗೆ ಜಾಗೃತಿ ಮೂಡಿಸಲಾಗುತ್ತೆ. ಜೊತೆಗೆ ಸ್ವಾವಲಂಬಿ ಬದುಕಿನ ಬಗ್ಗೆ ತರಗತಿಗಳಲ್ಲಿ ಹೇಳಿಕೊಡಲಾಗುತ್ತೆ. ಇತ್ತೀಚಿನ ದಿನದಲ್ಲಿ ಮಹಿಳೆಯರ ಮೇಲಿನ ದೌರ್ಜನ್ಯ, ಲೀವ್ ಇನ್ ರಿಲೇಷನ್‍ಗಳಿಂದ ಆಗಬಹುದಾದ ತೊಡಕಿನ ಬಗ್ಗೆ ವಿವರಣೆ ನೀಡಲಾಗುತ್ತೆ. ಈ ರೀತಿಯ ಆ್ಯಪ್‍ಗಳಿಂದ ಆಗಲಿರುವ ತೊಂದರೆಯ ಬಗ್ಗೆ ತಜ್ಞರನ್ನು ಕರೆಸಿ ವಿಶೇಷ ತರಗತಿ ನಡೆಸಲಾಗುತ್ತೆ. ಕಾಲೇಜು ಮಾತ್ರವಲ್ಲದೇ ಮಹಿಳಾ ಉದ್ಯೋಗಿಗಳು ಇರುವ ಸಂಸ್ಥೆಯಲ್ಲೂ ಕೂಡ ಜಾಗೃತಿ ತರಗತಿ ನಡೆಸಲಾಗುತ್ತದೆ.

    ಈಗಾಗಲೇ ರಾಜ್ಯದಲ್ಲಿ ಲಿವ್ ಇನ್ ರಿಲೇಷನ್ ಶಿಪ್‍ನಿಂದಾಗಿ ಸಾಕಷ್ಟು ಮಹಿಳೆಯರು ತೊಂದರೆ ಅನುಭವಿಸಿದ್ದು ಮಹಿಳಾ ಆಯೋಗದ ಮೆಟ್ಟಿಲೇರಿದ್ದಾರೆ. ಜೊತೆಗೆ ಕಾಲೇಜ್ ಓದುವ ವಿದ್ಯಾರ್ಥಿಗಳು ಈ ಆಪ್‍ಗಳಿಗೆ ಆಡಿಕ್ಟ್ ಆಗಿರೋದ್ರಿಂದ ಇದ್ರಿಂದ ಹೊರಬರುವ ಬಗ್ಗೆ ಕೂಡ ಹೆಚ್ಚಿನ ಜಾಗೃತಿ ಅತ್ಯಗತ್ಯವಾಗಿದೆ.

    Live Tv
    [brid partner=56869869 player=32851 video=960834 autoplay=true]

  • ಸೆಕ್ಯೂರಿಟಿ ಕಾಲರ್ ಹಿಡಿದು ಎಳೆದಾಡಿದ ಮಹಿಳೆ – ರಂಪಾಟದ ವೀಡಿಯೋ ವೈರಲ್

    ಸೆಕ್ಯೂರಿಟಿ ಕಾಲರ್ ಹಿಡಿದು ಎಳೆದಾಡಿದ ಮಹಿಳೆ – ರಂಪಾಟದ ವೀಡಿಯೋ ವೈರಲ್

    ಲಕ್ನೋ: ಸೆಕ್ಯೂರಿಟಿ ಒಬ್ಬರು ಗೇಟ್ ಬಾಗಿಲು ತೆಗೆಯೋದು ತಡವಾಗಿದ್ದಕ್ಕೇ ಕುಡಿದ ಮತ್ತಿನಲ್ಲಿದ್ದ ಮಹಿಳೆ ಸಿಬ್ಬಂದಿಯ ಕಾಲರ್‌ಪಟ್ಟಿ ಹಿಡಿದು ಎಳೆದಾಡಿದ್ದಾಳೆ. ಬಾಯಿಗೆ ಬಂದಂತೆ ಬೈದಿದ್ದು, ಸಮುದಾಯವನ್ನೂ ನಿಂದಿಸಿದ್ದಾಳೆ.

    ಸೆಕ್ಯೂರಿಟಿ ಕಾಲರ್ ಹಿಡಿದು ಎಳೆದಾಡಿ ತನ್ನ ದರ್ಪ ತೋರಿಸಿದ್ದು, ಹಲ್ಲೆಗೂ ಮುಂದಾಗಿರುವ ಘಟನೆ ನೋಯ್ಡಾದ ಜೇಪೆ ಗ್ರೂಪ್ ಸೊಸೈಟಿ ಠಾಣಾ ವ್ತಾಪ್ತಿಯಲ್ಲಿ ಘಟನೆ ನಡೆದಿದೆ. ಇದನ್ನೂ ಓದಿ: ಸಿನಿಮಾ ನೋಡಿಕೊಂಡು ಬರುತ್ತಿದ್ದಾಗ ಭೀಕರ ಅಪಘಾತ – ನವ ವಿವಾಹಿತೆ ಸ್ಥಳದಲ್ಲೇ ಸಾವು, ಪತಿ ಗಂಭೀರ

    ಗೇಟ್ ಬಾಗಿಲು ತೆಗೆಯಲು ವಿಳಂಬ ಮಾಡಿದ ಕಾರಣಕ್ಕೆ ಮಹಿಳೆ ಸೆಕ್ಯೂರಿಟಿ ಗಾರ್ಡ್‌ಗೆ ಬಾಯಿಗೆ ಬಂದಂತೆ ನಿಂಧಿಸಿದ್ದಾಳೆ. ಅಲ್ಲದೇ ಕೊರಳ ಪಟ್ಟಿ ಹಿಡಿದು ಎಳೆದಾಡಿದ್ದಾಳೆ. ಇದೇ ವೇಳೆ ಮಹಿಳೆಯರಿಗೆ ಗೌರವಿಸುವುದನ್ನು ಕಲಿಯಿರಿ ಎಂದು ಉಪದೇಶ ಮಾಡಿದ್ದಾಳೆ. ಜೊತೆಗೆ ಬಿಹಾರದ ಸಮುದಾಯವನ್ನೂ ನಿಂದಿಸಿದ್ದಾಳೆ. ಇದನ್ನೂ ಓದಿ: ಯೋಗಿ ಆದಿತ್ಯನಾಥ್‌ಗೆ ಜೀವ ಬೆದರಿಕೆ- ಶಿರಚ್ಛೇದನ ಮಾಡುವುದಾಗಿ ಫೇಸ್‍ಬುಕ್‍ನಲ್ಲಿ ಪೋಸ್ಟ್

    ವೀಡಿಯೋ ಗಮನಿಸಿದ ದೆಹಲಿ ಮಹಿಳಾ ಆಯೋಗದ ಆಯುಕ್ತರಾದ ಸ್ವಾತಿ ಮಾಲಿವಾಲ್ ಅವರು ನೋಯ್ಡಾದ ಪೊಲೀಸರಿಗೆ ಮಹಿಳೆಯ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವಂತೆ ಸೂಚಿಸಿದ್ದಾರೆ. ಮಹಿಳೆ ರಂಪಾಟ ಮಾಡಿರುವ ವೀಡಿಯೋ ಜಾಲತಾಣದಲ್ಲಿ ಹರಿದಾಡುತ್ತಿದ್ದಂತೆ ಮಹಿಳೆಯನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.

    Live Tv
    [brid partner=56869869 player=32851 video=960834 autoplay=true]

  • ಸಿಡಿ ಕೇಸ್‍ನಲ್ಲಿ ಎಂಟ್ರಿಯಾಯ್ತು ಮಹಿಳಾ ಆಯೋಗ – ಸ್ವಯಂ ಪ್ರೇರಿತ ದೂರು ದಾಖಲು

    ಸಿಡಿ ಕೇಸ್‍ನಲ್ಲಿ ಎಂಟ್ರಿಯಾಯ್ತು ಮಹಿಳಾ ಆಯೋಗ – ಸ್ವಯಂ ಪ್ರೇರಿತ ದೂರು ದಾಖಲು

    ಬೆಂಗಳೂರು: ಸಿಡಿ ಪ್ರಕರಣಕ್ಕೆ ಸಂಬಂಧಿಸಿದಂತೆ ಇದೀಗ ಮಹಿಳಾ ಆಯೋಗ ಎಂಟ್ರಿ ಕೊಟ್ಟಿದ್ದು, ಸ್ವಯಂ ಪ್ರೇರಿತ ದೂರು ದಾಖಲು ಮಾಡಿಕೊಂಡಿದೆ.

    ಈ ಸಂಬಂಧ ಸೋಮವಾರ ಪೊಲೀಸ್ ಆಯುಕ್ತರಿಗೆ ಹಾಗೂ ಗೃಹ ಸಚಿವರಿಗೆ ಮಹಿಳಾ ಆಯೋಗ ಪತ್ರ ಬರೆಯುತ್ತಿದೆ. ಯುವತಿಗೆ ಸೂಕ್ತ ರಕ್ಷಣೆ ಕೊಡುವಂತೆ ಪತ್ರದಲ್ಲಿ ತಿಳಿಸಲಾಗುತ್ತದೆ.

    ವೀಡಿಯೋದಲ್ಲಿ ಯುವತಿ ಆತ್ಮಹತ್ಯೆಯ ಬಗ್ಗೆ ಮಾತಾನಾಡಿರೋದ್ರಿಂದ ಮಹಿಳಾ ಆಯೋಗದಿಂದ ಧೈರ್ಯ ತುಂಬುವ ಕೆಲಸ ಮಾಡ್ತೀವಿ. ಈಗಾಗಲೇ ಸ್ವಯಂ ಪ್ರೇರಿತ ದೂರು ಕೂಡ ದಾಖಲು ಮಾಡಿಕೊಂಡಿದ್ದೇವೆ. ಯುವತಿಗೆ ಧೃತಿಗೆಡಬಾರದು ಆಕೆಗೆ ಸೂಕ್ತ ರಕ್ಷಣೆ ಕೊಡುವಂತೆ ಪತ್ರ ಬರೆಯುತ್ತೇವೆ. ಮಹಿಳಾ ಆಯೋಗ ಈ ಸಂತ್ರಸ್ತೆಯ ಜೊತೆ ಇರುತ್ತೆ ಎಂದು ಪಬ್ಲಿಕ್ ಟಿವಿಗೆ ಮಹಿಳಾ ಆಯೋಗದ ಅಧ್ಯಕ್ಷೆ ಪ್ರಮೀಳಾ ಮಾಹಿತಿ ನೀಡಿದ್ದಾರೆ.

    ಮಾರ್ಚ್ 2ರಂದು ಮಾಜಿ ಸಚಿವರ ಸಿಡಿ ಬಿಡುಗಡೆಗೊಂಡಿತ್ತು. ಈ ಸಿಡಿ ಹೊರಬರುತ್ತಿದ್ದಂತೆಯೇ ರಾಜ್ಯ ರಾಜಕೀಯದಲ್ಲಿ ಅಲ್ಲೋಲ ಕಲ್ಲೋಲವೇ ಸೃಷ್ಟಿಯಾಯಿತು. ಈ ಸಂಬಂಧ ಮಾತನಾಡಿದ್ದ ರಮೇಶ್, ನನ್ನದೇನೂ ತಪ್ಪಿಲ್ಲ. ನಾನು ಯಾವ ತಪ್ಪು ಮಾಡಿಲ್ಲ ಎಂದು ಹೇಳಿಕೆ ನೀಡಿದ್ದರು. ಅದಾದ ಬಳಿಕ ಸಿಡಿ ಬಗ್ಗೆ ಭಾರೀ ಚರ್ಚೆಯಾಗಿತ್ತು. ಶುಕ್ರವಾರವಷ್ಟೇ ಪ್ರಕರಣವನ್ನು ಎಸ್‍ಐಟಿ ತನಿಖೆಗೆ ಒಪ್ಪಿಸುವುದಾಗಿ ಗೃಹ ಸಚಿವರು ಬೊಮ್ಮಾಯಿ ಹೇಳಿದ್ದರು. ಅದರಂತೆ ನಿನ್ನೆ ತಾನೇ ಎಸ್‍ಐಟಿ ಟೀಂ ರಚನೆಗೊಂಡಿದ್ದು, ಮೊದಲ ದಿನವೇ ಐವರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿತ್ತು.

    ಎಸ್‍ಐಟಿ ತನಿಖೆಯ ಬೆನ್ನಲ್ಲೇ ಇತ್ತ ಇಂದು ಸಂಜೆ ರಮೇಶ್ ಜಾರಕಿಹೊಳಿ ಅವರು ತಮ್ಮ ಆಪ್ತ ನಾಗರಾಜ್ ಮೂಲಕ ಪ್ರಕರಣ ಸಂಬಂಧ ಸದಾಶಿವನಗರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದು, ಅಪರಿಚಿತರ ಮೇಲೆ ಎಫ್‍ಐಆರ್ ಕೂಡ ದಾಖಲಾಗಿದೆ. ಈ ಮಧ್ಯೆ ಯುವತಿ  ವೀಡಿಯೋ ಬಿಡುಗಡೆ ಮಾಡಿ, ನನಗೆ ಯಾವುದೇ ರಾಜಕೀಯ ನಾಯಕರ ಬೆಂಬಲವಿಲ್ಲ. ರಮೇಶ್ ಜಾರಕಿಹೊಳಿ ವೀಡಿಯೋ ರಿಲೀಸ್ ಮಾಡಿದ್ದಾರೆ. ಈ ವೀಡಿಯೋದಿಂದ ನನ್ನ ಮಾನ ಹರಾಜಾಗಿದೆ. ನನಗೆ ಕೆಲಸ ಕೊಡಿಸೋದಾಗಿ ಜಾರಕಿಹೊಳಿ ವಂಚಿಸಿದ್ದಾರೆ ಎಂದು ಗಂಭೀರ ಆರೋಪ ಮಾಡಿದ್ದಾಳೆ.

    ವೀಡಿಯೋ ಹೇಗೆ ಮಾಡಿದ್ದು ಅಂತಾ ನನಗೆ ಗೊತ್ತಿಲ್ಲ. ನನ್ನ ತಂದೆ ತಾಯಿ 2 ಬಾರಿ ಆತ್ಮಹತ್ಯೆಗೆ ಯತ್ನಿಸಿದ್ದಾರೆ. ನಾನು ಕೂಡ ಹಲವಾರು ಬಾರಿ ಆತ್ಮಹತ್ಯೆಗೆ ಯತ್ನಿಸಿದ್ದೇನೆ. ನನಗೆ, ನನ್ನ ಕುಟುಂಬಕ್ಕೆ ರಕ್ಷಣೆ ಕೊಡಿ ಎಂದು ಯುವತಿ ಗೃಹ ಸಚಿವರಿಗೆ ಮನವಿ ಮಾಡಿಕೊಂಡಿದ್ದಾಳೆ.

  • ಹಾಡಿನ ಸಾಹಿತ್ಯದಲ್ಲಿ ಮಹಿಳೆಯರಿಗೆ ಅಗೌರವ-ಸಂಕಷ್ಟದಲ್ಲಿ ಹನಿಸಿಂಗ್

    ಹಾಡಿನ ಸಾಹಿತ್ಯದಲ್ಲಿ ಮಹಿಳೆಯರಿಗೆ ಅಗೌರವ-ಸಂಕಷ್ಟದಲ್ಲಿ ಹನಿಸಿಂಗ್

    ಮುಂಬೈ: ರ‍್ಯಾಪರ್ ಹನಿಸಿಂಗ್ ವಿರುದ್ಧ ಪಂಜಾಬ್ ಮಹಿಳಾ ಆಯೋಗ ಕಾನೂನು ಕ್ರಮಕ್ಕೆ ಮುಂದಾಗಿದೆ. ಇತ್ತೀಚೆಗೆ ಹನಿಸಿಂಗ್ ರಚಿತ ‘ಮಖ್ನಾ’ ಹಾಡಿನ ಸಾಹಿತ್ಯ ಮಹಿಳೆಯರಿಗೆ ಅಗೌರವ ತೋರುತ್ತಿದೆ ಎಂದು ಆಯೋಗ ಆರೋಪಿಸಿದೆ.

    ಈ ಕುರಿತು ಸ್ವಯಂ ಪ್ರೇರಿತ ದೂರು ದಾಖಲಿಸಿಕೊಂಡಿರುವ ಪಂಜಾಬ್ ಮಹಿಳಾ ಆಯೋಗ ಕ್ರಿಮಿನಲ್ ಪ್ರಕರಣದಡಿ ಕೇಸ್ ದಾಖಲಿಸಿಕೊಳ್ಳಬೇಕೆಂದು ಪೊಲೀಸ್ ಮಹಾನಿರ್ದೇಶಕರಿಗೆ ಪತ್ರ ಬರೆದಿದೆ. ಈ ಕುರಿತು ಪ್ರತಿಕ್ರಿಯಿಸಿರುವ ಮಹಿಳಾ ಆಯೋಗದ ಅಧ್ಯಕ್ಷೆ ಮನಿಶಾ ಗುಲಾಟಿ, ಹಾಡಿನ ಸಾಹಿತ್ಯ ಅಶ್ಲೀಲತೆಯಿಂದ ಕೂಡಿದೆ. ಈ ಸಂಬಂಧ ಕಾನೂನಿನ ಅಡಿಯಲ್ಲಿ ಪೊಲೀಸ್ ತನಿಖೆ ನಡೆಯಬೇಕಿದೆ. ಹನಿಸಿಂಗ್ ಜೊತೆ ಗಾಯಕಿ ನೇಹಾ ಕಕ್ಕರ್ ಹಾಡಿಗೆ ಧ್ವನಿ ನೀಡಿದ್ದಾರೆ ಎಂದು ತಿಳಿಸಿದ್ದಾರೆ.

    ಪೊಲೀಸರು ಜುಲೈ 12ರೊಳಗೆ ಈ ಕುರಿತ ವರದಿಯನ್ನು ನೀಡಬೇಕೆಂದು ಮಹಿಳಾ ಆಯೋಗ ಕೇಳಿದೆ. ಈ ಹಾಡು ಬ್ಯಾನ್ ಮಾಡಬೇಕು. ಈ ರೀತಿಯ ಹಾಡುಗಳು ಸ್ವಾಸ್ಥ ಸಮಾಜಕ್ಕೆ ಕಪ್ಪು ಚುಕ್ಕೆ ಮತ್ತು ಅವಮಾನಕರವಾಗಿದೆ. ಈ ಸಾಹಿತ್ಯ ಸಮಾಜದ ಮೇಲೆ ಕೆಟ್ಟ ಪರಿಣಾಮ ಬೀರಲಿದೆ ಎಂದು ಮನಿಶಾ ಗುಲಾಟಿ ಆತಂಕ ವ್ಯಕ್ತಪಡಿಸಿದ್ದಾರೆ.

    2013ರಲ್ಲಿ ಹನಿಸಿಂಗ್ ರಚಿತ ‘ಮೈಂ ಹೂಂ ಬಲತ್ಕಾರಿ’ (ನಾನೋರ್ವ ಅತ್ಯಾಚಾರಿ) ಹಾಡು ಭಾರೀ ವಿವಾದಕ್ಕೊಳಗಾಗಿತ್ತು. ಈ ಹಾಡಿನ ಕುರಿತು ವಿಚಾರಣೆ ನಡೆಸಿದ್ದ ಹರ್ಯಾಣ ಮತ್ತು ಪಂಜಾಬ್ ಹೈ ಕೋರ್ಟ್, ಹನಿಸಿಂಗ್ ವಿರುದ್ಧ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಬೇಕೆಂದು ಪಂಜಾಬ್ ಸರ್ಕಾರಕ್ಕೆ ಆದೇಶಿಸಿತ್ತು.

    https://www.youtube.com/watch?v=kt4FDwUws28

  • ಬಿಜೆಪಿ ಮುಖಂಡನಿಂದ ಅಪ್ರಾಪ್ತೆ ಮೇಲೆ ಅತ್ಯಾಚಾರ -ಮಹಿಳಾ ಆಯೋಗದ ಅಧ್ಯಕ್ಷೆ ಭೇಟಿ

    ಬಿಜೆಪಿ ಮುಖಂಡನಿಂದ ಅಪ್ರಾಪ್ತೆ ಮೇಲೆ ಅತ್ಯಾಚಾರ -ಮಹಿಳಾ ಆಯೋಗದ ಅಧ್ಯಕ್ಷೆ ಭೇಟಿ

    ಬಳ್ಳಾರಿ: ಅಪ್ರಾಪ್ತ ಬಾಲಕಿಯ ಮೇಲೆ ಬಿಜೆಪಿ ಮುಖಂಡನೊಬ್ಬ ನಿರಂತರವಾಗಿ ಅತ್ಯಾಚಾರ ಮಾಡಿದ ಪ್ರಕರಣ ಇತ್ತೀಚೆಗೆ ಹೊಸಪೇಟೆ ತಾಲೂಕಿನಲ್ಲಿ ಬೆಳಕಿಗೆ ಬಂದಿತ್ತು. ಇದೀಗ ಮಹಿಳಾ ಆಯೋಗದ ಅಧ್ಯಕ್ಷೆ ನಾಗಲಕ್ಷ್ಮಿ ಬಾಯಿ ಅವರು ಸಂತ್ರಸ್ತೆಯನ್ನು ಭೇಟಿ ಮಾಡಿದ್ದಾರೆ.

    ನಾಗಲಕ್ಷ್ಮಿ ಬಾಯಿ ಅವರು ಸಂತ್ರಸ್ತೆಯ ಮನೆಗೆ ಹೋಗಿ ಕುಟುಂಬಸ್ಥರಿಗೆ ಸಾಂತ್ವಾನ ಹೇಳಿದ್ದಾರೆ. ಜೊತೆಗೆ ಸಂತ್ರಸ್ತೆಯ ಬಳಿ ಘಟನೆಯ ವಿವರದ ಬಗ್ಗೆ ಮಾಹಿತಿ ಕಲೆಹಾಕಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಿಸಿದ ಆರೋಪಿ ಚಂದ್ರಶೇಖರ ತಲೆಮರೆಸಿಕೊಂಡಿದ್ದನು. ಶನಿವಾರ ಆತನನ್ನು ಪೊಲೀಸರು ಬಂಧಿಸಿದ್ದಾರೆ.

    ಘಟನೆ ವಿವರ?
    ಪೋಷಕರು ನಡೆಸುತ್ತಿದ್ದ ಹೋಟೆಲಿನಲ್ಲಿ ಕೆಲಸ ಮಾಡುತ್ತಿದ್ದ ಬಾಲಕಿಯು ತಾಪಂ ಮಾಜಿ ಸದಸ್ಯ ಚಂದ್ರಶೇಖರನ ಮನೆಗೆ ಟೀ ಕಾಫಿ ಹಾಗೂ ಸಣ್ಣ ಪುಟ್ಟ ವಸ್ತುಗಳನ್ನ ತಂದುಕೊಟ್ಟು ಹೋಗುತ್ತಿದ್ದಳು.

    ಈ ವೇಳೆ 14 ವರ್ಷ ಬಾಲಕಿಯ ಮೇಲೆ ನಿರಂತರವಾಗಿ ಅತ್ಯಾಚಾರ ಮಾಡಿದ್ದನು. ಬಾಲಕಿ ಗರ್ಭಿಣಿಯಾದ ನಂತರ ಈ ಪ್ರಕರಣ ಬೆಳಕಿಗೆ ಬಂದಿತ್ತು. ಈ ಹಿನ್ನೆಲೆಯಲ್ಲಿ ಆರೋಪಿ ಚಂದ್ರಶೇಖರನ ಮೇಲೆ ಪೋಕ್ಸೋ ಕಾಯ್ದೆಯ ಅಡಿ ದೂರು ದಾಖಲಾಗಿತ್ತು. ದೂರು ದಾಖಲಾದ ನಂತರ ಇಂದು ಮಹಿಳಾ ಆಯೋಗದ ಅಧ್ಯಕ್ಷೆ ನಾಗಲಕ್ಷ್ಮಿ ಬಾಯಿ ಸಂತ್ರಸ್ತೆಯ ಮನೆಗೆ ಭೇಟಿ ನೀಡಿ ಮಾಹಿತಿ ಕಲೆ ಹಾಕಿದ್ದಾರೆ.