ಮೈಸೂರು: ನಾಡಹಬ್ಬ ದಸರಾ ಅದ್ದೂರಿಯಾಗಿ ನಡೆಯುತ್ತಿದೆ. ಇದರ ಭಾಗವಾಗಿ ಯದುವೀರ್ ಒಡೆಯರ್ ಅರಮನೆ ಆವರಣದಲ್ಲಿರುವ ಭುವನೇಶ್ವರಿ ದೇವಸ್ಥಾನದ ಬಳಿ ಬನ್ನಿ ಮರಕ್ಕೆ ಪೂಜೆ ಸಲ್ಲಿಸಿದ್ದಾರೆ.
ವಜ್ರಮುಷ್ಠಿ ಕಾಳಗ ಮುಕ್ತಾಯವಾಗುತ್ತಿದ್ದಂತೆ ಭುವನೇಶ್ವರಿ ದೇವಾಲಯದವರೆಗೆ ವಿಜಯಯಾತ್ರೆ ನಡೆಯಿತು. ಬಳಿಕ ಯದುವೀರ್ ಒಡೆಯರ್, ಬನ್ನಿ ಮರಕ್ಕೆ ಪೂಜೆ ಸಲ್ಲಿಸಿದರು. ಪೂಜೆ ಮುಕ್ತಾಯವಾಗುತ್ತಿದ್ದಂತೆ ಯದುವೀರ್ ಅರಮನೆಗೆ ವಾಪಸ್ ಆದರು. ಇದರೊಂದಿಗೆ ಅರಮನೆ ದಸರಾ ಮುಕ್ತಾಯಗೊಂಡಿದೆ. ಇದನ್ನೂ ಓದಿ: ಬನ್ನಿ ಪೂಜೆಯ ಪೌರಾಣಿಕ ಮಹತ್ವವೇನು?
ಪೊಲೀಸ್ ಬ್ಯಾಂಡ್ ಜೊತೆಗೆ ಪಟ್ಟದ ಆನೆ, ಕುದುರೆ, ಹಸು ವಿಜಯಯಾತ್ರೆಯಲ್ಲಿ ಭಾಗಿಯಾಗಿದ್ದವು. ಖಾಸಾ ಆಯುಧಗಳನ್ನು ಪಲ್ಲಕ್ಕಿಯಲ್ಲಿರಿಸಿ ಮೆರವಣಿಗೆ ಮಾಡಲಾಯಿತು. ಶ್ರೀಕಂಠದತ್ತ ಒಡೆಯರ್ ಬಳಸುತ್ತಿದ್ದ ಕಾರಿನಲ್ಲಿ ಯದುವೀರ್ ವಿಜಯಯಾತ್ರೆಯಲ್ಲಿ ಪಾಲ್ಗೊಂಡಿದ್ದರು. ಇದನ್ನೂ ಓದಿ: ಕೇಸರಿ ಬಣ್ಣದ ಸೀರೆಯಲ್ಲಿ ಕಂಗೊಳಿಸುತ್ತಿರುವ ತಾಯಿ ಚಾಮುಂಡೇಶ್ವರಿ
ಮೈಸೂರು: ನರೇಂದ್ರ ಮೋದಿಯವರು (Narendra Modi) ಮತ್ತೊಮ್ಮೆ ಪ್ರಧಾನಿಯಾಗುತ್ತಾರೆ ಎಂದು ಮೈಸೂರಿನ ಕಾಲಬೈರವೇಶ್ವರ ದೇವಸ್ಥಾನದ ಶ್ವಾನ ಭವಿಷ್ಯ ನುಡಿದಿದೆ.
ಮೋದಿ ಹಾಗೂ ರಾಹುಲ್ ಗಾಂಧಿ (Rahul Gandhi) ಫೋಟೋವನ್ನ ಕಾಲಭೈರವೇಶ್ವರ ದೇವರ ಮುಂದೆ ದೇವಾಲಯದ ಅರ್ಚಕ ಇಟ್ಟಿದ್ದಾರೆ. ಈ ಬಾರಿ ಯಾರು ಪ್ರಧಾನಿಯಾಗುತ್ತಾರೆ ಎಂಬುದನ್ನ ನಮ್ಮ ಭೈರವ ತಿಳುಸುತ್ತಾನೆ ಎಂದು ಅರ್ಚಕ ಪೂಜೆ ಸಲ್ಲಿಸಿದ್ದಾರೆ. ನಂತರ ಫೋಟೊವನ್ನ ಅದಲು ಬದಲು ಮಾಡಿಟ್ಟರು. ಈ ವೇಳೆ ಭೈರವೇಶ್ವರ ಶ್ವಾನವು ಮೋದಿ ಫೋಟೋವನ್ನ ಬಾಯಿಯಿಂದ ಕಚ್ಚಿಕೊಂಡು ಬಂದಿದೆ.
ಇದೇ ವೇಳೆ ಯದುವೀರ್ ಫೋಟೋ ಸೆಲೆಕ್ಟ್ ಮಾಡಿರುವ ಭೈರವೇಶ್ವರ ಶ್ವಾನ ಮೈಸೂರು-ಕೊಡಗು ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಯದುವೀರ್ ಗೆಲ್ಲುತ್ತಾರೆಂದು ಎಂದು ಕೂಡ ಭವಿಷ್ಯ ನುಡಿದಿದೆ. ಭೈರವೇಶ್ವರ ಶ್ವಾನ ಭವಿಷ್ಯ ನುಡಿದಿರುವ ವಿಡಿಯೋ ಸಾಮಾಜಿಕ ಜಾಲಾತಾಣದಲ್ಲಿ ಫುಲ್ ವೈರಲ್ ಆಗಿದೆ. ಇದನ್ನೂ ಓದಿ: ಬೆಂ. ಗ್ರಾಮಾಂತರದಲ್ಲಿ ಹೆಚ್ಚಿನ ಭದ್ರತೆ ಒದಗಿಸಿ: ಆಯೋಗಕ್ಕೆ ಡಾ.ಮಂಜುನಾಥ್ ಪತ್ರ
ಮೈಸೂರು: ಯದುವೀರ್ (Yaduveer Wadiyar ಟಿಕೆಟ್ ಕೊಡುವುದು ನಿಜವಾದದರೆ ಅದನ್ನು ಸ್ವಾಗತಿಸುತ್ತೇನೆ. ಕಾರ್ಯಕರ್ತನಾಗಿ ಅವರ ಪರ ಕೆಲಸ ಮಾಡುತ್ತೇನೆ ಎಂದು ಸಂಸದ ಪ್ರತಾಪ್ ಸಿಂಹ (Pratap Simha) ಹೇಳಿದ್ದಾರೆ.
ಇಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಅರಮನೆಯ ಎಸಿ ರೂಂನಲ್ಲಿ ರಾಜನಾಗಿ ಇರುವ ಬದಲು ಪ್ರಜೆಗಳ ರೀತಿ ಬದುಕುಲು ಯದುವೀರ್ ಬಂದರೆ ಸ್ವಾಗತಿಸದೆ ಇರುವುದಕ್ಕೆ ಆಗುತ್ತಾ?. ರಾಜ – ಪ್ರಜೆ ನಡುವೆ ವ್ಯತ್ಯಾಸ ತೆಗೆದು ರಾಜರೇ ಪ್ರಜೆಗಳ ಜೊತೆ ಇರಲು ಬಂದರೆ ನನ್ನ ಸ್ವಾಗತ. ಅರಮನೆ ಆಸ್ತಿ ವಿಚಾರದಲ್ಲಿ ಸರ್ಕಾರದ ನಡುವೆ ವ್ಯಾಜ್ಯಗಳಿವೆ. ಅದರಲ್ಲಿ ಬಹುತೇಕ ಆಸ್ತಿಗಳು ಸಾರ್ವಜನಿಕರ ಬಳಕೆಯಲ್ಲಿವೆ. ಯದುವೀರ್ ಜನಪ್ರತಿನಿಧಿ ಆಗಿ ಅದನ್ನೆಲ್ಲಾ ಜನರಿಗೆ ಬಿಟ್ಟು ಕೊಡಿಸುತ್ತಾರೆ ಎಂಬ ವಿಶ್ವಾಸ ವ್ಯಕ್ತಪಡಿಸಿದರು.
ಹೋರಾಡಲು ರಾಜರು ಬೀದಿಗೆ ಬಂದ್ರೆ ಸಂತೋಷ: ಚಾಮುಂಡಿ ಬೆಟ್ಟದ ಮೇಲಿನ ಅರಮನೆ ಆವರಣದ ಒಳಗೆ ಪೈಪ್ ಲೈನ್ ಹಾಕಲು ಅರಮನೆ ವಿರೋಧಿಸಿದೆ. ಯದುವೀರ್ ಜನಪ್ರತಿನಿಧಿ ಆದರೆ ಆ ಸಮಸ್ಯೆ ಬಗೆಹರಿಯುತ್ತೆ. ಶ್ರೀ ರಾಜೇಂದ್ರ ಸ್ವಾಮೀಜಿ ಪ್ರತಿಮೆ ವಿಚಾರದಲ್ಲಿ ಅರಮನೆಯವರ ನ್ಯಾಯಾಲಯಕ್ಕೆ ಹೋಗಿದ್ದಾರೆ. ಯದುವೀರ್ ಈ ಸಮಸ್ಯೆ ಬಗೆಹರಿಸಿ ರಾಜೇಂದ್ರ ಶ್ರೀಗಳ ಪ್ರತಿಮೆ ಅನಾವರಣ ಮಾಡುತ್ತಾರೆ. ಅರಮನೆ ಒಳಗೆ ಆರಾಮಾಗಿ ಇದ್ದಂತ ವ್ಯಕ್ತಿ ಸಿದ್ದರಾಮಯ್ಯ ವಿರುದ್ಧ ಹೋರಾಟ ಮಾಡಲು ಬೀದಿಗೆ ಬಂದರೆ ನಮಗೆ ಸಂತೋಷ ಎಂದು ಹೇಳಿದರು.
ಮುಖಂಡರಿಗೆ ಸಿಂಹ ಧನ್ಯವಾದ: ಅರಮನೆ ವೈಭೋಗ ಬೇಕಾಗಿಲ್ಲ. ಜನರ ಜೊತೆ ಹೋರಾಟಕ್ಕೆ ಬರ್ತಿನಿ ಅಂತಾ ಹೊರಟಿದ್ದಾರೆ, ಅದಕ್ಕೆ ಸ್ವಾಗತ. ಪೊಲೀಸ್ ಠಾಣೆಗೆ ಬಂದು ನಮ್ಮ ಕಾರ್ಯಕರ್ತರ ಸಮಸ್ಯೆ ಬಗೆಹರಿಸಲು ರಾಜರು ಬಂದರೆ ಸಂತೋಷ ಅಲ್ವಾ?. ಸುಖದ ಸುಪತ್ತಿಗೆಯಲ್ಲಿ ಇದ್ದ ನಮ್ಮ ಮಹಾರಾಜರನ್ನು ಮನವೊಲಿಸಿ ರಾಜಕೀಯಕ್ಕೆ ತಂದ ನಮ್ಮ ಮುಖಂಡರಿಗೆ ಧನ್ಯವಾದ ಎಂದು ಸಿಂಹ ತಿಳಿಸಿದರು. ಇದನ್ನೂ ಓದಿ: ಮೈಸೂರಲ್ಲಿ ರಾಜಕಾರಣ ಮಾಡೋದು ಕಷ್ಟ, ನಿಮ್ಮ ಹೃದಯದಲ್ಲಿ ನನಗೆ ಸ್ಥಾನ ಕೊಟ್ಟಿದ್ದೀರಿ: ಪ್ರತಾಪ್ ಸಿಂಹ ಭಾವುಕ
ತುರ್ತು ಬುಲಾವ್: ಚುನಾವಣಾ ಉಸ್ತುವಾರಿ ರಾಧಾ ಮೋಹನ್ ದಾಸ್ ಅಗರವಾಲ್ ನನ್ನ ಭೇಟಿ ಮಾಡಲು ಕರೆದಿದ್ದಾರೆ. ಹೀಗಾಗಿ ಇಂದು ಬೆಂಗಳೂರಿಗೆ ತೆರಳುತ್ತೇನೆ. ನನಗೆ ಈ ಕ್ಷಣಕ್ಕೂ ವಿಶ್ವಾಸವಿದೆ. ಸಂಘಟನೆ, ಸಿದ್ದಾಂತಕ್ಕೆ ಗಟ್ಟಿಯಾಗಿ ನಿಂತಿರುವ ನನಗೆ ಟಿಕೆಟ್ ಸಿಗುತ್ತದೆ. 25 ಸಂಸದರಲ್ಲಿ ನನ್ನಷ್ಟು ಹಿಂದೂತ್ವದ ಕಮಿಟ್ ಮೆಂಟ್ ಇರುವ ಮತ್ಯಾರು ಇದ್ದಾರೆ? ಹಿಂದೂತ್ವದ ವಿಚಾರದಲ್ಲಿ ನನ್ನನ್ನು ಯಾರಿಗೂ ಮ್ಯಾಚ್ ಮಾಡಲು ಯಾರು ಆಗಲ್ಲ ಎಂದರು.
ಬ್ಯಾನರ್, ಬಂಟಿಂಗ್ ಕಟ್ಟಲೂ ಸಿದ್ಧ: ಮೋದಿ ಅವರ ಬಗ್ಗೆ ಸಿದ್ದರಾಮಯ್ಯ ಬಾಯಿಗೆ ಬಂದ ರೀತಿ ಟೀಕಿಸಿದ್ದಾಗ ಸಿದ್ದರಾಮಯ್ಯ ಮಾತನ್ನು ದೊಡ್ಡ ಮಟ್ಟದಲ್ಲಿ ಖಂಡಿಸುವ ವ್ಯಕ್ತಿ ಈ ಪ್ರತಾಪ್ ಸಿಂಹ. ಇದು ನನ್ನ ದೌರ್ಬಲ್ಯವಾ?. ಮೈಸೂರು – ಕೊಡಗು ಅಭಿವೃದ್ಧಿ ಗೆ ಅತಿ ಹೆಚ್ಚಿನ ಅಭಿವೃದ್ಧಿ ಕೆಲಸ ಮಾಡಿದ್ದು ನನ್ನ ದೌರ್ಬಲ್ಯವಾ?. ನನಗೆ ಪಕ್ಷ ನಿಷ್ಠೆ ನನಗೆ ಇದೆ. ಬ್ಯಾನರ್, ಬಂಟಿಂಗ್ ಕಟ್ಟಲು ನಾನು ಸಿದ್ದ. ನನಗಾಗಿ ಪಕ್ಷ, ಕಾರ್ಯಕರ್ತರು ದುಡಿದಿದ್ದಾರೆ. ನಾನು ಮುಂದೆ ಅವರಂತೆಯೆ ದುಡಿಯುತ್ತೇನೆ ಎಂದು ಪ್ರತಾಪ್ ಸಿಂಹ ಹೇಳಿದರು.
ಮಂಡ್ಯ: ರಾಜ್ಯದಲ್ಲಿ ಈಗತಾನೇ ಸರ್ಕಾರ ಅಧಿಕಾರಕ್ಕೆ ಬಂದಿದೆ ಭರವಸೆ ನೀಡಿರುವ ಯೋಜನೆಗಳ ಅನುಷ್ಠಾನಕ್ಕೆ ಸಮಯ ಕೊಡಬೇಕು ಒಂದಿಷ್ಟು ಸಮಯ ನೀಡಿದ ಬಳಿಕ ಯಾವ ರೀತಿ ಆಳ್ವಿಕೆ ನೋಡಬೇಕು ಎಂದು ಮೈಸೂರು ರಾಜ ವಂಶಸ್ಥ ಯದುವೀರ್ (Yaduveer Chamaraja Wadiyar) ಅಭಿಪ್ರಾಯ ಪಟ್ಟಿದ್ದಾರೆ.
ಮಂಡ್ಯ (Mandya) ದ ಕಾಡುಕೊತ್ತನಹಳ್ಳಿಯಲ್ಲಿ ಮಾತನಾಡಿದ ಯದುವೀರ್ ಒಡೆಯರ್, ಈತನೇ ಸರ್ಕಾರ ರಚನೆಯಾಗಿದೆ. ಅವರ ಯೋಜನೆಗಳ ಅನುಷ್ಠಾನಕ್ಕೆ ಒಂದಷ್ಟು ಸಮಯ ನೀಡಬೇಕು. ಅದಾದ ಮೇಲೆ ಸರ್ಕಾರದ ಬಗ್ಗೆ ಅಭಿಪ್ರಾಯ ಹೇಳಬಹುದು ಎಂದು ರಾಜ್ಯದ ನೂತನ ಸರ್ಕಾರದ ಬಗ್ಗೆ ಅಭಿಪ್ರಾಯ ಪಟ್ಟಿದ್ದಾರೆ.
ಮೈಸೂರು: ಮಹಾರಾಜರ ನಂತರ ನಮ್ಮ ಸರ್ಕಾರವೇ ಹೆಚ್ಚು ಕೆಲಸ ಮಾಡಿದ್ದು ಎಂಬ ಸಿಎಂ ಸಿದ್ದರಾಮಯ್ಯ ಹೇಳಿಕೆಗೆ ಇಂದು ಯದುವಂಶದ ಪ್ರಮೋದ ದೇವಿ ಒಡೆಯರ್ ಪ್ರತಿಕ್ರಿಯಿಸಿದ್ದಾರೆ.
ಯಾರ ಆಡಳಿತ ಹೇಗಿತ್ತು ಎಂಬುದು ಜನ ತೀರ್ಮಾನ ಮಾಡುತ್ತಾರೆ. ಸಿಎಂ ಯಾವ ಅರ್ಥದಲ್ಲಿ, ಯಾವ ಸಂದರ್ಭದಲ್ಲಿ ಇದನ್ನು ಹೇಳಿದ್ದಾರೆ ಎಂಬುದು ನನಗೆ ಗೊತ್ತಿಲ್ಲ. ಆದರೆ, ಆಡಳಿತಗಳ ಬಗ್ಗೆ ಜನ ತೀರ್ಮಾನ ಕೊಡುತ್ತಾರೆ ಎಂದು ಮಾರ್ಮಿಕವಾಗಿ ನುಡಿದಿದ್ದಾರೆ.
ನಿನ್ನೆ ಯದುವಂಶದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಕೂಡ ಸಿಎಂ ಹೇಳಿಕೆಗೆ ಪ್ರತಿಕ್ರಿಯಿಸಿ, ಅಂದಿನ ಕಾಲಘಟ್ಟದ ಆಡಳಿತವೇ ಬೇರೆ, ಇವತ್ತಿನ ಕಾಲಘಟ್ಟದ ಆಡಳಿತವೇ ಬೇರೆ. ಯಾರ ಆಡಳಿತ ಹೇಗಿತ್ತು ಎಂಬುದು ಜನರ ತೀರ್ಮಾನಕ್ಕೆ ಬಿಟ್ಟದ್ದು ಎಂದು ಪ್ರತಿಕ್ರಿಯಿಸಿದ್ದರು. ಸಿಎಂ ಅವರ ಈ ಹೇಳಿಕೆ ಬಗ್ಗೆ ಸಂಸದ ಪ್ರತಾಪ್ ಸಿಂಹ, ಮಾಜಿ ಸಂಸದ ಎಚ್. ವಿಶ್ವನಾಥ್, ಮಾಜಿ ಸಚಿವ ವಿ. ಶ್ರೀನಿವಾಸಪ್ರಸಾದ್ ತೀವ್ರ ಖಂಡನೆ ಕೂಡ ವ್ಯಕ್ತಪಡಿಸಿದ್ದರು.
ಮಾರ್ಚ್ 10 ರಂದು ಮೈಸೂರಿನಲ್ಲಿ ನೂತನವಾಗಿ ನಿರ್ಮಾಣ ಮಾಡಿರುವ ಜಯದೇವ ಆಸ್ಪತ್ರೆ ಉದ್ಘಾಟನೆ ಕಾರ್ಯಕ್ರಮದಲ್ಲಿ ಸಿಎಂ ಸರ್ಕಾರದ ಕೊಡುಗೆಗಳನ್ನು ತಿಳಿಸಿದ್ದರು. ರಾಜ್ಯದಲ್ಲಿ ಮೈಸೂರು ರಾಜರ ನಂತರ ಯಾವುದಾದರೂ ಸರ್ಕಾರ ಅಭಿವೃದ್ಧಿ ಕೆಲಸ ಮಾಡಿದೆ ಎಂದರೇ ಅದು ನಮ್ಮ ಸರ್ಕಾರ ಮಾತ್ರ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದರು.
ಮೈಸೂರು ಜಿಲ್ಲೆಗೆ ನಮ್ಮ ಸರ್ಕಾರದಿಂದ 5 ಸಾವಿರ ಕೋಟಿ ರೂ. ಹಣ ನೀಡಿದ್ದೇವೆ. ಸ್ವಾತಂತ್ರ್ಯ ಭಾರತದಲ್ಲಿ ಇಷ್ಟು ಹಣ ಕೊಟ್ಟ ಸರ್ಕಾರ ಇಲ್ಲವೇ ಇಲ್ಲ. ಮೈಸೂರಿನ ಪರಂಪರೆ ಉಳಿಸಿಕೊಂಡು ಕಟ್ಟಡಗಳನ್ನ ನಿರ್ಮಿಸಿದ್ದೇವೆ ಎಂದು ತಮ್ಮ ಸರ್ಕಾರದ ಸಾಧನೆಗಳನ್ನು ತಿಳಿಸಿದ್ದರು.