Tag: Wrestling Federation Of India

  • ಭಾರತದ ಕುಸ್ತಿ ಫೆಡರೇಶನ್ ಅಧ್ಯಕ್ಷಗಿರಿಗೆ ಬ್ರಿಜ್ ಭೂಷಣ್ ಬೆಂಬಲಿತ ಅಭ್ಯರ್ಥಿ ಆಯ್ಕೆ

    ಭಾರತದ ಕುಸ್ತಿ ಫೆಡರೇಶನ್ ಅಧ್ಯಕ್ಷಗಿರಿಗೆ ಬ್ರಿಜ್ ಭೂಷಣ್ ಬೆಂಬಲಿತ ಅಭ್ಯರ್ಥಿ ಆಯ್ಕೆ

    ನವದೆಹಲಿ: ಭಾರತದ ಕುಸ್ತಿ ಫೆಡರೇಶನ್ (Wrestling Federation Of India) ಅಧ್ಯಕ್ಷ ಸ್ಥಾನದ ಚುನಾವಣೆಯಲ್ಲಿ ಮಾಜಿ ಅಧ್ಯಕ್ಷ ಹಾಗೂ ಬಿಜೆಪಿ ಸಂಸದ ಬ್ರಿಜ್ ಭೂಷಣ್ ಶರಣ್ ಸಿಂಗ್ (Brij Bhushan Sharan Singh) ಅವರ ಬೆಂಬಲಿತ ಅಭ್ಯರ್ಥಿ ಸಂಜಯ್ ಸಿಂಗ್ (Sanjay Singh) ಗೆಲುವು ಸಾಧಿಸಿದ್ದಾರೆ.

    ಸಂಜಯ್ ಸಿಂಗ್ ಅವರು ಕಾಮನ್‍ವೆಲ್ತ್ ಗೇಮ್ಸ್ ಚಿನ್ನದ ಪದಕ ವಿಜೇತೆ ಅನಿತಾ ಶೆರಾನ್ ಅವರ ವಿರುದ್ಧ ಒಟ್ಟು 47 ಮತಗಳ ಪೈಕಿ 40 ಮತಗಳನ್ನು ಪಡೆದು ಗೆದ್ದಿದ್ದಾರೆ. ಈ ಮೂಲಕ ಅನಿತಾ ಶೆರಾನ್ ಸೋಲು ಕಂಡಿದ್ದಾರೆ. ಸಂಜಯ್ ಸಿಂಗ್ ಡಬ್ಲ್ಯುಎಫ್‍ಐನ ಮಾಜಿ ಉಪಾಧ್ಯಕ್ಷರಾಗಿದ್ದರು. ಇದನ್ನೂ ಓದಿ: ಸಂಸದರಿಗೇ ರಕ್ಷಣೆ ಇಲ್ಲ, ಬೇರೆಯವ್ರಿಗೆ ಹೇಗೆ ಎಂದು ಪ್ರಶ್ನಿಸಿದ ನಮ್ಮನ್ನೂ ಅಮಾನತು ಮಾಡಿದ್ರು: ಡಿಕೆ‌ ಸುರೇಶ್

    ಹಿಂದಿನ ಡಬ್ಲ್ಯುಎಫ್‍ಐ ಮುಖ್ಯಸ್ಥ ಬ್ರಿಜ್ ಭೂಷಣ್ ಶರಣ್ ಸಿಂಗ್ ವಿರುದ್ಧ ಲೈಂಗಿಕ ಕಿರುಕುಳದ ಆರೋಪಗಳು ಕೇಳಿಬಂದ ನಂತರ ಅವರ ವಿರುದ್ಧ ದೊಡ್ಡ ಪ್ರತಿಭಟನೆಗಳು ನಡೆದಿದ್ದವು. ಕುಸ್ತಿಪಟುಗಳಾದ ಬಜರಂಗ್ ಪುನಿಯಾ, ವಿನೇಶ್ ಫೋಗಟ್ ಮತ್ತು ಸಾಕ್ಷಿ ಮಲಿಕ್ ಅವರು ಬ್ರಿಜ್ ಭೂಷಣ್ ವಿರುದ್ಧ ಭಾರೀ ಪ್ರತಿಭಟನೆ ನಡೆಸಿದ್ದರು. ಈ ವೇಳೆ ಚುನಾವಣೆಯಲ್ಲಿ ಬ್ರಿಜ್ ಭೂಷಣ್ ಹಾಗೂ ಅವರ ಕುಟುಂಬಸ್ಥರಿಗೆ ಚುನಾವಣೆಯಲ್ಲಿ ಸ್ಪರ್ಧಿಸದಂತೆ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದ್ದರು.

    ಜೂನ್ 7 ರಂದು ಕ್ರೀಡಾ ಸಚಿವ ಅನುರಾಗ್ ಠಾಕೂರ್ ಅವರು ಬ್ರಿಜ್ ಭೂಷಣ್ ಅವರ ಕುಟುಂಬದ ಸದಸ್ಯರು ಅಥವಾ ಆಪ್ತರು ಯಾರೂ ಡಬ್ಲ್ಯುಎಫ್‍ಐ ಚುನಾವಣಾ ಕಣಕ್ಕೆ ಪ್ರವೇಶಿಸಲು ಅನುಮತಿಸುವುದಿಲ್ಲ ಎಂದು ಭರವಸೆ ನೀಡಿದಾಗ ಕುಸ್ತಿಪಟುಗಳು ತಮ್ಮ ಪ್ರತಿಭಟನೆಯನ್ನು ಅಧಿಕೃತವಾಗಿ ಹಿಂಪಡೆದಿದ್ದರು.

    ಸಂಜಯ್ ಸಿಂಗ್ ವಾರಣಾಸಿ ಮೂಲದವರಾಗಿದ್ದು, ಬ್ರಿಜ್ ಭೂಷಣ್ ಅವರ ನಿಕಟ ಸಹವರ್ತಿಯಾಗಿದ್ದಾರೆ. ಇದನ್ನೂ ಓದಿ: ಡಿ.ಕೆ.ಸುರೇಶ್‌ ಸೇರಿ ಮತ್ತೆ ಮೂವರು ಸಂಸದರು ಲೋಕಸಭೆಯಿಂದ ಅಮಾನತು

  • ಕುಸ್ತಿ ಫೆಡರೇಷನ್‌ ಚುನಾವಣೆ – ಹೈಕೋರ್ಟ್‌ ಆದೇಶಕ್ಕೆ ಸುಪ್ರೀಂ ತಡೆ

    ನವದೆಹಲಿ: ಭಾರತೀಯ ಕುಸ್ತಿ ಫೆಡರೇಶನ್ (WFI) ಚುನಾವಣೆಯನ್ನು ತಡೆಹಿಡಿದಿದ್ದ ಗುವಾಹಟಿ ಹೈಕೋರ್ಟ್‌ನ (Gauhati High Court) ಆದೇಶಕ್ಕೆ ಸುಪ್ರೀಂ ಕೋರ್ಟ್ (Supreme Court) ಮಂಗಳವಾರ ತಡೆ ನೀಡಿದೆ.

    ನ್ಯಾಯಮೂರ್ತಿಗಳಾದ ಅನಿರುದ್ಧ ಬೋಸ್ ಮತ್ತು ಎಸ್‌.ವಿ ಭಟ್ಟಿ ಅವರಿದ್ದ ಪೀಠವು, ಜೂನ್ 25 ರಂದು ಹೈಕೋರ್ಟ್‌ನ ಆದೇಶವನ್ನು ಪ್ರಶ್ನಿಸಿ ಸಲ್ಲಿಸಲಾಗಿದ್ದ ಮೇಲ್ಮನವಿ ವಿಚಾರಣೆ ನಡೆಸಿತು. ಈ ವೇಳೆ ಕೇಂದ್ರ ಕ್ರೀಡಾ ಸಚಿವಾಲಯ, ಕುಸ್ತಿ ಫೆಡರೇಶನ್ ಆಫ್ ಇಂಡಿಯಾ, ಅಸ್ಸಾಂ ಕುಸ್ತಿ ಅಸೋಸಿಯೇಷನ್ ಮತ್ತು ಇತರರಿಗೆ ನೋಟಿಸ್ ಜಾರಿ ಮಾಡಿದೆ. ಇದನ್ನೂ ಓದಿ: ಮಾನಹಾನಿ ಪ್ರಕರಣದಲ್ಲಿ ರಾಹುಲ್ ಗಾಂಧಿಗೆ ಶಿಕ್ಷೆ – ಶುಕ್ರವಾರ ಅರ್ಜಿ ವಿಚಾರಣೆ ನಡೆಸಲಿರುವ ಸುಪ್ರೀಂಕೋರ್ಟ್

    ಹೈಕೋರ್ಟ್‌ ಆದೇಶಕ್ಕೆ ತಡೆ ನೀಡಿದ ಸುಪ್ರೀಂ ಕೋರ್ಟ್‌ ನೋಟಿಸ್‌ ಜಾರಿ ಮಾಡಿದೆ. ಭಾರತ ಕುಸ್ತಿ ಫೆಡರೇಷನ್‌ನ ಚುನಾವಣೆಯಲ್ಲಿ ಪಾಲ್ಗೊಳ್ಳಲು ಅವಕಾಶ ನೀಡುವಂತೆ ಕೋರಿ ಅಸ್ಸಾಂ ಕುಸ್ತಿ ಸಂಸ್ಥೆ ಸಲ್ಲಿಸಿರುವ ಅರ್ಜಿಯ ವಿಚಾರಣೆಯನ್ನು ಗುವಾಹಟಿ ಹೈಕೋರ್ಟ್‌ ಜು.28 ಕ್ಕೆ ಮುಂದೂಡಿತ್ತು.

    ಜು.11 ರಂದು ಡಬ್ಲ್ಯೂಎಫ್‌ಐ ಚುನಾವಣೆ ನಡೆಸಬೇಕಿತ್ತು. ಆದರೆ ಅಸ್ಸಾಂ ಸಂಸ್ಥೆ ಅರ್ಜಿ ಸಲ್ಲಿಸಿದ ಹಿನ್ನೆಲೆಯಲ್ಲಿ ಚುನಾವಣೆ ಪ್ರಕ್ರಿಯೆಗೆ ತಡೆ ನೀಡಲಾಗಿತ್ತು. ಇದನ್ನೂ ಓದಿ: ಮೋದಿ, ಯೋಗಿಯೇ ಟಾರ್ಗೆಟ್- 26/11ರಂತೆ ಮತ್ತೊಂದು ದಾಳಿಯ ಬೆದರಿಕೆ ಕರೆ

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ಕುಸ್ತಿಪಟುಗಳಿಗೆ ಕಿರುಕುಳ ಆರೋಪ – ಬ್ರಿಜ್ ಭೂಷಣ್‍ಗೆ ಸಮನ್ಸ್ ಜಾರಿಗೊಳಿಸಿದ ಕೋರ್ಟ್

    ಕುಸ್ತಿಪಟುಗಳಿಗೆ ಕಿರುಕುಳ ಆರೋಪ – ಬ್ರಿಜ್ ಭೂಷಣ್‍ಗೆ ಸಮನ್ಸ್ ಜಾರಿಗೊಳಿಸಿದ ಕೋರ್ಟ್

    ನವದೆಹಲಿ: ಲೈಂಗಿಕ ಕಿರುಕುಳ ಆರೋಪ ಎದುರಿಸುತ್ತಿರುವ ಕುಸ್ತಿ ಫೆಡರೇಷನ್ (Wrestling Federation Of India) ಮುಖ್ಯಸ್ಥ ಹಾಗೂ ಬಿಜೆಪಿ ಸಂಸದ ಬ್ರಿಜ್ ಭೂಷಣ್ ಶರಣ್ ಸಿಂಗ್ (Brij Bhushan Sharan Singh) ಅವರಿಗೆ ದೆಹಲಿಯ ರೋಸ್ ಅವೆನ್ಯೂ ಕೋರ್ಟ್ (Delhi’s Rose Avenue court) ಸಮನ್ಸ್ ಜಾರಿ ಮಾಡಿದೆ.

    ಸಿಂಗ್ ಮತ್ತು ಡಬ್ಲ್ಯುಎಫ್‍ಐನ ಅಮಾನತುಗೊಂಡ ಸಹಾಯಕ ಕಾರ್ಯದರ್ಶಿ ತೋಮರ್ ಅವರನ್ನು ಜುಲೈ 18 ರಂದು ಕೋರ್ಟ್‍ಗೆ ಹಾಜರಾಗುವಂತೆ ಸಮನ್ಸ್‌ನಲ್ಲಿ ಸೂಚಿಸಲಾಗಿದೆ. ಸಿಂಗ್ ವಿರುದ್ಧ ಮುಂದುವರಿಯಲು ಸಾಕಷ್ಟು ಸಾಕ್ಷ್ಯಾಧಾರಗಳಿವೆ ಎಂದು ನ್ಯಾಯಾಲಯ ಅಭಿಪ್ರಾಯಪಟ್ಟಿದೆ. ಹೆಚ್ಚುವರಿ ಮುಖ್ಯ ಮೆಟ್ರೋಪಾಲಿಟನ್ ಮ್ಯಾಜಿಸ್ಟ್ರೇಟ್ ಹರ್ಜೀತ್ ಸಿಂಗ್ ಜಸ್ಪಾಲ್ ಅವರಿದ್ದ ಪೀಠ ಈ ಸಮನ್ಸ್ ಜಾರಿಗೊಳಿಸಿದೆ. ಇದನ್ನೂ ಓದಿ: ರಸ್ತೆಯ ಮೇಲಲ್ಲ, ಕೋರ್ಟ್‍ನಲ್ಲಿ ಹೋರಾಟ ಮುಂದುವರೆಯಲಿದೆ – ಸಿಂಗ್‍ಗೆ ಕುಸ್ತಿಪಟುಗಳ ಎಚ್ಚರಿಕೆ

    ಬ್ರಿಜ್ ಭೂಷಣ್ ವಿರುದ್ಧ ದೆಹಲಿ ಪೊಲೀಸರು ಜೂನ್ 15 ರಂದು ಲೈಂಗಿಕ ಕಿರುಕುಳ, ಕ್ರಿಮಿನಲ್ ಬೆದರಿಕೆ ಆರೋಪದಲ್ಲಿ ಚಾರ್ಜ್‍ಶೀಟ್ ಸಲ್ಲಿಸಿದ್ದರು. ಈ ಬಗ್ಗೆ ಹಲವಾರು ಮಹಿಳಾ ಕುಸ್ತಿಪಟುಗಳಿಂದ (wrestlers) ಕಿರುಕುಳದ ದೂರುಗಳ ಬಂದಿದ್ದವು. ಅಪ್ರಾಪ್ತರ ಮೇಲೂ ದೌರ್ಜನ್ಯ ಎಸಗಲಾಗಿದೆ ಎಂಬ ಆರೋಪದ ಮೇಲೆ ಸಿಂಗ್ ವಿರುದ್ಧ ಲೈಂಗಿಕ ಅಪರಾಧಗಳಿಂದ ಮಕ್ಕಳ ರಕ್ಷಣೆ (POCSO) ಕಾಯ್ದೆಯಡಿ ಪ್ರಕರಣ ದಾಖಲಿಸಲಾಗಿದೆ.

    ಬ್ರಿಜ್ ಭೂಷಣ್ ಬಂಧಿಸುವಂತೆ ತಿಂಗಳುಗಳ ಕಾಲ ಕುಸ್ತಿಪಟುಗಳು ದೆಹಲಿಯ ಜಂತರ್ ಮಂತರ್‍ನಲ್ಲಿ ಪ್ರತಿಭಟನೆ ನಡೆಸಿದ್ದರು. ಇದಲ್ಲದೇ ಈ ವಿಚಾರ ಅಂತರರಾಷ್ಟ್ರೀಯ ಮಟ್ಟದಲ್ಲಿ ಚರ್ಚೆ ಸಹ ಆಗಿತ್ತು. ಬ್ರಿಜ್ ಭೂಷಣ್ ಶರಣ್ ಸಿಂಗ್ ಅವರು ತಮ್ಮ ಮೇಲಿನ ಎಲ್ಲಾ ಆರೋಪಗಳನ್ನು ನಿರಾಕರಿಸಿದ್ದಾರೆ. ಇದನ್ನೂ ಓದಿ: 3.27 ಲಕ್ಷ ಕೋಟಿ ರೂ. ಬಜೆಟ್‌ನಲ್ಲಿ 4 ಗ್ಯಾರಂಟಿಗೆ ಬೇಕು 57,910 ಕೋಟಿ ರೂ – ಯಾವುದಕ್ಕೆ ಎಷ್ಟು?

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]