Tag: Yanagundi

  • ಮಾತಾ ಮಾಣಿಕೇಶ್ವರಿ ದರ್ಶನಕ್ಕೆ ಬಂದ ಸಾಧು ಮೇಲೆ ಕಾಲಿನಿಂದ ಒದ್ದು ಹಲ್ಲೆ

    ಮಾತಾ ಮಾಣಿಕೇಶ್ವರಿ ದರ್ಶನಕ್ಕೆ ಬಂದ ಸಾಧು ಮೇಲೆ ಕಾಲಿನಿಂದ ಒದ್ದು ಹಲ್ಲೆ

    ಕಲಬುರಗಿ: ಮಾತಾ ಮಾಣಿಕೇಶ್ವರಿ ಅಮ್ಮನವರ ದರ್ಶನಕ್ಕೆ ತೆರಳಿದ ಸಾಧುವೊಬ್ಬರ ಮೇಲೆ ಆಶ್ರಮದ ಕೆಲವರು ಹಲ್ಲೆ ನಡೆಸಿ, ಕಾಲಿನಿಂದ ಒದ್ದು ಹೊರಹಾಕಿದ್ದಾರೆ ಎನ್ನುವ ಗಂಭೀರ ಆರೋಪ ಕೇಳಿಬಂದಿದೆ.

    ಸೇಡಂ ತಾಲೂಕಿನ ಯಾನಾಗುಂದಿ ಆಶ್ರಮದಲ್ಲಿದ್ದ ಸಾಧುವೊಬ್ಬರು ರವಿವಾರ ರಾತ್ರಿ ಅಮ್ಮನ ಮಂದಿರದಲ್ಲಿ ಧ್ಯಾನ ಮಾಡಬೇಕು ಎಂದು ಕೇಳಿಕೊಂಡಿದ್ದಾರೆ. ಇದಕ್ಕೆ ಆಶ್ರಮದವರು ವಿರೋಧ ವ್ಯಕ್ತಪಡಿಸಿದ್ದು, ದೇವಾಲಯದ ಬಾಗಿಲು ತೆರೆಯಲು ಯತ್ನಿಸಿದಾಗ ಆತನನ್ನು ಅಮಾನವೀಯವಾಗಿ ಎಳೆದೊಯ್ದು ಹೊರಹಾಕಿದ್ದಾರೆ. ಅಲ್ಲದೇ ಕೆಲವರು ಕಾಲಿನಿಂದ ಒದ್ದು ಹಲ್ಲೆ ನಡೆಸಿದ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಈ ವಿಚಾರ ತಿಳಿದು ಸ್ಥಳಕ್ಕಾಗಮಿಸಿದ ಪೊಲೀಸರು ಸಾಧುವನ್ನು ಠಾಣೆಗೆ ಕರೆದೊಯ್ದಿದ್ದಾರೆ. ಇದನ್ನೂ ಓದಿ: ಚೀನಾ ಗಡಿಯಲ್ಲಿ ಕಣ್ಗಾವಲು ಹೆಚ್ಚಿಸಿದ ಭಾರತ – ಶಕ್ತಿಶಾಲಿ ಹೆರಾನ್ ಡ್ರೋನ್ ನಿಯೋಜನೆ

    ಮಾತಾ ಮಾಣಿಕೇಶ್ವರಿ ಅಮ್ಮನವರು ಜೀವಂತವಾಗಿದ್ದಾಗಲೂ ಸಹ ಅಮ್ಮನವರ ದರ್ಶನಕ್ಕೆ ಅಲ್ಲಿನ ಟ್ರಸ್ಟ್ ನಿರ್ಬಂಧ ಹೇರಿತ್ತು. ಮಾಣಿಕೇಶ್ವರಿ ಅಮ್ಮ ಲಿಂಗೈಕ್ಯರಾದ ನಂತರವೂ ಸಹ ಅಮ್ಮನವರ ಗರ್ಭಗುಡಿ ದರ್ಶನಕ್ಕೆ ಅವಕಾಶ ಕಲ್ಪಿಸದ ಟ್ರಸ್ಟ್​ ಸದಸ್ಯರ ನಡೆಗೆ ಭಕ್ತರು, ಜನರು ರೋಸಿ ಹೋಗಿದ್ದಾರೆ. ಇದೀಗ ಹಲವು ವರ್ಷಗಳಿಂದ ಸೇವೆ ಮಾಡಿಕೊಂಡಿದ್ದ ಸಾಧುವಿನ ಮೇಲೆ ಹಲ್ಲೆ ನಡೆಸಿದ ಟ್ರಸ್ಟ್​ ಸಿಬ್ಬಂದಿ ನಡೆಗೆ ಸಾಮಾಜಿಕ ಜಾಲತಾಣದಲ್ಲಿ ಭಕ್ತರಿಂದ ಆಕ್ರೋಶ ವ್ಯಕ್ತವಾಗುತ್ತಿದೆ.

  • ಹೈ.ಕ ಭಾಗದ ನಡೆದಾಡುವ ದೇವರು ಮಾತಾ ಮಾಣಿಕೇಶ್ವರಿ ಲಿಂಗೈಕ್ಯ

    ಹೈ.ಕ ಭಾಗದ ನಡೆದಾಡುವ ದೇವರು ಮಾತಾ ಮಾಣಿಕೇಶ್ವರಿ ಲಿಂಗೈಕ್ಯ

    ಕಲಬುರಗಿ: ಹೈದರಾಬಾದ್ ಕರ್ನಾಟಕ ಭಾಗದ ನಡೆದಾಡುವ ದೇವರು, ಯಾನಾಗುಂದಿಯ ಮಾತಾ ಮಾಣಿಕೇಶ್ವರಿ ಸಂಸ್ಥಾನದ ಪೀಠಾಧಿಪತಿ ಮಾತಾ ಮಾಣಿಕೇಶ್ವರಿ (87) ಲಿಂಗೈಕ್ಯರಾಗಿದ್ದಾರೆ.

    ಮಾತಾ ಮಾಣಿಕೇಶ್ವರಿ ಅಮ್ಮನವರು ಕೆಲವು ದಿನಗಳಿಂದ ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದರು. ಹೀಗಾಗಿ ಜಿಲ್ಲೆಯ ಸೇಡಂ ತಾಲೂಕಿನ ಯಾನಾಗುಂದಿಯ ಮಠದಲ್ಲಿ ಚಿಕಿತ್ಸೆ ಕೊಡಲಾಗುತ್ತಿತ್ತು. ಆದರೆ ಚಿಕಿತ್ಸೆ ಫಲಿಸದೆ ಇಂದು ಲಿಂಗೈಕ್ಯರಾಗಿದ್ದಾರೆ.

    ಮಾತಾ ಮಾಣಿಕೇಶ್ವರಿ ಅಮ್ಮನವರು ಕರ್ನಾಟಕ, ಆಂಧ್ರ ಪ್ರದೇಶ, ಮಹಾರಾಷ್ಟ್ರ ಸೇರಿದಂತೆ ವಿವಿಧ ರಾಜ್ಯಗಳಲ್ಲಿ ಲಕ್ಷಾಂತರ ಭಕ್ತರನ್ನು ಹೊಂದಿದ್ದರು. ಅವರು ಶಿವರಾತ್ರಿಯಂದು ಭಕ್ತರಿಗೆ ಕೊನೆಯದಾಗಿ ದರ್ಶನ ಕೊಟ್ಟಿದ್ದರು.

    ಅಮ್ಮನವರ ನಿಧನ ಸುದ್ದಿ ತಿಳಿಯುತ್ತಿದ್ದಂತೆ ದೇವಸ್ಥಾನಕ್ಕೆ ಭಕ್ತರು ದೌಡಾಯಿಸುತ್ತಿದ್ದಾರೆ. ಹೀಗಾಗಿ ದೇವಸ್ಥಾನದ ಸುತ್ತಲೂ ಪೊಲೀಸ್  ಬಂದೋಬಸ್ತ್ ಕಲ್ಪಿಸಿದ್ದಾರೆ.