Tag: yasir khan pathan

  • ನನ್ನಂಥ ಮುಸ್ಲಿಂ ಸಮುದಾಯದ ಬಡ ವ್ಯಕ್ತಿಯನ್ನು ಗೆಲ್ಲಿಸಿದ್ದಾರೆ: ಯಾಸಿರ್ ಪಠಾಣ್

    ನನ್ನಂಥ ಮುಸ್ಲಿಂ ಸಮುದಾಯದ ಬಡ ವ್ಯಕ್ತಿಯನ್ನು ಗೆಲ್ಲಿಸಿದ್ದಾರೆ: ಯಾಸಿರ್ ಪಠಾಣ್

    ಹಾವೇರಿ: ನಮ್ಮ ಸರ್ಕಾರದ ವಿರುದ್ಧ ಎಷ್ಟೇ ಆರೋಪ ಮಾಡಿದರೂ ಜನರು ಅದಕ್ಕೆ ಉತ್ತರ ನೀಡಿದ್ದಾರೆ. ಅಂತಹ ದೊಡ್ಡ ನಾಯಕರ ಮುಂದೆ ನನ್ನಂಥ ಸಾಮಾನ್ಯ ವ್ಯಕ್ತಿಯನ್ನು ಗೆಲ್ಲಿಸಿದ್ದಾರೆ ಎಂದು ಶಿಗ್ಗಾಂವಿ ಕಾಂಗ್ರೆಸ್ ಅಭ್ಯರ್ಥಿ ಯಾಸಿರ್ ಖಾನ್ ಪಠಾಣ್ (Yasir Khan Pathan) ಹೇಳಿದ್ದಾರೆ.

    ಶಿಗ್ಗಾಂವಿ ಉಪಚುನಾವಣೆಯಲ್ಲಿ (Shiggaon By Election) ಬಿಜೆಪಿ ಅಭ್ಯರ್ಥಿ ಭರತ್ ಬೊಮ್ಮಾಯಿ (Bharath Bommai) ಅವರನ್ನು ಹಿಂದಿಕ್ಕಿ ಕಾಂಗ್ರೆಸ್ ಅಭ್ಯರ್ಥಿ ಯಾಸಿರ್ ಪಠಾಣ್ ಭರ್ಜರಿ ಜಯಗಳಿಸಿದ್ದಾರೆ. ಬಳಿಕ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಎಲ್ಲಾ ಧರ್ಮದ ಎಲ್ಲಾ ಜಾತಿಯ ಜನರು ನನಗೆ ಆಶೀರ್ವಾದ ಮಾಡಿದ್ದಾರೆ. ಬಿಜೆಪಿಯವರು (BJP) ಎಷ್ಟೆಲ್ಲಾ ಆರೋಪ ಮಾಡಿದರೂ ಜನರು ಉತ್ತರ ನೀಡಿದ್ದಾರೆ. ಇದರಲ್ಲಿ ಸಿದ್ದರಾಮಯ್ಯ, ಡಿಕೆಶಿ, ಜಮೀರ್ ಸಾಹೇಬ್ರು ಸೇರಿದಂತೆ ಎಲ್ಲಾ ಕಾಂಗ್ರೆಸ್ ಮುಖಂಡರ, ಕಾರ್ಯಕರ್ತರ ಶ್ರಮ ಇದೆ. ನನ್ನಂಥ ಮುಸ್ಲಿಂ ಸಮುದಾಯದ ಬಡ ವ್ಯಕ್ತಿಯನ್ನು ಗೆಲ್ಲಿಸಿದ್ದಾರೆ ಎಂದು ಸಂತಸ ವ್ಯಕ್ತಪಡಿಸಿದರು. ಇದನ್ನೂ ಓದಿ: ಮಹಾರಾಷ್ಟ್ರದ ಮುಂದಿನ ಸಿಎಂ ಯಾರು? – ದೇವೇಂದ್ರ ಫಡ್ನವಿಸ್‌ ಹೇಳಿದ್ದೇನು?

    ಬಿಜೆಪಿಯವರು ಸೋತ ಮೇಲೆ ಹಣದ ಹೊಳೆ ಹರಿಸಿದ್ದಾರೆ, ಅಧಿಕಾರ ದುರುಪಯೋಗ ಮಾಡಿಕೊಂಡಿದ್ದಾರೆ ಎನ್ನುತ್ತಾರೆ. ಆದರೆ ಜನರಿಗೆ ಉತ್ತಮ ಆಡಳಿತ ಬೇಕಿದೆ. ಆದ್ದರಿಂದ ಈ ತೀರ್ಪು ನೀಡಿದ್ದಾರೆ ಎಂದರು.  ಇದನ್ನೂ ಓದಿ: ಉಪಚುನಾವಣಾ ಫಲಿತಾಂಶ ಕಂಡು ಟಿವಿ ಒಡೆದು ಹಾಕಿದ ಬಿಜೆಪಿ ಕಾರ್ಯಕರ್ತ

    ಯಾಸಿರ್ ಪಠಾಣ್ ಗೆಲುವಿಗೆ ಕಾರಣಗಳು:
    *ಶಿಗ್ಗಾಂವಿ ಕ್ಷೇತ್ರದಲ್ಲಿ ರಾಜೀ ರಾಜಕೀಯಕ್ಕೆ ಮುಕ್ತಿ ಹಾಡಿ ಗಂಭೀರವಾಗಿ ಕಾಂಗ್ರೆಸ್ ಚುನಾವಣೆ ಎದುರಿಸಿದ ಹಿನ್ನೆಲೆ ಪೈಲ್ವಾನ್ ಗೆಲುವು.
    *ಸಚಿವ ಸತೀಶ್ ಜಾರಕಿಹೊಳಿ ಶಿಗ್ಗಾಂವಿಯಲ್ಲೇ ವಸತಿ ಹೂಡಿ ತಮ್ಮದೇ ಚುನಾವಣೆ ಎಂಬಂತೆ ಅಹಿಂದ ಮತದಾರರ ಓಲೈಕೆ ಮಾಡಿದ್ದರು.
    *ಬಿಜೆಪಿ ನಂಬಿಕೊಂಡಿದ್ದ ಲಿಂಗಾಯತ ಮತದಾರರಲ್ಲಿ ಸ್ವಲ್ಪ ಮತದಾರರು ‘ಕೈ’ ಪರ ಮತ ಚಲಾವಣೆ.
    *ಕಾಂಗ್ರೆಸ್ ಪಡೆ ಶಿಗ್ಗಾಂವಿಯಲ್ಲಿಯೇ ಬೀಡು ಬಿಟ್ಟು ಕ್ಯಾಂಪೇನ್ ಮಾಡಿದ್ದು ಪಠಾಣ್‌ಗೆ ವರವಾಯಿತು.
    *ಖಾದ್ರಿ ಮನವೊಲಿಸಿ ಪಠಾಣ್‌ಗೆ ಜೋಡು ಮಾಡಿ ಚುನಾವಣೆ ಎದುರಿಸಿದ ಹಿನ್ನೆಲೆ ಪಠಾಣ್ ಗೆಲುವು ಸುಲಭ.
    *ಬಿಜೆಪಿಯ ವಕ್ಫ್ ಅಸ್ತ್ರ ವಿಫಲ.
    *ಬಸವರಾಜ ಬೊಮ್ಮಾಯಿ ಮೊದಲ ಸಲ ಬಹಳ ಪ್ರಬಲವಾಗಿ ಪ್ರಯೋಗಿಸಿದ್ದ ಹಿಂದುತ್ವ ಅಸ್ತ್ರ ವಿಫಲ.
    *ಪಂಚಮಸಾಲಿ ಮತದಾರರು ‘ಕೈ’ ಕಡೆ ವಾಲಿದರು.
    *ಪ್ರತಿ ಸಲ ಬೊಮ್ಮಾಯಿ ಪಾಲಾಗ್ತಿದ್ದ 10% ಮುಸ್ಲಿಂ ಮತಗಳೂ ಈ ಬಾರಿ ಕಾಂಗ್ರೆಸ್ ಕೈ ಹಿಡಿದಿದೆ.
    *ಸಿದ್ದರಾಮಯ್ಯ ಅವರನ್ನು ಮುಡಾ ಹಗರಣದಲ್ಲಿ ಸಿಲುಕಿಸಲಾಗ್ತಿದೆ ಎಂದು ಕುರುಬರು ‘ಕೈ’ ಬಲಪಡಿಸಲು ಮತ್ತೆ ಕೃಪೆ ತೋರಿದರು.

  • ಜನರಿಗಾಗಿ ದುಡಿಯುವ ನಮ್ಮ ಸಂಕಲ್ಪಕ್ಕೆ ಚುನಾವಣಾ ಫಲಿತಾಂಶ ಇನ್ನಷ್ಟು ಬಲ ನೀಡಿದೆ: ಸಿಎಂ

    ಜನರಿಗಾಗಿ ದುಡಿಯುವ ನಮ್ಮ ಸಂಕಲ್ಪಕ್ಕೆ ಚುನಾವಣಾ ಫಲಿತಾಂಶ ಇನ್ನಷ್ಟು ಬಲ ನೀಡಿದೆ: ಸಿಎಂ

    ಬೆಂಗಳೂರು: ವಿಧಾನಸಭಾ ಉಪಚುನಾವಣೆ ಫಲಿತಾಂಶ ಪ್ರಕಟವಾದ ಬೆನ್ನಲ್ಲೇ ಸಿಎಂ ಸಿದ್ದರಾಮಯ್ಯ (CM Siddaramaiah) ತಮ್ಮ ಎಕ್ಸ್ ಖಾತೆಯಲ್ಲಿ ಗೆಲುವಿನ ಸಂಭ್ರಮಕ್ಕೆ ಪ್ರತಿಕ್ರಿಯೆ ನೀಡಿದ್ದಾರೆ.

    ಸಿಎಂ ಪೋಸ್ಟ್‌ನಲ್ಲಿ ಏನಿದೆ?
    ವಿಧಾನಸಭಾ ಉಪಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳಿಗೆ ಮತನೀಡಿ, ಆಶೀರ್ವದಿಸಿದ ಶಿಗ್ಗಾಂವಿ, ಸಂಡೂರು (Sanduru) ಹಾಗೂ ಚನ್ನಪಟ್ಟಣದ ಮತದಾರರಿಗೆ ನನ್ನ ಪ್ರೀತಿಪೂರ್ವಕ ಧನ್ಯವಾದಗಳು.

    ಈ ಮೂರೂ ಕ್ಷೇತ್ರಗಳಲ್ಲಿ ಭರ್ಜರಿ ಜಯ ದಾಖಲಿಸಿ, ವಿಧಾನಸಭೆಗೆ ಪ್ರವೇಶಿಸಿರುವ ನಮ್ಮ ಅಭ್ಯರ್ಥಿಗಳಾದ ಯಾಸಿರ್ ಅಹ್ಮದ್ ಖಾನ್ ಪಠಾಣ್, ಅನ್ನಪೂರ್ಣ ತುಕಾರಾಮ್ ಹಾಗೂ ಸಿ.ಪಿ.ಯೋಗೇಶ್ವರ್ ಅವರಿಗೆ ಹೃದಯಪೂರ್ವಕ ಅಭಿನಂದನೆಗಳು. ಇದನ್ನೂ ಓದಿ: ಸಿಪಿವೈ ಶಾಸಕರಾಗಿರಬಹುದು, ಬಿಜೆಪಿಯಲ್ಲೇ ಇದ್ದಿದ್ರೆ ಲೀಡರ್ ಆಗಿರುತ್ತಿದ್ರು: ಅಶ್ವಥ್ ನಾರಾಯಣ್

    ವಿಪಕ್ಷಗಳ ನಿರಂತರ ಅಪಪ್ರಚಾರ, ಸುಳ್ಳು ಆರೋಪಗಳನ್ನು ಮೆಟ್ಟಿನಿಂತು ನಾವು ಸಾಧಿಸಿರುವ ಈ ಗೆಲುವು ದಿಗ್ವಿಜಯವಾಗಿ ಕಾಣುತ್ತಿದೆ. ಈ ಗೆಲುವಿನ ಹಿಂದಿರುವ ನಮ್ಮ ಕಾರ್ಯಕರ್ತರು ಮತ್ತು ಮುಖಂಡರ ಅಪಾರ ಶ್ರಮವನ್ನು ಇದೇ ವೇಳೆ ನೆನೆಯುತ್ತೇನೆ. ಇದನ್ನೂ ಓದಿ: ಯಡಿಯೂರಪ್ಪ, ಪುತ್ರ ವ್ಯಾಮೋಹದಿಂದ ಬಿಜೆಪಿ ಸೋತಿದೆ: ಯತ್ನಾಳ್‌ ವಾಗ್ದಾಳಿ

    ಈ ಗೆಲುವು ನಮ್ಮ ಸರ್ಕಾರದ ಮೇಲಿನ ಜವಾಬ್ದಾರಿಯನ್ನು ಮತ್ತಷ್ಟು ಹೆಚ್ಚಿಸಿದೆ. ಜನರಿಗಾಗಿ ದುಡಿಯುವ ನಮ್ಮ ಸಂಕಲ್ಪಕ್ಕೆ ಚುನಾವಣಾ ಫಲಿತಾಂಶ ಇನ್ನಷ್ಟು ಬಲ ತುಂಬಿದೆ. ತಮ್ಮೆಲ್ಲರಿಗೂ ಮತ್ತೊಮ್ಮೆ ಧನ್ಯವಾದಗಳು ಎಂದು ಬರೆದುಕೊಂಡಿದ್ದಾರೆ. ಇದನ್ನೂ ಓದಿ: ದರ್ಶನ್ & ಗ್ಯಾಂಗ್ ವಿರುದ್ಧ 1200 ಪುಟಗಳ ಹೆಚ್ಚುವರಿ ಚಾರ್ಜ್ ಶೀಟ್ ಸಲ್ಲಿಕೆ

  • ಯಾಸೀರ್ ಪಠಾಣ್ ಮೇಲೆ ಯಾವುದೇ ರೌಡಿಶೀಟ್ ಇಲ್ಲ: ಎಸ್ಪಿ ಸ್ಪಷ್ಟನೆ

    ಯಾಸೀರ್ ಪಠಾಣ್ ಮೇಲೆ ಯಾವುದೇ ರೌಡಿಶೀಟ್ ಇಲ್ಲ: ಎಸ್ಪಿ ಸ್ಪಷ್ಟನೆ

    ಹಾವೇರಿ: ಶಿಗ್ಗಾಂವಿ ಕಾಂಗ್ರೆಸ್ ಅಭ್ಯರ್ಥಿ ಯಾಸೀರ್ ಖಾನ್ ಪಠಾಣ್ (Yasir Khan Pathan) ಮೇಲೆ ಯಾವುದೇ ರೀತಿಯ ರೌಡಿಶೀಟ್ ಇರುವುದಿಲ್ಲ ಎಂದು ಹಾವೇರಿ (Haveri) ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳು ಸ್ಪಷ್ಟನೆ ನೀಡಿದ್ದಾರೆ.

    ಹಾವೇರಿ ಜಿಲ್ಲೆಯ ಹಾನಗಲ್ ತಾಲೂಕಿನ ಬೊಮ್ಮನಹಳ್ಳಿ ಗ್ರಾಮದವರಾದ ಯಾಸೀರ್ ಪಠಾಣ್ ಮೇಲೆ ರೌಡಿಶೀಟ್ (Rowdy Sheet) ಇದೆ ಎಂದು ಕೆಲವು ಮಾಧ್ಯಮಗಳಲ್ಲಿ ಪ್ರಸಾರವಾಗಿರುತ್ತದೆ. ಶಿಗ್ಗಾಂವಿಯ (Shiggaon) ಡಿಎಸ್‌ಪಿ ಮತ್ತು ಪೊಲೀಸ್ ಇನ್ಸಪೆಕ್ಟರ್ (ಪಿಐ) ಅವರ ಕಚೇರಿಯ ದಾಖಲಾತಿಗಳನ್ನು ಪರಿಶೀಲಿಸಲಾಗಿದ್ದು, ಪ್ರಸ್ತುತ ಯಾಸೀರ್ ಪಠಾಣ್ ಅವರ ಮೇಲೆ ಯಾವುದೇ ರೌಡಿ ಶೀಟ್ ಇರುವುದಿಲ್ಲ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳ ಕಚೇರಿಯ ಪ್ರಕಟಣೆ ತಿಳಿಸಿದೆ. ಇದನ್ನೂ ಓದಿ: ಜಮೀರ್‌ಗೆ ಮತ್ತೊಂದು ಸಂಕಷ್ಟ; ಸಚಿವರ ವಿರುದ್ಧ ಚುನಾವಣಾಧಿಕಾರಿಗಳಿಂದ ದೂರು

    ಈ ಮೊದಲು ಎಸ್ಪಿ ಅಂಶುಕುಮಾರ್ ಮಾಧ್ಯಮಗಳೊಂದಿಗೆ ಮಾತನಾಡಿದ್ದ ವೇಳೆ, ಪಠಾಣ್ ನಾಮಪತ್ರ ಸಲ್ಲಿಸುವ ವೇಳೆ ಅಫಿಡವಿಟ್‌ನಲ್ಲಿ ಯಾವುದೇ ಪ್ರಕರಣ ಇಲ್ಲ ಎಂದು ಹೇಳಿದ್ದರು. ಆದರೆ ಅವರ ಮೇಲೆ ರೌಡಿಶೀಟರ್ ಪ್ರಕರಣ ಇದೆ ಎಂದು ಗಂಭೀರ ಆರೋಪ ಮಾಡಿದ್ದರು. ಇದನ್ನೂ ಓದಿ: ಪ್ರೇಮಿ ಮದುವೆಗೆ ನಿರಾಕರಿಸಿದ ಆರೋಪ- ಯುವತಿ ಆತ್ಮಹತ್ಯೆಗೆ ಶರಣು

  • ಶಿಗ್ಗಾಂವಿ ʻಕೈʼ ಅಭ್ಯರ್ಥಿ ಯಾಸೀರ್ ಖಾನ್ ಮೇಲೆ ರೌಡಿಶೀಟರ್ ಕೇಸ್‌ ಇದೆ: ಎಸ್ಪಿ ಅಂಶುಕುಮಾರ್ ಆರೋಪ

    ಶಿಗ್ಗಾಂವಿ ʻಕೈʼ ಅಭ್ಯರ್ಥಿ ಯಾಸೀರ್ ಖಾನ್ ಮೇಲೆ ರೌಡಿಶೀಟರ್ ಕೇಸ್‌ ಇದೆ: ಎಸ್ಪಿ ಅಂಶುಕುಮಾರ್ ಆರೋಪ

    ಹಾವೇರಿ: ಶಿಗ್ಗಾಂವಿ (Shiggaon) ಕಾಂಗ್ರೆಸ್‌ ಅಭ್ಯರ್ಥಿ ಯಾಸೀರ್ ಖಾನ್ ಪಠಾಣ್ ಮೇಲೆ ರೌಡಿಶೀಟರ್ ಪ್ರಕರಣ ಇದೆ ಎಂದು ಹಾವೇರಿ ಎಸ್ಪಿ ಅಂಶುಕುಮಾರ್ (SP Anshukumar) ಆರೋಪಿಸಿದ್ದಾರೆ.

    ಈ ಬಗ್ಗೆ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಪಠಾಣ್ (Yasir Khan Pathan) ಮೇಲೆ ರೌಡಿಶೀಟರ್ ಪ್ರಕರಣ ಇದೆ. ಪಠಾಣ್ ನಾಮಪತ್ರಸಲ್ಲಿಸುವ ವೇಳೆ ಅಫಿಡವಿಟ್‌ನಲ್ಲಿ ಯಾವುದೇ ಪ್ರಕರಣ ಇಲ್ಲ ಎಂದು ಹೇಳಿದ್ದರು. ಆದರೆ ಅವರ ಮೇಲೆ ರೌಡಿಶೀಟರ್ ಪ್ರಕರಣ ಇದೆ ಎಂದು ಗಂಭೀರ ಆರೋಪ ಮಾಡಿದ್ದಾರೆ. ಇದನ್ನೂ ಓದಿ: ಪಟಾಕಿ ಸಿಡಿಸುವುದು ಮೂಲಭೂತ ಹಕ್ಕು ಎನ್ನುವವರು ಕೋರ್ಟ್‌ಗೆ ಬರಲಿ – ಶಾಶ್ವತ ಪಟಾಕಿ ನಿಷೇಧದ ಬಗ್ಗೆ ಪ್ರಸ್ತಾಪಿಸಿದ ಸುಪ್ರೀಂ

    ಮಾಜಿ ಶಾಸಕ ಅಜ್ಜಂಪೀರ್ ಖಾದ್ರಿಯ ಕೂಡ ಪಠಾಣ್ ಓರ್ವ ರೌಡಿಶೀಟರ್ ಎಂದು ಕಾಂಗ್ರೆಸ್ ಟಿಕೇಟ್ ಘೋಷಣೆಯಾದ ದಿನವೇ ಆರೋಪಿಸಿದ್ದರು. ಮಾಜಿ ಸಿಎಂ ಬಸವರಾಜ ಬೊಮ್ಮಾಯಿ (Basavaraj Bommai) ಅವರು, ಪಠಾಣ್ ಮೇಲೆ ರೌಡಿ ಶೀಟರ್ ಕೇಸ್ ಇದೆ, ವಿವಿಧ ಪ್ರಕರಣ ಇರೋದನ್ನು ಆಫಿಡಿವೇಟ್‌ನಲ್ಲಿ ಮುಚ್ಚಿಟ್ಟಿದ್ದಾರೆ ಎಂದು ಗಂಭೀರ ಆರೋಪ ಮಾಡಿದ್ದರು. ಈ ಕುರಿತು ಖಾದ್ರಿ ಅವರೇ ಪಠಾಣ್ ರೌಡಿ ಎಂದು ಹೇಳಿದ್ದಾರೆ ಎಂದು ವಾಗ್ದಾಳಿ ನಡೆಸಿದ್ದರು. ಇದನ್ನೂ ಓದಿ: Bengaluru| ಬೈಕ್ ಡಿಕ್ಕಿ ಹೊಡೆದು 8ರ ಬಾಲಕ ಸಾವು

    ಇದೀಗ ಚುನಾವಣಾ ಅಫಿಡವಿಟ್‌ನಲ್ಲಿ ಮಾಹಿತಿ ಮರೆಮಾಚಿದ್ದಾರೆ ಎಂಬ ಆರೋಪದ ಮೇಲೆ ಕಾನೂನು ಸಮರಕ್ಕೆ ಬಸವರಾಜ್ ಬೊಮ್ಮಾಯಿ ಮುಂದಾಗಿದ್ದಾರೆ. ಇದನ್ನೂ ಓದಿ: ನಿಮ್ಮ ಜೊತೆ ಯೋಗ್ಯನಾಗಿ ಕೆಲಸ ಮಾಡಲು ಇದೊಂದು ಬಾರಿ ಅವಕಾಶ ಮಾಡಿಕೊಡಿ: ನಿಖಿಲ್‌