ಖಾತೆ ಸರಿ ಇಲ್ಲ, ಮುಂದೆ ಸರಿ ಹೋಗುತ್ತೋ ಇಲ್ಲವೋ ಎಂದು ಹೇಳಿ ರಾಜೀನಾಮೆ ಪತ್ರವನ್ನು ತೆಗೆದುಕೊಂಡು ಹೋಗಿದ್ದರು. ಆಗ ಯಡಿಯೂರಪ್ಪ ಗದರಿ ಮುಂದೆ ಸರಿ ಹೋಗುತ್ತೆ ಹೋಗು ಎಂದು ಕಳುಹಿಸಿದ್ದರು. ಆಗ ರಾಜೀನಾಮೆ ಪತ್ರ ವಾಪಸ್ ತೆಗೆದುಕೊಂಡು ಹೋಗಿದ್ದ ಆನಂದ್ ಸಿಂಗ್ ಈಗ ಮತ್ತೆ ಯಡಿಯೂರಪ್ಪ ಅಂಗಳಕ್ಕೆ ರಾಜೀನಾಮೆ ಅಸ್ತ್ರವನ್ನು ಪ್ರಯೋಗಿಸಿದ್ದಾರೆ.
ಈಗ ಆನಂದ್ ಸಿಂಗ್ ಒತ್ತಡಕ್ಕೆ ಮಣಿದು ಬಸವರಾಜ ಬೊಮ್ಮಾಯಿ ಹೇಳಿ ಖಾತೆ ಬದಲಾಯಿಸ್ತಾರಾ? ಅಥವಾ ಆನಂದ್ ಸಿಂಗ್ ಅವರನ್ನೇ ಯಡಿಯೂರಪ್ಪ ಮನ ಒಲಿಸುತ್ತಾರಾ ಎಂಬ ಪ್ರಶ್ನೆ ಎದ್ದಿದೆ.
ಕಲಬುರಗಿ: ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಉತ್ತಮ ಆಡಳಿತ ನೀಡುತ್ತಿದ್ದಾರೆ. ಒಂದು ವೇಳೆ ಅವರಿಗೆ ಕೇಂದ್ರ ಅಥವಾ ರಾಜ್ಯದವರು ತೊಂದರೆ ನೀಡಿದರೆ ಎಲ್ಲಾ ಮಠಾಧೀಶರು ರಾಜ್ಯವ್ಯಾಪಿ ಹೋರಾಟ ನಡೆಸುತ್ತೇವೆ ಎಂದು ಪ್ರಗತಿಪರ ಮಠಾಧೀಶರ ವೇದಿಕೆ ರಾಜ್ಯ ಕಾರ್ಯಧ್ಯಕ್ಷ ಶ್ರೀಶೈಲ ಸಾರಂಗ ಮಠದ ಪೀಠಾಧಿಪತಿ ಡಾ.ಸಾರಂಗಧರ ದೇಶಿಕೇಂದ್ರ ಮಹಾಸ್ವಾಮೀಜಿ ಎಚ್ಚರಿಕೆ ನೀಡಿದ್ದಾರೆ.
ಈ ಕುರಿತು ಹೇಳಿಕೆ ನೀಡಿರುವ ಅವರು ಯಡಿಯೂರಪ್ಪ ಅವರು ಕೇವಲ ಲಿಂಗಾಯತ ನಾಯಕರಲ್ಲ, ಎಲ್ಲ ಜಾತಿ ಸಮುದಾಯದ ನಾಯಕರಾಗಿದ್ದಾರೆ. ಅವರು ಬಿಜೆಪಿಯನ್ನು ಬೇರು ಮಟ್ಟದಿಂದ ಬೆಳೆಸಿ ಸಿಎಂ ಆಗಿದ್ದಾರೆ. ಆದರೆ ಅವರನ್ನು ಅಧಿಕಾರದಿಂದ ಇಳಿಸಲು ಕೆಳಗಿಳಿಸಲು ಯೋಚಿಸಿದರೆ ಪ್ರಖರ ಹೋರಾಟ ನಡೆಸಬೇಕಾಗುತ್ತದೆ. ಹಿರಿಯರಾಗಿದ್ದರೂ 18 ವರ್ಷದ ಯುವಕನಂತೆ ಯಡಿಯೂರಪ್ಪ ಕ್ರೀಯಾಶೀಲರಾಗಿ ಕೆಲಸ ಮಾಡುತ್ತಿದ್ದಾರೆ ಎಂದು ಮೆಚ್ಚುಗೆ ಸೂಚಿಸಿದರು. ಇದನ್ನೂ ಓದಿ: ನಾಯಕತ್ವ ಬದಲಾವಣೆಗೆ ದೆಹಲಿಯಲ್ಲಿ ಬೆಲ್ಲದ್ ರಣತಂತ್ರ- ಅರುಣ್ ಸಿಂಗ್ ಮುಂದೆ ಬೆಲ್ಲದ್ ಹೇಳಿದ್ದೇನು?
ಪಕ್ಷದಲ್ಲಿ ಯಡಿಯೂರಪ್ಪ ಪರ ವಿರೋಧ ಚಟುವಟಿಕೆ ನಡೆದಿವೆ.ಅವರು ಎಲ್ಲ ನಾಯಕರನ್ನು ಒಟ್ಟಿಗೆ ತೆಗೆದುಕೊಂಡು ಹೋಗುವ ಮನೋಭಾವ ಹೊಂದಿದ್ದಾರೆ ಎಂದಿದ್ದಾರೆ.
ರಾಜ್ಯದಲ್ಲಿ ಕೊರೊನಾ ಸಮಸ್ಯೆಯನ್ನು ಸಮರ್ಥವಾಗಿ ನಿಭಾಯಿಸಿಕೊಂಡು ಹೋಗುತ್ತಿದ್ದಾರೆ. ಬಾಕಿ ಉಳಿದ ಎರಡು ವರ್ಷ ಅವಧಿ ಪೂರ್ಣಗೊಳಿಸಲು ಬಿಡಬೇಕು. ಒಂದು ವೇಳೆ ಏನಾದರೂ ಅವರನ್ನು ಕೆಳಗಿಳಿಸುವ ಪ್ರಯತ್ನ ನಡೆದರೆ ಪರಿಸ್ಥಿತಿ ನೆಟ್ಟಗಿರಲ್ಲ. ಇಂತಹ ಪರಿಸ್ಥಿತಿಯನ್ನು ಕೇಂದ್ರ ಹಾಗೂ ರಾಜ್ಯ ಸರ್ಕಾರದವರು ತರಬಾರದು ಎಂದು ಸಾರಂಗಧರ ಶ್ರೀಗಳು ಎಚ್ಚರಿಕೆ ನೀಡಿದ್ದಾರೆ.
ಬೆಂಗಳೂರು: ಬಿಜೆಪಿಯಲ್ಲಿ ನಾಯಕತ್ವ ಗೊಂದಲ ವಿಚಾರದ ಬೆನ್ನಲ್ಲೇ ಬೇರೆ ಬೇರೆ ರಾಜಕೀಯ ವಿದ್ಯಮಾನಗಳು ನಡೆಯುತ್ತಿವೆ. ಕಳೆದ ಭಾನುವಾರವಷ್ಟೇ ಹೈಕಮಾಂಡ್ ಹೇಳಿದ್ರೆ ರಾಜೀನಾಮೆ ನೀಡಲು ಸಿದ್ಧ ಎಂದು ಬಿಎಸ್ ವೈ ಸ್ಫೋಟಕ ಹೇಳಿಕೆ ಬೆನ್ನಲ್ಲೇ ರಾಜಕೀಯ ಚಟುವಟಿಕೆ ಗರಿಗೆದರಿವೆ. ಈಗ ರಾಜ್ಯ ಬಿಜೆಪಿ ಉಪಾಧ್ಯಕ್ಷ ವಿಜಯೇಂದ್ರ ಮಠಗಳಿಗೆ ಭೇಟಿ ಕೊಡ್ತಿರುವ ವಿಚಾರಕ್ಕೆ ರೆಕ್ಕೆಪುಕ್ಕ ಹರಡಿಕೊಂಡಿವೆ.
ಮಠಗಳ ಯಾತ್ರೆ ಮುಂದುವರಿಸಿರುವ ಬಿಜೆಪಿ ರಾಜ್ಯ ಉಪಾಧ್ಯಕ್ಷ ವಿಜಯೇಂದ್ರ ಆದಿಚುಂಚನಗಿರಿ ಮಠ, ಸಿದ್ದಗಂಗಾಮಠ, ಮುರುಘಾ ಮಠ, ಸಿರಿಗೆರೆ ಮಠ ಸೇರಿದಂತೆ ಹಲವು ಮಠಗಳಿಗೆ ಭೇಟಿ ಕೊಟ್ಟಿದ್ದಾರೆ. ಅಷ್ಟೇ ಅಲ್ಲದೇ ಸ್ವಾಮೀಜಿಗಳ ಜೊತೆ ಕುಳಿತು ಚರ್ಚಿಸಿ ಭೋಜನ ಸೇವನೆ ಮಾಡಿದ್ದು, ಸಾಮಾಜಿಕ ಜಾಲತಾಣದಲ್ಲಿ ಸಾಕಷ್ಟು ಚರ್ಚೆ ಆಗ್ತಿದೆ. ಇದನ್ನೂ ಓದಿ: ಮಠಾಧೀಶರಿಗೆ ಬಿಜೆಪಿ ಸಚಿವರು ಲ್ಯಾಪ್‍ಟಾಪ್ ತೋರಿಸಿದ್ದಾರೆ: ಡಿಕೆಶಿ
ಈ ನಡುವೆ ಬಿಸ್‍ವೈಗೆ ಶ್ರೀ ರಕ್ಷೆಗೆ ಮಠಾಧೀಶರು ಇದ್ದಾರೆ ಎಂದು ಸಾಮಾಜಿಕ ಜಾಲತಾಣದಲ್ಲಿ ವಿಜಯೇಂದ್ರ, ಬಿಎಸ್ ವೈ ಅಭಿಮಾನಿಗಳಿಂದ ಪೋಸ್ಟರ್ ಹಾಕಿದ್ದಾರೆ. ಮಠಾಧೀಶರು, ಮತದಾರರ ಆಶೀರ್ವಾದಗಳೇ ಬಿಎಸ್ ವೈಗೆ ಶ್ರೀರಕ್ಷೆ ಎಂದು ಸೋಶಿಯಲ್ ಮೀಡಿಯಾದಲ್ಲಿ ಪೋಸ್ಟರ್ ಅಬ್ಬರ ಜೋರಾಗಿಯೇ ಇದೆ.
ಯಡಿಯೂರಪ್ಪನವರನ್ನ ಪದಚ್ಯುತಿಗೊಳಿಸಲು ಹುನ್ನಾರ ನಡೆಸುತ್ತಿರುವವರಿಗೆ ಸದ್ಬುದ್ಧಿ ಕೊಡಲಿ ಎಂದು ವಿರೋಧಿಗಳಿಗೆ ಟಾಂಗ್ ಕೊಟ್ಟಿದ್ದಾರೆ. ಇದರ ಜೊತೆಗೆ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಫೇಸ್ ಬುಕ್ ನಲ್ಲಿ ವಿಜಯೇಂದ್ರ ಮಠಾಧೀಶರ ಭೇಟಿ ಫೋಟೋಗಳನ್ನು ಹಾಕಿ ಏನನ್ನೂ ಹೇಳದೇ ಕುತೂಹಲ ಹುಟ್ಟಿಸಿದ್ದಾರೆ.
ಬೆಂಗಳೂರು: ಲಾಕೌಡೌನ್ ಬಗ್ಗೆ ಇದುವರೆಗೆ ಯಾವುದೇ ತೀರ್ಮಾನ ತಗೊಂಡಿಲ್ಲ. ಇನ್ನು ಎರಡು ಮೂರು ದಿನಗಳಲ್ಲಿ ಲಾಕ್‍ಡೌನ್ ವಿಸ್ತರಣೆ ಬಗ್ಗೆ ಚರ್ಚೆ ನಡೆಸಿ ತೀರ್ಮಾನ ತೆಗೆದುಕೊಳ್ಳಲಾಗುವುದು ಎಂದು ಸಿಎಂ ಯಡಿಯೂರಪ್ಪ ಹೇಳಿದ್ದಾರೆ.
ಕೋವಿಡ್-19ಗೆ ವಿಷಯಕ್ಕೆ ಸಂಬಂಧಿಸಿದಂತೆ – ಜಿಲ್ಲಾಧಿಕಾರಿಗಳು ಹಾಗೂ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳು, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿಗಳು ಹಾಗೂ ಜಿಲ್ಲಾ ಶಸ್ತ್ರ ಚಿಕಿತ್ಸಕರುಗಳೊಂದಿಗೆ ಸಿಎಂ ವಿಡಿಯೋ ಸಂವಾದ ನಡೆಸಿದರು.
ಸಂವಾದ ಬಳಿಕ ಮಾಧ್ಯಮಗಳ ಜೊತೆ ಮಾತನಾಡಿದ ಸಿಎಂ, ಸದ್ಯ 24 ರವರೆಗೆ ಲಾಕ್‍ಡೌನ್ ಘೋಷಣೆಯಾಗಿದೆ. ಎಷ್ಟು ದಿನ ವಿಸ್ತರಣೆ ಮಾಡಬೇಕು ಅಂತ ಚರ್ಚಿಸಿ ನಿರ್ಧಾರ ಮಾಡುತ್ತೇವೆ. ವಿಶೇಷ ಪ್ಯಾಕೇಜ್ ಬಗ್ಗೆಯೂ ಚರ್ಚೆ ನಡೆಸುತ್ತೇವೆ ಎಂದು ತಿಳಿಸಿದರು.
ಸಭೆಯ ಮುಖ್ಯಾಂಶಗಳು
– ಜಿಲ್ಲೆಗಳಲ್ಲಿ ಅದರಲ್ಲೂ ಗ್ರಾಮೀಣ ಪ್ರದೇಶಗಳಲ್ಲಿ ಕೋವಿಡ್ ಪ್ರಕರಣಗಳ ಸಂಖ್ಯೆ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಹಳ್ಳಿಗಳಲ್ಲಿ ಕೋವಿಡ್ ನಿಯಂತ್ರಣಕ್ಕೆ ಆದ್ಯತೆ ನೀಡುವಂತೆ ಜಿಲ್ಲಾಧಿಕಾರಿಗಳಿಗೆ ಸೂಚಿಸಲಾಯಿತು.
– ಮನೆ ಮನೆ ಭೇಟಿ ಹಾಗೂ ಫೋನ್ ಟ್ರಯಾಜಿಂಗ್ ಮೂಲಕ ಸೋಂಕಿತ ವರ್ಗೀಕರಣವನ್ನು ತ್ವರಿತವಾಗಿ ನಡೆಸಬೇಕು ಎಂದು ಸೂಚನೆ ನೀಡಲಾಯಿತು.
– ಕೊರೊನಾ ಪರೀಕ್ಷಾ ವರದಿಗಳನ್ನು 24 ಗಂಟೆಯೊಳಗೆ ನೀಡಲು ಕ್ರಮ ವಹಿಸಬೇಕು. ಗ್ರಾಮೀಣ ಪ್ರದೇಶದಲ್ಲಿ ಹೋಮ್ ಐಸೋಲೇಷನ್ ಪ್ರಕ್ರಿಯೆಯನ್ನು ಕಟ್ಟುನಿಟ್ಟಾಗಿ ಅನುಸರಿಸಬೇಕು ಎಂದು ಸಿಎಂ ಯಡಿಯೂರಪ್ಪ ಜಿಲ್ಲಾಧಿಕಾರಿಗಳಿಗೆ ಸೂಚಿಸಿದ್ದಾರೆ.
– ಹೋಮ್ ಐಸೊಲೇಷನ್‍ನಲ್ಲಿ ಇರುವವರಿಗೆ ಮೆಡಿಕಲ್ ಕಿಟ್ ಒದಗಿಸಲು ಔಷಧಿ ಕೊರತೆಯಾದಲ್ಲಿ ಸ್ಥಳೀಯವಾಗಿ ಖರೀದಿಸಿ, ಒದಗಿಸಲು ಸೂಚನೆ ನೀಡಲಾಯಿತು.
– ಗ್ರಾಮೀಣ ಮತ್ತು ಅರೆ ನಗರ ಪ್ರದೇಶಗಳಲ್ಲಿ ಕೋವಿಡ್ ನಿರ್ವಹಣೆಗೆ ಭಾರತ ಸರ್ಕಾರ ಹೊರಡಿಸಿರುವ ಮಾರ್ಗಸೂಚಿಗಳನ್ನು ಕಟ್ಟುನಿಟ್ಟಾಗಿ ಪಾಲಿಸುವಂತೆ ಸೂಚಿಸಲಾಯಿತು.
– ಹೆಚ್ಚುತ್ತಿರುವ ಸೋಂಕಿತರನ್ನು ರೋಗಲಕ್ಷಣದ ತೀವ್ರತೆಗೆ ಅನುಗುಣವಾಗಿ ಚಿಕಿತ್ಸಾ ವಿಧಾನವನ್ನು ನಿರ್ಧರಿಸುವ ಮೂಲಕ ಸಂಪನ್ಮೂಲಗಳ ಸದ್ಬಳಕೆ ಮಾಡಿಕೊಳ್ಳಬೇಕಾಗಿದೆ. ತುರ್ತು ಚಿಕಿತ್ಸೆ ಅಗತ್ಯವಿರುವವರಿಗೆ ಸಕಾಲದಲ್ಲಿ ಚಿಕಿತ್ಸೆಯನ್ನು ಖಾತರಿ ಪಡಿಸುವಂತೆ ಸೂಚಿಸಲಾಯಿತು.
– ಇದಕ್ಕೆ ಪೂರಕ ವ್ಯವಸ್ಥೆಗಳನ್ನು ನೀವು ಮಾಡಿಕೊಳ್ಳಬೇಕು. ಅಗತ್ಯಕ್ಕೆ ತಕ್ಕಂತೆ ಕೋವಿಡ್ ಕೇರ್ ಸೆಂಟರುಗಳು, ತಾತ್ಕಾಲಿಕ ಆಸ್ಪತ್ರೆಗಳನ್ನು ಸ್ಥಾಪಿಸಲು ಸಹ ಸ್ಥಳ ಗುರುತಿಸಿ, ಅಗತ್ಯ ಸೌಲಭ್ಯ ಒದಗಿಸಲು ಕ್ರಮ ವಹಿಸಬೇಕು ಎಂದು ನಿರ್ದೇಶನ ನೀಡಲಾಯಿತು.
– ಎಲ್ಲ ಜಿಲ್ಲೆಗಳಿಗೆ ಅಗತ್ಯವಿರುವಷ್ಟು ಆಕ್ಸಿಜನ್ ಕಾನ್ಸಂಟ್ರೇಟರ್‍ಗಳನ್ನು ಆರೋಗ್ಯ ಇಲಾಖೆಯಿಂದ ಒದಗಿಸಲಾಗುತ್ತಿದೆ.
– ಆಮ್ಲಜನಕ ಪೂರೈಕೆಯನ್ನು ಮುಂಚಿತವಾಗಿಯೇ ಅಂದಾಜಿಸಿ, ಸಕಾಲದಲ್ಲಿ ಪೂರೈಕೆಯಾಗುವುದನ್ನು ಖಾತರಿ ಪಡಿಸಬೇಕು. ತುರ್ತು ಸಂದರ್ಭಗಳಲ್ಲಿ ನೆರೆಯ ಜಿಲ್ಲೆಗಳೊಂದಿಗೆ ಸಮನ್ವಯ ವಹಿಸಿ, ಹೊಂದಾಣಿಕೆಯಿಂದ ಕಾರ್ಯನಿರ್ವಹಿಸಬೇಕು.
– ಚಿಕಿತ್ಸಾ ಸೌಲಭ್ಯ, ಔಷಧ, ಆಮ್ಲಜನಕ ಮತ್ತಿತರ ಸಂಪನ್ಮೂಲಗಳನ್ನು ವಿವೇಚನೆಯಿಂದ ಬಳಕೆ ಮಾಡಿಕೊಂಡು, ಹೆಚ್ಚು ಜನರಿಗೆ ಅನುಕೂಲ ಕಲ್ಪಿಸಬೇಕು. ಹೋಮ್-ಐಸೋಲೇಷನ್ ನಲ್ಲಿರುವವರ ಬಗ್ಗೆ ಹೆಚ್ಚಿನ ಕಾಳಜಿ ವಹಿಸಿ, ಅವರಿಗೆ ಮೆಡಿಸಿನ್‍ಗಳನ್ನು ಸರಿಯಾದ ರೀತಿಯಲ್ಲಿ ಒದಗಿಸಿಬೇಕು ಹಾಗೂ ಅವರ ಆರೋಗ್ಯ ಸ್ಥಿತಿಗಳ ಕುರಿತು ಪ್ರತಿದಿನ ಮಾಹಿತಿ ಪಡೆದುಕೊಳ್ಳಬೇಕು.
– ಪರಿಸ್ಥಿತಿಯ ತೀವ್ರತೆಗೆ ಅನುಗುಣವಾಗಿ ನಿಬರ್ಂಧಗಳನ್ನು ಇನ್ನಷ್ಟು ಕಠಿಣಗೊಳಿಸುವ ಬಗ್ಗೆ ಜಿಲ್ಲಾ ಉಸ್ತುವಾರಿ ಸಚಿವರೊಂದಿಗೆ ಸಮಾಲೋಚಿಸಿ ಕ್ರಮ ಕೈಗೊಳ್ಳುವಂತೆ ಜಿಲ್ಲಾಧಿಕಾರಿಗಳಿಗೆ ಸೂಚಿಸಲಾಯಿತು.
– ವಿವಿಧ ಜಿಲ್ಲೆಗಳಲ್ಲಿ ಪತ್ತೆಯಾಗುತ್ತಿರುವ ಬ್ಲಾಕ್ ಫಂಗಸ್ ಪ್ರಕರಣಗಳ ಕುರಿತು ಮಾಹಿತಿ ಪಡೆದ ಮುಖ್ಯಮಂತ್ರಿಗಳು, ಪ್ರಸ್ತುತ ಬೌರಿಂಗ್ ಆಸ್ಪತ್ರೆಯಲ್ಲಿ ಇದಕ್ಕೆ ಚಿಕಿತ್ಸಾ ಸೌಲಭ್ಯ ಒದಗಿಸಲಾಗಿದೆ. ಮುಂದಿನ ದಿನಗಳಲ್ಲಿ ಎಲ್ಲ ವಿಭಾಗ ಮಟ್ಟದಲ್ಲಿ ಈ ಸೌಲಭ್ಯ ಕಲ್ಪಿಸಲಾಗುತ್ತಿದೆ ಎಂದು ತಿಳಿಸಿದರು.
– ಚಿಕ್ಕಮಗಳೂರು ಜಿಲ್ಲೆಗೆ ಆದ್ಯತೆಯ ಮೇರೆಗೆ ಪಿಎಸ್‍ಎ ಜನರೇಟರ್ ಒದಗಿಸಲಾಗುವುದು.
– ಉತ್ತರ ಕನ್ನಡ ಜಿಲ್ಲೆಯ ಶಿರಸಿಯಲ್ಲಿ ಪರೀಕ್ಷಾ ಕೇಂದ್ರ ಶೀಘ್ರವೇ ಕಾರ್ಯಾರಂಭ ಮಾಡಲಿದೆ.
– ಭದ್ರಾವತಿಯ ವಿಐಎಸ್‍ಎಲ್ ನಲ್ಲಿ ಆಮ್ಲಜನಕ ಉತ್ಪಾದನೆ ಹಾಗೂ ಬಾಟ್ಲಿಂಗ್ ಸಾಮರ್ಥ್ಯ ಹೆಚ್ಚಿಸಲು ಅಗತ್ಯ ಕ್ರಮ ಕೈಗೊಳ್ಳುವಂತೆ ಶಿವಮೊಗ್ಗ ಜಿಲ್ಲಾಧಿಕಾರಿಗಳಿಗೆ ಸೂಚಿಸಲಾಯಿತು.
– ಗ್ರಾಮೀಣ ಪ್ರದೇಶದಲ್ಲಿ ಹೋಮ್ ಐಸೋಲೇಷನ್ ಗೆ ಸೂಕ್ತ ಸೌಲಭ್ಯ ಇಲ್ಲದ ಕಾರಣ, ಪಿಎಚ್ ಸಿ ಮಟ್ಟದಲ್ಲಿ, ಹೋಬಳಿಗಳಲ್ಲಿ ವಸತಿ ಶಾಲೆ, ಸಮುದಾಯ ಭವನಗಳನ್ನು ಕೋವಿಡ್ ಕೇರ್ ಸೆಂಟರುಗಳನ್ನು ತೆರೆಯ ಬೇಕು.
– ಕೇಂದ್ರ ಮತ್ತು ರಾಜ್ಯ ಸರ್ಕಾರ ಆಕ್ಸಿಜನ್ ಪ್ಲಾಂಟ್ ಮತ್ತು ಜನರೇಟರುಗಳನ್ನು ಅಗತ್ಯವಿರುವ ಕಡೆ ನೀಡಲಾಗುತ್ತಿದೆ.
– ಮೂರು ತಿಂಗಳಿಗಾಗುವಷ್ಟು ಔಷಧಿ ಖರೀದಿಸಲಾಗುತ್ತಿದೆ. ಆದ್ದರಿಂದ ಮೆಡಿಕಲ್ ಕಿಟ್ ಗೆ ಔಷಧಿ ಕೊರತೆಯಾಗದು.
– ಬ್ಲ್ಯಾಕ್ ಫಂಗಸ್ ಹೊಸ ಕಾಯಿಲೆ ಅಲ್ಲ. ಐಸಿಯು, ವೆಂಟಿಲೇಟರುಗಳು, ಹ್ಯುಮಿಡಿಫೈಯರ್ ಬಳಕೆಯಿಂದ ಹೆಚ್ಚಾಗುತ್ತಿದೆ. ಐದು ವಿಭಾಗೀಯ ವೈದ್ಯಕೀಯ ಕಾಲೇಜುಗಳಲ್ಲಿ ಚಿಕಿತ್ಸಾ ವ್ಯವಸ್ಥೆ- ಶಿವಮೊಗ್ಗ, ಕಲಬುರಗಿ, ಮೈಸೂರು, ಹುಬ್ಬಳ್ಳಿ, ಮಂಗಳೂರಿನಲ್ಲಿ ಪ್ರಾರಂಭವಾಗಲಿದೆ.
– ಟ್ರಯಾಜಿಂಗ್ ಎರಡು ಹಂತದಲ್ಲಿ ಆಗಲೇ ಬೇಕು. ಪರೀಕ್ಷಾ ವರದಿ ಬಂದು ಎರಡು ಗಂಟೆಯೊಳಗೆ ಹಾಗೂ ಆಸ್ಪತ್ರೆಗೆ ದಾಖಲಾಗುವ ಸಂದರ್ಭದಲ್ಲಿ ಆಗಲೇ ಬೇಕು ಎಂದು ಸೂಚಿಸಲಾಯಿತು.
– ಎಲ್ಲ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿಗಳು ವಾರಕ್ಕೆ ಎರಡು ಬಾರಿ ಜಿಲ್ಲಾಧಿಕಾರಿಗಳೊಂದಿಗೆ ಕೋವಿಡ್ ನಿರ್ವಹಣೆ ಕುರಿತು ಚರ್ಚಿಸಿ, ಸಮಸ್ಯೆಗಳನ್ನು ಬಗೆಹರಿಸಬೇಕು.
– ಲಸಿಕೆ ನೀಡುವ ಕುರಿತಂತೆ ಚರ್ಚೆ ನಡೆದ ಸಂದರ್ಭದಲ್ಲಿ, ಲಭ್ಯವಿರುವ ಲಸಿಕೆಯನ್ನು 45 ವರ್ಷ ಮೇಲ್ಪಟ್ಟ ಎರಡನೇ ಡೋಸ್ ಗೆ ಅರ್ಹ ವ್ಯಕ್ತಿಗಳಿಗೆ ಆದ್ಯತೆಯ ಮೇರೆಗೆ ನೀಡಬೇಕು. ನಂತರ 45 ವರ್ಷ ಮೇಲ್ಪಟ್ಟ ವ್ಯಕ್ತಿಗಳಿಗೆ ಮೊದಲ ಡೋಸ್ ನೀಡಬೇಕು ಎಂದು ಸೂಚಿಸಲಾಯಿತು.
– ಹಾಸ್ಟೆಲ್, ವಸತಿ ಶಾಲೆಗಳಲ್ಲಿ ಕೋವಿಡ್ ಸೆಂಟರ್ – ಗ್ರಾಮ ಪಂಚಾಯತ್‍ಗಳಲ್ಲಿ ಟಾಸ್ಕ್ ಫೋರ್ಸ್
ಬೆಂಗಳೂರು: ಸಚಿವರ ಒಂದು ವರ್ಷದ ವೇತನ ಹಾಗೂ ಶಾಸಕರ ಒಂದು ತಿಂಗಳ ವೇತನವನ್ನು ಕೋವಿಡ್ ಪರಿಹಾರ ನಿಧಿಗೆ ದೇಣಿಗೆ ನೀಡಲು ಮುಖ್ಯಮಂತ್ರಿಗಳು ಸಲಹೆ ನೀಡಿದ್ದಾರೆ.
ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ಇಂದು ಎಲ್ಲ ಜಿಲ್ಲೆಗಳ ಉಸ್ತುವಾರಿ ಸಚಿವರು, ಜಿಲ್ಲಾಧಿಕಾರಿಗಳು, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳು ಹಾಗೂ ಪೊಲೀಸ್ ವರಿಷ್ಠಾಧಿಕಾರಿಗಳೊಂದಿಗೆ ವಿಡಿಯೋ ಕಾನ್ಫರೆನ್ಸ್ ಮಾಡಿ ಚರ್ಚಿಸಿದರು.
ಉಪಮುಖ್ಯಮಂತ್ರಿಗಳಾದ @GovindKarjol, @drashwathcn, ಸಚಿವರುಗಳಾದ @BSBommai, @RAshokaBJP, @mla_sudhakar, @BABasavaraja, ಮುಖ್ಯಕಾರ್ಯದರ್ಶಿ ಪಿ.ರವಿಕುಮಾರ್, ಮುಖ್ಯಮಂತ್ರಿಗಳ ಅಪರ ಮುಖ್ಯಕಾರ್ಯದರ್ಶಿ ಡಾ|| ಇ.ವಿ.ರಮಣ ರೆಡ್ಡಿ ಹಾಗೂ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು. (2/2)
ಸಭೆಯ ಮುಖ್ಯಾಂಶಗಳು
1. ಕೋವಿಡ್ ಸೋಂಕು ತಡೆಗಟ್ಟುವ ಕ್ರಮಗಳನ್ನು ಆದ್ಯತೆ ಮೇರೆಗೆ ಕೈಗೊಳ್ಳುವಂತೆ ಜಿಲ್ಲಾಧಿಕಾರಿಗಳಿಗೆ ಸೂಚಿಸಲಾಗಿದೆ.
2. ಸರ್ಕಾರದ ಮಾರ್ಗಸೂಚಿಗಳ ಕಟ್ಟುನಿಟ್ಟಿನ ಅನುಷ್ಠಾನ, ಉಲ್ಲಂಘಿಸಿದವರ ವಿರುದ್ಧ ನಿರ್ದಾಕ್ಷಿಣ್ಯ ಕ್ರಮಕ್ಕೆ ಸೂಚಿಸಲಾಗಿದೆ, ಸಾರ್ವಜನಿಕರು ಮಾಸ್ಕ್ ಧಾರಣೆ, ಸಾರ್ವಜನಿಕ ಅಂತರ ಕಾಯ್ದುಕೂಳ್ಳಬೇಕು
3. ಕೆಲವು ಜಿಲ್ಲೆಗಳಲ್ಲಿ ಇನ್ನೂ ಕೋವಿಡ್ ಕೇರ್ ಸೆಂಟರುಗಳನ್ನು ತೆರೆದಿಲ್ಲ, ಅಂತಹ ಜಿಲ್ಲೆಗಳಲ್ಲಿ ಕೋವಿಡ್ ಕೇರ್ ಸೆಂಟರುಗಳನ್ನು ಆದ್ಯತೆಯ ಮೇರೆಗೆ ತೆರೆಯುಬೇಕು. ಎಲ್ಲಾ ಜಿಲ್ಲಾ ಕೇಂದ್ರಗಳಲ್ಲಿ ಹಾಗೂ ತಾಲೂಕು ಕೇಂದ್ರಗಳಲ್ಲಿ ಕೋವಿಡ್ ಕೇರ್ ಸೆಂಟರಗಳನ್ನು ತೆರೆಯಬೇಕು. ಇದಕ್ಕಾಗಿ ವಸತಿ ಶಾಲೆಗಳು, ಹಾಸ್ಟೆಲ್ ಗಳನ್ನು ಬಳಸಿಕೂಳ್ಳಲು ಸೂಚಿಸಿದೆ.
4. ಗ್ರಾಮ ಪಂಚಾಯಿತಿಗಳಲ್ಲಿ ಹಾಗೂ ತಾಲ್ಲೂಕುಗಳಲ್ಲಿ ಟಾಸ್ಕ್ ಫೋರ್ಸ್ ರಚನೆ ಮಾಡಿ ರೋಗಿಗಳಿಗೆ ಹಳ್ಳಿಗಳಲ್ಲಿ ಸರಿಯಾದ ಕಾಳಜಿ ವಹಿಸಲು ನಿರ್ದೇಶನ.
5. ಜಿಲ್ಲಾಧಿಕಾರಿಗಳಿಗೆ ಈಗಾಗಲೇ ಹಣ ಬಿಡುಗಡೆ ಆಗಿದ್ದು, ಮನೆಯಲ್ಲೇ ಇದ್ದು ಚಿಕಿತ್ಸೆ ಪಡೆಯುತ್ತಿರುವವರಿಗೆ ಮೆಡಿಕಲ್ ಕಿಟ್ ಗಳನ್ನು ವಿತರಿಸಲು ಕ್ರಮ ವಹಿಸುವಂತೆ ಹಾಗೂ ಇವರ ಆರೋಗ್ಯ ಮೇಲ್ವಿಚಾರಣೆಗಾಗಿ ತಂಡಗಳನ್ನು ರಚಿಸುವಂತೆ ಸೂಚನೆ.
6. ಪರೀಕ್ಷೆಗಳನ್ನು ಕೇವಲ ರೋಗಲಕ್ಷಣ ಇದ್ದವರಿಗೆ ಸೀಮಿತ ಮಾಡಿ ಮತ್ತು ಪರೀಕ್ಷಾ ಫಲಿತಾಂಶ 24 ಗಂಟೆಗಳಲ್ಲಿ ಕೊಡುವ ವ್ಯವಸ್ಥೆ ಮಾಡಬೇಕು. ಬಾಕಿ ಇರುವ ಪರೀಕ್ಷೆಗಳನ್ನು ಕೂಡಲೇ ಪೂರ್ಣಗೊಳಿಸುವಂತೆ ಸೂಚನೆ.
ಉಪಮುಖ್ಯಮಂತ್ರಿಗಳಾದ @GovindKarjol, @drashwathcn, ಸಚಿವರುಗಳಾದ @BSBommai, @RAshokaBJP, @mla_sudhakar, @BABasavaraja, ಮುಖ್ಯಕಾರ್ಯದರ್ಶಿ ಪಿ.ರವಿಕುಮಾರ್, ಮುಖ್ಯಮಂತ್ರಿಗಳ ಅಪರ ಮುಖ್ಯಕಾರ್ಯದರ್ಶಿ ಡಾ|| ಇ.ವಿ.ರಮಣ ರೆಡ್ಡಿ ಹಾಗೂ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು. (2/2)
7. ಎಲ್ಲಾ ಆಸ್ಪತ್ರೆಗಳಿಗೆ ಆಕ್ಸಿಜನ್ ಪೂರೈಕೆ ಸರಿಯಾದ ಸಮಯದಲ್ಲಿ ತಲುಪುವಂತೆ ಮಾಡಬೇಕು.
8. ಪ್ರತಿ ಆಸ್ಪತ್ರೆಯಲ್ಲಿ ರೆಮಿಡಿಸಿವರ್ ಔಷಧ ಹಾಗೂ ಆಕ್ಸಿಜನ್ ಬಗ್ಗೆ ಆಡಿಟ್ ಆಗಬೇಕು. ಯಾರು ಯಾರಿಗೆ ಅತೀ ಅವಶ್ಯವಿದೆಯೋ ಅವರಿಗೆ ಕೊಡುವ ವ್ಯವಸ್ಥೆ ಮಾಡಬೇಕು.
9. ರೆಮ್‍ಡಿಸಿವರ್ ಮತ್ತು ಆಕ್ಸಿಜನೇಟೆಡ್ ಬೆಡ್ ಗಳ ವಿವೇಚನಾರಹಿತ ಬಳಕೆಯಾಗದಂತೆ ತಡೆಗಟ್ಟಬೇಕು. ಅಗತ್ಯವಿರುವವರಿಗೆ ಮಾತ್ರ ಈ ಇಂಜೆಕ್ಷನ್ ಹಾಗೂ ಆಕ್ಸಿಜನೇಟೆಡ್ ಬೆಡ್ ಗಳನ್ನು ಒದಗಿಸುವ ಮೂಲಕ ಕೃತಕ ಅಭಾವ ಸೃಷ್ಟಿಯಾಗದಂತೆ ಎಚ್ಚರಿಕೆ ವಹಿಸುವಂತೆ ಜಿಲ್ಲಾಧಿಕಾರಿಗಳು ಮತ್ತು ಜಿಲ್ಲಾ ಆರೋಗ್ಯಾಧಿಕಾರಿಗಳಿಗೆ ಸೂಚನೆ.
10. ವೆಂಟಿಲೇಟರ್ ಬೆಡ್ ಗಳನ್ನು ಸಹ ಅತ್ಯಂತ ವಿವೇಚನೆಯಿಂದ ಬಳಸಬೇಕು.
11. ಯಾವುದಾದರೂ ಜಿಲ್ಲೆಯಲ್ಲಿ ಆಕ್ಸಿಜನ್ ಕೊರತೆಯಾದರೆ, ತುರ್ತು ಸಂದರ್ಭದಲ್ಲಿ ನೆರೆಯ ಜಿಲ್ಲೆಯಿಂದ ಪಡೆದುಕೊಳ್ಳುವಂತೆ, ಜಿಲ್ಲಾಧಿಕಾರಿಗಳು ಪರಸ್ಪರ ಸಹಕಾರದಿಂದ ಕಾರ್ಯನಿರ್ವಹಿಸುವಂತೆ ಸೂಚನೆ.
12. ಎಲ್ಲಾ ಇಲಾಖೆಯ ಅಧಿಕಾರಿಗಳನ್ನು ಹಾಗೂ ಇತರೆ ಸಂಪನ್ಮೂಲಗಳನ್ನು ಕೋವಿಡ್ ನಿರ್ವಹಣೆಗಾಗಿ ಬಳಸಿಕೊಳ್ಳುವಂತೆ ಸೂಚಿಸಲಾಯಿತು.
13. ಮೈಸೂರಿನಲ್ಲಿ ಆಕ್ಸಿಜನ್ ಉತ್ಪಾದನಾ ಪ್ಲಾಂಟ್ ನಲ್ಲಿ ಇರುವ ಒಟ್ಟು 5 ಆಕ್ಸಿಜನ್ ಜನರೇಟಿಂಗ್ ಘಟಕಗಳ ಪೈಕಿ ಎರಡು ಮಾತ್ರ ಕಾರ್ಯನಿರ್ವಹಿಸುತ್ತಿದ್ದು, ಉಳಿದ ಮೂರು ಘಟಕಗಳ ದುರಸ್ತಿಗೆ ಕ್ರಮ ವಹಿಸುವಂತೆ ಜಿಲ್ಲಾಧಿಕಾರಿಗೆ ಸೂಚಿಸಲಾಯಿತು.
14. ಕೃಷಿ ಚಟುವಟಿಕೆಗಳು, ಸರ್ಕಾರ ಅನುಮತಿಸಿರುವ ಕೈಗಾರಿಕೆ ಮತ್ತಿತರ ಚಟುವಟಿಕೆಗಳು ಸೂಕ್ತ ಮುನ್ನೆಚ್ಚರಿಕೆಯೊಂದಿಗೆ ಅಬಾಧಿತವಾಗಿ ನಡೆಯುವಂತೆ ಕ್ರಮ ಕೈಗೊಳ್ಳುವಂತೆ ಮುಖ್ಯಮಂತ್ರಿ ನಿರ್ದೇಶನ.
15. ಸಚಿವರ ಒಂದು ವರ್ಷದ ವೇತನ ಹಾಗೂ ಶಾಸಕರ ಒಂದು ತಿಂಗಳ ವೇತನವನ್ನು ಕೋವಿಡ್ ಪರಿಹಾರ ನಿಧಿಗೆ ದೇಣಿಗೆ ನೀಡಲು ಮುಖ್ಯಮಂತ್ರಿಗಳು ಸಲಹೆ ನೀಡಿದರು.
– ಬಿಎಸ್‍ವೈಯನ್ನು ಭೇಟಿಯಾದ 7 ಶಾಸಕರು – ಸರ್ಕಾರದ ವಿರುದ್ಧ ಹೇಳಿಕೆ ನೀಡುವುದು ಎಷ್ಟು ಸರಿ?
ಬೆಂಗಳೂರು: ಪ್ರಧಾನಿ ನರೇಂದ್ರ ಮೋದಿ ಮತ್ತು ರಾಜ್ಯಪಾಲ ವಿ.ಆರ್.ವಾಲಾ ಅವರಿಗೆ ಪತ್ರ ಬರೆದ ಬೆನ್ನಲ್ಲೇ ಸಚಿವ ಈಶ್ವರಪ್ಪ ರಾಜೀನಾಮೆಗೆ ಬಿಎಸ್‍ವೈ ಆಪ್ತ ಶಾಸಕರು ಆಗ್ರಹಿಸಿದ್ದಾರೆ.
ಬಿಎಸ್ ಯಡಿಯೂರಪ್ಪ ಮತ್ತು ಈಶ್ವರಪ್ಪ ಅವರ ಮಧ್ಯೆ ನಡೆಯುತ್ತಿದ್ದ ಶೀತಲ ಸಮರ ಈಗ ಸ್ಫೋಟಗೊಂಡಿದೆ. ಗ್ರಾಮೀಣಾಭಿವೃದ್ಧಿ ಸಚಿವರಾಗಿರುವ ಈಶ್ವರಪ್ಪ ಬರೆದಿರುವ ಪತ್ರ ಬೆಳಕಿಗೆ ಬಂದ ಬೆನ್ನಲ್ಲೇ ಇಲ್ಲಿಯವರೆಗೆ ತೆರೆ ಹಿಂದೆ ನಡೆಯುತ್ತಿದ್ದ ಕಿತ್ತಾಟ ಈಗ ಬಹಿರಂಗವಾಗಿದೆ.
ಸಿಎಂ ಆಪ್ತ ಶಾಸಕರಾದ ರೇಣುಕಾಚಾರ್ಯ, ಮಾಡಾಳ್ ವಿರೂಪಾಕ್ಷಪ್ಪ, ಅರುಣ್ ಕುಮಾರ್ ಪೂಜಾರ್, ಮಹದೇವಪ್ಪ ಯಾದವಾಡ, ಮಹೇಶ್ ಕುಮಟಹಳ್ಳಿ, ಪರಣ್ಣ ಮುನವಳ್ಳಿ, ದಿನಕರ್ ಶೆಟ್ಟಿ ಇಂದು ಬೆಳಗ್ಗೆ ಗೃಹ ಕಚೇರಿ ಕೃಷ್ಣಾದಲ್ಲಿ ಸಿಎಂ ಯಡಿಯೂರಪ್ಪನವರನ್ನು ಭೇಟಿ ಮಾಡಿ ಮಾತುಕತೆ ನಡೆದಿದ್ದಾರೆ. ಈ ವೇಳೆ ಬಿಜೆಪಿ ಸರ್ಕಾರದಲ್ಲಿ ಮಂತ್ರಿಯಾಗಿ ತಮ್ಮದೇ ಸರ್ಕಾರವನ್ನು ಪ್ರಶ್ನಿಸುವುದು ಎಷ್ಟು ಸರಿ ಎಂದು ಕೇಳಿದ್ದಾರೆ. ಅಷ್ಟೇ ಅಲ್ಲದೇ ಕೂಡಲೇ ಅವರ ರಾಜೀನಾಮೆಯನ್ನು ಪಡೆಯಬೇಕು ಎಂದು ಸಿಎಂಗೆ ಒತ್ತಾಯಿಸಿದ್ದಾರೆ.
ಸಭೆಯಲ್ಲಿ ಸಹಿ ಸಂಗ್ರಹ: ಕೆಲ ದಿನಗಳ ಹಿಂದೆ ಸಿಎಂ ಸಹಿ ಹಾಕಿದ್ರೂ ಈಶ್ವರಪ್ಪ ಅನುದಾನ ಬಿಡುಗಡೆ ಮಾಡುತ್ತಿಲ್ಲ ಎಂದು ರೇಣುಕಾಚಾರ್ಯ ದೂರು ನೀಡಿದ್ದರು. ರೇಣುಕಾಚಾರ್ಯ ನೇತೃತ್ವದ ದೂರಿನ ಮೇರೆಗೆ ಯಡಿಯೂರಪ್ಪ ಮಾರ್ಚ್ 18 ರಂದು ಸಭೆ ಕರೆದಿದ್ದರು. ಈ ಸಭೆಯ ಬಳಿಕ ಒಟ್ಟು 48 ಜನರ ಸಹಿ ಸಂಗ್ರಹವಾಗಿದ್ದು, ಇದೇ ಸಹಿ ಸಂಗ್ರಹವನ್ನು ಹೈಕಮಾಂಡ್‍ಗೆ ಕಳುಹಿಸಲು ಯಡಿಯೂರಪ್ಪ ಬಣ ಮುಂದಾಗಿತ್ತು. ಈ ಸಭೆಯ ಬಳಿಕ ಇಬ್ಬರ ನಡುವೆ ನಡೆಯುತ್ತಿದ್ದ ಶೀತಲ ಸಮರ ಜೋರಾಗಿ ಈಗ ಸ್ಫೋಟಗೊಂಡಿದೆ.
ಸಿಎಂ ಭೇಟಿಯಾದ ಬಳಿಕ ಮಾಧ್ಯಮಗಳ ಜೊತೆ ಮಾತನಾಡಿದ ರೇಣುಕಾಚಾರ್ಯ, ಗ್ರಾಮೀಣಾಭಿವೃದ್ಧಿ ಸಚಿವರು ಹಿರಿಯರಾಗಿರುವ ಈಶ್ವರಪ್ಪ ಅರ್ಥ ಮಾಡಿಕೊಳ್ಳಬೇಕು. ರಾಜ್ಯಪಾಲರಿಗೆ ದೂರು ಕೊಡುವುದು ಎಷ್ಟರಮಟ್ಟಿಗೆ ಸರಿ? ಸರ್ಕಾರದ ವಿರುದ್ಧ ಹೇಳಿಕೆಗಳನ್ನ ಕೊಡುವುದು ಸರಿ ಅಲ್ಲ ಎಂದು ಹೇಳಿದರು.
ಜೆಪಿ ನಡ್ಡಾ, ಅಮಿತ್ ಶಾ, ಪ್ರಧಾನಮಂತ್ರಿ ನರೇಂದ್ರ ಮೋದಿ ಅವರನ್ನು ಭೇಟಿಯಾಗಿ ದಾಖಲೆಯನ್ನು ಬಿಡುಗಡೆ ಮಾಡುತ್ತೇವೆ. ಗ್ರಾಮೀಣಾಭಿವೃದ್ಧಿ ಇಲಾಖೆಯಲ್ಲಿ ಬೇಕಾಬಿಟ್ಟಿ ಈ ಹಿಂದೆ ಬಿಡುಗಡೆ ಮಾಡಿದ್ದು ಇದನ್ನು ಪ್ರಶ್ನೆ ಮಾಡುತ್ತೇವೆ. ಮರಿಸ್ವಾಮಿ ಮನೆಗೆ ಹಣ ಬಿಡುಗಡೆ ಮಾಡಿಲ್ಲ. ಬೆಂಗಳೂರು ಜಿಲ್ಲಾ ಪಂಚಾಯತ್‍ಗೆ ಹಣ ಬಿಡುಗಡೆ ಮಾಡಲಾಗಿದೆ ಎಂದು ಈಶ್ವರಪ್ಪ ಆರೋಪಕ್ಕೆ ತಿರುಗೇಟು ನೀಡಿ ಸಿಎಂ ನಿರ್ಧಾರವನ್ನು ಸಮರ್ಥಿಸಿಕೊಂಡರು.
ಯಾರಿಗೆಲ್ಲ ದೂರು?
ಲಿಖಿತ ರೂಪದಲ್ಲಿ ಪ್ರಧಾನಿ ನರೇಂದ್ರ ಮೋದಿ, ಕೇಂದ್ರ ಗೃಹ ಸಚಿವ ಅಮಿತ್ ಶಾ, ಬಿಜೆಪಿ ರಾಷ್ಟ್ರೀಯಾಧ್ಯಕ್ಷ ಜೆ.ಪಿ.ನಡ್ಡಾ, ರಾಜ್ಯ ಬಿಜೆಪಿ ಉಸ್ತುವಾರಿ ಅರುಣ್‍ಸಿಂಗ್, ರಾಜ್ಯಾಧ್ಯಕ್ಷ ನಳಿನ್‍ಕುಮಾರ್ ಕಟೀಲ್ ಹಾಗೂ ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ.ರವಿಗೆ ಈಶ್ವರಪ್ಪ 2 ಪುಟಗಳ ಪತ್ರ ಬರೆದಿದ್ದಾರೆ. ಜೊತೆಗೆ ಬುಧವಾರ ಮಧ್ಯಾಹ್ನ ರಾಜ್ಯಪಾಲರನ್ನೂ ಭೇಟಿಯಾಗಿ ಈಶ್ವರಪ್ಪ ದೂರು ಕೊಟ್ಟಿದ್ದಾರೆ.
ಆರ್ಥಿಕ ಇಲಾಖೆ ಮುಖ್ಯಮಂತ್ರಿಗಳ ಬಳಿಯೇ ಇದೆ. ಆದರೆ ಗ್ರಾಮೀಣಾಭಿವೃದ್ಧಿ ಇಲಾಖೆಯ ಮಹತ್ವದ ಯೋಜನೆಗಳಿಗೆ ಒಪ್ಪಿಗೆ ನೀಡುತ್ತಿಲ್ಲ. ಬದಲಿಗೆ ನಮ್ಮ ಗಮನಕ್ಕೆ ತರದೇ ಬೇರೆ ಶಾಸಕರಿಗೆ ಅನುದಾನ ರಿಲೀಸ್ ಮಾಡಿದ್ದಾರೆ ಎಂದು ದೂರಿದ್ದಾರೆ.
ಆರೋಪಗಳು ಏನು? 1. ಗ್ರಾಮೀಣ ಸುಮಾರ್ಗ ಯೋಜನೆಗೆ ಆಡಳಿತಾತ್ಮಕ ಅನುಮೋದನೆ ಕೊಟ್ಟಿಲ್ಲ. 2. 32 ಬಿಜೆಪಿ ಶಾಸಕರಿಗೆ ತಲಾ 20ರಿಂದ 23 ಕೋಟಿ, 42 ಬಿಜೆಪಿ ಶಾಸಕರಿಗೆ ತಲಾ 10 ಕೋಟಿ ರೂ. ಬಿಡುಗಡೆಗೆ ಸೂಚನೆ. 3. ಕಾಂಗ್ರೆಸ್‍ನ 30 ಶಾಸಕರಿಗೆ 5 ಕೋಟಿ ರೂ. ಜೆಡಿಎಸ್‍ನ 18 ಶಾಸಕರಿಗೆ ತಲಾ 5 ಕೋಟಿ ರೂ. ಬಿಡುಗಡೆಗೆ ಆದೇಶ. 4: ಬಿಎಸ್‍ವೈ ಬೀಗರೂ ಆಗಿರುವ ಬೆಂಗಳೂರು ನಗರ ಜಿ.ಪಂ ಅಧ್ಯಕ್ಷ ಮರಿಸ್ವಾಮಿ ಪ್ರತಿನಿಧಿಸುವ ದಾಸರಹಳ್ಳಿ ಜಿ.ಪಂ.ಗೆ 65 ಕೋಟಿ ರೂ. ಅನುದಾನ. 5. ಜಿ.ಪಂ.ಗಳಿಗೆ 2019-20ರಲ್ಲಿ 1 ಅಥವಾ 2 ಕೋಟಿ ಅನುದಾನ ಬಿಡುಗಡೆಗೆಯಾಗಿತ್ತು. ಆದರೆ ಈಗ ದಾಸರಹಳ್ಳಿ ಜಿ.ಪಂ.ಗೆ ಇಷ್ಟೊಂದು ದೊಡ್ಡ ಅನುದಾನ ಬಿಡುಗಡೆಯಾಗಿದೆ. 6. ತಮ್ಮ ಇಲಾಖೆಗೆ ನೀಡಿದ ಅನುದಾನದಲ್ಲಿ, ತಮ್ಮ ಗಮನಕ್ಕೆ ಬಾರದೇ ಅನುದಾನ ಹಂಚಿಕೆ.
ಗ್ರಾಮೀಣಾಭಿವೃದ್ಧಿ ಇಲಾಖೆಯಲ್ಲಿ ನಮ್ಮ ಕ್ಷೇತ್ರದ ಕೆಲಸಗಳು ಆಗುತ್ತಿಲ್ಲ. ಸಚಿವ ಈಶ್ವರಪ್ಪ ಅವರು ಅನುದಾನಗಳನ್ನು ಬಿಡುಗಡೆ ಮಾಡದೇ ಎಲ್ಲದಕ್ಕೂ ಕೊಕ್ಕೆ ಹಾಕ್ತಿದ್ದಾರೆ ಎಂದು ಬಜೆಟ್ ಅಧಿವೇಶನದ ಹೊತ್ತಲ್ಲಿ ಸುಮಾರು 40ಕ್ಕೂ ಹೆಚ್ಚು ಶಾಸಕರು ಮುಖ್ಯಮಂತ್ರಿ ಯಡಿಯೂರಪ್ಪಗೆ ದೂರಿದ್ದರು. ಶಾಸಕರ ದೂರು ಆಲಿಸಿದ್ದ ಸಿಎಂ ಬಿಎಸ್‍ವೈ, ಎರಡು ದಿನಗಳ ಬಳಿಕ ವಿಧಾನಸೌಧದಲ್ಲಿ ಸಚಿವರು, ಇಲಾಖೆಯ ಅಧಿಕಾರಿಗಳ ಸಭೆ ನಡೆಸಿದ್ದರು.
– ಮೀಸಲಾತಿ ವಿಚಾರದಲ್ಲಿ `ಕೈ’ಚೆಲ್ಲಿದ್ರಾ ಸಿಎಂ? – ಭರವಸೆ ನೀಡಿ ಪೇಚಿಗೆ ಸಿಲುಕಿದ ಬಿಎಸ್‌ವೈ
ಬೆಂಗಳೂರು: ಚುನಾವಣೆ ಸೇರಿ ಕೆಲವು ಸಂದರ್ಭಗಳಲ್ಲಿ ಸಮುದಾಯಗಳನ್ನು ಓಲೈಸಿಕೊಳ್ಳಲು, ಬೀಸುವ ದೊಣ್ಣೆಯಿಂದ ತಪ್ಪಿಸಿಕೊಳ್ಳಲು ತಮ್ಮ ಕೈಲಿ ಈಡೇರಿಸಲು ಆಗದೇ ಇರುವ ಬೇಡಿಕೆಗಳನ್ನು ಈಡೇರಿಸುವುದಾಗಿ ಹೇಳಿದ ನಾಯಕರು ನಂತರ ಪೇಚಿಗೆ ಸಿಲುಕಿದ್ದರು. ಇದೀಗ ಅಂಥಾದ್ದೇ ಪರಿಸ್ಥಿತಿ ಯಡಿಯೂರಪ್ಪಗೆ ಎದುರಾಗಿದೆ.
ವಿಧಾನಮಂಡಲ ಅಧಿವೇಶದ ಕೊನೆಯ ದಿನವಾದ ಇಂದು, ಪಂಚಮಸಾಲಿ, ಹಾಲುಮತ ಸಮುದಾಯಗಳ 2-ಎ ಮೀಸಲಾತಿ ವಿಚಾರವಾಗಿ ಸರ್ಕಾರದ ನಿಲುವನ್ನು ಸ್ಪಷ್ಟಪಡಿಸಬೇಕು ಎಂದು ಬಸನ ಗೌಡ ಪಾಟೀಲ್ ಯತ್ನಾಳ್ ಆಗ್ರಹಿಸಿದರು.
ಈ ಆಗ್ರಹಕ್ಕೆ ತಾಳ್ಮೆ ಕಳೆದುಕೊಂಡಂತೆ ಕಂಡು ಬಂದ ಸಿಎಂ ಯಡಿಯೂರಪ್ಪ, ನಮ್ಮದು ರಾಷ್ಟ್ರೀಯ ಪಕ್ಷ. ಪ್ರಾದೇಶಿಕ ಪಕ್ಷ ಅಲ್ಲ. ಮೋದಿ, ಹೈಕಮಾಂಡ್ ಸಲಹೆ ಪಡೆದು ತೀರ್ಮಾನ ಮಾಡಬೇಕು ಎಂದು ಹೇಳಿದರು.
ಈ ವಿಚಾರದಲ್ಲಿ ಸದ್ಯಕ್ಕೆ ನಾನೇನು ಮಾಡುವ ಸ್ಥಿತಿಯಲ್ಲಿ ಇಲ್ಲ. ಈ ಸಮಸ್ಯೆ ಬಗೆಹರಿಸುವ ಶಕ್ತಿ ಸಾಮರ್ಥ್ಯ ನನಗಿಲ್ಲ ಎಂದು ಕೈ ಎತ್ತಿಬಿಟ್ಟರು. ಅಲ್ಲದೇ, ದೆಹಲಿಯಲ್ಲಿ 25 ಸಂಸದರಿದ್ದಾರೆ. ಯಾರನ್ನೂ ಬೇಕಿದ್ರೂ ಕರೆದುಕೊಂಡು ಹೈಕಮಾಂಡ್ ಭೇಟಿಯಾಗಿ ಅಂತಾ ಯತ್ನಾಳ್‍ಗೆ ಉಚಿತ ಸಲಹೆ ಕೊಟ್ಟರು.
ಇದಕ್ಕೆ ಪ್ರತಿಕ್ರಿಯೆ ನೀಡಿದ ಬಂಡೆಪ್ಪ ಕಾಶೆಂಪುರ, ನೀವು ಮೊದಲು ಇಲ್ಲಿ ಶಿಫಾರಸು ಮಾಡಿ. ಅಲ್ಲಿನ ನಿರ್ಧಾರದ ಬಗ್ಗೆ ಆಮೇಲೆ ನೋಡೋಣ ಎಂದರು. ಇದಕ್ಕೆ ಉತ್ತರ ನೀಡುವ ಸಾಹಸವನ್ನು ಸಿಎಂ ಯಡಿಯೂರಪ್ಪ ಮಾಡಲಿಲ್ಲ.
ಪಂಚಮಸಾಲಿ ಸಮುದಾಯಕ್ಕೆ ಕೊಟ್ಟ ಭರವಸೆ ಈಡೇರಿಸಲಾಗದೇ ಈಗ ಸಿಎಂ ಯಡಿಯೂರಪ್ಪ ಕೈ ಎತ್ತಿಬಿಟ್ಟಿದ್ದಾರೆ. ಹೈಕಮಾಂಡ್ ಅಂಗಳಕ್ಕೆ ಚೆಂಡು ನೂಕಿ ಸುಮ್ಮನಾಗಿದ್ದಾರೆ. ಇದರಿಂದಾಗಿ ಬಿಜೆಪಿ ಸರ್ಕಾರ ಪೇಚಿಗೆ ಸಿಲುಕಿದೆ.
2ಎ ಮೀಸಲಾತಿ ಕಲ್ಪಿಸುವಂತೆ ಆಗ್ರಹಿಸಿ ಪಂಚಮಸಾಲಿ ಲಿಂಗಾಯತ ಸಮುದಾಯ ನಡೆಸಿರುವ ಪಾದಯಾತ್ರೆ 23ನೇ ದಿನ ಪೂರೈಸಿದೆ. ಈ ಪಾದಯಾತ್ರೆ ನಿಲ್ಲಿಸಲು ನಾನಾ ವಿಧದಲ್ಲಿ ಶತ ಪ್ರಯತ್ನ ಮಾಡಿದ್ದ ಯಡಿಯೂರಪ್ಪ, ನಿನ್ನೆ ಇಬ್ಬರು ಸಚಿವರನ್ನು ಪಾದಯಾತ್ರೆಯ ಮುಂದಾಳತ್ವ ವಹಿಸಿದ್ದ ಸ್ವಾಮೀಜಿಗಳ ಬಳಿಗೆ ಕಳುಹಿಸಿದ್ದರು.
ಶೀಘ್ರವೇ ಕುಲಶಾಸ್ತ್ರೀಯ ಅಧ್ಯಯನಕ್ಕೆ ಆದೇಶ ಹೊರಡಿಸುವುದಾಗಿ ಸಚಿವರ ಮೂಲಕ ಹೇಳಿ ಕಳುಹಿಸಿದ್ದರು. ಆದರೆ ಇದಕ್ಕೊಪ್ಪದ ಸ್ವಾಮೀಜಿಗಳು, ಮೊದಲು ಆದೇಶ ಹೊರಡಿಸಿ, ಆಮೇಲೆ ಪಾದಯಾತ್ರೆ ನಿಲ್ಲಿಸುತ್ತೇವೆ ಎಂದು ಕಡ್ಡಿ ತುಂಡಾದಂತೆ ಸ್ಪಷ್ಟಪಡಿಸಿದರು. ಇದರಿದಾಂಗಿ ಬಂದ ದಾರಿಗೆ ಸುಂಕವಿಲ್ಲ ಎಂಬಂತೆ ಇಬ್ಬರು ಸಚಿವರುವಾಪಸ್ಸಾಗಿದ್ದರು.
ತುಮಕೂರು: ಶಿರಾ ಉಪಚುನಾವಣೆ ವೇಳೆ ರಾಜ್ಯ ಬಿಜೆಪಿ ಸರ್ಕಾರ ಜನತೆಗೆ ಕೊಟ್ಟ ಮಾತನ್ನು ಉಳಿಸಿಕೊಂಡಿದೆ. ಆರು ತಿಂಗಳಲ್ಲಿ ಹೇಮಾವತಿ ನೀರನ್ನು ಮದಲೂರು ಕೆರೆಗೆ ಬಿಡುತ್ತೇವೆ ಎಂದು ಶಿರಾ ಉಪಚುನಾವಣೆ ವೇಳೆ ಸಿಎಂ ವಾಗ್ದಾನ ಮಾಡಿದ್ದರು. ಆದರಂತೆ ಸೋಮವಾರದಿಂದ ಕಳ್ಳಂಬೆಳ್ಳ ಕೆರೆಯಿಂದ ಹೇಮಾವತಿ ನೀರನ್ನು ಮದಲೂರು ಕೆರೆಗೆ ಬಿಡಲಾಗಿದ್ದು 40 ವರ್ಷದ ಕನಸು ನನಸಾಗಿದೆ.
ಉಪಚುನಾವಣೆ ವೇಳೆ ಮದಲೂರು ಕೆರೆಗೆ ನೀರು ಹರಿಸುವ ವಿಚಾರ ಸಾಕಷ್ಟು ಸದ್ದು ಮಾಡಿತ್ತು. ಒಂದು ಪಕ್ಷದವರು ಮದಲೂರು ಕೆರೆಗೆ ನಾಲೆ ಮಾಡಿದ್ದು ನಾವು ಎಂದರೆ ಇದನ್ನು ಯೋಜನೆ ಜಾರಿ ಮಾಡಿದ್ದು ನಾವು ಎಂದು ಇನ್ನೊಂದು ಪಕ್ಷದವರು ಪರಸ್ಪರ ವಾಗ್ದಾಳಿ ಮಾಡಿದ್ದರು. ಈ ನಡುವೆ ಸಿಎಂ ಯಡಿಯೂರಪ್ಪ ಅಕ್ಟೋಬರ್ 30 ರಂದು ಮದಲೂರು ನಲ್ಲಿ ಸಮಾವೇಶ ನಡೆಸಿ ಆರು ತಿಂಗಳ ಒಳಗಡೆ ಕೆರೆಗೆ ನೀರು ಬಿಡುತ್ತೇವೆ ಎಂದು ಘೋಷಣೆ ಮಾಡಿದ್ದರು.
ಉಪ ಚುನಾವಣೆ ಮುಗಿದ ಬಳಿಕ ಶಾಸಕ ರಾಜೇಶ್ ಗೌಡ ಮದಲೂರಿಗೆ ಅಧಿಕಾರಿಗಳನ್ನು ಕರೆದುಕೊಂಡು ಹೋಗಿ ಪರಿಶೀಲನೆ ನಡೆಸಿದ್ದರು. 40ಕ್ಕೂ ಹೆಚ್ಚು ಜೆಸಿಬಿ ಮೂಲಕ ಕೆರೆಯಲ್ಲಿದ್ದ ಸೀಮೆಜಾಲಿಯನ್ನು ತೆರವು ಮಾಡಲಾಗಿತ್ತು. ಈಗ ಕಳ್ಳಂಬೆಳ್ಳ ಕೆರೆಯಿಂದ ಮದಲೂರು ಕೆರೆಗೆ ಹೇಮಾವತಿ ನೀರನ್ನು ನಾಲೆ ಮೂಲಕ 200 ಕ್ಯೂಸೆಕ್ ನೀರು ಹರಿಸಲಾಗಿದೆ. ಮುಂದಿನ 24 ಗಂಟೆಯಲ್ಲಿ ಅಂದರೆ ಇಂದು ನೀರು ಮದಲೂರು ಕೆರೆಗೆ ತಲುಪಲಿದೆ. ಕೊಟ್ಟ ಮಾತನ್ನು 30 ದಿನದಲ್ಲೇ ಈಡೇರಿಸುವ ಮೂಲಕ ಸರ್ಕಾರ ವಿಪಕ್ಷಗಳಿಗೆ ತಿರುಗೇಟು ನೀಡಿದೆ.
ಮದಲೂರು ಕೆರೆಗೆ ನೀರು ಬಿಡಬೇಕೆಂದು ಈ ಭಾಗದ ಜನರು ಬೇಡಿಕೆ ಇಟ್ಟಿದ್ದರು. ಈ ಸಂಬಂಧ ಭಾರೀ ಹೋರಾಟಗಳು ನಡೆದಿತ್ತು. ಈ ಬಗ್ಗೆ ಶಿರಾ ಶಾಸಕ ಡಾ.ರಾಜೇಶ್ ಗೌಡ ಪ್ರತಿಕ್ರಿಯೆ ನೀಡಿದ್ದು, ಕಳ್ಳಂಬೆಳ್ಳ ಕೆರೆಯಲ್ಲಿ ಸಾಕಷ್ಟು ನೀರು ಸಂಗ್ರಹಣೆಯಾಗಿದೆ. ಹೀಗಾಗಿ ಉಪಚುನಾವಣೆ ವೇಳೆ ಮದಲೂರು ಕೆರೆಗೆ ಕೊಟ್ಟ ಮಾತಿನಂತೆ ನೀರು ಹರಿಸಿದ್ದು ಇನ್ನೂ ಒಂದೂವರೆ ತಿಂಗಳ ಕಾಲ ನೀರು ಹರಿಯಲಿದೆ. ಇದಕ್ಕೆ ಸಹಕರಿಸಿದ ಸಿಎಂ ಯಡಿಯೂರಪ್ಪ, ಪಕ್ಷದ ರಾಜ್ಯಾಧ್ಯಕ್ಷ ನಳೀನ್ ಕುಮಾರ್ ಕಟೀಲ್, ಸ್ಥಳೀಯ ನಾಯಕರಿಗೆ ಹಾಗೂ ಹೋರಾಟಗಾರಿಗೆ ಕೃತಜ್ಞತೆ ತಿಳಿಸಿದ್ದಾರೆ.
ಬಿಜೆಪಿ ವಿರೋಧಿಸಿತ್ತು: ಈ ಪ್ರಯತ್ನ ಈ ಮೊದಲು ಮಾಜಿ ಸಚಿವ ಟಿ.ಬಿ.ಜಯಚಂದ್ರರೂ ಮಾಡಿದ್ದರು. ಆಗ ಇದೇ ಬಿಜೆಪಿ ಪಕ್ಷದವರು ಮದಲೂರು ಕೆರೆಗೆ ಹೇಮಾವತಿ ನೀರು ಬಿಡಲು ಸಾಧ್ಯವಿಲ್ಲ ಎಂದು ವಾದ ಮಾಡಿದ್ದರು. ಅಲ್ಲದೆ ಕಳ್ಳಂಬೆಳ್ಳದಿಂದ ಮದಲೂರು ಕೆರೆವರೆಗೂ ಸುಮಾರು 110 ಕಿ.ಮೀ ದೂರ ಜಯಚಂದ್ರ ನಾಲೆ ನಿರ್ಮಾಣ ಮಾಡಿದ್ದರು. ಅಲ್ಲಲ್ಲಿ ಬ್ಯಾರೇಜ್ ಗಳನ್ನು ನಿರ್ಮಾಣ ಮಾಡಿರುವ ಕಾರಣ ನೀರು ಪೋಲಾಗುತ್ತದೆ. ಹಾಗಾಗಿ ನಾಲೆ ಕಾಮಗಾರಿ ಅವೈಜ್ಞಾನಿಕವಾಗಿ ಎಂದು ಎಂದು ಬಿಜೆಪಿಯವರು ಆಪಾದನೆ ಮಾಡುತಿದ್ದರು. ಆದರೆ ಅದೇ ನಾಲೆ ಮೂಲಕ ಇಂದು ನೀರು ಹರಿಸಿ ಮಾತನ್ನು ಉಳಿಸಿಕೊಳ್ಳುವ ಪ್ರಯತ್ನ ಮಾಡಿದೆ. ಮದಲೂರು ಕೆರೆಗೆ ನೀರಿನ ಹಂಚಿಕೆ ಇಲ್ಲದೇ ಇದ್ದರೂ ನೀರು ಹರಿಸಿದ್ದಾರೆ ಎಂದು ಕುಣಿಗಲ್ ಕಾಂಗ್ರೆಸ್ ಶಾಸಕ ರಂಗನಾಥ್ ಪ್ರತಿಕ್ರಿಯಿಸಿದ್ದಾರೆ.
ಬೆಂಗಳೂರು: ಮುಖ್ಯಮಂತ್ರಿ ಯಡಿಯೂರಪ್ಪನವರ ರಾಜಕೀಯ ಕಾರ್ಯದರ್ಶಿ ಸಂತೋಷ್ ಆತ್ಮಹತ್ಯೆಗೆ ಯತ್ನಿಸಿದ್ದಾರೆ.
ನಿದ್ದೆ ಮಾತ್ರೆ ಸೇವಿಸಿ ಸಂತೋಷ್ ಆತ್ಮಹತ್ಯೆಗೆ ಯತ್ನಿಸಿದ್ದು, ರಾಮಯ್ಯ ಆಸ್ಪತ್ರೆಯ ನಿಗಾ ಘಟಕದಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಆರೋಗ್ಯ ಸ್ಥಿರವಾಗಿದೆ ಎನ್ನುವ ಮಾಹಿತಿ ಲಭ್ಯವಾಗಿದೆ.
ಸಂತೋಷ್ ಅವರನ್ನು ಭೇಟಿ ಮಾಡಲು ಸಿಎಂ ಯಡಿಯೂರಪ್ಪ ರಾತ್ರಿಯೇ ಆಸ್ಪತ್ರೆಗೆ ಭೇಟಿ ನೀಡಿದ್ದಾರೆ.
ಈ ವೇಳೆ ಪ್ರತಿಕ್ರಿಯೆ ನೀಡಿದ ಸಿಎಂ, ನಿನ್ನೆ ಮದುವೆ ಮನೆಯಲ್ಲಿ ಚೆನ್ನಾಗಿದ್ದರು. ಯಾಕೆ ಏನು ಎನ್ನುವುದು ನನಗೂ ತಿಳಿದಿಲ್ಲ. ಈಗ ನಾನು ಅವರ ಕುಟುಂಬದ ಜೊತೆ ಮಾತನಾಡಲು ಹೋಗುತ್ತಿದ್ದೇನೆ ಎಂದು ತಿಳಿಸಿ ಆಸ್ಪತ್ರೆಯ ಒಳಗಡೆ ತೆರಳಿದರು.
ಬೆಂಗಳೂರು: ರಾಜರಾಜೇಶ್ವರಿ ನಗರ ಮತ್ತು ಶಿರಾ ಕ್ಷೇತ್ರಗಳನ್ನು ಬಿಜೆಪಿ ಜಯಗಳಿಸಿದರೂ ಈ ಗೆಲುವನ್ನು ಸಿಎಂ ಯಡಿಯೂರಪ್ಪ ಆಸ್ವಾದಿಸುವ ಸ್ಥಿತಿಯಲ್ಲಿ ಇದ್ದಂತೆ ಕಾಣುತ್ತಿಲ್ಲ. ಸಿಎಂ ಯಡಿಯೂರಪ್ಪ ಮುಂದೆ ಕ್ಯಾಬಿನೆಟ್ ಭರ್ತಿ ಮಾಡುವ ಸವಾಲಿದ್ದು ಯಾರನ್ನು ಸೇರಿಸಬೇಕು ಎನ್ನುವುದೇ ದೊಡ್ಡ ತಲೆನೋವಾಗಿದೆ.
ಶೀಘ್ರವೇ ಸಂಪುಟಕ್ಕೆ ಸರ್ಜರಿ ನಡೆಯಲಿರುವ ಹಿನ್ನೆಲೆಯಲ್ಲಿ ಆಕಾಂಕ್ಷಿಗಳ ಸಂಖ್ಯೆ ಹೆಚ್ಚುತ್ತಿದೆ. ಈ ವೇಳೆ, ಮೂಲ ಬಿಜೆಪಿಗರನ್ನು, ಮಿತ್ರಮಂಡಳಿಯನ್ನು ಜೊತೆಜೊತೆಯಲ್ಲೇ ಕರೆದೊಯ್ಯುವ ಅನಿವಾರ್ಯತೆ ಇದೆ.
ದೀಪಾವಳಿ ಬಳಿಕ ಅಂದರೆ ನವೆಂಬರ್ 19 ಅಥವಾ ನವೆಂಬರ್ 23ಕ್ಕೆ ಸಂಪುಟಕ್ಕೆ ಸರ್ಜರಿ ನಡೆಸಲು ಸಿಎಂ ಚಿಂತನೆ ನಡೆಸಿದ್ದಾರೆ. ಒಂದೆರಡು ದಿನಗಳಲ್ಲಿ ಹೈಕಮಾಂಡ್ ಜೊತೆ ಸಂಪುಟ ಸರ್ಜರಿ ಬಗ್ಗೆ ಯಡಿಯೂರಪ್ಪ ಮಾತುಕತೆ ನಡೆಸಲಿದ್ದಾರೆ. ಆದರೆ ಬಿಹಾರದಲ್ಲಿ ಸರ್ಕಾರ ಸ್ಥಾಪನೆ ಬಳಿಕ ಕರ್ನಾಟಕ ಸಂಪುಟ ವಿಚಾರಕ್ಕೆ ಹೈಕಮಾಂಡ್ ತಲೆ ಹಾಕುವ ಸಂಭವ ಇದೆ.
ಸಂಪುಟ ವಿಸ್ತರಣೆ ಅಥವಾ ಪುನಾರಚನೆ ಪೈಕಿ ಹೈಕಮಾಂಡ್ ಏನು ಹೇಳಿದ್ರೂ ಅದಕ್ಕೆ ಸಮ್ಮತಿ ನೀಡಲು ಯಡಿಯೂರಪ್ಪ ಪ್ಲಾನ್ ಮಾಡ್ಕೊಂಡಿದ್ದಾರೆ. ಸದ್ಯ ಸಿಎಂ ಯಡಿಯೂರಪ್ಪ ಮುಂದೆ ಮೂರು ಆಯ್ಕೆಗಳಿವೆ.
ಸೂತ್ರ – 1
ಸದ್ಯಕ್ಕೆ ಸಂಪುಟ ವಿಸ್ತರಣೆ ಮಾಡಿ ಖಾಲಿ ಇರುವ 7 ಸ್ಥಾನಗಳ ಪೈಕಿ 6 ಸ್ಥಾನ ತುಂಬುವುದು. ಇದರಲ್ಲಿ 3 ಬಿಜೆಪಿಯ ಮೂಲ ಶಾಸಕರಿಗೆ, 3 ವಲಸೆ ಹಕ್ಕಿಗಳಿಗೆ ನೀಡುವುದು. ಮಸ್ಕಿ ಚುನಾವಣೆ ಹಿನ್ನೆಲೆಯಲ್ಲಿ 1 ಸ್ಥಾನ ಉಳಿಸಿಕೊಳ್ಳುವುದು.
ಸೂತ್ರ – 2
ಸಚಿವ ಸಂಪುಟ ಪುನಾರಚನೆ ಮಾಡುವುದು. ಪುನಾರಚನೆ ಮಾಡಿದರೆ ಹಾಲಿ ನಾಲ್ಕು ಸಚಿವರಿಗೆ ಕೊಕ್ ಕೊಡಬೇಕಾಗುತ್ತದೆ. ಆಗ ಒಟ್ಟು 11 ಸ್ಥಾನ ಖಾಲಿ ಉಳಿಯುತ್ತದೆ. 1 ಖಾಲಿ ಉಳಿಸಿಕೊಂಡು, 10 ಸ್ಥಾನವನ್ನು ತುಂಬುವುದು. 7 ಬಿಜೆಪಿ ಶಾಸಕರಿಗೆ, 3 ವಲಸೆ ಹಕ್ಕಿಗಳಿಗೆ ನೀಡುವುದು. ಇದನ್ನೂ ಓದಿ: ಜಾರಕಿಹೊಳಿ ಮನೆಯಲ್ಲಿ ಸಚಿವಾಕಾಂಕ್ಷಿಗಳ ರಹಸ್ಯ ಸಭೆ- ಇಲ್ಲಿದೆ ಇನ್‍ಸೈಡ್ ಮಾಹಿತಿ
ಸೂತ್ರ – 3
ಬಿಜೆಪಿ ಹೈಕಮಾಂಡ್ ಸೂಚನೆಯಂತೆ ನಡೆದುಕೊಳ್ಳುವುದು. ಬಿಹಾರದಲ್ಲಿ ಸರ್ಕಾರ ಅಸ್ತಿತ್ವಕ್ಕೆ ಬರುವ ತನಕ ಕಾಯುವುದು. ಡಿಸೆಂಬರ್ ತನಕ ಸಂಪುಟ ಸರ್ಜರಿ ಮುಂದೂಡುವುದು. ವಲಸಿಗರನ್ನು ಸಮಾಧಾನ ಪಡಿಸುವ ಹೊಣೆ ಹೊರುವುದು.