Tag: Yatiraj

  • ಟ್ವೀಟ್ ಡಿಲೀಟ್ ಮಾಡಿದ್ದಕ್ಕೆ ಜಗ್ಗೇಶ್ ಸ್ಪಷ್ಟನೆ

    ಟ್ವೀಟ್ ಡಿಲೀಟ್ ಮಾಡಿದ್ದಕ್ಕೆ ಜಗ್ಗೇಶ್ ಸ್ಪಷ್ಟನೆ

    ಬೆಂಗಳೂರು: ಮಗನ ಕಾರ್ ಅಪಘಾತದ ಕುರಿತು ಟ್ವೀಟ್ ಮಾಡಿದ್ದ ನಟ ಜಗ್ಗೇಶ್, ಬಳಿಕ ಡಿಲೀಟ್ ಮಾಡಿದ್ದರು. ಇದರಿಂದಾಗಿ ಹಲವು ಪ್ರಶ್ನೆಗಳು ಎದ್ದಿದ್ದವು. ಇದಕ್ಕೆ ಇದೀಗ ಜಗ್ಗೇಶ್ ಟ್ವೀಟ್ ಮೂಲಕವೇ ಸ್ಪಷ್ಟನೆ ನೀಡಿದ್ದಾರೆ.

    ಮಗನ ಕಾರ್ ಅಪಘಾತದ ಚಿತ್ರ ನೋಡಿದರೆ ನನಗೆ ಹೃದಯ ಬಡಿತ ಹೆಚ್ಚಾಗುತ್ತಿದೆ. ಕೆಟ್ಟ ಭಯ ಆವರಿಸುತ್ತದೆ. ಬೆಳಗ್ಗೆಯಿಂದ ಏನೂ ತಿನ್ನಲಾಗದೆ, ಕೆಟ್ಟ ಕಲ್ಪನೆಗಳು ನನ್ನ ಕಾಡುತ್ತಿವೆ. ಮನೆಯವರು ಅದನ್ನು ನೋಡದಂತೆ ವಿನಂತಿ ಮಾಡಿದರು. ಹೀಗಾಗಿ ಹಾಕಿದ ವಿಷಯ ಡಿಲೀಟ್ ಮಾಡಿದೆ ಎಂದು ತಿಳಿಸಿದ್ದಾರೆ.

    ಬೆಳಗ್ಗೆ ಟ್ವೀಟ್ ಮಾಡಿದ್ದ ನಟ ಜಗ್ಗೇಶ್, ಕೊರೊನಾ ಬಂದಾಗಿನಿಂದ ಹೊರ ಹೋಗಿಲ್ಲ, ಹೋಗಿಬರುವೆ ಎಂದು ಅಮ್ಮನಿಗೆ ಹೇಳಿ ಯತಿರಾಜ್ ಮನೆಯಿಂದ ಹೋರ ಹೋಗಿದ್ದನು. ಪ್ರತಿಬಾರಿ ಅವನ ಇಷ್ಟದ ಬೆಂಗಳೂರು-ಚಿಕ್ಕಬಳ್ಳಾಪುರಕ್ಕೆ ಹೋಗಿ ಬರುವಾಗ ಅಡ್ಡ ಬಂದ ನಾಯಿ ರಕ್ಷಿಸಲು ಹೋಗಿ ರಸ್ತೆ ವಿಭಜಕ್ಕೆ ಕಾರ್ ಡಿಕ್ಕಿ ಹೊಡೆದು ರಸ್ತೆಗೆ ಬಿದ್ದಿದೆ. ರಾಯರ ದಯೆ ಹಾಗೂ ನಿಮ್ಮ ಶುಭಹಾರೈಕೆ ಯತಿರಾಜನಿಗೆ ಸಣ್ಣ ಗಾಯವೂ ಇಲ್ಲ.

    ರಾಯರು ನನ್ನ ಜೊತೆ ಸದಾ ಇರುತ್ತಾರೆ, ಇದ್ದಾರೆ. ಇಂಥ ಘಟನೆಗಳು ಚಮತ್ಕಾರ ನನ್ನ ಬದುಕಲ್ಲಿ ನಡೆಯುವುದೇ ನಾನಿದ್ದೀನೋ, ಇರುತ್ತೀನೋ ನಿನ್ನ ಜೊತೆ ಯಾವಾಗಲು ಎಂದು ರಾಯರು ಅವರ ಪವಾಡ ನಿರೂಪಿಸಲು. ನಿನ್ನೆ ಪೂಜೆಯಲ್ಲಿ ಕುಟುಂಬದ ರಕ್ಷಣೆಗೆ ಪ್ರಾರ್ಥಿಸಿದ್ದೆ. ಸದಾ ಅವರ ಸ್ಮರಣೆಯಲ್ಲೇ ಬದುಕುವ ನನಗೆ ಇದು ಮತ್ತೊಂದು ಪವಾಡ. ನಂಬಿ ಕೆಟ್ಟವರಿಲ್ಲಾ ಗುರುರಾಯರ ಎಂದು ಜಗ್ಗೇಶ್ ಟ್ವೀಟ್ ಮಾಡಿದ್ದರು.

    ಅಪಘಾತ ಆಗಿದ್ದೇಗೆ?: ಚಿಕ್ಕಬಳ್ಳಾಪುರ ನಗರ ಹೊರವಲಯದ ಬೆಂಗಳೂರು ಹೈದರಾಬಾದ್ ಹೈವೆಯಲ್ಲಿ ಅಗಲಗುರ್ಕಿ ಸೇತುವೆ ಬಳಿ ನಟ ಜಗ್ಗೇಶ್ ಪುತ್ರ ಯತಿರಾಜ್ ಕಾರು ಅಪಘಾತಕ್ಕೀಡಾಗಿದೆ. ಕಾರಿನಲ್ಲಿದ್ದ ಯತಿರಾಜ್ ಅದೃಷ್ಟವಶಾತ್ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಹೈದರಾಬಾದ್ ಕಡೆಯಿಂದ ಬೆಂಗಳೂರು ಕಡೆಗೆ ಬಿಎಂಡಬ್ಲ್ಯೂ ಕಾರಿನಲ್ಲಿ ಬರ್ತಿದ್ದ ವೇಳೆ ಅಗಲಗುರ್ಕಿ ಸೇತುವೆ ಅಂತ್ಯಕ್ಕೆ ಯೂ ಟರ್ನ್ ಇದೆ. ಅಡ್ಡ ಬಂದ ನಾಯಿ/ಬೈಕ್ ತಪ್ಪಿಸಲು ಹೋಗಿ ಕಾರು ರಸ್ತೆ ವಿಭಜಕಕ್ಕೆ ಡಿಕ್ಕಿ ಹೊಡೆದಿದೆ. ರಸ್ತೆ ವಿಭಜಕಕ್ಕೆ ಡಿಕ್ಕಿ ಹೊಡೆದು ಕಾರು ಚಲಿಸುತ್ತಿದ್ದ ವಿರುದ್ಧ ದಿಕ್ಕಿನ ರಸ್ತೆಗೆ ಜಂಪ್ ಮಾಡಿದೆ. ತದನಂತರ ರಸ್ತೆ ಬದಿ 200-300 ಮೀಟರ್ ದೂರ ಕಾರು ರಭಸವಾಗಿ ನುಗ್ಗಿದ್ದು, ಕೊನೆಯಲ್ಲಿ ಮರವೊಂದಕ್ಕೆ ಡಿಕ್ಕಿ ಹೊಡೆದು ನಿಂತಿದೆ.

    ಅಪಘಾತದ ರಭಸಕ್ಕೆ ಮರದ ಕೊಂಬೆ ಸಹ ಮುರಿದಿದ್ದು, ಮರಕ್ಕೆ ಡಿಕ್ಕಿ ಹೊಡೆದು ಮತ್ತೆ ರಸ್ತೆ ಬದಿಗೆ ಉಲ್ಟಾ ತಿರುಗಿ ನಿಂತಿದೆ. ಪರಿಣಾಮ ಕಾರಿನಲ್ಲಿದ್ದ 4 ಏರ್ ಬ್ಯಾಗ್ ಗಳು ಬಿಚ್ಚಿಕೊಂಡಿವೆ. ಕಾರಿನ ಮುಂಭಾಗ ಸಂಪೂರ್ಣ ಜಖಂಗೊಂಡಿದೆ. ಕಾರಿನಲ್ಲಿದ್ದ ಯತಿರಾಜ್ ಕೆಳಗಿಳಿದಿದ್ದು ಅಷ್ಟರಲ್ಲೇ ಅಲ್ಲೇ ರಸ್ತೆ ಬದಿ ಜಮೀನಿನಲ್ಲಿ ವಿದ್ಯುತ್ ಕಂಬ ಆಳವಡಿಸುತ್ತಿದ್ದ ಕಾರ್ಮಿಕರು ಯತಿರಾಜ್ ರಕ್ಷಣೆಗೆ ಧಾವಿಸಿದ್ದಾರೆ. ತತ್ ಕ್ಷಣ ನೀರು ಕುಡಿಸಿ ಗಾಬರಿಯಾಗಿದ್ದ ಯತಿರಾಜ್ ರನ್ನ ಸಮಾಧಾನ ಮಾಡಿ ಆಟೋ ಮೂಲಕ ಕರೆದುಕೊಂಡು ಆಸ್ಪತ್ರೆಯತ್ತ ಹೋಗಿದ್ದಾರೆ. ಆದ್ರೆ ಆಸ್ಪತ್ರೆಗೆ ಹೋದ್ರಾ ಇಲ್ಲ ಎಂಬುದು ತಿಳಿದುಬಂದಿಲ್ಲ. ವಿಷಯ ತಿಳಿದು ಚಿಕ್ಕಬಳ್ಳಾಪುರ ಸಂಚಾರಿ ಪೊಲೀಸರು ಘಟನಾ ಸ್ಥಳಕ್ಕೆ ಬಂದು ಪರಿಶೀಲನೆ ನಡೆಸಿ ಘಟನಾ ಸ್ಥಳದಲ್ಲಿದ್ದ ಕಾರನ್ನ ಪೊಲೀಸ್ ಠಾಣಾ ಆವರಣಕ್ಕೆ ಶಿಫ್ಟ್ ಮಾಡಿದ್ದಾರೆ.

  • ಯತಿರಾಜ್ ಹೆಚ್ಚಿನ ಚಿಕಿತ್ಸೆಗೆ ಬೆಂಗಳೂರಿನ ಆಸ್ಪತ್ರೆಗೆ ಶಿಫ್ಟ್: ಎಸ್‌ಪಿ ಮಿಥುನ್ ಕುಮಾರ್

    ಯತಿರಾಜ್ ಹೆಚ್ಚಿನ ಚಿಕಿತ್ಸೆಗೆ ಬೆಂಗಳೂರಿನ ಆಸ್ಪತ್ರೆಗೆ ಶಿಫ್ಟ್: ಎಸ್‌ಪಿ ಮಿಥುನ್ ಕುಮಾರ್

    ಚಿಕ್ಕಬಳ್ಳಾಪುರ: ಕಾರು ಅಪಘಾತದಲ್ಲಿ ಗಾಯಗೊಂಡಿದ್ದ ನಟ ಜಗ್ಗೇಶ್ ಪುತ್ರ ಯತಿರಾಜ್ ಅವರನ್ನು ಹೆಚ್ಚಿನ ಚಿಕಿತ್ಸೆಗೆ ಬೆಂಗಳೂರಿನ ಆಸ್ಪತ್ರೆಗೆ ರವಾನಿಸಲಾಗಿದೆ ಎಂದು ಚಿಕ್ಕಬಳ್ಳಾಪುರ ಎಸ್‌ಪಿ ಮಿಥುನ್ ಕುಮಾರ್ ತಿಳಿಸಿದ್ದಾರೆ.

    ಅಪಘಾತ ಪ್ರಕರಣ ಸಂಬಂಧ ಮಾಧ್ಯಮಗಳಿಗೆ ಮಾಹಿತಿ ನೀಡಿದ ಅವರು, ಬೆಳಗ್ಗೆ 11.45-12 ಗಂಟೆ ಸುಮಾರಿಗೆ ಅಪಘಾತ ಸಂಭವಿಸಿದೆ. ಚಿಕ್ಕಬಳ್ಳಾಪುರ ಬೆಂಗಳೂರು ಹೈವೇಯಲ್ಲಿ ಅಗಲಗುರ್ಕಿ ಸೇತುವೆ ಬಳಿ ಅಡ್ಡ ಬಂದ ಬೈಕ್ ತಪ್ಪಿಸಲು ಹೋಗಿ ಕಾರು ಅಪಘಾತಕ್ಕೀಡಾಗಿದೆ. ಡಿವೈಡರ್ ಗೆ ಡಿಕ್ಕಿ ಹೊಡೆದು ಮೂರು ಪಲ್ಟಿಯಾಗಿ, ನಂತರ ರಸ್ತೆ ಬದಿ ಫುಟ್ ಪಾತ್ ಮೇಲೆ ಹರಿದು, ಮರಕ್ಕೆ ಡಿಕ್ಕಿ ಹೊಡೆದು ನಿಂತಿದೆ. ಅಪಘಾತ ನಂತರ ಸ್ಥಳೀಯರು ನೀರು ಕುಡಿಸಿ ಆರೈಕೆ ಮಾಡಿದ್ದಾರೆ. ಕಾರಿನಲ್ಲಿದ್ದ ಯತಿರಾಜ್ ನಮಗೆ ಸಿಕ್ಕಿದ್ದು, ಚಿಕ್ಕಬಳ್ಳಾಪುರ ಜಿಲ್ಲಾಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಲಾಗಿದೆ ಎಂದರು. ಇದನ್ನೂ ಓದಿ: ನಾಲ್ಕು ಬಾರಿ ಕಾರ್ ಪಲ್ಟಿಯಾಗಿ, ಮರಕ್ಕೆ ಡಿಕ್ಕಿ ಹೊಡಿತು: ಪ್ರತ್ಯಕ್ಷದರ್ಶಿ

    ಇದಾದ ನಂತರ ವೈದ್ಯರ ಸೂಚನೆ ಮೇರೆಗೆ ಹೆಚ್ಚಿನ ಚಿಕಿತ್ಸೆಗೆ ಬೆಂಗಳೂರಿಗೆ ಕಳುಹಿಸಿಕೊಡಲಾಗಿದೆ. ನಟ ಜಗ್ಗೇಶ್ ಅವರ ಎರಡನೇ ಪುತ್ರ ಯತಿರಾಜ್ ಅವರು ಕಾರಿನಲ್ಲಿದ್ದವರು,ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಪ್ರತ್ಯಕ್ಷದರ್ಶಿಗಳ ಹೇಳಿಕೆ ಆಧರಿಸಿ ಚಿಕ್ಕಬಳ್ಳಾಪುರ ನಗರ ಸಂಚಾರಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದೇವೆ. ಮುಖ, ಹಣೆ ಹಾಗೂ ಕಾಲಿಗೆ ಸ್ವಲ್ಪ ಗಾಯವಾಗಿದೆ. ತಲೆಯಲ್ಲಿ ಸ್ವಲ್ಪ ಮಟ್ಟಿಗೆ ಗುಂಗು ಬರುತ್ತಿದೆ ಎಂದು ಹೇಳಿದ್ದು, ಸಿ.ಟಿ.ಸ್ಕ್ಯಾನ್ ಗೆ ಬೆಂಗಳೂರಿಗೆ ಕಳುಹಿಸಲಾಗಿದೆ. ಜೊತೆಯಲ್ಲಿ ಪೊಲೀಸರೂ ಹೋಗಿದ್ದಾರೆ. ಚಿಕಿತ್ಸೆ ಮುಗಿದ ನಂತರ ವಿಚಾರಣೆ ಮಾಡಲಿದ್ದೇವೆ ಎಂದು ತಿಳಿಸಿದರು.

    ಅಪಘಾತ ಸಂಭವಿಸಿದ್ದು ಎಲ್ಲಿ?:
    ಚಿಕ್ಕಬಳ್ಳಾಪುರ ನಗರದ ಹೊರವಲಯದ ಹೈದರಾಬಾದ್ ಹೆದ್ದಾರಿಯ ಅಲಗುರ್ಕಿ ಬೈ ಪಾಸ್ ಬಳಿ ಅಪಘಾತ ಸಂಭವಿಸಿದೆ. ಯತಿರಾಜ್ ಬೆಂಗಳೂರಿನತ್ತ ಪ್ರಯಾಣ ಬೆಳೆಸುತ್ತಿರುವಾಗ ಅಪಘಾತ ನಡೆದಿದೆ. ಅಪಘಾತದ ತೀವ್ರತೆಗೆ ಬಿಎಂಡಬ್ಲ್ಯೂ ಕಾರ್ ಮುಂಭಾಗ ಸಂಪೂರ್ಣ ನಜ್ಜುಗುಜ್ಜಾಗಿದೆ. ಏರ್ ಬ್ಯಾಗ್ ಓಪನ್ ಆಗಿದ್ದು ಮತ್ತು ಸ್ಥಳೀಯರ ರಕ್ಷಣೆಯಿಂದ ಯತಿರಾಜ್ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಕಾರ್ ಜಗ್ಗೇಶ್ ಅವರ ಹೆಸರಿನಲ್ಲಿ ನೋಂದಣಿಯಾಗಿದೆ.

  • ರಾಯರ ಕೃಪೆಯಿಂದ ಯತಿರಾಜನಿಗೆ ಸಣ್ಣ ಗಾಯವೂ ಆಗಿಲ್ಲ: ಜಗ್ಗೇಶ್

    ರಾಯರ ಕೃಪೆಯಿಂದ ಯತಿರಾಜನಿಗೆ ಸಣ್ಣ ಗಾಯವೂ ಆಗಿಲ್ಲ: ಜಗ್ಗೇಶ್

    ಬೆಂಗಳೂರು: ಪುತ್ರನ ಕಾರ್ ಅಪಘಾತದ ಕುರಿತು ನಟ ಜಗ್ಗೇಶ್ ಪ್ರತಿಕ್ರಿಯೆ ನೀಡಿದ್ದು, ಗುರು ರಾಯರ ಕೃಪೆಯಿಂದ ಯತಿರಾಜನಿಗೆ ಸಣ್ಣ ಗಾಯವೂ ಆಗಿಲ್ಲ ಎಂದು ಹೇಳಿದ್ದಾರೆ.

    ಕೊರೊನಾ ಬಂದಾಗಿನಿಂದ ಹೊರ ಹೋಗಿಲ್ಲ, ಹೋಗಿಬರುವೆ ಎಂದು ಅಮ್ಮನಿಗೆ ಹೇಳಿ ಯತಿರಾಜ್ ಮನೆಯಿಂದ ಹೋರ ಹೋಗಿದ್ದನು. ಪ್ರತಿಬಾರಿ ಅವನ ಇಷ್ಟದ ಬೆಂಗಳೂರು-ಚಿಕ್ಕಬಳ್ಳಾಪುರಕ್ಕೆ ಹೋಗಿ ಬರುವಾಗ ಅಡ್ಡ ಬಂದ ನಾಯಿ ರಕ್ಷಿಸಲು ಹೋಗಿ ರಸ್ತೆ ವಿಭಜಕ್ಕೆ ಕಾರ್ ಡಿಕ್ಕಿ ಹೊಡೆದು ರಸ್ತೆಗೆ ಬಿದ್ದಿದೆ. ರಾಯರ ದಯೆ ಹಾಗೂ ನಿಮ್ಮ ಶುಭಹಾರೈಕೆ ಯತಿರಾಜನಿಗೆ ಸಣ್ಣ ಗಾಯವೂ ಇಲ್ಲ.

    ರಾಯರು ನನ್ನ ಜೊತೆ ಸದಾ ಇರುತ್ತಾರೆ ಇದ್ದಾರೆ. ಇಂಥ ಘಟನೆಗಳು ಚಮತ್ಕಾರ ನನ್ನ ಬದುಕಲ್ಲಿ ನಡೆಯುವುದೇ ನಾನಿದ್ದೀನೋ, ಇರುತ್ತೀನೋ ನಿನ್ನ ಜೊತೆ ಯಾವಾಗಲು ಎಂದು ರಾಯರು ಅವರ ಪವಾಡ ನಿರೂಪಿಸಲು. ನಿನ್ನೆ ಪೂಜೆಯಲ್ಲಿ ಕುಟುಂಬದ ರಕ್ಷಣೆಗೆ ಪ್ರಾರ್ಥಿಸಿದ್ದೆ. ಸದಾ ಅವರ ಸ್ಮರಣೆಯಲ್ಲೇ ಬದುಕುವ ನನಗೆ ಇದು ಮತ್ತೊಂದು ಪವಾಡ. ನಂಬಿ ಕೆಟ್ಟವರಿಲ್ಲಾ ಗುರುರಾಯರ ಎಂದು ಜಗ್ಗೇಶ್ ಟ್ವೀಟ್ ಮಾಡಿದ್ದಾರೆ.

    ಅಪಘಾತ ಆಗಿದ್ದೇಗೆ?:ಚಿಕ್ಕಬಳ್ಳಾಪುರ ನಗರ ಹೊರವಲಯದ ಬೆಂಗಳೂರು ಹೈದರಾಬಾದ್ ಹೈವೆಯಲ್ಲಿ ಅಗಲಗುರ್ಕಿ ಸೇತುವೆ ಬಳಿ ನಟ ಜಗ್ಗೇಶ್ ಪುತ್ರ ಯತಿರಾಜ್ ಕಾರು ಅಪಘಾತಕ್ಕೀಡಾಗಿದೆ. ಕಾರಿನಲ್ಲಿದ್ದ ಯತಿರಾಜ್ ಅದೃಷ್ಟವಶಾತ್ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಹೈದರಾಬಾದ್ ಕಡೆಯಿಂದ ಬೆಂಗಳೂರು ಕಡೆಗೆ ಬಿಎಂಡಬ್ಬ್ಲೂ ಕಾರಿನಲ್ಲಿ ಬರ್ತಿದ್ದ ವೇಳೆ ಅಗಲಗುರ್ಕಿ ಸೇತುವೆ ಅಂತ್ಯಕ್ಕೆ ಯೂ ಟರ್ನ್ ಇದೆ. ಅಡ್ಡ ಬಂದ ನಾಯಿ/ಬೈಕ್ ತಪ್ಪಿಸಲು ಹೋಗಿ ಕಾರು ರಸ್ತೆ ವಿಭಜಕಕ್ಕೆ ಡಿಕ್ಕಿ ಹೊಡೆದಿದೆ. ರಸ್ತೆ ವಿಭಜಕಕ್ಕೆ ಡಿಕ್ಕಿ ಹೊಡೆದು ಕಾರು ಚಲಿಸುತ್ತಿದ್ದ ವಿರುದ್ಧ ದಿಕ್ಕಿನ ರಸ್ತೆಗೆ ಜಂಪ್ ಮಾಡಿದೆ. ತದನಂತರ ರಸ್ತೆ ಬದಿ 200-300 ಮೀಟರ್ ದೂರ ಕಾರು ರಭಸವಾಗಿ ನುಗ್ಗಿದ್ದು, ಕೊನೆಯಲ್ಲಿ ಮರವೊಂದಕ್ಕೆ ಡಿಕ್ಕಿ ಹೊಡೆದಿದೆ.

    ಅಪಘಾತದ ರಭಸಕ್ಕೆ ಮರದ ಕೊಂಬೆ ಸಹ ಮುರಿದಿದ್ದು, ಮರಕ್ಕೆ ಡಿಕ್ಕಿ ಹೊಡೆದು ಮತ್ತೆ ರಸ್ತೆ ಬದಿಗೆ ಉಲ್ಟಾ ತಿರುಗಿ ನಿಂತಿದೆ. ಪರಿಣಾಮ ಕಾರಿನಲ್ಲಿದ್ದ 4 ಏರ್ ಬ್ಯಾಗ್ ಗಳು ಬಿಚ್ಚಿಕೊಂಡಿವೆ. ಕಾರಿನ ಮುಂಭಾಗ ಸಂಪೂರ್ಣ ಜಖಂಗೊಂಡಿದೆ. ಕಾರಿನಲ್ಲಿದ್ದ ಯತಿರಾಜ್ ಕೆಳಗಿಳಿದಿದ್ದು ಅಷ್ಟರಲ್ಲೇ ಅಲ್ಲೇ ರಸ್ತೆ ಬದಿ ಜಮೀನಿನಲ್ಲಿ ವಿದ್ಯುತ್ ಕಂಬ ಆಳವಡಿಸುತ್ತಿದ್ದ ಕಾರ್ಮಿಕರು ಯತಿರಾಜ್ ರಕ್ಷಣೆಗೆ ಧಾವಿಸಿದ್ದಾರೆ. ತತ್ ಕ್ಷಣ ನೀರು ಕುಡಿಸಿ ಗಾಬರಿಯಾಗಿದ್ದ ಯತಿರಾಜ್ ರನ್ನ ಸಮಾಧಾನ ಮಾಡಿ ಆಟೋ ಮೂಲಕ ಕರೆದುಕೊಂಡು ಆಸ್ಪತ್ರೆಯತ್ತ ಹೋಗಿದ್ದಾರೆ. ಆದ್ರೆ ಆಸ್ಪತ್ರೆಗೆ ಹೋದ್ರಾ ಇಲ್ಲ ಎಂಬುದು ತಿಳಿದುಬಂದಿಲ್ಲ. ವಿಷಯ ತಿಳಿದು ಚಿಕ್ಕಬಳ್ಳಾಪುರ ಸಂಚಾರಿ ಪೊಲೀಸರು ಘಟನಾ ಸ್ಥಳಕ್ಕೆ ಬಂದು ಪರಿಶೀಲನೆ ನಡೆಸಿ ಘಟನಾ ಸ್ಥಳದಲ್ಲಿದ್ದ ಕಾರನ್ನ ಪೊಲೀಸ್ ಠಾಣಾ ಆವರಣಕ್ಕೆ ಶಿಫ್ಟ್ ಮಾಡಿದ್ದಾರೆ.

    ಇನ್ನೂ ಘಟನೆಯಲ್ಲಿ ಯತಿರಾಜ್ ಕಣ್ಣಿನ ಮೇಲ್ಭಾಗ ಹಾಗೂ ಕೈ ಕಾಲಿನ ಬಳಿ ಸಣ್ಣ ಪುಟ್ಟ ಗಾಯಗಳಾಗಿವೆ ಹೊರತು ದೊಡ್ಡ ತರಹದ ಗಾಯಗಳಾಗಿಲ್ಲ ಅಂತ ತಿಳಿಸಿದ್ದು, ಯತಿರಾಜ್ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಗಾಯಗೊಂಡ ಯತಿರಾಜ್ ಆಸ್ಪತ್ರೆಯಲ್ಲಿ ದಾಖಲಾಗಿದ್ದರಾ ಇಲ್ಲವಾ ಎಂಬುದು ತಿಳಿದುಬಂದಿಲ್ಲ.

    ಚಿಕ್ಕಬಳ್ಳಾಪುರ ಎಸ್ಪಿ ಮಿಥುನ್ ಕುಮಾರ್ ಮಾತನಾಡಿ, ಅಪಘಾತದ ಬಗ್ಗೆ ಪ್ರತ್ಯಕ್ಷದರ್ಶಿಗಳ ಮಾಹಿತಿ ಪಡೆದಿದ್ದೇವೆ. ಆದ್ರೆ ಕಾರಿನಲ್ಲಿದ್ದ ಯತಿರಾಜ್ ಎಲ್ಲಿದ್ದಾರೆ ಯಾವ ಆಸ್ಪತ್ರೆಯಲ್ಲಿ ಇದ್ದಾರೆ ಎಂಬುದು ತಿಳಿದುಬಂದಿಲ್ಲ. ಗೊತ್ತಾದ ನಂತರ ವಿಚಾರಣೆ ನಡೆಸಲಿದ್ದೇವೆ. ದೂರು ದಾಖಲಿಸಿಕೊಂಡು ಕಾನೂನು ಕ್ರಮ ಕೈಗೊಳ್ತೇವೆ ಅಂತ ತಿಳಿಸಿದ್ದಾರೆ.