Tag: World Chess Championship 2024

  • ವಿಶ್ವ ಚೆಸ್ ಚಾಂಪಿಯನ್ ಗುಕೇಶ್‌ಗೆ ತಮಿಳುನಾಡು ಸರ್ಕಾರದಿಂದ ಸನ್ಮಾನ – 5 ಕೋಟಿ ರೂ. ಬಹುಮಾನ!

    ವಿಶ್ವ ಚೆಸ್ ಚಾಂಪಿಯನ್ ಗುಕೇಶ್‌ಗೆ ತಮಿಳುನಾಡು ಸರ್ಕಾರದಿಂದ ಸನ್ಮಾನ – 5 ಕೋಟಿ ರೂ. ಬಹುಮಾನ!

    ಚೆನ್ನೈ: ವಿಶ್ವ ಚೆಸ್ ಚಾಂಪಿಯನ್ (World Chess Champion) ಡಿ.ಗುಕೇಶ್‌ಗೆ ಇಂದು (ಡಿ.17) ತಮಿಳುನಾಡು ಸರ್ಕಾರ ಸನ್ಮಾನ ಸಮಾರಂಭ ಹಮ್ಮಿಕೊಂಡಿದ್ದು, 5 ಕೋಟಿ ರೂ. ಬಹುಮಾನ ವಿತರಣೆ ಮಾಡಲಿದೆ.

    ತಮಿಳುನಾಡು ಮುಖ್ಯಮಂತ್ರಿ ಎಂ.ಕೆ ಸ್ಟಾಲಿನ್ (MK Stalin) ಅವರು ಇಂದು 5 ಕೋಟಿ ರೂ. ಬಹುಮಾನ ಚೆಕ್ ಹಸ್ತಾಂತರಿಸಲಿದ್ದಾರೆ. ಅಭಿನಂದನಾ ಸಮಾರಂಭದಲ್ಲಿ ಉಪಮುಖ್ಯಮಂತ್ರಿ ಉದಯನಿಧಿ ಸ್ಟಾಲಿನ್ ಹಾಗೂ ಚೆಸ್ ದಂತಕಥೆ ವಿಶ್ವನಾಥನ್ ಆನಂದ್ (Viswanathan Anand) ಸಹ ಭಾಗವಹಿಸಲಿದ್ದಾರೆ.ಇದನ್ನೂ ಓದಿ: ದರ್ಶನ್ ಜೊತೆ ಪವಿತ್ರಾ ಚೆನ್ನಾಗಿರುತ್ತೇನೆ ಅಂದರೆ ಇರಲಿ: ಮಾಜಿ ಪತಿ ಸಂಜಯ್ ಸಿಂಗ್

    ಈ ಕುರಿತು ಸಿಎಂ ಎಂ.ಕೆ. ಸ್ಟಾಲಿನ್ ಡಿ.ಗುಕೇಶ್ ಐತಿಹಾಸಿಕ ಸಾಧನೆ ಗುರುತಿಸಿ 5 ಕೋಟಿ ನಗದು ಬಹುಮಾನವನ್ನು ನೀಡುವುದಾಗಿ ತಮ್ಮ ಎಕ್ಸ್ ಖಾತೆಯಲ್ಲಿ ಹಂಚಿಕೊಂಡಿದ್ದರು.

    ಸೋಮವಾರ (ಡಿ.16) ತವರಿಗೆ ಬಂದಿಳಿದದ ಗುಕೇಶ್ ಅವರನ್ನು ಚೆನ್ನೈ ವಿಮಾನ ನಿಲ್ದಾಣದಲ್ಲಿ ಅವರ ಅಭಿಮಾನಿಗಳು ಸೇರಿದಂತೆ ಇನ್ನಿತರರು ಅದ್ದೂರಿಯಾಗಿ ಸ್ವಾಗತಿಸಿದರು.

    18ರ ಹರೆಯದ ಹುಡುಗ ಗುಕೇಶ್ ವಿಶ್ವ ಚೆಸ್ ಚಾಂಪಿಯನ್‌ಶಿಪ್ ಫೈನಲ್ ಪಂದ್ಯದಲ್ಲಿ ಚೀನಾದ ಡಿಂಗ್ ಲಿರೆನ್ ಅವರನ್ನು ಸೋಲಿಸಿ ಐತಿಹಾಸಿಕ ಸಾಧನೆ ಮಾಡಿದರು. ಕಳೆದ ವಾರ ನಡೆದ ಅಂತಾರಾಷ್ಟ್ರೀಯ ಚೆಸ್ ಫೆಡರೇಶನ್ ವಿಶ್ವ್ ಚಾಂಪಿಯನ್‌ಶಿಪ್‌ನ ಕೊನೆಯ 14ನೇ ನಿರ್ಣಾಯಕ ಪಂದ್ಯದಲ್ಲಿ 6.5-6.5 ಸಮಬಲಗೊಂಡು, ಬಳಿಕ 7.5-6.5 ಅಂಕಗಳೊಂದಿಗೆ ಗುಕೇಶ್ ಗೆಲುವು ಸಾಧಿಸುವ ಮೂಲಕ ಅಮೋಘ ಪ್ರದರ್ಶನ ನೀಡಿದ್ದರು. ವಿಶ್ವನಾಥನ್ ಆನಂದ್ ನಂತರ ಚೆಸ್ ವಿಶ್ವ ಚಾಂಪಿಯನ್‌ಶಿಪ್ ಗೆದ್ದ ಎರಡನೇ ಭಾರತೀಯನಾಗಿ ಹೊರಹೊಮ್ಮಿದ್ದಾರೆ. ಈ ಮೂಲಕ ಗುಕೇಶ್ ಅವರು ಮುಂದಿನ ವರ್ಷ ನಾರ್ವೆ ಚೆಸ್ ಟೂರ್ನಮೆಂಟ್‌ನಲ್ಲಿ ವಿಶ್ವದ ಅತಿ ಹೆಚ್ಚು ಶ್ರೇಯಾಂಕದ ಆಟಗಾರ ಮ್ಯಾಗ್ನಸ್ ಕಾರ್ಲ್ಸೆನ್ ಅವರನ್ನು ಎದುರಿಸಲಿದ್ದಾರೆ.ಇದನ್ನೂ ಓದಿ: ಔತಣಕೂಟ ಮಾಡಿ ಬೆನ್ನಿಗೆ ಚಾಕು ಹಾಕೋದಲ್ಲ, ಇದ್ರಲ್ಲಿ ಬಿಎಸ್‌ವೈ ಕುತಂತ್ರ ಇದ್ದೇ ಇರುತ್ತೆ – ಯತ್ನಾಳ್ ಕಿಡಿ

  • ತವರಿಗೆ ಮರಳಿದ ವಿಶ್ವ ಚೆಸ್ ಚಾಂಪಿಯನ್ – ಗುಕೇಶ್‌ಗೆ ಚೆನ್ನೈನಲ್ಲಿ ಭರ್ಜರಿ ಸ್ವಾಗತ

    ತವರಿಗೆ ಮರಳಿದ ವಿಶ್ವ ಚೆಸ್ ಚಾಂಪಿಯನ್ – ಗುಕೇಶ್‌ಗೆ ಚೆನ್ನೈನಲ್ಲಿ ಭರ್ಜರಿ ಸ್ವಾಗತ

    ಚೆನ್ನೈ: ಕಿರಿಯ ವಯಸ್ಸಿನಲ್ಲೇ ವಿಶ್ವ ಚೆಸ್ ಚಾಂಪಿಯನ್ (World Chess Champion) ಹೆಗ್ಗಳಿಕೆಗೆ ಪಾತ್ರರಾದ ಡಿ.ಗುಕೇಶ್ (D.Gukesh) ಭಾರತಕ್ಕೆ ಮರಳಿದ್ದು, ಚೆನ್ನೈ ವಿಮಾನ ನಿಲ್ದಾಣದಲ್ಲಿ (Chennai Airport) ಭರ್ಜರಿ ಸ್ವಾಗತ ಸಿಕ್ಕಿತು.

    ಇತ್ತೀಚಿಗಷ್ಟೇ ವಿಶ್ವ ಚೆಸ್ ಚಾಂಪಿಯನ್‌ಶಿಪ್ ಪಂದ್ಯದಲ್ಲಿ ಚೀನಾದ ಡಿಂಗ್ ಲಿರೆನ್ ಅವರನ್ನು ಸೋಲಿಸುವ ಮೂಲಕ ವಿಶ್ವದ ಕಿರಿಯ ಚೆಸ್ ಚಾಂಪಿಯನ್ ಎಂಬ ಇತಿಹಾಸ ನಿರ್ಮಿಸಿದರು.ಇದನ್ನೂ ಓದಿ: ವಿವಾದದ ನಡುವೆಯೂ ಗಲ್ಲಾಪೆಟ್ಟಿಗೆಯಲ್ಲಿ 1409 ಕೋಟಿ ಬಾಚಿದ ‘ಪುಷ್ಪ 2’

    ಇಂದು (ಡಿ.16) ಚೆನ್ನೈ ವಿಮಾನ ನಿಲ್ದಾಣದಿಂದ ಹೊರಬರುತ್ತಿದ್ದಂತೆ ಅಭಿಮಾನಿಗಳು, ಸ್ನೇಹಿತರು ಸೇರಿದಂತೆ ಅಧಿಕಾರಿಗಳು ಅವರನ್ನು ಅದ್ದೂರಿಯಾಗಿ ಸ್ವಾಗತಿಸಿದರು.

    ಈ ವೇಳೆ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಈ ಸಾಧನೆಯ ಬಳಿಕ ಮರಳಿ ಭಾರತಕ್ಕೆ ಬಂದಿರುವುದು ನನಗೆ ತುಂಬಾ ಸಂತೋಷವನ್ನುಂಟು ಮಾಡಿದೆ. ನನಗೆ ಬೆಂಬಲ ನೀಡಿದ ಎಲ್ಲರಿಗೂ ಧನ್ಯವಾದಗಳು. ನಿಮ್ಮ ಬೆಂಬಲವೇ ನನಗೆ ಹೆಚ್ಚಿನ ಶಕ್ತಿ ನೀಡಿತ್ತು ಎಂದು ಸಂತೋಷ ವ್ಯಕ್ತಪಡಿಸಿದರು.

    ವಿಶ್ವನಾಥನ್ ಆನಂದ್ ನಂತರ ಚೆಸ್ ವಿಶ್ವ ಚಾಂಪಿಯನ್‌ಶಿಪ್ ಗೆದ್ದ ಎರಡನೇ ಭಾರತೀಯನಾಗಿ ಹೊರಹೊಮ್ಮಿದ್ದಾರೆ. 18ರ ಹರೆಯದ ಹುಡುಗ ಗುಕೇಶ್ ವಿಶ್ವ ಚೆಸ್ ಚಾಂಪಿಯನ್‌ಶಿಪ್ ಫೈನಲ್ ಪಂದ್ಯದಲ್ಲಿ ಚೀನಾದ ಡಿಂಗ್ ಲಿರೆನ್ ಅವರನ್ನು ಸೋಲಿಸಿ ಐತಿಹಾಸಿಕ ಸಾಧನೆ ಮಾಡಿದರು. ಕಳೆದ ವಾರ ನಡೆದ ಅಂತಾರಾಷ್ಟ್ರೀಯ ಚೆಸ್ ಫೆಡರೇಶನ್ ವಿಶ್ವ್ ಚಾಂಪಿಯನ್‌ಶಿಪ್‌ನ ಕೊನೆಯ 14ನೇ ನಿರ್ಣಾಯಕ ಪಂದ್ಯದಲ್ಲಿ 6.5-6.5 ಸಮಬಲಗೊಂಡು, ಬಳಿಕ 7.5-6.5 ಅಂಕಗಳೊಂದಿಗೆ ಗುಕೇಶ್ ಗೆಲುವು ಸಾಧಿಸುವ ಮೂಲಕ ಅಮೋಘ ಪ್ರದರ್ಶನ ನೀಡಿದ್ದರು.ಇದನ್ನೂ ಓದಿ: ಭಾರತ-ಆಸೀಸ್ ಮೂರನೇ ಟೆಸ್ಟ್‌ಗೆ ಮಳೆ ಕಾಟ – ಭಾರತ ಮೊದಲ ಇನ್ನಿಂಗ್ಸ್‌ನಲ್ಲಿ 51 ರನ್‌ಗೆ 4 ವಿಕೆಟ್

  • ಭಾರತದ ಗುಕೇಶ್ ವಿಶ್ವ ಚೆಸ್ ಚಾಂಪಿಯನ್ – 18ನೇ ವಯಸ್ಸಿಗೆ ಸಾಧನೆ

    ಭಾರತದ ಗುಕೇಶ್ ವಿಶ್ವ ಚೆಸ್ ಚಾಂಪಿಯನ್ – 18ನೇ ವಯಸ್ಸಿಗೆ ಸಾಧನೆ

    ಸಿಂಗಾಪುರ: ಇಲ್ಲಿ ನಡೆದ ರೋಚಕ ಹಣಾಹಣಿಯ 14ನೇ ಮತ್ತು ಅಂತಿಮ ಪಂದ್ಯದಲ್ಲಿ ಗೆದ್ದ ಭಾರತದ ಗುಕೇಶ್ (D.Gukesh) ವಿಶ್ವ ಚೆಸ್ ಚಾಂಪಿಯನ್ ಆಗಿ ಹೊರಹೊಮ್ಮಿದ್ದಾರೆ. ಚೀನಾದ ಪ್ರಶಸ್ತಿ ವಿಜೇತ ಡಿಂಗ್ ಲಿರೆನ್ ಅವರನ್ನು ಸೋಲಿಸುವ ಮೂಲಕ ಭಾರತದ ಗ್ರ್ಯಾಂಡ್‌ಮಾಸ್ಟರ್ ಡಿ ಗುಕೇಶ್ ಗುರುವಾರ 18 ನೇ ವಯಸ್ಸಿನಲ್ಲಿ ಕಿರಿಯ ವಿಶ್ವ ಚೆಸ್ ಚಾಂಪಿಯನ್ (Chess World Champion) ಆಗಿದ್ದಾರೆ.

    14 ಪಂದ್ಯಗಳ ಕೊನೆಯ ಕ್ಲಾಸಿಕಲ್ ಗೇಮ್ ಅನ್ನು ಗೆದ್ದ ನಂತರ ಲಿರೆನ್ ಅವರ 6.5 ಗೆ ಹೋಲಿಸಿದರೆ ಗುಕೇಶ್ 7.5 ಅಂಕಗಳನ್ನು ಗಳಿಸಿದರು. ಇದನ್ನೂ ಓದಿ: ಭಾರತಕ್ಕೂ ಮೊದಲೇ ಚಾಂಪಿಯನ್ಸ್‌ ಟ್ರೋಫಿ ಬಾಯ್ಕಾಟ್‌ ಮಾಡ್ಬೇಕು – ಪಾಕ್ ಹೊಸ ಕ್ಯಾತೆ

    ರಷ್ಯಾದ ದಂತಕಥೆ ಗ್ಯಾರಿ ಕಾಸ್ಪರೋವ್ ಅವರು 1985 ರಲ್ಲಿ ಅನಾಟೊಲಿ ಕಾರ್ಪೋವ್ ಅವರನ್ನು ಸೋಲಿಸುವ ಮೂಲಕ 22 ನೇ ವಯಸ್ಸಿನಲ್ಲಿ ಪ್ರಶಸ್ತಿಯನ್ನು ಗೆದ್ದ ಕಿರಿಯ ವಿಶ್ವ ಚೆಸ್ ಚಾಂಪಿಯನ್ ಎಂಬ ದಾಖಲೆಯನ್ನು ಬರೆದಿದ್ದರು. ಈಗ ಆ ದಾಖಲೆಯನ್ನು ಗುಕೇಶ್‌ ಉಡೀಸ್‌ ಮಾಡಿದ್ದಾರೆ.

    ಈ ವರ್ಷದ ಆರಂಭದಲ್ಲಿ ಕ್ಯಾಂಡಿಡೇಟ್ಸ್ ಪಂದ್ಯಾವಳಿಯನ್ನು ಗೆದ್ದುಕೊಂಡ ಗುಕೇಶ್ ಅವರು ವಿಶ್ವ ಕಿರೀಟಕ್ಕೆ ಅತ್ಯಂತ ಕಿರಿಯ ಚಾಲೆಂಜರ್ ಆಗಿ ಪಂದ್ಯಕ್ಕೆ ಪ್ರವೇಶ ಪಡೆದಿದ್ದರು. ಇದನ್ನೂ ಓದಿ: ಎಸ್‌ಎಂಕೆ ಅಂತಿಮ ದರ್ಶನ ಪಡೆದ ಕ್ರಿಕೆಟ್ ದಿಗ್ಗಜ ಅನಿಲ್ ಕುಂಬ್ಳೆ

    ದಂತಕಥೆ ವಿಶ್ವನಾಥನ್ ಆನಂದ್ ನಂತರ ವಿಶ್ವ ಪ್ರಶಸ್ತಿ ಪಡೆದ ಎರಡನೇ ಭಾರತೀಯರಾಗಿದ್ದಾರೆ. ಐದು ಬಾರಿ ವಿಶ್ವ ಚಾಂಪಿಯನ್ ಆಗಿರುವ ಆನಂದ್ ಕೊನೆಯ ಬಾರಿಗೆ 2013ರಲ್ಲಿ ಕಿರೀಟ ಗೆದ್ದಿದ್ದರು.