Tag: Yadiyurappa

  • ದಲಿತ ರಾಜ್ಯಪಾಲರನ್ನು ನಿಂದಿಸಿದ್ದಕ್ಕೆ ಕಾಂಗ್ರೆಸ್ ಮೇಲೆ ಅಟ್ರಾಸಿಟಿ ಕೇಸ್ ಹಾಕಬೇಕು: ಸಿಟಿ ರವಿ ಆಗ್ರಹ

    ದಲಿತ ರಾಜ್ಯಪಾಲರನ್ನು ನಿಂದಿಸಿದ್ದಕ್ಕೆ ಕಾಂಗ್ರೆಸ್ ಮೇಲೆ ಅಟ್ರಾಸಿಟಿ ಕೇಸ್ ಹಾಕಬೇಕು: ಸಿಟಿ ರವಿ ಆಗ್ರಹ

    ಬೆಂಗಳೂರು: ಉಪ್ಪು ತಿಂದವ ನೀರು ಕುಡಿಯಬೇಕು, ತಪ್ಪು ಮಾಡಿದವನಿಗೆ ಶಿಕ್ಷೆ ಆಗಬೇಕು. ಭ್ರಷ್ಟಾಚಾರ ಮುಚ್ಚಿಕೊಳ್ಳುವ ಮಾತಾಡಬೇಡಿ. ಕಾಂಗ್ರೆಸ್‌ಗೆ (Congress) ಸೇರಿದ ಮೇಲೆ ಆತ್ಮಸಾಕ್ಷಿ ಮಾರ್ಕೊಂಡಿದ್ದೀರಾ, ಹೈಕಮಾಂಡ್ ಒತ್ತಡಕ್ಕೆ ಭ್ರಷ್ಟಾಚಾರ, ಲೂಟಿ ಮಾಡುವ ಅನಿವಾರ್ಯತೆ ಬಂದಿರಬೇಕು ಎಂದು ಸಿಎಂ ವಿರುದ್ಧ ಸಿಟಿ ರವಿ (CT Ravi) ಹರಿಹಾಯ್ದರು.

    ಭ್ರಷ್ಟಾಚಾರದ ಕುರಿತಾಗಿ ಸಿಎಂ (Siddaramaiah) ರಾಜೀನಾಮೆಗೆ ಆಗ್ರಹಿಸಿ ಪ್ರತಿಭಟನೆ ವೇಳೆ ಮಾಧ್ಯಮಗಳ ಜೊತೆ ಮಾತನಾಡಿದ ಅವರು, ರಾಜ್ಯಪಾಲರು ನ್ಯಾಯಯುತ ತನಿಖೆ ನಡೆಯಲಿ ಎಂದು ಅನುಮತಿ ಕೊಟ್ಟಿದ್ದಾರೆ. ಅವರು ತನಿಖೆಗಷ್ಟೇ ಅನುಮತಿ ಕೊಟ್ಟಿದ್ದಾರೆ. ಆದರೆ ಕಾಂಗ್ರೆಸ್‌ನವರು ರಾಜ್ಯಪಾಲರ ಪ್ರತಿಕೃತಿ ದಹಿಸಿ, ಅವಾಚ್ಯ ಶಬ್ದಗಳಿಂದ ನಿಂದಿಸುತ್ತಿದ್ದಾರೆ. ಚೋರ್ ಉಲ್ಟಾ ಕೊತ್ವಾಲ್ ಕೊ ಡಾಂಟಾ ಅನ್ನುವಂತಾಗಿದೆ. ದಲಿತ ಸಮುದಾಯದ ರಾಜ್ಯಪಾಲರನ್ನು ಕಾಂಗ್ರೆಸ್‌ನವರು ನಿಂದಿಸಿದ್ದಾರೆ. ಪೊಲೀಸರು ಕಾಂಗ್ರೆಸ್‌ನವರ ಮೇಲೆ ಅಟ್ರಾಸಿಟಿ ದೂರು ದಾಖಲಿಸಬೇಕು ಎಂದು ಹೇಳಿದರು. ಇದನ್ನೂ ಓದಿ: ತ್ರಿವಳಿ ತಲಾಖ್‌ ಪದ್ಧತಿಯಿಂದ ಮುಸ್ಲಿಂ ಮಹಿಳೆಯರ ಸ್ಥಿತಿ ದಯನೀಯವಾಗಿದೆ: ಕೇಂದ್ರ

    ಯಡಿಯೂರಪ್ಪ (Yadiyurappa) ವಿರುದ್ಧ ಪ್ರಾಸಿಕ್ಯೂಷನ್‌ಗೆ ಅನುಮತಿ ಕೊಟ್ಟಾಗ ಸಿದ್ದರಾಮಯ್ಯ ಏನು ಹೇಳಿದರು ಎಂಬುದನ್ನು ನೆನಪಿಸಿಕೊಳ್ಳಲಿ. ರಾಜ್ಯಪಾಲರು ಸಂವಿಧಾನ ಬದ್ಧ ತೀರ್ಮಾನ ತೆಗೆದುಕೊಂಡಿದ್ದಾರೆ. ನ್ಯಾಯಯುತ ತನಿಖೆಗೆ ಯಡಿಯೂರಪ್ಪ ರಾಜೀನಾಮೆ ಕೊಡಬೇಕು ಅಂದಿದ್ದರು. ಸಿಎಂಗೆ ಮರೆವಿನ ಕಾಯಿಲೆ ಇದೆ. ಆವತ್ತು ಅವರು ಆಡಿದ ಮಾತು ಇವತ್ತು ನಾವು ನೆನಪು ಮಾಡಿಕೊಡುತ್ತಿದ್ದೇವೆ. ಅದೇ ರಾಜಭವನ, ಅದೇ ಅಧಿಕಾರ ಇವತ್ತಿನ ರಾಜ್ಯಪಾಲರಿಗೂ ಇದೆ. ಆಗ ಪ್ರಾಸಿಕ್ಯೂಷನ್ ಯಡಿಯೂರಪ್ಪ ಮೇಲಿತ್ತು, ಈಗ ನಿಮ್ಮ ಮೇಲಿದೆ. ಪಾತ್ರಧಾರಿಗಳಷ್ಟೇ ಬದಲು, ಈಗ ನಿಮ್ಮ ಮಾತಿನಂತೆ ನೀವು ರಾಜೀನಾಮೆ ಕೊಡಿ ಎಂದು ಆಗ್ರಹಿಸಿದರು. ಇದನ್ನೂ ಓದಿ: ಮುಡಾ ಹಗರಣ| ಇಷ್ಟು ಆತುರ ಏನು – ಸಿಎಂ ಪರ ವಕೀಲರಿಗೆ ಜಡ್ಜ್ ಪ್ರಶ್ನೆ

    ನೀವು ಎರಡು ನಾಲಿಗೆಯವರಾಗಬಾರದು. ನೀವು ಅಧಿಕಾರದಲ್ಲಿದೀರ, ತನಿಖೆ ಪಾರದರ್ಶಕತೆಯಿಂದ ನಡೆಯುವುದಿಲ್ಲ. ನೀವು ರಾಜೀನಾಮೆ ಕೊಡಿ. 136 ಶಾಸಕರು ಇದ್ದಾರಲ್ಲ. ಯಾರನ್ನಾದರೂ ಕೈಗೊಂಬೆ ಮಾಡಿಕೊಂಡು ಸಿಎಂ ಮಾಡಿ. ನಿಮ್ಮ ಸರ್ಕಾರವನ್ನು ನಾವು ಅಸ್ಥಿರಗೊಳಿಸುತ್ತಿಲ್ಲ. ನಮಗೆ ಹೊಟ್ಟೆಯುರಿ ಇಲ್ಲ. ನಿಮ್ಮ ಗ್ಯಾರಂಟಿ ಹೇಗೆ ಜಾರಿಯಾಗುತ್ತಿದೆ ನೋಡುತ್ತಿದ್ದೇವೆ. ಅಹಿಂದ ಸಿಎಂ ಅನ್ನೋ ಮಾತನ್ನು ಆಡುತ್ತಿದ್ದೀರಿ, ಅದೇನು ನಿಮಗೆ ಲೂಟಿ ಹೊಡೆಯುವ ಲೈಸೆನ್ಸಾ? ಗ್ಯಾರಂಟಿಗಳು ನಿಮಗೆ ಲೂಟಿಗೆ ಲೈಸೆನ್ಸ್ ಕೊಟ್ಟಿವೆಯಾ ಎಂದು ಪ್ರಶ್ನಿಸಿದರು. ಇದನ್ನೂ ಓದಿ:  ರಾಜ್ಯಪಾಲರ ವಿರುದ್ಧ ಸಿಡಿದೆದ್ದ ಸಾಹಿತಿಗಳು – ಪ್ರತಿಭಟನೆಗೆ ಕರೆ

  • ಬೆಳಗ್ಗೆ ಎದ್ದರೆ ನೈತಿಕತೆ ಬಗ್ಗೆ ಮಾತನಾಡೋ ಸಿಎಂ ರಾಜೀನಾಮೆ ನೀಡಲಿ: ಜನಾರ್ದನ ರೆಡ್ಡಿ

    ಬೆಳಗ್ಗೆ ಎದ್ದರೆ ನೈತಿಕತೆ ಬಗ್ಗೆ ಮಾತನಾಡೋ ಸಿಎಂ ರಾಜೀನಾಮೆ ನೀಡಲಿ: ಜನಾರ್ದನ ರೆಡ್ಡಿ

    ಬೆಂಗಳೂರು: ನೈತಿಕತೆ ಇದ್ದರೆ ಕೂಡಲೇ ರಾಜೀನಾಮೆ ಕೊಡಿ. ತನಿಖೆ ಎದುರಿಸಿ, ನ್ಯಾಯಯುತವಾಗಿ ಹೊರಗೆ ಬನ್ನಿ. ಎಂದು ಸಿಎಂ ಸಿದ್ದರಾಮಯ್ಯ ವಿರುದ್ಧ ಶಾಸಕ ಜನಾರ್ದನ ರೆಡ್ಡಿ ಹೇಳಿಕೆ ನೀಡಿದ್ದಾರೆ.

    ಸಿಎಂ ಸಿದ್ದರಾಮಯ್ಯ (CM Siddaramaiah) ವಿರುದ್ಧ ರಾಜ್ಯಪಾಲರು ಪ್ರಾಸಿಕ್ಯೂಷನ್ ಅನುಮತಿ ನೀಡಿರುವ ವಿಚಾರವಾಗಿ ಬಿಜೆಪಿ (BJP) ಕಚೇರಿಯಲ್ಲಿ ಮಾಧ್ಯಮಗಳ ಮುಂದೆ ಮಾತನಾಡಿದ ಅವರು, ಸಿಎಂ ಮೇಲೆ ಪ್ರಾಸಿಕ್ಯೂಷನ್ ಅನುಮತಿ ನೀಡಿದ್ದಾರೆ. ಯಾವುದೇ ಕಿಂಚಿತ್ತು ನೈತಿಕತೆ ಇದ್ದರೆ, ರಾಜೀನಾಮೆ ಕೊಡಲಿ ಎಂದರು. ಇದನ್ನೂ ಓದಿ: ಪ್ರಜಾಪ್ರಭುತ್ವ ಚುನಾಯಿತ ಸರ್ಕಾರವನ್ನ ಉರುಳಿಸಲು ಯತ್ನ: ರಮೇಶ್ ಬಂಡಿಸಿದ್ದೇಗೌಡ

    ಬೆಳಗ್ಗೆ ಎದ್ದರೆ ನೈತಿಕತೆ ಬಗ್ಗೆ, ಕಾನೂನಿನ ಬಗ್ಗೆ ಮಾತಾಡೋ ಸಿದ್ದರಾಮಯ್ಯ ಈ ಕ್ಷಣಕ್ಕೆ ರಾಜೀನಾಮೆ ಕೊಡಬೇಕಿತ್ತು. ಅವರು ಮಾಡಿರುವ ತಪ್ಪುಗಳನ್ನು ಮರೆಮಾಚಿದ್ದಾರೆ. ನಾನು ತಪ್ಪೇ ಮಾಡಿಲ್ಲ ಅನ್ನುವುದು ನಾಚಿಕೆಗೇಡಿನ ಸಂಗತಿ ಎಂದು ಟೀಕಿಸಿದರು. ಇದನ್ನೂ ಓದಿ: 8ನೇ ಕ್ಲಾಸ್ ವಿದ್ಯಾರ್ಥಿನಿಯ ಮೇಲೆ ಶಿಕ್ಷಕನಿಂದಲೇ ರೇಪ್ – ಆಸ್ಪತ್ರೆಗೆ ದಾಖಲಾದ 20 ದಿನಗಳ ಬಳಿಕ ಸಾವು

    ಯಡಿಯೂರಪ್ಪ, ನನ್ನ ಮೇಲೆ ಪ್ರಾಸಿಕ್ಯೂಷನ್ ಬಿಡಿ. ಲೋಕಾಯುಕ್ತದಲ್ಲಿ ನಮ್ಮ ಹೆಸರನ್ನ ದಾಖಲಿಸಿದ ಕೂಡಲೇ, ಯಡಿಯೂರಪ್ಪ ಅವರು ನಮ್ಮನ್ನು ಕರೆದಿದ್ದರು. ನಾವು ಮುಂದುವರೆಯೋದು ಸರಿಯಲ್ಲ ಎಂದು ರಾಜಭವನಕ್ಕೆ ತೆರಳಿ ರಾಜೀನಾಮೆ ನೀಡಿದ್ದೆವು. ಅದೆಲ್ಲಾ ಇತಿಹಾಸ ಎಂದರು. ಇದನ್ನೂ ಓದಿ: ಇದು ದೊಡ್ಡ ಷಡ್ಯಂತ್ರ.. ಕಾನೂನಿನಡಿ ಹೋರಾಟ ಮಾಡ್ತೀನಿ: ಸಿಎಂ ಸಿದ್ದರಾಮಯ್ಯ

    ಅಹಿಂದ ಅಂತ ಹೇಳೋ ವ್ಯಕ್ತಿ. ಅಧಿಕಾರದ ಆಸೆಗೆ ಮುಂದುವರೆದಿದ್ದಾರೆ. ಬಳ್ಳಾರಿ ಪಾದಯಾತ್ರೆಗೆ ಬಂದ ಈ ಮಹಾನುಭಾವ ಪಾದಯಾತ್ರೆಗೆ ಬಿಡುತಿಲ್ಲ ಎಂದು ಆರೋಪ ಮಾಡಿದ್ದರು. ರಿಪಬ್ಲಿಕನ್ ಆಫ್ ಬಳ್ಳಾರಿ ಅಂದರು. ಜನಾರ್ದನ ರೆಡ್ಡಿ (Janardhan Reddy)  ಗೋಡೆ ಕಾಂಪೌಂಡ್ ಬಗ್ಗೆ ಮಾತಾಡಿದರು. ಕೇವಲ ಪಾದಯಾತ್ರೆಗೆ ಬಂದು ನಮ್ಮಮೇಲೆ ಆರೋಪ ಮಾಡಿದ್ದರು. ನಮ್ಮನ್ನು ಜೈಲಿಗೆ ಹಾಕಬೇಕು ಎಂದು ಹೇಳಿದ್ದರು. ಇದನ್ನೂ ಓದಿ: MUDA Scam | ಸಿದ್ದರಾಮಯ್ಯಗೆ ಉರುಳಾದ 14 ಸೈಟ್‌ – ಏನಿದು ಹಗರಣ? ವಿಪಕ್ಷಗಳ ಆರೋಪ ಏನು? ಬೆಳಕಿಗೆ ಬಂದಿದ್ದು ಹೇಗೆ?

    ನ್ಯಾಯಯುತವಾಗಿ ಹಣ ದುಡಿದಿದ್ದು ಜನಾರ್ದನ ರೆಡ್ಡಿ. ನಿಮ್ಮಹಾಗೆ ಅಕ್ರಮವಾಗಿ ಹಣ ದುಡಿದಿಲ್ಲ. ಸಭೆಯಲ್ಲಿ ಆಸೆ ಆಕಾಂಕ್ಷೆ ಇಲ್ಲ. ಎರಡು ಮನೆ ಮಾರಿದ್ದೀನಿ, ಒಂದು ಮನೆ ಕಟ್ಟಿಕೊಳ್ಳುತ್ತಿದ್ದೇನೆ ಎಂದು ಹೇಳಿದ್ದೀರಿ. 14 ಸೈಟು ಪಡೆದಿದ್ದೀರಿ. 34 ಕೋಟಿ ರೂ. ಹಣ ಕೊಟ್ಟರೆ ಬಿಟ್ಟು ಬಿಡುತ್ತೇನೆ ಅಂದ್ರಿ. ಬಿಜೆಪಿಯವರು ಇಲ್ಲ ಸಲ್ಲದ ಆರೋಪ ಮಾಡ್ತಿದ್ದಾರೆ ಎಂದು ಹೇಳುತ್ತೀರಿ. ಇನ್ನೊಂದು ಕಡೆ 64 ಕೋಟಿ ರೂ. ಹಣ ಕೇಳುತ್ತೀರಿ ಎಂದು ಕಿಡಿಕಾರಿದರು. ಇದನ್ನೂ ಓದಿ: ಸಿಎಂ ತವರಲ್ಲಿ ಕಟ್ಟೆಯೊಡೆದ ಆಕ್ರೋಶ – ರಾಜ್ಯಪಾಲರ ಪೋಸ್ಟರ್‌ಗೆ ಬೆಂಕಿ

    ನಿಮಗೆ ಈಗಾಗಲೇ ವಯಸ್ಸಾಗಿದೆ. ಈ ಇಳಿವಯಸ್ಸಿನಲ್ಲಿ ಈ ರೀತಿ ಮಾಡೋದು ಸರಿಯಲ್ಲ. ಹಿಂದೆ ನಮಗೆ ತನಿಕೆ ಮಾಡೋಕೆ ಆಗಲ್ಲ, ರಾಜೀನಾಮೆ ಕೊಡಿ ಅಂತ ಹೇಳಿದ್ದೀರಿ. ಈಗ ಯಾವ ಮುಖ ಹೊತ್ತು ಮಾತಾಡುತ್ತಿದ್ದೀರಿ? ಡಿಕೆಶಿ ಅವರು ಇವತ್ತು ಮಾತನಾಡುತ್ತಿದ್ದಾರೆ ಎಂದರು. ಇದನ್ನೂ ಓದಿ: ಮೋದಿ ಸರ್ಕಾರದಿಂದ ರಾಜಕೀಯ, ವೈಯಕ್ತಿಕ ಸೇಡು: ಸುರ್ಜೇವಾಲ

    ಕೆಪಿಸಿಸಿ ಅಧ್ಯಕ್ಷರಾಗಿ ಡಿಕೆಶಿ (DK Shivakumar), ಎಐಸಿಸಿ ಅಧ್ಯಕ್ಷ ಖರ್ಗೆ (Mallikarjun Kharge), ಸೋನಿಯಾ ಗಾಂಧಿ (Sonia Gandhi), ರಾಹುಲ್ ಗಾಂಧಿ (Rahul Gandhi), ಸಿದ್ದರಾಮಯ್ಯ ಅವರ ರಾಜೀನಾಮೆ ಪಡೆಯಬೇಕು. ನೈತಿಕತೆ ಇದ್ದರೆ ರಾಜ್ಯದ ಸಿಎಂ ಆಗಿ ಮುಂದುವರೆಯಲು ಸಾಧ್ಯವಿಲ್ಲ. ಕೂಡಲೇ ರಾಜೀನಾಮೆ ಕೊಟ್ಟು ಹೊರಗೆ ಬನ್ನಿ ಎಂದು ಆಗ್ರಹಿಸಿದರು. ಇದನ್ನೂ ಓದಿ: ಬಿಜೆಪಿಯಿಂದ ಸಿದ್ದರಾಮಯ್ಯರ ಒಂದು ಕೂದಲು ಅಲುಗಾಡಿಸಲು ಸಾಧ್ಯವಿಲ್ಲ: ಹೆಚ್‌ಸಿ ಬಾಲಕೃಷ್ಣ

  • ಉಸ್ತುವಾರಿ ಜಿಲ್ಲೆ ಬದಲಾಯ್ತು ಅಂದಾಕ್ಷಣ ಮಂಡ್ಯ ಬಿಟ್ಟು ಕೊಡಲ್ಲ: ಡಾ. ನಾರಾಯಣಗೌಡ

    ಉಸ್ತುವಾರಿ ಜಿಲ್ಲೆ ಬದಲಾಯ್ತು ಅಂದಾಕ್ಷಣ ಮಂಡ್ಯ ಬಿಟ್ಟು ಕೊಡಲ್ಲ: ಡಾ. ನಾರಾಯಣಗೌಡ

    ಶಿವಮೊಗ್ಗ: ಉಸ್ತುವಾರಿ ಜಿಲ್ಲೆ ಬದಲಾಯಿತು ಅಂದಾಕ್ಷಣ ಮಂಡ್ಯ ಬಿಟ್ಟು ಕೊಡುವುದಿಲ್ಲ ಎಂದು ಮಂಡ್ಯ ಜಿಲ್ಲಾ ಉಸ್ತುವಾರಿ ಸಚಿವ ಡಾ. ನಾರಾಯಣಗೌಡ ಹೇಳಿದರು.

    ಉಸ್ತುವಾರಿ ಸಚಿವ ಸ್ಥಾನ ಬದಲಾವಣೆ ವಿಚಾರವಾಗಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಯಡಿಯೂರಪ್ಪ ಹಾಗೂ ನನ್ನದು ಇಬ್ಬರದ್ದು ಮಂಡ್ಯ ಜನ್ಮ ಭೂಮಿಯಾಗಿದೆ. ಮಂಡ್ಯವನ್ನು ನಾವು ನಿರ್ವಹಣೆ ಮಾಡುತ್ತೇವೆ. ಯಡಿಯೂರಪ್ಪ ಅವರ ನೇತೃತ್ವದಲ್ಲಿ ಮಂಡ್ಯದಲ್ಲಿ ಖಾತೆ ತೆರೆಯಲಾಗಿದೆ. ಈ ಮೊದಲು ಮಂಡ್ಯ ಜಿಲ್ಲೆಯಲ್ಲಿ ಹತ್ತಾರು ಗ್ರಾಮ ಪಂಚಾಯ್ತಿಯು ಕೂಡಾ ಗೆಲ್ಲುತ್ತಿರಲಿಲ್ಲ. ಆದರೆ ಈಗ 900ಕ್ಕೂ ಹೆಚ್ಚು ಗ್ರಾಮ ಪಂಚಾಯ್ತಿ ಸದಸ್ಯರನ್ನು ಗೆದ್ದಿದ್ದೇವೆ ಎಂದರು. ಇದನ್ನೂ ಓದಿ: ನಾರಾಯಣ ಗುರುಗಳ ಬಗ್ಗೆ ಪ್ರಧಾನಿ ಸೇರಿದಂತೆ ಎಲ್ಲರಿಗೂ ಗೌರವ ಇದೆ: ಎಸ್.ಅಂಗಾರ

    ಕೆ.ಆರ್ ಪೇಟೆಯಲ್ಲಿ 34 ಗ್ರಾಮ ಪಂಚಾಯ್ತಿಯಲ್ಲಿ 19 ಗ್ರಾಮ ಪಂಚಾಯ್ತಿ ಗೆದ್ದಿದ್ದೇವೆ. ಯಡಿಯೂರಪ್ಪ ಅವರ ಆಶೀರ್ವಾದದಿಂದಲೇ ಗೆದ್ದಿರುವುದು ನಾನು ಯಡಿಯೂರಪ್ಪ ಅವರನ್ನು ನಂಬಿ ಬಂದಿರುವವನು. ಹೀಗಾಗಿ ಮಂಡ್ಯ ಜಿಲ್ಲೆಯನ್ನು ಅಭಿವೃದ್ಧಿಪಡಿಸುತ್ತೇವೆ. ಮಂಡ್ಯದಲ್ಲಿಯೂ 3-4 ಶಾಸಕ ಸ್ಥಾನ ಗೆಲ್ಲಿಸಲು ಯೋಚನೆ ಮಾಡುತ್ತಿದ್ದೇವೆ. ಯಡಿಯೂರಪ್ಪ ಅವರ ನೇತೃತ್ವದಲ್ಲಿ, ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ಸಹಕಾರದೊಂದಿಗೆ ಖಂಡಿತಾ ಗೆಲ್ಲುತ್ತೇವೆ ಎಂದು ವಿಶ್ವಾಸ ವ್ಯಕ್ತಪಡಿಸಿದರು. ಇದನ್ನೂ ಓದಿ: ನಮಗೆ ಗೌರವ ಕೊಟ್ಟಿದ್ದಕ್ಕೆ ಜಾರಕಿಹೊಳಿಗೆ ಅಭಿನಂದನೆ: ಎಚ್‍ಡಿಕೆ 

    ಡಿಕೆಶಿ ಹಾಗೂ ಸಿದ್ದರಾಮಯ್ಯ ಅವರು ಬಿಜೆಪಿ ಶಾಸಕರು ನಮ್ಮ ಸಂಪರ್ಕದಲ್ಲಿ ಇದ್ದಾರೆ ಎಂಬ ಹೇಳಿಕೆ ವಿಚಾರವಾಗಿ ಮಾತನಾಡಿದ ಅವರು, ಡಿಕೆಶಿ ಹಾಗೂ ಸಿದ್ದರಾಮಯ್ಯ ಅವರಿಗೆ ಮಾಡಲು ಕೆಲಸ ಇಲ್ಲ. ಹೀಗಾಗಿ ಏನೇನೋ ಹೇಳುತ್ತಿರುತ್ತಾರೆ. ನಮಗೆ ಮಾಡಲು ತುಂಬಾ ಕೆಲಸ ಇದ್ದು, ಸರ್ಕಾರ ನಮಗೆ ಜವಾಬ್ದಾರಿ ಕೊಟ್ಟಿದೆ. ನಾವು ಪುನಃ ಹೋಗುವುದಾದರೆ ಕಾಂಗ್ರೆಸ್‍ನಿಂದ ಬಿಟ್ಟು ಏಕೆ ಬರುತ್ತಿದ್ದೆವು. ನಾವು ಯಡಿಯೂರಪ್ಪ ಅವರ ಮೇಲೆ ನಂಬಿಕೆ ಇಟ್ಟು ಬಿಜೆಪಿಗೆ ಬಂದಿದ್ದೇವೆ. ಯಡಿಯೂರಪ್ಪ ಕೊಟ್ಟಂತಹ ಅಭಿವೃದ್ಧಿ ಕರ್ನಾಟಕ ರಾಜ್ಯದಲ್ಲಿ ಹೆಚ್ಚಿನ ರೀತಿ ಇದೆ. ಕಾಂಗ್ರೆಸ್‍ನಿಂದ ಬಂದಿರುವಂತಹ 17 ಜನರಲ್ಲಿ ಯಾರೊಬ್ಬರೂ ಹೋಗುವುದಿಲ್ಲ ಎಂದರು.

     

    ನಾವು ಮತ್ತೆ ಕಾಂಗ್ರೆಸ್‍ಗೆ ಹೋಗುತ್ತೇವೆ ಎನ್ನುವುದು ಅವರ ಭ್ರಮೆಯಾಗಿದೆ. ನಮ್ಮನ್ನೆಲ್ಲಾ ದಾರಿ ತಪ್ಪಿಸುವ ಸಲುವಾಗಿ, ಅವರು ಆ ರೀತಿ ಮಾತನಾಡುತ್ತಿದ್ದಾರೆ. ನಾವು ಯಾರೂ ಅವರ ಸಂಪರ್ಕದಲ್ಲಿ ಇಲ್ಲ. ಮುಂದಿನ ಬಾರಿಯೂ ಬಿಜೆಪಿಯೇ ಅಧಿಕಾರಕ್ಕೆ ಬರಲಿದೆ. ಯಡಿಯೂರಪ್ಪ ಅವರು ಇಡೀ ರಾಜ್ಯ ಸುತ್ತಿ 130 ರಿಂದ 140 ಸ್ಥಾನ ಗೆಲ್ಲಿಸಿಕೊಂಡು ಬರುತ್ತೇನೆ ಅನ್ನುತ್ತಿದ್ದಾರೆ. ಯಡಿಯೂರಪ್ಪ ಅವರು ಸರ್ಕಾರವನ್ನು ಬಿಟ್ಟು ಕೊಟ್ಟಿಲ್ಲ. ಈಗಲೂ ನಮ್ಮ ಸಚಿವರು ಏನು ಮಾಡುತ್ತಿದ್ದಾರೆ. ಸರ್ಕಾರ ಏನು ಮಾಡುತ್ತಿದೆ ಎಂಬುದನ್ನು ಗಮನಿಸಿ ನಮಗೆ ಮಾರ್ಗದರ್ಶನ ನೀಡುತ್ತಿದ್ದಾರೆ.

  • ನನ್ನ ವಿಜಯನಗರದ ಜನ ದುಃಖದಲ್ಲಿದ್ದಾರೆ: ಆನಂದ್ ಸಿಂಗ್

    ನನ್ನ ವಿಜಯನಗರದ ಜನ ದುಃಖದಲ್ಲಿದ್ದಾರೆ: ಆನಂದ್ ಸಿಂಗ್

    ಕೊಪ್ಪಳ: ನನ್ನ ವಿಜಯನಗರ ಜನ ದುಃಖದಲ್ಲಿದ್ದಾರೆ ಎಂದು ಪ್ರವಾಸೋದ್ಯಮ ಮತ್ತು ಪರಿಸರ ಸಚಿವ ಆನಂದ್ ಸಿಂಗ್ ಹೇಳಿದರು.

    ಕೊಪ್ಪಳ ಬಿಜೆಪಿ ಕಚೇರಿಯಲ್ಲಿ ಮಾತನಾಡಿದ ಅವರು, ಕೊಪ್ಪಳದವರು ಸಂತೋಷದಲ್ಲಿ ಇದ್ದರೆ ನನ್ನ ವಿಜಯನಗರದ ಜನ ದುಃಖದಲ್ಲಿದ್ದಾರೆ. ಒಂದು ಸಂತೋಷ ಅಂದರೆ ಪಕ್ಕದಲ್ಲೇ ಇದ್ದೀನಿ, ಸುಮ್ಮನೆ ನಗಿ ಅನ್ನುವುದು. ಶಶಿಕಲಾ ಜೊಲ್ಲೆ ಅವರು ಕೋವಿಡ್ ಪಾಸಿಟಿವ್ ಇರುವ ಕಾರಣ ಕಾರ್ಯಕ್ರಮಕ್ಕೆ ಬಂದಿಲ್ಲ. ವಿಜಯನಗರದಲ್ಲಿ ಕೆಲ ಕಟ್ಟಡ ಉದ್ಘಾಟನೆ ಮಾಡಬೇಕೆಂದಿದ್ದೇನೆ. ನನಗೆ ಸಂತೋಷ ಇದೆ ಎಂದು ಭಾಷಣ ಮಾಡಿದರು. ಇದನ್ನೂ ಓದಿ: ಪ್ರೀತಿ ಇದ್ದಲ್ಲಿಗೆ ಹೋಗುತ್ತೇನೆ: ರಮೇಶ್ ಜಾರಕಿಹೊಳಿ

    ಇಡೀ ರಾಜ್ಯದಲ್ಲಿ ಉಸ್ತುವಾರಿ ಬದಲಾವಣೆಯಾಗಿದೆ. ಬಹಳಷ್ಟು ಜನರಲ್ಲಿ ಉಸ್ತುವಾರಿ ಬದಲಾವಣೆ ಪ್ರಶ್ನೆ ಇದ್ದು, ನಮ್ಮಲ್ಲೂ ಈ ಬಗ್ಗೆ ಪ್ರಶ್ನೆ ಇದೆ. ತವರು ಜಿಲ್ಲೆ ಉಸ್ತುವಾರಿಗಳನ್ನು ಬೇರೆ ಬೇರೆ ಜಿಲ್ಲೆಗೆ ಹಾಕಿದ್ದು, ಇದು ನನ್ನ ರಾಜಕೀಯ ಜೀವನದ ಅನುಭವದಲ್ಲೇ ಮೊದಲು. ಈ ಹಿಂದೆ ನಾನು ನನಗೆ ಮಂತ್ರಿ ಬೇಡ ಜಿಲ್ಲೆ ಕೊಡಿ ಅಂತ ಯಡಿಯೂರಪ್ಪ ಬಳಿ ನಾನು ಕೇಳಿದ್ದೆ. ಯಡಿಯೂರಪ್ಪ ಬಹಳ ಬೇಗ ಆವೇಶಕ್ಕೆ ಬಂದು ಬಿಡುತ್ತಾರೆ ಎಂದರು. ಇದನ್ನೂ ಓದಿ: ಶಕ್ತಿಧಾಮದ ಮಕ್ಕಳನ್ನ ಬಸ್ಸಿನಲ್ಲಿ ತಾವೇ ಡ್ರೈವ್ ಮಾಡಿ ರೌಂಡ್ ಹಾಕಿಸಿದ ಶಿವಣ್ಣ

    ನಾನು ಧೈರ್ಯ ಮಾಡಿ ವಿಜಯನಗರ ಜಿಲ್ಲೆ ಮಾಡಿಕೊಡಿ ಎಂದು ಕೇಳಿದ್ದೆ. ಸಿಟ್ಟಿನಿಂದ ಯಡಿಯೂರಪ್ಪ ಮಾಡುತ್ತೇವೆ ನಿಲ್ಲಿ ಅಂತ ಗದರಿದ್ದರು. ಜಿಲ್ಲೆ ಆಗದೇ ಹೋಗಿದ್ದರೆ ನಾನು ಮತ್ತೆ ರಾಜೀನಾಮೆ ಕೊಡುತ್ತೇನೆ ಅಂತ ಯಡಿಯೂರಪ್ಪನವರಿಗೆ ಹೇಳಿದ್ದೆ ಎಂದು ಭಾಷಣದಲ್ಲಿ ವಿಜಯನಗರ ಜಿಲ್ಲೆ ರಚನೆಯಾದ ನೆನಪು ಮೆಲಕು ಹಾಕಿದರು.

  • ಪ್ರಮಾಣವಚನ ಸ್ವೀಕರಿಸೋಕೆ ಸಿಎಂ ಆಹ್ವಾನಿಸಿದ್ದಾರೆ: ಸುಧಾಕರ್

    ಪ್ರಮಾಣವಚನ ಸ್ವೀಕರಿಸೋಕೆ ಸಿಎಂ ಆಹ್ವಾನಿಸಿದ್ದಾರೆ: ಸುಧಾಕರ್

    ಚಿಕ್ಕಬಳ್ಳಾಪುರ: ನನಗೆ ಸಚಿವ ಸ್ಥಾನ ಸಿಗೋದು ಪಕ್ಕಾ ಆಗಿದ್ದು, ಪ್ರಮಾಣಚನ ಸ್ವೀಕರಿಸೋಕೆ ಸಿಎಂ ಆಹ್ವಾನಿಸಿದ್ದಾರೆ ಎಂದು ಶಾಸಕ ಡಾ.ಕೆ.ಸುಧಾಕರ್ ಹೇಳಿದರು.

    ಪತ್ರಕರ್ತರ ಭವನದಲ್ಲಿ ನಗರಸಭೆ ಚುನಾವಣೆ ಸಂಬಂಧ ಪ್ರಣಾಳಿಕೆ ಬಿಡುಗಡೆಗೊಳಿಸಿ ಮಾತನಾಡಿದ ಸುಧಾಕರ್, ಕ್ಷೇತ್ರದ ಜನರ ಆಶೀರ್ವಾದ, ಪ್ರೀತಿಯಿಂದ ಈಗ ನನಗೆ ಸಚಿವ ಸ್ಥಾನ ಸಿಗುತ್ತಿದೆ. ಗುರುವಾರದಂದು ಪ್ರಮಾಣವಚನ ಕಾರ್ಯಕ್ರಮಕ್ಕೆ ಬರಬೇಕು ಎಂದು ಮಾನ್ಯ ಮುಖ್ಯಮಂತ್ರಿಗಳು ನನಗೆ ಆಹ್ವಾನ ನೀಡಿದ್ದಾರೆ. ಹೀಗಾಗಿ ನಾನು ಮುಖ್ಯಮಂತ್ರಿ ಯಡಿಯೂರಪ್ಪಗೆ ಕೃತಜ್ಞತೆ ಹಾಗೂ ಅಭಿನಂಧನೆಗಳನ್ನ ಅರ್ಪಿಸುತ್ತೇನೆ ಎಂದರು.

    ಮಾಧ್ಯಮಗಳೊಂದಿಗೆ ಮಾತನಾಡಿದ ಸುಧಾಕರ್, ಎಷ್ಟೇ ಆಂತರಿಕ ಸಮಸ್ಯೆಗಳು ಹಾಗೂ ರಾಜಕೀಯ ಒತ್ತಡಗಳು ಬಂದರೂ ಕೊಟ್ಟ ಮಾತಿನಂತೆ ನುಡಿದಂತೆ ನಡೆಯುತ್ತಿರುವ ಸಿಎಂ ಯಡಿಯೂರಪ್ಪ ಅಂತ ಸಾಬೀತಾಗಿದೆ. ಸೋತಿರುವ ಎಂಟಿಬಿ ಹಾಗೂ ವಿಶ್ವನಾಥ್ ಜೊತೆ ನಾನು ರಾಜಕಾರಣದಲ್ಲಿ ಇರುವವರೆಗೂ ಅವರ ಜೊತೆಯಲ್ಲೇ ಇರುತ್ತೇನೆ. ಎಂಟಿಬಿ ಹಾಗೂ ವಿಶ್ವನಾಥ್‍ಗೆ ಮುಂದಿನ ದಿನಗಳಲ್ಲಿ ಒಳ್ಳೆಯದಾಗುವ ಸೂಚನೆ ಇದೆ ಎಂದರು.

    ಸಿಎಂ ಯಡಿಯೂರಪ್ಪ ನಮ್ಮ ತಂಡದ ನಾಯಕರಾಗಿದ್ದು, ನಮ್ಮ ಕ್ಯಾಪ್ಟನ್ ಯಡಿಯೂರಪ್ಪ ಯಾರು ಬೇಕೋ ಅವರನ್ನ ತಮ್ಮ ತಂಡದಲ್ಲಿ ಸೇರಿಸಿಕೊಳ್ಳುತ್ತಾರೆ. ಮೋದಿಯವರ ನೇತೃತ್ವದ ಕೇಂದ್ರ ಸರ್ಕಾರದಂತೆ ಯಡಿಯೂರಪ್ಪ ಸರ್ಕಾರ ಸಹ ರಾಜ್ಯದಲ್ಲಿ ಜನರಿಗೆ ಒಳ್ಳೆಯ ಕಾರ್ಯಕ್ರಮಗಳನ್ನ ನೀಡುವ ಮೂಲಕ ಮಾದರಿ ಸರ್ಕಾರವಾಗಬೇಕು ಅಂತ ಆಶಯ ವ್ಯಕ್ತಪಡಿಸಿದರು.

    ತಮಗೆ ಯಾವ ಖಾತೆ ಅನ್ನೋ ಪ್ರಶ್ನೆಗೆ ಉತ್ತರಿಸಿದ ಸುಧಾಕರ್, ವೈದ್ಯಕೀಯ ಖಾತೆ, ಆರೋಗ್ಯ ಖಾತೆ, ಆ ಖಾತೆ ಈ ಖಾತೆ ಅನ್ನೋದೆಲ್ಲಾ ಊಹಾಪೋಹ. ಎಲ್ಲಾ ಖಾತೆಗಳು ಪ್ರಬಲ ಖಾತೆಗಳು, ಮಂತ್ರಿ ಆದವನು ಪ್ರಬಲನಾಗಿರಬೇಕು, ಏನು ಓದದವರು ಏನೇನೋ ಆಗಿದ್ದಾರೆ. ಹಾಗಾಗಿ ಓದಿಗೂ ಖಾತೆಗೂ ಸಂಬಂಧವಿಲ್ಲ ಎಂದರು.

  • ಅನರ್ಹರ ಗೆಲುವಿಗೆ ಎಲ್ಲರೂ ಶ್ರಮಿಸಬೇಕು – ಕಮಲ ಪಾಳಯಕ್ಕೆ ಬಿಎಸ್‍ವೈ ಕರೆ

    ಅನರ್ಹರ ಗೆಲುವಿಗೆ ಎಲ್ಲರೂ ಶ್ರಮಿಸಬೇಕು – ಕಮಲ ಪಾಳಯಕ್ಕೆ ಬಿಎಸ್‍ವೈ ಕರೆ

    ಶಿವಮೊಗ್ಗ: ಅನರ್ಹರ ಗೆಲುವಿಗೆ ಎಲ್ಲರೂ ಶ್ರಮಿಸಬೇಕು ಎಂದು ಪಕ್ಷದ ಕಾರ್ಯಕರ್ತರಿಗೆ ಯಡಿಯೂರಪ್ಪ ಕರೆಕೊಟ್ಟಿದ್ದಾರೆ.

    ರಾಜ್ಯದಲ್ಲಿ ಉಪ ಚುನಾವಣೆ ದಿನಾಂಕ ಈಗಾಗಲೇ ನಿಗದಿಯಾಗಿದ್ದು, ಅನರ್ಹ ಶಾಸಕರಿಗೆ ಬಿಜೆಪಿ ಟಿಕೆಟ್ ನೀಡಲಾಗುವುದು ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ತಿಳಿಸಿದ್ದಾರೆ. ಜಿಲ್ಲೆಯ ಶಿಕಾರಿಪುರದಲ್ಲಿ ಇಂದು ಮಾಧ್ಯಮದವರೊಂದಿಗೆ ಮಾತನಾಡಿದ ಸಿಎಂ, ಈ ಹಿಂದೆ ಕಾಂಗ್ರೆಸ್ ಹಾಗೂ ಜೆಡಿಎಸ್‍ನ 15 ಶಾಸಕರು ರಾಜೀನಾಮೆ ನೀಡಿ ಹೊರ ಬಂದಿದ್ದಾರೆ. ಈ ಸರ್ಕಾರ ಬರಲು ಕಾರಣರಾಗಿದ್ದಾರೆ. ಆದ್ದರಿಂದ ಉಪ ಚುನಾವಣೆಯಲ್ಲಿ ಅನರ್ಹ ಶಾಸಕರೆಲ್ಲರಿಗೂ ಟಿಕೆಟ್ ನೀಡಲು ಬಿಜೆಪಿಯ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ಅವರು ಸಹ ನಿರ್ಧಾರ ಮಾಡಿದ್ದಾರೆ. ಈ ಬಗ್ಗೆ ಪಕ್ಷದಲ್ಲಿ ಯಾವುದೇ ಗೊಂದಲವಿಲ್ಲ ಎಂದರು. ಚುನಾವಣೆಯಲ್ಲಿ ಅನರ್ಹ ಶಾಸಕರ ಪರ ಕೆಲಸ ಮಾಡಿ ಗೆಲ್ಲಿಸುವ ಜವಾಬ್ದಾರಿ ಸಹ ನಮ್ಮ ಮೇಲಿದೆ ಎಂದು ತಿಳಿಸಿದರು. ಇದನ್ನೂ ಓದಿ:ಅವರ ದಾರಿ ಅವರಿಗೆ, ನಮ್ಮ ದಾರಿ ನಮಗೆ – ಅನರ್ಹರಿಗೆ ತಿವಿದ ಕತ್ತಿ

    ಇದೇ ವೇಳೆ ಚುನಾವಣೆ ನಡೆಯುವ ಪ್ರತಿ ಕ್ಷೇತ್ರಕ್ಕೂ ಇಬ್ಬರು ಸಚಿವರನ್ನು ಉಸ್ತುವಾರಿಯಾಗಿ ನೇಮಕ ಮಾಡಿ ಜವಾಬ್ದಾರಿ ನೀಡಲಾಗುವುದು ಎಂದು ಸಿಎಂ ತಿಳಿಸಿದ್ದಾರೆ. ಅಲ್ಲದೇ ಕಳೆದ ಚುನಾವಣೆಯಲ್ಲಿ ಕಡಿಮೆ ಅಂತರದಲ್ಲಿ ಸೋಲು ಅನುಭವಿಸಿದವರಿಗೆ ನಿಗಮ ಮಂಡಳಿಯಲ್ಲಿ ಸ್ಥಾನ ನೀಡುವ ಬಗ್ಗೆ ಸಚಿವ ಸಂಪುಟ ಸಭೆಯಲ್ಲಿ ಚರ್ಚಿಸಲಾಗುವುದು ಎಂದರು. ಜೊತೆಗೆ ಬಿಬಿಎಂಪಿ ಮೇಯರ್ ಚುನಾವಣೆ ನ್ಯಾಯಾಲಯದಲ್ಲಿದ್ದು, ಚುನಾವಣೆ ಒಂದೂವರೆ ತಿಂಗಳುಗಳ ಕಾಲ ವಿಳಂಬವಾಗಲಿದೆ ಎಂದರು. ಇದನ್ನೂ ಓದಿ:ತಂತಿ ಮೇಲೆ ನಡೆದು ಯಡಿಯೂರಪ್ಪ ಬಿದ್ದುಬಿಟ್ಟಾರು: ಸಿದ್ದರಾಮಯ್ಯ ಟಾಂಗ್

    ಉಪ ಚುನಾವಣೆಗೆ ಇವಿಎಂ ಬೇಡ, ಬ್ಯಾಲೆಟ್ ಪೇಪರ್ ಉಪಯೋಗಿಸಬೇಕು ಎನ್ನು ಕೂಗು ಕೇಳಿಬರುತ್ತಿದೆ. ಜೊತೆಗೆ ಮಾಜಿ ಸಿಎಂ ಸಿದ್ದರಾಮಯ್ಯ ಅವರು ಕೂಡ ಇವಿಎಂ ಬಗ್ಗೆ ಅನುಮಾನವಿದೆ ಎಂದಿದ್ದರು. ಈ ಬಗ್ಗೆ ಯಡಿಯೂರಪ್ಪ ಅವರು ಪ್ರತಿಕ್ರಿಯಿಸಿ, ಸಿದ್ದರಾಮಯ್ಯ ಗೆದ್ದಾಗ ಇವಿಎಂ ಸರಿಯಿತ್ತು, ಈಗ ಸರಿಯಿಲ್ಲ ಎಂಬುದು ಎಷ್ಟರ ಮಟ್ಟಿಗೆ ಸರಿ ಎಂದು ಪ್ರಶ್ನಿಸಿ ಹರಿಹಾಯ್ದರು.

    ತಂತಿ ಮೇಲಿನ ನಡಿಗೆ ಕುರಿತ ನನ್ನ ಹೇಳಿಕೆಗೆ ಅಪಾರ್ಥ ಕಲ್ಪಿಸುವ ಅಗತ್ಯವಿಲ್ಲ. ಸೀಮಿತ ಸಂಪನ್ಮೂಲವನ್ನೆಲ್ಲಾ ಸಮಾಜ ಮತ್ತು ರಾಜ್ಯದ ಅಭಿವೃದ್ಧಿಗೆ ಬಳಸಬೇಕಿದೆ. ಹೀಗಾಗಿ ಹೆಚ್ಚಿನ ಅನುದಾನವನ್ನು ನೀಡುವುದು ಕಷ್ಟಸಾಧ್ಯ. ಅದನ್ನೇ ಹೇಳಿದ್ದೇನೆ ಅಷ್ಟೇ ಎಂದು ಸ್ಪಷ್ಟಪಡಿಸಿದರು.

    ಯಡಿಯೂರಪ್ಪ ಅವರಿಂದಾಗಿ ಲಿಂಗಾಯತ ವೀರಶೈವ ಧರ್ಮ ಉಳಿದಿದೆ ಶಾಸಕ ಎಂಬ ಶಾಮನೂರು ಅವರ ಹೇಳಿಕೆ ಬಗ್ಗೆ ಮಾತನಾಡಿ, ಅದು ಅವರ ವೈಯಕ್ತಿಕ ಅಭಿಪ್ರಾಯ. ಹಿಂದಿನ ಸರ್ಕಾರ ವೀರಶೈವ ಧರ್ಮವನ್ನು ಲಿಂಗಾಯತ ಧರ್ಮದಿಂದ ಪ್ರತ್ಯೇಕಿಸುವ ಸಂದರ್ಭದಲ್ಲಿ ನಾನು ಕಠಿಣ ನಿಲುವು ತೆಗೆದುಕೊಂಡಿದ್ದನ್ನು ಶಾಮನೂರು ಸ್ವಾಗತಿಸಿದ್ದರು. ಬಹುಶಃ ಆ ಕಾರಣಕ್ಕೆ ಅವರು ಹೀಗೆ ಹೇಳಿರಬಹುದು ಎಂದರು. ಇದೇ ವೇಳೆ ಶಿಕಾರಿಪುರ-ರಾಣೆಬೆನ್ನೂರು ರೈಲ್ವೆ ಮಾರ್ಗ ನಿರ್ಮಾಣಕ್ಕೆ ರಾಜ್ಯದ ಪಾಲು 750 ಕೋಟಿ ರೂ. ಬಿಡುಗಡೆಯಾಗಲಿದೆ ಎಂದು ತಿಳಿಸಿದರು.

  • ಮಹಾರಾಷ್ಟ್ರದ ಚುನಾವಣೆ ಫಲಿತಾಂಶದ ಮೇಲೆ ನಿಂತಿದೆ ರಾಜ್ಯದ ರಾಜಕೀಯ ಭವಿಷ್ಯ

    ಮಹಾರಾಷ್ಟ್ರದ ಚುನಾವಣೆ ಫಲಿತಾಂಶದ ಮೇಲೆ ನಿಂತಿದೆ ರಾಜ್ಯದ ರಾಜಕೀಯ ಭವಿಷ್ಯ

    ಬೆಂಗಳೂರು: ನೆರೆಯ ಮಹಾರಾಷ್ಟ್ರದಲ್ಲಿ ಫೆಬ್ರವರಿಯಲ್ಲಿ ನಡೆಯುವ ಚುನಾವಣೆ ಕರ್ನಾಟಕದಲ್ಲಿ ಮಧ್ಯಂತರ ಚುನಾವಣೆ ಭವಿಷ್ಯವನ್ನು ನಿರ್ಧರಿಸುತ್ತೆ ಎನ್ನಲಾಗುತ್ತಿದ್ದು, ರಾಜ್ಯದಲ್ಲಿ ಯಾವ ಕ್ಷಣದಲ್ಲಿ ಬೇಕಾದರು ಚುನಾವಣೆ ನಡೆಯಬಹುದು ಅನ್ನೋ ವಿಪಕ್ಷಗಳ ಮಾತು ನಿಜವಾಗುತ್ತೆ ಎಂಬ ಅನುಮಾನಗಳು ಶುರುವಾಗಿದೆ.

    ನೆರೆಯ ರಾಜ್ಯದಲ್ಲಿ ನಿರೀಕ್ಷೆಗೂ ಮೀರಿ ಬಿಜೆಪಿ ಗೆಲುವು ಸಾಧಿಸಿದರೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಹಾಗೂ ಪ್ರಧಾನಿ ಮೋದಿ ಅವರು ಕರ್ನಾಟಕವನ್ನ ಟಾರ್ಗೆಟ್ ಮಾಡಲಿದ್ದಾರೆ. ಕೇಂದ್ರದಂತೆ ರಾಜ್ಯದಲ್ಲಿ ಕೂಡ ಸ್ಪಷ್ಟ ಬಹುಮತದ ಬಿಜೆಪಿ ಸರ್ಕಾರವನ್ನು ರಚಿಸಲು ಬಿಜೆಪಿ ಹೈಕಮಾಂಡ್ ಯೋಚಿಸಿದೆ ಎನ್ನಲಾಗಿದೆ. ಆದ್ದರಿಂದ ಮಹಾರಾಷ್ಟ್ರದಲ್ಲಿ ನಡೆಯುವ ಚುನಾವಣೆ ಫಲಿತಾಂಶದ ಮೇಲೆ ಕರ್ನಾಟಕದ ಮಧ್ಯಂತರ ಚುನಾವಣೆ ಭವಿಷ್ಯ ನಿರ್ಧಾರವಾಗುತ್ತದೆ. ಸ್ವತಃ ಬಿಜೆಪಿ ನಾಯಕರುಗಳೇ ಚುನಾವಣೆಗೆ ತೆರೆ ಮರೆಯಲ್ಲಿ ಸಿದ್ಧತೆ ನಡೆಸುತ್ತಿದ್ದಾರಾ ಎಂಬ ಪ್ರಶ್ನೆ ಉದ್ಭವಿಸಿದೆ.

    ಫೆಬ್ರವರಿಯಲ್ಲಿ ಮಹಾರಾಷ್ಟ್ರದಲ್ಲಿ ಚುನಾವಣೆ ನಡೆಯಲಿದೆ. ಆದ್ದರಿಂದ ಇನ್ನು 6 ತಿಂಗಳಿಗೆ ರಾಜ್ಯದಲ್ಲಿ ವಿಧಾನಸಭಾ ಚುನಾವಣೆ ನಡೆಯೋದು ಗ್ಯಾರಂಟಿನಾ? ಸಿಎಂ ಬಿಎಸ್ ಯಡಿಯೂರಪ್ಪ ಅವರ ವಿರೋಧದ ನಡುವೆಯು ಬಿಜೆಪಿಯಲ್ಲಿ ಚುನಾವಣಾ ಸಿದ್ಧತೆ ಆರಂಭವಾಗಿದೆಯಾ ಎಂಬ ಪ್ರಶ್ನೆಗಳು ರಾಜಕೀಯ ವಲಯದಲ್ಲಿ ಭಾರೀ ಚರ್ಚೆಗೆ ಕಾರಣವಾಗಿದೆ.

    ಮೋದಿ, ಶಾ ಅವರ ಈ ಲೆಕ್ಕಾಚಾರಕ್ಕೆ ರಾಜ್ಯ ಬಿಜೆಪಿಯ ಕೆಲವು ನಾಯಕರು ಸಹ ಸಮ್ಮತಿ ಸೂಚಿಸಿದ್ದಾರೆ. ಆದರೆ ಸಿಎಂ ಯಡಿಯೂರಪ್ಪ ಮಾತ್ರ ಚುನಾವಣೆಯ ಬಗ್ಗೆ ಮಾತನಾಡದೆ ಸರ್ಕಾರ ಉಳಿಸಿಕೊಂಡು ಹೋಗುವ ಲೆಕ್ಕಾಚಾರದಲ್ಲಿದ್ದಾರೆ. ಆದರೆ ಮಹಾರಾಷ್ಟ್ರ ಚುನಾವಣಾ ಫಲಿತಾಂಶದ ಮೇಲೆ ರಾಜ್ಯ ರಾಜಕಾರಣದ ಭವಿಷ್ಯವು ನಿರ್ಧಾರವಾಗಲಿದೆ. ಈ ಮೂಲಕ ಕೇಂದ್ರ ಬಿಜೆಪಿ ನಾಯಕರ ಚುನಾವಣಾ ಆಸಕ್ತಿ ರಾಜ್ಯ ರಾಜಕಾರಣದಲ್ಲಿ ಇನ್ನೊಂದು ಸುತ್ತಿನ ರಾಜಕೀಯ ಜಿದ್ದಾ ಜಿದ್ದಿಗೆ ವೇದಿಕೆ ಸೃಷ್ಟಿಸಿ ಕೊಡುವ ಸಾಧ್ಯತೆ ಕಂಡುಬರುತ್ತಿದೆ.

  • ದೇವೇಗೌಡರದ್ದು ಭಸ್ಮಾಸುರ ಕುಟುಂಬ, ಎಲ್ಲರ ತಲೆ ಮೇಲೆ ಕೈ ಇಡ್ತಾರೆ: ರೇಣುಕಾಚಾರ್ಯ ಟೀಕೆ

    ದೇವೇಗೌಡರದ್ದು ಭಸ್ಮಾಸುರ ಕುಟುಂಬ, ಎಲ್ಲರ ತಲೆ ಮೇಲೆ ಕೈ ಇಡ್ತಾರೆ: ರೇಣುಕಾಚಾರ್ಯ ಟೀಕೆ

    -ದಿನೇಶ್ ಗುಂಡೂರಾವ್ ರಾಜಕೀಯದಲ್ಲಿ ಬಚ್ಚಾ

    ದಾವಣಗೆರೆ: ಮಾಜಿ ಪ್ರಧಾನಿ ದೇವೇಗೌಡರ ಕುಟುಂಬ ಭಸ್ಮಾಸುರ ಇದ್ದಂಗೆ, ಅವರು ಎಲ್ಲರ ತಲೆ ಮೇಲೆ ಕೈ ಇಡಲು ಹೊರಟಿದ್ದಾರೆ. ಈ ಮೂಲಕ ಕಾಂಗ್ರೆಸ್ಸನ್ನು ಸರ್ವನಾಶ ಮಾಡುತ್ತಾರೆ, ಕೊನೆಗೆ ತಾವು ನಾಶವಾಗುತ್ತಾರೆ ಎಂದು ಮಾಜಿ ಸಚಿವ, ಹಾಲಿ ಶಾಸಕ ರೇಣುಕಾಚಾರ್ಯ ಟೀಕಿಸಿದ್ದಾರೆ.

    ಮಾಧ್ಯಮಗಳ ಜೊತೆ ಮಾತನಾಡಿದ ಅವರು, ಲೋಕಸಭಾ ಚುನಾವಣೆ ಮುಗಿದ ಮೇಲೆ ಕಾಂಗ್ರೆಸ್ ಕೈ ಕೊಟ್ರು ಅಂತಾರೆ. ಹೋಗಿ ಹೋಗಿ ರಾಕ್ಷಸರ ಜೊತೆ ಹೊಂದಾಣಿಕೆ ಮಾಡಿಕೊಂಡಿರುವ ಕಾಂಗ್ರೆಸ್ ರಾಜ್ಯದಲ್ಲಿ ಉದ್ದಾರವಾಗಲ್ಲ. ರಾಜ್ಯದಲ್ಲಿ ಒಂದು ಸ್ಥಾನವನ್ನು ಕೂಡ ಜೆಡಿಎಸ್ ಗೆಲ್ಲೋಲ್ಲ. ತಾತ, ಮೊಮ್ಮಕ್ಕಳು ಹೀನಾಯವಾಗಿ ಸೋಲುತ್ತಾರೆ ಎಂದು ಜೆಡಿಎಸ್ ವಿರುದ್ಧ ಕಿಡಿಕಾರಿದರು. ಇದನ್ನೂ ಓದಿ:ಬಿಎಸ್‍ವೈ ಡೈರಿ ಪ್ರಕರಣ- ಕಾಂಗ್ರೆಸ್ ಮುಂದೆ 10 ಪ್ರಶ್ನೆಗಳನ್ನಿಟ್ಟ ಸಿ.ಟಿ.ರವಿ

    ಬಿಎಸ್‍ವೈ ಡೈರಿ ವಿಚಾರವಾಗಿ ಪ್ರತಿಕ್ರಿಯಿಸಿ, ದಿನೇಶ್ ಗುಂಡೂರಾವ್ ರಾಜಕೀಯದಲ್ಲಿ ಬಚ್ಚಾ. ಬಿಎಸ್‍ವೈ ಅವರ ವಯಸ್ಸಿಗಾದರೂ ಮರ್ಯಾದೆ ನೀಡಬೇಕು. ಯಡಿಯೂರಪ್ಪನವರ ಬಗ್ಗೆ ಇಲ್ಲ ಸಲ್ಲದ ಹೇಳಿಕೆ ನೀಡುತ್ತಿದ್ದೀರಾ. ಇನ್ನಾದರೂ ಯಡಿಯೂರಪ್ಪನವರ ಬಗ್ಗೆ ಗೌರವದಿಂದ ಮಾತನಾಡಿ ಎಂದು ಎಚ್ಚರಿಕೆ ನೀಡಿದರು. ಅಲ್ಲದೇ ನಾನು ಕೋಟಿನೇ ನೋಡಿಲ್ಲ. ಬರೀ ಲಕ್ಷ ನೋಡಿದ್ದೇನೆ. ಬಹುಕೋಟಿ ಹಗರಣ ಮಾಡಿದವರಿಗೆ ಕೋಟಿ ಬೆಲೆ ಗೊತ್ತಿಲ್ವಾ? ಹೈ ಕಮಾಂಡ್‍ಗೆ ಕಪ್ಪ ಕೊಡೋದು ಕಾಂಗ್ರೆಸ್ ಸಂಸ್ಕೃತಿ, ನಮ್ಮದಲ್ಲಾ. ಚುನಾವಣೆ ವೇಳೆಯಲ್ಲಿ ಈ ಪ್ರಕರಣ ತೆಗೆದು ಕಾಂಗ್ರೆಸ್ ಜನರ ಕಿವಿಗೆ ಹೂವು ಇಡುತ್ತಿದ್ದಾರೆ. ಇದನ್ನು ಜನರು ನಂಬೋದಿಲ್ಲ ಎಂದು ರೇಣುಕಾಚಾರ್ಯ ಕಾಂಗ್ರೆಸ್ ವಿರುದ್ಧ ಹರಿಹಾಯ್ದರು.

  • ಬೊಗಳುವ ನಾಯಿ ಬೊಗಳುತ್ತಲೇ ಇರುತ್ತದೆ: ಬಿಜೆಪಿಗೆ ವೆಂಕಟರಮಣಪ್ಪ ಲೇವಡಿ

    ಬೊಗಳುವ ನಾಯಿ ಬೊಗಳುತ್ತಲೇ ಇರುತ್ತದೆ: ಬಿಜೆಪಿಗೆ ವೆಂಕಟರಮಣಪ್ಪ ಲೇವಡಿ

    ಚಿತ್ರದುರ್ಗ: ಬೊಗಳುವ ನಾಯಿ ಬೊಗಳುತ್ತಲೇ ಇರುತ್ತದೆ ಎನ್ನುವಂತೆ ಬಿಜೆಪಿ ವರ್ತಿಸುತ್ತದೆ. ಯಡಿಯೂರಪ್ಪ ಹೇಳಿದಂತೆ ಆಗುವಂತಿದ್ದರೆ ಬಿಎಸ್‍ವೈ ಯಾವತ್ತೋ ಸಿಎಂ ಆಗಿರುತ್ತಿದ್ದರು ಎಂದು ಕಾರ್ಮಿಕ ಸಚಿವ ವೆಂಕಟರಮಣಪ್ಪ ಬಿಜೆಪಿಗೆ ಲೇವಡಿ ಮಾಡಿದ್ದಾರೆ.

    ಮಾಧ್ಯಮಗಳ ಜೊತೆ ಮಾತನಾಡಿದ ಅವರು, ಸಾಕಷ್ಟು ಕಾಂಗ್ರೆಸ್ ಅತೃಪ್ತ ಶಾಸಕರು ಬಿಜೆಪಿ ಸೇರುತ್ತಾರೆ ಅಂತ ಬಿಜೆಪಿ ಅವರು ಸುಮ್ಮನೆ ಹೇಳಿಕೊಂಡು ತಿರುಗುತ್ತಿದ್ದಾರೆ. ಬೊಗಳುವ ನಾಯಿ ಬೊಗಳುತ್ತಲೇ ಇರುತ್ತದೆ. ಬಿಜೆಪಿ ಅವರಿಗೆ ಬೇರೆ ಕೆಲಸವಿಲ್ಲ. ಶಾಸಕ ಉಮೇಶ್ ಜಾಧವ್ ಒಬ್ಬ ರಾಜೀನಾಮೆ ನೀಡಿ ಬಿಜೆಪಿ ಸೇರುತ್ತಾರೆಂದು ಕಾಂಗ್ರೆಸ್ಸಿನ ಇತರೇ ಶಾಸಕರು ಬಿಜೆಪಿ ಸೇರುವುದಿಲ್ಲ. ಜಾಧವ್ ಅವರೊಬ್ಬರಿಂದ ಕಾಂಗ್ರೆಸ್ಸಿಗೆ ಏನೂ ಹಾನಿ ಇಲ್ಲ ಎಂದು ತಿಳಿಸಿದರು. ಇದನ್ನೂ ಓದಿ:ಎಲ್ಲರಿಗೂ ದೇಶ, ಸೈನಿಕರ ಚಿಂತೆಯಾದರೆ ಬಿಎಸ್‍ವೈಗೆ ಸೀಟಿನ ಚಿಂತೆ: ಯು.ಟಿ ಖಾದರ್

    ಪಕ್ಷಾಂತರ ಮಾಡಿದವರಿಗೆ ಜನ ಬುದ್ಧಿ ಕಲಿಸ್ತಾರೆ. ಯಾರು ಯಾರು ಎಲ್ಲೆಲ್ಲಿ ಅಭಿಮಾನವಿದೆ ಅಲ್ಲಿಗೆ ಹೋಗ್ತಾರೆ. ಇನ್ನೂ ನಾಲ್ಕುವರೆ ವರ್ಷ ಇರುವಾಗಲೇ ಜಾಧವ್ ರಾಜೀನಾಮೆ ಕೊಟ್ಟಿದ್ದಾರೆ. ಇದನ್ನು ಜನರು ಅರ್ಥ ಮಾಡಿಕೊಳ್ಳಬೇಕೆಂದು ಹೇಳಿದರು. ಇದನ್ನೂ ಓದಿ:ಅವಳ ಸಪೋರ್ಟಿನಿಂದ ನೀನು ಹೀಗೆ ಮಾಡ್ತೀರೋದು: ಶಾಸಕರಿಬ್ಬರ ಜಗಳದಲ್ಲಿ ಮಹಿಳೆಯ ಎಂಟ್ರಿ

    ಕಾಂಗ್ರೆಸ್ಸಿನವರು ಬಿಜೆಪಿ ಸೇರುತ್ತಾರೆ ಎನ್ನುವುದು ಬರೀ ಕನಸು. ಯಡಿಯೂರಪ್ಪನವರ ಕನಸು ನನಸಾಗುವುದೇ ಇಲ್ಲ. ಯಡಿಯೂರಪ್ಪ ಹೇಳಿದಂತೆ ಆಗುವಂತಿದ್ದರೆ ಯಾವತ್ತೋ ಸಿಎಂ ಆಗುತ್ತಿದ್ದರು. ಮೂರು ವರ್ಷಕ್ಕೆ ಸಿಎಂ ಸ್ಥಾನದಿಂದ ಕೆಳಗಿಳಿಯುತ್ತಲೂ ಇರಲಿಲ್ಲ ಎಂದು ಟಾಂಗ್ ನೀಡಿದರು.

    ಶಾಸಕ ಗಣೇಶ್ ಹಾಗೂ ಆನದ್ ಸಿಂಗ್ ವಿಚಾರವಾಗಿ ಪ್ರತಿಕ್ರಿಯಿಸಿ, ಅವರಿಬ್ಬರು ಫ್ರೆಂಡ್ಸ್. ವೈಯಕ್ತಿಕ ಕಾರಣಕ್ಕೆ ಗಲಾಟೆ ಮಾಡಿಕೊಂಡಿದ್ದಾರೆ ಅಷ್ಟೇ. ಒಂದೇ ತಾಯಿಯ ಮಕ್ಕಳು, ಅಣ್ಣ ತಮ್ಮಂದಿರು, ಗಂಡ-ಹೆಂಡತಿ ಕಿತ್ತಾಡುತ್ತಾರೆ. ಸಂಸಾರದ ಜಗಳ ತಾನಾಗಿಯೇ ಸರಿ ಆಗುತ್ತದೆ. ಹಾಗೆಯೇ ಇವರಿಬ್ಬರ ನಡುವೆ ಇರುವ ಭಿನ್ನಾಭಿಪ್ರಾಯ ಕೂಡ ಸರಿಯಾಗುತ್ತದೆ ಎಂದರು.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv

  • ಎಲ್ಲರಿಗೂ ದೇಶ, ಸೈನಿಕರ ಚಿಂತೆಯಾದರೆ ಬಿಎಸ್‍ವೈಗೆ ಸೀಟಿನ ಚಿಂತೆ: ಯು.ಟಿ ಖಾದರ್

    ಎಲ್ಲರಿಗೂ ದೇಶ, ಸೈನಿಕರ ಚಿಂತೆಯಾದರೆ ಬಿಎಸ್‍ವೈಗೆ ಸೀಟಿನ ಚಿಂತೆ: ಯು.ಟಿ ಖಾದರ್

    ಬೆಳಗಾವಿ: ಭಾರತ ಮತ್ತು ಪಾಕಿಸ್ತಾನದ ನಡುವೆ ಉದ್ವಿಗ್ನ ಪರಿಸ್ಥಿತಿ ಇದೆ. ಈ ವೇಳೆ ಎಲ್ಲರಿಗೂ ದೇಶ ಹಾಗೂ ಸೈನಿಕರ ಚಿಂತೆಯಾದರೆ ಮಾಜಿ ಸಿಎಂ ಬಿ.ಎಸ್ ಯಡಿಯೂರಪ್ಪ ಅವರಿಗೆ ಸೀಟಿನ ಚಿಂತೆ ಎಂದು ನಗರಾಭಿವೃದ್ಧಿ ಸಚಿವ ಯು.ಟಿ ಖಾದರ್ ಟೀಕಿಸಿದ್ದಾರೆ.

    ಸ್ಮಾರ್ಟ್ ಸಿಟಿ ಯೋಜನೆಯಡಿ ಬೆಳಗಾವಿಯ ಟಿಳಕವಾಡಿಯಲ್ಲಿ ನಾಥ ಪೈ ಉದ್ಯಾನವನ ಉದ್ಘಾಟಿಸಿದ ಬಳಿಕ ಮಾಧ್ಯಮಗಳ ಜೊತೆ ಮಾತನಾಡಿದ ಅವರು, ದೇಶ ಹಾಗೂ ಸೈನಿಕರ ವಿಷಯದಲ್ಲಿ ಎಲ್ಲಾ ರಾಜಕೀಯ ಪಕ್ಷಗಳು ಒಂದಾಗಿರಬೇಕು. ಇಂಥ ವಿಷಯಗಳಲ್ಲಿ ರಾಜಕೀಯ ಮಾಡದೇ ವಿಶ್ವಕ್ಕೆ ಏಕತೆ ಸಂದೇಶ ಸಾರಬೇಕು ಎಂದರು.

    ಏರ್ ಸ್ಟ್ರೈಕ್‍ನಿಂದ 22 ಎಂಪಿ ಸೀಟು ಗೆಲ್ಲುವ ಬಿಎಸ್‍ವೈ ಹೇಳಿಕೆ ವಿಚಾರ ಪ್ರತಿಕ್ರಿಯಿಸಿ, ದೇಶದ ಸೈನ್ಯ ಮತ್ತು ಭದ್ರತೆ ವಿಷಯದಲ್ಲಿ ನಾವೆಲ್ಲರೂ ಒಗ್ಗಟ್ಟಾಗಿ ಇರಬೇಕು. ದಾಳಿ ಮತ್ತು ಸರ್ಜಿಕಲ್ ಸ್ಟ್ರೈಕ್ ವಿಚಾರದಲ್ಲಿ ರಾಜಕಾರಣ ಮಾಡಬಾರದು. ಕೆಲವು ಜವಾಬ್ದಾರಿಯುತ ಸ್ಥಾನದಲ್ಲಿ ಇರುವವರೇ ಈ ರೀತಿ ಮಾಡುವುದು ಎಲ್ಲರಿಗೂ ಕೂಡ ಕಪ್ಪು ಚುಕ್ಕೆ. ಎಲ್ಲರಿಗೂ ಕೂಡ ದೇಶದ ಮತ್ತು ಸೈನಿಕರ ಚಿಂತೆಯಾದರೆ ಯಡಿಯೂರಪ್ಪ ಅವರಿಗೆ ಸೀಟಿನ ಚಿಂತೆಯಾಗಿದೆ ಎಂದು ವಾಗ್ದಾಳಿ ನಡೆಸಿದರು.

    ಮುಂಬೈ ಸ್ಫೋಟದ ವೇಳೆ ಚಿತ್ರೀಕರಣ ನೋಡಲು ಅಲ್ಲಿನ ಮುಖ್ಯಮಂತ್ರಿಯ ಮಗ ಮತ್ತು ನಿರ್ದೇಶಕ ಹೋಗಿದ್ದಕ್ಕೆ ಅಂದು ಮುಖ್ಯಮಂತ್ರಿ ಅವರನ್ನು ಬದಲಿಸಲಾಗಿತ್ತು. ಬಹಿರಂಗವಾಗಿ ಹೇಳಿಕೆ ನೀಡಿರುವ ಬಿಎಸ್‍ವೈ ವಿರುದ್ಧ ಬಿಜೆಪಿ ಹೈಕಮಾಂಡ್ ಯಾವ ಕ್ರಮ ಜರುಗಿಸಲಿದೆ ಎನ್ನುವದನ್ನು ದೇಶಕ್ಕೆ ತೋರಿಸಲಿ ಎಂದು ಸವಾಲು ಹಾಕಿದರು.

    ಶಾಸಕ ಕಂಪ್ಲಿ ಗಣೇಶ್ ಮತ್ತು ಆನಂದ್ ಸಿಂಗ್ ಫೈಟ್ ವಿಡಿಯೋ ವಿಚಾರ ಮಾತನಾಡಿ, ಅವರಿಬ್ಬರ ನಡುವೆ ಹೆಣ್ಣುಮಗಳ ವಿಚಾರವಾಗಿ ಜಗಳವಾಗಿರುವುದು ನಂಬಲು ಸಾಧ್ಯವಿಲ್ಲ. ವೈಯುಕ್ತಿಕ ವಿಚಾರಕ್ಕಾಗಿ ಜಗಳ ನಡೆದಿದೆ. ಹೆಣ್ಣುಮಗಳ ವಿಷಯವಾಗಿ ಅವರಿಬ್ಬರ ಮಧ್ಯೆ ಜಗಳವಾಗಿದ್ದು ನನಗೆ ಗೊತ್ತಿಲ್ಲ. ಇದನ್ನು ನಾನು ನೋಡಿಯೂ ಇಲ್ಲ ಕೇಳಿಯೂ ಇಲ್ಲ. ಅವರಿಬ್ಬರು ಸಹೋದರರಂತೆ ಇದ್ದಾರೆ. ಜಗಳ ಕೆಟ್ಟಗಳಿಗೆಯಲ್ಲಿ ಆಗಿದೆ. ತಪ್ಪಿತಸ್ಥರ ವಿರುದ್ಧ ಕಾನೂನು ಕ್ರಮವಾಗುತ್ತದೆ. ಮುಂದೆ ಎಲ್ಲವೂ ಸರಿ ಹೋಗಲಿದೆ ಎನ್ನುವ ವಿಶ್ವಾಸವಿದೆ ಎಂದು ಖಾದರ್ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv