Tag: XE

  • 5 ರಾಜ್ಯಗಳಲ್ಲಿ ಕೋವಿಡ್ ಹೆಚ್ಚಳ- ಭಾರತಕ್ಕೆ 4ನೇ ಅಲೆಯ ಮುನ್ಸೂಚನೆ

    ನವದೆಹಲಿ: ಈಗಾಗಲೇ ಚೀನಾ ದೇಶದ ಶಾಂಘೈನಗರದಲ್ಲಿ ಕೋವಿಡ್ ಹೆಚ್ಚಳವಾಗಿದ್ದು ಹಿರಿಯ ನಾಗರಿಕರ ಸರಣಿ ಸಾವುಗಳು ಸಂಭವಿಸುತ್ತಿದೆ. ಕೊರೊನಾ ನಿಯಂತ್ರಿಸಲು ಚೀನಾ ಸರ್ಕಾರವೂ ಕಟ್ಟುನಿಟ್ಟಿನ ಕ್ರಮಗಳನ್ನು ಜಾರಿಗೊಳಿಸಿದೆ. ಇದೀಗ ಭಾರತದಲ್ಲೇ 5 ರಾಜ್ಯಗಳಲ್ಲಿ ಕೋವಿಡ್ ಪ್ರಕರಣಗಳು ಏರಿಕೆಯಾಗಿರುವುದು ನಾಲ್ಕನೇ ಅಲೆಯ ಮುನ್ಸೂಚನೆ ನೀಡಿದಂತಾಗಿದೆ. ‌

    CORONA CHINA

    ಚೀನಾ, ಅಮೆರಿಕ ಮತ್ತು ಯೂರೋಪ್‌ನ ಹಲವು ರಾಷ್ಟ್ರಗಳಲ್ಲಿ ಕೋವಿಡ್ ಪ್ರಕರಣಗಳಲ್ಲಿ ಏರಿಕೆಯಾಗಿದೆ. ಕೊರೊನಾ ವೈರಸ್‌ನ ರೂಪಾಂತರ ತಳಿಯಾದ ಓಮೈಕ್ರಾನ್‌ನ ಉಪ ತಳಿಯಾದ XE ತಳಿಯೂ ಸಹ ಭಾರತದಲ್ಲಿ 2 ಪ್ರಕರಣಗಳು ವರದಿಯಾಗಿರುವುದು ಆತಂಕಕ್ಕೆ ಕಾರಣವಾಗಿದೆ. ಹಾಗಾಗಿ ಭಾರತದ ಕೇಂದ್ರ ಸರ್ಕಾರವು ಕಟ್ಟುನಿಟ್ಟಿನ ಕ್ರಮಗಳನ್ನು ಕೈಗೊಳ್ಳುವಂತೆ ಸೂಚಿಸಿದೆ. ಇದನ್ನೂ ಓದಿ: XE ರೂಪಾಂತರಿ ಮಾರಣಾಂತಿಕವಲ್ಲ: ಮಹಾರಾಷ್ಟ್ರ ಸಚಿವ

    ದೇಶದ ಕೇರಳ, ಹರಿಯಾಣ, ಮಹಾರಾಷ್ಟ್ರ ದೆಹಲಿ ಹಾಗೂ ಮಿಜೋರಾಂಗಳಲ್ಲಿ ಕೋವಿಡ್ ಪ್ರಕರಣಗಳು ಗಣನೀಯವಾಗಿ ಏರಿಕೆಯಾಗುತ್ತಿದ್ದು, ಕೋವಿಡ್ ಹರಡುವಿಕೆಯನ್ನು ನಿಯಂತ್ರಿಸಲು ತ್ವರಿತ ಕ್ರಮಗಳನ್ನು ಕೈಗೊಳ್ಳುವಂತೆ ಕೇಂದ್ರ ಸರ್ಕಾರವು ಆಯಾ ರಾಜ್ಯ ಸರ್ಕಾರಗಳಿಗೆ ಸೂಚಿಸಿ ಪತ್ರ ಬರೆದಿದೆ. ಕೋವಿಡ್ ಹೆಚ್ಚಳದ ಬಗ್ಗೆ ನಿಗಾ ವಹಿಸಿ ಹೆಚ್ಚು ಪ್ರಕರಣಗಳು ವರದಿಯಾಗುತ್ತಿರುವ ಪ್ರದೇಶಗಳಲ್ಲಿ ನಿಯಂತ್ರಣಾ ಕ್ರಮ ಕೈಗೊಳ್ಳಬೇಕು ಎಂದೂ ಕೇಂದ್ರ ಆರೋಗ್ಯ ಇಲಾಖೆ ಕಾರ್ಯದರ್ಶಿ ರಾಜೇಶ್ ಭೂಷಣ್ ಪತ್ರದಲ್ಲಿ ಉಲ್ಲೇಖಿಸಿದ್ದಾರೆ. ಇದನ್ನೂ ಓದಿ:  26 ಮಿಲಿಯನ್ ಜನರ ಕೋವಿಡ್ ಪರೀಕ್ಷೆಗೆ ಸಾವಿರಾರು ಮಿಲಿಟರಿ, ವೈದ್ಯರನ್ನು ಶಾಂಘೈಗೆ ಕಳುಹಿಸಿದ ಚೀನಾ

    covid

    ಭಾರತದಲ್ಲಿ ವರದಿಯಾದ ಒಟ್ಟು ಹೊಸ ಪ್ರಕರಣಗಳಲ್ಲಿ ಶೇ 31.8ರಷ್ಟು. ಕೋವಿಡ್ ಪಾಸಿಟಿವಿಟಿ ದರ ಅಲ್ಲಿ ಶೇ.13.45 ರಿಂದ 15.53ಕ್ಕೆ ಹೆಚ್ಚಾಗಿದೆ. ಅಲ್ಲದೆ ಕಳೆದ ವಾರ ಕೇರಳದಲ್ಲಿ 2321 ಹೊಸ ಪ್ರಕರಣಗಳು ವರದಿಯಾಗಿವೆ. ಏ.1ಕ್ಕೆ ಅಂತ್ಯಗೊAಡ ಒಂದು ವಾರ ದೆಹಲಿಯಲ್ಲಿ 724ಪ್ರಕರಣಗಳು ವರದಿಯಾಗಿದ್ದವು. ಆದರೆ ಏಪ್ರಿಲ್ 8ರ ಹೊತ್ತಿಗೆ 826 ಹೊಸ ಪ್ರಕರಣಗಳು ವರದಿಯಾಗಿವೆ. ಪಾಸಿಟಿವಿಟಿ ದರದಲ್ಲಿ ಶೇ 0.51 ರಿಂದ 1.25ರಷ್ಟು ಹೆಚ್ಚಾಗಿದೆ ಎಂದು ಪತ್ರದಲ್ಲಿ ಹೇಳಲಾಗಿದೆ.

    ಭಾನುವಾರವೂ ಸಹ ಭಾರತದಾದ್ಯಂತ 1,054 ಕೊರೊನಾ ಸೋಂಕು ಪ್ರಕರಣಗಳು ದೃಢಪಟ್ಟಿದ್ದು, 29 ಮಂದಿ ಮೃತಪಟ್ಟಿದ್ದಾರೆ ಎಂದು ಆರೋಗ್ಯ ಇಲಾಖೆ ಮಾಹಿತಿ ನೀಡಿದೆ.

  • ಪ್ರಧಾನಿ ಮೋದಿ ತವರಿಗೇ ಲಗ್ಗೆಯಿಟ್ಟ XE ಕೊರೊನಾ ರೂಪಾಂತರಿ

    ಪ್ರಧಾನಿ ಮೋದಿ ತವರಿಗೇ ಲಗ್ಗೆಯಿಟ್ಟ XE ಕೊರೊನಾ ರೂಪಾಂತರಿ

    ಗಾಂಧಿನಗರ (ಗುಜರಾತ್): ಕೊರೊನಾ ರೂಪಾಂತರಿ ಓಮಿಕ್ರಾನ್‌ಗಿಂತಲೂ ವೇಗವಾಗಿ ಹರಡುವ XE ರೂಪಾಂತರವು ಪ್ರಧಾನಿ ನರೇಂದ್ರಮೋದಿ ತವರಾದ ಗುಜರಾತ್‌ಗೆ ಲಗ್ಗೆಯಿಟ್ಟಿದೆ.

    ಮುಂಬೈನಲ್ಲಿ ಈ ಹೊಸ ತಳಿ ಪತ್ತೆಯಾದ ಕೆಲವೇ ದಿನಗಳಲ್ಲಿ ಗುಜರಾತ್‌ಗೂ ಕಾಲಿಟ್ಟಿದೆ ಎಂದು ಮೂಲಗಳು ತಿಳಿಸಿವೆ. XE ತಳಿ ಪತ್ತೆಯಾದ ವ್ಯಕ್ತಿಯಿಂದ ಸಂಗ್ರಹಿಸಿದ ಮಾದರಿಯನ್ನು ಜೀನೋಮ್ ಸೀಕ್ವೆನ್ಸಿಂಗ್ ಪರೀಕ್ಷಾ ಕೇಂದ್ರಕ್ಕೆ ಕಳುಹಿಸಲಾಗಿದ್ದು, ವ್ಯಕ್ತಿಯ ಪ್ರಾಥಮಿಕ ಹಾಗೂ ದ್ವಿತೀಯ ಸಂಪರ್ಕದಲ್ಲಿ ಯರ‍್ಯಾರು ಇದ್ದಾರೆ ಎಂಬುದನ್ನು ಪತ್ತೆಹಚ್ಚಲಾಗುತ್ತಿದೆ ಎಂದು ಸುದ್ದಿಸಂಸ್ಥೆಯೊಂದು ವರದಿ ಮಾಡಿದೆ. ಇದನ್ನೂ ಓದಿ: ದಂಪತಿ ಒಟ್ಟಿಗೆ ಮಲಗುವಂತಿಲ್ಲ, ಹಗ್‌-ಕಿಸ್‌ ಮಾಡುವಂತಿಲ್ಲ; ಕೊರೊನಾ ಟಫ್‌ ರೂಲ್ಸ್‌

    Coronavirus

    ಬೃಹತ್‌ ಮುಂಬೈ ಮುನ್ಸಿಪಲ್ ಕಾರ್ಪೊರೇಷನ್ ಈಚೆಗಷ್ಟೇ 53 ವರ್ಷದ ಮಹಿಳೆಯೊಬ್ಬರಲ್ಲಿ XE ತಳಿ ಇರುವುದಾಗಿ ವರದಿ ಮಾಡಿತ್ತು. ಆದರೆ, ಮಹಾರಾಷ್ಟ್ರದ ಆರೋಗ್ಯ ಸಚಿವ ರಾಜೇಶ್ ಟೋಪೆ ಅವರು ಒಂದು ದಿನದ ನಂತರ ಆರೋಗ್ಯ ಇಲಾಖೆ ಈ ಬಗ್ಗೆ ದೃಢಪಡಿಸಿಲ್ಲ. ವರದಿ ಬಂದ ನಂತರ ಈ ಬಗ್ಗೆ ಮಾತನಾಡುತ್ತೇವೆ ಎಂದು ಸ್ಪಷ್ಟನೆ ನೀಡಿದ್ದರು. ಇದಾದ ಎರಡೇ ದಿನಗಳಲ್ಲಿ ಗುಜರಾತ್‌ನಲ್ಲಿ ಪತ್ತೆಯಾಗಿರುವುದಾಗಿ ಆರೋಗ್ಯ ಇಲಾಖೆಯ ಮೂಲಗಳು ತಿಳಿವೆ ಎನ್ನಲಾಗಿದೆ.

  • ಭಾರತದಲ್ಲಿ ಕಳೆದ 24 ಗಂಟೆಯಲ್ಲಿ 1,033 ಪಾಸಿಟಿವ್, 43 ಸಾವು

    ಭಾರತದಲ್ಲಿ ಕಳೆದ 24 ಗಂಟೆಯಲ್ಲಿ 1,033 ಪಾಸಿಟಿವ್, 43 ಸಾವು

    ನವದೆಹಲಿ: ಗುರುವಾರ ಆರೋಗ್ಯ ಸಚಿವಾಲಯ ಬಿಡುಗಡೆ ಮಾಡಿದ ಅಂಕಿಅಂಶಗಳ ಪ್ರಕಾರ, ಭಾರತದಲ್ಲಿ ಕಳೆದ 24 ಗಂಟೆಗಳಲ್ಲಿ 1,033 ಮಂದಿಗೆ ಕೊರೊನಾ ಬಂದರೆ 43 ಮಂದಿ ಮೃತಪಟ್ಟಿದ್ದಾರೆ.

    ಇದುವರೆಗೆ ಕೋವಿಡ್‍ನಿಂದಾಗಿ ಭಾರತದಲ್ಲಿ ಒಟ್ಟು 5,21,530 ಮಂದಿ ಮೃತಪಟ್ಟಿದ್ದಾರೆ. ಸಕ್ರಿಯ ಪ್ರಕರಣಗಳು 11,639 ರಷ್ಟಿದೆ. ಪಾಸಿಟಿವಿಟಿ ದರ ಶೇ.0.21 ಇದೆ. ಕಳೆದ ವಾರ ಶೇ.0.22 ಇತ್ತು. ಇಲ್ಲಿಯವರೆಗೆ 4,24,98,789 ಮಂದಿ ಗುಣಮುಖರಾಗಿದ್ದಾರೆ. ಇದನ್ನೂ ಓದಿ: ವಿಎಲ್‍ಸಿ ಮೀಡಿಯಾ ಪ್ಲೇಯರ್ ಬಳಸಿ ಚೀನಾ ಸೈಬರ್ ದಾಳಿ

    ಆರೋಗ್ಯ ಸಚಿವಾಲಯ ಹೊರಡಿಸಿದ ಅಂಕಿಅಂಶಗಳ ಪ್ರಕಾರ, ಇದುವರೆಗೆ 79.25 ಕೋಟಿ ಕೋವಿಡ್-19 ಪರೀಕ್ಷೆಗಳನ್ನು ಮಾಡಲಾಗಿದೆ. ಕಳೆದ 24 ಗಂಟೆಗಳಲ್ಲಿ ಒಟ್ಟು 4,24,98,789 ಮಂದಿಗೆ ಪರೀಕ್ಷೆ ಮಾಡಲಾಗಿದೆ ಎಂದು ವರದಿಯಾಗಿದೆ. ಇದನ್ನೂ ಓದಿ: ‘ಬಿಗ್ ಬ್ರದರ್’ ಎಂದು ಭಾರತ, ಮೋದಿಗೆ ಧನ್ಯವಾದ ಹೇಳಿದ ಲಂಕಾ ಕ್ರಿಕೆಟಿಗ ಜಯಸೂರ್ಯ

    COVID-19

    ಮುಂಬೈನಲ್ಲಿ ಕೋವಿಡ್-19ನ `ಎಕ್ಸ್‌ಇ` ರೂಪಾಂತರದ ಮೊದಲ ಪ್ರಕರಣ ಪತ್ತೆಯಾಗಿದೆ ಎಂದು ಗ್ರೇಟರ್ ಮುಂಬೈ ಮುನ್ಸಿಪಲ್ ಕಾರ್ಪೊರೇಷನ್ ಬುಧವಾರ ಹೇಳಿದೆ. ಆದಾಗ್ಯೂ, ಕೇಂದ್ರ ಆರೋಗ್ಯ ಸಚಿವಾಲಯವು ದೇಶದಲ್ಲಿ ಮೊದಲ ‘ಎಕ್ಸ್‍ಇ’ ರೂಪಾಂತರದ ಪತ್ತೆಯನ್ನು ಇನ್ನೂ ಖಚಿತಪಡಿಸಿಲ್ಲ.

  • ಭಾರತಕ್ಕೆ ಕಾಲಿಟ್ಟ ಹೊಸ ರೂಪಾಂತರಿ ʼXEʼ – ಮುಂಬೈನಲ್ಲಿ ಮೊದಲ ಪ್ರಕರಣ ಪತ್ತೆ

    ಭಾರತಕ್ಕೆ ಕಾಲಿಟ್ಟ ಹೊಸ ರೂಪಾಂತರಿ ʼXEʼ – ಮುಂಬೈನಲ್ಲಿ ಮೊದಲ ಪ್ರಕರಣ ಪತ್ತೆ

    ಮುಂಬೈ: ಕೋವಿಡ್‌-19 ಹೊಸ ರೂಪಾಂತರಿ ‘ಎಕ್ಸ್‌ಇʼ (XE) ಭಾರತದ ಮೊದಲ ಪ್ರಕರಣ ಮುಂಬೈನಲ್ಲಿ ಪತ್ತೆಯಾಗಿದೆ.

    ವೈರಸ್‌ನ ಹೊಸ ರೂಪಾಂತರಿ ಕಂಡುಬಂದಿರುವ ರೋಗಿಗೆ ಯಾವುದೇ ರೋಗಲಕ್ಷಣಗಳಿಲ್ಲ ಎಂದು ಬೃಹನ್‌ಮುಂಬೈ ಮುನಿಸಿಪಲ್‌ ಕಾರ್ಪೊರೇಷನ್‌ (ಬಿಎಂಸಿ) ತಿಳಿಸಿದೆ. ಇದನ್ನೂ ಓದಿ: ಮತ್ತೆ ಶಾಕ್‌ ಕೊಟ್ಟ ಕೋವಿಡ್-‌ ಇಂಗ್ಲೆಂಡ್‌ನಲ್ಲಿ ʻXEʼ ಹೊಸ ರೂಪಾಂತರಿ ಪತ್ತೆ

    ಹೊಸ ವರ್ಷದ ಆರಂಭದಲ್ಲಿ ರೂಪಾಂತರಿ ʼಎಕ್ಸ್‌ಇʼ ತಳಿ ವಿಶ್ವದಲ್ಲೇ ಪ್ರಥಮ ಬಾರಿಗೆ ಇಂಗ್ಲೆಂಡ್‌ನಲ್ಲಿ ವರದಿಯಾಗಿತ್ತು. ಈ ದೇಶದಲ್ಲಿ ಇದುವರೆಗೆ 637 ಪ್ರಕರಣಗಳು ವರದಿಯಾಗಿವೆ ಎಂದು ಬ್ರಿಟನ್‌ ಆರೋಗ್ಯ ಸಂಸ್ಥೆ ಮಾಹಿತಿ ನೀಡಿದೆ.

    ಇದು ಓಮಿಕ್ರಾನ್‌ ಬಿಎ.1, ಬಿಎ.2ನ ಮರುಸಂಯೋಜಕವಾಗಿದೆ. ಈ ಹೊಸ ರೂಪಾಂತರಿ, ಓಮಿಕ್ರಾನ್‌ಗಿಂತಲೂ ವೇಗವಾಗಿ ಹರಡಬಲ್ಲದು ಎಂದು ಡಬ್ಲ್ಯೂಎಚ್‌ಒ ಮಾಹಿತಿ ನೀಡಿದೆ. ಇದನ್ನೂ ಓದಿ: ದೇಶದಲ್ಲಿ ಇಬ್ಬಗೆಯ ರಾಜಕೀಯ: ಪ್ರತಿ ಪಕ್ಷಗಳ ವಿರುದ್ಧ ಮೋದಿ ಕಿಡಿ

    ಹೊಸ ತಳಿಯು ರೋಗದ ಗುಣಲಕ್ಷಣ, ತೀವ್ರತೆ ಮತ್ತು ಪ್ರಸರಣದಲ್ಲಿ ಓಮಿಕ್ರಾನ್‌ಗೆ ಹೋಲಿಸಿದರೆ ಸಾಕಷ್ಟು ವ್ಯತ್ಯಾಸಗಳಿವೆ ಎಂದು ತಜ್ಞರು ಸ್ಪಷ್ಟಪಡಿಸಿದ್ದಾರೆ.

  • ಮತ್ತೆ ಶಾಕ್‌ ಕೊಟ್ಟ ಕೋವಿಡ್-‌ ಇಂಗ್ಲೆಂಡ್‌ನಲ್ಲಿ ʻXEʼ ಹೊಸ ರೂಪಾಂತರಿ ಪತ್ತೆ

    ಜಿನೆವಾ: ಕೋವಿಡ್-‌19 ರೂಪಾಂತರಿಗಳಿಂದ ಕಂಗೆಟ್ಟಿರುವ ವಿಶ್ವದ ಜನತೆಗೆ ಈಗ ಮತ್ತೊಂದು ಶಾಕ್‌ ಎದುರಾಗಿದೆ. ಇಂಗ್ಲೆಂಡ್‌ನಲ್ಲಿ ʼಎಕ್ಸ್‌ಇʼ (XE) ಹೊಸ ರೂಪಾಂತರಿ ದೃಢಪಟ್ಟಿದೆ ಎಂದು ವಿಶ್ವ ಆರೋಗ್ಯ ಸಂಸ್ಥೆ (WHO) ತಿಳಿಸಿದೆ.

    ಯುಕೆ (ಯುನೈಟೆಡ್‌ ಕಿಂಗ್ಡಮ್)‌ಯಲ್ಲಿ ಕೊರೊನಾ ರೂಪಾಂತರಿ ʼಎಕ್ಸ್‌ಇʼ ಪತ್ತೆಯಾಗಿದೆ. ಇದು ಓಮಿಕ್ರಾನ್‌ ಬಿಎ.1, ಬಿಎ.2ನ ಮರುಸಂಯೋಜಕವಾಗಿದೆ. ಈ ಹೊಸ ರೂಪಾಂತರಿ, ಓಮಿಕ್ರಾನ್‌ಗಿಂತಲೂ ವೇಗವಾಗಿ ಹರಡಬಲ್ಲದು ಎಂದು ಡಬ್ಲ್ಯೂಎಚ್‌ಒ ಮಾಹಿತಿ ನೀಡಿದೆ. ಇದನ್ನೂ ಓದಿ: ರಷ್ಯಾ ರಾಸಾಯನಿಕ ಶಸ್ತ್ರಾಸ್ತ್ರ ಬಳಸಿದರೆ, ಉಕ್ರೇನ್‌ಗೆ ನೆರವಾಗುತ್ತೇವೆ: ಅಮೆರಿಕ

    ಹೊಸ ರೂಪಾಂತರಿ ಎಕ್ಸ್‌ಇ, ಇಂಗ್ಲೆಂಡ್‌ನಲ್ಲಿ ಜ.19ರಂದು ಮೊದಲ ಬಾರಿಗೆ ದೃಢಪಟ್ಟಿದೆ. ದೇಶದಲ್ಲಿ ಈವರೆಗೆ 637 ಪ್ರಕರಣಗಳು ದೃಢಪಟ್ಟಿವೆ ಎಂದು ತಜ್ಞರು ತಿಳಿಸಿದ್ದಾರೆ.

    ಹೊಸ ತಳಿಯು ರೋಗದ ಗುಣಲಕ್ಷಣ, ತೀವ್ರತೆ ಮತ್ತು ಪ್ರಸರಣದಲ್ಲಿ ಓಮಿಕ್ರಾನ್‌ಗೆ ಹೋಲಿಸಿದರೆ ಸಾಕಷ್ಟು ವ್ಯತ್ಯಾಸಗಳಿವೆ ಎಂದು ತಜ್ಞರು ಸ್ಪಷ್ಟಪಡಿಸಿದ್ದಾರೆ. ಇದನ್ನೂ ಓದಿ: ನೇಪಾಳದಲ್ಲಿ ರೈಲ್ವೇ ಜಾಲ, ರುಪೇಗೆ ಮೋದಿಯಿಂದ ಚಾಲನೆ