ತೆಂಕುತಿಟ್ಟು ಯಕ್ಷಗಾನ (Yakshagana) ಪರಂಪರೆಯ ಹಿರಿಯ ಭಾಗವತರಾಗಿ ನಾಲ್ಕು ದಶಕಕ್ಕೂ ಹೆಚ್ಚು ಕಾಲ ಕಲಾ ಸೇವೆ ಸಲ್ಲಿಸಿದ್ದ ಅಮ್ಮಣ್ಣಾಯ (Dinesh Ammannaya) ‘ರಸರಾಗ ಚಕ್ರವರ್ತಿ’ ಎಂಬ ಬಿರುದು ಹೊಂದಿದ್ದರು.
ದಾಮೋದರ ಮಂಡೆಚ್ಚರ ಗರಡಿಯಲ್ಲಿ ಆರಂಭದಲ್ಲಿ ಪುತ್ತೂರು ಮೇಳದಲ್ಲಿ ಚಂಡೆ ಮತ್ತು ಮದ್ದಳೆ ವಾದಕರಾಗಿ ಯಕ್ಷಗಾನ ಲೋಕಕ್ಕೆ ಕಾಲಿಟ್ಟ ಇವರು ನಂತರ ಭಾಗವತಿಕೆಯತ್ತ ಆಸಕ್ತಿ ಬೆಳೆಸಿ ಪ್ರಖ್ಯಾತ ಭಾಗವತರಾಗಿ ಹೊರಹೊಮ್ಮಿದರು.
ಪ್ರಸಿದ್ಧ ಡೇರೆ ಮೇಳವಾಗಿದ್ದ ಕರ್ನಾಟಕ ಮೇಳದಲ್ಲಿ ದಿಗ್ಗಜ ಕಲಾವಿದರನ್ನು ರಂಗದಲ್ಲಿ ಕುಣಿಸಿದ ಕೀರ್ತಿ ಅಮ್ಮಣ್ಣಾಯರಿಗೆ ಸಲ್ಲುತ್ತದೆ. ತುಳು ಪ್ರಸಂಗಗಳಿಗೆ ತನ್ನ ಕಂಠ ಮಾಧುರ್ಯದಿಂದ ಅಪಾರ ಅಭಿಮಾನಿಗಳನ್ನು ಸಂಪಾದಿಸಿಕೊಂಡಿದ್ದರು.
ಎಡನೀರು ಮಠದ ಪರಮಶಿಷ್ಯರಾದ ಅಮ್ಮಣ್ಣಾಯರು ತಮ್ಮ ಜೀವನ ಅತೀ ಹೆಚ್ಚು ಯಕ್ಷಗಾನ ಭಾಗವತಿಕೆಯನ್ನು ಎಡನೀರು ಮಠದ ಮೇಳ ಹಾಗೂ ಎಡನೀರು ಕ್ಷೇತ್ರದಲ್ಲೇ ಮಾಡಿರುವುದು ವಿಶೇಷ. ಕೆಲ ದಿನಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದ ಇವರು ಇಂದು ತಮ್ಮ ಮನೆಯಲ್ಲೇ ಕೊನೆಯುಸಿರೆಳೆದಿದ್ದಾರೆ.
ಮಂಗಳೂರು: ಖ್ಯಾತ ಯಕ್ಷಗಾನ ಹಾಸ್ಯ ಕಲಾವಿದ ಮುಖ್ಯಪ್ರಾಣ ಕಿನ್ನಿಗೋಳಿ ಅವರು ಶನಿವಾರ ನಿಧನರಾಗಿದ್ದಾರೆ.
84 ವಯಸ್ಸಿನ ಕಿನ್ನಿಗೋಳಿ ಅವರು ವಯೋಸಹಜ ಅನಾರೋಗ್ಯದಿಂದ ಬಳಲುತ್ತಿದ್ದರು. ಶನಿವಾರ ಕೊನೆಯುಸಿರೆಳೆದಿದ್ದಾರೆ. ಭಾನುವಾರ ಬೆಳಗ್ಗೆ 10ರಿಂದ 12 ಗಂಟೆ ವರೆಗೆ ಕಿನ್ನಿಗೋಳಿಯ ಶಿಮಂತೂರು ಉದಯಗಿರಿಯ ನಿವಾಸದಲ್ಲಿ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದೆ. ಬಳಿಕ ಅಂತ್ಯಕ್ರಿಯೆ ನಡೆಸಲಾಗುವುದು.
ಕಿನ್ನಿಗೋಳಿ ಅವರು ತೆಂಕು ಹಾಗೂ ಬಡಗು ಎರಡೂ ತಿಟ್ಟಿನ ಪ್ರಸಿದ್ಧ ಯಕ್ಷಗಾನ ಮೇಳಗಳಲ್ಲಿ ಪ್ರಧಾನ ಕಲಾವಿದರಾಗಿ 55 ವರ್ಷಗಳಿಗೂ ಹೆಚ್ಚು ಸೇವೆ ಸಲ್ಲಿಸಿದ್ದಾರೆ.
ಮುಖ್ಯಪ್ರಾಣ ಅವರು 8ನೇ ತರಗತಿ ವರೆಗೆ ವಿದ್ಯಾಭ್ಯಾಸ ಮಾಡಿದ್ದರು. ನಂತರ ತೆಂಕು ತಿಟ್ಟಿನ ಹೆಸರಾಂತ ಹಾಸ್ಯಗಾರ ಮಿಜಾರು ಅಣ್ಣಪ್ಪ ಅವರ ಮಾರ್ಗದರ್ಶನದಲ್ಲಿ ಪಾತ್ರಾಭಿನಯ ಪಡೆದುಕೊಂಡಿದ್ದರು. ಇವರ ಪಾತ್ರ ನಿರ್ವಹಣೆಗೆ ಹಲವಾರು ಪ್ರಶಸ್ತಿ ಪುರಸ್ಕಾರಗಳು ಲಭಿಸಿವೆ.
ಮಂಗಳೂರು: ಪ್ರಪಂಚದ ಚಿತ್ರರಂಗದ ಇತಿಹಾಸದಲ್ಲಿ ಪ್ರಥಮ ಬಾರಿಗೆ, ಕರಾವಳಿ ಕರ್ನಾಟಕದ ಸಮೃದ್ಧ ಸಾಂಸ್ಕೃತಿಕ ಪರಂಪರೆಯ ಪ್ರತೀಕವಾದ ಯಕ್ಷಗಾನವನ್ನು ‘ವೀರ ಚಂದ್ರಹಾಸ’ (Veera Chandrahasa) ಚಿತ್ರದ ಮೂಲಕ ಬೆಳ್ಳಿಪರದೆಗೆ ತರಲಾಗಿದೆ. ಏ.18 ರಂದು ಇದನ್ನು ಬೆಂಗಳೂರಿನಲ್ಲಿ ಬಿಡುಗಡೆಗೊಳಿಸಲಾಗಿದ್ದು, ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದೆ. ಇದೀಗ ಕರವಾಳಿಯಲ್ಲಿ ಬಿಡುಗಡೆಗೊಳಿಸಲಾಗುತ್ತಿದೆ. ಮುಂದಿನ ದಿನಗಳಲ್ಲಿ ರಾಜ್ಯದ ಬೇರೆ ಕಡೆಗಳಲ್ಲೂ ಹಂತಹಂತವಾಗಿ ಬಿಡುಗಡೆಗೊಳಿಸಲಾಗುವುದು ಎಂದು ಖ್ಯಾತ ಸಂಗೀತ, ಚಲನಚಿತ್ರ ನಿರ್ದೇಶಕ ರವಿ ಬಸ್ರೂರು (Ravi Basrur) ಹೇಳಿದರು.
ಮಂಗಳೂರಿನ (Mangaluru) ಪ್ರೆಸ್ ಕ್ಲಬ್‌ನಲ್ಲಿ ಪತ್ರಿಕಾಗೋಷ್ಠಿಯನ್ನುದ್ದೇಶಿಸಿ ಮಾತನಾಡಿ, ನನ್ನ ಅಜ್ಜ ಯಕ್ಷಗಾನ ಕಲಾವಿದರಾಗಿದ್ದು, ಒಮ್ಮೆಲೆ ಐದು ವಾದ್ಯಗಳನ್ನು ನುಡಿಸಬಲ್ಲ ಸಾಮರ್ಥ್ಯದವರು. ನನ್ನ ತಂದೆ ಸೇರಿ ಇಡೀ ಕುಟುಂಬದಲ್ಲಿ ಎಲ್ಲರೂ ಯಕ್ಷಗಾನ ಕಲಾವಿದರಾಗಿದ್ದಾರೆ. ಯಕ್ಷಗಾನವನ್ನು ಎಲ್ಲೋ ಮಿಸ್ ಮಾಡುತ್ತಿದ್ದೇನೆ ಎಂದೆನಿಸಿತು. ಸುಮಾರು ಹನ್ನೆರಡು ವರ್ಷಗಳ ಮುಂಚೆ ಪ್ರಯತ್ನಿಸಿದ್ದೆ. ಆದರೆ, ಆಗ ನನ್ನ ಕಿಸೆಯಲ್ಲಿ ದುಡ್ಡಿರಲಿಲ್ಲ, ಅನುಭವವೂ ಇರಲಿಲ್ಲ. ಆದರೆ ಈ ವರ್ಷ ಅದಕ್ಕೆ ಕಾಲ ಕೂಡಿ ಬಂದಿತು ಎಂದರು. ಇದನ್ನೂ ಓದಿ: ಉಗ್ರರ ದಾಳಿ ಸ್ಥಳದಲ್ಲೇ ಮಾರ್ಟಿನ್ ಸಿನಿಮಾ ಶೂಟಿಂಗ್ ನಡೆದಿತ್ತು, ಆಗ ಸೆಕ್ಯೂರಿಟಿ ಚೆನ್ನಾಗಿತ್ತು: ಧ್ರುವ ಸರ್ಜಾ
ಎಲ್ಲರೂ ಇದನ್ನು ಸಿನಿಮಾ ಆಂಗಲ್‌ನಲ್ಲಿ ನೋಡುತ್ತಿದ್ದರು. ಆದರೆ ಇದು ಬರೇ ಸಿನಿಮಾ ಅಲ್ಲ, ಇದು ತುಳುನಾಡಿನ ಕಲೆ. ಆದ್ದರಿಂದ ಇದನ್ನು ಅದೇ ಶೈಲಿಯಲ್ಲಿ ನೋಡಿದರೆ, ವೀಕ್ಷಕನ ದೃಷ್ಟಿಕೋನ ಬದಲಾಗುತ್ತೆ. ಅದ್ಭುತ ಜ್ಞಾನ ಭಂಡಾರವನ್ನೇ ಹೊಂದಿರುವ ಯಕ್ಷಗಾನವನ್ನು ಯಾಕೆ ಇಷ್ಟಕ್ಕೇ ಸೀಮಿತವಾಗಿಟ್ಟುಕೊಳ್ಳಬೇಕು? ಇದನ್ನು ಪ್ರಪಂಚದ ಮುಂದೆ ತರಬೇಕು ಎನ್ನುವ ನಿಟ್ಟಿನಲ್ಲಿ ಈ ಚಿತ್ರ ರೂಪಿಸಲಾಗಿದೆ. ಬಾಹುಬಲಿಯನ್ನು ಮೀರಿಸುವ ಎಲ್ಲಾ ಲಕ್ಷಣವನ್ನು ಈ ಚಿತ್ರ ಹೊಂದಿದೆ. ಇಲ್ಲಿ ಯಕ್ಷಗಾನ ಮಾತ್ರವಲ್ಲ ಕಲಾವಿದರ ಬದುಕೂ ಕೂಡಾ ಅನಾವರಣಗೊಂಡಿದೆ. 1,500 ಕ್ಕೂ ಹೆಚ್ಚು ಇತಿಹಾಸ ಹೊಂದಿರುವ ಯಕ್ಷಗಾನ ಕಲೆಯನ್ನು ವಿಜೃಂಭಣೆಯಿಂದ ವಿಶ್ವದ ಮುಂದೆ ಮೆರೆಸುವ ಒಂದು ಪ್ರಯತ್ನ. ಇದು ಕೇವಲ ಮನೋರಂಜನೆ ಉದ್ದೇಶವಷ್ಟೇ ಅಲ್ಲದೆ, ಭವಿಷ್ಯದ ಅನೇಕ ಚಿತ್ರಗಳಿಗೆ ದಾರಿ ತೋರುವ, ಪರಂಪರೆ ಉಳಿಸುವ, ಭವಿಷ್ಯದ ಪೀಳಿಗೆಗೆ ನಮ್ಮ ಕಲೆಯನ್ನು ಪರಿಚಯಿಸುವ ಒಂದು ಹೊಸ ಆರಂಭ. ಇದರಲ್ಲಿ ಹೆಚ್ಚಾಗಿ ಯಕ್ಷ ಕಲಾವಿದರೇ ಅಭಿನಯಿಸಿದ್ದಾರೆ ಎಂದರು ರವಿ ಬಸ್ರೂರು.
ಖ್ಯಾತ ಭಾಗವತ ಪಟ್ಲ ಸತೀಶ್ ಶೆಟ್ಟಿ ಮಾತನಾಡಿ, ಯಕ್ಷಗಾನ ಕಲಾವಿದರನ್ನೇ ಬಳಸಿ, ಯಕ್ಷಗಾನೀಯವಾಗಿ ಚಲನಚಿತ್ರವನ್ನು ಹೇಗೆ ಮಾಡಬಹುದು ಎನ್ನುವುದನ್ನು ಬಸ್ರೂರು ತೋರಿಸಿಕೊಟ್ಟಿದ್ದಾರೆ. ಕಾಂತಾರ ಚಲನಚಿತ್ರ ಬಂದ ಮೇಲೆ ದೈವಾರಾಧನೆಗೆ ವಿಶ್ವಮಟ್ಟದ ಮನ್ನಣೆ ಸಿಕ್ಕಿತು. ಅದೇ ರೀತಿ ಈ ಚಿತ್ರದಲ್ಲಿ ಯಕ್ಷಗಾನ ಕಲೆ ಹಾಗೂ ಕಲಾವಿದರಿಗೆ ಮನ್ನಣೆ ಸಿಕ್ಕಿದೆ. ಈ ಚಿತ್ರದಲ್ಲಿ ನಾನೂ ಒಂದು ಹಾಡನ್ನು ಯಕ್ಷಗಾನ ಶೈಲಿಯಲ್ಲೇ ಹಾಡಿದ್ದು ವಿಶೇಷ. ಈ ಚಿತ್ರದಲ್ಲಿ ಯಕ್ಷಗಾನಕ್ಕೆ ಎಲ್ಲಿಯೂ ಲೋಪ, ಅಪಚಾರ ಆಗದ ಹಾಗೆ ನೋಡಲಾಗಿದೆ. ಮುಂದಿನ ಜನಾಂಗಕ್ಕೆ ಮಾತ್ರವಲ್ಲ ಯಕ್ಷಗಾನದ ಮೇಲೆ ಆಸಕ್ತಿ ಇಲ್ಲದವನೂ ಕೂಡ ಆಸಕ್ತಿ ಬೆಳೆಸುವಂತೆ ಈ ಚಿತ್ರದಲ್ಲಿ ತೋರಿಸಲಾಗಿದೆ. ಸಿನಿಮಾದ ಮೂಲಕ ಯಕ್ಷಗಾನದ ಕಂಪನ್ನು ವಿಶ್ವದೆಲ್ಲೆಡೆ ರವಿ ಬಸ್ರೂರು ಪಸರಿಸಿದ್ದಾರೆ ಎಂದರು. ಇದನ್ನೂ ಓದಿ: ಗೋಲ್ಡ್ ಸ್ಮಗ್ಲಿಂಗ್ ಕೇಸ್ – ರನ್ಯಾರಾವ್ ಜಾಮೀನು ಅರ್ಜಿ ವಜಾಗೊಳಿಸಿದ ಹೈಕೋರ್ಟ್
ಖ್ಯಾತ ಯಕ್ಷಗಾನ ಭಾಗವತ ರಾಘವೇಂದ್ರ ಝನ್ಸಾಲೆ ಮಾತನಾಡಿ, ಆರೇಳು ಗಂಟೆ ಇರುವ ಯಕ್ಷಗಾನವನ್ನು ಎರಡೂವರೆ ಗಂಟೆಗೆ ಸೀಮಿತಗೊಳಿಸಲಾಗಿದೆ. ಆದರೆ ಚಿತ್ರದಲ್ಲಿ ಯಕ್ಷಗಾನಕ್ಕೆ ಎಲ್ಲೂ ಲೋಪವಾಗಿಲ್ಲ. ಅವರ ಚಿತ್ರದ ಉದ್ದೇಶ ಉತ್ತಮವಾಗಿದ್ದು, ನಾವದಕ್ಕೆ ಪ್ರೋತ್ಸಾಹಿಸೋಣ ಎಂದರು.
ರವಿ ಬಸ್ರೂರು ತಂಡದ ಪರಿಶ್ರಮದಲ್ಲಿ ಮೂಡಿಬಂದ ಈ ಚಲನಚಿತ್ರವನ್ನು ಎನ್.ಎಸ್. ರಾಜಕುಮಾರ್ ನಿರ್ಮಿಸಿದ್ದಾರೆ. ಗೀತಾ ರವಿ ಬಸ್ರೂರು, ಅನೂಪ್ ಗೌಡ, ಅನುಲ್ ಕುಮಾರ್ ಪೂವ್ವಾಡಿ ಸಹ ನಿರ್ಮಾಪಕರಾಗಿ, ರವಿ ಬಸ್ರೂರು ಸಂಗೀತ, ಕಿರಣ್ ಕುಮಾರ್ ಆರ್ ಛಾಯಾಗ್ರಹಣ ಮಾಡಿದ್ದಾರೆ. ಸ್ಯಾಂಡಲ್‌ವುಡ್ ನಟ ಡಾ. ಶಿವರಾಜ್ ಕುಮಾರ್ ಕೂಡಾ ಬಣ್ಣ ಹಚ್ಚಿದ್ದು ಸುಮಾರು 900 ಕಲಾವಿದರಿದ್ದಾರೆ. ಖ್ಯಾತ ಭಾಗವತರುಗಳಾದ ಪಟ್ಲ ಸತೀಶ್ ಶೆಟ್ಟಿ ಮತ್ತು ರಾಘವೇಂದ್ರ ಝನ್ಸಾಲೆ ಈ ಸಿನಿಮಾದಲ್ಲಿ ಹಾಡಿದ್ದಾರೆ.
ಉಡುಪಿ: “ನಿಮ್ಮ ಆಚರಣೆ ಆಡಂಬರ ಎಲ್ಲ ಬಂದ್ ಮಾಡಿಬಿಡ್ತೇನೆ” ನಟ ಕಿಶೋರ್ ಅರಣ್ಯ ಅಧಿಕಾರಿಯಾಗಿ ಕಾಂತಾರ ಸಿನಿಮಾದಲ್ಲಿ ಗುಡುಗಿದ ನಂತರ ಚಿತ್ರದ ಕಥಾವಸ್ತು ಹಲವು ತಿರುವು ಪಡೆದುಕೊಳ್ಳುತ್ತದೆ. ಈಗ ಉಡುಪಿ ಜಿಲ್ಲೆಯ ಕಾರ್ಕಳ (Karkala) ತಾಲೂಕಿನ ಮುಂಡ್ಲಿಯಲ್ಲಿ ಸತ್ಯನಾರಾಯಣ ಪೂಜೆ ಮತ್ತು ಯಕ್ಷಗಾನದ (Yakshagana) ಟೆಂಟ್ ಗೆ ಮೂರು ಬಾರಿ ನುಗ್ಗಿದ ಪೊಲೀಸರು ಮಾಡಿದ್ದು ಇದನ್ನೇ ಎಂದು ಶಿರ್ಲಾಲು (Shirlalu) ಗ್ರಾಮಸ್ಥರು ದೂರಿದ್ದಾರೆ.
ಕಾರ್ಕಳ ತಾಲೂಕಿನಲ್ಲಿ ಯಕ್ಷಗಾನ ಮಂಡಳಿಯ ಕಾರ್ಯಕ್ರಮಕ್ಕೆ ಅಡ್ಡಿಪಡಿಸಿದ ವಿಚಾರದಲ್ಲಿ ಹೊಸ ತಿರುವು ಪಡೆದಿದೆ. ಕಾಂಗ್ರೆಸ್ ಬಿಜೆಪಿ ರಾಜಕೀಯ ಜಟಾಪಟಿಗೆ ಕಾರಣವಾಗಿದೆ. ಶಿರ್ಲಾಲು ಪಂಚಾಯತ್ ವ್ಯಾಪ್ತಿಯ ಮುಂಡ್ಲಿಯಲ್ಲಿ ಸಾರ್ವಜನಿಕರು ಸತ್ಯನಾರಾಯಣ ಪೂಜೆಯನ್ನು ಆಯೋಜಿಸಿದ್ದರು. ರಾತ್ರಿ ಲವಕುಶ ಮತ್ತು ಜಾಂಬವತಿ ಕಲ್ಯಾಣ ಎಂಬ ಕಥಾಭಾಗದ ಯಕ್ಷಗಾನ ಆಯೋಜಿಸಲಾಗಿತ್ತು. ಇದಕ್ಕೆ ಸ್ಥಳೀಯ ಕಾಂಗ್ರೆಸ್ ಗ್ರಾಮ ಪಂಚಾಯತ್ ಸದಸ್ಯ ಅಡ್ಡಿಪಡಿಸಿದ್ದಾರೆ ಗ್ರಾಮಸ್ಥರು ದೂರಿದ್ದರು. ನಂತರ ಪೊಲೀಸರು, ಗ್ರಾಮಸ್ಥರು, ಪೂಜಾ ಸಮಿತಿಯ ಭಕ್ತರ ನಡುವೆ ಜಟಾಪಟಿ ಏರ್ಪಟ್ಟಿತ್ತು.
20ಕ್ಕಿಂತ ಹೆಚ್ಚು ವಿದ್ಯಾರ್ಥಿಗಳು ಮತ್ತು ಸಾರ್ವಜನಿಕರ ತಂಡ ಕಳೆದ ಒಂದು ವರ್ಷದಿಂದ ಯಕ್ಷಗಾನದ ಹೆಜ್ಜೆ, ಪ್ರಸಂಗದ ತಯಾರಿಯನ್ನು ಮಾಡಿಕೊಂಡಿದ್ದರು. ಕಾರ್ಯಕ್ರಮಕ್ಕೆ ಪರವಾನಿಗೆ ಪಡೆಯಲು ಹೋದಾಗ ಪಿಡಿಒ ಮೂರು ದಿನ ರಜೆಯಲ್ಲಿದ್ದರು. ಪೊಲೀಸರು ಪಂಚಾಯತ್ ಪರವಾಗಿಗೆ ಇಲ್ಲದೆ ಮೈಕ್ ಹಾಕಲು ನಿರಾಕರಿಸಿದ್ದರು. ಇದರ ಹಿಂದೆ ರಾಜಕೀಯ ಕುತಂತ್ರ ಇದೆ ಎಂದು ಗ್ರಾಮಸ್ಥರು ಆರೋಪಿಸಿದ್ದಾರೆ.
ಶ್ರೀ ಮಹಾಲಿಂಗೇಶ್ವರ ಯಕ್ಷಗಾನ ಮಂಡಳಿಯ ಅಧ್ಯಕ್ಷರು ಸೌಂಡ್ಸ್ ಮಾಲೀಕ ಅಪ್ಪು ಮೇಲೆ ದಾಖಲಿಸಿರುವ ಕೇಸ್ ವಾಪಸ್ ಪಡೆಯದಿದ್ದರೆ ಅಜೆಕಾರು ಪೊಲೀಸ್ ಠಾಣೆಯ ಮುಂದೆ ಯಕ್ಷಗಾನ ಪ್ರದರ್ಶನ ಮತ್ತು ಭಜನೆಯ ಮೂಲಕ ಪ್ರತಿಭಟನೆ ಮಾಡುವುದಾಗಿ ಹಿಂದೂ ಜಾಗರಣ ವೇದಿಕೆ ಈಗ ಎಚ್ಚರಿಕೆ ನೀಡಿದೆ.
ಆದರೆ ಕಾಂಗ್ರೆಸ್ ನಾಯಕ ದೂರು ಕೊಟ್ಟ ಎಂಬ ಕಾರಣಕ್ಕೆ ಎಸ್ಪಿಯೇ ಯಕ್ಷಗಾನ ನಿಲ್ಲಿಸಲು ಪೊಲೀಸರನ್ನು ಕಳುಹಿಸಿದ್ದು ಎಷ್ಟು ಸರಿ ?ಸಾಲದಕ್ಕೆ ಮರುದಿನ ಯಕ್ಷಗಾನ ಆಯೋಜಕರ ಮೇಲೆ ಮೊಕದ್ದಮೆ ದಾಖಲಿಸುವ ಮೂಲಕ ನಿಮ್ಮ ಪೊಲೀಸರು ಎಫ್ ಐಆರ್ ಸರ್ಕಾರ ನಡೆಸಲು ಹೊರಟಿದ್ದಾರಾ ? 4/5
ಈ ಪ್ರಕರಣದ ಬಗ್ಗೆ ಕ್ಷೇತ್ರದ ಶಾಸಕ ಸುನಿಲ್ ಕುಮಾರ್ ಖಂಡನೆ ವ್ಯಕ್ತಪಡಿಸಿದ್ದಾರೆ. ಮುಖ್ಯಮಂತ್ರಿ ರೇಸ್ ನಲ್ಲಿರುವ ಗೃಹ ಸಚಿವ ಜಿ ಪರಮೇಶ್ವರ್ ಗೆ ಕುಟುಕಿದ್ದಾರೆ. ಯಕ್ಷಗಾನದಿಂದ ಕಾನೂನು ಸುವ್ಯವಸ್ಥೆ ಹದಗೆಡುತ್ತದೆಯೇ? ಗೃಹ ಸಚಿವರೇ ನೀವು ಸಭ್ಯ ಸುಸಂಸ್ಕೃತ ಸಚಿವರು ಎಂದು ಭಾವಿಸಿದ್ದೆವು. ಪದೇ ಪದೇ ಪೊಲೀಸ್ ಇಲಾಖೆಯನ್ನು ಅಭಿವ್ಯಕ್ತಿ ಸ್ವಾತಂತ್ರ‍್ಯದ ದಮನಕ್ಕೆ ಬಳಸುತ್ತಿದ್ದೀರಿ. ಎಸ್‌ಪಿ ಅವರು ಪೊಲೀಸರನ್ನು ಕಳುಹಿಸಿ ಯಕ್ಷಗಾನ ನಿಲ್ಲಿಸಿದ್ದಾರೆ. ಆಯೋಜಕರ ಮೇಲೆ ಕೇಸು ದಾಖಲಿಸಿದ್ದೀರಿ. ನೀವು ಎಫ್‌ಐಆರ್ ಸರ್ಕಾರ ನಡೆಸಲು ಹೊರಟಿದ್ದೀರಾ? ಇಂದು ಯಕ್ಷಗಾನ.. ನಾಳೆ ಕೋಲ.. ಕಂಬಳ… ಕರಾವಳಿಯ ಧಾರ್ಮಿಕ ಆಚರಣೆಗಳನ್ನು ನಿಲ್ಲಿಸುತ್ತೀರಾ? ನಿಮಗೆ ಇಲಾಖೆ ಮೇಲೆ ಹಿಡಿತ ಇಲ್ಲವೇ? ಎಂದು ಮಾಜಿ ಸಚಿವ ಶಾಸಕ ಸುನಿಲ್ ಕುಮಾರ್ ಪ್ರಶ್ನೆ ಮಾಡಿದ್ದಾರೆ.
ಯಕ್ಷಗಾನಕ್ಕೆ ಆರಾಧನಾ ಕಲೆಯೆಂದು ಕರಾವಳಿಯಲ್ಲಿ ಮಾನ್ಯತೆಯಿದೆ. ಪರವಾನಿಗೆ ನೆಪದಲ್ಲಿ ಗ್ರಾಮಸ್ಥರನ್ನು ಒಡೆದು ಆಳುವುದು. ಕೆಟ್ಟ ರಾಜಕೀಯ ಮಾಡುತ್ತಿರುವುದು ಒಳ್ಳೆಯ ಬೆಳವಣಿಗೆ ಅಲ್ಲ.
ಕಾರವಾರ: ಅತ್ಯಂತ ಕಿರಿಯ ವಯಸ್ಸಿನಲ್ಲೇ ವಿಶ್ವಶಾಂತಿಗೆ ಯಕ್ಷ ನೃತ್ಯ ಮೂಲಕ ಕೊಡುಗೆ ನೀಡುತ್ತಿರುವ ಪಬ್ಲಿಕ್ ಟಿವಿಯ ಪಬ್ಲಿಕ್ ಹೀರೋ ಆಗಿದ್ದ ಉತ್ತರ ಕನ್ನಡ ಜಿಲ್ಲೆಯ ಶಿರಸಿಯ ಯಕ್ಷಗಾನ ಕಲಾವಿದೆ ತುಳಸಿ ಹೆಗಡೆ (Tulasi Hegade) ಹೆಸರು ಇದೀಗ ಜಾಗತಿಕ ಮಟ್ಟದಲ್ಲೂ ದಾಖಲಾಗಿದೆ.
ಲಂಡನ್ ಮೂಲದ ಪ್ರತಿಷ್ಠಿತ ವರ್ಲ್ಡ್ 9 ರೆಕಾರ್ಡ್ ಸಂಸ್ಥೆಯು ತುಳಸಿ ಹೆಗಡೆ ಹೆಸರನ್ನು ತನ್ನ ವಿಶ್ವದಾಖಲೆಯ ಪಟ್ಟಿಯಲ್ಲಿ ಸೇರ್ಪಡೆಗೊಳಿಸಿಕೊಂಡಿದೆ. ಯಕ್ಷಗಾನ ಕಲಾ ಪ್ರಕಾರದ ಮೂಲಕ ವಿಶ್ವಶಾಂತಿಗೆ ಈವರೆಗೆ 9 ಕಲಾ ಕುಸುಮದ ಮೂಲಕ ನೀಡುತ್ತಿರುವ ಕೊಡುಗೆಗಳನ್ನು ಗಮನಿಸಿ ಮಕ್ಕಳ ವಿಭಾಗದ ತನ್ನ ದಾಖಲಾತಿಯಲ್ಲಿ ಸೇರಿಸಿಕೊಂಡಿದೆ.
ಬೆರಳ ತುದಿಯಲ್ಲಿ ನರ್ತನ ಮಾಡುವ ವಿದೇಶವೊಂದರ ನೃತ್ಯ ಕಲಾ ಪ್ರಕಾರ ಹೊರತುಪಡಿಸಿದರೆ ಈವರೆಗೆ ಪ್ರಪಂಚದ ಯಾವುದೇ ಕಲಾ ಪ್ರಕಾರ ಈ ದಾಖಲಾತಿ ಪಟ್ಟಿಗೆ ಸೇರ್ಪಡೆ ಆಗಿರಲಿಲ್ಲ ಎಂದು ಈ ಸಂಸ್ಥೆ ತಿಳಿಸಿದೆ. ಈ ದಾಖಲೆಗೆ ತುಳಸಿ ಹೆಗಡೆ ಹೆಸರು ಸೇರ್ಪಡೆಯಿಂದ ಯಕ್ಷ ರೂಪಕದ ಮೂಲಕ ಯಕ್ಷಗಾನದ ಹೆಸರೂ ಇದೇ ಪ್ರಥಮ ಬಾರಿಗೆ ಸೇರಿದಂತಾಗಿದೆ.
ಉತ್ತರ ಕನ್ನಡ ಜಿಲ್ಲೆಯ ಶಿರಸಿ ಮಾರಿಕಾಂಬಾ ಸರಕಾರಿ ಪ್ರೌಢ ಶಾಲೆಯಲ್ಲಿ 10 ನೇ ತರಗತಿ ಓದುತ್ತಿರುವ ತುಳಸಿ ಹೆಗಡೆ ತನ್ನ ಮೂರು ವರ್ಷದಿಂದಲೇ ಯಕ್ಷಗಾನ ಕ್ಷೇತ್ರಕ್ಕೆ ಬಾಲ ಹೆಜ್ಜೆ ಇಟ್ಟವಳು. ಐದೂವರೆ ವರ್ಷದಿಂದ ವಿಶ್ವ ಶಾಂತಿ ರೂಪಕಗಳನ್ನು ಪ್ರಸ್ತುತಗೊಳಿಸುತ್ತಿದ್ದಾಳೆ. ಇದನ್ನೂ ಓದಿ: ಶಿರಸಿ ಮೂಲದ ಯುವತಿ ಡಾ.ಶೃತಿ ಹೆಗಡೆಗೆ ವಿಶ್ವ ಸುಂದರಿ-2024 ಕಿರೀಟ!
ಪೌರಾಣಿಕ ಆಖ್ಯಾನಗಳ 9 ರೂಪಕಗಳನ್ನು ಪ್ರಸ್ತುತಗೊಳಿಸುವ ಈಕೆ, ರಾಜ್ಯ, ಹೊರ ರಾಜ್ಯಗಳಲ್ಲಿ 850ಕ್ಕೂ ಅಧಿಕ ಪ್ರದರ್ಶನ ನೀಡಿ ಗಮನ ಸೆಳೆದಿದ್ದಾಳೆ. ಹಿರಿಯ ಕಲಾವಿದರ ಜೊತೆ ಬೇರೆ ಬೇರೆ ಯಕ್ಷಗಾನ ಆಖ್ಯಾನಗಳಲ್ಲೂ ಪಾತ್ರ ಮಾಡುತ್ತಿದ್ದಾಳೆ.
ಈಗಾಗಲೇ ಇಂಡಿಯಾ ಬುಕ್ ಆಪ್ ರೆಕಾರ್ಡನಲ್ಲಿಯೂ ದಾಖಲಾಗಿದ್ದು, ಕರ್ನಾಟಕ ಬಾಲ ವಿಕಾಸ ಅಕಾಡೆಮಿ ನೀಡುವ ರಾಜ್ಯ ಮಟ್ಟದ ಬಾಲ ಗೌರವ ಪ್ರಶಸ್ತಿ, ಟೈಮ್ಸಆಫ್ ಇಂಡಿಯಾದ ದೇಶ ಮಟ್ಟದ 19ವರ್ಷದೊಳಗಿನ ಅನ್ ಸ್ಟಾಪೇಬಲ್ 21 ಅವಾರ್ಡ್ ಸೇರಿದಂತೆ ಅನೇಕ ಪ್ರಶಸ್ತಿ, ಪುರಸ್ಕಾರಗಳು ಅರಸಿ ಬಂದಿವೆ. ಪ್ರಧಾನಿ ನರೇಂದ್ರ ಮೋದಿ ಅವರ ಭೇಟಿಗೂ ಅವಕಾಶ ಸಿಕ್ಕಿತ್ತು.
ಬೆಂಗಳೂರಿನ ಪುತ್ರನ ಮನೆಯಲ್ಲಿ ಇಂದು ಬೆಳಗ್ಗೆ 4:30ರ ವೇಳೆಗೆ ಧಾರೇಶ್ವರ ನಿಧನರಾದರು. ಪತ್ನಿ, ಪುತ್ರ, ಪುತ್ರಿಯನ್ನು ಅಗಲಿದ ಇವರು ಯಕ್ಷಗಾನ ಕ್ಷೇತ್ರದಲ್ಲಿ 46 ವರ್ಷಗಳ ಸೇವೆ ಸಲ್ಲಿಸಿ ಪೇರ್ಡೂರು ಮೇಳಕ್ಕೆ ನಿವೃತ್ತಿ ಹೇಳಿದ್ದರು.
ಮೊದಲು ಅಮೃತೇಶ್ವರಿ ಮೇಳದಲ್ಲಿ ತಮ್ಮ ತಿರುಗಾಟ ಆರಂಭಿಸಿದ್ದ ಇವರು ಪ್ರಯೋಗಶೀಲ ಭಾಗವತರೆಂದೇ ಹೆಸರುವಾಸಿಯಾಗಿದ್ದರು. ಹಿರೇಮಹಾಲಿಂಗೇಶ್ವರ ಮೇಳ ಹಾಗೂ ಶಿರಸಿ ಮೇಳದಲ್ಲೂ ಭಾಗವತರಾಗಿ ಬಳಿಕ 28 ವರ್ಷಗಳ ಕಾಲ ಪೆರ್ಡೂರು ಮೇಳದಲ್ಲಿ (Perdur Yakshagana Mela) ಪ್ರಧಾನ ಭಾಗವತರಾಗಿ ಸೇವೆ ಸಲ್ಲಿಸಿದ್ದರು.
1957 ರಲ್ಲಿ ಗೋಕರ್ಣದಲ್ಲಿ ಜನಿಸಿದ್ದ ಅವರು ಸಂಗೀತಾಭ್ಯಾಸ ಮಾಡಿ ಕಾರ್ಯಕ್ರಮ ನೀಡುತ್ತಿದ್ದರು. ನಂತರ ಎಲೆಕ್ಟ್ರಿಕ್ ಅಂಗಡಿ ಹಾಕಿ ಯಕ್ಷಗಾನ ಮೇಳಕ್ಕೆ ಲೈಟಿಂಗ್ ವ್ಯವಸ್ಥೆಗೆ ಸೇರಿದ್ದರು. ಮೇಳ ಬಿಟ್ಟು 10 ವರ್ಷದ ಬಳಿಕವೂ ಅನಿವಾರ್ಯ ಸಂದರ್ಭದಲ್ಲಿ ಭಾಗವತರಾಗಿ ಕಲಾ ಸೇವೆ ಮಾಡಿ ಕಲಾವಿದರ ಮನ ಗೆದ್ದಿದ್ದರು. ಧಾರೇಶ್ವರ ಯಕ್ಷ ಬಳಗ ಮೂಲಕ ಯಕ್ಷಗಾನ ಕಾರ್ಯಕ್ರಮ ಸಂಯೋಜಿಸುತ್ತಿದ್ದರು
ಸಜ್ಜನ, ಸದ್ಗುಣಿ, ಮಿತಭಾಷಿಯಾಗಿದ್ದ ಧಾರೇಶ್ವರರು ಯಕ್ಷಗಾನಕ್ಕೆ ಕಾಳಿಂಗ ನಾವಡರ ಅನಂತರ ಭಾಗವತಿಕೆ ತಾರಾ ಮೌಲ್ಯ ತಂದಿದ್ದರು. ಹೊಸ ಹೊಸ ಪ್ರಸಂಗಗಳನ್ನು ಹೊಸತನದಲ್ಲಿ ನಿರ್ದೇಶಿಸುವ ಮೂಲಕ ರಂಗಮಾಂತ್ರಿಕ ಎನಿಸಿದ್ದರು. ಕೀರ್ತಿಯ ಉತ್ತುಂಗದಲ್ಲಿ ಇದ್ದಾಗಲೇ ಮೇಳದ ತಿರುಗಾಟ ನಿಲ್ಲಿಸಿದ್ದರು.
ಸುಮಾರು 300ಕ್ಕೂ ಅಧಿಕ ಪೌರಾಣಿಕ, ಐತಿಹಾಸಿಕ, ಸಾಮಾಜಿಕ ಪ್ರಸಂಗಗಳನ್ನು ನಿರ್ದೇಶಿಸಿದ ಕೀರ್ತಿ ಧಾರೇಶ್ವರ ಅವರಿಗಿದೆ. ಭಾಗವತರ ಅಂತ್ಯಕ್ರಿಯೆ ಇಂದು ಸಂಜೆ ಉಡುಪಿ ಜಿಲ್ಲೆಯ ಕುಂದಾಪುರ ತಾಲೂಕಿನ ನಾಗೂರಿನ ಸ್ವಗೃಹದಲ್ಲಿ ನಡೆಯಲಿದೆ.
ಯುಗಾದಿ ಹಬ್ಬಕ್ಕೆ ಡೈನಾಮಿಕ್ ಪ್ರಿನ್ಸ್ ಪ್ರಜ್ವಲ್ ದೇವರಾಜ್ (Prajwal Devaraj) ಹೊಸ ಅವತಾರದಲ್ಲಿ ಕಾಣಿಸಿಕೊಂಡಿದ್ದಾರೆ. ಈ ಲುಕ್ ನೋಡಿದ್ರೆ ನಿಜಕ್ಕೂ ಪ್ರಜ್ವಲ್ ಅವರೇನಾ ಎಂದು ಅಚ್ಚರಿ ಪಡುವಂತಿದೆ. ಮೊಟ್ಟ ಮೊದಲ ಬಾರಿಗೆ ಪ್ರಜ್ವಲ್ ದೇವರಾಜ್ ಯಕ್ಷಗಾನ ವೇಷಧಾರಿಯಾಗಿ ಕಾಣಿಸಿಕೊಂಡಿದ್ದು ಪೋಸ್ಟರ್ ರೋಮಾಂಚನಕಾರಿಯಾಗಿದೆ. ಅಂದಹಾಗೆ ಇದು ಕರಾವಳಿ ಸಿನಿಮಾದ ಹೊಸ ಪೋಸ್ಟರ್. ಪ್ರಜ್ವಲ್ ದೇವರಾಜ್ ಸದ್ಯ ಕರಾವಳಿ ಸಿನಿಮಾದ ಶೂಟಿಂಗ್ ನಲ್ಲಿ ಬ್ಯುಸಿಯಾಗಿದ್ದಾರೆ.
ಗುರುದತ್ ಗಾಣಿಗ (Gurudutt Ganiga) ನಿರ್ದೇಶನದಲ್ಲಿ ಮೂಡಿ ಬರುತ್ತಿರುವ ಕರಾವಳಿ (Karavali) ಸಿನಿಮಾದ ಚಿತ್ರೀಕರಣ ಭರ್ಜರಿಯಾಗಿ ನಡೆಯುತ್ತಿದೆ. ಸದ್ಯ ಪ್ರಜ್ವಲ್ ದೇವರಾಜ್ ಅವರ ಹೊಸ ಲುಕ್ ರಿವೀಲ್ ಮಾಡುವ ಮೂಲಕ ಸಿನಿಮಾತಂಡ ನಿರೀಕ್ಷೆ ದುಪ್ಪಟ್ಟು ಮಾಡಿದೆ. ಈಗಾಗಲೇ ಕರಾವಳಿ ಸಿನಿಮಾ ಟೀಸರ್ ಮತ್ತು ಪೋಸ್ಟರ್ ಗಳ ಮೂಲಕ ಭಾರಿ ನಿರೀಕ್ಷೆ ಹುಟ್ಟುಹಾಕಿದೆ. ಈ ನಡುವೆ ಯುಗಾದಿ ಹಬ್ಬದ ಪ್ರಯುಕ್ತ ಬಂದಿರುವ ಪ್ರಜ್ವಲ್ ಅವರ ಯಕ್ಷಗಾನ ಲುಕ್ ಕುತೂಹಲವನ್ನು ಮತ್ತಷ್ಟು ಹೆಚ್ಚಿಸಿದೆ.
ಕರಾವಳಿ ಸಿನಿಮಾದಲ್ಲಿ ಪ್ರಜ್ವಲ್ ವಿಭಿನ್ನವಾದ ಪಾತ್ರದಲ್ಲಿ ಕಾಣಿಸಿಕೊಳ್ಳುತ್ತಿದ್ದಾರೆ. ಕಂಬಳದ ಜೊತೆಗೆ ಯಕ್ಷಗಾನ (Yakshagana) ಕೂಡ ಕರಾವಳಿ ಸಿನಿಮಾದ ಹೈಲೈಟ್ ಗಳಲ್ಲಿ ಒಂದಾಗಿದೆ ಎನ್ನುವುದು ಈ ಲುಕ್ ನೋಡಿದ್ರೆ ಗೊತ್ತಾಗುತ್ತೆ. ಅಂದಹಾಗೆ ಈ ಲುಕ್ ಅನ್ನು ಪ್ರೊಫೆಷನಲ್ ಕಲಾವಿದರೇ ಮಾಡಿದ್ದು ವಿಶೇಷ. ಯಕ್ಷಗಾನ ಭಾಗವತರೇ ಆಗಿರುವ ಪಲ್ಲವ ಗಾಣಿಗ ಎನ್ನುವರು ಈ ಲುಕ್ ಡಿಸೈನ್ ಮಾಡಿದ್ದಾರೆ. ಪ್ರಜ್ವಲ್ ಅವರಿಗೆ ಈ ಲುಕ್ ಡಿಸೈನ್ ಮಾಡಲು ಅರ್ಥ ದಿನಾ ತೆಗೆದುಕೊಂಡಿದ್ದಾರೆ.
ಕರಾವಳಿ ಗುರುದತ್ ಗಾಣಿಗ ನಿರ್ದೇಶನದ ಜೊತೆಗೆ ಅವರದೇ ಗಾಣಿಗ ಫಿಲ್ಮ್ಸಂ ಹಾಗೂ ವಿಕೆ ಫಿಲ್ಮಂ ಅಸೋಸಿಯೇಷನ್ ನಲ್ಲಿ ಸಿನಿಮಾ ನಿರ್ಮಾಣವಾಗುತ್ತಿದೆ. ಸದ್ಯ 40ರಷ್ಟು ಚಿತ್ರೀಕರಣ ಮುಗಿಸಿದ್ದು 2ನೇ ಶೆಡ್ಯೂಲ್ ಯುಗಾದಿ ಹಬ್ಬದ ಬಳಿಕ ಪ್ರಾರಂಭವಾಗಲಿದೆ ಮಂಗಳೂರಿನ ಸುತ್ತಮುತ್ತ ಕರಾವಳಿ ಸಿನಿಮಾದ ಚಿತ್ರೀಕರಣ ನಡೆಯುತ್ತಿದೆ.
ಇದು ಮನುಷ್ಯ ಹಾಗೂ ಪ್ರಾಣಿಯ ಮಧ್ಯೆ ನಡೆಯುವ ಸಂಘರ್ಷದ ಕಥೆ. ಪಕ್ಕಾ ಹಳ್ಳಿ ಬ್ಯಾಕ್ ಡ್ರಾಪ್ ನಲ್ಲಿ ಮೂಡಿ ಬರಲಿದೆ. ಕರಾವಳಿ ಸಿನಿಮಾಗೆ ಅಭಿಮನ್ಯು ಸದಾನಂದ್ ಕ್ಯಾರೆಮಾ ವರ್ಕ್ ಇದೆ, ಸಚಿನ್ ಬಸ್ರೂರು ಸಂಗೀತ ಚಿತ್ರಕ್ಕಿದೆ. ಇನ್ನು ಉಳಿದಂತೆ ಈ ಸಿನಿಮಾದಲ್ಲಿ ನಟ ಮಿತ್ರ, ಟಿವಿ ಶ್ರೀಧರ್, ಜಿ ಜಿ, ನಿರಂಜನ್ ಸೇರಿದಂತೆ ಹಲವು ಪ್ರಖ್ಯಾತ ಕಲಾವಿದರು ನಟಿಸುತ್ತಿದ್ದಾರೆ.
ದುಬೈ: ಅಬುಧಾಬಿ (Abu Dhabi) ಪ್ರವಾಸದಲ್ಲಿರುವ ಪ್ರಧಾನಿ ನರೇಂದ್ರ ಮೋದಿಯವರನ್ನು ಇಂದು ಕಾರ್ಯಕ್ರಮವೊಂದಕ್ಕೆ ಬಹಳ ವಿಶೇಷವಾಗಿ ಸ್ವಾಗತಿಸಿರುವುದು ಗಮನ ಸೆಳೆದಿದೆ.
ಹೌದು. ಯುನೈಟೆಡ್ ಅರಬ್ ಎಮಿರೇಟ್ಸ್ (UAE) ನಲ್ಲಿ ನಿರ್ಮಾಣಗೊಂಡಿರೋ ದೇಶದ ಮೊದಲ ಹಿಂದೂ ದೇವಸ್ಥಾನವನ್ನು ಪ್ರಧಾನಿ ಮೋದಿ (Narendra Modi) ಫೆ.14ರಂದು ಉದ್ಘಾಟಿಸಲಿದ್ದಾರೆ. ಈ ಹಿನ್ನೆಲೆಯಲ್ಲಿ ಮೋದಿಯವರು ಈಗಾಗಲೇ ಅಬುಧಾಬಿಗೆ ಬಂದಿಳಿದಿದ್ದಾರೆ. ಬಳಿಕ ‘ಅಹ್ಲಾನ್ ಮೋದಿ’ ಕಾರ್ಯಕ್ರಮಕ್ಕಾಗಿ ಮೋದಿ ಅವರು ಅಬುಧಾಬಿಯ ಜಾಯೆದ್ ಸ್ಪೋರ್ಟ್ಸ್ ಸ್ಟೇಡಿಯಂಗೆ ಆಗಮಿಸಿದರು. ಈ ವೇಳೆ ಮೋದಿಯವರನ್ನು ಕರಾವಳಿಯ ಪ್ರಸಿದ್ಧ ಕಲೆ ಯಕ್ಷಗಾನ (Yakshagana) ಹಾಗೂ ಭರತನಾಟ್ಯ (Bharatanatya) ಮೊದಲಾದ ವೇಷಗಳ ಮೂಲಕ ವಿಶೇಷವಾಗಿ ಸ್ವಾಗತಿಸಲಾಯಿತು.
ಅಬುದಾಬಿಯ ಜಾಯೆದ್ ಸ್ಪೋರ್ಟ್ಸ್ ಸಿಟಿ ಸ್ಟೇಡಿಯಂ ಮೋದಿ ಮಯವಾಗಿದೆ. ಮೋದಿ ಪರ ಘೋಷಣೆಗಳು ಮುಗಿಲುಮುಟ್ಟಿದವು. ಈ ಕಾರ್ಯಕ್ರಮಕ್ಕೆ ಹಾಜರಾಗಲು ಬರೋಬ್ಬರಿ 65 ಸಾವಿರ ಮಂದಿ ನೋಂದಣಿ ಮಾಡಿಕೊಂಡಿದ್ರು. ಆದ್ರೆ ಪ್ರತಿಕೂಲ ಹವಾಮಾನದ ಕಾರಣ 35 ಸಾವಿರ ಮಂದಿಗೆ ಮಾತ್ರ ಈ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲು ಅವಕಾಶ ನೀಡಲಾಯ್ತು. ಭಾರತೀಯ ಅಭಿಮಾನಿಗಳತ್ತ ಪ್ರಧಾನಿ ಮೋದಿ ಕೈಬೀಸಿ ಸಂತಸ ವ್ಯಕ್ತಪಡಿಸಿದ್ರು. ಇದನ್ನೂ ಓದಿ: ಮೋದಿಯಿಂದ ಬುಧವಾರ UAEಯ ಮೊದಲ ಹಿಂದೂ ದೇಗುಲ ಉದ್ಘಾಟನೆ – 65,000ಕ್ಕೂ ಹೆಚ್ಚು ಗಣ್ಯರ ನೋಂದಣಿ!
ಉಡುಪಿ: ರಾಜ್ಯೋತ್ಸವ, ಪಾರ್ತಿಸುಬ್ಬ ಪ್ರಶಸ್ತಿಗೆ ಭಾಜನರಾಗಿದ್ದ ಹಿರಿಯ ಸಾಹಿತಿ ಅಂಬಾತಯ ಮುದ್ರಾಡಿ (Amba Tanaya Mudradi) ವಿಧಿವಶರಾಗಿದ್ದಾರೆ. ಉಡುಪಿ ಜಿಲ್ಲೆ ಹೆಬ್ರಿ ತಾಲೂಕಿನ ಮುದ್ರಾಡಿಯವರಾದ ಇವರು ಶಿಕ್ಷಕರಾಗಿದ್ದುಕೊಂಡು ಯಕ್ಷಗಾನ (Yakshagana), ನಾಟಕ, ಸಾಹಿತ್ಯ ಹೀಗೆ ಹಲವು ಆಯಾಮಗಳಲ್ಲಿ ಖ್ಯಾತರಾಗಿದ್ದರು.
ಸಾತ್ವಿಕ ಮನೋಭಾವದ ಸಹೃದಯಿ ಅಂಬಾತನಯ ಮುದ್ರಾಡಿ (88) ಮಂಗಳವಾರ ಮುಂಜಾನೆ ಅಗಲಿದ್ದಾರೆ. ಶಿಕ್ಷಕ, ಹರಿದಾಸ, ತಾಳಮದ್ದಲೆ ಅರ್ಥಧಾರಿ, ವೇಷಧಾರಿ, ಸಾಹಿತಿ ಹೀಗೆ ಎಲ್ಲಾ ವಿಭಾಗದಲ್ಲಿ ವೈಶಿಷ್ಟ ಪೂರ್ಣವಾದ ಸಾಧನೆಯನ್ನು ಮಾಡಿದ್ದ ಅವರು, ಸಮಾಜದ ಎಲ್ಲ ಮಂದಿಗೆ ಮನೆಯ ಸದಸ್ಯನಂತೆ ಇದ್ದು ಮಾರ್ಗದರ್ಶನ ಮಾಡಿದ್ದರು. ಸಾರ್ಥಕವಾಗಿ ಬದುಕನ್ನು ಪೂರೈಸಿದ ಅಂಬಾತನಯರದ್ದು ಆದರ್ಶ ಜೀವನ ಎಂದು ಅವರ ಹಿತೈಶಿಗಳ ಮನದಾಳದ ಮಾತು.
ಕಳೆದ ವಾರ ಉಡುಪಿಯಲ್ಲಿ (Udupi) ನಡೆದ ಪ್ರಥಮ ಯಕ್ಷಗಾನ ಸಮ್ಮೇಳನದಲ್ಲಿ ಸಮ್ಮೇಳನಾಧ್ಯಕ್ಷರೊಂದಿಗೆ ಸಂವಾದದಲ್ಲಿ ಪಾಲ್ಗೊಂಡದ್ದು, ಅವರ ಕೊನೆಯ ಕಾರ್ಯಕ್ರಮವಾಗಿತ್ತು. ಈ ಸಂದರ್ಭದಲ್ಲಿ ಯಕ್ಷಗಾನ ಮತ್ತು ಹರಿಕಥೆ ಒಂದು ತೌಲನಿಕ ಅಧ್ಯಯನ ಪುಸ್ತಕವನ್ನು ಪ್ರಕಟಿಸಲಾಗಿತ್ತು. ರಾಜ್ಯೋತ್ಸವ ಪ್ರಶಸ್ತಿ, ಪಾರ್ತಿಸುಬ್ಬ ಪ್ರಶಸ್ತಿ ಮುಂತಾದ ಶ್ರೇಷ್ಠ ಗೌರವಗಳು ಅವರಿಗೆ ಅರ್ಹವಾಗಿ ಪ್ರಾಪ್ತಿಯಾಗಿವೆ. ಉಡುಪಿ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷರಾಗಿಯೂ ಸೇವೆ ಮಾಡಿದ್ದಾರೆ. ಪತ್ನಿ, ಮೂವರು ಪುತ್ರರು, ಐವರು ಪುತ್ರಿಯರನ್ನು ಹಾಗೂ ಅಪಾರ ಶಿಷ್ಯ ವೃಂದವನ್ನು ಅಂಬಾತನಯರು ಅಗಲಿದ್ದಾರೆ. ಇದನ್ನೂ ಓದಿ: 10 ವರ್ಷದ ಫೀಸ್ ಕಟ್ಟೋಕೆ ಶಾಲೆಗಳಿಂದ ಆಫರ್ – ನಯಾ ಪ್ಲ್ಯಾನ್‍ಗೆ ಪೋಷಕರು ಕಂಗಾಲು
ಯಕ್ಷಗಾನ ಕಲಾರಂಗವು ಅವರನ್ನು ಗೌರವಿಸಿದ್ದು, ಸಂಸ್ಥೆಗೆ ಸದಾ ಮಾರ್ಗದರ್ಶನ ನೀಡುತ್ತಾ ಬಂದ ಅಂಬಾತನಯರ ಅಗಲುವಿಕೆಗೆ ಅಧ್ಯಕ್ಷ ಎಂ. ಗಂಗಾಧರ ರಾವ್ ಹಾಗೂ ಕಾರ್ಯದರ್ಶಿ ಮುರಳಿ ಕಡೆಕಾರ್ ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ. ಖ್ಯಾತ ಸಾಹಿತಿ, ಕವಿ, ಹರಿದಾಸ, ತಾಳಮದ್ದಳೆ ಅರ್ಥದಾರಿ, ಕನ್ನಡ ನಾಡು ನುಡಿ ಜನಪದದ ಸಂರಕ್ಷಣೆ ಮತ್ತು ಸಂವರ್ಧನೆಗೆ ಶ್ರೇಷ್ಠ ಕೊಡುಗೆ ನೀಡಿದ, ಕನ್ನಡ ಸಾಹಿತ್ಯಲೋಕದ ಮರೆಯಲಾಗದ ರತ್ನ, ಕನ್ನಡ ಕನ್ಮಣಿ ಅಜಾತಶತ್ರು ಅಂಬಾತನಯ ಮುದ್ರಾಡಿಯವರು ಇಂದು ಅಗಲಿದ್ದಾರೆ. ಅವರ ಬದುಕಿನ ಆದರ್ಶ, ಕ್ರಿಯಾಶೀಲತೆ ಎಲ್ಲರ ಬದುಕಿನಲ್ಲಿ ಸ್ಫೂರ್ತಿ ನೀಡಲಿ ಎಂದು ಉಡುಪಿಯ ಕಲಾ ಪೋಷಕ ಸುಬ್ರಹ್ಮಣ್ಯ ಬಾಸ್ರಿ ಕೆ ಎಸ್ ಶ್ರದ್ಧಾಂಜಲಿ ಸಲ್ಲಿಸಿದರು. ಇದನ್ನೂ ಓದಿ: ಕುತೂಹಲಕ್ಕೆ ಕಾರಣವಾಯ್ತು ಕರಾವಳಿ ಸ್ವಾಮೀಜಿಗಳ ಜೊತೆಗಿನ ನಡ್ಡಾ ಸಭೆ
LIVE TV
[brid partner=56869869 player=32851 video=960834 autoplay=true]