Tag: Yashwanth Sinha

  • ರಾಷ್ಟ್ರಪತಿ ಚುನಾವಣೆ: ವಿಪಕ್ಷಗಳಿಂದ ಅಭ್ಯರ್ಥಿಯಾಗಿ ಯಶವಂತ್‌ ಸಿನ್ಹಾ ಆಯ್ಕೆ

    ರಾಷ್ಟ್ರಪತಿ ಚುನಾವಣೆ: ವಿಪಕ್ಷಗಳಿಂದ ಅಭ್ಯರ್ಥಿಯಾಗಿ ಯಶವಂತ್‌ ಸಿನ್ಹಾ ಆಯ್ಕೆ

    ನವದೆಹಲಿ: ಜುಲೈ 18 ರಂದು ನಡೆಯಲಿರುವ ರಾಷ್ಟ್ರಪತಿ ಚುನಾವಣೆಗೆ ಹಣಕಾಸು ಮತ್ತು ವಿದೇಶಾಂಗ ವ್ಯವಹಾರಗಳ ಮಾಜಿ ಸಚಿವ ಯಶವಂತ್ ಸಿನ್ಹಾ ಅವರು ವಿಪಕ್ಷಗಳ ಅಭ್ಯರ್ಥಿಯಾಗಿ ಆಯ್ಕೆಯಾಗಿದ್ದಾರೆ ಎಂದು ಕಾಂಗ್ರೆಸ್ ನಾಯಕ ಜೈರಾಮ್ ರಮೇಶ್ ತಿಳಿಸಿದ್ದಾರೆ.

    ಸಾರ್ವಜನಿಕ ಜೀವನದಲ್ಲಿ ಸುದೀರ್ಘ ಮತ್ತು ವಿಶಿಷ್ಟವಾದ ವೃತ್ತಿ ಜೀವನದಲ್ಲಿ ಸಿನ್ಹಾ ಅವರು ಸಮರ್ಥ ಆಡಳಿತಗಾರರಾಗಿ, ನಿಪುಣ ಸಂಸದರಾಗಿ ಮತ್ತು ಹಣಕಾಸು, ವಿದೇಶಾಂಗ ವ್ಯವಹಾರಗಳ ಸಚಿವರಾಗಿ ಮೆಚ್ಚುಗೆ ಪಡೆದಿದ್ದಾರೆ. ಕೇಂದ್ರ ಸಚಿವರಾಗಿ ರಾಷ್ಟ್ರಕ್ಕೆ ಸೇವೆ ಸಲ್ಲಿಸಿದ್ದಾರೆ. ಅವರು ಭಾರತೀಯ ಗಣರಾಜ್ಯದ ಜಾತ್ಯತೀತ ಮತ್ತು ಪ್ರಜಾಸತ್ತಾತ್ಮಕ ಸ್ವರೂಪ ಮತ್ತು ಅದರ ಸಾಂವಿಧಾನಿಕ ಮೌಲ್ಯಗಳನ್ನು ಎತ್ತಿಹಿಡಿಯಲು ಅರ್ಹರಾಗಿದ್ದಾರೆ ಎಂದು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಲಾಗಿದೆ.

    ಮೋದಿ ಸರ್ಕಾರವು ರಾಷ್ಟ್ರಪತಿ ಅಭ್ಯರ್ಥಿ ಆಯ್ಕೆ ಸಂಬಂಧ ಯಾವುದೇ ಗಂಭೀರ ಪ್ರಯತ್ನ ಮಾಡದಿರುವುದಕ್ಕೆ ನಾವು ವಿಷಾದಿಸುತ್ತೇವೆ. ಆದ್ದರಿಂದ ನಾವು ಬಿಜೆಪಿ ಮತ್ತು ಅದರ ಮಿತ್ರಪಕ್ಷಗಳಿಗೆ ಸಿನ್ಹಾ ಅವರ ಉಮೇದುವಾರಿಕೆಯನ್ನು ಬೆಂಬಲಿಸುವಂತೆ ಮನವಿ ಮಾಡುತ್ತೇವೆ. ಇದರಿಂದಾಗಿ ರಾಷ್ಟ್ರವು ಯೋಗ್ಯವಾದ ರಾಷ್ಟ್ರಪತಿಯನ್ನು ಅವಿರೋಧವಾಗಿ ಆಯ್ಕೆ ಮಾಡಬಹುದಾಗಿದೆ ಎಂದು ಹೇಳಿಕೆಯಲ್ಲಿ ಹೇಳಲಾಗಿದೆ.

    ಸಂಸತ್‌ ಭವನದಲ್ಲಿ ಎನ್‌ಸಿಪಿ ವರಿಷ್ಠ ಶರದ್‌ ಪವಾರ್‌ ನೇತೃತ್ವದಲ್ಲಿ ನಡೆದ ಸಭೆಯಲ್ಲಿ ವಿಪಕ್ಷಗಳಿಂದ ಒಮ್ಮತದಿಂದ ರಾಷ್ಟ್ರಪತಿ ಅಭ್ಯರ್ಥಿಯಾಗಿ ಯಶವಂತ್‌ ಸಿನ್ಹಾ ಅವರನ್ನು ಆಯ್ಕೆ ಮಾಡಲಾಯಿತು.

    Live Tv

  • ಹೂಹಾರ ಹಾಕಿ ಆರೋಪಿಗಳನ್ನು ಸ್ವಾಗತಿಸಿದ್ದ ಮಗನ ವಿರುದ್ಧ ಮಾಜಿ ಕೇಂದ್ರ ಸಚಿವ ಗರಂ!

    ಹೂಹಾರ ಹಾಕಿ ಆರೋಪಿಗಳನ್ನು ಸ್ವಾಗತಿಸಿದ್ದ ಮಗನ ವಿರುದ್ಧ ಮಾಜಿ ಕೇಂದ್ರ ಸಚಿವ ಗರಂ!

    ರಾಂಚಿ: ಗೋ ರಕ್ಷಣೆಯ ಹೆಸರಿನಲ್ಲಿ ಕೊಲೆಗೈದ 7 ಆರೋಪಿಗಳಿಗೆ ಹೂಹಾರ ಹಾಕಿ ಆಕ್ರೋಶಕ್ಕೆ ಒಳಗಾಗಿದ್ದ ಜಯಂತ್ ಸಿನ್ಹಾ ವಿರುದ್ಧ ಇದೀಗ ತಂದೆ, ಮಾಜಿ ಕೇಂದ್ರ ಸಚಿವ ಯಶ್ವಂತ್ ಸಿನ್ಹಾ ಗರಂ ಆಗಿದ್ದಾರೆ.

    ಈ ಕುರಿತು ಟ್ವಿಟ್ಟರ್ ನಲ್ಲಿ ಆಕ್ರೋಶ ವ್ಯಕ್ತಪಡಿಸಿದ ಸಿನ್ಹಾ, ಮಗನ ಈ ಕಾರ್ಯವನ್ನು ಯಾವುದೇ ಕಾರಣಕ್ಕೂ ನಾನು ಒಪ್ಪಲು ಸಿದ್ಧನಿಲ್ಲ. ಈ ಹಿಂದೆ ನಾನು ಒಬ್ಬ ನಾಲಾಯಕ್ ಮಗನ ಅಪ್ಪನಾಗಿದ್ದೆ. ಆದ್ರೆ ಇದೀಗ ಪಾತ್ರಗಳು ಬದಲಾಗಿವೆ. ಇದು ಟ್ವಿಟ್ಟರ್ ಮಹಿಮೆ ಅಂತ ಹೇಳೋ ಮೂಲಕ ಮಗನ ವಿರುದ್ಧ ಕೆಂಡಾಮಂಡಲಾಗಿದ್ದಾರೆ.

    ಏನಿದು ಘಟನೆ?:
    ಕಳೆದ ವರ್ಷ ಜೂನ್ ತಿಂಗಳಲ್ಲಿ ಜಾರ್ಖಂಡ್ ನ ರಾಮ್ ಗ್ರಹ್ ನಲ್ಲಿ 55 ವರ್ಷದ ವ್ಯಕ್ತಿಯೊಬ್ಬರು ದನದ ಮಾಂಸವನ್ನು ಸಾಗಾಟ ಮಾಡುತ್ತಿದ್ದಾರೆಂದು ಆರೋಪಿಸಿ ಅವರನ್ನ ಕಾರಿನಿಂದ ಎಳೆದು ಹಲ್ಲೆ ಮಾಡಲಾಗಿತ್ತು. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಸ್ಥಳೀಯ ಬಿಜೆಪಿ ಮುಖಂಡ ಸೇರಿ 11 ಮಂದಿ ಜೈಲು ಪಾಲಾಗಿದ್ದರು. ಇದೀಗ ಒಂದು ವರ್ಷದ ನಂತರ ಜೂನ್ 29ರಂದು ಜಾರ್ಖಂಡ್ ಹೈಕೋರ್ಟ್ 8 ಆರೋಪಿಗಳ ಜೀವಾವಧಿ ಶಿಕ್ಷೆಯನ್ನು ರದ್ದುಗೊಳಿಸಿತ್ತು.ಹೀಗಾಗಿ ಜೈಲಿನಿಂದ ಜಾಮೀನಿನ ಮೇಲೆ ಬಿಡುಗಡೆಯಾದ ಇವರೆಲ್ಲರೂ ರಾಂಚಿಯಲ್ಲಿರೋ ಜಯಂತ್ ಸಿನ್ಹಾ ಅವರ ನಿವಾಸಕ್ಕೆ ಭೇಟಿ ಕೊಟ್ಟಿದ್ದರು. ಈ ವೇಳೆ ಸಚಿವರು ಎಲ್ಲರನ್ನೂ ಹಾರ ಹಾಕಿ ಸ್ವಾಗತಿಸಿದ್ದಾರೆ.

    ಈ ಕುರಿತ ಭಾವಚಿತ್ರಗಳು ಇದೀಗ ವೈರಲ್ ಆಗಿದ್ದು, ಇದೀಗ ಮಗ ಜಯಂತ್ ಸಿನ್ಹಾ ವಿರುದ್ಧ ತಂದೆ ಯಶ್ವಂತ್ ಸಿಂಗ್ ಕಿಡಿಕಾರಿದ್ದಾರೆ.

  • ಬಿಜೆಪಿ ತೊರೆದ ಮಾಜಿ ಕೇಂದ್ರ ಸಚಿವ ಯಶವಂತ್ ಸಿನ್ಹಾ

    ಬಿಜೆಪಿ ತೊರೆದ ಮಾಜಿ ಕೇಂದ್ರ ಸಚಿವ ಯಶವಂತ್ ಸಿನ್ಹಾ

    ನವದೆಹಲಿ: ಇಂದು ರಾಜಕಾರಣದಿಂದ ಸನ್ಯಾಸವನ್ನು ತೆಗೆದುಕೊಳ್ಳುತ್ತಿದ್ದೇನೆ, ಬಿಜೆಪಿಯನ್ನು ತೊರೆದಿದ್ದೇನೆ ಎಂದು ಮಾಜಿ ಕೇಂದ್ರ ಸಚಿವ ಯಶ್ವಂತ್ ಸಿನ್ಹಾ ಹೇಳಿದ್ದಾರೆ.

    ಕಳೆದ ಜನವರಿ 30 ರಂದು ಸ್ಥಾಪಿಸಿದ ‘ರಾಷ್ಟ್ರ ಮಂಚ್’ನ ಮೊದಲ ಸಭೆಯಲ್ಲಿ ಮಾತನಾಡಿದ ಸಿನ್ಹಾ, ಕೇಂದ್ರದ ಎನ್‍ಡಿಎ ಸರ್ಕಾರ ಸಾಂವಿಧಾನಿಕ ಸಂಸ್ಥೆಗಳನ್ನು ಅಶಕ್ತಗೊಳಿಸುತ್ತಿದೆ. ಈ ಬಾರಿಯ ಬಜೆಟ್ ಕಲಾಪ ಹಾಳಾಯ್ತು. ಹಾಗಾಗಿ ಬಿಜೆಪಿಯೊಂದಿಗಿನ ದೀರ್ಘಕಾಲದ ಸಂಬಂಧವನ್ನು ತೊರೆದಿದ್ದೇನೆ ಎಂದು ಸ್ಪಷ್ಟಪಡಿಸಿದ್ದಾರೆ.

    ಇನ್ನು ಮುಂದೆ ಪ್ರಜಾಪ್ರಭುತ್ವದ ರಕ್ಷಣೆಗಾಗಿ ಕೆಲಸ ಮಾಡುತ್ತೇನೆ. ಬರುವ ದಿನಗಳಲ್ಲಿ ಬಿಜೆಪಿಯೇತರ ಪಕ್ಷಗಳನ್ನು ಒಗ್ಗೂಡಿಸುವ ಕೆಲಸ ಮಾಡುತ್ತೇನೆ. ಯಾವುದೇ ರಾಜಕೀಯ ಪಕ್ಷವನ್ನು ಸೇರುವುದಿಲ್ಲ, ಪಕ್ಷಾಧಾರಿತ ರಾಜಕೀಯ ಮಾಡುವುದಿಲ್ಲ, ಯಾವುದೇ ಉನ್ನತ ಹುದ್ದೆಯ ಆಕಾಂಕ್ಷಿಯಲ್ಲ ಎಂದು ತಿಳಿಸಿದರು.

    ಇದೇ ವೇಳೆ ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರದ ನೀತಿಗಳ ವಿರುದ್ಧ ಟೀಕಾಪ್ರಹಾರ ನಡೆಸಿದರು. ಸಾರ್ವಜನಿಕ ಹಿತಾಸಕ್ತಿ ಇಲ್ಲದ ಕೇಂದ್ರದ ಯೋಜನೆಗಳ ವಿರುದ್ಧ ರಾಷ್ಟ್ರ ಮಂಚ್ ಇನ್ನು ಮುಂದೆ ಹೋರಾಡಲಿದೆ. ಹಿರಿಯ ನಾಯಕರಾದ ಎಲ್.ಕೆ.ಅಡ್ವಾಣಿ, ಮುರಳಿ ಮನೋಹರ್ ಜೋಷಿ ಅವರಿಗೆ ಮೌನ ಮುರಿಯುವಂತೆ ಆಗ್ರಹಿಸಿದರು.