Tag: yoga

  • ಕೊರೊನಾದಿಂದ ಮನೆಯವರು ಬರದೆ ಖಿನ್ನತೆ – ಕೈದಿಗಳಿಗೆ ಯೋಗ, ಧ್ಯಾನ ತರಬೇತಿ

    ಕೊರೊನಾದಿಂದ ಮನೆಯವರು ಬರದೆ ಖಿನ್ನತೆ – ಕೈದಿಗಳಿಗೆ ಯೋಗ, ಧ್ಯಾನ ತರಬೇತಿ

    ಬೆಂಗಳೂರು: ಸದಾ ಒಂದಿಲ್ಲೊಂದು ನೆಗೆಟಿವ್ ಸುದ್ದಿಯಲ್ಲಿರುತ್ತಿದ್ದ ಸೆಂಟ್ರಲ್ ಜೈಲಿನಲ್ಲೀಗ ಪಾಸಿಟಿವ್ ಸುದ್ದಿಯೊಂದು ವರದಿಯಾಗಿದೆ. ಗಾಂಜಾ, ಚಾಕು ಚೂರಿ ಹೊಡೆದಾಟ ಅಂತಿದ್ದ ಜೈಲಿನಲ್ಲೀಗ ಧ್ಯಾನ, ಯೋಗದ ತರಬೇತಿ ಶುರುವಾಗಿದೆ.

    ಹೌದು. ಪರಪ್ಪನ ಅಗ್ರಹಾರದಲ್ಲಿ ಕೈದಿಗಳಿಗೆ ಯೋಗ, ಧ್ಯಾನ ತರಬೇತಿಯನ್ನ ನೀಡಲಾಗುತ್ತಿದೆ. ಕೋವಿಡ್ ಸಮಯದಲ್ಲಿ ಮಾನಸಿಕ ಖಿನ್ನತೆಗೆ ಕೈದಿಗಳು ಒಳಗಾಗಿದ್ದಾರೆ. ನಿಮ್ಹಾನ್ಸ್ ಆಸ್ಪತ್ರೆಯ ತಜ್ಞರು ಬಿಡುಗಡೆ ಮಾಡಿರುವ ಸಮೀಕ್ಷೆಯಲ್ಲಿ ಕೈದಿಗಳು ಖಿನ್ನತೆಗೆ ಒಳಗಾಗುತ್ತಿರೋ ಅಂಶ ಬೆಳಕಿಗೆ ಬಂದಿತ್ತು.

    ಕೊರೊನಾದಿಂದ ಮನೆಯವರು ಬಾರದೆ ಕೈದಿಗಳು ಮಾನಸಿಕವಾಗಿ ನೊಂದಿದ್ರು. ಈ ಹಿನ್ನಲೆಯಲ್ಲಿ ಅವರನ್ನು ಇದರಿಂದ ಹೊರ ತರಬೇಕಾದ್ರೆ ಯೋಗ, ಧ್ಯಾನ ಮಾಡಿಸುವಂತೆ ವೈದ್ಯರು ಸಲಹೆ ನೀಡಿದ್ದಾರೆ. ಹಾಗಾಗಿ ಮೊದಲು ಜೈಲು ಸಿಬ್ಬಂದಿಗೆ ಯೋಗ, ಧ್ಯಾನದ ತರಬೇತಿ ನೀಡಲಾಗಿತ್ತು. ಕೈದಿಗಳ ಮನಪರಿವರ್ತನೆಗೆ ಸಿಬ್ಬಂದಿಗೆ ರವಿ ಶಂಕರ್ ಗುರೂಜಿ ಆಶ್ರಮದಿಂದ ತರಬೇತಿ ನೀಡಲಾಗಿತ್ತು.

    ಈಗ ಜೈಲಿನ ಸಿಬ್ಬಂದಿಯಿಂದ ಕೈದಿಗಳಿಗೆ ಯೋಗ, ಧ್ಯಾನದ ಬಗ್ಗೆ ಟ್ರೈನಿಂಗ್ ಶುರುವಾಗಿದೆ. ಸೂರ್ಯ ನಮಸ್ಕಾರ, ಯೋಗ, ಧ್ಯಾನ, ಗೂರೂಜಿ ಪುಸ್ತಕಗಳ ಬಗ್ಗೆ ಪ್ರವಚನ ಕೂಡ ಮಾಡಲಾಗ್ತಿದೆ. ಕೇವಲ ಯೋಗ ಅಷ್ಟೇ ಅಲ್ಲದೇ ಕೈದಿಗಳ ಮನಪರಿವರ್ತನೆಗೆ ಅಧಿಕಾರಿಗಳಿಂದ ವಿಶೇಷ ತರಗತಿಯನ್ನ ನೀಡಲಾಗ್ತಿದ್ದು, ಪ್ರತಿ ನಿತ್ಯ 6.30 ರಿಂದ 8.30 ರವರೆಗೂ ಅವರಿಗೆ ಯೋಗ ತರಬೇತಿಯನ್ನ ನೀಡಲಾಗುತ್ತಿದೆ. ಒಂದು ವೇಳೆ ಸಿಬ್ಬಂದಿಯ ನಿರ್ಲಕ್ಷ್ಯ ಕಂಡು ಬಂದ್ರೆ ಶಿಸ್ತುಕ್ರಮದ ಎಚ್ಚರಿಕೆ ಕೂಡ ನೀಡಲಾಗಿದೆ.

  • ಇಂಡಿಯಾ ಬುಕ್ ಆಫ್ ರೆಕಾರ್ಡ್ಸ್​ನಲ್ಲಿ ಮಂಗಳೂರಿನ ವಿನಂತಿ ಹರಿಕಾಂತ

    ಇಂಡಿಯಾ ಬುಕ್ ಆಫ್ ರೆಕಾರ್ಡ್ಸ್​ನಲ್ಲಿ ಮಂಗಳೂರಿನ ವಿನಂತಿ ಹರಿಕಾಂತ

    ಮಂಗಳೂರು:  ಇಂಡಿಯಾ ಬುಕ್ ಆಫ್ ರೆಕಾರ್ಡ್ಸ್​ನಲ್ಲಿ ಮಂಗಳೂರಿನ ವಿನಂತಿ ಹರಿಕಾಂತ ದಾಖಲೆ ಬರೆಯುವ ಮೂಲಕವಾಗಿ ಸುದ್ದಿಯಾಗಿದ್ದಾರೆ.

    ಸಾಧನೆಗೆ ವಯಸ್ಸಿನ ಹಂಗಿಲ್ಲ ಎನ್ನುವುದಕ್ಕೆ ಅದೆಷ್ಟೋ ನಿದರ್ಶನಗಳನ್ನು ನಾವು ಗಮನಿಸುತ್ತೇವೆ. ಸಣ್ಣ ಮಕ್ಕಳಿಂದ ಹಿಡಿದು ಹಣ್ಣು ಹಣ್ಣು ಮುದುಕರವರೆಗೆ ಅನೇಕರು ಎಲ್ಲರ ಮೂಗಿನ ಮೇಲೆ ಬೆರಳಿಡುವಂತೆ ಸಾಧನೆ ಮಾಡಿದ್ದಾರೆ. ಈ ಸಾಲಿಗೆ ಮಂಗಳೂರಿನ 5ರ ಪೋರಿಯೊಬ್ಬಳು ಸೇರ್ಪಡೆಗೊಂಡಿದ್ದಾಳೆ. ಮಂಗಳೂರಿನ 5ರ ಬಾಲಕಿ ವಿನಂತಿ ಹರಿಕಾಂತ ಯೋಗದಲ್ಲಿ ಇಂಡಿಯಾ ಬುಕ್ ಆಫ್ ರೆಕಾರ್ಡ್ಸ್​ನಲ್ಲಿ ದಾಖಲೆ ಬರೆದು ಎಲ್ಲರ ಹುಬ್ಬೇರುವಂತೆ ಮಾಡಿದ್ದಾಳೆ.

    ವಿನಂತಿ ಹರಿಕಾಂತ ತನ್ನ 5ನೇ ವಯಸ್ಸಿನಲ್ಲಿ ಅಭೂತಪೂರ್ವ ಸಾಧನೆ ಮಾಡಿದ್ದಾಳೆ. ಈಕೆ ಸಣ್ಣಂದಿನಿಂದಲೇ ಯೋಗಾಸನದಲ್ಲಿ ಆಸಕ್ತಿ ಹೊಂದಿದ್ದು, 100ಕ್ಕಿಂತ ಹೆಚ್ಚಿನ ಯೋಗಾಸನ ಭಂಗಿಗಳನ್ನು ಸರಾಗವಾಗಿ ಮಾಡುತ್ತಾಳೆ. ಇದೀಗ `ಉತ್ರಾಸನ ಭಂಗಿ’ಯಲ್ಲಿ ದೀರ್ಘ ಕಾಲದವರೆಗೆ ಅಂದರೆ 5 ನಿಮಿಷ, 15 ಸೆಕೆಂಡ್ ಕಾಲ ತಟಸ್ಥವಾಗಿ ಉಳಿದು ಅದ್ಭುತ ಸಾಧನೆಯನ್ನು ಮಾಡಿದ್ದಾಳೆ. ಈಕೆಯ ಸಾಧನೆಗೆ ಇಂಡಿಯಾ ಬುಕ್ ಆಫ್ ರೆಕಾರ್ಡ್ಸ್​ನ ಗರಿಮೆಯ ಕಿರೀಟ ಮುಡಿಗೇರಿದೆ. ಇದನ್ನೂ ಓದಿ: ಜಿಲ್ಲೆಯಲ್ಲಿ ನಿರೀಕ್ಷೆಗೂ ಮೀರಿದ ಮಳೆ, ಮುಂಜಾಗ್ರತಾ ಕ್ರಮ ಕೈಗೊಳ್ಳುವಂತೆ ಸೂಚನೆ: ಹೆಬ್ಬಾರ್

    ಈಕೆ ಮೂಲತಃ ಉತ್ತರ ಕನ್ನಡ ಜಿಲ್ಲೆಯ ಅಂಕೋಲಾ ತಾಲೂಕಿನ ಹಿಲ್ಲೂರು ಗ್ರಾಮದ ನಿವಾಸಿಯಾಗಿದ್ದು, ಪ್ರಸ್ತುತ 20 ವರ್ಷಗಳಿಂದ ಮಂಗಳೂರಿನ ಕೊಣಾಜೆ ಸಮೀಪದ ಅಸೈಗೋಳಿಯಲ್ಲಿರುವ ಕೆಎಸ್ಆರ್ಪಿ 7ನೇ ಪಡೆಯಲ್ಲಿ ಕಾರ್ಯನಿರ್ವಹಿಸುತ್ತಿರುವ   ಈಶ್ವರ ಹರಿಕಾಂತ ಹಾಗೂ ಆರತಿ ಹರಿಕಾಂತ ದಂಪತಿಯ ಪುತ್ರಿಯಾಗಿದ್ದಾಳೆ. ಈಕೆ ಯೋಗಾಸನದಲ್ಲಿ ಮಾತ್ರ ಅಲ್ಲದೆ ನೃತ್ಯ, ಸಂಗೀತ, ಚಿತ್ರ ಕಲೆ ಹೀಗೆ ಅನೇಕ ಕ್ಷೇತ್ರಗಳಲ್ಲಿ ಅಸಾಧಾರಣ ಪ್ರತಿಭೆಯಾಗಿದ್ದಾಳೆ. ಇದೀಗ ಇಂಡಿಯಾ ಬುಕ್ ಆಫ್ ರೆಕಾರ್ಡ್ಸ್​ನಲ್ಲಿ ದಾಖಲೆ ಬರೆದು ಸಾಧನೆ ಮಾಡುವ ಮೂಲಕ ಎಲ್ಲರ ಮೆಚ್ಚುಗೆಗೆ ಪಾತ್ರವಾಗಿದ್ದಾಳೆ.

  • ಕೆಎಸ್‌ಆರ್‌ಟಿಸಿ ಸಿಬ್ಬಂದಿಗಾಗಿ ಒಂದು ವಾರ ಯೋಗ ಕಾರ್ಯಕ್ರಮ

    ಕೆಎಸ್‌ಆರ್‌ಟಿಸಿ ಸಿಬ್ಬಂದಿಗಾಗಿ ಒಂದು ವಾರ ಯೋಗ ಕಾರ್ಯಕ್ರಮ

    ಬೆಂಗಳೂರು: ಕೆಎಸ್‌ಆರ್‌ಟಿಸಿಯು ಕೋವಿಡ್ ಸಮಯದಲ್ಲಿ ಸಿಬ್ಬಂದಿಯಲ್ಲಿ ರೋಗ ನಿರೋಧಕ ಶಕ್ತಿಯನ್ನು ಹೆಚ್ಚಿಸುವ ಹಾಗೂ ಶ್ವಾಸಕೋಶವನ್ನು ಕಾಪಾಡುವ ‘ಸಿಂಹ ಕ್ರಿಯಾ ಯೋಗ’ ಕಾರ್ಯಕ್ರಮವನ್ನು ಈಶಾ ಫೌಂಡೇಶನ್ ಸಹಯೋಗದೊಂದಿಗೆ ಹಮ್ಮಿಕೊಂಡಿದೆ.

    ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ವ್ಯವಸ್ಥಾಪಕ ನಿರ್ದೇಶಕ ಶಿವಯೋಗಿ ಕಳಸದ, ನಿಗಮದ ಸಿಬ್ಬಂದಿ ಶ್ರಮ ಜೀವಿಗಳು, ಹಗಲು ರಾತ್ರಿಯನ್ನದೆ ಕರ್ತವ್ಯ ನಿರ್ವಹಿಸುತ್ತಿರುತ್ತಾರೆ. ಅವರ ಆರೋಗ್ಯದ ಬಗ್ಗೆ ಕಾಳಜಿ ವಹಿಸುವುದು ಅತ್ಯಗತ್ಯವಾಗಿದೆ. ಆ ನಿಟ್ಟಿನಲ್ಲಿ ಸಾವಿರಾರು ವರುಷಗಳ ಇತಿಹಾಸವನ್ನು ಹೊಂದಿರುವ ಯೋಗ ಕಾರ್ಯಕ್ರಮವು ದೈಹಿಕ, ಮಾನಸಿಕ ಹಾಗೂ ಭೌತಿಕ ಆರೋಗ್ಯಕ್ಕೆ ಸಹಕಾರಿಯಾಗಲಿದೆ ಎಂದರು.

    ಈಶಾ ಫೌಂಡೇಶನ್ ರವರ  ಯೋಗ ಕಾರ್ಯಕ್ರಮವು ಅತ್ಯಂತ ಪರಿಣಾಮಕಾರಿಯಾಗಿದ್ದು, ಮನೆಯಲ್ಲಿಯೇ ಮಾಡಬಹುದಾದ ಸರಳ ಕ್ರಿಯೆ ಇದಾಗಿದೆ. ಕಾರ್ಯಕ್ರಮವು ಕನ್ನಡದಲ್ಲಿಯೇ ರೂಪಿಸಲಾಗಿದ್ದು, ಸಿಬ್ಬಂದಿಗಳಿಗೆ ಯಾವುದೇ ಪ್ರಶ್ನೆಗಳಿಗಿದ್ರೂ ಕಾರ್ಯಕ್ರಮದ ಕೊನೆಯಲ್ಲಿ ಉತ್ತರಿಸಲಾಗುತ್ತದೆ.

    ಜುಲೈ 1ರಿಂದ ಪ್ರತಿ ದಿನ ಬೆಳಗ್ಗೆ 7 ಮತ್ತು ಸಂಜೆ 6 ಗಂಟೆಗೆ 30 ನಿಮಿಷ ಅವಧಿ ಯೋಗ ಕಾರ್ಯಕ್ರಮ ಇದಾಗಿದೆ. ಎಲ್ಲಾ ಅಧಿಕಾರಿ/ ಸಿಬ್ಬಂದಿಯ ವಾಟ್ಸಾಪ್ ಗುಂಪುಗಳಲ್ಲಿ ಕಾರ್ಯಕ್ರಮದ ಯೂಟ್ಯೂಬ್ ಲಿಂಕ್ ಅನ್ನು ರವಾನಿಸಿ, ಸಮಸ್ತ ಸಿಬ್ಬಂದಿ ಹಾಗೂ ಕುಟುಂಬದವರಿಗೆ ಅನುಕೂಲವಾದ ಸಮಯದಲ್ಲಿ ಭಾಗವಹಿಸಿ ಕಾರ್ಯಕ್ರಮವನ್ನು ಸದುಪಯೋಗಪಡಿಸಿಕೊಳ್ಳ ಬೇಕಾಗಿ ತಿಳಿಸಿದರು. ಇದನ್ನೂ ಓದಿ: ಯೋಗದಲ್ಲಿ ವಿಶೇಷ ಸಾಧನೆಗೈದ ಬಾಲಕ

    ಕೋವಿಡ್ ನಿಂದಾಗಿ ಜನರ ಜೀವನಶೈಲಿ ಬದಲಾವಣೆಯಾಗಬೇಕಾಗಿರುವುದು ಅನಿವಾರ್ಯವಾಗಿದೆ. ಅದರಲ್ಲಿಯೂ ಯೋಗ ಪ್ರಮುಖವಾದ ಪಾತ್ರವನ್ನು ವಹಿಸುತ್ತಿದೆ. ಈಶಾ ಫೌಂಡೇಶನ್ ರವರು ನಮ್ಮ ಸಿಬ್ಬಂದಿಗಾಗಿ ಸಿದ್ಧಪಡಿಸಿರುವ ಈ ಯೋಗ ಕಾರ್ಯಕ್ರಮವು ಸಿಬ್ಬಂದಿಯ ಆರೋಗ್ಯ ಸ್ನೇಹಿ ಉಪಕ್ರಮವಾಗಿದೆ ಎಂದು ತಿಳಿಸಿದರು.

    ಈ ಸಂದರ್ಭದಲ್ಲಿ ಈಶಾ ಫೌಂಡೇಶನ್ ರವರಿಂದ ಶ್ರೀಮತಿ ರಾಧಿಕ ಶ್ರೀನಾಥ್, ನಿಗಮದ ಹಿರಿಯ ಅಧಿಕಾರಿಗಳು ಸಿಬ್ಬಂದಿ ಭಾಗವಹಿಸಿದ್ದರು.

  • ಯೋಗಾಭ್ಯಾಸ ಯೋಗದಿನಾಚರಣೆಗೆ ಸೀಮಿತವಾಗಬಾರದು-ಡಿವಿಎಸ್

    ಯೋಗಾಭ್ಯಾಸ ಯೋಗದಿನಾಚರಣೆಗೆ ಸೀಮಿತವಾಗಬಾರದು-ಡಿವಿಎಸ್

    ಬೆಂಗಳೂರು: ನಿಯಮಿತವಾಗಿ ಯೋಗಾಭ್ಯಾಸ ಮಾಡುವ ಮೂಲಕ ಕೊರೊನಾದಂತಹ ಸಾಂಕ್ರಾಮಿಕ ರೋಗವನ್ನು ಸಮರ್ಥವಾಗಿ ಎದುರಿಸಬಹುದಾಗಿದೆ ಎಂದು ಕೇಂದ್ರ ರಾಸಾಯನಿಕ ಮತ್ತು ರಸಗೊಬ್ಬರ ಸಚಿವ ಡಿ ವಿ ಸದಾನಂದ ಗೌಡ ಹೇಳಿದ್ದಾರೆ. ಇದನ್ನೂ ಓದಿ: ರಮೇಶ್ ಜಾರಕಿಹೊಳಿ ರಾಜೀನಾಮೆ ನೀಡುವ ವಿಚಾರ ನನಗೆ ಗೊತ್ತಿಲ್ಲ: ಸತೀಶ್

    ಸಚಿವರು ದೆಹಲಿಗೆ ಹೊರಡುವ ಮುನ್ನ ಪಕ್ಷದ ಜಿಲ್ಲಾ ಘಟಕದ ವತಿಯಿಂದ ಹೆಬ್ಬಾಳ ಕ್ಷೇತ್ರದಲ್ಲಿ ಇಂದು ಆಯೋಜಿಸಿದ್ದ, ಅಂತಾರಾಷ್ಟ್ರೀಯ ಯೋಗದಿನಾಚರಣೆ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ಏಳನೇ ವಿಶ್ವ ಯೋಗದಿನಾಚರಣೆ ಸಂದರ್ಭದಲ್ಲಿ ಪ್ರಧಾನಿ ಶ್ರೀ ನರೇಂದ್ರ ಮೋದಿಯವರು ಮಾಡಿದ ಭಾಷಣವನ್ನು ಪ್ರಸ್ತಾಪಿಸಿದ ಸಚಿವರು ನಿಯಮಿತವಾಗಿ ಯೋಗ, ಪ್ರಾಣಾಯಾಮ ಮಾಡುವುದರಿಂದ ನಮ್ಮ ಉಸಿರಾಟದ ವ್ಯವಸ್ಥೆ ಸದೃಢವಾಗುತ್ತದೆ. ಇದರಿಂದ ಕೊರೊನಾದಂತಹ ಶ್ವಾಸಕೋಶ ಸಂಬಂಧಿತ ಕಾಯಿಲೆಗಳನ್ನು ಎದುರಿಸುವ ಸಾಮರ್ಥ್ಯವನ್ನು ಪಡೆಯುತ್ತೇವೆ ಎಂದರು.

    ಯೋಗದಿಂದ ಬರೀ ದೇಹದ ರೋಗ-ನಿರೋಧಕ ಶಕ್ತಿಯಷ್ಟೇ ಸುಧಾರಿಸುವುದಿಲ್ಲ. ಜೊತೆಗೇ ಮಾನಸಿಕ ನೆಮ್ಮದಿ, ಹತೋಟಿ ಪಡೆಯಲು ಸಹಾಯವಾಗುತ್ತದೆ. ಒಟ್ಟಿನಲ್ಲಿ ಯೋಗವು ಭಾರತ ದೇಶ ಮಾನವ ಜನಾಂಗಕ್ಕೆ ನೀಡಿದ ಬಹುದೊಡ್ಡ ಕೊಡುಗೆಯಾಗಿದೆ. ಜನರ ಆರೋಗ್ಯ ಕಾಪಾಡುವಲ್ಲಿ ಯೋಗವು ಹೊಂದಿರುವ ಸಾಮರ್ಥ್ಯವು ವಿಶ್ವದ ಬಹುತೇಕ ರಾಷ್ಟ್ರಗಳಿಗೆ ಅರ್ಥವಾಗಿದೆ. ಇಂದು ನಡೆದ ವಿಶ್ವ ಯೋಗ ದಿನಾಚರಣೆಯಲ್ಲಿ ಬಹುತೇಕ ದೇಶಗಳ ಮುಖ್ಯಸ್ಥರು ಪಾಲ್ಗೊಂಡಿರುವುದು ಯೋಗದ ಮಹತ್ವವನ್ನು ಸಾರುತ್ತದೆ ಎಂದು ಅಭಿಪ್ರಾಯಪಟ್ಟರು. ಇದನ್ನೂ ಓದಿ: ಮೋಡ ಸೂರ್ಯನನ್ನು ಮರೆಮಾಚಿದರೂ ಎಷ್ಟು ಕಾಲ?: ಸಿ.ಟಿ.ರವಿ

    ಯೋಗ ಮಾಡುವುದರಿಂದ ದಿನಪೂರ್ತಿ ಲವಲವಿಕೆಯಿಂದ ಇರಲು ಸಾಧ್ಯವಾಗುತ್ತಿದೆ. ಆಧುನಿಕ ಯುಗದ ಒತ್ತಡದ ಬದುಕಿನಿಂದ ಶಮನ ಪಡೆಯಲು ಹೆಚ್ಚೆಚ್ಚು ಜನ ಇಂದು ನಿಯಮಿತ ಯೋಗಾಭ್ಯಾಸಕ್ಕೆ ಮೊರೆಹೋಗುತ್ತಿದ್ದಾರೆ. ಮೊದಲು ನಾನು ಕೂಡಾ ಪ್ರತಿದಿನ ಸ್ವಲ್ಪಕಾಲ ಯೋಗಾಭ್ಯಾಸ ಮಾಡುತ್ತಿದ್ದೆನೆ. ಆದರೆ ಕೊರೊನಾ ಸೋಂಕಿಗೆ ಒಳಗಾದಾಗ ಬಿಟ್ಟುಹೋದ ಯೋಗಾಭ್ಯಾಸವನ್ನು ಪುನರಾರಂಭಿಸಲು ಇನ್ನೂ ಸಾಧ್ಯವಾಗಿಲ್ಲ. ಯೋಗಾಭ್ಯಾಸ ಯೋಗದಿನಾಚರಣೆಗೆ ಸೀಮಿತವಾಗಬಾರದು, ಪ್ರತಿಯೊಬ್ಬರೂ ನಿಯಮಿತವಾಗಿ ಯೋಗ ಮಾಡುವುದರ ಮೂಲಕ ಸದೃಢ ಆರೋಗ್ಯ ಹೊಂದುವಂತೆ ಕರೆ ನೀಡಿದ್ದಾರೆ.

    ಸಚಿವರು ಇದಕ್ಕೂ ಮುನ್ನ ಪಕ್ಷದ ಪದಾಧಿಕಾರಿಗಳ ಜೊತೆ ಸುಮಾರು ಅರ್ಧ ಗಂಟೆಕಾಲ ಯೋಗಾಭ್ಯಾಸ ನಡೆಸಿದರು. ಬಿಜೆಪಿ ಜಿಲ್ಲಾಧ್ಯಕ್ಷ ಬಿ ನಾರಾಯಣ ಉಸ್ತುವಾರಿಯಲ್ಲಿ ನಡೆದ ಈ ಕಾರ್ಯಕ್ರಮದಲ್ಲಿ ಯೋಗ ಶಿಕ್ಷಕ ವಾಸುದೇವ್, ಶ್ರೀಧರ್ ಜೀ ಮುಂತಾದವರು ಪಾಲ್ಗೊಂಡರು.

  • ನಿರಂತರ ಯೋಗಾಭ್ಯಾಸದಿಂದ ಆರೋಗ್ಯವಂತ ಜೀವನ – ತೇಜಸ್ವಿನಿ ಅನಂತಕುಮಾರ್

    ನಿರಂತರ ಯೋಗಾಭ್ಯಾಸದಿಂದ ಆರೋಗ್ಯವಂತ ಜೀವನ – ತೇಜಸ್ವಿನಿ ಅನಂತಕುಮಾರ್

    ಬೆಂಗಳೂರು: ನಿರಂತರ ಯೋಗಾಭ್ಯಾಸದಿಂದ ಆರೋಗ್ಯವಂತ ಜೀವನವನ್ನು ಸಾಗಿಸಲು ಸಾಧ್ಯವಾಗುತ್ತದೆ ಎಂದು ಬಿಜೆಪಿ ರಾಜ್ಯ ಉಪಾಧ್ಯಕ್ಷರಾದ ಶ್ರೀಮತಿ ತೇಜಸ್ವಿನಿ ಅನಂತಕುಮಾರ್ ಅವರು ಅಭಿಪ್ರಾಯಪಟ್ಟರು.

    ಬೆಂಗಳೂರಿನ ಮಲ್ಲೇಶ್ವರದ ರಾಜ್ಯ ಬಿಜೆಪಿ ಕಾರ್ಯಾಲಯ ಜಗನ್ನಾಥ ಭವನದಲ್ಲಿ ಸೋಮವಾರ ಬೆಳಿಗ್ಗೆ ಅಂತರರಾಷ್ಟ್ರೀಯ ಯೋಗ ದಿನಾಚರಣೆ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

    ಕೋವಿಡ್‍ನಂತಹ ಸಾಂಕ್ರಾಮಿಕದ ಕಾಲಘಟ್ಟದಲ್ಲಿ ನಾವು ಇದ್ದು ಯೋಗಾಭ್ಯಾಸ, ಪ್ರಾಣಾಯಾಮ, ವ್ಯಾಯಾಮದಂತಹ ಆರೋಗ್ಯಕ್ಕೆ ಪೂರಕ ಚಟುವಟಿಕೆಗಳಲ್ಲಿ ನಮ್ಮನ್ನು ನಾವು ತೊಡಗಿಸಿಕೊಳ್ಳಬೇಕು. ಇವುಗಳು ಆರೋಗ್ಯವಂತ ಬದುಕಿಗೆ ನೆರವಾಗಬಲ್ಲದು ಎಂದು ಅವರು ನುಡಿದರು. ಇದನ್ನೂ ಓದಿ: ಯೋಗಕ್ಕೆ ಈಗ ವಿಶ್ವ ಮನ್ನಣೆ ಸಿಕ್ಕಿದೆ: ಡಿಸಿಎಂ

    ಮುಖ್ಯ ಅತಿಥಿಗಳಾಗಿ ಆಗಮಿಸಿದ ಖ್ಯಾತ ಚಲನಚಿತ್ರ ನಟಿ ಶ್ರೀಮತಿ ಅನುಪ್ರಭಾಕರ್ ಮಾತನಾಡಿ, ಚಿಕ್ಕವಯಸ್ಸಿನಿಂದಲೇ ತಾನು ಯೋಗವನ್ನು ಅಳವಡಿಸಿಕೊಂಡಿರುವುದರಿಂದಾಗಿ ತನಗೆ ಕೊರೋನಾ ಪಾಸಿಟಿವ್ ಬಂದಾಗ ಅದನ್ನು ಹೇಗೆ ಪರಿಣಾಮಕಾರಿಯಾಗಿ ಗುಣಮುಖರಾಗಲು ಮತ್ತು ಮಾನಸಿಕವಾಗಿ ಎದುರಿಸಲು ಸಾಧ್ಯವಾಯಿತು ಎಂಬುದನ್ನು ತಿಳಿಸಿದರು.

    ಅತಿಥಿಗಳಾದ ಹಿರಿಯ ಪ್ರಾಧ್ಯಾಪಕರು ಮತ್ತು ಶಸ್ತ್ರಚಿಕಿತ್ಸಕರಾದ ಡಾ. ಆಂಜನಪ್ಪ ಅವರು ಕೋವಿಡ್ ಸಂದರ್ಭದಲ್ಲಿ ಅಳವಡಿಸಿಕೊಳ್ಳಬೇಕಾದ ಜೀವನ ಶೈಲಿಯ ಕುರಿತು ಮಾರ್ಗದರ್ಶನ ನೀಡಿದರು. ಕಾರ್ಯಕ್ರಮದಲ್ಲಿ ರಾಜ್ಯ ಪ್ರಧಾನ ಕಾರ್ಯದರ್ಶಿಗಳು ಮತ್ತು ವಿಧಾನಪರಿಷತ್ ಸದಸ್ಯರೂ ಆದ ಎನ್ ರವಿಕುಮಾರ್, ರಾಜ್ಯ ಕಾರ್ಯಾಲಯ ಕಾರ್ಯದರ್ಶಿಗಳಾದ ಲೋಕೇಶ್ ಅಂಬೆಕಲ್ಲು ಅವರು ಮುಖ್ಯ ಅತಿಥಿಗಳಾಗಿ ಪಾಲ್ಗೊಂಡಿದ್ದರು.

  • ಯೋಗಕ್ಕೆ ಈಗ ವಿಶ್ವ ಮನ್ನಣೆ ಸಿಕ್ಕಿದೆ: ಡಿಸಿಎಂ

    ಯೋಗಕ್ಕೆ ಈಗ ವಿಶ್ವ ಮನ್ನಣೆ ಸಿಕ್ಕಿದೆ: ಡಿಸಿಎಂ

    – ಯೋಗ ಯಾವುದೇ ದೇಶ-ಧರ್ಮಕ್ಕೆ ಸೀಮಿತವಲ್ಲ 

    ಬೆಂಗಳೂರು: ಮನುಕುಲದ ಮಾನಸಿಕ ದೈಹಿಕ ಸದೃಢತೆಗಾಗಿ ಹಿರಿಯರು ಕೊಟ್ಟು ಹೋಗಿರುವ ಯೋಗಕ್ಕೆ ಈಗ ವಿಶ್ವ ಮನ್ನಣೆ ಸಿಕ್ಕಿದೆ ಎಂದು ಉನ್ನತ ಶಿಕ್ಷಣ ಸಚಿವರು ಆದ ಉಪ ಮುಖ್ಯಮಂತ್ರಿ ಡಾ.ಸಿ.ಎನ್.ಅಶ್ವತ್ಥನಾರಾಯಣ ಹೇಳಿದ್ದಾರೆ.

    ಮಾಧ್ಯಮದವರೊಂದಿಗೆ ಮಾತನಡಿದ ಅವರು, ಯೋಗ ಶಿಕ್ಷಣವನ್ನು ರಾಜ್ಯದ ಪಠ್ಯಕ್ರಮದಲ್ಲಿ ಸೇರಿಸಲಾಗುವುದು. ಉನ್ನತ ಶಿಕ್ಷಣ ಇಲಾಖೆ, ಸಾರ್ವಜನಿಕ ಶಿಕ್ಷಣ ಇಲಾಖೆ, ಕ್ರೀಡಾ ಮತ್ತು ಯುವಜನ ಸಬಲೀಕರಣ ಇಲಾಖೆ ಹಾಗೂ ಕರ್ನಾಟಕ ಒಲಂಪಿಕ್ ಅಸೋಸಿಯೇಷನ್ ಸಹಯೋಗದಲ್ಲಿ ಕಂಠೀರವ ಕ್ರೀಡಾಂಗಣದಲ್ಲಿ ಸೋಮವಾರ ನಡೆದ 7ನೇ ಅಂತಾರಾಷ್ಟ್ರೀಯ ಯೋಗ ದಿನಾಚರಣೆ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದರು. ಇದನ್ನೂ ಓದಿ:  ಗಾಳಿ-ಮಳೆಗೆ ಉರುಳುತ್ತಿರುವ ಮರಗಳ ರಕ್ಷಣೆಗೆ ಸರ್ಕಾರದ ಹೊಸ ಪ್ಲ್ಯಾನ್

    ಮನುಕುಲದ ಮಾನಸಿಕ ದೈಹಿಕ ಸದೃಢತೆಗಾಗಿ ಹಿರಿಯರು ಕೊಟ್ಟು ಹೋಗಿರುವ ಯೋಗಕ್ಕೆ ಈಗ ವಿಶ್ವ ಮನ್ನಣೆ ಸಿಕ್ಕಿದೆ. ಮಕ್ಕಳ ಏಕಾಗ್ರತೆ ಮತ್ತು ಬೆಳವಣಿಗೆಗೆ ಇದು ಅತಿ ಹೆಚ್ಚು ಪರಿಣಾಮಕಾರಿಯಾಗಿದೆ.ಈ ವರ್ಷದಿಂದಲೇ ಜಾರಿಗೆ ಬರುತ್ತಿರುವ ನೂತನ ರಾಷ್ಟ್ರೀಯ ಶಿಕ್ಷಣ ನೀತಿಯಲ್ಲಿ ಯೋಗವನ್ನು ಪಠ್ಯವನ್ನಾಗಿ ಅಳವಡಿಸುವ ಅಂಶವಿದೆ. ಈ ನಿಟ್ಟಿನಲ್ಲಿ ರಾಜ್ಯ ಸರಕಾರ ಕ್ರಮ ವಹಿಸಿದೆ. ಮಕ್ಕಳು ಆರಂಭದಿಂದಲೇ ಶೈಕ್ಷಣಿಕವಾಗಿ ಬೆಳವಣಿಗೆ ಸಾಧಿಸುವುದರ ಜೊತೆಗೆ ಯೋಗದ ಮೂಲಕ ದೈಹಿಕ-ಮಾನಸಿಕವಾಗಿ ಸದೃಢರಾಗಲಿದ್ದಾರೆ ಎಂದು ಡಿಸಿಎಂ ಹೇಳಿದರು. ಇದಕ್ಕೂ ಮುನ್ನ ಮಾತನಾಡಿದ ರಾಜ್ಯ ಒಲಿಂಪಿಕ್ ಸಂಸ್ಥೆ ಅಧ್ಯಕ್ಷರೂ ಆದ ಶಾಸಕ ಗೋವಿಂದರಾಜು ಅವರು ಯೋಗವನ್ನು ಶಿಕ್ಷಣದ ಪಠ್ಯದಲ್ಲಿ ಸೇರಿಸಬೇಕೆಂದು ಮನವಿ ಮಾಡಿದರು. ಅದಕ್ಕೆ ಡಿಸಿಎಂ ಸ್ಪಂದಿಸಿ ಈ ಪ್ರತಿಕ್ರಿಯೆ ನೀಡಿದರು.

    ಆದಿಚುಂಚನಗಿರಿ ಮಠದ ಶ್ರೀ ನಿರ್ಮಲಾನಂದ ನಾಥ ಸ್ವಾಮೀಜಿ:

    ಯೋಗ ದಿನಾಚರಣೆಗೆ ಸಾನ್ನಿಧ್ಯ ವಹಿಸಿ ಆಸೀರ್ವಚನ ನೀಡಿದ ಆದಿಚುಂಚನಗಿರಿ ಮಠದ ಶ್ರೀ ನಿರ್ಮಲಾನಂದ ನಾಥ ಸ್ವಾಮೀಜಿ ಅವರು, ಯೋಗವು ಯಾವುದೇ ದೇಶ, ಜಾತಿ, ಧರ್ಮಕ್ಕೆ ಸೀಮಿತವಾದುದ್ದಲ್ಲ. ಇದು ಮನುಷ್ಯನ ಅಸ್ತಿತ್ವಕ್ಕೆ ಸೇರಿರುವಂಥದ್ದು. ಮನುಷ್ಯನನ್ನು ಉಚ್ಛ್ರಾಯ ಸ್ಥಿತಿಗೆ ಕೊಂಡೊಯ್ಯಲು ನಮ್ಮ ಹಿರಿಯರು ಸಂಶೋಧಿಸಿದ ವಿಜ್ಞಾನವೇ ಯೋಗ ಎಂದು ನುಡಿದರು.

    ಯೋಗ ಭಾರತಕ್ಕೆ ಸೇರಿದ್ದು ಎಂದು ಜಗತ್ತು ಅದನ್ನು ಬಳಸದೇ ಇರಬಾರದು. ಹಾಗೆ ಮಾಡಿದರೆ ಜಗತ್ತಿಗೇ ನಷ್ಟ. ಯುರೋಪಿಯನ್ ವಿಜ್ಞಾನಿ ಲಾವಾಶಿಯರ್ ಅವರು ಆಮ್ಲಜನಕವನ್ನು ಸಂಶೋಧಿಸಿದರು ಎಂಬ ಕಾರಣಕ್ಕೆ ನಾವು ಅದನ್ನು ಬಳಸದೇ ಇದ್ದರೆ ನಮಗೇ ನಷ್ಟ. ಹಾಗೆಯ ಯೋಗವೂ ಕೂಡ. ಯೋಗ ಜಗತ್ತಿನ ಪ್ರತಿಯೊಬ್ಬರ ಜೀವನ ಶೈಲಿ ಆಗಬೇಕು ಎಂದು ಸ್ವಾಮೀಜಿ ಅವರು ಆಶಯ ವ್ಯಕ್ತಪಡಿಸಿದರು.

    ವಚನಾನಂದ ಶ್ರೀಗಳಿಂದ ಯೋಗ ಮಾರ್ಗದರ್ಶನ:

    ಹರಿಹರದ ಪಂಚಮಸಾಲಿ ಪೀಠದ ಶ್ರೀ ವಚನಾನಂದ ಸ್ವಾಮೀಜಿ ಅವರು ಈ ಸಂದರ್ಭದಲ್ಲಿ ಯೋಗ ಮಾರ್ಗದರ್ಶನ ನೀಡಿದರು. ಯೋಗ ಪಟುಗಳಿಂದ ಶ್ರೀಗಳವರು ‘ಕಟ್ಟಿ ಚಕ್ರಾಸನ’, ‘ತ್ರಿಕೋನಾಸನ’, ‘ಊಧ್ರ್ವ ತಾಡಾಸನ’, ‘ಪಾದ ಹಸ್ತಾಸನ’, ‘ಉಸ್ಟ್ರಾಸನ’, ‘ಶಶಾಂಕಾಸನ’, ‘ಮಂಡೂಕಾಸನ’, ‘ಮಕರಾಸನ’, ‘ಭುಜಂಗಾಸನ’, ‘ಬಾಲ ಕ್ರೀಡಾಸನ’, ‘ಶಲ್ಬಾಸನ’, ‘ಉತ್ಥಾನ ಪಾದಾಸನ’, ‘ಅರ್ಧಪವನ ಮುಕ್ತಾಸನ’, ‘ಪವನ ಮುಕ್ತಾಸನ’ ಜತೆಗೆ, ‘ಕಪಾಲಬಾತಿ’, ‘ಪ್ರಾಣಯಾಮ’, ‘ನಾಡಿ ಶೋಧನ’, ‘ಶೀಥಲಿ ಪ್ರಾಣಯಾಮ’, ‘ಭ್ರಾಮರಿ ಪ್ರಾಣಯಾಮ’ ಮಾಡಿಸಿದರು.

    ಕ್ರೀಡಾ ಮತ್ತು ಯವಜನ ಸಬಲೀಕರಣ ಖಾತೆ ಸಚಿವ ಡಾ.ಕೆ.ಸಿ.ನಾರಾಯಣ ಗೌಡ, ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್, ಕಾಲೇಜು ಮತ್ತು ತಾಂತ್ರಿಕ ಶಿಕ್ಷಣ ಇಲಾಖೆ ಆಯುಕ್ತ ಪ್ರದೀಪ್ ಪ್ರಭಾಕರ್, ಯುವಜನ ಸೇವೆ ಇಲಾಖೆ ಆಯುಕ್ತ ಗೋಪಾಲಕೃಷ್ಣ ಮುಂತಾದವರು ಉಪಸ್ಥಿತರಿದ್ದರು.

  • ಅಂತಾರಾಷ್ಟ್ರೀಯ ಯೋಗ ದಿನಾಚರಣೆಗೆ ಶೆಟ್ಟರ್ ಚಾಲನೆ

    ಅಂತಾರಾಷ್ಟ್ರೀಯ ಯೋಗ ದಿನಾಚರಣೆಗೆ ಶೆಟ್ಟರ್ ಚಾಲನೆ

    ಹುಬ್ಬಳ್ಳಿ: ಜಿಲ್ಲಾ ಆಯುಷ್ ಇಲಾಖೆ ವತಿಯಿಂದ ಹುಬ್ಬಳ್ಳಿ ಪಿರಾಮಿಡ್ ಧ್ಯಾನ ಮಂದಿರದಲ್ಲಿ ಆಯೋಜಿಸಲಾದ ವಿಶ್ವ ಯೋಗ ದಿನಾಚರಣೆ ಕಾರ್ಯಕ್ರಮದಲ್ಲಿ ಬೃಹತ್ ಮತ್ತು ಮಧ್ಯಮ ಕೈಗಾರಿಕೆ ಸಾರ್ವಜನಿಕ ಉದ್ದಿಮೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಜಗದೀಶ್ ಶೆಟ್ಟರ್ ಪಾಲ್ಗೊಂಡು ಯೋಗಾಭ್ಯಾಸ ಮಾಡುವ ಮೂಲಕ ಯೋಗ ದಿನಾಚರಣೆಗೆ ಚಾಲನೆ ನೀಡಿದರು.

    ಯೋಗ ದುನಾಚರಣೆ ಅಂಗವಾಗಿ ಯೋಗ ಶಿಕ್ಷಕ ಸಂಗಮೇಶ್ ನಿಂಬರಗಿ ಯೋಗಾಸನಗಳ ಕ್ರಮಗಳ ಕುರಿತು ನಿರ್ದೇಶನ ನೀಡಿ ಅವುಗಳ ಉಪಯೋಗ ತಿಳಿಸಿದರು. ಶೆಟ್ಟರ್ ಸಹಿತ ಕಾರ್ಯಕ್ರಮದಲ್ಲಿದ್ದ ಅಧಿಕಾರಿಗಳು ಮತ್ತು ಸಾರ್ವಜನಿಕರು ಸಾಮಾಜಿಕ ಅಂತರ ಕಾಯ್ದುಕೊಂಡು ಯೋಗಾಭ್ಯಾಸ ಮಾಡಿದರು. ಇದನ್ನೂ ಓದಿ: ಸಿಎಂ ಬದಲಾವಣೆ ವಿಚಾರ ಎದೆ ಮೇಲೆ ಬೋರ್ಡ್ ಹಾಕಿಕೊಂಡು ಓಡಾಡುವ ಸ್ಥಿತಿ ಬಂದಿದೆ: ಶೆಟ್ಟರ್

    ಕಾರ್ಯಕ್ರಮದಲ್ಲಿ ಜಿ.ಪಂ. ಸಿ.ಇ.ಓ ಡಾ.ಬಿ.ಸುಶೀಲ, ಹು-ಧಾ ಪಾಲಿಕೆ ಆಯುಕ್ತ ಡಾ.ಸುರೇಶ್ ಇಟ್ನಾಳ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಧಿಕಾರಿ ಯಶವಂತ ಮದೀನಕರ್, ಜಿಲ್ಲಾ ಆಯುಷ್ಯಾಧಿಕಾರಿ ಡಾ.ಮೀನಾಕ್ಷಿ, ತಹಶೀಲ್ದಾರ್ ಶಶಿಧರ ಮಾಡ್ಯಾಳ ಭಾಗವಹಸಿದ್ದರು.

  • ಯೋಗ ಮಾಡಲು ಹೋಗಿ ಟ್ರೋಲ್‍ಗೊಳಗಾದ ನಟಿ ರಾಖಿ ಸಾವಂತ್

    ಯೋಗ ಮಾಡಲು ಹೋಗಿ ಟ್ರೋಲ್‍ಗೊಳಗಾದ ನಟಿ ರಾಖಿ ಸಾವಂತ್

    ಮುಂಬೈ: ಒಂದಲ್ಲ ಒಂದು ವಿಚಾರದಲ್ಲಿ ವಿವಾದ ಎಬ್ಬಿಸುತ್ತಿರುವ ಡ್ರಾಮಾ ಕ್ವೀನ್ ರಾಖಿ ಸಾವಂತ್ ಇದೀಗ ತಮ್ಮ ಯೋಗಾಸನದಿಂದ ಸಾಮಾಜಿಕ ಜಾಲತಾಣಗಳಲ್ಲಿ ಸಖತ್ ಟ್ರೋಲ್ ಆಗಿದ್ದಾರೆ.

    ಹೌದು. ತರಬೇತುದಾರರ ಸಹಾಯದಿಂದ ರಾಖಿ ಯೋಗಾಸನವೊಂದನ್ನು ಮಾಡಿದ್ದಾರೆ. ಇದರ ವೀಡಿಯೋವನ್ನು ಇನ್ ಸ್ಟಾಗ್ರಾಂನಲ್ಲಿ ಶೇರ್ ಮಾಡಿಕೊಂಡಿದ್ದಾರೆ. ಈ ವೀಡಿಯೋ ಇದೀಗ ಟ್ರೋಲಿಗರ ಬಾಯಿಗೆ ಆಹಾರ ಸಿಕ್ಕಂತಾಗಿದೆ. ವೀಡಿಯೋದಲ್ಲಿ ರಾಖಿ, ಚರ್ಮದ ಬಣ್ಣದ ಸ್ಪೋಟ್ರ್ಸ್ ಬ್ರಾ ಧರಿಸಿದ್ದಾರೆ. ಆದರೆ ಆಕೆ ಬ್ರಾ ಧರಿಸಿಯೇ ಇಲ್ಲವೆಂದು ನೆಟ್ಟಿಗರು ಟ್ರೋಲ್ ಮಾಡುತ್ತಿದ್ದಾರೆ.

     

    View this post on Instagram

     

    A post shared by Rakhi Sawant (@rakhisawant2511)

    ಈ ಹಿಂದೆ ನಟಿ ಕಂಗನಾ ರಣಾವತ್ ಅವರಿಗೆ ರಾಖಿ ಮನವಿ ಮಾಡಿದ್ದರು. ಕಂಗನಾ ವಿರುದ್ಧ ಪರೋಕ್ಷವಾಗಿ ವಾಗ್ದಾಳಿ ನಡೆಸಿದ್ದ ರಾಖಿ, ಕಂಗನಾಜೀ ನಿಮ್ಮ ಬಳಿ ಕೋಟ್ಯಂತರ ರೂಪಾಯಿ ಹಣವನ್ನ ದೇಶಸೇವೆಗಾಗಿ ಬಳಸಿ ಎಂದು ಹೇಳಿದ್ದರು. ಈ ಕುರಿತು ಸೋಶಿಯಲ್ ಮೀಡಿಯಾದಲ್ಲಿ ವೀಡಿಯೋ ಕೂಡ ಶೇರ್ ಮಾಡಿಕೊಂಡಿದ್ದರು. ಇದಕ್ಕೂ ಮೊದಲು ತರಕಾರಿ ಖರೀದಿಗಾಗಿ ಮಾರುಕಟ್ಟೆಗೆ ಬಂದಿದ್ದ ರಾಖಿ ಪಿಪಿಇ ಕಿಟ್ ಧರಿಸಿದ್ದರು. ಆದರೆ ವೀಡಿಯೋ ನೋಡಿದ ನೆಟ್ಟಿಗರು ನಿಮ್ಮ ಪಿಪಿಇ ಕಿಟ್ ಎಲ್ಲಿ ಹೋಯ್ತು ಎಂದು ಪ್ರಶ್ನಿಸಿದ್ದರು.

     

    View this post on Instagram

     

    A post shared by Rakhi Sawant (@rakhisawant2511)

    ರಾಖಿ ಸಾವಂತ್ ಅವರು ಬಿಗ್ ಬಾಸ್ ಸೀಸನ್ 14ರಲ್ಲಿ ಸ್ಪರ್ಧಿಸಿದ್ದರು. ಆದರೆ ಅರ್ದಧಲ್ಲಿಯೇ ಸ್ಪರ್ಧೆ ಕೈ ಬಿಟ್ಟಿದ್ದರು. ಆ ಬಳಿಕ ತಮ್ಮ ತಾಯಿಗೆ ಚಿಕಿತ್ಸೆ ಮಾಡಿದ್ದು, ರಾಖಿ ತಾಯಿ ಚಿಕಿತ್ಸೆಗೆ ಸಲ್ಮಾನ್ ಖಾನ್ ಕೂಡ ನೆರವು ನೀಡಿದ್ದರು. ಇದನ್ನೂ ಓದಿ: ನಾನು 5ಜಿ ವಿರೋಧಿ ಅಲ್ಲ, ಅದರ ಸಮಸ್ಯೆಗಳನ್ನು ತಡೆಯಬೇಕು: ಜೂಹಿ ಚಾವ್ಲಾ

     

    View this post on Instagram

     

    A post shared by Rakhi Sawant (@rakhisawant2511)

     

  • ಕೋವಿಡ್ ಕೇಂದ್ರದಲ್ಲಿ ಯೋಗ ಟೀಚರ್ ಆದ ರೇಣುಕಾಚಾರ್ಯ

    ಕೋವಿಡ್ ಕೇಂದ್ರದಲ್ಲಿ ಯೋಗ ಟೀಚರ್ ಆದ ರೇಣುಕಾಚಾರ್ಯ

    ದಾವಣಗೆರೆ: ಕೋವಿಡ್ ಕೇರ್ ಸೆಂಟರ್‌ನಲ್ಲಿರುವ ಕೊರೊನಾ ಸೋಂಕಿತರಿಗೆ ಮುಖ್ಯಮಂತ್ರಿಯವರ ರಾಜಕೀಯ ಕಾರ್ಯದರ್ಶಿ ಹೊನ್ನಾಳಿ ಶಾಸಕ ರೇಣುಕಾಚಾರ್ಯರವರು ಯೋಗ ಹೇಳಿಕೊಟ್ಟಿದ್ದಾರೆ.

    ದಾವಣಗೆರೆ ಜಿಲ್ಲೆಯ ಹೊನ್ನಾಳಿ ತಾಲೂಕಿನ ಎಚ್ ಕಡದಕಟ್ಟೆ ಗ್ರಾಮದಲ್ಲಿರುವ ಕೋವಿಡ್ ಕೇರ್ ಸೆಂಟರ್ ನಲ್ಲಿರುವ ಸೋಂಕಿತರಿಗೆ ರೇಣುಕಾಚಾರ್ಯ ವಿವಿಧ ಯೋಗಾಸನಗಳನ್ನು ಹೇಳಿಕೊಟ್ಟಿದ್ದಾರೆ.

    ಇಂದು ಬೆಳಗ್ಗೆ ಕೋವಿಡ್ ಕೇರ್ ಸೆಂಟರ್‌ಗೆ ಆಗಮಿಸಿದ ಶಾಸಕರು ಸೋಂಕಿತರೊಂದಿಗೆ ಸಾಮಾಜಿಕ ಅಂತರ ಕಾಯ್ದುಕೊಂಡು ಸೂರ್ಯ ನಮಸ್ಕಾರ ಸೇರಿದಂತೆ ವಿವಿಧ ಯೋಗಾಸನ ಹೇಳಿಕೊಟ್ಟರು. ಯೋಗಾಸನದ ಮೂಲಕ ಸೋಂಕಿತರಿಗೆ ಆತ್ಮಸ್ಥೈರ್ಯ ತುಂಬಿದ ರೇಣುಕಾಚಾರ್ಯರವರು ಯೋಗಾಸನದ ವಿವಿಧ ಬಂಗಿಗಳನ್ನು ಸೋಂಕಿತರ ಮುಂದೆ ಮಾಡಿ ತೋರಿಸಿದರು.

    ಕಳೆದ ಹಲವು ದಿನಗಳಿಂದ ಸೋಂಕಿತರ ಜೊತೆ ಸೇರಿ ರೇಣುಕಾಚಾರ್ಯ ಒಂದಲ್ಲ ಒಂದು ಕೆಲಸದಲ್ಲಿ ನಿರತರಾಗಿದ್ದಾರೆ. ಮೃತ ಸೋಂಕಿತನ ಶವ ಹೊತ್ತು ಅಂಬುಲೆನ್ಸ್ ಚಾಲನೆ ಮಾಡುತ್ತ ಅಂತ್ಯಸಂಸ್ಕಾರದಲ್ಲಿ ಭಾಗಿಯಾಗುವ ಮೂಲಕ ಸಮಾಜ ಮುಖಿ ಕಾರ್ಯದಲ್ಲಿ ತೊಡಗಿಕೊಂಡಿದ್ದರು. ಇದೀಗ ಕೋವಿಡ್ ಕೇರ್ ಸೆಂಟರ್ ನಲ್ಲಿರುವ ಸೋಂಕಿತರಿಗೆ ಶಾಸಕ ಎಂಪಿ ರೇಣುಕಾಚಾರ್ಯ ಯೋಗ ಹೇಳಿಕೊಟ್ಟು ಆತ್ಮಸ್ಥೈರ್ಯ ತುಂಬಿದ್ದಾರೆ. ಇದನ್ನು ಓದಿ: ಕೋವಿಡ್ ಕೇರ್ ಸೆಂಟರ್ ಅವ್ಯವಸ್ಥೆ ವಿರುದ್ಧ ಸೋಂಕಿತರ ಆಕ್ರೋಶ

  • ಕೋವಿಡ್ ಸೆಂಟರ್‌ನಲ್ಲಿರೋ ಸೋಂಕಿತರಿಗೆ ಯೋಗ ಹೇಳಿಕೊಟ್ಟ ಶಾಸಕ ಅಪ್ಪಚ್ಚು ರಂಜನ್

    ಕೋವಿಡ್ ಸೆಂಟರ್‌ನಲ್ಲಿರೋ ಸೋಂಕಿತರಿಗೆ ಯೋಗ ಹೇಳಿಕೊಟ್ಟ ಶಾಸಕ ಅಪ್ಪಚ್ಚು ರಂಜನ್

    ಮಡಿಕೇರಿ: ಕೊಡಗು ಜಿಲ್ಲೆಯಲ್ಲಿ ಸೋಂಕಿತ ಪ್ರಕರಣಗಳು ದಿನ ಕಳೆದಂತೆ ಕೊಂಚ ಇಳಿಮುಖಗೊಳ್ಳುತ್ತಿರುವ ಹಿನ್ನೆಲೆಯಲ್ಲಿ ಇಂದು ಮಡಿಕೇರಿ ಶಾಸಕ ಅಪ್ಪಚ್ಚು ರಂಜನ್ ಕೋವಿಡ್ ಕೇರ್ ಸೆಂಟರ್ ನಲ್ಲಿ ಇರುವ ಸೋಂಕಿತರ ಯೋಗಕ್ಷೇಮ ವಿಚಾರಿಸಲು ತೆರಳಿದ್ದಾರೆ.

    ಇಂದು ಬೆಳ್ಳಂಬೆಳಗ್ಗೆ ಮಡಿಕೇರಿ ಸಮೀಪ ಇರುವ ನವೋದಯದ ಶಾಲೆಯಲ್ಲಿ ತೆರೆದಿರುವ ಕೋವಿಡ್ ಕೇರ್ ಸೆಂಟರ್ ಗೆ ಭೇಟಿ ನೀಡಿದ ಶಾಸಕರು, ಕೋವಿಡ್ ಕೇರ್ ಸೆಂಟರ್ ನಲ್ಲಿರುವ ಸೋಂಕಿತರಿಗೆ ಯೋಗ ಹೇಳಿಕೊಟ್ಟರು. ಇತ್ತೀಚಿನ ದಿನಗಳಲ್ಲಿ ಸೋಂಕಿತರು ಉಸಿರಾಟದ ತೊಂದರೆಯಿಂದ ಬಳಲುತ್ತಿರುತ್ತಾರೆ. ಹೀಗಾಗಿ ಬೆಳಗ್ಗೆ ಎದ್ದು ಯೋಗ ಧ್ಯಾನ ಮಾಡಬೇಕು ಎಂದರು.

    ಅಲ್ಲದೆ ಕೋವಿಡ್ 19 ಮಹಾಮಾರಿ ಇಂದಿಗೆ-ನಾಳೆಗೆ ತೊಲಗುವುದಿಲ್ಲ. ಆದ್ದರಿಂದ ಪ್ರತಿಯೊಬ್ಬರೂ ಕಡ್ಡಾಯವಾಗಿ ಮಾಸ್ಕ್ ಧರಿಸಬೇಕು, ಅಂತರ ಕಾಯ್ದುಕೊಳ್ಳಬೇಕು. ಜ್ವರ, ಕೆಮ್ಮು, ನೆಗಡಿ, ತಲೆನೋವು ಇತರೆ ತೊಂದರೆ ಉಂಟಾದಲ್ಲಿ ತಕ್ಷಣವೇ ಹತ್ತಿರದ ವೈದ್ಯರನ್ನು ಭೇಟಿ ಮಾಡಿ ಆರೋಗ್ಯ ಪರೀಕ್ಷಿಕೊಳ್ಳಬೇಕು. ಆದರೆ ಆತಂಕಕ್ಕೆ ತುತ್ತಾಗಬಾರದು ಎಂದರು.

    ಪ್ರತಿಯೊಬ್ಬರೂ ಆರೋಗ್ಯ ಕಡೆ ಹೆಚ್ಚಿನ ಗಮನಹರಿಸಿದಾಗ ಮಾತ್ರ ಕೋವಿಡ್ 19 ದೂರ ಇರಬಹುದಾಗಿದೆ. ಆ ನಿಟ್ಟಿನಲ್ಲಿ ಎಲ್ಲಾ ರೀತಿಯ ಮುನ್ನೆಚ್ಚರ ವಹಿಸುವುದು ಅಗತ್ಯ, ಸೋಂಕಿತರು ಕೋವಿಡ್ ಆರೈಕೆ ಕೇಂದ್ರಕ್ಕೆ ದಾಖಲಾಗಿ ಔಷಧಿ ಪಡೆಯಬೇಕು. ಧೈರ್ಯವಾಗಿರಬೇಕು, ವಾಕ್ (ನಡಿಗೆ) ಮತ್ತು ವ್ಯಾಯಾಮ ಮಾಡಬೇಕು, ಬಿಸಿಯಾದ ಆಹಾರ ಸೇವಿಸಬೇಕು. ಬಿಸಿ ನೀರು ಕುಡಿಯಬೇಕು ಎಂದು ಶಾಸಕರು ಸಲಹೆ ಮಾಡಿದರು.

    ಬಳಿಕ ನವೋದಯ ಶಾಲೆಯ ಕೋವಿಡ್ ಆರೈಕೆ ಕೇಂದ್ರಕ್ಕೆ ಸರಸ್ವತಿ ಡಿಇಡಿ ಕಾಲೇಜಿನಿಂದ ಪೂರೈಕೆಯಾಗುವ ಸ್ಥಳಕ್ಕೆ ಶಾಸಕರು ಭೇಟಿ ನೀಡಿ ಪರಿಶೀಲಿಸಿದರು, ಇಲ್ಲಿನ ಸ್ವಚ್ಚತೆ, ಅಡುಗೆ ತಯಾರಿ ಮಾಡುವುದನ್ನು ಗಮನಿಸಿ ಮೆಚ್ಚುಗೆ ವ್ಯಕ್ತಪಡಿಸಿದರು.