Tag: Yathindra

  • ಆತ್ಮಾಹುತಿಗೂ ಪ್ಲಾನ್ ಮಾಡಿದ್ದ ಸಂಸತ್ ದಾಳಿಕೋರರು – ಶೀಘ್ರವೇ ಪ್ರತಾಪ್ ಸಿಂಹ ವಿಚಾರಣೆ

    ಆತ್ಮಾಹುತಿಗೂ ಪ್ಲಾನ್ ಮಾಡಿದ್ದ ಸಂಸತ್ ದಾಳಿಕೋರರು – ಶೀಘ್ರವೇ ಪ್ರತಾಪ್ ಸಿಂಹ ವಿಚಾರಣೆ

    – ಮಗ ಯತೀಂದ್ರಗಾಗಿ ಸಿಎಂ ಷಡ್ಯಂತ್ರ ಆರೋಪ

    ನವದೆಹಲಿ: ಸಂಸತ್‍ನಲ್ಲಿ (Security breach in Lok Sabha) ದಾಂಧಲೆ ಎಬ್ಬಿಸಿದ್ದವರ ಆತಂಕಕಾರಿ ಪ್ರವರಗಳು, ಪ್ಲಾನ್‍ಗಳು ಈಗ ಒಂದೊಂದೇ ಬಯಲಾಗ್ತಿವೆ.

    ಸಂಚುಕೋರರು ತಮ್ಮ ಸಂದೇಶಗಳನ್ನು ಸರ್ಕಾರಕ್ಕೆ ತಲುಪಿಸಲು ಹಲವು ಪ್ಲಾನ್‍ಗಳನ್ನು ಮಾಡಿದ್ರು. ಮೊದಲು ಮೈಗೆ ಫೈರ್ ಪ್ರೂಫ್ ಜೆಲ್ (Fire Proof Gel) ಲೇಪಿಸಿಕೊಂಡು ಸಂಸತ್ ಮುಂದೆ ಬೆಂಕಿ ಹಚ್ಚಿಕೊಳ್ಳಲು ಯೋಜಿಸಿದ್ರು. ಇದಕ್ಕಾಗಿ ಆನ್‍ಲೈನ್‍ನಲ್ಲಿ ಜೆಲ್ ಖರೀದಿ ಸಾಧ್ಯವಾಗದ ಕಾರಣ ಅದನ್ನು ಕೈಬಿಟ್ರು ಎನ್ನಲಾಗಿದೆ. ಈಗಿರುವ ರಾಜಕೀಯ ಪಕ್ಷಗಳ ಸಿದ್ದಾಂತಗಳು ಹೊಂದಿಕೆಯಾಗದ ಕಾರಣ ಹೊಸ ರಾಜಕೀಯ ಪಕ್ಷವನ್ನು ಸ್ಥಾಪಿಸುವ ಬಗ್ಗೆಯೂ ಸಂಚುಕೊರರು ಚಿಂತನೆ ನಡೆಸಿದ್ರು.

    ಇತ್ತ ಮೈಸೂರಿನಲ್ಲಿ, ನಗರ ಬಿಟ್ಟು ಎಲ್ಲಿಗೂ ಹೋಗಬಾರದು. ಎಲ್ಲಾ ಕರೆಗಳ ಮಾಹಿತಿ ನೀಡಿ ಎಂದು ಮನೋರಂಜನ್ ಪೋಷಕರಿಗೆ ತನಿಖಾ ತಂಡ ತಿಳಿಸಿದೆ. ಈ ಮಧ್ಯೆ ಆರೋಪಿಗಳಿಗೆ ವಿಸಿಟರ್ಸ್ ಪಾಸ್ ಕೊಟ್ಟಿದ್ದ ಸಂಸದ ಪ್ರತಾಪ್‍ಸಿಂಹ ಹೇಳಿಕೆ ಪಡೆಯಲು ಪೊಲೀಸರು ತಯಾರಿ ನಡೆಸಿದ್ದಾರೆ. ಇದನ್ನೂ ಓದಿ: ಸಂಸತ್ತಿನಲ್ಲಿ ಭದ್ರತಾ ಲೋಪ ಕೇಸ್‌ – ಭಾರತಕ್ಕೆ ಬೇಕಾಗಿರುವುದು ಬಾಂಬ್ ಎಂದು ಫೇಸ್ಬುಕ್‌ನಲ್ಲಿ ಬರೆದುಕೊಂಡಿದ್ದ ಮಾಸ್ಟರ್‌ಮೈಂಡ್‌

    ಒಟ್ಟಿನಲ್ಲಿ ಸಂಸತ್ ದಾಳಿ ಪ್ರಕರಣದಲ್ಲಿ ರಾಜಕೀಯ ಮುಂದುವರಿದಿದೆ. ಈ ಪ್ರಕರಣದಲ್ಲಿ ಪ್ರತಾಪ್‍ಸಿಂಹರನ್ನು ಸಿಲುಕಿಸುವ ಷಡ್ಯಂತ್ರ್ಯವನ್ನು ಕಾಂಗ್ರೆಸ್ ನಡೆಸಿದೆ ಎಂದು ಬಿಜೆಪಿಯ ಲೆಹರ್ ಸಿಂಗ್ ಆರೋಪಿಸಿದ್ದಾರೆ. ಯತೀಂದ್ರ ಸಿದ್ದರಾಮಯ್ಯರನ್ನು ಲೋಕಸಭೆ ಚುನಾವಣೆಗೆ ನಿಲ್ಲಿಸುವ ಪ್ರಯತ್ನಗಳು ನಡೆದಿವೆ. ಇದರ ಭಾಗವಾಗಿಯೇ ಪ್ರತಾಪ್ ಸಿಂಹರನ್ನು ಸಿಲುಕಿಸುವ ಸಂಚು ನಡೆದಿದೆ ಎಂದು ಆಪಾದಿಸಿದ್ದಾರೆ. ರಾಜ್ಯದಲ್ಲಿ ನಗರ ನಕ್ಸಲರನ್ನು ಸರ್ಕಾರ ಪೋಷಿಸುತ್ತಿದೆ ಎಂಬ ಆರೋಪವನ್ನು ಲೆಹರ್ ಸಿಂಗ್ ಮಾಡಿದ್ದಾರೆ. ಆದರೆ ಈ ಆರೋಪವನ್ನು ಸಿಎಂ ತಳ್ಳಿ ಹಾಕಿದ್ದಾರೆ.

  • ಆ ವಿವೇಕಾನಂದ ಬೇರೆ, ಈ ವಿವೇಕಾನಂದ ಬೇರೆ: ಸಿದ್ದರಾಮಯ್ಯ ಸ್ಪಷ್ಟನೆ

    ಆ ವಿವೇಕಾನಂದ ಬೇರೆ, ಈ ವಿವೇಕಾನಂದ ಬೇರೆ: ಸಿದ್ದರಾಮಯ್ಯ ಸ್ಪಷ್ಟನೆ

    ಮೈಸೂರು: ಡಾ. ಯತೀಂದ್ರ ವೈರಲ್ ವೀಡಿಯೋದಲ್ಲೂ ಉಲ್ಲೇಖವಾಗಿದ್ದ ವಿವೇಕಾನಂದ ಬೇರೆ, ಈ ವಿವೇಕಾನಂದ ಬೇರೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ (Siddaramaiah) ಸ್ಪಷ್ಟನೆ ನೀಡಿದ್ದಾರೆ.

    ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡುತ್ತಾ ರಾಜ್ಯಾದ್ಯಂತ ಚರ್ಚೆಗೆ ಕಾರಣವಾಗಿದ್ದ ಡಾ.ಯತೀಂದ್ರ ಸಿದ್ದರಾಮಯ್ಯ ವೀಡಿಯೋ ಕುರಿತು ಪ್ರತಿಕ್ರಿಯಿಸಿದರು. ಆ ವಿವೇಕಾನಂದ (Vivekananda) ಬೇರೆ ಈ ವಿವೇಕಾನಂದ ಬೇರೆ. ಅವರು ಬಿಐಓ, ಇವರು ಇನ್ಸ್ ಪೆಕ್ಟರ್. ಬಿಇಓ ನಮ್ಮ ಕ್ಷೇತ್ರವರು ಈಗ ವರ್ಗಾವಣೆ ಆಗಿರುವುದು ಚಾಮರಾಜ ಕ್ಷೇತ್ರ ವ್ಯಾಪ್ತಿ. ಯಾರು ವರ್ಗಾವಣೆ ಮಾಡಿಸಿಕೊಂಡರು ಅನ್ನುವುದನ್ನು ಸ್ಥಳೀಯ ಶಾಸಕರನ್ನು ಕೇಳಿ ಎಂದು ವಿವೇಕಾನಂದ ಹೆಸರಿಗೆ ಸಿದ್ದರಾಮಯ್ಯ ಸ್ಪಷ್ಟನೆ ನೀಡಿದರು.

    ಈ ಹಿಂದೆ ರಾಜ್ಯ ಗುಪ್ತವಾರ್ತೆಗೆ ವರ್ಗಾವಣೆಗೊಂಡಿದ್ದ ವಿವೇಕಾನಂದ ಮೈಸೂರಿನ ವಿವಿ ಪುರಂ ಪೊಲೀಸ್ ಠಾಣೆಗೆ ವರ್ಗಾವಣೆಯಾಗಿದ್ದಾರೆ. ರಾಜ್ಯಾದ್ಯಂತ ಸದ್ದು ಮಾಡಿದ್ದ ಯತೀಂದ್ರ (Yathindra Siddaramaiah) ವಿಡಿಯೋದಲ್ಲಿ ವಿವೇಕಾನಂದ ಹೆಸರು ಪ್ರಸ್ತಾಪವಾಗಿತ್ತು. ವಿವೇಕಾನಂದನಾ? ಎಲ್ಲಿಗೆ? ಎಂದು ಯತೀಂದ್ರ ಪ್ರಶ್ನೆ ಮಾಡಿದ್ದರು.

    ನಾನು ಕೊಟ್ಟಿದ್ದ 4-5 ಮಾತ್ರ ಮಾಡಿ ಎಂದು ಯತೀಂದ್ರ ಹೇಳಿದ್ದರು. ಈಗ ಮೈಸೂರಲ್ಲಿ ನಾಲ್ವರು ಇನ್ಸ್ ಪೆಕ್ಟರ್ ಗಳ ವರ್ಗಾವಣೆ ನಡೆದಿದ್ದು ಈ ನಾಲ್ವರಲ್ಲಿ ಒಬ್ಬರ ಹೆಸರು ವಿವೇಕಾನಂದ ಆಗಿದ್ದರಿಂದ ಇವರೇನಾ ಅವರು ಎಂಬ ಪ್ರಶ್ನೆ ಎದ್ದಿತ್ತು. ಇದನ್ನೂ ಓದಿ: ಮೈಸೂರಿಗೆ ಪೊಲೀಸ್‌ ಇನ್ಸ್‌ಪೆಕ್ಟರ್‌ ವಿವೇಕಾನಂದ ವರ್ಗಾವಣೆ – ಯತೀಂದ್ರ ಪ್ರಸ್ತಾಪಿಸಿದ್ದ ವಿವೇಕಾನಂದ ಇವರೇನಾ?

  • ಐದು ಹೆಸರು ಎಂದರೆ ವರ್ಗ ಏನಯ್ಯ – ಮಗನ ವೈರಲ್ ವೀಡಿಯೋಗೆ ಸಿಎಂ ಪ್ರತಿಕ್ರಿಯೆ

    ಐದು ಹೆಸರು ಎಂದರೆ ವರ್ಗ ಏನಯ್ಯ – ಮಗನ ವೈರಲ್ ವೀಡಿಯೋಗೆ ಸಿಎಂ ಪ್ರತಿಕ್ರಿಯೆ

    ಬೆಂಗಳೂರು: ಯತೀಂದ್ರ (Yathindra )ಅವರು ವರ್ಗಾವಣೆ ವಿಚಾರವಾಗಿ ಮಾತಾಡಿಲ್ಲ. ಸಿಎಸ್‍ಆರ್ ಫಂಡ್ (ಕಾರ್ಪೋರೇಟ್ ಸೋಶಿಯಲ್ ರೆಸ್ಪಾನ್ಸಿಬಿಲಿಟಿ ಫಂಡ್) ಬಗ್ಗೆ ಮಾತಾಡಿರುವುದು ಎಂದು ಸಿಎಂ ಸಿದ್ದರಾಮಯ್ಯ (Siddaramaiah) ಸ್ಪಷ್ಟನೆ ನೀಡಿದ್ದಾರೆ.

    ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪುತ್ರ ಯತೀಂದ್ರ ಅವರ ವೈರಲ್ ಆದ ವೀಡಿಯೋ ವಿಚಾರವಾಗಿ ಪ್ರತಿಕ್ರಿಯೆ ನೀಡಿದ್ದಾರೆ. ಈ ವೇಳೆ ನಾನು ರಾಜಕೀಯ ಜೀವನದಲ್ಲಿ ವರ್ಗಾವಣೆ ದಂಧೆ ಮಾಡಿಲ್ಲ. ವರ್ಗಾವಣೆ ದಂಧೆ ಮಾಡಿದ್ದೇನೆ ಎಂದು ಸಾಬೀತುಪಡಿಸಿದರೆ ರಾಜಕೀಯದಿಂದ ನಿವೃತ್ತಿ ಪಡೆಯುತ್ತೇನೆ ಎಂದಿದ್ದಾರೆ. ಇದನ್ನೂ ಓದಿ: ಸಿಎಂ ಪುತ್ರನ ಎಡವಟ್ಟು – ಯತೀಂದ್ರ ಹೇಳಿದ ಮಹದೇವ್ ಯಾರು?

    ಪತ್ರಕರ್ತರ ಪ್ರಶ್ನೆಗೆ, ಐದು ಹೆಸರು ಎಂದರೆ ವರ್ಗ ಏನಯ್ಯ? ಅದು ಸಿಎಸ್‍ಆರ್ ಲಿಸ್ಟ್. ಶಾಲೆ ಕಟ್ಟಡಗಳನ್ನು ಸಿಎಸ್‍ಆರ್ ಫಂಡ್‍ನಿಂದ ರಿಪೇರಿ ಮಾಡಿಸಲಾಲಾಗುತ್ತಿದೆ. ಈ ಬಗ್ಗೆ ಯತೀಂದ್ರ ಅವರು ಹೇಳಿದ್ದಾರೆ. ಕುಮಾರಸ್ವಾಮಿ ರಾಜಕೀಯವಾಗಿ ಆರೋಪ ಮಾಡ್ತಿದ್ದಾರೆ ಎಂದು ಕಿಡಿಕಾರಿದರು.

    ಬುಧವಾರ ಯತೀಂದ್ರ ಅವರು ವರುಣ ಕ್ಷೇತ್ರ ವ್ಯಾಪ್ತಿಯ ಮೈಸೂರು ತಾಲೂಕಿನ ಚಟ್ನಹಳ್ಳಿಪಾಳ್ಯ ಗ್ರಾಮದಲ್ಲಿ ಸಾರ್ವಜನಿಕ ಕುಂದುಕೊರತೆ ವಿಚಾರಣೆ ಸಭೆ ನಡೆಸಿ ಗ್ರಾಮದ ಜನರ ಅಹವಾಲು ಸ್ವೀಕರಿಸುತ್ತಿದ್ದರು. ಈ ವೇಳೆ ಅವರು ತಂದೆಗೆ ಕರೆ ಮಾಡಿದ್ದಾರೆ. ಯಾವುದೋ ವಿಷಯವನ್ನು ಪ್ರಸ್ತಾಪ ಮಾಡಿದ ಅವರು, ನಾನು ನೀಡಿದ ಲಿಸ್ಟ್‍ನದ್ದು ಮಾತ್ರ ಮಾಡಿ ಎಂದು ಸಾರ್ವಜನಿಕರ ಮುಂದೆಯೇ ನೀಡಿದ ಪಟ್ಟಿಯ ಬಗ್ಗೆ ಮಾತುಕತೆ ಮಾಡಿದ್ದರು. ಈ ವೀಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿತ್ತು. ಇದನ್ನೂ ಓದಿ: ಡಿಕೆಶಿಯನ್ನು ಸಿಎಂ ಮಾಡ್ತೀವಿ ಅಂತ ಕುಮಾರಸ್ವಾಮಿ ಹೇಳಿದ್ದರೆ ನಾವು ಖಂಡಿತಾ ಬರುತ್ತಿದ್ದೆವು: ಎಸ್‌ಟಿಎಸ್

  • ವರುಣಾ ಕ್ಷೇತ್ರಕ್ಕೆ ನಾನೇ ಅಭ್ಯರ್ಥಿ ಎಂದ ಸಿದ್ದರಾಮಯ್ಯ ಪುತ್ರ ಯತೀಂದ್ರ

    ವರುಣಾ ಕ್ಷೇತ್ರಕ್ಕೆ ನಾನೇ ಅಭ್ಯರ್ಥಿ ಎಂದ ಸಿದ್ದರಾಮಯ್ಯ ಪುತ್ರ ಯತೀಂದ್ರ

    ಮಾಜಿ ಸಿಎಂ ಸಿದ್ದರಾಮಯ್ಯ ಅವರು ಕೋಲಾರದಿಂದ ವಿಧಾನಸಭೆ ಚುನಾವಣೆಗೆ ಸ್ಪರ್ಧಿಸುವುದು ಖಚಿತ. ಹೀಗಾಗಿ ವರುಣಾ ಕ್ಷೇತ್ರಕ್ಕೆ ನಾನೇ ಅಭ್ಯರ್ಥಿ ಎಂದು ಸಿದ್ದರಾಮಯ್ಯ ಪುತ್ರ ಹಾಗೂ ಹಾಲಿ ಶಾಸಕ ಯತೀಂದ್ರ ಹೇಳಿದ್ದಾರೆ.

    Live TV
    [brid partner=56869869 player=32851 video=960834 autoplay=true]

    Join our Whatsapp group by clicking the below link
    https://chat.whatsapp.com/E6YVEDajTzH06LOh77r25k

  • ವರುಣಾದಿಂದಲೇ ತಂದೆ ಸ್ಪರ್ಧಿಸಲಿ ಎಂದ ಯತೀಂದ್ರ – ಧರ್ಮ ಸಂಕಟದಲ್ಲಿ ಸಿದ್ದರಾಮಯ್ಯ

    ವರುಣಾದಿಂದಲೇ ತಂದೆ ಸ್ಪರ್ಧಿಸಲಿ ಎಂದ ಯತೀಂದ್ರ – ಧರ್ಮ ಸಂಕಟದಲ್ಲಿ ಸಿದ್ದರಾಮಯ್ಯ

    ಬೆಂಗಳೂರು: ವಿಧಾನಸಭೆ ಚುನಾವಣೆಯಲ್ಲಿ ಸಿದ್ದರಾಮಯ್ಯ ಸ್ಪರ್ಧೆ ಮಾಡುವ ಕ್ಷೇತ್ರ ಯಾವುದು ಎನ್ನುವುದು ಇನ್ನೂ ಫೈನಲ್ ಆಗಿಲ್ಲ. ಆದರೆ ಪುತ್ರ ಯತೀಂದ್ರ ವರುಣಾದಿಂದಲೇ ತಂದೆ ಸ್ಪರ್ಧೆ ಮಾಡಲಿ ಎಂಬ ಇಂಗಿತ ವ್ಯಕ್ತಪಡಿಸಿದ್ದಾರೆ.

    ಕೋಲಾರಾ? ವರುಣಾ ಈ ಪೈಕಿ ಯಾವುದನ್ನು ಆಯ್ಕೆ ಮಾಡಲಿ ಎಂಬ ಗೊಂದಲದಲ್ಲಿ ಸಿದ್ದರಾಮಯ್ಯ ಇದ್ದರೋ? ಅಥವಾ ವಿರೋಧಿಗಳು ಮತ್ತು ಹಿತಶತ್ರುಗಳ ದಾರಿ ತಪ್ಪಿಸಲು ಸಿದ್ದರಾಮಯ್ಯ ಹೀಗೆ ಮಾಡುತ್ತಿದ್ದಾರೋ ಎನ್ನುವುದು ಗೊತ್ತಾಗುತ್ತಿಲ್ಲ. ಹೀಗಾಗಿ ಈಗ ಎಲ್ಲರೂ ಸಿದ್ದರಾಮಯ್ಯ ನಿಮ್ಮ ಕ್ಷೇತ್ರ ಯಾವುದಯ್ಯ ಎಂದು ಕೇಳುವಂತಾಗಿದೆ.

    ನಮ್ಮಪ್ಪ ವರುಣಾದಿಂದಲೇ ಸ್ಪರ್ಧೆ ಮಾಡಲಿ. ಕೋಲಾರ ಸೇರಿ ಹಲವು ಕ್ಷೇತ್ರಗಳು ಸಿದ್ದರಾಮಯ್ಯಗೆ ಸೇಫ್ ಇರಬಹುದು. ಆದರೆ ವರುಣಾದಿಂದಲೇ ಕಣಕ್ಕಿಳಿಯಲಿ ಎನ್ನುವುದು ನನ್ನಾಸೆ. ನಮ್ಮಪ್ಪ ವರುಣಾದಿಂದ ಕಣಕ್ಕಿಳಿದರೆ ನಾನು ಬೇರೆ ಕಡೆಯಿಂದ ಸ್ಪರ್ಧೆ ಮಾಡುವುದಿಲ್ಲ ಎಂಬುದನ್ನು ಯತೀಂದ್ರ ಸ್ಪಷ್ಟಪಡಿಸಿದ್ದಾರೆ. ಇದನ್ನೂ ಓದಿ: 15 ಸಾವಿರ ಪ್ರಾಥಮಿಕ ಶಿಕ್ಷಕರ ತಾತ್ಕಾಲಿಕ ಆಯ್ಕೆ ಪಟ್ಟಿ ಪ್ರಕ್ರಿಯೆಗೆ ಹೈಕೋರ್ಟ್‌ ತಡೆ

    ತಾನು ವರುಣಾದಿಂದ ಕಣಕ್ಕಿಳಿದರೆ ಯತೀಂದ್ರ ರಾಜಕೀಯ ಭವಿಷ್ಯ ಮಸುಕಾಗಬಹುದು ಎಂಬ ಆತಂಕವೂ ಸಿದ್ದರಾಮಯ್ಯನವರಿಗೆ ಇದ್ದಂತೆ ಕಾಣುತ್ತಿದೆ. ಮತ್ತೊಂದು ಕಡೆ ಕೋಲಾರದಲ್ಲಿ ಸಿದ್ದರಾಮಯ್ಯ ಆಪ್ತ ಬಳಗ ಬೂತ್ ಮಟ್ಟದಲ್ಲಿ ಸರ್ವೇ ಕಾರ್ಯ ನಡೆಸುತ್ತಿದೆ. ಈ ಬೆಳವಣಿಗೆಗಳ ಬಗ್ಗೆ ಯತೀಂದ್ರ ಟೀಂ ಕಣ್ಣಿಟ್ಟಿರುವುದು ಸಿದ್ದರಾಮಯ್ಯ ಆಪ್ತರ ಅಸಮಾಧಾನಕ್ಕೆ ಕಾರಣವಾಗಿದೆ.

    ಈ ಬಗ್ಗೆ ಸ್ವತಃ ಸಿದ್ದರಾಮಯ್ಯ ಬಳಿಯೇ ಅಸಮಾಧಾನ ತೋಡಿಕೊಂಡಿದ್ದಾರಂತೆ. ಆದರೆ ಯತೀಂದ್ರ ಜೊತೆ ಹೊಂದಿಕೊಂಡು ಹೋಗ್ರಪ್ಪ ಎಂದು ಸಿದ್ದರಾಮಯ್ಯ ತಿಳಿಹೇಳಿದ್ದಾರಂತೆ. ಇದು ಯತೀಂದ್ರ ಗಮನಕ್ಕೂ ಬಂದಿದೆ. ನಿಮ್ಮ ವಿಚಾರದಲ್ಲಿ ನಾನು ರಿಸ್ಕ್ ತಗೊಳ್ಳಲ್ಲ. ಇಲ್ಲ ಅಂದರೆ ಕೋಲಾರ ಸಹವಾಸವೇ ನಮಗೆ ಬೇಡ ಅಂತಾ ಸಿದ್ದರಾಮಯ್ಯ ಬಳಿ ಯತೀಂದ್ರ ಖಡಕ್ಕಾಗಿ ಹೇಳಿದ್ದಾರೆ ಎಂಬ ಮಾತು ಕೇಳಿ ಬಂದಿದೆ.

    ಮಗನ ಮಾತು ಕೇಳಿ ವರುಣಾಗೆ ಹೋಗ್ಬೇಕೋ? ಸ್ನೇಹಿತರ ಮಾತು ಕೇಳಿ ಕೋಲಾರಕ್ಕೆ ಹೋಗ್ಬೇಕೋ ಎಂಬ ಧರ್ಮ ಸಂಕಟದಲ್ಲಿ ಈಗ ಸಿದ್ದರಾಮಯ್ಯ ಸಿಲುಕಿದ್ದಾರೆ ಎನ್ನಲಾಗಿದೆ. ಹೀಗಾಗಿಯೇ ಅಭಿಮಾನಿಗಳು ಕೇಳಿದರೂ ನೋಡೋಣ ಸುಮ್ನಿರಿ ಎಂದು ಸಿದ್ದರಾಮಯ್ಯ ಹೇಳುತ್ತಿದ್ದಾರೆ.

    Live Tv
    [brid partner=56869869 player=32851 video=960834 autoplay=true]

  • ತಂದೆಗಾಗಿ ಅಖಾಡಕ್ಕಿಳಿದ ಡಾ.ಯತೀಂದ್ರ

    ತಂದೆಗಾಗಿ ಅಖಾಡಕ್ಕಿಳಿದ ಡಾ.ಯತೀಂದ್ರ

    ಬೆಂಗಳೂರು: ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ (Siddaramaiah) ರಾಜಕೀಯ ಜೀವನದ ಕೊನೆ ಆಟದಲ್ಲಿ ಮಗನ ಗೆಲುವಿಗೆ ಸಂಕಲ್ಪ ತೊಟ್ಟಿರುವಂತಿದೆ. ಮತ್ತೊಂದೆಡೆ ಡಾ.ಯತೀಂದ್ರ (Dr. Yathindra) ಸಿದ್ದರಾಮಯ್ಯ ಪರವಾಗಿ ಅಖಾಡಕ್ಕೆ ಇಳಿದಿದ್ದರಂತೆ.

    ಅಪ್ಪನ ರಾಜಕೀಯ ಉತ್ತುಂಗದ ಜೊತೆಗೆ ತಮ್ಮ ರಾಜಕೀಯ ಭವಿಷ್ಯದ ಸೇಫ್ ಗೇಮ್‍ಗೆ ಪ್ಲಾನ್ ಮಾಡಿದ್ದಾರೆಂಬ ಮಾತು ಕೇಳಿ ಬರುತ್ತಿದೆ. ಅಲ್ಲೊಂದು ಕೈ ನೋಡೋಣ ಆಗದಿದ್ದರೆ ಇದು ಇದ್ದೇ ಇದೆ ಎಂಬ ಹೊಸ ಲೆಕ್ಕಾಚಾರ ಶುರು ಮಾಡಿದ್ದಾರಂತೆ.

    ತಂದೆ ಸಿದ್ದರಾಮಯ್ಯ ಪರವಾಗಿ ಡಾ.ಯತೀಂದ್ರ ಅಖಾಡಕ್ಕಿಳಿದಿದ್ದಾರೆ. ತಂದೆಗೆ ಕೊನೆ ಚುನಾವಣೆಯಲ್ಲಿ ವರುಣಾ ಕ್ಷೇತ್ರ (Varuna Constituency) ಬಿಟ್ಟು ಕೊಡುವ ಸಾಧ್ಯತೆ ಇದೆ. ಅತ್ತ ಕೋಲಾರದ್ಲೂ ಸೀಕ್ರೆಟ್ ಸರ್ವೇ ಆರಂಭಿಸಿರುವ ಯತೀಂದ್ರ, ಕೋಲಾರದಲ್ಲಿ ಸಿದ್ದರಾಮಯ್ಯ ಸೇಫ್ ಆದ್ರೆ ವರುಣಾದಲ್ಲಿ ಯತೀಂದ್ರ ಸೇಫ್ ಎಂಬ ಲೆಕ್ಕಾಚಾರವಿದೆ. ಇದನ್ನೂ ಓದಿ: ರಾಜಕೀಯ ಎದುರಾಳಿಗಳಿಗೆ ಸಿದ್ದರಾಮಯ್ಯ ಪ್ರತ್ಯಾಸ್ತ್ರ- ಕ್ಷೇತ್ರ ಘೋಷಣೆ ಮುಂದೂಡಿಕೆಗೆ ಮಾಸ್ಟರ್‌ಪ್ಲಾನ್‌

    ಸಿದ್ದರಾಮಯ್ಯ ಕೊನೆ ಚುನಾವಣೆಯಲ್ಲಿ ವರುಣಾ ಕ್ಷೇತ್ರವನ್ನ ಅಪ್ಪನಿಗೆ ಬಿಟ್ಟು ಕೊಡಲು ಮುಂದಾಗಿದ್ದಾರೆ. ಅದರ ಮಧ್ಯದಲ್ಲಿ ಕೋಲಾರ ಕ್ಷೇತ್ರದಿಂದ ಸ್ಪರ್ಧೆಗೂ ಒತ್ತಡ ಹೆಚ್ಚುತ್ತಿದೆ. ಹಾಗೇನಾದರು ಸಿದ್ದರಾಮಯ್ಯಗೆ ಕೋಲಾರ ಸೇಫಾಗಿದೆಯಾ….?, ಇದನ್ನ ತಿಳಿಯರು ಕೋಲಾರದಲ್ಲಿ ಡಾ.ಯತೀಂದ್ರ ಸೀಕ್ರೆಟ್ ಸರ್ವೆ ಆರಂಭಿಸಿದ್ದಾರೆ ಎನ್ನಲಾಗುತ್ತಿದೆ.

    ಅಪ್ಪನ ವಿಚಾರದಲ್ಲಿ ರಿಸ್ಕ್ ತಗೆದುಕೊಳ್ಳುವುದು ಬೇಡ ಎಂಬ ಕಾರಣಕ್ಕೆ ಕೋಲಾರದಲ್ಲಿ ಡಾ.ಯತೀಂದ್ರ ಟೀಂ ಕಂಪ್ಲೀಟ್ ಸರ್ವೆ ನಡೆಸುತ್ತಿದೆ. ಕೋಲಾರದಲ್ಲಿ ಸಿದ್ದರಾಮಯ್ಯ ಸೇಫಾದರೆ ವರುಣಾದಲ್ಲಿ ಯತೀಂದ್ರ ಸೇಫ್ ಅನ್ನೋದು ಈ ಸರ್ವೆಯ ಲೆಕ್ಕಾಚಾರವಾಗಿದೆ. ಕೋಲಾರದಲ್ಲಿ ಸಿದ್ದರಾಮಯ್ಯ ಸಂಪೂರ್ಣ ಸೇಫ್ ಎನ್ನಿಸಿದರೆ ಯತೀಂದ್ರ ವರಿಣಾದಿಂದ ಸ್ಪರ್ಧೆ ಮಾಡಬಹುದು. ಇಲ್ಲದಿದ್ದರೆ ಸಿದ್ದರಾಮಯ್ಯ ವರುಣಾದಿಂದಲೇ ಸ್ಪರ್ಧೆ ಮಾಡುವ ಸಾಧ್ಯತೆ ಇದೆ.

    ಅಪ್ಪನಿಗಾಗಿ ಕ್ಷೇತ್ರ ತ್ಯಾಗಕ್ಕೆ ಮುಂದಾದ ಡಾ.ಯತೀಂದ್ರ ಕೊನೆಯ ಪ್ರಯತ್ನವಾಗಿ ಕೋಲಾರದಲ್ಲಿ ಸೀಕ್ರೆಟ್ ಸರ್ವೆ ಆರಂಭಿಸಿದ್ದಾರೆ. ಹಾಗೇನಾದರೂ ಸರ್ವೆ ಪ್ರಕಾರ ಕೋಲಾರ ಸೇಫ್ ಆದರೆ ಅಪ್ಪ ಮಗ ಇಬ್ಬರ ಸ್ಪರ್ಧೆ ಬಗ್ಗೆಯೂ ಅಂತಿಮ ತೀರ್ಮಾನ ಆಗುವ ಸಾಧ್ಯತೆ ಇದೆ ಎಂಬ ಮಾತುಗಳು ರಾಜಕೀಯ ವಲಯದಲ್ಲಿ ಕೇಳಿಬರುತ್ತಿದೆ.

    Live Tv
    [brid partner=56869869 player=32851 video=960834 autoplay=true]

  • ಲಿಂಗಾಯತ ಪ್ರತ್ಯೇಕ ಧರ್ಮದ ವಿಚಾರ – ಮಗನ ಮಾತು ಕೇಳದೇ ಕೆಟ್ಟೆ ಎಂದ್ರಂತೆ ಸಿದ್ದರಾಮಯ್ಯ

    ಲಿಂಗಾಯತ ಪ್ರತ್ಯೇಕ ಧರ್ಮದ ವಿಚಾರ – ಮಗನ ಮಾತು ಕೇಳದೇ ಕೆಟ್ಟೆ ಎಂದ್ರಂತೆ ಸಿದ್ದರಾಮಯ್ಯ

    ಬೆಂಗಳೂರು: ಕಳೆದ ವಿಧಾನಸಭಾ ಚುನಾವಣೆಯ ರಾಜಕೀಯ ಲೆಕ್ಕಾಚಾರದಲ್ಲಿ ಎಡವಿದ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಇನ್ನಿಲ್ಲದ ನೋವು ಕಾಡುತ್ತಿದೆಯಾ ಅನ್ನೋ ಪ್ರಶ್ನೆ ಎದುರಾಗಿದೆ.

    ಯಾಕಂದರೆ ಮತ್ತೊಮ್ಮೆ ರಾಜ್ಯದ ಮುಖ್ಯಮಂತ್ರಿ ಆಗಬೇಕು ಎಂದು 2018 ರ ವಿಧಾನಸಭಾ ಚುನಾವಣೆ ಎದುರಿಸಿದ ಸಿದ್ದರಾಮಯ್ಯರಿಗೆ ಹಿನ್ನಡೆಯ ಸೂಚನೆಯನ್ನು ಪುತ್ರ ಯತೀಂದ್ರ ಮೊದಲೇ ಕೊಟ್ಟಿದ್ದರು. ಈ ಎರಡು ತಪ್ಪು ನೀವು ಮಾಡುತ್ತಿದ್ದೀರಾ ಅದು ಸರಿ ಅಲ್ಲ ಎಂದಿದ್ದರು. ಈ ಬಗ್ಗೆ ಸ್ವತಃ ಸಿಎಂ ಸಿದ್ದರಾಮಯ್ಯ ಅವರೇ ತಮ್ಮ ಪಕ್ಷದ ಮುಖಂಡರ ಬಳಿ ಆಪ್ತರ ಬಳಿ ಹೇಳಿಕೊಂಡಿದ್ದಾರೆ ಎಂಬ ಮಾಹಿತಿಯೊಂದು ಪಬ್ಲಿಕ್ ಟಿವಿಗೆ ಲಭ್ಯವಾಗಿದೆ.

    ಸಿದ್ದರಾಮಯ್ಯ ಪುತ್ರ ಡಾ.ಯತೀಂದ್ರ ಈಗ ವರುಣ ಕ್ಷೇತ್ರದ ಶಾಸಕ. 2018ರ ವಿಧಾನಸಭಾ ಚುನಾವಣೆಗೂ ಮುನ್ನ ರಾಜಕೀಯ ಗೊತ್ತಿಲ್ಲದವರು. ಆದರೆ ಪ್ರತ್ಯೇಕ ಲಿಂಗಾಯತ ಧರ್ಮದ ವಿಷಯ ವಿವಾದವಾಗುತ್ತಿದ್ದಂತೆ ಡಾ.ಯಂತೀಂದ್ರ ಅವರೇ ಸಿದ್ದರಾಮಯ್ಯ ಅವರನ್ನು ಮೊದಲು ಎಚ್ಚರಿಸಿದ್ದರು ಎನ್ನಲಾಗಿದೆ.

    ಲಿಂಗಾಯತ ಪ್ರತ್ಯೇಕ ಧರ್ಮ ವಿಷಯಕ್ಕೆ ಕೈ ಹಾಕಬೇಡಿ ಅದು ನಿಮ್ಮ ರಾಜಕೀಯ ಹಿನ್ನಡೆಗೆ ಕಾರಣವಾಗಬಹುದು. ಸುಮ್ಮನಿದ್ದು ಬಿಡಿ ಎಂದು ಪುತ್ರ ಹೇಳಿದ್ದರಂತೆ. ಆಗ ಸಿದ್ದರಾಮಯ್ಯ ಅವರು ರಾಜಕೀಯ ಅನುಭವ ಇಲ್ಲದ ಯತೀಂದ್ರ ಏನೋ ಹೇಳುತ್ತಾನೆ. ನಿನಗೆ ಅದೆಲ್ಲ ಗೊತ್ತಾಗಲ್ಲ ಸುಮ್ಮನಿರು ಎಂದು ಪುತ್ರನಿಗೆ ಹೇಳಿದ್ದರು. ಇನ್ನು ಚುನಾವಣಾ ಸಂದರ್ಭದಲ್ಲಿ ಸಿದ್ದರಾಮಯ್ಯ ದೇವೇಗೌಡರ ವಿರುದ್ಧ ವಾಗ್ದಾಳಿ ಮಾಡುವುದಕ್ಕೂ ಯತೀಂದ್ರ ವಿರೋಧ ವ್ಯಕ್ತಪಡಿಸಿದ್ದರು. ಆಗಲೂ ಅದಕ್ಕೆ ಸಮಜಾಯಿಷಿ ನೀಡಿದ್ದ ಸಿದ್ದರಾಮಯ್ಯ, ರಾಜಕಾರಣದಲ್ಲಿ ಅದೆಲ್ಲಾ ಮಾಡಬೇಕಾಗುತ್ತೆ ನಿನಗೆ ಗೊತ್ತಾಗಲ್ಲ ಎಂದಿದ್ದರೆಂದು ತಿಳಿದು ಬಂದಿದೆ.

    ಇನ್ನೂ ಒಂದು ಹೆಜ್ಜೆ ಮುಂದೆ ಹೋದ ಯತೀಂದ್ರ, ರಾಜ್ಯದಲ್ಲಿ ಒಕ್ಕಲಿಗ ಹಾಗೂ ಲಿಂಗಾಯತ ಎರಡು ಪ್ರಬಲ ಸಮುದಾಯದವರು ಅವರನ್ನ ಎದುರು ಹಾಕಿಕೊಂಡು ಅಧಿಕಾರ ಹಿಡಿಯುವುದು ಕಷ್ಟ. ಅಲ್ಲದೆ ಮೈಸೂರಿನಲ್ಲಿ ಒಕ್ಕಲಿಗರು ಹಾಗೂ ಲಿಂಗಾಯತರ ಪ್ರಾಬಲ್ಯ ಇರುವುದು ತಮ್ಮ ಗೆಲುವಿಗೂ ತೊಂದರೆ ಆಗಬಹುದು. ಆದ್ದರಿಂದ ಆ ಎರಡು ವಿಷಯಗಳಲ್ಲಿ ಜಾಗೃತೆಯ ಹೆಜ್ಜೆ ಇಡಿ ಎಂದು ಸಿದ್ದರಾಮಯ್ಯಗೆ ಯತೀಂದ್ರ ಹೇಳಿದ್ದರು ಎನ್ನಲಾಗಿದೆ.

    ಲಿಂಗಾಯತ ಪ್ರತ್ಯೇಕ ಧರ್ಮ ವಿವಾದ ಹಾಗೂ ಒಕ್ಕಲಿಗರ ಸಿದ್ದರಾಮಯ್ಯ ಬಗೆಗಿನ ಕೋಪ ಚಾಮುಂಡೇಶ್ವರಿಯಲ್ಲಿ ಸಿದ್ದರಾಮಯ್ಯ ಸೋಲುವಂತೆ ಮಾಡಿತ್ತು. ರಾಜ್ಯದಲ್ಲಿ ಇದೇ ಕಾರಣಕ್ಕೆ ಕಾಂಗ್ರೆಸ್ ಗೆ ಹಿನ್ನಡೆ ಆಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಮಾಜಿ ಆಗುವಂತಾಯ್ತು. ತಂದೆಗೆ ಬುದ್ಧಿ ಹೇಳಿದ್ದ ಡಾ.ಯತೀಂದ್ರ ರಾಜಕೀಯ ಅನುಭವದ ಕೊರತೆ ನಡುವೆಯೂ ವರುಣ ಕ್ಷೇತ್ರದಲ್ಲಿ ಮೊದಲ ಯತ್ನದಲ್ಲೇ ಗೆದ್ದು ಶಾಸಕರಾಗಿದ್ದಾರೆ. ಈ ಎಲ್ಲಾ ಘಟನೆಗಳನ್ನ ತಮ್ಮ ಆಪ್ತರ ಬಳಿ ಇತ್ತೀಚೆಗೆ ಸಾಕಷ್ಟು ಬಾರಿ ಸಿದ್ದರಾಮಯ್ಯ ಹೇಳಿಕೊಂಡಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.

  • ಹಣಕಾಸು `ಕ್ಯಾತೆ’ ಆಯ್ತು ಈಗ ಕಾಂಗ್ರೆಸ್ ಪ್ರಭಾವಿ ಮಕ್ಕಳ ನಡುವೆ ಕುಸ್ತಿ!

    ಹಣಕಾಸು `ಕ್ಯಾತೆ’ ಆಯ್ತು ಈಗ ಕಾಂಗ್ರೆಸ್ ಪ್ರಭಾವಿ ಮಕ್ಕಳ ನಡುವೆ ಕುಸ್ತಿ!

    ಬೆಂಗಳೂರು: ರಾಜ್ಯ ಕಾಂಗ್ರೆಸ್ ಹಾಗೂ ಜೆಡಿಎಸ್ ನಡುವಿನ ಸಮ್ಮಿಶ್ರ ಸರ್ಕಾರದ ಸಚಿವ ಸಂಪುಟ ರಚನೆ ಕಸರತ್ತು ಮುಂದುವರಿದಿದ್ದು, ಕಾಂಗ್ರೆಸ್ ನಾಯಕರ ಪುತ್ರರ ನಡುವೆ ಸಚಿವ ಸ್ಥಾನದ ಕುರಿತು ಪೈಪೋಟಿ ಆರಂಭವಾಗಿದೆ.

    ಇದರ ನಡುವೆ ರಾಜ್ಯದ ಪ್ರಭಾವಿ ಕಾಂಗ್ರೆಸ್ ಮುಖಂಡರು ಸಹ ತಮ್ಮ ಮಕ್ಕಳಿಗೆ ಸಚಿವ ಸ್ಥಾನ ಕೊಡಿಸಲು ಮುಂದಾಗಿದ್ದು, ಆಕಾಂಕ್ಷಿಗಳ ಪಟ್ಟಿ ದೊಡ್ಡದಾಗಿದೆ. ಮುಖ್ಯಮಂತ್ರಿ ಕುಮಾರಸ್ವಾಮಿ ಅವರ ಸಂಪುಟದಲ್ಲಿ ಸಚಿವ ಸ್ಥಾನ ಪಡೆಯಲು ನಾಲ್ವರು ಕಾಂಗ್ರೆಸ್ ನಾಯಕರ ಮಕ್ಕಳ ಮಧ್ಯೆ ತೀವ್ರ ಪೈಪೋಟಿ ಆರಂಭವಾಗಿದೆ.

    ಪ್ರಮುಖವಾಗಿ ಮಾಜಿ ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯ ಅವರ ಪುತ್ರ ವರುಣಾ ಕ್ಷೇತ್ರದ ಶಾಸಕ ಯತೀಂದ್ರ ಅವರು ಮಂತ್ರಿ ಸ್ಥಾನದ ಆಕಾಂಕ್ಷಿಯಾಗಿದ್ದು, ಮೈಸೂರು ಭಾಗದ ಕೋಟಾದಲ್ಲಿ ಸಚಿವ ಸ್ಥಾನ ನೀಡಲು ಒತ್ತಡ ಹೆಚ್ಚಾಗಿದೆ. ಆದರೆ ಇಲ್ಲಿ ಮಾಜಿ ಸಚಿವ ತನ್ವೀರ್ ಸೇಠ್ ಅವರು ಸಹ ಸಚಿವ ಸ್ಥಾನಕ್ಕೆ ಒತ್ತಡ ಹಾಕುತ್ತಿರುವ ಪರಿಣಾಮ ಪೈಪೋಟಿಗೆ ಕಾರಣವಾಗಿದೆ.

    ಕಲಬುರಗಿ ಜಿಲ್ಲಾ ಕೋಟಾದಡಿ ಸಂಸದ ಮಲ್ಲಿಕಾರ್ಜುನ ಖರ್ಗೆ ಪುತ್ರ ಚಿತ್ತಾಪುರ ಶಾಸಕ ಪ್ರಿಯಾಂಕ ಖರ್ಗೆ ಸಹ ಸಚಿವ ಸ್ಥಾನದ ಮೇಲೆ ಕಣ್ಣಿಟ್ಟಿದ್ದಾರೆ. ಆದರೆ ಇಲ್ಲಿ ಮಾಜಿ ಮುಖ್ಯಮಂತ್ರಿ ಧರಂಸಿಂಗ್ ಪುತ್ರ ಜೇವರ್ಗಿ ಶಾಸಕ ಅಜಯ್ ಸಿಂಗ್ ಇರುವ ಕಾರಣ ಯಾರಿಗೆ ಮಂತ್ರಿಸ್ಥಾನ ನೀಡಬೇಕು ಎನ್ನುವ ಬಗ್ಗೆ ಚರ್ಚೆ ನಡೆಯುತ್ತಿದೆ.

    ಈ ಬಾರಿಯ ಸಂಪುಟದಲ್ಲಿ ಸ್ಥಾನ ಪಡೆಯಲು ಮಹಿಳಾ ಶಾಸಕಿಯರ ನಡುವೆಯೂ ಸ್ಪರ್ಧೆ ಆರಂಭವಾಗಿದ್ದು, ಮಹಿಳಾ ಕೋಟಾದಡಿ ಕೇಂದ್ರದ ಮಾಜಿ ಸಚಿವ, ಸಂಸದ ಮುನಿಯಪ್ಪ ಪುತ್ರಿ ಕೆಜಿಎಫ್ ಕ್ಷೇತ್ರದ ಶಾಸಕಿ ರೂಪಾ ಶಶಿಧರ್ ಹೆಸರು ಚರ್ಚೆಯಾಗುತ್ತಿದೆ. ಆದರೆ ಕೆಪಿಸಿಸಿ ಮಹಿಳಾ ಘಟಕದ ಅಧ್ಯಕ್ಷೆ ಲಕ್ಷ್ಮೀ ಹೆಬ್ಬಾಳ್ಕರ್ ಸಹ ಈ ರೇಸ್ ನಲ್ಲಿದ್ದಾರೆ.

    ಕಾಂಗ್ರೆಸ್ ನಾಯಕರ ಮಕ್ಕಳ ಈ ಪೈಪೋಟಿಗೆ ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ಕಡಿವಾಣ ಹಾಕುವ ಸಾಧ್ಯತೆ ಇದ್ದು, ಯುವ ನಾಯಕರಲ್ಲಿ ಯಾರಿಗೆ ಸಚಿವ ಸ್ಥಾನ ಸಿಗಲಿದೆ ಎನ್ನುವುದು ಕಾದುನೋಡಬೇಕಿದೆ.

  • ಯತೀಂದ್ರ ಸಿಎಂ ಮಗ ಅನ್ನೋದು ಬಿಟ್ರೆ ಬೇರೆ ಯಾವುದರಲ್ಲೂ ನನಗೆ ಸರಿಸಮಾನನಿಲ್ಲ-ವರುಣಾ ಬಿಜೆಪಿ ಅಭ್ಯರ್ಥಿ ಬಸವರಾಜು

    ಯತೀಂದ್ರ ಸಿಎಂ ಮಗ ಅನ್ನೋದು ಬಿಟ್ರೆ ಬೇರೆ ಯಾವುದರಲ್ಲೂ ನನಗೆ ಸರಿಸಮಾನನಿಲ್ಲ-ವರುಣಾ ಬಿಜೆಪಿ ಅಭ್ಯರ್ಥಿ ಬಸವರಾಜು

    ಬೆಂಗಳೂರು: ಯತೀಂದ್ರ ಸಿಎಂ ಸಿದ್ದರಾಮಯ್ಯರ ಮಗ ಅನ್ನೋದು ಬಿಟ್ಟರೆ, ಬೇರೆ ಯಾವುದರಲ್ಲೂ ನನಗೆ ಸರಿ ಸಮಾನನಿಲ್ಲ ಅಂತಾ ವರುಣಾ ಕೇತ್ರದ ಬಿಜೆಪಿ ಅಭ್ಯರ್ಥಿ ಬಸವರಾಜು ಹೇಳಿದ್ದಾರೆ.

    ನಗರದ ಮಲ್ಲೇಶ್ವರ ಬಿಜೆಪಿ ಕಚೇರಿಯಲ್ಲಿ ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ಭೇಟಿದ ಬಳಿಕ ನೀಡಿದ ಮಾತನಾಡಿದ ಬಸವರಾಜು, ನೂರಕ್ಕೆ ನೂರರಷ್ಟು ವರುಣಾದಲ್ಲಿ ಬಿಜೆಪಿ ಗೆದ್ದೇ ಗೆಲ್ಲುತ್ತದೆ. ಸದ್ಯ ವರುಣಾದಲ್ಲಿ ಪರಿಸ್ಥಿತಿ ಸರಿ ಇಲ್ಲ, ಆದ್ರೆ ಇನ್ನೆರೆಡು ದಿನ ಬಿಟ್ಟು ಕ್ಷೇತ್ರದಲ್ಲಿ ವಿಜಯೇಂದ್ರ ಮತ್ತು ಯಡಿಯೂರಪ್ಪ ಅವರು ಬಂದು ಪ್ರಚಾರ ಮಾಡಲಿದ್ದಾರೆ. ಒಬ್ಬ ಸಾಮಾನ್ಯ ಕಾರ್ಯಕರ್ತನಿಗೆ ಟಿಕೆಟ್ ಕೊಟ್ಟು ಬಿಜೆಪಿ ಶಕ್ತಿ ಏನು ಅನ್ನೋದನ್ನ ತೋರಿಸುವುದಕ್ಕೆ ಮುಂದಾಗಿದೆ ಅಂತಾ ಹೇಳಿದ್ರು. ಇದನ್ನೂ ಓದಿ: ವಿಜಯೇಂದ್ರಗೆ ಟಿಕೆಟ್ ತಪ್ಪಿದ ಎಫೆಕ್ಟ್-ನೋಟಾ ಚಲಾವಣೆ ಅಭಿಯಾನದ ಕರಪತ್ರ ಫುಲ್ ವೈರಲ್

    ಯಾರೋ ಕೆಲ ಕಿಡಿಗೇಡಿಗಳು ವರುಣಾದಲ್ಲಿ ಬಿಜೆಪಿ ಅಭ್ಯರ್ಥಿ ವಿರುದ್ಧ ನೋಟಾ ಅಭಿಯಾನ ಮಾಡ್ತಿದ್ದಾರೆ. ಆದ್ರೆ ಅವರು ಯಾರು ಬಿಜೆಪಿ ಕಾರ್ಯಕರ್ತರಲ್ಲ. ನಮ್ಮ ಪಕ್ಷದ ಕಾರ್ಯಕರ್ತರು ಅಂತಹ ಕೆಲಸ ಮಾಡಲ್ಲ ಅಂತಾ ಸ್ಪಷ್ಟನೆ ನೀಡಿದ್ರು.