Tag: womens

  • ಎರಡೂ ಪಟ್ಟಿ ಸೇರಿ 6 ಮಹಿಳೆಯರಿಗೆ ಕಾಂಗ್ರೆಸ್ ಟಿಕೆಟ್

    ಎರಡೂ ಪಟ್ಟಿ ಸೇರಿ 6 ಮಹಿಳೆಯರಿಗೆ ಕಾಂಗ್ರೆಸ್ ಟಿಕೆಟ್

    ಬೆಂಗಳೂರು: ಲೋಕಸಭಾ ಚುನಾವಣೆಗೆ (Lok Sabha Election) ಸಂಬಂಧಿಸಿದಂತೆ ಕಾಂಗ್ರೆಸ್ (Congress) ಕರ್ನಾಟಕದ 2ನೇ ಪಟ್ಟಿ ಬಿಡುಗಡೆ ಮಾಡಿದ್ದು, ಒಟ್ಟು 17 ಮಂದಿ ಅಭ್ಯರ್ಥಿಗಳಿಗೆ ಟಿಕೆಟ್ ಘೋಷಣೆಯಾಗಿದೆ. ಕರ್ನಾಟಕದಲ್ಲಿ  (Karnataka) ಎರಡೂ ಪಟ್ಟಿ ಸೇರಿ ಒಟ್ಟು 6 ಮಹಿಳೆಯರು (Women) ಟಿಕೆಟ್ ಗಿಟ್ಟಿಸಿಕೊಂಡಿದ್ದಾರೆ.

    ಮೊದಲ ಪಟ್ಟಿಯಲ್ಲಿ ಶಿವಮೊಗ್ಗ ಕ್ಷೇತ್ರಕ್ಕೆ ಕಾಂಗ್ರೆಸ್ ಅಭ್ಯರ್ಥಿಯಾಗಿ ಗೀತಾ ಶಿವರಾಜ್‌ಕುಮಾರ್ ಹೆಸರು ಘೋಷಣೆ ಆಗಿತ್ತು. ಇದೀಗ ಎರಡನೇ ಕಾಂಗ್ರೆಸ್ ಲಿಸ್ಟ್‌ನಲ್ಲಿ ಸೌಮ್ಯಾ ರೆಡ್ಡಿ, ಪ್ರಭಾ ಮಲ್ಲಿಕಾರ್ಜುನ, ಅಂಜಲಿ ಲಿಂಬಾಳ್ಕರ್, ಸಂಯುಕ್ತಾ ಪಾಟೀಲ್ ಹಾಗೂ ಪ್ರಿಯಾಂಕ ಜಾರಕಿಹೊಳಿಗೆ ಟಿಕೆಟ್ ಘೋಷಣೆಯಾಗಿದೆ.

    ಯಾರು ಯಾವ ಕ್ಷೇತ್ರದಿಂದ ಸ್ಪರ್ಧೆ?
    ಬೆಂಗಳೂರು ದಕ್ಷಿಣ – ಸೌಮ್ಯ ರೆಡ್ಡಿ
    ದಾವಣಗೆರೆ – ಪ್ರಭಾ ಮಲ್ಲಿಕಾರ್ಜುನ
    ಉತ್ತರ ಕನ್ನಡ – ಅಂಜಲಿ ನಿಂಬಾಳ್ಕರ್
    ಬಾಗಲಕೋಟೆ – ಸಂಯುಕ್ತ ಪಾಟೀಲ್
    ಚಿಕ್ಕೋಡಿ – ಪ್ರಿಯಾಂಕ ಜಾರಕಿಹೋಳಿ
    ಶಿವಮೊಗ್ಗ – ಗೀತಾ ಶಿವರಾಜ್‌ಕುಮಾರ್

  • 60 ಸಾವಿರ ಮನೆಗಳಿಗೆ ಸೀರೆ, 20 ಮಕ್ಕಳಿಗೆ ಬಟ್ಟೆ – ಶಾಸಕ ಪ್ರದೀಪ್ ಈಶ್ವರ್ ಗಿಫ್ಟ್

    60 ಸಾವಿರ ಮನೆಗಳಿಗೆ ಸೀರೆ, 20 ಮಕ್ಕಳಿಗೆ ಬಟ್ಟೆ – ಶಾಸಕ ಪ್ರದೀಪ್ ಈಶ್ವರ್ ಗಿಫ್ಟ್

    ಚಿಕ್ಕಬಳ್ಳಾಪುರ: ಸದಾ ಒಂದಲ್ಲ ಒಂದು ವಿಚಾರವಾಗಿ ಸದ್ದು ಮಾಡುತ್ತಿರುವ ಚಿಕ್ಕಬಳ್ಳಾಪುರ ಕ್ಷೇತ್ರದ ಶಾಸಕ ಪ್ರದೀಪ್ ಈಶ್ವರ್ (Pradeep Eshwar) ಈಗ ಮತ್ತೊಂದು ವಿಚಾರವಾಗಿ ಸುದ್ದಿಯಲ್ಲಿದ್ದಾರೆ.

    ಕ್ಷೇತ್ರ ಸಂಚಾರ ಮಾಡುತ್ತಿರುವ ಪ್ರದೀಪ್ ಈಶ್ವರ್, ಚಿಕ್ಕಬಳ್ಳಾಪುರ ಕ್ಷೇತ್ರದ ಮಹಿಳೆಯರಿಗೆ ಸೀರೆಗಳ ಉಡುಗೊರೆ ನೀಡಿದ್ದಾರೆ. ವರಮಹಾಲಕ್ಷ್ಮಿ ಹಬ್ಬದ (Varamahalakshmi Festival) ಹೆಸರಲ್ಲಿ ಮಹಿಳೆಯರಿಗೆ ಬಾಗಿನ ಕೊಟ್ಟಿದ್ದಾರೆ. ಮನೆ-ಮನೆಗೆ ತೆರಳಿ ಮಹಿಳೆಯರಿಗೆ ಸೀರೆ, ಬಳೆ, ಹರಿಶಿನ, ಕುಂಕಮ ಬಾಗಿನ ಕೊಟ್ಟಿದ್ದಾರೆ. ಹಳ್ಳಿ-ಹಳ್ಳಿಗೂ ತೆರಳಿ ಸೀರೆ ವಿತರಣೆ (Saree Gift) ಮಾಡಲಿದ್ದಾರೆ. ಜೊತೆಗೆ 20 ಸಾವಿರ ಶಾಲಾ ಮಕ್ಕಳಿಗೆ ಬಟ್ಟೆ ನೀಡುವ ಕಾರ್ಯಕ್ರಮಕ್ಕೂ ಚಾಲನೆ ಕೊಟ್ಟಿದ್ದಾರೆ. ಇದನ್ನೂ ಓದಿ: ಕಾರ್ಯಕ್ರಮಕ್ಕೆ ಆಟೋ ಚಲಾಯಿಸಿಕೊಂಡು ಬಂದ ಶಾಸಕ ಪ್ರದೀಪ್ ಈಶ್ವರ್

    ಈ ವೇಳೆ ಮಾತನಾಡುತ್ತಾ ಪ್ರದೀಪ್ ಈಶ್ವರ್, 5 ವರ್ಷವೂ 60 ಸಾವಿರ ಮನೆಗಳಿಗೆ ವರಮಹಾಲಕ್ಷ್ಮಿ ಹಬ್ಬಕ್ಕೂ ಸೀರೆ ಕೊಡ್ತೀನಿ. 20 ಸಾವಿರ ಶಾಲಾ ಮಕ್ಕಳಿಗೆ ಪ್ರತಿವರ್ಷ ಬಟ್ಟೆ ಕೊಡಿಸ್ತೇನೆ. ರಸ್ತೆ ಅಭಿವೃದ್ಧಿಯನ್ನೂ ಮಾಡಿಸ್ತೀನಿ. ಏನೇ ಆದರೂ ನಾನಿದ್ದೇನೆ. ಒಂದೊಳ್ಳೆ ಕೆಲಸ ಮಾಡಬೇಕು ಅನ್ನೋದಷ್ಟೇ ನನ್ನ ಕನಸು ಅಂತಾ ಜನರಿಗೆ ಭರವಸೆ ನೀಡಿದ್ದಾರೆ. ಇದನ್ನೂ ಓದಿ: ಸುಧಾಕರ್ ನಮ್ಮೂರ ಹುಡ್ಗ, ಬೇರೆ ಕ್ಷೇತ್ರ ನೋಡಿಕೊಂಡ್ರೆ ಮುಂದಿನ ಸಲ ವಿಧಾನಸೌಧಕ್ಕೆ ಬರ್ತಾರೆ: ಪ್ರದೀಪ್ ಈಶ್ವರ್ ಟಾಂಗ್

    ಮಾಧ್ಯಮಗಳೊಂದಿಗೆ ಮಾತನಾಡಿ, ಒಂದು ಕಾಲದಲ್ಲಿ ಊಟ, ಬಟ್ಟೆಗೂ ಕಷ್ಟ ಇತ್ತು. ಕ್ಷೇತ್ರದ ಜನತೆ ನನ್ನನ್ನ ಅಣ್ಣ, ತಮ್ಮನ ತರ ಅಂದುಕೊಂಡು ಗೆಲ್ಲಿಸಿದ್ದಾರೆ. ನಾನೂ ಕೊಟ್ಟ ಮಾತಿನಂತೆ ನಡೆದುಕೊಳ್ಳುತ್ತೇನೆ. ಆದ್ದರಿಂದ 60 ಸಾವಿರ ಮನೆಗಳಿಗೆ ಸೀರೆ, 20 ಸಾವಿರ ಶಾಲೆ ಮಕ್ಕಳಿಗೆ ಬಟ್ಟೆ ಕೊಡುತ್ತಿದ್ದೇನೆ. ಐದು ವರ್ಷವೂ ಇದು ಮುಂದುವರಿಯುತ್ತೆ ಅಂತಾ ಭರವಸೆ ನೀಡಿದ್ದಾರೆ.

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ಭರ್ಜರಿ ‘ಶಕ್ತಿ’ ಪ್ರದರ್ಶನ – 126 ಕೋಟಿ ರೂ. ದಾಟಿತು ಟಿಕೆಟ್ ಮೌಲ್ಯ

    ಭರ್ಜರಿ ‘ಶಕ್ತಿ’ ಪ್ರದರ್ಶನ – 126 ಕೋಟಿ ರೂ. ದಾಟಿತು ಟಿಕೆಟ್ ಮೌಲ್ಯ

    ಬೆಂಗಳೂರು: ಕಾಂಗ್ರೆಸ್ (Congress) ಸರ್ಕಾರ ನೀಡಿರುವ ಐದು ಭರವಸೆಗಳಲ್ಲಿ ಶಕ್ತಿ ಯೋಜನೆ (Shakti Scheme) ಜಾರಿಗೆ ಬಂದಿದ್ದು, ಸರ್ಕಾರಿ ಬಸ್‌ಗಳಲ್ಲಿ ಮಹಿಳಾ (Women) ಪ್ರಯಾಣಿಕರ ಸಂಖ್ಯೆ ದಾಖಲೆ ಬರೆದಿದೆ.

    ಚುನಾವಣೆಗೂ ಮುನ್ನ ಕಾಂಗ್ರೆಸ್ ಪಕ್ಷ ಐದು ಗ್ಯಾರಂಟಿಗಳನ್ನು ಜಾರಿ ಮಾಡುವುದಾಗಿ ಘೋಷಿಸಿತ್ತು. ಕಾಂಗ್ರೆಸ್ ಅಧಿಕಾರಕ್ಕೆ ಬಂದ ಮೇಲೆ ಮಹಿಳಾ ಮಣಿಗಳಿಗಾಗಿ ಉಚಿತ ಬಸ್ ಪ್ರಯಾಣವನ್ನು ಜಾರಿ ಮಾಡಿದ್ದು, ರಾಜ್ಯದ ಎಲ್ಲಾ ಮಹಿಳೆಯರು ನಾ ಮುಂದು ತಾ ಮುಂದು ಎಂದು ಸರ್ಕಾರಿ ಬಸ್ಸಿನತ್ತ ಮುನ್ನುಗುತ್ತಿದ್ದಾರೆ. ಮಹಿಳೆಯರು ಉಚಿತವಾಗಿ ಸರ್ಕಾರಿ ಬಸ್ಸಿನಲ್ಲಿ ಪ್ರಯಾಣ ಬೆಳೆಸುತ್ತಿರುವ ಹಿನ್ನೆಲೆ ಸರ್ಕಾರಿ ಬಸ್‌ನಲ್ಲಿ ಮಹಿಳಾ ಪ್ರಯಾಣಿಕರ ಟಿಕೆಟ್‌ ಮೌಲ್ಯ  100 ಕೋಟಿ ದಾಟಿತು. ಇದನ್ನೂ ಓದಿ: ನಾವು ದರ ಏರಿಸುತ್ತೇವೆ – ರಾಜ್ಯ ಸರ್ಕಾರಕ್ಕೆ ಹೋಟೆಲ್‌ ಮಾಲೀಕರ ಸಂಘ ಎಚ್ಚರಿಕೆ

    ಶಕ್ತಿ ಯೋಜನೆಯಡಿಯಲ್ಲಿ 10 ದಿನಕ್ಕೆ 5 ಕೋಟಿಗೂ ಅಧಿಕ ಮಹಿಳೆಯರು ಸರ್ಕಾರಿ ಬಸ್ಸಿನಲ್ಲಿ ಉಚಿತ ಪ್ರಯಾಣ ಮಾಡುತ್ತಿದ್ದು, ಮಹಿಳಾ ಪ್ರಯಾಣಿಕರ ಟಿಕೆಟ್ ಮೌಲ್ಯ ಒಟ್ಟು 126 ಕೋಟಿ ರೂ. ದಾಟಿದೆ. ಅದರಲ್ಲೂ ಬಿಎಂಟಿಸಿ (BMTC) ಬಸ್‌ನಲ್ಲಿ ಅತಿ ಹೆಚ್ಚು ಮಹಿಳೆಯರು ಪ್ರಯಾಣಿಸುತ್ತಿದ್ದು, ಬಿಎಂಟಿಸಿ ಮತ್ತು ಕೆಎಸ್‌ಆರ್‌ಟಿಸಿ (KSRTC) ಬಸ್‌ಗಳಲ್ಲಿ ತಲಾ ಒಂದೂವರೆ ಕೋಟಿ ಮಹಿಳೆಯರು ಉಚಿತವಾಗಿ ಪ್ರಯಾಣಿಸುತ್ತಿದ್ದಾರೆ. ಇದನ್ನೂ ಓದಿ: 10 ಕೆಜಿ ಅಕ್ಕಿಗೆ ದೇವರ ಮೇಲೆ ಭಾರ ಹಾಕಿದ ಮುನಿಯಪ್ಪ

    ಕಳೆದ 10 ದಿನದಲ್ಲಿ ಯಾವ ನಿಗಮದಿಂದ ಎಷ್ಟು ಮಹಿಳೆಯರ ಉಚಿತ ಸಂಚಾರ?
    ಕೆಎಸ್‌ಆರ್‌ಟಿಸಿ – 1,57,48,205
    ಬಿಎಂಟಿಸಿ – 1,80,81,216
    ವಾಕರಸಾ – 1,30,97,057
    ಕಕರಸಾ – 70,80,646

  • ಸರ್ಕಾರಿ ಬಸ್ ಕಂಡಕ್ಟರ್‌ಗೆ ಮಹಿಳೆಯರಿಂದ ತರಾಟೆ – ವೀಡಿಯೋ ವೈರಲ್

    ಸರ್ಕಾರಿ ಬಸ್ ಕಂಡಕ್ಟರ್‌ಗೆ ಮಹಿಳೆಯರಿಂದ ತರಾಟೆ – ವೀಡಿಯೋ ವೈರಲ್

    ಚಿತ್ರದುರ್ಗ: ಸಾರಿಗೆ ಬಸ್ ನಿರ್ವಾಹಕನನ್ನು ಮಹಿಳೆಯರು ತರಾಟೆಗೆ ತೆಗೆದುಕೊಂಡಿರುವ ಘಟನೆ ಧರ್ಮಸ್ಥಳದಲ್ಲಿ (Dharmasthala) ನಡೆದಿದ್ದು, ಘಟನೆಯ ವೀಡಿಯೋ ಎಲ್ಲೆಡೆ ವೈರಲ್ ಆಗುತ್ತಿದೆ.

    ರಾಜ್ಯ ಸರ್ಕಾರ ಸರ್ಕಾರಿ ಬಸ್‌ನಲ್ಲಿ ಮಹಿಳೆಯರಿಗೆ ಉಚಿತ ಪ್ರಯಾಣ ಗ್ಯಾರಂಟಿ ನೀಡಿರುವ ಹಿನ್ನೆಲೆಯಲ್ಲಿ ಪುಣ್ಯಕ್ಷೇತ್ರಗಳಲ್ಲಿ ಒಂದಾಗಿರುವ ಧರ್ಮಸ್ಥಳ ಮಂಜುನಾಥನ ಸನ್ನಿಧಿಗೆ ಭಾನುವಾರ ಮಹಿಳೆಯರು ಹೇರಳವಾಗಿ ಧಾವಿಸಿದ್ದರು. ಈ ವೇಳೆ ಮಹಿಳೆಯರಿಗೆ ಅವಕಾಶ ನೀಡದೆ ಸಾರಿಗೆ ಬಸ್ ಸಂಚಾರ ಮಾಡುತ್ತಿದೆ ಎಂಬ ಆರೋಪದ ಮೇರೆಗೆ ಮಹಿಳೆಯರು ಸಾರಿಗೆ ಬಸ್‌ನ ಕಂಡಕ್ಟರ್ (Bus Conductor) ಅನ್ನು ತರಾಟೆಗೆ ತೆಗೆದುಕೊಂಡಿದ್ದಾರೆ. ಇದನ್ನೂ ಓದಿ: ಬೆಂಗ್ಳೂರಲ್ಲಿ ಮತ್ತೆ ಬುಲ್ಡೋಜರ್ ಸದ್ದು – ರಾಜಕಾಲುವೆ ಒತ್ತುವರಿ ತೆರವು ವೇಳೆ ಭಾರೀ ಹೈಡ್ರಾಮಾ

    ಉಚಿತ ಪ್ರಯಾಣ ಎಂದು ಮಹಿಳೆಯರು ಸಾರಿಗೆ ಬಸ್‌ನಲ್ಲಿ ಪುಣ್ಯಕ್ಷೇತ್ರಗಳಿಗೆ ಪ್ರವಾಸ ಆರಂಭಿಸಿದ್ದಾರೆ. ಅದೇ ರೀತಿ ಮಹಿಳಾಮಣಿಗಳು ಧರ್ಮಸ್ಥಳಕ್ಕೂ ಭೇಟಿ ನೀಡಿದ್ದಾರೆ. ಈ ವೇಳೆ ಧರ್ಮಸ್ಥಳದಿಂದ ಚಿತ್ರದುರ್ಗ (Chitradurga) ಮಾರ್ಗವಾಗಿ ಹೊಸಪೇಟೆಗೆ (Hospet) ಹೊರಟಿದ್ದ ಕೆಎಸ್‌ಆರ್‌ಟಿಸಿ (KSRTC) ಬಸ್ಸಿನ ತುಂಬಾ ಪುರುಷರನ್ನೇ ಹತ್ತಿಸಿಕೊಂಡಿದ್ದಾರೆ ಎಂಬ ಆರೋಪವನ್ನು ಹೊರಿಸಿ ಮಹಿಳೆಯರು ಕಂಡಕ್ಟರ್ ಮೇಲೆ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಇದನ್ನೂ ಓದಿ: 80 ಅಡಿಗೆ ತಲುಪಿದ ಕೆಆರ್‌ಎಸ್ ನೀರಿನ ಮಟ್ಟ – ಕುಡಿಯುವ ನೀರಿಗೆ ಶುರುವಾಗಿದೆ ಆತಂಕ

    ಕಾಂಗ್ರೆಸ್ ಸರ್ಕಾರ ಮಹಿಳೆಯರಿಗೆ ನೀಡಿರುವ ಉಚಿತ ಪ್ರಯಾಣ ಗ್ಯಾರಂಟಿಯಿಂದಾಗಿ ಬಸ್ ನಿರ್ವಾಹಕರು ಭಾರೀ ಸಮಸ್ಯೆ ಎದುರಿಸುವಂತಾಗಿದೆ. ಏಕಾಏಕಿ ಮಹಿಳೆಯರು ಸರ್ಕಾರಿ ಬಸ್‌ಗೆ ಮುಗಿಬೀಳುವುದರಿಂದ ಪ್ರಾಣಭಯದಿಂದ ಕರ್ತವ್ಯ ನಿರ್ವಹಿಸುವಂತಾಗಿದೆ ಎಂದು ಬಸ್ ನಿರ್ವಾಹಕರು ಆತಂಕ ಹೊರಹಾಕಿದ್ದು, ಸಿಬ್ಬಂದಿಯ ರಕ್ಷಣೆಗೆ ಸರ್ಕಾರ ಅಗತ್ಯ ಕ್ರಮ ಕೈಗೊಳ್ಳುವಂತೆ ನೌಕರರ ಸಂಘದ ಪದಾಧಿಕಾರಿಗಳು ಮನವಿ ಮಾಡಿದ್ದಾರೆ. ಇದನ್ನೂ ಓದಿ: ಫೋನ್‍ನಲ್ಲಿ ಮಾತನಾಡುತ್ತಾ ಬಸ್ ಓಡಿಸಿದ ಚಾಲಕ- 26 ಮಂದಿಗೆ ಗಾಯ, ಇಬ್ಬರು ಗಂಭೀರ

  • ಮಹಿಳೆಯರಿಗೆ ಉಚಿತ ಬಸ್ ಸಂಚಾರ ಭಾಗ್ಯ ಫಿಕ್ಸ್ – ಸಾರಿಗೆ ಇಲಾಖೆ ಲೆಕ್ಕಾಚಾರ ಏನು?

    ಮಹಿಳೆಯರಿಗೆ ಉಚಿತ ಬಸ್ ಸಂಚಾರ ಭಾಗ್ಯ ಫಿಕ್ಸ್ – ಸಾರಿಗೆ ಇಲಾಖೆ ಲೆಕ್ಕಾಚಾರ ಏನು?

    ಬೆಂಗಳೂರು: ಚುನಾವಣೆ ಮುನ್ನ ಕಾಂಗ್ರೆಸ್ (Congress) ಘೋಷಿಸಿದ್ದ ಗ್ಯಾರಂಟಿಗಳನ್ನ ಕೊಟ್ಟ ಮಾತಿನಂತೆ ಈಡೇರಿಸಲು ಸರ್ಕಾರ ಮುಂದಾಗಿದೆ. ರಾಜ್ಯದ ಎಲ್ಲಾ ಹೆಣ್ಮಕ್ಕಳಿಗೂ ಷರತ್ತು ರಹಿತವಾಗಿ ಕೆಎಸ್‌ಆರ್‌ಟಿಸಿ (KSRTC) ಮತ್ತು ಬಿಎಂಟಿಸಿಯ (BMTC) ಸಾಮಾನ್ಯ ಬಸ್‌ಗಳಲ್ಲಿ ಸಂಚಾರಕ್ಕೆ ಮುಕ್ತ ಅವಕಾಶ ನೀಡುವ ಬಗ್ಗೆ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ (Ramalinga Reddy) ಘೋಷಣೆ ಮಾಡಿದ್ದಾರೆ.

    ಬೆಂಗಳೂರಿನಲ್ಲಿ (Bengaluru) ಮಂಗಳವಾರ ಸಾರಿಗೆ ಇಲಾಖೆ ಅಧಿಕಾರಿಗಳ ಜೊತೆ ಸಚಿವರು ಸಭೆ ನಡೆಸಿದರು. ಯಾವ ಕಂಡೀಷನ್ಸ್, ಗೈಡ್‌ಲೈನ್ಸ್ ಇಲ್ಲ. ಕೆಲಸಕ್ಕೆ ಹೋಗೋರು, ಕೆಲಸಕ್ಕೆ ಹೋಗದೇ ಇರುವವರು, ಎಪಿಎಲ್, ಬಿಪಿಎಲ್ ಎಂಬ ತಾರತಮ್ಯ ಇಲ್ಲ. ಮಹಿಳೆಯರು ರಾಜ್ಯಾದ್ಯಂತ ಸಂಚರಿಸಬಹುದು ಎಂದು ರಾಮಲಿಂಗಾರೆಡ್ಡಿ ಸ್ಪಷ್ಟ ಪಡಿಸಿದ್ದಾರೆ. ಆದರೆ ಯಾವಾಗಿಂದ ಈ ಗ್ಯಾರಂಟಿ ಜಾರಿ ಅನ್ನೋದರ ಗುಟ್ಟನ್ನು ಮಾತ್ರ ಬಿಟ್ಟುಕೊಡಲಿಲ್ಲ. ಇದನ್ನೂ ಓದಿ: ರಾಜ್ಯದ ಎಲ್ಲ ಮಹಿಳೆಯರಿಗೆ ಉಚಿತ ಬಸ್‌ ಪ್ರಯಾಣ – ರಾಮಲಿಂಗಾರೆಡ್ಡಿ ಭರವಸೆ

    ಸಾರಿಗೆ ಇಲಾಖೆ ಲೆಕ್ಕ ಏನು?
    * ನಿತ್ಯ ಸರ್ಕಾರಿ ಬಸ್‌ಗಳಲ್ಲಿ ಸಂಚಾರ – 85 ಲಕ್ಷ ಮಂದಿ (ಅಂದಾಜು)
    * ನಿತ್ಯ ಸಂಚರಿಸುವ ಮಹಿಳೆಯರು – 43 ಲಕ್ಷ ಮಂದಿ (ಅಂದಾಜು)
    * ಉಚಿತ ಸಂಚಾರ ಘೋಷಣೆಯಿಂದ ಮಹಿಳಾ ಪ್ರಯಾಣಿಕರ ಸಂಖ್ಯೆ ಹೆಚ್ಚಬಹುದು

    ಸಾರಿಗೆ ಇಲಾಖೆಯ ಅಧಿಕಾರಿಗಳ ಜೊತೆ ಸಭೆ ನಡೆಸಿದ ಸಚಿವ ರಾಮಲಿಂಗಾರೆಡ್ಡಿ ಅವರಿಗೆ ಎಲ್ಲಾ ಜಿಲ್ಲೆಗಳಲ್ಲಿ ಪ್ರಯಾಣಿಸುತ್ತಿರುವವರ ಅಂಕಿ-ಅಂಶ ವಿವರವನ್ನ ನೀಡಲಾಗಿದೆ. ಆಯಾ ನಿಗಮಗಳಲ್ಲಿ ಪ್ರಯಾಣಿಕರೆಷ್ಟು ಅನ್ನೋ ಅಂಕಿ-ಅಂಶಗಳ ಸಂಪೂರ್ಣ ಮಾಹಿತಿಯನ್ನು ಸಚಿವರು ಪಡೆದಿದ್ದಾರೆ. ಸಾರಿಗೆ ನಿಗಮದಲ್ಲಿ ತೈಲಗಳಿಗೆ ಆಗುವ ವೆಚ್ಚಗಳ ಮಾಹಿತಿ, ಸಿಬ್ಬಂದಿಯ ವೇತನ ವೆಚ್ಚ ಹಾಗೂ ಆಗುವ ನಷ್ಟದ ಕುರಿತು ಸಚಿವರಿಗೆ ವಿವರವಾಗಿ ತಿಳಿಸಲಾಗಿದೆ. 4 ನಿಗಮಗಳು ಯಾವ ರೀತಿ ಕೆಲಸ ಮಾಡುತ್ತಿವೆ? ಯಾವ ಇಲಾಖೆಯ ಆದಾಯ ಹಾಗೂ ನಷ್ಟ ಎಷ್ಟು ಎಂಬ ಮಾಹಿತಿಯನ್ನು ಸಚಿವರು ಸಂಗ್ರಹಿಸಿದ್ದಾರೆ. ಇದನ್ನೂ ಓದಿ: ಐದರ ಪೈಕಿ ಮೂರು ಗ್ಯಾರಂಟಿ ಆರಂಭದಲ್ಲಿ ಜಾರಿ

    ಇಂದು (ಬುಧವಾರ) ಸಿಎಂ ಹಾಗೂ ಸಚಿವರ ಸಭೆ ನಡೆಯಲಿದೆ. ಜೂನ್ 1ಕ್ಕೆ ಕ್ಯಾಬಿನೆಟ್ ಸಭೆ ನಡೆಯಲಿದ್ದು, ಅಂದು ಮಹಿಳೆಯರ ಉಚಿತ ಪ್ರಯಾಣದ ಗ್ಯಾರಂಟಿ ಅಧಿಕೃತವಾಗಿ ಘೋಷಣೆಯಾಗಲಿದೆ. ಪ್ರಣಾಳಿಕೆಯಲ್ಲಿ ಹೇಳಿದಂತೆ ಎಲ್ಲಾ ಮಹಿಳೆಯರಿಗೂ ಉಚಿತ ಪ್ರಯಾಣ ಅಂತ ಸಚಿವರೇನೋ ಹೇಳಿದ್ದಾರೆ. ಆದರೆ ಯಾವಾಗಿನಿಂದ ಅನ್ನೋದು ಕ್ಯಾಬಿನೆಟ್ ಸಭೆ ಬಳಿಕ ಸ್ಪಷ್ಟವಾಗಲಿದೆ.

  • The Kerala Story ಬಂದ್ಮೇಲೆ ಇಸ್ಲಾಂಗೆ 32 ಸಾವಿರ ಮಹಿಳೆಯರ ಮತಾಂತರ – ಗಂಭೀರ ಆರೋಪ

    The Kerala Story ಬಂದ್ಮೇಲೆ ಇಸ್ಲಾಂಗೆ 32 ಸಾವಿರ ಮಹಿಳೆಯರ ಮತಾಂತರ – ಗಂಭೀರ ಆರೋಪ

    ತಿರುವನಂತಪುರಂ: ಅದಾ ಶರ್ಮಾ (Adah Sharma) ಮುಖ್ಯಭೂಮಿಕೆಯ ‘ದಿ ಕೇರಳ ಸ್ಟೋರಿ’ (The Kerala Story) ಸಿನಿಮಾ ಶುಕ್ರವಾರ ರಿಲೀಸ್ ಆಗಿದೆ. ಭರ್ಜರಿ ಪ್ರದರ್ಶನವನ್ನೂ ಕಾಣುತ್ತಿದೆ. ಮಲಯಾಳಂ, ಹಿಂದಿ, ತಮಿಳು ಮತ್ತು ತೆಲುಗು ಭಾಷೆಯಲ್ಲಿ ಸಿನಿಮಾ ಮೂಡಿ ಬಂದಿದೆ. ಈಗಾಗಲೇ ಅನೇಕರಿಂದ ಆಕ್ಷೇಪಕ್ಕೆ ಒಳಗಾಗಿರುವ ಈ ಸಿನಿಮಾದ ಕುರಿತು ಮತ್ತೊಂದು ಪರಿಣಾಮಕಾರಿ ಅಂಶ ಬೆಳಕಿಗೆ ಬಂದಿದೆ.

    ಕಳೆದ ವರ್ಷ ನವೆಂಬರ್‌ನಲ್ಲಿ ʻದಿ ಕೇರಳ ಸ್ಟೋರಿʼ ಟೀಸರ್‌ ಬಿಡುಗಡೆಯಾದ ನಂತರ ದೊಡ್ಡಮಟ್ಟದ ವಿವಾದ ಹುಟ್ಟುಹಾಕಿತ್ತು. ಟೀಸರ್‌ ಬಿಡುಗಡೆಯಾದ ನಂತರ ದಕ್ಷಿಣ ರಾಜ್ಯದಿಂದ 32 ಸಾವಿರ ಮಹಿಳೆಯರು ಇಸ್ಲಾಂಗೆ ಮತಾಂತರಗೊಂಡಿದ್ದಾರೆ. ಜೊತೆಗೆ ಇಸ್ಲಾಮಿಕ್‌ ಸ್ಟೇಟ್ಸ್‌ನಿಂದ ಭಯೋತ್ಪಾದಕ ಸಂಘಟನೆಗಳಿಗೆ ಮಹಿಳೆಯರನ್ನ ನೇಮಕ ಮಾಡಿಕೊಳ್ಳಳಾಗಿದೆ ಎಂದು ಚಲನಚಿತ್ರ ನಿರ್ಮಾಪಕರೊಬ್ಬರು ಹೇಳಿರುವುದಾಗಿ ಮಾಧ್ಯಮಗಳು ವರದಿ ಮಾಡಿವೆ. ಇದನ್ನೂ ಓದಿ: ‘ದಿ ಕೇರಳ ಸ್ಟೋರಿ’ ತಮಿಳು ನಾಡಿನಲ್ಲಿ ಪ್ರದರ್ಶನವಿಲ್ಲ

    ಸಿನಿಮಾ ಬಿಡುಗಡೆಗೊಂಡ ನಂತರ ಈ ಚಿತ್ರವು ಕೇರಳದಲ್ಲಿ ಧಾರ್ಮಿಕ ಉಪದೇಶಗಳನ್ನ ಕೇಂದ್ರೀಕರಿಸಿದ್ದು, ಹಿಂದೂ ಮತ್ತು ಕ್ರಿಶ್ಚಿಯನ್‌ ಮಹಿಳೆಯರನ್ನ ತೀವ್ರಗಾಮಿಗೊಳಿಸಲು ಇಸ್ಲಾಂ ಧರ್ಮಗುರುಗಳು ಗುರಿಯಾಗಿಸುತ್ತಿದ್ದಾರೆ ಎಂದು ಆರೋಪಿಸಲಾಗಿದೆ. ಮಹಿಳೆಯರನ್ನ ಇಸ್ಲಾಂಗೆ ಮತಾಂತರಿಸಿ ಅಫ್ಘಾನಿಸ್ತಾನ, ಯೆಮೆನ್ ಮತ್ತು ಸಿರಿಯಾದಂತಹ ದೇಶಗಳಿಗೆ ಕಳುಹಿಸಲಾಗಿದೆ ದೂರುಗಳು ಕೇಳಿಬರುತ್ತಿವೆ ಎಂದು ತಿಳಿದುಬಂದಿದೆ. ಇದನ್ನೂ ಓದಿ: ಇಬ್ಬರ ತಲೆಗೆ ಒಟ್ಟು 11 ಲಕ್ಷ ಘೋಷಣೆಯಾಗಿದ್ದ ನಕ್ಸಲರ ಎನ್‍ಕೌಂಟರ್

    ಈ ನಡುವೆ ʻದಿ ಕೇರಳ ಸ್ಟೋರಿʼ ಸಿನಿಮಾ ನೋಡುವಂತೆ ವಿಶ್ವ ಹಿಂದೂ ಪರಿಷತ್‌ (VHP) ಸದಸ್ಯ ಮಹಿಳೆಗೆ ಒತ್ತಾಯಿಸಿರುವ ಘಟನೆಯೊಂದ ರಾಜಸ್ಥಾನದಲ್ಲಿ ನಡೆದಿದ್ದು, ಇಲ್ಲಿನ ಮಂದಿರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. ಮಹಿಳೆಯ ದೂರನ್ನು ಆಧರಿಸಿ ಮೂವರ ವಿರುದ್ಧ ಕೇಸ್‌ ದಾಖಲಿಸಲಾಗಿದೆ.

    ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಅಪ್ರಾಪ್ತ ವಯಸ್ಕನನ್ನು ಪೊಲೀಸರು ಬಂಧಿಸಿದ್ದಾರೆ. ಶನಿವಾರ ರಾತ್ರಿ ಮನೆಗೆ ಹಿಂದಿರುಗುತ್ತಿದ್ದಾಗ ತನ್ನ ವಾಟ್ಸಾಪ್ ಸ್ಟೇಟಸ್‌ನಲ್ಲಿ ಚಲನಚಿತ್ರವನ್ನು ಹೊಗಳುವ ಮೂಲಕ ತಮ್ಮ ಸಮುದಾಯವನ್ನ ಅವಮಾನಿಸಿದ್ದಾರೆ ಎಂದು ಆರೋಪಿಸಿ ಮೂವರು ವ್ಯಕ್ತಿಗಳು ಆಕೆಗೆ ಕಿರುಕುಳ ನೀಡಿರುವುದಾಗಿ ಸಹಾಯಕ ಪೊಲೀಸ್‌ ಆಯುಕ್ತ ದೇರಾವರ್ ಸಿಂಗ್ ತಿಳಿಸಿದ್ದಾರೆ. ಈ ಬಗ್ಗೆ ತನಿಖೆ ಮುಂದುವರಿದಿದೆ.

  • ಕರ್ನಾಟಕ ವಿಧಾನಸಭೆಯಲ್ಲಿ ಮಹಿಳಾ ಪ್ರಾತಿನಿಧ್ಯ- 2018ರ ಚುನಾವಣೆಯಲ್ಲಿ ಗೆದ್ದ ಮಹಿಳೆಯರು ಯಾರು?, ಸೋತವರೆಷ್ಟು?

    ಕರ್ನಾಟಕ ವಿಧಾನಸಭೆಯಲ್ಲಿ ಮಹಿಳಾ ಪ್ರಾತಿನಿಧ್ಯ- 2018ರ ಚುನಾವಣೆಯಲ್ಲಿ ಗೆದ್ದ ಮಹಿಳೆಯರು ಯಾರು?, ಸೋತವರೆಷ್ಟು?

    ಬೆಂಗಳೂರು: ಈ ಪುರುಷ ಪ್ರಧಾನ ವ್ಯವಸ್ಥೆಯಲ್ಲಿ ಎಲ್ಲಾ ಕ್ಷೇತ್ರಗಳಲ್ಲೂ ಮಹಿಳೆಯರಿಗೆ ಅವಕಾಶಗಳು ಬಹಳ ಕಡಿಮೆ. ಇದಕ್ಕೆ ರಾಜಕೀಯ ಕ್ಷೇತ್ರವೂ ಹೊರತಾಗಿಲ್ಲ. ಕರ್ನಾಟಕ ವಿಧಾನಸಭೆಯಲ್ಲಿ ಮಹಿಳಾ ಪ್ರಾತಿನಿಧ್ಯ ತುಂಬಾ ಕಡಿಮೆ. ಕಳೆದ (2018) ರಾಜ್ಯ ವಿಧಾನಸಭಾ ಚುನಾವಣೆಯಲ್ಲಿ 2 ಸಾವಿರಕ್ಕೂ ಹೆಚ್ಚು ಅಭ್ಯರ್ಥಿಗಳು ಸ್ಪರ್ಧಿಸಿದ್ದರು. ಅವರ ಪೈಕಿ ಮಹಿಳಾ ಅಭ್ಯರ್ಥಿಗಳ ಸಂಖ್ಯೆ ಕಡಿಮೆ ಇತ್ತು. 2018ರಲ್ಲಿ 224 ಕ್ಷೇತ್ರಗಳಿಗೆ ನಡೆದ ಚುನಾವಣೆಯಲ್ಲಿ ಮಹಿಳಾ ಅಭ್ಯರ್ಥಿಗಳಲ್ಲಿ ಜಯದ ನಗೆ ಬೀರಿದ್ದು, ಕೇವಲ ಕೆಲವೇ ಮಂದಿ ಮಾತ್ರ. ಇಲ್ಲೇ ಅರ್ಥವಾಗುತ್ತೆ, ಕರ್ನಾಟಕ ವಿಧಾನಸಭೆಯಲ್ಲಿ ಮಹಿಳೆಯರಿಗೆ ಸಿಗುವ ಪ್ರಾತಿನಿಧ್ಯ ಎಷ್ಟು ಎಂದು.

    ಈಗ 2023ರ ಸಾರ್ವತ್ರಿಕ ವಿಧಾನಸಭಾ ಚುನಾವಣೆಗೆ ಕರ್ನಾಟಕ ಎದುರು ನೋಡುತ್ತಿದೆ. ಈ ಬಾರಿಯಾದರೂ ಮಹಿಳೆಯರಿಗೆ ಹೆಚ್ಚಿನ ಪ್ರಾತಿನಿಧ್ಯ ಸಿಗಬಹುದೇ ಎಂಬುದನ್ನು ಇನ್ನಷ್ಟೇ ಕಾದು ನೋಡಬೇಕಿದೆ. ಈ ಹೊತ್ತಿನಲ್ಲಿ, ಕಳೆದ ಚುನಾವಣೆಯಲ್ಲಿ ಮಹಿಳಾ ಪ್ರಾತಿನಿಧ್ಯ ಹೇಗಿತ್ತು? ಎಷ್ಟು ಮಹಿಳೆಯರು ಸ್ಪರ್ಧೆ ಮಾಡಿದ್ದರು? ಗೆದ್ದವರು ಯಾರು ಎಂಬುದನ್ನು ತಿಳಿಯೋಣ. ಅದರ ಕಂಪ್ಲೀಟ್ ಡೀಟೈಲ್ಸ್ ಇಲ್ಲಿದೆ.

    2018ರ ವಿಧಾನಸಭಾ ಚುನಾವಣೆಯಲ್ಲಿ ಮತದಾರ ಯಾರಿಗೂ ಬಹುಮತ ನೀಡಿರಲಿಲ್ಲ. ಬಿಜೆಪಿ 104 ಕ್ಷೇತ್ರಗಳಲ್ಲಿ ಗೆದ್ದು ಅತಿದೊಡ್ಡ ಪಕ್ಷವಾಗಿ ಹೊರಹೊಮ್ಮಿತ್ತು. ಇತ್ತ ಕಾಂಗ್ರೆಸ್ ಭಾಗಶಃ ಆಡಳಿತ ವಿರೋಧಿ ಅಲೆಯಲ್ಲಿ ಕೇವಲ 80 ಸ್ಥಾನಗಳಿಗೆ ತೃಪ್ತಿ ಪಡೆದುಕೊಂಡಿತ್ತು. ಇನ್ನು ಜೆಡಿಎಸ್ 37, ಬಿಸ್‍ಪಿ 1, ಕೆಪಿಜೆಪಿ 1, ಪಕ್ಷೇತರ 1 ಕ್ಷೇತ್ರದಲ್ಲಿ ಗೆದ್ದಿತ್ತು.

    ಕಾಂಗ್ರೆಸ್ ಸರ್ಕಾರದಲ್ಲಿ 5 ವರ್ಷ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ, ಕನ್ನಡ ಸಂಸ್ಕೃತಿ ಸಚಿವೆಯಾಗಿದ್ದ ಉಮಾಶ್ರೀ ಅವರಿಗೆ 2018ರ ಚುನಾವಣೆಯಲ್ಲಿ ಸೋಲಾಗಿತ್ತು. ಗುಂಡ್ಲುಪೇಟೆ ವಿಧಾನಸಭೆಯ ಉಪಚುನಾವಣೆಯಲ್ಲಿ ಗೆದ್ದು ಮೊದಲ ಬಾರಿಗೆ ಸಚಿವ ಸ್ಥಾನ ಅಲಂಕರಿಸಿದ್ದ ಮಾಜಿ ಸಚಿವ ಮಹದೇವ ಪ್ರಸಾದ್ ಪತ್ನಿ, ಸಚಿವೆಯಾಗಿದ್ದ ಗೀತಾ ಮೋಹನಕುಮಾರಿ ಅವರು ಸಹ ಸೋತಿದ್ರು. ಇನ್ನು ಸತತ ಸೋಲುಗಳಿಂದ ಕೆಂಗಟ್ಟಿದ್ದ ಲಕ್ಷ್ಮಿ ಹೆಬ್ಬಾಳ್ಕರ್ ಗೆದ್ದು ಬೀಗಿದ್ದರು.

    2018ರಲ್ಲಿ 224 ಕ್ಷೇತ್ರಗಳಿಗೆ ನಡೆದಿದ್ದ ಚುನಾವಣೆಯಲ್ಲಿ ಒಟ್ಟು 219 ಮಹಿಳೆಯರು ಸ್ಪರ್ಧೆ ಮಾಡಿದ್ದರು. ಈ ಪೈಕಿ ಕೇವಲ ಏಳು ಜನರು ಮಾತ್ರ ವಿಧಾನಸಭೆ ಪ್ರವೇಶಿದ್ದಾರೆ. ಇದರಲ್ಲಿ 200 ಮಹಿಳಾ ಅಭ್ಯರ್ಥಿಗಳು ಠೇವಣಿ ಕಳೆದುಕೊಂಡಿದ್ದರು. ವಿಧಾನಸಭಾ ಒಟ್ಟು ಸ್ಥಾನಗಳ ಪೈಕಿ ಶೇ.3.2ರಷ್ಟು ಮಹಿಳೆಯರಿದ್ದರು.

    ಗೆದ್ದವರು ಯಾರು?:
    1. ಶಶಿಕಲಾ ಜೊಲ್ಲೆ: 2018 ರಲ್ಲಿ ನಿಪ್ಪಾಣಿ ಕ್ಷೇತ್ರದಿಂದ ಬಿಜೆಪಿಯಿಂದ ಸ್ಪರ್ಧಿಸಿದ್ದ ಶಶಿಕಲಾ ಜೊಲ್ಲೆ ಅವರು ಕಾಂಗ್ರೆಸ್ ಅಭ್ಯರ್ಥಿ ಕಾಕಾಸಾಹೇಬ ಪಾಟೀಲ್ ವಿರುದ್ಧ 8506 ಮತಗಳ ಅಂತರದಿಂದ ಗೆಲುವಿನ ಪತಾಕೆ ಹಾರಿಸಿದರು.
    2. ಅಂಜಲಿ ನಿಂಬಾಳ್ಕರ್: ಖಾನಾಪುರ ಕ್ಷೇತ್ರದಿಂದ ಕಾಂಗ್ರೆಸ್‍ನ ಅಂಜಲಿ ನಿಂಬಾಳ್ಕರ್ ಅವರು ಬಿಜೆಪಿಯ ವಿಠಲ್ ಹಲಗೇಕರ್ ವಿರುದ್ಧ ಸ್ಪರ್ಧಿಸಿ 5,133 ಮತಗಳ ಅಂತರದಿಂದ ಕಿರೀಟ ತನ್ನದಾಗಿಸಿಕೊಂಡರು.

    3. ರೂಪಾಲಿ ನಾಯ್ಕ್: ಕಾರವಾರದಿಂದ ಬಿಜೆಪಿ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದ ರೂಪಾಲಿ ನಾಯ್ಕ್ ಅವರು ಜೆಡಿಎಸ್‍ನ ಆನಂದ್ ಅಸ್ನೋಟಿಕರ್ ವಿರುದ್ಧ 14 ಸಾವಿರ ಮತಗಳ ಅಂತರದಿಂದ ಗೆಲುವು ತನ್ನದಾಗಿಸಿಕೊಂಡರು.
    4. ಲಕ್ಷ್ಮಿ ಹೆಬ್ಬಾಳ್ಕರ್– ಬೆಳಗಾವಿ ಗ್ರಾಮೀಣ ಕ್ಷೇತ್ರದಿಂದ ಕಾಂಗ್ರೆಸ್ ಅಭ್ಯರ್ಥಿಯಾಗಿ ಕಣಕ್ಕಿಳಿದಿದ್ದ ಲಕ್ಷ್ಮಿ ಹೆಬ್ಬಾಳ್ಕರ್ ಅವರು ಬಿಜೆಪಿ ಅಭ್ಯರ್ಥಿ ಸಂಜಯ್ ಪಾಟೀಲ್ ವಿರುದ್ಧ 51,724 ಮತಗಳ ಅಂತರದಿಂದ ಗೆಲುವು ಕಂಡರು.

    5. ಕನೀಜ್ ಫಾತಿಮಾ- ಕಲಬುರಗಿ ಉತ್ತರ ಕ್ಷೇತ್ರದಿಂದ ಕಾಂಗ್ರೆಸ್‍ನ ಕನೀಜ್ ಫಾತಿಮಾ ಅವರು ಬಿಜೆಪಿಯ ಚಂದ್ರಕಾಂತ್ ಪಾಟೀಲ್ ವಿರುದ್ಧ ಸ್ಪರ್ಧಿಸಿ 5,940 ಮತಗಳ ಅಂತರದಿಂದ ಗೆಲುವು ಕಂಡರು.
    6. ಕೆ.ಪೂರ್ಣಿಮಾ ಶ್ರೀನಿವಾಸ್– ಹಿರಿಯೂರು ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿ ಅಖಾಡಕ್ಕಿಳಿದಿದ್ದ ಕೆ. ಪೂರ್ಣಿಮಾ ಶ್ರೀನಿವಾಸ್ ಅವರು ಕಾಂಗ್ರೆಸ್ ಅಭ್ಯರ್ಥಿ ಡಿ. ಸುಧಾಕರ್ ವಿರುದ್ಧ 12,875 ಮತಗಳ ಅಂತರದಿಂದ ಗೆಲುವಿನ ಮಾಲೆಗೆ ಕೊರಳೊಡ್ಡಿದರು.

    7. ಎಂ.ರೂಪಕಲಾ– ಕೆಜಿಎಫ್ ಕ್ಷೇತ್ರದಿಂದ ಕಾಂಗ್ರೆಸ್ ಅಭ್ಯರ್ಥಿಯಾಗಿ ಕಣಕ್ಕೆ ಇಳಿದಿದ್ದ ರೂಪಕಲಾ ಎಂ ಅವರು ಬಿಜೆಪಿಯ ಅಶ್ವಿನಿ ಸಂಪಂಗಿ ವಿರುದ್ಧ ಸ್ಪರ್ಧಿಸಿ 40,827 ಮತಗಳ ಅಂತರದಿಂದ ಗೆಲುವು ಕಂಡರು. ಇದನ್ನೂ ಓದಿ: ಅತಂತ್ರ ಪ್ರಜಾ ತೀರ್ಪು; 2018ರ ವಿಧಾನಸಭಾ ಚುನಾವಣೆಯಲ್ಲೇನಾಗಿತ್ತು?

    8. ಸೌಮ್ಯಾ ರೆಡ್ಡಿ– 2018ರ ಚುನಾವಣೆ ದಿನಾಂಕ ಘೋಷಣೆಯಾದ ಬಳಿಕ ಜಯನಗರದ ಬಿಜೆಪಿ ಅಭ್ಯರ್ಥಿ ನಿಧನರಾಗಿದ್ದರು. ಹಾಗಾಗಿ ಈ ಕ್ಷೇತ್ರದ ಚುನಾವಣೆಯನ್ನು ಮುಂದೂಡಿಕೆ ಮಾಡಲಾಗಿತ್ತು. ನಂತರ ನಡೆದ ಚುನಾವಣೆಯಲ್ಲಿ ಜಯನಗರ ಕ್ಷೇತ್ರದಿಂದ ಸೌಮ್ಯರೆಡ್ಡಿಯವರು ಕಾಂಗ್ರೆಸ್ ಅಭ್ಯರ್ಥಿಯಾಗಿ ಕಣಕ್ಕಿಳಿದು ಬಿಜೆಪಿಯ ಬಿ.ಎನ್ ಪ್ರಲ್ಹಾದ್ ಬಾಬು ಅವರನ್ನು 3,885 ಮತಗಳ ಅಂತರದಿಂದ ಸೋಲಿಸಿದರು.

    9. ಅನಿತಾ ಕುಮಾರಸ್ವಾಮಿ: ರಾಮನಗರ ಕ್ಷೇತ್ರದಿಂದ ಜೆಡಿಎಸ್ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದ ಅನಿತಾ ಕುಮಾರಸ್ವಾಮಿಯವರು ಬಿಜೆಪಿಯ ಎಲ್ ಚಂದ್ರಶೇಖರ್ ವಿರುದ್ಧ 1,09,137 ಮತಗಳ ಅಂತರದಿಂದ ಗೆಲುವು ಕಂಡರು. ಇದಲ್ಲದೆ ಜೆಡಿಎಸ್-ಕಾಂಗ್ರೆಸ್ ಸಮ್ಮಿಶ್ರ ಸರ್ಕಾರದಲ್ಲಿ ನಾಮ ನಿರ್ದೇಶನಗೊಂಡಿದ್ದ ಆಂಗ್ಲೋ ಇಂಡಿಯನ್ ಪ್ರತಿನಿಧಿ ವಿನಿಷಾನೆರೋ ಪ್ರಸ್ತುತ ವಿಧಾನಸಭೆ ಶಾಸಕಿಯಾಗಿದ್ದಾರೆ.

    ಉಪ ಚುನಾವಣೆಯಲ್ಲಿ ಮಹಿಳೆಯರ ಪ್ರಾತಿನಿಧ್ಯ: ಕುಂದಗೋಳ ಕ್ಷೇತ್ರಕ್ಕೆ ನಡೆದ ಉಪ ಚುನಾವಣೆಯಲ್ಲಿ ಕುಸುಮಾವತಿ ಶಿವಳ್ಳಿ ಗೆದ್ದಿದ್ದರು. ಕಾಂಗ್ರೆಸ್ ಅಭ್ಯರ್ಥಿಯಾಗಿ ಕಣಕ್ಕಿಳಿದಿದ್ದ ಕುಸುಮಾವತಿ ಶಿವಳ್ಳಿ ಅವರು ಬಿಜೆಪಿಯ ಎಸ್‍ಐ ಚಿಕ್ಕನಗೌಡರನ್ನು 1,601 ಮತಗಳ ಅಂತರದಿಂದ ಸೋಲಿಸಿದರು. ಆರ್.ಆರ್.ನಗರಕ್ಕೆ ನಡೆದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿಯಾಗಿ ಐಎಎಸ್ ಅಧಿಕಾರಿಯಾಗಿದ್ದ ದಿ. ಡಿ.ಕೆ.ರವಿ ಅವರ ಪತ್ನಿ ಕುಸುಮಾ ಹನುಮಂತರಾಯಪ್ಪ ಸ್ಪರ್ಧೆ ಮಾಡಿದ್ದರು. ಆದ್ರೆ ಬಿಜೆಪಿಯ ಮುನಿರತ್ನ ವಿರುದ್ಧ ಸೋಲಾಗಿತ್ತು.

    ಇನ್ನು ಬಸವಕಲ್ಯಾಣಕ್ಕೆ ನಡೆದ ಉಪಚುನಾವಣೆಯಲ್ಲಿ ದಿ.ನಾರಾಯಣ್ ರಾವ್ ಅವರ ಪತ್ನಿ ಮಾಲಾ ನಾರಾಯಣ್ ರಾವ್ ಕಾಂಗ್ರೆಸ್‍ನಿಂದ ಸ್ಪರ್ಧಿಸಿ ಸೋತಿದ್ದರು. ಶಿರಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಜೆಡಿಎಸ್‍ನಿಂದ ಅಮ್ಮಜಮ್ಮಾ ಸ್ಪರ್ಧೆ ಮಾಡಿ, ಬಿಜೆಪಿಯ ಅಭ್ಯರ್ಥಿ ವಿರುದ್ಧ ಸೋತಿದ್ದರು.

    ಸೋತವರು: ತೇರದಾಳ- ಉಮಾಶ್ರೀ (ಕಾಂಗ್ರೆಸ್), ಕುಮಟಾ- ಶಾರದ ಶೆಟ್ಟಿ (ಕಾಂಗ್ರೆಸ್), ಮೂಡಿಗೆರೆ- ಮೋಟಮ್ಮ (ಕಾಂಗ್ರೆಸ್), ಕೆಜಿಎಫ್- ಅಶ್ವಿನಿ ಸಂಪಂಗಿ (ಬಿಜೆಪಿ), ರಾಜಾಜಿನಗರ – ಜಿ. ಪದ್ಮಾವತಿ (ಕಾಂಗ್ರೆಸ್), ಪುತ್ತೂರು – ಶಕುಂತಳಾ ಶೆಟ್ಟಿ (ಕಾಂಗ್ರೆಸ್) ಸೇರಿದಂತೆ ಒಟ್ಟು 211 ಮಂದಿ ಮಹಿಳೆಯರು ಚುನಾವಣಾ ಅಖಾಡಕ್ಕಿಳಿದು ಸೋಲು ಕಂಡಿದ್ದಾರೆ.