Tag: Yashomarga

  • ನಟ ಯಶ್ ನೇತೃತ್ವದ ತಂಡದಿಂದ ಪುರಾತನ ಕಲ್ಯಾಣಿ ಜೀರ್ಣೋದ್ಧಾರ

    ನಟ ಯಶ್ ನೇತೃತ್ವದ ತಂಡದಿಂದ ಪುರಾತನ ಕಲ್ಯಾಣಿ ಜೀರ್ಣೋದ್ಧಾರ

    ಶಿವಮೊಗ್ಗ: ಕೆಳದಿ ಅರಸನಾಗಿದ್ದ ವೆಂಕಟಪ್ಪ ನಾಯಕರ ಪ್ರೇಯಸಿ ಚಂಪಕ ಎಂಬುವರ ಸವಿನೆನಪಿಗಾಗಿ ಜಿಲ್ಲೆಯ ಸಾಗರ ತಾಲೂಕಿನ ಆನಂದಪುರದಲ್ಲಿ ನಿರ್ಮಿಸಿದ್ದ ಕಲ್ಯಾಣಿಗೆ ಸುಮಾರು 400 ವರ್ಷಗಳ ಇತಿಹಾಸವಿದೆ. ಈ ಕಲ್ಯಾಣಿಗೆ ಚಂಪಕ ಸರಸ್ಸು ಕಲ್ಯಾಣಿ ಅಥವಾ ಕೊಳ ಅಂತಾ ಸಹ ಕರೆಯಲಾಗುತ್ತದೆ.

    ಈ ಸುಂದರ ಕಲ್ಯಾಣಿ ಇಂದು ನಶಿಸಿ ಹೋಗುವಂತಹ ಹಂತ ತಲುಪಿತ್ತು. ಆದರೆ ಈ ಸುಂದರ ಕಲ್ಯಾಣಿಯನ್ನು ನಟ ಯಶ್ ನಡೆಸುತ್ತಿರುವ ಯಶೋಮಾರ್ಗ ತಂಡ ಅಭಿವೃದ್ಧಿಪಡಿಸಿದೆ. ಕಲ್ಯಾಣಿಯನ್ನು ಕಲ್ಲಿನಿಂದ ನಿರ್ಮಾಣ ಮಾಡಲಾಗಿದ್ದು, ಕಲ್ಯಾಣಿ ಸುತ್ತ ಕಲ್ಲಿನಲ್ಲಿ ಸುಂದರವಾಗಿ ಕೆತ್ತನೆ ಮಾಡಲಾಗಿದೆ. ಕಲ್ಯಾಣಿಯ ಮಧ್ಯದಲ್ಲಿ ಶಿವನ ಸಣ್ಣ ಮಂದಿರ ಸಹ ಇದೆ. ಮಂದಿರಕ್ಕೆ ತೆರಳಲು ಕಲ್ಲಿನ ದಾರಿ ಇದೆ. ಕಲ್ಯಾಣಿಯ ಪ್ರವೇಶದಲ್ಲಿ ಕಲ್ಲಿನ ಆನೆಗಳನ್ನು ನಿರ್ಮಿಸಲಾಗಿದೆ. ಇದನ್ನೂ ಓದಿ: ಟೋಲ್ ಪ್ಲಾಜಾ ನೌಕರರ ಮೇಲೆ ಬಿಜೆಪಿ ಮುಖಂಡನ ಗೂಂಡಾ ವರ್ತನೆ

    ಇಂತಹ ಸುಂದರ ಕಲ್ಯಾಣಿಯನ್ನು, ಯಶೋ ಮಾರ್ಗ ತಂಡ ಹಾಗು ಹೈದರಾಬಾದ್ ಮೂಲದ ಫ್ರೀಡಂ ಆಯಿಲ್ ಅಸೋಸಿಯೇಷನ್ ಸಹಯೋಗದಲ್ಲಿ ಅಭಿವೃದ್ಧಿಪಡಿಸಲಾಗಿದೆ. ಜೀರ್ಣೋದ್ಧಾರಗೊಂಡ ಚಂಪಕ ಸರಸ್ಸು ಕಲ್ಯಾಣಿಯನ್ನು ಜಲ ತಜ್ಞ ಶಿವಾನಂದ ಕಳವೆ ಚಾಲನೆ ನೀಡಿದರು. ಇದನ್ನೂ ಓದಿ: ಸಂಬಂಧದ ವಿಚಾರ ಗೊತ್ತಾಗಿ ನೋವಿನಿಂದ ಗಲಾಟೆ ಮಾಡಿದ್ದು ನಿಜ, ಆದ್ರೆ ಕೊಲೆ ಮಾಡಿಲ್ಲ: ಅನಂತರಾಜು ಪತ್ನಿ

    ರಾಜ್ಯದ ಕೆರೆಗಳ ಅಭಿವೃದ್ಧಿ ಕುರಿತು ಯಶ್ ಅವರ ಜೊತೆ ಚರ್ಚೆ ಮಾಡುವಾಗ ಚಂಪಕ ಸರಸ್ಸು ಕಲ್ಯಾಣಿ ಬಗ್ಗೆ ಚರ್ಚೆ ಮಾಡಿದ್ದೇವು. ರಾಜ್ಯದ ಜೀವ ಸೆಲೆ ಉಳಿಯಬೇಕು ಎಂಬ ಉದ್ದೇಶದಿಂದ ಯಶ್ ಅವರು, ಅವರ ಅಭಿಮಾನಿಗಳ ಮೂಲಕ ಇದನ್ನು ಅಭಿವೃದ್ಧಿಪಡಿಸಿರುವುದು ಖುಷಿಯ ವಿಚಾರ ಎಂದರು.

  • ಯಶ್ ನೇತೃತ್ವದ ತಂಡದಿಂದ ಪುರಾತನ ಕಲ್ಯಾಣಿ ಪುನರುಜ್ಜೀವನಕ್ಕೆ ಚಾಲನೆ

    ಯಶ್ ನೇತೃತ್ವದ ತಂಡದಿಂದ ಪುರಾತನ ಕಲ್ಯಾಣಿ ಪುನರುಜ್ಜೀವನಕ್ಕೆ ಚಾಲನೆ

    ಶಿವಮೊಗ್ಗ: ಕೆಳದಿ ಅರಸನಾಗಿದ್ದ ವೆಂಕಟಪ್ಪ ನಾಯಕರ ಪ್ರೇಯಸಿ ಚಂಪಕ ಎಂಬವರ ಸವಿನೆನಪಿಗಾಗಿ ಜಿಲ್ಲೆಯ ಸಾಗರ ತಾಲೂಕಿನ ಆನಂದಪುರದಲ್ಲಿ ನಿರ್ಮಿಸಿದ್ದ ಕಲ್ಯಾಣಿಗೆ ಸುಮಾರು 400 ವರ್ಷಗಳ ಇತಿಹಾಸವಿದೆ. ಈ ಕಲ್ಯಾಣಿಗೆ ಚಂಪಕ ಸರಸ್ಸು ಕಲ್ಯಾಣಿ ಅಥವಾ ಕೊಳ ಎಂದು ಸಹ ಕರೆಯಲಾಗುತ್ತದೆ. ಇದಕ್ಕೆ ಚಂದನವನದ ರಾಕಿಂಗ್ ಸ್ಟಾರ್ ಯಶ್ ನೇತೃತ್ವದ ತಂಡದಿಂದ ಪುರಾತನ ಕಲ್ಯಾಣಿ ಪುನರುಜ್ಜೀವನಕ್ಕೆ ಚಾಲನೆ ನೀಡಲಾಗಿದೆ.

    ಈ ಸುಂದರ ಕಲ್ಯಾಣಿಯನ್ನು ನಟ ಯಶ್ ನಡೆಸುತ್ತಿರುವ ಯಶೋಮಾರ್ಗ ತಂಡ ಅಭಿವೃದ್ಧಿಪಡಿಸಲು ಮುಂದೆ ಬಂದಿದೆ. ಈ ಸುಂದರ ಕಲ್ಯಾಣಿ ಇಂದು ಪ್ರವಾಸಿಗರ ನೆಚ್ಚಿನ ತಾಣವೂ ಹೌದು. ಕಲ್ಯಾಣಿಯನ್ನ ಕಲ್ಲಿನಿಂದ ನಿರ್ಮಾಣ ಮಾಡಲಾಗಿದ್ದು, ಕಲ್ಯಾಣಿ ಸುತ್ತ ಕಲ್ಲಿನಲ್ಲಿ ಸುಂದರವಾಗಿ ಕೆತ್ತನೆ ಮಾಡಲಾಗಿದೆ. ಕಲ್ಯಾಣಿಯ ಮಧ್ಯದಲ್ಲಿ ಶಿವನ ಸಣ್ಣ ಮಂದಿರ ಸಹ ಇದೆ. ಮಂದಿರಕ್ಕೆ ತೆರಳಲು ಕಲ್ಲಿನ ದಾರಿ ಇದೆ. ಕಲ್ಯಾಣಿಯ ಪ್ರವೇಶದಲ್ಲಿ ಕಲ್ಲಿನ ಆನೆಗಳನ್ನು ನಿರ್ಮಿಸಲಾಗಿದೆ. ಇದನ್ನೂ ಓದಿ: ರಾಕಿಂಗ್ ಸ್ಟಾರ್‌ನನ್ನು ಹಾಡಿ ಹೊಗಳಿದ ನಟಿ ಪೂಜಾ ಹೆಗ್ಡೆ

    ಈ ಸುಂದರ ಕಲ್ಯಾಣಿಯನ್ನು ಯಶೋಮಾರ್ಗ ತಂಡ ಹೈದರಾಬಾದ್ ಮೂಲದ ‘ಫ್ರೀಡಂ ಆಯಿಲ್ ಅಸೋಸಿಯೇಷನ್’ ಸಹಯೋಗದಲ್ಲಿ ಅಭಿವೃದ್ಧಿ ಪಡಿಸಲಾಗುತ್ತಿದೆ. ಚಂಪಕ ಸರಸ್ಸು ಅಭಿವೃದ್ದಿಗೆ ಜಲ ತಜ್ಞ ಶಿವಾನಂದ ಕಳವೆ ಚಾಲನೆ ನೀಡಿದರು.

    ಪುನರುಜ್ಜೀವನ ಕಾರ್ಯಕ್ಕೆ ಚಾಲನೆ ನೀಡಿದ ನಂತರ ಮಾತನಾಡಿದ ಅವರು, ಹಿಂದೆ ರಾಜ್ಯದ ಕೆರೆಗಳ ಅಭಿವೃದ್ಧಿ ಕುರಿತು ಯಶ್ ಅವರ ಜೊತೆ ಚರ್ಚೆ ಮಾಡುವಾಗ ಚಂಪಕ ಸರಸ್ಸು ಕಲ್ಯಾಣಿ ನೋಡಿದ್ದರು. ಈಗ ಅವರ ಅಭಿಮಾನಿಗಳ ಮೂಲಕ ಇದನ್ನು ಅಭಿವೃದ್ಧಿಪಡಿಸಲು ಮುಂದಾಗಿರುವುದು ಖುಷಿಯ ವಿಚಾರ ಎಂದರು.

    ಕಲ್ಯಾಣಿಯ ಪುನರುಜ್ಜೀವನದಲ್ಲಿ ಸುತ್ತಲು ಜಾಗದ ಸ್ವಚ್ಛತೆ, ಪುರಾತನ ಕಟ್ಟೆ ಮೇಲಿನ ಮರ, ಗಿಡಗಳನ್ನು ತೆಗೆದು ದುರಸ್ಥಿ ಮಾಡುವುದು. ಸುತ್ತಲು ಬೇಲಿ ನಿರ್ಮಿಸುವುದು, ಗೇಟ್ ಅಳವಡಿಸುವುದು ಹಾಗೂ ಕಲ್ಯಾಣಿ ಕುರಿತ ಫಲಕ ಹಾಕುವುದು. ಹೀಗೆ ವಿವಿಧ ಅಭಿವೃದ್ಧಿ ಕಾರ್ಯ ನಡೆಸಲು ಯಶೋಮಾರ್ಗ ಯೋಜನೆ ರೂಪಿಸಿದೆ. ಇದನ್ನೂ ಓದಿ: ರಾಜಕೀಯ ಮಾಡಲು ಸಿದ್ದರಾಮಯ್ಯ, ಹೆಚ್‍ಡಿಕೆಗೆ ವಿಷಯಗಳೇ ಸಿಗ್ತಿಲ್ಲ: ಶಿವರಾಜ್ ಪಾಟೀಲ್

  • ಅಂಧ ವಿದ್ಯಾರ್ಥಿಗಳ ನೆರವಿಗೆ ನಿಂತ ಯಶೋಮಾರ್ಗ

    ಅಂಧ ವಿದ್ಯಾರ್ಥಿಗಳ ನೆರವಿಗೆ ನಿಂತ ಯಶೋಮಾರ್ಗ

    ಧಾರವಾಡ: ಉತ್ತರ ಕರ್ನಾಟಕ ಪ್ರವಾಹದಿಂದ ತತ್ತರಿಸಿ ಹೋಗಿದೆ. ಈ ಪ್ರವಾಹದಲ್ಲಿ ಸಿಲುಕಿರುವ 70 ಅಂಧ ವಿದ್ಯಾರ್ಥಿಗಳಿಗೆ ರಾಕಿಂಗ್ ಸ್ಟಾರ್ ಯಶ್ ಅವರ ಯಶೋಮಾರ್ಗ ನೆರವಿಗೆ ಬಂದಿದೆ.

    ಗದಗ ಜಿಲ್ಲೆ ಹೊಲೆಆಲೂರನ ಜ್ಞಾನಸಿಂಧು ಅಂಧ ಮಕ್ಕಳ ವಸತಿ ಶಾಲೆ ಪ್ರವಾಹದಿಂದ ಜಲಾವೃತವಾಗಿದ್ದು, ಅಲ್ಲಿನ ಅಂಧ ವಿದ್ಯಾರ್ಥಿಗಳಿಗೆ ಧಾರವಾಡದ ಚೈತನ್ಯ ಕಲಾ ಮಂಟಪದಲ್ಲಿ ಆಶ್ರಯ ನೀಡಲಾಗಿದೆ. ಈಗ ಈ ಮಕ್ಕಳಿಗೆ ಯಶೋಮಾರ್ಗದ ಸದಸ್ಯರು 70 ಜಾಕೆಟ್ ನೀಡಿದ್ದಾರೆ.

    ಭೀಕರ ಪ್ರವಾಹದಿಂದ ತತ್ತರಿಸಿರುವ ಉತ್ತರ ಕರ್ನಾಟಕದ ಹಲವು ಜಿಲ್ಲೆಗಳಿಗೆ ಯಶೋಮಾರ್ಗದ ವತಿಯಿಂದ ಸಂತ್ರಸ್ತರಿಗೆ ಅಗತ್ಯ ವಸ್ತುಗಳನ್ನು ನೀಡಲಾಗುತ್ತಿದೆ. ಲಾರಿಯಲ್ಲಿ ಆಹಾರ ಹಾಗೂ ಇತರೆ ಅಗತ್ಯ ವಸ್ತುಗಳನ್ನು ಬ್ಯಾಕ್ಸ್‍ಗಳಲ್ಲಿ ಪ್ಯಾಕ್ ಮಾಡಿ ಪ್ರವಾಹ ಪೀಡಿತ ಪ್ರದೇಶಗಳಿಗೆ ಯಶೋಮಾರ್ಗದ ಸದಸ್ಯರು ಹಂಚುತ್ತಿದ್ದಾರೆ. ಈ ಮೂಲಕ ನಟ ಯಶ್ ಪ್ರವಾಹ ಪೀಡಿತ ಜನರಿಗೆ ಸಹಾಯ ಹಸ್ತ ಚಾಚಿದ್ದಾರೆ.

  • ಉತ್ತರ ಕರ್ನಾಟಕ ಸಂತ್ರಸ್ತರ ನೆರವಿಗೆ ನಿಂತ ಯಶೋಮಾರ್ಗ

    ಉತ್ತರ ಕರ್ನಾಟಕ ಸಂತ್ರಸ್ತರ ನೆರವಿಗೆ ನಿಂತ ಯಶೋಮಾರ್ಗ

    ಬೆಂಗಳೂರು: ಉತ್ತರ ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ಅತಿ ಮಳೆಯಿಂದಾಗಿ ಪ್ರವಾಹ ಪರಿಸ್ಥಿತಿ ಎದುರಾಗಿ ಮೂಲಭೂತ ವಸ್ತುಗಳ ಅಗತ್ಯತೆ ಹೆಚ್ಚಿದ್ದು, ರಾಕಿಂಗ್ ಸ್ಟಾರ್ ಯಶ್ ಅವರು “ಯಶೋಮಾರ್ಗ” ತಂಡದ ಮೂಲಕ ದಿನಬಳಕೆ ವಸ್ತುಗಳನ್ನು ಕಳುಹಿಸಿದ್ದಾರೆ.

    ಭೀಕರ ಪ್ರವಾಹದಿಂದ ತತ್ತರಿಸಿರುವ ಉತ್ತರ ಕರ್ನಾಟಕದ ಹಲವು ಜಿಲ್ಲೆಗಳಿಗೆ ಯಶೋಮಾರ್ಗದ ವತಿಯಿಂದ ಸಂತ್ರಸ್ತರಿಗೆ ಅಗತ್ಯ ವಸ್ತುಗಳನ್ನು ಕಳುಹಿಸಲಾಗಿದೆ. ಲಾರಿಯಲ್ಲಿ ಆಹಾರ ಹಾಗೂ ಇತರೆ ಅಗತ್ಯ ವಸ್ತುಗಳನ್ನು ಬ್ಯಾಕ್ಸ್ ಗಳಲ್ಲಿ ಪ್ಯಾಕ್ ಮಾಡಿ ಪ್ರವಾಹ ಪೀಡಿತ ಪ್ರದೇಶಗಳಿಗೆ ಈಗಾಗಲೇ ತಂಡ ಕಳುಹಿಸಿದೆ. ಈ ಮೂಲಕ ಯಶ್ ಪ್ರವಾಹ ಪೀಡಿತ ಜನರಿಗೆ ಸಹಾಯ ಹಸ್ತ ಚಾಚಿದ್ದಾರೆ.

    ಇತ್ತ ರಿಯಲ್ ಸ್ಟಾರ್ ಉಪೇಂದ್ರ ಅವರು ಉತ್ತರ ಕರ್ನಾಟಕ ಪ್ರವಾಹ ಸಂತ್ರಸ್ತರಿಗೆ 5 ಲಕ್ಷ ರೂ. ಸಹಾಯಧನ ನೀಡಿದ್ದಾರೆ. ಈ ಬಗ್ಗೆ ತಮ್ಮ ಟ್ವಿಟ್ಟರಿನಲ್ಲಿ, “ಉತ್ತರ ಕರ್ನಾಟಕ ನೆರೆ ಸಂತ್ರಸ್ತರ ನೆರವಿಗಾಗಿ ಮುಖ್ಯಮಂತ್ರಿಗಳ ಪರಿಹಾರ ನಿಧಿಗೆ 5 ಲಕ್ಷ ರೂ. ಗಳನ್ನು ದೇಣಿಗೆಯಾಗಿ ನೀಡುತ್ತಿದ್ದೇನೆ. ತಾವುಗಳೂ ಪ್ರವಾಹಕ್ಕೆ ಸಿಲುಕಿರುವ ನಮ್ಮವರಿಗೆ ನಿಮ್ಮ ಇಚ್ಛಾನುಸಾರ ನೆರವಾಗಬೇಕೆಂದು ಕೇಳಿಕೊಳ್ಳುತ್ತೇನೆ” ಎಂದು ಟ್ವೀಟ್ ಮಾಡಿ ಮನವಿ ಮಾಡಿಕೊಂಡಿದ್ದಾರೆ.

    ನಿದೇರ್ಶಕ ಪವನ್ ಒಡೆಯರ್ ಹಾಗೂ ರೇಮೊ ಚಿತ್ರ ತಂಡ ಕೂಡ ಉತ್ತರ ಕರ್ನಾಟಕ ಪ್ರವಾಹ ಸಂತ್ರಸ್ತರಿಗೆ ನೆರವು ನೀಡಿದ್ದಾರೆ. ಜನರಿಗೆ ಬೇಕಾಗುವ ಆಹಾರ, ಬಟ್ಟೆಗಳು ಹಾಗೂ ಇತರೆ ಅಗತ್ಯ ವಸ್ತುಗಳನ್ನು ಪ್ರವಾಹ ಪೀಡಿತ ಪ್ರದೇಶಗಳಿಗೆ ರವಾನಿಸಿದ್ದಾರೆ.

    ಹ್ಯಾಟ್ರಿಕ್ ಹೀರೋ ಶಿವರಾಜ್‍ಕುಮಾರ್ ಅವರು ಕೂಡ ತಮ್ಮ ಟ್ವಿಟ್ಟರಿನಲ್ಲಿ ವಿಡಿಯೋ ಹಾಕಿದ್ದಾರೆ. ಅಲ್ಲದೆ, “ಉತ್ತರ ಕರ್ನಾಟಕದ ಪ್ರವಾಹದ ದೃಶ್ಯಾವಳಿಗಳು ಕಂಡು ಬೇಜಾರು ಹಾಗೂ ಭಯವಾಯಿತು. ನಿಮ್ಮ ಜೊತೆ ನಾವಿದ್ದೀವಿ ನಿಮ್ಮ ಸಹಾಯಕ್ಕೆ ನಾವೆಲ್ಲರೂ ಕೈ ಜೋಡಿಸ್ತೀವಿ. ನಮ್ಮ ಚಿತ್ರರಂಗದ ಎಲ್ಲ ಕಲಾವಿದರ ಹಾಗೂ ಅಭಿಮಾನಿಗಳು ಜೊತೆಗೂಡಿ ನಿಮಗೆ ಬೇಕಾದ ಅಗತ್ಯತೆಗಳನ್ನು ಕಳುಹಿಸುವ ಪ್ರಯತ್ನ ಮಾಡುತ್ತಿದ್ದೇವೆ. ದಯವಿಟ್ಟು ಕುಗ್ಗಬೇಡಿ ಧೈರ್ಯದಿಂದಿರಿ” ಎಂದು ಟ್ವೀಟ್ ಮಾಡಿದ್ದಾರೆ.

    ಬಾಲಿವುಡ್ ನಟ ಕಬೀರ್ ಸಿಂಗ್ ಅವರು ತಮ್ಮ ಟ್ವಿಟ್ಟರಿನಲ್ಲಿ, ”ಪ್ರವಾಹದಿಂದ ಸಿಲುಕಿರುವ ಉತ್ತರ ಕರ್ನಾಟಕ ಜನರಿಗೆ ದಯವಿಟ್ಟು ಸಹಾಯ ಮಾಡಿ. ಯಾವುದೇ ರೀತಿಯಲ್ಲಿ ಬೇಕಾದರೂ ಸಹಾಯ ಮಾಡಿ” ಎಂದು ಟ್ವೀಟ್ ಮಾಡುವ ಮೂಲಕ ಮನವಿ ಮಾಡಿಕೊಂಡಿದ್ದಾರೆ. ಕಬೀರ್ ಅವರ ಟ್ವೀಟ್‍ಗೆ ಅಭಿಮಾನಿಗಳು ನಾವು ಅವರ ಜೊತೆ ಇದ್ದೇವೆ ಎಂದು ರೀ-ಟ್ವೀಟ್ ಮಾಡುವ ಮೂಲಕ ಸ್ಪಂದಿಸಿದ್ದಾರೆ.

    ಸ್ಯಾಂಡಲ್‍ವುಡ್ ಕಲಾವಿದರಾದ ದರ್ಶನ್, ಸುದೀಪ್, ಜಗ್ಗೇಶ್, ಶ್ರೀಮುರಳಿ, ಚಂದನ್ ಶೆಟ್ಟಿ, ರಕ್ಷಿತ್ ಶೆಟ್ಟಿ, ರಶ್ಮಿಕಾ ಮಂದಣ್ಣ ಸೇರಿದಂತೆ ಹಲವರು ಉತ್ತರ ಕರ್ನಾಟಕಕ್ಕೆ ಸಹಾಯ ಮಾಡುವಂತೆ ಅಭಿಮಾನಿಗಳಲ್ಲಿ ಮನವಿ ಮಾಡಿಕೊಂಡಿದ್ದಾರೆ.

  • ರಾಯಚೂರು ನಂತ್ರ ಬೀದರ್‌ನಲ್ಲಿ ಯಶೋಮಾರ್ಗ- ಕುಡಿಯುವ ನೀರಿನ ಟ್ಯಾಂಕರ್ ಪೂಜೆ ಮಾಡಿದ ಜನತೆ

    ರಾಯಚೂರು ನಂತ್ರ ಬೀದರ್‌ನಲ್ಲಿ ಯಶೋಮಾರ್ಗ- ಕುಡಿಯುವ ನೀರಿನ ಟ್ಯಾಂಕರ್ ಪೂಜೆ ಮಾಡಿದ ಜನತೆ

    ಬೀದರ್: ಭೀಕರ ಬರಗಾಲಕ್ಕೆ ತುತ್ತಾಗಿ ಕುಡಿಯುವ ನೀರಿಗೂ ಹಾಹಾಕಾರ ಪರಿಸ್ಥಿತಿ ನಿರ್ಮಾಣವಾಗಿರುವ ಬಿಸಿಲನಾಡು ರಾಯಚೂರಿನಲ್ಲಿ ರಾಕಿಂಗ್ ಸ್ಟಾರ್ ಯಶ್ ನೇತೃತ್ವದ ಯಶೋಮಾರ್ಗದ ಸೇವೆ ಆರಂಭವಾಗಿತ್ತು. ಈಗ ರಾಯಚೂರು ನಂತರ ಬೀದರ್‌ನಲ್ಲಿ ನೀರಿನ ಸೌಲಭ್ಯ ಒದಗಿಸಲು ಯಶೋಮಾರ್ಗ ಮುಂದಾಗಿದೆ.

    ಶುಕ್ರವಾರ ಬೀದರ್ ಜಿಲ್ಲೆಯ ಬೋರಳ ಗ್ರಾಮದಲ್ಲಿ ಯಶೋಮಾರ್ಗ ವತಿಯಿಂದ ಟ್ಯಾಂಕರ್ ಗಳ ಮೂಲಕ ಕುಡಿಯುವ ನೀರಿನ ವ್ಯವಸ್ಥೆ ಮಾಡಲಾಗಿದೆ. ಅಲ್ಲದೆ ಜಿಲ್ಲೆಯ ಔರಾದ್ ತಾಲೂಕಿನ ರಾಮನಗರ ಗ್ರಾಮದಲ್ಲಿ ಕೂಡ ಜನರಿಗೆ ಕುಡಿಯುವ ನೀರು ಒದಗಿಸಲಾಯಿತು. ಬೀದರ್ ಜನರು ಮೊದಲು ಕುಡಿಯುವ ನೀರಿನ ಟ್ಯಾಂಕರ್ ಗೆ ಪೂಜೆ ಮಾಡಿದ್ದಾರೆ. ಬಳಿಕ ಕೊಡಗಳಲ್ಲಿ ನೀರು ತುಂಬಿಸಿಕೊಂಡಿದ್ದಾರೆ.

    ರಾಯಚೂರು ತಾಲೂಕಿನ ಬಿಜನಗೇರಾ, ಬೋಳಮಾನದೊಡ್ಡಿ, ಬಾಯಿದೊಡ್ಡಿ, ಗೌಶ್ ನಗರದಲ್ಲಿ ಬುಧವಾರ ಕುಡಿಯುವ ನೀರನ್ನು ಒದಗಿಸಲಾಗಿತ್ತು. ಹತ್ತಿರದಲ್ಲಿ ಲಭ್ಯವಿರುವ ಖಾಸಗಿ ಬೋರ್ ವೆಲ್‍ಗಳಿಂದ ಟ್ಯಾಂಕರ್ ಗೆ ನೀರನ್ನು ತುಂಬಿಸಿಕೊಂಡು ಉಚಿತವಾಗಿ ಕೊಡಲಾಗುತ್ತಿತ್ತು. ಸದ್ಯ ಕುಡಿಯುವ ನೀರಿನ ಸಮಸ್ಯೆಯಿಂದ ಬೇಸತ್ತ ಜನ ಯಶೋಮಾರ್ಗದ ಸಾಮಾಜಿಕ ಕಾಳಜಿಗೆ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

  • ರಾಯಚೂರಿನಲ್ಲಿ ಯಶೋಮಾರ್ಗ ಸಂಚಾರ – ಗ್ರಾಮೀಣ ಭಾಗಕ್ಕೆ ಟ್ಯಾಂಕರ್ ಮೂಲಕ ನೀರಿನ ಸೌಲಭ್ಯ

    ರಾಯಚೂರಿನಲ್ಲಿ ಯಶೋಮಾರ್ಗ ಸಂಚಾರ – ಗ್ರಾಮೀಣ ಭಾಗಕ್ಕೆ ಟ್ಯಾಂಕರ್ ಮೂಲಕ ನೀರಿನ ಸೌಲಭ್ಯ

    ರಾಯಚೂರು: ಭೀಕರ ಬರಗಾಲಕ್ಕೆ ತುತ್ತಾಗಿ ಕುಡಿಯುವ ನೀರಿಗೂ ಹಾಹಾಕಾರ ಎದ್ದಿರುವ ಬಿಸಿಲನಾಡು ರಾಯಚೂರಿನಲ್ಲಿ ರಾಕಿಂಗ್ ಸ್ಟಾರ್ ಯಶ್ ನೇತೃತ್ವದ ಯಶೋಮಾರ್ಗದ ಸೇವೆ ಆರಂಭವಾಗಿದೆ. ಗ್ರಾಮೀಣ ಭಾಗದ ಜನರಿಗೆ ಟ್ಯಾಂಕರ್ ಮೂಲಕ ಕುಡಿಯುವ ನೀರಿನ ಸೌಲಭ್ಯ ಒದಗಿಸಲು ಯಶೋಮಾರ್ಗ ಮುಂದಾಗಿದೆ.

    ರಾಯಚೂರು ತಾಲೂಕಿನ ಬಿಜನಗೇರಾ, ಬೋಳಮಾನದೊಡ್ಡಿ, ಬಾಯಿದೊಡ್ಡಿ, ಗೌಶ್ ನಗರದಲ್ಲಿ ಇಂದಿನಿಂದ ಕುಡಿಯುವ ನೀರನ್ನು ಒದಗಿಸಲಾಗುತ್ತಿದೆ. ಮೊದಲ ಹಂತದಲ್ಲಿ ಸುಮಾರು 10 ದಿನಗಳ ವರೆಗೆ ಪ್ರತಿ ಗ್ರಾಮಕ್ಕೆ ಮೂರು ಟ್ರಿಪ್‍ನಂತೆ ನೀರು ಕೊಡಲು ಯಶ್ ಹಾಗೂ ಅವರ ಅಭಿಮಾನಿಗಳು ಮುಂದಾಗಿದ್ದಾರೆ.

    ಹತ್ತಿರದಲ್ಲಿ ಲಭ್ಯವಿರುವ ಖಾಸಗಿ ಬೋರ್ ವೆಲ್‍ಗಳಿಂದ ಟ್ಯಾಂಕರ್ ಗೆ ನೀರನ್ನು ತುಂಬಿಸಿಕೊಂಡು ಉಚಿತವಾಗಿ ಕೊಡಲಾಗುತ್ತಿದೆ. ಸದ್ಯ ಎರಡು ಟ್ರ್ಯಾಕ್ಟರ್ ಗಳ ಮೂಲಕ ನೀರು ಸರಬರಾಜು ಆರಂಭಿಸಿದ್ದು, ಮುಂದೆ ಮಳೆ ಬಾರದೇ ಹೋದರೆ ಹೆಚ್ಚು ಸಂಖ್ಯೆಯ ಟ್ಯಾಂಕರ್ ಬಳಸಿಕೊಂಡು ನೀರಿನ ಸಮಸ್ಯೆಯಿರುವ ಗ್ರಾಮಗಳಿಗೆ ನೀರಿನ ಸೌಲಭ್ಯ ಕಲ್ಪಿಸಲು ಮುಂದಾಗಿದ್ದಾರೆ.

    ಸದ್ಯ ಕುಡಿಯುವ ನೀರಿನ ಸಮಸ್ಯೆಯಿಂದ ಬೇಸತ್ತ ಜನ ಯಶೋಮಾರ್ಗದ ಸಾಮಾಜಿಕ ಕಾಳಜಿಗೆ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

  • ಸಲಾಂ ರಾಕಿ ಭಾಯ್ ಅಂತಾ ಹೇಳ್ತಿರೋದು ಕೆಜಿಎಫ್ ಸಿನಿಮಾಗೆ ಅಲ್ಲ

    ಸಲಾಂ ರಾಕಿ ಭಾಯ್ ಅಂತಾ ಹೇಳ್ತಿರೋದು ಕೆಜಿಎಫ್ ಸಿನಿಮಾಗೆ ಅಲ್ಲ

    ಕೊಪ್ಪಳ: ರಾಕಿಂಗ್ ಸ್ಟಾರ್ ಯಶ್ ಅಭಿನಯದ ಕೆಜಿಎಫ್ ಚಿತ್ರ ದೇಶದೆಲ್ಲೆಡೆ ಜನರ ಮೆಚ್ಚುಗೆ ಗಳಿಸಿದೆ. ಅಲ್ಲದೆ ಯಶ್ ಪಾತ್ರಕ್ಕೂ ಜನರು ಫುಲ್ ಫಿದಾ ಆಗಿದ್ದಾರೆ. ಯಶ್ ಬರೀ ಸಿನಿಮಾದಲ್ಲಿ ಮಾತ್ರ ಹೀರೋ ಅಲ್ಲ. ನಿಜಜೀವನದಲ್ಲೂ ಯಶ್ ಹೀರೋ ಆಗಿದ್ದಾರೆ. ಅದಕ್ಕೆ ಸಾಕ್ಷಿ ಕೊಪ್ಪಳ ಜಿಲ್ಲೆಯ ಯಲಬುರ್ಗಾ ತಾಲೂಕಿನ ತಲ್ಲೂರು ಕೆರೆ.

    ಭೀಕರ ಬರಗಾಲದಿಂದಾಗಿ ತಲ್ಲೂರು ಕೆರೆ ಬತ್ತಿ ಹೋಗಿತ್ತು. 2016 ಫೆಬ್ರವರಿ 28 ರಂದು ಯಶ್ ದಂಪತಿ ಯಶೋಮಾರ್ಗ ಫೌಂಡೇಶನ್ ಮೂಲಕ ಸುಮಾರು 4 ಕೋಟಿ ವೆಚ್ಚದಲ್ಲಿ ತಲ್ಲೂರು ಕೆರೆ ಹೂಳೆತ್ತುವ ಕಾಮಗಾರಿಗೆ ಚಾಲನೆ ನೀಡಿದ್ರು. ಮಳೆಗಾಲ ಆರಂಭಕ್ಕೂ ಮುನ್ನ ಯಲಬುರ್ಗಾ ಸುತ್ತಮುತ್ತಲಿನ ಜನ ಸ್ವಯಂ ಪ್ರೇರಿತರಾಗಿ ಬಂದು ಕೆರೆಯ ಹೂಳನ್ನು ತೆಗೆದಿದ್ರು. 4 ಅಡಿಯಷ್ಟು ಹೂಳು ತೆಗೆದಾಗ ಕೆರೆಯಲ್ಲಿ ನೀರು ಜಿನುಗಿತ್ತು.

    ಇಂದು ತಲ್ಲೂರು ಕೆರೆ ಸ್ವಚ್ಛ ನೀರಿನಿಂದ ಸುತ್ತಮುತ್ತಲಿನ ನೂರಾರು ಕುಟುಂಬ, ಜಾನುವಾರುಗಳ ದಾಹ ಇಂಗಿಸುತ್ತಿದೆ. ಈ ಕೆರೆಯಿಂದ ಸುತ್ತಮುತ್ತಲಿನ 20 ಹಳ್ಳಿಗಳಲ್ಲಿ ಕುಡಿಯುವ ನೀರಿನ ಸಮಸ್ಯೆಗೆ ಮುಕ್ತಿ ಸಿಕ್ಕಿದೆ. ಪ್ರಾಣಿ-ಪಕ್ಷಿಗಳಿಗೆ ತಲ್ಲೂರು ಕೆರೆಯ ನೀರೇ ಆಸರೆಯಾಗಿದೆ. ಇಷ್ಟು ದಿನ ನೀರಿಗಾಗಿ ಹಾಹಾಕಾರ ಪಡುತ್ತಿದ್ದ ತಲ್ಲೂರು ಜನ ರಾಖಿ ಭಾಯ್‍ಗೆ ಮತ್ತೊಮ್ಮೆ ಸಲಾಂ ಹೊಡೆಯುತ್ತಿದ್ದಾರೆ.

    ಜನಪ್ರತಿನಿಧಿಗಳು, ಅಧಿಕಾರಿಗಳು ಮಾಡದ ಕೆಲಸವನ್ನು ಓರ್ವ ಸಿನಿಮಾ ಕಲಾವಿದ ಯಶ್ ಮಾಡಿ ತೋರಿಸಿ ಇತರರಿಗೆ ಪ್ರೇರಕರಾಗಿದ್ದಾರೆ. ನಿಜವಾಗಿಯೂ ಸಲಾಂ ರಾಕಿ ಭಾಯ್.

    https://www.youtube.com/watch?v=pMl0RRC1QLQ

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv

  • ನೆರೆಸಂತ್ರಸ್ತರಿಗೆ ಪರಿಹಾರದ ನೆಪದಲ್ಲಿ ಯಶೋಮಾರ್ಗ ದುರುಪಯೋಗ- ಯಶ್ ಕಿಡಿ

    ನೆರೆಸಂತ್ರಸ್ತರಿಗೆ ಪರಿಹಾರದ ನೆಪದಲ್ಲಿ ಯಶೋಮಾರ್ಗ ದುರುಪಯೋಗ- ಯಶ್ ಕಿಡಿ

    ಬೆಂಗಳೂರು: ಕೊಡಗು ನೆರೆ ಸಂತ್ರಸ್ತರಿಗೆ ಪರಿಹಾರ ನೀಡುವ ನೆಪದಲ್ಲಿ ಕೆಲವರು ಯಶೋಮಾರ್ಗವನ್ನು ದುರುಪಯೋಗಪಡಿಸಿಕೊಳ್ಳುತ್ತಿದ್ದಾರೆ ಎಂದು ರಾಕಿಂಗ್ ಸ್ಟಾರ್ ಯಶ್ ಗರಂ ಆಗಿದ್ದಾರೆ.

    ಕೊಡಗು ಪ್ರವಾಹ ಸಂತ್ರಸ್ತರಿಗೆ ನೆರವಾಗೋ ನೆಪದಲ್ಲಿ ಕೆಲವರು ಪರಿಸ್ಥಿತಿ ದುರುಪಯೋಗಪಡಿಸಿಕೊಳ್ತಿದ್ದಾರೆ. ಕೆಲ ಕಿಡಿಕೇಡಿಗಳು ನಟ ಯಶ್ ನೇತೃತ್ವದ ಯಶೋಮಾರ್ಗ ಫೌಂಡೇಶನ್ ಹೆಸರಲ್ಲಿ ದೇಣಿಗೆ ಸಂಗ್ರಹ ಮಾಡ್ತಿದ್ದಾರೆ. ಈ ವಿಚಾರ ತಿಳಿದ ರಾಕಿಂಗ್ ಸ್ಟಾರ್ ಕಿಡಿಕಾರಿದ್ದಾರೆ. ಇದನ್ನೂ ಓದಿ: ಕೊಡಗಿನ ಸಂತ್ರಸ್ತರೇ, ಪರಿಹಾರ ವೆಬ್‍ಸೈಟಿಗೆ ಭೇಟಿ ನೀಡಿ ಸಮಸ್ಯೆಯನ್ನು ಬಗೆಹರಿಸಿಕೊಳ್ಳಿ!

    ಯಶೋಮಾರ್ಗ ಹೆಸರು ಬಳಸಿ ದೇಣಿಗೆ ಸಂಗ್ರಹ ಮಾಡದಂತೆ ಆಗ್ರಹಿಸಿದ್ದಾರೆ. ನಿಮ್ಮ ಉದ್ದೇಶ ಒಳ್ಳೆಯದೇ ಆಗಿದೆ. ಆದರೆ ಅದಕ್ಕಾಗಿ ನನ್ನ ಯಶೋಮಾರ್ಗ ಹೆಸರನ್ನ ತರಬೇಡಿ. ಸ್ವಂತ ಸಂಪಾದನೆಯ ಹಣದಲ್ಲಿ ಕೈಲಾದ ಮಟ್ಟಿಗೆ ಸಮಾಜ ಸೇವೆ ಮಾಡ್ತಿದ್ದೇನೆ. ಇದಕ್ಕಾಗಿ ಜನರಿಂದ ಯಾವುದೇ ದೇಣಿಗೆ ಸ್ವೀಕರಿಸುತ್ತಿಲ್ಲ ಎಂದು ತಮ್ಮ ಫೇಸ್ ಬುಕ್ ಸ್ಪಷ್ಟಪಡಿಸಿದ್ದಾರೆ.

    ಯಶ್ ಹೇಳಿದ್ದೇನು?
    ‘ಯಶೋಮಾರ್ಗ’ ಸಂಸ್ಥೆಯ ಮೂಲಕ ನನ್ನ ಸ್ವಂತ ಸಂಪಾದನೆಯ ಹಣದಲ್ಲಿ ನನ್ನ ಆತ್ಮ ತೃಪ್ತಿಗಾಗಿ ನನ್ನ ಕೈಲಾದ ಮಟ್ಟಿಗೆ ಸಮಾಜ ಸೇವಾ ಕಾರ್ಯಗಳನ್ನು ಮಾಡುತ್ತಿದ್ದೇನೆ. ಇದಕ್ಕಾಗಿ ಯಾವುದೇ ದೇಣಿಗೆ/ವಂತಿಗೆಯನ್ನು ಜನರಿಂದ ಸ್ವೀಕರಿಸುತ್ತಿಲ್ಲ.

    ಆದರೆ, ಇತ್ತೀಚೆಗೆ ಭಾರಿ ಮಳೆಯಿಂದಾಗಿ ನಿರಾಶ್ರಿತರಾದ ಕೊಡಗಿನ ಜನರಿಗೆ ಪರಿಹಾರ ನೀಡುವ ನೆಪದಲ್ಲಿ ಯಶೋಮಾರ್ಗದ ಹೆಸರಲ್ಲಿ ದೇಣಿಗೆ ಸಂಗ್ರಹಿಸುತ್ತಿರುವುದು ನನ್ನ ಗಮನಕ್ಕೆ ಬಂದಿರುತ್ತದೆ. ಅವರ ಉದ್ದೇಶ ಒಳ್ಳೆಯದೇ ಆಗಿದ್ದರೂ ಇದಕ್ಕಾಗಿ ಯಶೋಮಾರ್ಗದ ಹೆಸರನ್ನು ಬಳಸಬಾರದೆಂದು ವಿನಂತಿಸುತ್ತೇನೆ.

    ಸಾರ್ವಜನಿಕರ ನೆರವು ಯಶೋಮಾರ್ಗಕ್ಕೆ ಅವಶ್ಯವೆನಿಸುವ ಸಂದರ್ಭದಲ್ಲಿ ನಾನೇ ಖುದ್ದು ನಿಮ್ಮ ಮುಂದೆ ಬರುತ್ತೇನೆ. ಸಧ್ಯಕ್ಕೆ ಯಶೋಮಾರ್ಗದ ಹೆಸರಿನಲ್ಲಿ ದೇಣಿಗೆ ಕೇಳಲು ಬಂದವರಿಗೆ ದೇಣಿಗೆ ನೀಡಬೇಡಿ ಎಂದು ನಾನು ಈ ಸಂದರ್ಭದಲ್ಲಿ ತಿಳಿಸಬಯಸುತ್ತೇನೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv

  • ಯಶೋಮಾರ್ಗ ಪರಿಶ್ರಮಕ್ಕೆ ಸಿಕ್ತು ಪ್ರತಿಫಲ: ಭರ್ತಿಯಾಯ್ತು ಬತ್ತಿ ಹೋಗಿದ್ದ ತಲ್ಲೂರು ಕೆರೆ

    ಯಶೋಮಾರ್ಗ ಪರಿಶ್ರಮಕ್ಕೆ ಸಿಕ್ತು ಪ್ರತಿಫಲ: ಭರ್ತಿಯಾಯ್ತು ಬತ್ತಿ ಹೋಗಿದ್ದ ತಲ್ಲೂರು ಕೆರೆ

    ಕೊಪ್ಪಳ: ನಟ ಯಶ್ ತಮ್ಮ ಯಶೋಮಾರ್ಗದಿಂದ ಕೊಪ್ಪಳ ಜಿಲ್ಲೆ ಯಲಬುರ್ಗಾ ತಾಲೂಕಿನ ತಲ್ಲೂರು ಕೆರೆಯಲ್ಲಿನ ಹೂಳು ತೆಗೆಯುವ ಕೆಲಸ ಮಾಡಿಸಿದ್ದರು. ಇತ್ತೀಚೆಗೆ ಸುರಿದ ಮಳೆಯಿಂದಾಗಿ ತಲ್ಲೂರು ಕೆರೆ ತುಂಬಿದೆ. ಸೋಮವಾರ ಯಶ್ ಹಾಗೂ ರಾಧಿಕಾ ಪಂಡಿತ್ ತಲ್ಲೂರು ಕೆರೆಗೆ ಬಾಗಿನ ಅರ್ಪಿಸಲಿದ್ದಾರೆ.

    ಸತತ ಮೂರ್ನಾಲ್ಕು ವರ್ಷಗಳ ಬರದಿಂದ ಸಂಪೂರ್ಣವಾಗಿ 96 ಎಕರೆ ವಿಸ್ತೀರ್ಣದ ತಲ್ಲೂರು ಕೆರೆ ಬತ್ತಿ ಹೋಗಿತ್ತು. ಅಲ್ಲದೇ ಸಂಪೂರ್ಣವಾಗಿ ಹೂಳು ಕೂಡಾ ತುಂಬಿಕೊಂಡಿತ್ತು. ಕೆರೆಯಲ್ಲಿ ತುಂಬಿರೋ ಹೂಳು ತಗೆಯಲು ಕಳೆದ ಫೆಬ್ರವರಿ ತಿಂಗಳಲ್ಲಿ ಹೂಳು ತಗೆಯಲು ಯಶ್ ದಂಪತಿ ಚಾಲನೆ ನೀಡಿದ್ದರು. ಅಂದು ನೀಡಿದ್ದ ಕೆರೆ ಕಾಯಕಕ್ಕೆ ಇಂದು ಸಾರ್ಥಕತೆ ಸಿಕ್ಕಿದೆ.

    ಕೆರೆ ತುಂಬಿರೋದ್ರಿಂದ ಸುಮಾರು 10ಕ್ಕೂ ಹೆಚ್ಚು ಗ್ರಾಮಗಳಲ್ಲಿನ ರೈತರಿಗೆ ಅನುಕೂಲವಾಗಲಿದೆ. ನಟ ಯಶ್‍ನ ಕಾರ್ಯವನ್ನ ಈ ಭಾಗದ ರೈತರು ಕೊಂಡಾಡುತ್ತಿದ್ದು, ಬರದ ನಾಡಿನ ಭಗೀರಥ ಬಂದಂಗ ಬಂದು ನಮ್ಮೂರು ಕೆರೆ ಅಭಿವೃದ್ಧಿ ಪಡಿಸಿದ್ರು. ಈ ಬಾರಿ ಮಳೆಯೂ ಚೆನ್ನಾಗಿ ಆಯ್ತು, ಕೆರೆನೂ ತುಂಬಿದೆ ಅಂತ ಗ್ರಾಮಸ್ಥರು ಸಂತಸ ಹಂಚಿಕೊಳ್ಳುತ್ತಿದ್ದಾರೆ.

    ಯಶೋ ಮಾರ್ಗದಿಂದ ತಲ್ಲೂರು ಕೆರೆಯನ್ನು 4 ಕೋಟಿ ರೂಪಾಯಿ ವೆಚ್ಚದಲ್ಲಿ ಕೆರೆ ಅಭಿವೃದ್ಧಿ ಮಾಡಲಾಗಿದೆ. ಸೋಮವಾರ ಬೆಳಗ್ಗೆ 10 ಗಂಟೆಗೆ ತಲ್ಲೂರು ಕೆರೆಗೆ ಬಾಗಿನ ಅರ್ಪಿಸಿದ ಬಳಿಕ ನಟ ಯಶ್ ಹಾಗೂ ರಾಧಿಕಾ ಪಂಡಿತ ಕಾರ್ಯಕ್ರಮದಲ್ಲಿ ಭಾಗಿಯಾಗಿ ಯಶೋ ಮಾರ್ಗದ ಕಾರ್ಯದ ಬಗ್ಗೆ ರೈತರೊಂದಿಗೆ, ಗ್ರಾಮಸ್ಥರೊಂದಿಗೆ ಸಂತಸ ಹಂಚಿಕೊಳ್ಳಲಿದ್ದಾರೆ.

    https://www.youtube.com/watch?v=hKy92VBhRAY

    https://www.youtube.com/watch?v=JRN6dKohV5k

    https://www.youtube.com/watch?v=n1r_Ui38aCI

  • ಭಗೀರಥನಾದ್ರು, ಈಗ ಮೇವು ಪೂರೈಕೆಗೆ ಯಶೋಮಾರ್ಗ ಪ್ಲಾನ್

    ಭಗೀರಥನಾದ್ರು, ಈಗ ಮೇವು ಪೂರೈಕೆಗೆ ಯಶೋಮಾರ್ಗ ಪ್ಲಾನ್

    ಬೆಂಗಳೂರು: ರಾಕಿಂಗ್ ಸ್ಟಾರ್ ಯಶ್ ಈಗಾಗಲೇ ಯಶೋಮಾರ್ಗದ ಮೂಲಕ ಹಲವು ಸಮಾಜಮುಖಿ ಕೆಲಸಗಳನ್ನ ಮಾಡ್ತಿದ್ದಾರೆ. ಸದ್ಯ ಯಶ್ ಮತ್ತೊಂದು ರೈತಪರ ಕಾಳಜಿಯ ಕೆಲಸಕ್ಕೆ ಕೈ ಹಾಕಿದ್ದಾರೆ.

    ಮೇವಿನ ಕೊರತೆಯಿಂದ ಬಳಲ್ತಿರೋ ಜಾನುವಾರುಗಳಿಗೆ ಮೇವು ಒದಗಿಸುವ ಕಾರ್ಯಕ್ಕೆ ಯಶ್ ಕೈ ಜೋಡಿಸಿದ್ದಾರೆ. ಕೊಳ್ಳೆಗಾಲ ಸಮೀಪದ ಮಲೆಮಹದೇಶ್ವರ ಬೆಟ್ಟ ಹಾಗೂ ಅಲ್ಲಿನ ಹಲವು ಪ್ರದೇಶಗಳಿಗೆ ತೆರೆಳಿ ಅಲ್ಲಿ ಜಾನುವಾರುಗಳಿಗೆ ಆಗ್ತಿದ್ದ ಮೇವಿನ ಸಮಸ್ಯೆ ಬಗ್ಗೆ ಆದ ಮಾಧ್ಯಮದ ವರದಿ ಹಾಗು ವಿಡಿಯೋ ನೊಡಿದ್ದಾರೆ. ಸದ್ಯ ಮೇವಿನ ಸಮಸ್ಯೆ ನಿವಾರಿಸುವ ಕಾರ್ಯಕ್ಕೆ ಮುಂದಾಗಿದ್ದಾರೆ. ಅಲ್ಲಿನ ಗೋವುಗಳಿಗೆ ಒದಗಿಸುತ್ತಿರುವ ಮೇವು ಸಾಲದಾಗಿದ್ದು ಯಶ್ ಈ ಕುರಿತು ಸಂಸದ ದೃವನಾರಾಯಣ್ ಹಾಗೂ ಎ ಮಂಜು ಜೊತೆ ಮಾತನಾಡಿದ್ದಾರೆ.

    ಇದನ್ನೂ ಓದಿ: ಕೊಪ್ಪಳದಲ್ಲಿ ಯಶೋಮಾರ್ಗದ ಫಲ- ಬತ್ತಿ ಹೋಗಿದ್ದ ಕೆರೆಯಲ್ಲಿ ಉಕ್ಕುತ್ತಿದೆ ಜೀವ

    ಸದ್ಯ ಯಶೋಮಾರ್ಗ ಫೌಂಡೇಷನ್ ಮೂಲಕ ಹಲವು ರೈತಪರ ಕಾರ್ಯಕ್ಕೆ ಮುಂದಾಗಿರೋ ಯಶ್ ಈಗ ಮತ್ತೊಂದು ಹೆಜ್ಜೆ ಮುಂದೆ ಇಟ್ಟಿದ್ದು, ಅಲ್ಲಿನ ಜಾನುವಾರುಗಳಿಗೆ ಮೇವಿನ ತೊಂದರೆ ನಿವಾರಣೆಯಾಗುತ್ತೆ ಅನ್ನೋ ನಿರೀಕ್ಷೆಯಲ್ಲಿದ್ದೇನೆ ಅಂತ ಫೇಸ್‍ಬುಕ್‍ನಲ್ಲಿ ಬರೆದುಕೊಂಡಿದ್ದಾರೆ.