Tag: World Athletics Championship 2022

  • ಮುಂದಿನ ಗುರಿ 90 ಮೀ. ಎಸೆತ – ಪದಕದ ಬಣ್ಣ ಬದಲಾಯಿಸಲು ಪ್ರಯತ್ನಿಸುತ್ತೇನೆ: ನೀರಜ್ ಚೋಪ್ರಾ

    ಮುಂದಿನ ಗುರಿ 90 ಮೀ. ಎಸೆತ – ಪದಕದ ಬಣ್ಣ ಬದಲಾಯಿಸಲು ಪ್ರಯತ್ನಿಸುತ್ತೇನೆ: ನೀರಜ್ ಚೋಪ್ರಾ

    ವಾಷಿಂಗ್ಟನ್: ವಿಶ್ವ ಅಥ್ಲೇಟಿಕ್ಸ್ ಚಾಂಪಿಯನ್‍ಶಿಪ್‍ನಲ್ಲಿ ಬೆಳ್ಳಿ ಪದಕ ಗೆದ್ದು ಸಾಧನೆ ಮಾಡಿರುವ ನೀರಜ್ ಚೋಪ್ರಾ ಮುಂದಿನ ನನ್ನ ಗುರಿ 90 ಮೀ.ಗಿಂತ ದೂರ ಎಸೆತ ಮತ್ತು ಈ ಪದಕದ ಬಣ್ಣ ಬದಲಾಗಬೇಕೆಂದು ಬಯಸುತ್ತೇನೆ ಎಂದಿದ್ದಾರೆ.

    ವಾಷಿಂಗ್ಟನ್‍ನಲ್ಲಿ ಮಾಧ್ಯಮಗೋಷ್ಠಿಯಲ್ಲಿ ಮಾತನಾಡಿದ ಅವರು, ದೇಶಕ್ಕಾಗಿ ಪದಕ ಗೆದ್ದಿರುವುದು ಸಂತೋಷ ನೀಡಿದೆ. ನಾನು ನನ್ನ ಪ್ರದರ್ಶನವನ್ನು ಇನ್ನಷ್ಟು ಉತ್ತಮಗೊಳಿಸಬೇಕಾಗಿದೆ. ಇದೀಗ ನನ್ನ ಮುಂದಿನ ಗುರಿ 90 ಮೀ. ಅಧಿಕ ದೂರ ಎಸೆತದ ಪ್ರಯತ್ನ ಜೊತೆಗೆ ಈಗ ಪಡೆದಿರುವ ಬೆಳ್ಳಿ ಪದಕದ ಬಣ್ಣ ಚಿನ್ನವಾಗಿ ಸಿಗಬೇಕೆಂಬ ಹಂಬಲವಿದೆ ಎಂದಿದ್ದಾರೆ. ಇದನ್ನೂ ಓದಿ: World Athletics Championship 2022 – ಬೆಳ್ಳಿ ಪದಕ ಗೆದ್ದ ನೀರಜ್ ಚೋಪ್ರಾ

    ನನಗೆ ಒಲಿಂಪಿಕ್ಸ್ ಚಾಂಪಿಯನ್ ಎಂಬಂತಹ ಯಾವುದೇ ಒತ್ತಡ ಇಲ್ಲ. ನಾನು ಮತ್ತೆ ಚಿನ್ನದ ಪದಕದ ಬೇಟೆಯಾಡುತ್ತೇನೆ. ನನ್ನ ಪ್ರದರ್ಶನ ತೃಪ್ತಿದಾಯಕವಾಗಿದೆ. ಜಾವೆಲಿನ್ ಎಸೆಯಲು ಉತ್ತಮ ಪರಿಸ್ಥಿತಿ ಇರಲಿಲ್ಲ. ಗಾಳಿಯ ವೇಗವೂ ಹೆಚ್ಚಾಗಿದ್ದರೂ ಉತ್ತಮ ಪ್ರದರ್ಶನ ನೀಡುತ್ತೇನೆಂಬ ವಿಶ್ವಾಸವಿತ್ತು. ಪ್ರತಿಸ್ಪರ್ಧಿಗಳು ಉತ್ತಮವಾಗಿ ಎಸೆಯುತ್ತಿದ್ದರು. ಪ್ರತಿ ಬಾರಿ ಚಿನ್ನ ಗೆಲ್ಲಲು ಸಾಧ್ಯವಿಲ್ಲ ಆದರೂ ಪ್ರಯತ್ನಿಸುತ್ತೇನೆ. ನನ್ನಿಂದ ಸಾಧ್ಯವಾಗುವ ಎಲ್ಲವನ್ನೂ ಮಾಡುತ್ತೇನೆ. ಮತ್ತೆ ತರಬೇತಿ ಮೇಲೆ ಗಮನ ಹರಿಸುತ್ತೇನೆ ಎಂದು ತಿಳಿಸಿದ್ದಾರೆ. ಇದನ್ನೂ ಓದಿ: ದೇಶದ ಕ್ರೀಡಾ ಇತಿಹಾಸದಲ್ಲಿ ಇದೊಂದು ವಿಶೇಷ ಕ್ಷಣ – ನೀರಜ್ ಚೋಪ್ರಾಗೆ ಮೋದಿ ಸಹಿತ ಗಣ್ಯರಿಂದ ಅಭಿನಂದನೆ

    ವಿಶ್ವ ಅಥ್ಲೇಟಿಕ್ಸ್ ಚಾಂಪಿಯನ್‍ಶಿಪ್‍ ಫೈನಲ್ ಸ್ಪರ್ಧೆಯಲ್ಲಿ ಗ್ರೆನಾಡದ ಆಂಡರ್ಸನ್ ಪೀಟರ್ಸ್ ನೀರಜ್ ಚೋಪ್ರಾಗಿಂತ ಉತ್ತಮ ಸಾಧನೆ ಪ್ರದರ್ಶಿಸಿ ಚಿನ್ನದ ಪದಕ ಮುಡಿಗೇರಿಸಿಕೊಂಡರು. ಆಂಡರ್ಸನ್ ಪೀಟರ್ಸ್ 90.54 ಮೀಟರ್ ದೂರ ಎಸೆದು ಚಿನ್ನದ ಪದಕ ಗೆದ್ದರೆ, ನೀರಜ್ ಚೋಪ್ರಾ 88.13 ಮೀ. ದೂರ ಎಸೆದು ಬೆಳ್ಳಿ ಪದಕ ಪಡೆದರು. ಚೆಕ್ ಗಣರಾಜ್ಯದ ಜಾಕೂಬ್ ವಾಡ್ಲೆಚ್ 88.09 ದೂರ ಎಸೆಯುವುದರೊಂದಿಗೆ ಮೂರನೇ ಸ್ಥಾನ ಪಡೆದು ಕಂಚಿನ ಪದಕ ಗೆದ್ದರು.

    Live Tv
    [brid partner=56869869 player=32851 video=960834 autoplay=true]

  • ದೇಶದ ಕ್ರೀಡಾ ಇತಿಹಾಸದಲ್ಲಿ ಇದೊಂದು ವಿಶೇಷ ಕ್ಷಣ – ನೀರಜ್ ಚೋಪ್ರಾಗೆ ಮೋದಿ ಸಹಿತ ಗಣ್ಯರಿಂದ ಅಭಿನಂದನೆ

    ದೇಶದ ಕ್ರೀಡಾ ಇತಿಹಾಸದಲ್ಲಿ ಇದೊಂದು ವಿಶೇಷ ಕ್ಷಣ – ನೀರಜ್ ಚೋಪ್ರಾಗೆ ಮೋದಿ ಸಹಿತ ಗಣ್ಯರಿಂದ ಅಭಿನಂದನೆ

    ನವದೆಹಲಿ: ವಿಶ್ವ ಅಥ್ಲೇಟಿಕ್ಸ್ ಚಾಂಪಿಯನ್‍ಶಿಪ್‍ನ ಪುರುಷರ ಜಾವೆಲಿನ್ ಥ್ರೋನಲ್ಲಿ ಬೆಳ್ಳಿ ಪದಕ ಗೆದ್ದ ನೀರಜ್ ಚೋಪ್ರಾಗೆ ಪ್ರಧಾನಿ ನರೇಂದ್ರ ಮೋದಿ ಸಹಿತ ಗಣ್ಯರು ಟ್ವಿಟ್ಟರ್ ಮೂಲಕ ಅಭಿನಂದನೆ ಸಲ್ಲಿಸಿದ್ದಾರೆ.

    ಟ್ವೀಟ್‍ನಲ್ಲಿ ಏನಿದೆ?:
    ನಮ್ಮ ಅತ್ಯಂತ ಪ್ರತಿಷ್ಠಿತ ಕ್ರೀಡಾಪಟುಗಳಲ್ಲಿ ಒಬ್ಬರಾಗಿರುವ ನೀರಜ್ ಚೋಪ್ರಾ ಉತ್ತಮ ಸಾಧನೆ ಮಾಡಿದ್ದಾರೆ. ವಿಶ್ವ ಅಥ್ಲೇಟಿಕ್ಸ್ ಚಾಂಪಿಯನ್‍ಶಿಪ್‍ನಲ್ಲಿ ಐತಿಹಾಸಿಕ ಬೆಳ್ಳಿ ಪದಕವನ್ನು ಗೆದ್ದ ಮೇಲೆ. ಭಾರತೀಯ ಕ್ರೀಡೆಗೆ ಇದೊಂದು ವಿಶೇಷ ಕ್ಷಣ. ನೀರಜ್ ಅವರ ಮುಂಬರುವ ಪ್ರಯತ್ನಗಳಿಗೆ ಶುಭಾಶಯಗಳನ್ನು ಕೋರುತ್ತಿದ್ದೇನೆ ಎಂದು ಮೋದಿ ಟ್ವೀಟ್ ಮಾಡಿದ್ದಾರೆ. ಇದನ್ನೂ ಓದಿ: World Athletics Championship 2022 – ಬೆಳ್ಳಿ ಪದಕ ಗೆದ್ದ ನೀರಜ್ ಚೋಪ್ರಾ

    ಸಾಮಾಜಿಕ ಜಾಲತಾಣದಲ್ಲಿ ನೀರಜ್ ಚೋಪ್ರಾಗೆ ಅಭಿನಂದನೆಗಳ ಮಹಾಪೂರವೇ ಹರಿದು ಬಂದಿದೆ. ಗೃಹ ಸಚಿವ ಅಮಿತ್ ಶಾ, ಕ್ರೀಡಾ ಸಚಿವ  ಅನುರಾಗ್ ಠಾಕೂರ್, ರಕ್ಷಣಾ ಸಚಿವ ರಜನಾಥ್‌ ಸಿಂಗ್, ಬಸವರಾಜ ಬೊಮ್ಮಾಯಿ, ಕೆ ಸುಧಾಕರ್ ಸೇರಿದಂತೆ ಹಲವು ಗಣ್ಯರು ಅಭಿನಂದನೆ ಸಲ್ಲಿಸಿದ್ದಾರೆ. ಇದನ್ನೂ ಓದಿ: ಗಾಯಗೊಂಡ ರವೀಂದ್ರ ಜಡೇಜಾ – ನೆಟ್ಸ್‌ನಲ್ಲಿ ಬೌಲಿಂಗ್ ಮಾಡಿದ ಅಮಿರ್ ಅಲಿ

    ಫೈನಲ್‍ನಲ್ಲಿ ನೀರಜ್ ಚೋಪ್ರಾ 88.13 ಮೀ. ದೂರ ಎಸೆದು ಬೆಳ್ಳಿ ಪದಕ ಪಡೆದರು. ಈ ಮೂಲಕ 19 ವರ್ಷಗಳ ಬಳಿಕ ಭಾರತಕ್ಕೆ ಮತ್ತೊಂದು ವಿಶ್ವ ಅಥ್ಲೇಟಿಕ್ಸ್ ಚಾಂಪಿಯನ್‍ಶಿಪ್ ಪದಕ ತಂದುಕೊಟ್ಟು ಇತಿಹಾಸ ನಿರ್ಮಿಸಿದರು. ನೀರಜ್ ಚೋಪ್ರಾ ಬೆಳ್ಳಿ ಪದಕದೊಂದಿಗೆ ವಿಶ್ವ ಅಥ್ಲೇಟಿಕ್ಸ್ ಚಾಂಪಿಯನ್‍ಶಿಪ್‍ನಲ್ಲಿ ಪದಕ ಗೆದ್ದ ಮೊದಲ ಪುರುಷ ಸ್ಪರ್ಧಿ, ದೇಶದ ಎರಡನೇ ಕ್ರೀಡಾಪಟು ಎಂಬ ಹಗ್ಗಳಿಕೆ ಪಾತ್ರರಾಗಿದ್ದಾರೆ.

    ಒಲಿಂಪಿಕ್ಸ್‌ನಲ್ಲಿ ಚಿನ್ನದ ಪದಕ ಪಡೆದು ಇತಿಹಾಸ ನಿರ್ಮಿಸಿದ್ದ ನೀರಜ್ ಚೋಪ್ರಾ, ವಿಶ್ವ ಅಥ್ಲೇಟಿಕ್ಸ್ ಚಾಂಪಿಯನ್‍ಶಿಪ್‍ನಲ್ಲಿ 88.39 ಮೀ. ಎಸೆದು ಫೈನಲ್‍ಗೆ ಎಂಟ್ರಿಕೊಟ್ಟಿದ್ದರು. ಫೈನಲ್‍ನಲ್ಲಿ ಬೆಳ್ಳಿಗೆದ್ದು 39 ವರ್ಷಗಳ ಇತಿಹಾಸ ಹೊಂದಿರುವ ವಿಶ್ವ ಅಥ್ಲೇಟಿಕ್ಸ್ ಚಾಂಪಿಯನ್‍ಶಿಪ್‍ನಲ್ಲಿ ಭಾರತಕ್ಕೆ 2ನೇ ಪದಕ ತಂದುಕೊಟ್ಟರು. 2003ರಲ್ಲಿ ಪ್ಯಾರಿಸ್‍ನಲ್ಲಿ ನಡೆದ ಕ್ರೀಡಾಕೂಟದಲ್ಲಿ ಲಾಂಗ್ ಜಂಪರ್ ಅಂಜು ಬಾಬಿ ಜಾರ್ಜ್ ಕಂಚಿನ ಪದಕ ಗೆದ್ದು ಇತಿಹಾಸ ನಿರ್ಮಿಸಿದ್ದರು. ಆ ಬಳಿಕ ಇದೀಗ ನೀರಜ್ ಚೋಪ್ರಾ ಪದಕ ಗೆದ್ದು ಐತಿಹಾಸಿಕ ಸಾಧನೆ ಮಾಡಿದ್ದಾರೆ.

    Live Tv
    [brid partner=56869869 player=32851 video=960834 autoplay=true]

  • World Athletics Championship 2022  – ಬೆಳ್ಳಿ ಪದಕ ಗೆದ್ದ ನೀರಜ್ ಚೋಪ್ರಾ

    World Athletics Championship 2022 – ಬೆಳ್ಳಿ ಪದಕ ಗೆದ್ದ ನೀರಜ್ ಚೋಪ್ರಾ

    ವಾಷಿಂಗ್ಟನ್: ಅಮೆರಿಕದಲ್ಲಿ ನಡೆಯುತ್ತಿರುವ ವಿಶ್ವ ಅಥ್ಲೇಟಿಕ್ಸ್ ಚಾಂಪಿಯನ್‍ಶಿಪ್‍ನ ಪುರುಷರ ಜಾವೆಲಿನ್ ಥ್ರೋನಲ್ಲಿ ನೀರಜ್ ಚೋಪ್ರಾ ಬೆಳ್ಳಿ ಪದಕ ಗೆದ್ದು ಭಾರತಕ್ಕೆ ಮೊದಲ ಪದಕ ತಂದು ಕೊಟ್ಟಿದ್ದಾರೆ.

    ಫೈನಲ್‍ನಲ್ಲಿ ನೀರಜ್ ಚೋಪ್ರಾ 88.13 ಮೀ. ದೂರ ಎಸೆದು ಬೆಳ್ಳಿ ಪದಕ ಪಡೆದರು. ಈ ಮೂಲಕ 19 ವರ್ಷಗಳ ಬಳಿಕ ಭಾರತಕ್ಕೆ ಮತ್ತೊಂದು ವಿಶ್ವ ಅಥ್ಲೇಟಿಕ್ಸ್ ಚಾಂಪಿಯನ್‍ಶಿಪ್ ಪದಕ ತಂದುಕೊಟ್ಟು ಇತಿಹಾಸ ನಿರ್ಮಿಸಿದರು. ಇದನ್ನೂ ಓದಿ: ರೈಟ್‍ಮೆನ್ ಪ್ರೀಮಿಯರ್ ಲೀಗ್ 2022 – ಪಬ್ಲಿಕ್ ಕ್ಯಾಪ್ಟನ್ ತಂಡ ಚಾಂಪಿಯನ್


    ಫೈನಲ್‍ನಲ್ಲಿ ಗ್ರೆನಡಾದ ಆಂಡರ್ಸನ್ ಪೀಟರ್ಸ್ ಸತತ ಮೂರು ಎಸೆತಗಳನ್ನು 90+ ಮೀ. ಎಸೆದು ಚಿನ್ನದ ಪದಕಕ್ಕೆ ಮುತ್ತಿಕ್ಕಿದರೆ, ನೀರಜ್ ಚೋಪ್ರಾ ಮೊದಲ ಎಸೆತ ಫೌಲ್ ಆಯಿತು. ಎರಡನೇ ಎಸೆತ 82.39 ಮೀ., ಮೂರನೇ ಎಸೆತ 86.37 ಮೀ. ಮತ್ತು ನಾಲ್ಕನೇ ಎಸೆತ 88.13 ಎಸೆದು ಬೆಳ್ಳಿ ಪದಕ ಗೆದ್ದರು. ಒಲಿಂಪಿಕ್ಸ್‌ನಲ್ಲಿ ಬೆಳ್ಳಿ ಪದಕ ವಿಜೇತ ಜಾಕುಬ್ ವಡ್ಲೆಜ್ ಮೂರನೇ ಸ್ಥಾನ ಪಡೆದು ಕಂಚಿನ ಪದಕ ಪಡೆದರು.

    ಒಲಿಂಪಿಕ್ಸ್‌ನಲ್ಲಿ ಚಿನ್ನದ ಪದಕ ಪಡೆದು ಇತಿಹಾಸ ನಿರ್ಮಿಸಿದ್ದ ನೀರಜ್ ಚೋಪ್ರಾ, ವಿಶ್ವ ಅಥ್ಲೇಟಿಕ್ಸ್ ಚಾಂಪಿಯನ್‍ಶಿಪ್‍ನಲ್ಲಿ 88.39 ಮೀ. ಎಸೆದು ಫೈನಲ್‍ಗೆ ಎಂಟ್ರಿಕೊಟ್ಟಿದ್ದರು. ಫೈನಲ್‍ನಲ್ಲಿ ಬೆಳ್ಳಿಗೆದ್ದು 39 ವರ್ಷಗಳ ಇತಿಹಾಸ ಹೊಂದಿರುವ ವಿಶ್ವ ಅಥ್ಲೇಟಿಕ್ಸ್ ಚಾಂಪಿಯನ್‍ಶಿಪ್‍ನಲ್ಲಿ ಭಾರತಕ್ಕೆ 2ನೇ ಪದಕ ತಂದುಕೊಟ್ಟರು. 2003ರಲ್ಲಿ ಪ್ಯಾರಿಸ್‍ನಲ್ಲಿ ನಡೆದ ಕ್ರೀಡಾಕೂಟದಲ್ಲಿ ಲಾಂಗ್ ಜಂಪರ್ ಅಂಜು ಬಾಬಿ ಜಾರ್ಜ್ ಕಂಚಿನ ಪದಕ ಗೆದ್ದು ಇತಿಹಾಸ ನಿರ್ಮಿಸಿದ್ದರು. ಆ ಬಳಿಕ ಇದೀಗ ನೀರಜ್ ಚೋಪ್ರಾ ಪದಕ ಗೆದ್ದು ಐತಿಹಾಸಿಕ ಸಾಧನೆ ಮಾಡಿದ್ದಾರೆ.

    Live Tv
    [brid partner=56869869 player=32851 video=960834 autoplay=true]