Tag: Yatnal
-

ಯತ್ನಾಳ್ ವಿರುದ್ಧ ಬಿಜೆಪಿ ರಾಜ್ಯಾಧ್ಯಕ್ಷರು ಕ್ರಮ ಕೈಗೊಳ್ಳುತ್ತಾರೆ: ಸವದಿ
ರಾಯಚೂರು: ಸಿಎಂ ಬದಲಾವಣೆ ಹೇಳಿಕೆ ವಿಚಾರ ಹಿನ್ನೆಲೆಯಲ್ಲಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ವಿರುದ್ಧ ಪಕ್ಷದ ಚೌಕಟ್ಟಿನಲ್ಲಿ ಕ್ರಮ ಕೈಗೊಳ್ಳಲಾಗುತ್ತದೆ ಅಂತ ಉಪಮುಖ್ಯಮಂತ್ರಿ ಲಕ್ಷಣ ಸವದಿ ಹೇಳಿದ್ದಾರೆ.
ನಗರದಲ್ಲಿ ಕನ್ನಡ ರಾಜ್ಯೋತ್ಸವ ಧ್ವಜಾರೋಹಣ ಬಳಿಕ ಮಾತನಾಡಿದ ಅವರು, ಬಿಜೆಪಿ ರಾಜ್ಯಾಧ್ಯಕ್ಷರು, ರಾಷ್ಟ್ರಾಧ್ಯಕ್ಷರು ಆ ಬಗ್ಗೆ ಸೂಕ್ತ ಸಂದರ್ಭದಲ್ಲಿ ಕ್ರಮಕೈಗೊಳ್ಳುತ್ತಾರೆ ಎಂದರು.

ಕಳೆದ ವರ್ಷದ ಬೆಳೆ ವಿಮೆಯ ಹಣ ರೈತರಿಗೆ ಸಿಗದೆ ಹೋಗಿದೆ. ಈ ಬಗ್ಗೆಯೂ ಪರಿಶೀಲಿಸಲಾಗುವುದು. ಭತ್ತ, ತೊಗರಿ, ಉದ್ದು ಹಾಗೂ ಉಂಡೆ ಕೊಬ್ಬರಿಗೆ ಬೆಂಬಲ ಬೆಲೆಯಲ್ಲಿ ಖರೀದಿಸಲು ಇಂದಿನಿಂದ ನೊಂದಣಿ ಕಾರ್ಯ ಆರಂಭಿಸಲಾಗುವುದು. ಡಿಸೆಂಬರ್ 1 ರಿಂದ ಖರೀದಿ ಕೇಂದ್ರ ಆರಂಭಿಸಲಾಗುವುದು. ಹತ್ತಿ ಖರೀದಿ ಕೇಂದ್ರ ಆರಂಭಿಸಲು ಕೇಂದ್ರಕ್ಕೆ ಶಿಫಾರಸ್ಸು ಮಾಡಲಾಗುವುದು. ಕೃಷ್ಣಾ ನದಿ ಪ್ರವಾಹಕ್ಕೆ ತುತ್ತಾಗುವ ಭೀತಿಯಲ್ಲಿರುವ ಗುರ್ಜಾಪುರ ಗ್ರಾಮ ಸ್ಥಳಾಂತರಕ್ಕೆ ಸಿದ್ಧತೆ ನಡೆದಿದೆ ಎಂದು ತಿಳಿಸಿದರು.

ಭತ್ತಕ್ಕೆ ಬೆಂಬಲ ಬೆಲೆ ನೀಡುವಂತೆ ರೈತರು ಮನವಿ ಸಲ್ಲಿಸಿದರು. ಇದೇ ವೇಳೆ ಮಳೆ ಪ್ರವಾಹದಿಂದ ಬೆಳೆ ಹಾಳಾಗಿದೆ ಉತ್ತಮ ಬೆಲೆ ಸಿಗದಿದ್ದರೆ ಹೇಗೆ ಅಂತ ಪ್ರಶ್ನಿಸಿದ ರೈತರಿಗೆ ಗದರಿದ ಸಚಿವರು ನೀನು ಒಂದು ಬಾರಿ ಅಧಿಕಾರಕ್ಕೆ ಬಾ ತಿಳಿಯುತ್ತೆ. ನನಗೂ ರೈತರ ಪರಸ್ಥಿತಿ ಅರ್ಥವಾಗುತ್ತೆ ಸರ್ಕಾರ ವೈಜ್ಞಾನಿಕ ಬೆಲೆ ನಿಗದಿ ಮಾಡುತ್ತೆ ಅಂತ ಸವದಿ ತಿಳಿಸಿದರು.
-

ಶಾಸಕ ಬಸನಗೌಡ ಪಾಟೀಲ ಯತ್ನಾಳ್‍ಗೆ ಜೀವ ಬೆದರಿಕೆ!
ವಿಜಯಪುರ: ನನಗೆ ಜೀವ ಬೆದರಿಕೆ ಕರೆ ಬಂದಿದೆ ಎಂದು ಬಿಜೆಪಿಯ ಶಾಸಕ ಬಸನಗೌಡ ಪಾಟೀಲ ಯತ್ನಾಳ್ ಹೇಳಿಕೊಂಡಿದ್ದಾರೆ.
ಈ ಸಂಬಂಧ ಪಬ್ಲಿಕ್ ಟಿವಿ ಜೊತೆ ಮಾತನಾಡಿದ ಅವರು, ಸೆಪ್ಟಂಬರ್ 28 ರಂದು ಮಧ್ಯಾಹ್ನ 2:45 ಸುಮಾರಿಗೆ ಇಂಟರ್‌ನೆಟ್ ಮೂಲಕ ಕರೆ ಮಾಡಿ ಅನಾಮಧೇಯ ವ್ಯಕ್ತಿಯೊಬ್ಬ, ಬಸನಗೌಡ ಪಾಟೀಲ ಯತ್ನಾಳ್ ಅಂದ್ರೆ ನೀನೇನಾ? ಹಿಂದೂಗಳ ಪರವಾಗಿ ತುಂಬಾನೇ ಮಾತನಾಡುತ್ತಿದ್ದಿ, ಹುಷಾರ್, ನಿನ್ನನ್ನು ನೋಡಿಕೊಳ್ಳುತ್ತೇವೆ ಎಂದು ಎಂದು ಹೇಳಿ ಬೆದರಿಕೆ ಹಾಕಿದ್ದ ಎಂದು ತಿಳಿಸಿದರು.
ಫೋನ್ ಕರೆ ಬಂದ ಕೂಡಲೇ ನಾನು ವಿಜಯಪುರ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಪ್ರಕಾಶ ನಿಕ್ಕಂಗೆ ಮೌಕಿಕವಾಗಿ ಮಾಹಿತಿ ನೀಡಿದ್ದೇನೆ. ಇಂಟರ್‌ನೆಟ್ ಕರೆಯನ್ನು ಮಾಡಿದವರನ್ನು ಕಂಡುಹಿಡಿಯಲು ಎಸ್‍ಪಿ ಅವರು ಸಂಬಂಧ ಪಟ್ಟ ಪೊಲೀಸ್ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ ಎಂದು ಹೇಳಿದರು.

ಜೀವ ಬೆದರಿಕೆ ಕರೆಗೆ ಪ್ರತಿಕ್ರಿಯಿಸಿದ ಅವರು ಇಂತಹ ಗೊಡ್ಡು ಬೆದರಿಕೆಗಳಿಗೆ ನಾನು ಹೆದರಲ್ಲ, ಜಗ್ಗಲ್ಲ. ನನ್ನ ಹಿಂದೂ ಪರ ಸಂಘಟನೆಯ ಕಾರ್ಯಕ್ರಮಗಳು ಮುಂದುವರಿಯುತ್ತದೆ. ನನ್ನ ಜವಾಬ್ದಾರಿಯನ್ನ ನಾನು ಮುಂದುವರಿಸಿಕೊಂಡು ಹೋಗುತ್ತೇನೆ ಎಂದು ತಿಳಿಸಿದರು.
ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv
-

ಮತ್ತೆ ಕಾಂಗ್ರೆಸ್, ಜೆಡಿಎಸ್ ಕಮಾಲ್ – ಎಂಬಿಪಿ ಸಹೋದರನಿಗೆ ಗೆಲುವು
ವಿಜಯಪುರ: ಬಿಜೆಪಿಯ ಬಸನಗೌಡ ಪಾಟೀಲ್ ಯತ್ನಾಳ್‍ರಿಂದ ತೆರವಾದ ವಿಜಯಪುರ-ಬಾಗಲಕೋಟೆ ಪರಿಷತ್ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಸುನೀಲಗೌಡ ಪಾಟೀಲ್ ಜಯಗಳಿಸಿದ್ದಾರೆ.
ಮಾಜಿ ಜಲಸಂಪನ್ಮೂಲ ಸಚಿವ ಎಂಬಿ ಪಾಟೀಲ್ ಸಹೋದರ ಸುನೀಲಗೌಡ ಪಾಟೀಲ್ ಅವರಿಗೆ ಜೆಡಿಎಸ್ ಬೆಂಬಲ ನೀಡಿದ್ದರಿಂದ 2,040 ಮತಗಳ ಅಂತರದಿಂದ ಬಿಜೆಪಿ ಅಭ್ಯರ್ಥಿಯನ್ನು ಸೋಲಿಸಿದ್ದಾರೆ.

ಸುನೀಲ ಗೌಡ ಪಾಟೀಲ 4,819 ಮತಗಳನ್ನು ಪಡೆದರೆ ಬಿಜೆಪಿ ಅಭ್ಯರ್ಥಿ ಗೂಳಪ್ಪ ಶೆಟಗಾರ 2,779 ಮತಗಳನ್ನು ಪಡೆದರು. ಉಳಿದ ಐವರು ಪಕ್ಷೇತರ ಅಭ್ಯರ್ಥಿಗಳು ಕೇವಲ 59 ಮತಗಳನ್ನು ಪಡೆದಿದ್ದಾರೆ. 454 ಮತಗಳು ತಿರಸೃತವಾಗಿದ್ದು, ಒಟ್ಟು 8,111 ಮತಗಳು ಚಲಾವಣೆಯಾಗಿವೆ.
ಇದೆ ವೇಳೆ ಮಾತನಾಡಿದ ಸುನೀಲ ಗೌಡ ಗೆಲವು ಸಂತಸ ತಂದಿದೆ. 2019ರ ಲೋಕಸಭಾ ಚುನಾವಣೆಗೆ ಈ ಫಲಿತಾಂಶ ದಿಕ್ಸೂಚಿಯಾಗಲಿದೆ ಎಂದರು.
ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv
