Tag: yogesh gowda

  • ಕಾಂಗ್ರೆಸ್ ಶಾಸಕ ವಿನಯ್ ಕುಲಕರ್ಣಿಗೆ ಮತ್ತೆ ಶಾಕ್

    ಕಾಂಗ್ರೆಸ್ ಶಾಸಕ ವಿನಯ್ ಕುಲಕರ್ಣಿಗೆ ಮತ್ತೆ ಶಾಕ್

    ಧಾರವಾಡ: ಬಿಜೆಪಿ ಮುಖಂಡ ಯೋಗೀಶ್ ಗೌಡನ (Yogesh Gowda) ಕೊಲೆ ಪ್ರಕರಣದಲ್ಲಿ ಕಾಂಗ್ರೆಸ್ ಶಾಸಕ ವಿನಯ್ ಕುಲಕರ್ಣಿಗೆ (Vinay Kulakarni) ಜನಪ್ರತಿನಿಧಿಗಳ ನ್ಯಾಯಾಲಯ (Representatives Court) ಮತ್ತೆ ಶಾಕ್ ಕೊಟ್ಟಿದೆ.

    ಜಿಲ್ಲಾ ಪಂಚಾಯಿತಿ ಸದಸ್ಯನಾಗಿದ್ದ ಬಿಜೆಪಿ ಮುಖಂಡ ಯೋಗೀಶ್ ಗೌಡನ ಕೊಲೆ ಪ್ರಕರಣದಲ್ಲಿ ಪ್ರಮುಖ ಪಾತ್ರ ವಹಿಸಿದ್ದ ವಿನಯ್ ಕುಲಕರ್ಣಿ ಧಾರವಾಡ (Dharwad) ಜಿಲ್ಲೆ ಭೇಟಿಗೆ ಕೋರ್ಟ್ ಅನುಮತಿ ನಿರಾಕರಿಸಿದೆ. ಇದನ್ನೂ ಓದಿ: ಹಣ ಪಾವತಿಸದ ವಿಮಾ ಕಂಪನಿಗೆ ಗ್ರಾಹಕರ ಆಯೋಗದಿಂದ 35 ಸಾವಿರ ರೂ. ದಂಡ

    ಹುಬ್ಬಳ್ಳಿ-ಧಾರವಾಡ ಪಾಲಿಕೆ ಮೇಯರ್ ಚುನಾವಣೆ ಹಿನ್ನೆಲೆಯಲ್ಲಿ (Hubballi-Dharwad Mayoral Elections) ಜೂನ್ 20 ರಂದು ಧಾರವಾಡಕ್ಕೆ ತೆರಳಿ ಮತದಾನ ಮಾಡುವುದಕ್ಕೆ ಅನುಮತಿ ಕೋರಿದ್ದರು. ಆದರೆ ಕೋರ್ಟ್ ಅನುಮತಿ ನಿರಾಕರಿಸಿದೆ. ಈ ಹಿಂದೆಯೂ ಸುಪ್ರೀಂ ಕೋರ್ಟ್ ಅನುಮತಿ ನಿರಾಕರಿಸಿತ್ತು.

    ಕೊಲೆ ಪ್ರಕರಣದ ಸಾಕ್ಷಿಯ ತಾಯಿ ನಗರ ಪಾಲಿಕೆ ಸದಸ್ಯರು, ಆದ್ರೆ ಶಾಸಕರಾದ ಮೇಲೆ ವಿನಯ್ ಕುಲಕರ್ಣಿ ಮತ್ತಷ್ಟು ಪ್ರಭಾವಿಯಾಗಿದ್ದಾರೆ. ಆದ್ದರಿಂದ ಅನುಮತಿ ನೀಡದಂತೆ CBI ಎಸ್‌ಪಿಪಿ ಗಂಗಾಧರ ಶೆಟ್ಟಿ ವಾದ ಮಂಡಿಸಿದ್ದರು. ವಾದ-ಪ್ರತಿವಾದ ಆಲಿಸಿದ ನಂತರ ನ್ಯಾಯಾಧೀಶ ಬಿ. ಜಯಂತಕುಮಾರ್ ಅನುಮತಿ ನಿರಾಕರಿಸಿ ಆದೇಶ ಪ್ರಕಟಿಸಿದರು. ಇದನ್ನೂ ಓದಿ: ಹುಬ್ಬಳ್ಳಿ ಧಾರವಾಡ ಮೇಯರ್‌ ಚುನಾವಣೆ – ಗದ್ದುಗೆ ಹಿಡಿಯಲು ಕೈ ಕಸರತ್ತು, ಬೆಂಗಳೂರಿನಲ್ಲಿ ಸಭೆ

    ಅರ್ಜಿ ಹಾಕಿದ್ದು ಯಾಕೆ?
    ಯೋಗೇಶ್ ಗೌಡ ಕೊಲೆ ಪ್ರಕರಣದ ಆರೋಪಿಯಾಗಿರುವ ವಿನಯ್ ಕುಲಕರ್ಣಿಯನ್ನು ಸಿಬಿಐ ಬಂಧಿಸಿತ್ತು. ಜಾಮೀನು ಮಂಜೂರು ಮಾಡುವಾಗ ಧಾರವಾಡ ಪ್ರವೇಶಿಸದಂತೆ ಸುಪ್ರೀಂ ಕೋರ್ಟ್ ಷರತ್ತು ವಿಧಿಸಿತ್ತು. ಆದರೆ ಅನಿವಾರ್ಯ ಇದ್ದಾಗ ಮಾತ್ರ ಧಾರವಾಡ ಪ್ರವೇಶಕ್ಕೆ ಅನುಮತಿ ನೀಡಿತ್ತು. ಆದರೆ ಈ ಬಾರಿಯ ಚುನಾವಣೆಯಲ್ಲಿ ಸ್ಪರ್ಧೆ ಮಾಡಿ ಗೆದ್ದಿದ್ದ ವಿನಯ್ ಕುಲಕರ್ಣಿ ಮೇಯರ್ ಚುನಾವಣೆಯಲ್ಲಿ ಮತದಾನ ಮಾಡಲು ಅನುಮತಿ ಕೋರಿ ಅರ್ಜಿ ಸಲ್ಲಿಸಿ ಪ್ರವೇಶಕ್ಕೆ ಮನವಿ ಮಾಡಿದ್ದರು.

    ಏನಿದು ಕೇಸ್?
    2017ರ ಜೂನ್ 15ರಂದು ಬಿಜೆಪಿ ಮುಖಂಡ ಯೋಗೇಶ್ ಗೌಡನ ಕೊಲೆಯಾಗಿತ್ತು. ಅಂದು ಬೆಳಗ್ಗೆ ಧಾರವಾಡ ನಗರದ ಸಪ್ತಾಪುರ ಜಿಮ್‌ಗೆ ಎಂಟ್ರಿ ಕೊಟ್ಟಿದ್ದ ದುಷ್ಕರ್ಮಿಗಳು ಯೋಗೇಶ್ ಗೌಡನನ್ನು ಮಚ್ಚಿನಿಂದ ಬರ್ಬರವಾಗಿ ಕೊಲೆಗೈದಿದ್ದರು. ಈ ದೃಶ್ಯವು ಜಿಮ್ ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿತ್ತು. ಈ ದೃಶ್ಯಗಳನ್ನಾಧರಿಸಿ ಪೊಲೀಸರು ಮಾಜಿ ಸಚಿವ, ಸ್ಥಳೀಯ ಕಾಂಗ್ರೆಸ್ ಮುಖಂಡ ವಿನಯ್ ಕುಲಕರ್ಣಿ ಆಪ್ತ ವಲಯದಲ್ಲಿ ಗುರುತಿಸಿಕೊಂಡಿದ್ದ ಐವರನ್ನು ಬಂಧಿಸಿದ್ದರು. ಹೀಗಾಗಿ ಕೊಲೆಯ ಹಿಂದೆ ವಿನಯ್ ಕುಲಕರ್ಣಿ ಅವರ ಕೈವಾಡವಿದೆ ಎಂಬ ಆರೋಪ ಕೇಳಿ ಬಂದಿತ್ತು.

    ಪ್ರಕರಣದಲ್ಲಿ ವಿನಯ್ ಕುಲಕರ್ಣಿಯವರ ಹೆಸರು ಕೇಳಿ ಬಂದ ಹಿನ್ನೆಲೆಯಲ್ಲಿ ಆರೋಪಿಗಳು ಯೋಗಿಶ್ ಗೌಡನ ಸಹೋದರನ ಜೊತೆ ರಾಜಿ ಮಾಡಿಕೊಳ್ಳಲು ಮುಂದಾಗಿದ್ದರು. ಇತ್ತ ವಿನಯ್ ಕುಲಕರ್ಣಿಯವರ ಹೆಸರನ್ನು ಕೈ ಬಿಡಲು ಅಧಿಕಾರಿಗಳು ಪ್ಲ್ಯಾನ್ ಮಾಡಿಕೊಳ್ಳುತ್ತಿದ್ದಾರೆ ಎಂದು ಯೋಗೇಶ್ ಗೌಡ ತಾಯಿ ಆರೋಪಿಸಿದ್ದರು.

    ಅಂದಿನ ರಾಜ್ಯ ಸರ್ಕಾರ 2019 ಸೆಪ್ಟೆಂಬರ್ 9ರಂದು ಯೋಗೇಶ್ ಗೌಡ ಹತ್ಯೆ ಪ್ರಕರಣದ ತನಿಖೆಯನ್ನು ಅಧಿಕೃತವಾಗಿ ಸಿಬಿಐಗೆ ಹಸ್ತಾಂತರಿಸಿತ್ತು. ತನಿಖೆ ಆರಂಭಿಸಿರುವ ಸಿಬಿಐ ಪ್ರಕರಣದ ಆರೋಪಿಗಳಾದ ಬಸವರಾಜ ಶಿವಪ್ಪ, ವಿಕ್ರಮ್ ಬಳ್ಳಾರಿ, ಕೀರ್ತಿ ಕುಮಾರ್ ಕುರಹಟ್ಟಿ, ಸಂದೀಪ್ ಸೌದತ್ತಿ, ವಿನಾಯಕ ಕಾಟಗಿ ಹಾಗೂ ಮಹಾಬಲೇಶ್ವರ ಹೊನಗಲ್ ವಿರುದ್ಧ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಿತ್ತು.

  • ಚುನಾವಣಾ ಬೆಟ್ಟಿಂಗ್‍: 1 ಎಕರೆ 37 ಗುಂಟೆ ಜಮೀನು ಮಾರಾಟ ಮಾಡಲು ಮುಂದಾದ ಕೈ ಮುಖಂಡ!

    ಚುನಾವಣಾ ಬೆಟ್ಟಿಂಗ್‍: 1 ಎಕರೆ 37 ಗುಂಟೆ ಜಮೀನು ಮಾರಾಟ ಮಾಡಲು ಮುಂದಾದ ಕೈ ಮುಖಂಡ!

    ಮೈಸೂರು: ಕರ್ನಾಟಕ ವಿಧಾನಸಭಾ ಚುನಾವಣೆ (Karnataka Assembly Election 2023) ಯ ಫಲಿತಾಂಶ ಶನಿವಾರ ಹೊರಬೀಳುತ್ತಿದ್ದು, ಇದೀಗ ರಾಜ್ಯದಲ್ಲಿ ಬೆಟ್ಟಿಂಗ್ ದಂಧೆ ಆರಂಭವಾಗಿದೆ. ಅಂತೆಯೇ ವ್ಯಕ್ತಿಯೊಬ್ಬರು ಬೆಟ್ಟಿಂಗ್‍ಗೆ ತನ್ನ ಜಮೀನನ್ನೇ ಮಾರಾಟ ಮಾಡಲು ಮುಂದಾಗಿರುವ ಪ್ರಸಂಗವೊಂದು ಮೈಸೂರಿನಲ್ಲಿ ನಡೆದಿದೆ.

    ಹೌದು. ಮೈಸೂರು ಜಿಲ್ಲೆಯ ಪಿರಿಯಾಪಟ್ಟಣ ತಾಲೂಕಿನ ಹಾರನಹಳ್ಳಿ ಗ್ರಾಮದ ಯೋಗೇಶ್ ಗೌಡ (Yogesh Gowda Betting) ಜಮೀನು ಮಾರಲು ಮುಂದಾದ ಕಾಂಗ್ರೆಸ್ (Congress) ಮುಖಂಡ. ಪಿರಿಯಾಪಟ್ಟಣ ಕ್ಷೇತ್ರದಲ್ಲಿ ಕೈ ಅಭ್ಯರ್ಥಿ ಕೆ.ವೆಂಕಟೇಶ್ (K Venkatesh) ಹಾಗೂ ಜೆಡಿಎಸ್ (JDS) ಅಭ್ಯರ್ಥಿ ಕೆ.ಮಹದೇವ್ ( K Mahadev) ನಡುವೆ ಜಿದ್ದಾಜಿದ್ದಿನ ಪೈಪೋಟಿ ನಡೆದಿದೆ.

    ಈ ಹಿನ್ನೆಲೆಯಲ್ಲಿ ಪಿರಿಯಾಪಟ್ಟಣ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಗೆಲ್ತಾರೆಂದು 1 ಎಕರೆ 37 ಗುಂಟೆ ಜಮೀನು ಬೆಟ್ಟಿಂಗ್ ನಡೆದಿದೆ. ಸದ್ಯ ಯೋಗೇಶ್ ಗೌಡ ಮಾತನಾಡಿರುವ ವೀಡಿಯೋ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ. ಇದನ್ನೂ ಓದಿ: ಸಿಂಗಾಪುರ್ ಪಾಲಿಟಿಕ್ಸ್ ಅಸಲಿ ಆಟ ಶುರುನಾ?

     ವೀಡಿಯೋದಲ್ಲಿ ಏನಿದೆ..?: ಪಿರಿಯಾಪಟ್ಟಣ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಗೆಲ್ತಾರೆಂದು ಹಾರನಹಳ್ಳಿ ಗ್ರಾಮದ ಯೋಗೇಶ್ ಗೌಡನಾದ ನಾನು 1 ಎಕರೆ 37 ಗುಂಟೆ ಬೆಟ್‌ ಕಟ್ತೀನಿ. ಯಾರದ್ರೂ ತಯಾರಿದ್ದರೆ ಬರಬಹುದು. ಅಗ್ರಿಮೆಂಟ್‌ ಮಾಡಿ ಕೊಡ್ತೀನಿ. ನನ್ನ ಹೆಂಡ್ತಿ ಮಕ್ಕಳ ಸಹಿ ಕೂಡ ಹಾಕಿ ಕೊಡುತ್ತೇನೆ ಎಂದು ವೀಡಿಯೋದಲ್ಲಿ ಹೇಳಿದ್ದಾರೆ.

  • ಮನೆಯಿಂದ ಹೊರ ಬರದೇ ವಿಶ್ರಾಂತಿ ಪಡೆದ ವಿನಯ್ ಕುಲಕರ್ಣಿ

    ಮನೆಯಿಂದ ಹೊರ ಬರದೇ ವಿಶ್ರಾಂತಿ ಪಡೆದ ವಿನಯ್ ಕುಲಕರ್ಣಿ

    ಧಾರವಾಡ: ಜಿಲ್ಲಾ ಪಂಚಾಯತ್ ಸದಸ್ಯ ಯೋಗೇಶ್ ಗೌಡ ಹತ್ಯೆ ಪ್ರಕರಣದಲ್ಲಿ ಜೈಲು ಸೇರಿ ಬಿಡುಗಡೆ ಆದ ಮಾಜಿ ಸಚಿವ ವಿನಯ್ ಕುಲಕರ್ಣಿ ಇಂದು ಮನೆಯಿಂದ ಹೊರ ಬರದೇ ವಿಶ್ರಾಂತಿಗೆ ಮೊರೆ ಹೋಗಿದ್ದಾರೆ.

    ನಿನ್ನೆ ಬೆಳಗಾವಿಯ ಹಿಂಡಲಗ ಜೈಲಿನಿಂದ ಬಿಡುಗಡೆಯಾದ ವಿನಯ್ ಕುಲಕರ್ಣಿ ಬೆಳಗ್ಗಿನ ಜಾವ 4 ಗಂಟೆ ಸುಮಾರಿಗೆ ಬೆಂಗಳೂರಿನ ಭೂಪಸಂದ್ರದಲ್ಲಿ ಇರುವ ಮನೆಗೆ ಆಗಮಿಸಿದ್ದರು.  ಇದನ್ನೂ ಓದಿ: ಜೈಲಿಗೆ ಬಂದು ಸಾಕಷ್ಟು ಓದುವುದನ್ನು ಕಲಿತೆ, ಇದು ನನ್ನ ಜೀವನದಲ್ಲಿ ಅತೀ ದೊಡ್ಡ ಬದಲಾವಣೆ: ವಿನಯ್ ಕುಲಕರ್ಣಿ

    ಮನೆಯಲ್ಲೇ ವಿಶ್ರಾಂತಿ ಪಡೆದ ವಿನಯ್ ಕುಲಕರ್ಣಿ ಇಡೀ ದಿನ ಮನೆಯಿಂದ ಹೊರ ಬರಲಿಲ್ಲ. ಯಾರನ್ನೂ ಭೇಟಿ ಮಾಡಲಿಲ್ಲ. ವಿನಯ್ ಕುಲಕರ್ಣಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಭೇಟಿ ಮಾಡುವ ಸಾಧ್ಯತೆ ಇತ್ತು. ಆದರೆ ಇಡೀ ದಿನ ಕುಟುಂಬದ ಜೊತೆ ಕಳೆದ ವಿನಯ್ ಕುಲಕರ್ಣಿ ಮನೆಯಿಂದ ಹೊರಗೆ ಬರದೇ, ಯಾರ ಭೇಟಿಯನ್ನು ಮಾಡಲ್ಲ ಎಂದು ತಮ್ಮ ಸಿಬ್ಬಂದಿಗೆ ತಿಳಿಸಿ ಮನೆಯಲ್ಲೇ ಉಳಿದುಕೊಂಡಿದ್ದಾರೆ. ಇದನ್ನೂ ಓದಿ: ವಿನಯ್ ಕುಲಕರ್ಣಿಗೆ ಬಿಗ್ ರಿಲೀಫ್ ಸಿಕ್ರೂ ಧಾರವಾಡ ಪ್ರವೇಶಿಸುವಂತಿಲ್ಲ!

  • ಮಾಜಿ ಶಾಸಕ ವಿನಯ್ ಕುಲಕರ್ಣಿಗೆ ಜಾಮೀನು

    ಮಾಜಿ ಶಾಸಕ ವಿನಯ್ ಕುಲಕರ್ಣಿಗೆ ಜಾಮೀನು

    ಬೆಂಗಳೂರು: ಮಾಜಿ ಶಾಸಕ ವಿನಯ್ ಕುಲಕರ್ಣಿಗೆ ಜಾಮೀನು ಮಂಜೂರಾಗಿದೆ.

    ಹೌದು. ಯೋಗೇಶ್ ಗೌಡ ಹತ್ಯೆ ಕೇಸ್‍ನಲ್ಲಿ ಸಾಕ್ಷಿ ನಾಶ ಪ್ರಕರಣದಲ್ಲಿ ಕುಲಕರ್ಣಿಗೆ ಇಂದು ಬೆಂಗಳೂರಿನ ಜನಪ್ರತಿನಿಧಿಗಳ ನ್ಯಾಯಾಲಯ ಜಾಮೀನು ಮಂಜೂರು ಮಾಡಿದೆ.

    ಯೋಗೇಶ್ ಗೌಡ ಹತ್ಯೆ ಪ್ರಕರಣ ಸಂಬಂಧ ಹಿಂಡಲಗಾ ಜೈಲಿನಲ್ಲಿದ್ದ ವಿನಯ್ ಕುಲಕರ್ಣಿ ವಿರುದ್ಧ ಸಿಬಿಐ ಎರಡು ಕೇಸ್ ದಾಖಲಿಸಿತ್ತು. ಇದೀಗ ಸಾಕ್ಷ್ಯನಾಶ ಪ್ರಕರಣದಲ್ಲಿ ಬೆಂಗಳೂರಿನ ಜನಪ್ರತಿನಿಧಿಗಳ ನ್ಯಾಯಾಲಯವು ಜಾಮೀನು ಮಂಜೂರು ಮಾಡಿದೆ.

    ವಿನಯ್ ಕುಲಕರ್ಣಿ ಅವರು ಈಗಾಗಲೇ ಯೋಗೇಶ್ ಗೌಡ ಹತ್ಯೆ ಕೇಸ್‍ನಲ್ಲಿ ಸುಪ್ರೀಂಕೋರ್ಟ್ ನಿಂದ ಜಾಮೀನು ಪಡೆದಿದ್ದರು. ನ್ಯಾ ಉದಯ್ ಲಲಿತ್ ನೇತೃತ್ವದ ದ್ವಿಸದಸ್ಯ ಪೀಠ ಸುದೀರ್ಘ ವಿಚಾರಣೆ ನಡೆಸಿ ಸಿಬಿಐ ಆಕ್ಷೇಪಣೆಯ ನಡುವೆಯೂ ವಿನಯ್ ಕುಲಕರ್ಣಿಗೆ ಸುಪ್ರೀಂ ಕೋರ್ಟ್ ಜಾಮೀನು ನೀಡಿ ಆದೇಶ ಪ್ರಕಟಿಸಿತ್ತು.

    ಧಾರವಾಡಕ್ಕೆ ಭೇಟಿ ನೀಡುವಂತಿಲ್ಲ. ಸಿಬಿಐ ವಿಚಾರಣೆಗೆ ತಪ್ಪದೇ ಹಾಜರಾಗಬೇಕು ಎಂದು ಕೋರ್ಟ್ ವಿನಯ್ ಕುಲಕರ್ಣಿಗೆ ಷರತ್ತು ವಿಧಿಸಿತ್ತು. ವಿನಯ್ ಕುಲಕರ್ಣಿ ಜಾಮೀನು ಅರ್ಜಿಗೆ ಆಕ್ಷೇಪ ವ್ಯಕ್ತಪಡಿಸಿ ಸಿಬಿಐ ಪರ ವಕೀಲ ಎಎಸ್.ಜಿ. ಎಸ್.ವಿ. ರಾಜು ವಾದ ಮಂಡನೆ ಮಾಡಿದ್ದರು. ಇದನ್ನೂ ಓದಿ: ರಕ್ಷಾ ಬಂಧನದಂದು ಮಹಿಳೆಯರಿಗೆ ಬಂಪರ್ ಆಫರ್ ನೀಡಿದ ಯುಪಿ ಸಿಎಂ

    ಸಿಬಿಐ ಪರ ವಾದ ಏನಿತ್ತು?
    ಎ1 ಆರೋಪಿಗಳಿಂದ ಎ15 ರವರೆಗಿನ ಆರೋಪಿಗಳಿಗೆ ಆರು ಲಕ್ಷ ರೂಪಾಯಿ ಹಣ ಪಾವತಿಯಾಗಿದೆ. ಕೇಸ್ ತನಿಖಾಧಿಕಾರಿಗೂ ಎರಡು ಲಕ್ಷ ರೂಪಾಯಿ ಹಣ ಪಾವತಿಯಾಗಿದೆ. ವಿನಯ್ ಕುಲಕರ್ಣಿ ಮನವಿ ಮೇರೆಗೆ ಹಾರ್ನ್ ಬಿಲ್ ರೆಸಾರ್ಟ್ ನಲ್ಲಿ ಸಾಕ್ಷಿಗಳಿಗೆ ವಾಸ್ತವ್ಯದ ವ್ಯವಸ್ಥೆ ಮಾಡಲಾಗಿದೆ.

    ವಿನಯ್ ಕುಲಕರ್ಣಿಗೆ ಯೋಗೀಶ್ ಗೌಡ ಜೊತೆಗೆ ವೈಷಮ್ಯ ಇತ್ತು. ಭೂ ವಿವಾದದಿಂದ ಕೊಲೆಯಾಗಿದೆ ಎಂದು ಬಿಂಬಿಸುವ ಯತ್ನ ಮಾಡಿದ್ದರು. ಸಿಬಿಐ ತನಿಖೆ ನಡೆಸಿದ ಬಳಿಕ ದೊಡ್ಡ ಷಡ್ಯಂತ್ರ ಬೆಳಕಿಗೆ ಬಂದಿದೆ. ವಿನಯ್ ಕುಲಕರ್ಣಿ ಕೊನೆಯಲ್ಲಿ ಪ್ರಮುಖ ಪಾತ್ರವಾಗಿದ್ದು, ಸಾಕ್ಷ್ಯವನ್ನು ತಿರುಚಲಾಗಿದೆ. ಪೊಲೀಸ್ ತನಿಖೆಯಲ್ಲಿ ಕೊಲೆ, ಸಣ್ಣ ಷಡ್ಯಂತ್ರ ಮಾತ್ರ ಪ್ರಸ್ತಾಪವಾಗಿದೆ.

    ಬಿಜೆಪಿ ಜಿಲ್ಲಾ ಪಂಚಾಯತ್ ಸದಸ್ಯ ಯೋಗೇಶ್ ಗೌಡ ಅವರನ್ನು ಹತ್ಯೆ ಮಾಡಿದ ಪ್ರಕರಣ ಸಂಬಂಧ ವಿನಯ್ ಕುಲಕರ್ಣಿ ಅವರನ್ನು ಸಿಬಿಐ 2020ರ ನವೆಂಬರ್ 05 ರಂದು ಬಂಧಿಸಿತ್ತು.

  • ಜೈಲಿನಿಂದ ಹೊರಬರಲು ವಿನಯ್ ಕುಲಕರ್ಣಿಗೆ ಬೇಕಿದೆ ಇನ್ನೊಂದು ಜಾಮೀನು

    ಜೈಲಿನಿಂದ ಹೊರಬರಲು ವಿನಯ್ ಕುಲಕರ್ಣಿಗೆ ಬೇಕಿದೆ ಇನ್ನೊಂದು ಜಾಮೀನು

    ಧಾರವಾಡ: ಜಿಲ್ಲಾ ಪಂಚಾಯತ್ ಸದಸ್ಯ ಯೋಗೇಶ್ ಗೌಡ ಕೊಲೆ ಪ್ರಕರಣದಲ್ಲಿ ಜೈಲು ಸೇರಿರುವ ಮಾಜಿ ಸಚಿವ ವಿನಯ್ ಕುಲಕರ್ಣಿಗೆ ನಿನ್ನೆಯಷ್ಟೇ ಸುಪ್ರೀಂ ಕೋರ್ಟ್‍ನಲ್ಲಿ ಜಾಮೀನು ಸಿಕ್ಕಿದೆ. ಆದರೆ ಜಾಮೀನು ಸಿಕ್ಕರೂ ಅವರಿಗೆ ಜೈಲಿನಿಂದ ಬಿಡುಗಡೆ ಭಾಗ್ಯವಿಲ್ಲ. ಇನ್ನೊಂದು ಪ್ರಕರಣದಲ್ಲಿ ಜಾಮೀನು ಸಿಕ್ಕ ಬಳಿಕ ಅವರು ಜೈಲಿನಿಂದ ಬಿಡುಗಡೆ ಹೊಂದಬಹುದೆಂದು ವಿನಯ್ ಪರ ವಕೀಲರಾದ ಆನಂದ ಕೊಳ್ಳಿ ತಿಳಿಸಿದ್ದಾರೆ.

    ಈ ವಿಚಾರವಾಗಿ ಧಾರವಾಡದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಆನಂದ ಕೊಳ್ಳಿ, ಇನ್ನೊಂದು ಪ್ರಕರಣದಲ್ಲಿ ಜಾಮೀನು ಆಗಬೇಕಿದೆ. ಈಗಾಗಲೇ ಆ ಪ್ರಕರಣದ ಜಾಮೀನು ಅರ್ಜಿ ಸಲ್ಲಿಸಲಿದ್ದೇವೆ. ಸುಪ್ರೀಂ ಕೋರ್ಟ್ ಆದೇಶ ಹಿನ್ನೆಲೆಯಾಗಿಟ್ಟುಕೊಂಡು ಈ ಅರ್ಜಿ ಸಲ್ಲಿಸುತ್ತೇವೆ. ವಿನಯ್ ಕುಲಕರ್ಣಿ ಬೆಂಗಳೂರಿನಲ್ಲೇ ಇರುವಂತೆ ಕೋರ್ಟ್ ಆದೇಶ ಮಾಡಿದೆ. ಬೆಂಗಳೂರು ಬಿಟ್ಟು ಎಲ್ಲಿಯೂ ಹೋಗುವಂತಿಲ್ಲ, ಧಾರವಾಡ ಜಿಲ್ಲೆ ಪ್ರವೇಶಕ್ಕೆ ನಿರ್ಬಂಧ ಇದೆ ಎಂದರು.

    ವಿನಯ್ ಕುಲಕರ್ಣಿ ಧಾರವಾಡಕ್ಕೆ ಬರಬೇಕೆಂದರೆ ಸುಪ್ರೀಂ ಕೋರ್ಟ್‍ನ ಅನುಮತಿ ಪಡೆಯಬೇಕು. ಅವಶ್ಯಕ ಕಾರಣ ಒದಗಿಸಿ ಅನುಮತಿ ಪಡೆಯಬಹುದಾಗಿದೆ. ಸುಪ್ರೀಂ ಕೋರ್ಟ್‍ನಲ್ಲಿ ಜಾಮೀನಿಗೆ ಸಿಬಿಐ ವಿರೋಧ ವ್ಯಕ್ತಪಡಿಸಿತ್ತು, ಕಾನೂನು ಪ್ರಕಾರ ಸಿಬಿಐ ನಡೆ ತಪ್ಪು ಎಂದು ನಾವು ವಾದಿಸಿದ್ದೇವು. ನಮ್ಮ ವಾದವನ್ನು ಸುಪ್ರೀಂ ಕೋರ್ಟ್ ಪುರಸ್ಕರಿಸಿತು, ಹೈಕೋರ್ಟ್‍ನಲ್ಲಿನ ವಿಚಾರಣೆ ಎರಡು ತಿಂಗಳಲ್ಲಿ ಮುಗಿಸಲು ಸುಪ್ರೀಂ ಕೋರ್ಟ್ ಸೂಚಿಸಿದೆ ಎಂದು ಮಾಹಿತಿ ಹಂಚಿಕೊಂಡರು. ಇದನ್ನೂ ಓದಿ: ಮಾಜಿ ಸಚಿವ ವಿನಯ್ ಕುಲಕರ್ಣಿಗೆ ಸುಪ್ರೀಂನಿಂದ ಜಾಮೀನು

    ಈ ಪ್ರಕರಣ ಸಿಬಿಐಗೆ ವಹಿಸಿದ್ದು ಕಾನೂನು ಪ್ರಕಾರ ಸರಿಯೇ ಎನ್ನುವ ವಿಚಾರವಾಗಿ ಅವರು ಮಾತನಾಡಿ, ಅದು ಬೆಂಗಳೂರು ಹೈಕೋರ್ಟ್‍ನ ವಿಚಾರಣೆಯಲ್ಲಿ ನಿರ್ಧಾರ ಆಗಲಿದೆ, ರಾಜ್ಯ ಸರ್ಕಾರ ಮೂರು ಆಯಾಮಗಳಲ್ಲಿ ತನಿಖೆ ನಡೆಸುತ್ತಿದೆ, ಅದರಲ್ಲಿ ಒಂದು ಅರ್ಜಿಯನ್ನು ಹೈಕೋರ್ಟ್ ವಜಾಗೊಳಿಸಿತ್ತು, ಆಗ ಯೋಗೇಶ್ ಗೌಡ ಅವರ ಅಣ್ಣ ಹೈಕೋರ್ಟ್ ಮೊರೆ ಹೋಗಿದ್ದರು, ಹೈಕೋರ್ಟ್ ಅವರ ಅರ್ಜಿಯನ್ನೂ ತಿರಸ್ಕರಿಸಿತ್ತು, ಆದರೂ ಸರ್ಕಾರ ಮತ್ತೆ ಸಿಬಿಐ ನೀಡಿತ್ತು. ಇದನ್ನೇ ಚಾಲೆಂಜ್ ಮಾಡಿ ಜಾಮೀನು ಪಡೆಯಲಾಗಿದೆ ಎಂದು ತಿಳಿಸಿದರು.

  • ಮಾಜಿ ಸಚಿವ ವಿನಯ್ ಕುಲಕರ್ಣಿಗೆ ಸುಪ್ರೀಂನಿಂದ ಜಾಮೀನು

    ಮಾಜಿ ಸಚಿವ ವಿನಯ್ ಕುಲಕರ್ಣಿಗೆ ಸುಪ್ರೀಂನಿಂದ ಜಾಮೀನು

    ನವದೆಹಲಿ: ಯೋಗೇಶ್ ಗೌಡ ಹತ್ಯೆ ಪ್ರಕರಣದಲ್ಲಿ ಜೈಲು ಸೇರಿದ್ದ ಮಾಜಿ ಸಚಿವ ವಿನಯ್ ಕುಲಕರ್ಣಿಗೆ ಸುಪ್ರೀಂ ಕೋರ್ಟ್ ಜಾಮೀನು ಮಂಜೂರು ಮಾಡಿದೆ.

    ನ್ಯಾ ಉದಯ್ ಲಲಿತ್ ನೇತೃತ್ವದ ದ್ವಿಸದಸ್ಯ ಪೀಠ ಸುದೀರ್ಘ ವಿಚಾರಣೆ ನಡೆಸಿ ಸಿಬಿಐ ಆಕ್ಷೇಪಣೆಯ ನಡುವೆಯೂ ಜಾಮೀನು ನೀಡಿ ಆದೇಶ ಪ್ರಕಟಿಸಿದೆ.

    ಧಾರವಾಡಕ್ಕೆ ಭೇಟಿ ನೀಡುವಂತಿಲ್ಲ. ಸಿಬಿಐ ವಿಚಾರಣೆಗೆ ತಪ್ಪದೇ ಹಾಜರಾಗಬೇಕು ಎಂದು ಕೋರ್ಟ್ ವಿನಯ್ ಕುಲಕರ್ಣಿಗೆ ಷರತ್ತು ವಿಧಿಸಿದೆ. ವಿನಯ್ ಕುಲಕರ್ಣಿ ಜಾಮೀನು ಅರ್ಜಿಗೆ ಆಕ್ಷೇಪ ವ್ಯಕ್ತಪಡಿಸಿ ಸಿಬಿಐ ಪರ ವಕೀಲ ಎಎಸ್.ಜಿ. ಎಸ್.ವಿ. ರಾಜು ವಾದ ಮಂಡನೆ ಮಾಡಿದರು. ಇದನ್ನೂ ಓದಿ: ಹಿಂಡಲಗಾ ಜೈಲಿನಲ್ಲಿ ಸಾಮಾನ್ಯ ಕೈದಿಯಂತೆ ರಾತ್ರಿ ಕಳೆದ ವಿನಯ್ ಕುಲಕರ್ಣಿ

    ಸಿಬಿಐ ಪರ ವಾದ ಏನಿತ್ತು?
    ಎ1 ಆರೋಪಿಗಳಿಂದ ಎ15 ರವರೆಗಿನ ಆರೋಪಿಗಳಿಗೆ ಆರು ಲಕ್ಷ ರೂಪಾಯಿ ಹಣ ಪಾವತಿಯಾಗಿದೆ. ಕೇಸ್ ತನಿಖಾಧಿಕಾರಿಗೂ ಎರಡು ಲಕ್ಷ ರೂಪಾಯಿ ಹಣ ಪಾವತಿಯಾಗಿದೆ. ವಿನಯ್ ಕುಲಕರ್ಣಿ ಮನವಿ ಮೇರೆಗೆ ಹಾರ್ನ್ ಬಿಲ್ ರೆಸಾರ್ಟ್ ನಲ್ಲಿ ಸಾಕ್ಷಿಗಳಿಗೆ ವಾಸ್ತವ್ಯದ ವ್ಯವಸ್ಥೆ ಮಾಡಲಾಗಿದೆ.

    ವಿನಯ್ ಕುಲಕರ್ಣಿಗೆ ಯೋಗೀಶ್ ಗೌಡ ಜೊತೆಗೆ ವೈಷಮ್ಯ ಇತ್ತು. ಭೂ ವಿವಾದದಿಂದ ಕೊಲೆಯಾಗಿದೆ ಎಂದು ಬಿಂಬಿಸುವ ಯತ್ನ ಮಾಡಿದ್ದರು. ಸಿಬಿಐ ತನಿಖೆ ನಡೆಸಿದ ಬಳಿಕ ದೊಡ್ಡ ಷಡ್ಯಂತ್ರ ಬೆಳಕಿಗೆ ಬಂದಿದೆ. ವಿನಯ್ ಕುಲಕರ್ಣಿ ಕೊನೆಯಲ್ಲಿ ಪ್ರಮುಖ ಪಾತ್ರವಾಗಿದ್ದು, ಸಾಕ್ಷ್ಯವನ್ನು ತಿರುಚಲಾಗಿದೆ. ಪೊಲೀಸ್ ತನಿಖೆಯಲ್ಲಿ ಕೊಲೆ, ಸಣ್ಣ ಷಡ್ಯಂತ್ರ ಮಾತ್ರ ಪ್ರಸ್ತಾಪವಾಗಿದೆ.

    ಬಿಜೆಪಿ ಜಿಲ್ಲಾ ಪಂಚಾಯತ್ ಸದಸ್ಯ ಯೋಗೇಶ್ ಗೌಡ ಅವರನ್ನು ಹತ್ಯೆ ಮಾಡಿದ ಪ್ರಕರಣ ಸಂಬಂಧ ವಿನಯ್ ಕುಲಕರ್ಣಿ ಅವರನ್ನು ಸಿಬಿಐ 2020ರ ನವೆಂಬರ್ 05 ರಂದು ಬಂಧಿಸಿತ್ತು.

  • ಜಿ.ಪಂ ಸದಸ್ಯ ಯೋಗೇಶ್ ಗೌಡ ಕೊಲೆ ಕೇಸ್ – ಇಂದು ಬಾಂಬ್ ಸಿಡಿಸ್ತಾರಾ ಬಸವರಾಜ್ ಮುತ್ತಗಿ..?

    ಜಿ.ಪಂ ಸದಸ್ಯ ಯೋಗೇಶ್ ಗೌಡ ಕೊಲೆ ಕೇಸ್ – ಇಂದು ಬಾಂಬ್ ಸಿಡಿಸ್ತಾರಾ ಬಸವರಾಜ್ ಮುತ್ತಗಿ..?

    – ವಿನಯ್ ಕುಲಕರ್ಣಿ ಆಪ್ತ ಅಧಿಕಾರಿ ಅರೆಸ್ಟ್

    ಧಾರವಾಡ: ಮಾಜಿ ಸಚಿವ ವಿನಯ್ ಕುಲಕರ್ಣಿ ಬಂಧಿ ಆಗಿರುವ ಧಾರವಾಡ ಜಿಲ್ಲಾ ಪಂಚಾಯತ್ ಸದಸ್ಯರಾಗಿದ್ದ ಯೋಗೇಶ್ ಗೌಡ ಕೊಲೆ ಕೇಸ್‍ಗೆ ಇವತ್ತು ಸ್ಫೋಟಕ ತಿರುವು ಸಿಗುವ ಸಾಧ್ಯತೆ ಇದೆ.

    ಕೊಲೆ ಕೇಸ್‍ನಲ್ಲಿ ಪ್ರಮುಖ ಆರೋಪಿ ಆಗಿರುವ ಬಸವರಾಜ ಮುತ್ತಗಿ ಇವತ್ತು ಸುದ್ದಿಗೋಷ್ಠಿ ನಡೆಸಿ ಸ್ಫೋಟಕ ಮಾಹಿತಿಗಳನ್ನು ಹೊರಹಾಕುವ ಸಾಧ್ಯತೆ ಇದೆ. ನಿನ್ನೆ ಸಿಬಿಐ ಬುಲಾವ್ ಮೇಲೆ ವಿಚಾರಣೆಗೆ ಹಾಜರಾದ ಬಳಿಕ ಮಾತಾಡಿದ್ದ ಮುತ್ತಗಿ `ಒಂದು ದಿನ ಕಾಯಿರಿ. ಮಾಧ್ಯಮಗಳ ಎದುರು ಬಹಳಷ್ಟು ಚರ್ಚೆ ಮಾಡುವುದು ಇದೆ. ನಾನೂ ಕೂಡಾ ಓರ್ವ ವಕೀಲ. ಈಗಾಗಲೇ ಕೇಸ್ ವಿಚಾರಣೆ ಹಂತದಲ್ಲಿದ್ದು ಮಾಧ್ಯಮಗಳ ಮುಂದೆ ಸಾಕಷ್ಟು ವಿಷಯಗಳನ್ನು ಚರ್ಚೆ ಮಾಡ್ತೇನೆ’ ಎಂದಿದ್ದಾರೆ. ಇದನ್ನೂ ಓದಿ: ಅಶೋಕ್ ಪಿಎ ವಿರುದ್ಧ ದೂರು ನೀಡಿದ್ದ ಶೃಂಗೇರಿ ಸಬ್ ರಿಜಿಸ್ಟ್ರಾರ್ ಸೇವೆಯಿಂದ ವಜಾ

    ನಿನ್ನೆ ಸಿಬಿಐ ದಿಢೀರ್ ದಾಳಿ ಬಳಿಕ ಮಾಜಿ ಸಚಿವ ವಿನಯ್ ಕುಲಕರ್ಣಿ ಆಪ್ತ ಕೆಎಎಸ್ ಅಧಿಕಾರಿ ಸೋಮು ನ್ಯಾಮಗೌಡ ಅವರನ್ನು ಬಂಧಿಸಿದೆ. ಅಲ್ಲದೇ ಯೋಗೇಶ್ ಗೌಡ ಪತ್ನಿ, ಸದ್ಯ ಕಾಂಗ್ರೆಸ್‍ನಲ್ಲಿರುವ ಮಲ್ಲಮ್ಮ, ಕೆಪಿಸಿಸಿ ಕಾರ್ಯದರ್ಶಿ ನಾಗರಾಜ್ ಗೌರಿ, ಜಿಲ್ಲಾ ಪಂಚಾಯತ್ ಉಪಾಧ್ಯಕ್ಷ ಶಿವಾನಂದ ಕರಿಗಾರ್ ಅವರನ್ನು ವಿಚಾರಣೆ ನಡೆಸಿತ್ತು.

    2017 ಜೂನ್ 15ರಂದು ಯೋಗೇಶ್ ಗೌಡನ ಕೊಲೆಯಾಗಿತ್ತು. ಅಂದು ಬೆಳಗ್ಗೆ ಧಾರವಾಡ ನಗರದ ಸಪ್ತಾಪುರ ಜಿಮ್‍ಗೆ ಎಂಟ್ರಿ ಕೊಟ್ಟಿದ್ದ ದುಷ್ಕರ್ಮಿಗಳು ಯೋಗೇಶ್ ಗೌಡನನ್ನು ಮಚ್ಚಿನಿಂದ ಬರ್ಬರವಾಗಿ ಕೊಲೆಗೈದಿದ್ದರು. ಈ ದೃಶ್ಯವು ಜಿಮ್ ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿತ್ತು. ಈ ದೃಶ್ಯಗಳನ್ನಾಧರಿಸಿ ಪೊಲೀಸರು ಮಾಜಿ ಸಚಿವ, ಸ್ಥಳೀಯ ಕಾಂಗ್ರೆಸ್ ಮುಖಂಡ ವಿನಯ್ ಕುಲಕರ್ಣಿ ಆಪ್ತ ವಲಯದಲ್ಲಿ ಗುರುತಿಸಿಕೊಂಡಿದ್ದ ಐವರನ್ನು ಬಂಧಿಸಿದ್ದರು.

  • ತಡರಾತ್ರಿ ವಿನಯ್ ಕುಲಕರ್ಣಿ ಕುಟುಂಬ ಭೇಟಿ ಮಾಡಿದ ಡಿ-ಬಾಸ್

    ತಡರಾತ್ರಿ ವಿನಯ್ ಕುಲಕರ್ಣಿ ಕುಟುಂಬ ಭೇಟಿ ಮಾಡಿದ ಡಿ-ಬಾಸ್

    ಧಾರವಾಡ: ಜಿಲ್ಲಾ ಪಂಚಾಯ್ತಿ ಸದಸ್ಯ ಯೋಗೇಶ್ ಗೌಡ ಕೊಲೆ ಕೇಸ್‍ನಲ್ಲಿ ಜೈಲು ಸೇರಿರುವ ಮಾಜಿ ಸಚಿವ ವಿನಯ್ ಕುಲಕರ್ಣಿ ಮನೆಗೆ ನಟ ದರ್ಶನ್ ಭೇಟಿ ನೀಡಿದ್ದಾರೆ.

    ಧಾರವಾಡ ನಗರದ ಶಿವಗಿರಿಯಲ್ಲಿರುವ ಮನೆಗೆ ತಡರಾತ್ರಿ ಭೇಟಿ ನೀಡಿದ ಡಿ ಬಾಸ್, ವಿನಯ ಕುಟುಂಬ ಸದಸ್ಯರಿಗೆ ಆತ್ಮಸ್ಥೈರ್ಯ ತುಂಬಿದರು. ನಿನ್ನೆ ಹುಬ್ಬಳ್ಳಿಯಲ್ಲಿ ರಾಬರ್ಟ್ ಸಿನಿಮಾ ಆಡಿಯೋ ರೀಲಿಸ್‍ಗಾಗಿ ಆಗಮಿಸಿದ್ದ ನಟ ದರ್ಶನ್, ಮಧ್ಯಾಹ್ನವೇ ಕುಲಕರ್ಣಿ ಮನೆಗೆ ಭೇಟಿ ಮಾಡ್ತಾರೆ ಎಂದು ಮಾಹಿತಿ ಇತ್ತು.

    ಈ ಹಿನ್ನೆಲೆ ದರ್ಶನ್ ಅಭಿಮಾನಿಗಳು ವಿನಯ ಮನೆ ಬಳಿ ಬಂದು ಕಾದು ಕುಳಿತಿದ್ರು. ಆದರೆ ದರ್ಶನ್ ತಡ ರಾತ್ರಿ 12 ಗಂಟೆಗೆ ವಿನಯ ಕುಟುಂಬಕ್ಕೆ ಭೇಟಿ ಮಾಡಿದ್ದಾರೆ. ವಿನಯ್ ಹಾಗೂ ದರ್ಶನ್ ಗೆಳೆತನ ಬಹಳ ವರ್ಷಗಳಿಂದ ಇದ್ದು, ದರ್ಶನ್ ಧಾರವಾಡಕ್ಕೆ ಬಂದರೆ, ವಿನಯ ಕುಲಕರ್ಣಿ ಹಾಲಿನ ಡೇರಿಯಲ್ಲೇ ಉಳಿದುಕೊಳ್ಳುತಿದ್ದರು.

  • ವಿನಯ್ ಕುಲಕರ್ಣಿ ನ್ಯಾಯಾಂಗ ಬಂಧನ ಫೆಬ್ರವರಿ 19ರ ವರೆಗೆ ವಿಸ್ತರಣೆ

    ವಿನಯ್ ಕುಲಕರ್ಣಿ ನ್ಯಾಯಾಂಗ ಬಂಧನ ಫೆಬ್ರವರಿ 19ರ ವರೆಗೆ ವಿಸ್ತರಣೆ

    ಧಾರವಾಡ: ಜಿಲ್ಲಾ ಪಂಚಾಯಿತಿ ಸದಸ್ಯ ಯೋಗೀಶ್ ಗೌಡ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಹಿಂಡಲಗಾ ಜೈಲು ಸೇರಿರುವ ಮಾಜಿ ಸಚಿವ ವಿನಯ ಕುಲಕರ್ಣಿ ನ್ಯಾಯಾಂಗ ಬಂಧನದ ಅವಧಿಯನ್ನು ಮತ್ತೆ ಜನವರಿ 22ರ ವರೆಗೆ ವಿಸ್ತರಣೆ ಮಾಡಿ ಕೋರ್ಟ್ ಆದೇಶಿಸಿದೆ.

    ಇಂದು ಮಾಜಿ ಸಚಿವ ವಿನಯ್ ಕುಲಕರ್ಣಿ ನ್ಯಾಯಾಂಗ ಬಂಧನದ ಅವಧಿ ಮುಕ್ತಾಯಗೊಂಡ ಹಿನ್ನೆಲೆ ಧಾರವಾಡದ ಸಿಬಿಐ ವಿಶೇಷ ನ್ಯಾಯಾಲಯ ಮತ್ತೆ ಬಂಧನದ ಅವಧಿ ವಿಸ್ತರಣೆ ಮಾಡಿ ಆದೇಶಿಸಿದೆ. ವಿನಯ್ ಕುಲಕರ್ಣಿ ಕಳೆದ 3 ತಿಂಗಳಿಂದ ಬೆಳಗಾವಿ ಹಿಂಡಲಗಾ ಜೈಲಿನಲ್ಲಿದ್ದು, ಜಾಮೀನು ಅರ್ಜಿ ಸಹ ಧಾರವಾಡ ಹೈಕೋರ್ಟ್ ನಲ್ಲಿ ತಿರಸ್ಕಾರಗೊಂಡಿದೆ.

    ವಿನಯ್ ಕುಲಕರ್ಣಿ ಸೋದರ ಮಾವ ಚಂದ್ರಶೇಖರ ಇಂಡಿ ಅವರ ನ್ಯಾಯಾಂಗ ಬಂಧನ ಸಹ ಫೆಬ್ರವರಿ 10ಕ್ಕೆ ವಿಸ್ತರಣೆ ಮಾಡಿ ಸಿಬಿಐ ನ್ಯಾಯಾಲಯ ಆದೇಶ ಮಾಡಿದೆ. ಈಗಾಗಲೇ ಸಿಬಿಐ ವಿನಯ್ ಕುಲಕರ್ಣಿ ವಿರುದ್ಧ ಚಾರ್ಜ್ ಶೀಟ್ ಸಲ್ಲಿಸಿದೆ. ವಿನಯ್ ಪರ ವಕೀಲರು ಸುಪ್ರೀಂ ಕೊರ್ಟ್ ನಲ್ಲಿ ಜಾಮೀನು ಅರ್ಜಿ ಸಲ್ಲಿಸಬೇಕಿತ್ತು. ಆದರೆ ಧಾರವಾಡ ಸಿಬಿಐ ನ್ಯಾಯಾಲಯದಲ್ಲಿ ಚಾರ್ಜ್ ಶೀಟ್ ಸಲ್ಲಿಕೆ ಆದ ಕಾರಣ ಇಲ್ಲೇ ಜಾಮೀನು ಅರ್ಜಿ ಹಾಕುವ ಸಾಧ್ಯತೆ ಇದೆ.

  • ವಿನಯ್ ಕುಲಕರ್ಣಿ ನ್ಯಾಯಾಂಗ ಬಂಧನ ಮತ್ತೆ ವಿಸ್ತರಣೆ

    ವಿನಯ್ ಕುಲಕರ್ಣಿ ನ್ಯಾಯಾಂಗ ಬಂಧನ ಮತ್ತೆ ವಿಸ್ತರಣೆ

    ಧಾರವಾಡ: ಜಿಲ್ಲಾ ಪಂಚಾಯಿತಿ ಸದಸ್ಯ ಯೋಗೀಶ್ ಗೌಡ ಹತ್ಯೆ ಪ್ರಕರಣದಲ್ಲಿ ಬಂಧಿತರಾಗಿರುವ ಮಾಜಿ ಸಚಿವ ವಿನಯ್ ಕುಲಕರ್ಣಿಯವರ ನ್ಯಾಯಾಂಗ ಬಂಧನವನ್ನ ಮತ್ತೆ ವಿಸ್ತರಣೆ ಮಾಡಲಾಗಿದೆ.

    ನವೆಂಬರ್ 5ರಂದು ಸಿಬಿಐನಿಂದ ಬಂಧಿತರಾಗಿರುವ ವಿನಯ್ ಕುಲಕರ್ಣಿ ಅವರ ಜಾಮೀನು ಅರ್ಜಿ ಈಗಾಗಲೇ ವಜಾಗೊಂಡಿದ್ದು, ಹೈಕೋರ್ಟಿಗೆ ಜಾಮೀನು ಅರ್ಜಿ ಸಲ್ಲಿಸಿದ್ದಾರೆ. ಈ ನಡುವೆ ಇಂದು ಅವರ ನ್ಯಾಯಾಂಗ ಬಂಧನದ ಅವಧಿ ಮುಗಿದ ಹಿನ್ನೆಲೆ ಇಂದು ಧಾರವಾಡದ ಸಿಬಿಐ ವಿಶೇಷ ನ್ಯಾಯಾಲಯದಲ್ಲಿ ವಿಚಾರಣೆ ನಡೆಸಿ, ನ್ಯಾಯಾಂಗ ಬಂಧನವನ್ನ ಜನವರಿ 8ರ ವರೆಗೆ ವಿಸ್ತರಣೆ ಮಾಡಲಾಯಿತು.

    ಇದೇ ನ್ಯಾಯಾಲಯದಲ್ಲಿ ವಿನಯ್ ಕುಲಕರ್ಣಿಯವರ ಮಾವ ಚಂದ್ರಶೇಖರ್ ಇಂಡಿ ಕೂಡಾ ನ್ಯಾಯಾಂಗ ಬಂಧನದಲ್ಲಿದ್ದು, ಅವರ ನ್ಯಾಯಾಂಗ ಬಂಧನವನ್ನು ಸಹ ಸಿಬಿಐ ವಿಶೇಷ ನ್ಯಾಯಾಲಯ ಜನವರಿ 8ಕ್ಕೆ ವಿಸ್ತರಣೆ ಮಾಡಿದೆ. ಚಂದ್ರಶೇಕರ ಇಂಡಿ ಅಕ್ರಮ ಶಸ್ತ್ರಾಸ್ರ ಪ್ರಕಣದಲ್ಲಿ ಸಿಬಿಐ ಅಧಿಕಾರಿಗಳಿಂದ ಬಂಧನಕ್ಕೆ ಒಳಗಾಗಿದ್ದರು. ಸದ್ಯ ಬೆಳಗಾವಿ ಹಿಂಡಲಗಾ ಜೈಲಿನಲ್ಲಿ ವಿನಯ್ ಕುಲಕರ್ಣಿ ಇದ್ರೆ, ಧಾರವಾಡ ಜೈಲಿನಲ್ಲಿ ಚಂದ್ರಶೇಖರ್ ಇಂಡಿಯವರನ್ನ ಇಡಲಾಗಿದೆ.