ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ರಾಂಬನ್ ಜಿಲ್ಲೆಯಲ್ಲಿ ಗುರುವಾರ ಸುರಂಗ ಕುಸಿತವಾಗಿದ್ದು, 36 ಗಂಟೆಗಳ ಸುದೀರ್ಘ ರಕ್ಷಣಾ ಕಾರ್ಯಚರಣೆ ಬಳಿಕ ಇಲ್ಲಿಯವರೆಗೆ ಅವಶೇಷಗಳಿಂದ 10 ಮೃತದೇಹಗಳನ್ನು ಹೊರತೆಗೆಯಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಸುರಂಗ ನಿರ್ಮಿಸುತ್ತಿದ್ದ ಕಂಪನಿ ರಕ್ಷಣಾ ಮಾನದಂಡಗಳನ್ನು ಅನುಸರಿಸದಿರುವುದೇ ದುರಂತಕ್ಕೆ ಕಾರಣವಿರಬಹುದು ಎಂದು ತಜ್ಞರು ಅಭಿಪ್ರಾಯಪಟ್ಟಿದ್ದಾರೆ. ಕಂಪನಿ ನಿರ್ಲಕ್ಷ್ಯಕ್ಕೆ ಪೊಲೀಸರು ಎಫ್‌ಐಆರ್ ದಾಖಲಿಸಿಕೊಂಡಿದ್ದಾರೆ. ಇದನ್ನೂ ಓದಿ: ಇಂದು 155 ಕೇಸ್ – 166 ಮಂದಿ ಆಸ್ಪತ್ರೆಯಿಂದ ಬಿಡುಗಡೆ
ಗುರುವಾರ ತಡರಾತ್ರಿ ಸುರಂಗದಲ್ಲಿ ಕಾರ್ಮಿಕರು ಕೆಲಸ ಮಾಡುತ್ತಿದ್ದ ಸಂದರ್ಭ ಬೃಹತ್ ಬಂಡೆಗಳು ಕುಸಿದಿದ್ದವು. ಅವಶೇಷಗಳಿಂದ ಪಶ್ಚಿಮ ಬಂಗಾಳದ ಐವರು, ನೇಪಾಳದ ಇಬ್ಬರು, ಅಸ್ಸಾಂನ ಒಬ್ಬ ಹಾಗೂ ಜಮ್ಮು ಮತ್ತು ಕಾಶ್ಮೀರದ ಇಬ್ಬರ ಮೃತದೇಹಗಳನ್ನು ಹೊರತೆಗೆಯಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಗದಗ: ಜಿಲ್ಲೆಯ ರೋಣ ತಾಲೂಕಿನ ಬೆಣ್ಣೆ ಹಳ್ಳ ಪ್ರವಾಹದಲ್ಲಿ ಸಿಲುಕಿದ್ದ ನಾಲ್ವರು ಕಾರ್ಮಿಕರನ್ನು ರಕ್ಷಿಸುವಲ್ಲಿ ಅಗ್ನಿಶಾಮಕ ದಳ ಯಶಸ್ವಿಯಾಗಿದೆ.
ಯಾಸ ಹಡಗಲಿ ಗ್ರಾಮದ ಯಲ್ಲಪ್ಪ ರಾಘವಪುರ, ಅರುಣ್ ವಾಲ್ಮೀಕಿ, ಪರಶುರಾಮ ಮುತ್ತಣ್ಣವರ್ ಮತ್ತು ಗವಿಸಿದ್ದ ಕಲ್ಲಿ ಕಾರ್ಮಿಕರು ಪ್ರವಾಹದಲ್ಲಿ ಸಿಲುಕಿದ್ದರು. ಯಾಸ ಹಡಗಲಿ ಹಾಗೂ ಯಾವಗಲ್ ಸಂಪರ್ಕ ಕಲ್ಪಿಸುವ ಬೆಣ್ಣೆಹಳ್ಳ ಸೇತುವೆ ಕಾರ್ಯಭರದಿಂದ ಸಾಗಿತ್ತು. ಮಳೆಗಾಲ ಆರಂಭವಾದ್ದರಿಂದ ‘ಡೇ ಆಂಡ್ ನೈಟ್’ ಕೆಲಸ ಶುರುವಾಗಿತ್ತು. ಇದನ್ನೂ ಓದಿ: ತಮಿಳು ಹೆಸರಾಂತ ನಟ ಧನುಷ್ ತಮ್ಮ ಮಗ ಎಂದ ದಂಪತಿಗೆ ನೋಟಿಸ್
ಕೆಲಸ ಮಾಡ್ತಿದ್ದಂತಹ ಸಂದರ್ಭದಲ್ಲಿ ರಾತ್ರಿ 3 ಗಂಟೆ ವೇಳೆಗೆ ಏಕಾಏಕಿ ಪ್ರವಾಹ ಬಂದಿದೆ. ಮೂರು ದಿನಗಳ ಕಾಲ ನಿರಂತರವಾಗಿ ಮಳೆ ಸುರಿಯುತ್ತಿದ್ದರೂ, ಬೆಣ್ಣೆಹಳ್ಳದಲ್ಲಿ ನೀರಿನ ಹರಿವು ಸಾಮಾನ್ಯವಾಗಿತ್ತು. ರಾತ್ರಿ ಕ್ಷಣ-ಕ್ಷಣಕ್ಕೂ ನೀರಿನ ಹರಿವು ಹೆಚ್ಚಾಗಿದೆ. ನೋಡನೋಡುತ್ತಿದ್ದಂತೆ ನೀರಿನ ಪ್ರಮಾಣ ಹೆಚ್ಚಾಗಿ ಸೇತುವೆ ಜಲಾವೃತವಾಗಿದೆ.
ದಿಕ್ಕು ತೋಚದೆ ನಡುಗಡ್ಡೆಯಲ್ಲಿ ನಾಲ್ವರು ಸಿಲುಕಿದ್ದಾರೆ. ನಂತರ ರೋಣ ತಹಶೀಲ್ದಾರ್ ಹಾಗೂ ಅಗ್ನಿ ಶಾಮಕ ಅಧಿಕಾರಿಗಳು ಸ್ಥಳಕ್ಕೆ ಧಾವಿಸಿ ರಕ್ಷಣೆಗೆ ಮುಂದಾದರು. ಪ್ರವಾಹದಲ್ಲಿ ಸಿಲುಕಿದ್ದವರನ್ನು ಲೈಫ್ ಜಾಕೆಟ್ ಹಾಗೂ ಹಗ್ಗದ ಮೂಲಕ ರಕ್ಷಿಸಲಾಗಿದೆ. ಈಗ ಕಾರ್ಮಿಕರು ನೀರಿನಿಂದ ಹೊರಬಂದು ನೆಮ್ಮದಿ ನಿಟ್ಟುಸಿರು ಬಿಟ್ಟಿದ್ದಾರೆ.
ಅಗ್ನಿ ಶಾಮಕದಳ ಅಧಿಕಾರಿ ಮಂಜುನಾಥ್ ಮೇಲ್ಮನೆ, ಸಿಬ್ಬಂದಿಗಳಾದ ಸಂತೋಷ್, ಆನಂದ್ ಗೌಡ್ರು, ಮುತ್ತಣ್ಣ ಪ್ರಧಾನಿ, ಎಸ್.ಬಿ.ಕಟ್ಟಿಮನಿ, ಎಸ್.ಅಳಗವಾಡಿ ಸೇರಿದಂತೆ ಅನೇಕ ಸಿಬ್ಬಂದಿಗಳು ಸ್ಥಳೀಯರು ಪಾಲ್ಗೊಂಡಿದ್ದರು. ಇದನ್ನೂ ಓದಿ: ಕಾರವಾರದಲ್ಲಿ ಉದ್ದ ಕಣ್ಣಿನ ಅಪರೂಪದ ಏಡಿ ಪತ್ತೆ
ರಾಯ್ಪುರ: ಬುಲ್ಡೋಜರ್ ವಾಹನದ ಟೈರ್‌ಗೆ ಪಂಪ್‍ನಿಂದ ಗಾಳಿ ತುಂಬಿಸುತ್ತಿದ್ದ ವೇಳೆ ಟೈರ್ ಸ್ಫೋಟಗೊಂಡು ಇಬ್ಬರು ಸಾವನ್ನಪ್ಪಿರುವ ಘಟನೆ ಛತ್ತೀಸ್‍ಗಢದ ರಾಯ್ಪುರ ಜಿಲ್ಲೆಯ ವರ್ಕ್‍ಶಾಪ್‍ವೊಂದರಲ್ಲಿ ನಡೆದಿದೆ.
ಮೇ 3ರಂದು ರಾಯ್‍ಪುರ ಸಿಲ್ತಾರಾ ಇಂಡಸ್ಟ್ರಿಯಲ್ ಏರಿಯಾದಲ್ಲಿ ಈ ಘಟನೆ ಸಂಭವಿಸಿದ್ದು, ಘಟನೆಯ ದೃಶ್ಯ ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿದೆ. ದೊಡ್ಡ ಟೈರ್‌ವೊಂದಕ್ಕೆ ಕಾರ್ಮಿಕನೋರ್ವ ಗಾಳಿ ತುಂಬುತ್ತಿರುವುದನ್ನು ವೀಡಿಯೋದಲ್ಲಿ ನೋಡಬಹುದಾಗಿದೆ. ನಂತರ ಮತ್ತೋರ್ವ ವ್ಯಕ್ತಿ ಬಂದು ಗಾಳಿಯ ಒತ್ತಡವನ್ನು ಪರೀಕ್ಷಿಸಲು ಟೈರ್ ಅನ್ನು ಒಂದೆರಡು ಬಾರಿ ಒತ್ತಿದಾಗ ಟೈರ್ ಸ್ಫೋಟಗೊಂಡಿದೆ. ಇದನ್ನೂ ಓದಿ: ಅಶ್ವಥ್ ನಾರಾಯಣಗೂ PSI ಅಕ್ರಮಕ್ಕೂ ಸಂಬಂಧವಿಲ್ಲ: ಮುನಿರತ್ನ
ಬೆಂಗಳೂರು: ನಿಜವಾದ ಕಾರಣಗಳಿಲ್ಲದೆ ಕೆಲಸ ಕದಿಯುವುದನ್ನು ಸಹಿಸಲು ಆಗುವುದಿಲ್ಲ. ಇಲಾಖೆಯಲ್ಲಿ ಗುಣಾತ್ಮಕ ಬದಲಾವಣೆ ತರುವ ನಿಟ್ಟಿನಲ್ಲಿ ಎಲ್ಲ ಹಂತದ ಅಧಿಕಾರಿ ಮತ್ತು ಸಿಬ್ಬಂದಿಗಳಿಗೆ ಬಯೋಮೆಟ್ರಿಕ್ ಹಾಜರಾತಿ ಆಧರಿಸಿ ವೇತನ ಪಾವತಿಸುವ ವ್ಯವಸ್ಥೆ ಕಡ್ಡಾಯಗೊಳಿಸಿ ಮಹತ್ವದ ನಿರ್ಧಾರ ಕೈಗೊಳ್ಳಲಾಗಿದೆ ಎಂದು ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ. ಕೆ. ಸುಧಾಕರ್ ಹೇಳಿದ್ದಾರೆ.
ಇಲಾಖೆಯ ಪ್ರಗತಿ ಪರಿಶೀಲನಾ ಸಭೆಯಲ್ಲಿ ಮಾತನಾಡಿದ ಅವರು, ಸರ್ಕಾರಿ ಆಸ್ಪತ್ರೆ, ಇಲಾಖೆ ಕಚೇರಿ ಮತ್ತು ಸಂಸ್ಥೆಗಳಲ್ಲಿ ವೈದ್ಯರು, ಅಧಿಕಾರಿಗಳು ಮತ್ತು ಸಿಬ್ಬಂದಿ ಕರ್ತವ್ಯದ ವೇಳೆಯಲ್ಲಿ ಹಾಜರಿಲ್ಲದಿರುವ ಬಗ್ಗೆ ಸಾರ್ವಜನಿಕರು ಹಾಗೂ ಚುನಾಯಿತ ಪ್ರತಿನಿಧಿಗಳಿಂದ ದೂರುಗಳು ಬಂದ ಹಿನ್ನಲೆಯಲ್ಲಿ ಈ ಕ್ರಮ ಕೈಗೊಳ್ಳಲಾಗಿದೆ ಎಂದು ಮಾಧ್ಯಮಗಳೊಂದಿಗೆ ಮಾಹಿತಿ ಹಂಚಿಕೊಂಡರು. ಇದನ್ನೂ ಓದಿ: ಪೂಜೆ ವೇಳೆ ಶಬ್ದ ಮಾಲಿನ್ಯ ಆರೋಪ- ವೇಣುಗೋಪಾಲ ದೇಗುಲಕ್ಕೆ ನೊಟೀಸ್
ಸರ್ಕಾರಿ ಅಧಿಕಾರಿಗಳ ಕರ್ತವ್ಯಲೋಪದಿಂದ ಆರೋಗ್ಯ ಸೇವೆಯಲ್ಲಿ ವ್ಯತ್ಯಯ ಆಗುತ್ತದೆ. ಹೀಗಾಗಿ ಕರ್ತವ್ಯದ ವೇಳೆಯಲ್ಲಿ ಹಾಜರಿಲ್ಲದ ಯಾರೇ ಆಗಲಿ ಅಂತಹವರ ವೇತನ ಕಡಿತಕ್ಕೆ ಸೂಚನೆ ನೀಡಲಾಗಿದೆ. ಇಲಾಖೆ ಅಡಿಯಲ್ಲಿ ಬರುವ ಎಲ್ಲ ಸಂಸ್ಥೆಗಳು ಮತ್ತು ಆಸ್ಪತ್ರೆಗಳಲ್ಲಿ ಪ್ರತಿಯೊಬ್ಬ ಅಧಿಕಾರಿ ಮತ್ತು ಸಿಬ್ಬಂದಿಗೂ ಅವರ ಆಧಾರ್ ಆಧರಿತ ಬಯೋಮೆಟ್ರಿಕ್ ಹಾಜರಾತಿ (ಎಇಬಿಎಎಸ್) ಕಡ್ಡಾಯಗೊಳಿಸಲಾಗಿದೆ. ಅದನ್ನು ಆಧರಿಸಿಯೇ ಇನ್ನು ಮುಂದೆ ವೇತನ ನೀಡುವಂತೆ ಅಧಿಕೃತ ಆದೇಶ ಹೊರಡಿಸಲಾಗಿದೆ ಎಂದು ವಿವರಿಸಿದರು.
ಕೋವಿಡ್ ಕಾರಣಕ್ಕೆ ಸ್ಥಗಿತಗೊಂಡಿದ್ದ ಬಯೋಮೆಟ್ರಿಕ್ ಹಾಜರಾತಿ ಪದ್ಧತಿಯನ್ನು ಕಳೆದ ಎರಡು ತಿಂಗಳ ಹಿಂದಿನಿಂದಲೇ ಮತ್ತೆ ಕಡ್ಡಾಯಗೊಳಿಸಲಾಗಿದೆ. ಅನೇಕ ಸಭೆಗಗಳಲ್ಲಿ ಮತ್ತು ಸುತ್ತೋಲೆ ಮೂಲಕವೂ ಈ ಬಗ್ಗೆ ಸೂಚನೆ ನೀಡಲಾಗಿದೆ. ಆದರೂ ಕೆಲ ಅಧಿಕಾರಿಗಳು ಮತ್ತು ಸಿಬ್ಬಂದಿ ತಮ್ಮ ಹಾಜರಾತಿ ದಾಖಲಿಸದಿರುವ ಪ್ರಕರಣಗಳು ಗಮನಕ್ಕೆ ಬಂದಿವೆ. ಇದನ್ನು ಗಂಭೀರವಾಗಿ ಪರಿಗಣಿಸಲಾಗಿದೆ. ಈಗ ಸ್ಪಷ್ಟ ಎಚ್ಚರಿಕೆ ಜೊತೆಗೆ ಅಧಿಕೃತ ಆದೇಶ ನೀಡಿದ್ದು ಅಂತಹ ಪ್ರಕರಣಗಳನ್ನು ಗೈರು ಹಾಜರಿ ಎಂದು ಪರಿಗಣಿಸಿ ವೇತನ ಕಡಿತಗೊಳಿಸಲಾಗುತ್ತದೆ ಎಂದು ಎಚ್ಚರಿಕೆ ನೀಡಿದರು. ಇದನ್ನೂ ಓದಿ: ಮೈಸೂರು ಸ್ಯಾಂಡಲ್ ಸೋಪ್ ಕಾರ್ಖಾನೆಯಲ್ಲೂ ಕಮಿಷನ್ ದಂಧೆ
ಡಿಡಿಒ ಹೊಣೆ:
ಇಲಾಖೆಯ ಆಸ್ಪತ್ರೆ, ಸಂಸ್ಥೆ ಮತ್ತು ಕೇಂದ್ರಗಳ ಜವಾಬ್ದಾರಿ ನಿರ್ವಹಿಸುವ ಡಿಡಿಒ (ಸ್ಯಾಲರಿ ಡ್ರಾಯಿಂಗ್ ಆಫೀಸರ್)ಗಳು ಪ್ರತೀ ತಿಂಗಳು ಎಇಬಿಎಎಸ್‍ನಲ್ಲಿ ತಮ್ಮ ವ್ಯಾಪ್ತಿಯ ಎಲ್ಲ ಸಿಬ್ಬಂದಿಗಳ ಹಾಜರಾತಿ ಪರಿಶೀಲಿಸಿ ಅದರ ಅನುಸಾರವೇ ವೇತನ ಪಾವತಿಗೆ ವರದಿ ಸಿದ್ಧಪಡಿಸಿ ಸಂಬಂಧಿಸಿದ ಅಧಿಕಾರಿಗಳ ಮೂಲಕ ಆಯಾ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿಗೆ (ಡಿಎಚ್‍ಒ) ಸಲ್ಲಿಸಬೇಕು. ಅವರು ಅದನ್ನು ಪರಿಶೀಲಿಸಿ ವೇತನ ಬಿಡುಗಡೆ ಮತ್ತು ಕಡಿತಕ್ಕೆ ಸೂಚನೆ ನೀಡಲಿದ್ದಾರೆ. ಡಿಎಚ್‍ಒ ಅವರು ಕೈಗೊಂಡ ಕ್ರಮಗಳನ್ನು ಮೇಲಿನ ಹಂತದ ಅಧಿಕಾರಿಗಳು ನಿಯಮಿತವಾಗಿ ಪರಿಶೀಲಿಸಲಿದ್ದಾರೆ ಎಂದು ಸ್ಪಷ್ಟಪಡಿಸಿದರು.
ಯಾರೇ ಆಗಲಿ ಶೇ.80ರಷ್ಟು ಹಾಜರಾತಿಗಿಂತ ಕಡಿಮೆ ಇದ್ದಲ್ಲಿ ಅವರ ವೇತನ ತಡೆ ಹಿಡಿಯಲಾಗುತ್ತದೆ. ನಂತರ ಮಾರ್ಗಸೂಚಿ ಅನ್ವಯ ಮುಂದಿನ ಕ್ರಮ ವಹಿಸಲಾಗುವುದು. ಒಂದು ವೇಳೆ ಶೇ.80ರಷ್ಟು ಹಾಜರಾತಿ ಇದ್ದಲ್ಲಿ ವೇತನ ಬಿಡುಗಡೆ ಮಾಡಿ ಉಳಿದ ಶೇ.20 ಹಾಜರಾತಿ ದಾಖಲು ಮಾಡದಿರುವುದಕ್ಕೆ ಕಾರಣ ಕೇಳಿ ನೋಟಿಸ್ ಜಾರಿಗೊಳಿಸಲಾಗುತ್ತದೆ. ಸಿಬ್ಬಂದಿ ನೀಡುವ ಕಾರಣ ನಿಜವಾಗಿದ್ದಲ್ಲಿ ಪ್ರಕರಣ ಮುಕ್ತಾಯಗೊಳಿಸಲಾಗುವುದು. ಒಂದು ವೇಳೆ ಸಬೂಬು ನೀಡಿದರೆ ಅಥವಾ ನೀಡಿರುವ ಮಾಹಿತಿ ಸುಳ್ಳು ಆಗಿದ್ದಲ್ಲಿ ಮುಂದಿನ ತಿಂಗಳ ವೇತನದಲ್ಲಿ ನಿರ್ದಿಷ್ಟಪಡಿಸಿರುವ ಮೊತ್ತವನ್ನು ಕಡಿತಗೊಳಿಸಲಾಗುವುದು. ಒಂದು ವೇಳೆ ಎಇಬಿಎಎಸ್ ಅನುಷ್ಟಾನಗೊಳಿಸದೆ, ಹಾಜರಾತಿ ಪರಿಶೀಲಿಸದೆ ವೇತನ ಪಾವತಿಸಿದರೆ ಆಯಾ ಡಿಡಿಒಗಳನ್ನೇ ಹೊಣೆ ಮಾಡಿ ಕ್ರಮ ಕೈಗೊಳ್ಳಲಾಗುವುದು. ಇದನ್ನು ಸರಿಯಾಗಿ ಉಸ್ತುವಾರಿ ಮಾಡದಿದ್ದಲ್ಲಿ ಡಿಎಚ್‍ಒಗಳ ವಿರುದ್ಧವೂ ಕ್ರಮ ಕೈಗೊಳ್ಳಲು ವರದಿ ನೀಡುವಂತೆ ಜಿಲ್ಲೆಗಳ ಉಸ್ತುವಾರಿ ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ ಎಂದರು.
ಪ್ರತಿ ವಾರ ಪರಿಶೀಲನೆ:
ಪ್ರತಿ ವಾರ ಇಲಾಖೆ ಪ್ರಗತಿ ಪರಿಶೀಲನೆಯಲ್ಲಿ ಉಳಿದ ಅಂಶಗಳ ಜೊತೆಗೆ ಹಾಜರಾತಿ ಕಡ್ಡಾಯ ಮತ್ತು ವೇತನಕ್ಕೆ ಸಂಯೋಜನೆಗೊಳಿಸಿರುವ ವ್ಯವಸ್ಥೆಯನ್ನು ಪರಾಮರ್ಶೆ ಮಾಡಲಾಗುತ್ತಿದೆ. ಅನುಷ್ಟಾನದಲ್ಲಿ ಲೋಪ ಕಂಡರೆ ನಿರ್ದಾಕ್ಷಿಣ್ಯ ಕ್ರಮ ನಿಶ್ಚಿತ. ಆರೋಗ್ಯಸೌಧ ಸೇರಿದಂತೆ ಇಲಾಖೆ ವ್ಯಾಪ್ತಿಯ ಎಲ್ಲಾ ಕಚೇರಿಗಳಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ವೈದ್ಯರು, ಸೇವಾ ಸಿಬ್ಬಂದಿ ಮತ್ತು ಕಚೇರಿ ಸಿಬ್ಬಂದಿಗಳು ಎಇಬಿಎಎಸ್‍ನಲ್ಲಿ ದಿನಕ್ಕೆ ಮೂರು ಬಾರಿ ತಮ್ಮ ಹಾಜರಾತಿ ದಾಖಲಿಸಲು ಸೂಚಿಸಲಾಗಿದೆ. ಕಚೇರಿ, ಆಸ್ಪತ್ರೆಗಳಲ್ಲಿ ಪ್ರತ್ಯೇಕ ಸಮಯ ನಿಗದಿ ಮಾಡಲಾಗಿದೆ. ಇಲಾಖೆಯ ಹೊಣೆ ಹೊತ್ತಿರುವ ಆಯುಕ್ತ ರಂದೀಪ್ ಅವರೇ ಬಯೋಮೆಟ್ರಿಕ್ ಹಾಜರಾತಿ ನೋಂದಯಿಸಿ ಅನುಸರಿಸುವ ಮೂಲಕ ಉಳಿದ ಹಂತದ ಅಧಿಕಾರಿ ಮತ್ತು ಸಿಬ್ಬಂದಿಗೆ ಮಾದರಿಯಾಗಿದ್ದಾರೆ ಎಂದೂ ಸಚಿವ ಸುಧಾಕರ್ ಮೆಚ್ಚುಗೆ ವ್ಯಕ್ತಪಡಿಸಿದರು.
ಮಂಗಳೂರು: ಫ್ಯಾಕ್ಟರಿಯೊಂದರಲ್ಲಿ ವಿಷಾನಿಲ ಸೋರಿಕೆಯಾಗಿ ಮೂವರು ಕಾರ್ಮಿಕರು ಸಾವನ್ನಪ್ಪಿರುವ ಘಟನೆ ಮಂಗಳೂರು ಹೊರವಲಯದ ಎಸ್‌ಇಝೆಡ್ ವ್ಯಾಪ್ತಿಯ ಮೀನಿನ ಫ್ಯಾಕ್ಟರಿಯಲ್ಲಿ ನಡೆದಿದೆ.
ಭಾನುವಾರ ರಾತ್ರಿ ಕಾರ್ಮಿಕರು ಟ್ಯಾಂಕ್ ಶುಚಿಗೊಳಿಸುತ್ತಿದ್ದ ಸಂದರ್ಭದಲ್ಲಿ ವಿಷಾನಿಲ ಸೋರಿಕೆಯಾಗಿದೆ. ಘಟನೆಯಲ್ಲಿ ಪಶ್ಚಿಮ ಬಂಗಾಳ ಮೂಲದ ಸಮಿರುಲ್ಲ ಇಸ್ಲಾಂ, ಉಮರ್ ಫಾರೂಕ್, ನಿಜಾಮುದ್ದೀನ್ ಸಾಜ್ ಮೃತಪಟ್ಟಿದ್ದಾರೆ. ಮಿರಾಜುಲ್ಲ್ ಇಸ್ಲಾಂ, ಸರಾಫತ್ ಆಲಿ, ಅಜನ್ ಆಲಿ, ಕರೀಬುಲ್ಲ, ಅಫ್ತಲ್ ಮಲ್ಲಿಕ್ ಸೇರಿದಂತೆ ಹಲವರು ಗಂಭೀರ ಸ್ಥಿತಿಯಲ್ಲಿದ್ದಾರೆ. ಇದನ್ನೂ ಓದಿ: ಮಳೆಯಬ್ಬರಕ್ಕೆ ಮಾವು ಸೇರಿದಂತೆ ವಿವಿಧ ಬೆಳೆಗಳು ನಾಶ
ಭಾನುವಾರ ರಾತ್ರಿ ಕಾರ್ಮಿಕನೊಬ್ಬ ಮೀನಿನ ತ್ಯಾಜ್ಯದ ಟ್ಯಾಂಕನ್ನು ಶುಚಿಗೊಳಿಸಲು ಕೆಳಗಿಳಿದಿದ್ದ. ಈ ವೇಳೆ ಏಕಾಏಕಿ ಅಸ್ವಸ್ಥಗೊಂಡು ಬಿದ್ದಿದ್ದಾನೆ. ಕೂಡಲೇ ಆತನನ್ನು ರಕ್ಷಿಸಲು 8 ಮಂದಿ ಕಾರ್ಮಿಕರು ಹೋಗಿದ್ದು, ಅವರೆಲ್ಲರ ಉಸಿರಾಟದಲ್ಲಿ ಏರುಪೇರು ಉಂಟಾಗಿ ಅಸ್ವಸ್ಥಗೊಂಡಿದ್ದಾರೆ. ಇದನ್ನೂ ಓದಿ: ಹುಬ್ಬಳ್ಳಿ ಹಿಂಸಾಚಾರ ಪೂರ್ವನಿಯೋಜಿತ ಸಂಚು: ಬಿರುಗಾಳಿ ಎಬ್ಬಿಸಿದ ವಾಟ್ಸಪ್ ಆಡಿಯೋ
ಅಸ್ವಸ್ಥಗೊಂಡ ಎಲ್ಲಾ ಕಾರ್ಮಿಕರನ್ನು ನಗರದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಸ್ಥಳಕ್ಕೆ ಡಿಸಿಪಿ ಹರಿರಾಂ ಶಂಕರ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಪ್ರಕರಣ ಬಜಪೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.
ರಾಯಚೂರು: ಮೇಲ್ಬಾಗದಿಂದ ಕಲ್ಲು ಕುಸಿದು ಬಿದ್ದು ಕಾರ್ಮಿಕ ಸಾವನ್ನಪ್ಪಿ ಮತ್ತೋರ್ವ ಕಾರ್ಮಿಕರೊಬ್ಬರ ಸ್ಥಿತಿ ಗಂಭೀರವಾಗಿರುವ ಘಟನೆ ನಗರದ ದೇವದುರ್ಗ ತಾಲೂಕಿನಲ್ಲಿರುವ ಊಟಿ ಚಿನ್ನದಗಣಿಯಲ್ಲಿ ನಡೆದಿದೆ.
ಯಲ್ಲಪ್ಪ ಮೃತ ಕಾರ್ಮಿಕ. ಹನುಮಂತ ಗಾಯಗೊಂಡ ಕಾರ್ಮಿಕ. ಕಾರ್ಮಿಕರು ಹಟ್ಟಿ ಗಣಿ ವ್ಯಾಪ್ತಿಯಲ್ಲಿ ಇರುವ ಊಟಿ ಚಿನ್ನದಗಣಿಯಲ್ಲಿ ಸುಮಾರು 800 ಅಡಿ ಆಳದ ಅಂಡರ್ ಗ್ರೌಂಡ್‍ನಲ್ಲಿ ಕೆಲಸ ನಿರ್ವಹಿಸುತ್ತಿದ್ದರು. ಈ ವೇಳೆ ಮೇಲ್ಬಾಗದಿಂದ ಕಲ್ಲು ಕುಸಿದು ಬಿದ್ದು ವ್ಯಕ್ತಿಯು ಸಾವನ್ನಪ್ಪಿದ್ದಾರೆ. ಇದನ್ನೂ ಓದಿ: ಬೆಳಗಾವಿಯಲ್ಲಿ ಹಿಜಬ್ ಹೈಡ್ರಾಮಾ – ಅಲ್ಲಾಹು ಅಕ್ಬರ್ ಘೋಷಣೆ ಕೂಗಿದ ಆರು ಯುವಕರು ವಶ
ವಿಜಯಪುರ: ಜಿಲ್ಲೆಯ ಇಂಡಿ ತಾಲೂಕು ಗುಬ್ಬೇವಾಡ ಗ್ರಾಮದ ಕಬ್ಬಿನ ಗದ್ದೆಯಲ್ಲಿ ಮಧ್ಯಪ್ರದೇಶದ ಕಾರ್ಮಿಕರನ್ನು ಅಕ್ರಮ ಬಂಧನದಲ್ಲಿಡಲಾಗಿದ್ದು, ರಕ್ಷಣೆಗಾಗಿ ಕಾರ್ಮಿಕರು ಮಧ್ಯಪ್ರದೇಶ ಡಿಸಿಗೆ ಕರೆ ಮಾಡಿದ್ದಾರೆ.
ಕಾರ್ಮಿಕರನ್ನು ಅಕ್ರಮವಾಗಿ ಬಂಧನದಲ್ಲಿ ಇಟ್ಟುಕೊಂಡಿದ್ದ ಗುಬ್ಬೇವಾಡ ಗ್ರಾಮದ ಜಮೀನು ಮಾಲಿಕ ಬಿರಾದಾರ್ ಹಾಗೂ ಮಧ್ಯಪ್ರದೇಶದ ರೋಹಿತ್ ಎನ್ನುವ ವ್ಯಕ್ತಿ. ಕಾರ್ಮಿಕರು ರಕ್ಷಣೆಗಾಗಿ ಮಧ್ಯಪ್ರದೇಶ ಜಿಲ್ಲಾಧಿಕಾರಿಗಳಿಗೆ ಕರೆ ಮಾಡಿದ್ದರು. ಈ ಹಿನ್ನೆಲೆ ರಾತ್ರೋರಾತ್ರಿ ಇಂಡಿ ಪೊಲೀಸರಿಂದ ಅಕ್ರಮ ಬಂಧನದಲ್ಲಿದ್ದ ಮಧ್ಯಪ್ರದೇಶದ 10 ಮಕ್ಕಳು ಸೇರಿ 35 ಕಾರ್ಮಿಕರಿಗೆ ಬಂಧನದಿಂದ ಮುಕ್ತಿ ನೀಡಿದ್ದಾರೆ. ಇದನ್ನೂ ಓದಿ: ಬಾಲಕನ ಕಣ್ಣಿಗೆ ಮೊಳೆ ಹೊಡೆದು ವಿಚಿತ್ರವಾಗಿ ಸಾಯಿಸಿದ ಕ್ರೂರಿಗಳು!
ತಡರಾತ್ರಿ ಜಮೀನಿಗೆ ಇಂಡಿ ಡಿವೈಎಸ್ಪಿ ಶ್ರೀಧರ ದೊಡ್ಡಿ ನೇತೃತ್ವದಲ್ಲಿ ದಾಳಿ ನಡೆದಿದೆ. ಜಮೀನು ಮಾಲಿಕ ಬಿರಾದಾರ್ ಕಾರ್ಮಿಕರನ್ನು ಅಕ್ರಮವಾಗಿ ಬಂಧನದಲ್ಲಿಟ್ಟುಕೊಂಡು ಕಬ್ಬು ಕಟಾವು ಮಾಡಿಸಿಕೊಳ್ಳುತ್ತಿದ್ದನು. ರೋಹಿತ್ ಎಂಬ ವಕ್ತಿಯು ಕಾರ್ಮಿಕರನ್ನು ಮಧ್ಯಪ್ರದೇಶದಿಂದ ಕರೆತಂದಿದ್ದನು. ಈ ವೇಳೆ ಕಾರ್ಮಿಕರು 100 ಟನ್ ಕಬ್ಬು ಕಟಾವು ಮಾಡಿದ್ದರು, ಸಹಿತ ಇನ್ನೂ 400 ಟನ್ ಕಬ್ಬು ಕಟಾವಿಗೆ ಬೆದರಿಕೆ ಹಾಕಿದ್ದರು. ಇದನ್ನೂ ಓದಿ: ಸಣ್ಣ ಸುಳಿವು ಸಿಗದಂತೆ ಹತ್ಯೆ ಮಾಡಿದ್ದ ಹಂತಕ ಕೊನೆಗೂ ಖಾಕಿ ಬಲೆಗೆ!
ಕಾರ್ಮಿಕರು ಹೀಗಾಗಿ ಮಧ್ಯಪ್ರದೇಶದ ಜಿಲ್ಲಾಧಿಕಾರಿಗೆ ಕರೆ ಮಾಡಿ ಸಂಕಷ್ಟ ಹೇಳಿಕೊಂಡಿದ್ದರು. ಬಳಿಕ ಮಧ್ಯಪ್ರದೇಶ ಡಿಸಿ ಈ ಬಗ್ಗೆ ವಿಜಯಪುರ ಎಸ್ಪಿ ಆನಂದ ಕುಮಾರ್‌ಗೆ ಮಾಹಿತಿ ನೀಡಿದ್ದಾರೆ. ಬಳಿಕ ಎಸ್ಪಿ ಆನಂದ ಕುಮಾರ್ ಇಂಡಿ ಡಿವೈಎಸ್ಪಿ ಶ್ರೀಧರ ದೊಡ್ಡಿಗೆ ಕಾರ್ಮಿಕರ ರಕ್ಷಣೆಗೆ ಆದೇಶಿಸಿದ್ದಾರೆ. ಈ ವೇಳೆ ಡಿವೈಎಸ್ಪಿ ರಾತ್ರೋರಾತ್ರಿ ಕಾರ್ಯಾಚರಣೆ ಮಾಡಿ 35 ಕಾರ್ಮಿಕರು, 10 ಮಕ್ಕಳನ್ನು ರಕ್ಷಣೆ ಮಾಡಿದ್ದಾರೆ. ಪೊಲೀಸರು ಅವರನ್ನು ಅಕ್ರಮ ಬಂಧನದಿಂದ ರಕ್ಷಿಸುವುದಲ್ಲದೆ ರಾತ್ರಿಯೇ ಸೊಲ್ಲಾಪುರ ರೈಲು ನಿಲ್ದಾಣಕ್ಕೆ ಬಿಟ್ಟು ಬಂದಿದ್ದಾರೆ. ಕಾರ್ಮಿಕರನ್ನು ಅಲ್ಲಿಂದ ರೈಲು ಮೂಲಕ ಮಧ್ಯಪ್ರದೇಶಕ್ಕೆ ರವಾನೆ ಮಾಡಲಾಗಿದೆ.
ಕಟ್ಟಡ ಮಾಲ್‌ಗಾಗಿ ನಿರ್ಮಾಣವಾಗುತ್ತಿದ್ದು, ಅದರ ನೆಲಮಾಳಿಗೆಯ ಪಾರ್ಕಿಂಗ್ ಮಹಡಿಯಲ್ಲಿ ಚಪ್ಪಡಿಗಳನ್ನು ಹಾಕಲು ಕಬ್ಬಿಣದ ಸರಳುಗಳನ್ನು ತರಿಸಲಾಗಿತ್ತು. 16 ಎಂಎಂ ಗಾತ್ರದ ಸರಳುಗಳು ಕುಸಿತದ ಸಂದರ್ಭದಲ್ಲಿ ಕಟ್ಟಡದಲ್ಲಿ ಕೆಲಸ ಮಾಡುತ್ತಿದ್ದ 10 ಮಂದಿ ಕಾರ್ಮಿಕರ ಮೇಲೆ ಬಿದ್ದಿದೆ. ಇದನ್ನೂ ಓದಿ: ಮನೆಯ ಮೇಲೆ ಲ್ಯಾಂಡಿಂಗ್ – ಅಮೆರಿಕ ಸೇನೆಗೆ ಹೆದರಿ ಐಸಿಸ್ ಮುಖ್ಯಸ್ಥ ಆತ್ಮಾಹುತಿ
ಅಪಘಾತದ ಬಗ್ಗೆ ಮಾಹಿತಿ ತಿಳಿದ ಅಗ್ನಿಶಾಮಕ ದಳ ತಕ್ಷಣ ಸ್ಥಳಕ್ಕೆ ಧಾವಿಸಿದ್ದಾರೆ. ಕಾರ್ಮಿಕರ ದೇಹಕ್ಕೆ ಚುಚ್ಚಿದ್ದ ಕಬ್ಬಿಣದ ಸರಳುಗಳನ್ನು ಕಟರ್ ಸಹಾಯದಿಂದ ತೆಗೆಯಲಾಗಿದೆ. ಐವರು ಕಾರ್ಮಿಕರು ಸ್ಥಳದಲ್ಲೇ ಸಾವನ್ನಪ್ಪದ್ದಾರೆ ಎಂದು ಶ್ರೀರಾಮೆ ತಿಳಿಸಿದರು.
ಪಾಟ್ನಾ: 500 ರೂಪಾಯಿ ವಿಚಾರವಾಗಿ ಇಬ್ಬರು ಆಶಾ ಕಾರ್ಯಕರ್ತೆಯರು ಪರಸ್ಪರ ಹೊಡೆದುಕೊಂಡಿರುವ ಘಟನೆ ಬಿಹಾರದ ಜಮುಯಿ ಸರ್ಕಾರಿ ಆಸ್ಪತ್ರೆಯಲ್ಲಿ ನಡೆದಿದೆ.
ಲಕ್ಷ್ಮಿಪುರ ಬ್ಲಾಕ್‍ನಲ್ಲಿರುವ ಸರ್ಕಾರಿ ಆಸ್ಪತ್ರೆಯಲ್ಲಿ ನವಜಾತ ಮಗುವೊಂದು ಜನಸಿದೆ. ಈ ವೇಳೆ ಆಶಾ ಕಾರ್ಯಕರ್ತೆ ರಿಂತು ಕುಮಾರಿ ಮಗುವಿಗೆ ಚುಚ್ಚು ಮದ್ದು ನೀಡಲು ಮತ್ತೋರ್ವ ಆಶಾ ಕಾರ್ಯಕರ್ತೆ ರಂಜನಾ ಕುಮಾರಿ ಅವರನ್ನ ಸಂಪರ್ಕಿಸಿದ್ದಾಳೆ. ಈ ವೇಳೆ ಲಸಿಕೆ ನೀಡಲು ನರ್ಸ್ 500 ರೂಪಾಯಿ ಬೇಡಿಕೆ ಇಟ್ಟಿದ್ದಾರೆಂದು ಆಶಾ ಕಾರ್ಯಕರ್ತೆ ರಂಜನಾ ತಿಳಿಸಿದ್ದಾಳೆ. ಈ ವಿಚಾರವಾಗಿ ವಾಗ್ವಾದ ನಡೆದಿದ್ದು, ಇಬ್ಬರು ಪರಸ್ಪರ ಹೊಡೆದಾಡಿಕೊಂಡಿದ್ದಾರೆ. ಇದನ್ನೂ ಓದಿ: ಬೆಳಗಾವಿಯಲ್ಲಿ ಬಣ ರಾಜಕೀಯ ಬಲು ಜೋರು – ಕತ್ತಿ ಸಭೆಗೆ ಪ್ರತಿಯಾಗಿ ಜಾರಕಿಹೊಳಿ ಮೀಟಿಂಗ್
ಇಬ್ಬರು ಆಶಾ ಕಾರ್ಯಕರ್ತೆಯರು ಪರಸ್ಪರ ಹೊಡೆದಾಡಿಕೊಳ್ಳಲು ಶುರು ಮಾಡುತ್ತಿದ್ದಂತೆ ಆಸ್ಪತ್ರೆಯಲ್ಲಿರುವ ಒಬ್ಬರು ಅದರ ವೀಡಿಯೋ ಸೆರೆ ಹಿಡಿದಿದ್ದಾರೆ. ಘಟನೆಯ ವೀಡಿಯೋ ವೈದ್ಯಾಧಿಕಾರಿಗಳ ಗಮನಕ್ಕೆ ಬರುತ್ತಿದ್ದಂತೆ ತನಿಖೆ ನಡೆಸಲು ಸೂಚನೆ ನೀಡಿದ್ದಾರೆ. ಈ ವೀಡಿಯೋ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗುತ್ತಿದೆ. ಇದನ್ನೂ ಓದಿ: ಬಿಜೆಪಿಯಲ್ಲಿ ಸಂಪುಟ ಸರ್ಜರಿಗೆ ಡೆಡ್‍ಲೈನ್ – ಮಾರ್ಚಲ್ಲ ಈಗ್ಲೇ ವಿಸ್ತರಿಸಿ ಅಂತ ಬಿಗಿಪಟ್ಟು
ಹಾವೇರಿ: ಮೆಕ್ಕೆಜೋಳ ತುಂಬಿದ್ದ ಲಾರಿ ಪಲ್ಟಿಯಾಗಿ ಮೂವರು ಸ್ಥಳದಲ್ಲಿಯೇ ಸಾವನ್ನಪ್ಪಿದ್ದು, ನಾಲ್ವರು ಗಾಯಗೊಂಡ ಘಟನೆ ಹಾವೇರಿ ತಾಲೂಕಿನ ಕೊರಡೂರು ಗ್ರಾಮದ ಬಳಿ ನಡೆದಿದೆ.
(33)ಮಂಜುನಾಥ, (35)ಮಂಜುನಾಥ, (37)ಆನಂದ ಮೃತರಾಗಿದ್ದಾರೆ. ಮೃತರ ಹಾವೇರಿ ತಾಲೂಕಿನ ಇಚ್ಚಂಗಿ ಗ್ರಾಮದವರು ಎಂದು ಗುರುತಿಸಲಾಗಿದೆ. ಮೆಕ್ಕೆಜೋಳದ ಚೀಲವನ್ನ ಹಂದಿಗನೂರ ಗ್ರಾಮದಿಂದ ಲೋಡ್ ಮಾಡಿಕೊಂಡು ಹೊಸರಿತ್ತಿ ಗ್ರಾಮದ ಕಡೆಗೆ ಬರುತ್ತಿದ್ದ ವೇಳೆ ಲಾರಿ ಪಲ್ಟಿಯಾಗಿ ಈ ದುರ್ಘಟನೆ ಸಂಭವಿಸಿದೆ. ಇದನ್ನೂ ಓದಿ:ಡ್ರಮ್ ಬಾರಿಸಿದ ಎಂಪಿ ಸಿಎಂ- ಕುಣಿದು ಕುಪ್ಪಳಿಸಿದ ಮಹಿಳೆಯರು
ಲಾರಿ ಕೆಳಗೆ ಸಿಲುಕಿಕೊಂಡು ಮೂವರ ಮೃತದೇಹಗಳನ್ನ ಸ್ಥಳೀಯರು ಹಾಗೂ ಪೊಲೀಸರು ಹೊರ ತೆಗೆಯುವ ಕಾರ್ಯ ಮಾಡಿದ್ದಾರೆ. ನಾಲ್ವರು ಜಿಲ್ಲಾಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತದೆ. ಸ್ಥಳಕ್ಕೆ ಗುತ್ತಲ ಪಿಎಸ್‍ಐ ಜಗದೀಶ್ ಹಾಗೂ ಸಿಬ್ಬಂದಿ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಗುತ್ತಲ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ. ಇದನ್ನೂ ಓದಿ: 2047ರ ಮೊದಲು ನವ ಭಾರತವನ್ನು ನಿರ್ಮಿಸುವ ಗುರಿ ಹೊಂದಿದ್ದೇವೆ: ಮೋದಿ