Tag: Yash Shivakumar

  • ‘ಗಣ’ ಚಿತ್ರದ ಹಾಡಿನಲ್ಲಿ ಪ್ರಜ್ವಲ್ ರೊಮ್ಯಾನ್ಸ್

    ‘ಗಣ’ ಚಿತ್ರದ ಹಾಡಿನಲ್ಲಿ ಪ್ರಜ್ವಲ್ ರೊಮ್ಯಾನ್ಸ್

    ಡೈನಾಮಿಕ್ ಪ್ರಿನ್ಸ್ ಪ್ರಜ್ವಲ್ ದೇವರಾಜ್ (Prajwal Devaraj) ನಾಯಕರಾಗಿ ನಟಿಸಿರುವ ‘ಗಣ’ (Gana) ಚಿತ್ರಕ್ಕಾಗಿ ಪ್ರಮೋದ್ ಮರವಂತೆ ಅವರು ಬರೆದಿರುವ ‘she is in love’ ಎಂಬ ರೊಮ್ಯಾಂಟಿಕ್ ಸಾಂಗ್ ಇತ್ತೀಚೆಗೆ ಬಿಡುಗಡೆಯಾಗಿದೆ‌. ಅನೂಪ್ ಸೀಳಿನ್ ಸಂಗೀತ ನೀಡಿರುವ ಈ ಹಾಡನ್ನು ವಿಜಯ ಪ್ರಕಾಶ್ ಇಂಪಾಗಿ ಹಾಡಿದ್ದಾರೆ.

    ಮುರಳಿ ಮಾಸ್ಟರ್ ನೃತ್ಯ ಸಂಯೋಜಿಸಿರುವ ಈ ಹಾಡಿಗೆ ಪ್ರಜ್ವಲ್ ದೇವರಾಜ್ ಹಾಗೂ ಯಶ ಶಿವಕುಮಾರ್ (Yash Shivakumar) ಹೆಜ್ಜೆ ಹಾಕಿದ್ದಾರೆ. ಈ ಸುಮಧುರ ಹಾಡಿಗೆ ಅಭಿಮಾನಿಗಳು ಫಿದಾ ಆಗಿದ್ದಾರೆ. ಚಿತ್ರ ಬಿಡುಗಡೆಗೆ ಸಿದ್ದವಾಗಿದ್ದು ಸದ್ಯದಲ್ಲೇ ತೆರೆಗೆ ಬರಲಿದೆ.

    ಚೆರಿ ಕ್ರಿಯೇಷನ್ಸ್ ಲಾಂಛನದಲ್ಲಿ ಪಾರ್ಥು ಅವರು ನಿರ್ಮಿಸಿರುವ ಈ ಚಿತ್ರವನ್ನು ಹರಿಪ್ರಸಾದ್ ಜಕ್ಕ (Hariprasad Jakka) ನಿರ್ದೇಶಿಸಿದ್ದಾರೆ. ಜೈ ಆನಂದ್ ಛಾಯಾಗ್ರಹಣ, ಅನೂಪ್ ಸೀಳಿನ್ ಸಂಗೀತ ನಿರ್ದೇಶನ, ಹರೀಶ್ ಕೊಮ್ಮೆ ಸಂಕಲನ , ಸತೀಶ್ ಎ ಕಲಾ ನಿರ್ದೇಶನ ಹಾಗೂ ಡಿ.ಜೆ ಕ್ರಿಯೇಟಿವ್ ಪ್ರೊಡ್ಯೂಸರ್ ಆಗಿ ಕಾರ್ಯನಿರ್ವಹಿಸಿದ್ದಾರೆ.  ಚಿಕ್ಕಬಳ್ಳಾಪುರ ಶ್ರೀನಿವಾಸ್ ಈ ಚಿತ್ರದ ಕಾರ್ಯಕಾರಿ ನಿರ್ಮಾಪಕರು.

     

    ಪ್ರಜ್ವಲ್ ದೇವರಾಜ್, ಯಶಾ ಶಿವಕುಮಾರ್, ವೇದಿಕಾ ಕುಮಾರ್, ಕೃಷಿ ತಾಪಂಡ, ವಿಶಾಲ್ ಹೆಗಡೆ, ರವಿ ಕಾಳೆ, ಸಂಪತ್ ರಾಜ್, ಶಿವರಾಜ್ ಕೆ.ಆರ್ ಪೇಟೆ, ರಮೇಶ್ ಭಟ್ ಮುಂತಾದವರು ಗಣ ಚಿತ್ರದ ತಾರಾಬಳಗದಲ್ಲಿದ್ದಾರೆ.

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ‘ಗಣ’ ಸಿನಿಮಾದ ಶೂಟಿಂಗ್ ಮುಗಿಸಿದ ಪ್ರಜ್ವಲ್ ದೇವರಾಜ್

    ‘ಗಣ’ ಸಿನಿಮಾದ ಶೂಟಿಂಗ್ ಮುಗಿಸಿದ ಪ್ರಜ್ವಲ್ ದೇವರಾಜ್

    ಡೈನಾಮಿಕ್ ಪ್ರಿನ್ಸ್ ದೇವರಾಜ್ ಅಭಿನಯದ “ಗಣ” ಚಿತ್ರದ ಚಿತ್ರೀಕರಣ ಮುಕ್ತಾಯವಾಗಿದೆ. ಬೆಂಗಳೂರು ಹಾಗೂ ಮೈಸೂರಿನಲ್ಲಿ 80ದಿನಗಳ ಚಿತ್ರೀಕರಣ ನಡೆದಿದೆ. ನವೆಂಬರ್ ಹತ್ತರಿಂದ ಚಿತ್ರೀಕರಣ ನಂತರದ ಚಟುವಟಿಕೆಗಳು ಆರಂಭವಾಗಲಿದೆ. ಚೆರಿ ಕ್ರಿಯೇಷನ್ಸ್ ಲಾಂಛನದಲ್ಲಿ ಪಾರ್ಥು ಅವರು ನಿರ್ಮಿಸುತ್ತಿರುವ ಈ ಚಿತ್ರವನ್ನು ಹರಿಪ್ರಸಾದ್ ಜಕ್ಕ ನಿರ್ದೇಶಿಸುತ್ತಿದ್ದಾರೆ.

    ವಿಭಿನ್ನ ಕಥಾಹಂದರ ಹೊಂದಿರುವ ಈ ಚಿತ್ರದಲ್ಲಿ ಪ್ರಜ್ವಲ್ ದೇವರಾಜ್ ಹೊಸ ಲುಕ್ ನಲ್ಲಿ ಕಾಣಿಸಿಕೊಂಡಿದ್ದಾರೆ. ಯಶ ಶಿವಕುಮಾರ್ ಈ ಚಿತ್ರದ ನಾಯಕಿ. ವಿಶಾಲ್ ಹೆಗ್ಡೆ, ವೇದಿಕಾ ಕುಮಾರ್, ಶಿವರಾಜ್ ಕೆ.ಆರ್ ಪೇಟೆ, ಕೃಷಿ ತಾಪಂಡ, ಸಂಪತ್ ರಾಜ್, ರವಿ ಕಾಳೆ, ರಮೇಶ್ ಭಟ್, ಉಮೇಶ್, ಸಿದ್ಲಿಂಗು ಶ್ರೀಧರ್, ಬಾಬು ಹಿರಣ್ಣಯ್ಯ ಹಾಗೂ ಮಾಸ್ಟರ್ ರಘುನಂದನ್ “ಗಣ”ದಲ್ಲಿ ಅಭಿನಯಿಸಿದ್ದಾರೆ. ಇದನ್ನೂ ಓದಿ: ರಾಹುಲ್‌ ಏಕಾಂಗಿ ಹೋರಾಟ ವ್ಯರ್ಥ, ಶಕೀಬ್‌ ಆಲ್‌ರೌಂಡರ್‌ ಆಟ – ಬಾಂಗ್ಲಾದೇಶಕ್ಕೆ 1 ವಿಕೆಟ್‌ ರೋಚಕ ಜಯ

    ಅನೂಪ್ ಸಂಗೀತ ಸಂಯೋಜಿಸಿರುವ ನಾಲ್ಕು ಸುಮಧುರ ಹಾಡುಗಳು ಈ ಚಿತ್ರದಲ್ಲಿದೆ. ನಾಲ್ಕು ಮೈನವಿರೇಳಿಸುವ ಸಾಹಸ ದೃಶ್ಯಗಳು ಚಿತ್ರದಲ್ಲಿದ್ದು, ಅರ್ಜುನ್, ಮಾಸ್ ಮಾದ ಹಾಗೂ ಥ್ರಿಲ್ಲರ್ ಮಂಜು ಸಾಹಸ ನಿರ್ದೇಶನ ಮಾಡಿದ್ದಾರೆ. ಜೈ ಆನಂದ್ ಛಾಯಾಗ್ರಹಣ, ಹರೀಶ್ ಕೊಮ್ಮೆ ಸಂಕಲನ ಹಾಗೂ ಮುರಳಿ ಅವರ ನೃತ್ಯ ನಿರ್ದೇಶನ ” ಗಣ” ಚಿತ್ರಕ್ಕಿದೆ. ಶ್ರೀನಿವಾಸ್ ಈ ಚಿತ್ರದ ಕಾರ್ಯಕಾರಿ ನಿರ್ಮಾಪಕರು.

    Live Tv
    [brid partner=56869869 player=32851 video=960834 autoplay=true]