Tag: Yelakunni

  • ‘ಯಲಾಕುನ್ನಿ’ ಟೀಸರ್ ರಿಲೀಸ್: ಕೋಮಲ್ ಗೆಟಪ್ ವೈರಲ್

    ‘ಯಲಾಕುನ್ನಿ’ ಟೀಸರ್ ರಿಲೀಸ್: ಕೋಮಲ್ ಗೆಟಪ್ ವೈರಲ್

    ಸೌಂದರ್ಯ ಸಿನಿ ಕಂಬೈನ್ಸ್ ಹಾಗೂ ನರಸಿಂಹ ಸಿನಿಮಾಸ್ ಲಾಂಛನದಲ್ಲಿ ಅನುಸೂಯ ಕೋಮಲ್ ಕುಮಾರ್, ಸಹನ ಮೂರ್ತಿ ರವರು ನಿರ್ಮಿಸಿರುವ, ಹೊಸ ಪ್ರತಿಭೆ N R ಪ್ರದೀಪ್ ಕಥೆ, ಚಿತ್ರಕಥೆ, ಸಾಹಿತ್ಯ,ಸಂಭಾಷಣೆ ಬರೆದು ನಿರ್ದೇಶಿಸಿರುವ ಹಾಗೂ ಕೋಮಲ್ ಕುಮಾರ್ (Komal Kumar) ನಾಯಕರಾಗಿ ನಟಿಸಿರುವ “ಯಲಾಕುನ್ನಿ” (Yelakunni) ಚಿತ್ರದ ಟೀಸರ್ ಬಿಡುಡಗೆ ಆಗಿದೆ.

    ಗಿಚ್ಚಿ ಗಿಲಿಗಿಲಿ ಫೈನಲ್ ಕಾರ್ಯಕ್ರಮದಲ್ಲಿ ಚಿತ್ರತಂಡ ಟೀಸರ್ ರಿಲೀಸ್ ಮಾಡಿದೆ. ಕೋಮಲ್ ಕುಮಾರ್ ಸ್ಟುಡಿಯೋಸ್ ಯೂಟ್ಯೂಬ್ ಚಾನಲ್ ನಲ್ಲಿ ಈ ಚಿತ್ರದ ಟೀಸರ್ ಲಭ್ಯವಿದೆ. ಟೀಸರ್ ಗೆ ಮೆಚ್ಚುಗೆಯ ಮಹಾಪೂರವೇ ಹರಿದು ಬರುತ್ತಿದ್ದು, ಕೋಮಲ್ ಕುಮಾರ್ ಅವರ ವಜ್ರಮುನಿ ಲುಕ್ ಗೆ ಅಭಿಮಾನಿಗಳು ಫಿದಾ ಆಗಿದ್ದಾರೆ.

     

    ಚಿತ್ರ ತೆರೆಗೆ ತರೋಕೆ ಚಿತ್ರತಂಡ ಸಿದ್ಧತೆ ಮಾಡಿಕೊಂಡಿದೆ. ಈ ಸಿನಿಮಾದ ಮತ್ತೊಂದು ವಿಶೇಷ ಅಂದರೆ  ಯಲಾಕುನ್ನಿ ಚಿತ್ರಕ್ಕೆ ‘ಮೇರಾ ನಾಮ್ ವಜ್ರಮುನಿ’ ಎಂಬ ಅಡಿಬರಹವಿದೆ.

  • ಶೂಟಿಂಗ್ ಮುಗಿಸಿದ ‘ಯಲಾಕುನ್ನಿ’: ಕೋಮಲ್ ನಾಯಕ

    ಶೂಟಿಂಗ್ ಮುಗಿಸಿದ ‘ಯಲಾಕುನ್ನಿ’: ಕೋಮಲ್ ನಾಯಕ

    ‘ಯಲಾಕುನ್ನಿ’  (Yelakunni) ಈ ಡೈಲಾಗ್ ಅನ್ನು ಕನ್ನಡ ಚಿತ್ರಪ್ರೇಮಿಗಳು ಅದು ಹೇಗೆ ಮರೆಯಲು ಸಾಧ್ಯಹೇಳಿ. ಖಳನಟರ ಖಳನಟ ದಿವಂಗತ ವಜ್ರಮುನಿ ಅವರ ಫೇಮಸ್ ಡೈಲಾಗ್ ಇದು. ಈ ಡೈಲಾಗ್ ಅನ್ನೇ ಸಿನಿಮಾ ಶೀರ್ಷಿಕೆಯಾಗಿಟ್ಟುಕೊಂಡು ಸ್ಯಾಂಡಲ್ ವುಡ್ ನಲ್ಲಿ ಮುಹೂರ್ತ ಮಾಡಿ ಸದ್ದು ಮಾಡಿತ್ತು ‘ಯಲಾಕುನ್ನಿ’ ಚಿತ್ರತಂಡ. ಸೌಂದರ್ಯ ಸಿನಿ ಕಂಬೈನ್ಸ್ ಹಾಗೂ ನರಸಿಂಹ ಸಿನಿಮಾಸ್ ಲಾಂಛನದಲ್ಲಿ ಅನುಸೂಯ ಕೋಮಲ್ ಕುಮಾರ್, ಸಹನ ಮೂರ್ತಿ ರವರು ನಿರ್ಮಿಸಿರುವ ಹಾಗೂ ತಮ್ಮ ಅಮೋಘ ಅಭಿನಯದ ಮೂಲಕ ಜನರ ಮನ ಗೆದ್ದಿರುವ ಕೋಮಲ್ ಕುಮಾರ್ (Komal) ನಾಯಕರಾಗಿ ನಟಿಸಿರುವ ಈ ಚಿತ್ರವನ್ನು ಹೊಸ ಪ್ರತಿಭೆ N R ಪ್ರದೀಪ್ ಕಥೆ, ಚಿತ್ರಕಥೆ, ಸಂಭಾಷಣೆ ಬರೆದು ನಿರ್ದೇಶನ ಮಾಡಿದ್ದಾರೆ. ಸದ್ಯ ಚಿತ್ರೀಕರಣ ಸದ್ದಿಲ್ಲದೆ ಪೂರ್ಣಗೊಳಿಸಿರುವ “ಯಲಾಕುನ್ನಿ” ಚಿತ್ರಕ್ಕೆ ಚಿತ್ರೀಕರಣ (Shooting) ನಂತರದ ಚಟುವಟಿಕೆಗಳು(ಪೋಸ್ಟ್ ಪ್ರೊಡಕ್ಷನ್) ಬಿರುಸಿನಿಂದ ಸಾಗಿದೆ‌. ಸದ್ಯದಲ್ಲೇ ಪ್ರೇಕ್ಷಕರಿಗೆ ಮನೋರಂಜನೆಯ ರಸದೌತಣ ನೀಡಲು ಚಿತ್ರಮಂದಿರಗಳಿಗೆ “ಯಲಾಕುನ್ನಿ” ಚಿತ್ರ ಬರಲಿದೆ‌. ಬೆಂಗಳೂರು, ಮೈಸೂರು ಹಾಗೂ ಶ್ರೀರಂಗಪಟ್ಟಣದಲ್ಲಿ ಚಿತ್ರೀಕರಣ ನಡೆದಿದೆ. ಶ್ರೀರಂಗಪಟ್ಟಣದಲ್ಲಿ ಚಿತ್ರಕ್ಕಾಗಿ ವಿಶೇಷ ಸೆಟ್ ಸಹ ಹಾಕಲಾಗಿತ್ತು.

    ಕೋಮಲ್ ಕುಮಾರ್ ಅವರು ಮೊದಲ ಬಾರಿಗೆ ದ್ವಿಪಾತ್ರದಲ್ಲಿ ಕಾಣಿಸಿಕೊಂಡಿರುವುದು ಈ ಚಿತ್ರದ ವಿಶೇಷ‌.  ಕೋಮಲ್ ಅವರ ಜೊತೆಗೆ  ದೊಡ್ಡ ದೊಡ್ಡ ಕಲಾವಿದರ ದಂಡೆ ಈ ಚಿತ್ರದಲ್ಲಿದೆ. ದತ್ತಣ್ಣ , ಸಾಧು ಕೋಕಿಲ , ಮಿತ್ರ, ಸುಚೇಂದ್ರ ಪ್ರಸಾದ್ , ಶಿವರಾಜ್ ಕೆ ಆರ್ ಪೇಟೆ , ತಬಲಾ ನಾಣಿ, ರಾಜು ತಾಳಿ ಕೋಟೆ, ಸುಮನ್ ನಗರ ಕರ್,  ಮಾನಸಿ ಸುಧೀರ್(ಕಾಂತಾರ) , ಜಗ್ಗೇಶ್ ಅವರ ದ್ವಿತಿಯ ಪುತ್ರ ಯತಿರಾಜ್ ಜಗ್ಗೇಶ್, ಜಯಸಿಂಹ ಮುಸುರಿ , ರಘು ರಾಮನಕೊಪ್ಪ ,ಮಹಾಂತೇಶ್, ಬೌಬೌ ಜಯರಾಮ್ , ನಿರ್ದೇಶಕ ಸಹನ ಮೂರ್ತಿ , ಭಜರಂಗಿ ಪ್ರಸನ್ನ , ತಿಥಿ ತಮ್ಮಣ್ಣ, ಪ್ರದೀಪ್ ಪೂಜಾರಿ, ತೇಜಸ್, ಉಮೇಶ್ ಸಕ್ಕರೆ ನಾಡು ಮಂತಾದರವರ ತಾರಾಬಳಗವಿರುವ ಈ ಚಿತ್ರದ ನಾಯಕಿಯರಾಗಿ ನಿಸರ್ಗ ಅಪ್ಪಣ್ಣ ಮತ್ತು ಗಿಚ್ಚಿಗಿಲಿಯ ಅಮೃತಾ ಬಣ್ಣ ಹಚ್ಚಿದ್ದಾರೆ.

    ವಿಶೇಷ ವಾಗಿ ವಜ್ರಮುನಿ ಯವರ ಮೊಮ್ಮೊಗ ಆಕರ್ಶ್ ಈ ಚಿತ್ರದ ಮೂಲಕ ಮೊದಲ ಬಾರಿಗೆ ಬಣ್ಣದ ಲೋಕ ಪ್ರವೇಶಿಸುತ್ತಿದ್ದಾರೆ. ಮಯೂರ್ ಪಟೇಲ್ ಅವರು ಖಳ ನಾಯಕನಾಗಿ ನಟಿಸಿದ್ದಾರೆ.

    ಸಂಪೂರ್ಣ ಹಳ್ಳಿ ಸೊಗಡಿನಲ್ಲಿ  ಮೂಡಿಬಂದಿರುವ ‘ಯಲಾಕುನ್ನಿ’ ಸಿನಿಮಾಕ್ಕೆ ರಥಾವರ ಖ್ಯಾತಿಯ ಧರ್ಮ ವಿಶ್ ಸಂಗೀತ ನಿರ್ದೇಶನ, ದೀಪು ಎಸ್ ಕುಮಾರ್ ಸಂಕಲನ ಹಾಗೂ ಹಾಲೇಶ್ ಭದ್ರಾವತಿ ಅವರ ಛಾಯಾಗ್ರಹಣವಿದೆ. ಮುರಳಿ ಮಾಸ್ಟರ್ ನೃತ್ಯ ಸಂಯೋಜನೆ ಮಾಡಿರುವ ಈ ಚಿತ್ರಕ್ಕೆ ನರಸಿಂಹ ಮಾಸ್ಟರ್ ಸಾಹಸ ಸಂಯೋಜನೆ ಮಾಡಿದ್ದಾರೆ. “ಯಲಾಕುನ್ನಿ” ಚಿತ್ರಕ್ಕೆ ‘ಮೇರಾ ನಾಮ್ ವಜ್ರಮುನಿ’ ಎಂಬ ಅಡಿಬರಹವಿದೆ.

  • ‘ಯಲಾ ಕುನ್ನಿ’ ಎನ್ನುತ್ತಾ ಹೊಸ ಸುದ್ದಿ ಕೊಟ್ಟ ಕೋಮಲ್

    ‘ಯಲಾ ಕುನ್ನಿ’ ಎನ್ನುತ್ತಾ ಹೊಸ ಸುದ್ದಿ ಕೊಟ್ಟ ಕೋಮಲ್

    ಮ್ಮ ಅಮೋಘ ಅಭಿನಯದ ಮೂಲಕ ಜನಮನಸೂರೆಗೊಂಡಿರುವ ಸೆನ್ಸೇಷನಲ್ ಸ್ಟಾರ್ ಕೋಮಲ್ ಕುಮಾರ್ (Komal Kumar) ಅಭಿನಯದ ನೂತನ ಚಿತ್ರ “ಯಲಾ ಕುನ್ನಿ” (Yelakunni) ಮೇರಾ ನಾಮ್ ವಜ್ರಮುನಿ  (Vajramuni) ಎಂಬ ಅಡಿಬರಹ ಇರುವ ಶೀರ್ಷಿಕೆ ಇತ್ತೀಚೆಗೆ ಅನಾವರಣವಾಯಿತು. ಸೌಭಾಗ್ಯ ಸಿನಿಮಾಸ್ ಲಾಂಛನದಲ್ಲಿ  ಮಹೇಶ್ ಗೌಡ್ರು ನಿರ್ಮಿಸುತ್ತಿರುವ ಈ ಚಿತ್ರವನ್ನು ಎನ್. ಆರ್ ಪ್ರದೀಪ (Pradeep) ನಿರ್ದೇಶಿಸುತ್ತಿದ್ದಾರೆ.

    ಓಂಪ್ರಕಾಶ್ ರಾವ್, ಮುಸ್ಸಂಜೆ ಮಹೇಶ್ ಗರಡಿಯಲ್ಲಿ ಪಳಗಿರುವ ಪ್ರದೀಪ ಅವರಿಗೆ ಇದು ಚೊಚ್ಚಲ ನಿರ್ದೇಶನದ ಚಿತ್ರ. 1981 ರ ಕಾಲಘಟ್ಟದಲ್ಲಿ ನಡೆಯುವ ಕಥೆಯಾಗಿದ್ದು ಶ್ರೀರಂಗಪಟ್ಟಣ ಹಾಗೂ ಮೈಸೂರು ಸುತ್ತಮುತ್ತಲಿನಲ್ಲಿ ಹಳ್ಳಿ ಮತ್ತು ದೇವಸ್ಥಾನದ ಸೆಟ್ ಗಳನ್ನು ನಿರ್ಮಿಸಿ ಚಿತ್ರೀಕರಣ ಮಾಡಲಾಗುವುದಂತೆ.‌ ಇದನ್ನೂ ಓದಿ: ಅಪ್ಪು ನಟಿಸಬೇಕಿದ್ದ ಕತೆಯಲ್ಲಿ ವಿನಯ್ ರಾಜ್‌ಕುಮಾರ್ ಹೀರೋ

    ಕನ್ನಡದ ಖ್ಯಾತ ನಟ ವಜ್ರಮುನಿ ತಮ್ಮ ಚಿತ್ರಗಳಲ್ಲಿ ಹೆಚ್ಚು ಬಯ್ಯಲು ಬಳಸುತ್ತಿದ್ಡ ಸಂಭಾಷಣೆ “ಯಲಾ ಕುನ್ನಿ”. ಈ ಪದವನ್ನೆ ಚಿತ್ರದ ಶೀರ್ಷಿಕೆಯಾಗಿ ನಿರ್ದೇಶಕರು ಬಳಸಿಕೊಂಡಿದ್ದಾರೆ.  ಚಿತ್ರದಲ್ಲಿ “ವಜ್ರಮುನಿ”ಯಾಗಿ ಕೋಮಲ್  ರೆಟ್ರೂ ಲುಕ್ ನಲ್ಲಿ ಕಮಾಲ್ ಮಾಡಲಿದ್ದಾರೆ.  ಹಿರಿಯ ಕಲಾವಿದ ಮುಸುರಿ ಕೃಷ್ಣ ಮೂರ್ತಿ ಅವರ ಮಗ ಜಯಸಿಂಹ ಮುಸುರಿ, ನವರಸ ನಾಯಕ ಜಗ್ಗೇಶ್ ಅವರ ಕಿರಿಯ ಮಗ ಯತಿರಾಜ್ ಹಾಗೂ “ಫ್ರೆಂಚ್ ಬಿರಿಯಾನಿ” ಖ್ಯಾತಿಯ ಮಹಾಂತೇಶ್ ಮುಂತಾದವರು ತಾರಾಬಳಗದಲ್ಲಿದ್ದಾರೆ.

    ಕುಟುಂಬ ಸಮೇತ ನೋಡಬಹುದಾದ ಪರಿಶುದ್ಧ ಹಾಸ್ಯ ಕಥಾಹಂದರದ ಜೊತೆಗೆ ಎಮೋಶನ್ ಸನ್ನಿವೇಶಗಳನ್ನು ಒಳಗೊಂಡಿರುವ ಈ ಚಿತ್ರಕ್ಕೆ ನಿರ್ದೇಶಕ ಪ್ರದೀಪ ಅವರೆ, ಕಥೆ, ಚಿತ್ರಕಥೆ, ಸಂಭಾಷಣೆ ಬರೆದು ,ಗೀತ ರಚನೆ ಸಹ ಮಾಡಿದ್ದಾರೆ  ಧರ್ಮ ವಿಶ್ ಸಂಗೀತ, ಉದಯ್ ಲೀಲಾ ಛಾಯಾಗ್ರಹಣ ಹಾಗೂ ದೀಪು ಎಸ್ ಕುಮಾರ್ ಅವರ ಸಂಕಲನ ಈ ಚಿತ್ರಕ್ಕಿರಲಿದೆ.