Tag: y security

  • ಕೇಜ್ರಿವಾಲ್‌ ವಿರುದ್ಧ ಹೇಳಿಕೆ – ಎಎಪಿ ಮಾಜಿ ನಾಯಕನಿಗೆ ʼವೈʼ ಶ್ರೇಣಿ ಭದ್ರತೆ

    ಕೇಜ್ರಿವಾಲ್‌ ವಿರುದ್ಧ ಹೇಳಿಕೆ – ಎಎಪಿ ಮಾಜಿ ನಾಯಕನಿಗೆ ʼವೈʼ ಶ್ರೇಣಿ ಭದ್ರತೆ

    ನವದೆಹಲಿ: ದೆಹಲಿ ಮುಖ್ಯಮಂತ್ರಿ ಅರವಿಂದ್‌ ಕೇಜ್ರಿವಾಲ್‌ ವಿರುದ್ಧ ಪ್ರತ್ಯೇಕತಾವಾದಿ ಎಂದು ಹೇಳಿಕೆ ನೀಡಿದ್ದ ಆಮ್‌ ಆದ್ಮಿ ಪಕ್ಷದ (ಎಎಪಿ) ಕುಮಾರ್‌ ವಿಶ್ವಾಸ್‌ ಅವರಿಗೆ ʼವೈʼ ಶ್ರೇಣಿ ಭದ್ರತೆ ನೀಡಲು ಕೇಂದ್ರ ಸರ್ಕಾರ ನಿರ್ಧರಿಸಿದೆ.

    ಎಎಪಿ ಸಂಚಾಲಕ ಮತ್ತು ದೆಹಲಿ ಮುಖ್ಯಮಂತ್ರಿ ಅರವಿಂದ್‌ ಕೇಜ್ರಿವಾಲ್‌ ಅವರ ವಿರುದ್ಧ ಆರೋಪ ಮಾಡಿರುವ ಹಿನ್ನೆಲೆಯಲ್ಲಿ ಕೇಂದ್ರ ಸರ್ಕಾರವು ವಿಶ್ವಾಸ್‌ ಅವರಿಗೆ ಬೆದರಿಕೆ ಇದೆ ಎಂದು ಭದ್ರತೆ ಮತ್ತು ಗುಪ್ತಚರ ಮಾಹಿತಿ ಆಧರಿಸಿ ಭದ್ರತೆ ಒದಗಿಸಲು ಮುಂದಾಗಿದೆ. ಇದನ್ನೂ ಓದಿ: ಕೇಜ್ರಿವಾಲ್‍ಗೆ ಖಾಲಿಸ್ತಾನ್ ಉಗ್ರರ ನಂಟು – ತನಿಖೆ ನಡೆಸುತ್ತೇವೆ ಎಂದ ಅಮಿತ್ ಶಾ

    ಪರಿಶೀಲನೆಯ ನಂತರ, ಕೇಂದ್ರ ಮೀಸಲು ಪೊಲೀಸ್‌ ಪಡೆ (ಸಿಆರ್‌ಪಿಎಫ್‌) ಮೂಲಕ ವಿಶ್ವಾಸ್‌ ಅವರಿಗೆ ʼವೈʼ ಶ್ರೇಣಿಯ ಭದ್ರತೆ ನೀಡಲು ಕೇಂದ್ರ ಸರ್ಕಾರ ನಿರ್ಧರಿಸಿದೆ ಎಂದು ಮೂಲಗಳು ತಿಳಿಸಿವೆ.

    ಪಂಜಾಬ್‌ನಲ್ಲಿ ನಡೆದ ವಿಧಾನಸಭಾ ಚುನಾವಣೆ ಪ್ರಚಾರದ ಸಂದರ್ಭದಲ್ಲಿ ಕೇಜ್ರಿವಾಲ್‌ ಅವರು ಪ್ರತ್ಯೇಕತಾವಾದಿಗಳನ್ನು ಬೆಂಬಲಿಸುತ್ತಾರೆ ಎಂದು ವಿಶ್ವಾಸ್‌ ಆರೋಪಿಸಿದ್ದರು. ಆದರೆ ಈ ಆರೋಪಗಳನ್ನು ಕೇಜ್ರಿವಾಲ್‌ ತಳ್ಳಿಹಾಕಿದ್ದಾರೆ. ಇದನ್ನೂ ಓದಿ: ಪಂಜಾಬ್‍ನನ್ನು ಕಾಂಗ್ರೆಸ್ ಲೂಟಿ ಮಾಡುತ್ತಿದೆ: ಅರವಿಂದ್ ಕೇಜ್ರಿವಾಲ್

    ಪಂಜಾಬ್‌ ವಿಧಾನಸಭಾ ಚುನಾವಣೆಗೆ ಫೆ.20 ರಂದು ಮತದಾನ ನಡೆಯಲಿದೆ. ಮಾ.10 ರಂದು ಫಲಿತಾಂಶ ಹೊರ ಬೀಳಲಿದೆ.