Tag: Yemen

  • ಹೌತಿಗಳ ವಿರುದ್ಧ ಸಿಡಿದೆದ್ದ ಇಸ್ರೇಲ್‌ – ಯೆಮೆನ್ ಮೇಲೆ ವೈಮಾನಿಕ ದಾಳಿ

    ಹೌತಿಗಳ ವಿರುದ್ಧ ಸಿಡಿದೆದ್ದ ಇಸ್ರೇಲ್‌ – ಯೆಮೆನ್ ಮೇಲೆ ವೈಮಾನಿಕ ದಾಳಿ

    ಟೆಲ್ ಅವಿವ್: ಇರಾನ್‌ (Iran) ಬೆಂಬಲಿತ ಹೌತಿ ಬಂಡುಕೋರರನ್ನು (Houthi) ಗುರಿಯಾಗಿಸಿಕೊಂಡು ಯೆಮೆನ್ (Yemen) ರಾಜಧಾನಿ ಸನಾ ಸೇರಿದಂತೆ ಹಲವಾರು ಪ್ರದೇಶಗಳ ಮೇಲೆ ಇಸ್ರೇಲ್‌ (Israel) ವಾಯು ದಾಳಿ ನಡೆಸಿದೆ. ಇತ್ತೀಚೆಗೆ ಹೌತಿ ಬಂಡುಕೋರರು ಇಸ್ರೇಲ್‌ನ್ನು ಗುರಿಯಾಗಿಸಿಕೊಂಡು ಕ್ಷಿಪಣಿ ದಾಳಿ ನಡೆಸಿದ್ದರು. ಅದಕ್ಕೆ ಪ್ರತಿಯಾಗಿ ಇಸ್ರೇಲ್‌ ಈ ದಾಳಿ ನಡೆಸಿದೆ.

    ವಿದ್ಯುತ್ ಕೇಂದ್ರ, ಅನಿಲ ಕೇಂದ್ರ ಸೇರಿದಂತೆ ಸನಾ ರಾಜಧಾನಿಯಾದ್ಯಂತ ಅನೇಕ ಪ್ರದೇಶಗಳ ಮೇಲೆ ದಾಳಿ ನಡೆದಿದೆ ಎಂದು ಹೌತಿ ಮಾಧ್ಯಮ ಕಚೇರಿ ತಿಳಿಸಿದೆ. ಯೆಮನ್ ಅಧ್ಯಕ್ಷರ ನಿವಾಸದ ಹತ್ತಿರ ಹಲವಾರು ಪ್ರದೇಶಗಳಲ್ಲಿ ಭಾರೀ ಸ್ಫೋಟದ ಶಬ್ಧ ಕೇಳಿಬರುತ್ತಿವೆ ಎಂದು ವರದಿಯಾಗಿದೆ. ಈ ದಾಳಿಯನ್ನು ಇಸ್ರೇಲ್ ದೃಢಪಡಿಸಿಲ್ಲ. ಇದನ್ನೂ ಓದಿ: ಹೌತಿ ಬಂಡುಕೋರ ಮೇಲೆ ಸರಣಿ ದಾಳಿ ನಡೆಸಿ ಪೆಟ್ಟು ಕೊಡ್ತೇವೆ: ಬೆಂಜಮಿನ್ ನೆತನ್ಯಾಹು

    ಹೌತಿಗಳು ಇತ್ತೀಚೆಗೆ ಇಸ್ರೇಲ್ ಕಡೆಗೆ ಕ್ಷಿಪಣಿಗಳು ಮತ್ತು ಡ್ರೋನ್‌ಗಳನ್ನು ಹಾರಿಸಿದ್ದರು. ಅಲ್ಲದೇ ಕೆಂಪು ಸಮುದ್ರದಲ್ಲಿ ಹಲವಾರು ತಿಂಗಳುಗಳಿಂದ ಹಡಗುಗಳನ್ನು ಗುರಿಯಾಗಿಸಿಕೊಂಡಿದ್ದಾರೆ. ಗಾಜಾ ಯುದ್ಧದ ಮಧ್ಯೆ ಪ್ಯಾಲೆಸ್ಟೀನಿಯನ್ನರೊಂದಿಗೆ ಸೇರಿ ಅವರು ಈ ದಾಳಿಗಳನ್ನು ನಡೆಸುತ್ತಿದ್ದಾರೆ. ಇದೇ ಕಾರಣಕ್ಕೆ ಇಸ್ರೇಲ್‌ ವೈಮಾನಿಕ ದಾಳಿ ನಡೆಸಿದೆ.

    ಶುಕ್ರವಾರ ಇಸ್ರೇಲ್‌ ಅತಿದೊಡ್ಡ ವಿಮಾನ ನಿಲ್ದಾಣವನ್ನು ಗುರಿಯಾಗಿಸಿಕೊಂಡು ಹೌತಿಗಳು ದಾಳಿ ನಡೆಸಿದ್ದರು. ಈ ಕ್ಷಿಪಣಿಗಳನ್ನು ಇಸ್ರೇಲ್‌ ಆಕಾಶದಲ್ಲೇ ಹೊಡೆದು ಹಾಕಿತ್ತು. ಇದರಿಂದಾಗಿ ಯಾವುದೇ ಹಾನಿಗಳಾಗಿರಲಿಲ್ಲ.

    ಮೇ ತಿಂಗಳಲ್ಲಿ ಹೌತಿಗಳ ವಿರುದ್ಧ ಗುಡುಗಿದ್ದ ಇಸ್ರೇಲ್‌ ಪ್ರಧಾನಿ ಬೆಂಜಮಿನ್ ನೆತನ್ಯಾಹು, ಹೌತಿ ಉಗ್ರರನ್ನು ಹತ್ತಿಕ್ಕಲು ಸರಣಿ ದಾಳಿ ನಡೆಸುವುದಾಗಿ ಎಚ್ಚರಿಸಿದ್ದರು. ಹೌತಿ ದಾಳಿಗೆ ಇಸ್ರೇಲ್‌ನ ಪ್ರತೀಕಾರವು ಒಂದು ಬಾರಿ ಮಾತ್ರ ಇರುವುದಿಲ್ಲ. ದಾಳಿಯ ಪೆಟ್ಟುಗಳು ಬೀಳುತ್ತಲೇ ಇರುತ್ತವೆ ಎಂದು ಅವರು ಹೇಳಿಕೊಂಡಿದ್ದರು. ಇದನ್ನೂ ಓದಿ: ಹೌತಿ ಉಗ್ರರ ದಾಳಿಗೆ ನಡೆದಿದ್ದ ಮಹಾ ಪ್ಲ್ಯಾನ್‌ ಲೀಕ್‌ ಆಗಿದ್ದು ಹೇಗೆ? – ಟ್ರಂಪ್‌ ಟೀಂ ಬಳಸಿದ್ದ ʻಸಿಗ್ನಲ್‌ʼ ಎಷ್ಟು ಸೇಫ್‌?

  • ಯೆಮೆನ್‌ನಲ್ಲಿ ವಲಸಿಗರಿದ್ದ ಬೋಟ್ ಮುಳುಗಡೆ – 76 ಮಂದಿ ಸಾವು

    ಯೆಮೆನ್‌ನಲ್ಲಿ ವಲಸಿಗರಿದ್ದ ಬೋಟ್ ಮುಳುಗಡೆ – 76 ಮಂದಿ ಸಾವು

    ಸನಾ: ಇಥಿಯೋಪಿಯನ್ ವಲಸಿಗರಿದ್ದ (Ethiopian Migrants) ಬೋಟ್ ಮುಳುಗಡೆಯಾದ (Boat Capsize) ಪರಿಣಾಮ 76 ಮಂದಿ ವಲಸಿಗರು ಸಾವನ್ನಪ್ಪಿದ್ದು, ಅನೇಕರು ನಾಪತ್ತೆಯಾಗಿರುವ ಘಟನೆ ಯೆಮೆನ್ (Yemen) ಕರಾವಳಿಯಲ್ಲಿ ನಡೆದಿದೆ.

    ಯೆಮೆನ್‌ನ ದಕ್ಷಿಣ ಅಬ್ಯಾನ್ (Abyan) ಪ್ರಾಂತ್ಯದ ಕರಾವಳಿಯಲ್ಲಿ ದೋಣಿ ಮುಳುಗಡೆಯಾಗಿದ್ದು, 32 ಮಂದಿಯನ್ನು ರಕ್ಷಿಸಲಾಗಿದೆ. ಘಟನೆಯಲ್ಲಿ 76 ಮಂದಿ ವಲಸಿಗರ ಮೃತದೇಹ ಪತ್ತೆಯಾಗಿದೆ ಎಂದು ಯೆಮೆನ್ ಭದ್ರತಾ ಅಧಿಕಾರಿಗಳು ತಿಳಿಸಿದ್ದಾರೆ. ಒಟ್ಟು 157 ಜನರು ಹಡಗಿನಲ್ಲಿದ್ದರು ಎಂದು ವರದಿಗಳು ತಿಳಿಸಿವೆ. ಇದನ್ನೂ ಓದಿ: ಶಿಬು ಸೊರೇನ್ ಇಡೀ ಜೀವನವನ್ನು ಬುಡಕಟ್ಟು ಸಮುದಾಯದ ಕಲ್ಯಾಣಕ್ಕಾಗಿ ಮೀಸಲಿಟ್ಟಿದ್ದರು: ಮೋದಿ ಸಂತಾಪ

    ಕಡುಬಡತನದಿಂದ ಆಫ್ರಿಕಾದಿಂದ ನೂರಾರು ವಲಸಿಗರು ಗಲ್ಫ್ ಅರಬ್ ರಾಷ್ಟ್ರಕ್ಕೆ ತೆರಳುತ್ತಿದ್ದರು. ಯೆಮೆನ್‌ಗೆ ಅನಧಿಕೃತ ವಲಸಿಗರ ಹರಿವು ಹೆಚ್ಚಾಗುತ್ತಿದೆ ಎಂದು ವಿಶ್ವಸಂಸ್ಥೆಯ ಅಂತರರಾಷ್ಟ್ರೀಯ ವಲಸೆ ಸಂಘಟನೆ ತಿಳಿಸಿದೆ. ಕಳೆದ ವರ್ಷ ಯೆಮೆನ್‌ಗೆ 60 ಸಾವಿರಕ್ಕೂ ಹೆಚ್ಚು ಮಂದಿ ವಲಸೆ ಹೋಗಿದ್ದರು ಎಂದು ಐಓಎಂ ಮಾಹಿತಿ ನೀಡಿದೆ. ಇದನ್ನೂ ಓದಿ: KRS ಡ್ಯಾಂ ಮೈಸೂರು ರಾಜಮನೆತನದ ತ್ಯಾಗದಿಂದ ನಿರ್ಮಾಣವಾಗಿದೆ – ಮಂತ್ರಾಲಯ ಶ್ರೀ

  • ಯೆಮನ್‌ನಲ್ಲಿ ಕೇರಳ ನರ್ಸ್ ನಿಮಿಷಾ ಪ್ರಿಯಾ ಮರಣದಂಡನೆ ಸಂಪೂರ್ಣ ರದ್ದು; MEA ರಿಯಾಕ್ಷನ್‌ ಏನು?

    ಯೆಮನ್‌ನಲ್ಲಿ ಕೇರಳ ನರ್ಸ್ ನಿಮಿಷಾ ಪ್ರಿಯಾ ಮರಣದಂಡನೆ ಸಂಪೂರ್ಣ ರದ್ದು; MEA ರಿಯಾಕ್ಷನ್‌ ಏನು?

    ಸನಾ: ಯೆಮೆನ್‌ನಲ್ಲಿ (Yemen) ಶಿಕ್ಷೆಗೆ ಗುರಿಯಾಗಿದ್ದ ಕೇರಳದ ನರ್ಸ್ ನಿಮಿಷಾ ಪ್ರಿಯಾಗೆ (Nimisha Priya) ವಿಧಿಸಲಾಗಿದ್ದ ಮರಣದಂಡನೆಯನ್ನು ಸಂಪೂರ್ಣವಾಗಿ ರದ್ದುಗೊಳಿಸಲಾಗಿದೆ. ಈ ಹಿಂದೆ ಅಮಾನತುಗೊಂಡಿದ್ದ ಮರಣದಂಡನೆ ಶಿಕ್ಷೆಯನ್ನ ಸಂಪೂರ್ಣವಾಗಿ ರದ್ದು ಮಾಡಲಾಗಿದೆ ಎಂದು ಭಾರತದ ಗ್ರ್ಯಾಂಡ್ ಮುಫ್ತಿ ಕಾಂತಪುರಂ ಎಪಿ ಅಬೂಬಕರ್ ಮುಸ್ಲಿಯಾರ್ ಅವರ ಕಚೇರಿ ಈ ಮಾಹಿತಿ ನೀಡಿದೆ.

    ಗ್ರ್ಯಾಂಡ್ ಮುಫ್ತಿ ಕಚೇರಿ (Grand Mufti of India) ಮಾಹಿತಿ ಪ್ರಕಾರ, ಯೆಮೆನ್‌ ರಾಜಧಾನಿ ಸನಾದಲ್ಲಿ ನಡೆದ ಉನ್ನತ ಮಟ್ಟದ ಸಭೆಯಲ್ಲಿ ಶಿಕ್ಷೆ ರದ್ದುಗೊಳಿಸುವ ನಿರ್ಧಾರ ತೆಗೆದುಕೊಳ್ಳಲಾಗಿದೆ. ಆದ್ರೆ ಯೆಮನ್‌ ಸರ್ಕಾರದಿಂದ ಅಧಿಕೃತ ಲಿಖಿತ ಪ್ರಕಟಣೆ ಬಂದಿಲ್ಲ ಎಂದೂ ಸಹ ಸ್ಪಷ್ಟಪಡಿಸಲಾಗಿದೆ. ಇದನ್ನೂ ಓದಿ: ಯುರೋಪಿಯನ್‌ ಒಕ್ಕೂಟದೊಂದಿಗೆ ಟ್ರಂಪ್‌ ಬಿಗ್‌ ಡೀಲ್‌ – ಆಮದುಗಳ ಮೇಲೆ 15% ಸುಂಕ

    ವಿದೇಶಾಂಗ ಸಚಿವಾಲಯ ಹೇಳುವುದೇನು?
    37 ವರ್ಷದ ನಿಮಿಷಾ ಪ್ರಿಯಾ ಮರಣದಂಡನೆ (Death Sentence) ಸಂಪೂರ್ಣ ರದ್ದಾದ ಬಗ್ಗೆ ಗ್ರ್ಯಾಂಡ್ ಮುಫ್ತಿ ಕಚೇರಿ ಹೇಳಿಕೆಯನ್ನ ಕೇಂದ್ರ ಸರ್ಕಾರ ನಿರಾಕರಿಸಿದೆ. ಶಿಕ್ಷೆ ಸಂಪೂರ್ಣ ರದ್ದಾಗಿರುವ ಬಗ್ಗೆ ಯಾವುದೇ ಅಧಿಕೃತ ಹೇಳಿಕೆಯಾಗಲಿ, ಲಿಖಿತ ಆದೇಶವಾಗಲಿ ಬಂದಿಲ್ಲ. ನಿಮಿಷಾ ಪ್ರಕರಣದ ಕುರಿತು ಕೆಲ ವ್ಯಕ್ತಿಗಳು ಹಂಚಿಕೊಳ್ಳುತ್ತಿರುವ ಮಾಹಿತಿ ತಪ್ಪಾಗಿದೆ ಎಂದು ಭಾರತದ ವಿದೇಶಾಂಗ ಸಚಿವಾಲಯ (MEA) ಮೂಲಗಳು ತಿಳಿಸಿವೆ ಎಂದು ವರದಿಯಾಗಿದೆ.  ಇದನ್ನೂ ಓದಿ: ನಿನ್ನನ್ನು ಮಿಸ್ ಮಾಡಿಕೊಳ್ಳುತ್ತಿದ್ದೇನೆ ಮಮ್ಮಿ – ನಿಮಿಷಾ ಪ್ರಿಯಾ ಬಿಡುಗಡೆಗೆ ಮನವಿ ಮಾಡಲು ಯೆಮನ್‍ಗೆ ಬಂದ ಪುತ್ರಿ

    ನಿಮಿಷಾ ಪ್ರಿಯಾ ಯಾರು?
    ನಿಮಿಷಾ ಪ್ರಿಯಾ ಯೆಮನ್‌ನಲ್ಲಿ ಕೆಲಸ ಮಾಡುತ್ತಿರುವ ಭಾರತೀಯ ನರ್ಸ್. ಯೆಮನ್ ನಾಗರಿಕ ತಲಾಲ್ ಅಬ್ದೋ ಮೆಹದಿ ಕೊಲೆ ಪ್ರಕರಣದಲ್ಲಿ ಶಿಕ್ಷೆಗೊಳಗಾಗಿದ್ದಾರೆ. ಕೇರಳದ ಪಾಲಕ್ಕಾಡ್ ಜಿಲ್ಲೆಯವರಾದ ನಿಮಿಷಾ, 2017 ರಲ್ಲಿ ಕೊಲೆ ಆರೋಪದಲ್ಲಿ ಗಲ್ಲು ಶಿಕ್ಷೆಗೆ ಗುರಿಯಾಗಿದ್ದಾರೆ. ಅದಕ್ಕೂ ಮುನ್ನ ಅವರು ಹಲವಾರು ವರ್ಷಗಳ ಕಾಲ ಆ ದೇಶದಲ್ಲಿ ನರ್ಸ್ ಆಗಿ ಕೆಲಸ ಮಾಡಿದ್ದರು.  ಇದನ್ನೂ ಓದಿ: ನ್ಯೂಯಾರ್ಕ್‌ನ ಗಗನಚುಂಬಿ ಕಟ್ಟಡದಲ್ಲಿ ಗುಂಡಿನ ದಾಳಿ; ಬಂದೂಕುದಾರಿ ಸೇರಿ ಐವರು ಸಾವು

    ಯೆಮನ್ ಪ್ರಜೆಯ ಕೊಲೆ ಏಕಾಯ್ತು?
    ತಲಾಲ್ ಅವರ ಬೆಂಬಲದೊಂದಿಗೆ, ನಿಮಿಷಾ 2015ರ ಏಪ್ರಿಲ್‌ನಲ್ಲಿ ವಿದೇಶದಲ್ಲಿ ತನ್ನ ಕನಸಿನ ಚಿಕಿತ್ಸಾಲಯವನ್ನು ತೆರೆದರು. ಅಲ್ಲಿ ಅವರು ಮಾನಸಿಕ, ದೈಹಿಕ ಮತ್ತು ಆರ್ಥಿಕ ಕಿರುಕುಳವನ್ನು ಅನುಭವಿಸಿದ್ದಾರೆಂದು ಆರೋಪಿಸಲಾಗಿದೆ. ತಲಾಲ್ ಕ್ಲಿನಿಕ್‌ನಲ್ಲಿ ಶೇ.33 ರಷ್ಟು ಪಾಲನ್ನು ಪಡೆಯಲು ಸುಳ್ಳು ದಾಖಲೆ ಸೃಷ್ಟಿಸಿದ್ದ. ಆಕೆಯ ಪಾಸ್‌ಪೋರ್ಟ್ ಅನ್ನು ವಶಪಡಿಸಿಕೊಂಡಿದ್ದ. ಕಾನೂನುಬದ್ಧವಾಗಿ ಮದುವೆಯಾಗಿದ್ದಾವೆಂದು ಸೂಚಿಸಲು ವಿವಾಹ ಪ್ರಮಾಣಪತ್ರವನ್ನು ಸಹ ನಕಲಿ ಮಾಡಿದ್ದ. ಮಹ್ದಿ ತನ್ನ ಮೇಲೆ ದೈಹಿಕ ಮತ್ತು ಲೈಂಗಿಕ ದೌರ್ಜನ್ಯ ಎಸಗಿದ್ದಾರೆ ಎಂದು ನಿಮಿಷಾ ಆರೋಪಿಸಿದ್ದರು.

    2017ರ ಜುಲೈನಲ್ಲಿ ನಿಮಿಷಾ ಜೈಲಿಗೆ ಭೇಟಿ ನೀಡಿದಾಗ, ತನ್ನ ಪಾಸ್‌ಪೋರ್ಟ್ ಅನ್ನು ಮರಳಿ ಪಡೆಯಲು ಮಹ್ದಿಗೆ ನಿದ್ರಾಜನಕ ಇನ್‌ಜೆಕ್ಷನ್ ಚುಚ್ಚಿದರು. ಪ್ರಮಾಣ ಅತಿಯಾದ್ದರಿಂದ ವ್ಯಕ್ತಿ ಮೃತಪಟ್ಟಿದ್ದ. ಮತ್ತೊಬ್ಬ ನರ್ಸ್ ಸಹಾಯ ಪಡೆದು ಮೃತದೇಹ ವಿಲೇವಾರಿಗೆ ಮುಂದಾಗಿದ್ದರು. ದೇಹವನ್ನು ಕತ್ತರಿಸಿ ನೀರಿನ ಟ್ಯಾಂಕ್‌ನಲ್ಲಿ ಭಾಗಗಳನ್ನು ವಿಲೇವಾರಿ ಮಾಡುವಂತೆ ಸೂಚಿಸಿದ್ದ. ಇಬ್ಬರೂ ತಲೆಮರೆಸಿಕೊಂಡಿದ್ದರು. ಕೊನೆಗೆ ಅವರನ್ನು ಪೊಲೀಸರು ಬಂಧಿಸಿದರು. ಇದನ್ನೂ ಓದಿ: ಆಸ್ಟ್ರೇಲಿಯಾದ ನೈಸರ್ಗಿಕ ವಿಪತ್ತಾದ ‘ಆಲ್ಗಲ್ ಬ್ಲೂಮ್’ – ಈ ಬಿಕ್ಕಟ್ಟಿನ ಹಿಂದಿನ ಕಾರಣವೇನು?

    ಯೆಮನ್ ನ್ಯಾಯಾಲಯ ತೀರ್ಪೇನು?
    ಕೊಲೆ ಪ್ರಕರಣದಲ್ಲಿ ಪ್ರಿಯಾಳನ್ನು ಬಂಧಿಸಿ ಯೆಮನ್‌ನಲ್ಲಿ ವಿಚಾರಣೆ ನಡೆಸಲಾಯಿತು. 2020 ರಲ್ಲಿ, ಸ್ಥಳೀಯ ನ್ಯಾಯಾಲಯವು ಆಕೆಗೆ ಒಮ್ಮೆ ಅಲ್ಲ, ಮೂರು ಬಾರಿ ಮರಣದಂಡನೆ ವಿಧಿಸಿತು. ನಂತರ ಮೇಲ್ಮನವಿ ನ್ಯಾಯಾಲಯವು ಒಂದು ಶಿಕ್ಷೆಯನ್ನು ರದ್ದುಗೊಳಿಸಿತು. ಆದಾಗ್ಯೂ, ದೇಶದ ಸುಪ್ರೀಂ ಕೋರ್ಟ್ ಉಳಿದ ಎರಡು ಶಿಕ್ಷೆಯನ್ನು ಎತ್ತಿಹಿಡಿಯಿತು. ಯೆಮನ್ ಅಧ್ಯಕ್ಷ ರಶಾದ್ ಅಲ್-ಅಲಿಮಿ, ಕಳೆದ ವರ್ಷ ಆಕೆಗೆ ಮರಣದಂಡನೆಯನ್ನು ಅನುಮೋದಿಸಿದರು. ಪ್ರಿಯಾ ಪ್ರಸ್ತುತ ಸನಾ ಕೇಂದ್ರ ಜೈಲಿನಲ್ಲಿದ್ದಾರೆ. ಈ ವರ್ಷದ ಜನವರಿಯಲ್ಲಿ, ಹೌತಿ ನಿಯಂತ್ರಿತ ಸುಪ್ರೀಂ ಪೊಲಿಟಿಕಲ್ ಕೌನ್ಸಿಲ್‌ನ ಅಧ್ಯಕ್ಷ ಮಹ್ದಿ ಅಲ್-ಮಶಾತ್ ಅವರು ಮರಣದಂಡನೆಯನ್ನು ಅನುಮೋದಿಸಿದರು.

    ಬ್ಲಡ್‌ ಮನಿ ಅಂದ್ರೆ ಏನು?
    ಪ್ರಿಯಾ ಅವರು ಯೆಮನ್‌ನಲ್ಲಿದ್ದು ಸಾಮಾಜಿಕ ಕಾರ್ಯಕರ್ತರೊಬ್ಬರೊಂದಿಗೆ ಕ್ಷಮಾ ಪರಿಹಾರ ಮೊತ್ತದ (ಬ್ಲಡ್ ಮನಿ) ವಿಚಾರವಾಗಿ ಮೃತಪಟ್ಟ ವ್ಯಕ್ತಿಯ ಕುಟುಂಬದೊಂದಿಗೆ ಮಾತುಕತೆ ನಡೆಸುತ್ತಿದ್ದಾರೆ. ಆತನ ಕುಟುಂಬವು ಕ್ಷಮಾ ಪರಿಹಾರ ಮೊತ್ತವನ್ನು ಸ್ವೀಕರಿಸಲು ಒಪ್ಪಿದರೆ ಮಾತ್ರ ಮರಣ ದಂಡನೆಯನ್ನು ತಪ್ಪಿಸಲು ಸಾಧ್ಯ ಎಂದು ಹೇಳಲಾಗಿತ್ತು.

  • ನಿನ್ನನ್ನು ಮಿಸ್ ಮಾಡಿಕೊಳ್ಳುತ್ತಿದ್ದೇನೆ ಮಮ್ಮಿ – ನಿಮಿಷಾ ಪ್ರಿಯಾ ಬಿಡುಗಡೆಗೆ ಮನವಿ ಮಾಡಲು ಯೆಮನ್‍ಗೆ ಬಂದ ಪುತ್ರಿ

    ನಿನ್ನನ್ನು ಮಿಸ್ ಮಾಡಿಕೊಳ್ಳುತ್ತಿದ್ದೇನೆ ಮಮ್ಮಿ – ನಿಮಿಷಾ ಪ್ರಿಯಾ ಬಿಡುಗಡೆಗೆ ಮನವಿ ಮಾಡಲು ಯೆಮನ್‍ಗೆ ಬಂದ ಪುತ್ರಿ

    • 10 ವರ್ಷದಿಂದ ತಾಯಿ ಮುಖ ನೋಡದ 13 ವರ್ಷದ ಮಿಶೆಲ್‌

    ಸನಾ: ಯೆಮೆನ್‌ನಲ್ಲಿ (Yemen) ಶಿಕ್ಷೆಗೆ ಗುರಿಯಾಗಿದ್ದ ಕೇರಳದ ನರ್ಸ್ ನಿಮಿಷಾ ಪ್ರಿಯಾ ಅವರ ಬಿಡುಗಡೆಗಾಗಿ ಮಗಳು ಹಾಗೂ ಪತಿ ಮನವಿ ಮಾಡಲು ಯೆಮನ್‌ಗೆ ತೆರಳಿದ್ದಾರೆ. ಈ ಬಗ್ಗೆ 13 ವರ್ಷದ ಮಗಳು ಮಿಶೆಲ್ ವಿಡಿಯೋ ಹಂಚಿಕೊಂಡಿದ್ದಾಳೆ. ವಿಡಿಯೋದಲ್ಲಿ ‘ನಾನು ನಿನ್ನನ್ನು ಪ್ರೀತಿಸುತ್ತೇನೆ ಮಮ್ಮಿ, ನಾನು ನಿನ್ನನ್ನು ಮಿಸ್ ಮಾಡಿಕೊಳ್ಳುತ್ತಿದ್ದೇನೆʼ ಎಂದು ಭಾವುಕಳಾಗಿ ಹೇಳಿಕೊಂಡಿದ್ದಾಳೆ.

    ನಿಮಿಷಾ ಪ್ರಿಯಾಗೆ (Nimisha Priya) ವಿಧಿಸಲಾಗಿದ್ದ ಮರಣದಂಡನೆ ರದ್ದಾಗಿದೆ ಎಂದು ಇತ್ತೀಚೆಗೆ ವರದಿಯಾಗಿತ್ತು. ಇದರ ಬೆನ್ನಲ್ಲೇ ನಿಮಿಷಾ ಪ್ರಿಯಾ ಪತಿ ಟಾಮಿ ಥಾಮಸ್ ಹಾಗೂ ಮಗಳು ಗ್ಲೋಬಲ್ ಪೀಸ್ ಇನಿಶಿಯೇಟಿವ್ ಸಂಸ್ಥಾಪಕ ಡಾ. ಕೆ.ಎ. ಪಾಲ್ ಅವರನ್ನು ಭೇಟಿಯಾಗಿ, ಬಿಡುಗಡೆಗೆ ಮನವಿ ಮಾಡಲಿದ್ದಾರೆ. ಇದನ್ನೂ ಓದಿ: ಯೆಮೆನ್‌ನಲ್ಲಿ ಕೇರಳದ ನರ್ಸ್ ನಿಮಿಷ ಪ್ರಿಯಾಗೆ ಮರಣದಂಡನೆ ರದ್ದು?

    ನಿಮಿಷಾ ಪ್ರಿಯಾ ಹಲವಾರು ವರ್ಷಗಳಿಂದ ಯೆಮೆನ್‌ನಲ್ಲಿ ಜೈಲಿನಲ್ಲಿದ್ದಾರೆ. ಅವರ ಮಗಳು ಒಂದು ದಶಕದಿಂದ ಅವರನ್ನು ನೋಡಿಲ್ಲ. ಇನ್ನೂ ಬಾಲಕಿ, ಮಲಯಾಳಂ ಮತ್ತು ಇಂಗ್ಲಿಷ್ ಎರಡರಲ್ಲೂ ಮಾಡಿದ ಭಾವನಾತ್ಮಕ ಮನವಿಯಲ್ಲಿ, ʻನಾನು ನಿನ್ನನ್ನು ಪ್ರೀತಿಸುತ್ತೇನೆ ಮಮ್ಮಿ. ದಯವಿಟ್ಟು ನನ್ನ ತಾಯಿಯನ್ನು ಮನೆಗೆ ಕರೆತರಲು ಸಹಾಯ ಮಾಡಿ. ನಾನು ಅವರನ್ನು ನೋಡಲು ಬಯಸುತ್ತೇನೆ. ನಾನು ನಿಮ್ಮನ್ನು ಮಿಸ್ ಮಾಡಿಕೊಳ್ಳುತ್ತಿದ್ದೇನೆ ಮಮ್ಮಿ ಎಂದು ಹೇಳಿಕೊಂಡಿದ್ದಾಳೆ. ಇದರ ನಡುವೆ ನಿಮಿಷಾ ಅವರ ಪತಿ ಟಾಮಿ ಥಾಮಸ್ ದಯವಿಟ್ಟು ನನ್ನ ಪತ್ನಿ ನಿಮಿಷಾ ಪ್ರಿಯಾಳನ್ನು ಉಳಿಸಿ. ಅವಳು ಮತ್ತೆ ಊರಿಗೆ ವಾಪಸ್‌ ಆಗಲು ಸಹಾಯ ಮಾಡಿ ಎಂದು ಮನವಿ ಮಾಡಿಕೊಂಡಿದ್ದಾರೆ.

    ಇದರ ನಡುವೆ ನಿಮಿಷಾ ಪ್ರಿಯಾಳ ಕುಟುಂಬದ ಪರವಾಗಿ ಯೆಮೆನ್ ಅಧಿಕಾರಿಗಳು ಹಾಗೂ ಸಂತ್ರಸ್ತ ತಲಾಲ್ ಕುಟುಂಬಕ್ಕೆ ಧನ್ಯವಾದ ತಿಳಿಸಿ ಡಾ.ಕೆ.ಎ.ಪೌಲ್ ಮಾತನಾಡಿದ್ದಾರೆ. ಈ ವೇಳೆ, ನಿಮಿಷಾ ಪ್ರಿಯಾಗೆ ಇರುವ ಏಕೈಕ ಮಗಳು ಮಿಶೆಲ್. ಆಕೆ ಕಳೆದ 10 ವರ್ಷಗಳಿಂದ ಅಮ್ಮನನ್ನೇ ನೋಡಿಲ್ಲ. ನಿಮಿಷಾ ಪ್ರಿಯಾಳನ್ನು ಇಂದಲ್ಲ, ನಾಳೆ ಬಿಡುಗಡೆ ಮಾಡಿದರೆ ತುಂಬಾ ಕೃತಜ್ಞರಾಗಿರುವುದಾಗಿ ಮನವಿ ಮಾಡಿದ್ದಾರೆ ಎಂದು ವರದಿಯಾಗಿದೆ. ಇದನ್ನೂ ಓದಿ: ಇದು ಸೂಕ್ಷ್ಮ ವಿಷಯ, ಭಾರತ ಅಗತ್ಯವಿರುವ ಎಲ್ಲಾ ಸಹಾಯ ನೀಡುತ್ತಿದೆ: ಕೇರಳ ನರ್ಸ್‌ ಪ್ರಕರಣದ ಬಗ್ಗೆ MEA ಪ್ರತಿಕ್ರಿಯೆ

  • ಯೆಮೆನ್‌ನಲ್ಲಿ ಕೇರಳದ ನರ್ಸ್ ನಿಮಿಷ ಪ್ರಿಯಾಗೆ ಮರಣದಂಡನೆ ರದ್ದು?

    ಯೆಮೆನ್‌ನಲ್ಲಿ ಕೇರಳದ ನರ್ಸ್ ನಿಮಿಷ ಪ್ರಿಯಾಗೆ ಮರಣದಂಡನೆ ರದ್ದು?

    – ಎಕ್ಸ್‌ನಲ್ಲಿ ವೀಡಿಯೋ ಹಂಚಿಕೊಂಡ ಕೆಎ ಪೌಲ್

    ಸನಾ: ಯೆಮೆನ್‌ನಲ್ಲಿ (Yemen) ಶಿಕ್ಷೆಗೆ ಗುರಿಯಾಗಿದ್ದ ಕೇರಳದ ನರ್ಸ್ ನಿಮಿಷಾ ಪ್ರಿಯಾಗೆ (Nimisha Priya) ವಿಧಿಸಲಾಗಿದ್ದ ಮರಣದಂಡನೆ ರದ್ದಾಗಿದೆ ಎಂದು ಗ್ಲೋಬಲ್ ಪೀಸ್ ಇನಿಶಿಯೇಟಿವ್‌ನ ಸಂಸ್ಥಾಪಕ ಡಾ. ಕೆ.ಎ ಪೌಲ್ (KL Paul) ತಿಳಿಸಿದ್ದಾರೆ.

    ಈ ಕುರಿತು ಭಾರತ ಸರ್ಕಾರ, ನಿಮಿಷ ಪ್ರಿಯಾ ಕುಟುಂಬಸ್ಥರು ಮತ್ತು ಮರಣದಂಡನೆ ಮುಂದೂಡಿಕೆ ಕಾರಣರಾದ ಗ್ರ‍್ಯಾಂಡ್ ಮುಫ್ತಿ ಎ.ಪಿ ಅಬೂಬಕ್ಕರ್ ಮುಸ್ಲಿಯಾರ್ ಅವರ ಕಚೇರಿಯಿಂದ ಯಾವುದೇ ಅಧಿಕೃತ ಹೇಳಿಕೆಗಳು ಹೊರಬಂದಿಲ್ಲ.ಇದನ್ನೂ  ಓದಿ: ಜಗದೀಪ್ ಧನಕರ್ ರಾಜೀನಾಮೆ ಸುತ್ತ ಅನುಮಾನದ ಹುತ್ತ- ದಿಢೀರ್‌ ರಿಸೈನ್‌ ಮಾಡಿದ್ದು ಯಾಕೆ?

    ಸೋಮವಾರ ರಾತ್ರಿ ಯೆಮೆನನ್ ಸನಾದಿಂದ ಬಿಡುಗಡೆ ಮಾಡಿದ ವಿಡಿಯೋ ಸಂದೇಶದಲ್ಲಿ ಪೌಲ್ ಅವರು, ದೇವರ ದಯೆಯಿಂದ, ನಿಮಿಷ ಪ್ರಿಯಾ ಅವರ ಮರಣದಂಡನೆಯನ್ನು ರದ್ದುಗೊಳಿಸಲಾಗಿದೆ. ಅವರನ್ನು ಬಿಡುಗಡೆ ಮಾಡಲು ಭಾರತಕ್ಕೆ ಅವಕಾಶ ಕಲ್ಪಿಸಲಾಗಿದೆ. ನಿಮಿಷಾ ಅವರ ಸುರಕ್ಷಿತ ಪ್ರಯಾಣಕ್ಕಾಗಿ ರಾಜತಾಂತ್ರಿಕರನ್ನು ಕಳುಹಿಸಲು ತಯಾರಿ ನಡೆಸಿದ್ದಕ್ಕಾಗಿ ಪ್ರಧಾನಿ ಮೋದಿ ಅವರಿಗೆ ನಾನು ಧನ್ಯವಾದ ಹೇಳಲು ಬಯಸುತ್ತೇನೆ ಎಂದು ಹೇಳಿದ್ದಾರೆ. ನಿಮಿಷಾ ಅವರ ಮರಣದಂಡನೆ ರದ್ದಾಗಿರುವುದನ್ನು ಖಚಿತಪಡಿಸಿ ಈವರೆಗೆ ಯಾವುದೇ ರಾಷ್ಟ್ರೀಯ, ಅಂತಾರಾಷ್ಟ್ರೀಯ ಮುಖ್ಯವಾಹಿನಿ ಮಾಧ್ಯಮಗಳು ವರದಿ ಮಾಡಿಲ್ಲ.

    ಈ ಮೊದಲು ಕೇರಳದ ನರ್ಸ್ ನಿಮಿಷಾ ಪ್ರಿಯಾ ಅವರು ಯೆಮನ್‌ನಲ್ಲಿ ಜು.16ಕ್ಕೆ ಮರಣದಂಡನೆಗೆ ಗುರಿಯಾಗಬೇಕಿತ್ತು. ಆದರೆ ಇಂಡಿಯನ್ ಗ್ರ‍್ಯಾಂಡ್ ಮುಫ್ತಿ ಎ.ಪಿ ಅಬೂಬಕ್ಕರ್ ಮುಸ್ಲಿಯಾರ್ ಕಾಂತಪುರಂ ಅವರ ಮಧ್ಯಪ್ರವೇಶದ ಬಳಿಕ ಈ ಬೆಳವಣಿಗೆ ನಡೆದಿತ್ತು ಎಂದು ಉನ್ನತ ಮೂಲಗಳು ತಿಳಿಸಿದ್ದವು.

    ಏನಿದು ಪ್ರಕರಣ?
    2017ರಲ್ಲಿ ನಿಮಿಷಾ ಪ್ರಿಯಾ ಅವರಿಂದ ತಲಾಲ್ ಅಬ್ದೋ ಮೆಹದಿ ಕೊಲೆಯಾಗಿದ್ದರು. ಪ್ರಕರಣ ಸಂಬಂಧ ಪ್ರಿಯಾಳಿಗೆ ಯೆಮನ್ ರಾಷ್ಟ್ರದ ಕೋರ್ಟ್ ಮರಣದಂಡನೆ ಶಿಕ್ಷೆ ವಿಧಿಸಿತ್ತು. ಈ ಸಂಬಂಧ ಕೊಲೆಯಾದ ವ್ಯಕ್ತಿಯ ಸಹೋದರ ಅಬ್ದೆಲ್ಫತ್ತಾ ಮೆಹದಿ ಪ್ರತಿಕ್ರಿಯಿಸಿದ್ದು, ಈ ಅಪರಾಧಕ್ಕೆ ಕ್ಷಮೆ ನೀಡಲು ಸಾಧ್ಯವಿಲ್ಲ ಎಂದು ಪ್ರತಿಪಾದಿಸಿದ್ದರು.ಇದನ್ನೂ  ಓದಿ: ಆಸ್ಪತ್ರೆಯಿಂದ ಡಿಸ್ಚಾರ್ಜ್ ಆದ ವಿಜಯ್ ದೇವರಕೊಂಡ

  • ಯಾರೀ ಕೇರಳ ನರ್ಸ್‌ ನಿಮಿಷಾ ಪ್ರಿಯಾ; ಯೆಮನ್‌ನಲ್ಲಿ ಗಲ್ಲುಶಿಕ್ಷೆಯೇ ಯಾಕೆ – ಏನಿದು ಸ್ಟೋರಿ!?

    ಯಾರೀ ಕೇರಳ ನರ್ಸ್‌ ನಿಮಿಷಾ ಪ್ರಿಯಾ; ಯೆಮನ್‌ನಲ್ಲಿ ಗಲ್ಲುಶಿಕ್ಷೆಯೇ ಯಾಕೆ – ಏನಿದು ಸ್ಟೋರಿ!?

    ಯೆಮನ್‌ನಲ್ಲಿ (Yemen) ಗಲ್ಲುಶಿಕ್ಷೆಗೆ ಗುರಿಯಾಗಿರುವ ಭಾರತೀಯ ನರ್ಸ್ ನಿಮಿಷಾ ಪ್ರಿಯಾ (Nimisha Priya) ಅವರ ಎದುರು ನೇಣಿನ ಕುಣಿಕೆ ತೂಗಾಡುತ್ತಿದೆ. ಈ ಕುಣಿಕೆ ಹಿಂದೆ ಸ್ವಾರಸ್ಯಕರ ಕಥೆಯೇ ಇದೆ. ಜೀವನ ಕಟ್ಟಿಕೊಳ್ಳಲು ದೇಶ ಬಿಟ್ಟು ಮತ್ತೊಂದು ದೇಶಕ್ಕೆ ಹೋಗಿದ್ದಾಕೆಯ ಬದುಕಲ್ಲಿ ದುರಂತವೇ ನಡೆದುಬಿಟ್ಟಿತು. ತನಗೆ ಎದುರಾದ ಸಂಕಷ್ಟದಿಂದ ಪಾರಾಗಲು ಆತುರದ ಕೈಗೆ ಬುದ್ದಿ ಕೊಟ್ಟರು ನಿಮಿಷಾ. ಯೆಮನ್ ದೇಶದ ಪ್ರಜೆಯ ಕೊಲೆ ಕೇಸಲ್ಲಿ ಈಗ ಮರಣದಂಡನೆಯಂತಹ ಘೋರ ಶಿಕ್ಷೆಗೆ ಗುರಿಯಾಗಿದ್ದಾರೆ. ಇಡೀ ಭಾರತ ದೇಶದ ಗಮನ ಈಗ ಆಕೆಯ ಕಡೆ ನೆಟ್ಟಿದೆ. ಪ್ರಿಯಾ ಶಿಕ್ಷೆಯಿಂದ ಪಾರಾಗಲೆಂಬ ಪ್ರಾರ್ಥನೆಗಳು ಕೇಳಿಬಂದಿವೆ. ಭಾರತ ಸರ್ಕಾರ ಕೂಡ ಆಕೆಯನ್ನು ಸುರಕ್ಷಿತವಾಗಿ ದೇಶಕ್ಕೆ ಕರೆತರಲು ಶತಪ್ರಯತ್ನ ನಡೆಸುತ್ತಿದೆ. ಮುಂದೇನಾಗುತ್ತದೋ ಎಂಬುದು ಸದ್ಯದ ಕುತೂಹಲವಾಗಿದೆ.

    ಅಷ್ಟಕ್ಕೂ ಯಾರು ಈ ನಿಮಿಷಾ ಪ್ರಿಯಾ? ಯೆಮನ್‌ನಲ್ಲಿ ಏನಾಯಿತು? ಮರಣದಂಡನೆ ಶಿಕ್ಷೆಗೆ ಆಕೆ ಗುರಿಯಾಗಿದ್ಯಾಕೆ? ಯೆಮನ್ ಕಾನೂನು ಏನು ಹೇಳುತ್ತೆ? ಭಾರತ ಸರ್ಕಾರದ ಪ್ರಯತ್ನಗಳೇನು? ಪ್ರಕರಣ ಈಗ ಯಾವ ಹಂತದಲ್ಲಿದೆ ಎಂಬ ಪ್ರಶ್ನೆಗಳಿಗೆ ವಿವರ ಇಲ್ಲಿದೆ. ಇದನ್ನೂ ಓದಿ: ನಿಮಿಷಾ ಪ್ರಿಯಾರನ್ನ ಸುರಕ್ಷಿತವಾಗಿ ವಾಪಸ್ ಕರೆತರಲು ಶಕ್ತಿಮೀರಿ ಪ್ರಯತ್ನ – ‘ಸುಪ್ರೀಂ’ಗೆ ಕೇಂದ್ರದಿಂದ ಮಾಹಿತಿ

    ನಿಮಿಷಾ ಪ್ರಿಯಾ ಯಾರು?
    ನಿಮಿಷಾ ಪ್ರಿಯಾ ಯೆಮನ್‌ನಲ್ಲಿ ಕೆಲಸ ಮಾಡುತ್ತಿರುವ ಭಾರತೀಯ ನರ್ಸ್. ಯೆಮನ್ ನಾಗರಿಕ ತಲಾಲ್ ಅಬ್ದೋ ಮೆಹದಿ ಕೊಲೆ ಪ್ರಕರಣದಲ್ಲಿ ಶಿಕ್ಷೆಗೊಳಗಾಗಿದ್ದಾರೆ. ಕೇರಳದ ಪಾಲಕ್ಕಾಡ್ ಜಿಲ್ಲೆಯವರಾದ ನಿಮಿಷಾ, 2017 ರಲ್ಲಿ ಕೊಲೆ ಆರೋಪದಲ್ಲಿ ಗಲ್ಲು ಶಿಕ್ಷೆಗೆ ಗುರಿಯಾಗಿದ್ದಾರೆ. ಅದಕ್ಕೂ ಮುನ್ನ ಅವರು ಹಲವಾರು ವರ್ಷಗಳ ಕಾಲ ಆ ದೇಶದಲ್ಲಿ ನರ್ಸ್ ಆಗಿ ಕೆಲಸ ಮಾಡಿದ್ದರು.

    ಯೆಮನ್ ಪ್ರಜೆಯ ಕೊಲೆ ಏಕಾಯ್ತು?
    ತಲಾಲ್ ಅವರ ಬೆಂಬಲದೊಂದಿಗೆ, ನಿಮಿಷಾ 2015ರ ಏಪ್ರಿಲ್‌ನಲ್ಲಿ ವಿದೇಶದಲ್ಲಿ ತನ್ನ ಕನಸಿನ ಚಿಕಿತ್ಸಾಲಯವನ್ನು ತೆರೆದರು. ಅಲ್ಲಿ ಅವರು ಮಾನಸಿಕ, ದೈಹಿಕ ಮತ್ತು ಆರ್ಥಿಕ ಕಿರುಕುಳವನ್ನು ಅನುಭವಿಸಿದ್ದಾರೆಂದು ಆರೋಪಿಸಲಾಗಿದೆ. ತಲಾಲ್ ಕ್ಲಿನಿಕ್‌ನಲ್ಲಿ ಶೇ.33 ರಷ್ಟು ಪಾಲನ್ನು ಪಡೆಯಲು ಸುಳ್ಳು ದಾಖಲೆ ಸೃಷ್ಟಿಸಿದ್ದ. ಆಕೆಯ ಪಾಸ್‌ಪೋರ್ಟ್ ಅನ್ನು ವಶಪಡಿಸಿಕೊಂಡಿದ್ದ. ಕಾನೂನುಬದ್ಧವಾಗಿ ಮದುವೆಯಾಗಿದ್ದಾವೆಂದು ಸೂಚಿಸಲು ವಿವಾಹ ಪ್ರಮಾಣಪತ್ರವನ್ನು ಸಹ ನಕಲಿ ಮಾಡಿದ್ದ. ಮಹ್ದಿ ತನ್ನ ಮೇಲೆ ದೈಹಿಕ ಮತ್ತು ಲೈಂಗಿಕ ದೌರ್ಜನ್ಯ ಎಸಗಿದ್ದಾರೆ ಎಂದು ನಿಮಿಷಾ ಆರೋಪಿಸಿದ್ದರು.

    2017ರ ಜುಲೈನಲ್ಲಿ ನಿಮಿಷಾ ಜೈಲಿಗೆ ಭೇಟಿ ನೀಡಿದಾಗ, ತನ್ನ ಪಾಸ್‌ಪೋರ್ಟ್ ಅನ್ನು ಮರಳಿ ಪಡೆಯಲು ಮಹ್ದಿಗೆ ನಿದ್ರಾಜನಕ ಇನ್‌ಜೆಕ್ಷನ್ ಚುಚ್ಚಿದರು. ಪ್ರಮಾಣ ಅತಿಯಾದ್ದರಿಂದ ವ್ಯಕ್ತಿ ಮೃತಪಟ್ಟಿದ್ದ. ಮತ್ತೊಬ್ಬ ನರ್ಸ್ ಸಹಾಯ ಪಡೆದು ಮೃತದೇಹ ವಿಲೇವಾರಿಗೆ ಮುಂದಾಗಿದ್ದರು. ದೇಹವನ್ನು ಕತ್ತರಿಸಿ ನೀರಿನ ಟ್ಯಾಂಕ್‌ನಲ್ಲಿ ಭಾಗಗಳನ್ನು ವಿಲೇವಾರಿ ಮಾಡುವಂತೆ ಸೂಚಿಸಿದ್ದ. ಇಬ್ಬರೂ ತಲೆಮರೆಸಿಕೊಂಡಿದ್ದರು. ಕೊನೆಗೆ ಅವರನ್ನು ಪೊಲೀಸರು ಬಂಧಿಸಿದರು.

    ಯೆಮನ್ ನ್ಯಾಯಾಲಯ ತೀರ್ಪೇನು?
    ಕೊಲೆ ಪ್ರಕರಣದಲ್ಲಿ ಪ್ರಿಯಾಳನ್ನು ಬಂಧಿಸಿ ಯೆಮನ್‌ನಲ್ಲಿ ವಿಚಾರಣೆ ನಡೆಸಲಾಯಿತು. 2020 ರಲ್ಲಿ, ಸ್ಥಳೀಯ ನ್ಯಾಯಾಲಯವು ಆಕೆಗೆ ಒಮ್ಮೆ ಅಲ್ಲ, ಮೂರು ಬಾರಿ ಮರಣದಂಡನೆ ವಿಧಿಸಿತು. ನಂತರ ಮೇಲ್ಮನವಿ ನ್ಯಾಯಾಲಯವು ಒಂದು ಶಿಕ್ಷೆಯನ್ನು ರದ್ದುಗೊಳಿಸಿತು. ಆದಾಗ್ಯೂ, ದೇಶದ ಸುಪ್ರೀಂ ಕೋರ್ಟ್ ಉಳಿದ ಎರಡು ಶಿಕ್ಷೆಯನ್ನು ಎತ್ತಿಹಿಡಿಯಿತು. ಯೆಮನ್ ಅಧ್ಯಕ್ಷ ರಶಾದ್ ಅಲ್-ಅಲಿಮಿ, ಕಳೆದ ವರ್ಷ ಆಕೆಗೆ ಮರಣದಂಡನೆಯನ್ನು ಅನುಮೋದಿಸಿದರು. ಪ್ರಿಯಾ ಪ್ರಸ್ತುತ ಸನಾ ಕೇಂದ್ರ ಜೈಲಿನಲ್ಲಿದ್ದಾರೆ. ಈ ವರ್ಷದ ಜನವರಿಯಲ್ಲಿ, ಹೌತಿ ನಿಯಂತ್ರಿತ ಸುಪ್ರೀಂ ಪೊಲಿಟಿಕಲ್ ಕೌನ್ಸಿಲ್‌ನ ಅಧ್ಯಕ್ಷ ಮಹ್ದಿ ಅಲ್-ಮಶಾತ್ ಅವರು ಮರಣದಂಡನೆಯನ್ನು ಅನುಮೋದಿಸಿದರು.

    ಅಂದಿನಿಂದ ಆದೇಶವು ಪ್ರಾಸಿಕ್ಯೂಟರ್ ಬಳಿಯೇ ಇತ್ತು. ಪ್ರಕರಣ ಮತ್ತಷ್ಟು ಸೂಕ್ಷ್ಮತೆ ಪಡೆದುಕೊಂಡಿದೆ. ಭಾರತೀಯ ಅಧಿಕಾರಿಗಳು ಅವರೊಂದಿಗೆ ಮತ್ತು ಯೆಮನ್‌ನಲ್ಲಿರುವ ಪ್ರಾಸಿಕ್ಯೂಟರ್ ಕಚೇರಿಯೊಂದಿಗೆ ನಿಯಮಿತವಾಗಿ ಸಂಪರ್ಕದಲ್ಲಿದ್ದಾರೆ. ಭಾರತದಲ್ಲಿರುವ ಮುಸ್ಲಿಂ ಧರ್ಮಗುರುಗಳು ಸಹ ಯೆಮನ್ ಮುಖಂಡರನ್ನು ಸಂಪರ್ಕಿಸಿ ಶಿಕ್ಷೆ ರದ್ದುಗೊಳಿಸಲು ಪ್ರಯತ್ನಿಸುತ್ತಿದ್ದಾರೆ. ಸ್ಥಳೀಯ ಅಧಿಕಾರಿಗಳು ಪ್ರಿಯಾರ ಮರಣದಂಡನೆಯನ್ನು ಮುಂದೂಡಿದರು. ಇದನ್ನೂ ಓದಿ: ಕೇರಳ ನರ್ಸ್ ನಿಮಿಷಾ ಪ್ರಿಯಾಗೆ ಮರಣದಂಡನೆ ಮುಂದೂಡಿಕೆ

    ನಿಮಿಷಾಳ ಕುಟುಂಬ ಗೋಳಾಟ
    ಕೊಚ್ಚಿಯಲ್ಲಿ ಮನೆಕೆಲಸ ಮಾಡುತ್ತಿರುವ ನಿಮಿಷಾಳ ತಾಯಿ ಪ್ರೇಮಾ ಕುಮಾರಿ, ಸಂಘರ್ಷಪೀಡಿತ ಯೆಮನ್‌ಗೆ ಪ್ರಯಾಣ ನಿಷೇಧದಿಂದ ವಿನಾಯಿತಿ ಪಡೆಯಲು ಕಳೆದ ವರ್ಷ ಡಿಸೆಂಬರ್‌ನಲ್ಲಿ ದೆಹಲಿ ಹೈಕೋರ್ಟ್ ಅನ್ನು ಸಂಪರ್ಕಿಸಿದರು. ಮಹ್ದಿ ಅವರ ಕುಟುಂಬದೊಂದಿಗೆ ಮನವಿ ಮಾಡಲು ಅವರು 2024 ರಲ್ಲಿ ಅಂತಿಮ ಪ್ರಯತ್ನವಾಗಿ ಯೆಮನ್‌ಗೆ ಪ್ರಯಾಣ ಬೆಳೆಸಿದರು. ಯೆಮನ್‌ನ ರಾಜಧಾನಿ ಸನಾಗೆ ತೆರಳಿದ್ದು, ಕಳೆದ ವರ್ಷದಿಂದ ಶಿಬಿರದಲ್ಲಿದ್ದಾರೆ. ಜೈಲಿನಲ್ಲಿ ಮಗಳನ್ನು ಭೇಟಿಯಾಗಿದ್ದಾರೆ. ಮಗಳನ್ನು ಶಿಕ್ಷೆಯಿಂದ ಪಾರು ಮಾಡಲು ಪ್ರಯತ್ನ ನಡೆಸುತ್ತಿದ್ದಾರೆ.

    ಮರಣದಂಡನೆಗೆ ಭಾರತ ಸರ್ಕಾರ ಪ್ರತಿಕ್ರಿಯೆ ಏನು?
    ಕಳೆದ ವರ್ಷ ಯೆಮನ್ ಅಧ್ಯಕ್ಷರು ಮರಣದಂಡನೆಯನ್ನು ಅನುಮೋದಿಸಿದಾಗ, ದೆಹಲಿಯಲ್ಲಿರುವ ವಿದೇಶಾಂಗ ಸಚಿವಾಲಯವು ಆಕೆ ಮತ್ತು ಆಕೆಯ ಕುಟುಂಬಕ್ಕೆ ಸಾಧ್ಯವಿರುವ ಎಲ್ಲ ಸಹಾಯವನ್ನು ನೀಡುವುದಾಗಿ ಹೇಳಿತ್ತು. ಭಾರತದ ಸುಪ್ರೀಂ ಕೋರ್ಟ್ ಕಳೆದ ವಾರ ಜುಲೈ 14 ರಂದು ನಿಮಿಷಾ ಪ್ರಕರಣವನ್ನು ವಿಚಾರಣೆ ನಡೆಸಲು ಒಪ್ಪಿಕೊಂಡಿತು. ಪ್ರಕರಣಕ್ಕೆ ಸಂಬಂಧಿಸಿದಂತೆ ತಾನು ತೆಗೆದುಕೊಂಡಿರಬಹುದಾದ ಯಾವುದೇ ಕ್ರಮಗಳ ಬಗ್ಗೆ ಕೇಂದ್ರಕ್ಕೆ ತಿಳಿಸುವಂತೆ ಕೇಳಿತು. ಭಾರತ ಸರ್ಕಾರವು ಇತರ ಪಕ್ಷದೊಂದಿಗೆ ಪರಸ್ಪರ ಒಪ್ಪಬಹುದಾದ ಪರಿಹಾರವನ್ನು ತಲುಪಿಸಲು ಕುಟುಂಬಕ್ಕೆ ಹೆಚ್ಚಿನ ಸಮಯವನ್ನು ಕೋರಲು ಸಂಘಟಿತ ಪ್ರಯತ್ನಗಳನ್ನು ಮಾಡಿತು. ಇದು ಅಂತಿಮವಾಗಿ ಮರಣದಂಡನೆಯನ್ನು ಮುಂದೂಡಲು ಕಾರಣವಾಯಿತು.

    ಸುಪ್ರೀಂ ಕೋರ್ಟ್‌ಗೆ ಕೇಂದ್ರ ಏನು ಹೇಳಿದೆ?
    ಕೇರಳ ನರ್ಸ್ ಉಳಿಸಿಕೊಳ್ಳಲು ಕೇಂದ್ರ ಸರ್ಕಾರ ಶತಪ್ರಯತ್ನ ಮಾಡಿದೆ. ಸರ್ಕಾರದ ಪರವಾಗಿ ಅಟಾರ್ನಿ ಜನರಲ್ ಆರ್.ವೆಂಕಟರಮಣಿ ವಾದ ಮಂಡಿಸಿ, ತನ್ನ ಪ್ರಜೆಗಳನ್ನು ರಕ್ಷಿಸಲು ಸರ್ಕಾರ ಬದ್ಧವಾಗಿದ್ದು, ನಿಮಿಷಾ ಪ್ರಿಯಾ ವಿಚಾರದಲ್ಲಿ ಏನೆಲ್ಲಾ ಮಾಡಬಹುದೋ ಅದನ್ನೆಲ್ಲ ಮಾಡುತ್ತಿದೆ. ಸದ್ಯದ ಮಟ್ಟಿಗೆ ಗಲ್ಲು ಶಿಕ್ಷೆ ಜಾರಿಯನ್ನು ಅಮಾನತಿನಲ್ಲಿಡಲು ಸಾಧ್ಯವಾಗುವಂತಹ ದಾರಿಯನ್ನು ಪತ್ತೆ ಮಾಡುವಂತೆ ಆ ಪ್ರದೇಶದ ಪಬ್ಲಿಕ್ ಪ್ರಾಸಿಕ್ಯೂಟರ್‌ಗೆ ಸರ್ಕಾರ ಪತ್ತೆ ಬರೆದಿತ್ತು. ಯೆಮನ್‌ನಲ್ಲಿ ಹೆಚ್ಚು ಪ್ರಭಾವ ಹೊಂದಿರುವ ಕೆಲವು ಶೇಖ್‌ಗಳ ಜೊತೆಗೆ ಮಾತುಕತೆಯನ್ನೂ ನಡೆಸಿದೆ ಎಂದು ಮಾಹಿತಿ ನೀಡಿದ್ದಾರೆ.

    ಕೇರಳ ಸರ್ಕಾರ ಏನು ಹೇಳುತ್ತೆ?
    ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್, ಪ್ರಧಾನಿ ನರೇಂದ್ರ ಮೋದಿಯವರಿಗೆ ಪ್ರಕರಣದಲ್ಲಿ ಮಧ್ಯಪ್ರವೇಶಿಸುವಂತೆ ಮನವಿ ಮಾಡಿದ್ದಾರೆ. ಪ್ರಧಾನಿ ಮೋದಿಯವರಿಗೆ ಪತ್ರದಲ್ಲಿ ವಿಜಯನ್ ಹೀಗೆ ಬರೆದಿದ್ದಾರೆ, ‘ಕೇರಳ ಸರ್ಕಾರವು ಪ್ರಿಯಾರ ಸುರಕ್ಷಿತ ವಾಪಸಾತಿಗಾಗಿ ಶ್ರಮಿಸುತ್ತಿರುವ ಎಲ್ಲರೊಂದಿಗೂ ದೃಢವಾಗಿ ನಿಲ್ಲುತ್ತದೆ. ಈ ಪ್ರಕರಣವು ಸಹಾನುಭೂತಿಗೆ ಅರ್ಹವಾಗಿದೆ’ ಎಂದು ಪತ್ರದಲ್ಲಿ ಉಲ್ಲೇಖಿಸಲಾಗಿದೆ. ಇದನ್ನೂ ಓದಿ: ಕೇರಳ ನರ್ಸ್‌ ತಪ್ಪಿಗೆ ಕ್ಷಮೆಯಿಲ್ಲ, ಗಲ್ಲಿಗೇರಿಸಲೇಬೇಕು: ಕೊಲೆಯಾದ ಯೆಮನ್‌ ವ್ಯಕ್ತಿ ಸಹೋದರ ಪ್ರತಿಕ್ರಿಯೆ

    ಸಮುದಾಯದ ಮುಖಂಡರು ತೆಗೆದುಕೊಂಡ ಕ್ರಮಗಳೇನು?
    ನಿಮಿಷಾ ಪ್ರಿಯಾರ ಜೀವ ಉಳಿಸಲು ಯೆಮನ್‌ನಲ್ಲಿ ವಿವಿಧ ಹಂತಗಳಲ್ಲಿ ಚರ್ಚೆಗಳು ನಡೆಯುತ್ತಿವೆ. ಆಕೆ ಜೀವ ಉಳಿಸುವ ಚರ್ಚೆಗಳು ನಿರ್ಣಾಯಕ ಹಂತದಲ್ಲಿವೆ. ಸಕಾರಾತ್ಮಕ ಫಲಿತಾಂಶದ ಬಗ್ಗೆ ನಮಗೆ ಭರವಸೆ ಇದೆ. ಭಾರತೀಯ ಕಾರ್ಯಾಚರಣೆಯೊಂದಿಗೆ ಸಂಬAಧ ಹೊಂದಿರುವ ಇಬ್ಬರು ಯೆಮನ್ ನಾಗರಿಕರು ಮತ್ತು ಸಮಾಲೋಚಕ ಸ್ಯಾಮ್ಯುಯೆಲ್ ಜೆರೋಮ್ ಭಾಸ್ಕರನ್ ಚರ್ಚೆಗಳಲ್ಲಿ ಭಾಗಿಯಾಗಿದ್ದಾರೆ ಎಂದು ಮೂಲವೊಂದು ತಿಳಿಸಿದೆ.

    ಮರಣದಂಡನೆಯನ್ನು ಮುಂದೂಡಿದ ಬಗ್ಗೆ ಯೆಮನ್ ಅಧಿಕಾರಿಗಳೊಂದಿಗೆ ಚರ್ಚೆಗಳನ್ನು ನಡೆಸುತ್ತಿದ್ದ ಸಂಧಾನಕಾರ ಭಾಸ್ಕರನ್, ‘ಯೆಮನ್ ಸರ್ಕಾರ, ಪ್ರಧಾನಿ ನರೇಂದ್ರ ಮೋದಿ, ಕೇಂದ್ರ ಗೃಹ ಸಚಿವ ಅಮಿತ್ ಶಾ ಮತ್ತು ವಿದೇಶಾಂಗ ಸಚಿವಾಲಯಕ್ಕೆ ನಾನು ಧನ್ಯವಾದ ಹೇಳುತ್ತೇನೆ’ ಎಂದು ತಿಳಿಸಿದ್ದಾರೆ. ಪ್ರಮುಖ ಮುಸ್ಲಿಂ ನಾಯಕ ಮತ್ತು ಅಖಿಲ ಭಾರತ ಸುನ್ನಿ ಜಮಿಯ್ಯತುಲ್ ಉಲಮಾದ ಪ್ರಧಾನ ಕಾರ್ಯದರ್ಶಿ ಕಾಂತಪುರಂ ಎ.ಪಿ ಅಬೂಬಕರ್ ಮುಸ್ಲಿಯಾರ್ ಕೂಡ ನಿಮಿಷಾರ ಬಿಡುಗಡೆಗೆ ಪ್ರಯತ್ನಿಸಲು ಮಧ್ಯಸ್ಥಿಕೆ ವಹಿಸಿದ್ದಾರೆ. ತಲಾಲ್ ಕುಟುಂಬವು ಮಹಿಳೆಗೆ ಕ್ಷಮೆ ನೀಡುವುದನ್ನು ಖಚಿತಪಡಿಸಿಕೊಳ್ಳಲು ಯೆಮನ್‌ನ ಪ್ರಮುಖ ಸೂಫಿ ವಿದ್ವಾಂಸರೊಬ್ಬರು ತಲಾಲ್ ಅವರ ಕುಟುಂಬ ಮತ್ತು ಸ್ಥಳೀಯ ನಾಯಕತ್ವದೊಂದಿಗೆ ಚರ್ಚೆ ನಡೆಸಬೇಕೆಂದು ಮುಸ್ಲಿಯಾರ್ ಒತ್ತಾಯಿಸಿದ್ದಾರೆ.

    ಸೇವ್ ನಿಮಿಷಾ ಪ್ರಿಯಾ ಇಂಟರ್ನ್ಯಾಷನಲ್ ಆಕ್ಷನ್ ಕೌನ್ಸಿಲ್ ಎಂದರೇನು?
    2020 ರಲ್ಲಿ ರಚಿಸಲಾದ ಗ್ರೂಪ್ ಇದು. ಸೇವ್ ನಿಮಿಷಾ ಪ್ರಿಯಾ ಇಂಟರ್ನ್ಯಾಷನಲ್ ಆಕ್ಷನ್ ಕೌನ್ಸಿಲ್, ನರ್ಸ್ ಜೀವ ಉಳಿಸುವ ಪ್ರಯತ್ನಗಳನ್ನು ಮುನ್ನಡೆಸಿದೆ. ದೇಣಿಗೆ ಮತ್ತು ಕ್ರೌಡ್‌ಫಂಡಿಂಗ್ ಮೂಲಕ, ಕೌನ್ಸಿಲ್ 1 ಮಿಲಿಯನ್ ಡಾಲರ್ ಸಂಗ್ರಹಿಸಿದೆ. ಮೃತ ವ್ಯಕ್ತಿಯ ಕುಟುಂಬದೊಂದಿಗೆ ಮಾತುಕತೆ ನಡೆಸಲು ಯೆಮನ್ ಮೂಲದ ಸಾಮಾಜಿಕ ಕಾರ್ಯಕರ್ತ ಸ್ಯಾಮ್ಯುಯೆಲ್ ಜೆರೋಮ್ ಭಾಸ್ಕರನ್ ಅವರನ್ನು ನಾಮನಿರ್ದೇಶನ ಮಾಡಿದೆ. ಇದನ್ನೂ ಓದಿ: ಕೇರಳದ ನರ್ಸ್‌ಗೆ ಜು.16ರಂದು ಯೆಮೆನ್‌ನಲ್ಲಿ ನೇಣು; ಮರಣದಂಡನೆ ತಡೆಯಲು ಸಾಧ್ಯವಿಲ್ಲ – ಸುಪ್ರೀಂಗೆ ಕೇಂದ್ರ ಮಾಹಿತಿ

    ಕಿಸಾಸ್‌ ಕಾನೂನು ಏನು ಹೇಳುತ್ತೆ?
    ಯೆಮನ್‌ ದೇಶದಲ್ಲಿ ಇಸ್ಲಾಮಿಕ್‌ ಕಾನೂನು ಇದೆ. ಕಿಸಾಸ್‌ ಎಂದರೆ, ಕೊಲೆಯಾದ ವ್ಯಕ್ತಿಯನ್ನು ಅಪರಾಧಿ ಸ್ಥಾನದಲ್ಲಿರುವವರು ಯಾವ ರೀತಿ ಕೊಂದಿದ್ದಾರೋ ಅದೇ ರೀತಿಯ ಶಿಕ್ಷೆಯನ್ನು ನೀಡಬೇಕೆಂದು ಹೇಳುತ್ತದೆ. ಸಾಮಾನ್ಯವಾಗಿ ಇದು ಮರಣದಂಡನೆಯಾಗಿರುತ್ತದೆ.

    ಶಿಕ್ಷೆ ತಪ್ಪಿಸಲು ಇರೋದೊಂದೇ ದಾರಿ
    ಪ್ರಿಯಾ ಅವರು ಯೆಮನ್‌ನಲ್ಲಿದ್ದು ಸಾಮಾಜಿಕ ಕಾರ್ಯಕರ್ತರೊಬ್ಬರೊಂದಿಗೆ ಕ್ಷಮಾ ಪರಿಹಾರ ಮೊತ್ತದ (ಬ್ಲಡ್ ಮನಿ) ವಿಚಾರವಾಗಿ ಮೃತಪಟ್ಟ ವ್ಯಕ್ತಿಯ ಕುಟುಂಬದೊಂದಿಗೆ ಮಾತುಕತೆ ನಡೆಸುತ್ತಿದ್ದಾರೆ. ಆತನ ಕುಟುಂಬವು ಕ್ಷಮಾ ಪರಿಹಾರ ಮೊತ್ತವನ್ನು ಸ್ವೀಕರಿಸಲು ಒಪ್ಪಿದರೆ ಮಾತ್ರ ಮರಣ ದಂಡನೆಯನ್ನು ತಪ್ಪಿಸಲು ಸಾಧ್ಯ.

  • ನಿಮಿಷಾ ಪ್ರಿಯಾರನ್ನ ಸುರಕ್ಷಿತವಾಗಿ ವಾಪಸ್ ಕರೆತರಲು ಶಕ್ತಿಮೀರಿ ಪ್ರಯತ್ನ – ‘ಸುಪ್ರೀಂ’ಗೆ ಕೇಂದ್ರದಿಂದ ಮಾಹಿತಿ

    ನಿಮಿಷಾ ಪ್ರಿಯಾರನ್ನ ಸುರಕ್ಷಿತವಾಗಿ ವಾಪಸ್ ಕರೆತರಲು ಶಕ್ತಿಮೀರಿ ಪ್ರಯತ್ನ – ‘ಸುಪ್ರೀಂ’ಗೆ ಕೇಂದ್ರದಿಂದ ಮಾಹಿತಿ

    ನವದೆಹಲಿ: 2017 ರಲ್ಲಿ ಯೆಮೆನ್ (Yemen) ನಾಗರಿಕನ ಕೊಲೆ ಪ್ರಕರಣದಲ್ಲಿ ಮರಣದಂಡನೆ ಶಿಕ್ಷೆಗೆ ಒಳಗಾಗಿರುವ ಕೇರಳದ ನರ್ಸ್ (Kerala Nurse) ನಿಮಿಷಾ ಪ್ರಿಯಾ (Nimisha Priya) ಅವರನ್ನು ಸುರಕ್ಷಿತವಾಗಿ ವಾಪಸ್ ಕರೆತರಲು ಭಾರತ ಸರ್ಕಾರ ಶಕ್ತಿಮೀರಿ ಪ್ರಯತ್ನಿಸುತ್ತಿದೆ ಎಂದು ಕೇಂದ್ರ ಸರ್ಕಾರ ಸುಪ್ರೀಂ ಕೋರ್ಟ್‌ಗೆ ತಿಳಿಸಿದೆ. ಆದರೆ, ಈ ಸಂದರ್ಭದಲ್ಲಿ ಖಾಸಗಿ ವ್ಯಕ್ತಿಗಳು ಅಥವಾ ಸಂಸ್ಥೆಗಳಿಂದ ನಡೆಯುವ ಸಮಾನಾಂತರ ಮಾತುಕತೆಗಳು ಸೂಕ್ಷ್ಮ ರಾಜತಾಂತ್ರಿಕ ಪ್ರಯತ್ನಗಳಿಗೆ ಅಡಚಣೆ ಉಂಟು ಮಾಡಬಹುದು ಎಂದು ಕಳವಳ ವ್ಯಕ್ತಪಡಿಸಿದ್ದಾರೆ.

    ನ್ಯಾ. ವಿಕ್ರಮ್ ನಾಥ್ ಮತ್ತು ನ್ಯಾ. ಸಂದೀಪ್ ಮೆಹ್ತಾ ಅವರನ್ನೊಳಗೊಂಡ ಪೀಠದ ಮುಂದೆ ಕೇಂದ್ರ ಸರ್ಕಾರದ ಪರ ಅಟಾರ್ನಿ ಜನರಲ್ ಆರ್. ವೆಂಕಟರಾಮನಿ ವಾದ ಮಂಡಿಸಿದರು. ನಿಮಿಷಾ ಪ್ರಿಯಾ ಸುರಕ್ಷಿತವಾಗಿ ವಾಪಸ್ ಬರಬೇಕೆಂದು ನಾವು ಆಶಿಸುತ್ತೇವೆ ಎಂದು ತಿಳಿಸಿದರು. ಇದನ್ನೂ ಓದಿ: ಕೇರಳ ನರ್ಸ್ ನಿಮಿಷಾ ಪ್ರಿಯಾಗೆ ಮರಣದಂಡನೆ ಮುಂದೂಡಿಕೆ

    ನಿಮಿಷಾ ಪ್ರಿಯಾ ಅವರಿಗೆ ಸಹಾಯ ಮಾಡಲು ಪ್ರಯತ್ನಿಸುತ್ತಿರುವ ಸೇವ್ ನಿಮಿಷಾ ಪ್ರಿಯಾ ಇಂಟರ್‌ನ್ಯಾಷನಲ್ ಆಕ್ಷನ್ ಕೌನ್ಸಿಲ್ ಎಂಬ ಸಂಸ್ಥೆಯು ಯೆಮೆನ್‌ಗೆ ತೆರಳಲು ಅನುಮತಿ ಕೋರಿತ್ತು. ಆದರೆ, ಕೋರ್ಟ್ ಈ ಅನುಮತಿಯನ್ನು ನೀಡಲು ನಿರಾಕರಿಸಿತು. ಸಂಸ್ಥೆಯು ನೇರವಾಗಿ ಸರ್ಕಾರವನ್ನು ಸಂಪರ್ಕಿಸಿ ಔಪಚಾರಿಕವಾಗಿ ಮನವಿ ಸಲ್ಲಿಸಬೇಕೆಂದು ಸೂಚಿಸಿತು. ಈ ಮನವಿಯನ್ನು ಸರ್ಕಾರವು ತನ್ನದೇ ಆದ ಗುಣಮಟ್ಟದ ಆಧಾರದ ಮೇಲೆ ಪರಿಗಣಿಸಬೇಕೆಂದು ಕೋರ್ಟ್ ಆದೇಶಿಸಿದೆ. ಈ ಪ್ರಕರಣದ ಮುಂದಿನ ವಿಚಾರಣೆಯನ್ನು ಆಗಸ್ಟ್ 14ಕ್ಕೆ ಮುಂದೂಡಲಾಗಿದೆ.

    ಈ ಹಿಂದೆ ನಿಮಿಷಾ ಪ್ರಿಯಾ ಅವರಿಗೆ ಜುಲೈ 16ಕ್ಕೆ ಗಲ್ಲು ಶಿಕ್ಷೆಯನ್ನು ನಿಗದಿಪಡಿಸಲಾಗಿತ್ತು. ಸದ್ಯ ಅವರು ಯೆಮೆನ್‌ನ ರಾಜಧಾನಿ ಸನಾದಲ್ಲಿರುವ ಜೈಲಿನಲ್ಲಿದ್ದಾರೆ. ಕೇರಳದ ಪಾಲಕ್ಕಾಡ್ ಜಿಲ್ಲೆಯವರಾದ ನರ್ಸ್ ಪ್ರಿಯಾ, 2017ರಲ್ಲಿ ತನ್ನ ಯೆಮೆನ್ ಪ್ರಜೆಯನ್ನು ಕೊಲೆ ಮಾಡಿದ ಆರೋಪದಲ್ಲಿ ಶಿಕ್ಷೆಗೊಳಗಾಗಿದ್ದರು. 2020ರಲ್ಲಿ ಪ್ರಿಯಾ ಅವರಿಗೆ ಮರಣದಂಡನೆ ಶಿಕ್ಷೆ ವಿಧಿಸಲಾಯಿತು. ಆಕೆಯ ಅಂತಿಮ ಮೇಲ್ಮನವಿಯನ್ನು 2023 ರಲ್ಲಿ ತಿರಸ್ಕರಿಸಲಾಯಿತು. ಇದನ್ನೂ ಓದಿ: ಇದು ಸೂಕ್ಷ್ಮ ವಿಷಯ, ಭಾರತ ಅಗತ್ಯವಿರುವ ಎಲ್ಲಾ ಸಹಾಯ ನೀಡುತ್ತಿದೆ: ಕೇರಳ ನರ್ಸ್‌ ಪ್ರಕರಣದ ಬಗ್ಗೆ MEA ಪ್ರತಿಕ್ರಿಯೆ

  • ಇದು ಸೂಕ್ಷ್ಮ ವಿಷಯ, ಭಾರತ ಅಗತ್ಯವಿರುವ ಎಲ್ಲಾ ಸಹಾಯ ನೀಡುತ್ತಿದೆ: ಕೇರಳ ನರ್ಸ್‌ ಪ್ರಕರಣದ ಬಗ್ಗೆ MEA ಪ್ರತಿಕ್ರಿಯೆ

    ಇದು ಸೂಕ್ಷ್ಮ ವಿಷಯ, ಭಾರತ ಅಗತ್ಯವಿರುವ ಎಲ್ಲಾ ಸಹಾಯ ನೀಡುತ್ತಿದೆ: ಕೇರಳ ನರ್ಸ್‌ ಪ್ರಕರಣದ ಬಗ್ಗೆ MEA ಪ್ರತಿಕ್ರಿಯೆ

    ನವದೆಹಲಿ: ಯೆಮೆನ್‌ನಲ್ಲಿ ಮರಣ ದಂಡನೆಗೆ ಗುರಿಯಾಗಿರುವ ಕೇರಳದ ನರ್ಸ್‌ ನಿಮಿಷಾ ಪ್ರಿಯಾ ವಿಚಾರದಲ್ಲಿ ವಿದೇಶಾಂಗ ಸಚಿವಾಲಯ (Ministry of External Affairs) ಮಹತ್ವದ ಹೇಳಿಕೆ ನೀಡಿದೆ. ಇದು ಸೂಕ್ಷ್ಮ ವಿಷಯವಾಗಿದ್ದು, ಭಾರತ ಸರ್ಕಾರವು ಈ ಪ್ರಕರಣದಲ್ಲಿ ಸಾಧ್ಯವಿರುವ ಎಲ್ಲ ಸಹಾಯವನ್ನು ನೀಡುತ್ತಿದೆ ಎಂದು ಸಚಿವಾಲಯ ಹೇಳಿದೆ.

    2017 ರಲ್ಲಿ ಕೇರಳದ ನರ್ಸ್ (Kerala Nurse) ನಿಮಿಷಾ ಪ್ರಿಯಾ ಅವರಿಂದ ತಲಾಲ್ ಅಬ್ದೋ ಮೆಹದಿ ಕೊಲೆಯಾಗಿದ್ದರು. ಪ್ರಕರಣ ಸಂಬಂಧ ಪ್ರಿಯಾಳಿಗೆ ಯೆಮನ್‌ ರಾಷ್ಟ್ರದ ಕೋರ್ಟ್‌ ಮರಣದಂಡನೆ ಶಿಕ್ಷೆ ವಿಧಿಸಿದೆ. ಈ ಸಂಬಂಧ ಕೊಲೆಯಾದ ವ್ಯಕ್ತಿಯ ಸಹೋದರ ಅಬ್ದೆಲ್ಫತ್ತಾ ಮೆಹದಿ ಪ್ರತಿಕ್ರಿಯಿಸಿದ್ದು, ಈ ಅಪರಾಧಕ್ಕೆ ಕ್ಷಮೆ ನೀಡಲು ಸಾಧ್ಯವಿಲ್ಲ ಎಂದು ಪ್ರತಿಪಾದಿಸಿದ್ದಾರೆ. ಈ ಬೆಳವಣಿಗೆಯ ಮರುದಿನವೇ ವಿದೇಶಾಂಗ ಸಚಿವಾಲಯದ ಹೇಳಿಕೆ ಹೊರಬಂದಿದೆ. ಇದನ್ನೂ ಓದಿ: ಇರಾಕ್‌ನ ಶಾಪಿಂಗ್ ಮಾಲ್‌ನಲ್ಲಿ ಬೆಂಕಿ ಅವಘಡ – 50 ಮಂದಿ ಸಾವು

    ಇದು ಅತ್ಯಂತ ಸೂಕ್ಷ್ಮ ವಿಷಯ. ಭಾರತ ಸರ್ಕಾರವು ಈ ಪ್ರಕರಣದಲ್ಲಿ ಸಾಧ್ಯವಿರುವ ಎಲ್ಲಾ ಸಹಾಯವನ್ನು ನೀಡುತ್ತಿದೆ. ಕಾನೂನು ನೆರಚು ನೀಡಿದ್ದೇವೆ, ಕುಟುಂಬಕ್ಕೆ ಸಹಾಯ ಮಾಡಲು ವಕೀಲರನ್ನ ನೇಮಿಸಿದ್ದೇವೆ. ನಿಯಮಿತ ಕಾನ್ಸುಲರ್ ಭೇಟಿ ಮಾಡು ಏರ್ಪಾಡು ಮಾಡಿದ್ದೇವೆ. ಸಮಸ್ಯೆಯನ್ನು ಬಗೆಹರಿಸಲು ಸ್ಥಳೀಯ ಅಧಿಕಾರಿಗಳು ಮತ್ತು ಕುಟುಂಬ ಸದಸ್ಯರೊಂದಿಗೆ ನಿರಂತರ ಸಂಪರ್ಕದಲ್ಲಿದ್ದೇವೆ ಎಂದು ಪ್ರಕಟಣೆಯಲ್ಲಿ ವಿದೇಶಾಂಗ ವ್ಯವಹಾರಗಳ ಸಚಿವಾಲಯದ ವಕ್ತಾರ ರಣಧೀರ್ ಜೈಸ್ವಾಲ್ ತಿಳಿಸಿದ್ದಾರೆ. ಇದನ್ನೂ ಓದಿ: ಕೇರಳ ನರ್ಸ್‌ ತಪ್ಪಿಗೆ ಕ್ಷಮೆಯಿಲ್ಲ, ಗಲ್ಲಿಗೇರಿಸಲೇಬೇಕು: ಕೊಲೆಯಾದ ಯೆಮನ್‌ ವ್ಯಕ್ತಿ ಸಹೋದರ ಪ್ರತಿಕ್ರಿಯೆ

    ಜು.16 ರಂದು ನಿಮಿಷಾ ಪ್ರಿಯಾಳನ್ನು ಗಲ್ಲಿಗೇರಿಸಬೇಕಿತ್ತು. ಆದ್ರೆ, ಮಾತುಕತೆಗಳ ದೀರ್ಘಾವಧಿಯ ನಂತರ, ಆಕೆಯ ಮರಣದಂಡನೆಯನ್ನ ಅಮಾನತಿನಲ್ಲಿ ಇರಿಸಲಾಗಿದೆ. ಸೌದಿ ಅರೇಬಿಯಾದಲ್ಲಿರುವ ಏಜೆನ್ಸಿಗಳು, ಭಾರತ ಸರ್ಕಾರ, ಯೆಮನ್‌ನ ಶೂರಾ ಕೌನ್ಸಿಲ್‌ನಲ್ಲಿರುವ ಸ್ನೇಹಿತರು, ಕೇರಳದ ಪ್ರಭಾವಿ ಸುನ್ನಿ ಮುಸ್ಲಿಂ ಧಾರ್ಮಿಕ ಗುರು ಕಾಂತಪುರಂ ಎಪಿ ಅಬೂಬಕರ್‌ ಮುಸ್ಲಿಯಾರ್‌ ಮಧ್ಯಪ್ರವೇಶದಿಂದ ಮುಂದಿನ ಆದೇಶದವರೆಗೆ ಮರಣದಂಡನೆಯನ್ನು ಮುಂದೂಡುವ ನಿರ್ಧಾರ ಕೈಗೊಳ್ಳಲಾಗಿದೆ.

    ಈ ವಿಷಯವನ್ನು ನಿಕಟವಾಗಿ ನಿಕಟವಾಗಿ ಗಮನಿಸುತ್ತಿದ್ದೇವೆ, ಕೆಲ ಸ್ನೇಹಪರ ಸರ್ಕಾರಗಳೊಂದಿಗೆ ಸಂಪರ್ಕದಲ್ಲಿದ್ದುಕೊಂಡು ಸಮಸ್ಯೆ ಬಗೆಹರಿಸುವ ನಿಟ್ಟಿನಲ್ಲಿ ಸಾಧ್ಯವಿರುವ ಎಲ್ಲ ಪ್ರಯತ್ನಗಳನ್ನು ಮಾಡುತ್ತಿದ್ದೇವೆ ಎಂದು ವಿದೇಶಾಂಗ ಸಚಿವಾಲಯ ಹೇಳಿದೆ. ಇದನ್ನೂ ಓದಿ: ಸಿರಿಯಾ ಮಿಲಿಟರಿ ಹೆಡ್‌ಕ್ವಾಟ್ರಸ್‌ ಮೇಲೆ ಇಸ್ರೇಲ್ ದಾಳಿ – ಲೈವ್‌ನಿಂದಲೇ ಎದ್ದು ಓಡಿದ ಟಿವಿ ಆಂಕರ್

    ಏನಿದು ಕೇಸ್‌?
    ಕೇರಳದ ನಿಮಿಷಾ ಪ್ರಿಯಾ ಅವರು 2017ರಲ್ಲಿ ಯೆಮನ್‌ನಲ್ಲಿ ತನ್ನ ಕ್ಲಿನಿಕ್‌ ಪಾಲುದಾರನಾಗಿದ್ದ ಅಲ್ಲಿನ ಪ್ರಜೆಯನ್ನು ಕೊಲೆ ಮಾಡಿದ ಆರೋಪ ಎದುರಿಸುತ್ತಿದ್ದಾರೆ. 2020ರಲ್ಲಿ ಕೆಳ ಹಂತದ ನ್ಯಾಯಾಲಯ ಪ್ರಿಯಾಳಿಗೆ ಮರಣ ದಂಡನೆ ಶಿಕ್ಷೆ ವಿಧಿಸಿ ಆದೇಶ ಹೊರಡಿಸಿತ್ತು. ಪ್ರಿಯಾಳ ಮೇಲ್ಮನವಿಯನ್ನು ಅಲ್ಲಿನ ಸುಪ್ರೀಂ ಕೋರ್ಟ್‌ 2023ರಲ್ಲಿ ವಜಾ ಮಾಡಿತ್ತು.

  • ಕೇರಳ ನರ್ಸ್‌ ತಪ್ಪಿಗೆ ಕ್ಷಮೆಯಿಲ್ಲ, ಗಲ್ಲಿಗೇರಿಸಲೇಬೇಕು: ಕೊಲೆಯಾದ ಯೆಮನ್‌ ವ್ಯಕ್ತಿ ಸಹೋದರ ಪ್ರತಿಕ್ರಿಯೆ

    ಕೇರಳ ನರ್ಸ್‌ ತಪ್ಪಿಗೆ ಕ್ಷಮೆಯಿಲ್ಲ, ಗಲ್ಲಿಗೇರಿಸಲೇಬೇಕು: ಕೊಲೆಯಾದ ಯೆಮನ್‌ ವ್ಯಕ್ತಿ ಸಹೋದರ ಪ್ರತಿಕ್ರಿಯೆ

    ಸನಾ: ಕೇರಳ ನರ್ಸ್‌ ನಿಮಿಷಾ ಪ್ರಿಯಾಳನ್ನು (Nimisha Priya) ಕ್ಷಮಿಸಲು ಸಾಧ್ಯವಿಲ್ಲ ಎಂದು ಆಕೆಯಿಂದ ಕೊಲೆಯಾದ ವ್ಯಕ್ತಿಯ ಸಹೋದರ ಪ್ರತಿಕ್ರಿಯೆ ನೀಡಿದ್ದಾರೆ.

    2017 ರಲ್ಲಿ ಕೇರಳದ ನರ್ಸ್ (Kerala Nurse) ನಿಮಿಷಾ ಪ್ರಿಯಾ ಅವರಿಂದ ತಲಾಲ್ ಅಬ್ದೋ ಮೆಹದಿ ಕೊಲೆಯಾಗಿದ್ದರು. ಪ್ರಕರಣ ಸಂಬಂಧ ಪ್ರಿಯಾಳಿಗೆ ಯೆಮನ್‌ ರಾಷ್ಟ್ರದ ಕೋರ್ಟ್‌ ಮರಣದಂಡನೆ ಶಿಕ್ಷೆ ವಿಧಿಸಿದೆ. ಈ ಸಂಬಂಧ ಕೊಲೆಯಾದ ವ್ಯಕ್ತಿಯ ಸಹೋದರ ಅಬ್ದೆಲ್ಫತ್ತಾ ಮೆಹದಿ ಪ್ರತಿಕ್ರಿಯಿಸಿದ್ದು, ಈ ಅಪರಾಧಕ್ಕೆ ಕ್ಷಮೆ ನೀಡಲು ಸಾಧ್ಯವಿಲ್ಲ ಎಂದು ಪ್ರತಿಪಾದಿಸಿದ್ದಾರೆ. ಇದನ್ನೂ ಓದಿ: ಯೆಮೆನ್‌ನಲ್ಲಿ ಮರಣದಂಡನೆಗೆ ಗುರಿಯಾಗಿರುವ ಕೇರಳ ನರ್ಸ್‌ಗೆ ಜು.16ಕ್ಕೆ ನೇಣು

    ನಿಮಿಷಾ ಪ್ರಿಯಾಳನ್ನು ಗಲ್ಲಿಗೇರಿಸಬೇಕು ಎಂದು ಮೆಹದಿ ತಿಳಿಸಿದ್ದಾರೆ. ಶಿಕ್ಷೆಗೆ ಗುರಿಯಾಗಿರುವ ಮಹಿಳೆಯನ್ನು ಬಲಿಪಶು ಎಂಬಂತೆ ಬಾರತೀಯ ಮಾಧ್ಯಮಗಳು ಬಿಂಬಿಸುತ್ತಿರುವ ಬಗ್ಗೆ ನಮ್ಮ ಕುಟುಂಬ ತೀವ್ರ ಬೇಸರ ಹೊಂದಿದೆ ಎಂದು ಮೆಹದಿ ಹೇಳಿದ್ದಾರೆ.

    ಜು.16 ರಂದು ನಿಮಿಷಾ ಪ್ರಿಯಾಳನ್ನು ಗಲ್ಲಿಗೇರಿಸಬೇಕಿತ್ತು. ಆದರೆ, ಮಾತುಕತೆಗಳ ದೀರ್ಘಾವಧಿಯ ನಂತರ, ಆಕೆಯ ಮರಣದಂಡನೆಯನ್ನು ಅಮಾನತಿನಲ್ಲಿ ಇರಿಸಲಾಗಿದೆ. ಸೌದಿ ಅರೇಬಿಯಾದಲ್ಲಿರುವ ಏಜೆನ್ಸಿಗಳು, ಭಾರತ ಸರ್ಕಾರ, ಯೆಮನ್‌ನ ಶೂರಾ ಕೌನ್ಸಿಲ್‌ನಲ್ಲಿರುವ ಸ್ನೇಹಿತರು, ಕೇರಳದ ಪ್ರಭಾವಿ ಸುನ್ನಿ ಮುಸ್ಲಿಂ ಧಾರ್ಮಿಕ ಗುರು ಕಾಂತಪುರಂ ಎಪಿ ಅಬೂಬಕರ್‌ ಮುಸ್ಲಿಯಾರ್‌ ಮಧ್ಯಪ್ರವೇಶದಿಂದ ಮುಂದಿನ ಆದೇಶದವರೆಗೆ ಮರಣದಂಡನೆಯನ್ನು ಮುಂದೂಡುವ ನಿರ್ಧಾರ ಕೈಗೊಳ್ಳಲಾಗಿದೆ. ಇದನ್ನೂ ಓದಿ: ಕೇರಳದ ನರ್ಸ್‌ಗೆ ಜು.16ರಂದು ಯೆಮೆನ್‌ನಲ್ಲಿ ನೇಣು; ಮರಣದಂಡನೆ ತಡೆಯಲು ಸಾಧ್ಯವಿಲ್ಲ – ಸುಪ್ರೀಂಗೆ ಕೇಂದ್ರ ಮಾಹಿತಿ

    ಕೇರಳದ ನಿಮಿಷಾ ಪ್ರಿಯಾ ಅವರು 2017ರಲ್ಲಿ ಯೆಮನ್‌ನಲ್ಲಿ ತನ್ನ ಕ್ಲಿನಿಕ್‌ ಪಾಲುದಾರನಾಗಿದ್ದ ಅಲ್ಲಿನ ಪ್ರಜೆಯನ್ನು ಕೊಲೆ ಮಾಡಿದ ಆರೋಪ ಎದುರಿಸುತ್ತಿದ್ದಾರೆ. 2020ರಲ್ಲಿ ಕೆಳ ಹಂತದ ನ್ಯಾಯಾಲಯ ಪ್ರಿಯಾಳಿಗೆ ಮರಣ ದಂಡನೆ ಶಿಕ್ಷೆ ವಿಧಿಸಿ ಆದೇಶ ಹೊರಡಿಸಿತ್ತು. ಪ್ರಿಯಾಳ ಮೇಲ್ಮನವಿಯನ್ನು ಅಲ್ಲಿನ ಸುಪ್ರೀಂ ಕೋರ್ಟ್‌ 2023ರಲ್ಲಿ ವಜಾ ಮಾಡಿತ್ತು.

  • ಕೇರಳ ನರ್ಸ್ ನಿಮಿಷಾ ಪ್ರಿಯಾಗೆ ಮರಣದಂಡನೆ ಮುಂದೂಡಿಕೆ

    ಕೇರಳ ನರ್ಸ್ ನಿಮಿಷಾ ಪ್ರಿಯಾಗೆ ಮರಣದಂಡನೆ ಮುಂದೂಡಿಕೆ

    ಸನಾ: ಕೇರಳದ (Kerala) ನರ್ಸ್ ನಿಮಿಷಾ ಪ್ರಿಯಾ (Nimisha Priya) ಅವರಿಗೆ ಯೆಮನ್‌ನಲ್ಲಿ (Yemen) ಜು.16ಕ್ಕೆ ಜಾರಿಯಾಗಲಿದ್ದ ಮರಣದಂಡನೆಯನ್ನು (Execution) ಮುಂದೂಡಲಾಗಿದೆ ಎಂದು ವರದಿಯಾಗಿದೆ.

    ಇಂಡಿಯನ್ ಗ್ರ್ಯಾಂಡ್ ಮುಫ್ತಿ ಎ.ಪಿ ಅಬೂಬಕ್ಕರ್ ಮುಸ್ಲಿಯಾರ್ ಕಾಂತಪುರಂ ಅವರ ಮಧ್ಯಪ್ರವೇಶದ ಬಳಿಕ ಈ ಬೆಳವಣಿಗೆ ನಡೆದಿದೆ ಎಂದು ಉನ್ನತ ಮೂಲಗಳಿಂದ ತಿಳಿದು ಬಂದಿದೆ. ನಿಮಿಷಾ ಪ್ರಿಯಾ ಅವರಿಗೆ ಮರಣದಂಡನೆ ಜಾರಿಗೊಳಿಸಲು ಬುಧವಾರಕ್ಕೆ ದಿನಾಂಕ ನಿಗದಿಯಾಗಿತ್ತು. ಈ ನಡುವೆ ಅವರ ರಕ್ಷಣೆಗೆ ಎ.ಪಿ ಅಬೂಬಕ್ಕರ್ ಮುಸ್ಲಿಯಾರ್ ಅವರು ಯೆಮನ್‌ನ ಪ್ರಮುಖ ಸೂಫಿ ವಿದ್ವಾಂಸ ಶೇಖ್ ಹಬೀರ್ ಉಮರ್ ಬಿನ್ ಹಾಫಿಝ್ ಅವರ ಮೂಲಕ ನಡೆಸಿದ ಪ್ರಯತ್ನ ಫಲಪ್ರದವಾಗಿದೆ ಎಂದು ವರದಿಯಲ್ಲಿ ಉಲ್ಲೇಖವಾಗಿದೆ. ಇದನ್ನೂ ಓದಿ: ಯೆಮೆನ್‌ನಲ್ಲಿ ಮರಣದಂಡನೆಗೆ ಗುರಿಯಾಗಿರುವ ಕೇರಳ ನರ್ಸ್‌ಗೆ ಜು.16ಕ್ಕೆ ನೇಣು

    ಶೇಖ್ ಹಬೀಬ್ ಅವರ ಪ್ರತಿನಿಧಿಗಳು ಮತ್ತು ಮೃತ ಯೆಮೆನ್ ಪ್ರಜೆ ತಲಾಲ್ ಅಬ್ದೋ ಮಹ್ದಿ ಅವರ ಕುಟುಂಬದ ನಡುವೆ ಮಂಗಳವಾರ ಧಮರ್‌ನಲ್ಲಿ ನಿರ್ಣಾಯಕ ಸಭೆ ನಡೆಯುವ ನಿರೀಕ್ಷೆಯಿದೆ. ಯೆಮನ್‌ನ ಹೊದೈದಾ ರಾಜ್ಯ ನ್ಯಾಯಾಲಯದ ಮುಖ್ಯ ನ್ಯಾಯಮೂರ್ತಿ ಮತ್ತು ಶೂರಾ ಕೌನ್ಸಿಲ್ ಸದಸ್ಯರಾಗಿ ಪ್ರಬಲ ಹುದ್ದೆಗಳನ್ನು ಹೊಂದಿರುವ ತಲಾಲ್ ಅವರ ಕುಟುಂಬದ ಸಂಬಂಧಿ ಮಾತುಕತೆಯಲ್ಲಿ ಭಾಗವಹಿಸಲು ಧಮರ್‌ಗೆ ಪ್ರಯಾಣ ಬೆಳೆಸಿದ್ದಾರೆ ಎನ್ನಲಾಗಿದೆ. ಇದನ್ನೂ ಓದಿ: ಕೇರಳದ ನರ್ಸ್‌ಗೆ ಜು.16ರಂದು ಯೆಮೆನ್‌ನಲ್ಲಿ ನೇಣು; ಮರಣದಂಡನೆ ತಡೆಯಲು ಸಾಧ್ಯವಿಲ್ಲ – ಸುಪ್ರೀಂಗೆ ಕೇಂದ್ರ ಮಾಹಿತಿ