Tag: Yaduveer

  • ಬಿಜೆಪಿ ಅಭ್ಯರ್ಥಿಗೆ ಜನರ ಮಧ್ಯೆ ಇದ್ದು ಗೊತ್ತಿಲ್ಲ- ಯದುವೀರ್ ಬಗ್ಗೆ ಯತೀಂದ್ರ ವ್ಯಂಗ್ಯ

    ಬಿಜೆಪಿ ಅಭ್ಯರ್ಥಿಗೆ ಜನರ ಮಧ್ಯೆ ಇದ್ದು ಗೊತ್ತಿಲ್ಲ- ಯದುವೀರ್ ಬಗ್ಗೆ ಯತೀಂದ್ರ ವ್ಯಂಗ್ಯ

    ಮೈಸೂರು: ಲೋಕಸಭಾ ಚುನಾವಣೆಗೆ ಇನ್ನೇನು ಕೆಲವೇ ದಿನಗಳಲ್ಲಿ ಮತದಾನ ನಡೆಯಲಿದೆ. ಈ ಹಿನ್ನೆಲೆಯಲ್ಲಿ ಅಭ್ಯರ್ಥಿಗಳು ಈಗಾಗಲೇ ಅಬ್ಬರದ ಪ್ರಚಾರ ನಡೆಸುತ್ತಿದ್ದಾರೆ. ಅಂತೆಯೇ ಮೈಸೂರು ಪ್ರಚಾರ ಕಣದಲ್ಲಿ ಸಿದ್ದರಾಮಯ್ಯ ಪುತ್ರ ಡಾ. ಯತೀಂದ್ರ ಸಿದ್ದರಾಮಯ್ಯ ಅವರು ಬಿಜೆಪಿ ಅಭ್ಯರ್ಥಿ ಯದುವೀರ್ (Yaduveer Krishnadatta Chamaraja Wadiyar) ವಿರುದ್ಧ ಟೀಕೆ ಮಾಡಿದ್ದಾರೆ.

    ಪ್ರಚಾರ ಭಾಷಣದಲ್ಲಿ ಯತೀಂದ್ರ (Dr. Yathindra Siddaramaiah) ಅವರು, ಬಿಜೆಪಿ ಅಭ್ಯರ್ಥಿ ರಾಜ ಮನೆತನದವರು. ದಂತದ ಗೋಪುರದಲ್ಲಿ ಇದ್ದಂತವರು. ಅವರಿಗೆ ಯಾವತ್ತೂ ಜನರ ಮಧ್ಯೆ ಇದ್ದು ಗೊತ್ತಿಲ್ಲ. ಅವರಿಗೆ ಜನರ ಸಮಸ್ಯೆಗಳು ಏನೂ ಅಂತ ಗೊತ್ತಿಲ್ಲ. ನೀವ್ಯಾರು ಅರಮನೆ ಮುಂದೆ ಹೋಗಿ ನಿಂತುಕೊಳ್ಳಲು ಆಗಲ್ಲ. ಕಾರ್ಯಕರ್ತರೇ ಹೋಗಿ ಭೇಟಿ ಮಾಡೊಕೆ ಆಗಲ್ಲ. ಇನ್ನು ಜನಸಾಮಾನ್ಯರು ಭೇಟಿ ಮಾಡಲು ಸಾಧ್ಯವಾ ಎಂದು ಪ್ರಶ್ನಿಸುವ ಮೂಲಕ ಟೀಕಿಸಿದ್ದಾರೆ.

    ಅಂದು ಬಿಜೆಪಿ ಅಭ್ಯರ್ಥಿ ಯಾರು ಎಂದು ಗೊತ್ತಿಲ್ಲ ಅಂತಾ ಕಾಂಗ್ರೆಸ್ (Congress) ಸಚಿವ ಕೆ.ವೆಂಕಟೇಶ್ ಹೇಳಿದ್ದರು. ಇಂದು ಬಿಜೆಪಿ ಅಭ್ಯರ್ಥಿಗಿಂತಲೂ ನಮ್ಮ ಅಭ್ಯರ್ಥಿ ಎಂ.ಲಕ್ಷ್ಮಣ್ (M. Laxman) ಉತ್ತಮ ಎಂದು ಸಿಎಂ ಪುತ್ರ ಹೇಳಿದರು. ಇದನ್ನೂ ಓದಿ: ಪ್ರಚಾರಕ್ಕೆ ಮೋದಿ ಫೋಟೋ ಬಳಸಲು ಈಶ್ವರಪ್ಪರಿಂದ ಕೋರ್ಟ್‍ಗೆ ಕೆವಿಯಟ್ ಸಲ್ಲಿಕೆ

  • ಮತ್ತೆ ಸಿನಿಮಾ ರಂಗಕ್ಕೆ ಮರಳಿದ ನಿಖಿಲ್ ಕುಮಾರಸ್ವಾಮಿ

    ಮತ್ತೆ ಸಿನಿಮಾ ರಂಗಕ್ಕೆ ಮರಳಿದ ನಿಖಿಲ್ ಕುಮಾರಸ್ವಾಮಿ

    ರ್ನಾಟಕ ವಿಧಾನಸಭೆ ಚುನಾವಣಾ ಹಿನ್ನೆಲೆಯಲ್ಲಿ ಚಿತ್ರರಂಗದಿಂದ ದೂರವಿದ್ದು, ಪಕ್ಷ ಸಂಘಟನೆಯಲ್ಲಿ ಬ್ಯುಸಿಯಾಗಿದ್ದರು ನಟ ನಿಖಿಲ್ ಕುಮಾರಸ್ವಾಮಿ (Nikhil Kumaraswamy). ಎರಡು ಚಿತ್ರಗಳನ್ನು ಅವರು ಒಪ್ಪಿಕೊಂಡಿದ್ದರೂ, ಎರಡಕ್ಕೂ ಶೂಟಿಂಗ್ ಗಾಗಿ ಗ್ರೀನ್ ಸಿಗ್ನಲ್ ಕೊಟ್ಟಿರಲಿಲ್ಲ. ರಾಜ್ಯ ಪ್ರವಾಸ ಮಾಡಿ ಪಕ್ಷ ಸಂಘಟಿಸುವ ಹೊಣೆ ಹೊತ್ತಿದ್ದರಿಂದ ಚಿತ್ರೀಕರಣದಲ್ಲಿ ಭಾಗಿಯಾಗಿರಲಿಲ್ಲ. ಚುನಾವಣೆ ಮುಗಿದ ಕಾರಣದಿಂದಾಗಿ ಮತ್ತೆ ಚಿತ್ರರಂಗದತ್ತ ನಿಖಿಲ್ ಮುಖ ಮಾಡುತ್ತಿದ್ದಾರೆ.

    ಸೀತಾ ರಾಮ್ ಕಲ್ಯಾಣ್ ಸಿನಿಮಾದ ನಂತರ ಧನುಷ್ (Dhanush) ಮತ್ತು ಯದುವೀರ (Yaduveer) ಎಂಬೆರಡು ಚಿತ್ರಗಳನ್ನು ನಿಖಿಲ್ ಒಪ್ಪಿಕೊಂಡಿದ್ದರೂ, ಎರಡೂ ಚಿತ್ರಗಳ ಚಿತ್ರೀಕರಣ ಪ್ರಾರಂಭವಾಗಿರಲಿಲ್ಲ. ಹಾಗಾಗಿ ನಿರಾಳರಾಗಿ ಚುನಾವಣೆಗೆ ಕಳುಹಿಸಿ ಕೊಟ್ಟಿದ್ದರು ಆಯಾ ಚಿತ್ರಗಳ ನಿರ್ಮಾಪಕರು. ಆ ಚಿತ್ರಗಳ ಬಗ್ಗೆ ಇನ್ನೂ ಯಾವುದೇ ಮಾಹಿತಿ ಬಂದಿಲ್ಲ. ಈ ನಡುವೆ ಮತ್ತೊಂದು ಹೆಸರಾಂತ ಸಂಸ್ಥೆ ನಿಖಿಲ್ ಚಿತ್ರ ಮಾಡಲು ಮುಂದಾಗಿದೆ. ಇದನ್ನೂ ಓದಿ:ಗೋಲ್ಡನ್ ಹೀರೋಗೆ ಜೋಡಿಯಾದ ‘ಗಟ್ಟಿಮೇಳ’ ನಟಿ ಶರಣ್ಯ ಶೆಟ್ಟಿ

    ದಕ್ಷಿಣ ಭಾರತದ ಶ್ರೀಮಂತ ನಿರ್ಮಾಣ ಸಂಸ್ಥೆ ಲೈಕಾ ಪ್ರೊಡಕ್ಷನ್ (LYCA Production) ಇದೀಗ ನಿಖಿಲ್ ಅವರ ಸಿನಿಮಾವನ್ನು ನಿರ್ಮಾಣ ಮಾಡಲು ಮುಂದೆ ಬಂದಿದೆ. ಈಗಾಗಲೇ ನಿಖಿಲ್ ಜೊತೆ ಮಾತುಕತೆಯನ್ನೂ ಅದು ಆಡಿದೆ. ನಿಖಿಲ್ ಕೂಡ ಆ ಕಂಪೆನಿಯಲ್ಲಿ ಕೆಲಸ ಮಾಡಲು ಒಪ್ಪಿಕೊಂಡಿದ್ದಾರೆ ಎನ್ನುವುದು ಸದ್ಯಕ್ಕಿರುವ ವರ್ತಮಾನ.

    ನಿಖಿಲ್ ಕುಮಾರ ಸ್ವಾಮಿ ದೊಡ್ಡದೊಂದು ಬ್ರೇಕ್ ಗಾಗಿ ಕಾಯುತ್ತಿದ್ದಾರೆ. ಈವರೆಗೂ ಬಂದ ಚಿತ್ರಗಳು ನಿಖಿಲ್ ಅವರಿಗೆ ಅಷ್ಟೇನೂ ಹೇಳಿಕೊಳ್ಳುವಂತಹ ಆದಾಯ ಮತ್ತು ಹೆಸರು ತಂದುಕೊಟ್ಟಿಲ್ಲ. ಹಾಗಾಗಿ ದೊಡ್ಡ ಬ್ರೇಕ್ ಗಾಗಿಯೇ ಅವರು ಕಾಯುತ್ತಿದ್ದಾರೆ. ಒಪ್ಪಿಕೊಂಡ ಚಿತ್ರಗಳು ಅವರ ಕೈ ಹಿಡಿಯಲಿ ಎನ್ನುವುದು ಅಭಿಮಾನಿಗಳ ಆಸೆ.

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ಅಂಜನಾದ್ರಿ ಪರ್ವತಕ್ಕೆ ಮೈಸೂರು ರಾಜವಂಶಸ್ಥ ಯದುವೀರ್ ದಂಪತಿ ಭೇಟಿ

    ಅಂಜನಾದ್ರಿ ಪರ್ವತಕ್ಕೆ ಮೈಸೂರು ರಾಜವಂಶಸ್ಥ ಯದುವೀರ್ ದಂಪತಿ ಭೇಟಿ

    ಕೊಪ್ಪಳ: ಜಿಲ್ಲೆಯ ಗಂಗಾವತಿ ತಾಲೂಕಿನ ಅಂಜನಾದ್ರಿ ಪರ್ವತಕ್ಕೆ ಮೈಸೂರು ಮಹಾರಾಜರಾದ ಯದುವೀರ್ ಒಡೆಯರ್ ಮತ್ತು ಶ್ರೀಮತಿ ತ್ರಿಶಿಕಾ ಕುಮಾರಿಯವರು ಭೇಟಿ ನೀಡಿದ್ದರು.

    ಹನುಮ ಹುಟ್ಟಿದ ಸ್ಥಳ ಎಂದೇ ಹೆಸರುವಾಸಿಯಾಗಿರುವ ಅಂಜನಾದ್ರಿ ಪರ್ವತಕ್ಕೆ ದಂಪತಿ ಸಮೇತ ಆಗಮಿಸಿದ ಯದುವೀರ್ ಅವರು ಹನುಮನಿಗೆ ದೇವರಿಗೆ ವಿಶೇಷ ಪೂಜೆ ಸಲ್ಲಿಸಿದರು. ಯದುವೀರ್ ಕುಟುಂಬ ಹಂಪಿ ಪ್ರವಾಸಕ್ಕೆ ಆಗಮಿಸಿದ ಹಿನ್ನಲೆ ಅಂಜನಾದ್ರಿ ಬೆಟ್ಟದ ೫೭೫ ಮೆಟ್ಟಿಲೇರಿ ಹನುಮನ ದರ್ಶನ ಪಡೆದರು.  ಇದನ್ನೂ ಓದಿ: ಡಿಸಿ ಕಚೇರಿ ಆವರಣದಲ್ಲಿ ಮೃತದೇಹ ಇಟ್ಟು ಪ್ರತಿಭಟನೆ

    ಇದೇ ವೇಳೆ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಹನುಮ ಹುಟ್ಟಿದ ಸ್ಥಳಕ್ಕೆ ಎರಡನೇ ಬಾರಿ ಬರುತ್ತಿದ್ದೇನೆ. ಎಲ್ಲರಿಗೂ ಒಳ್ಳೆದಾಗಲಿ ಎಂದು ಪ್ರಾರ್ಥನೆ ಮಾಡಿದ್ದೇನೆ. ಇದೊಂದು ಅದ್ಭುತವಾದಂತಹ ಜಾಗ ಎಂದು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ. ಇದನ್ನೂ ಓದಿ: ಇಂದಿನಿಂದ SSLC ಸಪ್ಲಿಮೆಂಟರಿ ಎಕ್ಸಾಂ – ಆಗಸ್ಟ್ ಮೊದಲ ವಾರದಲ್ಲಿ ರಿಸಲ್ಟ್

    Live Tv

  • ನಾಡಿನೆಲ್ಲೆಡೆ ಆಯುಧಪೂಜೆಯ ಸಂಭ್ರಮ – ರಾಜವಂಶಸ್ಥರ ಆಯುಧಗಳಿಗೆ ಪೂಜೆ ಸಲ್ಲಿಸಲಿರುವ ಯದುವೀರ್

    ನಾಡಿನೆಲ್ಲೆಡೆ ಆಯುಧಪೂಜೆಯ ಸಂಭ್ರಮ – ರಾಜವಂಶಸ್ಥರ ಆಯುಧಗಳಿಗೆ ಪೂಜೆ ಸಲ್ಲಿಸಲಿರುವ ಯದುವೀರ್

    ಮೈಸೂರು: ನಾಡಿನೆಲ್ಲೆಡೆ ಇಂದು ಆಯುಧ ಪೂಜೆಯ ಸಂಭ್ರಮ. ಮೈಸೂರು ಅರಮನೆಯಲ್ಲಿ ರಾಜ ಪರಂಪರೆಯ ಆಯುಧಗಳಿಗೆ ಯದುವಂಶದ ಯದುವೀರ ಕೃಷ್ಣದತ್ತ ಚಾಮರಾಜ ಒಡೆಯರ್ ಪೂಜೆ ಸಲ್ಲಿಸಲಿದ್ದಾರೆ.

    ಈಗಾಗಲೇ ಬೆಳಗ್ಗೆ 5.30ರಿಂದ ಅರಮನೆಯಲ್ಲಿ ಪೂಜಾ ವಿಧಿ ವಿಧಾನಗಳು ಆರಂಭಗೊಂಡಿದ್ದು, ಬೆಳಗ್ಗೆ 7.45ಕ್ಕೆ ರಾಜರ ಆಯುಧಗಳನ್ನು ಅರಮನೆ ಕೋಡಿ ಸೋಮೇಶ್ವರ ದೇಗುಲಕ್ಕೆ ರವಾನಿಸಲಾಗಿತ್ತು. ಆನೆ, ಕುದುರೆ, ಹಸು, ಪಟ್ಟದ ಕತ್ತಿ, ಪಲ್ಲಕ್ಕಿ ಸೇರಿ ಎಲ್ಲಾ ರೀತಿಯ ಆಯುಧಗಳಿಗೆ ಪೂಜೆ ಮಾಡಲಾಯಿತು. ಇದೇ ವೇಳೆ ಮಹಿಳೆಯರ ಜೊತೆಗೆ ರಾಜಪರಿವಾರದವರು ಸೇರಿ ಪೂರ್ಣಕುಂಭವನ್ನು ಹೊತ್ತಿ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದರು. ಇದನ್ನೂ ಓದಿ:  ದಸರಾ ಉತ್ಸವದಲ್ಲಿ ಪೌರ ಕಾರ್ಮಿಕ ಮಹಿಳೆಯರಿಗೆ ಪೂಜೆ ಸಲ್ಲಿಸಿ ಗೌರವ ಸಲ್ಲಿಸಿದ ಚಂದ್ರಶೇಖರ್ ಶ್ರೀ

    ಕೋಡಿ ಸೋಮೇಶ್ವರ ದೇಗುಲದಲ್ಲಿ ವಿಶೇಷ ಪೂಜೆ ಸಲ್ಲಿಸಿ ನಂತರ ಅರಮನೆ ಕಲ್ಯಾಣಮಂಟಪಕ್ಕೆ ಆಗಮನಿಸಿ, ಬೆಳಗ್ಗೆ 11.02 ರಿಂದ 11.22ರ ಶುಭ ಮುಹೂರ್ತದಲ್ಲಿ ಪೂರ್ವಿಕರು ಬಳಸುತ್ತಿದ್ದ ಕತ್ತಿ, ಗುರಾಣಿ ಈಟಿ ಸೇರಿ ರಾಜಮನೆತನದ ಆಯುಧಗಳಿಗೆ ಯದುವೀರ ಕೃಷದತ್ತ ಚಾಮರಾಜ ಒಡೆಯರ್ ಪೂಜೆ ಸಲ್ಲಿಸಲಿದ್ದಾರೆ. ಜೊತೆಗೆ ರಾಜಪರಿವಾರದ ಆನೆ, ಕುದುರೆ, ಹಸು, ಪಲ್ಲಕ್ಕಿ, ಕಾರುಗಳಿಗೂ ಪೂಜೆ ಸಲ್ಲಿಸಲಿದ್ದಾರೆ. ಇದನ್ನೂ ಓದಿ:  ನವರಾತ್ರಿಯ ಕೊನೆಯ ದಿನ ಆಚರಿಸುವ ಆಯುಧ ಪೂಜೆಯ ಮಹತ್ವವೇನು?

    ಮುಂಜಾನೆಯಿಂದ ಚಾಮುಂಡಿ ತೊಟ್ಟಿಯಲ್ಲಿ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಪೂಜೆ ನೆರವೇರಿಸುತ್ತಿದ್ದು, ಖಾಸ್ ಆಯುಧಗಳ ಪೂಜೆಗೆ ಸಿದ್ದತೆ ನಡೆಸಲಾಗುತ್ತಿದೆ. ಅರಮನೆ ಆನೆ, ಬಾಗಿಲ ಮುಂದೆ ಪಲ್ಲಕ್ಕಿ, ಪಟ್ಟದ ಹಸು, ಪಟ್ಟದ ಒಂಟೆಗಳಿಗೂ ಪೂಜೆ ಸಲ್ಲಿಸಲಾಗುತ್ತದೆ. ಅದರಲ್ಲಿಯೂ ಪಲ್ಲಕ್ಕಿಯಲ್ಲಿ ಯುದ್ದ ಸಲಕರಣೆಗಳನ್ನು ಹೊತ್ತು ತರಲಾಗಿದೆ. ಅರಮನೆ ಮುಂಭಾಗ ಕೋಡಿ ಸೋಮೇಶ್ವರ ದೇವಸ್ಥಾನದಲ್ಲಿ ಆಯುಧಗಳಿಗೆ ಪೂಜೆ ಸಲ್ಲಿಸಿದ ನಂತರ ಅರಮನೆಯಲ್ಲಿ ಯದುವೀರ್ ರಿಂದ ಆಯುಧಗಳಿಗೆ ಪೂಜೆ ನೆರವೇರಿಸಲಿದ್ದಾರೆ. ಕೊರೊನಾ ಕಾರಣದಿಂದಾಗಿಅರಮನೆ ಆಚರಣೆಗಳ ವೀಕ್ಷಣೆಗೆ ಸಾರ್ವಜನಿಕರಿಗೆ ಮಾತ್ರವಲ್ಲದೇ ಬಂಧುಗಳು ಹಾಗೂ ನೆಂಟರಿಗೂ ಪ್ರವೇಷ ನಿರ್ಬಂಧ ಹೇರಲಾಗಿದೆ.

  • ರಥ ಸಪ್ತಮಿ – ಕೋಟೆ ಆಂಜನೇಯನಿಗೆ ವಿಶೇಷ ಪೂಜೆ ಸಲ್ಲಿಸಿದ ಯದುವೀರ್

    ರಥ ಸಪ್ತಮಿ – ಕೋಟೆ ಆಂಜನೇಯನಿಗೆ ವಿಶೇಷ ಪೂಜೆ ಸಲ್ಲಿಸಿದ ಯದುವೀರ್

    ಮೈಸೂರು: ಇಂದು ರಥ ಸಪ್ತಮಿ ಹಿನ್ನೆಲೆಯಲ್ಲಿ ಮೈಸೂರು ಅರಮನೆಯ ಕೋಟೆ ಆಂಜನೇಯ ಸ್ವಾಮಿ ದೇವಾಲಯದ ಉತ್ಸವ ಮೂರ್ತಿಗೆ ರಾಜವಂಶಸ್ಥ ಯದುವೀರ್ ವಿಶೇಷ ಪೂಜೆ ಸಲ್ಲಿಸಿದರು.

    ಕೋಟೆ ಆಂಜನೇಯ ದೇವಾಲಯ ಮುಂಭಾಗ ಮೈಸೂರು ಯೋಗ ಒಕ್ಕೂಟ ಪ್ರತಿ ವರ್ಷದಂತೆ ಈ ವರ್ಷವೂ ಸಾಮೂಹಿಕ ಸೂರ್ಯ ನಮಸ್ಕಾರ ಕಾರ್ಯಕ್ರಮವನ್ನು ಆಯೋಜಿಸಿತ್ತು. ಇದರಲ್ಲಿ ನೂರಾರು ಯೋಗ ಪಟುಗಳು ಭಾಗವಹಿಸಿ 108 ಸೂರ್ಯ ವಂದನೆ ಮಾಡಿದರು.

    ಈ ಸಂದರ್ಭದಲ್ಲಿ ಭಗವಾನ್ ಸೂರ್ಯ ನಾರಾಯಣ ಭಾವ ಚಿತ್ರವನ್ನು ಇರಿಸಿ ವಿಶೇಷ ಪೂಜೆ ಸಲ್ಲಿಸಲಾಯಿತು.

  • ಮೈಶುಗರ್ ಕಾರ್ಖಾನೆ ಖಾಸಗೀಕರಣಕ್ಕೆ ರಾಜವಂಶಸ್ಥ ಯದುವೀರ್ ಬೆಂಬಲ

    ಮೈಶುಗರ್ ಕಾರ್ಖಾನೆ ಖಾಸಗೀಕರಣಕ್ಕೆ ರಾಜವಂಶಸ್ಥ ಯದುವೀರ್ ಬೆಂಬಲ

    ಮಂಡ್ಯ: ರೈತರ ಪಾಲಿಗೆ ಜೀವ ನಾಡಿಯಾಗಿದ್ದ ಮೈಶುಗರ್ ಕಾರ್ಖಾನೆ ಖಾಸಗೀಕರಣಕ್ಕೆ ರಾಜವಂಶಸ್ಥ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಬೆಂಬಲ ವ್ಯಕ್ತಪಡಿಸಿದ್ದಾರೆ.

    ಯದುವೀರ್ ಫೇಸ್‍ಬುಕ್‍ನಲ್ಲಿ, ರೈತರು ಬೆಳೆದಿರುವ ಕಬ್ಬನ್ನು ಮಾರಾಟ ಮಾಡಲು ಕಾರ್ಖಾನೆಯ ಸಮಯೋಚಿತ ಆರಂಭದ ಅಗತ್ಯವಿದೆ ಎಂದು ಕಾರ್ಖಾನೆ ಖಾಸಗೀಕರಣಕ್ಕೆ ಬೆಂಬಲ ನೀಡಿ ಪೋಸ್ಟ್ ಮಾಡಿದ್ದಾರೆ.

    ಪೋಸ್ಟ್‌ನಲ್ಲಿ ಏನಿದೆ?
    ಮಂಡ್ಯ ಜಿಲ್ಲೆಯು ಕಬ್ಬುಬೆಳೆ ಮತ್ತು ಸಕ್ಕರೆ ಉತ್ಪಾದನೆಯಲ್ಲಿ ಸಮಾನವಾಗಿದೆ. ಮೈಶುಗರ್ ಕಾರ್ಖಾನೆಯ ಪರಂಪರೆಯ ದೃಷ್ಟಿಯಿಂದ ಖಾಸಗೀಕರಣಕ್ಕೆ ನಿರಂತರ ಪ್ರತಿರೋಧ ವ್ಯಕ್ತವಾಗುತ್ತಿರುವುದು ಅರ್ಥವಾಗುವಂತಹದ್ದಾಗಿದೆ. ಆದರೆ ಪ್ರತಿರೋಧವು ಕಳವಳಕ್ಕೆ ಕಾರಣವಾಗಿದೆ. ಏಕೆಂದರೆ ಮಂಡ್ಯ ಜಿಲ್ಲೆಯ ರೈತರು ಬೆಳೆದಿರುವ ಕಬ್ಬನ್ನು ಮಾರಾಟ ಮಾಡಲು ಕಾರ್ಖಾನೆಯ ಸಮಯೋಚಿತ ಆರಂಭದ ಅಗತ್ಯವಿದೆ ಎಂದಿದ್ದಾರೆ.

    “ಕಾರ್ಖಾನೆಯನ್ನು ನಡೆಸುವಲ್ಲಿ ಸರ್ಕಾರದ ವೈಫಲ್ಯ ಮತ್ತು ಸಂಪೂರ್ಣ ಖಾಸಗೀಕರಣದ ವಿರುದ್ಧ ಸಾರ್ವಜನಿಕರ ಭಾವನೆಯ ನಡುವೆ ನಮಗೆ ಇರುವ ಒಂದು ಆಯ್ಕೆಯೆಂದರೆ, ಕಾರ್ಯಾಚರಣೆ ಮತ್ತು ನಿರ್ವಹಣೆ (operations and maintenance) ವ್ಯವಸ್ಥೆಯಡಿಯಲ್ಲಿ ಸಕ್ಕರೆ ಕಾರ್ಖಾನೆಯನ್ನು ನಡೆಸುವುದು. ಈ ಮಧ್ಯಮ ವ್ಯವಸ್ಥೆಯು ಖಾಸಗೀಕರಣದ ವಿರುದ್ಧ ಸಾರ್ವಜನಿಕರಿಗಿರುವ ಭಾವನೆಯನ್ನು ತೃಪ್ತಿಪಡಿಸುವುದಲ್ಲದೆ ಕಾರ್ಖಾನೆಯು ಮತ್ತೊಮ್ಮೆ ಸಮೃದ್ಧಿಯಾಗಿ ಕಾರ್ಯನಿರ್ವಹಿಸಬಹುದಾಗಿದೆ. ಇದರಿಂದ ಮಂಡ್ಯ ಜಿಲ್ಲೆಯ ಕಬ್ಬು ಬೆಳೆಗಾರರು ಯಾವುದೇ ಸಂಕಷ್ಟಗಳನ್ನು ಎದುರಿಸಬೇಕಾಗಿರುವುದಿಲ್ಲ” ಎಂದು ಬರೆದುಕೊಂಡಿದ್ದಾರೆ.

    ಮೈಶುಗರ್ ಕಾರ್ಖಾನೆಯನ್ನು ಮೈಸೂರಿನ ಮಹಾರಾಜರು ಸ್ಥಾಪಿಸಿರುವ ಸಕ್ಕರೆ ಕಾರ್ಖಾನೆಯಾಗಿದೆ. ಹೀಗಾಗಿ ರೈತರ ಕಷ್ಟಕ್ಕೆ ಯದುವೀರ್ ಸ್ಪಂದಿಸಿದ್ದು, ಕಾರ್ಖಾನೆ ಖಾಸಗೀಕರಣಕ್ಕೆ ಬೆಂಬಲ ಸೂಚಿಸಿದ್ದಾರೆ.

  • ಮಾರುಕಟ್ಟೆ ಕಟ್ಟಡದ ಬಗ್ಗೆ ತಿಳಿಯಲು ಸಾಮಾನ್ಯರಂತೆ ಬಂದ ಯದುವೀರ್ ದಂಪತಿ -ವಿಡಿಯೋ ನೋಡಿ

    ಮಾರುಕಟ್ಟೆ ಕಟ್ಟಡದ ಬಗ್ಗೆ ತಿಳಿಯಲು ಸಾಮಾನ್ಯರಂತೆ ಬಂದ ಯದುವೀರ್ ದಂಪತಿ -ವಿಡಿಯೋ ನೋಡಿ

    ಮೈಸೂರು: ರಾಜವಂಶಸ್ಥ ಯದುವೀರ್ ಒಡೆಯರ್ ನಗರದ ದೇವರಾಜ ಮಾರುಕಟ್ಟೆಗೆ ತಮ್ಮ ಪತ್ನಿ ತ್ರಿಷಿಕಾ ಅವರ ಜೊತೆ ಭೇಟಿ ನೀಡಿದ್ದರು.

    ಮಾರುಕಟ್ಟೆ ಕಟ್ಟಡ ಕೆಡುವ ವಿಚಾರದಲ್ಲಿ ರಾಜಮನೆತನ ಆಕ್ಷೇಪ ವ್ಯಕ್ತಪಡಿಸಿತ್ತು. ಈ ಹಿನ್ನೆಲೆಯಲ್ಲಿ ಮಾರುಕಟ್ಟೆ ಕಟ್ಟಡದ ಸ್ಥಿತಿ ತಿಳಿಯಲು ಪತ್ನಿ ಸಮೇತರಾಗಿ ಯದುವೀರ್ ಮಾರುಕಟ್ಟೆಗೆ ಭೇಟಿ ನೀಡಿದ್ದರು. ಮಾರುಕಟ್ಟೆಯಲ್ಲಿ ಯದುವೀರ್ ದಂಪತಿ ಕಂಡು ಸಾರ್ವಜನಿಕರು ಮತ್ತು ವ್ಯಾಪಾರಸ್ಥರು ಅಚ್ಚರಿಗೊಂಡರು.

    ಸಾಮಾನ್ಯರಂತೆ ಮಾರುಕಟ್ಟೆಯಲ್ಲಿ ಓಡಾಡಿದ ಯದುವೀರ್ ದಂಪತಿ, ವ್ಯಾಪಾರಿಗಳ ಬಳಿ ಮಾತುಕತೆ ನಡೆಸಿ ಕಟ್ಟಡದ ಬಗ್ಗೆ ಮಾಹಿತಿ ಪಡೆದರು. ಮಾರುಕಟ್ಟೆಯ ವ್ಯಾಪಾರಿಗಳ ಅಂಗಡಿಯ ಮುಂದೆ ಕುಳಿತು ಅವರ ಬಳಿ ಮಾತನಾಡಿದ್ದಾರೆ.

    ಇದೇ ವೇಳೆ ಮಾರುಕಟ್ಟೆಯಲ್ಲಿ ಸೊಪ್ಪು, ಹಣ್ಣು ಮತ್ತು ತರಕಾರಿ ಖರೀದಿಸಿದ್ದರು. ವ್ಯಾಪಾರಿಗಳು ಅವರಿಂದ ಹಣ ಪಡೆಯಲು ನಿರಾಕರಿಸಿದ್ದರು. ಆದರೂ ತ್ರಿಷಿಕಾ ಅವರು ಬಲವಂತವಾಗಿ ಹಣವನ್ನು ನೀಡಿದ್ದಾರೆ. ಬಳಿಕ ಮಾರುಕಟ್ಟೆ ಹೊರಗೆ ಬಂದು ಗುರು ಸ್ವೀಟ್‍ನಲ್ಲಿ ಮೈಸೂರು ಪಾಕ್ ಖರೀದಿಸಿದರು. ರಾಜವಂಶಸ್ಥರ ಸರಳತೆಗೆ ಸಾರ್ವಜನಿಕರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

  • ಡಾ.ರಾಜ್ ಹುಟ್ಟುಹಬ್ಬ: ಹಳೆಯ ನೆನಪು ಮೆಲುಕು ಹಾಕಿದ ಒಡೆಯರ್

    ಡಾ.ರಾಜ್ ಹುಟ್ಟುಹಬ್ಬ: ಹಳೆಯ ನೆನಪು ಮೆಲುಕು ಹಾಕಿದ ಒಡೆಯರ್

    ಮೈಸೂರು: ಇಂದು ನಟಸಾರ್ವಭೌಮ ಡಾ. ರಾಜ್‍ಕುಮಾರ್ ಅವರ 90ನೇ ಜಯಂತಿಯಾಗಿದ್ದು, ರಾಜವಂಶಸ್ಥ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಅವರು ಹೆಳೆಯ ನೆನಪನ್ನು ಮೆಲುಕು ಹಾಕಿದ್ದಾರೆ.

    ಯದುವೀರ್ ಅವರು ತನ್ನ ತಾತ ಜಯಚಾಮರಾಜ ಒಡೆಯರ್ ಅವರು ಡಾ. ರಾಜ್‍ಕುಮರ್ ಅವರಿಗೆ ಸನ್ಮಾನಿಸುತ್ತಿರುವ ಫೋಟೋ ಜೊತೆ ಶುಭಾಶಯ ತಿಳಿಸಿದ್ದಾರೆ. ನಟಸಾರ್ವಭೌಮ, ಕನ್ನಡ ಚಿತ್ರರಂಗದ ಧ್ರುವತಾರೆ ಎಂದು ಯದುವೀರ್ ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಹಾಕಿ ಸ್ಮರಿಸಿದ್ದಾರೆ.

    ಪೋಸ್ಟ್ ನಲ್ಲಿ ಏನಿದೆ?
    ಕನ್ನಡ ಚಲನಚಿತ್ರರಂಗದ ಮೇರು ನಟ, ಕನ್ನಡ ಚಿತ್ರರಂಗದ ಧ್ರುವತಾರೆ ಎಂದೇ ಹೆಸರಾದ ನಟಸಾರ್ವಭೌಮ ಡಾ. ರಾಜ್‍ಕುಮಾರ್ ಅವರ 90ನೇ ಜನ್ಮದಿನದಂದು ಅವರನ್ನು ಸ್ಮರಿಸುತ್ತಿದ್ದೇವೆ. ಡಾ. ರಾಜ್‍ಕುಮಾರ್ ಅವರು ಶ್ರೀಮನ್ ಮಹಾರಾಜ ಜಯಚಾಮರಾಜ ಒಡೆಯರವರಿಂದ ಗೌರವಿಸಲ್ಪಡುತ್ತಿರುವುದು ಎಂದು ಬರೆದು ಪೋಸ್ಟ್ ಮಾಡಿದ್ದಾರೆ.

  • ಅಪ್ಪನ ತೊಡೆ ಮೇಲೆ ಯುವರಾಜ – ವರ್ಧಂತಿಗೆ ಯದುವೀರ್ ವಿಶ್

    ಅಪ್ಪನ ತೊಡೆ ಮೇಲೆ ಯುವರಾಜ – ವರ್ಧಂತಿಗೆ ಯದುವೀರ್ ವಿಶ್

    ಮೈಸೂರು: ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಅವರು ತನ್ನ ಮಗ ಯುವರಾಜ ಆಧ್ಯವೀರ್ ಗೆ ವರ್ಧಂತಿಯ(ಹುಟ್ಟುಹಬ್ಬ) ಶುಭಾಶಯವನ್ನು ಕೋರಿದ್ದಾರೆ.

    ಯದುವೀರ್ ಅವರು ಫೇಸ್‍ಬುಕ್ ನಲ್ಲಿ ಮಗ ತೊಡೆಯ ಮೇಲೆ ಕುಳಿತಿರುವ ಫೋಟೋ ಹಾಕಿ ಹುಟ್ಟುಹಬ್ಬದ ಶುಭಾಶಯವನ್ನು ತಿಳಿಸಿದ್ದಾರೆ. ಫೋಟೋದಲ್ಲಿ  ಆಧ್ಯವೀರ್ ತುಂಟತನದಿಂದ ಕ್ಯಾಮೆರಾಗೆ ಪೋಸ್ ಕೊಟ್ಟಿರುವ ರೀತಿಯಲ್ಲಿ ಕಂಡು ಬಂದಿದೆ.

    ಅರಮನೆಯ ಸಂಪ್ರದಾಯದ ಪ್ರಕಾರ ಹುಟ್ಟುಹಬ್ಬವನ್ನು ಆಧ್ಯವೀರ್ ಹುಟ್ಟಿದ ಸ್ವಲ್ಪ ದಿನಗಳ ನಂತರ ಆಚರಿಸಲಾಗುತ್ತದೆ. ಅದರಂತೆಯೇ ವರ್ಧಂತಿಯು ಡಿಸೆಂಬರ್ 26 ರಂದು ಇದ್ದರೂ ಇಂದು ಆಚರಿಸಿದ್ದಾರೆ. ಈ ಬಗ್ಗೆ ಯದುವೀರ್ ಅವರು ಫೇಸ್‍ಬುಕ್ ನಲ್ಲಿ ತಿಳಿಸಿದ್ದಾರೆ.

    ಪೋಸ್ಟ್:
    “ಯುವರಾಜ ಶ್ರೀ ಆಧ್ಯವೀರ್ ನರಸಿಂಹರಾಜ ಒಡೆಯರ್ ಅವರ ವರ್ಧಂತಿಯಂದು ಅವರಿಗೆ ಶುಭ ಕೋರುತ್ತೇವೆ. ಜಗನ್ಮಾತೆಯಾದ ಶ್ರೀ ಚಾಮುಂಡೇಶ್ವರಿ ದೇವಿಯು ಅವರಿಗೆ ಉತ್ತಮ ಆರೋಗ್ಯ ಹಾಗು ಐಶ್ವರ್ಯವನ್ನು ದಯಪಾಲಿಸಲಿ ಎಂದು ಪ್ರಾರ್ಥಿಸುತ್ತೇವೆ. ಯುವರಾಜರ ವರ್ಧಂತಿಯು 26 ಡಿಸೆಂಬರ್ 2018 ರಂದು ಇದ್ದರೂ, ಮೈಸೂರು ಅರಮನೆಯ ಸಂಪ್ರದಾಯದ ಪ್ರಕಾರ ಮೊದಲನೆಯ ವರ್ಧಂತಿಯನ್ನು ಹೆಚ್ಚಿಸುವ ಪದ್ಧತಿ ಇರುವುದರಿಂದ, ಅವರ ವರ್ಧಂತಿಯನ್ನು ಇಂದು ಆಚರಿಸಲಾಗುತ್ತಿದೆ” ಎಂದು ಬರೆದು ಮಗನ ಜೊತೆಯಿರುವ ಫೋಟೋ ಹಾಕಿ ಪೋಸ್ಟ್ ಮಾಡಿದ್ದಾರೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv

  • ಮಕ್ಕಳೊಂದಿಗೆ ಮಗುವಾದ ಯದುವೀರ್ ಒಡೆಯರ್

    ಮಕ್ಕಳೊಂದಿಗೆ ಮಗುವಾದ ಯದುವೀರ್ ಒಡೆಯರ್

    ಮೈಸೂರು: ಸಾಂಸ್ಕೃತಿಕ ನಗರಿಯ ಮೈಸೂರಿನ ಅರಮನೆ ಆವರಣದಲ್ಲಿ ಭಾನುವಾರ ಬರೀ ಮಕ್ಕಳದೇ ಕಲರವ ಕೇಳಿ ಬಂದಿದ್ದು, ಯದುವೀರ್ ಮಕ್ಕಳೊಂದಿಗೆ ಮಗುವಾಗಿದ್ದಾರೆ.

    ಮಕ್ಕಳ ಜೊತೆ ರಾಜವಂಶಸ್ಥರಾದ ಯದುವೀರ್ ಅವರು ಬೆರೆತು ಮಕ್ಕಳ ಸಂತೋಷ ಹೆಚ್ಚಿಸಿದರು. ಮಕ್ಕಳ ದಿನಾಚರಣೆ ಅಂಗವಾಗಿ ಭೇರುಂಡ ಸಂಸ್ಥೆ ವತಿಯಿಂದ ಅರಮನೆಯ ಆವರಣದಲ್ಲಿ ಮಕ್ಕಳಿಗೆ ಚಿತ್ರ ಕಲಾ ಸ್ಪರ್ಧೆ ಆಯೋಜಿಸಲಾಗಿತ್ತು.

    ಭೇರುಂಡ ಸಂಸ್ಥೆಯ ಸ್ಥಾಪಕ, ರಾಜವಂಶಸ್ಥ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್, ಚಿತ್ರಕ್ಕೆ ಬಣ ತುಂಬುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ನಮ್ಮ ಇತಿಹಾಸವನ್ನು ಮುಂದಿನ ಪೀಳಿಗೆಗೆ ತಲುಪಿಸುವ ಉದ್ದೇಶದಿಂದ ಈ ಕಾರ್ಯಕ್ರಮ ಆಯೋಜಿಸಿದ್ದರು.

    ಸದ್ಯ ಚಿತ್ರಕಲಾ ಸ್ಪರ್ಧೆಯಲ್ಲಿ ನೂರಾರು ವಿದ್ಯಾರ್ಥಿಗಳು ಭಾಗಿಯಾಗಿದ್ದರು. ಮಕ್ಕಳ ಕುಂಚದಲ್ಲಿ ಮೈಸೂರಿನ ಐತಿಹಾಸಿಕ ತಾಣಗಳು ಹಾಗೂ ಪ್ರಾಕೃತಿಕ ಚಿತ್ರಗಳು ಮೂಡಿ ಬಂದವು.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv
    ಪಬ್ಲಿಕ್ ಟಿವಿ ಆಪ್ ಡೌನ್ ಲೋಡ್ ಮಾಡಿ: play.google.com/publictv
    ಯೂ ಟ್ಯೂಬ್‍ನಲ್ಲಿ ಪಬ್ಲಿಕ್ ಟಿವಿಯನ್ನು ಸಬ್ ಸ್ಕ್ರೈಬ್ ಮಾಡಿ: youtube.com/publictvnewskannada
    ಫೇಸ್‍ಬುಕ್‍ನಲ್ಲಿ ಪಬ್ಲಿಕ್ ಟಿವಿಯನ್ನು ಲೈಕ್ ಮಾಡಿ: facebook.com/publictv
    ಟ್ವಿಟ್ಟರ್‌ನಲ್ಲಿ ಪಬ್ಲಿಕ್ ಟಿವಿಯನ್ನು ಫಾಲೋ ಮಾಡಿ: twitter.com/publictvnews