ದಾವೋಸ್: ಮುಂದಿನ 10-20 ವರ್ಷಗಳ ಕಾಲ ವಿಶ್ವದಲ್ಲೇ ಭಾರತ (India) ಅತ್ಯಂತ ವೇಗವಾದ ಆರ್ಥಿಕ ಪ್ರಗತಿ ಹೊಂದುತ್ತಿರುವ ದೇಶವಾಗಿ ಹೊರಹೊಮ್ಮುವುದು ಖಚಿತ ಎಂದು ಫೈನಾನ್ಷಿಯಲ್ ಟೈಮ್ಸ್‌ನ ಮುಖ್ಯ ಅರ್ಥಶಾಸ್ತ್ರ ನಿರೂಪಕ ಮಾರ್ಟಿನ್ ವುಲ್ಫ್ (Martin Wolf) ಭವಿಷ್ಯ ನುಡಿದಿದ್ದಾರೆ.
#WorldEconomicForum | Over next 10-20 years, it is overwhelmingly certain that India will be the fastest growing economy, says Martin Wolf, Chief economics commentator at the Financial Times pic.twitter.com/JTsBpEpgQQ
ಸ್ವಿಟ್ಜರ್ಲೆಂಡ್‌ನ ದಾವೋಸ್‌ನಲ್ಲಿ (Davos) ನಡೆಯುತ್ತಿರುವ ವಿಶ್ವ ಆರ್ಥಿಕ ವೇದಿಕೆಯ(World Economic Forum) ಅಧಿವೇಶನವೊಂದರಲ್ಲಿ ಮಾತನಾಡಿದ ಅವರು, 70ರ ದಶಕದಿಂದ ನಾನು ಭಾರತದ ಆರ್ಥಿಕತೆಯನ್ನು ಗಮನಿಸುತ್ತಾ ಬಂದಿದ್ದೇನೆ. ಮುಂದಿನ 10-20 ವರ್ಷಗಳಲ್ಲಿ ಭಾರತವು ಅತ್ಯಂತ ವೇಗವಾಗಿ ಅಭಿವೃದ್ಧಿ ಹೊಂದಿದ ದೇಶವಾಗಲಿದೆ. ಇದರಲ್ಲಿ ಯಾವುದೇ ಸಂಶಯವೇ ಇಲ್ಲ ಎಂದು ಎಂದು ಹೇಳಿದರು. ಇದನ್ನೂ ಓದಿ: ಇಂಗ್ಲಿಷ್ ಪದವೀಧರೆ ಈಗ ಚಾಯ್‌ವಾಲಿ – ಯುವತಿ ಭವಿಷ್ಯದ ಕನಸಿಗೆ ಜನರ ಮೆಚ್ಚುಗೆ
ಇಲ್ಲಿಯವರೆಗೆ ಭಾರತದಲ್ಲಿ ಯಾರು ಉದ್ಯಮ ಹೊಂದಿಲ್ಲವೋ ಅವರು ಭಾರತವನ್ನು ಗಂಭೀರವಾಗಿ ಪರಿಗಣಿಸಬೇಕು ಎಂದು ಅಭಿಪ್ರಾಯ ವ್ಯಕ್ತಪಡಿಸಿದರು.
Live Tv
[brid partner=56869869 player=32851 video=960834 autoplay=true]
ಬರ್ನ್: ದಾವೋಸ್‍ನಲ್ಲಿ ನಡೆದ ವಿಶ್ವ ಆರ್ಥಿಕ ಶೃಂಗ ಸಭೆ ಫಲಪ್ರದವಾಗಿದ್ದು, ಕರ್ನಾಟಕ ಬಂಡವಾಳ ಹೂಡಿಕೆ ಆಕರ್ಷಿಸುವಲ್ಲಿ ಯಶಸ್ವಿಯಾಗಿದೆ. ಸಿಎಂ ಬಸವರಾಜ ಬೊಮ್ಮಾಯಿ ಅವರ ನೇತೃತ್ವದಲ್ಲಿ ಪ್ರಥಮ ಬಾರಿಗೆ 2 ಮಹತ್ವದ ಕಂಪನಿಗಳ ಜೊತೆ ಒಟ್ಟು 52 ಸಾವಿರ ಕೋಟಿ ರೂ. ಮೊತ್ತದ ಒಪ್ಪಂದಗಳಿಗೆ ಸಹಿ ಮಾಡಲಾಗಿದೆ.
ಇದು ಕರ್ನಾಟಕ ರಾಜ್ಯದ ಮೇಲೆ ದೊಡ್ಡ ದೊಡ್ಡ ಕಂಪನಿಗಳು ಇಟ್ಟಿರುವ ನಂಬಿಕೆ ಮತ್ತು ವಿಶ್ವಾಸಕ್ಕೆ ಸಾಕ್ಷಿ. ಇತ್ತೀಚಿನ ದಿನಗಳ ರಾಜ್ಯಕ್ಕೆ ಹರಿದು ಬರುತ್ತಿರುವ ಬಹುದೊಡ್ಡ ಮೊತ್ತದ ಬಂಡವಾಳ ಇದಾಗಿದೆ. ಹಲವಾರು ಕಂಪನಿಗಳು ಬಂಡವಾಳ ಹೂಡಿಕೆಗೆ ಆಸಕ್ತಿ ತೋರಿವೆ. ಮುಂದಿನ ದಿನಗಳಲ್ಲಿ ಇನ್ನೂ ಹಲವಾರು ಕಂಪನಿಗಳು ಹೂಡಿಕೆ ಮಾಡಲಿರುವ ಬಂಡವಾಳದಿಂದ ಸಾವಿರಾರು ನೇರ ಮತ್ತು ಪರೋಕ್ಷ ಉದ್ಯೋಗಗಳು ಸೃಷ್ಠಿ ಆಗಲಿವೆ. ಸಿಎಂ ಬಸವರಾಜ ಬೊಮ್ಮಾಯಿ ನೇತೃತ್ವದಲ್ಲಿ ಕೈಗಾರಿಕೆ ಸಚಿವ ಮುರುಗೇಶ್ ನಿರಾಣಿ ಅವರ ಆಸಕ್ತಿಯಿಂದ ಸರ್ಕಾರ ಬೃಹತ್ ಪ್ರಮಾಣದಲ್ಲಿ ಬಂಡವಾಳ ಆಕರ್ಷಿಸುವಲ್ಲಿ ಯಶಸ್ವಿಯಾಗುತ್ತಿದೆ. ಇದನ್ನೂ ಓದಿ: ಪಿಎಸ್‍ಐ ಪರೀಕ್ಷೆ ಅಕ್ರಮ: ಕಿಂಗ್‍ಪಿನ್ ಆರ್.ಡಿ.ಪಾಟೀಲ್ ಮತ್ತೆ ಸಿಐಡಿ ವಶಕ್ಕೆ!
ನವೀಕರಿಸಬಹುದಾದ ಇಂಧನ ವಲಯದಲ್ಲಿ ರೆನ್ಯೂ ಪವರ್ ಕಂಪನಿ 50,000 ಕೋಟಿ ರೂ.ಗಳ ಬಂಡವಾಳ ಹೂಡಲು ಕರ್ನಾಟಕ ಸರ್ಕಾರದ ಜೊತೆ ಒಪ್ಪಂದ ಮಾಡಿಕೊಂಡಿದ್ದು, ಕರ್ನಾಟಕದ ಇಂಧನ ಕ್ಷೇತ್ರದಲ್ಲಿ ಈ ಒಪ್ಪಂದ ಪ್ರಮುಖ ಮೈಲಿಗಲ್ಲಾಗಿದೆ. ಮೆ.ಲುಲು ಗ್ರೂಪ್ ಇಂಟರ್ನ್ಯಾಷನಲ್ ಸಂಸ್ಥೆಯು ರಾಜ್ಯದಲ್ಲಿ ಸುಮಾರು 2000 ಕೋಟಿ ರೂ. ಹೂಡಿಕೆ ಮಾಡುವ ಕುರಿತು ಒಪ್ಪಂದ ಮಾಡಿಕೊಳ್ಳಲಾಯಿತು. ಇವೆರಡೂ ಒಪ್ಪಂದಗಳು ರಾಜ್ಯದಲ್ಲಿ ಕೈಗಾರಿಕೆಗಳ ಅಭಿವೃದ್ಧಿ ಹಾಗೂ ಉದ್ಯೋಗ ಸೃಷ್ಟಿಗೆ ಸಹಕಾರಿಯಾಗಲಿದೆ.
ಕರ್ನಾಟಕದಲ್ಲಿ ಕೈಗಾರಿಕೆ ಹಾಗೂ ಉದ್ಯಮಗಳ ಸ್ಥಾಪನೆಗೆ ಪೂರಕವಾಗಿ ಎರಡು ನೀತಿಗಳನ್ನು ಜಾರಿಗೆ ತರಲಾಗುತ್ತಿದೆ. ಸಂಶೋಧನೆಗೆ ಹೆಚ್ಚು ಪ್ರೋತ್ಸಾಹವನ್ನು ನೀಡುವ ಆರ್ ಎಂಡ್ ಡಿ ಪಾಲಿಸಿ, ಹೆಚ್ಚು ಉದ್ಯೋಗವನ್ನು ಒದಗಿಸುವ ಉದ್ಯಮಗಳಿಗೆ ಹೆಚ್ಚು ಪ್ರೋತ್ಸಾಹಕ ನೀತಿಗಳನ್ನು ಜಾರಿಗೆ ತರಲಾಗಿದೆ. ಈ ಎರಡೂ ನೀತಿಗಳ ಲಾಭಗಳನ್ನು ಕರ್ನಾಟಕದಲ್ಲಿ ಬಂಡವಾಳ ಹೂಡಿಕೆ ಮಾಡುವ ಸಂಸ್ಥೆಗಳು ಪಡೆದುಕೊಳ್ಳಬಹುದಾಗಿದೆ ಎಂದು ತಿಳಿಸಿದರು.
ಇದೇ ಸಂದರ್ಭದ ನವೆಂಬರ್‍ನಲ್ಲಿ ಬೆಂಗಳೂರಿನಲ್ಲಿ ನಡೆಯುವ ಜಾಗತಿಕ ಬಂಡವಾಳ ಹೂಡಿಕೆದಾರರ ಸಮಾವೇಶ ಹಾಗೂ ಬೆಂಗಳೂರು ಟೆಕ್ ಸಮ್ಮಿಟ್‍ನಲ್ಲಿ ಪಾಲ್ಗೊಳ್ಳುವಂತೆ ಹೂಡಿಕೆದಾರರಿಗೆ ಆಹ್ವಾನ ನೀಡಲಾಯಿತು.
I am blessed to be born & educated in Karnataka. Blessed that I represent my state & lead it. We have a rich culture & heritage. God has endowed Karnataka with nature’s bounty. We are blessed with rich bio-diversity, having 10 Agro-climatic zones & 300 days of sunshine. #Davos22pic.twitter.com/ThRp4aOCtq
ಮೆ. ಲುಲು ಗ್ರೂಪ್ ಇಂಟರ್ನ್ಯಾಷನಲ್:
ಲುಲು ಗ್ರೂಪ್ ರಾಜ್ಯದಲ್ಲಿ ಸುಮಾರು ಎರಡು ಸಾವಿರ ಕೋಟಿ ರೂ. ಹೂಡಿಕೆ ಮಾಡಲು ಒಪ್ಪಂದಕ್ಕೆ ಸಹಿ ಹಾಕಿದೆ. 4 ಶಾಪಿಂಗ್ ಮಾಲ್ ಮತ್ತು ಹೈಪರ್ ಮಾರ್ಕೆಟ್ ಹಾಗೂ ರಫ್ತು ಆಧಾರಿತ ಆಹಾರ ಮಳಿಗೆಗಳನ್ನು ಸ್ಥಾಪಿಸಲು ಉದ್ದೇಶಿಸಲಾಗಿದೆ. ಈ ಮೂಲಕ 10 ಸಾವಿರಕ್ಕೂ ಹೆಚ್ಚು ಉದ್ಯೋಗ ಸೃಷ್ಟಿಯಾಗುವ ನಿರೀಕ್ಷೆ ಇದೆ.
ರೆನ್ಯೂ ಪವರ್ ಪ್ರೈ.ಲಿ:
ರೆನ್ಯೂ ಪವರ್ ಪ್ರೈ.ಲಿ. ಕಂಪೆನಿಯು ರಾಜ್ಯ ಸರ್ಕಾರದೊಂದಿಗೆ 50,000 ಕೋಟಿ ರೂ. ಹೂಡಿಕೆಯ ಒಪ್ಪಂದಕ್ಕೆ ಸಹಿ ಮಾಡಿತು. ಈ ಕಂಪೆನಿಯು ಮುಂದಿನ 7 ವರ್ಷಗಳಲ್ಲಿ ನವೀಕರಿಸಬಹುದಾದ ಇಂಧನ, ಬ್ಯಾಟರಿ ಸ್ಟೋರೇಜ್, ಗ್ರೀನ್ ಹೈಡ್ರೋಜನ್ ಘಟಕಗಳನ್ನು 2 ಹಂತಗಳಲ್ಲಿ ಸ್ಥಾಪಿಸಲು ಉದ್ದೇಶಿಸಿದ್ದು, ಸುಮಾರು 30 ಸಾವಿರ ಉದ್ಯೋಗ ಸೃಷ್ಟಿಯ ನಿರೀಕ್ಷೆ ಇದೆ.
ಮೊದಲ ಹಂತದಲ್ಲಿ ಈಗಾಗಲೇ ಜಾರಿಯಲ್ಲಿರುವ ಯೋಜನೆಗಳಿಗೆ 11,900 ಕೋಟಿ ರೂ.ಗಳ ಬಂಡವಾಳ ಹೂಡಿ, ಮುಂದಿನ 2 ವರ್ಷಗಳಲ್ಲಿ ಯೋಜನೆಗಳು ಕಾರ್ಯಾರಂಭ ಮಾಡಲಾಗುತ್ತದೆ.
ಎರಡನೇ ಹಂತದಲ್ಲಿ ನವೀಕರಿಸಬಹುದಾದ ಇಂಧನ ಹಾಗೂ ಗ್ರೀನ್ ಹೈಡ್ರೋಜನ್ ಘಟಕಗಳನ್ನು ಮುಂದಿನ 5 ವರ್ಷಗಳಲ್ಲಿ ಸ್ಥಾಪಿಸಲು 37,500 ಕೋಟಿ ರೂ.ಗಳ ಬಂಡವಾಳವನ್ನು ಹೂಡಿಕೆ ಮಾಡಲಾಗುತ್ತದೆ. ಈ ಎರಡು ಹಂತದ ಯೋಜನೆಗಳಿಂದ ಸುಮಾರು 30 ಸಾವಿರ ಉದ್ಯೋಗ ಸೃಷ್ಟಿಯ ನಿರೀಕ್ಷೆ ಇದೆ.
ಬಂಡವಾಳ ಹೂಡಿಕೆಗೆ ಆಸಕ್ತಿ ತೋರಿದ ಸಂಸ್ಥೆಗಳು:
ಸೀಮೆನ್ಸ್ ಸಂಸ್ಥೆ:
ಬೆಂಗಳೂರಿನಲ್ಲಿ 2 ಯೋಜನೆಗಳನ್ನು ಸೀಮೆನ್ಸ್ ಸಂಸ್ಥೆ ಕೈಗೆತ್ತಿಕೊಳ್ಳಲಿದೆ. ಆಧುನಿಕ ವೈದ್ಯಕೀಯ ಉಪಕರಣಗಳ ಉತ್ಪಾದನೆಗೆ ಸಂಬಂಧಿಸಿದಂತೆ ವಿಶೇಷ ಪ್ರೋತ್ಸಾಹಕಗಳನ್ನು ಕರ್ನಾಟಕ ಸರ್ಕಾರ ಒದಗಿಸುವ ಭರವಸೆ ನೀಡಿದೆ. ಬಿಯಾಂಡ್ ಬೆಂಗಳೂರು ಯೋಜನೆಯಡಿ ತುಮಕೂರು, ಹುಬ್ಬಳ್ಳಿ-ಧಾರವಾಡ ಮತ್ತು ಮೈಸೂರು ನಗರಗಳಲ್ಲಿಯೂ ಹೂಡಿಕೆ ಮಾಡುವ ಕುರಿತು ರಾಜ್ಯ ಸರ್ಕಾರ ಮತ್ತು ಸೀಮನ್ಸ್ ಸಂಸ್ಥೆ ಮಾತುಕತೆ ನಡೆಸಿತು.
ದಸ್ಸಾಲ್ಸ್ ಸಿಸ್ಟಮ್ಸ್:
ರಾಜ್ಯದಲ್ಲಿ ವಿದ್ಯುತ್ ವಾಹನಗಳು ಮತ್ತು ಕೇಂದ್ರ ಉತ್ಪಾದನಾ ತಾಂತ್ರಿಕ ಸಂಸ್ಥೆಯ ಸಹಯೋಗದಲ್ಲಿ ಆಧುನಿಕ ಉತ್ಪಾದನೆ ಕ್ಷೇತ್ರ , ವಿದ್ಯಾರ್ಥಿಗಳಿಗೆ ಕೈಗಾರಿಕೆ 4.0, ಡಿಜಿಟಲ್ ತಂತ್ರಜ್ಞಾನದ ಬಗ್ಗೆ ತರಬೇತಿ ,ರಾಜ್ಯದ ಸ್ಮಾರ್ಟ್ ಸಿಟಿ ಯೋಜನೆಗಳಲ್ಲಿ ಹೂಡಿಕೆ ಮಾಡಲು ದಸ್ಸಾಲ್ಸ್ ಸಿಸ್ಟಮ್ಸ್ ಉತ್ಸುಕತೆ ತೋರಿದರು. ಇದನ್ನೂ ಓದಿ: ಗೃಹಿಣಿಯನ್ನು ಹತ್ಯೆ ಮಾಡಿ ಪರಾರಿಯಾಗಿದ್ದ ಪ್ರಿಯಕರ ಅರೆಸ್ಟ್
ನೆಸ್ಟ್ಲೆ ಸಂಸ್ಥೆ:
ನಂಜನಗೂಡಿನಲ್ಲಿ ನೆಸ್ಟ್ಲೆ ಇನ್ಸೆಂಟ್ ಕಾಫಿ ಕಾರ್ಖಾನೆಯನ್ನು ನವೀಕರಣ ಹಾಗೂ ವಿಸ್ತರಣಾ ಕಾರ್ಯಕ್ಕೆ ನೆಸ್ಟ್ಲೆ ಸಂಸ್ಥೆ ಮುಂದಾಗಿದ್ದಾರೆ.
ಮೆಗಾ ಡಾಟಾ ಸೆಂಟರ್:
ಭಾರ್ತಿ ಎಂಟರ್ ಪ್ರೈಸಸ್ ನ ಅಧ್ಯಕ್ಷ ಹಾಗೂ ಸಿಇಓ ಸುನಿಲ್ ಭಾರ್ತಿ ಮಿತ್ತಲ್ ಅವರು ರಾಜ್ಯದಲ್ಲಿ ಇನ್ನೊಂದು ಮೆಗಾ ಡಾಟಾ ಸೆಂಟರ್ ಸ್ಥಾಪಿಸುವ ಇಂಗಿತ ವ್ಯಕ್ತಪಡಿಸಿದರು. ರಾಜ್ಯ ಸರ್ಕಾರವು ಎಲ್ಲ ಅಗತ್ಯ ಬೆಂಬಲ ನೀಡುವುದಾಗಿ ಮುಖ್ಯಮಂತ್ರಿಗಳು ತಿಳಿಸಿದರು.
ಬೆಂಗಳೂರಿನಲ್ಲಿ ಐಕಿಯ ಸ್ಟೋರ್:
ಇಂಗ್ಕಾ ಗ್ರೂಪ್ (ಐಕಿಯ) ಸಿ.ಇ.ಓ. ಜೆಸ್ಪರ್ ಬ್ರಾಡಿನ್ ಅವರು ರಾಜ್ಯದಲ್ಲಿ ಐಕಿಯ ಸ್ಟೋರ್ ತೆರೆಯುತ್ತಿರುವ ಹಿನ್ನೆಲೆಯಲ್ಲಿ ವಿವಿಧ ವಿಷಯಗಳ ಕುರಿತು ಚರ್ಚಿಸಿ, ಜೂನ್‍ನಲ್ಲಿ ನಾಗಸಂದ್ರದಲ್ಲಿ ಐಕಿಯ ಸ್ಟೋರ್ ತೆರೆಯಲಿದ್ದು, ಜೆಸ್ಪರ್ ಬ್ರಾಡಿನ್ ಅವರು ಉದ್ಘಾಟನೆಗೆ ಮುಖ್ಯಮಂತ್ರಿಗಳನ್ನು ಆಹ್ವಾನಿಸಿದರು. ಇದೇ ಸಂದರ್ಭದಲ್ಲಿ ಐಕಿಯದ ಭಾರತೀಯ ಕೇಂದ್ರ ಕಚೇರಿಯೂ ಬೆಂಗಳೂರಿನಲ್ಲಿದ್ದು ಪೀಠೋಪಕರಣಗಳ ತಯಾರಿಕೆಯ ಸಂದರ್ಭದಲ್ಲಿ ಬಿದಿರು ಮತ್ತಿತರ ಸ್ಥಳೀಯ ವಸ್ತುಗಳ ವ್ಯಾಪಕ ಬಳಕೆಯ ಕುರಿತೂ ಸಹ ಚರ್ಚಿಸಲಾಯಿತು.
ಆಕ್ಸಿಸ್ ಬ್ಯಾಂಕ್:
ಆಕ್ಸಿಸ್ ಬ್ಯಾಂಕ್ ಸಂಸ್ಥೆಯು ಸಾಂಸ್ಥಿಕ ಸಾಮಾಜಿಕ ಹೊಣೆಗಾರಿಕೆ (ಸಿಎಸ್ಆರ್) ಕಾರ್ಯಕ್ರಮಗಳಡಿ ರಾಜ್ಯದ ಕೆಲವು ಇಂಜಿನಿಯರಿಂಗ್ ಹಾಗೂ ವಿಶ್ವವಿದ್ಯಾಲಯಗಳ ಉನ್ನತೀಕರಣ ಯೋಜನೆಯನ್ನು ಹಮ್ಮಿಕೊಳ್ಳಲು ಸಲಹೆ ನೀಡಲಾಯಿತು.
ನೋಕಿಯಾ ಸಂಸ್ಥೆ:
ಕರ್ನಾಟಕದಲ್ಲಿ ಟೆಲಿಕಾಂ ಉತ್ಪನ್ನಗಳ ಉತ್ಪಾದನೆಯ ಅವಕಾಶಗಳನ್ನು ಬಳಸಿಕೊಳ್ಳಲು ನೋಕಿಯಾ ಸಂಸ್ಥೆಯ ಮುಖ್ಯಸ್ಥರಿಗೆ ಸಲಹೆ ನೀಡಲಾಯಿತು.
ದಾವೋಸ್‍ನಲ್ಲಿ ನಡೆದ ವಿಶ್ವ ಆರ್ಥಿಕ ಶೃಂಗ ಸಭೆಯಲ್ಲಿ ಕರ್ನಾಟಕ ಪೆವಿಲಿಯನ್‍ನಲ್ಲಿ ಹೀರೋ ಮೋಟೋಕಾರ್ಪ್, ಎಬಿಇನ್‍ಬೇವ್ ಸಂಸ್ಥೆ, ಅರ್ಸೆಲರ್ ಮಿತ್ತಲ್, ಅದಾನಿ ಗ್ರೂಪ್, ಜಾನ್ಸನ್ ಕಂಟ್ರೋಲ್ಸ್‍ನ ಸಿಇಓ ಜಾರ್ಜ್ ಒಲಿವರ್, ಹನಿವೆಲ್ ಕಂಪೆನಿ, ಐಬಿಎಂ, ಬೈಜೂಸ್, ಮೀಶೋ ಸಂಸ್ಥೆಯ ಮುಖ್ಯಸ್ಥರೊಂದಿಗೆ ಕರ್ನಾಟಕದಲ್ಲಿ ಹೂಡಿಕೆಗಳ ಅವಕಾಶಗಳ ಬಗ್ಗೆ ಮಾತುಕತೆ ನಡೆಸಿದರು.
ಈ ಸಂದರ್ಭದಲ್ಲಿ ಹವಾಮಾನ ಬದಲಾವಣೆ ಮತ್ತು ಪರಿಸರ ಮಾಲಿನ್ಯ ಕುರಿತ ಗೋಷ್ಠಿಯಲ್ಲಿ ಭಾಗವಹಿಸಿ ಈಶ ಫೌಂಡೇಶನ್ ಮುಖ್ಯಸ್ಥ ಸದ್ಗುರು ಜಗ್ಗಿ ವಾಸುದೇವ್ ಅವರೊಂದಿಗೆ ಚರ್ಚೆ ನಡೆಸಲಾಯಿತು. ಈ ವೇಳೆ, ರಾಜ್ಯದಲ್ಲಿ ಪರಿಸರ ಹಾಗೂ ಮಣ್ಣಿನ ಸಂರಕ್ಷಣೆ ಕುರಿತು ಸರ್ಕಾರ ತೆಗೆದುಕೊಂಡಿರುವ ಕ್ರಮಗಳ ಬಗ್ಗೆ ವಿವರಿಸಿದರು.
ಕೈಗಾರಿಕಾ ಸಚಿವ ಮುರುಗೇಶ್ ನಿರಾಣಿ, ಐಟಿ, ಬಿಟಿ, ಉನ್ನತ ಶಿಕ್ಷಣ ಮತ್ತು ಕೌಶಲ್ಯ ಅಭಿವೃದ್ಧಿ ಸಚಿವ ಡಾ.ಸಿ.ಎನ್.ಅಶ್ವತ್ಥ ನಾರಾಯಣ್, ಕೈಗಾರಿಕಾ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ ಡಾ.ಇ.ವಿ.ರಮಣ ರೆಡ್ಡಿ, ಸಿಎಂ ಪ್ರಧಾನ ಕಾರ್ಯದರ್ಶಿ ಎನ್.ಮಂಜುನಾಥ್ ಪ್ರಸಾದ್, ಕೈಗಾರಿಕಾ ಇಲಾಖೆ ಆಯುಕ್ತರಾದ ಗುಂಜನ್ ಕೃಷ್ಣ ಮೊದಲಾದ ಹಿರಿಯ ಅಧಿಕಾರಿಗಳು ರಾಜ್ಯದ ತಂಡದಲ್ಲಿದ್ದರು.
ನವದೆಹಲಿ: ಭಾರತದಲ್ಲಿ ಹೂಡಿಕೆ ಮಾಡಲು ಇದು ಉತ್ತಮ ಸಮಯ ಎಂದು ಹೇಳಿ ಪ್ರಧಾನಿ ನರೇಂದ್ರ ಮೋದಿ ವಿಶ್ವದ ಹೂಡಿಕೆದಾರರನ್ನು ಆಹ್ವಾನಿಸಿದ್ದಾರೆ.
ವಿಶ್ವ ಆರ್ಥಿಕ ವೇದಿಕೆ(WEF)ಯ ಐದು ದಿನಗಳ ಆನ್‍ಲೈನ್ ‘ದಾವೋಸ್ ಅಜೆಂಡಾ’ದಲ್ಲಿ ಮಾತನಾಡಿದ ಮೋದಿ ಅವರು, ಭಾಷಣದ ವೇಳೆ ದೇಶವನ್ನು ವಿಶ್ವದ ‘ಅತ್ಯಂತ ಆಕರ್ಷಕ’ ಹೂಡಿಕೆ ತಾಣವನ್ನಾಗಿ ಮಾಡಲು ಸರ್ಕಾರ ಕೈಗೊಂಡಿರುವ ವಿವಿಧ ಕ್ರಮಗಳನ್ನು ವಿವರಿಸಿದರು. ಭಾರತೀಯ ಯುವಕರು ಉದ್ಯಮಶೀಲ ಮನೋಭಾವವನ್ನು ಹೊಂದಿದ್ದಾರೆ. ಹೊಸ ತಂತ್ರಜ್ಞಾನವನ್ನು ಆವಿಷ್ಕರಿಸಲು ಮತ್ತು ಅಳವಡಿಸಿಕೊಳ್ಳಲು ಉತ್ಸುಕತೆಯನ್ನು ಹೊಂದಿದ್ದಾರೆ ಎಂದು ತಿಳಿಸಿದರು. ಇದನ್ನೂ ಓದಿ: ಕೊಹ್ಲಿ ಯಾವುದೇ ವಿವಾದದಲ್ಲಿರಲು ಬಯಸುವುದಿಲ್ಲ: ಕೊಹ್ಲಿ ಬಾಲ್ಯದ ಕೋಚ್
ಭಾರತೀಯ ಯುವಕರು ನಿಮ್ಮ ವ್ಯವಹಾರಗಳು ಮತ್ತು ಆಲೋಚನೆಗಳನ್ನು ಎತ್ತರಕ್ಕೆ ಕೊಂಡೊಯ್ಯಲು ಸಿದ್ಧರಾಗಿದ್ದಾರೆ. ನಮ್ಮ ಜಾಗತಿಕ ಕೌಶಲ್ಯಗಳೊಂದಿಗೆ, ಭಾರತವು 2021 ರಲ್ಲಿ 60,000 ಕ್ಕೂ ಹೆಚ್ಚು ಸ್ಟಾರ್ಟ್‍ಅಪ್‍ಗಳನ್ನು ನೋಂದಾಯಿಸಿದೆ ಎಂದು ವಿವರಿಸಿದರು.
ಭಾರತವು ಪ್ರಜಾಪ್ರಭುತ್ವದಲ್ಲಿ ನಂಬಿಕೆಯನ್ನು ಹೊಂದಿದೆ. ಇದು ನಮ್ಮ ತಂತ್ರಜ್ಞಾನ, ನಮ್ಮ ಮನೋಧರ್ಮ ಮತ್ತು ಪ್ರತಿಭೆಯನ್ನು ಒಳಗೊಂಡಿದೆ. 2014 ರಲ್ಲಿ, ಭಾರತದಲ್ಲಿ ನೂರು ನೋಂದಾಯಿತ ಸ್ಟಾರ್ಟ್‍ಅಪ್‍ಗಳು ಇದ್ದವು. ಈಗ ಆ ಸಂಖ್ಯೆ 60 ಸಾವಿರ ದಾಟಿದೆ. ನಾವು ಈಗ 80 ಕ್ಕೂ ಹೆಚ್ಚು ಯುನಿಕಾರ್ನ್‍ಗಳನ್ನು ಹೊಂದಿದ್ದೇವೆ ಎಂದರು.
ತಂತ್ರಜ್ಞಾನ ಮತ್ತು ಡಿಜಿಟಲ್ ಮೂಲಸೌಕರ್ಯದಲ್ಲಿ ಭಾರತದ ಆವಿಷ್ಕಾರಗಳು, ಯುನಿಫೈಡ್ ಪೇಮೆಂಟ್ಸ್ ಇಂಟರ್‍ಫೇಸ್(ಯುಪಿಐ) ನಂತಹ ತಂತ್ರಜ್ಞಾನಗಳ ತ್ವರಿತ ಅಳವಡಿಕೆ, ಆರೋಗ್ಯ ಸೇತು ಮತ್ತು ಕೋವಿನ್‍ನಂತಹ ತಾಂತ್ರಿಕ ಪರಿಹಾರಗಳು ಮತ್ತು ದೇಶದಲ್ಲಿ ವ್ಯಾಪಾರ ಮಾಡಲು ಬಲಪಡಿಸಲು ತೆರಿಗೆ ಸುಧಾರಣೆಯಾಗಿರುವುದನ್ನು ಒತ್ತಿ ಹೇಳಿದರು.
ಭಾರತವು ವಿಶ್ವಕ್ಕೆ ದಾಖಲೆಯ ಸಂಖ್ಯೆಯ ಸಾಫ್ಟ್‍ವೇರ್ ಡೆವಲಪರ್‍ಗಳನ್ನು ಕಳುಹಿಸುತ್ತಿದೆ. ವಿಶ್ವದಲ್ಲೇ ಮೂರನೇ ಅತಿ ಹೆಚ್ಚು ಯುನಿಕಾರ್ನ್‍ಗಳನ್ನು ಭಾರತ ಹೊಂದಿದೆ ಎಂದು ಹೇಳುವ ಮೂಲಕ ಎಲ್ಲರ ಗಮನಸೆಳೆದರು. ಡಿಜಿಟಲ್ ಪರಿಹಾರಗಳ ಪ್ರಗತಿಯಲ್ಲಿ, ಕಳೆದ ತಿಂಗಳು ಭಾರತವು ಯುಪಿಐ ಮೂಲಕ 4.4 ಬಿಲಿಯನ್ ವಹಿವಾಟುಗಳನ್ನು ಕಂಡಿದೆ ಎಂದು ತಿಳಿಸಿದರು. ಇದನ್ನೂ ಓದಿ: ಬ್ಯಾಪ್ಟಿಸ್ಟ್ ಆಸ್ಪತ್ರೆಯಲ್ಲಿ ಅಮೆರಿಕ ನೆರವಿನಿಂದ ಮಹಿಳಾ-ಮಕ್ಕಳ ಆರೋಗ್ಯ ಕೇಂದ್ರ
ನಾವು ಸರಿಯಾದ ದಿಕ್ಕಿನಲ್ಲಿ ಸುಧಾರಣೆಗಳತ್ತ ಗಮನ ಹರಿಸಿದ್ದೇವೆ. ಜಾಗತಿಕ ಆರ್ಥಿಕ ತಜ್ಞರು ಭಾರತದ ನಿರ್ಧಾರಗಳನ್ನು ಶ್ಲಾಘಿಸಿದ್ದಾರೆ. ನಾವು ಭಾರತದಿಂದ ವಿಶ್ವದ ಆಕಾಂಕ್ಷೆಗಳನ್ನು ಪೂರೈಸುತ್ತೇವೆ ಎಂದು ನನಗೆ ಖಚಿತವಾಗಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.
ನವದೆಹಲಿ: ವಿಶ್ವ ಆರ್ಥಿಕ ವೇದಿಕೆಯ (ಡಬ್ಲೂಇಎಫ್) ಕಾರ್ಯಕ್ರಮದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಸ್ಟೇಟ್ ಆಫ್ ದಿ ವರ್ಲ್ಡ್ ಕುರಿತು ಇಂದು ರಾತ್ರಿ 8:30 ವೀಡಿಯೋ ಕಾನ್ಫರೆನ್ಸ್ ಮೂಲಕ ವಿಶೇಷ ಭಾಷಣ ಮಾಡಲಿದ್ದಾರೆ.
ಈ ವರ್ಚುವಲ್ ಕಾರ್ಯಕ್ರಮವೂ ಜ. 17 ರಿಂದ 21ರವರೆಗೆ ನಡೆಯಲಿದೆ. ಈ ಕಾರ್ಯಕ್ರಮದಲ್ಲಿ ಜಪಾನ್ ಪ್ರಧಾನಿ ಕಿಶಿಡಾ ಫ್ಯೂಮಿಯೊ, ಯುರೋಪಿಯನ್ ಕಮಿಷನ್ ಅಧ್ಯಕ್ಷ ಉರ್ಸುವಾ ವಾನ್ ಡೆರ್ ಲೇಯೆನ್, ಆಸ್ಟ್ರೇಲಿಯನ್ ಪ್ರಧಾನಿ ಸ್ಕಾಟ್ ಮಾರಿಸನ್, ಇಂಡೋನೇಷ್ಯಾ ಅಧ್ಯಕ್ಷ ಜೋಕೊ ವಿಡೋಡೊ, ಇಸ್ರೇಲಿ ಪ್ರಧಾನಿ ಸೇರಿದಂತೆ ಹಲವಾರು ರಾಷ್ಟ್ರಗಳ ಮುಖ್ಯಸ್ಥರು ಮಾತನಾಡಲಿದ್ದಾರೆ.
ಅಂತಾರಾಷ್ಟ್ರೀಯ ಸಂಸ್ಥೆ ಹಾಗೂ ನಾಗರಿಕ ಸಮಾಜದ ಉನ್ನತ ಹುದ್ದೆಯಲ್ಲಿರುವ ಉದ್ಯೋಗಿಗಳು ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ. ಜಗತ್ತಿಗೆ ಎದುರಾಗಿರುವ ಸವಾಲುಗಳು ಹಾಗೂ ಅವುಗಳನ್ನು ಹೇಗೆ ಪರಿಹರಿಸಬೇಕು ಎನ್ನುವುದರ ಕುರಿತು ಚರ್ಚೆ ನಡೆಯಲಿದೆ.
ಡಬ್ಲೂಇಎಫ್ ಕಳೆದ 50 ವರ್ಷಗಳಿಂದ ವಾರ್ಷಿಕ ಸಭೆಯನ್ನು ಆಯೋಜಿಸುತ್ತಿದೆ. ಆದರೆ ಕೋವಿಡ್‍ನಿಂದಾಗಿ ಕಳೆದ ವರ್ಷ ಉನ್ನತ ಮಟ್ಟದ ಕಾರ್ಯಕ್ರಮ ನಡೆದಿರಲಿಲ್ಲ. ಈ ವರ್ಷವೂ ಕಾರ್ಯಕ್ರಮವನ್ನು ಬೇಸಿಗೆಯ ಆರಂಭದವರೆಗೆ ಮುಂದೂಡಿದ್ದರು. ಇದನ್ನೂ ಓದಿ:ದೇಶದಲ್ಲಿ ಒತ್ತಾಯದಿಂದ ಯಾರಿಗೂ Corona Vaccine ನೀಡಲ್ಲ: ಕೇಂದ್ರ ಸರ್ಕಾರ
ದಾವೊಸ್ (ಸ್ವಿಟ್ಜರ್ಲೆಂಡ್): ವರ್ಲ್ಡ್ ಎಕನಾಮಿಕ್ ಫೋರಂ ಸಮಾವೇಶದ ಮೂರನೇ ದಿನವಾದ ಇಂದು ಕರ್ನಾಟಕದ ಪಾಲಿಗೆ ಫಲಪ್ರದವಾಗಿ ಪರಿಣಮಿಸಿತು. ಮುಖ್ಯಮಂತ್ರಿ ಬಿ.ಎಸ್‍ಯಡಿಯೂರಪ್ಪ ಅವರು ಪ್ರತಿಷ್ಠಿತ ಹೂಡಿಕೆದಾರರು ಹಾಗೂ ಕೈಗಾರಿಕೋದ್ಯಮಿಗಳನ್ನು ಕರ್ನಾಟಕದಲ್ಲಿ ಹೂಡಿಕೆ ಮಾಡುವಂತೆ ಆಹ್ವಾನಿಸಿದರು. ಇದರಲ್ಲಿ ದಸ್ಸಾ ಸಿಸ್ಟಮ್ಸ್, ಅರ್ಸೆಲಾರ್ ಮಿತ್ತಲ್, ಭಾರತ್ ಫೋರ್ಜ್, ಲಾಕ್ ಹೀಡ್ ಮಾರ್ಟಿನ್, ಲುಲು ಗ್ರೂಪ್ ಮತ್ತು ನೊವೊ ನಾರ್ಡಿಸ್ಕ್ ಮೊದಲಾದ ಕಂಪೆನಿಗಳು ಸೇರಿದ್ದವು.
ತಮ್ಮನ್ನು ಭೇಟಿಯಾದ ಹೂಡಿಕೆದಾರರೊಂದಿಗೆ ಮಾತುಕತೆ ನಡೆಸಿದ ಸಿಎಂ ಯಡಿಯೂರಪ್ಪ ಅವರು, ಕರ್ನಾಟಕ ಸರ್ಕಾರವು ಹೂಡಿಕೆದಾರರಿಗೆ ಎಲ್ಲ ರೀತಿಯಲ್ಲೂ ಬೆಂಬಲ ನೀಡಲಿದೆ. ಜೊತೆಗೆ ಎಲ್ಲ ರೀತಿಯ ಅಡಚಣೆಗಳನ್ನು ನಿವಾರಿಸಲಿದೆ ಎಂದು ಸ್ಪಷ್ಟ ಪಡಿಸಿದರು. ಈ ವಿಚಾರವನ್ನು ಗಂಭೀರವಾಗಿ ಪರಿಗಣಿಸಿದ್ದು, ಅಧಿಕಾರಿಗಳು ಹೆಚ್ಚಿನ ಆಸಕ್ತಿ ವಹಿಸಿ ಹೂಡಿಕೆಗೆ ಸೂಕ್ತ ನೆರವು ಒದಗಿಸಲಿದ್ದಾರೆ ಎಂದು ತಿಳಿಸಿದರು.
ಈಗಾಗಲೇ ಬೆಂಗಳೂರಿನಲ್ಲಿ ಅಸ್ತಿತ್ವ ಹೊಂದಿರುವ ದಸ್ಸಾ ಸಿಸ್ಟಮ್ಸ್ 3ಡಿಎಸ್ ಅವರಿಂದ ಹೂಡಿಕೆಯ ಕುರಿತು ಅತ್ಯಂತ ಭರವಸೆಯ ಪ್ರತಿಕ್ರಿಯೆ ವ್ಯಕ್ತವಾಯಿತು. ಕಂಪೆನಿಯ ಉಪಾಧ್ಯಕ್ಷ ಫ್ಲಾರೆನ್ಸ್ ವರ್ಝೆಲೆನ್ ಅವರು ಬೆಂಗಳೂರು ಹಾಗೂ ಯಾವುದಾದರೂ ಜಿಲ್ಲೆಯಲ್ಲಿ ಎರಡು ಉತ್ಕೃಷ್ಟತಾ ಕೇಂದ್ರಗಳನ್ನು ಸ್ಥಾಪಿಸಲು ಕ್ರಮ ವಹಿಸುವುದಾಗಿ ತಿಳಿಸಿದರು. `ನಾವು ಪ್ರತಿ ಕೇಂದ್ರದಲ್ಲಿ ಪ್ರತಿ ವರ್ಷ ತಲಾ 2,000 ಯುವಕರಿಗೆ ತರಬೇತಿ ನೀಡಿ, ದೊಡ್ಡ ಕಂಪೆನಿಗಳಲ್ಲಿ ಕೌಶಲ್ಯಪೂರ್ಣ ಉದ್ಯೋಗ ಪಡೆಯಲು ಅರ್ಹರನ್ನಾಗಿಸಲಿದ್ದೇವೆ. ಸ್ಮಾರ್ಟ್ ಸಿಟಿ ಯೋಜನೆಗಳಲ್ಲಿ ಯುವಕರಿಗೆ ತರಬೇತಿ ನೀಡಲು ತಾವು ಆಸಕ್ತರಾಗಿದ್ದೇವೆ’ ತಿಳಿಸಿದರು.
ಎಂಜಿನಿಯರಿಂಗ್ ಪದವೀಧರರಿಗೂ ತರಬೇತಿ ನೀಡಲಾಗುವುದು ಎಂದು ತಿಳಿಸಿದ ಫ್ಲಾರೆನ್ಸ್ ವರ್ಝೆಲೆನ್ ಅವರು, ಈ ಕೇಂದ್ರಗಳ ಸ್ಥಾಪನೆಗೆ ಒಂದು ದಶಲಕ್ಷ ಯುರೋ ಹೂಡಿಕೆ ಮಾಡಲಾಗುವುದು ಎಂದರು. ಬೆಂಗಳೂರು ರಕ್ಷಣಾ ಉಪಕರಣಗಳು ಹಾಗೂ ಎರೋಸ್ಪೇಸ್ ಕೇಂದ್ರವಾಗಿ ಅಭಿವೃದ್ಧಿ ಹೊಂದುತ್ತಿರುವ ಹಿನ್ನೆಲೆಯಲ್ಲಿ ಈ ವಲಯಗಳಲ್ಲಿ ತರಬೇತಿ ಹೊಂದಿದ ಯುವಕರಿಗೆ ಬೇಡಿಕೆ ಇರುವ ಕುರಿತು ಸಿಎಂ ಗಮನ ಸೆಳೆದಾಗ ವರ್ಝೇಲೆನ್ ಅವರು ಸಕಾರಾತ್ಮಕವಾಗಿ ಸ್ಪಂದಿಸಿ, ಮುಂದಿನ ದಿನಗಳಲ್ಲಿ ಅಂತಹ ತರಬೇತಿ ಕೇಂದ್ರಗಳನ್ನು ಸ್ಥಾಪಿಸಲಾಗುವುದು ಎಂದು ಹೇಳಿದರು.
ಉಕ್ಕಿನ ಕೈಗಾರಿಕೆಗಳ ಪ್ರಮುಖ ಉದ್ಯಮಿ ಲಕ್ಷ್ಮಿ ಎನ್.ಮಿತ್ತಲ್ ಮಂಗಳವಾರ ರಾತ್ರಿ ನಡೆದ ಸಿಐಐ ಭೋಜನ ಕೂಟದ ಸಂದರ್ಭದಲ್ಲಿ ಸಿಎಂ ಯಡಿಯೂರಪ್ಪ ಅವರನ್ನು ಭೇಟಿಯಾದರು. ಇಂದು ಬೆಳಗ್ಗೆಯೂ ಕರ್ನಾಟಕ ಪೆವಿಲಿಯನ್‍ಗೆ ಆಗಮಿಸಿ, ಕರ್ನಾಟಕದಲ್ಲಿ ಹೂಡಿಕೆ ಮಾಡುವ ಕುರಿತು ಚರ್ಚೆ ನಡೆಸಿದರು. ಅವರ ಕಂಪೆನಿಯು ಬಳ್ಳಾರಿ ಜಿಲ್ಲೆಯಲ್ಲಿ ಈಗಾಗಲೇ 3,000 ಎಕರೆ ಭೂಮಿ ಹೊಂದಿದೆ.
`2010ರಲ್ಲಿ ತಾವು ಮುಖ್ಯಮಂತ್ರಿಯಾಗಿದ್ದಾಗ ಉಕ್ಕು ತಯಾರಿಕಾ ಘಟಕ ಸ್ಥಾಪನೆಗೆ ಅನುಮತಿ ನೀಡಿದ್ದು, ಕಾರಣಾಂತರಗಳಿಂದ ಇದಕ್ಕೆ ಅಡಚಣೆಗಳು ಉಂಟಾಗಿವೆ. ಈಗ ತಾವು ಎಲ್ಲ ಅಡ್ಡಿ ಆತಂಕಗಳನ್ನು ನಿವಾರಿಸಿ ಎಂದು ಲಕ್ಷ್ಮಿ ಎನ್.ಮಿತ್ತಲ್ ಮನವಿ ಮಾಡಿದರು. ಕರ್ನಾಟಕದಲ್ಲಿ ಸೌರ ವಿದ್ಯುತ್ ಸ್ಥಾವರದಲ್ಲಿ ಹೂಡಿಕೆ ಮಾಡುವುದಾಗಿ ಮಿತ್ತಲ್ ಭರವಸೆ ನೀಡಿದರು. ಇದಕ್ಕೆ ಪ್ರತಿಕ್ರಿಯಿಸಿದ ಮುಖ್ಯಮಂತ್ರಿಗಳು ಉಕ್ಕು ತಯಾರಿಕಾ ಘಟಕ ಹಾಗೂ ಸೌರ ವಿದ್ಯುತ್ ಸ್ಥಾವರಗಳೆರಡರ ಯೋಜನೆಯನ್ನೂ ಕೂಡಲೇ ಪ್ರಾರಂಭಿಸುವಂತೆ ಸಲಹೆ ನೀಡಿದರು. ಅದಕ್ಕೆ ಮಿತ್ತಲ್ ಅವರು ಈ ಕೂಡಲೇ ಉಕ್ಕಿನ ಉಪಯೋಗದ ಕುರಿತ ಸಂಶೋಧನಾ ಮತ್ತು ಅಭಿವೃದ್ಧಿ ಕೇಂದ್ರವನ್ನು ಬೆಂಗಳೂರಿನಲ್ಲಿ ಪ್ರಾರಂಭಿಸುವುದಾಗಿ ಭರವಸೆ ನೀಡಿದರು.
ಲುಲು ಗ್ರೂಪ್ ಅಧ್ಯಕ್ಷ ಯೂಸುಫ್ ಅಲಿ ಅವರು ಕರ್ನಾಟಕದಲ್ಲಿ ಸರಕು ಸಾಗಾಣಿಕೆ ವಲಯದಲ್ಲಿ 2000 ಕೋಟಿ ರೂ. ಹೂಡಿಕೆ ಮಾಡುವುದಾಗಿ ತಿಳಿಸಿದರು. ಈ ಸಂಸ್ಥೆಯು ವಿಶೇಷವಾಗಿ ಕೃಷಿ ಉತ್ಪನ್ನ ಹಾಗೂ ಶೀಘ್ರ ಕೊಳೆತುಹೋಗುವ ತರಕಾರಿ, ಆಹಾರ ವಸ್ತುಗಳು, ಹಣ್ಣು ಹಂಪಲು ಹಾಗೂ ಪುಷ್ಪಗಳ ಸಾಗಾಣಿಕೆಗೇ ಹೂಡಿಕೆ ಮಾಡಲಿದೆ.
ಕೈಗಾರಿಕಾ ಸಚಿವ ಜಗದೀಶ್ ಎಸ್. ಶೆಟ್ಟರ್ ಮತ್ತು ಸರ್ಕಾರದ ಮುಖ್ಯ ಕಾರ್ಯದರ್ಶಿ ಟಿ.ಎಂ. ವಿಜಯಭಾಸ್ಕರ್ ಅವರೂ ಸಹ ಸಭೆಗಳಲ್ಲಿ ಭಾಗವಹಿಸಿದ್ದರು.
ನವದೆಹಲಿ: ಬಾಲಿವುಡ್‍ನ ಸ್ಟಾರ್ ನಟಿ ದೀಪಿಕಾ ಪಡುಕೋಣೆ ಅವರಿಗೆ ಇತ್ತೀಚಿಗೆ ಸ್ವಿಟ್ಜರ್ಲ್ಯಾಂಡ್ ನ ದಾವೋಸ್‍ನಲ್ಲಿ ನಡೆದ ವಿಶ್ವ ಆರ್ಥಿಕ ವೇದಿಕೆಯಲ್ಲಿ ಕ್ರಿಸ್ಟಲ್ ಅವಾರ್ಡ್ ನೀಡಿ ಗೌರವಿಸಲಾಗಿದೆ. ಈ ವೇದಿಕೆ ಮೇಲೆ ಪ್ರಶಸ್ತಿ ಪಡೆದ ಬಳಿಕ ದೀಪಿಕಾ ಡಿಪ್ರೆಷನ್ ಬಗ್ಗೆ ಬಿಚ್ಚಿಟ್ಟಿದ್ದಾರೆ.
ಮಾನಸಿಕ ಆರೋಗ್ಯದ ಬಗ್ಗೆ ಜಾಗೃತಿ ಮೂಡಿಸಿದಕ್ಕಾಗಿ ದೀಪಿಕಾ ಅವರಿಗೆ ಕ್ರಿಸ್ಟಲ್ ಅವಾರ್ಡ್ 2020 ನೀಡಿ ಗೌರವಿಸಲಾಗಿದೆ. ಸ್ಟಾರ್ ನಟಿ ಮಾತ್ರವಲ್ಲದೆ ಸಮಾಜಮುಖಿ ಕಾರ್ಯಗಳನ್ನು ದೀಪಿಕಾ ಮಾಡುತ್ತಾ ಬಂದಿದ್ದಾರೆ. ಖಿನ್ನತೆಗೆ ಒಳಗಾದರಿಗೆ ಸಹಾಯ ಮಾಡುವ ಉದ್ದೇಶದಿಂದ 2015ರಲ್ಲಿ ‘ಲೀವ್ ಲವ್ ಲಾಫ್’ ಸಂಸ್ಥೆಯನ್ನು ದೀಪಿಕಾ ಸ್ಥಾಪಿಸಿದ್ದಾರೆ. ಈ ಮೂಲಕ ಖಿನ್ನತೆಗೆ ಒಳಗಾದವರು ಆ ಸಮಸ್ಯೆಯಿಂದ ಹೊರಬರಲು ಸಹಾಯ ಮಾಡುತ್ತಿದ್ದಾರೆ.
ಪ್ರಶಸ್ತಿ ಸ್ವೀಕಾರ ಮಾಡಿ ಮಾತನಾಡಿದ ದೀಪಿಕಾ, ತಾವು ಖಿನ್ನತೆಗೆ ಒಳಗಾದ ಅನುಭವವನ್ನು ಹಂಚಿಕೊಂಡಿದ್ದಾರೆ. 2014ರಲ್ಲಿ ಪ್ರಾರಂಭವಾದ ಖಿನ್ನತೆ ಮತ್ತು ಆತಂಕದಿಂದ ಸಾಕಷ್ಟು ಬಾರಿ ಸಿನಿಮಾ ರಂಗವನ್ನು ತೊರೆಯುವ ನಿರ್ಧಾರ ಮಾಡಿದ್ದೆ. ಆದರೆ ನನ್ನ ತಾಯಿ ನನ್ನನ್ನು ಖಿನ್ನತೆಯಿಂದ ಹೊರಗೆ ಕರೆದುಕೊಂಡು ಬಂದರು. ಖಿನ್ನತೆ ಮತ್ತು ಆತಂಕಕ್ಕೆ ಚಿಕಿತ್ಸೆ ನೀಡಲಾಗುತ್ತೆ. ನನ್ನ ಅನುಭವದ ಪ್ರಕಾರ ಸ್ವೀಕಾರವು ಚೇತರಿಕೆಯ ಮೊದಲ ಹೆಜ್ಜೆಯಾಗಿದೆ ಎಂದು ದೀಪಿಕಾ ವೇದಿಕೆ ಮೇಲೆ ಮಾತನಾಡಿದರು.
[Video] Deepika Padukone's acceptance speech at the Crystal Aawards, World Economic Forum 2020👏🏽❤️ #WEF20pic.twitter.com/xMoQx5S7lu
ತನ್ನ ಖಿನ್ನತೆಯ ಅನುಭವನ್ನು ಬಿಚ್ಚಿಡುತ್ತ ‘ಲೀವ್ ಲವ್ ಲಾಫ್’ ಫೌಂಡೇಶನ್ ಸ್ಥಾಪಿಸಿರುವ ಬಗ್ಗೆಯು ದೀಪಿಕಾ ಹೇಳಿದರು. ಖಿನ್ನತೆಯಿಂದ ಹೊರಬಂದ ನಂತರ 2015ರಲ್ಲಿ ಲೀವ್ ಲವ್ ಲಾಫ್’ ಫೌಂಡೇಶನ್ ಸ್ಥಾಪಿಸಿದೆ. ಬದಲಾವಣೆಯನ್ನು ಮಾಡುವುದು ಮತ್ತು ಕನಿಷ್ಠ ಒಂದು ಜೀವವನ್ನಾದರು ಉಳಿಸುವ ಉದ್ದೇಶದಿಂದ ಈ ಸಂಸ್ಥೆ ಸ್ಥಾಪಿಸಿದೆ. “ನೀವು ಖಂಡಿತ ಒಬ್ಬಂಟಿಯಲ್ಲ. ಮುಖ್ಯವಾಗಿ ಭರವಸೆ ಇರಬೇಕು ಎಂದು ದೀಪಿಕಾ ಹೇಳಿದರು.
ಡಿಪ್ರೆಷನ್ ಬಗ್ಗೆ ದೀಪಿಕಾ ಮಾತನಾಡಿರುವ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಸಖತ್ ವೈರಲ್ ಆಗುತ್ತಿದ್ದು, ನೆಟ್ಟಿಗರು, ಅಭಿಮಾನಿಗಳು ದೀಪಿಕಾ ಮಾತಿಗೆ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ಅವರ ಕಾರ್ಯಕ್ಕೆ ಭೇಷ್ ಎಂದಿದ್ದಾರೆ.
ಬೆಂಗಳೂರು: ಸಿಎಂ ಬಿಎಸ್ ಯಡಿಯೂರಪ್ಪ ಅವರ ವಿದೇಶ ಪ್ರಯಾಣಕ್ಕೆ ಕೊನೆಗೂ ಒಪ್ಪಿಗೆ ಸಿಕ್ಕಿದೆ. ಚಳಿಯ ಭಯದಿಂದ ಪ್ರವಾಸಕ್ಕೆ ಹಿಂದೆ ಮುಂದೆ ನೋಡುತ್ತಿದ್ದ ಬಿಎಸ್‍ವೈ ಅವರೇ ಸ್ವತಃ ಪ್ರಯಾಣಕ್ಕೆ ನಿನ್ನೆ ಒಪ್ಪಿಗೆ ಸೂಚಿಸಿದ್ದಾರೆ.
ಸ್ವಿಜರ್ಲ್ಯಾಂಡ್ ದಾವೋಸ್‍ನಲ್ಲಿ ಜನವರಿ 21ರಿಂದ 24ರ ತನಕ ನಡೆಯಲಿರುವ ವಿಶ್ವ ಆರ್ಥಿಕ ಸಮ್ಮೇಳನಕ್ಕೆ ಸಿಎಂ ಯಡಿಯೂರಪ್ಪ ರಾಜ್ಯದ ಪರವಾಗಿ ಭಾಗವಹಿಸಲಿದ್ದಾರೆ. ಸಿಎಂ ಬಿಎಸ್‍ವೈರೊಂದಿಗೆ ತೆರಳಿರುವ 13 ಮಂದಿ ತಂಡ ಕೂಡ ಸದ್ಯ ಅಂತಿಮವಾಗಿದೆ.
ಬಿಎಸ್‍ವೈ ವಿದೇಶ ಪ್ರವಾಸಕ್ಕೆ 13 ಜನ ತಂಡ ಫಿಕ್ಸ್ ಆಗಿದ್ದು, ಅಧಿಕೃತ ಅಧಿಕಾರಿಗಳಲ್ಲದ ಗುಂಪಿನಲ್ಲಿ ಮೂವರು ಪ್ರಯಾಣ ಬೆಳಸಲಿದ್ದಾರೆ. ಸಿಎಂ ಬಿಎಸ್‍ವೈ, ಕೈಗಾರಿಕಾ ಸಚಿವ ಜಗದೀಶ್ ಶೆಟ್ಟರ್, ಸಿಎಂ ರಾಜಕೀಯ ಸಲಹೆಗಾರ ಕೂಡ ವಿದೇಶಕ್ಕೆ ತೆರಳಲಿದ್ದಾರೆ. ಉಳಿದಂತೆ ಅಧಿಕೃತ ಗ್ರೂಪ್‍ನಲ್ಲಿ ಮೂವರು ಐಎಎಸ್ ಅಧಿಕಾರಿಗಳು ಸೇರಿ ಆಪ್ತ ಕಾರ್ಯದರ್ಶಿಗಳು, ವಿವಿಧ ಅಧಿಕಾರಿಗಳು ಸೇರಿದಂತೆ 10 ಮಂದಿ ವಿದೇಶ ಪ್ರಯಾಣ ಮಾಡಲಿದ್ದಾರೆ. ಜ.19ರಂದು ಮಧ್ಯರಾತ್ರಿ ಸ್ವಿಜರ್ಲ್ಯಾಂಡ್‍ಗೆ ಬಿಎಸ್‍ವೈ ನೇತೃತ್ವದ 13 ಜನರ ತಂಡ ಪ್ರಯಾಣ ಬೆಳಸಲಿದ್ದು, ಜ.26ರ ಸಂಜೆ ಬೆಂಗಳೂರಿಗೆ ವಾಪಸ್ ಆಗಲಿದ್ದಾರೆ.
ವಿಶ್ವ ಆರ್ಥಿಕ ಸಮ್ಮೇಳನಕ್ಕೆ ದೇಶದ ಮೂವರು ಮುಖ್ಯಮಂತ್ರಿಗಳಿಗೆ ಮಾತ್ರ ಆಹ್ವಾನ ನೀಡಲಾಗಿದೆ. ಪಂಜಾಬ್ ಸಿಎಂ ಅಮರಿಂದರ್ ಸಿಂಗ್, ಮಧ್ಯಪ್ರದೇಶದ ಸಿಎಂ ಕಮಲನಾಥ್ ಮತ್ತು ಕರ್ನಾಟಕದ ಸಿಎಂ ಯಡಿಯೂರಪ್ಪಗೆ ಆಹ್ವಾನವಿದೆ. ಆದರೆ ಚಳಿಯ ಕಾರಣ ನೀಡಿ ಯಡಿಯೂರಪ್ಪ ವಿದೇಶಕ್ಕೆ ಹೋಗಲು ಹಿಂದೇಟು ಹಾಕುತ್ತಿದ್ದರು ಎನ್ನಲಾಗಿತ್ತು. ಬಿಜೆಪಿ ಅಧಿಕಾರ ಇರುವ ರಾಜ್ಯಯೊಂದಕ್ಕೆ ಮಾತ್ರ ಆಹ್ವಾನ ನೀಡಲಾಗಿದ್ದು, ಇಂತಹ ಸನ್ನಿವೇಶದಲ್ಲಿ ಬಿಜೆಪಿ ಸರ್ಕಾರದ ಮುಖ್ಯಮಂತ್ರಿಗಳಿಗೆ ಗೈರು ಹಾಜರಾದರೆ ಬೇರೆ ಅರ್ಥ ಬರುತ್ತದೆ ಎಂದು ದಾವೋಸ್‍ಗೆ ತೆರಳಲು ಸಿಎಮ ತೀರ್ಮಾನಿಸಿದ್ದಾರೆ ಎಂಂದು ಆಪ್ತ ಮೂಲಗಳು ತಿಳಿಸಿವೆ.