ಭೋಪಾಲ್: ಭಾರತದ ತೇಜಾಜಿ ನಗರದ ನಿರ್ಮಾಣ ಹಂತದಲ್ಲಿರುವ ಶಾಲೆಯ ಮೇಲ್ಛಾವಣಿ ಕುಸಿದು ಹತ್ತು ಕಾರ್ಮಿಕರು ಗಾಯಗೊಂಡಿರುವ ಘಟನೆ ಮಧ್ಯಪ್ರದೇಶದ ಇಂದೋರ್‌ನಲ್ಲಿ ನಡೆದಿದೆ.
ಈ ಘಟನೆ ಗುರುವಾರ ಸಂಜೆ 6 ಗಂಟೆ ಸುಮಾರಿಗೆ ಸಂಭವಿಸಿದ್ದು, ಕಟ್ಟಡ ನಿರ್ಮಾಣ ಸ್ಥಳದಲ್ಲಿ 20 ಕಾರ್ಮಿಕರು ಕೆಲಸ ಮಾಡುತ್ತಿದ್ದರು. ಸದ್ಯ ಘಟನಾ ಸ್ಥಳಕ್ಕೆ ಎಸ್‍ಡಿಆರ್‍ಎಫ್, ಪೊಲೀಸರು ಮತ್ತು ಮಹಾನಗರ ಪಾಲಿಕೆಯ ಅಧಿಕಾರಿಗಳು ಆಗಮಿಸಿ ರಕ್ಷಣಾ ಕಾರ್ಯಾಚರಣೆ ನಡೆಸುತ್ತಿದ್ದಾರೆ. ಇದನ್ನೂ ಓದಿ: ರೆಮೋ ಡಿಸೋಜಾ ಸೋದರ ಮಾವ ಸಾವು – ಆತ್ಮಹತ್ಯೆ ಶಂಕೆ
Madhya Pradesh: Ten labourers were injured after the roof of an under-construction school collapsed in Tejaji Nagar area of Indore on Thursday evening. pic.twitter.com/xIPlqnsoMr
ಚೆನ್ನೈ: ಐಫೋನ್ ಕಾರ್ಖಾನೆಯಲ್ಲಿ ಕಲುಷಿತ ಆಹಾರವನ್ನು ಸೇವಿಸಿ 150 ಮಂದಿ ಅಸ್ವಸ್ಥರಾಗಿದ್ದಾರೆ.
ಆ್ಯಪಲ್ ಕಂಪನಿಯ ಐಫೋನ್ ತಯಾರಿಸುವ ಫಾಕ್ಸ್‌ಕಾನ್ ಕಂಪನಿಯಲ್ಲಿ ನೀಡಿದ ಕಲುಷಿತ ಆಹಾರ ಸೇವೆಯಿಂದಾಗಿ ಅಸ್ವಸ್ಥಗೊಂಡು, 150ಕ್ಕೂ ಹೆಚ್ಚು ಜನರು ಆಸ್ಪತ್ರೆಗೆ ದಾಖಲಾಗಿದ್ದಾರೆ. 256 ನ್ನು ಹೊರರೋಗಿಗಳಾಗಿ ಚಿಕಿತ್ಸೆ ನೀಡಲಾಗಿದ್ದು, 159 ಮಂದಿ ಆಸ್ಪತ್ರೆಗೆ ದಾಖಲಾಗಿದ್ದು, ಅವರಲ್ಲಿ 155 ಮಂದಿಯನ್ನು ಈಗಾಗಲೇ ಬಿಡುಗಡೆ ಮಾಡಲಾಗಿದೆ. ಇದನ್ನೂ ಓದಿ: MESಗೆ ಪಾಠ ಕಲಿಸಲು ಕಾರ್ಮಿಕ ಸಂಘಟನೆ ಪ್ಲ್ಯಾನ್- ಇಂದಿನಿಂದ್ಲೇ ಮಹಾರಾಷ್ಟ್ರ ವಸ್ತುಗಳು ಬ್ಯಾನ್
ಈ ವಿಚಾರವಾಗಿ ಕೋಪಗೊಂಡ ಸಿಬ್ಬಂದಿ ಬೆಂಗಳೂರು-ಚೆನ್ನೈ ಹೆದ್ದಾರಿ ತಡೆದು ಪ್ರತಿಭಟನೆ ನಡೆಸಿದ್ದಾರೆ. ಅಸ್ವಸ್ಥರನ್ನು ಕೂಡಲೇ ಆಸ್ಪತ್ರೆಗೆ ದಾಖಲಿಸಿದ್ದೇವೆ. ಆದರೆ ಕಂಪನಿ ಸಹಾಯ ಮಾಡಿಲ್ಲ ಎಂದು ಕಿಡಿಕಾರಿದ್ದಾರೆ. ರಸ್ತೆತಡೆ ನಡೆಸುತ್ತಿದ್ದವರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಇದನ್ನೂ ಓದಿ: ಬೆಳಗಾವಿಯಲ್ಲಿ ಸಂಗೊಳ್ಳಿ ರಾಯಣ್ಣ ಪ್ರತಿಮೆ ಮರುಪ್ರತಿಷ್ಠಾಪನೆ
ಗಾಂಧಿನಗರ: ಗುಜರಾತ್‍ನ ಪಂಚಮಹಲ್ ಜಿಲ್ಲೆಯ ಗುಜರಾತ್ ಫ್ಲೋರೋ ಕೆಮಿಕಲ್ಸ್ ಫ್ಯಾಕ್ಟರಿಯಲ್ಲಿ ಸ್ಫೋಟ ಸಂಭವಿಸಿದ್ದು, ಕನಿಷ್ಠ ಇಬ್ಬರು ಸಾವನ್ನಪ್ಪಿದ್ದಾರೆ ಮತ್ತು 15 ಮಂದಿ ಸಾವನ್ನಪ್ಪಿದ್ದಾರೆ.
ಈ ಕುರಿತಂತೆ ಪ್ರತಿಕ್ರಿಯಿಸಿರುವ ಪಂಚಮಹಲ್ ಪೊಲೀಸ್ ವರಿಷ್ಠಾಧಿಕಾರಿ ಲೀನಾ ಪಾಟೀಲ್, ಘೋಘ ತಾಲೂಕಿನ ರಂಜಿತ್‍ನಗರ ಗ್ರಾಮದ ಬಳಿ ಇರುವ ಗುಜರಾತ್ ಫ್ಲೋರೋ ಕೆಮಿಕಲ್ಸ್ ಲಿಮಿಟೆಡ್‍ನ (ಜಿಎಫ್‍ಎಲ್) ರಾಸಾಯನಿಕ ಉತ್ಪಾದನಾ ಘಟಕದಲ್ಲಿ ಬೆಳಗ್ಗೆ 10 ಗಂಟೆ ಸುಮಾರಿಗೆ ಸ್ಫೋಟ ಸಂಭವಿಸಿದ್ದು, ಸ್ಫೋಟದ ಸದ್ದು ಹಲವಾರು ಕಿಲೋಮೀಟರ್ ದೂರದಷ್ಟು ಕೇಳಿಸಿದೆ. ಇದನ್ನೂ ಓದಿ: ಒಬ್ಬ ಕ್ರಿಮಿನಲ್‍ನ ರಕ್ಷಿಸುತ್ತಿದ್ದೀರಾ – ಮೋದಿ ವಿರುದ್ಧ ಪ್ರಿಯಾಂಕಾ ಗಾಂಧಿ ಕಿಡಿ
#WATCH | A fire broke out at Gujarat Fluoro Chemicals Ltd located at Ranjitnagar, Panchmahals following an explosion here. Two workers killed in the incident; the injured have been shifted to the hospital. pic.twitter.com/o71sHR0GFm
ಘಟನೆಯಲ್ಲಿ ಸುಮಾರು 15 ಕಾರ್ಮಿಕರು ಗಾಯಗೊಂಡಿದ್ದು, ಅವರನ್ನು ವಿವಿಧ ಆಸ್ಪತ್ರೆಗಳಿಗೆ ದಾಖಲಿಸಲಾಗಿದೆ. ಅದರಲ್ಲಿಯೂ ಕೆಲವರಿಗೆ ಗಂಭೀರವಾಗಿ ಸುಟ್ಟ ಗಾಯಗಳಾಗಿವೆ. ಇದೀಗ ಕಾರ್ಖಾನೆಯಲ್ಲಿ ರಕ್ಷಣಾ ಮತ್ತು ಅಗ್ನಿಶಾಮಕ ದಳ ಕಾರ್ಯಾಚರಣೆ ನಡೆಸುತ್ತಿದ್ದು, ಬೆಂಕಿಯನ್ನು ನಿಯಂತ್ರಣಕ್ಕೆ ತರಲಾಗಿದೆ ಎಂದು ತಿಳಿಸಿದ್ದಾರೆ. ಇದನ್ನೂ ಓದಿ: ಹೆದ್ದಾರಿಯಲ್ಲೇ ಹೊತ್ತಿ ಉರಿದ 22 ಮಂದಿ ಪ್ರಯಾಣಿಕರಿದ್ದ ಬಸ್!
ಬೆಂಗಳೂರು: ಶ್ರಮಿಕ ವರ್ಗದ ಸಂಕ್ಷೇಮಕ್ಕೆ ಶ್ರಮಿಸುತ್ತಿರುವ ಕಾರ್ಮಿಕ ಇಲಾಖೆಯು ಇದೀಗ ಮತ್ತೊಂದು ಮಹತ್ವಾಕಾಂಕ್ಷಿ ಯೋಜನೆ ಜಾರಿಗೆ ಮುಂದಡಿ ಇರಿಸಿದೆ.
ಕೋವಿಡ್ 1 ಮತ್ತು 2ನೇ ಅಲೆ ವೇಳೆ ಸಹಾಯಧನ, ಆಹಾರಕಿಟ್, ಲಸಿಕೆ, ತಮ್ಮೂರುಗಳಿಗೆ ತೆರಳಲು ಸಾರಿಗೆ ವ್ಯವಸ್ಥೆ ಮಾಡಿದ್ದ ಇಲಾಖೆಯು ಇದೀಗ ಕಾರ್ಮಿಕರು ತಮ್ಮ ಕೆಲಸದ ಪ್ರದೇಶಗಳಿಗೆ ತೆರಳಲು ಅನುವಾಗುವಂತೆ ಉಚಿತ ಸಾರಿಗೆ ಸೇವೆ ಒದಗಿಸಲು ಮುಂದಾಗಿದೆ. ಬೆಂಗಳೂರು ಮಹಾನಗರದಲ್ಲಿ ಈಗಾಗಲೇ ಈ ಉಚಿತ ಸೇವೆಯನ್ನು ಜಾರಿ ಮಾಡಿರುವ ಕಾರ್ಮಿಕ ಇಲಾಖೆಯ ಕಲ್ಯಾಣ ಮಂಡಳಿಯು ಈ ಯೋಜನೆಯನ್ನು ರಾಜ್ಯಾದ್ಯಂತ ವಿಸ್ತರಿಸಲು ಮುಂದಾಗಿದೆ. ಇದನ್ನೂ ಓದಿ: ಮತಾಂತರ ನಿಷೇಧ ಕಾಯ್ದೆ ಜಾರಿ ಸರಿಯಿದೆ: ಬಿವೈ ರಾಘವೇಂದ್ರ
ಕಾರ್ಮಿಕ ಸಚಿವ ಶಿವರಾಂ ಹೆಬ್ಬಾರ್ ಅವರ ಪ್ರಯತ್ನ ಫಲವಾಗಿ ಈ ಸಂಬಂಧ ಸಾರಿಗೆ ಇಲಾಖೆ ಜತೆ ಹಲವಾರು ಸುತ್ತಿನ ಮಾತುಕತೆಗಳು ನಡೆದಿದ್ದು, ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆ (ಬಿಎಂಟಿಸಿ) ಈಗಾಗಲೇ ಈ ಯೋಜನೆಯನ್ನು ಜಾರಿಗೊಳಿಸಿದೆ. ದಿನ ನಿತ್ಯ ಕೂಲಿಗಾಗಿ ತೆರಳುವ ಕಟ್ಟಡ ಕಾರ್ಮಿಕರಿಗೆ ಈ ಯೋಜನೆ ಲಾಭಕಾರಿಯಾಗಿದ್ದು, ಪ್ರತಿ ನಿತ್ಯ ಅವರು ಕೆಲಸ ನಿರ್ವಹಣೆಗೆ ಒಂದು ಪ್ರದೇಶದಿಂದ ಮತ್ತೊಂದು ಪ್ರದೇಶಕ್ಕೆ ತೆರಳಲು ಕನಿಷ್ಠ 150 ರಿಂದ 200 ರೂ. ವ್ಯಯಿಸಬೇಕಾದ ಪರಿಸ್ಥಿತಿ ಇದೆ. ಇದರಿಂದ ಅವರು ಪಡೆಯುವ ಕೂಲಿ ಮೊತ್ತದ ಬಹುಭಾಗವನ್ನು ಸಾರಿಗೆಗೆ ವ್ಯಯಿಸುತ್ತಿದ್ದರು. ಇದನ್ನು ಮನಗಂಡ ಸಚಿವ ಶಿವರಾಂ ಹೆಬ್ಬಾರ್, ಕಟ್ಟಡ ಕಾರ್ಮಿಕರ ಅನುಕೂಲಕ್ಕಾಗಿ ಉಚಿತ ಸಾರಿಗೆ ವ್ಯವಸ್ಥೆಯ ಯೋಜನೆಗೆ ಚಾಲನೆ ನೀಡಿದರು.
ಕಾರ್ಮಿಕ ಕಲ್ಯಾಣ ಮಂಡಳಿಯ ನೊಂದಾಯಿತ ಕಾರ್ಮಿಕರು ಈ ಯೋಜನೆ ಲಾಭ ಪಡೆಯಬಹುದಾಗಿದೆ ಎಂದು ಇಲಾಖೆ ತಿಳಿಸಿದೆ. ರಾಜ್ಯದಾದ್ಯಂತ ವಿಸ್ತರಣೆಗೆ ಸಿದ್ಧತೆ: ಈಗಾಗಲೇ ಬೆಂಗಳೂರು ಮಹಾನಗರದಲ್ಲಿ ಜಾರಿ ಆಗಿರುವ ಉಚಿತ ಸಾರಿಗೆ ಸೇವೆಯನ್ನು ರಾಜ್ಯದಾದ್ಯಂತ ವಿಸ್ತರಣೆ ಮಾಡಲು ಕಾರ್ಮಿಕ ಸಚಿವ ಶಿವರಾಂ ಹೆಬ್ಬಾರ್ ಮುಂದಡಿ ಇರಿಸಿದ್ದು, ಈ ಸಂಬಂಧ ಸಾರಿಗೆ ಇಲಾಖೆ ಜತೆ ಹಲವು ಸುತ್ತಿನ ಮಾತುಕತೆ ನಡೆಸಿದ್ದಾರೆ, ಕೆಎಸ್‌ಆರ್‌ಟಿಸಿ, ಈಶಾನ್ಯ, ವಾಯುವ್ಯ ಸಾರಿಗೆ ಹೀಗೆ ಎಲ್ಲ ಸಾರಿಗೆ ಸಂಸ್ಥೆಗಳೊಂದಿಗೆ ಯೋಜನೆ ತ್ವರಿತ ಜಾರಿಗೆ ಸಂಬಂಧ ಮಹತ್ವದ ಸಭೆಗಳನ್ನು ನಡೆಸಲಾಗಿದೆ.
ಅಸಾಧ್ಯವೆಂದ ಸಾರಿಗೆ ಸಂಸ್ಥೆಗಳು – ಶ್ರಮಿಕರ ಕೈಹಿಡಿದ ಕಲ್ಯಾಣ ಮಂಡಳಿ: ಕರ್ನಾಟಕ ಕಟ್ಟಡ ಕಾರ್ಮಿಕರ ಕಲ್ಯಾಣ ಮಂಡಳಿ ವತಿಯಿಂದ ಬಸ್ ಸೇವೆ ಜಾರಿಗೆ ಕಾರ್ಮಿಕ ಇಲಾಖೆ ಮುಂದಡಿ ಇರಿಸಿತ್ತು. ಈ ಸಂದರ್ಭದಲ್ಲಿ ಇಲಾಖೆಯು ಶೇ.80ರಷ್ಟನ್ನು ತಾನು ಭರಿಸುವ ಭರವಸೆ ನೀಡಿತ್ತಲ್ಲದೆ, ಇನ್ನುಳಿದ ಶೇ.20ರಷ್ಟನ್ನು ರಿಯಾಯ್ತಿ ನೀಡುವುದು ಅಥವಾ ಸಾರಿಗೆ ಇಲಾಖೆಯೇ ಭರಿಸುವ ಪ್ರಸ್ತಾವನೆಯನ್ನು ಇರಿಸಿತ್ತು. ಇದನ್ನೂ ಓದಿ: ಕುಕ್ಕೆ ಸುಬ್ರಹ್ಮಣ್ಯ ಕ್ಷೇತ್ರಕ್ಕೆ ಸುದೀಪ್ ಕುಟುಂಬ ಸಮೇತರಾಗಿ ಭೇಟಿ
ಆರಂಭಿಕ ಹಂತದಲ್ಲಿ ಈ ಪ್ರಸ್ತಾವನೆಗೆ ಮೌಖಿಕ ಸಮ್ಮತಿ ಸೂಚಿಸಿದ್ದ ಸಾರಿಗೆ ಇಲಾಖೆ ಇದೀಗ ತನ್ನ ಆರ್ಥಿಕ ಪರಿಸ್ಥಿತಿ ಹಿನ್ನೆಲೆಯಲ್ಲಿ ಶೇ.20 ರಿಯಾಯ್ತಿ ಅಥವಾ ತಾನು ಭರಿಸುವುದು ಅಸಾಧ್ಯ ಎಂದು ತಿಳಿಸಿದೆ. ಹೀಗಾಗಿ ಶ್ರಮಿಕ ವರ್ಗದ ಏಳಿಗೆಯ ಏಕಮೇವ ಉದ್ದೇಶದಿಂದ ಜಾರಿ ಮಾಡಲಾಗುತ್ತಿರುವ ಈ ಯೋಜನೆ ಅನುಷ್ಠಾನದ ಕಡಕ್ ನಿರ್ಧಾರ ಕೈಗೊಂಡಿರುವ ಕಾರ್ಮಿಕ ಸಚಿವರು, ಶೇ.100ರಷ್ಟು ಮೊತ್ತವನ್ನು ಪಾವತಿಸಿಯಾದರೂ ರಾಜ್ಯದಾದ್ಯಂತ ಜಾರಿ ಮಾಡುವಂತೆ ಈಗಾಗಲೇ ಅಧಿಕಾರಿಗಳಿಗೆ ಸೂಚಿಸಿದ್ದಾರೆ. ಹೀಗಾಗಿ ಶೀಘ್ರವೇ ರಾಜ್ಯದಾದ್ಯಂತ ಶ್ರಮಿಕ ವರ್ಗಕ್ಕೆ ಉಚಿತ ಬಸ್ ಪಾಸ್ ನೀಡುವ ಮಹತ್ವಾಕಾಂಕ್ಷಿ ಯೋಜನೆ ಜಾರಿಗೆ ವೇದಿಕೆ ಸಿದ್ಧಗೊಂಡಿದೆ.
ಜಾಗತಿಕ ಸಾಂಕ್ರಾಮಿಕ ಕೋವಿಡ್-19 ಎರಡೂ ಅಲೆಗಳ ಸಂದರ್ಭದಲ್ಲಿ ಸಂಘಟಿತ- ಅಸಂಘಟಿತ ಸೇರಿದಂತೆ ಎಲ್ಲ ಶ್ರಮಿಕವರ್ಗಕ್ಕೆ ಹಲವು ಯೋಜನೆಗಳ ಮೂಲಕ ಸಾಂತ್ವನ ಕ್ರಮಗಳನ್ನು ಕೈಗೊಳ್ಳಲಾಗಿತ್ತು, ಕೋವಿಡ್ ನಂತರ ಕಾರ್ಮಿಕ ಅದಾಲತ್‍ನಂತಹ ಐತಿಹಾಸಿಕ ಕಾರ್ಯಕ್ರಮ ಜಾರಿ ಮಾಡಿ ಇಲಾಖೆಯು ಶ್ರಮಿಕನಿಗೆ ಇನ್ನಷ್ಟು ಹತ್ತಿರವಾಯಿತು, ಇಲಾಖೆಯು ತನ್ನ ಇದೇ ಧೋರಣೆಯನ್ನು ಮುಂದುವರೆಸಿದ್ದು, ಶ್ರಮಿಕರ ಏಳಿಗೆಗೆ ಅನುವಾಗುವಂತೆ ಉಚಿತ ಸಾರಿಗೆ ಸೇವೆ ಯೋಜನೆ ಜಾರಿಗೆ ಮುಂದಡಿ ಇರಿಸಿದೆ. ಇದನ್ನೂ ಓದಿ: ಅಕ್ರಮ ಮರಳು ಗಣಿಗಾರಿಕೆ ವಿರುದ್ಧ ಕ್ರಮ ಕೈಗೊಂಡರೆ 25,000 ಬಹುಮಾನ: ಎಎಪಿ
ಬಿಎಂಟಿಸಿ ಉಚಿತ ಪಾಸ್ ಪಡೆಯುವುದು ಹೇಗೆ? ಅರ್ಹತೆ:
* ಕರ್ನಾಟಕ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಕಲ್ಯಾಣ ಮಂಡಳಿಯನ್ನು ನೊಂದಾಯಿಸಿಕೊಂಡಿರಬೇಕು.
* ಮಂಡಳಿ ಗುರುತಿನ ಚೀಟಿ
* ಎರಡು ಸ್ಟಾಂಪ್ ಅಳತೆಯ ಭಾವಚಿತ್ರ
* ಆಧಾರ್ ಕಾರ್ಡ್ ಪ್ರತಿ
ಎಲ್ಲೆಲ್ಲಿ ಲಭ್ಯ?
ಕೆಂಪೇಗೌಡ ಬಸ್ ನಿಲ್ದಾಣ, ಶಿವಾಜಿನಗರ, ವೈಟ್‍ಫೀಲ್ಡ್ ಟಿಟಿಎಂಸಿ, ಯಶವಂತಪುರ, ಬನಶಂಕರಿ, ವಿಜಯನಗರ, ಶಾಂತಿನಗರ, ದೊಮ್ಮಲೂರು, ಕೋರಮಂಗಲ ಬಿಎಂಟಿಸಿ ಘಟಕಗಳು, ಕೆಂಗೇರಿ ಟಿಟಿಎಂಸಿ, ಯಲಹಂಕ ಹಳೆಯ ಬಸ್ ನಿಲ್ದಾಣ, ಹೊಸಕೋಟೆ ಬಸ್ ನಿಲ್ದಾಣ, ಸುಮನಹಳ್ಳಿ ಡಿಪೋ, ಕೆ.ಆರ್.ಪುರ, ಹೆಚ್‍ಎಸ್‍ಆರ್ ಲೇಔಟ್, ಹೆಬ್ಬಾಳ ಬಿಎಂಟಿಸಿ ಘಟಕಗಳು, ನಾಗಮಂಗಲ ಡಿಪೋ, ಬಾಗಲಗುಂಟೆಯಲ್ಲಿ ಕಾರ್ಮಿಕ ಇಲಾಖೆ, ಡೈರಿ ಸರ್ಕಲ್ ಬಳಿಯ ಕರ್ನಾಟಕ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಕಲ್ಯಾಣ ಮಂಡಳಿ ಕಚೇರಿಗಳನ್ನು ದಾಖಲೆಗಳನ್ನು ಸಲ್ಲಿಸಿ ಪಾಸ್‍ಗಳನ್ನು ಪಡೆದುಕೊಳ್ಳಬಹುದು.
ಹೈದರಾಬಾದ್: ಸಿಂಗರೇನಿ ಕಲಿಯೇರೀಸ್ ಕಂಪನಿ ಲಿಮಿಟೆಡ್ (ಎಸ್‍ಸಿಸಿಎಲ್)ನ ಕಲ್ಲಿದ್ದಲು ಗಣಿ ಯೋಜನೆಯ ಮೇಲ್ಛಾವಣಿ ಕುಸಿದು ನಾಲ್ವರು ಕಾರ್ಮಿಕರು ಮೃತಪಟ್ಟಿರುವ ಘಟನೆ ತೆಲಂಗಾಣದ ಮಂಚೇರಿಯಲ್ ಜಿಲ್ಲೆಯಲ್ಲಿ ನಡೆದಿದೆ.
ಶ್ರೀರಾಂಪುರ ಪ್ರದೇಶದಲ್ಲಿ ಮೇಲ್ಛಾವಣಿ ಹೊದಿಸುತ್ತಿರುವ ವೇಳೆ ಈ ಘಟನೆ ಸಂಭವಿಸಿದೆ. ಮೇಲ್ಛಾವಣಿಯ ಒಂದು ಭಾಗ 32 ಮತ್ತು 60 ವರ್ಷ ವಯಸ್ಸಿನ ನಾಲ್ವರು ಕಾರ್ಮಿಕರ ಮೇಲೆ ಬಿದ್ದಿದ್ದು, ಅವರು ಅವಶೇಷಗಳಡಿಯಲ್ಲಿ ಸಿಲುಕಿ ಸಾವನ್ನಪ್ಪಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಇದನ್ನೂ ಓದಿ: ಕಾನ್ಪುರದಲ್ಲಿ ಝಿಕಾ ವೈರಸ್ ಪತ್ತೆ – ಮತ್ತೆ 3 ಪ್ರಕರಣ, ಸೋಂಕಿತರ ಸಂಖ್ಯೆ 91ಕ್ಕೆ ಏರಿಕೆ
ಈ ಕುರಿತಂತೆ ಎಸ್‍ಸಿಸಿಎಲ್‍ನ ಅಧ್ಯಕ್ಷ ಮತ್ತು ವ್ಯವಸ್ಥಾಪಕ ನಿರ್ದೇಶಕ ಎನ್.ಶ್ರೀಧರ್ ಅವರು, ಮೃತರ ಕುಟುಂಬಸ್ಥರಿಗೆ ಸಂತಾಪ ಸೂಚಿಸಿದ್ದು, ಘಟನೆಯ ಕುರಿತು ತನಿಖೆ ನಡೆಸಿ ವರದಿ ಸಲ್ಲಿಸುವಂತೆ ಸಂಬಂಧಪಟ್ಟ ಅಧಿಕಾರಿಗಳಿಗೆ ತಿಳಿಸಿದ್ದಾರೆ. ಇಂತಹ ಘಟನೆಗಳು ಮರುಕಳಿಸದಂತೆ ನೋಡಿಕೊಳ್ಳಬೇಕು ಸೂಚನೆ ನೀಡಿದ್ದಾರೆ. ಇದನ್ನೂ ಓದಿ: ಅಪ್ಪು ಪ್ರೇರಣೆ – ಸಪ್ತಪದಿಗೂ ಮುನ್ನವೇ ನವ ದಂಪತಿ ನೇತ್ರದಾನದ ಶಪಥ!
ಈ ಸಂಬಂಧ ಉನ್ನತ ಅಧಿಕಾರಿಗಳು ಸಂತ್ರಸ್ತರ ಕುಟುಂಬದ ಒಬ್ಬ ಅರ್ಹ ಸದಸ್ಯರಿಗೆ ಉದ್ಯೋಗ ನೀಡುವುದಾಗಿ ತಿಳಿಸಿದ್ದಾರೆ. ಜೊತೆಗೆ 70 ಲಕ್ಷದಿಂದ 1 ಕೋಟಿ ನಡುವೆ ಪರಿಹಾರ ಘೋಷಿಸಿದ್ದಾರೆ.
ಬೆಳಿಗ್ಗೆ 8 ಗಂಟೆ ಸುಮಾರಿಗೆ ಸಿಲಿಂಡರ್ ಸ್ಫೋಟಗೊಂಡು, ಮನೆ ಬೆಂಕಿಯಿಂದ ಹೊತ್ತಿ ಉರಿದಿದೆ. ಘಟನೆಯಲ್ಲಿ ಕಾರ್ಮಿಕರಾದ ಜಗದೀಶ್ ಶಾಂತಿಬೈ, ಪ್ರಕಾಶ್, ಕಾಡು, ಜೈಮುಲ್, ಮಂಜು, ವಲ್ಲಿ ಎಂಬವರು ತೀವ್ರವಾಗಿ ಗಾಯಗೊಂಡಿದ್ದು, ಇದೀಗ ಅವರನ್ನು ಜಿಗಣಿ ಖಾಸಗಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ. ಸದ್ಯ ಸ್ಥಳಕ್ಕೆ ಜಿಗಣಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ. ಇದನ್ನೂ ಓದಿ: ಅಪ್ಪು ಜೊತೆಗಿನ ಸಿಹಿ ನೆನಪುಗಳನ್ನು ಮೆಲುಕು ಹಾಕುತ್ತಿರುವ ಶಿವಣ್ಣ, ರಾಘಣ್ಣ
ಚಿತ್ರದುರ್ಗ: ಕಾರ್ಮಿಕ ಇಲಾಖೆ ನೀಡಿದ್ದ ಇಮ್ಯೂನಿಟಿ ಬೂಸ್ಟರ್ ಸೇವಿಸಿ 8 ಮಂದಿ ಕಾರ್ಮಿಕರು ಅಸ್ವಸ್ಥಗೊಂಡಿರುವ ಘಟನೆ ಚಿತ್ರದುರ್ಗದಲ್ಲಿ ನಡೆದಿದೆ.
ಚಿತ್ರದುರ್ಗ ಜಿಲ್ಲೆಯ ಕಾರ್ಮಿಕ ಇಲಾಖೆಯಿಂದ ನೀಡಿದ್ದ ಇಮ್ಯೂನಿಟಿ ಬೂಸ್ಟರ್ ಸೇವಿಸಿದ್ದ ಕಾರ್ಮಿಕ ಕುಮಾರ್ ಸೇರಿದಂತೆ 8 ಜನ ಕಾರ್ಮಿಕರಿಗೆ ಶನಿವಾರ ಮಧ್ಯಾಹ್ನ ವಾಂತಿ, ಬೇಧಿ ಶುರುವಾಗಿ, 8 ಜನ ಕಾರ್ಮಿಕರು ತೀವ್ರ ಅಸ್ವಸ್ಥರಾಗಿದ್ದರು. ಈ ಹಿನ್ನೆಲೆ ಕಾರ್ಮಿಕರು ತಕ್ಷಣ ಜಿಲ್ಲಾ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಆದರೆ ಕಾರ್ಮಿಕರ ಶಕ್ತಿ ಹೆಚ್ಚಿಸಲು ಸಹಕಾರಿಯಾಗಬೇಕಿದ್ದ ಬೂಸ್ಟರ್‍ನಿಂದಲೇ ಅನಾರೋಗ್ಯಕ್ಕೀಡಾಗಿರುವ ಕಾರ್ಮಿಕರು ಆತಂಕಗೊಂಡಿದ್ದಾರೆ. ಇದನ್ನೂ ಓದಿ: ಕುಮಾರಸ್ವಾಮಿ ಬ್ರದರ್, ಬ್ರದರ್ ಅಂತ ಕತ್ತು ಕೊಯ್ಯೋದು: ಜಮೀರ್ ಅಹ್ಮದ್
ಕಾರ್ಮಿಕ ಇಲಾಖೆ ಅಧಿಕಾರಿಗಳು ನೀಡಿರುವ ಇಮ್ಯೂನಿಟಿ ಬೂಸ್ಟರ್ ಬಾಕ್ಸ್‍ನ ಮೇಲಿನ ಪ್ಲಾಸ್ಟಿಕ್ ಮೇಲೆ ಧೂಳಿನ ಮಿಶ್ರಣ ಅಂಟಿರುವ ಹಿನ್ನೆಲೆಯಲ್ಲಿ ಈ ಅಡ್ಡ ಪರಿಣಾಮವಾಗಿದೆ ಎಂದು ಅಸ್ವಸ್ಥ ಕಾರ್ಮಿಕ ಮುಖಂಡ ವೈ.ಕುಮಾರ್ ಆರೋಪಿಸಿದ್ದಾರೆ. ಇದನ್ನೂ ಓದಿ: ಠಾಣೆ ಮೆಟ್ಟಿಲೇರಿದ ಕಸ ಫೈಟ್ – ಪ್ರೊಡ್ಯೂಸರ್ ಪುತ್ರ, ಪತ್ನಿ ವಿರುದ್ಧ FIR
ಮಂಗಳೂರು: ಮಂಗಳೂರಿನಲ್ಲಿ ಹಾಡಹಗಲಲ್ಲೇ ಗುಂಡಿನ ಸದ್ದು ಕೇಳಿದೆ. ಸಂಜೆ ಹೊತ್ತಿಗೆ ತಣ್ಣಗಿದ್ದ ಮಂಗಳೂರಿನ ಮೊರ್ಗನ್ಸ್ ಗೇಟ್ ಬೆಚ್ಚಿಬಿದ್ದಿದೆ. ಓರ್ವ ಬಾಲಕನ ಮೇಲೆ ಒಂದು ಗುಂಡು ಹಾರಿದ್ದು, ಅಪ್ಪನೇ ಮಗನ ಮೇಲೆ ಗುಂಡು ಹಾರಿಸಿದ್ದಾನೆ ಎನ್ನಲಾಗುತ್ತಿದೆ.
ಮಂಗಳೂರಿನ ಪಾಂಡೇಶ್ವರ ಪೊಲೀಸ್ ಠಾಣಾ ವ್ಯಾಪ್ತಿಯ ಮೋರ್ಗನ್ಸ್ ಗೇಟ್ ಬಳಿ ಸಂಜೆ 3.30ರ ಸುಮಾರಿಗೆ ಬಂದೂಕಿನಿಂದ ಗುಂಡು ಹಾರಿದೆ. ಎರಡು ಸುತ್ತು ಹಾರಿದ ಗುಂಡಿಗೆ ಮೋರ್ಗನ್ಸ್ ಗೇಟ್ ನ ನಿವಾಸಿಗಳು ಮತ್ತು ಸಾರ್ವಜನಿಕರು ಬೆಚ್ಚಿಬಿದ್ದಿದ್ದರು. ವೈಷ್ಣವಿ ಎಕ್ಸ್‍ಪ್ರೆಸ್ ಕಾರ್ಗೋ ಲಿಮಿಟೆಡ್ ನ ಎದುರು ಘಟನೆ ನಡೆದಿದೆ. ವೈಷ್ಣವಿ ಎಕ್ಸ್ ಪ್ರೆಸ್ ಕಾರ್ಗೋ ಲಿಮಿಟೆಡ್ ಮಾಲೀಕ ರಾಜೇಶ್ ಪ್ರಭು ಅವರಿಗೆ ಸೇರಿದ ಪಿಸ್ತೂಲ್ ನಿಂದ ಫೈರಿಂಗ್ ಆಗಿದೆ. ರಾಜೇಶ್ ಪ್ರಭು ಅವರ ಮಗ 14 ವರ್ಷದ ಸುಧೀಂದ್ರ ಪ್ರಭು ಮೇಲೆ ಗುಂಡೇಟು ಬಿದ್ದಿದೆ. ಪಿಸ್ತೂಲ್ ನಿಂದ ಹಾರಿದ ಬುಲೆಟ್ ಸುಧೀಂದ್ರ ಪ್ರಭು ತಲೆ ಭಾಗದ ಸೈಡ್ ನಲ್ಲಿ ಸೀಳಿಕೊಂಡು ಹೋಗಿದೆ. ತಕ್ಷಣ ಸುಧೀಂದ್ರ ಪ್ರಭುವನ್ನು ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಿದ್ದಾರೆ. ಇದನ್ನೂ ಓದಿ: ಸುಬ್ರಹ್ಮಣ್ಯದ ಪಯಸ್ವಿನಿ ನದಿಯಲ್ಲಿ ಅಕ್ರಮ ಮರಳು ದಂಧೆ- ಕಣ್ಮುಚ್ಚಿ ಕುಳಿತ ಅಧಿಕಾರಿಗಳು
ಪ್ರತ್ಯಕ್ಷದರ್ಶಿಗಳು ಹೇಳುವ ಪ್ರಕಾರ ಮಗ ಸುದೀಂದ್ರ ಪ್ರಭು ಮೇಲೆ ತಂದೆ ರಾಜೇಶ್ ಪ್ರಭುವೇ ಗುಂಡು ಹಾರಿಸಿದ್ದಾರೆ ಎನ್ನಲಾಗಿದೆ. ವೈಷ್ಣವಿ ಎಕ್ಸ್ ಪ್ರೆಸ್ ಕಾರ್ಗೋ ಲಿಮಿಟೆಡ್ ನ ಮಾಲೀಕರಾದ ರಾಜೇಶ್ ಪ್ರಭು ಮಂಗಳೂರಿನ ಖ್ಯಾತ ಉದ್ಯಮಿ. ರಾಜ್ಯ ರಾಜಕಾರಣಿಗಳ ಜೊತೆ ನಿಕಟ ಸಂಪರ್ಕ ಇಟ್ಟುಕೊಂಡಿದ್ದವರು. ತಮ್ಮ ಉದ್ಯಮದಲ್ಲಿ ಸಾಕಷ್ಟು ಜನರನ್ನು ಕೆಲಸಕ್ಕೆ ಇಟ್ಟುಕೊಂಡಿದ್ದಾರೆ.
ಬಲ್ಲ ಮೂಲಗಳ ಪ್ರಕಾರ, ಇಂದು ಸಂಜೆ ಡ್ರೈವರ್ ಚಂದ್ರು ಮತ್ತು ಮತ್ತೊಬ್ಬ ಕೆಲಸದ ಸಿಬ್ಬಂದಿ ಆಶ್ರಫ್ ಸಂಬಳದ ವಿಚಾರಕ್ಕಾಗಿ ರಾಜೇಶ್ ಪ್ರಭು ಜೊತೆ ಜಗಳವಾಡುತ್ತಿದ್ದರು. ಈ ವೇಳೆ ರಾಜೇಶ್ ಪ್ರಭು ಮಗ ಸುಧೀಂದ್ರ ಪ್ರಭು ಕೂಡ ಅಲ್ಲೇ ನಿಂತಿದ್ದ. ಮಾತಿಗೆ ಮಾತು ಬೆಳೆದು ತನ್ನ ಲೈಸೆನ್ಸ್ ಇರುವ ರಿವಾಲ್ವರನ್ನು ತನ್ನ ಕೆಲಸಗಾರರತ್ತ ಎರಡು ಸುತ್ತು ಹಾರಿಸಿದ್ದಾರೆ. ಅದು ಮಿಸ್ಸಾಗಿ ತನ್ನ ಮಗನ ಮೇಲೆ ಬಿದ್ದಿದೆ ಎಂದು ತಿಳಿದುಬಂದಿದೆ. ಇದನ್ನೂ ಓದಿ: ಕೋರ್ಟ್ ಆದೇಶಕ್ಕೆ ತಲೆ ಬಾಗಿ ಬಂದಿದ್ದೇನೆ – ಸುಳ್ಯ ನ್ಯಾಯಾಲಯಕ್ಕೆ ಇಂದು ಡಿಕೆಶಿ ಹಾಜರು
ಘಟನಾ ಸ್ಥಳಕ್ಕೆ ಭೇಟಿ ನೀಡಿದ ಮಂಗಳೂರು ನಗರ ಪೊಲೀಸ್ ಆಯುಕ್ತ ಶಶಿಕುಮಾರ್, ಸ್ಥಳ ಪರಿಶೀಲನೆ ಮಾಡಿದರು. ನಂತರ ಮಾತನಾಡಿದ ಅವರು, ಆರಂಭಿಕ ಹಂತದಲ್ಲಿ ಮಗನ ಮೇಲೆ ತಂದೆಯಿಂದ ಶೂಟೌಟ್ ಆಗಿದೆ ಎಂಬ ಮಾಹಿತಿ ಇತ್ತು. ಬಳಿಕ ಕೆಲಸಗಾರರು ಫೈರಿಂಗ್ ಮಾಡಿದ್ದಾರೆ ಎಂಬ ಮಾಹಿತಿ ಸಹ ಸಿಕ್ಕಿದೆ. ಈ ಬಗ್ಗೆ ತನಿಖೆ ಮಾಡಲಾಗುತ್ತಿದೆ ಎಂದು ಹೇಳಿದ್ದಾರೆ.
ಸದ್ಯ ಪಾಂಡೇಶ್ವರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಗಾಯಾಳು ಪರಿಸ್ಥಿತಿ ಗಂಭೀರವಾಗಿದೆ. ಪೊಲೀಸರು ತನಿಖೆಯನ್ನು ಆರಂಭಿಸಿದ್ದಾರೆ. ತನಿಖೆ ಬಳಿಕ ಅಸಲಿಗೆ ಇಲ್ಲಿ ಏನಾಯಿತು ಎಂಬುದು ಬೆಳಕಿಗೆ ಬರಲಿದೆ.
ಹಾಸನ: ಅಸ್ಸಾಂನಿಂದ ಬರುತ್ತಿರುವ ಕೂಲಿ ಕಾರ್ಮಿಕರನ್ನು ಕುರಿಗಳನ್ನು ತುಂಬಿದಂತೆ ಗೂಡ್ಸ್ ವಾಹನದಲ್ಲಿ ಹಾಸನಕ್ಕೆ ಕರೆತರುತ್ತಿದ್ದು, ಈ ಬಗ್ಗೆ ಸ್ಥಳೀಯರು ಆತಂಕ ಹೊರಹಾಕುತ್ತಿದ್ದಾರೆ.
ಕಾಫಿ ತೋಟ ಸೇರಿದಂತೆ ಇನ್ನಿತರ ಕೂಲಿ ಕೆಲಸ ಮಾಡಲು ಹಾಸನಕ್ಕೆ ಕೂಲಿ ಕಾರ್ಮಿಕರು ಆಗಮಿಸುತ್ತಿದ್ದಾರೆ. ಇದೇ ರೀತಿ ಗೂಡ್ಸ್ ಗಾಡಿಯಲ್ಲಿ ಕೂಲಿ ಕಾರ್ಮಿಕರನ್ನು ಕರೆದುಕೊಂಡು ಹೋಗುವಾಗ ಅರಕಲಗೂಡು ಪೊಲೀಸರು ತಡೆದು ಪರಿಶೀಲನೆ ನಡೆಸಿದ್ದಾರೆ. ಇದನ್ನೂ ಓದಿ: ವಾಹನ ಸವಾರರ ಮೇಲೆ ಹಿರೇಹಳ್ಳಿ ಟೋಲ್ ಗೇಟ್ ಸಿಬ್ಬಂದಿ ಗೂಂಡಾಗಿರಿ
ಹಾಸನ ಜಿಲ್ಲೆಯ ಜನ ಈಗಾಗಲೇ ಕೊರೊನಾದಿಂದ ಸಾಕಷ್ಟು ಸಂಕಷ್ಟ ಅನುಭವಿಸಿದ್ದಾರೆ. ಲಾಕ್‍ಡೌನ್ ನಂತರ ಬಹುತೇಕ ಜಿಲ್ಲೆಗಳನ್ನು ಬೇಗ ಅನ್‍ಲಾಕ್ ಮಾಡಿದ್ರು ಕೂಡ ಹಾಸನ ಜಿಲ್ಲೆಗೆ ತಡವಾಗಿ ರಿಲೀಫ್ ಸಿಕ್ಕಿತ್ತು. ಇದನ್ನೂ ಓದಿ: ನಾಗಮಂಗಲದ ಸರ್ಕಾರಿ ಕಾಲೇಜಿನ 28 ವಿದ್ಯಾರ್ಥಿನಿಯರಿಗೆ ಕೊರೊನಾ
ಕೂಲಿ ಕೆಲಸಕ್ಕೆ ಬರುವವರು ಕೊರೊನಾ ನೆಗೆಟಿವ್ ವರದಿ ತರುತ್ತಿದ್ದಾರ? ಅಥವಾ ಲಸಿಕೆ ಹಾಕಿಸಿಕೊಂಡಿದ್ದಾರ ಎಂಬುದರ ಬಗ್ಗೆ ಮಾಹಿತಿಯಿಲ್ಲ. ಹೀಗಾಗಿ ಹೊರರಾಜ್ಯದಿಂದ ಯಾರೇ ಬಂದರೂ ಕೋವಿಡ್ ನೆಗೆಟಿವ್ ವರದಿ ಕಡ್ಡಾಯ ಮಾಡಲಿ. ಈ ಬಗ್ಗೆ ಕೂಡಲೇ ಜಿಲ್ಲಾಧಿಕಾರಿಗಳು ಕಟ್ಟುನಿಟ್ಟಿನ ಆದೇಶ ಹೊರಡಿಸಲಿ ಎಂದು ಸ್ಥಳೀಯರು ಆಗ್ರಹಿಸಿದ್ದಾರೆ.
ಈ ಕಟ್ಟಡ ಮಾಲೀಕ ಸುರೇಶ್‍ರವರಿಗೆ ಸೇರಿದ್ದಾಗಿದ್ದು, ಕಳೆದ ಎರಡು ವರ್ಷಗಳ ಹಿಂದೆ ಮನೆ ಬಾಗಿತ್ತು. ಅಲ್ಲದೇ ಎರಡು ವಾರದ ಹಿಂದೆ ಕಟ್ಟದಲ್ಲಿ ವಾಸವಾಗಿದ್ದ ಎಲ್ಲರನ್ನು ಖಾಲಿ ಮಾಡಿಸಲಾಗಿತ್ತು. ಆದರೆ ಇಂದು ಬೆಳಗ್ಗೆ ಮನೆ ವಾಲುವುದಕ್ಕೆ ಪ್ರಾರಂಭವಾಗಿದೆ. ವಿಚಾರ ತಿಳಿದು ಸ್ಥಳೀಯ ನಿವಾಸಿಗಳು ಕೂಡಲೇ ಹೊರಗೆ ಓಡಿ ಬಂದಿದ್ದಾರೆ. ಬಳಿಕ ಅಗ್ನಿಶಾಮಕ ದಳದ ಸಿಬ್ಬಂದಿಗೆ ಕರೆ ಮಾಡಿ ಮಾಹಿತಿ ನೀಡಿದ್ದಾರೆ. ಆದರೆ ಸ್ಥಳಕ್ಕೆ ಅಗ್ನಿಶಾಮಕ ದಳದ ಸಿಬ್ಬಂದಿ ಆಗಮಿಸುವಷ್ಟರಲ್ಲಿ ಮನೆ ಕುಸಿದು ಬಿದ್ದಿದೆ.
ಸದ್ಯ ಸ್ಥಳಕ್ಕೆ ಬಿಬಿಎಂಪಿ ಜಂಟಿ ಆಯುಕ್ತ ವೀರಭದ್ರಯ್ಯ ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ. ಅಲ್ಲದೇ ಬಿಲ್ಡಿಂಗ್ ಗೆ ಎಲ್ಲೂ ಡ್ಯಾಮೇಜ್ ಆಗಿಲ್ಲ. ಇದು ಕೇವಲ ಹಳೇ ಬಿಲ್ಡಿಂಗ್ ಎಂದು ರಿಪೋರ್ಟ್‍ನಲ್ಲಿ ತಿಳಿಸಿರುವುದಾಗಿ ಹೇಳಿದ್ದಾರೆ.