Tag: Yadgiri

  • ಸ್ವಾತಂತ್ರ್ಯ ನಂತರ ಯಾದಗಿರಿ ಜಿಲ್ಲೆಯಲ್ಲಿ ಇದೇ ಮೊದಲ ಬಾರಿಗೆ ಮಹಿಳೆಗೆ ಟಿಕೆಟ್‌

    ಸ್ವಾತಂತ್ರ್ಯ ನಂತರ ಯಾದಗಿರಿ ಜಿಲ್ಲೆಯಲ್ಲಿ ಇದೇ ಮೊದಲ ಬಾರಿಗೆ ಮಹಿಳೆಗೆ ಟಿಕೆಟ್‌

    ಯಾದಗಿರಿ: ಸ್ವಾತಂತ್ರ್ಯ ನಂತರ ಯಾದಗಿರಿ ಜಿಲ್ಲೆಯ ಚುನಾವಣಾ (Election) ಇತಿಹಾಸದಲ್ಲೇ ಇದೇ ಮೊದಲ ಬಾರಿಗೆ ಮಹಿಳೆಯೊಬ್ಬರಿಗೆ ಟಿಕೆಟ್‌ ಲಭಿಸಿದೆ. ಗುರುಮಠಕಲ್‌ ಕ್ಷೇತ್ರದಲ್ಲಿ ಮೊದಲ ಬಾರಿಗೆ ಮಹಿಳಾ ಅಭ್ಯರ್ಥಿಯನ್ನು ಕಣಕ್ಕಿಳಿಸುವ ಮೂಲಕ ಬಿಜೆಪಿ (BJP) ಹೊಸ ಸಾಹಸಕ್ಕೆ ಮುಂದಾಗಿದೆ. ರಾಜ್ಯ ಮಹಿಳಾ ಘಟಕದ ಉಪಾಧ್ಯಕ್ಷೆ ಲಲಿತಾ ಅನಪೂರಗೆ (Lalita Anpur) ಕ್ಷೇತ್ರದ ಟಿಕೆಟ್ ನೀಡಲಾಗಿದೆ. ಈ ಮೂಲಕ ಇತ್ತೀಚೆಗೆ ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ (Congress) ಸೇರಿರುವ ಅಭ್ಯರ್ಥಿ ಬಾಬುರಾವ್ ಚಿಂಚನಸೂರಗೆ ಬಿಜೆಪಿ ಚೆಕ್‍ಮೇಟ್ ನೀಡಿದೆ.

    ಇದುವರೆಗೂ ಜಿಲ್ಲೆಯ ಯಾವುದೇ ಕ್ಷೇತ್ರಗಳಲ್ಲಿ ಮಹಿಳೆಯರಿಗೆ ಯಾವುದೇ ಪಕ್ಷ ಮಣೆ ಹಾಕಿರಲಿಲ್ಲ. ಹೀಗಾಗಿ ಈ ಬಾರಿ ಮಹಿಳೆಯರಿಗೆ ಅವಕಾಶ ನೀಡಿರುವುದು ಇಲ್ಲಿನ ಚುನಾವಣೆ ವಿಶೇಷಕ್ಕೆ ಕಾರಣವಾಗಿದೆ. ಇದನ್ನೂ ಓದಿ: ರಾಜಕೀಯಕ್ಕೆ ಸಂಸದ ವಿ.ಶ್ರೀನಿವಾಸ ಪ್ರಸಾದ್ ಗುಡ್‌ ಬೈ

    ಹಿಂದುಳಿದ ಕೋಲಿ ಕಬ್ಬಲಿಗ ಸಮುದಾಯದ ಅತ್ಯಂತ ಪ್ರಭಾವಿ ಮಹಿಳೆಯಾಗಿರುವ ಲಲಿತಾ ಅನಪೂರ ಯಾದಗಿರಿ (Yadgiri) ನಗರಸಭೆಯ ಹಾಲಿ ಸದಸ್ಯರಾಗಿದ್ದಾರೆ. ಗುರುಮಠಕಲ್ ಕ್ಷೇತ್ರದಲ್ಲಿ ಸಮುದಾಯದ ಹೆಚ್ಚಿನ ಮತಗಳು ಇರುವುದರಿಂದ ಬಿಜೆಪಿ ಹೈಕಮಾಂಡ್ ಇವರಿಗೆ ಟಿಕೆಟ್ ನೀಡಿದೆ. ಕ್ಷೇತ್ರದಲ್ಲಿ ಉತ್ತಮ ಪೈಪೋಟಿ ನೀಡಲಿದ್ದಾರೆ ಎನ್ನುವ ರಾಜಕೀಯ ಲೆಕ್ಕಾಚಾರ ಇದೆ.

    ಯಾದಗಿರಿ ಜಿಲ್ಲೆಯ ಗುರುಮಠಕಲ್ (Gurumatkal) ಕ್ಷೇತ್ರದಲ್ಲಿ ಕಾಂಗ್ರೆಸ್‍ನಿಂದ ಬಾಬುರಾವ್ ಚಿಂಚನಸೂರ ಹಾಗೂ ಜೆಡಿಎಸ್‍ನಿಂದ (JDS) ಶರಣಗೌಡ ಕಂದಕೂರಗೆ ಈಗಾಗಲೇ ಟಿಕೆಟ್ ಘೋಷಣೆಯಾಗಿತ್ತು. ಇದನ್ನೂ ಓದಿ: ಹಾವೇರಿಯಲ್ಲಿ ಎಷ್ಟು ಸೀಟು ಗೆಲ್ಲಿಸ್ತಾನೋ ನೋಡೋಣ: ಸೇಡಿನ ರಾಜಕಾರಣಿ – ಸಿಎಂ ವಿರುದ್ಧ ನೆಹರೂ ಓಲೇಕಾರ್ ಕಿಡಿ

  • ಯಾದಗಿರಿಯಲ್ಲಿ ಖಾಸಗಿ ಬಸ್ ಪಲ್ಟಿ – ಓರ್ವ ಸಾವು, ಹಲವರಿಗೆ ಗಂಭೀರ ಗಾಯ

    ಯಾದಗಿರಿಯಲ್ಲಿ ಖಾಸಗಿ ಬಸ್ ಪಲ್ಟಿ – ಓರ್ವ ಸಾವು, ಹಲವರಿಗೆ ಗಂಭೀರ ಗಾಯ

    ಯಾದಗಿರಿ: ಖಾಸಗಿ ಬಸ್ ಪಲ್ಟಿಯಾಗಿ (Overturn) ಓರ್ವ ಸಾವನ್ನಪ್ಪಿ, ಹಲವರಿಗೆ ಗಂಭೀರ ಗಾಯವಾಗಿರುವ ಘಟನೆ ಯಾದಗಿರಿ (Yadgiri) ಜಿಲ್ಲೆಯ ಸುರಪುರ (Surapura) ತಾಲೂಕಿನ ಕವಡಿಮಟ್ಟಿ ಗ್ರಾಮದ ಬಳಿ ಭಾನುವಾರ ಮುಂಜಾನೆ ನಡೆದಿದೆ.

    ಖಾಸಗಿ ಬಸ್‌ನಲ್ಲಿ 30ಕ್ಕೂ ಹೆಚ್ಚು ಜನ ಪ್ರಯಾಣಿಕರಿದ್ದು, ಬಸ್ ಬೆಂಗಳೂರಿನಿಂದ (Bengaluru) ಸುರಪುರ ಮಾರ್ಗವಾಗಿ ಹುಮ್ನಾಬಾದ್(Humnabad) ಕಡೆ ಚಲಿಸುತ್ತಿತ್ತು. ಬಸ್ ಓವರ್ ಸ್ಪೀಡ್ (Over Speed) ಇದ್ದ ಕಾರಣ ತಿರುವಿನಲ್ಲಿ ಚಾಲಕನ ನಿಯಂತ್ರಣ ತಪ್ಪಿ ಕವಡಿಮಟ್ಟಿ ಬಳಿ ಪಲ್ಟಿಯಾಗಿದೆ. ಬಸ್ ಪಲ್ಟಿಯಾದ ಸುದ್ದಿ ತಿಳಿದ ಗ್ರಾಮಸ್ಥರು ಸ್ಥಳಕ್ಕೆ ದೌಡಾಯಿಸಿ ಬಸ್‌ನಲ್ಲಿ ಸಿಲುಕಿದ್ದ ಪ್ರಯಾಣಿಕರನ್ನು ಹೊರ ತೆಗೆದಿದ್ದಾರೆ. ಬಸ್ ಪಲ್ಟಿಯ ರಭಸಕ್ಕೆ ಕೆಲವರಿಗೆ ಗಂಭೀರ ಗಾಯಗಳಾಗಿದ್ದು, ಸ್ಥಿತಿ ಚಿಂತಾಜನಕವಾಗಿದೆ. ಇದನ್ನು ಓದಿ: ಕೊಡೇಕಲ್‌ನಲ್ಲಿ ಕಲ್ಲು ತೂರಾಟ ಪ್ರಕರಣ – ಸುರಪುರ ಕ್ಷೇತ್ರದಲ್ಲಿ ನಿಷೇಧಾಜ್ಞೆ ವಿಸ್ತರಣೆ 

    ಸುರಪುರ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿದ್ದು, ಪಲ್ಟಿಯಾದ ಬಸ್ ತೆರವುಗೊಳಿಸಿದ್ದಾರೆ. ಘಟನೆಯಲ್ಲಿ ಗಾಯಗೊಂಡಿದ್ದವರನ್ನು ಸ್ಥಳೀಯರ ನೆರವಿನೊಂದಿಗೆ ಸುರಪುರ ಆಸ್ಪತ್ರೆಗೆ ದಾಖಲಿಸಲಾಗಿದೆ. ಇದನ್ನು ಓದಿ: ಬಂಡೀಪುರಕ್ಕೆ ಪ್ರಧಾನಿ ಮೋದಿ ಆಗಮನ

  • ಕೊಡೇಕಲ್‌ನಲ್ಲಿ ಕಲ್ಲು ತೂರಾಟ ಪ್ರಕರಣ – ಸುರಪುರ ಕ್ಷೇತ್ರದಲ್ಲಿ ನಿಷೇಧಾಜ್ಞೆ ವಿಸ್ತರಣೆ

    ಕೊಡೇಕಲ್‌ನಲ್ಲಿ ಕಲ್ಲು ತೂರಾಟ ಪ್ರಕರಣ – ಸುರಪುರ ಕ್ಷೇತ್ರದಲ್ಲಿ ನಿಷೇಧಾಜ್ಞೆ ವಿಸ್ತರಣೆ

    ಯಾದಗಿರಿ: ಜಿಲ್ಲೆಯ ಸುರಪುರ ವಿಧಾನಸಭಾ ಕ್ಷೇತ್ರದ ಕೊಡೇಕಲ್‌ನಲ್ಲಿ (Yadgiri) ಇದೇ ಏಪ್ರಿಲ್ 6 ರಂದು ಕಲ್ಲು ತೂರಾಟದ (Stone Pelting) ಪ್ರಕರಣಕ್ಕೆ ಸಂಬಂಧಿಸಿದಂತೆ ವಿಧಿಸಿದ್ದ ನಿಷೇಧಾಜ್ಞೆಯನ್ನು (Prohibition) ಮತ್ತೆರಡು ದಿನಕ್ಕೆ ವಿಸ್ತರಣೆ ಮಾಡಲಾಗಿದೆ.

    ಏಪ್ರಿಲ್ 8 ರವರೆಗೂ ಇದ್ದ 144 ಸೆಕ್ಷನ್ ಅನ್ನು ಏಪ್ರಿಲ್ 12ರ ರಾತ್ರಿ 8 ಗಂಟೆಯವರೆಗೆ ವಿಸ್ತರಿಸಿ, ಜಿಲ್ಲಾಧಿಕಾರಿ ಸ್ನೇಹಲ್ ಆರ್ ಅವರು ಆದೇಶ ನೀಡಿದ್ದಾರೆ. ಇದನ್ನೂ ಓದಿ: ಕೋವಿಡ್ ಕೇಸ್ ತೀವ್ರ ಹೆಚ್ಚಳ – ಕೇರಳ, ಹರಿಯಾಣ, ಪುದುಚೇರಿಯಲ್ಲಿ ಮತ್ತೆ ಮಾಸ್ಕ್ ಕಡ್ಡಾಯ

    ಬಿಜೆಪಿ ಶಾಸಕ ರಾಜೂಗೌಡ ಸ್ವಗ್ರಾಮ ಕೊಡೇಕಲ್‌ನಲ್ಲಿ ಕೆಲ ದಿನಗಳ ಹಿಂದೆ ಕಲ್ಲು ತೂರಾಟದ ಜೊತೆಗೆ ಮಾರಕಾಸ್ತ್ರಗಳಿಂದ ದಾಳಿ ನಡೆದಿತ್ತು. ಕಾಂಗ್ರೆಸ್-ಬಿಜೆಪಿ (Congress-BJP) ಕಾರ್ಯಕರ್ತರ ಪರಸ್ಪರ ಕಲ್ಲು ತೂರಾಟ ಪ್ರಕರಣದಲ್ಲಿ 4-5 ಜನರಿಗೆ ಗಂಭೀರ ಗಾಯಗಳಾಗಿದ್ದವು.

    ಘಟನೆಗೆ ಸಂಬಂಧಿಸಿದಂತೆ ಈಗಾಗಲೇ 5 ಪ್ರಕರಣಗಳು ದಾಖಲಾಗಿವೆ. 25 ಆರೋಪಿಗಳ ಬಂಧನವಾಗಿದೆ. ಸದ್ಯ ಕ್ಷೇತ್ರದಾದ್ಯಂತ ಶಾಂತಿ-ಸುವ್ಯವಸ್ಥೆ ಕಾಪಾಡುವ ಜೊತೆಗೆ ಇನ್ನುಳಿದ ಆರೋಪಿಗಳ ಪತ್ತೆಗಾಗಿ ನಿಷೇಧಾಜ್ಞೆ ವಿಸ್ತರಣೆ ಮಾಡಲಾಗಿದೆ. ಇದನ್ನೂ ಓದಿ: ಬಂಡೀಪುರಕ್ಕೆ ಪ್ರಧಾನಿ ಮೋದಿ ಆಗಮನ

  • ಕಾಂಗ್ರೆಸ್-ಬಿಜೆಪಿ ಘರ್ಷಣೆ, 15 ಕಾರು ಜಖಂ – ಸುರಪುರದಲ್ಲಿ ಶನಿವಾರದವರೆಗೆ ನಿಷೇಧಾಜ್ಞೆ ಜಾರಿ

    ಕಾಂಗ್ರೆಸ್-ಬಿಜೆಪಿ ಘರ್ಷಣೆ, 15 ಕಾರು ಜಖಂ – ಸುರಪುರದಲ್ಲಿ ಶನಿವಾರದವರೆಗೆ ನಿಷೇಧಾಜ್ಞೆ ಜಾರಿ

    ಯಾದಗಿರಿ: ಬಿಜೆಪಿ (BJP) ಹಾಗೂ ಕಾಂಗ್ರೆಸ್ (Congress) ಕಾರ್ಯಕರ್ತರ ನಡುವೆ ಘರ್ಷಣೆಯಾಗಿ ಕಲ್ಲು ತೂರಾಟ ನಡೆದ ಘಟನೆ ಸುರಪುರ (Surapur) ಬಿಜೆಪಿ ಶಾಸಕ ರಾಜುಗೌಡರ ಸ್ವಗ್ರಾಮ ಕೊಡೇಕಲ್‍ನಲ್ಲಿ ನಡೆದಿದೆ.

    ಕಾಂಗ್ರೆಸ್‍ನ ಅಭ್ಯರ್ಥಿ ರಾಜಾ ವೆಂಕಟಪ್ಪ ನಾಯಕ ನೇತೃತ್ವದಲ್ಲಿ 40ಕ್ಕೂ ಹೆಚ್ಚು ಕಾರಿನಲ್ಲಿ ಪಕ್ಷದ ಮುಖಂಡರು ಹಾಗೂ ಕಾರ್ಯಕರ್ತರು ನಾರಾಯಣಪೂರ ಗ್ರಾಮಕ್ಕೆ ಚುನಾವಣಾ (Election) ಪ್ರಚಾರಕ್ಕೆ ಹೊರಟಿದ್ದರು. ಅದೇ ಮಾರ್ಗದಲ್ಲಿ ಕಾಲಜ್ಞಾನಿ ಕೊಡೇಕಲ್ ಬಸವಣ್ಣ ದೇವರ ಜಾತ್ರೆ ನಡೆಯುತ್ತಿತ್ತು. ಆಗ ಗದ್ದಲ ಏರ್ಪಟ್ಟಿದ್ದರಿಂದ ವೆಂಕಟಪ್ಪ ನಾಯಕರ ಬೆಂಬಲಿಗರು ಶಬ್ಧ ಮಾಡಿದ್ದಾರೆ. ಇದೇ ವಿಚಾರಕ್ಕೆ ಗಲಾಟೆ ಶುರುವಾಗಿ ಪರಸ್ಪರ ಕಲ್ಲು ತೂರಾಟ ನಡೆದಿದೆ. ಇದನ್ನೂ ಓದಿ: ಬಿಜೆಪಿ ಶಾಸಕನ ಫೋಟೋವಿದ್ದ ಅಂಬುಲೆನ್ಸ್ ಸೀಜ್ – ಕೇಸ್ ದಾಖಲು

    ಬಿಜೆಪಿ ಕಾರ್ಯಕರ್ತರು ಶಬ್ಧ ಮಾಡದಂತೆ ಸೂಚಿಸಿದ್ದಾರೆ. ಈ ಸಂದರ್ಭದಲ್ಲಿ ಬಿಜೆಪಿ ಹಾಗೂ ಕಾಂಗ್ರೆಸ್ ಮುಖಂಡರ ನಡುವೆ ಮಾತಿನ ಚಕಮಕಿ ನಡೆದಿದೆ. ಆಗ ಕಾರುಗಳ ಮೇಲೆ ಬಿಜೆಪಿ ಕಾರ್ಯಕರ್ತರು ಕಲ್ಲು ತೂರಾಟ ನಡೆಸಿದ್ದಾರೆ ಎನ್ನಲಾಗಿದೆ. ಪ್ರತಿಯಾಗಿ ಕಾಂಗ್ರೆಸ್ ಮುಖಂಡರು ಸಹ ಕಲ್ಲು ತೂರಾಡಿದ್ದಾರೆ. ಕಲ್ಲು ತೂರಾಟದಿಂದಾಗಿ ಕಾಂಗ್ರೆಸ್ ಮುಖಂಡರ 15 ಕಾರುಗಳು ಜಖಂಗೊಂಡಿವೆ. ಮಾರಕಾಸ್ತ್ರಗಳಿಂದ ಕೆಲವರು ಹಲ್ಲೆ ನಡೆಸಿದ್ದು ನಾಲ್ಕೈದು ಜನರಿಗೆ ಗಂಭೀರ ಗಾಯಗಳಾಗಿವೆ. ಗಾಯಾಳುಗಳನ್ನು ಕೊಡೇಕಲ್ ಆಸ್ಪತ್ರೆಗೆ ದಾಖಲಿಸಲಾಗಿದೆ.

    ಘಟನೆಯ ವಿಚಾರ ತಿಳಿಯುತ್ತಿದ್ದಂತೆ ಪೊಲೀಸರು ಸ್ಥಳಕ್ಕೆ ಬಂದು ಪರಿಸ್ಥಿತಿ ಹತೋಟಿಗೆ ತರಲು ಹರಸಾಹಸ ಪಟ್ಟಿದ್ದಾರೆ. ಮತ್ತೆ ಘಟನೆ ಮರುಕಳಿಸದಂತೆ ಎಸ್ಪಿ ವೇದಾಮೂರ್ತಿ ಭೇಟಿ ನೀಡಿದ್ದಾರೆ. ಘಟನೆಯಿಂದ ಇಡೀ ಗ್ರಾಮದಲ್ಲಿ ಉದ್ವಿಗ್ನ ವಾತಾವರಣ ನಿರ್ಮಾಣವಾಗಿದ್ದು, ಪರಿಸ್ಥಿತಿ ಬೂದಿ ಮುಚ್ಚಿದ ಕೆಂಡದಂತಿದೆ.

    ಈ ಹಿನ್ನೆಲೆಯಲ್ಲಿ ಗುರುವಾರ ರಾತ್ರಿ 9 ಗಂಟೆಯಿಂದ ಶನಿವಾರ ರಾತ್ರಿ 8 ಗಂಟೆಯವರೆಗೆ ವಿಧಾನಸಭಾ ಕ್ಷೇತ್ರದಾದ್ಯಂತ ನಿಷೇಧಾಜ್ಞೆ (Under section 144 prohibitory order) ಜಾರಿಗೊಳಿಸಲಾಗಿದೆ. ಬಹಿರಂಗ ಸಭೆ, ಸಮಾರಂಭ ಹಾಗೂ ಮೆರವಣಿಗೆಗಳನ್ನು ನಡೆಸದಂತೆ ಜಿಲ್ಲಾಧಿಕಾರಿ ಸ್ನೇಹಲ್ ಆರ್‌ ಆದೇಶಿಸಿದ್ದಾರೆ. ಇದನ್ನೂ ಓದಿ: ರಾಹುಲ್‌ ಗಾಂಧಿ ನಾಯಕತ್ವದಲ್ಲಿ ಕಾಂಗ್ರೆಸ್ ಎಂದಿಗೂ ಉದ್ಧಾರವಾಗದು: ಗುಲಾಂ ನಬಿ ಆಜಾದ್

  • ಕಮಲ ಬಿಟ್ಟು ‘ಕೈ’ ಹಿಡಿಯಲು ಮುಂದಾದ ಮಾಲಕರೆಡ್ಡಿ

    ಕಮಲ ಬಿಟ್ಟು ‘ಕೈ’ ಹಿಡಿಯಲು ಮುಂದಾದ ಮಾಲಕರೆಡ್ಡಿ

    ಯಾದಗಿರಿ: ಕಲ್ಯಾಣ ಕರ್ನಾಟಕ ಭಾಗದಲ್ಲಿ ಬಿಜೆಪಿಗೆ (BJP) ಮತ್ತೊಂದು ಬಿಗ್ ಶಾಕ್ ಎದುರಾಗಿದ್ದು, ಮಾಜಿ ಸಚಿವ ಎ.ಬಿ ಮಾಲಕರೆಡ್ಡಿ (A.B.Malaka Reddy) ಬಿಜೆಪಿ ತೊರೆದು ಕಾಂಗ್ರೆಸ್ (Congress) ಸೇರ್ಪಡೆಗೊಳ್ಳುವುದು ಬಹುತೇಕ ಖಚಿತವಾಗಿದೆ.

    ಇಂದು ಬಿಜೆಪಿ ಸದಸ್ಯತ್ವಕ್ಕೆ ರಾಜೀನಾಮೆ ನೀಡಲಿರುವ ಅವರು, ಕೆಪಿಸಿಸಿ (KPCC) ಅಧ್ಯಕ್ಷ ಡಿ.ಕೆ ಶಿವಕುಮಾರ್ (D.K.Shivakumar) ನೇತೃತ್ವದಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಗೊಳ್ಳಲಿದ್ದಾರೆ. ಈ ಹಿಂದೆ ಕಾಂಗ್ರೆಸ್‌ನಲ್ಲಿದ್ದ ಮಾಲಕರೆಡ್ಡಿ ಐದು ಬಾರಿ ಶಾಸಕರಾಗಿ, ಸಚಿವರಾಗಿಯೂ ಕಾರ್ಯ ನಿರ್ವಹಿಸಿದ್ದರು. ಆದರೆ 2019ರ ಲೋಕಸಭಾ ಚುನಾವಣೆ ವೇಳೆ ಮಲ್ಲಿಕಾರ್ಜುನ ಖರ್ಗೆ (Mallikarjun Kharge) ವಿರುದ್ಧ ಸಿಡಿದೆದ್ದು ಬಿಜೆಪಿ ಸೇರಿದರು. ಬಾಬುರಾವ್ ಚಿಂಚನಸೂರ್‌ ಜೊತೆ ಬಿಜೆಪಿ ಸೇರಿದ್ದ ಮಾಲಕರೆಡ್ಡಿ ಜಿದ್ದಿಗೆ ಬಿದ್ದು ಖರ್ಗೆಯವರನ್ನು ಸೋಲಿಸಿದರು. ಆದರೆ ಕಳೆದ ವಾರ ಬಾಬುರಾವ್ ಚಿಂಚನಸೂರ್ ಎಂಎಲ್‌ಸಿ ಸ್ಥಾನಕ್ಕೆ ರಾಜೀನಾಮೆ ನೀಡಿ ಕಾಂಗ್ರೆಸ್ ಸೇರಿದ ಬೆನ್ನಲ್ಲೇ ಮಾಲಕರೆಡ್ಡಿ ಕೂಡಾ ಕಾಂಗ್ರೆಸ್ ಸೇರಲು ಮುಂದಾಗಿದ್ದಾರೆ. ಇದನ್ನೂ ಓದಿ: ಕೆ.ಎಸ್. ನಾಗರತ್ನಮ್ಮ ರಾಜ್ಯದ ಮೊದಲ ಮಹಿಳಾ ಸ್ಪೀಕರ್   

    ಮಾಲಕರೆಡ್ಡಿ ಬಿಜೆಪಿಯಲ್ಲಿದ್ದರೂ ತಮ್ಮ ಪುತ್ರಿ ಅನುರಾಗಾ ಮಾಲಕರೆಡ್ಡಿ (Anuraga Malaka Reddy) ಕಾಂಗ್ರೆಸ್‌ನಲ್ಲಿಯೇ ಉಳಿದಿದ್ದರು. ಹೀಗಾಗಿ ಅನುರಾಗಾ ಮಾಲಕರೆಡ್ಡಿಯವರ ಮೂಲಕ ಕಾಂಗ್ರೆಸ್ ಟಿಕೆಟ್‌ಗೆ ಅರ್ಜಿ ಹಾಕಿಸಿದರು. ಮಗಳಿಗೆ ಈ ಬಾರಿ ಶತಾಯಗತಾಯ ಕಾಂಗ್ರೆಸ್ ಟಿಕೆಟ್ ಕೊಡಿಸಬೇಕೆಂದುಕೊಂಡಿದ್ದ ಮಾಲಕರೆಡ್ಡಿ ಅವರನ್ನು ಕಾಂಗ್ರೆಸ್‌ಗೆ ಸೇರಿಸಿಕೊಳ್ಳಲು ಮಲ್ಲಿಕಾರ್ಜುನ ಖರ್ಗೆ ಹಿಂದೇಟು ಹಾಕಿದ್ದರಿಂದ ವಿಳಂಬವಾಗಿತ್ತು. ಕೊನೆಗೂ ಶುಕ್ರವಾರ ಎಐಸಿಸಿ (AICC) ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರನ್ನು ಮಾಲಕರೆಡ್ಡಿ ಭೇಟಿಯಾಗಿ ಮತ್ತೆ ಪಕ್ಷಕ್ಕೆ ವಾಪಸ್ ಬರುವ ಬಗ್ಗೆ ಮಾತನಾಡಿದ್ದಾರೆ. ಕಾಂಗ್ರೆಸ್ ಸೇರುವಂತೆ ಪಕ್ಷ ಗ್ರೀನ್ ಸಿಗ್ನಲ್ ಕೊಟ್ಟಿದ್ದರಿಂದ ಬಿಜೆಪಿಗೆ ರಾಜೀನಾಮೆ ನೀಡಲು ಮಾಲಕರೆಡ್ಡಿ ಮುಂದಾಗಿದ್ದಾರೆ. ಇದನ್ನೂ ಓದಿ: ಮಂಡ್ಯ ಜಿಲ್ಲೆಯ 6 ಕ್ಷೇತ್ರಗಳಲ್ಲಿ 3 ಪಕ್ಷಗಳಿಂದ ಒಕ್ಕಲಿಗರೇ ಅಭ್ಯರ್ಥಿಗಳು

    ಮಾಲಕರೆಡ್ಡಿ ಶನಿವಾರ ಮಧ್ಯಾಹ್ನದ ಹೊತ್ತಿಗೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಅವರನ್ನು ಭೇಟಿ ಮಾಡಿದ ಬಳಿಕ ಬಿಜೆಪಿಗೆ ರಾಜೀನಾಮೆ ನೀಡಲಿದ್ದಾರೆ. ಕಾಂಗ್ರೆಸ್‌ನಿಂದ 5 ಬಾರಿ ಶಾಸಕರಾಗಿ ಆಯ್ಕೆಯಾಗಿದ್ದ ಮಾಲಕರೆಡ್ಡಿ, ಲೋಕಸಭಾ ಚುನಾವಣೆ ವೇಳೆ ಕಾಂಗ್ರೆಸ್ ಬಿಟ್ಟು ಬಿಜೆಪಿ ಸೇರಿದ್ದರು. ಮಲ್ಲಿಕಾರ್ಜುನ ಖರ್ಗೆ ಅವರನ್ನು ಸೋಲಿಸಿದ ರೂವಾರಿಗಳಲ್ಲಿ ಮಾಲಕರೆಡ್ಡಿ ಕೂಡ ಒಬ್ಬರು. ಆದರೆ ಈಗ ಹಳೇಯ ದ್ವೇಷ ಮರೆತು ಮತ್ತೆ ಘರ್ ವಾಪಸಿ ಆಗಲು ಮಾಲಕರೆಡ್ಡಿ ಮುಂದಾಗಿದ್ದಾರೆ. ಇದನ್ನೂ ಓದಿ: ಖಲಿಸ್ತಾನ ಬೇಡಿಕೆಗೆ BJP, RSSನ ಹಿಂದೂ ರಾಷ್ಟ್ರದ ಹೇಳಿಕೆಯೇ ಕಾರಣ: ಅಶೋಕ್ ಗೆಹ್ಲೋಟ್    

     

     

    ಕಲ್ಯಾಣ ಕರ್ನಾಟಕ ಭಾಗದಲ್ಲಿ ತಮ್ಮದೇ ಹಿಡಿತ ಹೊಂದಿರುವ ಎಬಿ ಮಾಲಕರೆಡ್ಡಿ ಹಾಗೂ ಬಾಬುರಾವ್ ಚಿಂಚನಸೂರ್ ಬಿಜೆಪಿ ಸೇರಿದ ಮೇಲೆ ಬಿಜೆಪಿಗೆ ಒಂದಷ್ಟು ಆನೆ ಬಲ ಬಂದಂತಾಗಿತ್ತು. ಪ್ರಮುಖವಾಗಿ ಯಾದಗಿರಿ (Yadgiri) ಹಾಗೂ ಕಲಬುರಗಿ (Kalaburagi) ಜಿಲ್ಲೆಗಳಲ್ಲಿ ಸೋಲಿನ ಭೀತಿಯಲ್ಲಿದ್ದ ಒಂದಷ್ಟು ಸ್ಥಾನಗಳನ್ನು ಗೆಲ್ಲುವ ವಿಶ್ವಾಸದಲ್ಲಿ ಬಿಜೆಪಿ ನಾಯಕರಿದ್ದರು. ಆದರೆ ಈಗ ಇಬ್ಬರೂ ನಾಯಕರು ಕಮಲಕ್ಕೆ ಕೈ ಕೊಟ್ಟು, ಘರ್ ವಾಪಸಿ ಆಗಿರುವುದರಿಂದ ಕಮಲ ಪಡೆಗೆ ಕಲ್ಯಾಣ ಕರ್ನಾಟಕ ಭಾಗದಲ್ಲಿ ಹಿನ್ನಡೆಯಾದಂತಾಗಿದೆ. ಇದನ್ನೂ ಓದಿ: ಶಾಸಕ ಮಹೇಶ್ ಕುಮಠಳ್ಳಿಗೆ ಟಿಕೆಟ್ ಟೆನ್ಶನ್- ವಲಸಿಗ ಶಾಸಕರಿಗೆ ಮೂಲ ಬಿಜೆಪಿಗರಿಂದ ಕಿರಿಕ್

     

     
  • ಮತ್ತೆ ‘ಕೈ’ ಸೇರಲು ಮುಂದಾದ ಎ.ಬಿ.ಮಾಲಕರೆಡ್ಡಿ – ಕಲ್ಯಾಣ ಕರ್ನಾಟಕದಲ್ಲಿ ಬಿಜೆಪಿಗೆ ಮತ್ತೊಂದು ಹೊಡೆತ

    ಮತ್ತೆ ‘ಕೈ’ ಸೇರಲು ಮುಂದಾದ ಎ.ಬಿ.ಮಾಲಕರೆಡ್ಡಿ – ಕಲ್ಯಾಣ ಕರ್ನಾಟಕದಲ್ಲಿ ಬಿಜೆಪಿಗೆ ಮತ್ತೊಂದು ಹೊಡೆತ

    ಯಾದಗಿರಿ: ವಿಧಾನಸಭೆ ಚುನಾವಣೆ (Election) ಸಮೀಪಿಸುತ್ತಿದ್ದು, ಕಲ್ಯಾಣ ಕರ್ನಾಟಕದಲ್ಲಿ ಬಿಜೆಪಿಗೆ (BJP) ಪಕ್ಷಾಂತರದ ಪರ್ವ ತಲೆಬಿಸಿ ಉಂಟುಮಾಡಿದೆ. ಕಳೆದ ವಾರವಷ್ಟೇ ಎಂಎಲ್ಸಿ ಸ್ಥಾನಕ್ಕೆ ರಾಜೀನಾಮೆ ನೀಡಿ, ಕಾಂಗ್ರೆಸ್ ಸೇರಿದ್ದ ಬಾಬುರಾವ್ ಚಿಂಚನಸೂರ್ (Baburao Chinchanasur) ಬಿಜೆಪಿಗೆ ಶಾಕ್ ನೀಡಿದ್ದರು. ಆದರೆ ಈಗ ಮತ್ತೊಬ್ಬ ಪ್ರಭಾವಿ ನಾಯಕ, ಮಾಜಿ ಸಚಿವ ಎ.ಬಿ.ಮಾಲಕರೆಡ್ಡಿಯೂ (A.B.Malaka Reddy) ಬಿಜೆಪಿ ಬಿಟ್ಟು ಕಾಂಗ್ರೆಸ್ (Congress) ಸೇರುವುದಕ್ಕೆ ಮುಂದಾಗಿದ್ದಾರೆ.

    ಯಾದಗಿರಿ (Yadgiri) ಮತಕ್ಷೇತ್ರಕ್ಕೆ ಕಾಂಗ್ರೆಸ್‌ನಿಂದ ಸ್ಪರ್ಧೆ ಮಾಡುವ ತವಕದಲ್ಲಿರುವ ಹಿರಿಯ ರಾಜಕಾರಣಿ, ಮಾಜಿ ಸಚಿವ ಡಾ.ಎ.ಬಿ.ಮಾಲಕರೆಡ್ಡಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ (D.K.Shivakumar) ಅವರನ್ನು ಭೇಟಿ ಮಾಡಿದ್ದಾರೆ. ಕಾಂಗ್ರೆಸ್ ಸೇರುವ ಆಸೆಯಿಂದ ಡಿಕೆಶಿಯವರನ್ನು ಭೇಟಿಯಾಗಿ, ಈಗಾಗಲೇ ಒಂದು ಸುತ್ತಿನ ಮಾತುಕತೆಯನ್ನೂ ಆಡಿದ್ದಾರೆ. 2019ರ ಲೋಕಸಭೆ ಚುನಾವಣೆಯಲ್ಲಿ ಮಾಲಕರೆಡ್ಡಿ ಕಾಂಗ್ರೆಸ್ ತೊರೆದು ಬಿಜೆಪಿ ಸೇರಿದ್ದರು. ಕಾಂಗ್ರೆಸ್ ತೊರೆದು ಬಿಜೆಪಿ ಸೇರಿದ್ದ ಮಾಜಿ ಸಚಿವ ಬಾಬುರಾವ್ ಚಿಂಚನಸೂರ್ ಮತ್ತೇ ‘ಕೈ’ ಹಿಡಿದಿದ್ದರಿಂದ ಮಾಲಕರೆಡ್ಡಿಯೂ ಕಾಂಗ್ರೆಸ್ ಸೇರಲು ತುದಿಗಾಲಲ್ಲಿ ನಿಂತಿದ್ದಾರೆ. ಇದನ್ನೂ ಓದಿ: ನನ್ನ ತಂದೆ ಯಾವತ್ತೂ ರಾಜಕೀಯ ಪಾಠ ಹೇಳಿಕೊಡಲಿಲ್ಲ – ಸಾರ್ವಜನಿಕ ವೇದಿಕೆಯಲ್ಲಿ ದರ್ಶನ್ ಧ್ರುವನಾರಾಯಣ ಮೊದಲ ಭಾಷಣ 

    ಕಳೆದ ಎರಡು ತಿಂಗಳ ಹಿಂದೆಯೇ ಮಾಲಕರೆಡ್ಡಿ ಕಾಂಗ್ರೆಸ್ ಸೇರಲು ಪ್ರಯತ್ನ ನಡೆಸಿದ್ದರು. ಆದರೆ ಹೈಕಮಾಂಡ್ ಕೇರ್ ಮಾಡಿರಲಿಲ್ಲ. ಲೋಕಸಭಾ ಚುನಾವಣೆ ಸಂದರ್ಭದಲ್ಲಿ ಕೈ ತೊರೆದಿದ್ದ ನಾಯಕರೆಲ್ಲರೂ ಘರ್ ವಾಪ್ಸಿ ಆಗುತ್ತಾರೆ ಎನ್ನಲಾಗುತ್ತಿದೆ. ಇದಕ್ಕೆ ಪುಷ್ಠಿ ನೀಡುವಂತೆ ಎರಡು ದಿನಗಳ ಹಿಂದೆ ಬಾಬುರಾವ್ ಚಿಂಚನಸೂರ್ ಈ ವಿಚಾರ ಪ್ರಸ್ತಾಪ ಮಾಡಿದ್ದರು. ಕಲ್ಯಾಣ ಕರ್ನಾಟಕ ಭಾಗದ ಪ್ರಭಾವಿ ನಾಯಕರು ಮತ್ತೆ ಕಾಂಗ್ರೆಸ್‌ಗೆ ವಾಪಾಸ್ ಬರುತ್ತಾರೆ ಎಂದಿದ್ದರು. ಅದರಂತೆ ಈಗ ಎ.ಬಿ.ಮಾಲಕರೆಡ್ಡಿ ʼಕೈʼ ಹಿಡಿಯುವುದು ಪಕ್ಕಾ ಆಗಿದೆ. ಇದರಿಂದಾಗಿ ಒಂದು ವಾರದ ಅಂತರದಲ್ಲಿ ಕಲ್ಯಾಣ ಕರ್ನಾಟಕದ ಬಿಜೆಪಿಯ ಎರಡನೇ ವಿಕೆಟ್ ಪತನ ಆಗೋದು ಗ್ಯಾರಂಟಿಯಾಗಿದೆ. ಕಲ್ಯಾಣ ಕರ್ನಾಟಕ ಭಾಗದಲ್ಲಿ ಪ್ರಭಾವಿ ಆಗಿರುವ ಮಾಲಕರೆಡ್ಡಿ ಬಿಜೆಪಿ ಬಿಡೋದ್ರಿಂದ ಇಡೀ ಕಲ್ಯಾಣ ಭಾಗದಲ್ಲಿ ಬಿಜೆಪಿಗೆ ಬಹುದೊಡ್ಡ ಹಿನ್ನೆಡೆಯಾಗುತ್ತದೆ ಎನ್ನುವುದು ರಾಜಕೀಯ ವಿಶ್ಲೇಷಕರ ಅಭಿಪ್ರಾಯವಾಗಿದೆ. ಇದನ್ನೂ ಓದಿ: ನನ್ನ ಕೊನೆ ಚುನಾವಣೆ ಹುಟ್ಟೂರಿನಲ್ಲಿ ಆಗಬೇಕೆಂಬ ಆಸೆ: ಸಿದ್ದರಾಮಯ್ಯ

    ಸದ್ಯ ವಯಸ್ಸಿನ ಕಾರಣದಿಂದ ಬಿಜೆಪಿಯಲ್ಲಿ ಮಾಲಕರೆಡ್ಡಿಗೆ ಟಿಕೆಟ್ ಸಿಗುವುದು ಅನುಮಾನ ಇರುವುದರಿಂದ ಹಲವು ತಿಂಗಳಿನಿಂದ ಅವರು ಪಕ್ಷದಿಂದ ಸಾಕಷ್ಟು ಅಂತರ ಕಾಯ್ದುಕೊಂಡಿದ್ದಾರೆ. ಇನ್ನೂ ಯಾದಗಿರಿ ಕ್ಷೇತ್ರದಲ್ಲಿ ಹಾಲಿ ಬಿಜೆಪಿ ಶಾಸಕ ವೆಂಕಟರೆಡ್ಡಿ ಮುದ್ದಾಳ್‌ಗೆ ಟಕ್ಕರ್ ಕೊಡಬಲ್ಲ ಏಕೈಕ ವ್ಯಕ್ತಿ ಮಾಲಕರೆಡ್ಡಿ ಎಂಬ ಮಾತುಗಳು ಪ್ರಬಲವಾಗಿ ಕೇಳಿಬರುತ್ತಿವೆ. ಹೀಗಾಗಿ ಕಾಂಗ್ರೆಸ್‌ನಿಂದ ತಾವು ನಿಲ್ಲಬೇಕು ಅಥವಾ ಪುತ್ರಿಯನ್ನು ಕಣಕ್ಕಿಳಿಸಲು ನಿರ್ಧರಿಸಿದ್ದಾರೆ ಎಂದು ರಾಜಕೀಯ ವಲಯದಲ್ಲಿ ವಿಶ್ಲೇಷಿಸಲಾಗುತ್ತಿದೆ. ಇದನ್ನೂ ಓದಿ: ಪ್ಯಾನ್‌ – ಆಧಾರ್‌ ಕಾರ್ಡ್‌ ಲಿಂಕ್‌; ಜೂನ್‌ 30 ರವರೆಗೆ ಅವಧಿ ವಿಸ್ತರಣೆ   

    ಕಾಂಗ್ರೆಸ್ ಮೂರು ದಿನಗಳ ಹಿಂದಷ್ಟೇ ರಾಜ್ಯದ 124 ಕ್ಷೇತ್ರಗಳಿಗೆ ಅಭ್ಯರ್ಥಿ ಘೋಷಣೆ ಮಾಡಿದ್ದು, ಇದರಲ್ಲಿ ಜಿಲ್ಲೆಯ ಶಹಾಪುರಕ್ಕೆ ಹಾಲಿ ಶಾಸಕ ಶರಣಬಸಪ್ಪ ಗೌಡ ದರ್ಶನಾಪುರ, ಸುರಪುರಕ್ಕೆ ಮಾಜಿ ಶಾಸಕ ರಾಜಾ ವೆಂಕಟಪ್ಪ ನಾಯಕ್ ಹೆಸರು ಫೈನಲ್ ಮಾಡಿದೆ. ಆದರೆ ಗುರುಮಿಠಕಲ್ ಮತ್ತು ಯಾದಗಿರಿ ಕ್ಷೇತ್ರಗಳಿಗೆ ಅಭ್ಯರ್ಥಿಗಳ ಹೆಸರು ಸಸ್ಪೆನ್ಸ್‌ನಲ್ಲಿ ಇಟ್ಟಿದ್ದು, ಟಿಕೆಟ್‌ಗಾಗಿ ಟವೆಲ್ (ದಸ್ತಿ) ಹಾಕಿದ ಆಕಾಂಕ್ಷಿಗಳಲ್ಲಿ ಎದೆಬಡಿತ ಜೋರಾಗಿದೆ. ಇದನ್ನೂ ಓದಿ: ಮೀಸಲಾತಿ ವಿಚಾರಕ್ಕೆ ಜೈಲಿಗೋದರೂ ಚಿಂತೆಯಿಲ್ಲ ; SDPI ಎಚ್ಚರಿಕೆ

     

  • ಶಾರ್ಟ್ ಸರ್ಕ್ಯೂಟ್‌ನಿಂದ ಮನೆಗೆ ಬೆಂಕಿ – ದಂಪತಿ ಸಜೀವದಹನ

    ಶಾರ್ಟ್ ಸರ್ಕ್ಯೂಟ್‌ನಿಂದ ಮನೆಗೆ ಬೆಂಕಿ – ದಂಪತಿ ಸಜೀವದಹನ

    – ಅಜ್ಜ, ಅಜ್ಜಿಯೊಂದಿಗೆ ಮಲಗಿದ್ದ ಮಕ್ಕಳು ಪ್ರಾಣಾಪಾಯದಿಂದ ಪಾರು

    ಯಾದಗಿರಿ: ವಿದ್ಯುತ್ ಶಾರ್ಟ್ ಸರ್ಕ್ಯೂಟ್‌ನಿಂದಾಗಿ (Short Circuit) ಮನೆಗೆ ಬೆಂಕಿ (Fire) ಹೊತ್ತಿಕೊಂಡು ದಂಪತಿ (Couple) ಸಜೀವದಹನವಾಗಿರುವ ದಾರುಣ ಘಟನೆ ಯಾದಗಿರಿ (Yadgiri) ಜಿಲ್ಲೆಯ ಸೈದಾಪುರ ಪಟ್ಟಣದಲ್ಲಿ ನಡೆದಿದೆ.

    ರಾಗಯ್ಯ ಹಾಗೂ ಶಿಲ್ಪಾ ಬೆಂಕಿಯ ಕೆನ್ನಾಲಿಗೆಗೆ ಸಿಕ್ಕು ಮೃತಪಟ್ಟ ದುರ್ದೈವಿ. ದಂಪತಿ ಮನೆಯಲ್ಲಿಯೇ ಬಟ್ಟೆ ಅಂಗಡಿಯನ್ನೂ ಇಟ್ಟುಕೊಂಡಿದ್ದರು. ಸೋಮವಾರ ನಸುಕಿನ ಜಾವ ವಿದ್ಯುತ್ ಶಾರ್ಟ್ ಸರ್ಕ್ಯೂಟ್‌ನಿಂದಾಗಿ ಮನೆಗೆ ಬೆಂಕಿ ತಗುಲಿತ್ತು. ಮನೆಯೊಳಗೆ ದಟ್ಟ ಹೊಗೆ ಅವರಿಸಿಕೊಂಡಿದ್ದರಿಂದ ದಂಪತಿ ಮನೆಯಿಂದ ಹೊರಬರಲಾರದೇ ಪರದಾಡಿ ಕೊನೆಗೆ ಬೆಂಕಿಗಾಹುತಿಯಾಗಿದ್ದಾರೆ. ಇದನ್ನೂ ಓದಿ: 10ರ ಬಾಲಕನ ನರಬಲಿ – ಕುಟುಂಬದವರೇ ಕತ್ತು ಸೀಳಿ ಕೊಂದ್ರು

    ದಂಪತಿಗೆ ಇಬ್ಬರು ಮಕ್ಕಳಿದ್ದು, ಅವರು ಅಜ್ಜ ಹಾಗೂ ಅಜ್ಜಿಯೊಂದಿಗೆ ಮನೆಯ ಕೆಳಮಹಡಿಯಲ್ಲಿ ಮಲಗಿದ್ದರು. ಇದರಿಂದಾಗಿ ಸದ್ಯ ಅವರೆಲ್ಲರೂ ಪ್ರಾಣಾಪಾಯದಿಂದ ಪಾರಾಗಿದ್ದಾರೆ.

    ಘಟನಾ ಸ್ಥಳಕ್ಕೆ ಅಗ್ನಿಶಾಮಕ ದಳ ಸಿಬ್ಬಂದಿ ಆಗಮಿಸಿ ಬೆಂಕಿ ನಂದಿಸಲು ಹರಸಾಹಸ ಪಟ್ಟಿದ್ದಾರೆ. ಕೊನೆಗೆ ಮೃತದೇಹಗಳನ್ನು ಹೊರತೆಗೆದಿದ್ದಾರೆ. ಸೈದಾಪುರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ. ಇದನ್ನೂ ಓದಿ: ಅಮಿತ್ ಶಾ ಸಂಚಾರದ ವೇಳೆ ಭದ್ರತಾ ವೈಫಲ್ಯ – ವಾಹನಗಳನ್ನು ಬೆನ್ನಟ್ಟಿದ ಬೈಕರ್ಸ್

  • ತಾಯಿಗೆ ದ್ರೋಹ ಮಾಡಿದ ಬಾಬುರಾವ್ ಚಿಂಚನಸೂರು – ಗಿರೀಶ್ ಮಟ್ಟಣ್ಣನವರ್

    ತಾಯಿಗೆ ದ್ರೋಹ ಮಾಡಿದ ಬಾಬುರಾವ್ ಚಿಂಚನಸೂರು – ಗಿರೀಶ್ ಮಟ್ಟಣ್ಣನವರ್

    – ವರ್ಗಾವಣೆ ದಂಧೆಯಿಂದ ಹಣ ಸಂಪಾದನೆ ಗಂಭೀರ ಆರೋಪ

    ಯಾದಗಿರಿ: ಮಾಜಿ ಸಚಿವ ಬಾಬುರಾವ್ ಚಿಂಚನಸೂರು (Baburao Chinchansur) ಬಿಜೆಪಿ (BJP) ತಾಯಿ ಪಕ್ಷ ಎಂದು ಹೇಳಿದ್ದರು. ಈಗ ಅದೇ ತಾಯಿಗೆ ದ್ರೋಹ ಮಾಡಿ ಹೋಗಿದ್ದಾರೆ. ಇದರಿಂದ ಗುರಮಠಕಲ್ ಮತಕ್ಷೇತ್ರದ ಜನರಿಗೆ ಮೋಸ ಮಾಡಿದ್ದಾರೆ ಎಂದು ಮಾಜಿ ಕಾಡಾ ಅಧ್ಯಕ್ಷ ಹಾಗೂ ಬಿಜೆಪಿ ಮುಖಂಡ ಗಿರೀಶ್ ಮಟ್ಟಣ್ಣನವರ್ (Girish Mattannavar) ಆರೋಪಿಸಿದ್ದಾರೆ.

    ಯಾದಗಿರಿಯಲ್ಲಿ (Yadgiri) ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬಾಬುರಾವ್ ಚಿಂಚನಸೂರ್‍ಗೆ ಬಿಜೆಪಿ ಪಕ್ಷ ಎಲ್ಲಾ ಅಧಿಕಾರ ನೀಡಿತ್ತು. ಆದರೂ ಅಧಿಕಾರದ ದುರಾಸೆಗೆ ಪಕ್ಷಕ್ಕೆ ರಾಜೀನಾಮೆ ನೀಡಿರುವುದು ಕೋಲಿ ಸಮಾಜಕ್ಕೆ ಅನ್ಯಾಯವಾಗಿದೆ. ವಿಧಾನ ಪರಿಷತ್ ಸದಸ್ಯ ಸ್ಥಾನ, ನಿಜಶರಣ ಅಂಬಿಗರ ಚೌಡಯ್ಯ ಅಭಿವೃದ್ಧಿ ನಿಗಮದ ಅಧ್ಯಕ್ಷ ಸ್ಥಾನ ಪಡೆದು ಅಧಿಕಾರ ಅನುಭವಿಸಿ ಪಕ್ಷ ತ್ಯಜಿಸಿರುವುದು ನೋವಿನ ಸಂಗತಿ ಎಂದಿದ್ದಾರೆ. ಇದನ್ನೂ ಓದಿ: ಮುಸ್ಲಿಂ ಟೋಪಿ ಧರಿಸಿ ಮಸೀದಿ ನಿರ್ಮಾಣಕ್ಕೆ ಭೂಮಿಪೂಜೆ ಮಾಡಿದ ಬಿಜೆಪಿ ಶಾಸಕ

    ಶೋಷಿತ ವರ್ಗಗಳ ಏಳಿಗೆಗಾಗಿ ಕೆಲಸ ಮಾಡುತ್ತಾರೆ ಎಂದು ಅಧಿಕಾರ ನೀಡಿದ್ದರು. ಅವರ ಪತ್ನಿ ಅಮರೇಶ್ವರಿ ಚಿಂಚನಸೂರ್ ಅವರನ್ನು ಕೇಂದ್ರ ಆಹಾರ ನಿಗಮದ ನಿರ್ದೇಶಕರನ್ನಾಗಿ ಮಾಡಿದ್ದಾರೆ. ಅದನ್ನೆಲ್ಲ ಚಿಂಚನಸೂರ್ ಮರೆತಿದ್ದಾರೆ ಎಂದು ಕಿಡಿಕಾರಿದ್ದಾರೆ.

    2019ರ ಲೋಕಸಭಾ ಚುನಾವಣೆಯಲ್ಲಿ ಮಲ್ಲಿಕಾರ್ಜುನ ಖರ್ಗೆ ಅವರನ್ನ ಜಿದ್ದಿಗೆ ಬಿದ್ದು ಸೋಲಿಸಿದ್ರು. ಪ್ರಿಯಾಂಕ್ ಖರ್ಗೆಯವರನ್ನು ಸೋಲಿಸುವುದಾಗಿ ತೊಡೆತಟ್ಟಿ, ಏಕವಚನದಲ್ಲಿ ವಾಗ್ದಾಳಿ ನಡೆಸಿದ್ದರು. 15 ದಿನಗಳ ಹಿಂದೆ ನಡೆದ ವಿಜಯ ಸಂಕಲ್ಪ ಯಾತ್ರೆಯಲ್ಲಿ ಕಾಂಗ್ರೆಸ್‌ನ (Congress) ರಾಜ್ಯ ಹಾಗೂ ರಾಷ್ಟ್ರೀಯ ನಾಯಕರ ವಿರುದ್ಧ ವಾಗ್ದಾಳಿ ನಡೆಸಿದ್ದ ಚಿಂಚನಸೂರ್ ಸಿದ್ದರಾಮಯ್ಯ, ಡಿಕೆಶಿ ಹಾವು ಮುಂಗುಸಿಯಂತಿದ್ದಾರೆ. ರಾಹುಲ್ ಗಾಂಧಿ ಅವರು ಬಚ್ಚಾ ಎಂದು ಹಿಯಾಳಿಸಿದ್ದರು. ಆದರೆ ನೈತಿಕತೆ ಇಲ್ಲದೇ ಕಾಂಗ್ರೆಸ್ ಪಕ್ಷಕ್ಕೆ ಯಾವ ಮುಖವನ್ನು ಇಟ್ಟುಕೊಂಡು ಸೇರ್ಪಡೆ ಮಾಡಿಕೊಳ್ಳುತ್ತಾರೆ ಎಂದು ಕೈ ನಾಯಕರಿಗೆ ಕುಟುಕಿದ್ದಾರೆ.

    ಶಾಸಕ ಹಾಗೂ ಸಚಿವರಾಗಿದ್ದಾಗ ಬಾಬುರಾವ್ ಚಿಂಚನಸೂರ್ ವರ್ಗಾವಣೆ ದಂಧೆ ಮಾಡಿ, ಲಕ್ಷಾಂತರ ರೂ. ವಸೂಲಿ ಮಾಡಿದ್ದಾರೆ. ಒಂದೊಂದು ಹುದ್ದೆಗೆ ಐದು ಅಧಿಕಾರಿಗಳನ್ನು ನೇಮಿಸಿ ಪ್ರತಿಯೊಬ್ಬ ಅಧಿಕಾರಿಗಳಿಂದಲೂ ಹಣ ಪಡೆದು ವಂಚನೆ ಮಾಡಿದ್ದಾರೆ ಎಂದು ಆರೋಪಿಸಿದ್ದಾರೆ.

    ಮೂರ್ತಿ ಚಿಕ್ಕದಾದರೂ ಬಾಬುರಾವ್ ಚಿಂಚನಸೂರ್ ಅವರ ಆಸೆ ದೊಡ್ಡದು. ಸಮುದಾಯದ ಹೆಸರಿನಲ್ಲಿ ಅಧಿಕಾರ ಅನುಭವಿಸಿ, ಇಡೀ ರಾಜ್ಯದ ಕೋಲಿ ಸಮಾಜದ ಜನತೆಗೆ ಅನ್ಯಾಯ ಮಾಡಿದ ಅವರಿಗೆ ಮತದಾರರು ಪಾಠ ಕಲಿಸಲಿದ್ದಾರೆ ಎಂದು ಆಕ್ರೋಶ ಹೊರ ಹಾಕಿದ್ದಾರೆ. ಇದನ್ನೂ ಓದಿ: ಜೆಡಿಎಸ್ ನಂಬಿ ಮೋಸ ಹೋದ ಒಕ್ಕಲಿಗರು ಈಗ ಅಭಿವೃದ್ಧಿ ಕಡೆಗೆ ಮುಖ ಮಾಡಿದ್ದಾರೆ: ಮಸಾಲಾ ಜಯರಾಮ್

  • ಪೊಲೀಸರ ಮೇಲೆ ಹಲ್ಲೆ ಮಾಡಿ ಪರಾರಿಯಾಗಲು ಯತ್ನ- ಗ್ಯಾಂಗ್ ಲೀಡರ್ ಮೇಲೆ ಫೈರಿಂಗ್

    ಪೊಲೀಸರ ಮೇಲೆ ಹಲ್ಲೆ ಮಾಡಿ ಪರಾರಿಯಾಗಲು ಯತ್ನ- ಗ್ಯಾಂಗ್ ಲೀಡರ್ ಮೇಲೆ ಫೈರಿಂಗ್

    ಯಾದಗಿರಿ: ಪೊಲೀಸರ ಮೇಲೆ ಪಿಸ್ತೂಲ್ ಹಾಗೂ ಚಾಕುವಿನಿಂದ ಹಲ್ಲೆ ಮಾಡಿ ಪರಾರಿಯಾಗಲು ಯತ್ನಿಸಿದ ಡಕಾಯಿತಿ (Robbery) ಗ್ಯಾಂಗ್ ಲೀಡರ್ ಮೇಲೆ ಪೊಲೀಸರು ಫೈರಿಂಗ್ ಮಾಡಿ ಬಂಧಿಸಿರುವ ಘಟನೆ ಯಾದಗಿರಿಯಲ್ಲಿ (Yadgiri) ನಡೆದಿದೆ.

    ಆರೋಪಿ ಮಹಮ್ಮದ್ ರಫಿಯನ್ನು ಬಂಧಿಸಲು ಪೊಲೀಸರು ತೆರಳಿದ್ದಾಗ ಆತ ಪಿಸ್ತೂಲ್ ಹಾಗೂ ಚಾಕುವಿನಿಂದ ಹೆದರಿಸಿದ್ದಾನೆ. ಈ ವೇಳೆ ಸಿಪಿಐ ಸುನೀಲ್ ವಿ.ಮೂಲಿಮನಿ, ಪಿಸಿ ಅಬ್ದುಲ್ ಭಾಷ ಹಾಗೂ ಹರಿನಾಥರೆಡ್ಡಿಯವರು ಆರೋಪಿಯನ್ನು ಹಿಡಿಯಲು ಯತ್ನಿಸಿದ್ದಾರೆ. ಆಗ ಆರೋಪಿ ಮೂವರ ಮೇಲೂ ಹಲ್ಲೆ ಮಾಡಿ ಪರಾರಿಯಾಗಲು ಯತ್ನಿಸಿದ್ದಾನೆ. ಆತ್ಮರಕ್ಷಣೆಗಾಗಿ ಸಿಪಿಐ ಸುನೀಲ್ ಆರೋಪಿಯ ಕಾಲಿಗೆ ಗುಂಡು ಹಾರಿಸಿದ್ದಾರೆ. ಇದನ್ನೂ ಓದಿ: ಪರೀಕ್ಷಾ ಕೇಂದ್ರದಲ್ಲಿ ಎಡವಟ್ಟು- ಮೊಬೈಲ್ ಕೊಂಡೊಯ್ದು ಸೆಲ್ಫಿ ಕ್ಲಿಕ್ಕಿಸಿದ ಮೇಲ್ವಿಚಾರಕಿ

    ಪ್ರಕರಣದ ಹಿನ್ನೆಲೆ: ಫೆ. 24ರಂದು ಯಾದಗಿರಿ ನಗರದಲ್ಲಿ ಉದ್ಯಮಿ ದೀಪಕ್ ನಂದಕಿಶೋರ್ ಮನೆಯಲ್ಲಿ ಕಳ್ಳತನ ನಡೆದಿತ್ತು. ಎಂಟರಿಂದ ಹತ್ತು ಜನರ ತಂಡದಲ್ಲಿ ನಾಲ್ಕು ಜನ ದೀಪಕ್ ನಂದಕಿಶೋರ್ ಮನೆಯೊಳಗೆ ನುಗ್ಗಿ ಪಿಸ್ತೂಲ್ ತೋರಿಸಿ ಚಿನ್ನ, ಬೆಳ್ಳಿ, ಮೊಬೈಲ್ ಹಾಗೂ ಹಣವನ್ನು ದೋಚಿದ್ದರು.

    ದೀಪಕ್ ಕುಟುಂಬಸ್ಥರು ವಿರೋಧಿಸಿದಾಗ ಕಾರದಪುಡಿ ಎರಚಿ ವಿಕೃತಿ ಮರೆದಿದ್ದರು. ಈ ವೇಳೆ ದೀಪಕ್ ಸಹೋದರ ಮನೆಯ ಮಹಡಿಯಿಂದ ಹಾರಿ ಕಿರುಚಾಡಿ ಜನರನ್ನ ಸೇರಿಸಿದ್ದರು. ಜನ ಬರುವಷ್ಟರಲ್ಲಿ ಕಳ್ಳರು ತಪ್ಪಿಸಿಕೊಂಡಿದ್ದರು. ನಗರದ ಪ್ರಮುಖ ಸರ್ಕಲ್ ಬಳಿ ಇರುವ ಸಿಸಿ ಕ್ಯಾಮೆರಾಗಳ ದೃಶ್ಯಾವಳಿಗಳನ್ನು ಪರಿಶೀಲಿಸಿದಾಗ ಪೊಲೀಸರಿಗೆ ಸಂಪೂರ್ಣ ಮಾಹಿತಿ ಸಿಕ್ಕಿತ್ತು.

    ಪ್ರಕರಣ ಸಂಬಂಧ ಯಾದಗಿರಿ ಎಸ್ಪಿ ಸಿಬಿ ವೇದಮೂರ್ತಿ, ಎಸ್ಪಿ ಸುನೀಲ್ ವಿ ಮೂಲಿಮನಿ ನೇತೃತ್ವದಲ್ಲಿ ಮೂರು ವಿಶೇಷ ತಂಡಗಳನ್ನು ರಚಿಸಿ ಆರೋಪಿಗಳ ಬಂಧನಕ್ಕೆ ಬಲೆ ಬೀಸಿದ್ದರು.

    CRIME 2

    ಸತತ 15 ದಿನಗಳ ಕಾಲ ಹೈದ್ರಾಬಾದ್ (Hyderabad), ನಾರಾಯಣಪೇಟೆ ಹಾಗೂ ರಾಯಚೂರು (Raichur) ಜಿಲ್ಲೆಗಳಲ್ಲಿ ಕಾರ್ಯಾಚರಣೆ ಮಾಡಿದ್ದ ಪೊಲೀಸರ ತಂಡ ಭಾನುವಾರ ನಾಲ್ವರು ಆರೋಪಿಗಳನ್ನ ಬಂಧಿಸಿದ್ದರು. ಮಹ್ಮದ್ ಸಾಜೀದ್, ಸೈಯದ್ ಮುಕ್ತಿಯಾರ್, ಮಹೆಬೂಬ್, ಶಹಬಾಜ್ ಹೈಯಾಸ್ ಬಂಧಿತ ಆರೋಪಿಗಳು. ಆದರೆ ಗ್ಯಾಂಗ್ ಲೀಡರ್ ಮಹಮ್ಮದ್ ರಫೀ ಹಾಗೂ ಸಲೀಂ ಪೊಲೀಸರಿಗೆ ಚಳ್ಳೆ ಹಣ್ಣು ತಿನ್ನಿಸಿ ಕೂದಲೆಳೆ ಅಂತರದಲ್ಲಿ ತಪ್ಪಿಸಿಕೊಳ್ಳುತ್ತಿದ್ದರು.

    ಗ್ಯಾಂಗಸ್ಟರ್ ಮಹಮ್ಮದ್ ರಪಿ, ಉದ್ಯಮಿ ದೀಪಕ್ ನಂದಕಿಶೋರ್ ಕಾರ್ ಡ್ರೈವರ್ ಆಗಿ ಕೆಲಸ ಮಾಡಿದ್ದ. ನಂದಕಿಶೋರ್ ಸಿಗರೇಟ್ ಸೇರಿದಂತೆ ಸಗಟು ವ್ಯಾಪಾರದ ವ್ಯಾಪರಸ್ಥನಾಗಿದ್ದ. ಕೆಲ ದಿನಗಳ ಹಿಂದೆ ದೀಪಕ್ ನಂದಕಿಶೋರ್ ಮನೆಯಲ್ಲಿ ಸಿಗರೇಟ್ ಬಾಕ್ಸ್ ಗಳನ್ನ ರಫಿ ಕದ್ದು ಸಿಕ್ಕಿಬಿದ್ದಿದ್ದ. ಆಗ ಪೊಲೀಸರಿಗೆ ದೂರು ನೀಡದೇ ಬುದ್ಧಿ ಹೇಳಿ ಕೆಲಸದಿಂದ ತೆಗೆದಿದ್ದರು. ಇದೇ ಸಿಟ್ಟಿಗೆ ಕಳ್ಳತನದ ಪ್ಲಾನ್ ಮಾಡಿದ್ದ. ಸಲೀಂ ಹಾಗೂ ರಫಿ ಯಾದಗಿರಿ ನಗರದ ವರ್ಕನಳ್ಳಿ ಭಾಗದಲ್ಲಿ ಒಂದೇ ಕಡೆ ಅಡಗಿ ಕುಳಿತಿದ್ದ ಖಚಿತ ಮಾಹಿತಿ ಪಡೆದ ಸಿಪಿಐ ಸುನೀಲ್ ನೇತೃತ್ವದ ತಂಡ ಬೆಳ್ಳಂಬೆಳ್ಳಗ್ಗೆ ದಾಳಿ ನಡೆಸಿದೆ.

    ಗಾಯಗೊಂಡಿದ್ದ ಆರೋಪಿಗೆ ಯಾದಗಿರಿ ಜಿಲ್ಲಾಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗಿದೆ. ಆರೋಪಿಯ ಪ್ರತಿದಾಳಿಯಲ್ಲಿ ಗಾಯಗೊಂಡ ಪೊಲೀಸರಿಗೂ ಚಿಕಿತ್ಸೆ ನೀಡಲಾಗಿದೆ ಎಂದು ಎಸ್‍ಪಿ ವೇದಮೂರ್ತಿ ತಿಳಿಸಿದ್ದಾರೆ. ಇದನ್ನೂ ಓದಿ: ಹೇ ನಡೀಯಪ್ಪ ನೀನು, ನಮಗೆ ತಲೆ ಬಿಸಿಯಾಗಿದೆ: ಸಿದ್ದರಾಮಯ್ಯ ಇನ್ ಟೆನ್ಶನ್

  • ಮಲಮಿಶ್ರಿತ ನೀರು ಸೇವಿಸಿ ಮೂವರ ಸಾವು; 21 ದಿನ ಕಳೆದ್ರೂ ತಪ್ಪಿತಸ್ಥರ‌ ಮೇಲೆ ಇಲ್ಲ ಕ್ರಮ

    ಮಲಮಿಶ್ರಿತ ನೀರು ಸೇವಿಸಿ ಮೂವರ ಸಾವು; 21 ದಿನ ಕಳೆದ್ರೂ ತಪ್ಪಿತಸ್ಥರ‌ ಮೇಲೆ ಇಲ್ಲ ಕ್ರಮ

    ಯಾದಗಿರಿ: ಕಲುಷಿತ ನೀರು (Polluted Water) ಪೂರೈಕೆ ಮಾಡಿ, ಮೂವರು ಮಹಿಳೆಯರ (Woman) ಸಾವಿಗೆ ಕಾರಣರಾದ ಅಧಿಕಾರಿಗಳ ಮೇಲೆ 21 ದಿನ ಕಳೆದರೂ ಕ್ರಮ ಕೈಗೊಳ್ಳಲು ಸರ್ಕಾರ ಹಾಗೂ ಯಾದಗಿರಿ (Yadgiri) ಜಿಲ್ಲಾಡಳಿತ ಮೀನಾಮೇಷ ಎಣಿಸುತ್ತಿದೆ.

    ಯಾದಗಿರಿ ಜಿಲ್ಲೆಯ ಗುರುಮಠಕಲ್ ತಾಲೂಕಿನ ಅನಪುರ ಗ್ರಾಮದಲ್ಲಿ ಫೆ. 15ರಂದು ಕಲುಷಿತ ನೀರು ಸೇವಿಸಿ ವಾಂತಿ, ಭೇದಿಯಿಂದ ಬಳಲಿ ವಿವಿಧ ಆಸ್ಪತ್ರೆಯಲ್ಲಿ 85ಕ್ಕೂ ಹೆಚ್ಚು ಜನರು ದಾಖಲಾಗಿದ್ದರು. ಚಿಕಿತ್ಸೆ ಫಲಿಸದೇ ಮೂವರು ಮಹಿಳೆಯರು ಮೃತಪಟ್ಟಿದ್ದರು. ಈಗ ಗ್ರಾಮದಲ್ಲಿ ವಾಂತಿ ಭೇದಿ ಪ್ರಕರಣಗಳಿಗೆ ಬ್ರೇಕ್ ಬಿದ್ದಿದೆ. ಅನಪುರ ಕಹಿ ಘಟನೆಯು ರಾಜ್ಯದಲ್ಲಿ ಸದ್ದು ಮಾಡಿತ್ತು. ಸಾವಿತ್ರಮ್ಮ, ನರಸಮ್ಮ, ಸಾಯಮ್ಮ ಕಲುಷಿತ ನೀರು ಸೇವಿಸಿ ಮೃತಪಟ್ಟಿದ್ದರು. ಈ ಪ್ರಕರಣ ಸದನದಲ್ಲಿ ಪ್ರಸ್ತಾಪವಾಗಿ ಸದ್ದು ಮಾಡಿತ್ತು. ಸರ್ಕಾರ ಕೂಡ ಮೃತ ಕುಟುಂಬಸ್ಥರಿಗೆ ತಲಾ 5 ಲಕ್ಷ ರೂ. ಘೋಷಣೆ ಮಾಡಿದೆ. ಆದರೆ ಇದುವರೆಗೂ ಆ ಪರಿಹಾರ ಹಣ ಮೃತ ಕುಟುಂಬಗಳಿಗೆ ತಲುಪಿಲ್ಲ.

    ಈ ಎಲ್ಲ ಅವಘಡಕ್ಕೆ ಅನಪುರ ಗ್ರಾಮದಲ್ಲಿ ಪೈಪ್ ಲೀಕೆಜ್ ಆಗಿ ಮಲ ಮಿಶ್ರಿತ ನೀರು ಪೂರೈಕೆ ಮಾಡಲಾಗಿರುವುದು ಸಹ ದೃಢಪಟ್ಟಿದೆ. ಕಲುಷಿತ ನೀರು ಸೇವಿಸಿ ಗ್ರಾಮದಲ್ಲಿ ವಾಂತಿ, ಭೇದಿ ಉಲ್ಬಣಗೊಂಡಿತ್ತು. ಸರ್ಕಾರ ಪಂಚಾಯಿತಿ ಅಧಿಕಾರಿಗಳ ಮೂಲಕ ಹಳ್ಳಿ ಜನರಿಗೆ ಶುದ್ಧ ನೀರು ಪೂರೈಕೆ ಮಾಡಿ ಜನರಿಗೆ ನೀರಿನ ದಾಹ ತಣಿಸಬೇಕಿತ್ತು. ಆದರೆ, ಪಂಚಾಯಿತಿ ಅಧಿಕಾರಿಗಳು ತಾನು ಮಾಡಿದ್ದೆ ಸರಿ ಎನ್ನುವಂತೆ, ಗ್ರಾಮದಲ್ಲಿ ಕಲುಷಿತ ನೀರು ಪೂರೈಕೆಯಾದರೂ ಆರಂಭದಲ್ಲಿ ಕಡಿವಾಣ ಹಾಕಿಲ್ಲ. ಅನಪುರ ಪಿಡಿಓ ವಿಜಯಲಕ್ಷ್ಮಿ, ಪಂಚಾಯಿತಿ ಕಾರ್ಯದರ್ಶಿ, ನೀರು ಪೂರೈಸುವ ಆಪರೇಟರ್ ಸಂಪೂರ್ಣ ನಿರ್ಲಕ್ಷ್ಯ ತೋರಿರುವ ಕುರಿತು ತಪ್ಪಿತಸ್ಥ ಪಂಚಾಯಿತಿ ಹಾಗೂ ಸಿಬ್ಬಂದಿ ವರ್ಗದವರ ಮೇಲೆ ಗುರುಮಠಕಲ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಕಲುಷಿತ ನೀರು ಪೂರೈಕೆ ಮಾಡಿ 3 ಜನರ ಸಾವಿಗೆ ಕಾರಣರಾದವರ ಮೇಲೆ ಎಫ್‌ಐಆರ್ ದಾಖಲಾಗಿದೆ.

    ಪೊಲೀಸರು ಸ್ವಯಂಪ್ರೇರಿತವಾಗಿ ಗುರುಮಠಕಲ್ ಠಾಣೆಯಲ್ಲಿ ಪಿಡಿಓ, ಕಾರ್ಯದರ್ಶಿ, ಪಂಪ್ ಆಪರೇಟರ್, ಸಿಬ್ಬಂದಿ ವರ್ಗದವರ ಮೇಲೆ ಪ್ರಕರಣ ದಾಖಲಿಸಲಾಗಿದೆ. ಎಫ್‌ಐಆರ್ ದಾಖಲಾದರು. ಪಿಡಿಓ ವಿಜಯಲಕ್ಷ್ಮಿ ಸೇರಿ ಉಳಿದವರ ಮೇಲೆ ಕ್ರಮಕೈಗೊಂಡಿಲ್ಲ. ತಪ್ಪಿತಸ್ಥರ ತಲೆದಂಡವಾಗಿಲ್ಲ. ತಪ್ಪಿತಸ್ಥರ ಮೇಲೆ ಕ್ರಮಕೈಗೊಳ್ಳಲು ಮೀನಾಮೇಷ ಮಾಡಲಾಗುತ್ತಿದೆ. ಘಟನೆ ಜರುಗಿ ಬರೋಬ್ಬರಿ 21 ದಿನಗಳು ಕಳೆದರು ಕ್ರಮಕೈಗೊಳ್ಳದ್ದಕ್ಕೆ ಜನರು ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ. ಇದನ್ನೂ ಓದಿ: ಪ್ರಧಾನಿ ಮೋದಿಗೆ ಪತ್ರ ಬರೆದ 8 ಪಕ್ಷಗಳು – ಏನಿದೆ ಅದರಲ್ಲಿ? – ಪತ್ರ ಬರೆದವರಿಂದ ದೂರ ಉಳಿದ ಕಾಂಗ್ರೆಸ್‌

    ಅನಪುರ ಘಟನೆ ನಂತರ ಈಗ ಚಿನ್ನಕಾರ ಗ್ರಾಮದಲ್ಲಿ ವಾಂತಿ ಭೇದಿ ಕಾಣಿಸಿಕೊಂಡಿದೆ. ಚಿನ್ನಕಾರ ಗ್ರಾಮದಲ್ಲಿ ಪಂಚಾಯಿತಿ ಅಧಿಕಾರಿಗಳು ಕಲುಷಿತ ನೀರು ಪೂರೈಕೆ ಮಾಡಿದ ಹಿನ್ನಲೆ ವಾಂತಿ ಭೇದಿ ಕಾಣಿಸಿಕೊಂಡಿದೆ ಅಂತೆ. ಪದೇ ಪದೇ ಕಲುಷಿತ ನೀರು ಸೇವಿಸಿ ಜನರು ವಾಂತಿ ಭೇದಿಯಿಂದ ಬಳಲಿ ಆಸ್ಪತ್ರೆಗೆ ದಾಖಲಾಗುವ ಪ್ರಕರಣಗಳು ಬೆಳಕಿಗೆ ಬರುತ್ತಿವೆ. ಆದರೆ, ಸರ್ಕಾರ, ತಪ್ಪಿತಸ್ಥರ ಮೇಲೆ ಕ್ರಮಕೈಗೊಂಡರೆ ಮತ್ತೆ ಇಂತಹ ಘಟನೆಗಳು ಮರುಕಳಿಸುವದಿಲ್ಲ. ಕೂಡಲೇ ತಪ್ಪಿತಸ್ಥರ ಮೇಲೆ ಕ್ರಮ ಕೈಗೊಂಡು ಖಡಕ್ ನಿರ್ಧಾರ ಕೈಗೊಳ್ಳಬೇಕಿದೆ. ಇದನ್ನೂ ಓದಿ: ಅಶೋಕ್‌ ಜೊತೆ ಇರುವವರೆಲ್ಲ ಕುಂಟ್ಕೊಂಡೆ ಓಡಾಡುತ್ತಾರೆ: ಡಿ.ಕೆ.ಸುರೇಶ್