Tag: Yadgiri

  • ಅಕ್ರಮವಾಗಿ ಮದ್ಯ ಮಾರಾಟ -ದಂಧೆಕೋರ ಅಂದರ್

    ಅಕ್ರಮವಾಗಿ ಮದ್ಯ ಮಾರಾಟ -ದಂಧೆಕೋರ ಅಂದರ್

    ಯಾದಗಿರಿ: ಅಕ್ರಮವಾಗಿ ಮದ್ಯ ಸಂಗ್ರಹಿಸಿ ಮಾರಾಟ ಮಾಡುತ್ತಿದ್ದ ದಂಧೆಕೋರನನ್ನು ಬಂಧಿಸಿ ಲಕ್ಷಾಂತರ ರೂಪಾಯಿ ಮೌಲ್ಯದ ಮದ್ಯವನ್ನು ಜಪ್ತಿ ಮಾಡಿರುವ ಘಟನೆ ಯಾದಗಿರಿಯಲ್ಲಿ ನಡೆದಿದೆ.

    ಕಟ್ಟುನಿಟ್ಟಿನ ಲಾಕ್‍ಡೌನ್ ಹಿನ್ನೆಲೆ, ಬಾರ್‌ಗಳಲ್ಲಿ ಸಮಯಕ್ಕೆ ಸರಿಯಾಗಿ ಮದ್ಯದ ಸಿಗದ ಹಿನ್ನೆಲೆಯಲ್ಲಿ ಅಕ್ರಮ ಮದ್ಯ ಮಾರಾಟ ಮತ್ತು ಸಾಗಾಟ ಹೆಚ್ಚಾಗಿದೆ. ಅಕ್ರಮ ಮದ್ಯ ಮಾಡುತ್ತಿದ್ದ ದಂಧೆಕೋರನನ್ನು ಸೆರೆ ಹಿಡಿಯುವಲ್ಲಿ ಯಾದಗಿರಿ ಪೊಲೀಸರು ಯಶಸ್ವಿಯಾಗಿದ್ದಾರೆ.

    ಸುರಪುರ ತಾಲೂಕಿನ ಕೆಂಭಾವಿ ಪೊಲೀಸ್ ಠಾಣಾ ವ್ಯಾಪ್ತಿಯ ಬೈಚಬಾಳ ಗ್ರಾಮದಲ್ಲಿ ಅಕ್ರಮವಾಗಿ ಮದ್ಯ ಸಂಗ್ರಹಿಸಿಟ್ಟು ಮಾರಾಟ ಮಾಡುಲಾಗುತ್ತಿತ್ತು. ಡಿವೈಎಸ್ಪಿ ವೆಂಕಟೇಶ ಉಗಿಬಂಡಿ, ಸಿಪಿಐ ದೌಲತ್ ಕುರಿ ನೇತೃತ್ವದಲ್ಲಿ ಕಾರ್ಯಚರಣೆ ನಡೆಸಿದ ಪೊಲೀಸರ ತಂಡ ಅಕ್ರಮ ಮದ್ಯ ಮಾರಾಟದಲ್ಲಿ ತೊಡಗಿದ್ದ ವ್ಯಕ್ತಿ ಬಂಧಿಸಿದ್ದಾರೆ. ಸುಮಾರು ಒಂದು ಲಕ್ಷ ರೂಪಾಯಿ ಬೆಲೆ ಬಾಳುವ ಮದ್ಯವನ್ನು ಪೊಲೀಸರ ವಶಕ್ಕೆ ಪಡೆದಿದ್ದಾರೆ.

  • ನಮ್ಮ ಲಾರಿಗೆ ದಂಡ ಹಾಕಿದ್ದು ಯಾಕೆ – ಲಾರಿ ಮಾಲೀಕರ ಸಂಘದ ಮುಖಂಡ ಅವಾಜ್

    ನಮ್ಮ ಲಾರಿಗೆ ದಂಡ ಹಾಕಿದ್ದು ಯಾಕೆ – ಲಾರಿ ಮಾಲೀಕರ ಸಂಘದ ಮುಖಂಡ ಅವಾಜ್

    ಯಾದಗಿರಿ: ಲಾರಿ ಮಾಲೀಕನೊಬ್ಬ ಟ್ರಾಫಿಕ್ ಪೊಲೀಸರಿಗೆ ಅವಾಜ್ ಹಾಕಿರುವ ಘಟನೆ ಯಾದಗಿರಿಯಲ್ಲಿ ನಡೆದಿದೆ.

    ನಿವೇನು ಆಫೀಸರೇನು ಎಂದು ಟ್ರಾಫಿಕ್ ಠಾಣೆಯ ಪಿಎಸ್‍ಐ ಪ್ರದೀಪ್ ಅವರಿಗೆ ಲಾರಿ ಮಾಲೀಕ ಅಬ್ಬಾಸ್ ಅಲಿ ಅವಾಜ್ ಹಾಕಿದ್ದಾನೆ. ಯಾದಗಿರಿ ನಗರದ ಹಳೆ ಬಸ್ ನಿಲ್ದಾಣದ ಮುಂದೆ ಈ ಘಟನೆ ನಡೆದಿದೆ.

    ಚಾಲನಾ ಪರವಾನಗಿ ಇಲ್ಲದೇ ಲಾರಿ ಚಾಲನೆ ಮಾಡಿದಕ್ಕೆ ಸಂಚಾರಿ ಪೊಲೀಸರಿಂದ ದಂಡ ಹಾಕಿದ್ದಾರೆ. ಇದಕ್ಕೆ ಅಕ್ರೋಶಗೊಂಡ ಲಾರಿ ಮಾಲೀಕ ಪೊಲೀಸರ ಜೊತೆ ಮಾತಿನ ಚಕಮಕಿ ನಡೆದಿದೆ.

    ಈ ವೇಳೆ ಕೋಪಗೋಂಡ ಲಾರಿ ಮಾಲೀಕ ಪೊಲೀಸರ ವಿರುದ್ಧ ತಿರುಗಿ ಬಿದ್ದಿದ್ದಾನೆ. ನಾನು ಲಾರಿ ಮಾಲೀಕರ ಸಂಘದ ಮುಖಂಡನಿದ್ದೇನೆ ನಮ್ಮ ಲಾರಿಗೆ ದಂಡ ಯಾಕೆ ಹಾಕಿದ್ದೀರಿ ಎಂದು ಲಾರಿ ಮಾಲೀಕ ಅವಾಜ್ ಹಾಕಿ ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ್ದಾನೆ.

  • ಶಾಲೆಯಲ್ಲಿ ಮಕ್ಕಳ ಮುಂದೆ ಶಿಕ್ಷಕಿ ಮೇಲೆ ಶಿಕ್ಷಕನಿಂದ ಮಾರಣಾಂತಿಕ ಹಲ್ಲೆ

    ಶಾಲೆಯಲ್ಲಿ ಮಕ್ಕಳ ಮುಂದೆ ಶಿಕ್ಷಕಿ ಮೇಲೆ ಶಿಕ್ಷಕನಿಂದ ಮಾರಣಾಂತಿಕ ಹಲ್ಲೆ

    ಯಾದಗಿರಿ: ಶಿಕ್ಷಕನೊಬ್ಬ ಸಹ ಶಿಕ್ಷಕಿ ಮೇಲೆ ಹಲ್ಲೆ ನಡೆಸಿದ ಘಟನೆ ಯಾದಗಿರಿ ತಾಲೂಕಿನ ಬಳಿಚಕ್ರ ಸರ್ಕಾರಿ ಹಿರಿಯ ಶಾಲೆಯಲ್ಲಿ ನಡೆದಿದೆ.

    ಶಿಕ್ಷಕ ಸೋಮಶೇಖರ್ ರಾಠೋಡ್ ಎಂಬಾತ ಶಿಕ್ಷಕಿ ಪುಷ್ಪಾವತಿ (36) ಮೇಲೆ ಮಾರಣಾಂತಿಕ ಹಲ್ಲೆ ನಡೆಸಿದ್ದಾನೆ. ಹಲ್ಲೆಗೊಳಗಾದ ಶಿಕ್ಷಕಿ ಪುಷ್ಪಾವತಿ ಪ್ರಜ್ಞೆ ತಪ್ಪಿದ್ದು, ಯಾದಗಿರಿ ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಇಂದು ಬೆಳಗ್ಗೆ ತರಗತಿ ಆರಂಭವಾಗಿ, ವಿದ್ಯಾರ್ಥಿಗಳಿಗೆ ಹಾಲು ವಿತರಣೆ ಮಾಡಿ ತರಗತಿಗಳಿಗೆ ಕಳುಹಿಸಲಾಗುತಿತ್ತು. ಈ ವೇಳೆ ಶಿಕ್ಷಕ ಪುಷ್ಪ ಅವರ ಮೇಲೆ ಹಲ್ಲೆ ನಡೆಸಿದ್ದಾನೆ.

    ಶಾಲೆಯಲ್ಲೇ ಶಿಕ್ಷಕನ ವರ್ತನೆ ಕಂಡು ವಿದ್ಯಾರ್ಥಿಗಳು ಮತ್ತು ಸಹ ಶಿಕ್ಷಕರುಗಳು ಬೆಚ್ಚಿ ಬಿದ್ದಿದ್ದಾರೆ. ಸಹ ಶಿಕ್ಷಕರು ಎಷ್ಟು ಹೇಳಿದ್ರು ಅವರ ಮಾತು ಕೇಳದ ರಾಥೋಡ್ ಶಿಕ್ಷಕಿಯನ್ನು ನಿಂದಿಸಿ ಹಲ್ಲೆ ನಡೆಸಿದ್ದಾನೆ. ಶಿಕ್ಷಕ ಹಲ್ಲೆ ನಡೆಸುತ್ತಿರುವ ದೃಶ್ಯಗಳನ್ನು ಮೊಬೈಲ್ ನಲ್ಲಿ ಸೆರೆ ಹಿಡಿಯಲಾಗಿದೆ. ಶಿಕ್ಷಕ ರಾಥೋಡ ಹಲವು ಬಾರಿ ಈ ರೀತಿಯ ವರ್ತನೆ ತೋರಿದ್ದು, ರಾಥೋಡ್ ವಿರುದ್ಧ ಯಾದಗಿರಿ ನಗರ ಮಹಿಳಾ ಪೊಲೀಸ್ ಠಾಣೆಯ ಪ್ರಕರಣ ದಾಖಲಾಗಿದೆ. ಹಲ್ಲೆಗೆ ನಿಖರ ಕಾರಣ ತಿಳಿದು ಬಂದಿಲ್ಲ.

  • ಮಂತ್ರಿ ಹೆಸರು ಗೊತ್ತಿಲ್ದೇ ಹೇಗೆ ಕೆಲ್ಸ ಮಾಡ್ತೀರಾ: ಬಿಇಓ ಕಚೇರಿ ಸಿಬ್ಬಂದಿಗೆ ಪ್ರಭು ಚವ್ಹಾಣ್ ಕ್ಲಾಸ್

    ಮಂತ್ರಿ ಹೆಸರು ಗೊತ್ತಿಲ್ದೇ ಹೇಗೆ ಕೆಲ್ಸ ಮಾಡ್ತೀರಾ: ಬಿಇಓ ಕಚೇರಿ ಸಿಬ್ಬಂದಿಗೆ ಪ್ರಭು ಚವ್ಹಾಣ್ ಕ್ಲಾಸ್

    ಯಾದಗಿರಿ: ಪಶು ಸಂಗೋಪನೆ ಸಚಿವ ಪ್ರಭು ಚವ್ಹಾಣ್ ಯಾರೆಂದು ಗೊತ್ತಿರದೆ ಬಿಇಓ ಕಚೇರಿಯ ಸಿಬ್ಬಂದಿ ಪೇಚಿಗೆ ಸಿಲುಕಿದ ಘಟನೆ ಯಾದಗಿರಿಯಲ್ಲಿ ಇಂದು ನಡೆದಿದೆ. ಸ್ವತಃ ಸಚಿವರೆದುರೇ ನೀವು ಯಾರು ಅಂತ ಕೇಳಿ, ಯಾದಗಿರಿ ಬಿಇಓ ಕಚೇರಿಯ ವ್ಯವಸ್ಥಾಪಕ ಲಕ್ಷ್ಮೀಕಾಂತ್ ರೆಡ್ಡಿ ಸಚಿವರನ್ನು ಮುಜುಗರಕ್ಕೀಡು ಮಾಡಿದ್ದಾರೆ.

    ಜಿಲ್ಲಾ ಉಸ್ತುವಾರಿ ಸಚಿವರಾಗಿರುವ ಪ್ರಭು ಚವ್ಹಾಣ್ ಅವರು ಇಂದು ನಗರದ ವಿವಿಧ ಸರ್ಕಾರಿ ಕಚೇರಿಗಳಿಗೆ ದಿಢೀರ್ ಭೇಟಿ ನೀಡಿ, ಅಧಿಕಾರಿಗಳ ಹಾಜರಾತಿ ಮತ್ತು ಕಾರ್ಯವೈಖರಿಯನ್ನು ಪರಿಶೀಲಿಸಿದರು. ಈ ವೇಳೆ ನಗರದ ಬಿಇಓ ಕಚೇರಿಗೂ ಭೇಟಿ ನೀಡಿದರು. ಸಚಿವ ದಿಢೀರ್ ಭೇಟಿಯಿಂದ ಕಕ್ಕಾಬಿಕ್ಕಿಯಾದ ಅಧಿಕಾರಿಗಳನ್ನು ಸಚಿವರು ಚಳಿ ಬಿಡಿಸಿದರು.

    ಈ ವೇಳೆ ನಾನು ಯಾರು ಅಂತ ಅಧಿಕಾರಿಗಳಿಗೆ ಪ್ರಶ್ನಿಸಿದರು. ಲಕ್ಷ್ಮೀಕಾಂತ್ ರೆಡ್ಡಿ  ಸಚಿವರ ಹೆಸರು ಹೇಳಲಿಲ್ಲ. ಇದರಿಂದ ಗರಂ ಆದ ಸಚಿವರು ಲಕ್ಷ್ಮೀಕಾಂತ್ ರೆಡ್ಡಿ ಅವರನ್ನು ತರಾಟೆ ತೆಗೆದುಕೊಂಡರು. ನಾನು ಯಾರು ಅಂತ ಗೊತ್ತಿಲ್ಲ ಅಂದ್ರೆ ಇಲಾಖೆ ಹೇಗೆ ಉದ್ದಾರ ಮಾಡ್ತಿರಾ? ಜಿಲ್ಲಾ ಉಸ್ತುವಾರಿ ಸಚಿವರ ಹೆಸರು ಗೊತ್ತಿಲ್ಲ ಅಂದ್ರೆ ಹೇಗೆ? ಇನ್ನು ಕೆಲ್ಸಾ ಹೇಗೆ ಮಾಡ್ತಿರಾ ಎಂದು ಹಿಗ್ಗಾಮುಗ್ಗಾ ಬೈದರು.

    ಈ ಹಿಂದೆಯೂ ಬೀದರ್ ನಲ್ಲಿ ಇಂತಹದ್ದೇ ಘಟನೆ ನಡೆದಿತ್ತು. ಪಶು ಸಂಗೋಪನೆ ಸಚಿವರು ಬೀದರ್ ಜಿಲ್ಲೆಯ ಬಸವಕಲ್ಯಾಣದ ಸರ್ಕಾರಿ ಆಸ್ಪತ್ರೆಗೆ ದಿಢೀರ್ ಭೇಟಿ ನೀಡಿದ್ದರು. ಈ ವೇಳೆ ಮದ್ಯ ಸೇವಿಸಿ, ಗುಟ್ಕಾ  ಹಾಕಿಕೊಂಡು ಕೆಲಸ ಮಾಡುತ್ತಿದ್ದ ಸಿಬ್ಬಂದಿಯನ್ನು ತರಾಟೆ ತೆಗೆದುಕೊಂಡಿದ್ದರು. ಅಷ್ಟೇ ಅಲ್ಲದೆ ನಾನು ಯಾರು ಎಂದು ಸಿಬ್ಬಂದಿಗೆ ಪ್ರಶ್ನಿಸಿದ್ದರು. ಆದರೆ ಸಿಬ್ಬಂದಿ ಸಚಿವರ ಹೆಸರು ಗೊತ್ತಿಲ್ಲದೆ ಪೇಚಿಗೆ ಸಿಲುಕಿದ್ದ. ಇದರಿಂದಾಗಿ ಇಲಾಖೆ ಸಿಬ್ಬಂದಿಯೇ ತಮ್ಮ ಹೆಸರು ಹೇಳದ್ದಕ್ಕೆ ಸಚಿವರು ಕೂಡ ಮುಜುಗರಕ್ಕೆ ಒಳಗಾಗಿದ್ದರು.

  • ಅಂಬೇಡ್ಕರ್ ನಾಮಫಲಕ ಬಳಕೆ ವಿಚಾರ – ಎರಡು ಸಮುದಾಯಗಳ ಮಧ್ಯೆ ಕಿತ್ತಾಟ

    ಅಂಬೇಡ್ಕರ್ ನಾಮಫಲಕ ಬಳಕೆ ವಿಚಾರ – ಎರಡು ಸಮುದಾಯಗಳ ಮಧ್ಯೆ ಕಿತ್ತಾಟ

    ಯಾದಗಿರಿ: ಸಂವಿಧಾನ ಶಿಲ್ಪಿ ಡಾ.ಬಿ ಆರ್ ಅಂಬೇಡ್ಕರ್ ಅವರ ಭಾವಚಿತ್ರ ಸಹಿತ ನಾಮ ಫಲಕ ಅಳವಡಿಸುವ ವಿಚಾರಕ್ಕಾಗಿ ವಡಗೇರಾ ಪಟ್ಟಣದಲ್ಲಿ ಕುರುಬ ಸಮುದಾಯ ಮತ್ತು ದಲಿತ ಸಂಘಟನೆಗಳ ನಡುವೆ ಕಿತ್ತಾಟ ಆರಂಭವಾಗಿದೆ.

    ಇದೇ ತಿಂಗಳ 8ರಂದು ವಡಗೇರಾ ಪಟ್ಟಣದ ಹಳೆ ಪೊಲೀಸ್ ಠಾಣೆ ಮುಂದೆ ದಲಿತ ಸಮುದಾಯದಿಂದ ಅಂಬೇಡ್ಕರ್ ನಾಮಫಲಕ ಅಳವಡಿಕೆ ಮಾಡಲಾಗಿತ್ತು. ಆದರೆ ನಾಮ ಫಲಕ ಅಳವಡಿಕೆಗೆ ಅನುಮತಿ ಇಲ್ಲವೆಂದು ಪೊಲೀಸರು ಅದನ್ನು ತೆರವುಗೊಳಿಸಿದ್ದರು. ಮತ್ತು ನಾಮ ಫಲಕವನ್ನು ಅನಧಿಕೃತವಾಗಿ ಅಳವಡಿಸಲಾಗಿದೆ ಎಂಬ ಆರೋಪದ ಮೇಲೆ 8 ಜನರ ಮೇಲೆ ವಡಗೇರಾ ಠಾಣೆಯಲ್ಲಿ ಪ್ರಕರಣ ದಾಖಲು ಮಾಡಿಕೊಂಡಿದ್ದರು.

    ಈ ವಿಚಾರಕ್ಕೆ ಈಗ ಪೊಲೀಸರು ಕುರುಬ ಸಮುದಾಯದ ಕುಮ್ಮಕ್ಕಿನಿಂದ ನಾಮಫಲಕ ತೆರವುಗೊಳಿಸಿದ್ದಾರೆಂದು ದಲಿತ ಸಂಘಟನೆಗಳು ಆರೋಪಿಸಿ, ತೆರವುಗೊಳಿಸಿದ ಜಾಗದಲ್ಲಿಯೇ ನಾಮಫಲಕ ಹಾಕಬೇಕೆಂದು ಹಳೆ ಠಾಣೆ ಹಿಂಭಾಗದ ರಸ್ತೆ ತಡೆದು ದಲಿತ ಸಂಘಟನೆಗಳು ಪ್ರತಿಭಟನೆ ಮಾಡಿದ್ದಾರೆ. ಆದರೆ ಇನ್ನೊಂದು ಕಡೆ ಯಾವುದೇ ಕಾರಣಕ್ಕೂ ನಾಮ ಫಲಕ ಅಳವಡಿಸಬಾರದೆಂದು ವಿರೋಧಿಸಿ ಕುರುಬ ಸಮುದಾಯದಿಂದಲೂ ಸಹ ಪ್ರತಿಭಟನೆ ಮಾಡುತ್ತಿದ್ದಾರೆ.

    ಈ ಸಂಬಂಧ ವಡಗೇರಾ ಗ್ರಾಮದಲ್ಲಿ ಬಿಗುವಿನ ವಾತಾವರಣ ಸೃಷ್ಟಿಯಾಗಿದ್ದು, ಗ್ರಾಮದಲ್ಲಿ ವ್ಯಾಪಕ ಪೊಲೀಸ್ ಭದ್ರತೆ ನೀಡಲಾಗಿದೆ.

  • ಗಾಯಾಳುಗಳನ್ನು  ಕಾರಿನಲ್ಲಿ ಆಸ್ಪತ್ರೆಗೆ ದಾಖಲಿಸಿ ಇಂಜೆಕ್ಷನ್ ಕೊಟ್ಟ ಸಂಸದ ಜಾಧವ್

    ಗಾಯಾಳುಗಳನ್ನು ಕಾರಿನಲ್ಲಿ ಆಸ್ಪತ್ರೆಗೆ ದಾಖಲಿಸಿ ಇಂಜೆಕ್ಷನ್ ಕೊಟ್ಟ ಸಂಸದ ಜಾಧವ್

    ಯಾದಗಿರಿ: ಅಪಘಾತಕ್ಕೀಡಾಗಿದ್ದ ಗಾಯಾಳುಗಳನ್ನು ಸ್ವಂತ ತಮ್ಮ ಕಾರಿನಲ್ಲಿ ಆಸ್ಪತ್ರೆಗೆ ದಾಖಲಿಸಿ ಸ್ವತಃ ತಾವೇ ಚಿಕಿತ್ಸೆ ನೀಡಿ ಸಂಸದ ಉಮೇಶ್ ಜಾಧವ್ ಮಾನವೀಯತೆ ಮೆರೆದಿದ್ದಾರೆ.

    ಯಾದಗಿರಿ ನಗರದ ಕೆಎಸ್ಆರ್‌ಟಿಸಿ ಕಾರ್ಯಾಗಾರ ಬಳಿ ಬೈಕ್ ಮತ್ತು ಟಾಟಾ ಏಸ್ ವಾಹನದ ನಡುವೆ ಅಪಘಾತ ನಡೆದಿತ್ತು. ಈ ಘಟನೆಯಲ್ಲಿ ಗುರಮಿಠಕಲ್ ತಾಲೂಕಿನ ಕೆ.ಅರಕೇರಿ ಗ್ರಾಮದ ರಾಠೋಡ ಹಾಗೂ ನರೇಶ್ ಎಂಬುವವರು ತೀವ್ರವಾಗಿ ಗಾಯಗೊಂಡಿದ್ದರು.

    ಆದೇ ದಾರಿಯಲ್ಲಿ ರೈಲು ಕಾರ್ಯಾಗಾರ ವೀಕ್ಷಿಸಲು ತೆರಳುತಿದ್ದ ಉಮೇಶ್ ಜಾಧವ್ ಅವರು ವಾಪಸ್ ಬರುತ್ತಿರುವಾಗ ಘಟನೆ ತಿಳಿದು ತಕ್ಷಣ ಸಹಾಯಕ್ಕೆ ಬಂದಿದ್ದಾರೆ. ಅಂಬುಲೆನ್ಸ್ ಬರುವುದು ತಡವಾಗುತ್ತದೆ ಎಂದು ಬೈಕಿನಲ್ಲಿ ಅಪಘಾತಕ್ಕೀಡಾಗಿದ್ದ ಇಬ್ಬರು ಯುವಕರನ್ನು ತಮ್ಮ ಕಾರಿನಲ್ಲೇ ಹತ್ತಿರದ ಜಿಲ್ಲಾಸ್ಪತ್ರೆಗೆ ಕರೆದುಕೊಂಡು ಹೋಗಿ ದಾಖಲಿಸಿದ್ದಾರೆ ಮತ್ತು ಇಷ್ಟೇ ಅಲ್ಲದೇ ಜಾಧವ್ ಅವರು ಸ್ವತಃ ವೈದ್ಯರಾಗಿರುವುದರಿಂದ ತಾವೇ ಚಿಕಿತ್ಸೆ ಮಾಡಿ ಮಾನವೀಯತೆ ಮೆರೆದಿದ್ದಾರೆ.

     

    ಇದಾದ ನಂತರ ಮಾಧ್ಯಮದವರೊಂದಿಗೆ ಮಾತನಾಡಿದ ಜಾಧವ್ ಅವರು, ರಸ್ತೆಯಲ್ಲಿ ಅಪಘಾತವಾದ ಸಂದರ್ಭದಲ್ಲಿ ಮೊದಲು ಕರೆದುಕೊಂಡು ಹೋಗಿ ಅವರನ್ನು ಆಸ್ಪತ್ರೆಗೆ ದಾಖಲು ಮಾಡಬೇಕು. ಪ್ರಚಾರಕ್ಕಾಗಿ ಫೋಟೋ ತೆಗದುಕೊಳ್ಳುವುದನ್ನು ಮಾಡಬಾರದು ಎಂದು ಮನವಿ ಮಾಡಿದರು.

    ನಂತರ ಆಸ್ಪತ್ರೆಗೆ ಬಂದ ಯಾದಗಿರಿ ನಗರ ಟ್ರಾಫಿಕ್ ಪೋಲೀಸರು ಗಾಯಾಳುಗಳಿಂದ ಘಟನೆಯ ಬಗ್ಗೆ ಮಾಹಿತಿ ಪಡೆದಿದ್ದಾರೆ.

  • ಹೆಣಗಳ ಮೇಲೆ ರಾಜಕೀಯ ಮಾಡಿದ್ದ ಬಿಜೆಪಿ ನಾಯಕರು ಈಗ ಕತ್ತೆ ಕಾಯುತ್ತಿದ್ದೀರಾ: ಪ್ರಮೋದ್ ಮುತಾಲಿಕ್

    ಹೆಣಗಳ ಮೇಲೆ ರಾಜಕೀಯ ಮಾಡಿದ್ದ ಬಿಜೆಪಿ ನಾಯಕರು ಈಗ ಕತ್ತೆ ಕಾಯುತ್ತಿದ್ದೀರಾ: ಪ್ರಮೋದ್ ಮುತಾಲಿಕ್

    – ಗೋ ರಕ್ಷಕ ಶಿವು ಹತ್ಯೆ ಪ್ರಕರಣ ಹಿನ್ನೆಲೆ ಬಿಜೆಪಿ ವಿರುದ್ಧ ಕಿಡಿ

    ಯಾದಗಿರಿ: ಚುನಾವಣೆಯಲ್ಲಿ ಹೆಣಗಳ ಮೇಲೆ ರಾಜಕೀಯ ಮಾಡಿದ ಬಿಜೆಪಿ ಅವರು ಈಗ ಕತ್ತೆ ಕಾಯುತ್ತಿದ್ದೀರಾ? ಚುನಾವಣೆ ಬಳಿಕ ಬಾಯಿ ಬಂದಾಯ್ತ ಎಂದು ಗೋ ರಕ್ಷಕ ಶಿವು ಹತ್ಯೆ ಪ್ರಕರಣದಲ್ಲಿ ಧ್ವನಿ ಎತ್ತದ ಬಿಜೆಪಿ ವಿರುದ್ಧ ಶ್ರೀರಾಮಸೇನೆ ಸಂಸ್ಥಾಪಕ ಪ್ರಮೋದ್ ಮುತಾಲಿಕ್ ಆಕ್ರೋಶ ವ್ಯಕ್ತಪಡಿಸಿದ್ದಾರೆ.

    ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಇತ್ತೀಚಿಗೆ ಬೆಳಗಾವಿಯಲ್ಲಿ ಗೋ ರಕ್ಷಕ ಶಿವಕುಮಾರ್ ಉಪ್ಪಾರರನ್ನು ಕೊಲೆ ಮಾಡಲಾಗಿದೆ. ಇದರ ಬಗ್ಗೆ ಯಾವುದೇ ತನಿಖೆ ನಡೆಸದೇ ಪ್ರಕರಣ ಮುಚ್ಚು ಹಾಕುವ ಪ್ರಯತ್ನ ನಡೆಯತ್ತಿದೆ. ಬಿಜೆಪಿ ಎಂಎಲ್‍ಎ, ಎಂಪಿಗಳು ಏನೂ ಕತ್ತೆ ಕಾಯುತ್ತಿದ್ದೀರಾ? ಚುನಾವಣೆ ವೇಳೆ ಹೆಣಗಳ ಮೇಲೆ ರಾಜಕೀಯ ಮಾಡುತ್ತೀರಾ? ಚುನಾವಣೆ ಮುಗಿದ ಬಳಿಕ ನಿಮ್ಮ ಬಾಯಿ ಬಂದಾಯ್ತ? ಒಬ್ಬರಾದರೂ ಈ ಪ್ರಕರಣದ ಬಗ್ಗೆ ಧ್ವನಿ ಎತ್ತಿದ್ದೀರಾ ಎಂದು ಪ್ರಶ್ನಿಸಿ ಬಿಜೆಪಿ ವಿರುದ್ಧ ವಾಗ್ದಾಳಿ ನಡೆಸಿದರು.

    ಇದೇ ಮುಸ್ಲಿಂ ಸಮುದಾಯದವರಿಗೆ ಆಗಿದ್ದರೆ ಕೋಮುವಾದಿಗಳ ಕೃತ್ಯ, ಶ್ರೀರಾಮಸೇನೆ, ಭಜರಂಗದಳ ಕೃತ್ಯ ಎಂದು ಬೊಬ್ಬೆ ಹೊಡೆಯುತ್ತಿದ್ದರು. ಈ ಪ್ರಕರಣವನ್ನು ಸರ್ಕಾರ ಮುಚ್ಚಿಹಾಕಲು ಪ್ರಯತ್ನಿಸಿದರೆ ರಾಜ್ಯಾದ್ಯಂದ ಉಗ್ರ ಹೋರಾಟ ಮಾಡಬೇಕುತ್ತದೆ ಎಂದು ಎಚ್ಚರಿಕೆ ನೀಡಿದರು.

    ಗೋ ರಕ್ಷಕ ಶಿವು ಪ್ರಕರಣವನ್ನು ಸರಿಯಾದ ತನಿಖೆ ನಡೆಸಿ, ಸತ್ಯಾಂಶ ಬಹಿರಂಗ ಪಡಿಸದೆ ಹೋದರೆ ಬಿಜೆಪಿ ಶಾಸಕರು ಹಾಗೂ ಸಂಸದರ ಮನೆ ಮುಂದೆ ಧರಣಿ ಕೂರುತ್ತೇವೆ ಎಂದು ಅವರು ತಿಳಿಸಿದರು.

  • ರಾಜಕೀಯ ಭವಿಷ್ಯ ನುಡಿದಿದ್ದ ಕೋಡಿಮಠ ಶ್ರೀಗಳಿಗೆ ನೋಟಿಸ್

    ರಾಜಕೀಯ ಭವಿಷ್ಯ ನುಡಿದಿದ್ದ ಕೋಡಿಮಠ ಶ್ರೀಗಳಿಗೆ ನೋಟಿಸ್

    ಯಾದಗಿರಿ: ತಾಲೂಕಿನ ಅಬ್ಬೆತುಮಕೂರನ ಜಾತ್ರೆಯಲ್ಲಿ ಭಾಗವಹಿಸಿ ಲೋಕಸಭಾ ಚುನಾವಣೆ ಬಗ್ಗೆ ಭವಿಷ್ಯ ನುಡಿದಿದ್ದ ಕೋಡಿಮಠದ ಶ್ರೀ ಶಿವಾನಂದ ರಾಜೇಂದ್ರ ಸ್ವಾಮೀಜಿಗಳಿಗೆ ಸಹಾಯಕ ಚುನಾವಣಾಧಿಕಾರಿಗಳು ನೋಟಿಸ್ ಜಾರಿ ಮಾಡಿದ್ದಾರೆ.

    ಚುನಾವಣೆ ನೀತಿಸಂಹಿತೆ ಉಲ್ಲಂಘನೆ ಎಂದು ಶ್ರೀಗಳಿಗೆ ಸಹಾಯಕ ಚುನಾವಣಾಧಿಕಾರಿಗಳದ ಶಂಕರಗೌಡ ಸೋಮನಾಳ ಅವರು ಯಾದಗಿರಿ ಗ್ರಾಮೀಣ ಠಾಣೆ ಪಿಎಸ್‍ಐ ಮೂಲಕ ನೋಟಿಸ್ ನೀಡಿದ್ದಾರೆ. 2019ರ ಲೋಕಸಭಾ ಚುನಾವಣೆಯ ನೀತಿ ಸಂಹಿತೆ ಮಾರ್ಚ್ 10 ರಿಂದಲೇ ಜಾರಿಯಾಗಿದೆ. ನೀವು ಹೇಳಿಕೆ ನೀಡಿರುವುದು ನಿಜವಾದಲ್ಲಿ ಇದು ಮತದಾರರ ಮೇಲೆ ಪ್ರಭಾವ ಬೀರುತ್ತದೆ. ಅದ್ದರಿಂದ 48 ಗಂಟೆಗಳ ಒಳಗೆ ನಿಲಿತ ರೂಪದಲ್ಲಿ ಉತ್ತರಿಸುವಂತೆ ನೋಟಿಸ್ ನಲ್ಲಿ ತಿಳಿಸಲಾಗಿದೆ.

    ಮಾರ್ಚ್ 11 ರಂದು ನಡೆದ ಜಾತ್ರೆಯಲ್ಲಿ ಸತ್ಯ ವಿಷದಂತೆ ಇರುತ್ತೆ ಕುರುವಂಶ ದೊರೆಗಳು ಬಡಿದಾಡ್ಯಾರು ಪಾಂಡವರು ಕೌರವರು ಬಡಿದಾಡ್ಯಾರು, ರತ್ನ ಖಚಿತ ಸುವರ್ಣ ಕಿರೀಟ ಸ್ಥಿರವಾದಿತು ಎಂದು ಭವಿಷ್ಯ ನುಡಿದಿದ್ದರು. ಶ್ರೀಗಳ ಭವಿಷ್ಯ ನುಡಿಯನ್ನು ಕೇಂದ್ರದಲ್ಲಿ ಅಧಿಕಾರ ರಚನೆ ಮಾಡಲು ಶತ್ರುಗಳಂತೆಯಿದ್ದ ಪಕ್ಷಗಳು ಅಂದರೆ ಸಮಾಜವಾದಿ ಬಿಎಸ್‍ಪಿ ಒಂದಾಗಿವೆ. ಘಟಬಂಧನ ರಚನೆ ಮಾಡಿ ಕೇಂದ್ರದಲ್ಲಿ ಅಧಿಕಾರಕ್ಕೆ ಬರಲು ಹವಣಿಸುತ್ತಿವೆ. ಅದರೆ ಮೋದಿಗೆ ಈಗ ಸ್ಥಿರವಾದ ರತ್ನ ಖಚಿತ ಕೀರಿಟ ಈಗಿನ ಚುನಾವಣೆ ನಂತರವೂ ಖಚಿತವಾಗಲಿದೆ. ಬೇವು ಬೆಲ್ಲವಾದಿತು ಅಂದರೆ ಸೈನಿಕರ ಮೇಲಿನ ದಾಳಿ ಪ್ರಧಾನಿ ಮೋದಿ ಪಾಲಿಗೆ ಕಹಿಯ ಬದಲು ಸಿಹಿಯಾಗಲಿದೆ ಎಂದು ಮಠದವರು ವಿಶ್ಲೇಷಿಸಿದ್ದರು. ಈ ಕುರಿತ ವರದಿಯನ್ನ ಪಬ್ಲಿಕ್ ಟಿವಿ ವರದಿ ಮಾಡಿತ್ತು.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv ಮತ್ತು Live  ವೀಕ್ಷಿಸಲು  ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್  ಮಾಡಿ: play.google.com/publictv

  • ಕೊಡಿಹಳ್ಳಿ ಮಠದ ಶ್ರೀಗಳ ಭವಿಷ್ಯ – ಮೋದಿಗೆ ರತ್ನ ಖಚಿತ ಸುವರ್ಣ ಕಿರೀಟ

    ಕೊಡಿಹಳ್ಳಿ ಮಠದ ಶ್ರೀಗಳ ಭವಿಷ್ಯ – ಮೋದಿಗೆ ರತ್ನ ಖಚಿತ ಸುವರ್ಣ ಕಿರೀಟ

    ಯಾದಗಿರಿ: ಲೋಕಸಭಾ ಚುನಾವಣೆ ದಿನಾಂಕ ಘೋಷಣೆ ಬೆನ್ನಲ್ಲೇ ಕೊಡಿಹಳ್ಳಿ ಮಠದ ಶ್ರೀ ಶಿವಾನಂದ ರಾಜೇಂದ್ರ ಸ್ವಾಮೀಜಿಗಳು ಲೋಕಸಭಾ ಚುನಾವಣೆ ಕುರಿತು ಭವಿಷ್ಯ ನುಡಿದಿದ್ದು, ಮತ್ತೆ ಪ್ರಧಾನಿ ಮೋದಿ ಅವರೇ ಪ್ರಧಾನಿ ಅಗುತ್ತಾರೆಂದು ಭವಿಷ್ಯ ಹೇಳಿದ್ದಾರೆ.

    ಯಾದಗಿರಿಯ ಅಬ್ಬೆ ತುಮಕೂರುನ ವಿಶ್ವರಾಧ್ಯ ಮಠದಲ್ಲಿ ರಾಜಕೀಯ ಭವಿಷ್ಯ ನುಡಿದ ಶ್ರೀಗಳು, ಕುರುವಂಶ ದೊರೆಗಳು ಬಡಿದಾಡ್ಯಾರು. ಪಾಂಡವರು ಕೌರವರು ಬಡಿದಾಡ್ಯಾರು. ರತ್ನ ಖಚಿತ ಸುವರ್ಣ ಕಿರೀಟ ಸ್ಥಿರವಾದಿತು. ಬೇವು ಬೆಲ್ಲವಾದಿತು ಎಂದು ರಾಜಕೀಯ ಭವಿಷ್ಯ ನುಡಿದ್ದಾರೆ.

    ಕೇಂದ್ರದಲ್ಲಿ ಅಧಿಕಾರ ರಚನೆ ಮಾಡಲು ಶತ್ರುಗಳಂತೆಯಿದ್ದ ಪಕ್ಷಗಳು ಅಂದರೆ ಸಮಾಜವಾದಿ ಬಿಎಸ್‍ಪಿ ಒಂದಾಗಿವೆ. ಘಟಬಂಧನ ರಚನೆ ಮಾಡಿ ಕೇಂದ್ರದಲ್ಲಿ ಅಧಿಕಾರಕ್ಕೆ ಬರಲು ಹವಣಿಸುತ್ತಿವೆ. ಅದರೆ ಮೋದಿಗೆ ಈಗ ಸ್ಥಿರವಾದ ರತ್ನ ಖಚಿತ ಕೀರಿಟ ಈಗಿನ ಚುನಾವಣೆ ನಂತರವೂ ಖಚಿತವಾಗಲಿದೆ. ಬೇವು ಬೆಲ್ಲವಾದಿತು ಅಂದರೆ ಸೈನಿಕರ ಮೇಲಿನ ದಾಳಿ ಪ್ರಧಾನಿ ಮೋದಿ ಪಾಲಿಗೆ ಕಹಿಯ ಬದಲು ಸಿಹಿಯಾಗಲಿದೆ ಎಂದು ಮಠದವರು ವಿಶ್ಲೇಷಿಸುತ್ತಿದ್ದಾರೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv ಮತ್ತು Live  ವೀಕ್ಷಿಸಲು  ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್  ಮಾಡಿ: play.google.com/publictv

  • ಉಮೇಶ್ ಜಾಧವ್ ರಾಜೀನಾಮೆ ಬೆನ್ನಲ್ಲೇ ಯಾದಗಿರಿ ಬಿಜೆಪಿಯಲ್ಲಿ ಭಿನ್ನಮತ ಸ್ಫೋಟ

    ಉಮೇಶ್ ಜಾಧವ್ ರಾಜೀನಾಮೆ ಬೆನ್ನಲ್ಲೇ ಯಾದಗಿರಿ ಬಿಜೆಪಿಯಲ್ಲಿ ಭಿನ್ನಮತ ಸ್ಫೋಟ

    ಯಾದಗಿರಿ: ಕಾಂಗ್ರೆಸ್ ಶಾಸಕರಾಗಿ ಆಯ್ಕೆ ಆಗಿದ್ದ ಉಮೇಶ್ ಜಾಧವ್ ತಮ್ಮ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿ ಬಿಜೆಪಿಗೆ ಸೇರಲು ಸಿದ್ಧರಾಗುತ್ತಿದ್ದಾರೆ ಎಂಬ ಸುದ್ದಿಯ ಬೆನ್ನಲ್ಲೇ ಯಾದಗಿರಿ ಜಿಲ್ಲಾ ಬಿಜೆಪಿಯಲ್ಲಿ ಅಸಮಾಧಾನ ಸ್ಫೋಟಗೊಂಡಿದೆ.

    ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿರುವ ಉಮೇಶ್ ಜಾಧವ್ ಅವರು ಈ ಬಾರಿ ಬಿಜೆಪಿ ಪಕ್ಷದಿಂದ ಲೋಕಸಭಾ ಸ್ಥಾನಕ್ಕೆ ಸ್ಪರ್ಧೆ ಮಾಡಿ ಮಲ್ಲಿಕಾರ್ಜುನ ಖರ್ಗೆರನ್ನು ಸೋಲಿಸಬೇಕೆಂಬ ಉದ್ದೇಶ ಹೊಂದಿದ್ದಾರೆ ಎನ್ನಲಾಗಿದೆ. ಆದರೆ ಇತ್ತ ಬಿಜೆಪಿ ಕದ ತಟ್ಟುತ್ತಾರೆ ಎಂಬ ಮಾತಿನ ನಡುವೆಯೇ ಯಾದಗಿರಿ ಬಿಜೆಪಿಯಲ್ಲಿ ಭಿನ್ನ ಮತ ಸ್ಫೋಟಗೊಂಡಿದ್ದು, ಇದು ಜಾಧವ್ ಅವರಿಗೆ ಹಿನ್ನೆಡೆ ಆಗಲಿದೆಯಾ ಎಂಬ ಚರ್ಚೆ ಜಿಲ್ಲಾ ರಾಜಕೀಯ ವಲಯದಲ್ಲಿ ಕೇಳಿ ಬಂದಿದೆ. ಇದನ್ನೂ ಓದಿ: ಖರ್ಗೆ ವಿರುದ್ಧ ಚಿಂಚೋಳಿ ಕೈ ಶಾಸಕ ಉಮೇಶ್ ಜಾಧವ್ ಕಣಕ್ಕೆ?

    ಕಾಂಗ್ರೆಸ್ ಅತೃಪ್ತ ಶಾಸಕ ಉಮೇಶ್ ಜಾದವ್ ಈಗಾಗಲೇ ತಮ್ಮ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಈ ಬಾರಿ ಲೋಕಸಭೆ ಚುನಾವಣೆಗೆ ಜಾಧವ್ ಬಿಜೆಪಿಯಿಂದ ಜಾಧವ್ ಸ್ಪರ್ಧೆ ಮಾಡುವುದು ಪಕ್ಕಾ ಆಗಿದೆ ಎನ್ನಲಾಗಿದೆ. ಆದರೆ ಈ ಬಗ್ಗೆ ಅಧಿಕೃತ ಘೋಷಣೆ ಮಾತ್ರ ಬಾಕಿ ಇದೆ.

    ಕಲಬುರಗಿ ಲೋಕಸಭೆ ಕ್ಷೇತ್ರದ ಒಂದು ಭಾಗವಾಗಿರುವ ಯಾದಗಿರಿ ಜಿಲ್ಲೆಯಲ್ಲಿ, ಶಾಸಕ ಮತ್ತು ಜಿಲ್ಲಾಧಕ್ಷರ ನಡುವೆ ಮುಸುಕಿನ ಗುದ್ದಾಟ ನಡೆಯುತ್ತಿದ್ದು, ಇದು ಜಾಧವ್ ಗೆಲುವಿಗೆ ಭಾರಿ ಹೊಡೆತ ನೀಡುವ ಮುನ್ಸೂಚನೆಯನ್ನು ನೀಡುತ್ತದೆ. ವೈಯಕ್ತಿಕ ವಿಚಾರಕ್ಕಾಗಿ ಸುರಪುರ ಶಾಸಕ ರಾಜುಗೌಡ ಮತ್ತು ಜಿಲ್ಲಾಧ್ಯಕ್ಷ ಚಂದ್ರಶೇಖರ ಮಾಗನೂರ ನಡುವೆ ಮೊದಲಿಂದಲೂ ಮುಸುಕಿನ ಗುದ್ದಾಟವಿದೆ ಎನ್ನಲಾಗಿದೆ. ಆದರೆ ಈ ಇಬ್ಬರ ಒಳ ಜಗಳ ಸದ್ಯ ಬಿಜೆಪಿಗೆ ಮುಳುವಾಗುವ ಲಕ್ಷಣಗಳ ಕಂಡು ಬರುತ್ತಿವೆ.

    ಜಿಲ್ಲೆಯಲ್ಲಿ ಮೋದಿ ವಿಜಯ ರಥ ಯಾತ್ರೆಗೆ ಶಾಸಕ ರಾಜುಗೌಡರಿಗೆ ಆಹ್ವಾನವೇ ನೀಡದಿರುವುದು. ಹೀಗಾಗಿ ಜಿಲ್ಲೆಯಲ್ಲಿ ರಾಜ್ಯಮಟ್ಟದ ಕಾರ್ಯಕ್ರಮ ನಡೆಯುತ್ತಿದ್ದರು, ಶಾಸಕ ರಾಜುಗೌಡ ಮತ್ತು ಸುರಪುರ, ಶಹಾಪುರ ವಿಧಾನ ಸಭಾ ಕ್ಷೇತ್ರದ ಪ್ರಮುಖರು ಯಾತ್ರೆಯಲ್ಲಿ ಭಾಗವಹಿಸಿರಲಿಲ್ಲ. ಇದು ಜಿಲ್ಲೆಯ ರಾಜಕೀಯ ವಲಯದಲ್ಲಿ ಭಾರಿ ಚರ್ಚೆಗೆ ಕಾರಣವಾಗಿದೆ. ಈ ವಿಚಾರವಾಗಿ ಸ್ವತಃ ಶಾಸಕ ರಾಜುಗೌಡ ಬಹಿರಂಗವಾಗಿ ತಮ್ಮ ಅಸಮಾಧಾನ ಹೊರಹಾಕಿದ್ದಾರೆ.

    ಜಿಲ್ಲೆಯಲ್ಲಿ ರಾಜುಗೌಡ ಸ್ಟಾರ್ ಪ್ರಚಾರಕರಾಗಿದ್ದು ಅವರನ್ನು ಜಿಲ್ಲೆಯ ಪ್ರಮುಖ ಕಾರ್ಯಕ್ರಮಗಳಲ್ಲಿ ಕಡೆಗಣಿಸುತ್ತಿರುವುದು ಪಕ್ಷದ ಕಾರ್ಯಕರ್ತರ ಗೊಂದಲಕ್ಕೆ ಕಾರಣವಾಗಿದೆ. ನಾನು ರಾಜ್ಯದ ನಾಯಕರ ಮಾತಿನಂತೆ, ಜಿಲ್ಲೆಯ ಕಾರ್ಯಕ್ರಮದ ಪಟ್ಟಿ ತಯಾರಿಸುತ್ತೇನೆ. ಇದನ್ನು ದೊಡ್ಡದು ಮಾಡುವ ಅವಶ್ಯಕತೆ ಇಲ್ಲ ಎಂದು ಜಿಲ್ಲಾಧ್ಯಕ್ಷ ಚಂದ್ರಶೇಖರ ಸಮರ್ಥನೆ ನೀಡಿದ್ದಾರೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv