ಉಡುಪಿ: ನಾನು ಬಾಬಾ ರಾಮ್‍ದೇವ್ ಶಿಬಿರದಲ್ಲಿ ತರಬೇತಿ ಪಡೆದ ಯೋಗ ಪಟು. ನಾನು ನನ್ನ ಪತಿ ಹಾಗೂ ಕುಟುಂಬದವರೆಲ್ಲ ಯೋಗ (Yoga) ಮಾಡುತ್ತೇವೆ ಎಂದು ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ (Lakshmi Hebbalkar) ಹೇಳಿದ್ದಾರೆ.
ಉಡುಪಿಯಲ್ಲಿ (Udupi) ಅಂತಾರಾಷ್ಟ್ರೀಯ ಯೋಗ ದಿನಾಚರಣೆ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು. ಈ ವೇಳೆ, ವಿದ್ಯಾರ್ಥಿಗಳೊಂದಿಗೆ ಯೋಗ ಅನುಭವವನ್ನು ಹಂಚಿಕೊಂಡಿದ್ದಾರೆ. ನಾನು ಬಾಬಾ ರಾಮ್ ದೇವ್ ಶಿಬಿರದಲ್ಲಿ ತರಬೇತಿ ಪಡೆದ ಯೋಗ ಪಟು. ನನ್ನ ತಂದೆ ತಾಯಿ ಸಹ ಯೋಗ ಮಾಡುತ್ತಿದ್ದರು. ತಾಯಿಯ ಪ್ರೇರಣೆಯಿಂದ ಯೋಗ ಮಾಡುತ್ತಿದ್ದೆ. ಈಗ ಅಪಘಾತದ ಬಳಿಕ ಬೆನ್ನುಹುರಿ ಸಮಸ್ಯೆಯಾಗಿ ಯೋಗ ಮಾಡಲು ಸಾಧ್ಯವಾಗುತ್ತಿಲ್ಲ ಎಂದಿದ್ದಾರೆ. ಇದನ್ನೂ ಓದಿ: ಶ್ರೀಕಾಂತ್ ಶೆಟ್ಟಿಗೆ 3 ತಿಂಗಳು ಬಾಗಲಕೋಟೆ ಪ್ರವೇಶಕ್ಕೆ ನಿರ್ಬಂಧ
ನಾವು ಅಕ್ಕತಂಗಿಯರು, ತಾಯಿ ಒಟ್ಟಿಗೆ ಕುಳಿತು ಯೋಗ ಮಾಡುತ್ತಿದ್ದೆವು. ಯೋಗ ನಮ್ಮ ಜೀವನದ ಅವಿಭಾಜ್ಯ ಅಂಗವಾಗಿದೆ. ಬಾಬಾ ರಾಮ್‍ದೇವ್ ಅವರ ಐದು ಶಿಬಿರಗಳಲ್ಲಿ ನಾನು ಭಾಗಿಯಾಗಿದ್ದೆ ಎಂದಿದ್ದಾರೆ.
ವಿಶಾಖಪಟ್ಟಣಂ: ಸಂಘರ್ಷ ತುಂಬಿರುವ ಜಗತ್ತಿನಲ್ಲಿ ಯೋಗ (Yoga) ಶಾಂತಿಯನ್ನು ತರಬಹುದು. ಯೋಗ ʻವಿರಾಮದ ಬಟನ್ʼ ಆಗಿದ್ದು, ಈ ಸಂದರ್ಭದಲ್ಲಿ ಅಗತ್ಯವಾಗಿದೆ ಎಂದು ಪ್ರಧಾನಿ ನರೇಂದ್ರ ಮೋದಿಯವರು (Narendra Modi) ಹೇಳಿದ್ದಾರೆ.
ಯೋಗವು ಎಲ್ಲಾ ಎಲ್ಲೆಗಳು, ವಯಸ್ಸು, ಸಾಮರ್ಥ್ಯವನ್ನು ಮೀರಿ ಎಲ್ಲರಿಗೂ ಸೇರಿದ್ದಾಗಿದೆ. ಇದು ಜಗತ್ತನ್ನು ಒಂದುಗೂಡಿಸಿದೆ. ಅಂತಾರಾಷ್ಟ್ರೀಯ ಯೋಗ ದಿನ ಆರಂಭಗೊಂಡ 11 ವರ್ಷಗಳ ಬಳಿಕ ಯೋಗ ಪ್ರಪಂಚದಾದ್ಯಂತದ ಕೋಟ್ಯಂತರ ಜನರ ಜೀವನದ ಭಾಗವಾಗಿದೆ ಎಂದಿದ್ದಾರೆ.
ಯೋಗ ನಮ್ಮ ಪರಸ್ಪರ ಸಂಬಂಧವನ್ನು ಜಾಗೃತಗೊಳಿಸುತ್ತದೆ. ನಮ್ಮನ್ನು ʻನನ್ನಿಂದ ನಮ್ಮʼ ಕಡೆಗೆ ಕರೆದೊಯ್ಯುತ್ತದೆ. ಯೋಗದ ಮೂಲಕ ಭಾರತವು ಜಗತ್ತಿಗೆ ಚಿಕಿತ್ಸೆಯನ್ನು ನೀಡುತ್ತದೆ ಎಂದು ಅವರು ಪ್ರತಿಪಾದಿಸಿದ್ದಾರೆ.
ಭಾರತವು ಜೂನ್ 21ನ್ನು ಅಂತಾರಾಷ್ಟ್ರೀಯ ಯೋಗ ದಿನವೆಂದು ಆಚರಿಸಲು ಯುಎನ್‌ಜಿಎಯಲ್ಲಿ ನಿರ್ಣಯವನ್ನು ಮಂಡಿಸಿ ದಶಕಗಳು ಕಳೆದಿದೆ. ಇದಾದ ಬಳಿಕ ವಿಶ್ವದ 175 ದೇಶಗಳು ನಮ್ಮ ನಿಲುವಿನೊಂದಿಗೆ ನಿಂತವು. ಇಂದು ಜಗತ್ತಿನಲ್ಲಿ ಈ ಏಕತೆ ಮತ್ತು ಬೆಂಬಲ ಸಾಮಾನ್ಯ ವಿಷಯವಲ್ಲ ಎಂದಿದ್ದಾರೆ.
ದೇಹ ಮತ್ತು ಮನಸ್ಸಿನ ಸಂಯೋಗವೇ ಯೋಗ. ಭಾರತೀಯ ಯೋಗ (Yoga) ಪರಂಪರೆಯಿಂದು ವಿಶ್ವವ್ಯಾಪಿಯಾಗಿ ಬೆಳೆದಿದೆ. ಭಾರತ ಮತ್ತು ಇತರ ದೇಶಗಳ ಸಂಬಂಧವನ್ನು ಆರೋಗ್ಯಪೂರ್ಣವಾಗಿಸುವ ಮಹತ್ವದ ಕಾರ್ಯವಾಗಿ ರೂಪುಗೊಂಡಿದೆ. ಯೋಗವು ಯಾವುದೇ ಜಾತಿ, ಧರ್ಮ, ಮತಕ್ಕೆ ಸೀಮಿತವಾಗದೇ ಎಲ್ಲವನ್ನೂ ಎಲ್ಲರನ್ನೂ ಮೀರಿಸುವ ವಿಶ್ವಕುಟುಂಬಿಯಾಗಿ ಹಾಗೂ ವಿಶ್ವ ಆರೋಗ್ಯಕ್ಕಾಗಿ (World Health) ಎನ್ನುವ ನಿಟ್ಟಿನಲ್ಲಿ ಸಾಕಾರಾರಗೊಂಡಿದೆ.
ವಿಶ್ವ ಎಂದರೇನು? ಆರೋಗ್ಯ ಎಂದರೇನು? ಎಂಬುನ್ನು ವಿಶ್ಲೇಷಿಸಿದಾಗ ಕಾಮ, ಕ್ರೋಧ, ಲೋಭ, ಮೋಹ, ಮದ ಮತ್ಸರಗಳೆಂಬ ಅರಿಷಡ್ವರ್ಗಗಳು ಹೆಚ್ಚಾಗದೆಯೇ ಯೋಗ್ಯ ಸ್ಥಿತಿಯಲ್ಲಿ ಇರುವುದೇ ಆರೋಗ್ಯ. ಆದ್ರೆ ಇದೆಲ್ಲವನ್ನೂ ಮೀರಿ ನಾವು ಸಾಧಿಸಬೇಕು ಎಂದರೆ ತಾಳ್ಮೆ ಅತ್ಯಗತ್ಯ. ಅದಕ್ಕಾಗಿ ಅತ್ಯುತ್ತಮ ಮಾರ್ಗವನ್ನು ಯೋಗ ತೋರುತ್ತದೆ.
ಯೋಗವು ದೈಹಿಕ, ಮಾನಸಿಕ ಮತ್ತು ಬೌದ್ಧಿಕವಾಗಿ ಮನುಷ್ಯನನ್ನು ಗಟ್ಟಿಗೊಳಿಸುತ್ತದೆ ಎಂಬುದನ್ನು ಯೋಗಗುರುಗಳು ಹೇಳಿದ್ದಾರೆ ಮತ್ತು ನಂಬಿದ್ದಾರೆ. ಭಾರತದಲ್ಲಿ ಪ್ರಸಿದ್ಧಿ ಪಡೆದ ಈ ಯೋಗವನ್ನು ಇಂದು 190ಕ್ಕೂ ಹೆಚ್ಚು ರಾಷ್ಟ್ರಗಳು ಅಳವಡಿಸಿಕೊಂಡು ಆಚರಣೆ ಮಾಡುತ್ತಿವೆ. ವಿಶ್ವದಾದ್ಯಂತ ಜನರು ತಮ್ಮ ಮಾನಸಿಕ ಮತ್ತು ದೈಹಿಕ ಆರೋಗ್ಯ ವೃದ್ಧಿಗೆ ಯೋಗಾಭ್ಯಾಸ ಮಾಡುವುದು ಸಾಮಾನ್ಯವಾಗಿದೆ. ಯೋಗದಿಂದ ನಮ್ಮ ವೈಯಕ್ತಿಕ ಹಾಗೂ ಸಾಮಾಜಿಕ ಬದುಕು ವೃದ್ಧಿಯಾಗುತ್ತದೆ. ಮಾನವನ ಯೋಗಕ್ಷೇಮ ಕಾಪಾಡುವಲ್ಲಿ ತನ್ನದೇ ಆದ ಪ್ರಾಮುಖ್ಯತೆಯನ್ನು ಹೊಂದಿರುವ ಯೋಗದ ಮಹತ್ವವನ್ನು ತಿಳಿಸುವ ಉದ್ದೇಶದಿಂದ ಪ್ರತಿವರ್ಷ ಜೂನ್ 21ರ ದಿನವನ್ನು ಅಂತಾರಾಷ್ಟ್ರೀಯ ಯೋಗ ದಿನವನ್ನಾಗಿ (International Yoga day) ಆಚರಿಸಲಾಗುತ್ತದೆ.
ಈ ಬಾರಿಯ ಅಂತಾರಾಷ್ಟ್ರೀಯ ಯೋಗ ದಿನದ ಥೀಮ್ (ವಸ್ತು ವಿಷಯ) ʻಒಂದು ಭೂಮಿ, ಒಂದು ಆರೋಗ್ಯಕ್ಕಾಗಿ ಯೋಗ’ (Yoga for One Earth, One Health) ಎಂಬುದಾಗಿದೆ. ಪ್ರಧಾನಿ ನರೇಂದ್ರ ಮೋದಿ ಅವರೂ ಸಹ ಈ ಯೋಗದ ದಿನದ ಕಾರ್ಯಕ್ರಮದಲ್ಲಿ ಭಾಗಿಯಾಗಲಿದ್ದಾರೆ. ಕಳೆದ ವರ್ಷ ಜಮ್ಮು ಮತ್ತು ಕಾಶ್ಮೀರದಲ್ಲಿ ಈ ವಿಶೇಷ ದಿನವನ್ನು ಆಚರಣೆ ಮಾಡಿದ್ದರು. ಈ ಬಾರಿ ಬಂದರು ನಗರಿ ವಿಶಾಖಪಟ್ಟಣದಲ್ಲಿ ನಡೆಯುವ ಯೋಗ ದಿನಾಚರಣೆ ಕಾರ್ಯಕ್ರಮದಲ್ಲಿ ಭಾಗಿಯಾಗಲಿದ್ದಾರೆ. ಇಲ್ಲಿನ ಆರ್.ಕೆ ಬೀಚ್‌ನಿಂದ ಭೋಗಪುರಂವರೆಗೆ 26 ಕಿಮೀ ಉದ್ದದ ಕಾರಿಡಾರ್‌ನಲ್ಲಿ 11ನೇ ಅಂತಾರಾಷ್ಟ್ರೀಯ ಯೋಗ ದಿನಾಚರಣೆ ನಡೆಯಲಿದ್ದು, 3 ಲಕ್ಷಕ್ಕೂ ಅಧಿಕ ಮಂದಿಯೊಂದಿಗೆ ಪ್ರಧಾನಿ ಮೋದಿ ಯೋಗ ಪ್ರದರ್ಶನ ಮಾಡಲಿದ್ದಾರೆ.
ಯೋಗ ಅಸ್ವಿತ್ತಕ್ಕೆ ಬಂದಿದ್ದು ಯಾವಾಗ?
ಯೋಗಕ್ಕೆ ಸರಿಸುಮಾರು 2,500 ವರ್ಷಗಳ ಪುರಾತನ ಇತಿಹಾಸವಿದೆ. ನಾಗರಿಕತೆಯ ಆರಂಭದಿಂದಲೂ ಯೋಗವನ್ನು ಅಭ್ಯಾಸ ಮಾಡಲಾಗುತ್ತಿತ್ತು ಎಂದು ಹೇಳಲಾಗುತ್ತದೆ. ಯಾವುದೇ ಧರ್ಮ, ನಂಬಿಕೆಗಳು ಅಸ್ತಿತ್ವಕ್ಕೆ ಬರುವ ಮೊದಲೇ ಯೋಗ ಅಸ್ತಿತ್ವಕ್ಕೆ ಬಂದಿತು ಎಂಬುದು ನಂಬಿಕೆ. ಭಗವಾನ್ ಶಿವನನ್ನು ಯೋಗ ಪುರಾಣಗಳಲ್ಲಿ ಮೊದಲ ಯೋಗಿ ಅಥವಾ ಆದಿಯೋಗಿ ಎಂದು ಪರಿಗಣಿಸಲಾಗಿದೆ. ಪರಮೇಶ್ವರನನ್ನು ಯೋಗದ ಮೊದಲ ಗುರು ಎಂದು ಕೂಡ ಕರೆಯಲಾಗುತ್ತದೆ.
ಆದಿಯೋಗಿ ಅಂದರೆ ಶಿವನು ಸಾವಿರಾರು ವರ್ಷಗಳ ಹಿಂದೆ ಹಿಮಾಲಯದ ಕಾಂತಿ ಸರೋವರದ ತೀರದಲ್ಲಿ ಸಪ್ತಋಷಿಗಳಿಗೆ ತನ್ನ ವ್ಯಾಪಕವಾದ ಬುದ್ಧಿವಂತಿಕೆ ಧಾರೆ ಎರೆಯುತ್ತಾರೆ. ಆ ಋಷಿಗಳು ಏಷ್ಯಾ, ಮಧ್ಯಪ್ರಾಚ್ಯ, ಉತ್ತರ ಆಫ್ರಿಕಾ ಮತ್ತು ದಕ್ಷಿಣ ಅಮೆರಿಕ ಸೇರಿದಂತೆ ವಿವಿಧ ರಾಷ್ಟ್ರಗಳಲ್ಲಿ ಜಗತ್ತಿನಲ್ಲಿ ಅತ್ಯಂತ ಶಕ್ತಿಯುತವಾದ ಯೋಗ ವಿಜ್ಞಾನ ಅಂಶವನ್ನು ಹರಡುತ್ತಾರೆ. ಆಯುಷ್ ಸಚಿವಾಲಯದ ಪ್ರಕಾರ, ಸಮಕಾಲೀನ ಸಂಶೋಧಕರು ಪ್ರಪಂಚದಾದ್ಯಂತದ ಪ್ರಾಚೀನ ಸಂಸ್ಕೃತಿಗಳ ನಡುವಿನ ಗಮನಾರ್ಹ ಸಾಮ್ಯತೆಗಳನ್ನು ಗಮನಿಸಿದ್ದಾರೆ.
ಭಾರತದಲ್ಲಿ ಯೋಗ ಪ್ರಸಿದ್ಧಿ ಪಡೆದಿದ್ದು ಹೇಗೆ?
ವಿವಿಧ ದೇಶಗಳಲ್ಲಿ ಬಹಳ ಹಿಂದಿನಿಂದಲೂ ಯೋಗದ ಬಗ್ಗೆ ಅರಿವಿದ್ದರೂ ಅದರಲ್ಲಿನ ʻಆಸನʼಗಳ ಪರಿಕಲ್ಪನೆ ಇರಲಿಲ್ಲ. ನಮ್ಮ ದೇಶದ ಆಯುರ್ವೇದ ಪದ್ಧತಿಯಲ್ಲಿ ಹಲವು ಬಗೆಯ ಅನಾರೋಗ್ಯಕ್ಕೆ ಇಂತಿಂಥ ಆಸನ ಮಾಡಬೇಕು ಎಂದು ಉಲ್ಲೇಖಿಸಲಾಗಿದೆ. ಯೋಗಾಭ್ಯಾಸದಲ್ಲಿ ಇರುವ ಕೆಲವು ಆಸನಗಳನ್ನು ಮಾಡಿಯೇ ಅದೆಷ್ಟೊ ತೊಂದರೆಗಳನ್ನು ಕಡಿಮೆ ಮಾಡಿಕೊಂಡವರ ಉದಾಹರಣೆಗಳೂ ಇವೆ.
2015ರಲ್ಲಿ ಭಾರತ ಯೋಗವನ್ನು ಅಂತಾರಾಷ್ಟ್ರೀಯ ಮಟ್ಟದಲ್ಲಿ ಪ್ರಚುರ ಪಡಿಸುವ ಜೊತೆಗೆ ಯೋಗದ ವಿವಿಧ ಆಸನಗಳ ಮಹತ್ವವನ್ನೂ ಸಾರಿದೆ. ಆಸನಗಳಿಂದ ಅನಾರೋಗ್ಯ ಪರಿಹಾರ ಮಾಡಿಕೊಳ್ಳಬಹುದು ಎಂಬುದನ್ನೂ ಲೋಕಕ್ಕೆ ತಿಳಿಸಿತು. ಅಷ್ಟೇ ಅಲ್ಲ, ಧ್ಯಾನ, ಪ್ರಾಣಾಯಾಮಗಳು ದೇಹಕ್ಕೆ ಕೊಡುವ ಚೈತನ್ಯವನ್ನು ತೋರಿಸಿಕೊಟ್ಟಿತು. ಪಾಶ್ಚಾತ್ಯ ರಾಷ್ಟ್ರಗಳು ಯೋಗದ ಬಗ್ಗೆ ಆಕರ್ಷಿತರಾಗಲು ಇದೇ ಕಾರಣವೂ ಆಯಿತು. ಚರ್ಮಕ್ಕೆ ಸಂಬಂಧಪಟ್ಟ, ಆಹಾರ ಸಂಬಂಧಿ, ಮತ್ತಿತರ ಕಾಯಿಲೆಗಳಿಂದ ಪಾರಾಗಲು, ಒತ್ತಡದ ಬದುಕಿಂದ ಮುಕ್ತಿ ಪಡೆಯಲು ವಿದೇಶಿಯರು ಯೋಗದ ಬಗ್ಗೆ ಹೆಚ್ಚೆಚ್ಚು ಆಸಕ್ತಿ ತೋರಿಸಲು ಪ್ರಾರಂಭಿಸಿದರು.
ಪ್ರಧಾನಿ ಮೋದಿಯವರು ವಿಶ್ವಸಂಸ್ಥೆಯ ಸಾಮಾನ್ಯ ಸಭೆಯಲ್ಲಿ ‘ಅಂತಾರಾಷ್ಟ್ರೀಯ ಯೋಗ ದಿನಾಚರಣೆ’ ಪ್ರಸ್ತಾಪವನ್ನು ಮುಂದಿಟ್ಟಿದ್ದರು. ಯಾಕಾಗಿ ಇದನ್ನ ಅಂತಾರಾಷ್ಟ್ರೀಯ ದಿನವನ್ನಾಗಿ ಆಚರಿಸಬೇಕು ಎಂಬುದಕ್ಕೆ ಸಮರ್ಥ ವಿವರಣೆಯನ್ನೂ ಭಾರತ ಕೊಟ್ಟಿದೆ. ಅದನ್ನು ವಿಶ್ವ ಸಂಸ್ಥೆ ಒಪ್ಪಿಕೊಂಡು, ಸದಸ್ಯ ರಾಷ್ಟ್ರಗಳು ಅನುಮೋದಿಸಿವೆ. ಆಗಿನಿಂದ ಇಲ್ಲಿಯವರೆಗೆ ಭಾರತ, ಯೋಗಕ್ಕೆ ಸಂಬಂಧಪಟ್ಟ ಹಲವು ಕಾರ್ಯಕ್ರಗಳನ್ನು ಆಯೋಜಿಸುತ್ತಿದೆ. ವಿದೇಶಗಳಲ್ಲೂ ಯೋಗದ ಕಾರ್ಯಕ್ರಮಗಳನ್ನು ಹಮ್ಮಿಕೊಂಡು, ಅದರ ಮಹತ್ವವನ್ನು ಸಾರುತ್ತಿದೆ.
ಆಧುನಿಕ ಜೀವನಶೈಲಿಯಲ್ಲಿ ಬಹುತೇಕ ಮಂದಿಗೆ ಬೆನ್ನುನೋವು (Back Pain) ಕಾಣಿಸಿಕೊಳ್ಳುವುದು ಸಹಜ. ಹೆಚ್ಚಿನ ಸಮಯ ಕಂಪ್ಯೂಟರ್ ಮುಂದೆ ಕುಳಿತುಕೊಳ್ಳುವುದು, ದೈಹಿಕ ವ್ಯಾಯಾಮ ಇಲ್ಲದಿರುವುದು, ಸರಿಯಾದ ಭಂಗಿಯಲ್ಲಿ ಕೂರದೇ ಇರುವುದು ಬೆನ್ನುನೋವಿಗೆ ಕಾರಣವಾಗುತ್ತದೆ. ಈ ರೀತಿಯ ಹವ್ಯಾಸಗಳಿಂದ ಬೆನ್ನುಮೂಳೆ ಸಂಕುಚಿತಗೊಳ್ಳುತ್ತದೆ. ಬೆನ್ನಿನ ಮೇಲೆ ಒತ್ತಡ ಹೆಚ್ಚಾಗಿ, ಬೆನ್ನಿನ ಸ್ನಾಯುಗಳು ದುರ್ಬಲವಾಗುತ್ತವೆ. ಐಟಿ ಕಂಪನಿಗಳ ಉದ್ಯೋಗಿಗಳಲ್ಲಿ ಬೆನ್ನುನೋವು ಹೆಚ್ಚು ಕಾಣಿಸಿಕೊಳ್ಳುತ್ತದೆ. ಏಕೆಂದರೆ, ಅವರು ಹೆಚ್ಚಿನ ಸಮಯ ಕಂಪ್ಯೂಟರ್ ಮುಂದೆಯೇ ಕಳೆಯುತ್ತಾರೆ.
ಬೆನ್ನುನೋವು ಉಪಶಮನಕ್ಕೆ ಹಲವಾರು ಪರಿಹಾರಗಳಿವೆ. ನೈಸರ್ಗಿಕವಾಗಿ ಪರಿಹಾರ ಬೇಕೆನ್ನುವವರು ಕೆಲವು ಯೋಗಾಸನಗಳನ್ನು ಮಾಡುವುದು ಒಳಿತು. ಇಲ್ಲಿ ತಿಳಿಸುವ ಐದು ಯೋಗಾಸನಗಳನ್ನು (Yogasana) ಪ್ರತಿ ನಿತ್ಯ ಅಭ್ಯಾಸ ಮಾಡಿದರೆ, ಬೆನ್ನುನೋವಿಗೆ ಪರಿಹಾರ ಸಿಗಲಿದೆ. ಇದನ್ನೂ ಓದಿ: ದೋಹಾ ಡೈಮಂಡ್ ಲೀಗ್‌ನಲ್ಲಿ ಇತಿಹಾಸ ಬರೆದ ನೀರಜ್ ಚೋಪ್ರಾ
1. ಸುಪ್ತ ಪಾದಂಗುಷ್ಠಾಸನ
ಒಂದು ಕಾಲನ್ನು ಚಾಚಿ ಇನ್ನೊಂದು ಕಾಲನ್ನು ಆಧಾರವಾಗಿಟ್ಟುಕೊಂಡಾಗ, ನರಮಂಡಲವು ಶಾಂತವಾಗುತ್ತದೆ. ಬೆನ್ನುಮೂಳೆಯು ಸ್ವಲ್ಪಮಟ್ಟಿಗೆ ಕುಗ್ಗುತ್ತದೆ. ಸ್ಯಾಕ್ರಮ್ ನಿಧಾನವಾಗಿ ಮತ್ತೆ ಜೋಡಿಸಲ್ಪಡುತ್ತದೆ. ಎತ್ತಿದ ಕಾಲಿಗೆ ಆಧಾರವಾಗಿ ಯೋಗ ಪಟ್ಟಿಯನ್ನು ಬಳಸುವುದರಿಂದ ಬೆನ್ನಿನ ಮೇಲಿನ ಯಾವುದೇ ಒತ್ತಡ ಇದ್ದರೂ ಕಡಿಮೆಯಾಗುತ್ತದೆ.
2.ವಿಪರೀತ ಕರಣಿ
ಈ ಭಂಗಿಯು ಸೊಂಟದ ಪ್ರದೇಶದಲ್ಲಿ ಸೂಕ್ಷ್ಮವಾದ ಎಳೆತವನ್ನು ಸೃಷ್ಟಿಸುತ್ತದೆ. ಊದಿಕೊಂಡ ಅಂಗಾಂಶಗಳಿಂದ ರಕ್ತ ಚಲನೆಯಾಗುತ್ತದೆ. ಉರಿಯೂತ ಕಡಿಮೆಯಾಗುತ್ತದೆ. ಜೊತೆಗೆ ಸೊಂಟವು ಮೃದುವಾಗುತ್ತದೆ. ಸೊಂಟದ ಕೆಳಗೆ ಮಡಿಸಿದ ಕಂಬಳಿ ಚಿಕಿತ್ಸಕ ಲಿಫ್ಟ್ ಅನ್ನು ನೀಡಬಹುದು. ಇದನ್ನೂ ಓದಿ: 40,000 ಫ್ಯಾನ್ಸ್‌ಗಳಿಂದ ವೈಟ್ ಜೆರ್ಸಿಯಲ್ಲಿ `ಕಿಂಗ್ ಕೊಹ್ಲಿ’ಗೆ ಗೌರವ
3.ಸಾಲಂಬ ಭುಜಂಗಾಸನ
ದಿಂಬನ್ನು ಬಳಸಿ ಈ ಆಸನ ಮಾಡುವುದರಿಂದ ದೇಹವು ಬೆಂಬಲಿತ ಲಿಫ್ಟ್ ಅನ್ನು ಅನುಭವಿಸಲು ಅನುವು ಮಾಡಿಕೊಡುತ್ತದೆ. ಇದು ಎದೆಗೂಡಿನ ಬೆನ್ನುಮೂಳೆಯನ್ನು ಜಾಗೃತಗೊಳಿಸುತ್ತದೆ. ಆಗಾಗ್ಗೆ ಬಾಗುವಿಕೆಯಿಂದ ಗಟ್ಟಿಯಾಗುತ್ತದೆ. ನೋವನ್ನು ಉಂಟುಮಾಡದೇ ಕೆಳ ಬೆನ್ನನ್ನು ಬಲಪಡಿಸುತ್ತದೆ.
4.ಅರ್ಧ ಜಠರ ಪರಿವರ್ತನಾಸನ
ಈ ಭಂಗಿಯಲ್ಲಿ, ಎದೆಯು ಮೇಲ್ಮುಖವಾಗಿ ಇರುವಾಗ ಮೊಣಕಾಲುಗಳು ಒಂದು ಬದಿಗೆ ಬೀಳುತ್ತವೆ. ಚಲನೆ ಕಡಿಮೆ, ಆದರೆ ಪರಿಣಾಮವು ಅಗಾಧವಾಗಿರುತ್ತದೆ. ಬೆನ್ನುಮೂಳೆಯ ಸ್ನಾಯುಗಳು ಮೃದುವಾಗುವಂತೆ ಮಾಡುತ್ತದೆ. ತಂತುಕೋಶವು ಒತ್ತಡವನ್ನು ಬಿಡುಗಡೆ ಮಾಡುತ್ತದೆ. ಇದನ್ನೂ ಓದಿ: ‘ಸಿತಾರೆ ಜಮೀನ್ ಪರ್’ ಗೆ ಬಾಯ್ಕಾಟ್ ಭಯ – ತ್ರಿವರ್ಣ ಧ್ವಜ ಡಿಪಿ ಹಾಕಿದ ಆಮೀರ್ ಖಾನ್!
5.ಆನಂದ ಬಾಲಾಸನ
ಈ ಭಂಗಿಯಲ್ಲಿ ನಿಧಾನವಾಗಿ ಆಕಡೆ ಈಕಡೆ ತೂಗಾಡುವಾಗ ಬೆನ್ನು ನೆಲಕ್ಕೆ ಮಸಾಜ್ ಮಾಡಿಕೊಳ್ಳುತ್ತದೆ. ಸ್ಯಾಕ್ರೊಲಿಯಾಕ್ ಕೀಲುಗಳನ್ನು ನಿರ್ಲಕ್ಷಿಸಿ, ಅವುಗಳಿಗೆ ಬೇಕಾದ ಸ್ಥಳಾವಕಾಶ ಸಿಗುತ್ತದೆ. ಮಲಗುವಾಗ ಮಕ್ಕಳು ಸಹಜವಾಗಿ ಹಿಗ್ಗುತ್ತವೆ. ಅದೇ ರೀತಿಯ ಅನುಭವವನ್ನು ಈ ಆಸನ ನೀಡುತ್ತದೆ.
ಯೋಗವೆಂದರೆ (International Yoga Day 2024) ಕೇವಲ ದೈಹಿಕವಾಗಿ ಮಾಡುವ ಆಸನಗಳ ವ್ಯಾಯಾಮ ಅಷ್ಟೇ ಅಲ್ಲ. ದೈಹಿಕ, ಮಾನಸಿಕ, ಆಧ್ಯಾತ್ಮಿಕ ಸಮ್ಮಿಲನದ ಆಯಾಮ. ಈಗಿನ ವೇಗದ, ಒತ್ತಡಮಯ ಜೀವನಶೈಲಿಯಿಂದ ಮನುಕುಲ ಅಲ್ಪಾಯುಷಿಯಾಗುತ್ತಿದೆ. ಯಾರೊಬ್ಬರ ಬದುಕಿನಲ್ಲಿ ‘ಯೋಗ’ ವೆಂಬುದೇ ಇಲ್ಲದಂತಾಗಿದೆ. ದೈಹಿಕ ಸದೃಢತೆ, ಮಾನಸಿಕ ಸಾಮರ್ಥ್ಯ, ಆಧ್ಯಾತ್ಮಿಕ ಚಿಂತನೆ ಮನುಷ್ಯನನ್ನು ಪರಿಪೂರ್ಣನನ್ನಾಗಿಸುತ್ತದೆ. ಮನುಷ್ಯ ಪರಿಪೂರ್ಣನಾಗಿದ್ದರೆ ಸದೃಢ ಸಮಾಜ ನಿರ್ಮಾಣ ಸಾಧ್ಯವಾಗುತ್ತದೆ. ಈಗಿನ ಡೋಲಾಯಮಾನ ಯುಗದಲ್ಲಿ ಯೋಗದ ಹಾದಿಯಲ್ಲಿ ನಡೆದು ಆರೋಗ್ಯಕರ ಸಮಾಜ ನಿರ್ಮಿಸುವುದು ಮುಖ್ಯವಾಗಿದೆ.
ಇಂದು (ಜೂ.21) ಅಂತರರಾಷ್ಟ್ರೀಯ ಯೋಗ ದಿನ. ಈ ಬಾರಿಯ ವಸ್ತು ವಿಷಯ ‘ನಮಗಾಗಿ ಮತ್ತು ಸಮಾಜಕ್ಕಾಗಿ ಯೋಗ’. ಇಡೀ ಜಗತ್ತಿಗೆ ಇಂದು ಯೋಗಾಸನ ಆಕರ್ಷಣೆಯ ಕೇಂದ್ರಬಿಂದುವಾಗಿದೆ. ಎಲ್ಲರ ಚಿತ್ತ ಯೋಗದ ಕಡೆ ನೆಟ್ಟಿದೆ. ಸಾಂಸ್ಕೃತಿಕ ಮತ್ತು ಭೌಗೋಳಿಕ ಗಡಿಯನ್ನು ದಾಟಿ ಯೋಗ ಪಸರಿಸಿದೆ. ಯೋಗಾಸನದ (Yoga) ಪ್ರಯೋಜನ, ಮಹತ್ವವನ್ನು ಜಗತ್ತು ಕೊಂಡಾಡುತ್ತಿದೆ. ಭಾರತವಷ್ಟೇ ಅಲ್ಲ, ವಿಶ್ವದ ಅನೇಕ ರಾಷ್ಟ್ರಗಳಲ್ಲಿ ಯೋಗ ದಿನವನ್ನು ಹಬ್ಬದಂತೆ ಸಂಭ್ರಮಿಸಲಾಗುತ್ತಿದೆ. ದೈಹಿಕ ಮತ್ತು ಸಾಮಾಜಿಕ ಆರೋಗ್ಯಕ್ಕೆ ಯೋಗ ಎಂದು ಸಾರಿ ಹೇಳಲಾಗುತ್ತಿದೆ. ಇದನ್ನೂ ಓದಿ: ವಿಧಾನಸೌಧದ ಎದುರು ಡಿಕೆಶಿ ಯೋಗ – ನಟಿ ಅನು ಪ್ರಭಾಕರ್, ಕ್ರಿಕೆಟಿಗ ಮನಿಷ್ ಪಾಂಡೆ ಸಾಥ್
ಭಾರತದಲ್ಲಂತೂ ಪ್ರತಿ ವರ್ಷ ಯೋಗ ದಿನವನ್ನು ವಿಶೇಷ ರೀತಿಯಲ್ಲಿ ಆಚರಿಸಲಾಗುತ್ತಿದೆ. ಗುಜರಾತ್, ಕರ್ನಾಟಕ ಹೀಗೆ ಅನೇಕ ರಾಜ್ಯಗಳಲ್ಲಿ ಗಿನ್ನಿಸ್ ರೆಕಾರ್ಡ್‌ಗಳು ಕೂಡ ಆಗಿದೆ. ‘ಯೋಗ’ಕ್ಕೆ ಜಾಗತಿಕ ಮನ್ನಣೆ ತಂದುಕೊಡುವಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಪ್ರಮುಖ ಪಾತ್ರ ವಹಿಸಿದರು. ಅವರ ನೇತೃತ್ವದಲ್ಲಿ ಭಾರತದ ಅನೇಕ ಕಡೆಗಳಲ್ಲಿ ದಾಖಲೆಯ ಮಟ್ಟದಲ್ಲಿ ಜನರನ್ನು ಸೇರಿ ಯೋಗ ದಿನವನ್ನು ಆಚರಿಸಲಾಗುತ್ತಿದೆ.
ಮೊದಲ ಅಂತಾರಾಷ್ಟ್ರೀಯ ಯೋಗ ದಿನವೇ ರೆಕಾರ್ಡ್
2015ರ ಜೂ.21 ರಂದು ವಿಶ್ವದಾದ್ಯಂತ ಮೊದಲ ಅಂತಾರಾಷ್ಟ್ರೀಯ ಯೋಗ ದಿನವನ್ನು ಆಚರಿಸಲಾಯಿತು. ಭಾರತದ ನವದೆಹಲಿಯ ರಾಜಪಥದಲ್ಲಿ ಮುಖ್ಯ ಕಾರ್ಯಕ್ರಮ ನಡೆಯಿತು. ಪ್ರಧಾನಿ ನರೇಂದ್ರ ಮೋದಿ ಮತ್ತು ಅನೇಕ ರಾಷ್ಟ್ರಗಳ ಗಣ್ಯರು ಸೇರಿದಂತೆ ಸಾವಿರಾರು ಸಂಖ್ಯೆಯಲ್ಲಿ ಜನ ಪಾಲ್ಗೊಂಡಿದ್ದರು. 35 ನಿಮಿಷಗಳ ಕಾಲ 21 ಆಸನಗಳನ್ನು ಪ್ರದರ್ಶಿಸಲಾಯಿತು. ಬರೋಬ್ಬರಿ 35,985 ಮಂದಿ ಒಂದೇ ವೇದಿಕೆಯಲ್ಲಿ ಯೋಗಾಸನದಲ್ಲಿ ಪಾಲ್ಗೊಂಡಿದ್ದರು. ಈ ಕಾರ್ಯಕ್ರಮ ಗಿನ್ನಿಸ್ ದಾಖಲೆ ಬರೆಯಿತು. ಭಾರತವಷ್ಟೇ ಅಲ್ಲದೇ ನ್ಯೂಯಾರ್ಕ್, ಪ್ಯಾರಿಸ್, ಬೀಜಿಂಗ್, ಬ್ಯಾಂಕಾಕ್, ಕೌಲಾಲಂಪುರ್, ಸ್ಯಾನ್ ಫ್ರಾನ್ಸಿಸ್ಕೋ, ಸಿಯೋಲ್ ಮತ್ತು ಸೀಶೆಲ್ಸ್ ಸೇರಿದಂತೆ ಅನೇಕ ರಾಷ್ಟçಗಳಲ್ಲಿ ಯೋಗ ದಿನವನ್ನು ಆಚರಿಸಲಾಗಿತ್ತು. ಇದನ್ನೂ ಓದಿ: ವಿಶ್ವ ಆರೋಗ್ಯಕ್ಕಾಗಿ ಯೋಗ – ʻಸ್ವಯಂ ಮತ್ತು ಸಮಾಜಕ್ಕಾಗಿ ಯೋಗʼ
ಉತ್ತರ ಪ್ರದೇಶದಲ್ಲಿ 51,000 ಜನರಿಂದ ಯೋಗಾಸನ
ಮೊದಲ ವರ್ಷದ ಯಶಸ್ಸಿನ ಫಲವಾಗಿ, ಪ್ರತಿ ಬಾರಿ ದೊಡ್ಡ ಕಾರ್ಯಕ್ರಮ ಆಯೋಜಿಸಿ ಜನರನ್ನು ಒಟ್ಟುಗೂಡಿಸುವ ಯೋಜನೆಯನ್ನು ಕೇಂದ್ರ ಸರ್ಕಾರ ಕೈಗೊಂಡಿತು. 2017 ರಲ್ಲಿ ಪ್ರಧಾನಿ ಮೋದಿ ನೇತೃತ್ವದಲ್ಲಿ ಉತ್ತರ ಪ್ರದೇಶದಲ್ಲಿ ಕಾರ್ಯಕ್ರಮ ಆಯೋಜಿಸಲಾಗಿತ್ತು. ಸುಮಾರು 50,000 ಜನರು ಪಾಲ್ಗೊಂಡು ಯೋಗಾಸನ ಮಾಡಿದರು. ಇದು ಮೊದಲ ವರ್ಷದ ದಾಖಲೆಯನ್ನು ಮುರಿಯಿತು. ಆಗ ಕರ್ನಾಟಕದ ಮೈಸೂರಿನಲ್ಲೂ ಬೃಹತ್ ವೇದಿಕೆಯಲ್ಲಿ ಯೋಗಾಸನ ಕಾರ್ಯಕ್ರಮ ಜರುಗಿತ್ತು. ಇಲ್ಲಿ 55,506 ಜನರು ಭಾಗವಹಿಸಿದ್ದರು. ಇದು ಕೂಡ ಗಿನ್ನಿಸ್ ರೆಕಾರ್ಡ್ ದಾಖಲಿಸಿತ್ತು.
ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ಯೋಗ ಹಂಗಾಮ
2022ರಲ್ಲಿ ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ಯೋಗ ಕಾರ್ಯಕ್ರಮ ನಡೆದಿತ್ತು. ಮೈಸೂರು ಅರಮನೆ ಆವರಣದಲ್ಲಿ ಪ್ರಧಾನಿ ಮೋದಿ ನೇತೃತ್ವದಲ್ಲಿ ಜನರು ಯೋಗಾಸನ ಮಾಡಿದರು. ಆಗ ಸುಮಾರು 15,000 ಮಂದಿ ಭಾಗವಹಿಸಿದ್ದರು. ಇದು ಗಿನ್ನಿಸ್ ರೆಕಾರ್ಡ್ ಮಾಡದೇ ಇದ್ದರೂ ದೇಶದ ಗಮನ ಸೆಳೆಯಿತು. ಆಗ ತಾನೇ ದೇಶವು ಜನತೆ ಕೋವಿಡ್ ಸಾಂಕ್ರಾಮಿಕದಿಂದ ಚೇತರಿಸಿಕೊಂಡಿತ್ತು. ಹೀಗಾಗಿ ಮುಂಜಾಗ್ರತೆ ದೃಷ್ಟಿಯಿಂದ ಸೀಮಿತ ಸಂಖ್ಯೆಯಲ್ಲಿ ಜನರನ್ನು ಸೇರಿಸಿ ಕಾರ್ಯಕ್ರಮ ಆಯೋಜಿಸಲಾಗಿತ್ತು. ಇದನ್ನೂ ಓದಿ: ಅಫ್ಘಾನ್ ವಿರುದ್ಧ ಭಾರತಕ್ಕೆ 47 ರನ್‌ಗಳ ಸೂಪರ್ ಜಯ – ಹಿಟ್‌ಮ್ಯಾನ್ ವಿಶೇಷ ಸಾಧನೆ!
ಮೋದಿ ತವರಲ್ಲಿ ದಾಖಲೆ
2023ರಲ್ಲಿ ಪ್ರಧಾನಿ ಮೋದಿ ತವರು ಗುಜರಾತ್‌ನ ಸೂರತ್‌ನಲ್ಲಿ ಬೃಹತ್ ಕಾರ್ಯಕ್ರಮ ನಡೆಯಿತು. ಸುಮಾರು 1.50 ಲಕ್ಷ ಜನರು ಪಾಲ್ಗೊಂಡು ಯೋಗಾಸನ ಮಾಡಿದರು. ವಿಶ್ವದಲ್ಲೇ ಅಪಾರ ಸಂಖ್ಯೆಯಲ್ಲಿ ಜನರನ್ನು ಸೇರಿಸಿ ನಡೆಸಿದ ಕಾರ್ಯಕ್ರಮ ಇದಾಗಿದೆ. ಇದುವರೆಗಿನ ಅತಿದೊಡ್ಡ ದಾಖಲೆಯಿದು. ಹೀಗಾಗಿ ಇದು ವರ್ಲ್ಡ್ ಆಫ್ ಬುಕ್ ರೆರ್ಕಾಡ್ ಸೇರಿತು. ಇದೇ ವರ್ಷ ಭಾರತದ ನರೇಂದ್ರ ಮೋದಿ ನೇತೃತ್ವದಲ್ಲಿ ನ್ಯೂಯಾರ್ಕ್ನಲ್ಲಿರುವ ಯುಎನ್ ಪ್ರಧಾನ ಕಚೇರಿಯಲ್ಲಿ ಐತಿಹಾಸಿಕ ಯೋಗ ಕಾರ್ಯಕ್ರಮ ನಡೆಯಿತು.
ಬೆಂಗಳೂರು: ನಿಯಮಿತವಾಗಿ ಯೋಗ ಮತ್ತು ವ್ಯಾಯಾಮ ಮಾಡುವುದರಿಂದ ಕ್ಯಾನ್ಸರ್‍ನಂತಹ ಗಂಭೀರ ಕಾಯಿಲೆಗಳನ್ನು ತಪ್ಪಿಸಬಹುದಾಗಿದೆ. ಇದರಿಂದಾಗಿ ಪ್ರತಿಯೊಬ್ಬರು ಯೋಗ (Yoga) ಹಾಗೂ ವ್ಯಾಯಾಮವನ್ನು ರೂಢಿಸಿಕೊಂಡು ಆರೋಗ್ಯ ಕಾಪಾಡಿಕೊಳ್ಳಬೇಕು ಎಂದು ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ (Thawar Chand Gehlot) ಕರೆಕೊಟ್ಟಿದ್ದಾರೆ.
ಭಾರತೀಯ ರೆಡ್ ಕ್ರಾಸ್ ಸೊಸೈಟಿ (Red Cross), ಕರ್ನಾಟಕ ರಾಜ್ಯ ಶಾಖೆ, ಕಿದ್ವಾಯಿ ಮೆಮೋರಿಯಲ್ ಇನ್ಸ್ಟಿಟ್ಯೂಟ್ ಆಫ್ ಆಂಕೊಲಾಜಿ ಸಹಯೋಗದಲ್ಲಿ ರಾಜಭವನದ ಸಿಬ್ಬಂದಿಗಾಗಿ ರಾಜಭವನದಲ್ಲಿ ಆಯೋಜಿಸಲಾಗಿದ್ದ ಕ್ಯಾನ್ಸರ್ ಜಾಗೃತಿ ಮತ್ತು ತಪಾಸಣೆ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು. ಇದನ್ನೂ ಓದಿ: Bengaluru Mysuru Expressway- ದ್ವಿಚಕ್ರ, ತ್ರಿಚಕ್ರ ವಾಹನ ನಿಷೇಧಿಸಿ: ಮರಿತಿಬ್ಬೇಗೌಡ
ಕ್ಯಾನ್ಸರ್ ದೇಹದಲ್ಲಿ ಸಂಭವಿಸುವ ಅಸಹಜ ಮತ್ತು ಅಪಾಯಕಾರಿ ಸ್ಥಿತಿಯಾಗಿದೆ. ದೇಹದಲ್ಲಿನ ಜೀವಕೋಶಗಳು ಅಸಹಜವಾಗಿ ಬೆಳೆಯಲು ಮತ್ತು ವಿಭಜಿಸಲು ಪ್ರಾರಂಭಿಸಿದಾಗ ಕ್ಯಾನ್ಸರ್ ಸಂಭವಿಸುತ್ತದೆ. ವಿವಿಧ ರೀತಿಯ ಕ್ಯಾನ್ಸರ್‍ನ ಲಕ್ಷಣಗಳು ಪರಸ್ಪರ ಭಿನ್ನವಾಗಿರುತ್ತವೆ. ಅಂತಹ ಪರಿಸ್ಥಿತಿಯಲ್ಲಿ, ಪ್ರತಿಯೊಬ್ಬರೂ ಅದರ ಚಿಹ್ನೆಗಳು ಮತ್ತು ರೋಗಲಕ್ಷಣಗಳ ಬಗ್ಗೆ ತಿಳಿದಿರಬೇಕು, ಆದ್ದರಿಂದ ಸರಿಯಾದ ಸಮಯಕ್ಕೆ ರೋಗ ಲಕ್ಷಣಗಳನ್ನು ಗುರುತಿಸಿ ಮತ್ತು ರೋಗವನ್ನು ನಿರ್ಧರಿಸಿ ಸೂಕ್ತ ಚಿಕಿತ್ಸೆಯನ್ನು ಪ್ರಾರಂಭಿಸಲು ಸಹಕಾರಿಯಾಗಲಿದೆ ಎಂದಿದ್ದಾರೆ.
ವಿಶ್ವ ಆರೋಗ್ಯ ಸಂಸ್ಥೆಯ ಪ್ರಕಾರ ಕ್ಯಾನ್ಸರ್ ವಿಶ್ವಾದ್ಯಂತ ಸಾವಿಗೆ ಪ್ರಮುಖ ಕಾರಣವಾಗಿದೆ. ಕ್ಯಾನ್ಸರ್‍ನಿಂದ ಸಾವಿನ ಸಂಖ್ಯೆ ತುಂಬಾ ಹೆಚ್ಚಾಗಿದೆ. ಕ್ಯಾನ್ಸರ್ ರೋಗವನ್ನು ಲಘುವಾಗಿ ಪರಿಗಣಿಸಬಾರದು. ಮೊದಲ ಹಂತದಲ್ಲೇ ಚಿಕಿತ್ಸೆಯನ್ನು ಪಡೆಯಬೇಕು. ಅಲ್ಲದೇ ಸಾರ್ವಜನಿಕರು ಕೂಡ ತಮ್ಮ ಪ್ರತಿನಿತ್ಯ ಜೀವನದಲ್ಲಿ ಉತ್ತಮ ಆಹಾರ ಸೇವನೆ, ವ್ಯಾಯಾಮ, ಯೋಗಭ್ಯಾಸವನ್ನು ಅಳವಡಿಸಿಕೊಳ್ಳುವುದರಿಂದ ಖಾಯಿಲೆಗಳಿಂದ ದೂರವಿರಬಹುದಾಗಿದೆ ಎಂದಿದ್ದಾರೆ.
ಇಂಡಿಯನ್ ರೆಡ್ ಕ್ರಾಸ್ ಸೊಸೈಟಿಯು ವಿಪತ್ತು ನಿರ್ವಹಣೆ, ಬ್ಲಡ್ ಬ್ಯಾಂಕ್, ಸ್ವಯಂ ಪ್ರೇರಿತ ರಕ್ತದಾನ ಶಿಬಿರಗಳು, ಪ್ರಥಮ ಚಿಕಿತ್ಸೆ, ಶಿಕ್ಷಣ, ಸಾರ್ವಜನಿಕ ಜಾಗೃತಿ ಕಾರ್ಯಕ್ರಮಗಳು, ವಿವಿಧ ತರಬೇತಿ ಮತ್ತು ಅಗತ್ಯವಿರುವಾಗ ಅಗತ್ಯವಿರುವವರಿಗೆ ಸೇವೆ ಸಲ್ಲಿಸುವ ಸ್ವಯಂಸೇವಾ ಮಾನವೀಯ ಸಂಸ್ಥೆಯಾಗಿದೆ. ಕರ್ನಾಟಕ ರೆಡ್ ಕ್ರಾಸ್ ಸಂಸ್ಥೆಯು 100 ವರ್ಷಗಳಿಗೂ ಹೆಚ್ಚು ಕಾಲದಿಂದ ಜನರ ಸೇವೆಯ ಅನೇಕ ಪುಣ್ಯ ಕಾರ್ಯಗಳನ್ನು ಮಾಡುತ್ತಿದೆ. ತುರ್ತು ಮತ್ತು ಬಿಕ್ಕಟ್ಟಿನ ಸಮಯದಲ್ಲಿ ಅತ್ಯಂತ ದುರ್ಬಲ ಸಮುದಾಯವನ್ನು ಬೆಂಬಲಿಸುತ್ತಿರುವ ಸಂಸ್ಥೆಯ ಎಲ್ಲಾ ಸದಸ್ಯರು, ಸ್ವಯಂಸೇವಕರು ಮತ್ತು ಅಧಿಕಾರಿಗಳನ್ನು ಅವರು ಶ್ಲಾಘಿಸಿದರು.
ಕರ್ನಾಟಕ ರೆಡ್ ಕ್ರಾಸ್ ಸೊಸೈಟಿಯು ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಕ್ಯಾನ್ಸರ್ ಜಾಗೃತಿ ಕಾರ್ಯಕ್ರಮಗಳನ್ನು ಆಯೋಜಿಸುತ್ತಿದೆ. ಈ ಮೂಲಕ ಕ್ಯಾನ್ಸರ್ ಬಗ್ಗೆ ಸಾರ್ವಜನಿಕ ಜಾಗೃತಿ ಮೂಡಿಸಲು ಕೆಲಸ ಮಾಡುತ್ತಿದೆ. ಕಿದ್ವಾಯಿ ಸ್ಮಾರಕ ಸಂಸ್ಥೆಯ ನಿರ್ದೇಶಕರು ಮತ್ತು ಅವರ ತಂಡವು ಮಾನವೀಯ ಸೇವೆ ಮತ್ತು ದೈವಿಕ ಸೇವೆ ಮಾಡುತ್ತಿದ್ದಾರೆ. ಮಾನವೀಯತೆಗೆ ಸೇವೆ ಸಲ್ಲಿಸುವ ಎರಡೂ ಸಂಸ್ಥೆಗಳ ಸದಸ್ಯರಿಗೆ ಕೃತಜ್ಞತೆ ಸಲ್ಲಿಸಿದ ಅವರು, ರಾಜಭವನದ ಅಧಿಕಾರಿ, ಸಿಬ್ಬಂದಿಗಳು ಈ ಕಾರ್ಯಕ್ರಮದ ಸದುಪಯೋಗ ಪಡೆದುಕೊಳ್ಳಬೇಕು ಎಂದರು.
ಕಿದ್ವಾಯಿ ಸಂಸ್ಥೆಯ ನಿರ್ದೇಶಕರಾದ ಲೋಕೇಶ್ ಅವರು ಮಾತನಾಡಿ, ಇತ್ತೀಚಿನ ದಿನಗಳಲ್ಲಿ ಕ್ಯಾನ್ಸರ್ ಪೀಡಿತರ ಸಂಖ್ಯೆ ಹೆಚ್ಚಾಗುತ್ತಿದೆ. ಇದನ್ನು ತಡೆಯುವ ನಿಟ್ಟಿನಲ್ಲಿ ರೆಡ್ ಕ್ರಾಸ್ ಸೇರಿದಂತೆ ಅನೇಕ ಸ್ವಯಂ ಸಂಸ್ಥೆಗಳನ್ನು ನಮ್ಮೊಂದಿಗೆ ಕೈಜೋಡಿಸಿ, ಜಾಗೃತಿ ಮೂಡಿಸುವ ಕಾರ್ಯ ಕೈಗೊಳ್ಳುತ್ತಿವೆ. ವ್ಯಕ್ತಿಯನ್ನು ಸ್ಕ್ರೀನಿಂಗ್ ಮಾಡುವ ಮೂಲಕ ಪ್ರಾರಂಭಿಕ ಹಂತದಲ್ಲೇ ಕ್ಯಾನ್ಸರ್ ಪತ್ತೆ ಹಚ್ಚಿ ಚಿಕಿತ್ಸೆ ನೀಡಬಹುದಾಗಿದೆ. ಪ್ರತಿನಿತ್ಯ 1 ಗಂಟೆಗಳ ಕಾಲ ವ್ಯಾಯಾಮ, ಮಿಶ್ರ ಹಣ್ಣುಗಳ ಸೇವೆ ಮಾಡುವುದು ಹಾಗೂ ಜಂಕ್ ಫುಡ್ ಸೇವನೆ ಕಡಿತಗೊಳಿಸಿರುವುದರಿಂದ ಇದನ್ನು ನಿಯಂತ್ರಿಸಬಹುದಾಗಿದೆ ಎಂದು ಮಾಹಿತಿ ಹಂಚಿಕೊಂಡಿದ್ದಾರೆ.
ಭಾರತೀಯ ರೆಡ್ ಕ್ರಾಸ್ ಸಂಸ್ಥೆ ರಾಜ್ಯಾಧ್ಯಕ್ಷರಾದ ವಿಜಯ್ ಕುಮಾರ್ ಪಾಟೀಲ್ ಅವರು ಮಾತನಾಡಿ, ಮಾನವನಿಗೆ ಉತ್ತಮ ಆರೋಗ್ಯ ಬಹಳ ಪ್ರಮುಖವಾಗಿರುತ್ತದೆ. ಇತ್ತೀಚಿನ ದಿನಗಳಲ್ಲಿ ಅನಾರೋಗ್ಯ ಹೆಚ್ಚಾಗಿ ಕಾಡುತ್ತಿದೆ. ಯುವಜನತೆ ಹೆಚ್ಚು ಅನಾರೋಗ್ಯ ತುತ್ತಾಗುತ್ತಿರುವುದು ವಿಷಾದನೀಯ ಸಂಗತಿಯಾಗಿದೆ. ಇದನ್ನು ತಡೆಗಟ್ಟುವುದು ನಮ್ಮೆಲ್ಲರ ಜವಾಬ್ದಾರಿಯಾಗಿದೆ. ಆರೋಗ್ಯದ ಮೌಲ್ಯವನ್ನು ಅರಿತು, ಆರೋಗ್ಯಕರ ಜೀವನ ಶೈಲಿ ಅಳವಡಿಸಿಕೊಳ್ಳಲು ಪ್ರತಿಯೊಬ್ಬರು ಮುಂದಾಗಬೇಕು ಎಂದಿದ್ದಾರೆ.
ನಟಿ ರಾಧಿಕಾ ಕುಮಾರಸ್ವಾಮಿ ವಿಶ್ವ ಯೋಗ ದಿನದ ಸಂದರ್ಭದಲ್ಲಿ ತಾವು ಯೋಗ (Yoga) ಮಾಡುತ್ತಿರುವ ಫೋಟೋಗಳನ್ನು (Photo) ಶೇರ್ ಮಾಡಿದ್ದಾರೆ. ಆ ಫೋಟೋಗಳು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ (Viral) ಆಗಿವೆ.
ಕೇವಲ ಯೋಗ ಮಾತ್ರವಲ್ಲ ಅವರು ಡ್ಯಾನ್ಸ್ ಮೂಲಕವೂ ಫಿಟ್ ನೆಸ್ ಕಾಪಾಡಿಕೊಂಡು ಬಂದಿದ್ದಾರೆ. ಜೊತೆಗೆ ಜಿಮ್ ನಲ್ಲೂ ಹಲವು ಗಂಟೆಗಳನ್ನು ಕಳೆಯುತ್ತಾರೆ. ಹಾಗಾಗಿ ಇನ್ನೂ ಹದಿನಾರರ ಬಾಲೆಯಂತೆ ರಾಧಿಕಾ ಕಾಣಿಸುತ್ತಾರೆ.
ಯೋಗ ದಿನದ ನಿಮಿತ್ತವಾಗಿ ಯೋಗ ಮಾಡುತ್ತಿರುವ ಫೋಟೋಗಳನ್ನು ಅವರು ಶೇರ್ ಮಾಡಿದ್ದು, ಫೋಟೋದ ಜೊತೆಗೆ ‘ಭವಿಷ್ಯದ ಬಗ್ಗೆ ಚಿಂತೆ ಬೇಡ, ಹಳೆಯದನ್ನು ಮರೆತು ಬಿಡಿ’ ಎಂದು ಬರೆದುಕೊಂಡಿದ್ದಾರೆ. ಈ ಮೂಲಕ ಬಂದಂತೆ ಜೀವನವನ್ನು ನಡೆಸಿಕೊಂಡು ಹೋಗಿ ಎಂದು ಜೀವನ ಸಂದೇಶ ರವಾನಿಸಿದ್ದಾರೆ.
ಇತ್ತೀಚೆಗೆ ಮತ್ತೆ ಸಿನಿಮಾ ರಂಗದಲ್ಲಿ ಸಕ್ರೀಯರಾಗಿದ್ದಾರೆ ರಾಧಿಕಾ ಕುಮಾರಸ್ವಾಮಿ (Radhika Kumaraswamy). ಅವರು ನಾಯಕಿಯಾಗಿ ನಟಿಸುತ್ತಿರುವ ‘ಅಜಾಗ್ರತ’ (Ajagrata) ಚಿತ್ರದ ಮುಹೂರ್ತ (Muhurta) ಸಮಾರಂಭ ಇತ್ತೀಚೆಗೆ ಹೈದರಾಬಾದ್ (Hyderabad) ನ ರಾಮನಾಯ್ಡು ಸ್ಟುಡಿಯೋದಲ್ಲಿ ನೆರವೇರಿದೆ.
ಬಾಲಿವುಡ್ ನ ಖ್ಯಾತ ನಟ ಶ್ರೇಯಸ್ ತಲ್ಪಾಡೆ (Shreyas Talpade) ಈ ಚಿತ್ರದ ನಾಯಕನಾಗಿ ನಟಿಸುತ್ತಿದ್ದಾರೆ. ರಾಧಿಕಾ ಕುಮಾರಸ್ವಾಮಿ ನಾಯಕಿಯಾಗಿ ಅಭಿನಯಿಸುತ್ತಿದ್ದಾರೆ. ರಾವ್ ರಮೇಶ್, ಸುನೀಲ್, ಆದಿತ್ಯ ಮೆನನ್, ರಾಘವೇಂದ್ರ ಶ್ರವಣ್, ದೇವರಾಜ್, ಜಯಪ್ರಕಾಶ್, ವಿನಯಾಪ್ರಸಾದ್ ಮುಂತಾದವರು ಈ ಚಿತ್ರದ ತಾರಾಬಳಗದಲ್ಲಿದ್ದಾರೆ.
ಏಳು ಭಾಷೆಗಳಲ್ಲಿ ಈ ಚಿತ್ರ ಬರಲಿದೆ. ಡಬ್ ಮಾಡದೆ, ಆಯಾ ಭಾಷೆಗಳಲ್ಲಿ ಪ್ರತ್ಯೇಕವಾಗಿ ಚಿತ್ರೀಕರಣ ನಡೆಯಲಿರುವುದು ಈ ಚಿತ್ರದ ವಿಶೇಷ . ಹಲವು ದಿನಗಳ ನಂತರ ಮತ್ತೆ ರಾಧಿಕಾ ಕುಮಾರಸ್ವಾಮಿ ಸಿನಿಮಾ ರಂಗಕ್ಕೆ ಬಂದಿರುವುದು ಅವರ ಅಭಿಮಾನಿಗಳಿಗೆ ಸಹಜವಾಗಿಯೇ ಸಂಭ್ರಮ ತಂದಿದೆ.
ಕಾರವಾರ: ಪ್ರತಿವರ್ಷ ಜೂನ್ 21ರಂದು ವಿಶ್ವ ಯೋಗದಿನವನ್ನಾಗಿ (World Yoga Day) ಆಚರಿಸಲಾಗುತ್ತದೆ. ಈ ಹಿನ್ನೆಲೆ ಉತ್ತರಕನ್ನಡ (Uttara Kannada) ಜಿಲ್ಲೆಯ ಕಾರವಾರದಲ್ಲಿ (Karwar) ನೌಕಾದಳ ಸಿಬ್ಬಂದಿ (Naval Personnel) ಏಕಕಾಲದಲ್ಲಿ ಯೋಗ (Yoga) ಮಾಡುವ ಮೂಲಕ ವಿಶ್ವ ಯೋಗ ದಿನಾಚರಣೆಯನ್ನು ಆಚರಿಸಿದ್ದಾರೆ.
ನೌಕಾದಳದ 200ಕ್ಕೂ ಹೆಚ್ಚು ಸಿಬ್ಬಂದಿ ಕಾರವಾರದ ರವೀಂದ್ರನಾಥ ಕಡಲತೀರದಲ್ಲಿ ಯೋಗ ದಿನಾಚರಣೆಯನ್ನು ಆಚರಿಸಿದರು. ಅನೇಕ ರೀತಿಯ ಯೋಗ ಭಂಗಿಗಳನ್ನು ಮಾಡುವ ಮೂಲಕ ವಿಶ್ವ ಯೋಗ ದಿನಾಚರಣೆಗೆ ಹೆಚ್ಚಿನ ಮೆರುಗನ್ನು ತುಂಬಿದರು. ಇದನ್ನೂ ಓದಿ: ಭಾರತದ ಕರೆಗೆ 180ಕ್ಕೂ ಹೆಚ್ಚು ದೇಶಗಳು ಒಗ್ಗೂಡಿರುವುದು ಐತಿಹಾಸಿಕ: ಮೋದಿ
ಕಾರವಾರದ ಪೊಲೀಸ್ ಕಲ್ಯಾಣ ಮಂಟಪದಲ್ಲಿ ಜಿಲ್ಲಾಧಿಕಾರಿ ಪ್ರಭುಲಿಂಗ ಕವಳಿಕಟ್ಟಿ ಚಾಲನೆ ನೀಡಿದರು. ಈ ಕಾರ್ಯಕ್ರಮದಲ್ಲಿ ಪತಂಜಲಿ ಯೋಗ ಸಮಿತಿ, ರೋಟರಿ ಕ್ಲಬ್, ಎನ್‌ಸಿಸಿ, ಸ್ಕೌಟ್ ಗೈಡ್ ಪ್ರತಿನಿಧಿಗಳು ಭಾಗಿಯಾಗಿದ್ದಾರೆ. ಅಲ್ಲದೇ ಜಿಲ್ಲಾ ಪಂಚಾಯತ್ ಸಿಇಒ ಈಶ್ವರ ಕಾಂದೂ, ಎಸ್ಪಿ ವಿಷ್ಣುವರ್ಧನ್ ಸೇರಿದಂತೆ ಇತರ ಅಧಿಕಾರಿಗಳು ಭಾಗವಹಿಸಿ ಯೋಗಾಭ್ಯಾಸ ನಡೆಸಿದರು. ಇದನ್ನೂ ಓದಿ: ಯೋಗಾ ಯೋಗ – ಶರೀರ, ಮನಸ್ಸಿನ ಆರೋಗ್ಯದ ಕೊಂಡಿ ಯೋಗ
ಇಂದು ವಿಶ್ವಸಂಸ್ಥೆಯ ಕೇಂದ್ರ ಕಚೇರಿಯಲ್ಲಿ ನಡೆಯಲಿರುವ 9ನೇ ಯೋಗ ದಿನಾಚರಣೆಯ ನೇತೃತ್ವವನ್ನು ಮೋದಿ ವಹಿಸಲಿದ್ದಾರೆ. ಭಾರತೀಯ ಕಾಲಮಾನದ ಪ್ರಕಾರ ಸಂಜೆ 5:25 ರಿಂದ 6:30ರ ಅವಧಿಯಲ್ಲಿ ಈ ಕಾರ್ಯಕ್ರಮ ನಡೆಯಲಿದೆ. 180ಕ್ಕೂ ಹೆಚ್ಚು ದೇಶಗಳ ಪ್ರತಿನಿಧಿಗಳು ಯೋಗ ದಿನದಲ್ಲಿ ಭಾಗಿಯಾಗಲಿದ್ದಾರೆ. ಇದನ್ನೂ ಓದಿ: ಅನ್ನ ಭಾಗ್ಯ ಫೈಟ್ ದೆಹಲಿಗೆ ಶಿಫ್ಟ್
ಪ್ರತಿ ವರ್ಷ ಜೂನ್ 21 ರಂದು ಅಂತಾರಾಷ್ಟ್ರೀಯ ಯೋಗ ದಿನವನ್ನ (International Yoga Day) ವಿಶ್ವದಾದ್ಯಂತ ಅದ್ಧೂರಿಯಾಗಿ ಆಚರಣೆ ಮಾಡಲಾಗುತ್ತದೆ. ಅದರಲ್ಲೂ ಇತ್ತೀಚಿನ ದಿನಗಳಲ್ಲಿ ಮಾನಸಿಕ ಒತ್ತಡ, ದೈಹಿಕ ಸೌಂದರ್ಯ ಮತ್ತು ಸಮತೋಲನ, ಉತ್ತಮ ಆರೋಗ್ಯ ಕಾಪಾಡಿಕೊಳ್ಳುವ ಸಲುವಾಗಿ ಯೋಗದ ಮೊರೆ ಹೋಗುತ್ತಿದ್ದಾರೆ. ಇಂದು ಅಂತಾರಾಷ್ಟ್ರೀಯ ಮಟ್ಟದಲ್ಲಿ ಯೋಗ ಪ್ರಖ್ಯಾತಿ ಪಡೆದಿದ್ದು, ಪ್ರತಿ ವರ್ಷವೂ ಜಾಗೃತಿ ಮೂಡಿಸುವ ಉದ್ದೇಶದಿಂದ ಒಂದೊಂದು ವಸ್ತು ವಿಷಯಗಳನ್ನ ಆಯ್ಕೆ ಮಾಡಲಾಗುತ್ತದೆ. ಈ ಬಾರಿ `ವಸುದೈವ ಕುಟುಂಬಕಂ’ ಥೀಮ್ ಅನ್ನು ಆಯ್ಕೆ ಮಾಡಿಕೊಳ್ಳಲಾಗಿದೆ.
ಈ ಯೋಗವನ್ನು ಭಾರತವು ವಿಶ್ವಕ್ಕೆ ನೀಡಿದ ಮಹತ್ವದ ಕೊಡುಗೆಯಾಗಿದೆ. ಹೌದು. 6,000 ವರ್ಷಕ್ಕೂ ಹಳೆಯದಾದ ಭೌತಿಕ, ಮಾನಸಿಕ ಮತ್ತು ಆಧ್ಯಾತ್ಮಿಕ ಅಭ್ಯಾಸವೂ ಆಗಿರುವ ಯೋಗವು ದೇಹ ಮತ್ತು ಮನಸ್ಸನ್ನು ಸಂಪರ್ಕಿಸುವ ಪ್ರಾಚೀನ ಕಲೆಯೂ ಆಗಿದೆ. ಯೋಗ, ಧ್ಯಾನ, ಸಭೆಗಳು ಚರ್ಚೆಗಳು, ಸಾಂಸ್ಕೃತಿಕ ಪ್ರದರ್ಶನಗಳೊಂದಿಗೆ ಅಭ್ಯಾಸ ಮಾಡುವ ಮೂಲಕ ವಿಶ್ವದ ಬಹುತೇಕ ರಾಷ್ಟ್ರಗಳಲ್ಲಿ ಯೋಗ ದಿನವನ್ನ ಪ್ರತಿವರ್ಷ ಆಚರಿಸಲಾಗುತ್ತದೆ.
2015 ಜೂನ್ 21ರಂದು ಮೊದಲ ಬಾರಿಗೆ ಯೋಗ ದಿನವನ್ನ ಆಚರಿಸಲಾಯಿತು. ರಾಷ್ಟ್ರ ರಾಜಧಾನಿಯ ರಾಜಪಥದಲ್ಲಿ ನಡೆದ ಅಂತಾರಾಷ್ಟ್ರೀಯ ಯೋಗ ದಿನಾಚರಣೆಯು ಹೊಸ ದಾಖಲೆಯನ್ನೂ ಬರೆಯಿತು. 2015 ಅಂತಾರಾಷ್ಟ್ರೀಯ ಯೋಗ ದಿನಾಚರಣೆಯ ಸ್ಮರಣಾರ್ಥವಾಗಿ ಭಾರತೀಯ ರಿಸರ್ವ್ ಬ್ಯಾಂಕ್ 10 ರೂಪಾಯಿಯ ನಾಣ್ಯವನ್ನೂ ಸಹ ಬಿಡುಗಡೆ ಮಾಡಿತು.
ವಿಶ್ವ ಯೋಗದಿನದ ಐತಿಹಾಸಿಕ ಕ್ಷಣ ನೆನಪಿದೆಯಾ?
ಅಂತಾರಾಷ್ಟ್ರೀಯ ಯೋಗ ದಿನಾಚರಣೆಯ ಕರಡು ಪ್ರಸ್ತಾವನೆಯನ್ನ 2014ರ ಡಿಸೆಂಬರ್‌ನಲ್ಲಿ ವಿಶ್ವಸಂಸ್ಥೆಯ ಸಾಮಾನ್ಯ ಸಭೆಯಲ್ಲಿ, ಭಾರತದ ಖಾಯಂ ಪ್ರತಿನಿಧಿಯಾಗಿರುವ ಅಶೋಕ್ ಕುಮಾರ್ ಮಂಡಿಸಿದ್ದರು. ವಿಶ್ವಸಂಸ್ಥೆಗೆ ಇದು ಐತಿಹಾಸಿಕ ಕ್ಷಣವಾಗಿದ್ದು, ಅದರ ಸದಸ್ಯ ರಾಷ್ಟ್ರಗಳು ಅಭೂತಪೂರ್ವ ಬೆಂಬಲ ಸೂಚಿಸಿದ್ದವು. ವಿಶ್ವ ಸಂಸ್ಥೆಯ 193 ರಾಷ್ಟ್ರಗಳ ಪೈಕಿ 177 ದೇಶಗಳು ಪ್ರಸ್ತಾವನೆಗೆ ಅನುಮೋದನೆಯನ್ನು ನೀಡಿದ್ದವು.
ಮೊದಲ ಯೋಗ ದಿನ ಆಚರಣೆ ನಡೆದಿದ್ದು ಯಾವಾಗ?
2015ರ ಜೂನ್ 21ರಂದು ಚೊಚ್ಚಲ ಅಂತಾರಾಷ್ಟ್ರೀಯ ಯೋಗ ದಿನವನ್ನ ಆಚರಿಸಲಾಯಿತು. ಆಯುಶ್ ಸಚಿವಾಲಯದ ನೇತೃತ್ವದಲ್ಲಿ ರಾಜಪಥದಲ್ಲಿ ವಿಜೃಂಭಣೆಯಿಂದ ಯೋಗದಿನವನ್ನ ಆಚರಿಸಲಾಯಿತು. ಪ್ರಧಾನಿ ನರೇಂದ್ರ ಮೋದಿ (Narendra Modi) ಹಾಗೂ 84 ರಾಷ್ಟ್ರಗಳ ಗಣ್ಯರು ಈ ಕಾರ್ಯಕ್ರಮದಲ್ಲಿ ಭಾಗವಹಿಸಿ, 21 ಯೋಗ ಆಸನಗಳನ್ನ ಅಭ್ಯಸಿಸಿದ್ದರು.
ಯೋಗದ ಮಹತ್ವ ನಿಮಗೆಷ್ಟು ಗೊತ್ತು?
ಯೋಗದಿಂದ ಹೆಚ್ಚು ಆರೋಗ್ಯ ಪ್ರಯೋಜನಗಳು ಇವೆ ಎಂಬ ಕಾರಣಕ್ಕೆ ಇಂದು ಅನೇಕ ರಾಷ್ಟ್ರಗಳು ಬೆಂಬಲ ವ್ಯಕ್ತಪಡಿಸಿವೆ. ಯೋಗವು ಮನಸ್ಸು, ದೇಹ ಎಲ್ಲದರ ಶುದ್ಧೀಕರಣಕ್ಕೆ ನೆರವಾಗುತ್ತದೆ. ಯೋಗವು ನಮ್ಮನ್ನ ನೈಜತೆಯ ಹತ್ತಿರಕ್ಕೆ ಕರೆದೊಯ್ಯುತ್ತದೆ. ಯೋಗವು ವ್ಯಾಯಮ ಮಾತ್ರವಲ್ಲದೇ ನಿಮ್ಮೊಂದಿಗೆ, ವಿಶ್ವ ಹಾಗೂ ಪ್ರಕೃತಿಯ ಜೊತೆಗೆ ಏಕತೆಯ ಅರ್ಥವನ್ನು ಕಂಡುಕೊಳ್ಳಲು ನೆರವಾಗುತ್ತದೆ. ನಮ್ಮ ಜೀವನಶೈಲಿ ಹಾಗೂ ಪ್ರಜ್ಞೆ ರಚಿಸುವ ಮೂಲಕ ಹವಮಾನ ಬದಲಾವಣೆ ನಿಭಾಯಿಸಲು ಮತ್ತು ಯೋಗಕ್ಷೇಮವನ್ನ ಸುಧಾರಿಸಲು ಸಹಾಯ ಮಾಡುತ್ತದೆ. ಯೋಗವು ಮನಸ್ಸು ಮತ್ತು ದೇಹ, ಚಿಂತನೆ ಮತ್ತು ಕ್ರಿಯೆ, ಸಂಯಮ ಮತ್ತು ಸಾರ್ಥಕತೆಯನ್ನ ಒಗ್ಗೂಡಿಸುತ್ತದೆ. ಹಾಗೆಯೇ ಪ್ರಕೃತಿ ಮತ್ತು ಮನುಷ್ಯನ ನಡುವೆ ಸಾಮರಸ್ಯ ಮೂಡಿಸುವ ಜೊತೆಗೆ ಮನುಷ್ಯನಲ್ಲಿ ಸಕಾರಾತ್ಮಕ ಭಾವನೆಯುಂಟು ಮಾಡಲು ಸಹಕರಿಸುತ್ತದೆ.
ಜೂನ್ 21 ರಂದೇ ಯೋಗ ದಿನಾಚರಣೆ ಏಕೆ?
ಜೂನ್ 21 ಉತ್ತರ ಗೋಳಾರ್ಧದ ವರ್ಷದ ಅತಿ ದೀರ್ಘವಾದ ದಿನವಾಗಿದೆ. ಈ ದಿನವನ್ನು ಬೇಸಿಗೆ ಆಯನ ಸಂಕ್ರಾಂತಿ ದಿನವೆಂದು ಅಂದರೆ ವರ್ಷದಲ್ಲಿನ ಅತ್ಯಂತ ಹೆಚ್ಚು ಹಗಲುಳ್ಳ ದಿನವೆಂದು ಕರೆಯಲಾಗುತ್ತದೆ. ಯೋಗದ ದೃಷ್ಟಿಕೋನದಲ್ಲಿ ಇದು ಅತ್ಯಂತ ಹೆಚ್ಚು ಮಹತ್ವ ಪಡೆದಿದೆ. ಇದು ದಕ್ಷಿಣಯಾನಕ್ಕೆ ಪರಿವರ್ತನೆ ಎಂದು ಗುರುತಿಸಲಾಗುತ್ತದೆ. ದಕ್ಷಿಣ ಯಾನವನ್ನ ಆಧ್ಯಾತ್ಮಿಕ ಅಭ್ಯಾಸಗಳಿಗೆ ನೈಸರ್ಗಿಕ ಬೆಂಬಲವೆಂದು ಪರಿಗಣಿಸಲಾಗುತ್ತದೆ. ಆದಿ ಕಾಲದಲ್ಲಿ ಸೂರ್ಯಾಭಿಮುಖವಾಗಿ ದೃಷ್ಟಿ ನೆಟ್ಟು ದಿವ್ಯ ಶಕ್ತಿ ಉದ್ದೀಪನಗೊಳಿಸುತ್ತದೆ ಎಂದು ಈ ದಿನವನ್ನು ನಂಬಲಾಗಿದೆ. ಬೇಸಿಗೆ ಆಯನ ಸಂಕ್ರಾAತಿಯ ಬಳಿಕ ಮೊದಲ ಹುಣ್ಣಿಮೆಯನ್ನ ಗುರು ಪೂರ್ಣಿಮೆ ಎಂದು ಕರೆಯಲಾಗುತ್ತದೆ.