ಬೆಂಗಳೂರು: ಕಾರ್ಖಾನೆ ಕಾರ್ಮಿಕರ (Industry Workers) ಕೆಲಸದ ಅವಧಿ 12 ಗಂಟೆಯಿಂದ 8 ಗಂಟೆಗೆ ಇಳಿಕೆಗೆ ನಿರ್ಧಾರ ಮಾಡಲಾಗಿದೆ.
ರೈತ, ದಲಿತ, ಕಾರ್ಮಿಕ, ವಿದ್ಯಾರ್ಥಿ, ನೀರಾವರಿ ಹೋರಾಟಗಾರರು, ಭೂ ಹೀನರ ಹೋರಾಟ ಸಮಿತಿ, ಕಟ್ಟಡ ಕಾರ್ಮಿಕರ ಹೋರಾಟ ಸಮಿತಿ ಹಾಗೂ ಮಹಿಳಾ ಸಂಘಟನೆಗಳು ಹಾಗೂ ಟ್ರೇಡ್ ಯೂನಿಯನ್ ಸಂಘಟನೆಗಳ ಸಮನ್ವಯ ಸಮಿತಿಯ ನಾಯಕರುಗಳು, ಪದಾಧಿಕಾರಿಗಳ ಜೊತೆ ಇಂದು ಸಿಎಂ ಸಭೆ ನಡೆಸಿದರು. ಈ ಸಭೆಯಲ್ಲಿ ಸಿದ್ದರಾಮಯ್ಯ ಅವರು ಕಾರ್ಮಿಕ ಮುಖಂಡರಿಗೆ ಭರವಸೆ ನೀಡಿದರು.
ರೈತರ, ಕಾರ್ಮಿಕರ ಸಮಸ್ಯೆಗಳನ್ನು ಕಾನೂನಾತ್ಮಕವಾಗಿ ಪರಿಶೀಲಿಸಿ, ಬಿಜೆಪಿ ಅವಧಿಯಲ್ಲಿ 8 ಗಂಟೆ ಅವಧಿಯನ್ನ 12 ಗಂಟೆಗೆ ಹೆಚ್ಚಳ ಮಾಡಲಾಗಿತ್ತು. ಈಗ ಮತ್ತೆ 12 ಗಂಟೆಯಿಂದ 8 ಗಂಟೆಗೆ ಕೆಲಸದ ಅವಧಿ ಇಳಿಕೆಗೆ ಸರ್ಕಾರ ನಿರ್ಧಾರ ಮಾಡಿದ್ದು, ಈ ಬಗ್ಗೆ ಶೀಘ್ರವೇ ನಿರ್ಧಾರ ಪ್ರಕಟಿಸುವುದಾಗಿ ಸಿಎಂ ಭರವಸೆ ನೀಡಿದರು.
ಸಭೆಯಲ್ಲಿ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ಸಚಿವ ಎಸ್.ಎಸ್.ಮಲ್ಲಿಕಾರ್ಜುನ್, ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ಗೋವಿಂದರಾಜು, ರಾಜಕೀಯ ಸಲಹೆಗಾರರಾದ ಬಿ.ಆರ್.ಪಾಟೀಲ್, ಶಾಸಕ ದರ್ಶನ್ ಪುಟ್ಟಣ್ಣಯ್ಯ ಸಭೆಯಲ್ಲಿ ಭಾಗಿಯಾಗಿದ್ದರು.
ವಿಜಯಪುರ: ಇಲ್ಲಿನ ರಾಜಗುರು ಗೋದಾಮಿನ (Warehouse) ಸಂಸ್ಕರಣಾ ಘಟಕದಲ್ಲಿ ಮೆಕ್ಕೆ ಜೋಳ (Maize) ಮೂಟೆ ತುಂಬುವ ಯಂತ್ರ ಕುಸಿದು, ಮೂವರು ಮೂವರು ಕಾರ್ಮಿಕರು (Workers) ಸಾವನ್ನಪ್ಪಿರುವ ಘಟನೆ ನಡೆದಿದೆ. ಸಾವಿನ ಸಂಖ್ಯೆ ಮತ್ತಷ್ಟು ಏರಿಕೆಯಾಗುವ ಸಾಧ್ಯತೆಗಳಿವೆ ಎನ್ನಲಾಗಿದೆ.
ಅವಶೇಷಗಳ ಅಡಿ ಸಿಲುಕಿರುವ ಕಾರ್ಮಿಕರು ಸಾವು ಬದುಕಿನ ಮಧ್ಯೆ ಹೋರಾಡುತ್ತಿದ್ದಾರೆ. ರಾತ್ರಿಯಿಂದಲೂ 4 ಜೆಸಿಬಿಗಳ ಮೂಲಕ ಕಾರ್ಮಿಕರ ರಕ್ಷಣಾ ಕಾರ್ಯಾಚರಣೆ ಆರಂಭಿಸಲಾಗಿದೆ. ಸ್ಥಳದಲ್ಲಿ ಕಾರ್ಮಿಕರು, ಅವರ ಸಂಬಂಧಿಕರು ಗುಂಪುಗೂಡಿದ್ದು, ಬಿಗುವಿನ ವಾತಾವರಣ ನಿರ್ಮಾಣವಾಗಿದೆ. ಜಿಲ್ಲಾಧಿಕಾರಿ, ಪೊಲೀಸ್ ವರಿಷ್ಠಾಧಿಕಾರಿ, ಸ್ಥಳದಲ್ಲೇ ಬೀಡುಬಿಟ್ಟು ರಕ್ಷಣಾ ಕಾರ್ಯಾಚರಣೆ ನಡೆಸುತ್ತಿದ್ದಾರೆ. ವೈದ್ಯರ ತಂಡವೂ ಕಾರ್ಮಿಕರಿಗೆ ಆಮ್ಲಜನಕ ಪೂರೈಕೆ ಮಾಡುತ್ತಿದ್ದಾರೆ. ಅಗ್ನಿಶಾಮಕ ದಳ ಸಿಬ್ಬಂದಿ, ಪೊಲೀಸರು ರಕ್ಷಣಾ ಕಾರ್ಯದಲ್ಲಿ ತೊಡಗಿದ್ದಾರೆ.
ಬರೋಬ್ಬರಿ 400ಕ್ಕೂ ಹೆಚ್ಚು ಗಂಟೆಗಳ ಆಪರೇಷನ್ ನಂತರ ಟನೆಲ್ ನಲ್ಲಿ ಸಿಲುಕಿಕೊಂಡಿದ್ದ 41 ಕಾರ್ಮಿಕರ ರಕ್ಷಣೆ ಕುರಿತು ರೋಚಕ ಘಟನೆಯನ್ನು ಸಿನಿಮಾ ಮಾಡಲು ಬಾಲಿವುಡ್ ನಿರ್ಮಾಪಕರು ಮುಂದಾಗಿದ್ದಾರೆ. ಆಗಲೇ 14ಕ್ಕೂ ಹೆಚ್ಚು ನಿರ್ಮಾಪಕರು ಸಿನಿಮಾದ (Cinema) ಟೈಟಲ್ ಅನ್ನು ನೋಂದಾಯಿಸಿದ್ದಾರೆ ಎನ್ನುವ ಮಾಹಿತಿ ಸಿಕ್ಕಿದೆ. ದೇಶ ಹಲವು ಭಾಷೆಗಳಲ್ಲಿ ಈ ಕುರಿತು ಸಿನಿಮಾ ಬರಲಿದೆ.
ಏನಿದು ಘಟನೆ ?
ಮೊನ್ನೆಯಷ್ಟೇ ಸುರಂಗದ ಒಳಗಡೆ ಇದ್ದ ಕಾರ್ಮಿಕರು ಸುರಕ್ಷಿತವಾಗಿ ಹೊರಬರಲಿ ಎಂಬ ದೇಶದ ಜನರ ಪ್ರಾರ್ಥನೆ ಫಲ ನೀಡಿತ್ತು. ಉತ್ತರಾಖಂಡದ ಉತ್ತರಕಾಶಿ ಸುರಂಗದಲ್ಲಿ (Uttarakhand’s Silkyari Tunnel) 17 ದಿನಗಳಿಂದ ಸಿಲುಕಿದ್ದ ಕಾರ್ಮಿಕರನ್ನು (Workers) ರಕ್ಷಣೆ ಮಾಡಲಾಗಿತ್ತು. 17 ದಿನ 400 ಗಂಟೆಗಳ ಆಪರೇಷನ್ ಯಶಸ್ವಿಯಾದ ನಂತರ ರಾತ್ರಿ ಒಬ್ಬೊಬ್ಬರಾಗಿ ಸುರಂಗದಿಂದ ಕಾರ್ಮಿಕರು ಹೊರ ಬಂದಿದ್ದರು.
ನೆಲದಿಂದ ಸಮಾನಾಂತರವಾಗಿ ಮೊದಲು ಕೈಗೊಂಡಿದ್ದ ಕೊರೆವ ಕೆಲಸವನ್ನು, ಅದು ನಿಂತಿದ್ದ ಸ್ಥಳದಿಂದಲೇ ನಿಷೇಧಿತ ಇಲಿ ಬಿಲ ಗಣಿಗಾರಿಕೆಯ ತಂತ್ರಜ್ಞಾನ ಬಳಸಿ ಡ್ರಿಲ್ಲಿಂಗ್ ಮಾಡಲಾಗಿತ್ತು. ಕೊರೆವ ಕಾರ್ಯ ಪೂರ್ಣಗೊಂಡ ಬಳಿಕ ಎನ್‌ಡಿಆರ್‌ಎಫ್ ಸಿಬ್ಬಂದಿ ಸುರಂಗದೊಳಗೆ ಹೋಗಿ, ಕಾರ್ಮಿಕರನ್ನು ಒಬ್ಬೊಬ್ಬರನ್ನಾಗಿ ಹೊರಗೆ ಕರೆತಂದಿದ್ದರು.
ನಂತರ ಕಾರ್ಮಿಕರನ್ನು ಕೂಡಲೇ ಆಸ್ಪತ್ರೆಗೆ ಕರೆದೊಯ್ಯಲು 41 ಅಂಬುಲೆನ್ಸ್, ಸ್ಟ್ರೆಚ್ಚರ್, ಮೆಡಿಕಲ್ ಎಮೆರ್ಜೆನ್ಸಿ, ಹೆಲಿಕಾಪ್ಟರ್.. ಹೀಗೆ ಎಲ್ಲವನ್ನು ಸಜ್ಜಾಗಿ ಇರಿಸಲಾಗಿತ್ತು. ಸ್ಥಳದಲ್ಲೇ ಸಿಎಂ ಪುಷ್ಕರ್ ಸಿಂಗ್ ಧಾಮಿ, ಕೇಂದ್ರ ಸಚಿವ ವಿಕೆ ಸಿಂಗ್, ಕಾರ್ಮಿಕರು ಬಂಧುಗಳು ಸ್ಥಳದಲ್ಲೇ ಬೀಡುಬಿಟ್ಟಿದ್ದರು. ಅದೊಂದು ರೋಚಕ ಆಪರೇಷನ್ ಆಗಿತ್ತು.
ಉತ್ತರಕಾಶಿ ಜಿಲ್ಲೆಯ ಸಿಲ್ಕ್ಯಾರ ಹಾಗೂ ದಂಡಲ್ಗಾಂವ್ಗೆ ಸಂಪರ್ಕ ಕಲ್ಪಿಸಲು ಚಾರ್ ಧಾಮ್ ರಸ್ತೆ ಯೋಜನೆ ಅಡಿಯಲ್ಲಿ ಸುರಂಗ ಮಾರ್ಗ ನಿರ್ಮಿಸಲಾಗುತ್ತಿದೆ. 4.5 ಕಿಲೋ ಮೀಟರ್ ದೂರದ ಸುರಂಗ ನಿರ್ಮಾಣದ ವೇಳೆ ಸುಮಾರು 150 ಮೀಟರ್ ಉದ್ದದ ಸುರಂಗ ಕುಸಿದಿತ್ತು. ನವೆಂಬರ್ 12ರಂದು ಜಾವ 4 ಗಂಟೆ ಸುಮಾರಿಗೆ ಸುರಂಗ ಕುಸಿದಿದ್ದು, ಕೂಡಲೇ ರಕ್ಷಣಾ ಕಾರ್ಯಾಚರಣೆ ಆರಂಭಿಸಲಾಗಿತ್ತು.
ನವದೆಹಲಿ: ಉತ್ತರಕಾಶಿಯ ಸಿಲ್ಕ್ಯಾರಾ ಸುರಂಗದಲ್ಲಿ ಸಿಲುಕಿ ಹೊರಬಂದಿರುವ 41 ಕಾರ್ಮಿಕರ ಆರೋಗ್ಯವು (41 Workers Health) ಉತ್ತಮವಾಗಿದ್ದು, ಅವರಿನ್ನು ಮನೆಗೆ ಹೋಗಬಹುದು ಎಂದು ಏಮ್ಸ್ ಆಸ್ಪತ್ರೆಯ (AIIMS Hospital) ವೈದ್ಯರು ತಿಳಿಸಿದ್ದಾರೆ.
ಈ ಸಂಬಂಧ ಹೆಲ್ತ್ ಬುಲೆಟಿನ್ ಬಿಡುಗಡೆ ಮಾಡಿರುವ ಏಮ್ ಆಸ್ಪತ್ರೆ, ಸಿಲ್ಕ್ಯಾರಾ ಸುರಂಗದಿಂದ (Silkyara-Barkot Tunnel) ಸುರಕ್ಷಿತವಾಗಿ ರಕ್ಷಣೆಗೊಂಡ ಬಳಿಕ ಎಲ್ಲಾ 41 ಮಂದಿ ಕಾರ್ಮಿಕರು ಏಮ್ಸ್-ರಿಷಿಕೇಶ್ ಆಸ್ಪತ್ರೆಗೆ ಬುಧವಾರ ಮಧ್ಯಾಹ್ನ ದಾಖಲಾಗಿದ್ದಾರೆ. ಪ್ರಾಥಮಿಕ ತಪಾಸಣೆಯ ವೇಳೆ ಈ ಕಾರ್ಮಿಕರ ಮೈಮೇಲೆ ಯಾವುದೇ ಗಾಯಗಳು ಕಂಡುಬಂದಿಲ್ಲ. ನಂತರ ಅವರನ್ನು ತೀವ್ರ ಆರೋಗ್ಯ ತಪಾಸಣೆಗೆ ಒಳಪಡಿಸಲಾಯಿತು. ಅವರ ರಕ್ತ ಪರೀಕ್ಷೆಗಳು, ಮೂತ್ರಪಿಂಡ, ಇಸಿಜಿ ವರದಿಗಳು, ಯಕೃತ್ತಿನ ಕಾರ್ಯ ಪರೀಕ್ಷೆ ಮತ್ತು ಎಕ್ಸ್ ರೇನಲ್ಲಿ ಎಲ್ಲರೂ ದೈಹಿಕವಾಗಿ ಸ್ಥಿರರಾಗಿದ್ದಾರೆ ಎಂದು ತಿಳಿಸಿದರು.
40 ಕಾರ್ಮಿಕರಲ್ಲಿ ಒಬ್ಬರು ಆಸ್ಪತ್ರೆಯಲ್ಲಿಯೇ ಚಿಕಿತ್ಸೆ ಪಡೆಯುತ್ತಿದ್ದಾರೆ. ಅವರ ಆರೋಗ್ಯ ಸ್ಥಿರವಾಗಿದೆ. ಅವರನ್ನು ಹೆಚ್ಚಿನ ತಪಾಸಣೆಗಾಗಿ ಡಿಸಾಸ್ಟರ್ ವಾರ್ಡ್‍ನಿಂದ ಹೃದ್ರೋಗ ವಿಭಾಗಕ್ಕೆ ವರ್ಗಾಯಿಸಲಾಗಿದೆ. ಆದರೆ ಇದು ಸುರಂಗ ಕುಸಿತ ಪ್ರಕರಣಕ್ಕೆ ಸಂಬಂಧಿಸಿದ್ದಲ್ಲ ಎಂದು ವೈದ್ಯರೊಬ್ಬರು ತಿಳಿಸಿದ್ದಾರೆ.
ಒಟ್ಟಿನಲ್ಲಿ ಎಲ್ಲಾ ಕಾರ್ಮಿಕರ ಆರೋಗ್ಯದ ಬಗ್ಗೆ ಆಸ್ಪತ್ರೆಯು ಕ್ಲಿಯರೆನ್ಸ್ ನೀಡಿದ್ದು, ಎಲ್ಲರೂ ತಮ್ಮ ತಮ್ಮ ಮನೆಗಳಿಗೆ ತೆರಳಬಹುದು ಎಂದು ಹೇಳಿದೆ. ಈ ಹಿನ್ನೆಲೆಯಲ್ಲಿ 41 ಜನರ ಪೈಕಿ 15 ಮಂದಿ ಏಮ್ಸ್ ನಿಂದ ತಮ್ಮ ಊರಾದ ಜಾರ್ಖಂಡ್‍ಗೆ ಹೊರಟಿದ್ದಾರೆ. ಈ 15 ಕಾರ್ವಿಕರನ್ನು ಅವರ ಕುಟುಂಬಸ್ಥರ ಸಮೇತ ಉತ್ತರಾಖಂಡದ ಡೆಹ್ರಾಡೂನ್‍ನಿಂದ ದೆಹಲಿಗೆ ಏರ್ ಲಿಫ್ಟ್ ಮಾಡಲಾಗಿದ್ದು, ಅಲ್ಲಿಂದ ಅವರನ್ನು ವಿಮಾನದಲ್ಲಿ ರಾಂಚಿಗೆ ಕಳುಹಿಸಿಕೊಡಲಾಗುತ್ತದೆ.
ನವದೆಹಲಿ: ಮಂಗಳವಾರ ತಡರಾತ್ರಿ ಉತ್ತರಕಾಶಿಯಲ್ಲಿ (Uttarkashi) ನಡೆಯುತ್ತಿದ್ದ ಕಾರ್ಮಿಕರ (Workers) ರಕ್ಷಣಾ ಕಾರ್ಯಚರಣೆ ನೇರ ಪ್ರಸಾರ ವೀಕ್ಷಿಸುತ್ತಿದ್ದ ಪ್ರಧಾನಿ ನರೇಂದ್ರ ಮೋದಿ (Narendra Modi), ಕಾರ್ಯಚರಣೆ ಯಶಸ್ವಿಯಾದ ಬಳಿಕ ಭಾವುಕರಾಗಿದ್ದರು ಎಂದು ಕೇಂದ್ರ ಸಚಿವ ಅನುರಾಗ್ ಠಾಕೂರ್ (Anurag Thakur) ಹೇಳಿದ್ದಾರೆ.
ಮಂಗಳವಾರ ರಕ್ಷಣಾ ಕಾರ್ಯಚರಣೆ ನಡೆಯುತ್ತಿದ್ದಾಗ ಪ್ರಧಾನಿ ನರೇಂದ್ರ ಮೋದಿ ಅವರ ನೇತೃತ್ವದಲ್ಲಿ ಕ್ಯಾಬಿನೆಟ್ ಸಭೆ ನಡೆಯುತ್ತಿತ್ತು. ಕ್ಯಾಬಿನೆಟ್ ಸಹದ್ಯೋಗಿಗಳ ಜೊತೆಗೆ ಪ್ರಧಾನಿ ನರೇಂದ್ರ ಮೋದಿ ರಕ್ಷಣಾ ಕಾರ್ಯಚರಣೆ ನೇರ ಪ್ರಸಾರವನ್ನು ಬಹಳ ಸೂಕ್ಷ್ಮವಾಗಿ ಗಮನಿಸುತ್ತಿದ್ದರು. ಸಿಕ್ಕಿಬಿದ್ದ ಕಾರ್ಮಿಕರನ್ನು ಸುರಕ್ಷಿತವಾಗಿ ಸ್ಥಳಾಂತರಿಸಿದ ನಂತರ ಪ್ರಧಾನಿ ಭಾವುಕರಾದರು ಎಂದರು. ಇದನ್ನೂ ಓದಿ: ಮಹಿಳಾ ಸ್ವಸಹಾಯ ಗುಂಪುಗಳಿಗೆ ಡ್ರೋನ್ – ಸಂಪುಟ ಸಭೆಯಲ್ಲಿ ಮೋದಿ ಮಹತ್ವದ ನಿರ್ಧಾರ
ಸುರಂಗ ಕುಸಿತದ ಬಳಿಕ ಪ್ರಧಾನಿ ನರೇಂದ್ರ ಮೋದಿ ಉತ್ತರಾಖಂಡ ಸಿಎಂ ಪುಷ್ಕರ್ ಸಿಂಗ್ ಧಾಮಿ ಜೊತೆಗೆ ನಿರಂತರವಾಗಿ ದೂರವಾಣಿ ಮೂಲಕ ಮಾಹಿತಿ ಪಡೆಯುತ್ತಿದ್ದರು. ಪ್ರಧಾನಿ ಕಾರ್ಯಲಯದಿಂದ ಮೇಲ್ವಿಚಾರಣೆಗೆ ವಿಶೇಷ ತಂಡವನ್ನು ಕಳುಹಿಸಿದ್ದರು. ಕಾರ್ಮಿಕರ ರಕ್ಷಣೆ ಬಳಿಕ ಎಕ್ಸ್‌ನಲ್ಲಿ ಟ್ವೀಟ್ ಮಾಡಿ ಕಾರ್ಯಚರಣೆಯಲ್ಲಿ ಭಾಗಿಯಾದ ಎಲ್ಲರನ್ನು ಶ್ಲಾಘಿಸಿದ್ದರು. ಇದನ್ನೂ ಓದಿ: ಧ್ವನಿವರ್ಧಕಗಳಲ್ಲಿ ಆಜಾನ್ ಕೂಗುವುದು ನಿಷೇಧಿಸಲು ಮನವಿ- ಅರ್ಜಿದಾರರಿಗೆ ಹೈಕೋರ್ಟ್ ತರಾಟೆ
ನವದೆಹಲಿ: ಉತ್ತರಾಕಾಶಿಯಲ್ಲಿ ಸುರಂಗ (Uttarakashi Tunnel) ಕುಸಿತ ಪ್ರಕರಣಕ್ಕೆ ಸಂಬಂಧಿಸಿದಂತೆ ರಕ್ಷಣೆಗೊಂಡ ಕಾರ್ಮಿಕರ ಜೊತೆಗೆ ಪ್ರಧಾನಿ ನರೇಂದ್ರ ಮೋದಿ (Narendra Modi) ಮಾತುಕತೆ ನಡೆಸಿದ್ದಾರೆ.
ಎಲ್ಲವೂ ಧೈರ್ಯ ಮೆಚ್ಚುವಂತದ್ದು, ಒಬ್ಬರಿಗೊಬ್ಬರು ಆತ್ಮ ವಿಶ್ವಾಸ ತುಂಬಿದ್ದೀರಿ ಅದು ದೊಡ್ಡ ವಿಚಾರವಾಗಿದೆ. ನಾನು ಸಿಎಂ ಸೇರಿ ಎಲ್ಲರಿಂದ ಮಾಹಿತಿ ಪಡೆಯುತ್ತಿದ್ದೆ. ಮಾಹಿತಿ ಪಡೆದರೂ ನಿಮ್ಮ ಬಗೆಗಿನ ಚಿಂತೆ ಕಡಿಮೆಯಾಗುತ್ತಿರಲಿಲ್ಲ. ನಿಮ್ಮ ಕುಟುಂಬಸ್ಥರ ಪುಣ್ಯವೂ ಕಾರಣವಾಗಿರುತ್ತದೆ. ಎಲ್ಲರೂ ಸುರಕ್ಷಿತವಾಗಿ ಹೊರ ಬಂದದ್ದೀರಿ ಎಂದು ಹೇಳಿದ್ದಾರೆ. ಇದನ್ನೂ ಓದಿ: 41 ಕಾರ್ಮಿಕರ ರಕ್ಷಣೆಗೆ ವರವಾಯ್ತು ನಿಷೇಧಿತ ರ‍್ಯಾಟ್ ಹೋಲ್ ಮೈನಿಂಗ್ – ನಿಷೇಧಿಸಿದ್ದು ಯಾಕೆ?
ಸದ್ಯ ಕಾರ್ಮಿಕರಿಗೆ ಚಿನ್ಯಾಲಿಸೌರ್ ಸಮುದಾಯ ಆರೋಗ್ಯ ಕೇಂದ್ರದಲ್ಲಿ ಚಿಕಿತ್ಸೆ ಮುಂದುವರಿದಿದೆ. ಹಲವು ರೀತಿಯ ವೈದ್ಯಕೀಯ ತಪಾಸಣೆ ನಡೆದಿದೆ. ಇನ್ನು ಪ್ರಧಾನಿ ಮೋದಿ, ಸಿಎಂ ಪುಷ್ಕರ್ ಸಿಂಗ್ ಧಾಮಿ, ಸಚಿವ ವಿ.ಕೆ ಸಿಂಗ್ ಸೇರಿ ಎಲ್ಲರಿಗೂ ಕಾರ್ಮಿಕರು ಧನ್ಯವಾದ ಅರ್ಪಿಸಿದ್ದಾರೆ. ಅಲ್ಲದೇ ಅಗತ್ಯ ನೆರವು ನೀಡಿ, ಹೊರ ಕರೆತಂದಿದ್ದಕ್ಕೆ ಕೂಡ ಕಾರ್ಮಿಕರು ತುಂಬು ಹೃದಯದ ಧನ್ಯವಾದಗಳನ್ನು ಸಲ್ಲಿಸಿದ್ದಾರೆ.
ಮಂಗಳವಾರ 41 ಕಾರ್ಮಿಕರನ್ನು ಸುರಂಗದಿಂದ ರಕ್ಷಣೆ ಮಾಡುತ್ತಿದ್ದಂತೆಯೇ ಎಕ್ಸ್ ಮಾಡಿರುವ ಮೋದಿ, ನಮ್ಮ ಕಾರ್ಮಿಕ ಬಂಧುಗಳ ರಕ್ಷಣಾ ಕಾರ್ಯಾಚರಣೆಯ ಯಶಸ್ಸು ಎಲ್ಲರನ್ನೂ ಭಾವುಕರನ್ನಾಗಿಸುತ್ತಿದೆ. ನಿಮ್ಮ ಧೈರ್ಯ ಮತ್ತು ತಾಳ್ಮೆ ಎಲ್ಲರಿಗೂ ಸ್ಪೂರ್ತಿದಾಯಕವಾಗಿದೆ ಎಂದು ಸುರಂಗದಲ್ಲಿ ಸಿಕ್ಕಿಬಿದ್ದ ಸ್ನೇಹಿತರಿಗೆ ಹೇಳುತ್ತೇನೆ.
#WATCH | Rescued worker gives a thumbs up the moment he comes out of the rescue pipe after being trapped inside the Silkyara tunnel for 17 days pic.twitter.com/C4RNOOa61m
ನಾನು ನಿಮ್ಮೆಲ್ಲರಿಗೂ ಒಳ್ಳೆಯ ಮತ್ತು ಉತ್ತಮ ಆರೋಗ್ಯವನ್ನು ಬಯಸುತ್ತೇನೆ. ದೀರ್ಘಾವಧಿಯ ಕಾಯುವಿಕೆಯ ನಂತರ ನಮ್ಮ ಈ ಸ್ನೇಹಿತರು ಈಗ ತಮ್ಮ ಪ್ರೀತಿಪಾತ್ರರನ್ನು ಭೇಟಿಯಾಗುತ್ತಾರೆ ಎಂಬುದು ತುಂಬಾ ತೃಪ್ತಿಯ ವಿಷಯ. ಈ ಸವಾಲಿನ ಸಮಯದಲ್ಲಿ ಈ ಎಲ್ಲಾ ಕುಟುಂಬಗಳು ತೋರಿದ ತಾಳ್ಮೆ ಮತ್ತು ಧೈರ್ಯವನ್ನು ಸಾಕಷ್ಟು ಪ್ರಶಂಸಿನೀಯ. ಅವರ ಶೌರ್ಯ ಮತ್ತು ಸ್ಥೈರ್ಯ ನಮ್ಮ ಕಾರ್ಮಿಕ ಬಂಧುಗಳಿಗೆ ಹೊಸ ಬದುಕನ್ನು ನೀಡಿದೆ ಎಂದು ತಿಳಿಸಿದರು.
ಉತ್ತರಕಾಶಿ ಜಿಲ್ಲೆಯ ಸಿಲ್ಕ್ಯಾರ ಹಾಗೂ ದಂಡಲ್ಗಾಂವ್ಗೆ ಸಂಪರ್ಕ ಕಲ್ಪಿಸಲು ಚಾರ್ ಧಾಮ್ ರಸ್ತೆ ಯೋಜನೆ ಅಡಿಯಲ್ಲಿ ಸುರಂಗ ಮಾರ್ಗ ನಿರ್ಮಿಸಲಾಗುತ್ತಿದೆ. 4.5 ಕಿಲೋ ಮೀಟರ್ ದೂರದ ಸುರಂಗ ನಿರ್ಮಾಣದ ವೇಳೆ ಸುಮಾರು 150 ಮೀಟರ್ ಉದ್ದದ ಸುರಂಗ ಕುಸಿದಿತ್ತು. ನವೆಂಬರ್ 12ರಂದು ಜಾವ 4 ಗಂಟೆ ಸುಮಾರಿಗೆ ಸುರಂಗ ಕುಸಿದಿದ್ದು, ಕೂಡಲೇ ರಕ್ಷಣಾ ಕಾರ್ಯಾಚರಣೆ ಆರಂಭಿಸಲಾಗಿತ್ತು. ಈ ವೇಳೆ 41 ಮಂದಿ ಕಾರ್ಮಿಕರು ಸುರಂಗದೊಳಗೆ ಸಿಲುಕಿಕೊಂಡಿದ್ದು, 17 ದಿನಗಳ ಬಳಿಕ ಸತತ ಕಾರ್ಯಾಚರಣೆ ನಡೆಸಿ ಅವರನ್ನು ಸುರಕ್ಷಿತವಾಗಿ ಮಂಗಳವಾರ ರಾತ್ರಿ ಹೊರತರಲಾಯಿತು.
ಡೆಹ್ರಾಡೂನ್: ಸುರಂಗದ ಒಳಗಡೆ ಇದ್ದ ಕಾರ್ಮಿಕರು ಸುರಕ್ಷಿತವಾಗಿ ಹೊರಬರಲಿ ಎಂಬ ದೇಶದ ಜನರ ಪ್ರಾರ್ಥನೆ ಫಲ ನೀಡಿದೆ. ಉತ್ತರಾಖಂಡದ ಉತ್ತರಕಾಶಿ ಸುರಂಗದಲ್ಲಿ (Uttarakhand’s Silkyari Tunnel) 17 ದಿನಗಳಿಂದ ಸಿಲುಕಿದ್ದ ಕಾರ್ಮಿಕರನ್ನು (Workers) ರಕ್ಷಣೆ ಮಾಡಲಾಗಿದೆ.
17 ದಿನ 400 ಗಂಟೆಗಳ ಆಪರೇಷನ್ ಯಶಸ್ವಿಯಾಗಿದ್ದು ಮಂಗಳವಾರ ರಾತ್ರಿ ಒಬ್ಬೊಬ್ಬರಾಗಿ ಸುರಂಗದಿಂದ ಕಾರ್ಮಿಕರು ಹೊರ ಬರುತ್ತಿದ್ದಾರೆ.
#WATCH | The first worker among the 41 workers trapped inside the Silkyara tunnel in Uttarakhand since November 12, has been successfully rescued. pic.twitter.com/Tbelpwq3Tz
ನೆಲದಿಂದ ಸಮಾನಾಂತರವಾಗಿ ಮೊದಲು ಕೈಗೊಂಡಿದ್ದ ಕೊರೆವ ಕೆಲಸವನ್ನು, ಅದು ನಿಂತಿದ್ದ ಸ್ಥಳದಿಂದಲೇ ನಿಷೇಧಿತ ಇಲಿ ಬಿಲ ಗಣಿಗಾರಿಕೆಯ ತಂತ್ರಜ್ಞಾನ ಬಳಸಿ ಡ್ರಿಲ್ಲಿಂಗ್ ಮಾಡಿದ್ದಾರೆ. ಕೊರೆವ ಕಾರ್ಯ ಪೂರ್ಣಗೊಂಡ ಬಳಿಕ ಎನ್‌ಡಿಆರ್‌ಎಫ್ ಸಿಬ್ಬಂದಿ ಸುರಂಗದೊಳಗೆ ಹೋಗಿ, ಕಾರ್ಮಿಕರನ್ನು ಒಬ್ಬೊಬ್ಬರನ್ನಾಗಿ ಹೊರಗೆ ಕರೆತಂದಿದ್ದಾರೆ.
#WATCH | Uttarkashi (Uttarakhand) tunnel rescue | Micro tunnelling expert Chris Cooper says, "Three workers have come out. All the members of the rescue team are very happy…" pic.twitter.com/MylmYN2q6r
ಕಾರ್ಮಿಕರನ್ನು ಕೂಡಲೇ ಆಸ್ಪತ್ರೆಗೆ ಕರೆದೊಯ್ಯಲು 41 ಅಂಬುಲೆನ್ಸ್, ಸ್ಟ್ರೆಚ್ಚರ್, ಮೆಡಿಕಲ್ ಎಮೆರ್ಜೆನ್ಸಿ ಇದ್ರೆ ಚಿನೂಕ್ ಹೆಲಿಕಾಪ್ಟರ್.. ಹೀಗೆ ಎಲ್ಲವನ್ನು ಸಜ್ಜಾಗಿ ಇರಿಸಲಾಗಿದೆ. ಸ್ಥಳದಲ್ಲೇ ಸಿಎಂ ಪುಷ್ಕರ್ ಸಿಂಗ್ ಧಾಮಿ, ಕೇಂದ್ರ ಸಚಿವ ವಿಕೆ ಸಿಂಗ್, ಕಾರ್ಮಿಕರು ಬಂಧುಗಳು ಸ್ಥಳದಲ್ಲೇ ಬೀಡುಬಿಟ್ಟಿದ್ದಾರೆ.
#WATCH | Uttarkashi (Uttarakhand) tunnel rescue: As rescue operation enters final stage, "I'm very very happy", says kin of a worker who is trapped inside Silkyara tunnel pic.twitter.com/vvBA3XHwS5
ರಕ್ಷಣಾ ಕಾರ್ಯದ ವೇಳೆ ಯಂತ್ರಗಳು ಕೈಕೊಟ್ಟಿದ್ದರಿಂದ ಕಾರ್ಯಾಚರಣೆ ವಿಳಂಬವಾಗಿತ್ತು. ಕೊನೆಗೆ ರ‍್ಯಾಟ್ ಹೋಲ್ ಮೈನಿಂಗ್ (Rat Hole Mining) ಮೂಲಕ 41 ಜನರನ್ನು ರಕ್ಷಿಸಲು ಮಾಸ್ಟರ್ ಪ್ಲ್ಯಾನ್ ರೂಪಿಸಲಾಗಿತ್ತು.
ಉತ್ತರಕಾಶಿ ಜಿಲ್ಲೆಯ ಸಿಲ್ಕ್ಯಾರ ಹಾಗೂ ದಂಡಲ್ಗಾಂವ್ಗೆ ಸಂಪರ್ಕ ಕಲ್ಪಿಸಲು ಚಾರ್ ಧಾಮ್ ರಸ್ತೆ ಯೋಜನೆ ಅಡಿಯಲ್ಲಿ ಸುರಂಗ ಮಾರ್ಗ ನಿರ್ಮಿಸಲಾಗುತ್ತಿದೆ. 4.5 ಕಿಲೋ ಮೀಟರ್ ದೂರದ ಸುರಂಗ ನಿರ್ಮಾಣದ ವೇಳೆ ಸುಮಾರು 150 ಮೀಟರ್ ಉದ್ದದ ಸುರಂಗ ಕುಸಿದಿತ್ತು. ನವೆಂಬರ್ 12ರಂದು ಜಾವ 4 ಗಂಟೆ ಸುಮಾರಿಗೆ ಸುರಂಗ ಕುಸಿದಿದ್ದು, ಕೂಡಲೇ ರಕ್ಷಣಾ ಕಾರ್ಯಾಚರಣೆ ಆರಂಭಿಸಲಾಗಿತ್ತು.
ಡೆಹ್ರಾಡೂನ್: ಉತ್ತರಾಖಂಡದ ಉತ್ತರಕಾಶಿ ಸುರಂಗದಲ್ಲಿ (Uttarakhand’s Silkyari Tunnel) 17 ದಿನಗಳಿಂದ ಸಿಲುಕಿದ್ದ ಕಾರ್ಮಿಕರ (Workers) ರಕ್ಷಣಾ ಕಾರ್ಯ ಅಂತಿಮ ಘಟ್ಟ ತಲುಪಿದ್ದು ಯಾವುದೇ ಕ್ಷಣದಲ್ಲಿ ಹೊರ ಬರುವ ಸಾಧ್ಯತೆಯಿದೆ.
ಕಾರ್ಮಿಕರು ರಕ್ಷಣೆಗೆ 41 ಅಂಬುಲೆನ್ಸ್‌ಗಳನ್ನು (Ambulance) ಸಿದ್ಧಗೊಳಿಸಲಾಗಿದೆ. ಸುರಂಗದಿಂದ ಹೊರ ಬಂದ ಕಾರ್ಮಿಕರನ್ನು ಅಂಬುಲೆನ್ಸ್ ಮೂಲಕ ಆಸ್ಪತ್ರೆಗೆ ದಾಖಲಿಸಲಾಗುತ್ತಿದೆ.
#WATCH | Uttarkashi tunnel rescue | Due to the rescue operation, a temporary medical facility has been expanded inside the tunnel. After evacuating the trapped workers, health training will be done at this place. In case of any problem, 8 beds are arranged by the health… pic.twitter.com/ehAXzwd5dV
#WATCH | Uttarkashi tunnel rescue | Union Minister General VK Singh (Retd), former advisor of PMO Bhaskar Khulbe and former Engineer-In-Chief and BRO DG Lieutenant General Harpal Singh (Retd) come out of the Silkyara tunnel.
ಉತ್ತರಕಾಶಿ ಜಿಲ್ಲೆಯ ಸಿಲ್ಕ್ಯಾರ ಹಾಗೂ ದಂಡಲ್ಗಾಂವ್ಗೆ ಸಂಪರ್ಕ ಕಲ್ಪಿಸಲು ಚಾರ್ ಧಾಮ್ ರಸ್ತೆ ಯೋಜನೆ ಅಡಿಯಲ್ಲಿ ಸುರಂಗ ಮಾರ್ಗ ನಿರ್ಮಿಸಲಾಗುತ್ತಿದೆ. 4.5 ಕಿಲೋ ಮೀಟರ್ ದೂರದ ಸುರಂಗ ನಿರ್ಮಾಣದ ವೇಳೆ ಸುಮಾರು 150 ಮೀಟರ್ ಉದ್ದದ ಸುರಂಗ ಕುಸಿದಿತ್ತು. ನವೆಂಬರ್ 12ರಂದು ಜಾವ 4 ಗಂಟೆ ಸುಮಾರಿಗೆ ಸುರಂಗ ಕುಸಿದಿದ್ದು, ಕೂಡಲೇ ರಕ್ಷಣಾ ಕಾರ್ಯಾಚರಣೆ ಆರಂಭಿಸಲಾಗಿತ್ತು. ಇದನ್ನೂ ಓದಿ: ಗೋಪೂಜೆ ವೇಳೆ ಬಂಗಾರದ ಸರ ನುಂಗಿದ ಹಸು – ಶಸ್ತ್ರಚಿಕಿತ್ಸೆ ಮಾಡಿ ಹೊರತೆಗೆದ ವೈದ್ಯರು
ನಿರ್ಮಾಪಕ ಕೆ.ಮಂಜು (K. Manju) ಅಧ್ಯಕ್ಷತೆಯ 36 ಮಂದಿ ನಿರ್ಮಾಪಕರನ್ನು ಒಳಗೊಂಡ ಸಮಿತಿಯಿಂದ ಸಿನಿ ಕಾರ್ಮಿಕರ ಹೊಸ ವೇತನ ಪರಿಷ್ಕರಣೆ ವರದಿಯನ್ನು ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ ಹಾಗೂ ಕರ್ನಾಟಕ ಚಲನಚಿತ್ರ ನಿರ್ಮಾಪಕರ ಸಂಘಕ್ಕೆ ಹಸ್ತಾಂತರಿಸಿದೆ. ಕೊರೋನಾ ಸೇರಿದಂತೆ ಬೇರೆ ಬೇರೆ ಕಾರಣಗಳಿಗಾಗಿ ಕಳೆದ ನಾಲ್ಕು ವರ್ಷಗಳಿಂದ ಸಿನಿಮಾ ಕಾರ್ಮಿಕರ ವೇತನ ಪರಿಷ್ಕರಣೆಗೆ ಕೊನೆಗೂ ಮುಕ್ತಿ ಸಿಕ್ಕಿದೆ. ನಿರ್ಮಾಪಕ ಕೆ. ಮಂಜು ಅಧ್ಯಕ್ಷತೆಯಲ್ಲಿ 36ಕ್ಕೂ ಹೆಚ್ಚು ನಿರ್ಮಾಪಕರನ್ನು ಒಳಗೊಂಡ ಸಿನಿಮಾ ಕಾರ್ಮಿಕರ ವೇತನ ಪರಿಷ್ಕರಣೆ ಸಮಿತಿಯಿಂದ ಹೊಸ ವೇತನ ವರದಿಯನ್ನು ರೂಪಿಸಿಲಾಗಿದ್ದು, ಸಮಿತಿ ಸೂಚಿಸಿರುವ ವರದಿಗೆ ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ ಹಾಗೂ ಕರ್ನಾಟಕ ಚಲನಚಿತ್ರ ನಿರ್ಮಾಪಕರ ಸಂಘ ಸಂಪೂರ್ಣವಾಗಿ ಒಪ್ಪಿಗೆ ಸೂಚಿಸಿದೆ. ಆ ಮೂಲಕ ನಿರ್ಮಾಪಕರಿಗೆ ಹೊರೆ ಅನಿಸಿದರೂ ಚಿತ್ರೋದ್ಯಮದ ಕುಟುಂಬದ ಸದಸ್ಯರಾಗಿರುವ ಸಿನಿಮಾ ಕಾರ್ಮಿಕರಿಗೆ ಒಳ್ಳೆಯದಾಗಬೇಕು ಎನ್ನುವ ಆಲೋಚನೆಯಲ್ಲಿ ಕಾರ್ಮಿಕರ ಎಲ್ಲ ಬೇಡಿಕೆಗಳನ್ನು ಒಳಗೊಂಡಂತೆಯೇ ಹೊಸ ವೇತನ ಪರಿಷ್ಕರಣೆ ಮಾಡಲಾಗಿದೆ.
ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿಯಲ್ಲಿ (Film Chamber) ಕರೆದಿದ್ದ ಪತ್ರಿಕಾಗೋಷ್ಠಿಯಲ್ಲಿ ಸಿನಿಮಾ ಕಾರ್ಮಿಕರಿಗಾಗಿ ರೂಪಿಸಿರುವ ಹೊಸ ವೇತನದ ಕುರಿತು ನೀಡಿದ ವಾಣಿಜ್ಯ ಮಂಡಳಿ ಅಧ್ಯಕ್ಷ ಎನ್. ಎಂ. ಸುರೇಶ್, ‘36ಕ್ಕೂ ಹೆಚ್ಚು ನಿರ್ಮಾಪಕರನ್ನು ಒಳಗೊಂಡ ವೇತನ ಪರಿಷ್ಕರಣೆ ಸಮಿತಿಯನ್ನು ನಿರ್ಮಾಪಕ ಕೆ. ಮಂಜು ಅವರ ಅಧ್ಯಕ್ಷತೆಯಲ್ಲಿ ರಚಿಸಲಾಗಿತ್ತು. ಮೂರು ತಿಂಗಳ ಕಾಲ ಹಲವು ಹಂತಗಳಲ್ಲಿ ಸಭೆಗಳನ್ನು ನಡೆಸುವ ಜತೆಗೆ ಹಲವರ ಅಭಿಪ್ರಾಯಗಳನ್ನು ಸಂಗ್ರಹಿಸಿ ನೀಡಿರುವ ವೇತನ ಪರಿಷ್ಕರಣಾ ವರದಿ ಅತ್ಯಂತ ಸಮಂಜಸವಾಗಿದೆ. ರಜೆ ಹಾಗೂ ಹಬ್ಬದ ದಿನಗಳಲ್ಲಿ ಕೆಲಸ ಮಾಡಿದರೆ ಸಂಬಳದ (ದಿನದ ವೇತನ) ಜತೆಗೆ ಹೆಚ್ಚುವರಿ ಕೆಲಸದ ಬಾಟಾ (ದಿನದ ಕೂಲಿ), ಪ್ರಯಾಣದ ಬಾಟಾ ವೇತನದಲ್ಲಿ ಅರ್ಧ ಮಾತ್ರ ಕಡಿತ ಮಾಡಲಾಗಿದೆ. ಆದರೂ ಪೂರ್ತಿ ಬಾಟಾ ಕೊಡಲೇ ಬೇಕು ಎಂದು ಪಟ್ಟು ಹಿಡಿದಿರುವುವುದು ಸರಿಯಲ್ಲ. ದಿನದ ವೇತನ ಜತೆಗೆ ಪೂರ್ತಿ ಹೆಚ್ಚುವರಿ ಬಾಟಾ ಬದಲು ಅರ್ಧ ಕೂಲಿ ಕೊಡಲು ಸಮಿತಿ ಸೂಚಿಸಿದೆ. ನಿರ್ಮಾಪಕರಿಗೆ ಸ್ವಲ್ಪ ಹೊರೆಯಾದರೂ ನಿರ್ಮಾಪಕರು ಈ ಹೊಸ ವೇತನಕ್ಕೆ ಒಪ್ಪಿಕೊಂಡಿದ್ದಾರೆ. ಆದರೂ ಕೆಲವರು ದಿನದ ಬಾಟಾದಲ್ಲಿ ಕಡಿತ ಮಾಡಿದ್ದಾರೆ ಎಂದು ನೆಪ ಒಡ್ಡಿ ಹೊಸ ವೇತನಕ್ಕೆ ವಿರೋಧ ಮಾಡುತ್ತಿದ್ದಾರೆ. ಜತೆಗೆ ಶೂಟಿಂಗ್‌ನಲ್ಲಿರುವ ಸಿನಿಮಾಗಳ ಕೆಲಸಗಳನ್ನು ನಿಲ್ಲಿಸುತ್ತೇವೆ ಎಂದು ಬೆದರಿಸುತ್ತಿದ್ದಾರೆ. ಇದು ಸರಿಯಾದ ನಡೆ ಅಲ್ಲ. ಒಂದು ವೇಳೆ ಈ ಬೆದರಿಕೆ ವರ್ತನೆಗಳು ಮುಂದುವರಿದರೆ ಕಾನೂನು ವ್ಯಾಪ್ತಿಯ ಜತೆಗೆ ಚಿತ್ರರಂಗದ ನಿಯಮಗಳ ಪ್ರಕಾರ ನಾವೂ ಕೂಡ ಸೂಕ್ತ ಕ್ರಮ ಕೈಗೊಳ್ಳುತ್ತೇವೆ’ ಎಂದು ಹೇಳಿದರು.
ಕರ್ನಾಟಕ ಚಲನಚಿತ್ರ ನಿರ್ಮಾಪಕರ ಸಂಘದ ಅಧ್ಯಕ್ಷ ಉಮೇಶ್ ಬಣಕಾರ್ ಮಾತನಾಡಿ, ‘ಮಂಜು ಅವರ ಅಧ್ಯಕ್ಷತೆಯ ವೇತನ ಪರಿಷ್ಕರಣೆ ಸಮಿತಿ ನೀಡಿರುವ ವರದಿಗೆ ನಿರ್ಮಾಪಕರ ಸಂಘದ ಒಪ್ಪಿಗೆ ಇದೆ. ಈಗಿನಿಂದಲೇ ಹೊಸ ವೇತನ ಜಾರಿಯಾಗಲಿದೆ. ಯಾರಾದರೂ ಈ ಹೊಸ ವೇತನವನ್ನು ಉಲ್ಲಂಘಿಸುವುದು ಅಥವಾ ಚಿತ್ರೀಕರಣಕ್ಕೆ ತೊಂದರೆ ಕೊಟ್ಟರೆ ನಿರ್ಮಾಪಕರು ತೆಗೆದುಕೊಳ್ಳುವ ಸ್ವತಂತ್ರ ನಿರ್ಧಾರಗಳಿಂದ ಬರಬಹುದಾದ ಪರಿಣಾಮಗಳನ್ನು ಸಿನಿಮಾ ಕಾರ್ಮಿಕರೇ ಎದುರಿಸಬೇಕಾಗುತ್ತದೆ’ ಎಂದು ಪರೋಕ್ಷವಾಗಿ ಎಚ್ಚರಿಸಿದರು.
ಹೊಸ ವೇತನ ಪರಿಷ್ಕರಣೆ ಸಮಿತಿ ಅಧ್ಯಕ್ಷ ಕೆ.ಮಂಜು ಮಾತನಾಡಿ, ‘ಮೂರು ವರ್ಷಕ್ಕೊಮ್ಮೆ ವೇತನ ಪರಿಷ್ಕರಣೆ ಮಾಡುವುದು ಚಿತ್ರೋದ್ಯಮದ ವಾಡಿಕೆ. ಕೊರೋನಾದಿಂದ ಕಳೆದ ನಾಲ್ಕು ವರ್ಷಗಳಿಂದ ಸಿನಿಮಾ ಕಾರ್ಮಿಕರಿಗೆ ವೇತನ ಪರಿಷ್ಕರಣೆ ಆಗಿಲ್ಲ. ನಿರ್ಮಾಪಕರಿಗೆ ಏನೇ ಕಷ್ಟ ಇದ್ದರೂ ಕಾರ್ಮಿಕರಿಗೆ ತೊಂದರೆ ಆಗಬಾರದು ಎನ್ನುವ ಕಾರಣಕ್ಕೆ ಮೂರು ತಿಂಗಳ ಕಾಲ ಕೆಲಸ ಮಾಡಿ 30ಕ್ಕೂ ಹೆಚ್ಚು ಸಭೆ, ಚಿತ್ರರಂಗದ ದಿಗ್ಗಜರ, ಚಿತ್ರೋದ್ಯಮದ ಸಂಘ- ಸಂಸ್ಥೆಗಳ ಅಭಿಪ್ರಾಯಗಳನ್ನು ತೆಗೆದುಕೊಂಡೇ ನಾವು ಹೊಸ ವೇತನ ಪರಿಷ್ಕರಣೆ ಮಾಡಿದ್ದೇವೆ. ರಜೆ ಹಾಗೂ ಹಬ್ಬದ ದಿನಗಳಲ್ಲಿ ಮಾಡುವ ಕೆಲಸಕ್ಕೆ ಅರ್ಧ ಬಾಟಾ ಕಡಿತ ಮಾಡಿರುವುದಕ್ಕೆ ವಿರೋಧ ಮಾಡುತ್ತಿರುವುದು ಸರಿಯಲ್ಲ. ರಜೆ ದಿನಗಳಲ್ಲೂ ಕೆಲಸ ಕೊಡುತ್ತಿದ್ದೇವೆ. ಸಂಬಳ ಜತೆಗೆ ಅರ್ಧ ಕೂಲಿಯೂ ಹೆಚ್ಚುವರಿಯಾಗಿ ಕೊಡುತ್ತಿದ್ದೇವೆ. ಹೀಗಾಗಿ ನಾವು ರೂಪಿಸಿರುವ ಹೊಸ ವೇತನ ಪರಿಷ್ಕರಣೆ ವರದಿ ಅತ್ಯಂತ ವೈಜ್ಞಾನಿಕವಾಗಿದೆ. ಚಿತ್ರರಂಗ ತುಂಬಾ ಕಷ್ಟದಲ್ಲಿದೆ. ನಿರ್ಮಾಪಕರಿಗೆ ಹಾಕಿದ ಹಣ ವಾಪಸ್ಸು ಬರುತ್ತದೋ ಇಲ್ಲವೋ ಎನ್ನುವ ಗ್ಯಾರಂಟಿ ಇಲ್ಲ. ಆದರೂ ನಾವು ಎಲ್ಲರಿಗೂ ಹಣ ಪಾವತಿ ಮಾಡಿಯೇ ಕೆಲಸ ಮಾಡಿಸುತ್ತಿದ್ದೇವೆ’ ಎಂದರು.
ವೇತನ ಪರಿಷ್ಕರಣೆ ಸಮಿತಿ ಸದಸ್ಯ ದಯಾಳ್ ಪದ್ಮನಾಭನ್ ಮಾತನಾಡಿ, ‘ನಾಲ್ಕು ವರ್ಷಗಳಿಂದ ವೇತನ ಪರಿಷ್ಕರಣೆ ಮಾಡಿಲ್ಲ. ಆ ನಾಲ್ಕು ವರ್ಷಗಳನ್ನು ಗಮನದಲ್ಲಿಟ್ಟುಕೊಂಡು ವರ್ಷಕ್ಕೆ ಶೇ.5ರಂತೆ ನಾಲ್ಕು ವರ್ಷಗಳನ್ನು ಸೇರಿಸಿ ಶೇ.20ರಷ್ಟು ವೇತನ ಹೆಚ್ಚಳ ಮಾಡಿದ್ದೇವೆ. ಇದರಿಂದ ಚಿತ್ರರಂಗದ ಆಯಾ ವಿಭಾಗಗಳಲ್ಲಿ ಕೆಲಸ ಮಾಡುವ ಪ್ರತಿಯೊಬ್ಬ ಕಾರ್ಮಿಕರಿಗೆ ಶೇ.45 ರಿಂದ 70ರಷ್ಟು ವೇತನ ಹೆಚ್ಚಳವಾಗಲಿದೆ’ ಎಂದು ತಿಳಿಸಿದರು. ಪತ್ರಿಕಾಗೋಷ್ಠಿಯಲ್ಲಿ ಪ್ರಮೀಳಾ ಜೋಷಾಯ್, ನರಸಿಂಹಲು, ಭಾ. ಮ. ಗಿರೀಶ್, ಪ್ರವೀಣ್ ಕುಮಾರ್ ಮುಂತಾದವರು ಹಾಜರಿದ್ದರು.
ಮಂಗಳೂರು: ಮಾರ್ಬಲ್ ತುಂಬಿದ್ದ ಲಾರಿಯೊಂದು (Marbal Loaded Lorry) ಪಲ್ಟಿಯಾಗಿ ನಾಲ್ವರು ಕಾರ್ಮಿಕರು ಗಂಭೀರ ಗಾಯಗೊಂಡ ಘಟನೆ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ನಡೆದಿದೆ.
ಜಿಲ್ಲೆಯ ಬಂಟ್ವಾಳ (Bantwal) ತಾಲೂಕಿನ ಕರೋಪಾಡಿ ಗ್ರಾಮದ ಒಡಿಯೂರು ಸಮೀಪ ಈ ದುರ್ಘಟನೆ ನಡೆದಿದೆ. ಗಾಯಗೊಂಡ ಕಾರ್ಮಿಕರು ಉತ್ತರ ಭಾರತ ಮೂದವರು ಎಂಬುದಾಗಿ ತಿಳಿದುಬಂದಿದೆ.
ಘಟನೆ ವಿವರ: ಮಾರ್ಬಲ್ ಅನ್ ಲೋಡ್‍ಗಾಗಿ ಲಾರಿಯನ್ನು ರಿವರ್ಸ್ ತೆಗೆದುಕೊಳ್ಳಲಾಗುತ್ತಿತ್ತು. ಈ ವೇಳೆ ಬ್ರೇಕ್ ಫೈಲ್ ಆಗಿ ಲಾರಿ ಪಲ್ಟಿಯಾಯಿತು. ಅಲ್ಲದೆ ಹೋಗಿ ನೀರಿನ ತೊಟ್ಟಿಗೆ ಬಿದ್ದಿದೆ. ಪರಿಣಾಮ ಲಾರಿಯಲ್ಲಿದ್ದ ನಾಲ್ವರು ಕಾರ್ಮಿಕರ ಕೈ-ಕಾಲು ಛಿದ್ರ ಛಿದ್ರಗೊಂಡಿದೆ. ಇದನ್ನೂ ಓದಿ: ಉಡುಪಿ ಹಿಂದೂ ಸಮಾಜೋತ್ಸವಕ್ಕೆ ತಟ್ಟಿದ ಶಿವಮೊಗ್ಗ ಗಲಾಟೆ ಬಿಸಿ
ಘಟನೆ ನಡೆದ ಕೂಡಲೇ ಸ್ಥಳೀಯರು ಜಮಾಯಿಸಿ ನಾಲ್ಕು ಅಂಬುಲೆನ್ಸ್ ಮೂಲಕ ಗಾಯಾಳುಗಳನ್ನು ಮಂಗಳೂರಿನ ಆಸ್ಪತ್ರೆಗೆ ರವಾನೆ ಮಾಡಲಾಗಿದೆ. ಘಟನಾ ಸ್ಥಳಕ್ಕೆ ವಿಟ್ಲ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.