Tag: Yeshwantpura

  • ಸೊಸೆಯನ್ನು ಮನೆಯಿಂದ ಹೊರಹಾಕಿದ ಅತ್ತೆ, ಮಾವ – 20 ದಿನದಿಂದ ಮನೆಯ ಹೊರಗೆ ಮಹಿಳೆಯ ವಾಸ

    ಸೊಸೆಯನ್ನು ಮನೆಯಿಂದ ಹೊರಹಾಕಿದ ಅತ್ತೆ, ಮಾವ – 20 ದಿನದಿಂದ ಮನೆಯ ಹೊರಗೆ ಮಹಿಳೆಯ ವಾಸ

    – ಬೆಂಗಳೂರಲ್ಲೊಂದು ಅಮಾನವೀಯ ಕೃತ್ಯ

    ಬೆಂಗಳೂರು: ಅತ್ತೆ, ಮಾವ ಮನೆಯಿಂದ ಹೊರಹಾಕಿದ್ದಕ್ಕೆ ಕಳೆದ 20 ದಿನದಿಂದ ಮನೆಯ ಹೊರಗೆ ಮಹಿಳೆಯೊಬ್ಬರು ಬದುಕು ನಡೆಸುತ್ತಿರುವ ಅಮಾನವೀಯ ಘಟನೆ ಬೆಂಗಳೂರಿನಲ್ಲಿ (Bengaluru) ನಡೆದಿದೆ.

    ಯಶವಂತಪುರದ (Yeshwantpur) ಬಾಬಾಸಾಹೇಬರಪಾಳ್ಯದಲ್ಲಿ ಈ ಘಟನೆ ನಡೆದಿದ್ದು, ಅತ್ತೆ- ಮಾವ ಸೇರಿ, ಸೊಸೆಯನ್ನೇ ಮನೆಯಿಂದ ಹೊರಹಾಕಿ ಅಮಾನವೀಯವಾಗಿ ನಡೆದುಕೊಂಡಿದ್ದಾರೆ. ಪೂಜಾ ಹಾಗೂ ರಾಘವೇಂದ್ರ ಎಂಬುವವರು 7 ವರ್ಷದ ಹಿಂದೆ ಮದುವೆಯಾಗಿದ್ದರು. ರಾಘವೇಂದ್ರ ಅವರಿಗೆ ಮೊದ್ಲಿನಿಂದಲೂ ಆರೋಗ್ಯ ಸಮಸ್ಯೆ ಇತ್ತು. ಆದರೆ ಇದನ್ನು ಪೂಜಾ ಕುಟುಂಬಕ್ಕೆ ತಿಳಸದೇ ಹಾಗೇ ಮದುವೆ ಮಾಡಿಸಿಕೊಟ್ಟಿದ್ದರು. ಹೀಗಾಗಿ ಮೂರು ತಿಂಗಳ ಹಿಂದೆ ರಾಘವೇಂದ್ರ ಮೃತಪಟ್ಟಿದ್ದರು. ಅದಾದ ಬಳಿಕ ಪೂಜಾ ಅವರನ್ನ ಅತ್ತೆ- ಮಾವ ಹಾಗೂ ನಾದಿನಿ ಸೇರಿಕೊಂಡು ಮನೆಯಿಂದ ಬಲವಂತವಾಗಿ ಹೊರತಳ್ಳಿ, ಮನೆಯನ್ನು ಲಾಕ್ ಮಾಡಿದ್ದಾರೆ.ಇದನ್ನೂ ಓದಿ: ರೈಲ್ವೇ ಟ್ರ್ಯಾಕ್‌ನಲ್ಲಿ ನವವಿವಾಹಿತೆ ಶವ ಪತ್ತೆ ಕೇಸ್ – ಪತಿ ಮನೆ ಮುಂದೆ ಮೃತದೇಹವಿಟ್ಟು ಪ್ರತಿಭಟನೆ

    ಇದೀಗ ಅತ್ತೆ- ಮಾವ ಮಗಳ ಮನೆಯಲ್ಲಿದ್ದು, ತಮ್ಮ ಮನೆಗೆ ಬೀಗ ಹಾಕಿಕೊಂಡು ಹೋಗಿದ್ದಾರೆ. ಸೊಸೆ ಮಾತ್ರ ಇದು ಗಂಡನ ಮನೆ ಅಂತ ಕಳೆದ 20 ದಿನಗಳಿಂದ ಮನೆಯ ಆವರಣದಲ್ಲಿ ಪುಟ್ಟ ಸಿಲಿಂಡರ್, ಸಣ್ಣಪುಟ್ಟ ಪಾತ್ರೆ ಇಟ್ಕೊಂಡು ಬದುಕು ನಡೆಸ್ತಿದ್ದಾರೆ. ವಾರಕ್ಕೊಮ್ಮೆ ಸ್ನಾನ ಮಾಡ್ತಿದ್ದು, ಅಕ್ಕಪಕ್ಕದ ಮನೆಯವ್ರ ಶೌಚಾಲಯವನ್ನೇ ಬಳಸ್ತಿದ್ದಾರೆ. ಗಂಡ ಸತ್ತ ಮೇಲೆ ನಿನ್ನ ಅವಶ್ಯಕತೆಯಿಲ್ಲ ಇಲ್ಲಿಂದ ತೊಲಗು ಎಂದು ಪೂಜಾಗೆ, ಮಾವ ಶ್ರೀನಿವಾಸ್ ಹಾಗೂ ಅತ್ತೆ ಶಾಂತಮ್ಮ ಕಿರುಕುಳ ನೀಡಿದ್ದಾರೆ ಅಂತ ಕಣ್ಣೀರು ಹಾಕ್ತಿದ್ದಾರೆ.

    ಇನ್ನೂ ಮಗಳ ಸ್ಥಿತಿ ಕಂಡು ತಾಯಿ ನಿತ್ಯ ನೋವು ಅನುಭವಿಸ್ತಿದ್ದಾರೆ. ತನ್ನ ಮಗಳನ್ನು ಒಂಟಿ ಮಾಡಿದೆ ಎಂದು ಕೊರಗುತ್ತಿದ್ದಾರೆ. ಬಡತನ ಇದ್ದರೂ ಕೂಡ ಮಗಳು ಚೆನ್ನಾಗಿರಲಿ ಎಂದು ಸಾಲ ಮಾಡಿ ಮಗಳ ಮದುವೆ ಮಾಡಿದ್ದರು. ಆದರೆ ಗಂಡನ ಮನೆಯವರು ವಿಷಯ ಮುಚ್ಚಿಟ್ಟು ಮಗಳ ಭವಿಷ್ಯವನ್ನೇ ಹಾಳು ಮಾಡಿದರು. ಸದ್ಯ ಮಹಿಳಾ ಆಯೋಗ, ಮಹಿಳಾ ಸಂಘಟನೆಗಳು ಪೂಜಾ ನೆರವಿಗೆ ನಿಲ್ಲಬೇಕು ಎಂದು ಮನವಿ ಮಾಡಿದ್ದಾರೆ.ಇದನ್ನೂ ಓದಿ :ಪ್ರೀತಿ ವಿಚಾರಕ್ಕೆ ಕಿರಿಕ್ – ಶಿಕ್ಷಕಿಗೆ ಚಾಕು ಇರಿದು ಕೊಂದ ಯುವಕ

  • ಯಶವಂತಪುರ-ಹುಬ್ಬಳ್ಳಿ ಜೋಡಿ ರೈಲು ಮಾರ್ಗವನ್ನು ಹಂತ ಹಂತವಾಗಿ ಕಾರ್ಯಗತಗೊಳಿಸ್ತೇವೆ: ಅಶ್ವಿನಿ ವೈಷ್ಣವ್

    ಯಶವಂತಪುರ-ಹುಬ್ಬಳ್ಳಿ ಜೋಡಿ ರೈಲು ಮಾರ್ಗವನ್ನು ಹಂತ ಹಂತವಾಗಿ ಕಾರ್ಯಗತಗೊಳಿಸ್ತೇವೆ: ಅಶ್ವಿನಿ ವೈಷ್ಣವ್

    ಬೆಂಗಳೂರು: ಯಶವಂತಪುರ-ಹುಬ್ಬಳ್ಳಿ ಜೋಡಿ ರೈಲು ಮಾರ್ಗ ಯೋಜನೆಯನ್ನು ಹಂತ-ಹಂತವಾಗಿ ಕಾರ್ಯಗತಗೊಳಿಸಲಾಗುತ್ತದೆ. ಈಗಾಗಲೇ ಕಾಮಗಾರಿ ಪ್ರಗತಿಯಲ್ಲಿದೆ ಎಂದು ಕೇಂದ್ರ ರೈಲ್ವೆ ಸಚಿವ ಅಶ್ವಿನಿ ವೈಷ್ಣವ್ ಹೇಳಿದ್ದಾರೆ.

    ರಾಜ್ಯಸಭಾ ಸದಸ್ಯರಾದ ಕೆ. ನಾರಾಯಣ ಕೇಳಿದ ಪ್ರಶ್ನೆಗೆ ಸಚಿವರು ಉತ್ತರ ನೀಡಿದ್ದಾರೆ. ಯಶವಂತಪುರ-ಹುಬ್ಬಳ್ಳಿ ನಡುವಿನ ಜೋಡಿ ಮಾರ್ಗ ಯೋಜನೆಯ ಪೈಕಿ ಚಿಕ್ಕಜಾಜೂರು-ಅರಸೀಕೆರೆ, ತುಮಕೂರು-ಯಶವಂತರಪುರ ನಡುವೆ ಜೋಡಿ ಮಾರ್ಗ ಕಾಮಗಾರಿಗೆ ಚಾಲನೆ ನೀಡಲಾಗಿದೆ ಎಂದು ತಿಳಿಸಿದ್ದಾರೆ. ಇದನ್ನೂ ಓದಿ: ಅದ್ದೂರಿಯಾಗಿ ವೈವಾಹಿಕ ಜೀವನಕ್ಕೆ ಕಾಲಿಟ್ಟ ಸಲಿಂಗಕಾಮಿ ಜೋಡಿ

    train

    ಕರ್ನಾಟಕದ ವಿವಿಧ ರೈಲು ಮಾರ್ಗಗಳ ಕಾಮಗಾರಿ ಪ್ರಗತಿಯ ಕುರಿತು ಸಚಿವರು ರಾಜ್ಯಸಭೆಗೆ ಮಾಹಿತಿಯನ್ನು ನೀಡಿದ್ದು, ಯಶವಂತಪುರ-ಚಿಕ್ಕಬಾಣಾವರ-ತುಮಕೂರು ನಡುವಿನ ಮಾರ್ಗದ ವಿದ್ಯುದೀಕರಣ ಕಾರ್ಯ ಪ್ರಗತಿಯಲ್ಲಿದೆ ಎಂದು ಮಾಹಿತಿ ನೀಡಿದ್ದಾರೆ.

    ಮೆಮು ರೈಲು ಪ್ರಸ್ತಾವನೆ ಇಲ್ಲ ರೈಲ್ವೆ ಸಚಿವ ಅಶ್ವಿನಿ ವೈಷ್ಣವ್ ಬೆಂಗಳೂರಿನ ಯಶವಂತಪುರ-ತುಮಕೂರು ನಡುವೆ ಮೆಮು ರೈಲು ಓಡಿಸುವ ಯಾವುದೇ ಪ್ರಸ್ತಾಪ ಇಲ್ಲ ಎಂದು ರಾಜ್ಯಸಭೆಯಲ್ಲಿ ಹೇಳಿಕೆ ನೀಡಿದ್ದಾರೆ.  ಇದನ್ನೂ ಓದಿ: MESಗೆ ಪಾಠ ಕಲಿಸಲು ಕಾರ್ಮಿಕ ಸಂಘಟನೆ ಪ್ಲ್ಯಾನ್- ಇಂದಿನಿಂದ್ಲೇ ಮಹಾರಾಷ್ಟ್ರ ವಸ್ತುಗಳು ಬ್ಯಾನ್

    Ashwini Vaishnav

    ಬೆಂಗಳೂರು ಮತ್ತು ತುಮಕೂರು ನಡುವೆ ಪ್ರತಿನಿತ್ಯ ಸಾವಿರಾರು ಜನರು ಸಂಚಾರ ನಡೆಸುತ್ತಾರೆ. ಉಭಯ ನಗರಗಳ ನಡುವೆ ಮೆಮು ರೈಲು ಓಡಿಸಿದರೆ ಸಹಾಯಕವಾಗಲಿದೆ ಎಂಬ ಪ್ರಸ್ತಾವನೆ ಇತ್ತು. ತುಮಕೂರು ರೈಲು ಪ್ರಯಾಣಿಕರ ವೇದಿಕೆ ಸಹ ಮೆಮು ರೈಲು ಓಡಿಸುವಂತೆ ಮನವಿ ಮಾಡಿತ್ತು. ಇದನ್ನೂ ಓದಿ: ಮೊದಲ ಮಗುವಿನ ನಿರೀಕ್ಷೆಯಲ್ಲಿದ್ದಾರಾ ಟಾಲಿವುಡ್ ನಟಿ – ಕಾಜಲ್ ಫೋಟೋ ಹೇಳ್ತೀರೋದೇನು?

    ಭಾರತೀಯ ರೈಲ್ವೆ ಚಿಕ್ಕಬಣಾವರ-ಹುಬ್ಬಳ್ಳಿ ನಡುವಿನ ಮಾರ್ಗದ ವಿದ್ಯುದೀಕರಣ ಕಾಮಗಾರಿ ಭಾಗವಾಗಿ ಬೆಂಗಳೂರು-ತುಮಕೂರು ನಡುವಿನ 69.47 ಕಿ. ಮೀ. ರೈಲು ಮಾರ್ಗವನ್ನು ವಿದ್ಯುದೀಕರಣ ಮಾಡಿದೆ. ಕಾಮಗಾರಿ ಈಗಾಗಲೇ ಪೂರ್ಣಗೊಂಡಿದೆ. ವಿದ್ಯುದೀಕರಣ ಕಾಮಗಾರಿ ಪೂರ್ಣಗೊಂಡು, ಸಿಆರ್‍ಎಸ್ ಪರಿಶೀಲನೆ ಮುಗಿದ ಬಳಿಕ ಯಶವಂತಪುರ-ತುಮಕೂರು ನಡುವೆ ಮೆಮು ರೈಲು ಓಡಿಸುವ ಪ್ರಸ್ತಾವನೆ ಇದೆ ಎಂದು ನೈಋತ್ಯ ರೈಲ್ವೆ ವಿಭಾಗದ ಅಧಿಕಾರಿಗಳು ಹೇಳಿದ್ದರು. ಆದರೆ ಈಗ ಸಚಿವರು ಮೆಮು ರೈಲು ಓಡಿಸುವ ಪ್ರಸ್ತಾಪವಿಲ್ಲ ಎಂದು ಹೇಳಿದ್ದಾರೆ.