Tag: yashaswini

  • ನಟ ಪ್ರಥಮ್‌ಗೆ ಜೀವಬೆದರಿಕೆ ಕೇಸ್‌ – ದೊಡ್ಡಬಳ್ಳಾಪುರ ಗ್ರಾಮಾಂತರ ಠಾಣೆಯಲ್ಲಿ ಇಬ್ಬರ ವಿರುದ್ಧ FIR

    ನಟ ಪ್ರಥಮ್‌ಗೆ ಜೀವಬೆದರಿಕೆ ಕೇಸ್‌ – ದೊಡ್ಡಬಳ್ಳಾಪುರ ಗ್ರಾಮಾಂತರ ಠಾಣೆಯಲ್ಲಿ ಇಬ್ಬರ ವಿರುದ್ಧ FIR

    ದೊಡ್ಡಬಳ್ಳಾಪುರ: ನಟ ಪ್ರಥಮ್‌ಗೆ (Actor Pratham) ಜೀವ ಬೆದರಿಕೆ ಆರೋಪ ಪ್ರಕರಣಕ್ಕೆ ಸಂಬಂಧಿಸಿದಂತೆ ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸ್ (Doddaballapura Rural Police) ಠಾಣೆಯಲ್ಲಿ ದೂರು ದಾಖಲಾಗಿದೆ. ಎ1 ಆರೋಪಿಯಾಗಿ ಬೇಕರಿ ರಘು ಹಾಗೂ ಎ2 ಆರೋಪಿಯಾಗಿ ಯಶಸ್ವಿನಿ ಹಾಗೂ ಇತರರ ವಿರುದ್ದ ಎಫ್‌ಐಆರ್‌ ದಾಖಲಾಗಿದೆ.

    ದೊಡ್ಡಬಳ್ಳಾಪುರ ದೇವಸ್ಥಾನದ ಬಳಿ ಆಗಿದ್ದೇನು?
    ಜುಲೈ 22ರ ಮಂಗಳವಾರ ದೊಡ್ಡಬಳ್ಳಾಪುರ ತಾಲ್ಲೂಕಿನ ರಾಮಯ್ಯನಪಾಳ್ಯ ಸಮೀಪವಿರುವ ಶ್ರೀ ಆದಿಶಕ್ತಿ ರೇಣುಕಾ ಯಲ್ಲಮ್ಮ ದೇವಸ್ಥಾನದಲ್ಲಿ ಪೂಜೆಗೆಂದು ಬಿಗ್ ಬಾಸ್ ವಿನ್ನರ್ ನಟ ಪ್ರಥಮ್ ಬಂದಿದ್ದರು. ಈ ವೇಳೆ ಪ್ರಥಮ್ ರನ್ನ ಅಡ್ಡಗಟ್ಟಿ ಮಾರಕಾಸ್ತ್ರಗಳಿಂದ ಬೆದರಿಸಿ ಜೀವ ಬೆದರಿಕೆ ಹಾಕಿದ್ದರು ಎಂಬ ಆರೋಪ ಕೇಳಿಬಂದಿತ್ತು. ಈ ಘಟನೆ ನಡೆದು ಹಲವು ದಿನಗಳ ನಂತರ ಖುದ್ದು, ಪ್ರಥಮ್ ನೇರವಾಗಿ ಬೆಂಗಳೂರು ಗ್ರಾಮಾಂತರ ಎಸ್ಪಿ ಸಿ.ಕೆ ಬಾಬಾ ಅವರನ್ನು ಭೇಟಿಯಾಗಿ ದೂರು ನೀಡಿದ್ದರು. ಇದನ್ನೂ ಓದಿ: ದಾವಣಗೆರೆ | ಕಡಿಮೆ ಬೆಲೆಗೆ 250 ಗ್ರಾಂ ಚಿನ್ನದ ನಾಣ್ಯ ನೀಡುವುದಾಗಿ 5 ಲಕ್ಷ ವಂಚಿಸಿ ಪರಾರಿ

    ಪ್ರಥಮ್ ದೂರಿನ ಮೇರೆಗೆ ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಸದ್ಯ ಪ್ರಕರಣ ಕೈಗೆತ್ತಿಕೊಂಡ ಪೊಲೀಸರು ತನಿಖೆ ಮುಂದುವರಿಸಿದ್ದಾರೆ. ಜೀವ ಬೆದರಿಕೆ ಹಾಕಲಾಗಿದ್ದ ಆರೋಪಿಗಳ ಪತ್ತೆಗೆ ಪೊಲೀಸರು ಬಲೆ ಬೀಸಿದ್ದಾರೆ. ಇದನ್ನೂ ಓದಿ: ಪಹಲ್ಗಾಮ್ ದಾಳಿ ಹೊಣೆಯನ್ನ ಟಿಆರ್‌ಎಫ್ 2 ಬಾರಿ ಹೊತ್ತುಕೊಂಡಿದೆ: ವಿಶ್ವಸಂಸ್ಥೆ

    ಪ್ರಥಮ್ ನೀಡಿದ ದೂರಿನಲ್ಲೇನಿದೆ.?
    ಜುಲೈ 22 ರಂದು ಮಹೇಶ್ ಎಂಬ ಸಿನಿಮಾ ಪ್ರೊಮೋಟರ್ ಅವರು ನನಗೆ ದೊಡ್ಡ ಬಳ್ಳಾಪುರದ ಯಲ್ಲಮ್ಮ ದೇವಸ್ಥಾನದ ಪೂಜೆಗೆ ಕರೆದಿದ್ದರು. ಪೂಜೆ ಮುಗಿಸಿ ಮಧ್ಯಾಹ್ನ ಸುಮಾರು 3:50 ಗಂಟೆಗೆ ನಾನು ವಾಪಸ್‌ ಬರುವ ವೇಳೆ ಯಶಸ್ವಿನಿ ಮತ್ತು ಬೇಕರಿ ರಘು ಹಾಗೂ ಒಂದಷ್ಟು ಅಪರಿಚಿತರು ನನ್ನ ಕಾರನ್ನು ಸುತ್ತುವರೆದು ಅಜ್ಞಾತ ಸ್ಥಳಕ್ಕೆ (ಗ್ರಾಮದ ಹೆಸರು ತಿಳಿದಿರುವುದಿಲ್ಲ. ಸ್ಥಳವನ್ನು ಗುರ್ತಿಸುತ್ತೇನೆ) ಕರೆದೊಯ್ದಿದ್ದರು. ದರ್ಶನ್ ಅವರನ್ನ ಕುರಿತು ನನ್ನ ಬಾಸ್ ಬಗ್ಗೆ, ಮಾತನಾಡಿದ್ದೀಯ ಅಂತ ಅವಾಚ್ಯ ಶಬ್ದಗಳಿಂದ ಬೈಯ್ದು, ಅವರ ಬಳಿ ಇದ್ದ ಡ್ರ್ಯಾಗರ್‌ ಮತ್ತು ಚಾಕು ತೋರಿಸಿ ಚುಚ್ಚಲು ಮುಂದಾಗಿ ಭಯಪಡಿಸಿರುತ್ತಾರೆ. ಇವರು ನನ್ನ ಬಳಿ ಗಲಾಟೆ ಮಾಡುವಾಗ, ಜೈಲಿನಲಿ.. ದರ್ಶನ್ ಜೊತೆ ಇದ್ದ ಬ್ಯಾರಕ್ ಪೋಟೋವನ್ನ ತೋರಿಸಿರುತ್ತಾರೆ. ಆ ನಂತರ ಅಲ್ಲಿಂದ ಬಹಳ ಉಪಾಯದಿಂದ ಪ್ರಾಣ ಉಳಿಸಿಕೊಂಡು ಬಂದಿದ್ದೆ ದೊಡ್ಡ ವಿಚಾರ. ಈ ವಿಚಾರವನ್ನ ನನ್ನ ಜೊತೆ ಇದ್ದ ನನ್ನ ಸ್ನೇಹಿತರಾದ ಮಹೇಶ್, ಪ್ರಮೋದ್ ಮತ್ತು ಚಾಲಕ ಪ್ರಕಾಶ್ ಇವರು ಖುದ್ದು ಮೇಲ್ಕಂಡ ವಿಚಾರಕ್ಕೆ ಸಾಕ್ಷಿಯಾಗಿರುತ್ತಾರೆ. ನನಗೆ ಜೀವ ಭಯವಿರುವುದರಿಂದ ರಕ್ಷಣೆ ನೀಡಿ ಅವರ ವಿರುದ್ಧ ಕ್ರಮ ಜರುಗಿಸಬೇಕು ಎಂದು ದೂರಿನಲ್ಲಿ ತಿಳಿಸಿದ್ದಾರೆ.

    ದರ್ಶನ್ ಫ್ಯಾನ್ ಪೇಜ್‌ಗಳ ವಿರುದ್ಧ ಕ್ರಮಕ್ಕೆ ಆಗ್ರಹ.
    ಜುಲೈ 28 ರಿಂದ ಇಲ್ಲಿಯವರೆಗೂ ದರ್ಶನ್ ಅವರ ಅಧಿಕೃತ ಫ್ಯಾನ್ ಪೇಜ್‌ಗಳಾದ ಡಿ ಡೈನಾಸ್ಟಿ, ಡಿ ಕಿಂಗ್ ಡಮ್, ಡಿ ಯೂನಿವರ್ಸ್ ಮತ್ತು ಡೆವಿಲ್ ಕಿಂಗ್ ಡಮ್ ಜೊತೆಗೆ 500ಕ್ಕೂ ಹೆಚ್ಚು ಪೇಜ್‌ಗಳಿಂದ ನನ್ನ ವೈಯಕ್ತಿಕ ತೇಜೋವಧೆಗೆ ಇಳಿದಿರುತ್ತಾರೆ, ಆದ್ದರಿಂದ ಇವರ ವಿರುದ್ಧ ಕಾನೂನು ರೀತಿ ಕ್ರಮ ಜರುಗಿಸಬೇಕೆಂದು ದೂರು ನೀಡಿದ್ದಾರೆ‌. ಇದನ್ನೂ ಓದಿ: ಅನುಭವ ಮಂಟಪ ಕಾಮಗಾರಿ ಒಂದು ವರ್ಷದಲ್ಲಿ ಮುಗಿಸಲು ಸಿಎಂ ಸೂಚನೆ – ಈಶ್ವರ್ ಖಂಡ್ರೆ

    ಯಾವ ಯಾವ ಸೆಕ್ಷನ್ ನಡಿ ದೂರು‌?
    ಭಾರತೀಯ ನ್ಯಾಯ ಸಂಹಿತೆ ಸೆಕ್ಷನ್‌ (U/s-126(2) (ತಪ್ಪಾದ ಸಂಯಮ), 3(5), 351 (3), 352 (ಶಾಂತಿಭಂಗ ಅಪರಾಧಕ್ಕೆ ಪ್ರಚೋದನೆ) ಅಡಿಯಲ್ಲಿ ಪ್ರಕರಣ ದಾಖಲಾಗಿದೆ. ಪ್ರಥಮ್ ದೂರಿನನ್ವಯ ಪ್ರಕರಣ ದಾಖಲಿಸಿಕೊಂಡ ಪೊಲೀಸರಿಂದ ಇಂದಿನಿಂದ ತನಿಖೆ ಆರಂಭಿಸಿದ್ದಾರೆ.

  • ಕೆಪಿಸಿಸಿ ಕಚೇರಿಯಲ್ಲಿ ಇಣುಕಿದ ರೌಡಿಶೀಟರ್ – ಇಸ್ತಿಯಾಕ್ ಜೊತೆ ವೇಣುಗೋಪಾಲ್ ಚರ್ಚೆ

    ಕೆಪಿಸಿಸಿ ಕಚೇರಿಯಲ್ಲಿ ಇಣುಕಿದ ರೌಡಿಶೀಟರ್ – ಇಸ್ತಿಯಾಕ್ ಜೊತೆ ವೇಣುಗೋಪಾಲ್ ಚರ್ಚೆ

    – ಉಪಚುನಾವಣೆಗಾಗಿ ರೌಡಿಶೀಟರ್ ಮೊರೆ ಹೋಯ್ತಾ ಕಾಂಗ್ರೆಸ್?

    ಬೆಂಗಳೂರು: ನಗರ ಪೊಲೀಸ್ ಆಯುಕ್ತ ಭಾಸ್ಕರ್ ರಾವ್ ಅವರಿಗೆ ರೌಡಿಶೀಟರ್ ಯಶಸ್ವಿನಿ ಸನ್ಮಾನ ಮಾಡಿದ್ರೆ, ಇತ್ತ ಕಾಂಗ್ರೆಸ್ ಕಚೇರಿಯಲ್ಲಿ ರೌಡಿಶೀಟರ್ ಕಾಣಿಸಿಕೊಂಡಿದ್ದಾನೆ.

    ಹೌದು. ಐಎಂಎ ಪ್ರಕರಣದಲ್ಲಿಯೂ ಆರೋಪಿಯಾಗಿರುವ ರೌಡಿ ಶೀಟರ್ ಇಸ್ತಿಯಾಕ್ ಪೈಲ್ವಾನ್ ಇಂದು ಕಾಂಗ್ರೆಸ್ ರಾಜ್ಯ ಉಸ್ತುವಾರಿ ಕೆ.ಸಿ ವೇಣುಗೋಪಾಲ್ ಭೇಟಿ ಮಾಡಿದ್ದಾನೆ. ಅಲ್ಲದೆ ಕೆಲ ಹೊತ್ತು ಮಾತುಕತೆ ಕೂಡ ನಡೆಸಿದ್ದಾನೆ. ಈ ಮೂಲಕ ಕಾಂಗ್ರೆಸ್ ನಾಯಕರು ಶಿವಾಜಿನಗರ ಉಪಚುನಾವಣೆ ಕುರಿತು ಚರ್ಚೆಗೆ ಇಸ್ತಿಯಾಕ್ ಕರೆಸಿಕೊಂಡ್ರಾ ಅನ್ನೋ ಅನುಮಾನ ಮೂಡಿದೆ.

    ಯಾರು ಈ ಇಸ್ತಿಯಾಕ್?
    ಇಸ್ತಿಯಾಕ್ ಪೈಲ್ವಾನ್ ವಿರುದ್ಧ ಕೊಲೆ, ಬೆದರಿಕೆ, ಕೊಲೆಯತ್ನ ಸೇರಿ ಹಲವು ಗಂಭೀರ ಪ್ರಕರಣಗಳು ದಾಖಲಾಗಿವೆ. ಈತನ ವಿರುದ್ಧ ಇತ್ತೀಚೆಗೆ ಗಲಾಟೆ ಕೇಸ್ ಕೂಡ ದಾಖಲಾಗಿದೆ. ಐಎಂಎ ಕೇಸ್ ನಲ್ಲಿ ಕಿಕ್ ಬ್ಯಾಕ್ ಪಡೆದ ಆರೋಪ ಈತನ ಮೇಲಿದ್ದು, ಜೈಲಿಗೆ ಹೋಗಿ ಜಾಮೀನಿನ ಮೇಲೆ ಬಿಡುಗಡೆಯಾಗಿದ್ದಾನೆ. ಇಸ್ತಿಯಾಕ್ ಪತ್ನಿ ಫರೀದಾ ಇಸ್ತಿಯಾಕ್ ಹಾಲಿ ಕಾರ್ಪೊರೇಟರ್ ಆಗಿದ್ದು, ಇಸ್ತಿಯಾಕ್ ಸ್ಥಳೀಯ ಕಾಂಗ್ರೆಸ್ ಮುಖಂಡನಾಗಿದ್ದಾನೆ.

    ಕಮಿಷನರ್‍ಗೆ ಸನ್ಮಾನ:
    ಇತ್ತ ಮೀಟರ್ ಬಡ್ಡಿ ದುಡ್ಡಿಗೆ ಅಮಾಯಕರ ಪ್ರಾಣ ತೆಗೆದಿದ್ದು ಅಲ್ಲದೆ ಹಣ ಕೊಡಲಿಲ್ಲ ಅಂದರೆ ಚಪ್ಪಲಿ ಕಾಲಿನಲ್ಲೇ ಒದೀತಿದ್ದಾಕೆ ಇದೀಗ ಸಾಮಾಜಿಕ ಕಾರ್ಯಕರ್ತೆ ವೇಷ ಹಾಕಿ ಈಗ ಕಮಿಷನರ್ ಅವರಿಗೇ ಸನ್ಮಾನ ಮಾಡಿರುವುದು ಬೆಳಕಿಗೆ ಬಂದಿದೆ. ರೌಡಿ ಯಶಸ್ವಿನಿ ಬೆಂಗಳೂರು ಪೊಲೀಸ್ ಆಯುಕ್ತ ಭಾಸ್ಕರ್ ರಾವ್‍ಗೆ ಸನ್ಮಾನ ಮಾಡಿದ್ದಾರೆ. ಶ್ರೀರಾಮಸೇನೆಯ ಮುತಾಲಿಕ್ ಜೊತೆ ನಿಂತು ಭಾಸ್ಕರ್ ರಾವ್ ಅವರಿಗೆ ಶಾಲು ಹೊದಿಸಿ, ಗಂಧದ ಹಾರ ಹಾಕಿದ್ದಾರೆ. ಯಶಶ್ವಿನಿ ಮತ್ತು ಈಕೆಯ ಪತಿ ದಡಿಯಾ ಮಹೇಶ್ ಅವರ ಸನ್ಮಾನವನ್ನು ನಗುಮೊಗದಿಂದಲೇ ಭಾಸ್ಕರ್ ರಾವ್ ಸ್ವೀಕರಿಸಿದ್ದಾರೆ.

    ಸದ್ಯ ಶ್ರೀ ರಾಮಸೇನೆಯಲ್ಲಿ ಗುರುತಿಸಿಕೊಂಡಿರುವ ಯಶಸ್ವಿನಿ, ಈಗ ಕಮಿಷನರ್ ಗೆ ಸನ್ಮಾನ ಮಾಡಿದ ಫೊಟೊಗಳು ವೈರಲ್ ಆಗುತ್ತಿವೆ. ರೌಡಿಗಳಿಂದ ಸನ್ಮಾನ ಮಾಡಿಸಿಕೊಂಡ ಕಮೀಷನರ್ ಭಾಸ್ಕರ್ ರಾವ್ ನಡೆಗೆ ಆಕ್ರೋಶ ವ್ಯಕ್ತವಾಗಿದೆ.

  • ಪೊಲೀಸ್ ಕಮಿಷನರ್‌ಗೆ ರೌಡಿ ಯಶಸ್ವಿನಿಯಿಂದ ಸನ್ಮಾನ

    ಪೊಲೀಸ್ ಕಮಿಷನರ್‌ಗೆ ರೌಡಿ ಯಶಸ್ವಿನಿಯಿಂದ ಸನ್ಮಾನ

    ಬೆಂಗಳೂರು: ಮೀಟರ್ ಬಡ್ಡಿ ದುಡ್ಡಿಗೆ ಅಮಾಯಕರ ಪ್ರಾಣ ತೆಗೆದಿದ್ದು, ಅಲ್ಲದೆ ಹಣ ಕೊಡಲಿಲ್ಲ ಅಂದರೆ ಚಪ್ಪಲಿ ಕಾಲಿನಲ್ಲೇ ಒದೀತಿದ್ದಾಕೆ ಇದೀಗ ಸಾಮಾಜಿಕ ಕಾರ್ಯಕರ್ತೆ ವೇಷ ಹಾಕಿ ಕಮಿಷನರ್ ಅವರಿಗೇ ಸನ್ಮಾನ ಮಾಡಿರುವುದು ಬೆಳಕಿಗೆ ಬಂದಿದೆ.

    ಹೌದು, ರೌಡಿ ಯಶಸ್ವಿನಿ ಬೆಂಗಳೂರು ಪೊಲೀಸ್ ಕಮಿಷನರ್‌ ಭಾಸ್ಕರ್ ರಾವ್‍ಗೆ ಸನ್ಮಾನ ಮಾಡಿದ್ದಾರೆ. ಶ್ರೀರಾಮಸೇನೆಯ ಮುತಾಲಿಕ್ ಜೊತೆ ನಿಂತು ಭಾಸ್ಕರ್ ರಾವ್ ಅವರಿಗೆ ಶಾಲು ಹೊದಿಸಿ, ಗಂಧದ ಹಾರ ಹಾಕಿದ್ದಾರೆ. ಯಶಸ್ವಿನಿ ಮತ್ತು ಈಕೆಯ ಪತಿ ದಡಿಯಾ ಮಹೇಶ್ ಅವರ ಸನ್ಮಾನವನ್ನು ನಗುಮೊಗದಿಂದಲೇ ಭಾಸ್ಕರ್ ರಾವ್ ಸ್ವೀಕರಿಸಿದ್ದಾರೆ.

    ಅಂದಹಾಗೆ, ನಿನ್ ಹೆಂಡತಿಯದ್ದು ಜಾಸ್ತಿ ಆಯ್ತು, ಬುದ್ಧಿ ಕಲಿಸೋಕೆ ಆಗಲ್ವ ಅವಳಿಗೆ ಎಂದು ಸಿಸಿಬಿ ಡಿಸಿಪಿಯಾಗಿದ್ದ ಗಿರೀಶ್ ಈ ಹಿಂದೆ ಅವಾಜ್ ಹಾಕಿದ್ದರು. ಈ ವೇಳೆ, ನನ್ ಮಾತು ಕೇಳಲ್ಲ ಸರ್ ಅವಳು, ನೀವೇ ಬುದ್ಧಿ ಕಲಿಸಿ ಅಂತ ರೌಡಿ ದಡಿಯಾ ಮಹೇಶ್ ಹೇಳಿದ್ದನು. ಅಂದು ಗಢ ಗಢ ನಡುಗಿದ್ದ ರೌಡಿಶೀಟರ್‍ಗಳು ಇಂದು ಪೊಲೀಸರಿಗೆ ಫುಲ್ ಕ್ಲೋಸ್ ಆಗಿದ್ದಾರೆ.

    ಅಲೋಕ್ ಕುಮಾರ್, ಗಿರೀಶ್ ರಂತಹ ಅಧಿಕಾರಿಗಳು ಎತ್ತಂಗಡಿಯಾಗಿದ್ದೇ ತಡ, ಕಮಿಷನರ್‌ ಗೆ ಸನ್ಮಾನ ಮಾಡೋವಷ್ಟು ಬೆಳೆದು ಬಿಟ್ಟಿದ್ದಾರೆ. ಸದ್ಯ ಶ್ರೀ ರಾಮಸೇನೆಯಲ್ಲಿ ಗುರುತಿಸಿಕೊಂಡಿರುವ ಯಶಸ್ವಿನಿ, ಈಗ ಕಮಿಷನರ್ ಗೆ ಸನ್ಮಾನ ಮಾಡಿದ ಫೊಟೊಗಳು ವೈರಲ್ ಆಗುತ್ತಿವೆ. ರೌಡಿಗಳಿಂದ ಸನ್ಮಾನ ಮಾಡಿಸಿಕೊಂಡ ಕಮಿಷನರ್‌ ಭಾಸ್ಕರ್ ರಾವ್ ನಡೆಗೆ ಆಕ್ರೋಶ ವ್ಯಕ್ತವಾಗಿದೆ.

  • ಮತ್ತೊಮ್ಮೆ ರೌಡಿಶೀಟರ್ ಯಶಸ್ವಿನಿ ಅಟ್ಟಹಾಸ – ಮಾರ್ಗ ಮಧ್ಯೆ ಅಡ್ಡಗಟ್ಟಿ ಮಹಿಳೆಗೆ ಥಳಿತ

    ಮತ್ತೊಮ್ಮೆ ರೌಡಿಶೀಟರ್ ಯಶಸ್ವಿನಿ ಅಟ್ಟಹಾಸ – ಮಾರ್ಗ ಮಧ್ಯೆ ಅಡ್ಡಗಟ್ಟಿ ಮಹಿಳೆಗೆ ಥಳಿತ

    ಬೆಂಗಳೂರು: ಶ್ರೀರಾಮಸೇನೆಯ ಮಹಿಳಾ ರಾಜ್ಯಾಧ್ಯಕ್ಷೆ ರೌಡಿಶೀಟರ್ ಯಶಸ್ವಿನಿ ಮತ್ತೊಮ್ಮೆ ತನ್ನ ಅಟ್ಟಹಾಸ ಮುಂದುವರಿಸಿದ್ದು, ಇದೀಗ ಲಲಿತಾ ಎಂಬವರ ಮೇಲೆ ಮಾರಣಾಂತಿಕವಾಗಿ ಹಲ್ಲೆ ನಡೆಸಿದ್ದಾರೆ.

    ಗಂಗಮ್ಮನಗುಡಿ ನೀಲಗಿರಿ ತೊಪ್ಪಿನಲ್ಲಿ ಈ ಘಟನೆ ನಡೆದಿದೆ. ಲಲಿತಾ ಅವರು ದಾರಿಯಲ್ಲಿ ಹೋಗುವಾಗ ಮಾರ್ಗ ಮಧ್ಯೆ ಅಡ್ಡಗಟ್ಟಿ ಯಶಸ್ವಿನಿ ಹಾಗೂ 8 ಜನ ಮಹಿಳೆಯರು ಸೇರಿ ಹಿಗ್ಗಾಮುಗ್ಗ ಥಳಿಸಿದ್ದಾರೆ. ಪರಿಣಾಮ ಗಾಯಗೊಂಡಿರುವ ಲಲಿತಾ ಕೆಸಿ ಜನರಲ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯತ್ತಿದ್ದಾರೆ.

    ಹಲ್ಲೆ ಯಾಕೆ..?
    ಯಶಸ್ವಿನಿ ವಿರುದ್ಧ ಲಲಿತಾ ದೂರು ನೀಡಿದ್ದು, ಗಂಗಮ್ಮನಗುಡಿ ಪೊಲೀಸ್ ಠಾಣೆಯಲ್ಲಿ ದಾಖಲಾಗಿತ್ತು. ಈ ಪ್ರಕರಣದ ಸಂಬಂಧ ಶುಕ್ರವಾರ ನ್ಯಾಯಾಲಯದಲ್ಲಿ ತೀರ್ಪು ಬರೋದಿತ್ತು. ನ್ಯಾಯಾಲಯಕ್ಕೆ ಲಲಿತಾ ಹಾಜರಾಗಬಾರದೆಂದು ಲಲಿತಾರ ಮೇಲೆ ಯಶಸ್ವಿನಿ & ಟೀಂ ಹಲ್ಲೆ ನಡೆಸಿದೆ ಎನ್ನಲಾಗಿದೆ. ಇದನ್ನೂ ಓದಿ: ನೀವೇ ನನ್ನ ಹೆಂಡ್ತಿಯನ್ನ ಕಂಟ್ರೋಲ್ ಮಾಡ್ಬೇಕು ಸಾರ್ – ರೌಡಿಶೀಟರ್ ಯಶಸ್ವಿನಿ ಪತಿಯಿಂದ ಪೊಲೀಸ್ರಿಗೆ ಮನವಿ

    ಬನಶಂಕರಿ ಠಾಣೆಯ ರೌಡಿಶೀಟರ್ ಆಗಿರುವ ಯಶಸ್ವಿನಿಗಾಗಿ ಗಂಗಮ್ಮನಗುಡಿ ಪೊಲೀಸರು ಹುಡುಕಾಟ ನಡೆಸಿದ್ದಾರೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv, ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv