Tag: Yatindra Siddaramaiah

  • ಯತೀಂದ್ರ ಸಿದ್ದರಾಮಯ್ಯಗೆ ಪರಿಷತ್ ಸ್ಥಾನಕ್ಕಾಗಿ ಒಪ್ಪಂದ ಆಗಿತ್ತು: ರಹಸ್ಯ ಬಹಿರಂಗಪಡಿಸಿದ ಸತೀಶ್ ಜಾರಕಿಹೊಳಿ

    ಯತೀಂದ್ರ ಸಿದ್ದರಾಮಯ್ಯಗೆ ಪರಿಷತ್ ಸ್ಥಾನಕ್ಕಾಗಿ ಒಪ್ಪಂದ ಆಗಿತ್ತು: ರಹಸ್ಯ ಬಹಿರಂಗಪಡಿಸಿದ ಸತೀಶ್ ಜಾರಕಿಹೊಳಿ

    ಬೆಂಗಳೂರು: ಸಿಎಂ ಸಿದ್ದರಾಮಯ್ಯ ಪುತ್ರ ಯತೀಂದ್ರ (Yatindra Siddaramaiah) ಅವರಿಗೆ ಪರಿಷತ್ ಸ್ಥಾನ ಬಹುತೇಕ ಫಿಕ್ಸ್ ಎನ್ನಲಾಗಿದ್ದು, ಸದಾಶಿವನಗರದ ನಿವಾಸದಲ್ಲಿ ಡಿಸಿಎಂ ಡಿ.ಕೆ ಶಿವಕುಮಾರ್‌ (D.K Shivakumar) ನೇತೃತ್ವದ ಸಭೆಯಲ್ಲೂ ಈ ಬಗ್ಗೆ ಸಚಿವರಿಗೆ ಸುಳಿವು ಸಿಕ್ಕಿದೆ.

    ಎಂಎಲ್‍ಸಿ ಆಯ್ಕೆ ವಿಚಾರವಾಗಿ ಮೇ 28, 29 ರಂದು ಸಿಎಂ ಹಾಗೂ ಡಿಸಿಎಂ ದೆಹಲಿಗೆ ತೆರಳಲಿರುವ ಹಿನ್ನೆಲೆಯಲ್ಲಿ ಇಂದು (ಮೇ 25) ಡಿಸಿಎಂ ಕೆಲವು ಸಚಿವರ ಜೊತೆ ಸಭೆ ನಡೆಸಿ ಅಭಿಪ್ರಾಯ ಸಂಗ್ರಹ ಮಾಡಿದ್ದಾರೆ. ಸಭೆಯ ಬಳಿಕ ಈ ವಿಚಾರವನ್ನು ಸತೀಶ್ ಜಾರಕಿಹೊಳಿ (Satish Jarkiholi) ಮಾಧ್ಯಮಗಳೊಂದಿಗೆ ಮಾತನಾಡಿ, ಸಿಎಂ ಪುತ್ರ ಯತೀಂದ್ರಗೆ ವಿಧಾನ ಪರಿಷತ್ ಸ್ಥಾನ ಸಿಕ್ಕೇ ಸಿಗಲಿದೆ. ಸರ್ಕಾರ ರಚನೆಯ ಸಂದರ್ಭದಲ್ಲಿ ಅದರ ಬಗ್ಗೆ ಮಾತುಕತೆ ಆಗಿದೆ ಎಂದು ತಿಳಿಸಿದ್ದಾರೆ. ಇದನ್ನೂ ಓದಿ: ಪ್ರಬುದ್ಧಾ ಹತ್ಯೆಯನ್ನು ಆತ್ಮಹತ್ಯೆ ಅಂತಾ ಬಿಂಬಿಸಲು ಪ್ಲಾನ್- ಕುತ್ತಿಗೆ, ಕೈಯಲ್ಲಿದ್ದ ಕಲೆಗಳನ್ನೇ ಬಂಡವಾಳ ಮಾಡಿಕೊಂಡಿದ್ದ ಅಪ್ರಾಪ್ತ

    ಡಿಸಿಎಂ ಜೊತೆಗೆ ಎಂಎಲ್‍ಸಿ ಚುನಾವಣೆ (MLC Election) ವಿಚಾರ ಚರ್ಚೆ ಆಯ್ತು. ಪಕ್ಷಕ್ಕಾಗಿ ದುಡಿದವರು ತುಂಬಾ ಜನ ಇದ್ದಾರೆ. ಅವರನ್ನ ಪರಿಗಣಿಸಿ ಎಂದು ಹೇಳಿದ್ದೇವೆ. ವಿಧಾನ ಪರಿಷತ್ ಸದಸ್ಯ ಸ್ಥಾನ ಬೆಂಗಳೂರಿಗೆ ಸೀಮಿತ ಆಗಬಾರದು. ಜಾತಿವಾರು ವಿಧಾನ ಪರಿಷತ್ ಸದಸ್ಯ ಸ್ಥಾನ ನೀಡಬೇಕು ಎಂದು ಹೇಳಿದ್ದೇವೆ ಎಂದರು.

    ಕೆಲವರು ಅನಿವಾರ್ಯವಾಗಿ ರಿಪೀಟ್ ಆಗಲೇಬೇಕು. ಲಂಬಾಣಿ ಸಮುದಾಯ ಸೇರಿದಂತೆ ಅಲ್ಪಸಂಖ್ಯಾತ ಸಮುದಾಯಕ್ಕೆ ನೀಡಬೇಕು ಎಂದು ನಮ್ಮ ಒತ್ತಾಯವಿದೆ ಎಂದು ಅವರು ಹೇಳಿದ್ದಾರೆ. ಇದನ್ನೂ ಓದಿ: ಪೋರ್ಶೆ ಕಾರು ಅಪಘಾತ ಪ್ರಕರಣ- ಆರೋಪಿ ಅಪ್ರಾಪ್ತನ ಅಜ್ಜ ಅರೆಸ್ಟ್‌

  • ಸಿಎಂ ಬದಲಾವಣೆ ಮಾಡೋದು ಹೈಕಮಾಂಡ್‌ಗೆ ಬಿಟ್ಟ ವಿಚಾರ: ‌ಜಿ. ಪರಮೇಶ್ವರ್

    ಸಿಎಂ ಬದಲಾವಣೆ ಮಾಡೋದು ಹೈಕಮಾಂಡ್‌ಗೆ ಬಿಟ್ಟ ವಿಚಾರ: ‌ಜಿ. ಪರಮೇಶ್ವರ್

    ಬೆಂಗಳೂರು: ಸಿಎಂ ಬದಲಾವಣೆ ಮಾಡೋದು, ಮುಂದುವರೆಸೋದು ಹೈಕಮಾಂಡ್‌ಗೆ (Congress High Command) ಬಿಟ್ಟ ವಿಚಾರ ಎಂದು ಗೃಹ ಸಚಿವ ಪರಮೇಶ್ವರ್ (G. Parameshwara) ತಿಳಿಸಿದ್ದಾರೆ.

    ಲೋಕಸಭೆಯಲ್ಲಿ (Loksabha Elections) ಹೆಚ್ಚು ಸ್ಥಾನ ಗೆದ್ದರೆ 5 ವರ್ಷ ಸಿದ್ದರಾಮಯ್ಯ (Siddaramaiah) ಸಿಎಂ ಆಗಿ ಇರುತ್ತಾರೆ ಎಂಬ ಯತೀಂದ್ರ ಸಿದ್ದರಾಮಯ್ಯ ಹೇಳಿಕೆ ವಿಚಾರಕ್ಕೆ ಪ್ರತಿಕ್ರಿಯೆ ನೀಡಿದ ಅವರು, ಲೋಕಸಭೆಯಲ್ಲಿ ಸಿದ್ದರಾಮಯ್ಯ ಒಬ್ಬರೇ ಅಲ್ಲ. ಕೆಪಿಸಿಸಿ ಅಧ್ಯಕ್ಷರು (KPCC President), ನಾವೆಲ್ಲರೂ ಇದ್ದೇವೆ. ನಾವೆಲ್ಲ ಸೇರಿ 28 ಕ್ಷೇತ್ರ ಗೆಲ್ಲಬೇಕು ಅಂತ ಪ್ರಯತ್ನ ಮಾಡ್ತೀವಿ. ಅಂತಿಮವಾಗಿ ಜನ ಹೇಗೆ ಸಹಕಾರ ಕೊಡ್ತಾರೆ, ಮತ ಹಾಕ್ತಾರೆ ಅನ್ನೋದು ಜನರಿಗೆ ಬಿಟ್ಟಿದ್ದು ಎಂದು ಹೇಳಿದ್ದಾರೆ.

    ನಮಗೆ ವಿಶ್ವಾಸ ಇದೆ. ನಾವು ಕಾರ್ಯಕ್ರಮ ಕೊಟ್ಟಿದ್ದೇವೆ. ಗ್ಯಾರಂಟಿ ಅನುಷ್ಠಾನ ಮಾಡಿದ್ದೇವೆ. ಜನ ಸಮುದಾಯಕ್ಕೆ ಈ ಸರ್ಕಾರದ ಬಗ್ಗೆ ಒಳ್ಳೆಯ ಅಭಿಪ್ರಾಯ ಇದೆ. ಹಾಗಾಗಿ ನಾವು ಹೆಚ್ಚು ಸ್ಥಾನ ಗೆಲ್ಲಬೇಕು ಅಂತ ಹೇಳಿ ನಾವೆಲ್ಲ ಸಂಕಲ್ಪ ಮಾಡಿದ್ದೇವೆ. ಹೈಕಮಾಂಡ್ ಕೂಡಾ ನಮಗೆ ಇದನ್ನೇ ಹೇಳಿದೆ ಎಂದರು. ಇದನ್ನೂ ಓದಿ: ವಿಮಾನದಲ್ಲಿ ಟಾಯ್ಲೆಟ್ ಡೋರ್ ಲಾಕ್ – ಮುಂಬೈನಿಂದ ಬೆಂಗ್ಳೂರಿಗೆ ವಿಮಾನದ ಟಾಯ್ಲೆಟ್‌ನಲ್ಲೇ ಕುಳಿತು ಪ್ರಯಾಣಿಸಿದ ವ್ಯಕ್ತಿ!

    ಕ್ಷೇತ್ರ ಗೆದ್ದುಕೊಂಡು ಬರಬೇಕು!: 
    ಸಿಎಂ ಮುಂದುವರಿಸೋದು, ಬಿಡೋದು ಹೈಕಮಾಂಡ್‌ಗೆ ಬಿಟ್ಟ ವಿಚಾರ. ಆ ತೀರ್ಮಾನ ನಮ್ಮ ‌ಹಂತದಲ್ಲಿ ಆಗೋದಿಲ್ಲ. ಅದನ್ನ ‌ಹೈಕಮಾಂಡ್ ನವರು ತೀರ್ಮಾನ ‌ಮಾಡ್ತಾರೆ ಎಂದರು. ಲೋಕಸಭೆ ಚುನಾವಣೆಗಾಗಿ 28 ಸಚಿವರ ಸಭೆಯನ್ನ ದೆಹಲಿಯಲ್ಲಿ ಮಾಡಿದ್ರು. ಒಂದೊಂದು ಕ್ಷೇತ್ರದ ಜವಾಬ್ದಾರಿ ‌ಕೊಟ್ಟಿದ್ದಾರೆ. ನಾವು ಆ ಕ್ಷೇತ್ರ ಗೆದ್ದುಕೊಂಡು ಬರಬೇಕು ಎಂದರು.

    ಯತೀಂದ್ರ ಅವರ ಹೇಳಿಕೆ‌ ನಮಗೆ ಗೊತ್ತಿಲ್ಲ. ಅವರ ಹೇಳಿಕೆಯನ್ನು ನಾನು ಗಮನಿಸಿಲ್ಲ. ಆದರೆ ನಮಗೆ ಜವಾಬ್ದಾರಿ ಕೊಟ್ಟಿದ್ದಾರೆ. 28 ಕ್ಷೇತ್ರ ಗೆಲ್ಲಿಸೋದಕ್ಕೆ ಸೂಚನೆ ಕೊಟ್ಟಿದ್ದಾರೆ ಎಂದರು. ಇದನ್ನೂ ಓದಿ: ಮೈಸೂರಿನ ಶಿಲ್ಪಿ ಕೆತ್ತಿರುವ ರಾಮಲಲ್ಲಾ ಮೂರ್ತಿ ಇಂದು ರಾಮಮಂದಿರ ಪ್ರವೇಶ – ದೇವಾಲಯದ ಸುತ್ತ ಪ್ರದಕ್ಷಿಣೆ

  • MP ಚುನಾವಣೆಯಲ್ಲಿ ಹೆಚ್ಚು ಸ್ಥಾನ ಗೆದ್ದರೇ ಸಿದ್ದರಾಮಯ್ಯರೇ ಪೂರ್ಣಾವಧಿ ಸಿಎಂ – ಯತೀಂದ್ರ ಹೊಸ ಬಾಂಬ್!

    MP ಚುನಾವಣೆಯಲ್ಲಿ ಹೆಚ್ಚು ಸ್ಥಾನ ಗೆದ್ದರೇ ಸಿದ್ದರಾಮಯ್ಯರೇ ಪೂರ್ಣಾವಧಿ ಸಿಎಂ – ಯತೀಂದ್ರ ಹೊಸ ಬಾಂಬ್!

    ಹಾಸನ: 2024ರ ಲೋಕಸಭಾ ಚುನಾವಣೆಯಲ್ಲಿ ಕರ್ನಾಟಕದಲ್ಲಿ ಹೆಚ್ಚು ಸ್ಥಾನ ಗೆದ್ದರೆ ಸಿದ್ದರಾಮಯ್ಯ (Siddaramaiah) ಅವರೇ ಪೂರ್ಣಾವಧಿ ಸಿಎಂ ಎಂದು ಮಾಜಿ ಶಾಸಕ ಹಾಗೂ ಪುತ್ರ ಯತೀಂದ್ರ ಸಿದ್ದರಾಮಯ್ಯ (Yatindra Siddaramaiah) ಅವರು ಹೊಸ ಬಾಂಬ್ ಸಿಡಿಸಿದ್ದಾರೆ.

    ಹಾಸನ (Hassan) ಜಿಲ್ಲೆ ಹೊಳೆನರಸೀಪುರ ತಾಲ್ಲೂಕಿನ ಅಣ್ಣೆಚಾಕನಹಳ್ಳಿ ಗ್ರಾಮದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಸಿದ್ದರಾಮಯ್ಯ ಅವರ ನೇತೃತ್ವದಲ್ಲಿ ಲೋಕಸಭಾ ಚುನಾವಣೆ (Lok Sabha Election 2024) ನಡೆಯುತ್ತದೆ. ಹೆಚ್ಚು ಸ್ಥಾನ ಗೆದ್ದರೆ ಯಾವುದೇ ಅಡೆತಡೆ ಇಲ್ಲದೇ, 5 ವರ್ಷ ಸಿಎಂ ಆಗಿರುತ್ತಾರೆ ಎಂದು ಭವಿಷ್ಯ ನುಡಿದಿದ್ದಾರೆ. ಇದನ್ನೂ ಓದಿ: ನಿಮ್ಮ ತಲೆಯನ್ನೇ ತೆಗೆಯುವ ಸಂತಾನದವರು ನಾವು: ಅನಂತ್‌ ಕುಮಾರ್ ಹೆಗಡೆ ಮತ್ತೆ ಕಿಡಿ

    ಚುನಾವಣೆಗೂ ಮೊದಲು 5 ಗ್ಯಾರಂಟಿ (Congress Guarantee) ಘೋಷಣೆ ಮಾಡಲಾಗಿತ್ತು. ಸರ್ಕಾರಕ್ಕೆ ಒಂದು ವರ್ಷ ತುಂಬುವ ಮೊದಲೇ ಸಿದ್ದರಾಮಯ್ಯ ಅವರು 5 ಗ್ಯಾರಂಟಿಗಳನ್ನ ಜಾರಿಗೊಳಿಸಿದ್ದಾರೆ. ಮತ್ತೊಮ್ಮೆ ನುಡಿದಂತೆ ನಡೆಯುವುದಾಗಿ ಸಾಬೀತು ಮಾಡಿದ್ದಾರೆ ಎಂದು ತಂದೆಯನ್ನು ಕೊಂಡಾಡಿದ್ದಾರೆ. ಇದನ್ನೂ ಓದಿ: ಅಯೋಧ್ಯೆಯಲ್ಲಿ ಶ್ರೀರಾಮನ ಪ್ರಾಣಪ್ರತಿಷ್ಠಾಪನೆ- ಹುಬ್ಬಳ್ಳಿಯ ಕರಸೇವಕರ ಸಂಭ್ರಮ

    ಹೆಚ್ಚು ಸ್ಥಾನ ಗೆದ್ದರೆ ಮತ್ತಷ್ಟು ಬಲ:
    ಬಡವರಿಗಾಗಿ, ಶೋಷತರಿಗೆ ಕೆಲಸ ಮಾಡುವ ಹಂಬಲ ಕಾಂಗ್ರೆಸ್ ಪಕ್ಷಕ್ಕೆ ಇದೆ. ಹಾಗಾಗಿ ಸಿದ್ದರಾಮಯ್ಯ ಅವರಿಗೆ ನಿಮ್ಮ ಬೆಂಬಲ ನೀಡಬೇಕು. ಮುಂದೆ ಕಾಂಗ್ರೆಸ್ ಪಕ್ಷ ಸಿದ್ದರಾಮಯ್ಯ ಅವರ ನೇತೃತ್ವದಲ್ಲಿ ಲೋಕಸಭಾ ಚುನಾವಣೆ ಎದುರಿಸಬೇಕಾಗಿದೆ. ಹೆಚ್ಚು ಸ್ಥಾನಗಳನ್ನು ಗೆದ್ದರೆ ನೈತಿಕವಾಗಿ ಅವರಿಗೆ ಮತ್ತಷ್ಟು ಬೆಂಬಲ ಸಿಗುತ್ತೆ. ಗ್ಯಾರಂಟಿ ಯೋಜನೆಗೆ ವರ್ಷಕ್ಕೆ 56 ಸಾವಿರ ಕೋಟಿ ರೂ. ಖರ್ಚು ಮಾಡಲಾಗುತ್ತಿದೆ. ಈ ಹಿಂದೆ ಸಾಮಾಜಿಕ ಕಾರ್ಯಕ್ರಮಕ್ಕಾಗಿ ರಾಜ್ಯದಲ್ಲಿ ಯಾವ ಸರ್ಕಾರವೂ ಇಷ್ಟು ಹಣ ಖರ್ಚು ಮಾಡಿಲ್ಲ. ಇಷ್ಟೊಂದು ಹಣ ಖರ್ಚು ಮಾಡುತ್ತಿರುವಾಗ ಜನರ ಬೆಂಬಲ ಬೇಕು ಎಂದು ಮನವಿ ಮಾಡಿದ್ದಾರೆ.

    ಹೆಚ್ಚು ಸ್ಥಾನ ಗೆದ್ದರೆ ಗ್ಯಾರಂಟಿ ಮುಂದುವರಿಸುತ್ತಾರೆ:
    2024ರ ಲೋಕಸಭಾ ಚುನಾವಣೆಗಳಲ್ಲಿ ಹೆಚ್ಚು ಸ್ಥಾನ ಗೆದ್ದರೆ ನಮಗೆ ಬಲ ಬರುತ್ತೆ. ಆಗ ಸಿದ್ದರಾಮಯ್ಯನವರ ಬಲ ಹೆಚ್ಚಿಲಿದ್ದು, ಮುಂದಿನ 5 ವರ್ಷ ಗ್ಯಾರಂಟಿ ಯೋಜನೆ ಮುಂದುವರಿಸುತ್ತಾರೆ. ಅವರು ಮುಖ್ಯಮಂತ್ರಿಯಾಗಿ ಯಾವುದೇ ಅಡೆತಡೆ ಇಲ್ಲದೆ ಮುಂದುವರೆಯಲು ಸಾಧ್ಯವಾಗುತ್ತೆ. ಹಾಗಾಗಿ ನಿಮ್ಮ ಬಂಬಲ ಆಶೀರ್ವಾದ ಅವರ ಮೇಲೆ ಇರಲಿ ಎಂದು ಮನವಿ ಮಾಡಿದ್ದಾರೆ. ಇದನ್ನೂ ಓದಿ: ಪೂರ್ಣ ತೋಳಿನ ಅಂಗಿ, ಶೂ ಧರಿಸುವುದು ನಿಷೇಧ – PSI ಪರೀಕ್ಷಾ ಅಭ್ಯರ್ಥಿಗಳಿಗೆ ಮಾರ್ಗಸೂಚಿ ಪ್ರಕಟ

  • ಅಂಬೇಡ್ಕರ್ ತತ್ವಗಳನ್ನ ಒಪ್ಪುವ ಯಾರೊಬ್ಬರೂ ನನ್ನ ಹೇಳಿಕೆ ತಪ್ಪು ಅನ್ನಲ್ಲ: ಯತೀಂದ್ರ ಸಮರ್ಥನೆ

    ಅಂಬೇಡ್ಕರ್ ತತ್ವಗಳನ್ನ ಒಪ್ಪುವ ಯಾರೊಬ್ಬರೂ ನನ್ನ ಹೇಳಿಕೆ ತಪ್ಪು ಅನ್ನಲ್ಲ: ಯತೀಂದ್ರ ಸಮರ್ಥನೆ

    ಮೈಸೂರು: ಅಂಬೇಡ್ಕರ್ ಅವರ ತತ್ವಗಳನ್ನು ಒಪ್ಪುವ ಯಾರೊಬ್ಬರೂ ಹೇಳಿಕೆಯನ್ನ ತಪ್ಪು ಅಂತ ಹೇಳೋದಿಲ್ಲ ಎಂದು ಹೇಳುವ ಮೂಲಕ ಮಾಜಿ ಶಾಸಕ ಯತೀಂದ್ರ ಸಿದ್ದರಾಮಯ್ಯ (Yatindra Siddaramaiah) ತಮ್ಮ ಹೇಳಿಕೆಯನ್ನ ಸಮರ್ಥಿಸಿಕೊಂಡಿದ್ದಾರೆ.

    ನಗರದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಭಾರತ ಹಿಂದೂ ರಾಷ್ಟ್ರವಾದ್ರೆ (Hindu Nation) ದೇಶಕ್ಕೆ ಅಪಾಯಕಾರಿ ಎಂಬ ತಮ್ಮ ಹೇಳಿಕೆಯನ್ನು ಸಮರ್ಥಿಸಿಕೊಂಡಿದ್ದಾರೆ. ಇದನ್ನೂ ಓದಿ: ರಾಮಭಕ್ತರಿಗೆ ಮರೆಯಲಾಗದ ಗಿಫ್ಟ್‌ – ಉಚಿತ ಹಚ್ಚೆಹಾಕುವ ಮೂಲಕ ಶ್ರೀರಾಮನ ಸೇವೆಗೆ ಮುಂದಾದ ಗುಜರಾತ್‌ ಕಲಾವಿದ]

    ಅಂಬೇಡ್ಕರ್ ಅವರ ತತ್ವಗಳನ್ನ ಒಪ್ಪುವ ಯಾರೊಬ್ಬರೂ ಹೇಳಿಕೆಯನ್ನ ತಪ್ಪು ಎಂದು ಹೇಳುವುದಿಲ್ಲ. ಅಂಬೇಡ್ಕರ್ ಅವರು ಹೇಳಿರುವುದನ್ನೇ ನಾನು ಪುನರುಚ್ಚರಿಸಿದ್ದೇನೆ ಅಷ್ಟೇ. ಈ ದೇಶ ಜ್ಯಾತ್ಯಾತೀತವಾಗಿರಬೇಕು, ಯಾವುದೇ ಒಂದು ಧರ್ಮದ ವಿಚಾರವಾಗಿ ದೇಶ ಇರಬಾರದು. ಅದು ಯಾವತ್ತಿದ್ದರು ಅಪಾಯಕಾರಿ. ಧರ್ಮದ ಹೆಸರಿನಲ್ಲಿರುವ ಪಾಕಿಸ್ತಾನ ಮತ್ತು ಕೆಲವು ದೇಶಗಳ ಸ್ಥಿತಿ ಏನಾಗಿದೆ? ಎಂಬುದು ಎಲ್ಲರಿಗೂ ಗೊತ್ತಿದೆ. ಈ ಕಾರಣ ನಾನು ಹಿಂದೂ ರಾಷ್ಟ್ರವಾಗುವುದನ್ನು ಅಪಾಯಕಾರಿ ಎಂದಿದ್ದೇನೆ. ನನ್ನ ಮಾತಿಗೆ ಈಗಲೂ ಬದ್ಧ. ನಾನು ಹೇಳಿರುವುದರಲ್ಲಿ ಯಾವುದು ತಪ್ಪು ಇಲ್ಲ ಎಂದಿದ್ದಾರೆ.

    ಧರ್ಮದ ಕೆಲಸ ಸರ್ಕಾರ ಮಾಡುವುದಲ್ಲ. ಧರ್ಮದ ವಿಚಾರದಲ್ಲಿ ಕೆಲಸ ಮಾಡುವುದಕ್ಕೆ ಬೇರೆ ವ್ಯವಸ್ಥೆಗಳಿವೆ. ಇದು ಸರ್ಕಾರದ ಕೆಲಸವಾಗಬಾರದು. ಬಿಜೆಪಿ ಅಭಿವೃದ್ಧಿಯನ್ನೇ ಮಾಡದೇ ಧರ್ಮದ ಹೆಸರಿನಲ್ಲಿ ರಾಜಕಾರಣ ಮಾಡುತ್ತಿದೆ. ಏನನ್ನು ಅಭಿವೃದ್ಧಿ ಮಾಡದ ಬಿಜೆಪಿ ಧರ್ಮದ ವಿಚಾರವನ್ನ ಮುಂದೆ ಬಿಟ್ಟು ವಿಚಾರಗಳನ್ನ ಮರೆ ಮಾಚುತ್ತಿದೆ ಎಂದು ವಾಗ್ದಾಳಿ ನಡೆಸಿದ್ದಾರೆ. ಇದನ್ನೂ ಓದಿ: ಮೆಟ್ರೋ ರೈಲು ಬಂದಾಗ ಏಕಾಏಕಿ ಹಳಿಗೆ ಧುಮುಕಿ ಆತ್ಮಹತ್ಯೆಗೆ ಯತ್ನ- ICUವಿನಲ್ಲಿ ಚಿಕಿತ್ಸೆ  

    ಪ್ರತಾಪ ಸಿಂಹ ತಮ್ಮನ್ನ ತಾವು ನ್ಯಾಷನಲ್ ಲೀಡರ್ ಅಂದುಕೊಂಡಿದ್ದಾರೆ. ಸಿದ್ದರಾಮಯ್ಯನವರು ಪ್ರತಾಪ ಸಿಂಹರನ್ನ ಟಾರ್ಗೆಟ್ ಮಾಡಲು ಅವರೇನು ನ್ಯಾಷನಲ್ ಲೀಡರ್ ಹಾ? ತಾವು ನ್ಯಾಷನಲ್ ಲೀಡರ್ ಎಂಬ ಭ್ರಮೆಯಲ್ಲಿ ಸಿದ್ದರಾಮಯ್ಯ ವಿರುದ್ದ ಹೇಳಿಕೆ ಕೊಡುತ್ತಿದ್ದಾರೆ ಅಷ್ಟೆ. ನಮ್ಮ ತಂದೆ ಯಾವತ್ತೂ ಟಾರ್ಗೆಟ್ ರಾಜಕಾರಣ ಮಾಡಿಲ್ಲ. ತಮಗೆ ರಾಜಕೀಯವಾಗಿ ಅನೇಕ ಬಾರಿ ಅನ್ಯಾಯವಾಗಿದ್ದರೂ ಅನ್ಯಾಯ ಮಾಡಿದವರ ವಿರುದ್ಧ ಅವರು ರಾಜಕಾರಣ ಮಾಡಲಿಲ್ಲ. ಹೀಗಿರುವಾಗ ಪ್ರತಾಪಸಿಂಹನನ್ನ ಯಾಕೆ ಟಾರ್ಗೆಟ್ ಮಾಡುತ್ತಾರೆ? ಅವರ ಸಹೋದರ ತಪ್ಪು ಮಾಡಿದ್ದಾರೆ, ಅದಕ್ಕಾಗಿ ಕೇಸ್ ಆಗಿದೆ ಅಷ್ಟೇ ಎಂದು ತಿಳಿಸಿದ್ದಾರೆ.

  • ವರುಣಾದಲ್ಲಿ ಕುಕ್ಕರ್ ಹಂಚಿಕೆ : ಚುನಾವಣಾ ಆಯೋಗ ಗಂಭೀರವಾಗಿ ಪರಿಗಣಿಸಬೇಕು ಎಂದ ಬೊಮ್ಮಾಯಿ

    ವರುಣಾದಲ್ಲಿ ಕುಕ್ಕರ್ ಹಂಚಿಕೆ : ಚುನಾವಣಾ ಆಯೋಗ ಗಂಭೀರವಾಗಿ ಪರಿಗಣಿಸಬೇಕು ಎಂದ ಬೊಮ್ಮಾಯಿ

    ಬೆಂಗಳೂರು: ವಿಧಾನಸಭೆ ಚುನಾವಣೆಯಲ್ಲಿ ವರುಣಾ (Varuna) ಕ್ಷೇತ್ರದ ಅಭ್ಯರ್ಥಿಯಾಗಿದ್ದ ಸಿದ್ದರಾಮಯ್ಯ (Siddaramaiah) ಅವರು ಕುಕ್ಕರ್, ಐರನ್ ಬಾಕ್ಸ್ ಹಂಚಿಕೆ ಮಾಡಿ ಚುನಾವಣೆಯಲ್ಲಿ ಗೆಲುವು ಸಾಧಿಸಿದ್ದಾರೆ ಎಂದು ಅವರ ಪುತ್ರ ಡಾ. ಯತೀಂದ್ರ (Yatindra) ಅವರು ನೀಡಿರುವ ಹೇಳಿಕೆ ನಿಜವಾಗಿದ್ದರೆ ಚುನಾವಣಾ ಆಯೋಗ (Election Commission) ಗಂಭೀರವಾಗಿ ಪರಿಗಣಿಸಬೇಕು ಎಂದು ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ (Basavaraj Bommai) ಆಗ್ರಹಿಸಿದ್ದಾರೆ.

    ಮತದಾರರಿಗೆ ಕುಕ್ಕರ್, ಐರನ್ ವಾಕ್ಸ್ ಹಂಚಿದ್ದರಿಂದಲೇ ತಮ್ಮ ತಂದೆ ಸಿದ್ದರಾಮಯ್ಯ ಅವರು ಚುನಾವಣೆಯಲ್ಲಿ ಗೆಲ್ಲಲು ಸಾಧ್ಯವಾಯಿತು ಎಂದು ಯತಿಂದ್ರ ಅವರು ಬಹಿರಂಗ ಹೇಳಿಕೆ ನೀಡಿದ್ದಾರೆ ಎಂದು ಮಾಧ್ಯಮದವರು ಕೇಳಿದ ಪ್ರಶ್ನೆಗೆ ಪ್ರತಿಕ್ರಿಯಿಸಿದ ಬೊಮ್ಮಾಯಿಯವರು, ಈ ಕುರಿತು ಯತೀಂದ್ರ ಅವರು ಹೇಳಿದ್ದು ನಿಜವಾಗಿದ್ದರೆ, ಅದನ್ನು ಚುಬಾವಣಾ ಆಯೋಗ ಗಮನಿಸಬೇಕಾಗುತ್ತದೆ. ಈಗಾಗಲೇ ಸಿದ್ದರಾಮಯ್ಯ ವಿರುದ್ಧ ಒಂದು ಚುನಾವಣಾ ತಕರಾರು ಅರ್ಜಿ ಇದೆ. ಡಾ. ಯತೀಂದ್ರ ಹೇಳಿದ್ದಕ್ಕೆ ಸಾಕ್ಷ್ಯಾಧಾರ ಇದ್ದರೆ ಆಯೋಗ ಇದನ್ನು ಪರಿಗಣಿಸಬೇಕಾಗುತ್ತದೆ. ಕುಕ್ಕರ್, ಐರನ್ ಬಾಕ್ಸ್ ಹಂಚಿಕೆ ನಿಜ ಆಗಿದ್ದರೆ ಇದು ಗಂಭೀರ ಪ್ರಕರಣ ಆಗಲಿದೆ ಎಂದು ಬಸವರಾಜ ಬೊಮ್ಮಾಯಿ ಅಭಿಪ್ರಾಯ ಪಟ್ಟರು.  ಇದನ್ನೂ ಓದಿ: ತಮಿಳುನಾಡಿಗೆ ನೀರು ಬಿಟ್ಟು ಸುಪ್ರೀಂನಲ್ಲಿ ವಾದ ಮಾಡಲು ಏನಿದೆ?: ಬೊಮ್ಮಾಯಿ

    ಯತೀಂದ್ರ ಹೇಳಿದ್ದೇನು?
    ಮೈಸೂರು ಜಿಲ್ಲೆಯ ನಂಜನಗೂಡು ತಾಲೂಕು ಮಡಿವಾಳ ಸಮುದಾಯ ಭವನದ ಕಾರ್ಯಕ್ರಮದಲ್ಲಿ ಭಾಷಣ ಮಾಡಿದ ಡಾ. ಯತೀಂದ್ರ ಸಿದ್ದರಾಮಯ್ಯ, ಭಾಷಣದ ವೇಳೆ ಚುನಾವಣಾ ಸತ್ಯ ಬಹಿರಂಗಪಡಿಸಿದ್ದು ಚುನಾವಣಾ ಸಮಯದಲ್ಲಿ ವರುಣಾ ಕ್ಷೇತ್ರದ ಮಡಿವಾಳ ಸಮುದಾಯ ಮತದಾರರಿಗೆ ಸಮುದಾಯದ ರಾಜ್ಯಾಧ್ಯಕ್ಷ ನಂಜಪ್ಪ ಕುಕ್ಕರ್, ಐರನ್ ಬಾಕ್ಸ್ ವಿತರಿಸಲು ಸಿದ್ದ ಮಾಡಿಕೊಂಡಿದ್ದರು. ಕಾರಣಾಂತರಗಳಿಂದ ಎರಡು ಮೂರು ಬಾರಿ ಮುಂದೂಡಲಾಗಿತ್ತು. ನಂತರ ತಂದೆಯವರಿಂದ ದಿನಾಂಕ ಪಡೆದು, ಅವರ ಕೈಯಲ್ಲೇ ಕುಕ್ಕರ್ ಹಾಗೂ ಐರನ್ ಬಾಕ್ಸ್ ಕೊಡಿಸಿದರು ಎಂದಿದ್ದಾರೆ.

    ಆ ಕಾರ್ಯಕ್ರಮ ಬಹಳ ಯಶಸ್ವಿಯಾಯಿತು. ಮಡಿವಾಳ ಸಮುದಾಯದ ಹೆಚ್ಚು ಮತ ಬೀಳಲು ಕಾರಣವಾಯಿತು. ಮಡಿವಾಳ ಸಮುದಾಯ ಹೆಚ್ಚಿನ ಬೆಂಬಲ ಕೊಟ್ಟಿದ್ದಕ್ಕೆ ನಿಮಗೆ ಧನ್ಯವಾದ ಎಂದು ಯತೀಂದ್ರ ತಿಳಿಸಿದ್ದರು.

     
    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ವಿವಾದ ಸೃಷ್ಟಿಸುವುದೇ ಪ್ರತಾಪ್ ಸಿಂಹ ಕೆಲಸ: ಯತೀಂದ್ರ ಸಿದ್ದರಾಮ್ಯಯ ಕಿಡಿ

    ವಿವಾದ ಸೃಷ್ಟಿಸುವುದೇ ಪ್ರತಾಪ್ ಸಿಂಹ ಕೆಲಸ: ಯತೀಂದ್ರ ಸಿದ್ದರಾಮ್ಯಯ ಕಿಡಿ

    ಚಾಮರಾಜನಗರ: ಇಲ್ಲದಿರುವ ವಿವಾದ ಸೃಷ್ಟಿಸುವುದೇ ಪ್ರತಾಪ್ ಸಿಂಹ ಕೆಲಸವಾಗಿದೆ ಎಂದು ಹೆಳುವ ಮೂಲಕ ಸಂಸದ ಪ್ರತಾಪ್ ಸಿಂಹಗೆ ತಿರುಗೇಟು ನೀಡಿದ್ದಾರೆ.

    ಕೊಡಗಿನ ಜನ ಟಿಪ್ಪು ಸುಲ್ತಾನ್‍ಗೆ ಹೆದರಲಿಲ್ಲ, ಸಿದ್ದು ಸುಲ್ತಾನ್‍ಗೆ ಹೆದರುತ್ತಾರೆ ಎಂಬ ಪ್ರತಾಪ್‍ಸಿಂಹ ಹೇಳಿಕೆ ವಿಚಾರವಾಗಿ ಚಾಮರಾಜನಗರದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಪ್ರಚೋದನಾಕಾರಿ ಹೇಳಿಕೆ ಕೊಟ್ಟು ಇಲ್ಲದಿರುವ ವಿವಾದ ಸೃಷ್ಟಿಸುವುದೇ ಪ್ರತಾಪ್ ಸಿಂಹ ಕೆಲಸ. ಕೊಡಗಿನ ಜನ ಧೈರ್ಯವಂತರು, ವೀರರು ಹಾಗೂ ಒಳ್ಳೆಯ ಜನ. ಅಂತಹವರನ್ನು ಬಿಜೆಪಿಯವರು ಹೇಡಿಗಳಾಗಿ ಕಲ್ಲರಸೆಯುವ ಮಟ್ಟಕ್ಕೆ ತಂದಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

    ಆರ್‍ಎಸ್‍ಎಸ್ ಸಂಚಾಲಕ ಹಾಗೂ ಬಿಜೆಪಿ ಕಾರ್ಯಕರ್ತನ ಮೂಲಕ ಮೊಟ್ಟೆ ಎಸೆಸಿದ್ದಾರೆ. ಕೊನೆಗೆ ಆತ ನಮ್ಮ ಕಾರ್ಯಕರ್ತನೇ ಅಲ್ಲ. ಕಾಂಗ್ರೆಸ್ ಕಾರ್ಯಕರ್ತ ಅಂತ ಸುಳ್ಳು ಹೇಳಿ ಬಿಜೆಪಿಯವರು ಹೇಡಿತನ ತೋರಿಸುತ್ತಿದ್ದಾರೆ. ಬಿಜೆಪಿಯವರ ರಾಜಕೀಯ ಅಸಹ್ಯ ಹುಟ್ಟಿಸುತ್ತಿದೆ ಎಂದು ಕಿಡಿಕಾರಿದ್ದಾರೆ. ಇದನ್ನೂ ಓದಿ: ನಾಟಿ ಕೋಳಿ ಊಟ ಮಾಡಿ ಅಂಬಾರಿಗೆ ಪುಷ್ಪಾರ್ಚನೆ: ಸಿದ್ದು ವಿರುದ್ಧ ಪ್ರತಾಪ್‌ ಸಿಂಹ ಕಿಡಿ

    ಸಿದ್ದರಾಮಯ್ಯ ಹತ್ಯೆಗೆ ಸಂಚು ಮಾಡಲಾಗಿದೆ ಎಂಬ ಕೆಪಿಸಿಸಿ ವಕ್ತಾರ ಲಕ್ಷ್ಮಣ್ ಅವರು ಆರೋಪ ಮಾಡಿರುವ ವಿಚಾರವಾಗಿ ಮಾತನಾಡಿದ ಅವರು, ಆ ಬಗ್ಗೆ ನನಗೆ ಗೊತ್ತಿಲ್ಲ. ಆದರೆ ಬಿಜೆಪಿಯವರ ಹಾಗೂ ಹಿಂದುತ್ವವಾದಿ ಸಂಘಟನೆಗಳ ಇತಿಹಾಸ ಗಮನಿಸಿದಾಗ ಹಿಂಸಾಚಾರದಲ್ಲಿ ತೊಡಗಿರುವುದು ಕಂಡುಬಂದಿದೆ. ಅವರು ಏನು ಮಾಡಲು ಹೇಸುವವರಲ್ಲ. ನಾವು ಯಾವುದಕ್ಕೂ ಹೆದರುವುದಿಲ್ಲ, ನಮ್ಮ ಹೋರಾಟ ಮುಂದುವರಿಸುತ್ತೇವೆ ಎಂದು ತಿಳಿಸಿದ್ದಾರೆ. ಇದನ್ನೂ ಓದಿ: ದಿನೇಶ್ ಗುಂಡೂರಾವ್ ವಾಹನದ ಮೇಲೆ ಕಾಂಗ್ರೆಸ್ ಕಾರ್ಯಕರ್ತರ ದಾಳಿ

    Live Tv
    [brid partner=56869869 player=32851 video=960834 autoplay=true]

  • ಬಿಜೆಪಿಯ ಆಗ್ರಹದಲ್ಲಿ ಕೋಮುದ್ವೇಷ ಬಿಟ್ಟರೆ ಬೇರೆ ಏನು ಇಲ್ಲ: ಯತೀಂದ್ರ

    ಬಿಜೆಪಿಯ ಆಗ್ರಹದಲ್ಲಿ ಕೋಮುದ್ವೇಷ ಬಿಟ್ಟರೆ ಬೇರೆ ಏನು ಇಲ್ಲ: ಯತೀಂದ್ರ

    ಮೈಸೂರು: ಕೋಮು ದ್ವೇಷ ಬಿತ್ತುವದಕ್ಕೆ ಬಿಜೆಪಿ ಲವ್ ಜಿಹಾದ್ ಪ್ರಸ್ತಾಪ ಮಾಡುತ್ತಿದೆ. ಬಿಜೆಪಿಯವರ ಆಗ್ರಹದಲ್ಲಿ ಕೋಮುದ್ವೇಷ ಬಿಟ್ಟರೆ ಬೇರೆ ಏನಿಲ್ಲ ಎಂದು ಶಾಸಕ ಯತೀಂದ್ರ ಸಿದ್ದರಾಮಯ್ಯ ಹೇಳಿದ್ದಾರೆ.

    ಮೈಸೂರಿನಲ್ಲಿ ಮಾಧ್ಯಮಗಳ ಜೊತೆ ಮಾತನಾಡಿದ ಯತೀಂದ್ರ, ಲವ್ ಜಿಹಾದ್ ಕಾನೂನಿಗೆ ನಮ್ಮ ತಂದೆ ವಿರೋಧ ಮಾಡಿರುವುದು ಸರಿ ಇದೆ. 18 ವರ್ಷ ಮೇಲ್ಪಟ್ಟವರು ಇಷ್ಟಪಟ್ಟವರನ್ನ ಮದುವೆಯಾಗಲು ಸಂಪೂರ್ಣ ಸ್ವತಂತ್ರರು ಎಂದು ತಂದೆ ಸಿದ್ದರಾಮಯ್ಯರ ಹೇಳಿಕೆಯನ್ನ ಸಮರ್ಥಿಸಿಕೊಂಡರು.

    ನಮ್ಮ ತಂದೆ ಹಿಂದಿನಿಂದಲು ಕುರುಬರಿಗೆ ಎಸ್‍ಟಿ ಮೀಸಲಾತಿ ಪರವಾಗಿಯೇ ಇದ್ದಾರೆ. ಈಗ ರಾಜ್ಯದಲ್ಲಿ ಹಾಗೂ ಕೇಂದ್ರದಲ್ಲಿ ಅವರದೇ ಸರ್ಕಾರವಿದ್ದರೂ ಹೋರಾಟ ಮಾಡುವ ಅಗತ್ಯವೇನಿದೆ. ನೇರವಾಗಿ ಕುರುಬರಿಗೆ ಎಸ್.ಟಿ. ಮೀಸಲಾತಿ ಜಾರಿಗೆ ತರಬಹುದು. ಇದೀಗ ಅದೇ ವಿಷಯವನ್ನಿಟ್ಟುಕೊಂಡು ರಾಜಕೀಯ ಮಾಡಲು ಹೊರಟಿದ್ದಾರೆ. ಬಿಜೆಪಿಗೆ ಹಣದಲ್ಲಿ ಚುನಾವಣೆ ಮಾಡಿ ಅಭ್ಯಾಸವಿದೆ. ಹಾಗಾಗಿ ನಮ್ಮ ಮೇಲೆ ಸುಳ್ಳು ಆರೋಪಗಳನ್ನ ಮಾಡುತ್ತಿದ್ದಾರೆ. ಉಪ ಚುನಾವಣೆಯಲ್ಲಿ ಏನಾಗಿದೆ ಎಂಬುದನ್ನ ರಾಜ್ಯದ ಜನತೆ ನೋಡಿದ್ದಾರೆ ಎಂದು ಬಿಜೆಪಿ ನಾಯಕರ ಹೇಳಿಕೆಗಳಿಗೆ ತಿರುಗೇಟು ನೀಡಿದರು. ಇದನ್ನೂ ಓದಿ: ಹಿಂದೂ, ಮುಸ್ಲಿಂ ಕ್ರಾಸ್ ಆಗಿ ಹುಟ್ಟಿದವರು ಬಹಳ ಜನ ಇದ್ದಾರೆ: ಸಿದ್ದರಾಮಯ್ಯ

  • ಡಿಕೆಶಿ ಪಕ್ಷ ನಡೆಸಲಿ, ನಾವು ಅವರೊಂದಿಗೆ ಇರುತ್ತೇವೆ – ಯತೀಂದ್ರ ಸಿದ್ದರಾಮಯ್ಯ

    ಡಿಕೆಶಿ ಪಕ್ಷ ನಡೆಸಲಿ, ನಾವು ಅವರೊಂದಿಗೆ ಇರುತ್ತೇವೆ – ಯತೀಂದ್ರ ಸಿದ್ದರಾಮಯ್ಯ

    ಮೈಸೂರು: ಮಾಜಿ ಸಚಿವ ಡಿ.ಕೆ.ಶಿವಕುಮಾರ್ ಕಾಂಗ್ರೆಸ್ ಪಕ್ಷವನ್ನು ಮುನ್ನಡೆಸಲಿ. ನಾವು ಅವರ ಜೊತೆಗೆ ಇರುತ್ತೇವೆ ಎಂದು ಶಾಸಕ ಯತೀಂದ್ರ ಸಿದ್ದರಾಮಯ್ಯ ಹೇಳಿದ್ದಾರೆ.

    ಡಿಕೆಶಿ ಸನ್ಮಾನ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಕಾಂಗ್ರೆಸ್ ಪಕ್ಷದವರು ಅವರ ಜೊತೆಗೆ ನಿಲ್ಲಬೇಕು, ಅವರಿಗೆ ನೈತಿಕ ಸ್ಥೈರ್ಯ ತುಂಬಬೇಕು. ಈ ನಿಟ್ಟಿನಲ್ಲಿ ಅವರಿಗೆ ನಮ್ಮ ಸಂಪೂರ್ಣ ಬೆಂಬಲ ಇದೆ. ಅವರು ಕಾಂಗ್ರೆಸ್ ಪಕ್ಷವನ್ನು ಮುನ್ನಡೆಸಲಿ. ಪಕ್ಷವನ್ನು ಮತ್ತೆ ಅಧಿಕಾರಕ್ಕೆ ತರುವ ನಿಟ್ಟಿನಲ್ಲಿ ಅವರು ಪ್ರಯತ್ನಿಸಲಿ ಎಂದು ಅಭಿಪ್ರಾಯಪಟ್ಟರು.

    ಡಿ.ಕೆ.ಶಿವಕುಮಾರ್ ಹಿಂದೆ ನಾವೆಲ್ಲ ಇದ್ದೇವೆ. ಅವರಿಗೆ ನನ್ನ ಬೆಂಬಲವನ್ನು ವ್ಯಕ್ತಪಡಿಸುತ್ತೇನೆ ಎಂದು ತಿಳಿಸಿದರು.

    ಕಾಂಗ್ರೆಸ್ ಪಕ್ಷದ ನಾಯಕರನ್ನು ಬೇಕಂತಲೇ ಟಾರ್ಗೆಟ್ ಮಾಡಲಾಗಿದೆ. ಕೆಲ ಸಂಸ್ಥೆಗಳನ್ನು ಬಿಜೆಪಿ ರಾಜಕೀಯ ಲಾಭಕ್ಕೆ ದುರ್ಬಳಕೆ ಮಾಡಿಕೊಂಡಿದೆ. ಇಡಿ, ಸಿಬಿಐಯನ್ನು ಛೂ ಬಿಟ್ಟು ಪಕ್ಷದ ಮುಖಂಡರನ್ನು ಟಾರ್ಗೆಟ್ ಮಾಡಿದೆ. ಶಿವಕುಮಾರ್ ಅವರಿಗೂ ಇದೇ ರೀತಿ ಮಾಡಲಾಯಿತು. ಅವರು ತನಿಖೆಗೆ ಸಹಕರಿಸಿದರೂ ಬಿಡಲಿಲ್ಲ. ಬಿಜೆಪಿಯವರು ಹಬ್ಬ ಮಾಡಲು ಬಿಡದೆ ಅಮಾನವೀಯವಾಗಿ ವರ್ತಿಸಿದರು ಎಂದು ಹರಿಹಾಯ್ದರು.

    ಸಿದ್ದರಾಮಯ್ಯ ತವರಲ್ಲಿ ಡಿಕೆಶಿ ಪವರ್ ತೋರಿಸಿದ್ದು, ಮೈಸೂರಿನಲ್ಲಿ ಡಿಕೆಶಿಗೆ ಅದ್ಧೂರಿಯಾಗಿ ಸ್ವಾಗತ ಮಾಡಲಾಯಿತು. ಮೆರವಣಿಗೆಯಲ್ಲಿ ಡಿಕೆಶಿ ಕರೆತಂದ ಕೈ ಕಾರ್ಯಕರ್ತರು ಬೃಹತ್ ಸೇಬಿನ ಹಾರ ಹಾಕಿ ಸ್ವಾಗತಿಸಿದರು. ಇದೇ ವೇಳೆ ಹಾರದಿಂದ ಸೇಬು ಕಿತ್ತುಕೊಂಡು ಡಿ.ಕೆ.ಶಿವಕುಮಾರ್ ತಿಂದರು.

  • ಸಲುಗೆಯಿಂದ ತಾಳ್ಮೆ ಕಳೆದುಕೊಂಡಿದ್ದಾರೆ- ಅಪ್ಪನ ಪರವಾಗಿ ಯತೀಂದ್ರ ಕ್ಷಮೆಯಾಚನೆ

    ಸಲುಗೆಯಿಂದ ತಾಳ್ಮೆ ಕಳೆದುಕೊಂಡಿದ್ದಾರೆ- ಅಪ್ಪನ ಪರವಾಗಿ ಯತೀಂದ್ರ ಕ್ಷಮೆಯಾಚನೆ

    ಬೆಂಗಳೂರು: ಮಹಿಳೆ ತಮ್ಮ ಪಕ್ಷದ ಕಾರ್ಯಕರ್ತೆಯಾಗಿದ್ದರು. ಆದ್ದರಿಂದ ಪರಿಚಯಸ್ಥರಾಗಿದ್ದರಿಂದ ಸಲುಗೆಯಿಂದ ತಾಳ್ಮೆ ಕಳೆದುಕೊಂಡಿದ್ದಾರೆ. ಹೀಗಾಗಿ ತಂದೆಯ ಪರವಾಗಿ ನಾನು ಕ್ಷಮೆಯಾಚಿಸುತ್ತೇನೆ ಎಂದು ಸಿದ್ದರಾಮಯ್ಯ ಪುತ್ರ ಡಾ.ಯತೀಂದ್ರ ಸಿದ್ದರಾಮಯ್ಯ ಕೇಳಿದ್ದಾರೆ.

    ಮೈಸೂರಿನಲ್ಲಿ ಕ್ಷೇತ್ರದ ಶಾಸಕರು ಕೈಗೆ ಸಿಗುವುದಿಲ್ಲ ಎಂದು ಸಾರ್ವಜನಿಕ ಸಭೆಯಲ್ಲಿ ದೂರು ನೀಡಿದ್ದಕ್ಕೆ ಟೇಬಲ್ ಕುಟ್ಟಿದ ಮಹಿಳೆಯ ಮೈಕ್ ಕಿತ್ತುಕೊಂಡು ಮಾಜಿ ಸಿಎಂ ಸಿದ್ದರಾಮಯ್ಯ ತಮ್ಮ ರೌದ್ರಾವತಾರ ಪ್ರದರ್ಶಿಸಿದ್ದರು. ಈ ಬಗ್ಗೆ ಪಬ್ಲಿಕ್ ಟಿವಿಯ ಜೊತೆ ಮಾತನಾಡಿದ ಯಂತೀದ್ರ ಅವರು, ನಮ್ಮ ತಂದೆ 40 ವರ್ಷದಿಂದ ರಾಜಕೀಯ ಮಾಡುತ್ತಿದ್ದಾರೆ. ಸಾಕಷ್ಟು ಸಭೆಗಳನ್ನು ಮಾಡಿದ್ದು, ಎಲ್ಲ ಕಡೆ ಅವರು ತಾಳ್ಮೆಯಿಂದ ನಡೆದುಕೊಂಡಿದ್ದಾರೆ. ಈ ಸಭೆಯಲ್ಲಿ ಪ್ರಶ್ನೆ ಕೇಳುತ್ತಿದ್ದ ಮಹಿಳೆ ಕೂಡ ನಮ್ಮ ಪಕ್ಷದವರೇ ಆಗಿದ್ದಾರೆ. ಅವರು ತಮ್ಮ ಸಮಸ್ಯೆಗಳನ್ನು ಅಧಿಕಾರಿಗಳ ಬಳಿ ದೂರು ಹೇಳುತ್ತಿದ್ದರು. ಈ ವೇಳೆ ಮಹಿಳೆ ದೂರು ಹೇಳುತ್ತಾ ಹೇಳುತ್ತಾ ಗರಂ ಆಗಿದ್ದಾರೆ ಎಂದು ಹೇಳಿದ್ದಾರೆ.

    ಮಹಿಳೆ ನೀವು ಚುನಾವಣೆಯಾದ ಬಳಿಕ ನಮ್ಮ ಕ್ಷೇತ್ರಕ್ಕೆ ಬರುತ್ತಿಲ್ಲ ಎಂದು ಹೇಳಿದ್ದಾರೆ. ಆದರೆ ನಾನು, ನಮ್ಮ ತಂದೆಯವರು ಕ್ಷೇತ್ರಕ್ಕೆ ಹೋಗುತ್ತಿದ್ದೇವೆ. ಆ ಮಹಿಳೆ ನಮ್ಮ ತಂದೆಗೆ 15 ವರ್ಷದಿಂದ ಪರಿಚಯ ಇತ್ತು. ಹೀಗಾಗಿ ಪರಿಚಯವಿದ್ದುದ್ದರಿಂದ ಸ್ವಲ್ಪ ತಾಳ್ಮೆ ಕಳೆದುಕೊಂಡಿದ್ದಾರೆ. ಆದರೆ ನಮ್ಮ ತಂದೆ ಅವರು ತಾಳ್ಮೆ ಕಳೆದುಕೊಳ್ಳಬಾರದಿತ್ತು. ಮಹಿಳೆ ಯಾವಾಗ ನೀವು ನಮ್ಮ ಕ್ಷೇತ್ರಕ್ಕೆ ಬರುತ್ತಿಲ್ಲ ಎಂದು ಸುಳ್ಳು ಹೇಳಿದರು. ಆಗ ನಮ್ಮ ಪಕ್ಷದ ಕಾರ್ಯಕರ್ತರೇ ಈ ರೀತಿ ಮಾತನಾಡಿದ್ದಾರೆ ಎಂದು ಕೋಪ ಮಾಡಿಕೊಂಡಿದ್ದಾರೆ.  ಸಲುಗೆಯಿಂದ ತಾಳ್ಮೆ ಕಳೆದುಕೊಂಡಿದ್ದಾರೆ ಎಂದು ಸ್ಪಷ್ಟನೆ ಕೊಟ್ಟಿದ್ದಾರೆ.

    ಚುನಾವಣೆ ಆದ ಮೇಲೆ ನಾವು ಎಲ್ಲ ಗ್ರಾಮಗಳಿಗೂ ಭೇಟಿ ಕೊಡುತ್ತಿದ್ದೇವು. ವಾರದಲ್ಲಿ 3, 4 ದಿನ ಹೋಗುತ್ತಿದ್ದೇವೆ. ನಮ್ಮ ತಂದೆಯವರು ತಾಳ್ಮೆಯಿಂದ ಮಾತನಾಡುತ್ತಿದ್ದರು. ಆದರೆ ಮಹಿಳೆ ಸುಳ್ಳು ಹೇಳಿದಾಗ ಕೋಪ ಮಾಡಿಕೊಂಡಿದ್ದಾರೆ. ನಮ್ಮ ತಂದೆ ಎಲ್ಲ ಹೆಣ್ಣು ಮಕ್ಕಳಿಗೂ ಗೌರವ ಕೊಟ್ಟು ಮಾತನಾಡುತ್ತಾರೆ. ಕೆಲವು ಬಾರಿ ತಪ್ಪುಗಳಾಗುತ್ತವೆ. ಯಾಕೆಂದರೆ ಯಾವಗಲೂ ಮನಸ್ಸು ಒಂದೇ ರೀತಿ ಇರುವುದಿಲ್ಲ. ಆದರೆ ಅಲ್ಲಿ ಅವರು ತಾಳ್ಮೆ ಕಳೆದುಕೊಳ್ಳಬಾರದಿತ್ತು. ಅದು ದುರದೃಷ್ಟಕರವಾಗಿದ್ದು, ನಮ್ಮ ತಂದೆ ಕಾರಣ ಇಲ್ಲದೇ ಆ ರೀತಿಯಾಗಿ ವರ್ತಿಸುತ್ತಿರಲಿಲ್ಲ ಎಂದರು.

    ಮಹಿಳೆ ಅಧಿಕಾರಿಗಳು ಕೆಲಸ ಮಾಡಿಕೊಡುತ್ತಿಲ್ಲ ಎಂದು ಸುಮಾರು 5-10 ನಿಮಿಷ ಮಾತನಾಡುತ್ತಿದ್ದರು. ನಮ್ಮ ತಂದೆ ಮೇಲೆ, ನಮ್ಮ ಮೇಲೂ ಸುಳ್ಳು ಆರೋಪ ಮಾಡಿದರು. ನಾವು ಮಹಿಳೆಗೆ ಕೆಲಸ ಮಾಡಿಕೊಡುತ್ತೇವೆ ಎಂದು ಸಮಾಧಾನ ಮಾಡುತ್ತಿದ್ದೇವು. ಆದರೂ ಅವರು ಕೇಳಲಿಲ್ಲ. ಅವರ ದೂರು ಸುಳ್ಳಾಗಿತ್ತು. ಕೊನೆಗೆ ನಮ್ಮ ತಂದೆ ತಾಳ್ಮೆ ಕಳೆದುಕೊಂಡಿದ್ದಾರೆ. ಒಂದೇ ಪಕ್ಷ ಎಂದರೂ ದೂರುಗಳು, ಅಸಮಾಧಾನ ಇರುತ್ತದೆ. ಅವರ ಕೋಪಕ್ಕೆ ಕಾರಣ ತಿಳಿದುಕೊಂಡು ನಾನು ಮಾತನಾಡುತ್ತೇನೆ. ಆ ಸಂದರ್ಭದಲ್ಲಿ ನಮ್ಮ ತಂದೆ ಅಷ್ಟು ಮಟ್ಟಕ್ಕೆ ಕೋಪ ಮಾಡಿಕೊಳ್ಳಬಾರದಿತ್ತು. ಸಮಾಧಾನವಾಗಿ ಮಹಿಳೆಗೆ ಹೇಳಬೇಕಿತ್ತು. ಆದರೆ ಇದರಿಂದ ಜನರಿಗೆ ತಪ್ಪು ಮಾಹಿತಿ ತಲುಪಬಾರದು. ಈ ಬಾರಿ ತಪ್ಪಾಗಿದೆ, ಹೀಗಾಗಿ ಅವರ ಪರವಾಗಿ ನಾನು ಕ್ಷಮೆ ಯಾಚಿಸುತ್ತೇನೆ ಎಂದು ಯತೀಂದ್ರ ಸಿದ್ದರಾಮಯ್ಯ ಅವರು ಕ್ಷಮೆ ಕೇಳಿದ್ದಾರೆ.

    https://www.youtube.com/watch?v=wq3UkBdNrVo

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv

  • ಕಲಾಪ ನಡೆಯುತ್ತಿದ್ದಾಗ ಮೊಬೈಲ್ ನಲ್ಲಿ ಬ್ಯುಸಿಯಾದ ಯತೀಂದ್ರ ಸಿದ್ದರಾಮಯ್ಯ – ವಿಡಿಯೋ ನೋಡಿ

    ಕಲಾಪ ನಡೆಯುತ್ತಿದ್ದಾಗ ಮೊಬೈಲ್ ನಲ್ಲಿ ಬ್ಯುಸಿಯಾದ ಯತೀಂದ್ರ ಸಿದ್ದರಾಮಯ್ಯ – ವಿಡಿಯೋ ನೋಡಿ

    ಬೆಂಗಳೂರು: ವಿಧಾನಸಭೆಯಲ್ಲಿ ಅಭಿವೃದ್ಧಿ ಕುರಿತ ಗಂಭೀರ ಚರ್ಚೆ ನಡೀತಿದ್ರೆ, ಇತ್ತ ಮಾಜಿ ಸಿಎಂ ಸಿದ್ದರಾಮಯ್ಯ ಪುತ್ರ ಯತೀಂದ್ರ ಸಿದ್ದರಾಮಯ್ಯ ಮಾತ್ರ ಅದಕ್ಕೂ ತಮಗೂ ಸಂಬಂಧವಿಲ್ಲವೇನೋ ಎನ್ನುವಂತೆ ಮೊಬೈಲ್ ನಲ್ಲಿ ಬ್ಯುಸಿಯಾಗಿದ್ದರು.

    ಯತೀಂದ್ರ ಸಿದ್ದರಾಮಯ್ಯ ಮೊಬೈಲ್ ನಲ್ಲಿ ಫೇಸ್ ಬುಕ್ ನೋಡುತ್ತ ತಮಗೆ ಕಲಾಪ ಸಂಬಂಧವಿಲ್ಲವೇನೋ ಎಂಬಂತೆ ಕುಳಿತಿದ್ದರು.

    ಬೆಳಗ್ಗೆ ಕಲಾಪ ಆರಂಭವಾಗುತ್ತಿದ್ದಂತೆ ಕೆಲ ಶಾಸಕರು ಮೊಬೈಲ್ ಬಳಕೆಯಲ್ಲಿ ಬ್ಯುಸಿ ಆಗಿದ್ದರು. ಬಿಜೆಪಿ ಶಾಸಕ ವಿರುಪಾಕ್ಷಪ್ಪ ಮೊಬೈಲ್ ಬಳಸುತ್ತಿದ್ದರು. ಆದರೆ ಮಧ್ಯಾಹ್ನದ ವೇಳೆ ಸದನದಲ್ಲಿ ಮಾಸಿ ಸಿಎಂ ಸಿದ್ದರಾಮಯ್ಯ ಪುತ್ರ ಯತೀಂದ್ರ ಸಿದ್ದರಾಮಯ್ಯ ಮೊಬೈಲ್ ನಲ್ಲಿ ಬ್ಯುಸಿ ಆಗಿದ್ದು ಕಂಡುಬಂದಿತು.

    ಸದನಕ್ಕೆ ಮೊಬೈಲ್ ತರಬಾರದೆಂಬ ನಿಯಮವಿದೆ. ಆದರೆ ಈ ಎಲ್ಲಾ ನಿಯಮಗಳನ್ನು ಉಲ್ಲಂಘಿಸಿದ ಯತೀಂದ್ರ ಸಿದ್ದರಾಮಯ್ಯ ಸದನಕ್ಕೆ ಮೊಬೈಲ್ ತಂದಿದ್ದರು. ಅಲ್ಲದೇ ಅಭಿವೃದ್ಧಿ ಕೆಲಸಗಳ ಬಗ್ಗೆ ಚಿಂತನೆ ಮಾಡಬೇಕಾದ ಸಮಯದಲ್ಲಿ ಸಾಮಾಜಿಕ ಜಾಲತಾಣದಲ್ಲಿ ವಿಹರಿಸುತ್ತಿದ್ದರು.