Tag: Yathabhava

  • ವರಮಹಾಲಕ್ಷ್ಮೀ ಹಬ್ಬಕ್ಕೆ ‘ಯಥಾಭವ’ ಚಿತ್ರದ ಟೀಸರ್

    ವರಮಹಾಲಕ್ಷ್ಮೀ ಹಬ್ಬಕ್ಕೆ ‘ಯಥಾಭವ’ ಚಿತ್ರದ ಟೀಸರ್

    ಗೌತಮ್ ಬಸವರಾಜು (Gautham Basavaraj) ಕಥೆ, ಚಿತ್ರಕಥೆ ಹಾಗೂ ಸಂಭಾಷಣೆ ಬರೆದು ನಿರ್ದೇಶಿಸಿರುವ ‘ಯಥಾಭವ’ (Yathabhava) ಚಿತ್ರದ ಟೀಸರ್ (Teaser) ಆಗಸ್ಟ್ 25ರಂದು ರಿಲೀಸ್ ಆಗುತ್ತಿದೆ. ವರಮಹಾಲಕ್ಷ್ಮೀ ಹಬ್ಬದ ದಿನದಂದು ಟೀಸರ್ ರಿಲೀಸ್ ಮಾಡುವ ಮೂಲಕ ಅಭಿಮಾನಿಗಳಿಗೆ ಹಬ್ಬದ ಗಿಫ್ಟ್ ನೀಡುತ್ತಿದೆ ಚಿತ್ರತಂಡ.

    ಕೋರ್ಟ್ ಡ್ರಾಮ ಜಾನರ್ ನ ಈ ಚಿತ್ರದಲ್ಲಿ ಪವನ್ ಶಂಕರ್ (Pawan Shankar) ಹಾಗೂ ಸಹನ ಸುಧಾಕರ್ (Sahana Sudhakar) ನಾಯಕ – ನಾಯಕಿಯಾಗಿ ನಟಿಸಿದ್ದಾರೆ. ಹಿರಿಯ ನಟ ರಾಕ್ ಲೈನ್ ಸುಧಾಕರ್ ಅವರ ಪುತ್ರ ಗೌತಮ್ ಸುಧಾಕರ್ ಈ ಚಿತ್ರದ ಪ್ರಮುಖಪಾತ್ರದಲ್ಲಿ ಕಾಣಿಸಿಕೊಳ್ಳುತ್ತಿದ್ದಾರೆ.  ದತ್ತಣ್ಣ,  ಬಾಲ ರಾಜವಾಡಿ, ಗೋಪಾಲಕೃಷ್ಣ ದೇಶಪಾಂಡೆ, ಮಾಸ್ಟರ್ ಶಮಂತ್, ನೀನಾಸಂ ಆನಂದ್, ಉಮಾ ಹೆಬ್ಬಾರ್, ಮಹೇಶ್ ಕಾಳಿ ಮುಂತಾದವರು ಚಿತ್ರದ ತಾರಾಬಳಗದಲ್ಲಿದ್ದಾರೆ.

    Macht entertainments ಲಾಂಛನದಲ್ಲಿ ಸುಜಾತ ಕುಮಾರಿ ಹಾಗೂ ಅನಿಲ್ ಕುಮಾರ್ ಬಿ.ಎನ್ ನಿರ್ಮಾಣ ಮಾಡಿರುವ ಈ ಚಿತ್ರಕ್ಕೆ ಹರ್ಷ್ ಮಿಶ್ರ ಛಾಯಾಗ್ರಹಣ,  ಹರೀಶ್ ಚೌಧರಿ ಸಂಕಲನ, ಕುಂಗ್ಫು ಚಂದ್ರು ಸಾಹಸ ನಿರ್ದೇಶನ, ಸುಚಿತ್ ಚವ್ಹಾಣ್, ನೃತ್ಯ ನಿರ್ದೇಶನ , ಸ್ಮಿತ ಕುಲಕರ್ಣಿ  ಕಲಾ ನಿರ್ದೇಶನ ಹಾಗೂ ನಿರ್ಮಾಲ್ ಜೋಶಿ ಅವರ ಸಹ ನಿರ್ದೇಶನವಿದೆ. ಉತ್ಸವ್ ಶ್ರೇಯಸ್ ಸಂಗೀತ ನೀಡಿರುವ ಈ ಚಿತ್ರದಲ್ಲಿ ನಾಲ್ಕು ಹಾಡುಗಳಿದೆ.  ಸುರೇಶ್ ರೆಡ್ಡಿ ಹಾಗೂ ಅಭಿಷೇಕ್ ಅಕ್ಕಣ್ಣನವರ್ ಹಾಡುಗಳನ್ನು ಬರೆದಿದ್ದಾರೆ.

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ‘ಯಥಾಭವ’ ಚಿತ್ರದ ಮೂಲಕ ರಾಕ್ ಲೈನ್ ಸುಧಾಕರ್ ಪುತ್ರ ಚಿತ್ರೋದ್ಯಮಕ್ಕೆ ಎಂಟ್ರಿ

    ‘ಯಥಾಭವ’ ಚಿತ್ರದ ಮೂಲಕ ರಾಕ್ ಲೈನ್ ಸುಧಾಕರ್ ಪುತ್ರ ಚಿತ್ರೋದ್ಯಮಕ್ಕೆ ಎಂಟ್ರಿ

    ನ್ನಡದ ಪ್ರೇಕ್ಷಕರು ಉತ್ತಮ ಕಂಟೆಂಟ್ ವುಳ್ಳ ಚಿತ್ರಗಳನ್ನು ಯಶಸ್ವಿಗೊಳಿಸುತ್ತಿದ್ದಾರೆ. ಅಂತಹ ಉತ್ತಮ ಕಂಟೆಂಟ್ ಹೊಂದಿರುವ ಮತ್ತೊಂದು ಚಿತ್ರ ‘ಯಥಾಭವ’. ಗೌತಮ್ ಬಸವರಾಜು (Gautam Basavaraju) ಕಥೆ, ಚಿತ್ರಕಥೆ ಹಾಗೂ ಸಂಭಾಷಣೆ ಬರೆದು ನಿರ್ದೇಶಿಸಿರುವ ಈ ಚಿತ್ರದ ಚಿತ್ರೀಕರಣ ಮುಕ್ತಾಯವಾಗಿದೆ. ಬೆಂಗಳೂರು ಸುತ್ತಮುತ್ತ ಚಿತ್ರೀಕರಣವಾಗಿದೆ. ಯಥಾಭವ ಚಿತ್ರದ ಪೋಸ್ಟರ್ ವಿಭಿನ್ನವಾಗಿದ್ದು ಕುತೂಹಲ ಮೂಡಿಸಿದೆ.

    Macht entertainments ಲಾಂಛನದಲ್ಲಿ ಸುಜಾತ ಕುಮಾರಿ ಹಾಗೂ ಅನಿಲ್ ಕುಮರ್ ಬಿ.ಎನ್ ನಿರ್ಮಾಣ ಮಾಡಿರುವ ಈ ಚಿತ್ರಕ್ಕೆ ಹರ್ಷ್ ಮಿಶ್ರ ಛಾಯಾಗ್ರಹಣ, ಉತ್ಸವ್ ಶ್ರೇಯ್ ಸಂಗೀತ ನಿರ್ದೇಶನ, ಹರೀಶ್ ಚೌಧರಿ ಸಂಕಲನ, ಕುಂಗ್ಫು ಚಂದ್ರು ಸಾಹಸ ನಿರ್ದೇಶನ, ಸಂಚಿತ್ ಚವನ್ ನೃತ್ಯ ನಿರ್ದೇಶನ ಹಾಗೂ ಸ್ಮಿತ ಕುಲಕರ್ಣಿ ಅವರ ಕಲಾ ನಿರ್ದೇಶನವಿದೆ. ಇದನ್ನೂ ಓದಿ:ನೀಲಿ ತಾರೆ ಮಿಯಾ ತೆಲುಗಿನ ಡೈರೆಕ್ಟರ್ ಆರ್‌ಜಿವಿ

    ಯಥಾಭವ (Yathabhava) ಕೋರ್ಟ್ ರೂಮ್ ಡ್ರಾಮ ಕಥಾಹಂದರ ಹೊಂದಿದೆ. ಇದು ನಿರ್ದೇಶಕರ ಮೊದಲ ನಿರ್ದೇಶನದ ಚಿತ್ರ. ಪವನ್ ಶಂಕರ್ (Pawan Shankar) ಈ ಚಿತ್ರದ ನಾಯಕನಾಗಿ ಹಾಗೂ ಸಹನ ಸುಧಾಕರ್ ನಾಯಕಿಯಾಗಿ ನಟಿಸಿದ್ದಾರೆ. ಹಿರಿಯ ನಟ ರಾಕ್ ಲೈನ್ ಸುಧಾಕರ್ ಅವರ ಪುತ್ರ ಗೌತಮ್ ಸುಧಾಕರ್ (Gautam Sudhakar) ಈ ಚಿತ್ರದ ಪ್ರಮುಖಪಾತ್ರದಲ್ಲಿ ನಟಿಸಿದ್ದಾರೆ. ಈ ಮೂಲಕ ಗೌತಮ್ ಕನ್ನಡ ಚಿತ್ರರಂಗಕ್ಕೆ ಪಾದಾರ್ಪಣೆ ಮಾಡಿದ್ದಾರೆ.

    ಹಿರಿಯ ನಟ ದತ್ತಣ್ಣ ನ್ಯಾಯಾಧೀಶರ ಪಾತ್ರ ನಿರ್ವಹಿಸಿದ್ದಾರೆ. ಗೋಪಾಲಕೃಷ್ಣ ದೇಶಪಾಂಡೆ, ಬಾಲ ರಾಜವಾಡಿ, ಮಾಸ್ಟರ್ ಸುಮಂತ್, ನೀನಾಸಂ ಆನಂದ್, ಉಮಾ ಹೆಬ್ಬಾರ್ ಮುಂತಾದವರು ಚಿತ್ರದ ತಾರಾಬಳಗದಲ್ಲಿದ್ದಾರೆ.

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]