Tag: WPL 2023

  • ಇಂದಿನಿಂದ WPL ಧಮಾಕ – ಚೊಚ್ಚಲ ಆವೃತ್ತಿಯಲ್ಲೇ ಗರಿಷ್ಠ ರನ್‌ ಗಳಿಸಿದ ಟಾಪ್‌-5 ಸಾಧಕಿಯರು ಇವರೇ..

    ಇಂದಿನಿಂದ WPL ಧಮಾಕ – ಚೊಚ್ಚಲ ಆವೃತ್ತಿಯಲ್ಲೇ ಗರಿಷ್ಠ ರನ್‌ ಗಳಿಸಿದ ಟಾಪ್‌-5 ಸಾಧಕಿಯರು ಇವರೇ..

    – ಬೆಂಗಳೂರು ಕ್ರಿಕೆಟ್‌ ಅಭಿಮಾನಿಗಳಿಗೆ ಹಬ್ಬ

    ಬೆಂಗಳೂರು: ಇಂದಿನಿಂದ (ಫೆ.23) 2ನೇ ಆವೃತ್ತಿಯ ಮಹಿಳಾ ಪ್ರೀಮಿಯರ್‌ ಲೀಗ್‌ (WPL 2024) ಆರಂಭವಾಗುತ್ತಿದೆ. 2ನೇ ಆವೃತ್ತಿಯಲ್ಲೂ ಒಟ್ಟು 5 ತಂಡಗಳು ಕಣಕ್ಕಿಳಿಯುತ್ತಿವೆ.

    ಕಳೆದ ಆವೃತ್ತಿಯಲ್ಲಿ ಫೈನಲ್‌ನಲ್ಲಿ ಸೆಣಸಿದ ಡೆಲ್ಲಿ ಕ್ಯಾಪಿಟಲ್ಸ್‌ ಹಾಗೂ ಮುಂಬೈ ಇಂಡಿಯನ್ಸ್‌ (Mumbai Indians) ನಡುವೆ ಮೊದಲ ಪಂದ್ಯ ನಡೆಯಲಿದೆ. ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ (Chinnaswamy Stadium) ಉದ್ಘಾಟನಾ ಪಂದ್ಯ ನಡೆಯಲಿದ್ದು, ರಾತ್ರಿ 8ಕ್ಕೆ ಆರಂಭವಾಗಲಿದೆ. ಇದನ್ನೂ ಓದಿ: ಮಾ.22 ರಿಂದ IPL ಶುರು; ಉದ್ಘಾಟನಾ ಪಂದ್ಯದಲ್ಲೇ ಚೆನ್ನೈ-ಆರ್‌ಸಿಬಿ ನಡುವೆ ಹೈವೋಲ್ಟೇಜ್‌ ಕದನ! 

    ಹಾಲಿ ಚಾಂಪಿಯನ್ಸ್‌ ಮುಂಬೈ ಇಂಡಿಯನ್ಸ್‌, ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB), ಡೆಲ್ಲಿ ಕ್ಯಾಪಿಟಲ್ಸ್, ಯುಪಿ ವಾರಿಯರ್ಸ್ ಹಾಗೂ ಗುಜರಾತ್ ಜೈಂಟ್ಸ್ ತಂಡಗಳು ಕಣಕ್ಕಿಳಿಯುತ್ತಿವೆ. ಫೆಬ್ರವರಿ 23 ರಿಂದ ಮಾರ್ಚ್‌ 13ರ ವರೆಗೆ ಒಟ್ಟು 20 ಲೀಗ್‌ ಸುತ್ತಿನ ಪಂದ್ಯಗಳು ನಡೆಯಲಿವೆ. ಮಾರ್ಚ್‌ 15 ರಂದು ಎಲಿಮಿನೇಟರ್‌ ಪಂದ್ಯ ನಡೆಯಲಿದ್ದು, ಮಾರ್ಚ್‌ 17 ರಂದು ದೆಹಲಿಯ ಅರುಣ್‌ ಜೇಟ್ಲಿ ಕ್ರೀಡಾಂಗಣದಲ್ಲಿ ನಡೆಯಲಿದೆ.

    ಈ ಬಾರಿ ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣ ಹಾಗೂ ದೆಹಲಿಯ ಅರುಣ್‌ ಜೇಟ್ಲಿ ಕ್ರೀಡಾಂಗಣಗಳಲ್ಲಿ (Arun Jaitley Stadium) ಆಯೋಜಿಸಲಾಗಿದೆ. ಲೀಗ್‌ ಸುತ್ತಿನ ಬಹುತೇಕ ಪಂದ್ಯಗಳು ಬೆಂಗಳೂರಿನ ಕ್ರೀಡಾಂಗಣದಲ್ಲಿ ನಡೆಯಲಿದೆ. ಇದನ್ನೂ ಓದಿ: 2024ರ ಐಪಿಎಲ್‌ ಟೂರ್ನಿಯಿಂದಲೇ ಶಮಿ ಔಟ್‌ – ಗುಜರಾತ್‌ ಟೈಟಾನ್ಸ್‌ಗೆ ಭಾರೀ ಆಘಾತ

    WPL ನಲ್ಲಿ ಗರಿಷ್ಠ ಸ್ಕೋರ್‌ ಗಳಿಸಿದ ಟಾಪ್‌-5 ಲಿಸ್ಟ್‌:

    1. ಮೆಗ್‌ ಲ್ಯಾನಿಂಗ್‌ – 9 ಪಂದ್ಯ, 99 ಇನ್ನಿಂಗ್ಸ್‌ – 345 ರನ್‌
    2. ನಟಾಲಿ ಸ್ಕಿವರ್-ಬ್ರಂಟ್ – 10 ಪಂದ್ಯ, 10 ಇನ್ನಿಂಗ್ಸ್‌ – 332 ರನ್‌
    3. ತಾಲಿಯಾ ಮೆಕ್‌ಗ್ರಾತ್ – 9 ಪಂದ್ಯ, 8 ಇನ್ನಿಂಗ್ಸ್‌ – 302 ರನ್‌
    4. ಹರ್ಮನ್‌ಪ್ರೀತ್ ಕೌರ್ – 10 ಪಂದ್ಯ, 19 ಇನ್ನಿಂಗ್ಸ್‌ – 281 ರನ್‌
    5. ಹೇಲಿ ಮ್ಯಾಥ್ಯೂಸ್ – 10 ಪಂದ್ಯ, 10 ಇನ್ನಿಂಗ್ಸ್‌, 271 ರನ್

    ಇನ್ನಿಂಗ್ಸ್‌ವೊಂದರಲ್ಲಿ ಗರಿಷ್ಠ ರನ್‌ ಸಿಡಿಸಿದ ಟಾಪ್‌-5 ಲಿಸ್ಟ್‌

    1. ಸೋಫಿ ಡಿವೈನ್ – 99 ರನ್‌ (ಗುಜರಾತ್‌ ಜೈಂಟ್ಸ್‌ ವಿರುದ್ಧ)
    2. ಅಲಿಸ್ಸಾ ಹೀಲಿ – 96 ರನ್‌ (ಆರ್‌ಸಿಬಿ ವಿರುದ್ಧ)
    3. ತಾಲಿಯಾ ಮೆಕ್‌ಗ್ರಾತ್ – 90 ರನ್‌ (ಡೆಲ್ಲಿ ಕ್ಯಾಪಿಟಲ್ಸ್‌ ವಿರುದ್ಧ)
    4. ಶಫಾಲಿ ವರ್ಮಾ – 84 ರನ್‌ (ಆರ್‌ಸಿಬಿ ವಿರುದ್ಧ)
    5. ಹೇಲಿ ಮ್ಯಾಥ್ಯೂಸ್ – 77 ರನ್‌ (ಆರ್‌ಸಿಬಿ ವಿರುದ್ಧ)

    ಚೊಚ್ಚಲ ಆವೃತ್ತಿಯಲ್ಲಿ ಮುಂಬೈ ಚಾಂಪಿಯನ್‌:
    2023ರಲ್ಲಿ ಆರಂಭಗೊಂಡ ಮಹಿಳಾ ಪ್ರೀಮಿಯರ್‌ ಲೀಗ್‌ ಚೊಚ್ಚಲ ಆವೃತ್ತಿಯಲ್ಲಿ ಹರ್ಮನ್‌ ಪ್ರೀತ್‌ ಕೌರ್‌ ನಾಯಕತ್ವದ ಮುಂಬೈ ಇಂಡಿಯನ್ಸ್‌ ತಂಡವು ಚಾಂಪಿಯನ್‌ ಆಗಿ ಹೊರಹೊಮ್ಮಿತ್ತು. ಇದನ್ನೂ ಓದಿ: 10,000 ರನ್‌ ಪೂರೈಸಿ ದಾಖಲೆ; ಬಾಬಾರ್‌ ಸ್ಫೋಟಕ ಆಟಕ್ಕೆ ಗೇಲ್‌, ವಿರಾಟ್‌ ಕೊಹ್ಲಿ ದಾಖಲೆ ಉಡೀಸ್‌

  • ಫೋಟೋ ಶೂಟ್‌ನಲ್ಲಿ ಮಿಂಚಿದ RCB ಸ್ಟಾರ್ಸ್‌ – ʻಈ ಸಲ ಕಪ್‌ ನಮ್ದೇʼ ಮತ್ತೆ ಶುರುವಾಯ್ತು ಟ್ರೆಂಡ್‌!

    ಫೋಟೋ ಶೂಟ್‌ನಲ್ಲಿ ಮಿಂಚಿದ RCB ಸ್ಟಾರ್ಸ್‌ – ʻಈ ಸಲ ಕಪ್‌ ನಮ್ದೇʼ ಮತ್ತೆ ಶುರುವಾಯ್ತು ಟ್ರೆಂಡ್‌!

    – ಫೆಬ್ರವರಿ 23 ರಿಂದಲೇ ಮಹಿಳಾ ಪ್ರೀಮಿಯರ್‌ ಲೀಗ್‌ ಆರಂಭ

    ಬೆಂಗಳೂರು: ಇದೇ ಫೆಬ್ರವರಿ 23 ರಿಂದ 2ನೇ ಆವೃತ್ತಿಯ ಮಹಿಳಾ ಪ್ರೀಮಿಯರ್‌ ಲೀಗ್‌ (WPL 2024) ಆರಂಭವಾಗುತ್ತಿದ್ದು, ಬಿಸಿಸಿಐ ಸಕಲ ಸಿದ್ಧತೆ ಮಾಡಿಕೊಂಡಿದೆ. ಈಗಾಗಲೇ ಐದು ತಂಡಗಳು ತಮ್ಮ ತವರು ಕ್ರೀಡಾಂಗಣಗಳಲ್ಲಿ ಅಭ್ಯಾಸ ಆರಂಭಿಸಿದೆ. ಇಂದು (ಸೋಮವಾರ) ರಾಯಲ್‌ ಚಾಲೆಂಜರ್ಸ್‌ ಬೆಂಗಳೂರು ಮಹಿಳಾ ತಂಡ (RCB Womens) ಫೋಟೋಶೂಟ್‌ ಮಾಡಿಸಿದ್ದು, ತನ್ನ ಸೋಶಿಯಲ್‌ ಮೀಡಿಯಾ X ಖಾತೆಯಲ್ಲಿ ಹಂಚಿಕೊಂಡಿದೆ.

    ಆರ್‌ಸಿಬಿ ತಂಡದ ನಾಯಕಿ ಸ್ಮೃತಿ ಮಂದಾನಾ (Smriti Mandhana), ಕನ್ನಡತಿ ಶ್ರೇಯಾಂಕ ಪಾಟೀಲ್‌, ಸ್ಫೋಟಕ ಆಟಗಾರ್ತಿ ಸೋಫಿ ಡಿವೈನ್‌ ಸೇರಿದಂತೆ ಅನೇಕರು ಫೋಟೋ ಶೂಟ್‌ನಲ್ಲಿ ಮಿಂಚಿದ್ದಾರೆ. ಇದರಿಂದ ಫುಲ್‌ ಖುಷ್‌ ಆಗಿರುವ ಆರ್‌ಸಿಬಿ ಅಭಿಮಾನಿಗಳು ಜಾಲತಾಣದಲ್ಲಿ ʻಈ ಸಲ ಕಪ್‌ ನಮ್ದೆʼ ಟ್ರೆಂಡ್‌ ಶುರು ಮಾಡಿದ್ದಾರೆ. ಇದನ್ನೂ ಓದಿ: ಇಂಗ್ಲೆಂಡ್‌ ವಿರುದ್ಧ 4ನೇ ಟೆಸ್ಟ್‌ ಪಂದ್ಯಕ್ಕೆ ಕೆ.ಎಲ್‌ ರಾಹುಲ್‌ ಕಂಬ್ಯಾಕ್‌ – ಸುಳಿವು ಕೊಟ್ಟ ರೋಹಿತ್‌

    ಯಾವಾಗಿನಿಂದ ಪಂದ್ಯ ಆರಂಭ?
    2ನೇ ಆವೃತ್ತಿಯ ಮಹಿಳಾ ಪ್ರೀಮಿಯರ್‌ ಲೀಗ್‌ನಲ್ಲಿ ಹಾಲಿ ಚಾಂಪಿಯನ್‌ಗಳಾದ ಮುಂಬೈ ಇಂಡಿಯನ್ಸ್‌, ರಾಯಲ್ ಚಾಲೆಂಜರ್ಸ್ ಬೆಂಗಳೂರು, ಡೆಲ್ಲಿ ಕ್ಯಾಪಿಟಲ್ಸ್, ಯುಪಿ ವಾರಿಯರ್ಸ್ ಹಾಗೂ ಗುಜರಾತ್ ಜೈಂಟ್ಸ್ ತಂಡಗಳು ಕಣಕ್ಕಿಳಿಯುತ್ತಿವೆ. ಫೆಬ್ರವರಿ 23 ರಿಂದ ಮಾರ್ಚ್‌ 13ರ ವರೆಗೆ ಒಟ್ಟು 20 ಲೀಗ್‌ ಸುತ್ತಿನ ಪಂದ್ಯಗಳು ನಡೆಯಲಿವೆ. ಮಾರ್ಚ್‌ 15 ರಂದು ಎಲಿಮಿನೇಟರ್‌ ಪಂದ್ಯ ನಡೆಯಲಿದ್ದು, ಮಾರ್ಚ್‌ 17 ರಂದು ದೆಹಲಿಯ ಅರುಣ್‌ ಜೇಟ್ಲಿ ಕ್ರೀಡಾಂಗಣದಲ್ಲಿ ನಡೆಯಲಿದೆ.

    ಎಲ್ಲೆಲ್ಲಿ ಪಂದ್ಯ ನಡೆಯಲಿದೆ?: ಕಳೆದ ವರ್ಷ ಮುಂಬೈನ ಬ್ರಬೋರ್ನ್ ಮತ್ತು ವಾಂಖೆಡೆ ಕ್ರೀಡಾಂಗಣದಲ್ಲಿ ಪಂದ್ಯಗಳನ್ನು ನಡೆಸಲಾಗುತ್ತಿತ್ತು. ಆದ್ರೆ ಈ ಬಾರಿ ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣ ಹಾಗೂ ದೆಹಲಿಯ ಅರುಣ್‌ ಜೇಟ್ಲಿ ಕ್ರೀಡಾಂಗಣಗಳಲ್ಲಿ ಆಯೋಜಿಸಲಾಗಿದೆ. ಲೀಗ್‌ ಸುತ್ತಿನ ಬಹುತೇಕ ಪಂದ್ಯಗಳು ಬೆಂಗಳೂರಿನ ಕ್ರೀಡಾಂಗಣದಲ್ಲಿ ನಡೆಯಲಿದೆ. ಇದನ್ನೂ ಓದಿ: ಜೈಸ್ವಾಲ್‌, ಜಡೇಜಾ ಶೈನ್‌; ಆಂಗ್ಲರ ವಿರುದ್ಧ ಭಾರತಕ್ಕೆ 434 ರನ್‌ ಗೆಲುವು – ಟೆಸ್ಟ್‌ ಸರಣಿ ಕೈವಶಕ್ಕೆ ಇನ್ನೊಂದೇ ಹೆಜ್ಜೆ

    WPL ನಲ್ಲಿ 5 ಮಹಿಳಾ ತಂಡಗಳು ಇರಲಿದ್ದು, ಅಗ್ರಸ್ಥಾನ ಪಡೆದ ತಂಡ ನೇರವಾಗಿ ಫೈನಲ್‌ಗೆ ಅರ್ಹತೆ ಪಡೆದುಕೊಳ್ಳಲಿದೆ. ಇನ್ನೂ 2 ಮತ್ತು 3ನೇ ಸ್ಥಾನಗಳಲ್ಲಿರುವ ತಂಡಗಳು ಎಲಿಮಿನೇಟರ್‌ ಪಂದ್ಯದಲ್ಲಿ ಸೆಣಸಲಿದ್ದು, ಗೆದ್ದ ತಂಡ ಫೈನಲ್‌ನಲ್ಲಿ ಸೆಣಸಲಿದೆ. ಇದನ್ನೂ ಓದಿ: WPLನಲ್ಲಿ ನೋಬಾಲ್‌ ವಿವಾದ – ಚಾಂಪಿಯನ್‌ ಪಟ್ಟ ಕೈತಪ್ಪಿಸಿದ ಆ ಒಂದು ಔಟ್‌

    ಚೊಚ್ಚಲ ಆವೃತ್ತಿಯಲ್ಲಿ ಮುಂಬೈ ಚಾಂಪಿಯನ್‌:
    2023ರಲ್ಲಿ ಆರಂಭಗೊಂಡ ಮಹಿಳಾ ಪ್ರೀಮಿಯರ್‌ ಲೀಗ್‌ ಚೊಚ್ಚಲ ಆವೃತ್ತಿಯಲ್ಲಿ ಹರ್ಮನ್‌ ಪ್ರೀತ್‌ ಕೌರ್‌ ನಾಯಕತ್ವದ ಮುಂಬೈ ಇಂಡಿಯನ್ಸ್‌ ತಂಡವು ಚಾಂಪಿಯನ್‌ ಆಗಿ ಹೊರಹೊಮ್ಮಿತ್ತು. ಇದನ್ನೂ ಓದಿ: ರೋಚಕ ಫೈನಲ್‌ – ಮುಂಬೈ ಇಂಡಿಯನ್ಸ್‌ ಚೊಚ್ಚಲ WPL ಚಾಂಪಿಯನ್‌

  • WPLನಲ್ಲಿ ನೋಬಾಲ್‌ ವಿವಾದ – ಚಾಂಪಿಯನ್‌ ಪಟ್ಟ ಕೈತಪ್ಪಿಸಿದ ಆ ಒಂದು ಔಟ್‌

    WPLನಲ್ಲಿ ನೋಬಾಲ್‌ ವಿವಾದ – ಚಾಂಪಿಯನ್‌ ಪಟ್ಟ ಕೈತಪ್ಪಿಸಿದ ಆ ಒಂದು ಔಟ್‌

    – ಮುಂಬೈ ಇಂಡಿಯನ್ಸ್ ವಿರುದ್ಧ ಡೆಲ್ಲಿ ಕ್ಯಾಪಿಟಲ್ಸ್‌ ಅಭಿಮಾನಿಗಳು ಕೆಂಡ

    ಮುಂಬೈ: ಪುರುಷರ ಇಂಡಿಯನ್‌ ಪ್ರೀಮಿಯರ್‌ ಲೀಗ್‌ (IPL) ಆವೃತ್ತಿಯಲ್ಲಿ ಆಗಾಗ್ಗೆ ವಿವಾದಗಳು ನಡೆಯುತ್ತಿರುತ್ತವೆ. ಆದರೆ ಚೊಚ್ಚಲ ಆವೃತ್ತಿಯ ಮಹಿಳಾ ಪ್ರೀಮಿಯರ್‌ ಲೀಗ್‌ನಲ್ಲೂ (WPL 2023) ಈಗ ನೋಬಾಲ್‌ ವಿವಾದ ಹುಟ್ಟಿಕೊಂಡಿದೆ.

    ಮಹಿಳಾ ಪ್ರೀಮಿಯರ್‌ ಲೀಗ್‌ನಲ್ಲಿ ಡೆಲ್ಲಿ ಕ್ಯಾಪಿಟಲ್ಸ್ (Delhi Capitals) ಹಾಗೂ ಮುಂಬೈ ಇಂಡಿಯನ್ಸ್ (Mumbai Indians) ನಡುವಿನ ಫೈನಲ್‌ ಪಂದ್ಯವು ಅತ್ಯಂತ ರೋಚಕತೆಯಿಂದ ಕೂಡಿತ್ತು. ಟೂರ್ನಿಯ ಬಲಿಷ್ಠ ತಂಡವಾಗಿ ಗುರುತಿಸಿಕೊಂಡ ಉಭಯ ತಂಡಗಳ ನಡುವಿನ ಹೋರಾಟ ತೀವ್ರ ಜಿದ್ದಾಜಿದ್ದಿನಿಂದ ಕೂಡಿತ್ತು. ಇದನ್ನೂ ಓದಿ: ರೋಚಕ ಫೈನಲ್‌ – ಮುಂಬೈ ಇಂಡಿಯನ್ಸ್‌ ಚೊಚ್ಚಲ WPL ಚಾಂಪಿಯನ್‌

    ಮುಂಬೈ ಇಂಡಿಯನ್ಸ್‌ ತಂಡವು ತನ್ನ ಶಿಸ್ತಿನ ಬೌಲಿಂಗ್‌ ದಾಳಿಯಿಂದ ಡೆಲ್ಲಿ ಕ್ಯಾಪಿಟಲ್ಸ್‌ ತಂಡವನ್ನು 131 ರನ್‌ಗಳಿಗೆ ಕಟ್ಟಿಹಾಕಿತ್ತು. ಬಳಿಕ ಜವಾಬ್ದಾರಿಯುತ ಬ್ಯಾಟಿಂಗ್‌ ನಡೆಸಿದ ಮುಂಬೈ ಇಂಡಿಯನ್ಸ್ 19.3 ಓವರ್‌ಗಳಲ್ಲಿ 3 ವಿಕೆಟ್ ಕಳೆದುಕೊಂಡು 134 ರನ್‌ ಗಳಿಸಿ ಗೆಲುವಿನ ಕೇಕೆ ಹಾಕಿತು. ಈ ಮೂಲಕ ಚೊಚ್ಚಲ ಆವೃತ್ತಿಯ ಮಹಿಳಾ ಪ್ರಿಮಿಯರ್ ಲೀಗ್ ಟೂರ್ನಿಯ ಚಾಂಪಿಯನ್‌ ಆಗಿ ಹೊರಹೊಮ್ಮಿತು. ಇದನ್ನೂ ಓದಿ: WPL 2023: ಡೆಲ್ಲಿ ಕ್ಯಾಪಿಟಲ್ಸ್‌ಗೆ 5 ವಿಕೆಟ್‌ಗಳ ಜಯ – ಫೈನಲ್‌ಗೆ ಗ್ರ್ಯಾಂಡ್‌ ಎಂಟ್ರಿ

    ಮುಂಬೈ ಇಂಡಿಯನ್ಸ್‌ ಟ್ರೋಫಿ ಗೆದ್ದ ಬಳಿಕ ವಿವಾದವೊಂದು ಹುಟ್ಟಿಕೊಂಡಿದೆ. ಡೆಲ್ಲಿ ಕ್ಯಾಪಿಟಲ್ಸ್‌ ಪರ ಸ್ಫೋಟಕ ಬ್ಯಾಟಿಂಗ್‌ ನಡೆಸುತ್ತಿದ್ದ ಶಫಾಲಿ ವರ್ಮಾ (Shafali Verma) ಔಟ್ ತೀರ್ಪು ವಿವಾದಕ್ಕೆ ಕಾರಣವಾಗಿದೆ. ಮುಂಬೈ ಇಂಡಿಯನ್ಸ್‌ ಬೌಲರ್‌ ಇಸ್ಸಿ ವಾಂಗ್‌ 2ನೇ ಓವರ್‌ನಲ್ಲಿ ಎಸೆದ 3ನೇ ಎಸೆತವು ಹೈ-ಫುಲ್‌ಟಾಸ್ ಆಗಿತ್ತು. ಸೊಂಟದ ಮೇಲ್ಭಾಗದಲ್ಲಿದ್ದರೂ ಶಫಾಲಿ ವರ್ಮಾಗೆ ಔಟ್ ತೀರ್ಪು ನೀಡಲಾಯಿತು. ಮೊದಲ ಓವರ್‌ನಲ್ಲೇ ಭರ್ಜರಿ ಸಿಕ್ಸರ್‌, ಬೌಂಡರಿ ಸಿಡಿಸಿದ್ದ ಶಫಾಲಿ ವರ್ಮಾ ಔಟ್‌ ಅನ್ನು ಕ್ಯಾಪ್ಟನ್‌ ಮೆಗ್‌ ಲ್ಯಾನಿಂಗ್‌ (Meg Lanning) ಪ್ರಶ್ನಿಸಿದರು. ಇದರ ಹೊರತಾಗಿಯೂ ಔಟ್‌ ನೀಡಲಾಯಿತು. ಇದರಿಂದ ಡೆಲ್ಲಿ ತಂಡವು ಬೃಹತ್ ಮೊತ್ತ ಸಿಡಿಸುವಲ್ಲಿ ವಿಫಲವಾಯಿತು ಎನ್ನಲಾಗುತ್ತಿದೆ.

    ಡೆಲ್ಲಿ ಕ್ಯಾಪಿಟಲ್ಸ್ ಅದ್ಭುತ ಪ್ರದರ್ಶನದ ಮೂಲಕ ನೇರವಾಗಿ ಫೈನಲ್ ಪ್ರವೇಶಿಸಿತ್ತು. ಇತ್ತ ಮುಂಬೈ ಇಂಡಿಯನ್ಸ್ ಎಲಿಮಿನೇಟರ್ ಪಂದ್ಯದ ಮೂಲಕ ಪ್ರಶಸ್ತಿ ಸುತ್ತಿಗೆ ಎಂಟ್ರಿಕೊಟ್ಟಿತು. ಕೊನೆಯಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ಪ್ರಶಸ್ತಿ ಮುಡಿಗೇರಿಸಿಕೊಳ್ಳಲಿದೆ ಅನ್ನೋ ಮಾತುಗಳು ಕೇಳಿ ಬರುತ್ತಿತ್ತು. ಆದರೆ ಶಫಾಲಿ ವರ್ಮಾ ಔಟ್‌ ತಂಡಕ್ಕೆ ಭಾರೀ ಆಘಾತ ನೀಡಿತು. ಅಂತಿಮವಾಗಿ ಮುಂಬೈ ಚಾಂಪಿಯನ್‌ ಪಟ್ಟಕೇರಿತು.

    Rishabh-Pant-1 ipl

    2022ರ ಪುರುಷರ ಐಪಿಎಲ್‌ ಪಂದ್ಯದ ವೇಳೆ ರಿಷಬ್‌ ಪಂತ್‌ ನಾಯಕತ್ವದ ಡೆಲ್ಲಿ ಕ್ಯಾಪಿಟಲ್ಸ್‌ ಹಾಗೂ ರಾಜಸ್ತಾನ್‌ ರಾಯಲ್ಸ್‌ ನಡುವೆ ಇದೇ ರೀತಿ ನೋಬಾಲ್‌ ವಿವಾದ ಉಂಟಾಗಿತ್ತು. ಇದನ್ನೂ ಓದಿ: ಅಂಪೈರ್ ವಿರುದ್ಧ ಸಿಟ್ಟಾಗಿ ಬ್ಯಾಟರ್‌ಗಳನ್ನು ಕರೆದ ಪಂತ್ – ನಿಜಕ್ಕೂ ನಡೆದಿದ್ದು ಏನು?

  • ರೋಚಕ ಫೈನಲ್‌ – ಮುಂಬೈ ಇಂಡಿಯನ್ಸ್‌ ಚೊಚ್ಚಲ WPL ಚಾಂಪಿಯನ್‌

    ರೋಚಕ ಫೈನಲ್‌ – ಮುಂಬೈ ಇಂಡಿಯನ್ಸ್‌ ಚೊಚ್ಚಲ WPL ಚಾಂಪಿಯನ್‌

    ಮುಂಬೈ: ಮಹಿಳಾ ಪ್ರೀಮಿಯರ್‌ ಲೀಗ್‌ (WPL 2023) ಚೊಚ್ಚಲ ಆವೃತ್ತಿಯಲ್ಲಿ ಹರ್ಮನ್‌ ಪ್ರೀತ್‌ ಕೌರ್‌ (Harmanpreet Kaur) ನಾಯಕತ್ವದ ಮುಂಬೈ ಇಂಡಿಯನ್ಸ್‌ (Mumbai Indians) ತಂಡವು ಡೆಲ್ಲಿ ಕ್ಯಾಪಿಟಲ್ಸ್‌ (Delhi Capitals) ವಿರುದ್ಧ ರೋಚಕ ಜಯ ಸಾಧಿಸಿ ಚಾಂಪಿಯನ್‌ ಪಟ್ಟಕ್ಕೇರಿದೆ.

    ರೋಚಕ ಫೈನಲ್‌ ಪಂದ್ಯದಲ್ಲಿ ಜವಾಬ್ದಾರಿಯುತ ಬ್ಯಾಟಿಂಗ್‌ ಹಾಗೂ ಶಿಸ್ತಿನ ಬೌಲಿಂಗ್‌ ದಾಳಿ ನಡೆಸಿದ ಮುಂಬೈ ಇಂಡಿಯನ್ಸ್‌ ತಂಡವು ಚಾಂಪಿಯನ್‌ ಆಗಿ ಹೊರಹೊಮ್ಮಿದೆ. ಕೊನೆಯ 12 ಎಸೆತಗಳಲ್ಲಿ ಮುಂಬೈಗೆ 21 ರನ್‌ಗಳ ಅಗತ್ಯವಿತ್ತು. ಈ ವೇಳೆ ಅಮೇಲಿಯ ಕೇರ್‌ 19ನೇ ಓವರ್‌ನಲ್ಲಿ ಭರ್ಜರಿ 3 ಬೌಂಡರಿ ಬಾರಿಸಿ ಗೆಲುವಿನ ಹಾದಿ ಸುಗಮವಾಗಿಸಿದರು. ಕೊನೆಯ ಓವರ್‌ನ 3ನೇ ಎಸೆತದಲ್ಲೇ ಬ್ರಂಟ್‌ ಬೌಂಡರಿ ಸಿಡಿಸುವ ಮೂಲಕ ಜಯ ತಂದುಕೊಟ್ಟರು. ಇದನ್ನೂ ಓದಿ: WPL 2023: ಮುಂಬೈ ಫೈನಲ್‌ಗೆ – ಯುಪಿ ವಾರಿಯರ್ಸ್‌ ಮನೆಗೆ

         

    ಮೊದಲು ಬ್ಯಾಟಿಂಗ್‌ ಮಾಡಿದ ಡೆಲ್ಲಿ ಕ್ಯಾಪಿಟಲ್ಸ್‌ ತಂಡವು 20 ಓವರ್‌ಗಳಲ್ಲಿ 9 ವಿಕೆಟ್ ಕಳೆದುಕೊಂಡು 131 ರನ್ ಗಳಿಸಿತು. 132 ರನ್‌ ಗುರಿ ಬೆನ್ನತ್ತಿದ ಮುಂಬೈ 19.3 ಓವರ್‌ಗಳಲ್ಲಿ 3 ವಿಕೆಟ್‌ ನಷ್ಟಕ್ಕೆ 134 ರನ್‌ ಗಳಿಸಿ 7 ವಿಕೆಟ್‌ಗಳ ರೋಚಕ ಜಯ ಸಾಧಿಸಿತು.

    ಚೇಸಿಂಗ್‌ ಆರಂಭಿಸಿದ ಮುಂಬೈ ಆರಂಭದಲ್ಲೇ ವಿಕೆಟ್‌ ಕಳೆದುಕೊಂಡು ನಿಧಾನಗತಿಯ ಬ್ಯಾಟಿಂಗ್‌ ಆರಂಭಿಸಿತು. ಆರಂಭಿಕರಾದ ಹೇಲಿ ಮ್ಯಾಥಿವ್ಸ್‌ 13 ರನ್‌, ಯಸ್ತಿಕಾ ಭಾಟಿಯಾ 4 ರನ್‌ ಗಳಿಸಿ ಪೆವಿಲಿಯನ್‌ ಸೇರಿಕೊಂಡರು. 3ನೇ ವಿಕೆಟ್‌ನಲ್ಲಿ ಒಂದಾದ ನಾಟ್‌ ಸ್ಕಿವರ್‌ ಬ್ರಂಟ್‌, ಹರ್ಮನ್‌ ಪ್ರೀತ್‌ ಕೌರ್‌ ತಾಳ್ಮೆಯ‌ ಆಟವಾಡಿದರು. 74 ಎಸೆತಗಳಲ್ಲಿ ಈ ಜೋಡಿ 72 ರನ್‌ ಗಳಿಸಿತ್ತು. ಇದರಿಂದ ತಂಡದಲ್ಲಿ ಗೆಲುವಿನ ಆಸೆ ಚಿಗುರಿತು. ಅಷ್ಟರಲ್ಲಿ 37 ರನ್‌ (39 ಎಸೆತ 5 ಬೌಂಡರಿ) ಗಳಿಸಿ ಆಟವಾಡುತ್ತಿದ್ದ ಹರ್ಮನ್‌ಪ್ರೀತ್‌ ಕೌರ್‌ ರನೌಟ್‌ಗೆ ತುತ್ತಾಗಿ ಆಘಾತ ನೀಡಿದರು. ಇದನ್ನೂ ಓದಿ: ಐಪಿಎಲ್- ಆರ್‌ಸಿಬಿ ಕೆಲವು ಪಂದ್ಯಗಳಿಗೆ ಮ್ಯಾಕ್ಸ್‌ವೆಲ್ ಅನುಮಾನ

    ನಂತರ ತನ್ನ ಜವಾಬ್ದಾರಿಯುತ ಬ್ಯಾಟಿಂಗ್‌ ಮುಂದುವರಿಸಿದ ಸ್ಕಿವರ್‌ ಬ್ರಂಟ್‌ ಅರ್ಧಶತಕ ಗಳಿಸುವ ಜೊತೆಗೆ ಕೊನೆಯವರೆಗೂ ಹೋರಾಡಿ ತಂಡವನ್ನು ಗೆಲುವಿನ ಹಾದಿಗೆ ತಂದರು. ಬ್ರಂಟ್‌ 55 ಎಸೆತಗಳಲ್ಲಿ 7 ಬೌಂಡರಿಗಳೊಂದಿಗೆ 60 ರನ್‌ ಸಿಡಿಸಿ ಮಿಂಚಿದರೆ, ಕೊನೆಯಲ್ಲಿ ಅಮೇಲಿ ಕೇರ್‌ 8 ಎಸೆತಗಳಲ್ಲಿ 14 ರನ್‌ ಚಚ್ಚಿದರು. ಅಂತಿಮವಾಗಿ ಮುಂಬೈ ಇಂಡಿಯನ್ಸ್‌ 19.3 ಓವರ್‌ಗಳಲ್ಲಿ 134 ರನ್‌ ಗಳಿಸಿ ಗೆಲುವಿನ ನಗೆ ಬೀರಿತು.

    ಟಾಸ್ ಗೆದ್ದು ಮೊದಲು ಬ್ಯಾಟಿಂಗ್ ಮಾಡಿದ ಡೆಲ್ಲಿ ಕ್ಯಾಪಿಟಲ್ಸ್ ಆರಂಭದಲ್ಲೇ ವಿಕೆಟ್ ಕಳೆದುಕೊಳ್ಳುವ ಮೂಲಕ ಒತ್ತಡಕ್ಕೆ ಸಿಲುಕಿತು. ಉತ್ತಮ ಫಾರ್ಮ್‌ನಲ್ಲಿದ್ದ ಸ್ಫೋಟಕ ಬ್ಯಾಟರ್ ಶಫಾಲಿ ವರ್ಮಾ ಮೊದಲ ಓವರ್‌ನಲ್ಲೇ ವಿಕೆಟ್‌ ಒಪ್ಪಿಸಿ ಹೊರನಡೆದರು.

    ಶಫಾಲಿ ವರ್ಮಾ 4 ಎಸೆತಗಳಲ್ಲಿ 11 ರನ್ ಗಳಿಸಿ ಔಟಾಗುವ ಮೂಲಕ ನಿರಾಸೆ ಅನುಭವಿಸಿದರು. ಅಲಿಸ್ಸಾ ಕ್ಯಾಪ್ಸಿ ಕೂಡ ಮೊದಲ ಎಸೆತದಲ್ಲೇ ಇಸ್ಸಿ ವಾಂಗ್‌ಗೆ ವಿಕೆಟ್ ಒಪ್ಪಿಸಿದರು. ಜೆಮಿಮಾ ರೊಡ್ರಿಗಸ್‌ ಕೂಡ ಹೆಚ್ಚು ಹೊತ್ತು ಕ್ರೀಸ್‌ನಲ್ಲಿ ನಿಲ್ಲಲಿಲ್ಲ, 8 ಎಸೆತಗಳಲ್ಲಿ 9 ರನ್ ಗಳಿಸಿ ಕ್ಯಾಚ್‌ ನೀಡಿದರು. ಇದನ್ನೂ ಓದಿ: ಪ್ರಶ್ನೆಪತ್ರಿಕೆಯಲ್ಲಿ ಕೊಹ್ಲಿ ಫೋಟೋ ನೋಡಿ ವಿದ್ಯಾರ್ಥಿಗಳು ಶಾಕ್!

    ಮೆಗ್ ಲ್ಯಾನಿಂಗ್ ಮತ್ತು ಮಾರಿಜಾನ್ನೆ ಕಪ್ 21 ಎಸೆತಗಳಲ್ಲಿ 18 ರನ್ ಗಳಿಸಿ ಔಟಾದರು. 29 ಎಸೆತಗಳಲ್ಲಿ 35 ರನ್ ಗಳಿಸಿ ಉತ್ತಮವಾಗಿ ಆಡುತ್ತಿದ್ದ ನಾಯಕಿ ಮೆಗ್‌ ಲ್ಯಾನಿಂಗ್‌ ಬೇಡದ ರನ್‌ ಕದಿಯಲು ಹೋಗಿ ರನೌಟ್‌ಗೆ ಬಲಿಯಾದರು. ಜೆಸ್ ಜೊನಾಸ್ಸೆನ್ 11 ಎಸೆತಗಳಲ್ಲಿ 2 ರನ್ ಗಳಿಸಿ ನಿರಾಸೆ ಮೂಡಿಸಿದರು. ಅರುಂಧತಿ ರಾಯ್ ಶೂನ್ಯಕ್ಕೆ ಔಟಾದರು.

    ಒಂದು ಹಂತದಲ್ಲಿ 100 ರನ್‌ಗಳ ಗಡಿ ದಾಟುವುದೇ ಕಷ್ಟ ಎನ್ನುವಂತಿದ್ದಾಗ ಕೊನೆಯಲ್ಲಿ ಶಿಖಾ ಪಾಂಡೆ ಮತ್ತು ರಾಧಾ ಯಾದವ್ ಭರ್ಜರಿ ಸಿಕ್ಸರ್‌, ಬೌಂಡರಿಗಳ ಆಟವಾಡಿ ತಂಡಕ್ಕೆ ಆಸರೆಯಾದರು. ಮುರಿಯದ ಕೊನೆಯ ವಿಕೆಟ್‌ ಜೊತೆಯಾಟಕ್ಕೆ ಈ ಜೋಡಿ 24 ಎಸೆತಗಳಲ್ಲಿ 52 ರನ್‌ ಚಚ್ಚಿತ್ತು. ರಾಧಾಯಾದವ್ 12 ಎಸೆತಗಳಲ್ಲಿ ಅಜೇಯ 27 ರನ್ ಗಳಿಸಿದರೆ, ಶಿಖಾ ಪಾಂಡೆ 17 ಎಸೆತಗಳಲ್ಲಿ ಅಜೇಯ 27 ರನ್ ಗಳಿಸಿದರು.

    ಬಿಗಿ ಬೌಲಿಂಗ್‌ ದಾಳಿ ನಡೆಸಿದ ಮುಂಬೈ ಇಂಡಿಯನ್ಸ್‌ ತಂಡದ ಪರವಾಗಿ ಇಸ್ಸಿ ವಾಂಗ್ 4 ಓವರ್ ಗಳಲ್ಲಿ 42 ರನ್ ನೀಡಿ 3 ವಿಕೆಟ್ ಪಡೆದರು. ಹೇಲಿ ಮ್ಯಾಥ್ಯೂಸ್ 4 ಓವರ್ ಗಳಲ್ಲಿ ಕೇವಲ 5 ರನ್ ನೀಡಿ 3 ವಿಕೆಟ್ ಪಡೆದರು. ಅಮೆಲಿ ಕೆರ್ 4 ಎಸೆತಗಳಲ್ಲಿ 18 ರನ್ ನೀಡಿ 2 ವಿಕೆಟ್ ಪಡೆದು ಮಿಂಚಿದರು.

  • WPL 2023: ಮುಂಬೈ ಫೈನಲ್‌ಗೆ – ಯುಪಿ ವಾರಿಯರ್ಸ್‌ ಮನೆಗೆ

    WPL 2023: ಮುಂಬೈ ಫೈನಲ್‌ಗೆ – ಯುಪಿ ವಾರಿಯರ್ಸ್‌ ಮನೆಗೆ

    ಮುಂಬೈ: ನಾಟ್‌ ಸ್ಕಿವರ್‌ ಬ್ರಂಟ್‌ (Nat Sciver-Brunt) ಸ್ಫೋಟಕ ಅರ್ಧ ಶತಕ, ಇಸ್ಸಿ ವಾಂಗ್‌ ಮಿಂಚಿನ ಬೌಲಿಂಗ್‌ ದಾಳಿ ನೆರವಿನಿಂದ ಮುಂಬೈ ಇಂಡಿಯನ್ಸ್‌ (Mumbai Indians), ಯುಪಿ ವಾರಿಯರ್ಸ್‌ (UP Warriorz) ವಿರುದ್ಧ ಭರ್ಜರಿ ಜಯ ಸಾಧಿಸಿದ್ದು WPL ಫೈನಲ್‌ ಪ್ರವೇಶಿಸಿದೆ.

    ಮುಂಬೈನ ಡಿವೈ ಪಾಟೀಲ್‌ ಕ್ರೀಡಾಂಗಣದಲ್ಲಿಂದು ನಡೆದ ಮಹಿಳಾ ಪ್ರೀಮಿಯರ್‌ ಲೀಗ್‌ನ (WPL 2023) ಎಲಿಮಿನೇಟರ್‌ ಪಂದ್ಯದಲ್ಲಿ ಮುಂಬೈ ಭರ್ಜರಿ ಜಯದೊಂದಿಗೆ ಫೈನಲ್‌ಗೆ ಲಗ್ಗೆಯಿಟ್ಟಿದೆ. ಇದನ್ನೂ ಓದಿ: IPL 2023: ಕಣಕ್ಕಿಳಿಯಲು RCB, CSK ಬಲಿಷ್ಠ ತಂಡ ರೆಡಿ – ಈ ಸಲ ಕಪ್ ಯಾರದ್ದು?

    ಟಾಸ್‌ ಸೋತು ಮೊದಲು ಬ್ಯಾಟಿಂಗ್‌ ಮಾಡಿದ ಮುಂಬೈ ಇಂಡಿಯನ್ಸ್‌ 20 ಓವರ್‌ಗಳಲ್ಲಿ 4 ವಿಕೆಟ್‌ ನಷ್ಟಕ್ಕೆ 182 ರನ್‌ ಗಳಿಸಿತ್ತು. 183 ರನ್‌ಗಳ ಬೃಹತ್‌ ಮೊತ್ತದ ಗುರಿ ಪಡೆದ ಯುಪಿ ವಾರಿಯರ್ಸ್‌ ಬ್ಯಾಟಿಂಗ್‌ ವೈಫಲ್ಯದಿಂದ 17.4 ಓವರ್‌ಗಳಲ್ಲಿ 110 ರನ್‌ಗಳಿಗೆ ಸರ್ವಪತನ ಕಂಡಿತು. ಪರಿಣಾಮ 72 ರನ್‌ಗಳ ಅಂತರದಿಂದ ಸೋತು ಟೂರ್ನಿಯಿಂದ ಹೊರಬಿದ್ದಿತು.

    ಚೇಸಿಂಗ್‌ ಆರಂಭಿಸಿದ ಯುಪಿ ತಂಡವು ಆರಂಭದಲ್ಲೇ ಪ್ರಮುಖ ವಿಕೆಟ್‌ಗಳನ್ನ ಕಳೆದುಕೊಂಡಿತು. ಮಧ್ಯಮ ಕ್ರಮಾಂಕದಲ್ಲಿ ಬಂದ ಕಿರನ್‌ ನವಗಿರೆ ಸ್ಫೋಟಕ 43 ರನ್‌ (4 ಬೌಂಡರಿ, 3 ಸಿಕ್ಸರ್‌), ಗ್ರೇಸ್‌ ಹ್ಯಾರಿಸ್‌ 14 ರನ್‌, ದೀಪ್ತಿ ಶರ್ಮಾ 16 ರನ್‌ ಗಳಿಸಿದ್ದು ಬಿಟ್ಟರೆ, ಯಾರೊಬ್ಬರೂ ಹೆಚ್ಚಿನ ರನ್‌ ಗಳಿಸದ ಕಾರಣ ಯುಪಿ ವಾರಿಯರ್ಸ್‌ ತಂಡ ಹೀನಾಯ ಸೋಲನುಭವಿಸಿತು. ಇದನ್ನೂ ಓದಿ: 3 ಪಂದ್ಯ, ಫಸ್ಟ್ ಬಾಲಿಗೆ ಔಟ್ – ಕೆಟ್ಟ ದಾಖಲೆ ಬರೆದ ಸೂರ್ಯ

    ಮುಂಬೈ ಇಂಡಿಯನ್ಸ್‌ ಪರ ಇಸ್ಸಿ ವಾಂಗ್‌ 4 ಓವರ್‌ಗಳಲ್ಲಿ ಕೇವಲ 15 ರನ್‌ ನೀಡಿ 4 ವಿಕೆಟ್‌ ಕಿತ್ತರೆ, ಸೈಕಾ ಇಶಾಕ್‌ 2 ವಿಕೆಟ್‌, ಬ್ರಂಟ್, ಹೇಲಿ ಮ್ಯಾಥಿವ್ಸ್‌, ಜಿಂತಿಮಣಿ ಕಲಿತಾ ತಲಾ ಒಂದೊಂದು ವಿಕೆಟ್‌ ಪಡೆದು ಮಿಂಚಿದರು.

    ಮೊದಲು ಬ್ಯಾಟಿಂಗ್‌ ಮಾಡಿದ ಮುಂಬೈ ಇಂಡಿಯನ್ಸ್‌ ತಂಡ ಬೃಹತ್ ಮೊತ್ತ ಕಲೆಹಾಕಿತು. ನ್ಯಾಟ್ ಸಿವರ್ ಬ್ರಂಟ್ ಭರ್ಜರಿ ಅರ್ಧಶತಕ ಗಳಿಸುವ ಮೂಲಕ ತಂಡಕ್ಕೆ ಆಸರೆಯಾದರು. ಆರಂಭಿಕರಾಗಿ ಕಣಕ್ಕಿಳಿದ ಯಸ್ತಿಕಾ ಭಾಟಿಯಾ 18 ಎಸೆತಗಳಲ್ಲಿ 21 ರನ್ ಗಳಿಸಿದರೆ, ಹೇಳಿ ಮ್ಯಾಥ್ಯೂಸ್ 26 ಎಸೆತಗಳಲ್ಲಿ 26 ರನ್ ಗಳಿಸಿ ಪೆವಿಲಿಯನ್‌ ಸೇರಿಕೊಂಡರು.

    ನಂತರ ಬಂದ ಆಲ್‌ರೌಂಡರ್ ನಾಟ್‌ ಸ್ಕಿವರ್‌ ಬ್ರಂಟ್ ಭರ್ಜರಿ ಬ್ಯಾಟಿಂಗ್‌ ಮಾಡಿದರು. ಸಿಕ್ಸರ್‌, ಬೌಂಡರಿ ಅಬ್ಬರಿಸುತ್ತಾ ವಾರಿಯರ್ಸ್‌ ಬೌಲರ್‌ಗಳನ್ನು ಬೆಂಡೆತ್ತಿದರು. ಬ್ರಂಟ್‌ 38 ಎಸೆತಗಳಲ್ಲಿ ಸಹಿತ ಅಜೇಯ 72 ರನ್ (9 ಬೌಂಡರಿ 2 ಸಿಕ್ಸರ್) ಗಳಿಸಿದರು. ಆದ್ರೆ ನಾಯಕಿ ಹರ್ಮನ್‌ಪ್ರೀತ್ ಕೌರ್ (Harmanpreet Kaur) 14 ರನ್ ಗಳಿಸಿ ಔಟಾಗುವ ಮೂಲಕ ನಿರಾಸೆ ಮೂಡಿಸಿದರು. ಕೊನೆಯಲ್ಲಿ ಅಮೆಲಿ ಕೆರ್ 29 ರನ್ ಗಳಿಸಿದರೆ, ಪೂಜಾ ವಸ್ತ್ರಾಕರ್ 4 ಎಸೆತಗಳಲ್ಲಿ ಅಜೇಯ 11 ರನ್ ಬಾರಿಸಿದರು.

    ಯುಪಿ ವಾರಿಯರ್ಸ್ ಪರವಾಗಿ ಸೋಫಿ ಎಕ್ಲಿಸ್ಟೋನ್‌ 2 ವಿಕೆಟ್ ಪಡೆದರೆ, ಪಾರ್ಶವಿ ಚೋಪ್ರಾ ಮತ್ತು ಅಂಜಲಿ ಸರ್ವಾಣಿ ತಲಾ 1 ವಿಕೆಟ್ ಪಡೆದರು.

  • WPL 2023: ಮುಂಬೈಗೆ ಜಯ – RCB ಸೋಲಿನ ವಿದಾಯ

    WPL 2023: ಮುಂಬೈಗೆ ಜಯ – RCB ಸೋಲಿನ ವಿದಾಯ

    ಮುಂಬೈ: ಸಂಘಟಿತ ಬೌಲಿಂಗ್, ಬ್ಯಾಟಿಂಗ್ ದಾಳಿ ನೆರವಿನಿಂದ ಮುಂಬೈ ಇಂಡಿಯನ್ಸ್ (Mumbai Indians) ತಂಡವು ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ತಂಡದ ವಿರುದ್ಧ 4 ವಿಕೆಟ್‌ಗಳ ಜಯ ಸಾಧಿಸಿದೆ.

    ಮುಂಬೈನ ಡಿವೈ ಪಾಟೀಲ್ ಕ್ರೀಡಾಂಗಣದಲ್ಲಿ ಮಹಿಳಾ ಪ್ರೀಮಿಯರ್ ಲೀಗ್‌ನ ಕೊನೆಯ ಪಂದ್ಯವಾಡಿದ ಆರ್‌ಸಿಬಿ ಸೋಲಿನೊಂದಿಗೆ ವಿದಾಯ ಹೇಳಿದೆ. ಇದನ್ನೂ ಓದಿ: WPL 2023: ಮುಂಬೈ ಇಂಡಿಯನ್ಸ್‌ಗೆ ಹೀನಾಯ ಸೋಲು – ಅಗ್ರಸ್ಥಾನಕ್ಕೇರಿದ ಡೆಲ್ಲಿ ಕ್ಯಾಪಿಟಲ್ಸ್‌

    ಟಾಸ್ ಸೋತು ಮೊದಲು ಬ್ಯಾಟಿಂಗ್ ಮಾಡಿದ ಸ್ಮೃತಿ ಮಂದಾನ (Smriti Mandhana) ನಾಯಕತ್ವದ ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ತಂಡ ನಿಗದಿತ 20 ಓವರ್‌ಗಳಲ್ಲಿ 9 ವಿಕೆಟ್ ನಷ್ಟಕ್ಕೆ 125 ರನ್ ಗಳಿಸಿತು. 126 ರನ್‌ಗಳ ಗುರಿ ಪಡೆದ ಎದುರಾಳಿ ಮುಂಬೈ ತಂಡವು 16.3 ಓವರ್‌ಗಳಲ್ಲೇ 6 ವಿಕೆಟ್ ನಷ್ಟಕ್ಕೆ 129 ರನ್ ಚಚ್ಚಿ ಮತ್ತೆ ಅಗ್ರಸ್ಥಾನಕ್ಕೇರಿತು.  ಇದನ್ನೂ ಓದಿ: WPL 2023: ರೋಚಕ ಜಯದೊಂದಿಗೆ ಯುಪಿ ವಾರಿಯರ್ಸ್‌ ಪ್ಲೆ ಆಫ್‌ಗೆ – RCB ಮನೆಗೆ

    ಆರಂಭಿಕರಾಗಿ ಕಣಕ್ಕಿಳಿದ ಹೇಲಿ ಮ್ಯಾಥಿವ್ಸ್ 17 ಎಸೆತಗಳಲ್ಲಿ 24 ರನ್ ಗಳಿಸಿದರೆ, ಯಸ್ತಿಕಾ ಭಾಟಿಯಾ 26 ಎಸೆತಗಳಲ್ಲಿ 30 ರನ್ ಗಳಿಸುವ ಮೂಲಕ ಉತ್ತಮ ಆರಂಭ ನೀಡಿದರು. ಆದರೆ ಮಧ್ಯಂತರದಲ್ಲಿ ನಾಟ್ ಸ್ಕಿವರ್ ಬ್ರಂಟ್ (13 ರನ್), ನಾಯಕಿ ಹರ್ಮನ್ ಪ್ರೀತ್‌ಕೌರ್ (2 ರನ್) (Harmanpreet Kaur) ವಿಕೆಟ್ ಕಳೆದುಕೊಂಡು ಮತ್ತೆ ಸಂಕಷ್ಟಕ್ಕೀಡಾಯಿತು. ನಂತರ ಕ್ರೀಸ್‌ಗಿಳಿದ ಅಮೇಲಿ ಕೇರ್ 27 ಎಸತೆಗಳಲ್ಲಿ 4 ಬೌಂಡರಿಯೊಂದಿಗೆ ಅಜೇಯ 31 ರನ್ ಬಾರಿಸುವ ಮೂಲಕ ತಂಡವನ್ನು ಗೆಲುವಿನ ಹಾದಿಗೆ ಕೊಂಡೊಯ್ದರು. ಕೊನೆಯಲ್ಲಿ ಪೂಜಾ ವಸ್ತ್ರಾಕರ್ 19 ರನ್ ಗಳಿಸಿ ತಂಡಕ್ಕೆ ನೆರವಾದರು.

    ಆರ್‌ಸಿಬಿ ಪರ ಮೇಗನ್ ಶುಟ್, ಶ್ರೇಯಾಂಕ ಪಾಟೀಲ್, ಎಲ್ಲಿಸ್ ಪರ‍್ರಿ, ಸೋಭಾನಾ ಆಶಾ ತಲಾ ಒಂದೊಂದು ವಿಕೆಟ್ ಪಡೆದರೆ, ಕನಿಕಾ ಅಹುಜಾ 2 ವಿಕೆಟ್ ಕಿತ್ತರು.

    ಇದಕ್ಕೂ ಮುನ್ನ ಆರ್‌ಸಿಬಿ ತಂಡದಿಂದ ಆರಂಭಿಕರಾಗಿ ಕಣಕ್ಕಿಳಿದ ಸ್ಮೃತಿ ಮಂದಾನ, ಸೋಫಿ ಡಿವೈನ್ ಕೊನೆಯ ಪಂದ್ಯದಲ್ಲೂ ಕಳಪೆ ಬ್ಯಾಟಿಂಗ್ ಮುಂದುವರಿಸಿದರು. ಮೊದಲ ಓವರ್‌ನ 3ನೇ ಎಸೆತದಲ್ಲಿ ರನ್ ಕದಿಯಲು ಯತ್ನಿಸಿ ಸೋಫಿ ಡಿವೈನ್ ರನೌಟ್‌ಗೆ ತುತ್ತಾದರು. ನಂತರ ಬಂದ ಎಲ್ಲಿಸ್ ಪರ‍್ರಿ 38 ಎಸೆತಗಳಲ್ಲಿ 29 ರನ್ ಗಳಿಸಿದರೆ, ನಾಯಕಿ ಸ್ಮೃತಿ ಮಂದಾನ 25 ಎಸೆತಗಳಲ್ಲಿ 24 ರನ್ ಬಾರಿಸಿ ಔಟಾದರು. ಹೀದರ್ ನೈಟ್ 12 ರನ್, ಕನಿಕಾ ಅಹುಜಾ 12 ರನ್ ಮತ್ತು ಕೊನೆಯಲ್ಲಿ ರಿಚಾ ಘೋಷ್ 13 ಎಸೆತಗಳಲ್ಲಿ 29 ರನ್ ಬಾರಿಸಿ ವಿಕೆಟ್ ಒಪ್ಪಿಸಿದರು. ಅಂತಿಮವಾಗಿ ಆರ್‌ಸಿಬಿ 9 ವಿಕೆಟ್ ನಷ್ಟಕ್ಕೆ 125 ರನ್ ಗಳಿಸಲಷ್ಟೇ ಸಾಧ್ಯವಾಯಿತು.

    ಮುಂಬೈ ಪರ ಬೌಲಿಂಗ್‌ನಲ್ಲಿ ಅಮೆಲಿಯಾ ಕೆರ್ 4 ಓವರ್‌ಗಳಲ್ಲಿ 22 ರನ್ ನೀಡಿ 3 ವಿಕೆಟ್ ಪಡೆದರೆ, ನಾಟ್ ಸೀವರ್-ಬ್ರಂಟ್, ಇಸ್ಸಿ ವಾಂಗ್ ತಲಾ 2 ವಿಕೆಟ್ ಹಾಗೂ ಸೈಕ್ ಇಶಾಕ್ 1 ವಿಕೆಟ್ ಪಡೆದು ಮಿಂಚಿದರು.

    ಆರ್‌ಸಿಬಿ ಅಭಿಮಾನಿಗಳಿಗೆ ನಿರಾಸೆ:
    ಮಹಿಳಾ ಪ್ರೀಮಿಯರ್ ಲೀಗ್‌ನ ಆರಂಭಿಕ 5 ಪಂದ್ಯಗಳಲ್ಲಿ ಹೀನಾಯ ಸೋಲು ಅನುಭವಿಸಿದ ಆರ್‌ಸಿಬಿ 6, 7ನೇ ಪಂದ್ಯದಲ್ಲಿ ಭರ್ಜರಿ ಗೆಲುವಿನೊಂದಿಗೆ ಪ್ಲೇ ಆಫ್ ಕನಸು ಜೀವಂತವಾಗಿಸಿಕೊಂಡಿತ್ತು. ಆದರೆ ಮೂರು ಪಂದ್ಯಗಳಲ್ಲಿ ಗೆಲುವು ಸಾಧಿಸಿದ್ದ ಯುಪಿ ವಾರಿಯರ್ಸ್ ತಂಡ 7ನೇ ಪಂದ್ಯದಲ್ಲಿ ಗುಜರಾತ್ ಜೈಂಟ್ಸ್ ವಿರುದ್ಧ ಗೆಲುವು ದಾಖಲಿಸಿದ ನಂತರ ಆರ್‌ಸಿಬಿ ಪ್ಲೆ ಆಫ್ ಕನಸು ಭಗ್ನಗೊಂಡಿತು. ಕೊನೆಯ ಪಂದ್ಯದಲ್ಲೂ ಹೀನಾಯವಾಗಿ ಸೋತು ಅಭಿಮಾನಿಗಳಿಗೆ ಭಾರೀ ನಿರಾಸೆ ತರಿಸಿತು.

  • WPL 2023: ಮುಂಬೈ ಇಂಡಿಯನ್ಸ್‌ಗೆ ಹೀನಾಯ ಸೋಲು – ಅಗ್ರಸ್ಥಾನಕ್ಕೇರಿದ ಡೆಲ್ಲಿ ಕ್ಯಾಪಿಟಲ್ಸ್‌

    WPL 2023: ಮುಂಬೈ ಇಂಡಿಯನ್ಸ್‌ಗೆ ಹೀನಾಯ ಸೋಲು – ಅಗ್ರಸ್ಥಾನಕ್ಕೇರಿದ ಡೆಲ್ಲಿ ಕ್ಯಾಪಿಟಲ್ಸ್‌

    ಮುಂಬೈ: ಅಲಿಸ್‌ ಕ್ಯಾಪ್ಸಿ, ಶಫಾಲಿ ವರ್ಮಾ (Shafali Verma) ಸ್ಫೋಟಕ ಬ್ಯಾಟಿಂಗ್‌ ನೆರವಿನಿಂದ ಡೆಲ್ಲಿ ಕ್ಯಾಪಿಟಲ್ಸ್‌ (Delhi Capitals) ತಂಡವು ಮುಂಬೈ ಇಂಡಿಯನ್ಸ್‌ ವಿರುದ್ಧ (Mumbai Indians) 9 ವಿಕೆಟ್‌ಗಳ ಭರ್ಜರಿ ಜಯ ಸಾಧಿಸಿದ್ದು, ಪಾಯಿಂಟ್ಸ್‌ ಟೇಬಲ್‌ ಪಟ್ಟಿಯಲ್ಲಿ ಅಗ್ರಸ್ಥಾನಕ್ಕೇರಿದೆ.

    ಟಾಸ್‌ ಸೋತು ಮೊದಲು ಬ್ಯಾಟಿಂಗ್‌ ಮಾಡಿದ ಮುಂಬೈ ಇಂಡಿಯನ್ಸ್ ಕಳಪೆ ಬ್ಯಾಟಿಂಗ್‌ ಪ್ರದರ್ಶನದಿಂದ 20 ಓವರ್‌ಗಳಲ್ಲಿ 8 ವಿಕೆಟ್‌ ನಷ್ಟಕ್ಕೆ 109 ರನ್‌ ಗಳಿಸಿತು. 110 ರನ್‌ಗಳ ಅಲ್ಪಮೊತ್ತದ ಗುರಿ ಬೆನ್ನತ್ತಿದ ಡೆಲ್ಲಿ ಕ್ಯಾಪಿಟಲ್ಸ್‌ ನಿರಾಯಾಸವಾಗಿ 9 ಓವರ್‌ಗಳಲ್ಲೇ 1 ವಿಕೆಟ್‌ ನಷ್ಟಕ್ಕೆ 110 ಸಿಡಿಸಿ ಗೆಲುವು ಸಾಧಿಸಿತು. ಇದನ್ನೂ ಓದಿ: WPL 2023: ರೋಚಕ ಜಯದೊಂದಿಗೆ ಯುಪಿ ವಾರಿಯರ್ಸ್‌ ಪ್ಲೆ ಆಫ್‌ಗೆ – RCB ಮನೆಗೆ

    ಆರಂಭಿಕರಾಗಿ ಕಣಕ್ಕಿಳಿದ ನಾಯಕಿ ಮೆಗ್‌ ಲ್ಯಾನಿಂಗ್‌, ಶಫಾಲಿ ವರ್ಮಾ ಹಾಗೂ 2ನೇ ಕ್ರಮಾಂಕದಲ್ಲಿ ಕ್ರೀಸ್‌ಗಿಳಿದ ಅಲಿಸ್‌ ಕ್ಯಾಪ್ಸಿ ಭರ್ಜರಿ ಸಿಕ್ಸರ್‌, ಬೌಂಡರಿ ಸಿಡಿಸಿ ಮುಂಬೈ ಬೌಲರ್‌ಗಳಿಗೆ ನಿರುಣಿಸಿದರು.

    ಮೆಗ್‌ ಲ್ಯಾನಿಂಗ್‌ 22 ಎಸೆತಗಳಲ್ಲಿ 32 ರನ್‌ (4 ಬೌಂಡರಿ, 1 ಸಿಕ್ಸರ್‌), ಶಫಾಲಿ ವರ್ಮಾ 15 ಎಸೆತಗಳಲ್ಲಿ 33 ರನ್‌ (6 ಬೌಂಡರಿ, 1 ಸಿಕ್ಸರ್‌) ಸಿಡಿಸಿದ್ರೆ, ಕ್ಯಾಪ್ಸಿ 17 ಎಸೆತಗಳಲ್ಲಿ ಸ್ಫೋಟಕ 38 ರನ್‌ (5 ಸಿಕ್ಸರ್‌, 1 ಬೌಂಡರಿ) ಚಚ್ಚಿ ಗೆಲುವು ಸಾಧಿಸಿದರು‌. ಮೂಲಕ ಪಾಯಿಂಟ್ಸ್‌ ಟೇಬಲ್‌ ಪಟ್ಟಿಯಲ್ಲಿ ಮೊದಲ ಸ್ಥಾನಕ್ಕೇರಿದೆ.

    ಡೆಲ್ಲಿ, ಮುಂಬೈ ತಂಡಕ್ಕೆ ಇನ್ನೂ ಒಂದೊಂದು ಪಂದ್ಯಗಳು ಬಾಕಿಯಿದ್ದು, ಈ ಪಂದ್ಯದಲ್ಲಿ ಸೋತವರು ಎಲಿಮಿನೇಟರ್‌ ಪಂದ್ಯದಲ್ಲಿ ಸೆಣಸ‌ಲಿದ್ದಾರೆ. ಗೆದ್ದ ತಂಡ ಅಗ್ರಸ್ಥಾನದೊಂದಿಗೆ ನೇರವಾಗಿ ಫೈನಲ್‌ ಪ್ರವೇಶಿಸಲಿದೆ. ಇದನ್ನೂ ಓದಿ: ಅಭಿಮಾನಿಯನ್ನ ಮದುವೆಯಾಗ್ತೀರಾ ಅಂತಾ ಕೇಳಿದ ರೋಹಿತ್ ಶರ್ಮಾ

    ಮೊದಲು ಬ್ಯಾಟಿಂಗ್‌ ಮಾಡಿದ ಮುಂಬೈ ತಂಡವು, ಡೆಲ್ಲಿ ಕ್ಯಾಪಿಟಲ್ಸ್ ತಂಡದ ಶಿಸ್ತಿನ ಬೌಲಿಂಗ್ ದಾಳಿಗೆ ತತ್ತರಿಸಿತು. 2.1 ಓವರ್ ನಲ್ಲಿ ಮುಂಬೈ ಇಂಡಿಯನ್ಸ್ ಮೊದಲ ವಿಕೆಟ್ ಕಳೆದುಕೊಂಡಿತು. ಯಸ್ತಿಕ ಭಾಟಿಯಾ 6 ಎಸೆತಗಳಲ್ಲಿ ಕೇವಲ 1 ರನ್ ಗಳಿಸಿ ಔಟಾದರು, ಈ ಬೆನ್ನಲ್ಲೇ ನಾಟ್ ಸ್ಕಿವರ್‌ ಬ್ರಂಟ್ ತಮ್ಮ ಮೊದಲ ಎಸೆತದಲ್ಲೇ ವಿಕೆಟ್ ಒಪ್ಪಿಸಿ ವಾಪಸಾದರು. ಮಾರಿಜಾನ್ನೆ ಕಪ್ ಒಂದೇ ಓವರ್ ನಲ್ಲಿ ಈ 2 ವಿಕೆಟ್ ಪಡೆಯುವ ಮೂಲಕ ಮುಂಬೈ ಇಂಡಿಯನ್ಸ್‌ಗೆ ದೊಡ್ಡ ಆಘಾತ ನೀಡಿದರು. ಈ ಬೆನ್ನಲ್ಲೇ ಮುಂಬೈ ತಂಡದ ಒಂದೊಂದೆ ವಿಕೆಟ್‌ ಪತನಗೊಂಡಿತು.

    ಮಧ್ಯಮ ಕ್ರಮಾಂಕದಲ್ಲಿ ಕಣಕ್ಕಿಳಿದ ನಾಯಕಿ ಹರ್ಮನ್‌ಪ್ರೀತ್ ಕೌರ್ (Harmanpreet Kaur) 23 ರನ್, ಪೂಜಾ ವಸ್ತ್ರಾಕರ್ 26 ರನ್, ಇಸ್ಸಿ ವಾಂಗ್ 23 ರನ್ ಹಾಗೂ ಅಮನ್‌ಜೋತ್ ಕೌರ್ 19 ರನ್ ಗಳಿಸಿದರೂ ತಂಡ ಬೃಹತ್‌ ಮೊತ್ತ ಕಲೆಹಾಕುವಲ್ಲಿ ವಿಫಲವಾಯಿತು.

    ಡೆಲ್ಲಿ ಪರ ಮಾರಿಜಾನ್ನೆ ಕಪ್, ಶಿಖಾ ಪಾಂಡೆ ಮತ್ತು ಜೆಸ್ ಜೊನಾಸೆನ್ ತಲಾ 2 ವಿಕೆಟ್ ಪಡೆದು ಮಿಂಚಿದರು. ಅರುಂಧತಿ ರೆಡ್ಡಿ ಒಂದು ವಿಕೆಟ್ ಪಡೆದರು. ಮುಂಬೈ ಪರ ಹೇಲಿ ಮ್ಯಾಥಿವ್ಸ್‌ 1 ವಿಕೆಟ್‌ ಪಡೆದರು.

  • WPL 2023: ರೋಚಕ ಜಯದೊಂದಿಗೆ ಯುಪಿ ವಾರಿಯರ್ಸ್‌ ಪ್ಲೆ ಆಫ್‌ಗೆ – RCB ಮನೆಗೆ

    WPL 2023: ರೋಚಕ ಜಯದೊಂದಿಗೆ ಯುಪಿ ವಾರಿಯರ್ಸ್‌ ಪ್ಲೆ ಆಫ್‌ಗೆ – RCB ಮನೆಗೆ

    ಮುಂಬೈ: ಗ್ರೇಸ್‌ ಹ್ಯಾರಿಸ್‌ (Grace Harris) ಸಿಕ್ಸರ್‌ ಭರ್ಜರಿ ಬ್ಯಾಟಿಂಗ್‌ ನೆರವಿನಿಂದ ಯುಪಿ ವಾರಿಯರ್ಸ್‌ (UP Warriorz) ತಂಡವು ಗುಜರಾತ್‌ ಜೈಂಟ್ಸ್‌ (Gujarat Giants) ವಿರುದ್ಧ 3 ವಿಕೆಟ್‌ಗಳ ರೋಚಕ ಜಯ ಸಾಧಿಸಿದೆ. ಈ ಮೂಲಕ ಚೊಚ್ಚಲ ಮಹಿಳಾ ಪ್ರೀಮಿಯರ್‌ ಲೀಗ್‌ (WPL) ಆವೃತ್ತಿಯಲ್ಲಿ ಪ್ಲೇ ಆಫ್‌ಗೆ ಅರ್ಹತೆ ಪಡೆದುಕೊಂಡ 3ನೇ ತಂಡವಾಗಿದೆ.

    ಇತ್ತ ಸತತ 2 ಪಂದ್ಯಗಳಲ್ಲಿ ಭರ್ಜರಿ ಜಯ ಸಾಧಿಸಿ, ಪ್ಲೇ ಆಫ್‌ ಪ್ರವೇಶಿಸುವ ಕನಸು ಕಂಡಿದ್ದ ಆರ್‌ಸಿಬಿಗೆ ನಿರಾಸೆಯಾಗಿದ್ದು, ಮನೆಕಡೆಗೆ ಮುಖ ಮಾಡಿದೆ. ಇದನ್ನೂ ಓದಿ: ಸೋಫಿ ಬೆಂಕಿ ಬ್ಯಾಟಿಂಗ್‌ – RCBಗೆ 8 ವಿಕೆಟ್‌ಗಳ ಭರ್ಜರಿ ಜಯ

    ಸೋಮವಾರ ಮುಂಬೈನ ಬ್ರಬೋರ್ನ್‌ ಕ್ರೀಡಾಂಗಣದಲ್ಲಿ ನಡೆದ ಪಂದ್ಯದಲ್ಲಿ ಟಾಸ್‌ ಗೆದ್ದು ಮೊದಲು ಬ್ಯಾಟಿಂಗ್‌ ಮಾಡಿದ ಗುಜರಾತ್‌ ಜೈಂಟ್ಸ್‌ ತಂಡವು 20 ಓವರ್‌ಗಳಲ್ಲಿ 6 ವಿಕೆಟ್‌ ನಷ್ಟಕ್ಕೆ 178 ರನ್‌ ಗಳಿಸಿತ್ತು. 179 ರನ್‌ಗಳ ಬೃಹತ್‌ ಮೊತ್ತದ ಗುರಿ ಪಡೆದ ಯುಪಿ ವಾರಿಯರ್ಸ್‌ ಇನ್ನೂ ಒಂದು ಎಸೆತ ಬಾಕಿಯಿರುವಂತೆಯೇ 181 ರನ್‌ ಚಚ್ಚಿ ಗೆಲುವು ಸಾಧಿಸಿತು.

    ಕೊನೆಯ 2 ಓವರ್‌ನಲ್ಲಿ 21 ರನ್‌ಗಳ ಅವಶ್ಯಕವಿದ್ದಾಗ‌ 19ನೇ ಓವರ್‌ನಲ್ಲಿ ಸಿಕ್ಸರ್‌, ಬೌಂಡರಿ ನೆರವಿನೊಂದಿಗೆ 12 ರನ್‌ ಸೇರ್ಪಡೆಯಾಯಿತು. ಕೊನೆಯ ಓವರ್‌ನಲ್ಲಿ ಮೊದಲ ಎಸೆತದಲ್ಲಿ 2 ರನ್‌, 2-3ನೇ ಎಸೆತಗಳಲ್ಲಿ ತಲಾ ಒಂದೊಂದು ರನ್‌ ಸೇರ್ಪಡೆಯಾಯಿತು. ನಂತರ ಕ್ರೀಸ್‌ ಉಳಿಸಿಕೊಂಡ ಸೋಫಿ ಎಕ್ಲಿಸ್ಟೋನ್‌ 5ನೇ ಎಸೆತವನ್ನು ಬೌಂಡರಿಗಟ್ಟಿ ತಂಡವನ್ನು ಪ್ಲೇಆಫ್‌ಗೆ ಕೊಂಡೊಯ್ದರು.

    ಚೇಸಿಂಗ್‌ ಆರಂಭಿಸಿದ ಯುಪಿ ತಂಡ ಉತ್ತಮ ಆರಂಭ ಪಡೆಯುವಲ್ಲಿ ವಿಫಲವಾಗಿತ್ತು. ಆದರೆ ಮಧ್ಯಮ ಕ್ರಮಾಂಕದಲ್ಲಿ ಒಂದಾದ ತಾಲಿಯಾ ಮೆಕ್‌ಗ್ರಾತ್‌ ಹಾಗೂ ಗ್ರೇಸ್‌ ಹ್ಯಾರಿಸ್‌ (Grace Harris) ಜೋಡಿ ಬೃಹತ್‌ ಮೊತ್ತ ಕಲೆಹಾಕಿ ತಂಡದ ಗೆಲುವಿಗೆ ಕಾರಣವಾಯಿತು. ಈ ಜೋಡಿ 53 ಎಸೆತಗಳಲ್ಲಿ 78 ರನ್‌ ಚಚ್ಚಿ ತಂಡವನ್ನು ಉತ್ತಮ ಸ್ಥಿತಿಗೆ ತಂದಿತು. ನಡುವೆ ಜೊತೆಗೂಡಿದ ಸೋಫಿ ಎಕ್ಲಿಸ್ಟೋನ್‌ ಅಜೇಯ 19 ರನ್‌ ಗಳಿಸಿ ತಂಡವನ್ನು ಗೆಲುವಿನ ಹಾದಿಗೆ ತಂದರು. ಹ್ಯಾರಿಸ್‌ 41 ಎಸೆತಗಳಲ್ಲಿ ಭರ್ಜರಿ 72 ರನ್‌ (7 ಬೌಂಡರಿ, 4 ಸಿಕ್ಸರ್‌) ಚಚ್ಚಿದರೆ, ತಾಲಿಯಾ 38 ಎಸೆತಗಳಲ್ಲಿ 11 ಬೌಂಡರಿ ಸಹಿತ 57 ರನ್‌ ಬಾರಿಸಿ ಪೆವಿಲಿಯನ್‌ ಸೇರಿಕೊಂಡರು.

    ಗುಜರಾತ್‌ ಪರ ಕಿಮ್‌ ಗಾರ್ಥ್‌ 2 ವಿಕೆಟ್‌ ಪಡೆದರೆ, ಮೋನಿಕಾ ಪಾಟಿಲ್‌, ಆಶ್ಲೀ ಗಾರ್ಡ್ನರ್, ತನುಜಾ ಕನ್ವರ್‌, ಸ್ನೇಹ ರಾಣಾ ತಲಾ ಒಂದೊಂದು ವಿಕೆಟ್‌ ಪಡೆದರು. ಇದನ್ನೂ ಓದಿ: ಕೊನೆಯಲ್ಲಿ ಸಿಕ್ಸರ್‌, ಬೌಂಡರಿ – ಆರ್‌ಸಿಬಿ ಬಹುತೇಕ ಟೂರ್ನಿಯಿಂದ ಔಟ್‌

    ಮೊದಲು ಬ್ಯಾಟಿಂಗ್‌ ಮಾಡಿದ ಗುಜರಾತ್‌ ಜೈಂಟ್ಸ್‌ ತಂಡವು ಆಶ್ಲೀ ಗಾರ್ಡ್ನರ್ (Ashleigh Gardner) ಹಾಗೂ ದಯಾಳನ್‌ ಹೇಮಲತಾ ಭರ್ಜರಿ ಅರ್ಧ ಶತಕಗಳ ನೆರವಿನಿಂದ 178 ರನ್‌ ಕಲೆಹಾಕಿತ್ತು. ಆರಂಭಿಕರಾಗಿ ಸೋಫಿ ಡಂಕ್ಲಿ 23 ರನ್‌ ಗಳಿಸಿದ್ದರು. ಮಧ್ಯಮ ಕ್ರಮಾಂಕದಲ್ಲಿ ಕ್ರೀಸ್‌ಗಿಳಿದ ಹೇಮಲತಾ 57 ರನ್‌ (6 ಬೌಂಡರಿ, 3 ಸಿಕ್ಸರ್‌ ಹಾಗೂ ಗಾರ್ಡ್ನರ್ 39 ಎಸೆತಗಳಲ್ಲಿ 60 ರನ್‌ (6 ಬೌಂಡರಿ, 3 ಸಿಕ್ಸರ್‌) ಚಚ್ಚಿ ತಂಡದ ಬೃಹತ್‌ ಮೊತ್ತಕ್ಕೆ ಕಾರಣರಾದರು.

    ವಾರಿಯರ್ಸ್‌ ಪರ ರಾಜೇಶ್ವರಿ ಗಾಯಕ್ವಾಡ್‌, ಪಾರ್ಶವಿ ಚೋಪ್ರಾ ತಲಾ 2 ವಿಕೆಟ್‌ ಕಿತ್ತರೆ, ಅಂಜಲಿ ಸರ್ವಾನಿ, ಸೋಫಿ ಎಕ್ಲಿಸ್ಟೋನ್‌ ತಲಾ ಒಂದೊಂದು ವಿಕೆಟ್‌ ಪಡೆದರು.

    ಆರ್‌ಸಿಬಿ ಮನೆಗೆ: ಟೂರ್ನಿಯ ಆರಂಭಿಕ 5 ಪಂದ್ಯಗಳಲ್ಲಿ ಸೋಲು ಅನುಭವಿಸಿದ್ದ ರಾಯಲ್‌ ಚಾಲೆಂಜರ್ಸ್ ಬೆಂಗಳೂರು ತಂಡ (ಆರ್‌ಸಿಬಿ), ಕೊನೆಯ 2 ಪಂದ್ಯಗಳಲ್ಲಿ ಬಲಿಷ್ಠ ಕಮ್‌ಬ್ಯಾಕ್‌ ಮಾಡಿತ್ತು. ವಿರಾಟ್‌ ಕೊಹ್ಲಿ ಆರ್‌ಸಿಬಿ ತಂಡದ ಜೊತೆ ಸಂಭಾಷಣೆ ನಡೆಸಿದ ಬಳಿಕ ಬೆಂಗಳೂರು ತಂಡ ಕೊನೆಯ ಎರಡು ಪಂದ್ಯಗಳಲ್ಲಿ ಗೆಲುವು ಪಡೆಯುವ ಮೂಲಕ ಕಮ್‌ಬ್ಯಾಕ್‌ ಮಾಡಿತ್ತು. ತನ್ನ 6ನೇ ಪಂದ್ಯದಲ್ಲಿ ಯುಪಿ ವಾರಿಯರ್ಸ್ ವಿರುದ್ಧ 5 ವಿಕೆಟ್‌ಗಳಿಂದ ಗೆಲುವು ಪಡೆದಿದ್ದ ಆರ್‌ಸಿಬಿ, ನಂತರ ಗುಜರಾತ್‌ ಜೈಂಟ್ಸ್‌ ವಿರುದ್ಧ 8 ವಿಕೆಟ್‌ಗಳ ಭರ್ಜರಿ ಗೆಲುವು ಪಡೆದಿತ್ತು.

    ಮುಂಬೈ, ಡೆಲ್ಲಿ ಈಗಾಗಲೇ ಪ್ಲೇ ಆಫ್‌ ಗೆ ಅರ್ಹತೆ ಪಡೆದುಕೊಂಡಿದ್ದು, 3ನೇ ಸ್ಥಾನಕ್ಕೆ ಸೆಣಸಾಟ ನಡೆದಿತ್ತು. 6 ಪಂದ್ಯಗಳನ್ನಾಡಿದ್ದ ಯುಪಿ ವಾರಿಯರ್ಸ್‌ ಇನ್ನೆರಡು ಪಂದ್ಯಗಳಲ್ಲಿ ಸೋತು, ಆರ್‌ಸಿಬಿ ಒಂದು ಪಂದ್ಯ ಗೆದ್ದಿದ್ದರೂ ಪ್ಲೇ ಆಫ್‌ ಪ್ರವೇಶಿಸುವ ಅವಕಾಶವಿತ್ತು. ಆದರೆ, ಗುಜರಾತ್‌ ಜೈಂಟ್ಸ್‌ ವಿರುದ್ಧ ಯುಪಿ ರೋಚಕ ಜಯ ಸಾಧಿಸಿದ್ದು, ಪ್ಲೇ ಆಫ್‌ ಪ್ರವೇಶಿಸಿದೆ. ಆರ್‌ಸಿಬಿಗೆ ಇನ್ನೊಂದು ಪಂದ್ಯ ಬಾಕಿಯಿದ್ದು, ಗೆದ್ದರೂ ಸೋತರೂ ಆರ್‌ಸಿಬಿ ಮನೆಗೆ ತೆರಳುವುದು ಖಚಿತವಾಗಿದೆ.

  • ಆಶ್ಲೀ ಗಾರ್ಡ್ನರ್ ಆಲ್‌ರೌಂಡರ್‌ ಆಟ – ಗುಜರಾತ್‌ಗೆ 11 ರನ್‌ಗಳ ಜಯ

    ಆಶ್ಲೀ ಗಾರ್ಡ್ನರ್ ಆಲ್‌ರೌಂಡರ್‌ ಆಟ – ಗುಜರಾತ್‌ಗೆ 11 ರನ್‌ಗಳ ಜಯ

    ಮುಂಬೈ: ಆಶ್ಲೀ ಗಾರ್ಡ್ನರ್ (Ashleigh Gardner) ಆಲ್‌ರೌಂಡರ್‌ ಆಟ ಹಾಗೂ ಸಂಘಟಿತ ಬೌಲಿಂಗ್‌ ದಾಳಿ ನೆರವಿನಿಂದ ಗುಜರಾತ್ ಜೈಂಟ್ಸ್ (Gujarat Giants) ಮಹಿಳಾ ತಂಡವು ಡೆಲ್ಲಿ ಕ್ಯಾಪಿಟಲ್ಸ್ (Delhi Capitals) ತಂಡದ ವಿರುದ್ಧ 11 ರನ್‌ಗಳ ರೋಚಕ ಜಯ ಸಾಧಿಸಿದೆ.

    ಮುಂಬೈನ ಬ್ರೆಬೋರ್ನ್ ಸ್ಟೇಡಿಯಂನಲ್ಲಿ ಗುರುವಾರ ನಡೆದ ಮಹಿಳಾ ಪ್ರೀಮಿಯರ್ ಲೀಗ್ (WPL 2023) ಪಂದ್ಯದಲ್ಲಿ ಮೊದಲು ಬ್ಯಾಟ್‌ ಮಾಡಿದ ಗುಜರಾತ್‌ ಜೈಂಟ್ಸ್‌ ನಿಗದಿತ ಓವರ್‌ಗಳಲ್ಲಿ 147 ರನ್‌ ಗಳಿಸಿತು. 148 ರನ್‌ಗಳ ಗುರಿ ಬೆನ್ನಟ್ಟಿದ ಡೆಲ್ಲಿ ಕ್ಯಾಪಿಟಲ್ಸ್ ತಂಡ 18.4 ಓವರ್‌ಗಳಲ್ಲಿ ಸರ್ವಪತನ ಕಂಡು 11 ರನ್‌ಗಳ ಸೋಲು ಅನುಭವಿಸಿತು. ಇದನ್ನೂ ಓದಿ: ವಿರಾಟ್ ಅಣ್ಣನ ಸಲಹೆ ಸಹಾಯವಾಯ್ತು – RCB ಗೆಲುವಿನ ನಂತ್ರ ಮಂದಾನ ಮುಖದಲ್ಲಿ ಮಂದಹಾಸ

    ಡೆಲ್ಲಿ ಕ್ಯಾಪಿಟಲ್ಸ್ ಇನ್ನಿಂಗ್ಸ್ ಆರಂಭಿಸಿದ ನಾಯಕಿ ಮೆಗ್ ಲ್ಯಾನ್ನಿಂಗ್ (Meg Lanning) ಮತ್ತು ಶಫಾಲಿ ವರ್ಮಾ (Shafali Verma) ಸೇರಿ ಅಗ್ರ ಕ್ರಮಾಂಕದ ಬ್ಯಾಟರ್‌ಗಳ ವೈಫಲ್ಯ ತಂಡದ ಸೋಲಿಗೆ ಕಾರಣವಾಯಿತು. ಶಫಾಲಿ ವರ್ಮಾ 8 ರನ್ ಗಳಿಸಿ ಔಟಾದರೆ, ಮೆಗ್ ಲ್ಯಾನ್ನಿಂಗ್ 18 ರನ್ ಗಳಿಸಿ ವಿಕೆಟ್ ಒಪ್ಪಿಸಿದರು. ನಂತರ ಬಂದ ಆಲಿಸ್ ಕ್ಯಾಪ್ಸೆ 11 ಎಸೆತಗಳಲ್ಲಿ 2 ಬೌಂಡರಿ ಮತ್ತು 2 ಸಿಕ್ಸರ್‌ ನೆರವಿನಿಂದ 22 ರನ್ ಬಾರಿಸಿದರು. ಜೆಮಿಮಾ ರೋಡ್ರಿಗಸ್ ಕೇವಲ 1 ರನ್ ಗಳಿಸಿ ಪೆವಿಲಿಯನ್ ಸೇರಿಕೊಂಡರು. ಆಲ್‌ರೌಂಡರ್ ಮಾರಿಜಾನ್ನೆ ಕಪ್ 29 ಎಸೆತಗಳಲ್ಲಿ 36 ರನ್ ಬಾರಿಸಿದರು. ಜೆಸ್ ಜೊನಾಸ್ಸೆನ್ 4 ರನ್, ತಾನಿಯಾ ಭಾಟಿಯಾ 1 ರನ್ ಗಳಿಸಿದರೆ, ಕೊನೆಯಲ್ಲಿ ಅರುಂಧತಿ ರೆಡ್ಡಿ 17 ಎಸೆತಗಳಲ್ಲಿ 25 ರನ್ ಬಾರಿಸಿ ಗೆಲುವಿನ ಆಸೆ ಮೂಡಿಸಿದ್ದರು. ಆದರೆ ಅವರ ವಿಕೆಟ್ ಬೀಳುತ್ತಿದ್ದಂತೆಯೇ ಡೆಲ್ಲಿ ಕ್ಯಾಪಿಟಲ್ಸ್ ತಂಡಕ್ಕೆ ಸೋಲು ಖಚಿತವಾಯಿತು.

    ಗುಜರಾತ್ ಜೈಂಟ್ಸ್ ಪರ ಸಂಘಟಿತ ಬೌಲಿಂಗ್‌ ದಾಳಿ ನಡೆಸಿದ ಕಿಮ್ ಗಾರ್ಥ್, ಆಶ್ಲೀಗ್ ಗಾರ್ಡ್ನರ್ ಹಾಗೂ ತನುಜಾ ಕನ್ವರ್ 2 ವಿಕೆಟ್ ಕಿತ್ತರು. ಉಳಿದಂತೆ ಸ್ನೇಹ ರಾಣಾ ಮತ್ತು ಹರ್ಲೀನ್ ಡಿಯೋಲ್ ತಲಾ ಒಂದೊಂದು ವಿಕೆಟ್ ಪಡೆದರು.

    ಇದಕ್ಕೂ ಮುನ್ನ ಟಾಸ್ ಸೋತು ಮೊದಲು ಬ್ಯಾಟಿಂಗ್ ಮಾಡಿದ ಸ್ನೇಹ ರಾಣಾ ನಾಯಕತ್ವದ ಗುಜರಾತ್ ಜೈಂಟ್ಸ್ ತಂಡ ನಿಗದಿತ 20 ಓವರ್‌ಗಳಲ್ಲಿ 4 ವಿಕೆಟ್ ನಷ್ಟಕ್ಕೆ 147 ರನ್ ಗಳಿಸಿತ್ತು. ಇದನ್ನೂ ಓದಿ: RCB ಪಂದ್ಯಗಳ ಟಿಕೆಟ್‌ ದರ ನೋಡಿ ಬೆಚ್ಚಿಬಿದ್ದ ಅಭಿಮಾನಿಗಳು – ಟಿಕೆಟ್‌ ಬುಕ್‌ ಮಾಡೋದು ಹೇಗೆ..?

    ಗುಜರಾತ್ ಜೈಂಟ್ಸ್ ತಂಡದ ಪರ ಸೋಫಿಯಾ ಡಂಕ್ಲೆ ಮತ್ತು ಲಾರಾ ವೊಲ್ವಾರ್ಡ್ಟ್ ಇನ್ನಿಂಗ್ಸ್ ಆರಂಭಿಸಿದರು. ಒಂದು ಓವರ್‌ನಲ್ಲಿ 4 ರನ್‌ಗಳಾಗುವಷ್ಟರಲ್ಲಿ ಸೋಫಿಯಾ ಡಂಕ್ಲೆ ವಿಕೆಟ್ ಕಳೆದುಕೊಂಡಿತು. ನಂತರ ಹರ್ಲೀನ್ ಡಿಯೋಲ್ ಉತ್ತಮ ಬ್ಯಾಟಿಂಗ್ ಮಾಡಿ ತಂಡದ ಮೊತ್ತ ಹೆಚ್ಚಿಸಲು ನೆರವಾದರು. 33 ಎಸೆತಗಳಲ್ಲಿ 4 ಬೌಂಡರಿಗಳ ಸಮೇತ 31 ರನ್ ಗಳಿಸಿದ್ದ ಹರ್ಲೀನ್ ಡಿಯೋಲ್ ವಿಕೆಟ್ ಒಪ್ಪಿಸಿದರು. ಬಳಿಕ ಜೊತೆಗೂಡಿದ ಲಾರಾ ವೊಲ್ವಾರ್ಡ್ಟ್ ಹಾಗೂ ಆಶ್ಲೀ ಗಾರ್ಡ್ನರ್ ಬೆಂಕಿ ಬ್ಯಾಟಿಂಗ್‌ ಮಾಡಿದರು. ಲಾರಾ 45 ಎಸೆತಗಳಲ್ಲಿ 57 ರನ್ (6 ಬೌಂಡರಿ, 1 ಸಿಕ್ಸರ್) ಚಚ್ಚಿದರೆ, ಗಾರ್ಡ್ನರ್ 33 ಎಸೆತಗಳಲ್ಲಿ 9 ಬೌಂಡರಿಗಳೊಂದಿಗೆ ಸ್ಫೋಟಕ 51 ರನ್ ಬಾರಿಸಿ ಅಜೇಯರಾಗುಳಿದರು.

    ಬೌಲಿಂಗ್‌ನಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ತಂಡದ ಪರ ಜೆಸ್ ಜೊನಾಸ್ಸೆನ್ 4 ಓವರ್‌ಗಳಲ್ಲಿ 38 ರನ್ ನೀಡಿ 2 ವಿಕೆಟ್ ಪಡೆದರು. ಉಳಿದಂತೆ ಮರಿಜಾನ್ನೆ ಕಪ್ ಮತ್ತು ಅರುಂಧತಿ ರೆಡ್ಡಿ ತಲಾ ಒಂದೊಂದು ವಿಕೆಟ್ ಪಡೆದರು.

  • ವಿರಾಟ್ ಅಣ್ಣನ ಸಲಹೆ ಸಹಾಯವಾಯ್ತು – RCB ಗೆಲುವಿನ ನಂತ್ರ ಮಂದಾನ ಮುಖದಲ್ಲಿ ಮಂದಹಾಸ

    ವಿರಾಟ್ ಅಣ್ಣನ ಸಲಹೆ ಸಹಾಯವಾಯ್ತು – RCB ಗೆಲುವಿನ ನಂತ್ರ ಮಂದಾನ ಮುಖದಲ್ಲಿ ಮಂದಹಾಸ

    – ಆರ್‌ಸಿಬಿ ಅಭಿಮಾನಿಗಳು ಫುಲ್ ಖುಷ್

    ಮುಂಬೈ: ಸತತ ಸೋಲಿನಿಂದ ತೀವ್ರ ಟೀಕೆಗಳಿಗೆ ಗುರಿಯಾಗಿದ್ದ ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ತಂಡ ಮಹಿಳಾ ಪ್ರೀಮಿಯರ್ ಲೀಗ್‌ನಲ್ಲಿ (WPL) ಮೊದಲ ಗೆಲುವು ದಾಖಲಿಸಿದೆ.

    ಮುಂಬೈನ ಡಿವೈ ಪಾಟೀಲ್ ಕ್ರೀಡಾಂಗಣದಲ್ಲಿ ಬುಧವಾರ ಯುಪಿ ವಾರಿಯರ್ಸ್ (UP Warriorz) ವಿರುದ್ಧ 5 ವಿಕೆಟ್‌ಗಳ ಭರ್ಜರಿ ಜಯ ಸಾಧಿಸಿ, ಗೆಲುವಿನ ನಗೆ ಬೀರಿದೆ. ಇದನ್ನೂ ಓದಿ: ಕೊನೆಯಲ್ಲಿ ಸಿಕ್ಸರ್‌, ಬೌಂಡರಿ – ಆರ್‌ಸಿಬಿ ಬಹುತೇಕ ಟೂರ್ನಿಯಿಂದ ಔಟ್‌

    ಪಂದ್ಯದ ಬಳಿಕ ಪೋಸ್ಟ್ ಪ್ರೆಸೆಂಟೇಷನ್‌ನಲ್ಲಿ ಮಾತನಾಡಿದ ಆರ್‌ಸಿಬಿ ಕ್ಯಾಪ್ಟನ್ ಸ್ಮೃತಿ ಮಂದಾನ (Smriti Mandhana), ಕೊಹ್ಲಿ (Virat Kohli) ಅಣ್ಣನ ಸಲಹೆಗಳು ಗೆಲುವಿಗೆ ತುಂಬಾ ಸಹಾಯವಾಯಿತು. ಪಂದ್ಯ ಆರಂಭಕ್ಕೂ ಮುನ್ನ ನಮ್ಮ ತಂಡದೊಂದಿಗೆ ಮಾತನಾಡಿದ್ದರು. ತಮ್ಮ 15 ವರ್ಷದ ಅನುಭವ ಹಂಚಿಕೊಳ್ಳುತ್ತಾ ನಮ್ಮಲ್ಲಿ ಉತ್ಸಾಹ ತುಂಬಿದರು. ಇದರೊಂದಿಗೆ ಆರ್‌ಸಿಬಿ ತಂಡದ ಪ್ರತಿಯೊಬ್ಬರ ಆಲ್‌ರೌಂಡ್ ಪ್ರದರ್ಶನವೂ ಗೆಲುವಿಗೆ ಕಾರಣವಾಯಿತು ಎಂದು ಹೇಳಿಕೊಂಡಿದ್ದಾರೆ.

    ಯುಪಿ ವಾರಿಯರ್ಸ್ ವಿರುದ್ಧ ನಡೆದ ಪಂದ್ಯದಲ್ಲಿ ಟಾಸ್ ಸೋತು ಮೊದಲು ಫೀಲ್ಡಿಂಗ್ ಆಯ್ದುಕೊಂಡ ಆರ್‌ಸಿಬಿ ತಂಡ 19.3 ಓವರ್‌ಗಳಲ್ಲಿ 135 ರನ್‌ಗಳಿಗೆ ಎದುರಾಳಿ ತಂಡವನ್ನು ಕಟ್ಟಿಹಾಕುವಲ್ಲಿ ಯಶಸ್ವಿಯಾಯಿತು. 136 ರನ್‌ಗಳ ಗುರಿ ಪಡೆದ ಆರ್‌ಸಿಬಿ, 18 ಓವರ್‌ಗಳಲ್ಲೇ 5 ವಿಕೆಟ್ ನಷ್ಟಕ್ಕೆ 136 ರನ್ ಗಳಿಸಿ ಗೆಲುವು ಸಾಧಿಸಿತು. ಕನಿಕಾ ಅಹುಜಾ 46 ರನ್, ರಿಚಾ ಘೋಷ್ 31 ರನ್ ಹಾಗೂ ಹೀದರ್ ನೈಟ್ 24 ರನ್ ಚಚ್ಚಿ ತಂಡದ ಗೆಲುವಿಗೆ ನೆರವಾದರು.

    ಆಲ್‌ರೌಂಡರ್ ಎಲ್ಲಿಸ್ ಪರ‍್ರಿ (Ellyse Perry) 4 ಓವರ್‌ಗಳಲ್ಲಿ ಕೇವಲ 16 ರನ್ ನೀಡಿ 3 ವಿಕೆಟ್ ಕಿತ್ತರು. ಸೋಫಿ ಡಿವೈನ್, ಸೋಭಾನಾ ಆಶಾ ತಲಾ 2 ವಿಕೆಟ್ ಪಡೆದರೆ, ಮೆಗ್ ಶೂಟ್ ಹಾಗೂ ಶ್ರೇಯಾಂಕ ಪಾಟೀಲ್ ಒಂದೊಂದು ವಿಕೆಟ್ ಕಿತ್ತರು. ಇದನ್ನೂ ಓದಿ: ಲಂಕಾ ವಿರುದ್ಧ ಕಿವೀಸ್‌ಗೆ ರೋಚಕ ಜಯ – 2ನೇ ಬಾರಿ WTC ಫೈನಲ್‌ಗೆ ಭಾರತ

    ಮಹಿಳಾ ಪ್ರೀಮಿಯರ್ ಲೀಗ್ ಚೊಚ್ಚಲ ಆವೃತ್ತಿಯಲ್ಲಿ ಆರ್‌ಸಿಬಿ ಮೊದಲ ಗೆಲುವಿನ ಬಳಿಕ ಅಭಿಮಾನಿಗಳು ಸಂತಸಗೊಂಡಿದ್ದಾರೆ. ನಾಯಕಿ ಸ್ಮೃತಿ ಮಂದಾನ ಮುಖದಲ್ಲೂ ಮಂದಹಾಸ ಮೂಡಿದೆ.